Maharashtra Politics : ವಿಧಾನ ಪರಿಷತ್​ನಲ್ಲಿ ಬಿಜೆಪಿಯನ್ನು ಸೋಲಿಸಿದ ಉದ್ಧವ್​ ಠಾಕ್ರೆಯ ಶಿವಸೇನೆ - Vistara News

ಪ್ರಮುಖ ಸುದ್ದಿ

Maharashtra Politics : ವಿಧಾನ ಪರಿಷತ್​ನಲ್ಲಿ ಬಿಜೆಪಿಯನ್ನು ಸೋಲಿಸಿದ ಉದ್ಧವ್​ ಠಾಕ್ರೆಯ ಶಿವಸೇನೆ

Maharashtra Politics: ಪರಬ್ 44,784 ಮತಗಳನ್ನು ಪಡೆದರೆ, ಶೆಲಾರ್ 18,772 ಮತಗಳನ್ನು ಪಡೆದರು. ಜೂನ್ 26 ರಂದು ನಡೆದ ಮತದಾನದಲ್ಲಿ ಒಟ್ಟು 67,644 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಚಲಾವಣೆಯಾದ ಒಟ್ಟು ಮತಗಳಲ್ಲಿ 64,222 ಮತಗಳು ಕ್ರಮಬದ್ಧವಾಗಿದ್ದು, ಗೆಲುವಿನ ಕೋಟಾ 32,112 ಮತಗಳಾಗಿದ್ದವು.

VISTARANEWS.COM


on

Maharashtra Politics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಮಹಾರಾಷ್ಟ್ರ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ (Maharashtra Politics) ಶಿವಸೇನೆ (ಉದ್ಧವ್​ ಠಾಕ್ರೆ ಬಣ) ಮುಖಂಡ ಅನಿಲ್ ಪರಬ್ ಅವರು ಬಿಜೆಪಿಯ ಕಿರಣ್ ಶೆಲಾರ್ ಅವರನ್ನು ಸೋಲಿಸಿದ್ದಾರೆ. ಪರಬ್ 44,784 ಮತಗಳನ್ನು ಪಡೆದರೆ, ಶೆಲಾರ್ 18,772 ಮತಗಳನ್ನು ಪಡೆದರು. ಜೂನ್ 26 ರಂದು ನಡೆದ ಮತದಾನದಲ್ಲಿ ಒಟ್ಟು 67,644 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಚಲಾವಣೆಯಾದ ಒಟ್ಟು ಮತಗಳಲ್ಲಿ 64,222 ಮತಗಳು ಕ್ರಮಬದ್ಧವಾಗಿದ್ದು, ಗೆಲುವಿನ ಕೋಟಾ 32,112 ಮತಗಳಾಗಿದ್ದವು.

ಮೊದಲ ಪ್ರಾಶಸ್ತ್ಯದ ಮತದಾನದಲ್ಲಿ ಪರಬ್ 44,784 ಮತಗಳನ್ನು ಪಡೆದು ಚುನಾಯಿತರಾಗಿದ್ದಾರೆ. ಜುಲೈ 12 ರಂದು ಮಹಾರಾಷ್ಟ್ರ ವಿಧಾನ ಪರಿಷತ್ತಿಗೆ ನಡೆಯಲಿರುವ

ದ್ವೈವಾರ್ಷಿಕ ಚುನಾವಣೆಗೆ ಎಂಎಲ್​​ಸಿ ಪ್ರಜ್ಞಾ ಸತವ್ ಅವರನ್ನು ಕಾಂಗ್ರೆಸ್ ಇಂದು ಶಾಸಕರ ಕೋಟಾದಿಂದ ತನ್ನ ಅಭ್ಯರ್ಥಿಯಾಗಿ ಮರು ನಾಮಕರಣ ಮಾಡಿದೆ. ರಾಜ್ಯ ವಿಧಾನಸಭೆಯ ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ (ಜುಲೈ 2) ಕೊನೆಯ ದಿನವಾಗಿದೆ. ಹಾಲಿ ಸದಸ್ಯರು ಜುಲೈ 27 ರಂದು ನಿವೃತ್ತರಾಗುವುದರಿಂದ ಖಾಲಿಯಾಗುವ 11 ಸ್ಥಾನಗಳನ್ನು ತುಂಬಲು ಈ ಚುನಾವಣೆ ನಡೆಯುತ್ತಿದೆ.

ಇದನ್ನೂ ಓದಿ: ಏರ್‌ಪೋರ್ಟ್‌ನಲ್ಲೇ ಟಿ20 ವಿಶ್ವಕಪ್‌ ಫೈನಲ್‌ ವೀಕ್ಷಿಸಿದ್ದ ಸಿಎಂ ಸಿದ್ದರಾಮಯ್ಯ; 70 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡ ವಿಡಿಯೊ!

ವಿಧಾನಸಭೆಯ ಸದಸ್ಯರು (ಶಾಸಕರು) ಚುನಾವಣೆಯಲ್ಲಿ ಮತ ಚಲಾಯಿಸುತ್ತಾರೆ. ನಿವೃತ್ತರಾಗುತ್ತಿರುವ 11 ಎಂಎಲ್ಸಿಗಳಲ್ಲಿ ಇಬ್ಬರು ಕಾಂಗ್ರೆಸ್​ನವರು. ಆದಾಗ್ಯೂ, ವಿಧಾನಸಭೆಯಲ್ಲಿ ಕಾಂಗ್ರೆಸ್​​ನ ಪ್ರಸ್ತುತ ಬಲವನ್ನು ಗಮನಿಸಿದರೆ, ವಿರೋಧ ಪಕ್ಷವು ಮೇಲ್ಮನೆಗೆ ಒಬ್ಬ ಅಭ್ಯರ್ಥಿಯನ್ನು ಮಾತ್ರ ಆಯ್ಕೆ ಮಾಡಬಹುದು.

ಪ್ರದ್ನ್ಯಾ ಸತವ್ ಅವರು ದಿವಂಗತ ಕಾಂಗ್ರೆಸ್ ಸಂಸದ ರಾಜೀವ್ ಸತವ್ ಅವರ ಪತ್ನಿ. ಹಾಲಿ ಕಾಂಗ್ರೆಸ್ ಎಂಎಲ್ಸಿ ಶರದ್ ರಾನ್ಪೈಸ್ ಅವರ ನಿಧನದ ನಂತರ ಉಪಚುನಾವಣೆ ಅನಿವಾರ್ಯವಾದಾಗ 2021 ರಲ್ಲಿ ಅವರು ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾದರು. ಮಧ್ಯ ಮಹಾರಾಷ್ಟ್ರದ ಬೀಡ್ ನಿಂದ ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಸೋತ ಮಾಜಿ ರಾಜ್ಯ ಸಚಿವೆ ಪಂಕಜಾ ಮುಂಡೆ ಸೇರಿದಂತೆ ಆಡಳಿತಾರೂಢ ಬಿಜೆಪಿ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಕಾಂಗ್ರೆಸ್​ನ ಮಿತ್ರ ಪಕ್ಷವಾದ ಎನ್ಸಿಪಿ (ಶರದ್​​ ಪವಾರ್) ಪೆಸೆಂಟ್ಸ್ ಅಂಡ್ ವರ್ಕರ್ಸ್ ಪಾರ್ಟಿ (ಪಿಡಬ್ಲ್ಯೂಪಿ) ಅಭ್ಯರ್ಥಿ ಜಯಂತ್ ಪಾಟೀಲ್ ಅವರಿಗೆ ಬೆಂಬಲ ಘೋಷಿಸಿದೆ. 288 ಸದಸ್ಯರ ವಿಧಾನಸಭೆಯಲ್ಲಿ 14 ಸ್ಥಾನಗಳು ಖಾಲಿ ಇದ್ದು, ಎಲೆಕ್ಟೋರಲ್ ಕಾಲೇಜ್ 274 ಮತ್ತು ವಿಜೇತ ಅಭ್ಯರ್ಥಿಯ ಕೋಟಾ 23 ಆಗಿದೆ. ಅಕ್ಟೋಬರ್ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ದ್ವೈವಾರ್ಷಿಕ ಚುನಾವಣೆಗಳು ನಡೆಯುತ್ತಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Latest

Viral News: ಮದುವೆಯಾಗಲು ನಿರಾಕರಿಸಿದ ಪ್ರಿಯಕರನ ಆ ʼಅಂಗʼಕ್ಕೆ ಕತ್ತರಿ ಹಾಕಿದ ಪ್ರಿಯತಮೆ

Viral News: ಬಿಹಾರದ ಸರನ್ ಜಿಲ್ಲೆಯಲ್ಲಿ ಮಹಿಳಾ ವೈದ್ಯೆಯೊಬ್ಬಳು ಪ್ರೀತಿಸಿ ತನ್ನ ಜೊತೆ ಸಂಬಂಧ ಬೆಳೆಸಿ ಮದುವೆಯಾಗಲು ನಿರಾಕರಿಸಿದ ಗೆಳೆಯನ ಖಾಸಗಿ ಭಾಗವನ್ನು ಕತ್ತರಿಸಿದ ಘಟನೆ ನಡೆದಿದೆ. ಸಂತ್ರಸ್ತ ಪ್ರಕಾಶ್ ಅಲಿಯಾಸ್ ವಿಕಾಶ್ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ಮಧೌರಾ ಬ್ಲಾಕ್‌ನ ವಾರ್ಡ್ ಸಂಖ್ಯೆ 12 ರ ಕೌನ್ಸಿಲರ್ ಆಗಿದ್ದ ಎನ್ನಲಾಗಿದೆ. ಕಳೆದ ಐದು ವರ್ಷಗಳಿಂದ ಆತ ಯುವತಿಯೊಂದಿಗೆ ಸಂಬಂಧ ಹೊಂದಿದ್ದನು. ಆದರೆ ಅವನು ಅವಳನ್ನು ಮದುವೆಯಾಗಲು ನಿರಾಕರಿಸುತ್ತಿದ್ದನು. ಇದರಿಂದ ಕೋಪಗೊಂಡ ಯುವತಿ ಆ ವ್ಯಕ್ತಿಯನ್ನು ತನ್ನ ಮನೆಗೆ ಕರೆಸಿಕೊಂಡು, ಅವನ ಖಾಸಗಿ ಭಾಗವನ್ನು ಕತ್ತರಿಸಿದ್ದಾಳೆ ಎನ್ನಲಾಗಿದೆ.

VISTARANEWS.COM


on

Love Case
Koo

ಪಾಟ್ನಾ: ಪ್ರೀತಿಸಿ ಯುವತಿಯರನ್ನು ಬಳಸಿಕೊಂಡು ಮೋಸ ಮಾಡುವಂತಹ ಯುವಕರ ಸಂಖ್ಯೆ ಹೆಚ್ಚಾಗುತ್ತಿದೆ. ಯುವಕರ ಮೋಸದ ಪ್ರೀತಿಗೆ ಎಷ್ಟೋ ಯುವತಿಯರ ಜೀವನ ಹಾಳಾಗಿದೆ. ಹಾಗಾಗಿ ಇವರಲ್ಲಿ ಕೆಲವು ಯುವತಿಯರು ಮಾನ ಮರ್ಯಾದೆಗೆ ಅಂಜಿ ಜೀವ ಕಳೆದುಕೊಂಡಿದ್ದಾರೆ, ಆದರೆ ಇಲ್ಲೊಬ್ಬ ಯುವತಿ ಪ್ರೀತಿಸಿ (Viral News) ಮೋಸ ಮಾಡಿದವನಿಗೆ ತಕ್ಕ ಶಿಕ್ಷೆ ವಿಧಿಸಿದ್ದಾಳೆ.

ಬಿಹಾರದ ಸರನ್ ಜಿಲ್ಲೆಯಲ್ಲಿ ಮಹಿಳಾ ವೈದ್ಯೆಯೊಬ್ಬಳು ಪ್ರೀತಿಸಿ ತನ್ನ ಜೊತೆ ಸಂಬಂಧ ಬೆಳೆಸಿ ಮದುವೆಯಾಗಲು ನಿರಾಕರಿಸಿದ ಗೆಳೆಯನ ಖಾಸಗಿ ಭಾಗವನ್ನು ಕತ್ತರಿಸಿದ ಘಟನೆ ಜುಲೈ 1ರಂದು ನಡೆದಿದೆ. ಸಂತ್ರಸ್ತ ಪ್ರಕಾಶ್ ಅಲಿಯಾಸ್ ವಿಕಾಶ್ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ಮಧೌರಾ ಬ್ಲಾಕ್‌ನ ವಾರ್ಡ್ ಸಂಖ್ಯೆ 12ರ ಕೌನ್ಸಿಲರ್ ಆಗಿದ್ದ ಎನ್ನಲಾಗಿದೆ. ಕಳೆದ ಐದು ವರ್ಷಗಳಿಂದ ಆತ ಯುವತಿಯೊಂದಿಗೆ ಸಂಬಂಧ ಹೊಂದಿದ್ದನು. ಆದರೆ ಅವನು ಅವಳನ್ನು ಮದುವೆಯಾಗಲು ನಿರಾಕರಿಸುತ್ತಿದ್ದನು. ತಾನು ಸಂಬಂಧ ಬೆಳೆಸಿದ ತಪ್ಪಿಗೆ ಯುವತಿ ಹೇಗೋ ನ್ಯಾಯಾಲಯದಲ್ಲಿ ಮದುವೆಯಾಗಲು ಅವನನ್ನು ಮನವೊಲಿಸಿದಳು. ಆದರೆ ಅಂದು ಆತ ಮದುವೆಯಾಗಲು ನ್ಯಾಯಾಲಯಕ್ಕೆ ಬರದೆ ತಪ್ಪಿಸಿಕೊಂಡ. ಇದರಿಂದ ಕೋಪಗೊಂಡ ಯುವತಿ ಆ ವ್ಯಕ್ತಿಯನ್ನು ತನ್ನ ಮನೆಗೆ ಕರೆಸಿಕೊಂಡು, ಅವನ ಖಾಸಗಿ ಭಾಗವನ್ನು ಕತ್ತರಿಸಿದ್ದಾಳೆ ಎನ್ನಲಾಗಿದೆ.

ಆತ ಅಳುವುದನ್ನು ಕೇಳಿದ ನೆರೆಹೊರೆಯವರು ಬಂದು ನೋಡಿದಾಗ ಆತ ರಕ್ತದ ಮಡುವಿನಲ್ಲಿ ಹಾಸಿಗೆಯ ಮೇಲೆ ಬಿದ್ದಿರುವುದನ್ನು ಕಂಡು ಸರನ್ ಜಿಲ್ಲೆಯ ಮಧೌರಾ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ವ್ಯಕ್ತಿಯನ್ನು ಚಿಕಿತ್ಸೆಗಾಗಿ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಪಿಎಂಸಿಎಚ್) ದಾಖಲಿಸಿದ್ದಾರೆ. ಆತನ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ರಸ್ತೆ ಮೇಲೆಯೇ ಮಹಿಳೆಯ ವಶೀಕರಣ! 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ

ಹಾಗೇ ಕೊಲೆ ಯತ್ನದ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪೊಲೀಸರು ಯುವತಿಯನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ಯುವತಿ ಹಾಜಿಪುರದ 25 ವರ್ಷದ ಅವಿವಾಹಿತ ವೈದ್ಯೆಯಾಗಿದ್ದು, ಮಧೌರಾದಲ್ಲಿ ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆ ವೇಳೆ ತಮ್ಮಿಬ್ಬರ ನಡುವೆ ಸಂಬಂಧವಿದ್ದು, ಆತ ಮದುವೆಯಾಗಲು ನಿರಾಕರಿಸಿದ್ದಕ್ಕೆ ಅವನ ಖಾಸಗಿ ಭಾಗ ಕತ್ತರಿಸಿರುವುದಾಗಿ ಯುವತಿ ಒಪ್ಪಿಕೊಂಡಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.

Continue Reading

Latest

Viral News: ಮಗುವಿಗೆ ಔಷಧಿ ತರಲು ಹೋದ ತಾಯಿ ಹೆಬ್ಬಾವಿಗೆ ಆಹಾರವಾಗಿದ್ದು ಹೇಗೆ?

Viral News: ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬಳನ್ನು 30 ಅಡಿ ಉದ್ದ ಹೆಬ್ಬಾವು ತಿಂದು ಹಾಕಿದ ಘಟನೆ ನಡೆದಿದೆ.ತನ್ನ ಮಗುವೊಂದಕ್ಕೆ ಅನಾರೋಗ್ಯವಿರುವ ಕಾರಣ ಔಷಧಿ ಖರೀದಿಸಲು ಕಾಡಿನಲ್ಲಿ ಮರಗಳ ನಡುವೆ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದಾಗ ಹೆಬ್ಬಾವು ಅವಳ ಮೇಲೆ ದಾಳಿ ಮಾಡಿ ಆಕೆಯನ್ನು ನುಂಗಿ ಹಾಕಿದೆ. ಆಕೆಯ ಪತಿ ಮನೆಯಲ್ಲಿ ಪತ್ನಿ ನಾಪತ್ತೆಯಾಗಿರುವುದು ಕಂಡು ಹುಡುಕಿಕೊಂಡು ಬಂದಾಗ ಹೆಂಡತಿಯ ಕಾಲುಗಳು 30 ಅಡಿ ಉದ್ದದ ಹೆಬ್ಬಾವಿನ ಬಾಯಿಯಿಂದ ಕಾಣಿಸುತ್ತಿದ್ದವು. ಆಗ ಆತ ತನ್ನ ಪತ್ನಿಯನ್ನು ಉಳಿಸಿಕೊಳ್ಳಲು ಹಾವನ್ನು ಕೊಂದುಹಾಕಿದ್ದಾನೆ.

VISTARANEWS.COM


on

Snake Bite
Koo

ಇಂಡೋನೇಷ್ಯಾ: ಹಾವುಗಳು ಸಾಮಾನ್ಯವಾಗಿ ಮನೆಯ ಸುತ್ತಮುತ್ತ, ಹೊಲ ಗದ್ದೆಗಳಲ್ಲಿ, ಕರೆಗಳ ಸಮೀಪದಲ್ಲಿ ಕಂಡುಬರುತ್ತದೆ. ಹಾವಿನ ಕಡಿತದಿಂದ ಸಾಕಷ್ಟು ಜನರು ಜೀವ ಕೂಡ ಕಳೆದುಕೊಂಡಿದ್ದಾರೆ. ವಿಷಜಂತುಗಳಾದ ಹಾವು ಒಂದು ರೀತಿಯಾದರೆ ಹೆಬ್ಬಾವು ಇನ್ನೊಂದು ರೀತಿಯದ್ದು. ಇದರ ಬಾಯಿಗೆ ಸಿಕ್ಕರೆ ಮರಳಿ ಬರುವುದು ಅಸಾಧ್ಯ. ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬಳನ್ನು 30 ಅಡಿ ಉದ್ದ ಹೆಬ್ಬಾವು ತಿಂದು (Viral News) ಹಾಕಿದೆಯಂತೆ.

ಸಿರಿಯಾತಿ (30) ಹಾವಿನ ಬಾಯಿಗೆ ಆಹಾರವಾದ ಮಹಿಳೆ. ಈಕೆ ದಕ್ಷಿಣ ಸುಲಾವೆಸಿಯ ಲುವು ರೀಜೆನ್ಸಿಯಲ್ಲಿ ತನ್ನ ಪತಿ ಹಾಗೂ ಐದು ಮಕ್ಕಳೊಂದಿಗೆ ವಾಸವಾಗಿದ್ದಳು. ತನ್ನ ಮಗುವೊಂದಕ್ಕೆ ಅನಾರೋಗ್ಯವಿರುವ ಕಾರಣ ಔಷಧಿ ಖರೀದಿಸಲು ಕಾಡಿನಲ್ಲಿ ಮರಗಳ ನಡುವೆ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದಾಗ ಹೆಬ್ಬಾವು ಅವಳ ಮೇಲೆ ದಾಳಿ ಮಾಡಿ ಆಕೆಯನ್ನು ನುಂಗಿ ಹಾಕಿದೆ. ಆಕೆಯ ಪತಿ ಅಡಿಯಾನ್ಸಿಯಾ ಮನೆಯಲ್ಲಿ ಪತ್ನಿ ನಾಪತ್ತೆಯಾಗಿರುವುದು ಕಂಡು ಹುಡುಕಿಕೊಂಡು ಬಂದಾಗ ಸಿರಿಯತಿಯ ಕಾಲುಗಳು 30 ಅಡಿ ಉದ್ದದ ಹೆಬ್ಬಾವಿನ ಬಾಯಿಯಿಂದ ಕಾಣಿಸುತ್ತಿದ್ದವು. ಆಗ ಆತ ತನ್ನ ಪತ್ನಿಯನ್ನು ಉಳಿಸಿಕೊಳ್ಳಲು ಹಾವನ್ನು ಕೊಂದುಹಾಕಿದ್ದಾನೆ. ಆದರೆ ಅಷ್ಟೊತ್ತಿಗಾಗಲೇ ಸಿರಿಯತಿ ಮೃತಪಟ್ಟಿದ್ದಳು.

“ಆಕೆ ತನ್ನ ಮಗುವಿನ ಔಷಧಿಯನ್ನು ಖರೀದಿಸಲು ಹಾಗೂ ತನ್ನ ಸಹೋದರನನ್ನು ಭೇಟಿ ಮಾಡುವ ಉದ್ದೇಶದಿಂದ ಹೊರಗೆಹೋಗಿದ್ದಾಳೆ. ಆಕೆ ಕಾಡಿನ ದಾರಿಯ ಮೂಲಕ ಹೋಗಬೇಕಾಗಿತ್ತು. ಆಕೆಯ ಸಹೋದರ ಬಹಳ ಸಮಯದವರೆಗೆ ಅವಳಿಗಾಗಿ ಕಾಯುತ್ತಿದ್ದನು, ಆಕೆ ಬಾರದಿದ್ದು ನೋಡಿ ಆಕೆಯ ಪತಿಗೆ ಕರೆ ಮಾಡಿದ್ದಾನೆ. ಆದ್ದರಿಂದ ಪತಿ ತನ್ನ ಹೆಂಡತಿಯನ್ನು ಹುಡುಕಲು ಹೋಗಿದ್ದನು ಎಂದು ಸ್ಥಳೀಯ ವ್ಯಕ್ತಿಯೊಬ್ಬರು ಮಾಹಿತಿ ನೀಡಿದ್ದಾರೆ.

ಜುಲೈ 2 ರಂದು ಬೆಳಿಗ್ಗೆ 7.30 ಕ್ಕೆ ಈ ಘಟನೆ ನಡೆದಿದ್ದು, ಮಹಿಳೆಯ ಶವ ಪತ್ತೆಯಾಗಿದೆ. ಆದರೆ ದೇಹದ ಭಾಗಗಳು ಹಾಗೇ ಇದ್ದರೂ ಮೂಳೆಗಳು ಮುರಿದಿರಬಹುದು ಎಂದು ಊಹಿಸಲಾಗಿದೆ. ಪಾರ್ಥಿವ ಶರೀರವನ್ನು ಈಗಾಗಲೇ ಅಂತ್ಯಕ್ರಿಯೆಗಾಗಿ ಮನೆಗೆ ತಲುಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಒಂದು ತಿಂಗಳೊಳಗೆ ದಕ್ಷಿಣ ಸುಲಾವೆಸಿಯಲ್ಲಿ ನಡೆದ ಇಂತಹ ಎರಡನೇ ಘಟನೆಯಲ್ಲಿ ಇದು ಒಂದಾಗಿದೆ. ಜೂನ್ ಆರಂಭದಲ್ಲಿ, 45 ವರ್ಷದ ಮಹಿಳೆಯ ದೇಹವು ಹೆಬ್ಬಾವಿನ ಬಾಯಿಯೊಳಗೆ ಪತ್ತೆಯಾಗಿತ್ತು. ಇಂಡೋನೇಷ್ಯಾವು ಬರ್ಮೀಸ್ ಹೆಬ್ಬಾವು ಮತ್ತು ರೆಟಿಕ್ಯುಲೇಟೆಡ್ ಹೆಬ್ಬಾವು ಸೇರಿದಂತೆ ಹಲವಾರು ಜಾತಿಯ ಹೆಬ್ಬಾವುಗಳಿಗೆ ನೆಲೆಯಾಗಿದೆ.

ಇದನ್ನೂ ಓದಿ: Fans chant Pakistan: ಟೀಮ್ ಇಂಡಿಯಾ ವಿಕ್ಟರಿ ಪೆರೇಡ್​ನಲ್ಲಿ ಅಭಿಮಾನಿಗಳು ಪಾಕಿಸ್ತಾನ್ ಘೋಷಣೆ ಕೂಗಿದ್ದು ಏಕೆ? ವಿಡಿಯೊ ವೈರಲ್​

Continue Reading

ಕರ್ನಾಟಕ

Dengue fever: ಹಾವೇರಿಯಲ್ಲಿ ಶಂಕಿತ ಡೆಂಗ್ಯೂಗೆ 9 ವರ್ಷದ ಮಗು ಬಲಿ

Dengue fever: ರಾಜ್ಯದಲ್ಲಿ ಶುಕ್ರವಾರ 155 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿದ್ದವು. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 107 ಹೊಸ ಕೇಸ್‌ಗಳು ವರದಿಯಾಗಿದ್ದವು.

VISTARANEWS.COM


on

Dengue fever
Koo

ಹಾವೇರಿ: ಶಂಕಿತ ಡೆಂಗ್ಯೂ ಜ್ವರಕ್ಕೆ (Dengue fever) ಜಿಲ್ಲೆಯಲ್ಲಿ 9 ವರ್ಷದ ಮಗು ಬಲಿಯಾಗಿದೆ. ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ ದ್ಯಾಮಪ್ಪ ಬನ್ನಿಹಟ್ಟಿ ಎಂಬುವವರ ಪುತ್ರಿ ದಿವ್ಯ ದ್ಯಾಮಪ್ಪ ಮೃತ ಮಗು. ಕಳೆದ 12 ದಿನಗಳ ಹಿಂದೆ ಜ್ವರದಿಂದ ಬಳುತ್ತಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮಗು ಕೊನೆಯುಸಿರೆಳೆದಿದೆ.

ಶುಕ್ರವಾರ ತಡರಾತ್ರಿ ಬೆಂಗಳೂರಿನ ಅಂಜನಾಪುರದ 11 ವರ್ಷದ ಬಾಲಕ ಗಗನ್ ಶಂಕಿತ ಡೆಂಗ್ಯೂ ಜ್ವರದಿಂದ ಸಾವಿಗೀಡಾಗಿದ್ದ. ಇದರ ಬೆನ್ನಲ್ಲೇ ಬ್ಯಾಡಗಿ ತಾಲೂಕಿನಲ್ಲಿ 9 ವರ್ಷದ ಬಾಲಕಿ ಮೃತಪ್ಟಿದ್ದಾಳೆ. ರಾಜ್ಯದಲ್ಲಿ ಶುಕ್ರವಾರ 155 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿದ್ದವು. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 107 ಹೊಸ ಕೇಸ್‌ಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 343 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ. ಡೆಂಗ್ಯೂ ಸೋಂಕಿನಿಂದ ಜನವರಿಯಿಂದ ಈವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿತ್ತು.

ನೆನ್ನೆ 899 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಿದ್ದು, ಈ ಪೈಕಿ 155 ಮಂದಿಗೆ ಸೋಂಕು ದೃಢವಾಗಿತ್ತು. ಬೆಂಗಳೂರಿನಲ್ಲಿ 107, ಚಿತ್ರದುರ್ಗ 10, ದಾವಣಗೆರೆ 4, ಶಿವಮೊಗ್ಗ 9, ಉತ್ತರ ಕನ್ನಡ 2, ವಿಜಯನಗರ 4, ಹಾಸನ 16 ಉಡುಪಿಯಲ್ಲಿ 3 ಕೇಸ್‌ಗಳು ಪತ್ತೆಯಾಗಿದ್ದವು. 343 ಸಕ್ರಿಯ ಪ್ರಕರಣಗಳ ಪೈಕಿ 142 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾಸನದಲ್ಲಿ ಒಂದು ವಾರದಲ್ಲಿ ನಾಲ್ವರು ಬಾಲಕಿಯರ ಸಾವು

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಬಾಲಕಿಯೊಬ್ಬಳು ಶುಕ್ರವಾರ ಮೃತಪಟ್ಟಿದ್ದಳು. ರಮೇಶ್-ಅಶ್ವಿನಿ ದಂಪತಿಯ ಪುತ್ರಿ ಸಮೃದ್ಧಿ (8) ಮೃತಪಟ್ಟ ಬಾಲಕಿ. ಕಳೆದ ಮೂರ್ನಾಲ್ಕು ದಿನಗಳಿಂದ ಈಕೆ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಹಿಮ್ಸ್‌ಗೆ ದಾಖಲಾಗಿದ್ದಳು. ಬಾಲಕಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಮೈಸೂರಿನ ಅಪೋಲೊ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಮೃದ್ಧಿ ಸಾವನ್ನಪ್ಪಿದ್ದಳು.

ಇದನ್ನೂ ಓದಿ | Dengue Fever: ಡೆಂಗ್ಯುಗೆ ಕೋವಿಡ್‌ ಮಾದರಿ ಉಚಿತ ಚಿಕಿತ್ಸೆ ಕೊಡಿ, ಮೆಡಿಕಲ್‌ ಎಮರ್ಜೆನ್ಸಿ ಘೋಷಿಸಿ: ಡಾ. ಮಂಜುನಾಥ್

ಇದರಿಂದ ಒಂದು ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯುವಿಗೆ ನಾಲ್ವರು ಬಾಲಕಿಯರು ಬಲಿಯಾದಂತಾಗಿದೆ. ಹೊಳೆನರಸೀಪುರ ತಾಲ್ಲೂಕಿನಲ್ಲೇ ಮೂವರು ಬಾಲಕಿಯರು ಮೃತಪಟ್ಟಿದ್ದಾರೆ. ಅರಕಲಗೂಡು ಮೂಲದ ಒಂದು ಹಾಗು ಹೊಳೆನರಸೀಪುರ ಮೂಲದ ಮೂರು ಕಂದಮ್ಮಗಳು ಸಾವಿಗೀಡಾಗಿವೆ. ಮೂರೂ ಮಕ್ಕಳೂ ತೀವ್ರ ಜ್ವರದಿಂದ ಬಳಲಿದ್ದವು. ಜುಲೈ 1ರಂದು ಅರಕಲಗೂಡು ಮೂಲದ ಅಣ್ಣಪ್ಪಶೆಟ್ಟಿ ಹಾಗು ಪದ್ಮ ದಂಪತಿ ಪುತ್ರಿ ಅಕ್ಷತಾ (13) ಸಾವಿಗೀಡಾಗಿದ್ದಾಳೆ. ಜೂನ್ 30ರಂದು ಹೊಳೆನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಮೂಲದ ವರ್ಷಿಕಾ(8) ತೀವ್ರ ಜ್ವರದಿಂದ ಬಳಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಬುಧವಾರ ಹೊಳೆನರಸೀಪುರ ತಾಲೂಕಿನ ಕಲಾಶ್ರೀ ಜಿ.ಎಲ್ (11) ನಿಧನ ಹೊಂದಿದ್ದಳು. ಈಕೆ ಹೊಳೆನರಸೀಪುರ ತಾಲ್ಲೂಕಿನ ಗುಡ್ಡೇನಹಳ್ಳಿ ಗ್ರಾಮದ ಲೋಕೇಶ್ ಮತ್ತು ತನುಜ ಎಂಬವರ ಪುತ್ರಿ.

Continue Reading

ಉದ್ಯೋಗ

Job Alert: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ; 10, 12ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

Job Alert: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೂನಿಯರ್‌ ಅಸಿಸ್ಟಂಟ್‌, ಚಾಲಕ ಸೇರಿದಂತೆ ಒಟ್ಟು 39 ಹುದ್ದೆಗಳಿವೆ. ಪದವಿ ಜತೆಗೆ 10, 12ನೇ ತರಗತಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ನಿಮ್ಮ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 26.

VISTARANEWS.COM


on

Job Alert
Koo

ಬೆಂಗಳೂರು: ರಾಜ್ಯದಲ್ಲೇ ಅದರಲ್ಲಿಯೂ ಬೆಂಗಳೂರಿನಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ (Karnataka State Souharda Federal Cooperative Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೂನಿಯರ್‌ ಅಸಿಸ್ಟಂಟ್‌, ಚಾಲಕ ಸೇರಿದಂತೆ ಒಟ್ಟು 39 ಹುದ್ದೆಗಳಿವೆ (KSSFCL Recruitment 2024). ಪದವಿ ಜತೆಗೆ 10, 12ನೇ ತರಗತಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ನಿಮ್ಮ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 26 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಚಾರ್ಟರ್ಡ್ ಅಕೌಂಟೆಂಟ್ 1 ಹುದ್ದೆ, ವಿದ್ಯಾರ್ಹತೆ: ಸಿಎ, ಸಿಎಸ್‌, ಐಸಿಡಬ್ಲ್ಯುಎ
ಕಾನೂನು ಅಧಿಕಾರಿ 2 ಹುದ್ದೆ, ವಿದ್ಯಾರ್ಹತೆ: ಎಲ್‌ಎಲ್‌ಬಿ, ಕಾನೂನು ವಿಷಯದಲ್ಲಿ ಪದವಿ
ಎಚ್‌ಆರ್‌ ಆಫೀಸರ್ 1 ಹುದ್ದೆ, ವಿದ್ಯಾರ್ಹತೆ: ಎಚ್‌ಆರ್‌ ವಿಷಯದಲ್ಲಿ ಎಂಬಿಎ
ತರಬೇತಿ ಅಧಿಕಾರಿ 1 ಹುದ್ದೆ, ವಿದ್ಯಾರ್ಹತೆ: ಎಂಎ, ಎಂಎಸ್‌ಡಬ್ಲ್ಯು
ಫ್ರೆಂಡ್ಲಿ ಡೆವಲಪ್‌ಮೆಂಟ್‌ ಆಫೀಸರ್ (Friendly Development Officer) 11 ಹುದ್ದೆ, ವಿದ್ಯಾರ್ಹತೆ: ಯಾವುದೇ ಪದವಿ
ಸಹಾಯಕರು 8 ಹುದ್ದೆ, ವಿದ್ಯಾರ್ಹತೆ: ಯಾವುದೇ ಪದವಿ
ಟೈಪಿಸ್ಟ್ & ಸ್ಟೆನೊ 2 ಹುದ್ದೆ, ವಿದ್ಯಾರ್ಹತೆ: ಯಾವುದೇ ಪದವಿ
ಜೂನಿಯರ್ ಅಸಿಸ್ಟೆಂಟ್ 11 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಡೆಪ್ಯುಟಿ ಸ್ಟಾಫ್ & ವೆಹಿಕಲ್ ಡ್ರೈವರ್ 2 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ

ವಯೋಮಿತಿ ಮತ್ತು ಅರ್ಜಿ ಶುಲ್ಕ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 25 ವರ್ಷದಿಂದ 35 ವರ್ಷದೊಳಿಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಚಾರ್ಟರ್ಡ್ ಅಕೌಂಟೆಂಟ್, ಲಾ ಆಫೀಸರ್, ಎಚ್ಆರ್ ಆಫೀಸರ್, ಟ್ರೈನಿಂಗ್ ಆಫೀಸರ್, ಫ್ರೆಂಡ್ಲಿ ಡೆವಲಪ್‌ಮೆಂಟ್‌ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಇನ್ನು ಸಹಾಯಕರು, ಟೈಪಿಸ್ಟ್ ಮತ್ತು ಸ್ಟೆನೋ, ಜೂನಿಯರ್ ಅಸಿಸ್ಟೆಂಟ್, ಡೆಪ್ಯುಟಿ ಸ್ಟಾಫ್ ಮತ್ತು ವೆಹಿಕಲ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಪಾವತಿಸಬೇಕು. ಆಫ್‌ಲೈನ್‌ ಮೂಲಕವೇ ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ಸಂಬಳ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳ ಹುದ್ದೆಗೆ ಅನುಗುಣವಾಗಿ 13,000 ರೂ. 70,000 ಮಾಸಿಕ ವೇತನ ದೊರೆಯಲಿದೆ.

KSSFCL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

”Souharda Sahakari Soudha”, #68, First Floor, 18th Cross Road,
Margosa Road, Malleswaram, Bengaluru-560055.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: souharda.coop ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಇಂದೇ ಅಪ್ಲೈ ಮಾಡಿ

Continue Reading
Advertisement
Love Case
Latest3 mins ago

Viral News: ಮದುವೆಯಾಗಲು ನಿರಾಕರಿಸಿದ ಪ್ರಿಯಕರನ ಆ ʼಅಂಗʼಕ್ಕೆ ಕತ್ತರಿ ಹಾಕಿದ ಪ್ರಿಯತಮೆ

Snake Bite
Latest6 mins ago

Viral News: ಮಗುವಿಗೆ ಔಷಧಿ ತರಲು ಹೋದ ತಾಯಿ ಹೆಬ್ಬಾವಿಗೆ ಆಹಾರವಾಗಿದ್ದು ಹೇಗೆ?

Vicky Kaushal responds after paparazzi ask him where's Katrina Kaif
ಸಿನಿಮಾ12 mins ago

Vicky Kaushal: ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ ಕತ್ರಿನಾ; ವಿಕ್ಕಿ ಕೌಶಲ್ ಕೊಟ್ಟರು ಕಾರಣ!

Bear attack staff during Bannerghatta safari
ಬೆಂಗಳೂರು ಗ್ರಾಮಾಂತರ16 mins ago

Bear Attack: ಬನ್ನೇರುಘಟ್ಟ ಸಫಾರಿ ವೇಳೆ ಸಿಬ್ಬಂದಿ ಮೇಲೆ ಕರಡಿ ದಾಳಿ

Dengue fever
ಕರ್ನಾಟಕ20 mins ago

Dengue fever: ಹಾವೇರಿಯಲ್ಲಿ ಶಂಕಿತ ಡೆಂಗ್ಯೂಗೆ 9 ವರ್ಷದ ಮಗು ಬಲಿ

NEET-UG 2024
ಶಿಕ್ಷಣ25 mins ago

NEET-UG 2024: ನೀಟ್ ಯುಜಿ 2024 ಕೌನ್ಸೆಲಿಂಗ್ ಮುಂದೂಡಿಕೆ

Fans chant Pakistan
ಕ್ರೀಡೆ27 mins ago

Fans chant Pakistan: ಟೀಮ್ ಇಂಡಿಯಾ ವಿಕ್ಟರಿ ಪೆರೇಡ್​ನಲ್ಲಿ ಅಭಿಮಾನಿಗಳು ಪಾಕಿಸ್ತಾನ್ ಘೋಷಣೆ ಕೂಗಿದ್ದು ಏಕೆ? ವಿಡಿಯೊ ವೈರಲ್​

Closure of Madrassas
ದೇಶ43 mins ago

Closure of Madrasas: ಮದರಸಾಗಳನ್ನು ಮುಚ್ಚಲು ನಿರ್ಣಯ ಮಂಡನೆ; ಕಾಂಗ್ರೆಸ್‌ ಕಿಡಿ

Food Poisoning
ರಾಯಚೂರು53 mins ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Team India Fan
ಕ್ರೀಡೆ1 hour ago

Team India Fan: ಟಿ20 ವಿಶ್ವಕಪ್​ ವಿಜೇತ ಭಾರತ ತಂಡದ ಆಟಗಾರರ ಹೆಸರನ್ನು ಬೆನ್ನ ಮೇಲೆ ಟ್ಯಾಟು ಹಾಕಿಸಿಕೊಂಡ ಅಭಿಮಾನಿ; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Food Poisoning
ರಾಯಚೂರು53 mins ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

karnataka Weather Forecast
ಮಳೆ7 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ20 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ21 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ22 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ24 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ1 day ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು1 day ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು1 day ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

ಟ್ರೆಂಡಿಂಗ್‌