Bike Accident: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸವಾರ ಸಾವು, ಇಬ್ಬರಿಗೆ ಗಾಯ - Vistara News

ಕರ್ನಾಟಕ

Bike Accident: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸವಾರ ಸಾವು, ಇಬ್ಬರಿಗೆ ಗಾಯ

Bike Accident: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮಧುರಖಂಡಿ ಬಳಿ ಅಪಘಾತ ನಡೆದಿದೆ. ಟಿವಿಎಸ್‌ ಎಕ್ಸೆಲ್‌ ಹಾಗೂ ಹೀರೋ ಸ್ಪ್ಲೆಂಡರ್ ಪ್ಲಸ್‌ ಮುಖಾಮುಖಿ ಡಿಕ್ಕಿಯಾಗಿ ಸವಾರರೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Bike Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಾಯಗಳಾಗಿರುವ ಘಟನೆ (Bike Accident) ಜಿಲ್ಲೆಯ ಜಮಖಂಡಿ ತಾಲೂಕಿನ ಮಧುರಖಂಡಿ ಬಳಿ ನಡೆದಿದೆ. ಸಿದ್ದರಾಮಯ್ಯ ಸಂಗಯ್ಯ ಹಿಡಕಲ್ಲ (60) ಮೃತ ದುರ್ದೈವಿ.

ಟಿವಿಎಸ್‌ ಸೂಪರ್ ಎಕ್ಸೆಲ್‌ನಲ್ಲಿ ಜಮಖಂಡಿಯಿಂದ ಮಧುರಖಂಡಿಗೆ ಸಿದ್ದರಾಮಯ್ಯ ಹೊರಟಿದ್ದರು. ಈ ವೇಳೆ ತೇರದಾಳದಿಂದ ಜಮಖಂಡಿ ಕಡೆ ಬರುತ್ತಿದ್ದ ತಾಯಿ, ಮಗನಿದ್ದ ಹೀರೋ ಸ್ಪ್ಲೆಂಡರ್ ಪ್ಲಸ್‌ ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಸ್ಥಳದಲ್ಲೇ ಎಕ್ಸೆಲ್‌ ಸವಾರ ಸಿದ್ದರಾಮಯ್ಯ ಹಿಡಕಲ್ಲ ಮೃತಪಟ್ಟಿದ್ದಾರೆ.

ಮತ್ತೊಂದು ಬೈಕ್‌‌‌ನಲ್ಲಿದ್ದ ಗಾಯಾಳುಗಳು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

Road Accident : ಹೆದ್ದಾರಿಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ಗೆ ‌ವೃದ್ಧ ಸಾವು; ಯುವಕನ ತಲೆ ಮೇಲೆ ಹರಿದ ಟ್ಯಾಂಕರ್‌

ಬೆಂಗಳೂರು: ವಾಟರ್ ಟ್ಯಾಂಕರ್ ವಾಹನಕ್ಕೆ ಯುವಕನೊರ್ವ (Road Accident) ಬಲಿಯಾಗಿದ್ದಾನೆ. ಕಿರಣ್ ಕುಮಾರ್ (21) ಮೃತಪಟ್ಟವನು. ಬೆಂಗಳೂರಿನ ಕೊತ್ತನೂರು ದಿಣ್ಣೆ ಆರ್‌ಬಿಐ ಲೇಔಟ್‌ನಲ್ಲಿ ಬೆಳಗ್ಗೆ 9.30ಕ್ಕೆ ಈ ಅಪಘಾತ ಸಂಭವಿಸಿದೆ.

ಬೇಕರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕಿರಣ್‌ ಕುಮಾರ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‌ನಿಂದ ಕೆಳಗೆ ಬಿದ್ದ ಕಿರಣ್‌ ತಲೆ ಮೇಲೆ ಟ್ಯಾಂಕರ್‌ ಹರಿದಿದೆ. ಅಪಘಾತದಲ್ಲಿ ಕಿರಣ್‌ ಕುಮಾರ್‌ ತಲೆ ನಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೆ.ಎಸ್.ಲೇಔಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಎಸ್‌ ಲೇಔಟ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಾಟರ್‌ ಟ್ಯಾಂಕರ್‌ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: Self Harming: ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

ಸ್ಕೂಟರ್‌ಗೆ ಗುದ್ದಿದ ಕಾರು; ಹಾರಿ ಬಿದ್ದ ವೃದ್ಧ ಸ್ಪಾಟ್‌ ಡೆತ್‌

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತಕ್ಕೆ ವೃದ್ಧನೊರ್ವ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಡಿವೈಡರ್ ಬಳಿ ರಸ್ತೆ ದಾಟುವಾಗ ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಹಾರಿ ಬಿದ್ದ ವೃದ್ಧ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು ಗ್ರಾಮಾಂತರದ ದಾಬಸ್ ಪೇಟೆ ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಮೇಶ್ವರ ಗೇಟ್ ಬಳಿ ಅಪಘಾತ ನಡೆದಿದೆ. ನಾರನಹಳ್ಳಿ ಗ್ರಾಮದ ಮಾಳಪ್ಪ (80) ಮೃತ ದುರ್ದೈವಿ. ರಾಮೇಶ್ವರ ಗೇಟ್‌ನಲ್ಲಿ ರಸ್ತೆ ದಾಟುವಾಗ ದಾಬಸ್ ಪೇಟೆ ಕಡೆಯಿಂದ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೆ ಮಾಳಪ್ಪ ಸಾವನ್ನಪ್ಪಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Boiler Blast: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ; ತಪ್ಪಿದ ಬಹುದೊಡ್ಡ ಅನಾಹುತ

Boiler Blast: ಮತ್ತೆ ರಾಜ್ಯದಲ್ಲಿ  ಬಾಯ್ಲರ್ ಸ್ಫೋಟದ ಸದ್ದು ಕೇಳಿಸಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಭಾನುವಾರ ಮುಂಜಾನೆ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ನಸುಕಿನ ಜಾವ ಚಹಾ ಕುಡಿಯಲು 15 ಕಾರ್ಮಿಕರು ತೆರಳಿದ್ದ ವೇಳೆ ಬಾಯ್ಲರ್ ಸ್ಫೋಟಗೊಂಡಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

VISTARANEWS.COM


on

Boiler Blast
Koo

ವಿಜಯಪುರ: ಮತ್ತೆ ರಾಜ್ಯದಲ್ಲಿ  ಬಾಯ್ಲರ್ ಸ್ಫೋಟದ ಸದ್ದು ಕೇಳಿಸಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಭಾನುವಾರ ಮುಂಜಾನೆ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ (Boiler Blast).

ನಸುಕಿನ ಜಾವ ಚಹಾ ಕುಡಿಯಲು 15 ಕಾರ್ಮಿಕರು ತೆರಳಿದ್ದ ವೇಳೆ ಬಾಯ್ಲರ್ ಸ್ಫೋಟಗೊಂಡಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಹಿಂದೆಯೂ ನಡೆದಿತ್ತು

ಮುಂದಿನ ಸೀಸನ್‌ಗೆ ಕಬ್ಬು ನುರಿಸಲು ಸಿದ್ಧತೆ ನಡೆಸುತ್ತಿದ್ದ ವೇಳೆ ಕಾರ್ಖಾನೆಯ ಬಾಯ್ಲರ್ ಬ್ಲಾಸ್ಟ್ ಆಗಿದೆ. ಈ‌ ಹಿಂದೆಯೂ ಇಲ್ಲಿ ಇದೇ ರೀತಿಯ ಅನಾಹುತ ಸಂಭವಿಸಿತ್ತು. 2023ರ ಮಾರ್ಚ್ 4ರಂದು ಬಾಯ್ಲರ್ ಸ್ಫೋಟಗೊಂಡು
ಓರ್ವ ಕಾರ್ಮಿಕ ಮೃತಪಟ್ಟು ಇತರ ನಾಲ್ಕು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದ್ದವು. ಅದಾಗಿ ಒಂದೂವರೆ ವರ್ಷ ಕಳೆಯುವಷ್ಟರಲ್ಲಿ ಮತ್ತೆ ಬಾಯ್ಲರ್ ಸ್ಫೋಟಗೊಂಡಿದೆ.

ಇಂದು ಮತ್ತೆ ಬಾಯ್ಲರ್ ಸ್ಫೋಟಗೊಂಡಿರುವ ಘಟನೆಗೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳಪೆ ಬಾಯ್ಲರ್ ಅಳವಡಿಸಿರುವುದೇ ಅವಘಡಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಈ‌ ಹಿಂದಿನ ಆಡಳಿತ ಮಂಡಳಿ ಅಧ್ಯಕ್ಷ ಶಶಿಕಾಂತಗೌಡ ಪಾಟೀಲ್ ಕಳಪೆ ಗುಣಮಟ್ಟದ ಬಾಯ್ಲರ್ ನಿರ್ಮಾಣ ಮಾಡಿದ್ದಾರೆ ಎನ್ನುವ ದೂರು ಕೂಡ ಕೇಳಿ ಬಂದಿದೆ. 50 ಕೋಟಿ ರೂ. ವೆಚ್ಚದಲ್ಲಿ ಬಾಯ್ಲರ್ ನಿರ್ಮಾಣ ಮಾಡಲಾಗಿತ್ತು. ಶಶಿಕಾಂತಗೌಡ ಪಾಟೀಲ್ ಅವರು ನಿರ್ಮಾಣದ ಅನುಭವ ಇಲ್ಲದ‌ ಪೂನಾ ಮೂಲದ ಎಸ್‌.ಎಸ್. ಎಂಜಿನಿಯರಿಂಗ್‌ಗೆ ಬಾಯ್ಲರ್ ನಿರ್ಮಾಣ ಕಾಮಗಾರಿ ನೀಡಿದ್ದರು ಎನ್ನಲಾಗಿದೆ.

ತನಿಖೆಗೆ ಆಗ್ರಹ

ಶಶಿಕಾಂತಗೌಡ ಪಾಟೀಲ್ ಅಧ್ಯಕ್ಷತೆ ಅವಧಿಯ ಕಾಮಗಾರಿಗಳು ಹಾಗೂ ಬಾಯ್ಲರ್ ಸ್ಫೋಟದ ಕುರಿತು ಉನ್ನತ ಮಟ್ಟದ ತನಿಖೆಗೆ ಆಗ್ರಹ ಕೇಳಿ ಬಂದಿದೆ. ಪ್ರಕರಣವನ್ನು ಸಿಐಡಿ ಅಥವಾ ಸಿಬಿಐ ತನಿಖೆಗೆ ವಹಿಸಿಬೇಕು ಎನ್ನುವ ಕೂಗು ಜೋರಾಗಿದೆ.

ಅಥಣಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ

ಕೆಲವು ದಿನಗಳ ಹಿಂದೆ ಚಿಕ್ಕೋಡಿಯಲ್ಲಿ ಬಾಯ್ಲರ್ ಸ್ಫೋಟವಾಗಿ ಮಹಿಳೆ ಮೃತಪಟ್ಟಿದ್ದ ಘಟನೆ ನಡೆದಿತ್ತು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ನಡೆದ ಈ ಘಟನೆಯಲ್ಲಿ ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ಪ್ರಿಯಾ ಎಕ್ಸ್‌ಪೋರ್ಟ್ಸ್‌ ಕೈಗಾರಿಕಾ ಘಟಕದ ಬಾಯ್ಲರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿತ್ತು. ಅಥಣಿ ತಾಲೂಕಿನ ಸತ್ತಿ ಗ್ರಾಮದ ನಿವಾಸಿ ಸುನಂದಾ ಸಿದಪ್ಪ ತೇಲಿ (36) ಮೃತಪಟ್ಟಿದ್ದರು. ಗಾಯಗೊಂಡವರನ್ನು ಅಥಣಿ ಪಟ್ಟಣದ ಹಾಗೂ ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಗೋಡೆ ನುಜ್ಜುಗೊಜ್ಜಾಗಿದ್ದು, ಕೆಲ ಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: Boiler blast : ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ, ಐವರು ಕಾರ್ಮಿಕರಿಗೆ ಗಂಭೀರ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

Continue Reading

ಕ್ರೈಂ

Crime News: ಗಾಂಜಾ ಮತ್ತಿನಲ್ಲಿ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಚಾಲಕ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

Crime News: ಗಾಂಜಾ ಮತ್ತಿನಲ್ಲಿ ಚಾಲಕನೋರ್ವ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಘಟನೆ ಕೊಪ್ಪಳ ನಗರದ ಸಿಂಪಿ ಲಿಂಗಣ್ಣ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಇತ್ತ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ಕೆಲವು ತಿಂಗಳಿಂದ ಸಾರ್ವಜನಿಕರ ನೆಮ್ಮದಿ ಕೆಡಿಸಿದ್ದ ಕಳ್ಳರು ಕೊನೆಗೂ ಸಿಕ್ಕಿ ಬಿದ್ದಿದ್ದಾರೆ. ಮಾತ್ರವಲ್ಲ ಅವರನ್ನು ಕೈಯಾರೆ ಹಿಡಿದು ಗ್ರಾಮಸ್ಥರು ಕೂಡಿ ಹಾಕಿ ಪೊಲೀಸರ ವಶಕ್ಕೆ ನೀಡಿದ್ದಾರೆ.

VISTARANEWS.COM


on

Crime News
Koo

ಕೊಪ್ಪಳ: ಗಾಂಜಾ ಮತ್ತಿನಲ್ಲಿ ಚಾಲಕನೋರ್ವ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಘಟನೆ ಕೊಪ್ಪಳ ನಗರದ ಸಿಂಪಿ ಲಿಂಗಣ್ಣ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದ್ದು, ಪೊಲೀಸರು ಕಾರು ಚಾಲಕನ್ನು ವಶಕ್ಕೆ ಪಡೆದಿದ್ದಾರೆ (Crime News).

ಕಾರು ಚಾಲಕನನ್ನು ವಿಶ್ವಾಸ್‌ ಎಂದು ಗುರುತಿಸಲಾಗಿದೆ. ಈತ ಕಾರು ಚಲಾಯಿಸಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮುಂದೆ‌ ನಿಲ್ಲಿಸಿದ್ದ ಬೈಕ್‌ಗಳಿಗೆ ಗುದ್ದಿದ್ದಾನೆ. ಈ ವೇಳೆ ಈತ ಅಮಲಿನಲ್ಲಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನೆ ವಿವರ

ಶನಿವಾರ ರಾತ್ರಿ ವಿಶ್ವಾಸ್‌ ಕಾರು ಚಲಾಯಿಸಿಕೊಂಡು ಬಂದಿದ್ದು, ಈ ವೇಳೆ ಆತ ಅಮಲಿನಲ್ಲಿದ್ದುದರಿಂದ ನಿಯಂತ್ರಣ ಸಿಗದೆ ಬಾರ್‌ ಮುಂದೆ ನಿಲ್ಲಿಸಿದ್ದ ಸುಮಾರು 10 ಬೈಕ್‌ಗಳಿಗೆ ಗುದ್ದಿದ್ದಾನೆ. ಇದರಿಂದ ಬೈಕ್‌ಗಳಿಗೆ ಹಾನಿಯಾಗಿದ್ದು, ಬೈಕ್‌ ಸವಾರರು ಆತನೊಂದಿಗೆ ವಾಗ್ವಾದ ನಡೆಸಿದರು. ವಿಶ್ವಾಸ್‌ ಗಾಂಜಾ ಸೇವಿಸಿದ ಮತ್ತಿನಲ್ಲಿ ಕಾರು ಚಲಾಯಿಸಿ ಗುದ್ದಿದ್ದಾನೆ ಎಂದು ಆರೋಪಿಸಿ ಬೈಕ್‌ ಸವಾರರು ಆತನನ್ನು ತರಾಟೆಗೆ ತೆಗೆದುಕೊಂಡರು.

ಬಳಿಕ ಘಟನಾ ಸ್ಥಳಕ್ಕೆ ನೂತನ ಎಸ್‌ಪಿ ಡಾ. ರಾಮ್ ಅರಸಿದ್ದಿ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದರು. ಸದ್ಯ ಕಾರು ಚಾಲಕ ವಿಶ್ವಾಸನನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಗದಗ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ಕೆಲವು ತಿಂಗಳಿಂದ ಸಾರ್ವಜನಿಕರ ನೆಮ್ಮದಿ ಕೆಡಿಸಿದ್ದ ಕಳ್ಳರು ಕೊನೆಗೂ ಸಿಕ್ಕಿ ಬಿದ್ದಿದ್ದಾರೆ. ಮಾತ್ರವಲ್ಲ ಅವರನ್ನು ಕೈಯಾರೆ ಹಿಡಿದು ಗ್ರಾಮಸ್ಥರು ಕೂಡಿ ಹಾಕಿ ಪೊಲೀಸರ ವಶಕ್ಕೆ ನೀಡಿ ತಕ್ಕ ಪಾಠ ಕಲಿಸಿದ್ದಾರೆ.

ಹಮ್ಮಿಗಿ ಗ್ರಾಮದಲ್ಲಿ ಕೆಲವು ತಿಂಗಳಿಂದ ಕಳ್ಳತನ ನಿರಂತವಾಗಿ ನಡೆಯುತ್ತಿತ್ತು. ರೈತರ ಟ್ರ್ಯಾಕ್ಟರ್ ಸಾಮಗ್ರಿ, ಮೋಟರ್, ಪಂಪ್ ಸೆಟ್ ಕಳವಾಗುತ್ತಿದ್ದವು. ಮಾತ್ರವಲ್ಲ ಮೇಕೆ, ಕುರಿಗಳನ್ನೂ ಕಳ್ಳರು ಹೊತ್ತೊಯ್ಯುತ್ತಿದ್ದರು. ಇದು ಗ್ರಾಮಸ್ಥರಿಗೆ ತಲೆ ನೋವಾಗಿ ಪರಿಣಮಿಸಿತ್ತು. ಮುಂಡರಗಿ ಪೊಲೀಸ್ ಠಾಣೆಗೆ ಸಾಕಷ್ಟು ಬಾರಿ ದೂರು ನೀಡಿದ್ದರೂ ಕಳವು ಪ್ರಕರಣ ನಿಯಂತ್ರಣಕ್ಕೆ ಬಂದಿರಲಿಲ್ಲ.

ಪ್ರತಿ ಬಾರಿಯೂ ತಪ್ಪಿಸಿಕೊಳ್ಳುತ್ತಿದ್ದ ಕಳ್ಳರ ಅದೃಷ್ಟ ಶನಿವಾರ ಕೈಕೊಟ್ಟಿತ್ತು. ಎಂದಿನಂತರ ಕಳ್ಳತನಕ್ಕೆ ಇಳಿದ ಗ್ಯಾಂಗ್‌ ಅನ್ನು ಗ್ರಾಮಸ್ಥರು ರೆಡ್‌ ಹ್ಯಾಂಡಾಗಿ ಹಿಡಿದು ಗ್ರಾಮ ಪಂಚಾಯತ್‌ನಲ್ಲಿ ಕೂಡಿ ಹಾಕಿ ಬಳಿಕ ಪೊಲೀಸರಿಗೆ ಒಪ್ಪಿಸಿದರು. ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ತನಿಖೆ ನಡೆಲಾಗುತ್ತಿದೆ. ʼʼಗ್ರಾಮದಲ್ಲಿ ಕೆಲವು ತಿಂಗಳಿಂದ ನಿರಂತರ ಕಳ್ಳತನ ನಡೆಯುತ್ತಿತ್ತು. ಪೊಲೀಸ್‌ ಠಾಣೆಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಆದರೆ ಇದೀಗ ಕಳ್ಳರ ಗ್ಯಾಂಗ್‌ ಸಿಕ್ಕಿ ಬಿದ್ದಿದೆ. ಅವರನ್ನು ರೆಡ್‌ ಹ್ಯಾಂಡಾಗಿ ಹಿಡಿದು ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ಕೂಡಿ ಹಾಕಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದೇವೆʼʼ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Indecent Behaviour: ಮಹಿಳೆಯರಿಗೆ ಮರ್ಮಾಂಗ ತೋರಿಸಿ, ಅಸಭ್ಯ ವರ್ತನೆ; ಕಾಮುಕನಿಗೆ ಹಿಗ್ಗಾಮುಗ್ಗಾ ಬಾರಿಸಿದ ಜನ!

Continue Reading

ಮಳೆ

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

Rain News : ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯು (Karnataka weather Forecast) ಅಬ್ಬರಿಸಲಿದ್ದು, ಗಾಳಿ ವೇಗವು ಗಂಟೆಗೆ 40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

VISTARANEWS.COM


on

By

karnataka weather Forecast
ಉಡುಪಿಯಲ್ಲಿ ರಸ್ತೆಯೇ ಕಾಣದಷ್ಟು ಅಬ್ಬರಿಸಿರುವ ಮಳೆ.. ರಸ್ತೆ ಕಾಣದೆ ಹೆಡ್‌ಲೈಟ್‌ ಹಾಕಿ ವಾಹನಗಳ ಸಂಚಾರ
Koo

ಬೆಂಗಳೂರು: ರಾಜ್ಯಾದ್ಯಂತ‌ ಮಳೆ ಅಬ್ಬರ (Karnataka Weather Forecast) ಮುಂದುವರಿದಿದೆ. ಕರ್ನಾಟಕ ಕರಾವಳಿಯಲ್ಲಿ ಭಾನುವಾರ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗಲಿದೆ. ಪ್ರತ್ಯೇಕ ಸ್ಥಳದಲ್ಲಿ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Heavy Rain Alert) ಸಾಧ್ಯತೆಯಿದೆ. ಇನ್ನೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ, ಕೆಲವಡೆ ಮಧ್ಯಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮಂಡ್ಯ, ರಾಮನಗರ, ಮೈಸೂರು ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಇನ್ನೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಯಚೂರು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಭಾಗದಲ್ಲಿ ಮಳೆಯಾಗಲಿದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

ಇದನ್ನೂ ಓದಿ: BESCOM Order : ವಿದ್ಯುತ್‌ ಕಂಬಗಳ ಮೇಲೆ ಅನಧಿಕೃತ ಕೇಬಲ್‌ ತೆರವಿಗೆ ಗಡುವು; ಬಿಸಿ ಮುಟ್ಟಿಸಲು ಸಜ್ಜಾದ ಬೆಸ್ಕಾಂ

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

40 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತಗೆ ಬೆಳಗಾವಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

KAS: 2024ರ ಜುಲೈ 6ರಿಂದ ಜುಲೈ 21ರವರೆಗೆ 2017-18ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು ಅವಕಾಶ ನೀಡಿದೆ. ಈ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್‌ 25ರಂದು ನಡೆಸಲು ಕೂಡ ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿದೆ.

VISTARANEWS.COM


on

KAS
Koo

ಬೆಂಗಳೂರು: 2017-18ನೇ ಸಾಲಿನಲ್ಲಿ ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ (KAS) ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission) ಸಿಹಿ ಸುದ್ದಿ ನೀಡಿದೆ. ಹೌದು, 2017-18ರಲ್ಲಿ ಕೆಎಎಸ್‌ ನೇಮಕಾತಿಗೆ ಅರ್ಜಿ ಸಲ್ಲಿಸಿದವರಿಗೆ 2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ ಕಲ್ಪಿಸಲಾಗಿದ್ದು, ಇದರಿಂದ ಸಾವಿರಾರು ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಬಹುದಾಗಿದೆ.

2024ರ ಜುಲೈ 6ರಿಂದ ಜುಲೈ 21ರವರೆಗೆ 2017-18ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು ಅವಕಾಶ ನೀಡಿದೆ. ಈ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್‌ 25ರಂದು ನಡೆಸಲು ಕೂಡ ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿದೆ. ಕೆಎಎಸ್‌ ಸೇರಿ ಇತರ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಜುಲೈ 21ರಂದು ನಡೆಸಲಾಗುವುದು ಎಂದು ಈಗಾಗಲೇ ಕೆಪಿಎಸ್‌ಸಿ ತಿಳಿಸಿತ್ತು. ಅಭ್ಯರ್ಥಿಗಳ ಮನವಿ ಮೇರೆಗೆ ಪರೀಕ್ಷಾ ದಿನಾಂಕ ಮುಂದೂಡಲಾಗಿತ್ತು.

ಕೆಪಿಎಸ್‌ಸಿ ಅಧಿಸೂಚನೆ

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್‌) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳು 26-02-2024 ರಂದು ಹೊರಡಿಸಿರುವ ಅಧಿಸೂಚನೆಯ ಹುದ್ದೆಗಳಿಗೆ / ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಕೆಪಿಎಸ್‌ಸಿ 15 ದಿನಗಳ ಕಾಲಾವಕಾಶ ನೀಡಬೇಕೆಂದು ಸರ್ಕಾರ ಸೂಚನೆ ನೀಡಿತ್ತು. ಅದರಂತೆ ಈಗ ಕೆಪಿಎಸ್‌ಸಿಯು ಅರ್ಜಿ ಸಲ್ಲಿಸಲು ಅವಕಾಶ ನೀಡುವ ಜತೆಗೆ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಘೋಷಿಸಿದೆ.

ವಿಶೇಷ ಸೂಚನೆ

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿಗೆ ಅರ್ಜಿ ಸಲ್ಲಿಸಿದವರಿಗೆ ಕೆಪಿಎಸ್‌ಸಿಯು ವಿಶೇಷ ಸೂಚನೆ ನೀಡಿದೆ. ಅಭ್ಯರ್ಥಿಗಳು ಈಗಾಗಲೇ ಕೆಪಿಎಸ್‌ಸಿ ಉದ್ಯೋಗ ಸಾಫ್ಟ್‌ವೇರ್‌ನಲ್ಲಿ ಒಟಿಆರ್‌ ಅನ್ನು ರಚಿಸಿದ್ದರೆ ಅವರು ನೇರವಾಗಿ ವೆಬ್‌ಸೈಟ್‌ಗೆ (https://kpsconline.karnataka.gov.in) ಭೇಟಿ ನೀಡಿ, ಲಾಗ್‌ಇನ್‌ ಆಗುವ ಮೂಲಕ ಅರ್ಜಿ ಸಲ್ಲಿಸಬಹುದು. ಒಟಿಆರ್‌ ರಚಿಸದವರು ವೆಬ್‌ಸೈಟ್‌ಗೆ ಭೇಟಿ ನೀಡಿ, ಮೊದಲು ಒಟಿಆರ್‌ ರಚಿಸಿ, ನಂತರ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದೆ.

ಇದನ್ನೂ ಓದಿ: Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Continue Reading
Advertisement
Building Collapse
ದೇಶ2 mins ago

Building Collapse: ಐದು ಅಂತಸ್ತಿನ ಕಟ್ಟಡ ಧರಾಶಾಹಿ- ಏಳು ಜನ ದಾರುಣ ಸಾವು

Kannada New Movie Not Out Trailer out
ಸ್ಯಾಂಡಲ್ ವುಡ್9 mins ago

Kannada New Movie: ಕುತೂಹಲ ಮೂಡಿಸಿದೆ ʻನಾಟ್ ಔಟ್ʼ ಚಿತ್ರದ ಟ್ರೈಲರ್‌!

Boiler Blast
ಕರ್ನಾಟಕ14 mins ago

Boiler Blast: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ; ತಪ್ಪಿದ ಬಹುದೊಡ್ಡ ಅನಾಹುತ

MS Dhoni Birthday
ಕ್ರೀಡೆ16 mins ago

MS Dhoni Birthday: 43ನೇ ವಸಂತಕ್ಕೆ ಕಾಲಿಟ್ಟ ಮಹೇಂದ್ರ ಸಿಂಗ್‌ ಧೋನಿ

Pearl Fashion
ಫ್ಯಾಷನ್35 mins ago

Pearl Fashion: ಮುತ್ತಿನ ಹಾರಕ್ಕೆ ಸಿಕ್ತು ನ್ಯೂ ಲುಕ್‌!

Crime News
ಕ್ರೈಂ49 mins ago

Crime News: ಗಾಂಜಾ ಮತ್ತಿನಲ್ಲಿ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಚಾಲಕ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

Health Food Tips
ಆರೋಗ್ಯ54 mins ago

Health Food Tips: ಈ ಕೆಲವು ಆಹಾರಗಳ ಸೇವನೆಯಿಂದ ಬಾಯಾರಿ, ಗಂಟಲೊಣಗಿ ನೀರು ಬೇಕೆನಿಸುತ್ತದೆ!

Toothbrush Using Tips
ಲೈಫ್‌ಸ್ಟೈಲ್1 hour ago

Toothbrush Using Tips: ನಿಮ್ಮ ಬ್ರಷ್‌ ಬದಲಿಸಿದ್ದು ಯಾವಾಗ ನೆನಪಿದೆಯಾ?

karnataka weather Forecast
ಮಳೆ2 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

Puri Jagannath Temple
Latest3 hours ago

Puri Jagannath Temple: ಪುರಿ ಜಗನ್ನಾಥ ದೇವಾಲಯದ 10 ಅದ್ಭುತ ಸಂಗತಿಗಳಿವು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ14 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ17 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ18 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು20 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ22 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ಟ್ರೆಂಡಿಂಗ್‌