Doctor's Day: ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ವೃದ್ಧಿಗೆ ಕ್ರಮ; ಪ್ರಧಾನಿ ಮೋದಿ ಭರವಸೆ - Vistara News

ದೇಶ

Doctor’s Day: ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ವೃದ್ಧಿಗೆ ಕ್ರಮ; ಪ್ರಧಾನಿ ಮೋದಿ ಭರವಸೆ

Doctor’s Day: ಇಂದು (ಜುಲೈ 1) ರಾಷ್ಟ್ರೀಯ ವೈದ್ಯರ ದಿನ. ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಕೇಂದ್ರ ಸರ್ಕಾರ ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ಸುಧಾರಿಸಲು ಕ್ರಮ ಕೈಗೊಳ್ಳಲಿದೆ, ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಲಿದೆ ಎಂದು ಭರವಸೆ ನೀಡಿದ್ದಾರೆ. ಜತೆಗೆ ಇಂದು ಚಾರ್ಟರ್ಡ್ ಅಕೌಂಟೆಂಟ್‌ ದಿನವಾಗಿರುವುದರಿಂದ ಅವರ ಸೇವೆಯನ್ನೂ ಪ್ರಧಾನಿ ಸ್ಮರಿಸಿದ್ದಾರೆ.

VISTARANEWS.COM


on

Doctor's Day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಇಂದು (ಜುಲೈ 1) ರಾಷ್ಟ್ರೀಯ ವೈದ್ಯರ ದಿನ (Doctor’s Day). ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು, ಕೇಂದ್ರ ಸರ್ಕಾರ ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ಸುಧಾರಿಸಲು ಕ್ರಮ ಕೈಗೊಳ್ಳಲಿದೆ, ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಲಿದೆ ಎಂದು ಭರವಸೆ ನೀಡಿದ್ದಾರೆ.

ಡಾ. ಬಿಪಿನ್‌ ಚಂದ್ರ ರಾಯ್‌ ಅವರ ಸಂಸ್ಮರಣಾರ್ಥವಾಗಿ ಭಾರತ ಸರ್ಕಾರ ಪ್ರತಿವರ್ಷ ಜುಲೈ 1ರಂದು ವೈದ್ಯರ ದಿನವನ್ನಾಗಿ ಆಚರಿಸುತ್ತಿದೆ. 1991ರಲ್ಲಿ ರಾಷ್ಟ್ರೀಯ ವೈದ್ಯರ ದಿನವನ್ನು ಘೋಷಿಸಲಾಯಿತು. ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿಯಾಗಿದ್ದ ಡಾ. ಬಿಪಿನ್‌ ಚಂದ್ರ ರಾಯ್‌, ಖ್ಯಾತ ವೈದ್ಯರು ಮತ್ತು ಸ್ವಾತಂತ್ರ ಹೋರಾಟಗಾರರೂ ಆಗಿದ್ದರು. ಭಾರತೀಯ ವೈದ್ಯಕೀಯ ಸಂಘ, ಭಾರತೀಯ ವೈದ್ಯಕೀಯ ಮಂಡಳಿ ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳನ್ನು ಹುಟ್ಟುಹಾಕಿ, ವೈದ್ಯಕೀಯ ಕ್ಷೇತ್ರಕ್ಕೆ ಸಾಂಸ್ಥಿಕ ಬಲವನ್ನು ನೀಡುವಲ್ಲಿ ಡಾ. ರಾಯ್‌ ಪ್ರಮುಖರಾಗಿದ್ದರು. ತಾವೇ ಸ್ವತಃ ಒಳ್ಳೆಯ ವೈದ್ಯರಾಗಿ, ಬಹಳಷ್ಟು ಜೀವಗಳನ್ನು ಉಳಿಸಿದ್ದರು. ಸ್ವಾತಂತ್ರ ಹೋರಾಟದಲ್ಲೂ ಅವರು ಪಾಲ್ಗೊಂಡಿದ್ದರು. ದೇಶಕ್ಕೆ ಅವರು ನೀಡಿದ ಕೊಡುಗೆಗಾಗಿ, ಭಾರತದ ಅತ್ತ್ಯುನ್ನತ ನಾಗರಿಕ ಪ್ರಶಸ್ತಿ ʻಭಾರತ ರತ್ನʼ ಪುರಸ್ಕಾರವನ್ನು ನೀಡಿ ಗೌರವಿಸಲಾಗಿದೆ.

“ವೈದ್ಯರ ದಿನದ ಶುಭಾಶಯಗಳು. ಇದು ನಮ್ಮ ಆರೋಗ್ಯವನ್ನು ಕಾಪಾಡುವ ನಿಜವಾದ ಹೀರೋಗಳನ್ನು ಸ್ಮರಿಸುವ, ಗೌರವಿಸುವ ದಿನ. ವೈದ್ಯರು ಅತ್ಯಂತ ಸವಾಲಿನ ಸಂಕೀರ್ಣತೆಗಳನ್ನೂ ತಮ್ಮ ಕೌಶಲ್ಯದಿಂದ ನಿವಾರಿಸುತ್ತಾರೆ. ಭಾರತದಲ್ಲಿ ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯವನ್ನು ಸುಧಾರಿಸಲು ಮತ್ತು ವೈದ್ಯರು ತಾವು ಅರ್ಹರಾದ ಗೌರವವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಮೋದಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇಂದು ಚಾರ್ಟರ್ಡ್ ಅಕೌಂಟೆಂಟ್‌ ದಿನವಾಗಿರುವುದರಿಂದ ಅವರ ಸೇವೆಯನ್ನೂ ಪ್ರಧಾನಿ ಸ್ಮರಿಸಿದ್ದಾರೆ. ದೇಶದ ಆರ್ಥಿಕತೆಗೆ ಚಾರ್ಟರ್ಡ್ ಅಕೌಂಟೆಂಟ್‌ಗಳೂ ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಮತ್ತೊಂದು ಪೋಸ್ಟ್‌ನಲ್ಲಿ ಅವರು ಬರೆದುಕೊಂಡಿದ್ದಾರೆ. ʼʼಹ್ಯಾಪಿ ಚಾರ್ಟೆಡ್‌ ಅಕೌಂಟೆಂಟ್ಸ್‌ ಡೇ. ಸಿಎ ನಮ್ಮ ಆರ್ಥಿಕತೆಯಲ್ಲಿ ಮುಖ್ಯ ಪಾತ್ರವಹಿಸಿದ್ದಾರೆ. ಅವರ ಪರಿಣತಿ ಮತ್ತು ಕಾರ್ಯತಂತ್ರದ ಒಳನೋಟಗಳು ವ್ಯವಹಾರಗಳು ಮತ್ತು ವ್ಯಕ್ತಿಗಳಿಗೆ ಸಮಾನವಾಗಿ ಪ್ರಯೋಜನಕಾರಿಯಾಗಿವೆ. ಅವರು ಆರ್ಥಿಕ ಬೆಳವಣಿಗೆ ಮತ್ತು ಸ್ಥಿರತೆಗೆ ಗಮನಾರ್ಹ ಕೊಡುಗೆ ನೀಡುತ್ತಾರೆ. ಅವರು ನಮ್ಮ ಆರ್ಥಿಕ ಯೋಗಕ್ಷೇಮಕ್ಕೆ ಅತ್ಯಗತ್ಯʼʼ ಎಂದು ಶ್ಲಾಘಿಸಿದ್ದಾರೆ.

ಅಕೌಂಟೆಂಟ್ ದಿನದ ಹಿನ್ನೆಲೆ

ಸಿಎ ಕೋರ್ಸ್ ಮತ್ತು ಪರೀಕ್ಷೆ ನಡೆಸುವ ಹಾಗೂ ಸಿಎಗಳ ನೊಂದಣಿ ಇರುವ ಐಸಿಎಐ ಸಂಸ್ಥೆಯ ಸಂಸ್ಥಾಪನೆಯಾಗಿ 75 ವರ್ಷ ಆಗಿದೆ. 1949ರ ಜುಲೈ 1ಕ್ಕೆ ಇನ್ಸ್​ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಸ್ಥಾಪನೆಯಾಗಿತ್ತು. ಹೀಗಾಗಿ ಈ ದಿನವನ್ನು ಪ್ರತೀ ವರ್ಷ ಚಾರ್ಟರ್ಡ್ ಅಕೌಂಟೆಂಟ್ ದಿನವಾಗಿ ಆಚರಿಸಲಾಗುತ್ತದೆ. ಭಾರತದಲ್ಲಿ ಸದ್ಯ ಇರುವ ಕಠಿಣ ಕೋರ್ಸ್​ಗಳಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಕೋರ್ಸ್ ಕೂಡ ಒಂದು. ಇದರ ಪಾಸಿಂಗ್ ಪರ್ಸಂಟೇಜ್ ಕೇವಲ ಶೇ. 8ರಿಂದ 20. ಐಸಿಎಐನಿಂದ ನಡೆಸಲಾಗುವ ಸಿಎ ಪರೀಕ್ಷೆ ತೇರ್ಗಡೆಯಾದವರು ಮಾತ್ರವೇ ಕಂಪನಿಗಳ ಆಡಿಟಿಂಗ್ ಮಾಡಬಹುದು.

ಇದನ್ನೂ ಓದಿ: National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Sudha Murty: ಸುಧಾ ಮೂರ್ತಿ 30 ವರ್ಷಗಳಿಂದ ಒಂದೇ ಒಂದು ಸೀರೆ ಖರೀದಿಸಿಲ್ಲ; ಇದಕ್ಕೆ ಕಾರಣ ಕಾಶಿಯಂತೆ!

ಆರು ವರ್ಷಗಳ ಹಿಂದೆ ನನ್ನ ತಾಯಿ ತೀರಿಕೊಂಡಾಗ ಅವರ ಕಪಾಟಿನಲ್ಲಿದ್ದ ವಸ್ತುಗಳನ್ನು ತೆಗೆಯಲು ಕೇವಲ ಅರ್ಧ ಗಂಟೆ ಸಾಕಾಯಿತು. ಏಕೆಂದರೆ ಅವರ ಬಳಿ ಕೇವಲ 8-10 ಸೀರೆಗಳು ಮಾತ್ರ ಇದ್ದವು. ನನ್ನ ಅಜ್ಜಿ 32 ವರ್ಷಗಳ ಹಿಂದೆ ನಿಧನರಾದಾಗ ಅವರ ಬಳಿ ಕೇವಲ ನಾಲ್ಕು ಸೀರೆಗಳು ಇದ್ದವು. ಇವೆಲ್ಲ ನನ್ನ ಮೇಲೆ ಪರಿಣಾಮ ಬೀರಿವೆ ಎಂದು ಸುಧಾ ಮೂರ್ತಿ (Sudha Murty) ಅವರು ಸಂದರ್ಶನದಲ್ಲಿ ಹೇಳಿದ್ದಾರೆ.

VISTARANEWS.COM


on

By

Sudha Murty
Koo

ತಮ್ಮ ಸರಳತೆಯಿಂದಲೇ ಸುದ್ದಿಯಲ್ಲಿರುವ ರಾಜ್ಯಸಭೆಯ ನೂತನ (Rajya Sabha) ಸದಸ್ಯೆ (MP), ಲೇಖಕಿ, ಇನ್ಫೋಸಿಸ್‌ನ ಸಂಸ್ಥಾಪಕ (Infosys chairman) ನಾರಾಯಣ ಮೂರ್ತಿ (Narayana Murthy) ಅವರ ಪತ್ನಿ ಸುಧಾ ಮೂರ್ತಿ (Sudha Murty) ಅವರು ಕಳೆದ 30 ವರ್ಷಗಳಿಂದ ಒಂದೇ ಒಂದು ಸೀರೆಯನ್ನೂ ಖರೀದಿ ಮಾಡಿಲ್ಲವಂತೆ! ಇತ್ತೀಚಿಗೆ ಅವರು ನೀಡಿರುವ ಸಂದರ್ಶನವೊಂದರಲ್ಲಿ ಈ ವಿಚಾರ ಬಹಿರಂಗಪಡಿಸಿದ್ದಾರೆ.

ಇದಕ್ಕೆ ಮುಖ್ಯ ಕಾರಣ ಕಾಶಿಗೆ ಪ್ರವಾಸ ಮಾಡಿರುವುದು ಎಂಬುದಾಗಿ ಅವರು ತಿಳಿಸಿದ್ದಾರೆ! ಅಪಾರ ಸಂಪತ್ತು ಇದ್ದರೂ ಇನ್ಫೋಸಿಸ್ ಅಧ್ಯಕ್ಷ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರು ತಮ್ಮ ಸರಳವಾದ ಉಡುಗೆ ತೊಡುಗೆಗಳಿಂದ, ಸಾಮಾನ್ಯ ಜೀವನ ಶೈಲಿಯಿಂದ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ.

ದಿ ವಾಯ್ಸ್ ಆಫ್ ಫ್ಯಾಶನ್‌ಗೆ ನೀಡಿದ ಸಂದರ್ಶನದಲ್ಲಿ ಸುಧಾ ಮೂರ್ತಿ ಅವರು ಈ ವಿಚಾರವನ್ನು ಹೀಗೆ ಹಂಚಿಕೊಂಡಿದ್ದಾರೆ: ಕಾಶಿಗೆ ಹೋದಾಗ ನೀವು ತುಂಬಾ ಇಷ್ಟಪಡುವ ಯಾವುದಾದರೂ ಒಂದನ್ನು ತ್ಯಜಿಸಬೇಕು ಎಂದು ಹೇಳಲಾಗುತ್ತದೆ. ನಾನು ಶಾಪಿಂಗ್ ಮಾಡಲು ಇಷ್ಟಪಡುತ್ತೇನೆ. ಆದ್ದರಿಂದ ಗಂಗೆಗೆ ನಾನು ಭರವಸೆ ನೀಡಿದೆ. ಈ ಜೀವಿತಾವಧಿಯಲ್ಲಿ ಶಾಪಿಂಗ್ ಅನ್ನು ತ್ಯಜಿಸುತ್ತೇನೆ!

ಪೋಷಕರು ಮತ್ತು ಅಜ್ಜಿಯರು ಕನಿಷ್ಠ ಆಸ್ತಿಯೊಂದಿಗೆ ಮಿತವ್ಯಯದ ಜೀವನವನ್ನು ನಡೆಸುತ್ತಿದ್ದರು. ಅವರ ಬದ್ಧತೆಯು ನನ್ನ ಜೀವನದ ಮೇಲೆ ಆಳವಾಗಿ ಪರಿಣಾಮ ಬೀರಿದೆ ಎಂದು 73 ವರ್ಷದ ಸುಧಾ ಮೂರ್ತಿ ಅವರು ಹೇಳಿದರು.

ಆರು ವರ್ಷಗಳ ಹಿಂದೆ ನನ್ನ ತಾಯಿ ತೀರಿಕೊಂಡಾಗ ಅವರ ಕಪಾಟಿನಲ್ಲಿದ್ದ ವಸ್ತುಗಳನ್ನು ನೀಡಲು ಕೇವಲ ಅರ್ಧ ಗಂಟೆ ತೆಗೆದುಕೊಂಡಿತು. ಏಕೆಂದರೆ ಅವರು ಅದರಲ್ಲಿ ಕೇವಲ 8- 10 ಸೀರೆಗಳನ್ನು ಮಾತ್ರ ಹೊಂದಿದ್ದರು. ನನ್ನ ಅಜ್ಜಿ 32 ವರ್ಷಗಳ ಹಿಂದೆ ನಿಧನರಾದಾಗ, ಅವರ ಬಳಿ ಕೇವಲ ನಾಲ್ಕು ಸೀರೆಗಳು ಇದ್ದವು ಎಂದು ಸುಧಾ ಮೂರ್ತಿ ಅವರು ನೆನಪಿಸಿಕೊಂಡಿದ್ದಾರೆ.


ಎರಡು ದಶಕಗಳಿಂದ ಸುಧಾ ಮೂರ್ತಿ ಅವರು ತಮ್ಮ ಸಹೋದರಿಯರು, ಆಪ್ತ ಸ್ನೇಹಿತರು ಮತ್ತು ಸಾಂದರ್ಭಿಕವಾಗಿ ಅವರು ಕೆಲಸ ಮಾಡುವ ಎನ್‌ಜಿಒಗಳು ಉಡುಗೊರೆಯಾಗಿ ನೀಡಿದ ಸೀರೆಗಳನ್ನು ಧರಿಸುತ್ತಿದ್ದಾರೆ. ಅವರ ಬಳಿ ಇರುವ ಅತ್ಯಮೂಲ್ಯವಾದ ಅಸ್ತಿ ಎಂದರೆ ಇನ್ಫೋಸಿಸ್ ಫೌಂಡೇಶನ್‌ನೊಂದಿಗಿನ ತಮ್ಮ ಕೆಲಸದ ಮೂಲಕ ತಮ್ಮ ಜೀವನವನ್ನು ಪರಿವರ್ತಿಸಲು ಸಹಾಯ ಮಾಡಿದ ಮಹಿಳೆಯರ ಗುಂಪಿನಿಂದ ನೀಡಿರುವ ಎರಡು ಕಸೂತಿ ಸೀರೆಗಳಾಗಿವೆ ಎಂದು ಸುಧಾ ಮೂರ್ತಿ ಅವರು ಹೇಳಿದರು.

ಸಹೋದರಿಯರು ಆರಂಭದಲ್ಲಿ ಪ್ರತಿ ವರ್ಷ ಒಂದೆರಡು ಸೀರೆಗಳನ್ನು ಉಡುಗೊರೆಯಾಗಿ ನೀಡುತ್ತಿದ್ದರು. ನನ್ನ ಸಂಗ್ರಹದಲ್ಲಿ ಬೆಳೆಯುತ್ತಿರುವ ಸೀರೆಗಳನ್ನು ನಿಭಾಯಿಸುವುದು ಕಷ್ಟ ಎಂದು ಅನಿಸಿದ ಮೇಲೆ ಅವರಿಗೆ ಈ ಉಡುಗೊರೆ ಬೇಡ, ನನ್ನ ಬಳಿ ಈಗಾಗಲೇ ತುಂಬಾ ಇದೆ ಎಂದು ಹೇಳಲು ಪ್ರಾರಂಭಿಸಿದ್ದಾಗಿ ಸುಧಾ ಮೂರ್ತಿ ತಿಳಿಸಿದರು.

ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯ ಈಗ ಕನ್ನಡ ಮೇಷ್ಟ್ರು; ಶಾಲೆಗೆ ಭೇಟಿ ನೀಡಿ ವ್ಯಾಕರಣ ಪಾಠ ಮಾಡಿದ ಸಿಎಂ!

ನಾನು ಈಗ ಐವತ್ತು ವರ್ಷಗಳಿಂದ ಸೀರೆಗಳನ್ನು ಧರಿಸುತ್ತಿದ್ದೇನೆ. ಅವುಗಳನ್ನು ಧರಿಸಿದ ಬಳಿಕ ಒಗೆದು, ಇಸ್ತ್ರಿ ಮಾಡಿ ಇಡುತ್ತೇನೆ. ನನ್ನ ಸೀರೆಗಳನ್ನು ನೆಲವನ್ನು ಗುಡಿಸುವಂತೆ ನಾನು ಧರಿಸುವುದಿಲ್ಲ. ಆದ್ದರಿಂದ ಅದು ಕೊಳಕಾಗುವುದಿಲ್ಲ ಮತ್ತು ದೀರ್ಘ ಬಾಳಿಕೆ ಬರುತ್ತದೆ ಎಂದು ಅವರು ಹೇಳಿದರು.

ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷರಾದ ಸುಧಾ ಮೂರ್ತಿ ಅವರು ರಾಜ್ಯಸಭೆಯ ತಮ್ಮ ಚೊಚ್ಚಲ ಭಾಷಣದಲ್ಲಿ, ಗರ್ಭಕಂಠದ ಕ್ಯಾನ್ಸರ್ ವಿರುದ್ಧ ಹೋರಾಡಲು ಸರ್ಕಾರಿ ಪ್ರಾಯೋಜಿತ ಲಸಿಕೆ ಕಾರ್ಯಕ್ರಮದ ಕುರಿತು ಮಾತನಾಡಿದ್ದರು. ಅಲ್ಲದೇ ಅವರು 57 ದೇಶೀಯ ಪ್ರವಾಸಿ ತಾಣಗಳನ್ನು ವಿಶ್ವ ಪರಂಪರೆಯ ತಾಣಗಳಾಗಿ ಗುರುತಿಸುವಂತೆ ಸಲಹೆ ನೀಡಿದ್ದರು.

Continue Reading

ದೇಶ

NEET UG: ನೀಟ್‌ ಅಕ್ರಮ: ಪರೀಕ್ಷೆಯನ್ನು ರದ್ದುಗೊಳಿಸುವುದು ಸಮಂಜಸವಲ್ಲ ಎಂದ ಕೇಂದ್ರ

NEET UG: ನೀಟ್‌ ಅಕ್ರಮದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ ನಡೆದಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ತನ್ನ ಅಫಿಡವಿಟ್‌ ಸಲ್ಲಿಸಿದೆ. 2024 ರ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದು ಗಂಭೀರವಾಗಿ ಅಪಾಯಕ್ಕೆ ಕಾರಣವಾಗುತ್ತದೆ. ಈ ಪರೀಕ್ಷೆಗೆ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಅವರಿಗೆ ಇದರಿಂದ ಅನ್ಯಾಯ ಆಗುತ್ತದೆ. ದೇಶವ್ಯಾಪಿ ಈ ಅಕ್ರಮ ನಡೆಯದೇ ಇರುವಾಗ ಪರೀಕ್ಷೆ ರದ್ದುಗೊಳಿಸುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.

VISTARANEWS.COM


on

Neet UG
Koo

ಹೊಸದಿಲ್ಲಿ: ಪದವಿಪೂರ್ವ ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ (NEET UG) ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ(Central Government) ತನ್ನ ನಿಲುವನ್ನು ಸುಪ್ರೀಂಕೋರ್ಟ್‌(Supreme Court)ಗೆ ತಿಳಿಸಿದ್ದು, ಈಗಾಗಲೇ ನಡೆದಿರುವ ಪರೀಕ್ಷೆಯನ್ನು ಅಮಾನ್ಯಗೊಳಿಸುವುದಾಗಲಿ ಅಥವಾ ಮರು ಪರೀಕ್ಷೆ ನಡೆಸುವ ಉದ್ದೇಶವಾಗಲೀ ಸರ್ಕಾರಕ್ಕಿಲ್ಲ ಎಂದು ಹೇಳಿದೆ. ಅದೂ ಅಲ್ಲದೇ ಬರೋಬ್ಬರಿ 24ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದ ಈ ಪರೀಕ್ಷೆಯಲ್ಲಿ ಅಷ್ಟು ದೊಡ್ಡ ಮಟ್ಟದಲ್ಲಿ ಈ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ನೀಟ್‌ ಅಕ್ರಮದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ ನಡೆದಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ತನ್ನ ಅಫಿಡವಿಟ್‌ ಸಲ್ಲಿಸಿದೆ. 2024 ರ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದು ಗಂಭೀರವಾಗಿ ಅಪಾಯಕ್ಕೆ ಕಾರಣವಾಗುತ್ತದೆ. ಈ ಪರೀಕ್ಷೆಗೆ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಅವರಿಗೆ ಇದರಿಂದ ಅನ್ಯಾಯ ಆಗುತ್ತದೆ. ದೇಶವ್ಯಾಪಿ ಈ ಅಕ್ರಮ ನಡೆಯದೇ ಇರುವಾಗ ಪರೀಕ್ಷೆ ರದ್ದುಗೊಳಿಸುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (NEET PG 2024) ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ (National Board of Examinations) ಪ್ರಕಟಿಸಿದೆ. ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಜೂನ್ 23ರಂದು ನಿಗದಿಯಾಗಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಯುಜಿ ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆ ಸೇರಿದಂತೆ ವಿವಿಧ ವಿವಾದ ಭುಗಿಲೆದ್ದ ಹಿನ್ನಲೆಯಲ್ಲಿ ಜೂನ್‌ 22ರಂದು ಪರೀಕ್ಷೆ ಮುಂದೂಡಿ ಪ್ರಕಟಣೆ ಹೊರಡಿಸಲಾಗಿತ್ತು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಹಲವು ದೂರುಗಳು ದಾಖಲಾಗಿದ್ದವು. ಸಾಮಾಜಿಕ ಮಾಧ್ಯಮಗಳ ಮೂಲಕ ಆಕಾಂಕ್ಷಿಗಳಿಗೆ ಹಣಕ್ಕಾಗಿ ಪ್ರಶ್ನೆ ಪತ್ರಿಕೆಯನ್ನು ನೀಡುವ ಆಮಿಷ ಒಡ್ಡಲಾಗಿದೆ ಎಂದು ದೂರಲಾಗಿತ್ತು. ಹೀಗಾಗಿ ಪರೀಕ್ಷೆಯನ್ನೇ ರದ್ದು ಮಾಡಲಾಗಿತ್ತು.

ನೀಟ್-ಪಿಜಿ ಪ್ರವೇಶ ಪರೀಕ್ಷೆಯ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿತ್ತು. ಪರೀಕ್ಷಾ ಪ್ರಕ್ರಿಯೆಗಳ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಮೌಲ್ಯಮಾಪನ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ಸಮರ್ಥನೆ ನೀಡಿತ್ತು.
ಕೊನೇ ಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಉಂಟಾದ ಅನಾನುಕೂಲತೆಗೆ ಆರೋಗ್ಯ ಸಚಿವಾಲಯವು ವಿಷಾದಿಸುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ಪ್ರಕ್ರಿಯೆ ಪಾವಿತ್ರ್ಯವನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲ ಪ್ರಕಟಣೆ ಹೊರಡಿಸಿ ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಹೇಳಿತ್ತು.

ಡಾರ್ಕ್​ನೆಟ್​​ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಯುಜಿಸಿ-ನೆಟ್ ರದ್ದುಗೊಳಿಸಿದ ನಂತರ ಮುಂದೂಡಲ್ಪಟ್ಟ ಎರಡನೇ ಸ್ಪರ್ಧಾತ್ಮಕ ಪರೀಕ್ಷೆ ಇದಾಗಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (UG) ಅಕ್ರಮಗಳು ನಡೆದಿವೆ ಎಂಬ ಆರೋಪದ ಬಗ್ಗೆಯೂ ವಿವಾದವಿದೆ. ಜೂನ್‌ 21ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೂನ್ 25ರಿಂದ ನಡೆಯಬೇಕಿದ್ದ ಸಿಎಸ್ಐಆರ್-ಯುಜಿಸಿ-ನೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಘೋಷಿಸಿತ್ತು.

ಇದನ್ನೂ ಓದಿ:Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Continue Reading

ಪ್ರಮುಖ ಸುದ್ದಿ

T20 World Cup :​ ವಿಜಯೋತ್ಸವದ ಕ್ಷಣಗಳನ್ನು ಉಲ್ಲೇಖಿಸಿ ಬಿಸಿಸಿಐಗೆ ಕುಟುಕಿದ ಆದಿತ್ಯ ಠಾಕ್ರೆ

T20 World Cup : ಟಿ20 ವಿಶ್ವ ಕಪ್​ ಗೆದ್ದುಕೊಂಡು ವೆಸ್ಟ್​ ಇಂಡೀಸ್​ನಿಂದ ಬಂದ ಭಾರತ ತಂಡದ ಆಟಗಾರರಿಗೆ ಅಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಸೇರಿದ್ದರು. ಮುಂಬೈನಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮ ಸ್ಟೇಡಿಯಮ್​ನ ಹೊರಗೂ ಹಾಗೂ ಒಳಗೂ ಲಕ್ಷಾಂತರ ಮಂದಿಯ ಕೂಡುವಿಕೆಗೆ ಸಾಕ್ಷಿಯಾಗಿತ್ತು. ಇದನ್ನು ಉಲ್ಲೇಖಿಸಿ ಬಿಸಿಸಿಐಗೆ ಪರೋಕ್ಷವಾಗಿ ಕುಟುಕಿದ್ದಾರೆ ಆದಿತ್ಯ ಠಾಕ್ರೆ.

VISTARANEWS.COM


on

T20 World Cup
Koo

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ 2023 ರ ಫೈನಲ್ ಪಂದ್ಯವನ್ನು ಮುಂಬೈನಲ್ಲಿ ಆಯೋಜಿಸದೆ ಗುಜರಾತ್​​ನ ಅಹಮದಾಬಾದ್​ನಲ್ಲಿರುವ ವಿಶ್ವ ವಿಖ್ಯಾತ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡಿಸಿರುವ ಬಗ್ಗೆ ಕ್ರಿಕೆಟ್ ಮುಂಬೈ ಅಭಿಮಾನಿಗಳಿಗೆ ಬೇಸರವಿತ್ತು. ಕ್ರಿಕೆಟ್​​ ಕಾಶಿಯಾಗಿರುವ ವಾಂಖೆಡೆ ಸ್ಟೇಡಿಯಮ್​ನಲ್ಲೇ ಪಂದ್ಯ ನಡೆಸಬೇಕು ಎಂಬುದು ಬಹುತೇಕ ಭಾರತೀಯರ ಒತ್ತಾಸೆಯಾಗಿತ್ತು. ಆದರೆ, ದೊಡ್ಡ ಸ್ಟೇಡಿಯಮ್​ (1.30 ಲಕ್ಷ ಮಂದಿ ಪ್ರೇಕ್ಷಕರನ್ನು ತುಂಬಿಕೊಳ್ಳುವ ಸಾಮರ್ಥ್ಯ) ಎಂಬ ಕಾರಣಕ್ಕೆ ನರೇಂದ್ರ ಮೋದಿ ಸ್ಟೇಡಿಯಮ್​ಗೆ ಫೈನಲ್ ಪಂದ್ಯವನ್ನು ವರ್ಗಾಯಿಸಲಾಯಿತ್ತು. ಫೈನಲ್​ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತಿತ್ತು. ಇದೀಗ ಆ ನೋವನ್ನು ಶಿವಸೇನೆ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ ಹೊರ ಹಾಕಿದ್ದಾರೆ. ಅದಕ್ಕೆ ಕಾರಣವೂ ಇದೆ. ಟಿ20 ವಿಶ್ವ ಕಪ್​ ಗೆದ್ದುಕೊಂಡು (T20 World Cup ) ವೆಸ್ಟ್​ ಇಂಡೀಸ್​ನಿಂದ ಬಂದ ಭಾರತ ತಂಡದ ಆಟಗಾರರಿಗೆ ಅಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಸೇರಿದ್ದರು. ಮುಂಬೈನಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮ ಸ್ಟೇಡಿಯಮ್​ನ ಹೊರಗೂ ಹಾಗೂ ಒಳಗೂ ಲಕ್ಷಾಂತರ ಮಂದಿಯ ಕೂಡುವಿಕೆಗೆ ಸಾಕ್ಷಿಯಾಗಿತ್ತು. ಇದನ್ನು ಉಲ್ಲೇಖಿಸಿ ಬಿಸಿಸಿಐಗೆ ಪರೋಕ್ಷವಾಗಿ ಕುಟುಕಿದ್ದಾರೆ ಆದಿತ್ಯ ಠಾಕ್ರೆ.

ಮುಂಬೈನಲ್ಲಿ ನಿನ್ನೆ ನಡೆದ ವಿಶ್ವ ಕಪ್​ ಟ್ರೋಫಿಯ ಸಂಭ್ರಮಾಚರಣೆ ಬಿಸಿಸಿಐಗೆ ನೇರ ಸಂದೇಶವಾಗಿದೆ. ವಿಶ್ವಕಪ್ ಫೈನಲ್ ಪಂದ್ಯವನ್ನು ಮುಂಬೈನಿಂದ ಎಂದಿಗೂ ಕಸಿದುಕೊಳ್ಳಬೇಡಿ” ಎಂದು ಆದಿತ್ಯ ಠಾಕ್ರೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2024 ರ ಚಾಂಪಿಯನ್ ಆಗಿರುವ ಭಾರತೀಯ ಕ್ರಿಕೆಟ್ ತಂಡವನ್ನು ಮುಂಬೈನಲ್ಲಿ ಗುರುವಾರ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾರಿ ಜನಸಮೂಹ ಸ್ವಾಗತಿಸಿದ್ದರು. ಅದಾದ ಒಂದು ದಿನದ ನಂತರ ಆದಿತ್ಯ ಬಿಸಿಸಿಐ ವಿರುದ್ಧ ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: Virat Kohli’s Phone Wallpaper: ಕೊಹ್ಲಿಯ ಮೊಬೈಲ್​ ​ವಾಲ್​ ಪೇಪರ್​ನಲ್ಲಿರುವ ವ್ಯಕ್ತಿ ಯಾರು? ಇವರ ಹಿನ್ನಲೆ ಏನು?

ಟಿ 20 ಭಾರತೀಯ ಕ್ರಿಕೆಟ್ ತಂಡವನ್ನು ಸ್ವಾಗತಿಸಲು ಅಭಿಮಾನಿಗಳು ವಾಂಖೆಡೆ ಕ್ರೀಡಾಂಗಣದಲ್ಲಿ ಗಂಟೆಗಳ ಕಾಲ ಕಾದಿದ್ದರು. ಎಂಎಸ್ ಧೋನಿ ನಾಯಕತ್ವದಲ್ಲಿ 2007 ರಲ್ಲಿ ಭಾರತದ ಮೊದಲ ಟಿ 20 ವಿಶ್ವಕಪ್ ಗೆಲುವು, 2011 ರ ಕ್ರಿಕೆಟ್ ವಿಶ್ವಕಪ್ ಗೆಲುವು ಮತ್ತು 2013 ರಲ್ಲಿ ಸಚಿನ್ ತೆಂಡೂಲ್ಕರ್ ಅವರ ಭಾವನಾತ್ಮಕ ವಿದಾಯ ಸೇರಿದಂತೆ ಅನೇಕ ಐತಿಹಾಸಿಕ ಕ್ರಿಕೆಟ್ ಘಟನೆಗಳಿಗೆ ವಾಂಖೆಡೆ ಆತಿಥ್ಯ ವಹಿಸಿದೆ.

ಅವಕಾಶಗಳು ಮತ್ತು ಕಾರ್ಯಕ್ರಮಗಳನ್ನು ಮುಂಬೈನಿಂದ ಅಹಮದಾಬಾದ್​​ಗೆ ಸ್ಥಳಾಂತರಿಸಿದ್ದಕ್ಕಾಗಿ ಠಾಕ್ರೆ ಈ ಹಿಂದೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮೇ ತಿಂಗಳ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹಿಂದೂಸ್ತಾನ್ ಟೈಮ್ಸ್​ಗೆ ನೀಡಿದ ಸಂದರ್ಶನದಲ್ಲಿ, ಕೈಗಾರಿಕೆಗಳು ಮತ್ತು ಯೋಜನೆಗಳನ್ನು ಗುಜರಾತ್​ಗೆ ಸ್ಥಳಾಂತರಿಸಿದ್ದರಿಂದ ಮಹಾರಾಷ್ಟ್ರವು ಗಮನಾರ್ಹ ನಷ್ಟ ಎದುರಿಸಿದೆ ಎಂದು ಆದಿತ್ಯ ಉಲ್ಲೇಖಿಸಿದ್ದರು.

ಇಂಟರ್​​ನ್ಯಾಷನಲ್​ ಫೈನಾನ್ಸ್ ಸೆಂಟರ್, ವೇದಾಂತ ಫಾಕ್ಸ್​ಕಾನ್​, ಬೃಹತ್ ಡ್ರಗ್​ (ಔಷಧ) ಪಾರ್ಕ್ ಮತ್ತು ವೈದ್ಯಕೀಯ ಸಾಧನಗಳ ಪಾರ್ಕ್ ಸೇರಿಕೊಂಡಿವೆ. ಮುಂಬೈನಲ್ಲಿ ನಡೆಯಬೇಕಿದ್ದ ವಿಶ್ವಕಪ್ ಫೈನಲ್ ಪಂದ್ಯವನ್ನು ಅಹಮದಾಬಾದ್​ಗೆ ಸ್ಥಳಾಂತರಿಸಲಾಗಿದೆ ಎಂಬುದಾಗಿಯೂ ಅವರು ಗಮನ ಸೆಳೆದಿದ್ದರು.

Continue Reading

ದೇಶ

Defence Production: ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮನಿರ್ಭರ; ರಕ್ಷಣಾ ಉತ್ಪಾದನೆ ದಾಖಲೆಯ ಶೇ.16ರಷ್ಟು ಏರಿಕೆ

Defence Production: 2023-24ರಲ್ಲಿ ದೇಶದ ಸಾರ್ವಜನಿಕ ವಲಯದ ಸಂಸ್ಥೆಗಳು ಹಾಗೂ ಖಾಸಗಿ ಕಂಪನಿಗಳು ಸೇರಿ ಒಟ್ಟು 1.26 ಲಕ್ಷ ಕೋಟಿ ರೂ. ಮೌಲ್ಯದ ರಕ್ಷಣಾ ಉತ್ಪನ್ನಗಳನ್ನು ಉತ್ಪಾದಿಸಿರುವುದ ದಾಖಲೆಯಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕ್ಷೇತ್ರದ ಉತ್ಪಾದನೆಯ ಸಾಧನೆ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

VISTARANEWS.COM


on

Defence Production
Koo

ನವದೆಹಲಿ: ಮೇಕ್‌ ಇನ್‌ ಇಂಡಿಯಾ, ಆತ್ಮನಿರ್ಭರ ಭಾರತ ಅಭಿಯಾನ, ಯೋಜನೆಗಳ ಮೂಲಕ ಹೆಚ್ಚಿನ ಉತ್ತೇಜನ ನೀಡಿದ ಪರಿಣಾಮವಾಗಿ ಭಾರತದ ರಕ್ಷಣಾ ಉತ್ಪಾದನೆಯು (Defence Production) 2023-24ನೇ ಸಾಲಿನಲ್ಲಿ ದಾಖಲೆ ಬರೆದಿದೆ. 2023-24ನೇ ಸಾಲಿನಲ್ಲಿ ಭಾರತದ ರಕ್ಷಣಾ ಕ್ಷೇತ್ರದ ಉತ್ಪಾದನೆಯು ಶೇ.16.7ರಷ್ಟು ಜಾಸ್ತಿಯಾಗಿದ್ದು, ಇದು ದೇಶದ ಇತಿಹಾಸದಲ್ಲಿಯೇ ಗರಿಷ್ಠ ಬೆಳವಣಿಗೆಯಾಗಿದೆ ಎಂದು ರಕ್ಷಣಾ ಇಲಾಖೆ (Department Of Defence) ಪ್ರಕಟಣೆ ಹೊರಡಿಸಿದೆ. ಅದರಲ್ಲೂ, 2019-20ರ ಬಳಿಕ ಗಮನಾರ್ಹ ಶೇ.60ರಷ್ಟು ಏರಿಕೆಯಾಗಿರುವುದು ರಕ್ಷಣಾ ಕ್ಷೇತ್ರದ ಆತ್ಮನಿರ್ಭರತೆಗೆ (Atmanirbhar) ಹಿಡಿದ ಕನ್ನಡಿ ಎಂದೇ ಹೇಳಲಾಗುತ್ತಿದೆ.

ಡಿಫೆನ್ಸ್‌ ಪಬ್ಲಿಕ್‌ ಸೆಕ್ಟರ್‌ ಅಂಡರ್‌ಟೇಕಿಂಗ್ಸ್‌ (DPSU) ಮಾಹಿತಿ ಪ್ರಕಾರ, “2023-24ರಲ್ಲಿ ದೇಶದ ಸಾರ್ವಜನಿಕ ವಲಯದ ಸಂಸ್ಥೆಗಳು ಹಾಗೂ ಖಾಸಗಿ ಕಂಪನಿಗಳು ಸೇರಿ ಒಟ್ಟು 1.26 ಲಕ್ಷ ಕೋಟಿ ರೂ. ಮೌಲ್ಯದ ರಕ್ಷಣಾ ಉತ್ಪನ್ನಗಳನ್ನು ಉತ್ಪಾದಿಸಿವೆ. 2022-23ರ ಹಣಕಾಸು ವರ್ಷದಲ್ಲಿ ದೇಶೀಯವಾಗಿ 1.08 ಲಕ್ಷ ಕೋಟಿ ರೂ. ಮೌಲ್ಯದ ಉತ್ಪನ್ನಗಳನ್ನು ಉತ್ಪಾದಿಸಲಾಗಿತ್ತು. ಕಳೆದ ಆರ್ಥಿಕ ಸಾಲಿಗೆ ಹೋಲಿಸಿದರೆ ಇದು ಶೇ.16.7ರಷ್ಟು ಬೆಳವಣಿಗೆಯಾಗಿದೆ” ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ನರೇಂದ್ರ ಮೋದಿ ಸಂತಸ

ದೇಶದ ರಕ್ಷಣಾ ಉತ್ಪಾದನೆಯು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. “ಭಾರತವು ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಸಾಧಿಸುತ್ತಿದೆ. ರಕ್ಷಣಾ ಉತ್ಪಾದನೆಯಲ್ಲಿ ಭಾರತವು ಜಗತ್ತಿನಲ್ಲೇ ಮುಂಚೂಣಿಯಲ್ಲಿ ಇರಬೇಕು ಎಂಬ ಬದ್ಧತೆಯಿಂದ ಕೆಲಸ ಮಾಡುತ್ತಿದ್ದೇವೆ. ಈಗ ಉತ್ಪಾದನಾ ಕ್ಷೇತ್ರದ ಬೆಳವಣಿಗೆಯು ಸಂತಸ ತಂದಿದೆ. ಇದರ ಹಿಂದೆ ಶ್ರಮವಹಿಸಿದ ಎಲ್ಲರಿಗೂ ಅಭಿನಂದನೆಗಳು” ಎಂಬುದಾಗಿ ಅವರು ಪೋಸ್ಟ್‌ ಮಾಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಕೂಡ ರಕ್ಷಣಾ ಉತ್ಪಾದನೆ ಸಾಧನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “2023-24ನೇ ಸಾಲಿನಲ್ಲಿ ರಕ್ಷಣಾ ಕ್ಷೇತ್ರದ ಉತ್ಪಾದನೆ ಮೊತ್ತವು ದಾಖಲೆಯ 1.27 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಣಾ ಕ್ಷೇತ್ರದಲ್ಲೂ ಆತ್ಮನಿರ್ಭರತೆ ಸಾಧಿಸಲು ನೀಡಿದ ಉತ್ತೇಜನದ ಫಲವಾಗಿ ಭಾರತವು ಗಣನೀಯ ಸಾಧನೆ ಮಾಡಿದೆ” ಎಂಬುದಾಗಿ ರಾಜನಾಥ್‌ ಸಿಂಗ್‌ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Aero India 2023: ಭಾರತದ ರಕ್ಷಣಾ ರಫ್ತು 2024ರಲ್ಲಿ 500 ಕೋಟಿ ಡಾಲರ್‌ ಗುರಿ: ಹೂಡಿಕೆದಾರರಿಗೆ ಸುವರ್ಣಾವಕಾಶ ಎಂದ ಪ್ರಧಾನಿ ಮೋದಿ

Continue Reading
Advertisement
New Fashion Trend
ಫ್ಯಾಷನ್11 mins ago

New Fashion Trend: ಜೆನ್‌ ಜಿ ಹುಡುಗ-ಹುಡುಗಿಯರ ಬೆರಳನ್ನು ಆಕ್ರಮಿಸಿದ ಫಂಕಿ ಉಂಗುರಗಳು!

CM Siddaramaiah
ಕರ್ನಾಟಕ23 mins ago

CM Siddaramaiah: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಸಿಎಂ ಸಿದ್ದರಾಮಯ್ಯ

karnataka Weather Forecast
ಮಳೆ1 hour ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

district administration has made an innovative attempt for the first time in the state for the marriage of farmer youth and disabled people
ಕರ್ನಾಟಕ1 hour ago

Uttara Kannada News: ರೈತ ಯುವಕರು, ವಿಕಲಚೇತನರ ವಿವಾಹಕ್ಕೆ ಉ.ಕ ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ!

Bajaj Freedom 125
ಪ್ರಮುಖ ಸುದ್ದಿ1 hour ago

Bajaj Freedom 125 CNG : ಬಜಾಜ್​ ಕಂಪನಿಯ ಸಿಎನ್​ಜಿ ಬೈಕ್​ ಬಿಡುಗಡೆ; ಕೆ.ಜಿಗೆ 102 ಕಿಲೋ ಮೀಟರ್​​ ಮೈಲೇಜ್​

Keir Starmer
ಪ್ರಮುಖ ಸುದ್ದಿ1 hour ago

Keir Starmer: ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ನೇಮಕ; ಅಭಿನಂದನೆ ಸಲ್ಲಿಸಿದ ಮೋದಿ

Bikini Dress
Latest1 hour ago

Bikini Day: ಬಿಕಿನಿ ತೊಟ್ಟು ಪಡ್ಡೆ ಹುಡುಗರ ನಿದ್ದೆ ಉಡಾಯಿಸಿದ ಸುಂದರಿಯರಿವರು!

Narendra Modi
ಪ್ರಮುಖ ಸುದ್ದಿ1 hour ago

Narendra Modi : ಚಾಂಪಿಯನ್ನರ ಜತೆ ಸ್ಮರಣೀಯ ಸಂಭಾಷಣೆ; ಭಾರತ ಕ್ರಿಕೆಟ್ ತಂಡದ ಜತೆಗಿನ ಮಾತುಕತೆಯ ವಿಡಿಯೊ ಬಿಡುಗಡೆ ಮಾಡಿದ ಮೋದಿ

Monsoon Fashion
ಫ್ಯಾಷನ್1 hour ago

Monsoon Fashion: ಮಾನ್ಸೂನ್‌ಗೆ ರೀ ಎಂಟ್ರಿ ನೀಡಿದ ಪ್ರಿಂಟೆಡ್‌ ಕಲರ್‌ ನೆಕ್‌ ಕುರ್ತಾ ಫ್ಯಾಷನ್‌

BJP Karnataka
ಕರ್ನಾಟಕ2 hours ago

BJP Karnataka: ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 hour ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ3 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ4 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ5 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ7 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು8 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು8 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ13 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌