Sheikh Abdul Rashid: ಸೆರೆಮನೆಯಿಂದ ನೇರ ಸಂಸತ್‌ಗೆ! ಜೈಲಿನಿಂದಲೇ ಸ್ಪರ್ಧಿಸಿ ಗೆದ್ದ ʼಉಗ್ರರ ಬೆಂಬಲಿಗʼನ ಪ್ರಮಾಣವಚನಕ್ಕೆ NIA ಅಸ್ತು - Vistara News

ದೇಶ

Sheikh Abdul Rashid: ಸೆರೆಮನೆಯಿಂದ ನೇರ ಸಂಸತ್‌ಗೆ! ಜೈಲಿನಿಂದಲೇ ಸ್ಪರ್ಧಿಸಿ ಗೆದ್ದ ʼಉಗ್ರರ ಬೆಂಬಲಿಗʼನ ಪ್ರಮಾಣವಚನಕ್ಕೆ NIA ಅಸ್ತು

Sheikh Abdul Rashid: ಜೈಲಿನಲ್ಲಿರುವ ಕಾರಣ ಜೂ.24ರಂದು ನಡೆದ ಪ್ರಮಾಣವಚನ ಸ್ವೀಕಾರ ಸಭಾರಂಭದಲ್ಲಿ ರಶೀದ್‌ಗೆ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಪ್ರಮಾಣವಚನಕ್ಕೆ ಅವಕಾಶ ಕಲ್ಪಿಸುವಂತೆ ಆತ ಕೋರ್ಟ್‌ ಮೊರೆ ಹೋಗಿದ್ದು, ಇದಕ್ಕೆ ಪ್ರತಿಕ್ರಿಯಿಸುವಂತೆ ಕೋರ್ಟ್‌ ಹೇಳಿತ್ತು. 2017 ರ ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಬಂಧಿತರಾಗಿರುವ ಬಾರಾಮುಲ್ಲಾ ಸಂಸದ ರಶೀದ್ ಅವರು ಪ್ರಮಾಣ ವಚನ ಸ್ವೀಕರಿಸಲು ಮತ್ತು ಸಂಸತ್ತಿನ ಕಾರ್ಯಗಳನ್ನು ನಿರ್ವಹಿಸಲು ಮಧ್ಯಂತರ ಜಾಮೀನು ಅಥವಾ ಪರ್ಯಾಯವಾಗಿ ಕಸ್ಟಡಿ ಪೆರೋಲ್ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ.

VISTARANEWS.COM


on

Sheikh Abdul Rashid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಜೈಲಿನಿಂದಲೇ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕಾಶ್ಮೀರಿ ನಾಯಕ ಶೇಖ್ ಅಬ್ದುಲ್ ರಶೀದ್ (Sheikh Abdul Rashid) ಸಂಸದನಾಗಿ ಪ್ರಮಾಣವಚನ ಸ್ವೀಕರಿಸಲು ಎನ್‌ಐಎ ಅನುಮತಿ ನೀಡಿದೆ. ಭಯೋತ್ಪಾದಕರಿಗೆ ಹಣಕಾಸಿನ ನೆರವು ಒದಗಿಸಿದ ಆರೋಪ ಎದುರಿಸುತ್ತಿರುವ ಎಂಜಿನಿಯರ್ ರಶೀದ್ ಎಂದೇ ಜನಪ್ರಿಯವಾಗಿರುವ ಶೇಖ್ ಅಬ್ದುಲ್ ರಶೀದ್ ಜು. 25ರಂದು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಬಗ್ಗೆ ದಿಲ್ಲಿ ಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶ ಚಂದರ್‌ ಜಿತ್‌ ಸಿಂಗ್‌(Chander Jit Singh) ಆದೇಶ ಹೊರಡಿಸಲಿದ್ದಾರೆ.

ಜೈಲಿನಲ್ಲಿರುವ ಕಾರಣ ಜೂ.24ರಂದು ನಡೆದ ಪ್ರಮಾಣವಚನ ಸ್ವೀಕಾರ ಸಭಾರಂಭದಲ್ಲಿ ರಶೀದ್‌ಗೆ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಪ್ರಮಾಣವಚನಕ್ಕೆ ಅವಕಾಶ ಕಲ್ಪಿಸುವಂತೆ ಆತ ಕೋರ್ಟ್‌ ಮೊರೆ ಹೋಗಿದ್ದು, ಇದಕ್ಕೆ ಪ್ರತಿಕ್ರಿಯಿಸುವಂತೆ ಕೋರ್ಟ್‌ ಹೇಳಿತ್ತು. 2017 ರ ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಬಂಧಿತರಾಗಿರುವ ಬಾರಾಮುಲ್ಲಾ ಸಂಸದ ರಶೀದ್ ಅವರು ಪ್ರಮಾಣ ವಚನ ಸ್ವೀಕರಿಸಲು ಮತ್ತು ಸಂಸತ್ತಿನ ಕಾರ್ಯಗಳನ್ನು ನಿರ್ವಹಿಸಲು ಮಧ್ಯಂತರ ಜಾಮೀನು ಅಥವಾ ಪರ್ಯಾಯವಾಗಿ ಕಸ್ಟಡಿ ಪೆರೋಲ್ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ.

ಇದೀಗ ಎನ್‌ಐಎ ಅನುಮತಿ ನೀಡಿದ್ದು, ಸೋಮವಾರ, ಎನ್‌ಐಎ ಪರ ವಕೀಲರು ರಶೀದ್ ಪ್ರಮಾಣ ವಚನ ಸ್ವೀಕಾರವು ಮಾಧ್ಯಮಗಳೊಂದಿಗೆ ಮಾತನಾಡದಂತಹ ಕೆಲವು ಷರತ್ತುಗಳಿಗೆ ಒಳಪಟ್ಟಿರುತ್ತದೆ ಎಂದು ಹೇಳಿದರು. ಒಂದು ದಿನದೊಳಗೆ ರಶೀದ್ ಎಲ್ಲವನ್ನೂ ಪೂರ್ಣಗೊಳಿಸಬೇಕು ಎಂದು ಅವರು ತಿಳಿಸಿದ್ದಾರೆ.

ಯಾರು ಈ ಶೇಖ್ ಅಬ್ದುಲ್ ರಶೀದ್?

ಇಂಜಿನಿಯರ್ ರಶೀದ್ ಪ್ರಸ್ತುತ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾನೆ. ಅವಾಮಿ ಇತ್ತೆಹಾದ್ ಪಕ್ಷದ ಮುಖ್ಯಸ್ಥ, ಎರಡು ಬಾರಿ ಶಾಸಕನಾಗಿದ್ದ ರಶೀದ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) 2019 ರಲ್ಲಿ ಭಯೋತ್ಪಾದನೆ-ಧನಸಹಾಯ ಚಟುವಟಿಕೆಗಳ ಆರೋಪದ ಮೇಲೆ ಬಂಧಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಆತ ನ್ಯಾಷನಲ್‌ ಕಾನ್ಫರೆನ್ಸ್‌ನ ಓಮರ್‌ ಅಬ್ದುಲ್ಲಾ ವಿರುದ್ಧ ಸ್ಪರ್ಧಿಸಿ 4,7,2481 ಮತಗಳನ್ನು ಗಳಿಸಿದ್ದಾನೆ. ಒಮ್ಮೆಯೂ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡದ ರಶೀದ್ 2,04,142 ಮತಗಳ ಭಾರೀ ಅಂತರದಿಂದ ಗೆದ್ದಿದ್ದಾನೆ.

ಅಮೃತ್‌ ಸಿಂಗ್‌ ಪ್ರಮಾಣವಚನ ಸ್ವೀಕರಿಸಿಲ್ಲ

ಇನ್ನು ಜೈಲಿನಿಂದಲೇ ಸ್ಪರ್ಧಿಸಿ ಅಭೂತಪೂರ್ವ ಗೆಲುವು ಸಾಧಿಸಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್‌ ಸಿಂಗ್‌ ಕೂಡ ಪ್ರಮಾಣವಚನ ಸ್ವೀಕರಿಸಿಲ್ಲ. ಅಮೃತಸರದ ಜಲ್ಲುಪುರ್‌ ಖೇರಾ ಎಂಬ ಗ್ರಾಮದಲ್ಲಿ 1993ರಲ್ಲಿ ಜನಿಸಿದ ಅಮೃತ್‌ಪಾಲ್‌, 12ನೇ ತರಗತಿವರೆಗೆ ಓದಿದ್ದಾನೆ. 2012ರಲ್ಲಿ ಭಾರತ ತೊರೆದು, ದುಬೈಯಲ್ಲಿ ತನ್ನ ಚಿಕ್ಕಪ್ಪನ ಟ್ರಾನ್ಸ್‌ಪೋರ್ಟ್‌ ಕಂಪನಿಯಲ್ಲಿ ದುಡಿದ. ಈತ ಪಂಜಾಬ್‌ನ ಪೊಲೀಸರ ಹಾಗೂ ರಾಜಕಾರಣಿಗಳ ಗಮನಕ್ಕೆ ಬಂದುದೇ ಕೆಲವು ದಿನಗಳ ಹಿಂದೆ- ʼವಾರಿಸ್‌ ಪಂಜಾಬ್‌ ದೇʼ ಸಂಘಟನೆಯ ಮುಖ್ಯಸ್ಥನಾಗಿ ನಿಯುಕ್ತನಾದ ಸಂದರ್ಭದಲ್ಲಿ. ಈ ಸಂಘಟನೆಯನ್ನು ಸ್ಥಾಪಿಸಿದವನು ನಟ, ಚಳವಳಿಗಾರ ದೀಪ್‌ ಸಿಧು. ಇವನು 2022ರ ಫೆಬ್ರವರಿಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ಇವನನ್ನು ಸರ್ಕಾರ ಸಾಯಿಸಿದೆ ಎಂದು ಅಮೃತ್‌ಪಾಲ್‌ ಮತ್ತು ಬೆಂಬಲಿಗರು ಆರೋಪಿಸುತ್ತ ಬಂದಿದ್ದಾರೆ. ಅಮೃತ್‌ಪಾಲ್‌ ಯಾವತ್ತೂ ಸಿಧುವನ್ನು ಭೇಟಿ ಮಾಡಿದವನೇ ಅಲ್ಲ. ಆದರೆ ಆನ್‌ಲೈನ್‌ನಲ್ಲಿ ತನ್ನನ್ನು ಅತ್ಯಂತ ಪ್ರಭಾವಿಸಿದ್ದ ಎಂದು ಹೇಳಿಕೊಳ್ಳುತ್ತಾನೆ. ಸಿಧುವಿನ ಸಾವಿನ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಸಿಧುವಿನ ಸಲಹೆಯಂತೆ ತಾನು ಗಡ್ಡ ಟ್ರಿಮ್‌ ಮಾಡಿಕೊಳ್ಳುವುದು ಬಿಟ್ಟಿರುವುದಾಗಿ ಹೇಳಿದ್ದ.

ಹಲವು ಸಮಯದಿಂದ ಆತ ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಖಲಿಸ್ತಾನ್ ಪರ ಪೋಸ್ಟ್‌ಗಳನ್ನು ಹಾಕುತ್ತಿದ್ದ. 2021ರಲ್ಲಿ ಕೆಂಪು ಕೋಟೆಯ ಮೇಲೆ ನಡೆದ ಗುಂಪು ದಾಳಿಯ ವೇಳೆ ಅದರ ನೇತೃತ್ವ ವಹಿಸಿದ್ದ ದೀಪ್‌ ಸಿಧುವಿನ ಕೃತ್ಯವನ್ನು ಈತ ಸಮರ್ಥಿಸಿಕೊಂಡಿದ್ದ. 2022ರಲ್ಲಿ ಪಂಜಾಬ್‌ನಲ್ಲಿ ಅಮೃತ್‌ಪಾಲ್‌ನನ್ನು ಅರೆಸ್ಟ್‌ ಮಾಡಲಾಗಿತ್ತು.

ಇದನ್ನೂ ಓದಿ: Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

ಸಣ್ಣ ಮಕ್ಕಳು ಮಾತ್ರವಲ್ಲ ದೊಡ್ಡವರ ಫೋಟೋಗಳು ಆಧಾರ್ ಕಾರ್ಡ್‌, ರೇಷನ್ ಕಾರ್ಡ್, ಮತದಾರರ ಗುರುತು ಪತ್ರದಲ್ಲಿ ಅಸಮಾಧಾನಗೊಂಡಿರುವಂತೆ ತೋರಿಸುತ್ತದೆ. ಆದರೆ ಈ ಪುಟ್ಟ ಹುಡುಗಿ ಮಾತ್ರ ಯಾವುದೇ ತಪ್ಪು ಆಗದಂತೆ ನೋಡಿಕೊಂಡಳು. ಗುರುತಿನ ಚೀಟಿಗಾಗಿ ಉತ್ತಮ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಸಾಕಷ್ಟು ಮಂದಿಯ ಮೆಚ್ಚುಗೆ ಕೂಡ ಗಳಿಸಿದೆ.

VISTARANEWS.COM


on

By

Viral Video
Koo

ಆಧಾರ್ ಕಾರ್ಡ್ ನಂತಹ (Aadhar card) ಕೆಲವೊಂದು ದಾಖಲೆಗಳಿಗೆ ಮಕ್ಕಳ (child) ಫೋಟೋ (photo) ಕಡ್ಡಾಯವಾಗಿರುತ್ತದೆ. ಆದರೆ ಪುಟ್ಟ ಮಕ್ಕಳ ಫೋಟೋ ತೆಗೆಸುವ ವೇಳೆಗೆ ತಂದೆ, ತಾಯಿ ಮಾತ್ರವಲ್ಲ ಫೋಟೋಗ್ರಾಫರ್ ಕೂಡ ಸುಸ್ತಾಗಿ ಬಿಡುತ್ತಾರೆ. ಆದರೆ ಇಲ್ಲೊಂದು ಮಗು ಮಾತ್ರ ಫೋಟೋ ಎಂದಾಕ್ಷಣ ತನ್ನ ಮುದ್ದಾದ ಭಂಗಿಯನ್ನು ತೋರಿಸಿ ಎಲ್ಲರ ಮನ ಗೆದ್ದಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಸಾಕಷ್ಟು ಮಂದಿಯ ಮೆಚ್ಚುಗೆ ಕೂಡ ಗಳಿಸಿದೆ.

ಸಣ್ಣ ಮಕ್ಕಳು ಮಾತ್ರವಲ್ಲ ದೊಡ್ಡವರ ಫೋಟೋಗಳು ಆಧಾರ್ ಕಾರ್ಡ್‌, ರೇಷನ್ ಕಾರ್ಡ್, ಮತದಾರರ ಗುರುತು ಪತ್ರದಲ್ಲಿ ಅಸಮಾಧಾನಗೊಂಡಿರುವಂತೆ ತೋರಿಸುತ್ತದೆ. ಆದರೆ ಈ ಪುಟ್ಟ ಹುಡುಗಿ ಮಾತ್ರ ಯಾವುದೇ ತಪ್ಪು ಆಗದಂತೆ ನೋಡಿಕೊಂಡಳು. ಗುರುತಿನ ಚೀಟಿಗಾಗಿ ಉತ್ತಮ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು.
ಅವಳು ಕೆಮರಾದ ಮುಂದೆ ಮುಗುಳ್ನಕ್ಕಿರುವುದು ಮಾತ್ರವಲ್ಲ ತನ್ನ ವಿಭಿನ್ನ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು.

ತಾನು ಯಾವುದಕ್ಕಾಗಿ ಫೋಟೋ ತೆಗೆಸಿಕೊಳ್ಳುತ್ತಿದ್ದೇನೆ ಎಂಬ ಅರಿವಿಲ್ಲದ ಈ ಮಗು ಆಧಾರ್ ಕಾರ್ಡ್ ಫೋಟೋಗಾಗಿ ಬಗೆ ಬಗೆಯ ಪೋಸ್ ನೀಡಿದ್ದಾಳೆ. 20ಕ್ಕೂ ಹೆಚ್ಚು ಪೋಸ್ ನೀಡಿರುವ ಆಕೆಯ ಯಾವ ಫೋಟೋವನ್ನು ಕಾರ್ಡ್ ನಲ್ಲಿ ಅಚ್ಚು ಹಾಕುವ ಗೊಂದಲ ಈಗ ಆಧಾರ್ ಕಾರ್ಡ್ ಮಾಡುವ ಸಿಬ್ಬಂದಿಯದ್ದಾಗಿದೆ.


ಗುರುತು ಚೀಟಿಗಳಿಗಾಗಿ ಸಾಮಾನ್ಯವಾಗಿ ವಯಸ್ಕರ ಫೋಟೋ ತೆಗೆಯುವುದು ಸುಲಭ. ಆದರೆ ಮಕ್ಕಳ ಫೋಟೋ ತೆಗೆಯುವುದು ಅಷ್ಟು ಸುಲಭವಲ್ಲ. ಅವುಗಳ ಗಮನ ಎಲ್ಲೋ ಇರುತ್ತದೆ. ಇನ್ನು ಕೆಲವು ಮಕ್ಕಳು ಅಪರಿಚಿತರನ್ನು ನೋಡಿ ಅಳಲು ಪ್ರಾರಂಭಿಸುತ್ತದೆ. ಮತ್ತೆ ಕೆಲವರು ನಿಂತಲ್ಲಿ ನಿಲ್ಲಲ್ಲ. ಅತ್ತಿತ್ತ ಓಡಿ ಹೋಗುವುದು ಮಾಡುತ್ತಾರೆ. ಇದಲ್ಲ ಮುಗಿದು ಒಂದು ಒಳ್ಳೆಯ ಫೋಟೋ ಸಿಕ್ಕರೆ ಮಾತ್ರ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಲು ಸಾಧ್ಯ. ಇಲ್ಲವಾದರೆ ಮತ್ತದೇ ಮಕ್ಕಳ ತಕರಾರು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

ಆದರೆ ಈ ಮಗುವನ್ನು ಪೋಷಕರು ಆಧಾರ್ ಕಾರ್ಡ್ ಸೆಂಟರ್‌ಗೆ ಕರೆದುಕೊಂಡು ಬಂದು ಕುರ್ಚಿಯ ಮೇಲೆ ನಿಲ್ಲಿಸಿ ಕೆಮರಾಗೆ ಪೋಸ್ ನೀಡಲು ಹೇಳಿದ್ದಾರೆ. ಫೋಟೋ ತೆಗೆಯುತ್ತಾರೆ. ಕೆಮರಾ ನೋಡು ಎಂದಿದ್ದಾರೆ. ತಕ್ಷಣ ಮಗು ಒಂದರ ಮೇಲೊಂದರಂತೆ ಪೋಸ್ ನೀಡುತ್ತಾ ಹೋಗಿದ್ದಾಳೆ. ಪುಟಾಣಿ ಮಗುವಿನ ಈ ಪೋಸ್ ಅಲ್ಲಿರುವ ಸಿಬ್ಬಂದಿಗೆ ಮಾತ್ರವಲ್ಲ ಅಲ್ಲಿದ್ದವರೆಲ್ಲರ ಗಮನ ಸೆಳೆದಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಫೋಟೋ ನೋಡಿ ಮೆಚ್ಚುಗೆ ವ್ಯಕ್ತಪಡಿಸಿ ಸಾಕಷ್ಟು ಮಂದಿ ಕಾಮೆಂಟ್ ಕೂಡ ಮಾಡಿದ್ದಾರೆ.

Continue Reading

ದೇಶ

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

ಕೇರಳದಲ್ಲಿ ಸರ್ಕಾರಿ (Kerala Govt) ಉದ್ಯೋಗ ಪಡೆಯುವಲ್ಲಿ ಹೆಚ್ಚಿನ ಮುಸ್ಲಿಂ ಮತ್ತು ಕ್ರಿಶ್ಚಿಯನರು ಮೇಲುಗೈ ಸಾಧಿಸಿದ್ದಾರೆ. ಒಟ್ಟು ಸರ್ಕಾರಿ ಉದ್ಯೋಗಿಗಳಲ್ಲಿ ಕೇವಲ 26 ಯಾದವರು, 28 ಕ್ಷತ್ರಿಯರು, 27 ಜೈನರು ಮಾತ್ರ ಕೆಲಸ ಮಾಡುತ್ತಿರುವ ಸಂಗತಿ ಅಂಕಿಅಂಶಗಳಿಂದ ಬಹಿರಂಗವಾಗಿದೆ. ರಾಜ್ಯದಲ್ಲಿ 1,73,268 ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ರಾಜ್ಯ ಸರ್ಕಾರದ ಕರ್ತವ್ಯದ ಭಾಗವಾಗಿದ್ದಾರೆ. ಒಟ್ಟು ಉದ್ಯೋಗಿಗಳಲ್ಲಿ ಈ ಎರಡೂ ಸಮುದಾಯದವರು ಶೇ. 31.5ರಷ್ಟು ಪ್ರಮಾಣದಷ್ಟಿದ್ದಾರೆ.

VISTARANEWS.COM


on

By

Kerala govt
Koo

ಕೇರಳ ಸರ್ಕಾರದ (Kerala Govt) ಪ್ರತಿ ಮೂರು ಸರ್ಕಾರಿ ಉದ್ಯೋಗಿಗಳಲ್ಲಿ ಒಬ್ಬ (government employee) ಮುಸ್ಲಿಂ (Muslim) ಅಥವಾ ಕ್ರಿಶ್ಚಿಯನ್ (Christian) ಆಗಿದ್ದಾರೆ. ಈ ರಾಜ್ಯದಲ್ಲಿ ಕೇವಲ 26 ಯಾದವರು, 28 ಕ್ಷತ್ರಿಯರು, 27 ಜೈನರು ಸರ್ಕಾರಿ ಉದ್ಯೋಗದಲ್ಲಿದ್ದಾರೆ ಎಂಬುದನ್ನು ಒಪಿಂಡಿಯಾ ಡೇಟಾ ಬಹಿರಂಗಪಡಿಸಿದೆ.

ಕೇರಳ ವಿಧಾನಸಭೆಯಲ್ಲಿ (kerala vidhansabha) ಮಂಡಿಸಲಾದ ಈ ಅಂಕಿ ಅಂಶವು ರಾಜ್ಯದಲ್ಲಿ ಪ್ರಸ್ತುತ 5,45,423 ನೌಕರರು ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ 73,774 ಮುಸ್ಲಿಮರಾಗಿದ್ದಾರೆ. ಇದು ರಾಜ್ಯದ ಎಲ್ಲ ಸರ್ಕಾರಿ ನೌಕರರಲ್ಲಿ ಶೇ. 13.5ರಷ್ಟಿದೆ ಎಂದು ಡೇಟಾ ಬಹಿರಂಗಪಡಿಸಿದೆ.

ರಾಜ್ಯ ಸರ್ಕಾರದಲ್ಲಿ ಮುಸ್ಲಿಮರಿಗಿಂತ ಹೆಚ್ಚು ಕ್ರಿಶ್ಚಿಯನ್‌ ನೌಕರರಿದ್ದಾರೆ. ಲ್ಯಾಟಿನ್ ಚರ್ಚ್‌ನ ಸದಸ್ಯರಾಗಿರುವ 22,452 ಕಾರ್ಮಿಕರು ಕೇರಳ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದಾರೆ. 2,399 ಉದ್ಯೋಗಿಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. 929 ಕಾರ್ಮಿಕರನ್ನು ನಾಡಾರ್ ಕ್ರಿಶ್ಚಿಯನ್ ಎಂದು ಗುರುತಿಸಲಾಗಿದೆ. ಕೇರಳದಲ್ಲಿ ಸರ್ಕಾರಿ ಉದ್ಯೋಗದಲ್ಲಿರುವ ಎಲ್ಲಾ ಕ್ರಿಶ್ಚಿಯನ್ ಸಮುದಾಯಗಳ ಸಂಖ್ಯೆ 99,494. ಅವರ ಶೇಕಡಾವಾರು ಪ್ರಮಾಣವು ಶೇ. 18.25 ರಷ್ಟಾಗಿದೆ. ಅಂದರೆ ಈ ಸಂಖ್ಯೆ ಮುಸ್ಲಿಮರಿಗಿಂತ ಹೆಚ್ಚು.


ರಾಜ್ಯದಲ್ಲಿ 1,73,268 ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ರಾಜ್ಯ ಸರ್ಕಾರದ ಕರ್ತವ್ಯದ ಭಾಗವಾಗಿದ್ದಾರೆ. ಒಟ್ಟು ಉದ್ಯೋಗಿಗಳಲ್ಲಿ ಈ ಎರಡೂ ಸಮುದಾಯದವರು ಶೇ. 31.5ರಷ್ಟು ಪ್ರಮಾಣದಷ್ಟಿದ್ದಾರೆ. ಗಮನಾರ್ಹ ಸಂಗತಿ ಎಂದರೆ ಸುಮಾರು ಮೂರನೇ ಒಂದು ಭಾಗದಷ್ಟು ರಾಜ್ಯ ಕಾರ್ಮಿಕರನ್ನು ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಎಂದು ವರ್ಗೀಕರಿಸಲಾಗಿದೆ.

ಇದನ್ನೂ ಓದಿ: 2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

Continue Reading

ದೇಶ

Bridge Collapse: 17 ದಿನದಲ್ಲಿ 10 ಸೇತುವೆ ಕುಸಿತ; ಬಿಹಾರದಲ್ಲಿ 15 ಎಂಜಿನಿಯರ್‌ಗಳ ಅಮಾನತು!

Bridge Collapse: ಸೇತುವೆಗಳು ಧರೆಗುರುಳುವ ಪ್ರಕರಣಗಳು ಜಾಸ್ತಿಯಾಗಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಜನ ಬಿಹಾರ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ, ಬಿಹಾರ ಸರ್ಕಾರವ 15 ಎಂಜಿನಿಯರ್‌ಗಳನ್ನು ಅಮಾನತು ಮಾಡಿದೆ.

VISTARANEWS.COM


on

Bridge Collapse
Koo

ಪಟನಾ: ಬಿಹಾರದಲ್ಲಿ ಕಳೆದ 17 ದಿನಗಳಲ್ಲಿ 10 ಸೇತುವೆಗಳು ಕುಸಿದಿರುವುದು (Bridge Collapse) ದೇಶಾದ್ಯಂತ ಸುದ್ದಿಯಾಗಿದೆ. ಸಣ್ಣ ಮಳೆಯಾದರೂ ಸೇತುವೆಗಳು ಕುಸಿಯುವುದು, ನಿರ್ಮಾಣ ಹಂತದಲ್ಲಿರುವಾಗಲೇ ಸೇತುವೆಗಳು ಧರೆಗುರುಳುವ ಪ್ರಕರಣಗಳು ಜಾಸ್ತಿಯಾಗಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಜನ ಬಿಹಾರ ಸರ್ಕಾರದ (Bihar Government) ವಿರುದ್ಧ ಮುಗಿಬಿದ್ದಿದ್ದಾರೆ. ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ, ಬಿಹಾರ ಸರ್ಕಾರವ 15 ಎಂಜಿನಿಯರ್‌ಗಳನ್ನು ಅಮಾನತು ಮಾಡಿದೆ.

ಬಿಹಾರದಲ್ಲಿ ಸೇತುವೆಗಳ ನಿರ್ಮಾಣದ ವೇಳೆ ಕರ್ತವ್ಯ ಲೋಪ ಎಸಗಿದ ಕಾರಣ ಸೇತುವೆಗಳು ಕುಸಿದಿವೆ. ಇದೇ ಕಾರಣಕ್ಕಾಗಿ ರಾಜ್ಯ ಸರ್ಕಾರವು 15 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ. ಜಲ ಸಂಪನ್ಮೂಲ ಇಲಾಖೆಯ 11 ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯ ನಾಲ್ವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ. ಇನ್ನು, ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಎಂಜಿನಿಯರ್‌ಗಳಿಂದ ವಿವರಣೆ ಕೇಳಲಾಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆ ತನಿಖೆಗೆ ಆದೇಶಿಸಲಾಗಿದ್ದು, ಇನ್ನಷ್ಟು ಅಧಿಕಾರಿಗಳನ್ನು ಮನೆಗೆ ಕಳುಹಿಸಲಾಗುತ್ತದೆ ಎಂದು ತಿಳಿದುಬಂದಿದೆ.

Bridge Collapse

ಬಿಹಾರದಲ್ಲಿ ಕಳೆದ ಕೆಲ ದಿನಗಳಿಂದ ಸೇತುವೆ ಕುಸಿತದ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಜುಲೈ 3ರಂದು ಸಿವಾನ್‌ ಜಿಲ್ಲೆಯಲ್ಲಿ 2 ಸೇತುವೆ ಬಿದ್ದಿದ್ದವು. ಇನ್ನು, ಜುಲೈ 4ರಂದು ಸರಣ್‌ ಜಿಲ್ಲೆಯಲ್ಲಿ ಒಂದು ಸೇತುವೆ ಕುಸಿದಿತ್ತು. ಜೂನ್‌ 28ರಂದು ಮಧುಬನಿ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದಿತ್ತು. ಇದಕ್ಕೂ ಒಂದು ದಿನ ಮೊದಲೇ ಅಂದರೆ ಜೂನ್‌ 27ರಂದು ಕಿಶನ್‌ಗಂಜ್‌ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದಿತ್ತು. ಜೂನ್‌ 23ರಂದು ಪೂರ್ವ ಚಂಪಾರಣ್‌ ಜಿಲ್ಲೆಯಲ್ಲಿ ಸಣ್ಣ ಸೇತುವೆ ಕುಸಿದು ಅಧಿಕಾರಿಗಳು ಜನರ ಆಕ್ರೋಶಕ್ಕೆ ಗುರಿಯಾಗಿದ್ದರು. ಜೂನ್‌ 22ರಂದು ಕೂಡ ಸಿವಾನ್‌ ಜಿಲ್ಲೆಯಲ್ಲಿ ಸೇತುವೆ ಕುಸಿದಿತ್ತು. ಜೂನ್‌ 19ರಂದೂ ಅರಾತಿಯಾ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಧರೆಗುರುಳಿತ್ತು.  

ಬಿಹಾರ ರಾಜ್ಯದಲ್ಲಿ ಒಂದರ ಹಿಂದೆ ಒಂದರಂತೆ ಸೇತುವೆಗಳು ಕುಸಿಯುತ್ತಿರುವುದಕ್ಕೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬಿಹಾರದಲ್ಲಿ ಸೇತುವೆ ಕುಸಿತದ ಪ್ರಕರಣಗಳು ಸುದ್ದಿಯಾಗುತ್ತಲೇ ಇವೆ. ಕಳೆದ 9 ದಿನಗಳಲ್ಲಿಯೇ ಇಂತಹ 5 ಪ್ರಕರಣಗಳು ಬೆಳಕಿಗೆ ಬಂದಿವೆ. ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರವು ಸೇತುವೆ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಹಾಗೂ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಜನರ ದುಡ್ಡು ಹೀಗೆ ನೀರು ಪಾಲಾಗುತ್ತಿದ್ದರೂ ಮುಖ್ಯಮಂತ್ರಿಯು ಗಾಢ ನಿದ್ದೆಯಲ್ಲಿದ್ದಾರೆ” ಎಂಬುದಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: Bridge Collapse: ಬಿಹಾರದಲ್ಲಿ ಮತ್ತೆರಡು ಸೇತುವೆ ಕುಸಿತ; 15 ದಿನಗಳಲ್ಲಿ ಇದು 7ನೇ ಪ್ರಕರಣ!

Continue Reading

ದೇಶ

Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

Stampede Tips and Tricks: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಇತ್ತೀಚೆಗೆ ನಡೆದ ಬಾಬಾ ಭೋಲೆ ಅವರ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 121 ಮಂದಿ ಸಾವನ್ನಪ್ಪಿದ್ದು, 31 ಮಂದಿ ಗಾಯಗೊಂಡಿದ್ದರು. ಇಂಥ ಕಾಲ್ತುಳಿತ ಉಂಟಾದಾಗ ನಮ್ಮನ್ನು ನಾನು ರಕ್ಷಿಸಿಕೊಳ್ಳುವುದು ಹೇಗೆ? ಪ್ರಾಣಾಪಾಯದಿಂದ ಪಾರಾಗುವುದು ಹೇಗೆ? ಇಲ್ಲಿದೆ ವಿಡಿಯೊ ಸಹಿತ ವಿವರಣೆ.

VISTARANEWS.COM


on

By

Stampede Tips and Tricks
Koo

ಹತ್ರಾಸ್‌ನಲ್ಲಿ (Hathras) ಇತ್ತೀಚೆಗೆ (Stampede Tips and Tricks) ಬಾಬಾ ಭೋಲೆ (Baba Bhole) ಅವರ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 121 ಮಂದಿ ಸಾವನ್ನಪ್ಪಿದ್ದು, 31 ಮಂದಿ ಗಾಯಗೊಂಡಿದ್ದರು. ಇಂತಹ ಕಾಲ್ತುಳಿತ ಸಂದರ್ಭಗಳಲ್ಲಿ ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬಹುದು ಎನ್ನುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ (Viral Video) ಶೇರ್‌ ಆಗುತ್ತಿದೆ.

ಉತ್ತರ ಪ್ರದೇಶದ ಹತ್ರಾಸ್ ಸತ್ಸಂಗದ (satsang) ಮುಖ್ಯ ಭಾಷಣಕಾರರಾಗಿ ಭೋಲೆ ಬಾಬಾ ಆಗಮಿಸಿದ್ದರು. ಭೋಲೆ ಬಾಬಾ ಅವರು ಅವರು ಅಲ್ಲಿಗೆ ಆಗಮಿಸಿದಾಗ ಭಕ್ತರು ಆ ಪ್ರದೇಶದ ಮಣ್ಣನ್ನು ಸಂಗ್ರಹಿಸಲು ಪ್ರಾರಂಭಿಸಲು ತೊಡಗಿದಾಗ ಕಾಲ್ತುಳಿತ ಉಂಟಾಗಿತ್ತು.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಜನರು ಕಾಲ್ತುಳಿತದಿಂದ ಹೇಗೆ ಬದುಕಬಹುದು ಎಂಬುದನ್ನು ವಿವರಿಸಲು ತಜ್ಞರು ಸ್ವಯಂಸೇವಕರ ಗುಂಪಿನ ಸಹಾಯವನ್ನು ಬಳಸಿದ್ದಾರೆ.
ಜನರು ಕಾಲ್ತುಳಿತದಲ್ಲಿ ಹೇಗೆ ಸಿಲುಕಿಕೊಂಡರು ಎಂಬುದನ್ನು ಪ್ರದರ್ಶಿಸುವ ದೃಶ್ಯವೂ ಇದರಲ್ಲಿದೆ. ಇದಲ್ಲದೆ ಇಂತಹ ಸಂದರ್ಭಗಳು ಜನಸಮೂಹದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನೂ ವಿವರಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಜನರು ಎಂದಾದರೂ ಇಂತಹ ಪರಿಸ್ಥಿತಿಯಲ್ಲಿ ಸಿಲುಕಿಕೊಂಡರೆ ಬದುಕುಳಿಯಬಹುದು ಎಂಬುದನ್ನು ತಜ್ಞರು ವಿವರಿಸಿದ್ದಾರೆ. ಇದಕ್ಕಾಗಿ ಪರಿಣಿತರು ಸಹಾಯಕವಾದ ಸಲಹೆಗಳು ಮತ್ತು ಭಂಗಿಗಳನ್ನು ಹೇಳಿದ್ದಾರೆ. ಇಂಥ ಕಾಲ್ತುಳಿತ ಸಂದರ್ಭದಲ್ಲಿ ಅಡ್ಡಲಾಗಿ ಮಲಗುವ ಮೂಲಕ ಮತ್ತು ಎರಡೂ ಕೈಗಳಿಂದ ತಲೆ ಮತ್ತು ಮುಖವನ್ನು ರಕ್ಷಿಸಿಕೊಳ್ಳುವ ಮೂಲಕ ಪ್ರಾಣಾಪಾಯದಿಂದ ಪಾರಾಗಬಹುದು ಎಂದು ವಿಡಿಯೊದಲ್ಲಿ ಪ್ರಾತ್ಯಕ್ಷಿಕೆ ಮೂಲಕ ವಿವರಿಸಲಾಗಿದೆ.

ಕಾಲ್ತುಳಿತದಲ್ಲಿ ಸಿಲುಕಿಕೊಳ್ಳುವ ಜನರು ವಿವಿಧ ಕಡೆಯಿಂದ ಒಂದೇ ಬಾರಿಗೆ ಒತ್ತಡವನ್ನು ಅನುಭವಿಸಬೇಕಾಗುತ್ತದೆ. ಆಗ ಉಸಿರು ಕಟ್ಟುತ್ತದೆ. ಪಕ್ಕೆಲುಬುಗಳು, ಹೃದಯ ಮತ್ತು ಪ್ರಮುಖ ಅಂಗಗಳಿಗೆ ಹಾನಿಯುಂಟಾಗುತ್ತದೆ. ಈ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುವ ಭಂಗಿಯನ್ನು ತಜ್ಞರು ವಿವರಿಸಿದ್ದಾರೆ.

ಹತ್ರಾಸ್‌ನಲ್ಲಿ ಏನಾಗಿತ್ತು?

ಹತ್ರಾಸ್ ಜಿಲ್ಲೆಯ ಸಿಕಂದರಾ ರಾವು ಪ್ರದೇಶದ ರಾತಿ ಭಾನ್‌ಪುರ್ ಗ್ರಾಮದಲ್ಲಿ ಇತ್ತೀಚೆಗೆ ವಿಶೇಷವಾಗಿ ಹಾಕಲಾದ ಟೆಂಟ್‌ನಲ್ಲಿ ಪ್ರಚಾರಕರು ಆಯೋಜಿಸಿದ್ದ ‘ಸತ್ಸಂಗ’ದಲ್ಲಿ ಲಕ್ಷಾಂತರ ಜನರು ಜಮಾಯಿಸಿದಾಗ ಕಾಲ್ತುಳಿತ ಸಂಭವಿಸಿತ್ತು. ಧಾರ್ಮಿಕ ಸಭೆ ಮುಗಿದ ಅನಂತರ ಕಾಲ್ತುಳಿತ ಉಂಟಾಗಿತ್ತು.


ಘಟನೆಯ ಬಳಿಕ ಸ್ವಯಂ ಘೋಷಿತ ಬೋಧಕ ಬಾಬಾ ನಾರಾಯಣ ಹರಿ ಅಲಿಯಾಸ್ ಸಾಕರ್ ವಿಶ್ವ ಹರಿ ‘ಭೋಲೆ ಬಾಬಾ’ ಅವರು ಬೆಂಗಾವಲು ಪಡೆಯೊಂದಿಗೆ ಗ್ರಾಮವನ್ನು ತೊರೆದಿದ್ದರು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ‘ಸೇವಕ್’ ಎಂದೂ ಕರೆಯಲ್ಪಡುವ ಹಲವಾರು ಸ್ವಯಂಸೇವಕರು ಭೋಲೆ ಬಾಬಾ ಅವರ ಬೆಂಗಾವಲು ಪಡೆ ವಾಹನ ರಸ್ತೆ ದಾಟುವಾಗ ರಸ್ತೆಯ ಎರಡೂ ಬದಿಗಳಲ್ಲಿ ನಿಂತಿದ್ದರು.

ಈ ಕುರಿತು ಮಾಹಿತಿ ನೀಡಿರುವ ಪ್ರತ್ಯಕ್ಷದರ್ಶಿ ಗೋಪಾಲ್ ಕುಮಾರ್, ಬಾಬಾ ಅವರು ಬೈಪಾಸ್ ಮಾಡುವ ಮೂಲಕ ಗೊತ್ತುಪಡಿಸಿದ ಮಾರ್ಗದಿಂದ ಆಗಮಿಸಿ, ನಿರ್ಗಮಿಸಿದರು. ಅವರ ಸುತ್ತಲೂ ವಾಹನಗಳಿದ್ದವು ಮತ್ತು ಹೆದ್ದಾರಿಯ ಒಂದು ಭಾಗವು ಭಕ್ತರು ಮತ್ತು ವಾಹನಗಳಿಂದ ತುಂಬಿ ಬಹುತೇಕ ಜಾಮ್ ಆಗಿತ್ತು ಎಂದು ಹೇಳಿದರು.

ಬಾಬಾ ಅವರ ವಾಹನವು ಹೆದ್ದಾರಿಯನ್ನು ತಲುಪುತ್ತಿದ್ದಂತೆ ನೂರಾರು ಭಕ್ತರು ಅವರ ಪಾದದ ಅಡಿಯ ಮಣ್ಣು ಪಡೆಯಲು ಅವರ ಕಾರಿನ ಕಡೆಗೆ ಧಾವಿಸಿದರು. ಇದರಲ್ಲಿ ಕೆಲವರು ಬಿದ್ದರು. ಬೃಹತ್ ಜನಸಮೂಹವು ಹೆದ್ದಾರಿಯತ್ತ ಧಾವಿಸಿದ್ದು, ಬಿದ್ದವರಲ್ಲಿ ಕೆಲವರಿಗೆ ಮೇಲಕ್ಕೆ ಎಳಲೂ ಸಾಧ್ಯವಾಗಲಿಲ್ಲ. ಇದು ಕಾಲ್ತುಳಿತಕ್ಕೆ ಕಾರಣವಾಯಿತು. ಅವರಲ್ಲಿ ಕೆಲವರು ಸತ್ತರು ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶ ಪೊಲೀಸರು ಆರು ಜನರು ಸೇರಿ ಎಲ್ಲಾ ಸೇವಾದಾರರನ್ನು ಬಂಧಿಸಿದ್ದರೆ ಎಂದು ತಿಳಿಸಿದರು.

ಪ್ರಮುಖ ಆರೋಪಿ ಪ್ರಕಾಶ್ ಮಧುಕರ್ ಕುರಿತು ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನು ಪೊಲೀಸರು ಬಂಧಿಸಿದ್ದಾರೆ. ಭೋಲೆ ಬಾಬಾ ಅವರ ಹೆಸರಿನಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಅನುಮತಿ ಕೇಳದ ಕಾರಣ ಎಫ್‌ಐಆರ್‌ನಲ್ಲಿ ಅವರ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಐಜಿ (ಅಲಿಗಢ ರೇಂಜ್) ಶಲಭ್ ಮಾಥುರ್ ತಿಳಿಸಿದ್ದಾರೆ.

Continue Reading
Advertisement
Viral Video
ವೈರಲ್ ನ್ಯೂಸ್1 min ago

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

Brain Eating Amoeba
ಆರೋಗ್ಯ6 mins ago

Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

Kerala govt
ದೇಶ33 mins ago

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

Teach for India
ಬೆಂಗಳೂರು38 mins ago

Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

Bridge Collapse
ದೇಶ40 mins ago

Bridge Collapse: 17 ದಿನದಲ್ಲಿ 10 ಸೇತುವೆ ಕುಸಿತ; ಬಿಹಾರದಲ್ಲಿ 15 ಎಂಜಿನಿಯರ್‌ಗಳ ಅಮಾನತು!

Shivamogga News Give top priority to cleanliness says Raju Hiriyawali
ಶಿವಮೊಗ್ಗ45 mins ago

Shivamogga News: ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ರಾಜು ಹಿರಿಯಾವಲಿ

Stampede Tips and Tricks
ದೇಶ48 mins ago

Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

ಕರ್ನಾಟಕ48 mins ago

MUDA site scandal: ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಿ: ಲೆಹರ್‌ ಸಿಂಗ್‌ ಆಗ್ರಹ

Deadly Attack
ದೇಶ1 hour ago

Deadly Attack: ಹಾಡಹಗಲೇ ಶಿವಸೇನೆ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌- ವಿಡಿಯೋ ಇದೆ

Viral Video
Latest1 hour ago

Viral Video: ಮೆಟ್ರೋದಲ್ಲಿ ಕೋತಿ ಚೇಷ್ಟೆಗೆ ಕೊನೆಯೇ ಇಲ್ಲ! ಈ ಮಂಗ್ಯಾನ ಡ್ಯಾನ್ಸ್‌ ನೋಡಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ4 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ5 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ7 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ8 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು9 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು10 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ14 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌