Lakshmi Hebbalkar: ಅಂಗನವಾಡಿ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಲಕ್ಷ್ಮೀ ಹೆಬ್ಬಾಳಕರ್ - Vistara News

ಕರ್ನಾಟಕ

Lakshmi Hebbalkar: ಅಂಗನವಾಡಿ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿ ಇಲಾಖೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳನ್ನು ಸಲ್ಲಿಸಿದರು. ಸಚಿವೆ ಮಾಡಿರುವ ಮನವಿಯ ವಿವರ ಇಲ್ಲಿದೆ.

VISTARANEWS.COM


on

Minister Lakshmi Hebbalkar has submitted various proposals to the Union Minister seeking grant for the strengthening of the department
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ (Lakshmi Hebbalkar), ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಸೋಮವಾರ ಭೇಟಿ ಮಾಡಿ ಇಲಾಖೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳನ್ನು ಸಲ್ಲಿಸಿದರು.

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲು, ಮಕ್ಕಳಿಗೆ ಪೌಷ್ಠಿಕ ಆಹಾರ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ, ಯುಕೆಜಿ) ನೀಡಲು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡುವಂತೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್, ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಕೇಂದ್ರ ಸಹಭಾಗಿತ್ವದ ವಿವಿಧ ಯೋಜನೆಗಳ ಜಾರಿಗೆ ರಾಜ್ಯಕ್ಕೆ ಬಿಡುಗಡೆ ಆಗಬೇಕಿರುವ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರಲ್ಲದೆ, ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ಅಕ್ಕಿ, ಗೋಧಿಯನ್ನು ಕೂಡಲೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಸೌಕರ್ಯ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನದ ನೆರವು ಅಗತ್ಯವಿದೆ. ಹಾಗಾಗಿ, ಜರೂರಾಗಿ ಅನುದಾನವನ್ನು ಬಿಡುಗಡೆ ಮಾಡಬೇಕು. ಪ್ರಮುಖವಾಗಿ ರಾಜ್ಯದಲ್ಲಿ ಹೊಸದಾಗಿ ಸೃಜನೆಗೊಂಡ ತಾಲೂಕುಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮತ್ತು ವಿವಿಧ ಸೌಲಭ್ಯಗಳನ್ನು ಕೂಡಲೇ ಮಂಜೂರು ಮಾಡುವಂತೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್, ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಜಿ.ಸಿ. ಪ್ರಕಾಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್ ಸೇರಿದಂತೆ ಕೇಂದ್ರ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ: Eshwar Khandre: ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ; ಸಚಿವ ಈಶ್ವರ ಖಂಡ್ರೆ

ಹಲವು ಬೇಡಿಕೆಗಳ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ. ಎಲ್ಲ ಮಾಹಿತಿಗಳನ್ನು ಅತ್ಯಂತ ತಾಳ್ಮೆಯಿಂದ ಪಡೆದುಕೊಂಡಿರುವ ಕೇಂದ್ರ ಸಚಿವರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
-ಲಕ್ಷ್ಮೀ ಹೆಬ್ಬಾಳಕರ್, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

Karnataka Rain : ಬೆಂಗಳೂರು, ಧಾರವಾಡ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ (Heavy Rain Effect) ಮಳೆಯಾಗಿದ್ದು, ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಮಳೆಗೆ ಮರಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಈ ಮಧ್ಯೆ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು/ಕಾರವಾರ: ಭಾನುವಾರವೂ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಕೆಲವೆಡೆ ಮಳೆಯು (Heavy Rain) ಅಬ್ಬರಿಸಿತ್ತು. ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣ (Karnataka Rain) ಇತ್ತು.. ಸಂಜೆ ಆಗುತ್ತಿದ್ದಂತೆ ಮೆಜೆಸ್ಟಿಕ್‌, ಕಾಟನ್‌ಪೇಟೆ, ಕೆಆರ್‌ ಮಾರ್ಕೆಟ್‌ ,ಟೌನ್ ಹಾಲ್, ಶಿವಾನಂದ ಸರ್ಕಲ್, ಮೈಸೂರು ಸರ್ಕಲ್ ಸುತ್ತಮುತ್ತ ಮಳೆಯಾಗಿದೆ. ಜಿಟಿ ಜಿಟಿಯಾಗಿ ಶುರುವಾದ ಮಳೆಯು ನಂತರ ಕೆಲ ಕಾಲ ಅಬ್ಬರಿಸಿತ್ತು. ಇತ್ತ ಧಾರವಾಡ ನಗರದಲ್ಲೂ ನಿರಂತರ ಮಳೆಯಾಗಿದೆ. ಬೆಳಗ್ಗೆಯಿಂದಲ್ಲೂ ಬಿಟ್ಟು ಬಿಡದೆ ಸುರಿಯುತ್ತಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಿಂದಾಗಿ ಸವಾರರು ಪರದಾಡಿದರು. ಧಾರವಾಡ ಗ್ರಾಮೀಣ ಕೆಲ ಭಾಗಗಳಲ್ಲಿ ಹೊರತುಪಡಿಸಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ.

ನಿರಂತರ ಮಳೆಗೆ ಗುಡ್ಡ ಕುಸಿತ

ಚಿಕ್ಕಮಗಳೂರಿನಲ್ಲಿ ಬಿಟ್ಟುಬಿಡದೆ ಮಳೆಯು ಸುರಿಯುತ್ತಿದ್ದು, ರಸ್ತೆ ಬದಿ ಗುಡ್ಡ ಕುಸಿತ ಹೆಚ್ಚಾಗುತ್ತಿದೆ. ಶೃಂಗೇರಿ ತಾಲೂಕಿನ ಕೂತು ಗೋಡು ಗ್ರಾಮದ ಬಳಿ ಘಟನೆ ನಡೆದಿದೆ. ಗುಡ್ಡ ಕುಸಿತದಿಂದಾಗಿ ಹಲವು ಗಂಟೆಗಳ ಕಾಲ ಸಂಚಾರ ಬಂದ್ ಆಗಿತ್ತು. ಅಧಿಕಾರಿಗಳು ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯದಲ್ಲಿ ತೊಡಗಿದ್ದರು. ಕಳೆದ ಏಳೆಂಟು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪದೆಪದೇ ಗುಡ್ಡದ ಮಣ್ಣು ಕುಸಿಯುತ್ತಿದೆ. ಹೀಗಾಗಿ ತಾಲೂಕು ಆಡಳಿತವು ಗುಡ್ಡಗಾಡು ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಅಂಕೋಲಾ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಗೆ ಮರವೊಂದು ಅಡ್ಡಲಾಗಿ ಬಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡಿತ್ತು. ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಇತ್ತ ಹೆದ್ದಾರಿ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆವರೆಗೆ ವಾಹನಗಳು ಹೆದ್ದಾರಿಯ ಮತ್ತೊಂದು ಬದಿಯಿಂದ ಸಂಚರಿಸುತ್ತಿದ್ದವು.

ಮುಂದುವರಿದ ಪ್ರವಾಸಿಗರ ಹುಚ್ಚಾಟ

ಬೆಳಗಾವಿಯ ಗೋಕಾಕ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ನೀರು ರಭಸವಾಗಿ ಧುಮ್ಮಿಕ್ಕುವ ಸ್ಥಳಗಳಲ್ಲಿ ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಜತೆಗೆ ಕೆಲವರು ಬಂಡೆಗಲ್ಲುಗಳ‌ ಮೇಲೆ ಕುಳಿತು ಊಟ ಮಾಡುತ್ತಿರುವುದು ಕಂಡು ಬಂದಿದೆ. ಜಲಪಾತಕ್ಕೆ ಭದ್ರತೆ ‌ಒದಗಿಸದೆ ಪೊಲೀಸರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಚೂರು ಆಯ ತಪ್ಪಿದರೂ ಸಹ ಅಪಾಯ ಗ್ಯಾರಂಟಿ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಮಳೆಯಲ್ಲೇ ಟ್ರಾಫಿಕ್‌ಗೆ ಸಿಲುಕಿದ ಪ್ರವಾಸಿಗರು

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಿತಾಣಕ್ಕೆ ಪ್ರವಾಸಿಗರ ದಂಡು ಹರಿದುಬರುತ್ತಿದ್ದು, ಮಳೆಯಲ್ಲೇ ಟ್ರಾಫಿಕ್‌ನಲ್ಲಿ ಸಿಲುಕಿದರು. ಸುಮಾರು ಎರಡು ಗಂಟೆ ಕಾಲ ನಿಂತಲ್ಲೇ ನಿಲ್ಲುಂತಾಯಿತು. ವೀಕೆಂಡ್ ಹಿನ್ನೆಲೆಯಲ್ಲಿ ಸಾವಿರಾರು ಟೂರಿಸ್ಟ್‌ಗಳು ಆಗಮಿಸಿದ್ದರು.

ಇದನ್ನೂ ಓದಿ: Rain News: ಕರಾವಳಿಯಲ್ಲಿ ಮುಂದುವರಿದ ವರುಣನ ಅಬ್ಬರ; ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ

ಮಳೆಗೆ ಜಲಾಶಯಗಳು ಭರ್ತಿ!

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ರಾಜ್ಯದ ಹಲವೆಡೆ ಜಲಾಶಯಗಳು ಭರ್ತಿಯಾಗುತ್ತಿವೆ. ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯ ಭರ್ತಿಗೆ ಎರಡು ಅಡಿ ಬಾಕಿ‌ ಇದೆ. ಕೇರಳದ ವೈನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ಒಳಹರಿವು ಗಣನೀಯವಾಗಿ ಏರಿಕೆ ಆಗುತ್ತಿದೆ. ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಅಣೆಕಟ್ಟಾಗಿದೆ.

ಇತ್ತ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳಗೊಂಡಿದೆ. ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರೀ ಪ್ರಮಾಣ ಹೆಚ್ಚಳವಾಗುತ್ತಿದ್ದು, 24 ಗಂಟೆಗಳಲ್ಲಿ ಬರೋಬ್ಬರಿ 5 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ನಿನ್ನೆ ಶನಿವಾರ 13.90 ಟಿಎಂಸಿ ಇದ್ದ ನೀರಿನ ಸಂಗ್ರಹ ಇಂದು ಭಾನುವಾರ 18. 24 ಗೆ ಏರಿಕೆ ಆಗಿದೆ.

ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳ ಹರಿವು ಇರುವುದರಿಂದ ರೈತರಲ್ಲಿ ಸಂತಸ ಹೆಚ್ಚಿಸಿದೆ. ತುಂಗಭದ್ರಾ ಜಲಾಶಯ ಕರ್ನಾಟಕ, ಆಂಧ್ರ ತೆಲಂಗಾಣ ರಾಜ್ಯಗಳ ರೈತರ ಜೀವನಾಡಿ ಆಗಿದೆ. ಇದೇ ರೀತಿ ಒಳ ಹರಿವು ಹೆಚ್ಚಾದರೆ 10 ರಿಂದ 15 ದಿನದಲ್ಲಿ ಜಲಾಶಯ ಭರ್ತಿ ಆಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Dengue Cases in Mysore: ಮೈಸೂರಿನಲ್ಲಿ ಡೆಂಗ್ಯೂಗೆ ಜಯದೇವ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಸಾವು

Dengue Cases in Mysore: ಮೂರು ದಿನಗಳ ಹಿಂದೆ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೊಬ್ಬರು ಡೆಂಗ್ಯೂ ಜ್ವರದಿಂದ ಸಾವಿಗೀಡಾಗಿದ್ದಾರೆ.

VISTARANEWS.COM


on

Dengue Cases in Mysore
Koo

ಮೈಸೂರು: ಜಿಲ್ಲೆಯಲ್ಲಿ ಡೆಂಗ್ಯೂಗೆ ಎರಡನೇ ಬಲಿಯಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಲಲಿತಾ ಮೃತಪಟ್ಟವರು. ಮೂರು ದಿನಗಳ ಹಿಂದೆ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೊಬ್ಬರು ಡೆಂಗ್ಯೂ ಜ್ವರದಿಂದ (Dengue Cases in Mysore) ಸಾವಿಗೀಡಾಗಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. 3 ದಿನಗಳ ಹಿಂದೆ ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿತ್ತು. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ (32) ಮೃತ ಮೃತಪಟ್ಟಿದ್ದರು.

ಹಾಸನದಲ್ಲಿ ಶಂಕಿತ ಡೆಂಗ್ಯೂಗೆ 26 ವರ್ಷದ ಯುವತಿ ಬಲಿ

ಹಾಸನ: ಶಂಕಿತ ಡೆಂಗ್ಯೂಗೆ (Dengue Cases in Hassan) 26 ವರ್ಷದ ಯುವತಿ ಬಲಿಯಾಗಿರುವ ಘಟನೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಅರಸೀಕೆರೆ ತಾಲೂಕಿನ ಮುದುಡಿ ತಾಂಡ್ಯ ಗ್ರಾಮದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಜೂಲೂನಾಯ್ಕ-ಸುಮಿತ್ರಾದೇವಿ ಎಂಬುವವರ ಪುತ್ರಿ ಸುಪ್ರಿತಾ (26) ಮೃತ ಯುವತಿ. ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿರುವಾಗಲೇ ಸುಪ್ರಿತಾಗೆ ಬಹುಅಂಗಾಗ ವೈಫಲ್ಯವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸುಪ್ರಿತಾ ಮೃತಪಟ್ಟಿದ್ದಾಳೆ. ಇದರಿಂದ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ಸಾವಿನ ಸಂಖ್ಯೆ ಏಳಕ್ಕೆ ಏರಿದೆ.

ಇದನ್ನೂ ಓದಿ | Dengue fever: ಶಿರಸಿಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿನಿ ಸಾವು

Rat fever: ಡೆಂಗ್ಯೂ ರುದ್ರ ನರ್ತನದ ನಡುವೆ ಹಾವೇರಿಯಲ್ಲಿ ಬಾಲಕನಿಗೆ ಇಲಿ ಜ್ವರ!

ಹಾವೇರಿ: ಡೆಂಗ್ಯೂ ರುದ್ರ ನರ್ತನದ ನಡುವೆ ಜಿಲ್ಲೆಯಲ್ಲಿ ಇಲಿ ಜ್ವರ (Rat fever) ಪತ್ತೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಹಾವೇರಿ ತಾಲೂಕಿನ ಗ್ರಾಮವೊಂದರ 12 ವರ್ಷದ ಬಾಲಕನಿಗೆ ಇಲಿ ಜ್ವರ ದೃಢಪಟ್ಟಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದೊಂದು ವಾರದಿಂದ ಬಾಲಕ ಜ್ವರದಿಂದ ಬಳಲುತ್ತಿದ್ದ . ದಿನ ಬಿಟ್ಟು ದಿನ ಜ್ವರ ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕನಿಗೆ ಇಲಿ ಜ್ವರ ಸೋಂಕು ತಗುಲಿರುವುದು ಪತ್ತೆಯಾಗಿದೆ. ಸದ್ಯ ಬಾಲಕನ ಆರೋಗ್ಯ ಸ್ಥಿರವಾಗಿದೆ.

ಈ ಬಗ್ಗೆ ಜಿಲ್ಲಾಸ್ಪತ್ರೆಯ ಡಾ.ಭಾಗ್ಯ ಪ್ರತಿಕ್ರಿಯಿಸಿ, ಬಾಲಕನಿಗೆ ಇಲಿ ಜ್ವರ ಬಂದಿರುವುದು ನೆನ್ನೆ ಗೊತ್ತಾಗಿದೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಾಲಕನ‌ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ. ಡೆಂಗ್ಯೂ ಜ್ವರದ ಲಕ್ಷಣಗಳೇ ಇಲಿ ಜ್ವರ ಕಾಣಿಸಿಕೊಂಡವರಲ್ಲೂ ಕಂಡುಬರುತ್ತವೆ ಎಂದು ತಿಳಿಸಿದರು.

ಏನಿದು ಇಲಿ ಜ್ವರ, ಹೇಗೆ ಹರಡುತ್ತದೆ?

ವೈಜ್ಞಾನಿಕವಾಗಿ ಲೆಪ್ಟೊಸ್ಪಿರೋಸಿಸ್ ಎಂದು ಕರೆಯಲ್ಪಡುವ ಇಲಿ ಜ್ವರ, ಲೆಪ್ಟೊಸ್ಪೈರಾ ಎಂಬ ಬ್ಯಾಕ್ಟೀರಿಯಗಳ ಮೂಲಕ ಪ್ರಾಣಿಗಳಿಂದ ಮಾನವರಿಗೆ ಹರಡುವ ರೋಗವಾಗಿದೆ. ಮುಖ್ಯವಾಗಿ ಇಲಿ, ಹೆಗ್ಗಣಗಳಿಂದ ಈ ರೋಗಾಣುಗಳು ಹರಡುವುದರಿಂದ ಇದಕ್ಕೆ ಇಲಿ ಜ್ವರವೆಂದು ಹೆಸರು. ಈ ರೋಗ ಕೇವಲ ಮನುಷ್ಯರನ್ನಷ್ಟೇ ಅಲ್ಲ ದನ, ಎಮ್ಮೆ, ಕುರಿ, ಮೇಕೆ, ಹಂದಿ, ನಾಯಿ, ಬೆಕ್ಕು, ವನ್ಯಮೃಗಗಳು ಹೀಗೆ ಬಹುತೇಕ ಪ್ರಾಣಿಗಳನ್ನು ಬಾಧಿಸುತ್ತದೆ.

ಹೆಚ್ಚಾಗಿ ಇಲಿ, ಹೆಗ್ಗಣಗಳ ಮೂಲಕ ಈ ರೋಗ ಹರಡುತ್ತದೆ. ರೋಗಪೀಡಿತ ಇಲಿಗಳು ಹಾಗೂ ಪ್ರಾಣಿಗಳ ಮೂತ್ರದ ಮೂಲಕ ಈ ಕಾಯಿಲೆ ಹರಡುತ್ತದೆ. ಆದರೆ ಮನುಷ್ಯನಿಂದ ಮನುಷ್ಯನಿಗೆ ಇದು ಹರಡುವುದಿಲ್ಲ. ಮಣ್ಣಿನಲ್ಲಿ ಈ ರೋಗಾಣುಗಳು ಸುಮಾರು 6 ಗಂಟೆವರೆಗೆ ಜೀವಂತವಿದ್ದರೆ, ನೀರಿನಲ್ಲಿ ಅರು ತಿಂಗಳವರೆಗೆ ಬದುಕಬಲ್ಲವು. ಹಾಗಾಗಿ ಮಳೆಗಾಲದಲ್ಲಿ ಈ ರೋಗದ ಹಾವಳಿ ಜಾಸ್ತಿ ಇರುತ್ತದೆ.

ಇದನ್ನೂ ಓದಿ | Dengue fever: ಹಾವೇರಿಯಲ್ಲಿ ಶಂಕಿತ ಡೆಂಗ್ಯೂಗೆ 9 ವರ್ಷದ ಮಗು ಬಲಿ

ಈ ಸೋಂಕು ತಗುಲಿದರೆ ಜ್ವರ, ತಲೆನೋವು, ಸ್ನಾಯು ನೋವು, ಆಯಾಸ ಮತ್ತು ವಾಂತಿಯಂತಹ ರೋಗಲಕ್ಷಣಗಳು ಇರುತ್ತವೆ. ಕೆಲವು ಪ್ರಕರಣಗಳಲ್ಲಿ ಇದು ಮೂತ್ರಪಿಂಡ ವೈಫಲ್ಯ ಅಥವಾ ಸಾವಿಗೆ ಕಾರಣವಾಗಬಹುದು. ಹೀಗಾಗಿ ಸಕಾಲದಲ್ಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವುದು ಅಗತ್ಯವಾಗಿದೆ.

Continue Reading

ಕರ್ನಾಟಕ

Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

Mahadayi Water Dispute: ಮಹದಾಯಿ ಹೋರಾಟಗಾರರ ವಿರೋಧದ ನಡುವೆಯೂ ಬೆಳಗಾವಿಗೆ ಕೇಂದ್ರದ ತಂಡ ಆಗಮಿಸಿದೆ. ಸತತ ಮಳೆಯ ನಡುವೆ ಮಹದಾಯಿಗೆ ಸೇರುವ ಕಾಲುವೆಗಳು, ನಾಲೆಗಳನ್ನು ಪ್ರವಾಹ್‌ ತಂಡ ವೀಕ್ಷಿಸಿತು.

VISTARANEWS.COM


on

Mahadayi Water Dispute
Koo

ಬೆಳಗಾವಿ: ಮಹದಾಯಿ ಜಲಾನಯನ ಪ್ರದೇಶಕ್ಕೆ (Mahadayi Water Dispute) ಕೇಂದ್ರದ ಪ್ರವಾಹ್ ತಂಡ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಸತತ ಮಳೆಯ ನಡುವೆ ಮಹದಾಯಿಗೆ ಸೇರುವ ಕಾಲುವೆಗಳು, ನಾಲೆಗಳನ್ನು ಪ್ರವಾಹ್‌ ತಂಡ ವೀಕ್ಷಿಸಿ, ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮಹದಾಯಿ ಹೋರಾಟಗಾರರ ವಿರೋಧದ ನಡುವೆಯೂ ಬೆಳಗಾವಿಗೆ ಕೇಂದ್ರದ ತಂಡ ಆಗಮಿಸಿದೆ. ರಾಜ್ಯಕ್ಕೆ ಆಗಮಿಸಿದ ಕೇಂದ್ರದ ಮಹದಾಯಿ ಪ್ರವಾಹ್ ತಂಡಕ್ಕೆ ಬೆಳಗಾವಿಯ ಚೋರ್ಲಾ ಗಡಿಯಲ್ಲಿನಲ್ಲಿ ಅಧಿಕಾರಿಗಳು ಸ್ವಾಗತ ಕೋರಿದರು. ನೀರಾವರಿ ಇಲಾಖೆ ಅಧಿಕಾರಿಗಳು, ಸ್ಥಳೀಯ ಪೊಲೀಸರಿಂದ ಸ್ವಾಗತ ಕೋರಲಾಯಿತು. ಚೋರ್ಲ್ ಘಾಟ್ ಮತ್ತು ಹರತಾಳ ನಾಲಾ ವೀಕ್ಷಣೆ ಮಾಡಿದ ಅಧಿಕಾರಿಗಳು, ನಂತರ ಕಳಸಾ-ಬಂಡೂರಿ ನಾಲಾಗಳನ್ನು ವೀಕ್ಷಣೆ ಮಾಡಿದರು.

ಮಹದಾಯಿ ನದಿಯ ಹಲತ್ರಾ ನಾಲಾ ಮತ್ತು ಸೂರಲ್ ಕಾಲುವೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ನಿರಂತರ ಮಳೆ ಹಿನ್ನೆಲೆಯಲ್ಲಿ ಕೈಲಿ ಛತ್ರಿ ಹಿಡಿದು, ಗಮ್ ಶೂಗಳನ್ನು ಧರಿಸಿ ಅಧಿಕಾರಿಗಳು ನಾಲೆಗಳನ್ನು ವೀಕ್ಷಣೆ ಮಾಡಿದರು.

ಯಾವುದೇ ಪರವಾನಗಿ ಪಡೆಯದೇ ಕರ್ನಾಟಕ ಮಹದಾಯಿ ಯೋಜನೆ ಕಾಮಗಾರಿ ಆರಂಭಿಸಿದೆ ಎಂದು ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಆರೋಪಿಸಿದ್ದರು. ಸೆಂಟ್ರಲ್ ಟೀಂ ಭೇಟಿ ಬಳಿಕ ಕರ್ನಾಟಕದ ಬಣ್ಣ ಬಯಲಾಗಲಿದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೆ ಪ್ರವಾಹ್‌ ತಂಡವು ರಾಜ್ಯಕ್ಕೆ ಭೇಟಿ ನೀಡಿದೆ. ಕಣಕುಂಬಿಯಲ್ಲಿ ಸತತ ಮಳೆ ಹಿನ್ನೆಲೆಯಲ್ಲಿ ಜಿಗಣೆ ಕಾಟಕ್ಕೆ ಅಧಿಕಾರಿಗಳು ಹೈರಾಣಾಗಿದ್ದು ಕಂಡುಬಂತು. ಜಿಗಣೆಗಳ ಕಾಟದ ನಡುವೆಯೂ ಪ್ರತಿಯೊಂದು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದರು.

ಏನಿದು ಪ್ರವಾಹ್‌ ತಂಡ?

ಮಹದಾಯಿ ಜಲ ವಿವಾದದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಸಂಬಂಧ ಮಹದಾಯಿ ಪ್ರವಾಹ್‌ (ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಶೀಲ ನದಿ ಪ್ರಾಧಿಕಾರ) ಅನ್ನು ಕಳೆದ ವರ್ಷ ಕೇಂದ್ರ ಸರ್ಕಾರ ರಚನೆ ಮಾಡಿತ್ತು. ಗೋವಾ-ಕರ್ನಾಟಕ ನಡುವೆ ಮಹದಾಯಿ ನೀರಿನ ಹಂಚಿಕೆ ವಿವಾದ ಇರುವ ಹಿನ್ನೆಲೆಯಲ್ಲಿ ಮಹದಾಯಿ ಜಲಾನಯನ ಪ್ರದೇಶದಲ್ಲಿ ವಾಸ್ತವ ಸ್ಥಿತಿ ಪರಿಶೀಲನೆ ನಡೆಸಲು ಪ್ರವಾಹ್‌ ತಂಡ ಆಗಮಿಸಿದೆ.

ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲು ಮಹದಾಯಿ ನದಿಯ ಉಪ ನದಿಗಳಾಗಿರುವ ಕಳಸಾ-ಬಂಡೂರಿಯ ಸುಮಾರು 7.56 ಟಿಎಂಸಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸಲು ಕರ್ನಾಟಕ ಅನುಷ್ಠಾನ ಮಾಡಲು ಮುಂದಾಗಿರುವ ಕಳಸಾ-ಬಂಡೂರಿ ನಾಲಾ ಯೋಜನೆಗೆ ಗೋವಾ ವಿರೋಧ ವ್ಯಕ್ತಪಡಿಸುತ್ತಿದೆ. ಹೀಗಾಗಿ ಮಹದಾಯಿ ಜಲಾನಯನ ಪ್ರದೇಶದಲ್ಲಿ ವಾಸ್ತವ ಸ್ಥಿತಿ ಪರಿಶೀಲನೆ ನಡೆಸಲು ಪ್ರವಾಹ್‌ ತಂಡ ಆಗಮಿಸಿದೆ.

ಇದನ್ನೂ ಓದಿ | ಪಿಎಂ ಆವಾಸ್‌ ಯೋಜನೆಯ 40 ಸಾವಿರ ರೂ. ಪಡೆದು 11 ಸ್ತ್ರೀಯರು ಗೆಳೆಯರೊಂದಿಗೆ ಪರಾರಿ; ಕಂಗಾಲಾದ ಪತಿಯರು!

ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಅಧಿಕಾರಿಗಳ ಸಮ್ಮುಖದಲ್ಲಿ ಮಹದಾಯಿ ಜಲಾನಯನ ಪ್ರದೇಶದ ಪರಿಶೀಲನೆ ನಡೆಯಲಿದೆ. ನದಿ ನೀರನ್ನು ತಿರುಗಿಸಲು ಕರ್ನಾಟಕಕ್ಕೆ ಅನುಮತಿ ನೀಡಿದರೆ ಉಂಟಾಗುವ ಪರಿಣಾಮಗಳನ್ನು ಪರಿಶೀಲಿಸಲು ಜಲಪಾತಗಳು ಮತ್ತು ಅಣೆಕಟ್ಟುಗಳು ಸೇರಿದಂತೆ ಎಲ್ಲ ಪ್ರದೇಶಗಳಿಗೆ ಪ್ರವಾಹ್‌ ತಂಡದ ಸದಸ್ಯರು ಭೇಟಿ ನೀಡಲಿದ್ದಾರೆ.

Continue Reading

ಕಲಬುರಗಿ

Kalaburagi News : ಆಕ್ಸಿಜನ್ ಸೋರಿಕೆ! ತಾಲೂಕು ಆಸ್ಪತ್ರೆಯಿಂದ ಹೊರಗೆ ಓಡಿದ ರೋಗಿಗಳು

Kalaburagi News : ತಾಲೂಕು ಆಸ್ಪತ್ರೆ ಆವರಣದಲ್ಲಿದ್ದ ಘಟಕದಿಂದ ಆಕ್ಸಿಜನ್‌ ಸೋರಿಕೆ ಆಗಿತ್ತು. ಈ ವಿಷಯ ತಿಳಿದ ಆಸ್ಪತ್ರೆ ಸಿಬ್ಬಂದಿ ಹಾಗೂ ರೋಗಿಗಳು ಹೊರಗೆ ಓಡಿ ಬಂದಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕ ದಳ, ಪೊಲೀಸರು ದೌಡಾಯಿಸಿದ್ದರು.

VISTARANEWS.COM


on

By

kalaburagi news
Koo

ಕಲಬುರಗಿ: ಕಲಬುರಗಿ ಜಿಲ್ಲೆಯ (Kalaburagi News) ಚಿಂಚೊಳ್ಳಿ‌ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ (Oxygen leakage) ಆಗಿದೆ ಎಂಬ ಸುದ್ದಿ ಕೇಳಿ ರೋಗಿಗಳು ಶಾಕ್‌ ಆಗಿದ್ದರು. ಆಸ್ಪತ್ರೆ ಹಿಂಭಾಗದಲ್ಲಿದ್ದ ಆಕ್ಸಿಜನ್ ಘಟಕದಿಂದ ಸೋರಿಕೆಯಾಗಿ ಅರ್ಧ ಕಿಮೀ ವ್ಯಾಪ್ತಿವರೆಗೂ ವಾಸನೆ ಮೂಗಿಗೆ ಬಡಿದಿತ್ತು.

ನೋಡನೋಡುತ್ತಿದ್ದ ಒಬ್ಬರಿಂದ ಒಬ್ಬರಿಗೆ ಆಕ್ಸಿಜನ್‌ ಸೋರಿಕೆ ಸುದ್ದಿ ಹರಿದಾಡಿದೆ. ಬಳಿಕ ಆಸ್ಪತ್ರೆಯೊಳಗೆ ಇದ್ದ ಸಿಬ್ಬಂದಿ, ರೋಗಿಗಳು ಭಯಭೀತರಾಗಿ ಹೊರಗೆ ಓಡಿ ಬಂದು ಆವರಣದೊಳಗೆ ಬಂದು ಕುಳಿತುಕೊಳ್ಳುವಂತಾಯಿತು. ಇತ್ತ ಆಕ್ಸಿಜನ್‌ ಟ್ಯಾಂಕ್‌ ಸ್ಫೋಟಗೊಂಡಿದೆ ಎಂಬ ಸುದ್ದಿಯಿಂದಾಗಿ ವೈದ್ಯರು ಮತ್ತು ಸಿಬ್ಬಂದಿ ತಗ್ಗಿದ ವಸತಿಗೃಹಗಳನ್ನು ಖಾಲಿ ಮಾಡಿದ್ದವು.

kalaburagi News

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಚಿಂಚೊಳ್ಳಿ ಪೊಲೀಸರು ದೌಡಾಯಿಸಿದ್ದರು. ಪರಿಶೀಲನೆ ನಡೆಸಿದಾಗ ಆಕ್ಸಿಜನ್‌ ಟ್ಯಾಂಕ್ ತುಂಬಿದ್ದರಿಂದ ಅದರ ಒತ್ತಡವನ್ನು ಹೊರಹಾಕಿದೆ ಎಂದು ಗೊತ್ತಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕಲಬುರಗಿ ಡಿ.ಎಚ್.ಓ ಡಾ.ರತಿಕಾಂತ್ ಸ್ವಾಮಿ, ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂಬುದು ಸುಳ್ಳು ಸುದ್ದಿ. ಸಾರ್ವಜನಿಕರು ಆತಂಕ ಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

ಆಕ್ಸಿಜನ್‌ ಟ್ಯಾಂಕ್ ತುಂಬಿದ ನಂತರ ಅದರ ಒತ್ತಡವನ್ನು ಗ್ಯಾಸ್ ರೂಪದಲ್ಲಿ ಹೊರಹಾಕುವ ಸಾಮಾನ್ಯ ಪ್ರಕ್ರಿಯೆ ಆಗಿದೆ. ಆಸ್ಪತ್ರೆಯಲ್ಲಿನ 6 ಕೆ.ಎಲ್. ಸಾಮರ್ಥ್ಯದ ಟ್ಯಾಂಕಿಗೆ ಆಮ್ಲಜನಕ ಭರ್ತಿ ಮಾಡಿದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಎ, ಬಿ, ಸಿ ಎಂಬ ಸುರಕ್ಷತೆಯ ವಾಲ್‌ಗಳ ಮುಖೇನ ಹಂತ ಹಂತವಾಗಿ ಗ್ಯಾಸ್ ಲೀಕ್ ಮಾಡುತ್ತದೆ. ಹೀಗಾಗಿ ಸಾರ್ವಜನಿಕರು ಯಾರು ಆತಂಕ ಪಡಬೇಕಾಗಿಲ್ಲಾ ಎಂದರು.

ಇದನ್ನೂ ಓದಿ: Leopard attack : ರಾಯಚೂರಿನಲ್ಲಿ ಮೂವರ ಮೇಲೆ ದಾಳಿ ಮಾಡಿ ಕಾಲ್ಕಿತ್ತ ಚಿರತೆ!

ಐದು ಅಂತಸ್ತಿನ ಕಟ್ಟಡ ಧರಾಶಾಹಿ- ಏಳು ಜನ ದಾರುಣ ಸಾವು

ಅಹ್ಮದಾಬಾದ್‌: ಗೇಮಿಂಗ್‌ ಜೋನ್‌(Gaming zone)ನಲ್ಲಿ ಭಾರೀ ಬೆಂಕಿ ಅವಘಡ(Fire Accident)ದ ಬಳಿಕ ಗುಜರಾತ್‌(Gujarat)ನಲ್ಲಿ ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಐದು ಅಂತಸ್ತಿನ ಕಟ್ಟಡ(Building Collapse) ಧರಾಶಾಹಿಯಾಗಿದ್ದು, ಏಳು ಜನ ಧಾರುಣವಾಗಿ ಮೃತಪಟ್ಟಿದ್ದಾರೆ. ಸೂರತ್‌ನಲ್ಲಿ ಈ ಘಟನೆ ನಡೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಅವಶೇಷದಡಿಯಲ್ಲಿ ಹಲವು ಜನ ಸಿಲುಕಿರುವ ಸಾಧ್ಯತೆ ಇದೆ.

ಘಟನೆ ಬಗ್ಗೆ ಸೂರತ್‌ನ ಅಗ್ನಿಶಾಮಕ ಅಧಿಕಾರಿ ಬಸಂತ್‌ ಪರೀಕ್‌ ಮಾಹಿತಿ ನೀಡಿದ್ದು, ಶನಿವಾರ ರಾತ್ರಿ ಈ ದುರಂತ ಸಂಭವಿಸಿದೆ. ರಾತ್ರಿಯಿಡೀ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಏಳು ಮೃತ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಕನಿಷ್ಠ ಆರರಿಂದ ಏಳು ಜನರು ಇನ್ನೂ ಅವಶೇಷಗಳಲ್ಲಿ ಸಿಕ್ಕಿಬಿದ್ದಿರುವ ಭಯವಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಎಸ್‌ಡಿಆರ್‌ಎಫ್ (ರಾಜ್ಯ ವಿಪತ್ತು ನಿರ್ವಹಣಾ ಪಡೆ) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ನಡೆಸುತ್ತಿವೆ ಎಂದು ಹೇಳಿದ್ದಾರೆ.

ಸುಮಾರು ಐದು ಫ್ಲಾಟ್‌ಗಳಿಗಳನ್ನು ಹೊಂದಿರುವ ಈ ಕಟ್ಟಡವನ್ನು 2016-17ರಲ್ಲಿ ನಿರ್ಮಿಸಲಾಗಿದೆ. ಈ ಪ್ರದೇಶದಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರು ಈ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದರು. ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದಾಗ, ಒಳಗೆ ಸಿಲುಕಿರುವವರ ಧ್ವನಿಯನ್ನು ನಾವು ಕೇಳಿದ್ದೇವೆ. ನಾವು ಮಹಿಳೆಯನ್ನು ಜೀವಂತವಾಗಿ ಅವಶೇಷಗಳಿಂದ ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿದ್ದೇವೆ. ಸುಮಾರು ಐದು ಜನರು ಇನ್ನೂ ಒಳಗೆ ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಮೇ 25ರಂದು ಸಂಜೆ ಭೀಕರ ಅಗ್ನಿ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. 9 ಮಕ್ಕಳು, ಮಹಿಳೆಯರು ಸೇರಿ 32 ಮಂದಿ ಮೃತಪಟ್ಟಿರುವ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿತ್ತು.

ಗೇಮಿಂಗ್‌ ಜೋನ್‌ ಕಟ್ಟಡದಲ್ಲಿ ನೂರಾರು ಮಕ್ಕಳು ಹಾಗೂ ಅವರ ತಾಯಂದಿರು ಇದ್ದರು. ವೀಕೆಂಡ್‌ ಇರುವ ಕಾರಣ ಮಕ್ಕಳು ಆಟವಾಡಲಿ ಎಂಬುದಾಗಿ ಟಿಆರ್‌ಪಿ ಗೇಮಿಂಗ್‌ ಜೋನ್‌ಗೆ ಕರೆದುಕೊಂಡು ಹೋಗಿದ್ದರು. ಇದೇ ವೇಳೆ ಏಕಾಏಕಿ ಅಗ್ನಿ ದುರಂತ ಸಂಭವಿಸಿದ ಕಾರಣ 32 ಜನ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಲ್ಲಿ ಮಹಿಳೆಯರು ಹಾಗೂ ಮಕ್ಕಳು ಕೂಡ ಸೇರಿದ್ದಾರೆ. ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ ಸಂಭವಿಸಲು ನಿಖರ ಕಾರಣ ತಿಳಿದುಬಂದಿಲ್ಲ.

ರಾಜ್‌ಕೋಟ್‌ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನೂ ಘೋಷಣೆ ಮಾಡಿದ್ದಾರೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನೂ (SIT) ರಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Shashi Tharoor
ಕ್ರೀಡೆ26 seconds ago

Shashi Tharoor: ಜಿಂಬಾಬ್ವೆ ಎದುರು ಭಾರತಕ್ಕೆ ಸೋಲು: ಲೇವಡಿ ಮಾಡಿದ ಶಶಿ ತರೂರ್

Karnataka Rain
ಮಳೆ6 mins ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

Money Guide
ಮನಿ-ಗೈಡ್6 mins ago

Money Guide: ನಿಮ್ಮ ಎಲ್‌ಐಸಿ ಪಾಲಿಸಿ ಲ್ಯಾಪ್ಸ್‌ ಆಗಿದೆಯಾ? ನವೀಕರಿಸಲು ಹೀಗೆ ಮಾಡಿ

Mumbai Hit And Run
ದೇಶ6 mins ago

Mumbai Hit And Run: ಮುಂಬೈನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಮಹಿಳೆ ಬಲಿ; ಶಿವಸೇನೆ ನಾಯಕನ ಬಂಧನ!

Tharun Sudhir Bigg update marriage
ಸ್ಯಾಂಡಲ್ ವುಡ್17 mins ago

Tharun Sudhir: ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ತರುಣ್ ಸುಧೀರ್; ಹುಡುಗಿ ಹೇಗಿರಬೇಕು ಅಂದ್ರೆ….

Dengue Cases in Mysore
ಕರ್ನಾಟಕ18 mins ago

Dengue Cases in Mysore: ಮೈಸೂರಿನಲ್ಲಿ ಡೆಂಗ್ಯೂಗೆ ಜಯದೇವ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಸಾವು

ishan Kishan
ಪ್ರಮುಖ ಸುದ್ದಿ24 mins ago

Ishan Kishan : ನನ್ನನ್ನು ಹೊರಗಿಟ್ಟಿರುವ ತೀರ್ಮಾನ ಮೂರ್ಖತನದ್ದು; ಜಯ್​ ಶಾಗೆ ಟಾಂಗ್​ ಕೊಟ್ಟ ಇಶಾನ್​ ಕಿಶನ್​

Rishab Shetty Birthday pragati shetty cute wish
ಸಿನಿಮಾ38 mins ago

Rishab Shetty: ನನ್ನ ಜೀವನದ ಆಧಾರಸ್ತಂಭ ಎಂದು ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಪತ್ನಿ ಕ್ಯೂಟ್‌ ವಿಶ್

Union Budget 2024
ದೇಶ48 mins ago

Union Budget 2024: ಆಯುಷ್ಮಾನ್‌ ಭಾರತ್‌ ಫಲಾನುಭವಿಗಳು ಡಬಲ್, ವಿಮೆ ಮೊತ್ತ 10 ಲಕ್ಷ ರೂ.ಗೆ ಏರಿಕೆ?

Mahadayi Water Dispute
ಕರ್ನಾಟಕ59 mins ago

Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 mins ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ10 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ22 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

ಟ್ರೆಂಡಿಂಗ್‌