Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ - Vistara News

ಚಿಕ್ಕಬಳ್ಳಾಪುರ

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Dead Body Found : ಗ್ರಾಮದ ಹೊರವಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತನ ಮೃತದೇಹ ಪತ್ತೆಯಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ (Dead Body Found) ಪತ್ತೆಯಾಗಿದೆ. ಮೃತನ ಕೈ ಮೇಲೆ ಲಕ್ಷ್ಮಿ ಎಂಬ ಹಚ್ಚೆ ಗುರುತು ಪತ್ತೆಯಾಗಿದೆ.

ಪ್ರೀತಿ-ಪ್ರೇಮ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಮರಕ್ಕೆ ನೇತು ಹಾಕಿ ಹೋಗಿರುವ ಅನುಮಾನವಿದೆ. ಮರದಲ್ಲಿ ನೇತಾಡುತ್ತಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗೌರಿಬಿದನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರದಲ್ಲಿದ್ದ ಮೃತದೇಹವನ್ನು ಕೆಳಗಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತನ ಗುರುತು ಪತ್ತೆಯಾಗಿಲ್ಲ. ಸದ್ಯ ಪೊಲೀಸರು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

ನೀರಿನಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ

ಈಜಲು ತೆರಳಿದ್ದ ಯುವಕ ನೀರು ಪಾಲಾಗಿದ್ದ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದ ಹಾರಂಗಿ ಹಿನ್ನೀರಿನಲ್ಲಿ ನಿನ್ನೆ ಭಾನುವಾರ ಅವಘಡ ನಡೆದಿತ್ತು. ನೀರಿನಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಸೋಮವಾರ ಪತ್ತೆಯಾಗಿದೆ. ಮೈಸೂರು ಮೂಲದ ಶಶಿ (30) ಮೃತ ದುರ್ದೈವಿ. ಶಶಿ ತನ್ನ 15 ಮಂದಿ ಸ್ನೇಹಿತರೊಟ್ಟಿಗೆ ಮೈಸೂರಿನಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಶಶಿ ಈಜಲು ಹೋಗಿ ನೀರುಪಾಲಾಗಿದ್ದ, ಇದೀಗ ಆತನ ಮೃತದೇಹವ ಸಿಕ್ಕಿದ್ದು, ಕುಶಾಲನಗರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೀರಲ್ಲಿ ಕೊಚ್ಚಿ ಹೋದವರಿಗಾಗಿ ಹುಡುಕಾಟ

ಇತ್ತ ನಿನ್ನೆ ಭಾನುವಾರ ಮಹಾರಾಷ್ಟ್ರದ ಲೋನಾವಲಾ ಬಳಿ ದಿಢೀರ್ ಪ್ರವಾಹಕ್ಕೆ ನೋಡನೋಡುತ್ತಿದ್ದಂತೆ ಐವರು ಕೊಚ್ಚಿ ಹೋಗಿದ್ದರು. ಪುಣೆಯ ಅನ್ಸಾರಿ ಕುಟುಂಬದ ನಾಲ್ವರು ಮಕ್ಕಳು ಸೇರಿ ಓರ್ವ ‌ಮಹಿಳೆ‌ ನೀರುಪಾಲಾಗಿದ್ದರು. ನಿರಂತರ ಕಾರ್ಯಾಚರಣೆ ನಡೆಸಿದ ಎನ್‌ಆರ್‌ಎಫ್‌ ತಂಡ ಮೂವರ ಶವ ಹೊರ ತೆಗೆದಿತ್ತು. ನೀರಲ್ಲಿ ಕಣ್ಮರೆಯಾಗಿರುವ ಇನ್ನಿಬ್ಬರಿಗಾಗಿ ನಿರಂತರ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳದಲ್ಲಿಯೇ ಪೊಲೀಸರು ಹಾಗೂ ಅಗ್ನಿಶಾಮಕ ದಳ ಬೀಡು ಬಿಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Karnataka Rain : ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯು (Rain Effect) ಅವಾಂತವರವೇ ಸೃಷ್ಟಿಸಿದೆ. ಕಾರವಾರ ಸಮೀಪ ಮಳೆಗೆ ಮನೆಗಳಿಗೆ ಹಾವುಗಳು (snake) ನುಗ್ಗುತ್ತಿವೆ. ಮತ್ತೊಂದು ಕಡೆ ಹೊನ್ನಾವಾರ-ಬೆಂಗಳೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಗಳು ಮುಂದುವರಿದಿದೆ.

VISTARANEWS.COM


on

By

karnataka rain
Koo

ಕಾರವಾರ/ಉಡುಪಿ: ಕರ್ನಾಟಕ ಕರಾವಳಿ ಭಾಗದಲ್ಲಿ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕಾಡಿನಿಂದ ಮನೆಗಳತ್ತ ಹಾವುಗಳು ಬರುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡ ಎಂಬಾಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿತ್ತು. ಸುಮಾರು 12 ಅಡಿ ಉದ್ದದ ಹೆಬ್ಬಾವು ಕಂಡು ಸ್ಥಳೀಯರು ಆತಂಕಕ್ಕೊಳಗಾಗಿದ್ದರು.

ಅರಣ್ಯ ಪ್ರದೇಶದ ಸಮೀಪದಲ್ಲಿ ಇದ್ದು, ಮಳೆ ನೀರಿನಲ್ಲಿ ಹರಿದು ಬಂದು ಮನೆಯ ಮೇಲೆ ಹೆಬ್ಬಾವು ಸೇರಿಕೊಂಡಿದೆ. ಬಳಿಕ ಸ್ಥಳಕ್ಕಾಗಮಿಸಿದ ಉರಗ ಪ್ರೇಮಿ ಗೋಪಾಲ್ ಸುಮಾರು ಒಂದು ಗಂಟೆ ಕಾಲ‌ ಕಾರ್ಯಾಚರಣೆ ನಡೆಸಿ ಹಾವು ಹಿಡಿದು ರಕ್ಷಣೆ ಮಾಡಿದ್ದಾರೆ.

ಭಾರಿ ಮಳೆ-ಗಾಳಿಗೆ ಕುಸಿದು ಬಿದ್ದ ಮನೆ

ಇತ್ತ ಭಾರೀ ಗಾಳಿ ಮಳೆಗೆ ಮನೆಯೊಂದು ಭಾಗಶಃ ಕುಸಿದು ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ದೊಡ್ನಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದೊಂದು ವಾರದಿಂದ ಶಿರಸಿ ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ. ಸಂತೋಷ ಜೋಗಿ ಎಂಬುವವರ ಮನೆಯ ಮಣ್ಣಿನ ಗೋಡೆ ನೆನೆದು ಭಾಗಶಃ ಕುಸಿದು ಬಿದ್ದಿದೆ. ಪರಿಹಾರಕ್ಕಾಗಿ ಸರ್ಕಾರಕ್ಕೆ ಅಂಗಲಾಚಿದ್ದಾರೆ. ಸ್ಥಳಕ್ಕೆ ಪಿಡಿಓ ಪ್ರೀತಿ ಶೆಟ್ಟಿ, ಶಾನುಭೋಗ ಸುಕನ್ಯಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರಾವಳಿಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಭಟ್ಕಳ ತಾಲೂಕುಗಳಲ್ಲಿ ವರುಣಾರ್ಭಟ ಜೋರಾಗಿದೆ. ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಳೆ ಹೆಚ್ಚಾದರೆ ಕಾರವಾರದ ಕದ್ರಾ ಜಲಾಶಯದಿಂದ ನೀರು ಹೊರ ಬರಲಿದೆ. ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಕದ್ರಾ ಜಲಾಶಯದಲ್ಲಿ ಸುರಕ್ಷಿತ ಮಟ್ಟ ಕಾಯ್ದುಕೊಳ್ಳಲು ಒಳಹರಿವು ಆಧರಿಸಿ ನೀರು ಬಿಡುಗಡೆಗೆ ನಿರ್ಧರಿಸಲಾಗಿದೆ.

ಇದನ್ನೂ ಓದಿ: Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

ಬೆಳಗಾವಿಯ ಸಪ್ತನದಿಗಳಿಗೆ ಜೀವ ಕಳೆ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರದಿಂದಾಗಿ ಬೆಳಗಾವಿಯ ಸಪ್ತನದಿಗಳಿಗೆ ಜೀವ ಕಳೆ ಬಂದಿದೆ. ಘಟಪ್ರಭಾ ನದಿಗೆ ಒಳಹರಿವು ಹೆಚ್ಚಳದಿಂದಾಗಿ ಐತಿಹಾಸಿಕ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭತ ಸೃಷ್ಟಿಯಾಗಿದೆ. ಭಾರತದ ನಯಾಗಾರ ಫಾಲ್ಸ್ ಎಂದೇ‌ ಖ್ಯಾತವಾಗಿರುವ ಗೋಕಾಕ್ ಜಲಪಾತ, 180 ಅಡಿ ಮೇಲಿಂದ ಧುಮ್ಮಿಕ್ಕುವ ನೀರು, ಜಲಪಾತದ ರಮಣೀಯ ದೃಶ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ. ಇನ್ನೂ ಸೆಲ್ಫಿ, ಜಲಪಾತದ ಫೋಟೊ ತೆಗೆಯಲು ಜಲಪಾತದ ತುದಿಗೆ ಹೋಗಿ ಪ್ರವಾಸಿಗರು ಹುಚ್ಚಾಟದ ಕಾರಣಕ್ಕೆ ನಿಗಾ ಇಡಲು ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ ‌ನಿಯೋಜನೆ ಮಾಡಲಾಗಿದೆ.

ತುಂಬಿ ಹರಿದ ವಾರಾಹಿ ಮತ್ತು ಕುಬ್ಬಾ ನದಿ

ಪಶ್ಚಿಮಘಟ್ಟದ ತಪ್ಪಲಲ್ಲಿ ಸುರಿದ ಭಾರೀ ಮಳೆ ಎಫೆಕ್ಟ್‌ನಿಂದಾಗಿ ಉಡುಪಿಯ ವಾರಾಹಿ ಮತ್ತು ಕುಬ್ಬಾ ನದಿ ತುಂಬಿ ಹರಿದಿದೆ. ನದಿ ತಟ ಕಂಡ್ಲೂರಿನಲ್ಲಿ ಲಂಗರು ಹಾಕಿದ್ದ ಆರು ನಾಡದೋಣಿಗಳು ನೀರುಪಾಲಾಗಿವೆ. ಹೊಳೆಯ ರಭಸಕ್ಕೆ ಎಲ್ಲಾ ನಾಡದೋಣಿಗಳು ಕೊಚ್ಚಿ ಹೋಗಿವೆ. ಮೀನುಗಾರರು ಕಳೆದ ಎರಡು ದಿನಗಳಿಂದ ಹುಡುಕಾಡುತ್ತಿದ್ದಾರೆ.

ಉಡುಪಿಯ ಈ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ ಜಿಲ್ಲೆಯಲ್ಲಿ ಮೂರನೇ ದಿನಕ್ಕೆ ಮುಂದುವರಿದ ಭಾರಿ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಮೂರು ತಾಲೂಕುಗಳ ಶಾಲಾ- ಕಾಲೇಜು ರಜೆ ನೀಡಲಾಗಿದೆ. ಬೈಂದೂರು ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕು ಶಾಲಾ-ಕಾಲೇಜು ಶುಕ್ರವಾರ ರಜೆ ನೀಡಲಾಗಿತ್ತು.

ಬೈಂದೂರು ತಾಲೂಕು, ಮರವಂತೆ ಬೀಚಿನಲ್ಲಿ ಭಾರಿ ಗಾತ್ರದ ಅಲೆಗಳು ಅಪ್ಪಳಿಸುತ್ತಿದೆ. ಹೀಗಾಗಿ ಮಳೆಗಾಲ ಮುಗಿಯುವವರೆಗೂ ಮುನ್ನೆಚ್ಚರಿಕೆ ಕ್ರಮವಾಗಿ ಬೀಚ್ ಬಂದ್ ಮಾಡಲಾಗಿದೆ. ಸೌಪರ್ಣಿಕ ನದಿ ಅರಬ್ಬಿ ಸಮುದ್ರ ಮಧ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸುಮಾರು ಒಂದುವರೆ ಕಿಲೋಮೀಟರ್ ಉದ್ದವಿದ್ದು, ಯಾವುದೇ ತಡೆ ಬೇಲಿ ಇಲ್ಲ. ಈ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ತೆರಳುವ ಬಹುತೇಕರು ಕಡಲಿಗೆ ಇಳಿಯುವ ಸಾಧ್ಯತೆ ಇದೆ. ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಡಳಿತ ಬೀಚ್ ಕಾವಲು ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

ಇಳಿಮುಖವಾದ ನೆರೆ

ಉಡುಪಿಯ ಬೈಂದೂರು ತಾಲೂಕು ನಾವುಂದದಲ್ಲಿ ನೆರೆ ಸಂಪೂರ್ಣ ಇಳಿಮುಖವಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಸೌಪರ್ಣಿಕಾ ನದಿ ಉಕ್ಕಿ ಹರಿದಿತ್ತು. ಇದರಿಂದಾಗಿ 150 ಎಕರೆ ಮುಳುಗಡೆಯಾಗಿ ಕೃಷಿ ಭೂಮಿಯಲ್ಲಿ ಬೆಳೆದ ಭತ್ತ ನಾಶವಾಗಿತ್ತು. ಸದ್ಯ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ನೆರೆ ಸಂಪೂರ್ಣ ಇಳಿಮುಖವಾಗಿದೆ. ಒಮ್ಮೆ ಭತ್ತದ ನಾಟಿ ಮುಗಿಸಿದ್ದ ರೈತರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಳೆ ನಿಂತಿರುವುದರಿಂದ ಬಡಾಕೆರೆ ಕೃಷಿಕರು ಮತ್ತೆ ಬತ್ತದ ನಾಟಿ ಮಾಡುತ್ತಿದ್ದಾರೆ.

ಗುಡ್ಡ ಕುಸಿತ; ಮಣ್ಣು ತೆರವು ಕಾರ್ಯಾಚರಣೆ ಆರಂಭ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿದಿದೆ. ಹೊನ್ನಾವರದ ವರ್ನಕೇರಿ ಬಳಿ ನಿನ್ನೆ ಗುರುವಾರ ಮರ ಸಹಿತ ಗುಡ್ಡ ಕುಸಿದಿತ್ತು. ಇದರಿಂದಾಗಿ ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ, ಬೆಂಗಳೂರು ಮಾರ್ಗದ ಸಂಚಾರಕ್ಕೆ ಅಡ್ಡಿಯಾಗಿದ್ದರಿಂದ ಏಕಮುಖ ಸಂಚಾರಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಿತ್ತು.

ಇಂದು ಶುಕ್ರವಾರ ಕಲ್ಲುಬಂಡೆ ಸಹಿತ ಕುಸಿತ ಗುಡ್ಡ ರಸ್ತೆಗೆ ಬಿದ್ದಿದೆ. ಹೀಗಾಗಿ ಹಿಟಾಚಿ ಮೂಲಕ ಗುಡ್ಡದ ಮಣ್ಣು ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಮಣ್ಣು ತೆಗೆದರೂ ಮತ್ತೆ ಗುಡ್ಡ ಕುಸಿಯುತ್ತಿದ್ದು, ಹೊನ್ನಾವರ -ಬೆಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಅವೈಜ್ಞಾನಿಕ ಕಾಮಗಾರಿಯಿಂದ ಮನೆಗಳು ಜಲಾವೃತ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿ ಹಲವು ಮನೆಗಳು ಜಲಾವೃತಗೊಂಡಿದೆ. ನೌಕಾನೆಲೆ ಕಾಂಪೌಂಡ್‌, ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ನೀರು ಹರಿದುಹೋಗದೇ ಜಲಾವೃತಗೊಂಡಿದೆ. ಸಮುದ್ರಕ್ಕೆ ನೀರು ಸರಾಗವಾಗಿ ಹರಿದುಹೋಗದ ಪರಿಣಾಮ ಅರಗಾ ಗ್ರಾಮದ ನಿವಾಸಿಗಳು ಆತಂಕಗೊಂಡಿದ್ದಾರೆ. ಮಹಿಳೆಯರು, ಮಕ್ಕಳನ್ನು ಇಟ್ಟುಕೊಂಡು ಆತಂಕದಲ್ಲೇ ಕಾಲಕಳೆಯುವ ಪರಿಸ್ಥಿತಿ ಎದುರಾಗಿದೆ. ಮಳೆ ಹೆಚ್ಚಾದಲ್ಲಿ ಮನೆಗಳಿಗೆ ನೀರು ನುಗ್ಗುವ ಆತಂಕ ಇದೆ. ಪ್ರತಿವರ್ಷ ಮಳೆಗಾಲದಲ್ಲಿ ನೆರೆ ಪರಿಸ್ಥಿತಿಯನ್ನು ಅರಗಾ ಗ್ರಾಮಸ್ಥರು ಎದುರಿಸುತ್ತಿದ್ದಾರೆ. ನೀರು ಹರಿದುಹೋಗಲು ಸೂಕ್ತ ವ್ಯವಸ್ಥೆ ಇಲ್ಲದೇ ಅವ್ಯವಸ್ಥೆ ನಿರ್ಮಾಣವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

Karnataka Weather Forecast : ರಾಜ್ಯಾದ್ಯಂತ ಕಳೆದೊಂದು ವಾರದಿಂದ ಮಳೆಯು (Rain news) ಅಬ್ಬರಿಸುತ್ತಿದ್ದು, ಏಳು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಬೆಂಗಳೂರಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

VISTARANEWS.COM


on

By

karnataka Weather Forecast Rain
Koo

ಬೆಂಗಳೂರು: ಜು.5ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದ್ದು, ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಮಧ್ಯಮ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇತ್ತ ಉತ್ತರ ಒಳನಾಡಿನದಲ್ಲಿ ಸಾಕಷ್ಟು ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಆದರೆ ಬೀದರ್, ಕಲಬುರಗಿ, ಬೆಳಗಾವಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಸಹಿತ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

Karnataka Weather Forecast: ಭಾರಿ ಮಳೆಗೆ (Rain News) ಗುಡ್ಡ ಕುಸಿದಿದೆ. ಪರಿಣಾಮ ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಮೂಲಕ ಕರಾವಳಿಯಲ್ಲಿ ಮಳೆಗೆ ಮೊದಲ ಬಲಿಯಾಗಿದೆ.

VISTARANEWS.COM


on

By

karnataka Weather Forecast
Koo

ಉಡುಪಿ: ಕರಾವಳಿಯಲ್ಲಿ ಭಾರಿ ಮಳೆಗೆ (Karnataka Weather) ಮೊದಲ (Rain News) ಬಲಿಯಾಗಿದೆ. ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.

ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಆಗುಂಬೆಯಲ್ಲಿ 25 ಸೆಂ.ಮೀ ಮಳೆ ದಾಖಲು

ನೈರುತ್ಯ ಮಾನ್ಸೂನ್ ಕರಾವಳಿಯಲ್ಲಿ ಸಕ್ರಿಯವಾಗಿದ್ದರೆ, ಒಳಭಾಗದಲ್ಲಿ ಸಾಮಾನ್ಯವಾಗಿತ್ತು. ಆಗುಂಬೆ (ಶಿವಮೊಗ್ಗ ಜಿಲ್ಲೆ) 25, ಗೇರ್ಸೊಪ್ಪ (ಉತ್ತರ ಕನ್ನಡ ಜಿಲ್ಲೆ) 24, ಸಿದ್ದಾಪುರ (ಉಡುಪಿ ಜಿಲ್ಲೆ) 23, ಕಮ್ಮರಡಿ (ಚಿಕ್ಕಮಗಳೂರು) 20 ಸೆಂ.ಮೀ ಮಳೆಯಾಗಿತ್ತು. ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ) 19, ಕದ್ರಾ (ಉತ್ತರ ಕನ್ನಡ ಜಿಲ್ಲೆ) 15, ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ) 15, ಶೃಂಗೇರಿ (ಜಿಲ್ಲೆ ಚಿಕ್ಕಮಗಳೂರು) 15, ಕುಂದಾಪುರ (ಉಡುಪಿ ಜಿಲ್ಲೆ) 13, ಮಂಕಿ (ಉತ್ತರ ಕನ್ನಡ ಜಿಲ್ಲೆ) 12 ಸೆಂ.ಮೀ ಮಳೆಯಾಗಿತ್ತು.

ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು

ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತ ರಾತ್ರಿಯಿಡೀ ಸುರಿದ ಮಳೆಗೆ ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಾಳೆ ಗದ್ದೆ ಬಿಳ್ಳೂರು ಗ್ರಾಮದಲ್ಲಿ ಬಿಳ್ಳೂರು- ಮುಲ್ಲರ ಹಳ್ಳಿ ಸೇರಿ ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ನೀರು ನದಿಯಂತೆ ಉಕ್ಕಿ ಹರಿಯುತ್ತಿದೆ. ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಗ್ರಾಮಸ್ಥರು ಪರದಾಟ ಅನುಭವಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.

ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಶೃಂಗೇರಿ ಶಾರದಾಂಭೆ ತಟದಲ್ಲಿ ತುಂಗಾ ನದಿ ದೊಡ್ಡ ಪ್ರಮಾಣದಲ್ಲಿ ಹರಿಯುತ್ತಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗುವ ಸಾಧ್ಯತೆ ಇದೆ. ಇತ್ತ ಅಪಾಯದ ಮಟ್ಟ ಮೀರಿದ ಭದ್ರಾ ನದಿಯಿಂದಾಗಿ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತ ತಲುಪಿದೆ.

ಹೆಬ್ಬಾಳೆ ಸೇತುವೆಯ ಮೇಲ್ಪದರಕ್ಕೆ ಭದ್ರಾ ನೀರು ಅಪ್ಪಳಿಸುತ್ತಿದೆ. ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗಲಿದೆ. ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಪ್ರವಾಸಿಗರು ಹಾಗೂ ಸ್ಥಳೀಯರ ಓಡಾಟಕ್ಕೆ ತಡೆಹಿಡಿಯಲಾಗಿದೆ. ಯಾವುದೇ ಕ್ಷಣದಲ್ಲಾದರೂ ಸೇತುವೆ ಮೇಲೆ ನೀರು ಉಕ್ಕುವ ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿಯೇ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

Karnataka Weather Forecast : ಅಬ್ಬರಿಸುತ್ತಿರುವ ಮಳೆಯಿಂದಾಗಿ ನಾನಾ ಅವಾಂತರವೇ ಸೃಷ್ಟಿ ಆಗಿದೆ. ಮಳೆಗೆ (Rain News) ಲಾರಿಗಳ ನಡುವೆ ಮುಖಾಮುಖಿ (Road Accident) ಡಿಕ್ಕಿಯಾದರೆ, ಮತ್ತೊಂದು ಕಡೆ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರ ಬಿದ್ದು ಜಖಂಗೊಂಡಿದೆ. ಹಲವಾರು ಗ್ರಾಮಗಳು ನೀರಿನಿಂದ ಮುಳುಗಡೆಯಾಗಿದೆ.

VISTARANEWS.COM


on

By

karnataka Rain
Koo

ಬೆಳಗಾವಿ/ಶಿವಮೊಗ್ಗ/ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು (Karnataka rain) ಅವಾಂತರವನ್ನೇ (Rain Effect) ಸೃಷ್ಟಿಸಿದೆ. ತೀವ್ರ ಮಳೆಯಿಂದಾಗಿ ಚಾಲಕರ ನಿಯಂತ್ರಣ ತಪ್ಪಿ ಲಾರಿಗಳ ಮಧ್ಯೆ ಮುಖಾಮುಖಿ (Road Accident) ಡಿಕ್ಕಿಯಾಗಿದೆ. ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ಚಾಲಕರಿಬ್ಬರಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಗಳು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿವೆ. ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Rain

ಮಳೆಗೆ ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಭಾಗದಲ್ಲಿ ಭಾರೀ ಗಾಳಿಯೊಂದಿಗೆ ಮಳೆಯಾಗತ್ತಿದೆ. ಪರಿಣಾಮ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಬೃಹತ್ ಮರ ಬಿದ್ದಿದೆ. ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಓಮಿನಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓಮಿನಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನ ಮೇಲೆ ಮರ ಬಿದ್ದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

karnataka Rain

ಉಡುಪಿಯಲ್ಲಿ ಮುಳುಗಡೆಯಾದ ಗ್ರಾಮಗಳು

ಪ್ರತಿ ವರ್ಷದಂತೆ ಈ ವರ್ಷವೂ ಉಡುಪಿಯ ಬೈಂದೂರು ತಾಲೂಕಿನಲ್ಲಿ ನೆರೆಹಾವಳಿ ಸೃಷ್ಟಿಯಾಗಿದೆ. ತಾಲೂಕಿನ ನಾವುಂದ, ಬಡಾಕೇರಿ, ಮರವಂತೆ, ಸಾಲ್ಬುಡ, ಅರೆಹೊಳೆ ಕೋಣ್ಕಿ ಹಾಗೂ ಕುದ್ರು ಚಿಕ್ಕಳ್ಳಿ ಪಡುಕೋಣೆ ಭಾಗದಲ್ಲಿ ನೆರೆಹಾವಳಿಗೆ ತುತ್ತಾಗಿವೆ.

ಸ್ಥಳೀಯ ಯುವಕರು ನೆರೆಹಾವಳಿ ಪೀಡಿತ ಪ್ರದೇಶಗಳಿಗೆ ತೆರಳಿ ಅಗತ್ಯ ನೆರವು ನೀಡುತ್ತಿದ್ದಾರೆ. ಮೂರು ದೋಣಿಗಳನ್ನು ಬಳಸಿ ರಕ್ಷಣಾ ಕಾರ್ಯದ ಜತೆಗೆ ಅಗತ್ಯ ವಸ್ತು ಪೂರೈಸುತ್ತಿದ್ದಾರೆ. ಹೆಚ್ಚುವರಿಯಾಗಿ ಬೈಂದೂರು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನೆರೆಪೀಡಿತ ಪ್ರದೇಶಕ್ಕೆ ಕುಂದಾಪುರ ಸಹಾಯಕ ಕಮೀಶನರ್ ರಶ್ಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಮನೆಗಳು ಜಲಾವೃತ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಬಿಳೆಹೊಂಯ್ಗಿ, ಮಂಜಗುಣಿ ಸೇರಿದಂತೆ 5ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದೆ. ಹೊನ್ನೆಬೈಲ್ ಗ್ರಾಮದಲ್ಲಿ 20 ಮನೆಗಳು ಜಲಾವೃತಗೊಂಡಿದೆ. ಅಂಕೋಲಾ ತಾಲೂಕಿನ 5 ಗ್ರಾಮಗಳಲ್ಲಿ ರಸ್ತೆ ನೀರಿನಿಂದ ಮುಳುಗಿದೆ. ಹೀಗಾಗಿ ಬಿಳೆಹೊಂಯ್ಗಿ, ಹೊನ್ನೆಬೈಲು, ಶಿಂಗನಮಕ್ಕಿ, ಮಂಜಗುಣಿ ಶಾಲೆಗಳಲ್ಲಿ ಕಾಳಜಿ ಕೇಂದ್ರವನ್ನು ಜಿಲ್ಲಾಡಳಿತ ತೆರೆದಿದೆ. ನೆರೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

karnataka rain

50ಕ್ಕೂ ಅಧಿಕ ನಿವಾಸಿಗಳು ಕಾಳಜಿ ಕೇಂದ್ರಕ್ಕೆ ರವಾನೆಯಾಗಿದ್ದಾರೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದೆ. ವರುಣನ ಅಬ್ಬರಕ್ಕೆ ತಗ್ಗು ಪ್ರದೇಶದ ನಿವಾಸಿಗಳಲ್ಲಿ ಆತಂಕ ಹೆಚ್ಚಿದೆ. ಇತ್ತ ಭಟ್ಕಳದಲ್ಲೂ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೀರು ನಿಂತು ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನಲೆ ಭಟ್ಕಳ ರಂಗಿನಕಟ್ಟೆ ಪ್ರದೇಶ ಹೊಳೆಯಂತಾಗಿದೆ. ಭಟ್ಕಳ ತಹಸೀಲ್ದಾರ ನಾಗರಾಜ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುರಸಭಾ ಸಿಬ್ಬಂದಿ ಚರಂಡಿಯಲ್ಲಿ ತುಂಬಿರುವ ಮಣ್ಣು, ಕಲ್ಲನ್ನು ತೆರವುಗೊಳಿಸುತ್ತಿದ್ದಾರೆ. ಪಟ್ಟಣದ ಜಾಮೀಯಾಬಾದ್‌ ನಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ಕೋಗ್ತಿ ರೋಡ್, ಡೊಂಗರಪಳ್ಳಿ, ಆಝಾದ್‌ನಗರ, ಕಾರಗದ್ದೆ ರಸ್ತೆ ಜಲಾವೃತಗೊಂಡಿದೆ.

ಉಡುಪಿಯಲ್ಲಿ ಉಕ್ಕಿಹರಿದ ಮಡಿಸಾಲು ಹೊಳೆ

ಬ್ರಹ್ಮಾವರ ತಾಲೂಕಿನ ಆಲೂರು ಬಳಿ ಮಡಿಸಾಲು ಹೊಳೆಯು ಉಕ್ಕಿಹರಿದಿದೆ. ಆರೂರು- ಬೆಳ್ಮಾರು ಗ್ರಾಮದ ಮಧ್ಯ ಹರಿಯಲಿದ್ದು, ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೆರೆಹಾವಳಿ ಸೃಷ್ಟಿಯಾಗಿದೆ. ಕೃಷಿಕರಿಗೆ ಜೀವನದಿಯಾಗಿದ್ದ ಮಡಿಸಾಲು ಹೊಳೆ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಹೊಳೆಯ ಪಕ್ಕದ ಎಕರೆಗಟ್ಟಲೆ ಕೃಷಿ ಭೂಮಿ ಜಲಾವೃತಗೊಂಡಿದೆ. ಕೆಲವು ದಿನಗಳ ಹಿಂದೆಯಷ್ಟೆ ಭತ್ತದ ನಾಟಿ ಮಾಡಿ ಮಾಡಿದ್ದ ಪ್ರದೇಶದಲ್ಲಿ ಈಗ ನೆರೆಹಾವಳಿ ಸೃಷ್ಟಿಯಾಗಿದೆ. ನೆರೆಯಿಂದಾಗಿ ಆರೂರು ಬೆಳ್ಮಾರು ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಮತ್ತೆ ಮಳೆ ಮುಂದುವರಿದರೆ ಕಿರು ಸೇತುವೆ ಮುಳುಗಡೆಯಾಗುವ ಭೀತಿ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Defence Production
ದೇಶ9 seconds ago

Defence Production: ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮನಿರ್ಭರ; ರಕ್ಷಣಾ ಉತ್ಪಾದನೆ ದಾಖಲೆಯ ಶೇ.16ರಷ್ಟು ಏರಿಕೆ

Georgina Rodriguez
ಕ್ರೀಡೆ20 mins ago

Georgina Rodriguez : ಬಿಕಿನಿ ದಿನದಂದು ಬಗೆಬಗೆಯ ಬಿಕಿನಿಗಳಲ್ಲಿ ಮೈಮಾಟ ತೋರಿಸಿದ ಕ್ರಿಸ್ಟಿಯಾನೊ ರೊನಾಲ್ಡೊ ಪ್ರೇಯಸಿ ಜಾರ್ಜಿಯಾ ರೋಡ್ರಿಗಸ್​

Stock Market
ವಾಣಿಜ್ಯ25 mins ago

Stock Market: 1 ಲಕ್ಷ ಪಾಯಿಂಟ್‌ ಮೈಲಿಗಲ್ಲಿನತ್ತ ಸೆನ್ಸೆಕ್ಸ್‌; ಅಂಕಿ-ಅಂಶ ಹೇಳೋದೇನು?

Virat Kohli's Phone Wallpaper
ಕ್ರೀಡೆ25 mins ago

Virat Kohli’s Phone Wallpaper: ಕೊಹ್ಲಿಯ ಮೊಬೈಲ್​ ​ವಾಲ್​ ಪೇಪರ್​ನಲ್ಲಿರುವ ವ್ಯಕ್ತಿ ಯಾರು? ಇವರ ಹಿನ್ನಲೆ ಏನು?

natana Tarangini 20th anniversary celebration on July 6 and 7 in Bengaluru
ಕರ್ನಾಟಕ34 mins ago

Bengaluru News: ಬೆಂಗಳೂರಿನಲ್ಲಿ ಜು. 6,7ರಂದು ʼನಟನ ತರಂಗಿಣಿʼ 20ನೇ ವರ್ಷೋತ್ಸವ

HDFC Life certified as one of Indias Best Companies to Work For in 2024
ಬೆಂಗಳೂರು36 mins ago

HDFC Life: ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಲೈಫ್

Baby Death
Latest40 mins ago

Baby Death: ಹೋಮ್‌ ವರ್ಕ್‌ ಮಾಡುತ್ತಿದ್ದ ಬಾಲಕಿಗೆ ಸಾವಾಗಿ ಕಾಡಿದ ಪೆನ್‌!

Medical negligence
ದಾವಣಗೆರೆ42 mins ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

Prajwal Revanna Case
ಕರ್ನಾಟಕ48 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2 ವಾರ ಮುಂದೂಡಿಕೆ

kumble sridhara rao
ಶ್ರದ್ಧಾಂಜಲಿ51 mins ago

Kumble Sridhara Rao: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ3 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ4 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು5 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು6 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ10 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ24 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ1 day ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಟ್ರೆಂಡಿಂಗ್‌