Pune Porsche Crash : ಪೋರ್ಶೆ ಕಾರು ಗುದ್ದಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಅಪ್ಪ, ಅಜ್ಜನಿಗೆ ಜಾಮೀನು - Vistara News

ಪ್ರಮುಖ ಸುದ್ದಿ

Pune Porsche Crash : ಪೋರ್ಶೆ ಕಾರು ಗುದ್ದಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಅಪ್ಪ, ಅಜ್ಜನಿಗೆ ಜಾಮೀನು

Pune Porsche Crash : ಕುಡಿದ ಮತ್ತಿನಲ್ಲಿ 17 ವರ್ಷದ ಬಾಲಕ ಚಲಾಯಿಸುತ್ತಿದ್ದ ಪೋರ್ಷೆ ಕಾರು ಬೈಕ್ ಹೋಗುದ್ದಿ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳಿಗೆ ಡಿಕ್ಕಿ ಹೊಡೆದಿತ್ತು. ಈ ಪ್ರಕರಣದಲ್ಲಿ ಅಪಹರಣ ಮತ್ತು ಅಕ್ರಮ ಬಂಧನ ಪ್ರಕರಣದಲ್ಲಿ ತನ್ನ ಕಕ್ಷಿದಾರರಿಗೆ ನ್ಯಾಯಾಲಯ ಜಾಮೀನು ನೀಡಿದೆ ಎಂದು ಪ್ರತಿವಾದಿ ವಕೀಲ ಪ್ರಶಾಂತ್ ಪಾಟೀಲ್ ಮಾಹಿತಿ ನೀಡಿದರು.

VISTARANEWS.COM


on

Pune Porsche Crash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪುಣೆ: ಐಷಾರಾಮಿ ಪೋರ್ಷೆ ಕಾರು ಅಪಘಾತದ (Pune Porsche Crash) ಆರೋಪಿಯಾಗಿರುವ ಬಾಲಕನ ತಂದೆ ಮತ್ತು ಅಜ್ಜನಿಗೆ ಪುಣೆ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ. ಅವರಿಬ್ಬರನ್ನು ಕುಟುಂಬದ ಚಾಲಕನನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಮೇ ಅಂತ್ಯಕ್ಕೆ 17 ವರ್ಷದ ಬಾಲಕನ ತಂದೆ, ಮಹಾರಾಷ್ಟ್ರದ ಬಿಲ್ಡರ್ ವಿಶಾಲ್ ಅಗರ್ವಾಲ್ ಮತ್ತು ಆತನ ಅಜ್ಜನಿಗೆ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯ ಜಾಮೀನು ನೀಡಿದೆ.

ಪೊಲೀಸರ ಪ್ರಕಾರ, ಬಾಲಕನ ತಂದೆ ಮತ್ತು ಅಜ್ಜ ಮೇ 19 ರಂದು ರಾತ್ರಿ 11 ಗಂಟೆಗೆ ಪೊಲೀಸ್ ಠಾಣೆಯಿಂದ ಹೊರಟ ನಂತರ ತಮ್ಮ ಕುಟುಂಬ ಕಾರು ಚಾಲಕನನ್ನು ಅಪಹರಿಸಿದ್ದರು. ಅವರನ್ನು ತಮ್ಮ ಬಂಗಲೆಯಲ್ಲಿ ಇಟ್ಟುಕೊಂಡು ಅಪಘಾತ ಸಂಭವಿಸಿದಾಗ ನಾನೇ ಕಾರು ಓಡಿಸುತ್ತಿದ್ದೆ ಎಂದು ಒಪ್ಪಿಕೊಳ್ಳುವಂತೆ ಬೆದರಿಕೆ ಒಡ್ಡಿದ್ದರು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.

ಕುಡಿದ ಮತ್ತಿನಲ್ಲಿ 17 ವರ್ಷದ ಬಾಲಕ ಚಲಾಯಿಸುತ್ತಿದ್ದ ಪೋರ್ಷೆ ಕಾರು ಬೈಕ್ ಹೋಗುದ್ದಿ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳಿಗೆ ಡಿಕ್ಕಿ ಹೊಡೆದಿತ್ತು. ಈ ಪ್ರಕರಣದಲ್ಲಿ ಅಪಹರಣ ಮತ್ತು ಅಕ್ರಮ ಬಂಧನ ಪ್ರಕರಣದಲ್ಲಿ ತನ್ನ ಕಕ್ಷಿದಾರರಿಗೆ ನ್ಯಾಯಾಲಯ ಜಾಮೀನು ನೀಡಿದೆ ಎಂದು ಪ್ರತಿವಾದಿ ವಕೀಲ ಪ್ರಶಾಂತ್ ಪಾಟೀಲ್ ಮಾಹಿತಿ ನೀಡಿದರು.

ಇದನ್ನೂ ಓದಿ: NEET PG exam : ಮೋಸ ತಡೆಯಲು ಕ್ರಮ; ನೀಟ್ ಪರೀಕ್ಷೆ ಆರಂಭಕ್ಕೆ ಕೆಲವೇ ಗಂಟೆಗಳ ಮೊದಲು ಪ್ರಶ್ನೆ ಪತ್ರಿಕೆ ತಯಾರಿ!

ನನ್ನ ಕಕ್ಷಿದಾರರು ತನಿಖಾ ಸಂಸ್ಥೆಯೊಂದಿಗೆ ಸಹಕರಿಸುತ್ತಾರೆ. ನ್ಯಾಯಾಲಯದ ಕಠಿಣ ಷರತ್ತುಗಳಿಗೆ ಬದ್ಧರಾಗಿರುತ್ತಾರೆ ಎಂದು ಪಾಟೀಲ್ ಹೇಳಿದ್ದಾರೆ. ಬಾಲಾಪರಾಧಿ ನ್ಯಾಯ ಕಾಯ್ದೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮೇ 21 ರಂದು ಬಂಧಿಸಲ್ಪಟ್ಟ ಅಗರ್ವಾಲ್​ಗೆ ಕಳೆದ ತಿಂಗಳು ನ್ಯಾಯಾಲಯ ಜಾಮೀನು ನೀಡಿತ್ತು. ಪೋಷಕರಾಗಿ ತನ್ನ ಕರ್ತವ್ಯವನ್ನು ನಿರ್ವಹಿಸಲು ವಿಫಲವಾದ ಕಾರಣ ಬಿಲ್ಡರ್ ವಿರುದ್ಧ ಮೋಟಾರು ವಾಹನ ಕಾಯ್ದೆ (ಎಂವಿಎ) ಮತ್ತು ಬಾಲನ್ಯಾಯ ಕಾಯ್ದೆ (ಜೆಜೆಎ) ಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜೂನ್ 25 ರಂದು, ಬಾಂಬೆ ಹೈಕೋರ್ಟ್ ಬಾಲಕನನ್ನು ವೀಕ್ಷಣಾ ಗೃಹದಿಂದ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿತು. ಅವನ ಬಂಧನದ ಬಗ್ಗೆ ಬಾಲನ್ಯಾಯ ಮಂಡಳಿಯ (ಜೆಜೆಬಿ) ಆದೇಶವು ಕಾನೂನುಬಾಹಿರವಾಗಿದೆ ಎಂದು ಹೇಳಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mumbai Hit And Run: ಮುಂಬೈನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಮಹಿಳೆ ಬಲಿ; ಶಿವಸೇನೆ ನಾಯಕನ ಬಂಧನ!

Mumbai Hit And Run: ಮುಂಬೈನ ಕೋಳಿವಾಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಾವೇರಿ ನಖ್ವಾ ಮತ್ತು ಪ್ರದೀಕ್‌ ನಖ್ವಾ ಎಂಬ ದಂಪತಿ ಹೋಗುತ್ತಿದ್ದ ಬೈಕ್‌ಗೆ BMW ಕಾರು ಡಿಕ್ಕಿ ಹೊಡೆದು ಎಸ್ಕೇಪ್‌ ಆಗಿದ್ದಾನೆ. ಬೆಳಗ್ಗೆ 5:30ರ ಸಮಯದಲ್ಲಿ ದಂಪತಿ ಸಾಸಾನ್‌ ಡಾಕ್‌ ಮಾರುಕಟ್ಟೆಯಿಂದ ಮೀನು ಖರೀದಿಸಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ದಂಪತಿ ಪ್ರದೀಕ್‌ ನಖ್ವಾ ಮಾರುಕಟ್ಟೆಯಲ್ಲಿ ಮೀನಿನ ವ್ಯಾಪಾರಿಯಾಗಿದ್ದಾರೆ.

VISTARANEWS.COM


on

Mumbai Hit And Run
Koo

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಹಿಟ್‌ ಆ್ಯಂಡ್‌ ರನ್‌ (Mumbai Hit And Run) ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ (ಏಕನಾಥ್‌ ಶಿಂಧೆ ಬಣ) ನಾಯಕ ರಾಜೇಶ್‌ ಶಾ (Rajesh Shah) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನ ವೊರ್ಲಿಯಲ್ಲಿ ರಾಜೇಶ್‌ ಶಾ (Rajesh Shah) ಅವರ ಪುತ್ರ ಮಿಹಿರ್‌ ಶಾ (Mihir Shah) ಕುಡಿದು ವಾಹನ ಚಲಾಸುವಾಗ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದು, ಮಹಿಳೆ ಮೃತಪಟ್ಟಿದ್ದಾರೆ. ಆಕೆಯ ಪತಿಯು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ 24 ವರ್ಷದ ಮಿಹಿರ್‌ ಶಾ ಪರಾರಿಯಾಗಿದ್ದು, ಈಗ ಪೊಲೀಸರು ಅವರ ತಂದೆಯನ್ನು ವಶಪಡಿಸಿಕೊಂಡಿದ್ದಾರೆ.

ಶಿವಸೇನೆ ನಾಯಕ ನಾಯಕ ರಾಜೇಶ್‌ ಶಾ ಅವರನ್ನು ಪಾಲ್ಘರ್‌ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರು ರಾಜೇಶ್‌ ಶಾ ಅವರ ಹೆಸರಿನಲ್ಲಿ ನೋಂದಣಿಯಾಗಿರುವ ಕಾರಣ ಅವರನ್ನು ಪೊಲೀಸರು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಕಾರು ಚಾಲಕ ರಾಜಋಷಿ ಬಿದಾವತ್‌ ಎಂಬುವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾವೇರಿ ನಖ್ವಾ ಮತ್ತು ಪ್ರದೀಕ್‌ ನಖ್ವಾ ಎಂಬ ದಂಪತಿ ಹೋಗುತ್ತಿದ್ದ ಬೈಕ್‌ಗೆ BMW ಕಾರು ಡಿಕ್ಕಿ ಹೊಡೆದಿದ್ದು, ಕೂಡಲೇ ಮಿಹಿರ್‌ ಶಾ ಎಸ್ಕೇಪ್‌ ಆಗಿದ್ದಾನೆ. ಬೆಳಗ್ಗೆ 5:30ರ ಸಮಯದಲ್ಲಿ ದಂಪತಿ ಸಾಸಾನ್‌ ಡಾಕ್‌ ಮಾರುಕಟ್ಟೆಯಿಂದ ಮೀನು ಖರೀದಿಸಿ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ದಂಪತಿ ಪ್ರದೀಕ್‌ ನಖ್ವಾ ಮಾರುಕಟ್ಟೆಯಲ್ಲಿ ಮೀನಿನ ವ್ಯಾಪಾರಿಯಾಗಿದ್ದಾರೆ. ಕಾರು ಡಿಕ್ಕಿಯಗುತ್ತಿದ್ದಂತೆ ರಸ್ತೆಗೆ ಬಿದ್ದಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಕಾವೇರಿ ಮತ್ತು ಪ್ರದೀಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾವೇರಿ ಕೊನೆಯುಸಿರೆಳೆದಿದ್ದಾರೆ.

ಘಟನೆ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಮಿಹಿರ್‌ ಶಾ ನಾಪತ್ತೆಯಾಗಿದ್ದಾನೆ. ಮಿಹಿರ್‌ ಶಾ ತನ್ನ ಫೋನನ್ನೂ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ. ಪೊಲೀಸರ ಪ್ರಕಾರ ಮಿಹಿರ್‌ ಕಳೆದ ರಾತ್ರಿ ಜೂಹೂ ಪ್ರದೇಶದಲ್ಲಿರುವ ಬಾರ್‌ನಲ್ಲಿ ಕಂಠಪೂರ್ತಿ ಕುಡಿದಿದ್ದು. ತನ್ನ ಮನೆಗೆ ಹಿಂದಿರುಗುವ ವೇಳೆ ಲಾಂಗ್‌ ಡ್ರೈವ್‌ ಕರೆದುಕೊಂಡು ಹೋಗುವಂತೆ ಡ್ರೈವರ್‌ಗೆ ಹೇಳಿದ್ದಾನೆ. ವರ್ಲಿಗೆ ತಲುಪುತ್ತಿದ್ದಂತೆ ತಾನು ಕಾರು ಚಲಾಯಿಸುವುದಕ್ಕೆ ಮುಂದಾಗಿದ್ದಾನೆ. ಆಗ ಅತ್ಯಂತ ವೇಗವಾಗಿ ಕಾರು ಚಲಾಯಿಸಿದ ಮಿಹಿರ್, ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಇನ್ನು ಘಟನೆ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾತ್‌ ಶಿಂಧೆ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ದುರಾದೃಷ್ಟಕರವಾದುದು. ಕಾನೂನಿನ ಎದುರು ಎಲ್ಲರೂ ಸಮಾನ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ. ಪೊಲೀಸರು ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Hit and Run Case: ಶಿವಸೇನೆ ಮುಖಂಡನ ಪುತ್ರನಿಂದ ಡ್ರಂಕ್‌ ಆ್ಯಂಡ್‌ ಡ್ರೈವ್‌; ಸ್ಕೂಟರ್‌ಗೆ BMW ಕಾರು ಡಿಕ್ಕಿ ಹೊಡೆದು ಮಹಿಳೆ ಸಾವು

Continue Reading

ಪ್ರಮುಖ ಸುದ್ದಿ

Ishan Kishan : ನನ್ನನ್ನು ಹೊರಗಿಟ್ಟಿರುವ ತೀರ್ಮಾನ ಮೂರ್ಖತನದ್ದು; ಜಯ್​ ಶಾಗೆ ಟಾಂಗ್​ ಕೊಟ್ಟ ಇಶಾನ್​ ಕಿಶನ್​

Ishan Kishan : ಭಾರತದ ವಿಕೆಟ್ ಕೀಪರ್-ಬ್ಯಾಟರ್​ ಇಶಾನ್ ಕಿಶನ್​ಗೆ ಕಳೆದ ಕೆಲವು ತಿಂಗಳುಗಳು ಉತ್ತಮವಾಗಿಲ್ಲ. ಭಾರತೀಯ ಇಲೆವೆನ್​ನಲ್ಲಿ ಹಿಡಿದು ಭಾರತ ತಂಡದ ಸೆಟ್​ಅಪ್​​ನಲ್ಲಿ ಎಲ್ಲಿಯೂ ಕಾಣಿಸುತ್ತಿಲ್ಲ. ಅವರನ್ನು ಮೊದಲಿಗೆ ತಂಡದಿಂದ ಕೈಬಿಡಲಾಗಿತ್ತು. ಬಳಿಕ ಬಿಸಿಸಿಐನ ಕೇಂದ್ರ ಒಪ್ಪಂದದಿಂದ ತೆಗೆದುಹಾಕಲಾಗಿತ್ತು.

VISTARANEWS.COM


on

ishan Kishan
Koo

ನವದೆಹಲಿ: ರಾಹುಲ್ ದ್ರಾವಿಡ್ ಮತ್ತು ಬಿಸಿಸಿಐ ಸೂಚನೆ ನೀಡಿದರೂ ರಣಜಿ ಟ್ರೋಫಿಯಲ್ಲಿ ಏಕೆ ಆಡಲಿಲ್ಲ ಎಂಬ ಬಗ್ಗೆ ಭಾರತದ ವಿಕೆಟ್ ಕೀಪರ್ ಬ್ಯಾಟರ್​ ಇಶಾನ್ ಕಿಶನ್ (Ishan Kishan) ಮಾತನಾಡಿದ್ದಾರೆ. ವಿರಾಮದ ನಡುವೆ ದೇಶೀಯ ಕ್ರಿಕೆಟ್​ನಲ್ಲಿ ಆಡುವುದು ಯಾವುದೇ ಅರ್ಥವಿಲ್ಲ ಎಂದು ಹೇಳುವ ಜತೆಗೆ ಈ ನಿರ್ಧಾರ ತೆಗೆದುಕೊಂಡ ಜಯ್​ ಶಾ ಅವರ ಯೋಚನೆ ಸರಿಯಿಲ್ಲ ಎಂಬುದಾಗಿ ಹೇಳಿದ್ದಾರೆ.

ಭಾರತದ ವಿಕೆಟ್ ಕೀಪರ್-ಬ್ಯಾಟರ್​ ಇಶಾನ್ ಕಿಶನ್​ಗೆ ಕಳೆದ ಕೆಲವು ತಿಂಗಳುಗಳು ಉತ್ತಮವಾಗಿಲ್ಲ. ಭಾರತೀಯ ಇಲೆವೆನ್​ನಲ್ಲಿ ಹಿಡಿದು ಭಾರತ ತಂಡದ ಸೆಟ್​ಅಪ್​​ನಲ್ಲಿ ಎಲ್ಲಿಯೂ ಕಾಣಿಸುತ್ತಿಲ್ಲ. ಅವರನ್ನು ಮೊದಲಿಗೆ ತಂಡದಿಂದ ಕೈಬಿಡಲಾಗಿತ್ತು. ಬಳಿಕ ಬಿಸಿಸಿಐನ ಕೇಂದ್ರ ಒಪ್ಪಂದದಿಂದ ತೆಗೆದುಹಾಕಲಾಗಿತ್ತು.

ಇಶಾನ್ ಕಿಶನ್ ದಕ್ಷಿಣ ಆಫ್ರಿಕಾ ಟೆಸ್ಟ್​​ನಿಂದ ವಿರಾಮ ತೆಗೆದುಕೊಂಡ ನಂತರ ಅಂದಿನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಭಾರತೀಯ ತಂಡಕ್ಕೆ ಮರಳಲು, ಕೀಪರ್-ಬ್ಯಾಟರ್​​ ದೇಶೀಯ ಕ್ರಿಕೆಟ್ ಆಡುವ ಅಗತ್ಯವಿದೆ ಎಂದು ಹೇಳಿದ್ದರು. ಬಿಸಿಸಿಐ ಕೂಡ ದ್ರಾವಿಡ್ ಹೇಳಿಕೆಗೆ ಸಮ್ಮತಿ ಸೂಚಿಸಿತ್ತು. ದೇಶೀಯ ಕ್ರಿಕೆಟ್ ಆಡುವ ಮಹತ್ವವನ್ನು ಎತ್ತಿ ತೋರಿಸಿದ್ದರು. ಆದಾಗ್ಯೂ, ಇಶಾನ್ ಕಿಶನ್ ರಾಹುಲ್ ದ್ರಾವಿಡ್ ಮತ್ತು ಬಿಸಿಸಿಐ ಮಾತನ್ನು ಕೇಳಲಿಲ್ಲ ಮತ್ತು ದೇಶೀಯವಾಗ ಜಾರ್ಖಂಡ್ ಪರ ಆಡಲಿಲ್ಲ. ಕೀಪರ್ ಬ್ಯಾಟರ್​​ ಅಹಂಕಾರ ತೋರಿಸಿದ್ದಾರೆ ಎಂದು ಅವರು ಅಭಿಪ್ರಾಯ ವ್ಯಕ್ತಗೊಂಡ ಬಳಿಕ ಆಡಳಿತ ಮಂಡಳಿ ಕ್ರಮ ಕೈಗೊಂಡಿತು. ಅವರನ್ನು ವಾರ್ಷಿಕ ಗುತ್ತಿಗೆಯಿಂದ ವಜಾಗೊಳಿಸಲಾಯಿತು.

ರಣಜಿ ಟ್ರೋಫಿಯಲ್ಲಿ ಏಕೆ ಆಡಲಿಲ್ಲ ಎಂಬುದರ ಬಗ್ಗೆ ಮಾತನಾಡಿದ ಇಶಾನ್ ಕಿಶನ್, ದೇಶೀಯ ಕ್ರಿಕೆಟ್ ಆಡುವುದರಲ್ಲಿ ಯಾವುದೇ ಅರ್ಥವಿಲ್ಲ. ಏಕೆಂದರೆ ನಾನು ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಂಡಿದ್ದೆ, ಜಾರ್ಖಂಡ್ ಪರ ಆಡಬೇಕಾದರೆ ನಾನು ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಳ್ಳಬೇಕಾಗಿಲ್ಲ ಎಂದು ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಇದನ್ನೂ ಓದಿ: Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

ನಾನು ವಿರಾಮ ತೆಗೆದುಕೊಂಡಿರುವ ಕಾರಣ ಬೇರೆ ಎಲ್ಲಿಯೂ ಆಡಲು ಸಾಧ್ಯವಿಲ್ಲ. ಪುನರಾಗಮನ ಮಾಡಲು ಬಯಸಿದರೆ ನೀವು ದೇಶೀಯ ಕ್ರಿಕೆಟ್​​ನಲ್ಲಿ ಪ್ರದರ್ಶನ ನೀಡಬೇಕು ಎಂಬ ನಿಯಮವಿದೆ. ಅದು ಸರಳವಾಗಿದೆ. ಈಗ, ದೇಶೀಯ ಕ್ರಿಕೆಟ್ ಆಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿದ್ದಾರೆ.

ನಾನು ಆಡುವ ಮನಸ್ಥಿತಿಯಲ್ಲಿ ಇರಲಿಲ್ಲ ಮತ್ತು ಅದಕ್ಕಾಗಿಯೇ ನಾನು ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಂಡೆ. ನೀವು ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಂಡು ನಂತರ ದೇಶೀಯ ಪಂದ್ಯಗಳನ್ನು ಆಡಬೇಕು ಎಂದು ಅರ್ಥವಲ್ಲ. ಆಡಲೇಬೇಕಾದರೆ ನಾನು ಭಾರತಕ್ಕಾಗಿ ಆಡುವುದನ್ನು ಮುಂದುವರಿಸಬಹುದಿತ್ತು” ಎಂದು ಹೇಳಿದ್ದಾರೆ.

ತಂಡಕ್ಕೆ ಇದು ಸುಲಭವಲ್ಲ ಎಂದು ನನಗೆ ತಿಳಿದಿದೆ

ಇಶಾನ್ ಕಿಶನ್ ಕೂಡ ಭಾರತ ತಂಡಕ್ಕೆ ಮರಳುವ ಬಗ್ಗೆ ಮಾತನಾಡಿದ್ದಾರೆ. ಸಾಕಷ್ಟು ಸ್ಪರ್ಧೆ ಇರುವ ಪುನರಾಗಮನ ಮಾಡುವುದು ಸುಲಭವಲ್ಲ ಎಂದು ಒಪ್ಪಿಕೊಂಡರು. ತಾವು ಅತ್ಯುತ್ತಮವಾದದ್ದನ್ನು ನೀಡುತ್ತಲೇ ಇರುತ್ತೇನೆ ಎಂದು ಹೇಳಿದರು.

ಇದು ಸುಲಭವಲ್ಲ ಎಂದು ನನಗೆ ತಿಳಿದಿದೆ. ಆದರೆ ಸ್ಪರ್ಧೆಯು ನಿಮಗೆ ತೃಪ್ತಿಯ ಭಾವನೆಯನ್ನು ನೀಡುತ್ತದೆ ಎಂದು ನಾನು ಭಾವಿಸುತ್ತೇನೆ. ನಾನು ಅದನ್ನು ಆನಂದಿಸುತ್ತೇನೆ. ನಾನು ಅದರ ಬಗ್ಗೆ ಯಾವುದೇ ಒತ್ತಡವನ್ನು ತೆಗೆದುಕೊಳ್ಳುವುದಿಲ್ಲ, “ಎಂದು ಅವರು ಮುಕ್ತಾಯಗೊಳಿಸಿದರು.

Continue Reading

ದೇಶ

Union Budget 2024: ಆಯುಷ್ಮಾನ್‌ ಭಾರತ್‌ ಫಲಾನುಭವಿಗಳು ಡಬಲ್, ವಿಮೆ ಮೊತ್ತ 10 ಲಕ್ಷ ರೂ.ಗೆ ಏರಿಕೆ?

Union Budget 2024: ಬಜೆಟ್‌ಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ನೌಕರರಿಗೆ ತೆರಿಗೆ ವಿನಾಯಿತಿ, ಬಡವರು, ಮಧ್ಯಮ ವರ್ಗದವರಿಗೆ ನಿರೀಕ್ಷೆಗಳು ಹೆಚ್ಚಾಗಿವೆ. ಹಾಗೆಯೇ, ಆಯುಷ್ಮಾನ್‌ ಭಾರತ್‌ ಯೋಜನೆಯ ಫಲಾನುಭವಿಗಳ ಸಂಖ್ಯೆ ಹಾಗೂ ವಿಮಾ ಮೊತ್ತವನ್ನು 10 ಲಕ್ಷ ರೂ.ಗೆ ಏರಿಸುವ ಕುರಿತು ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Union Budget 2024
Koo

ನವದೆಹಲಿ: ದೇಶದ ಜನ ನಿರೀಕ್ಷೆ ಇಟ್ಟುಕೊಂಡು ಕಾಯುತ್ತಿರುವ ಕೇಂದ್ರ ಬಜೆಟ್‌ಗೆ (Union Budget 2024) ದಿನಾಂಕ ನಿಗದಿಯಾಗಿದೆ. ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ (Union Budget Session) ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಇದರ ಬೆನ್ನಲ್ಲೇ, ನೌಕರರಿಗೆ ತೆರಿಗೆ ವಿನಾಯಿತಿ, ಬಡವರು, ಮಧ್ಯಮ ವರ್ಗದವರಿಗೆ ನಿರೀಕ್ಷೆಗಳು ಹೆಚ್ಚಾಗಿವೆ. ಹಾಗೆಯೇ, ಆಯುಷ್ಮಾನ್‌ ಭಾರತ್‌ (Ayushman Bharat) ಯೋಜನೆಯ ಫಲಾನುಭವಿಗಳ ಸಂಖ್ಯೆ ಹಾಗೂ ವಿಮಾ ಮೊತ್ತವನ್ನು 10 ಲಕ್ಷ ರೂ.ಗೆ ಏರಿಸುವ ಕುರಿತು ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ದೇಶದ ಸುಮಾರು 50 ಕೋಟಿ ಬಡವರಿಗೆ ಆಯುಷ್ಮಾನ್‌ ಭಾರತ್‌ ಯೋಜನೆ ಅಡಿಯಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಇನ್ನು, 70 ವರ್ಷ ದಾಟಿದ ಎಲ್ಲರಿಗೂ ಆಯುಷ್ಮಾನ್‌ ಭಾರತ್‌ ಯೋಜನೆಯ ಸೌಲಭ್ಯವನ್ನು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದರ ಜತೆಗೆ, ವಿಮಾ ಮೊತ್ತವನ್ನು 5 ಲಕ್ಷ ರೂ.ನಿಂದ 10 ಲಕ್ಷ ರೂ.ಗೆ ಏರಿಕೆ ಮಾಡುವ ಕುರಿತು ಕೂಡ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,076 ಕೋಟಿ ರೂ. ಹೆಚ್ಚುವರಿಯಾಗಿ ಖರ್ಚಾಗಲಿದೆ ಎಂದು ತಿಳಿದುಬಂದಿದೆ.

Ayushman Bharat Yojana

ಬೇರೆ ನಿರೀಕ್ಷೆಗಳೂ ಇವೆ

ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ: Union Budget 2024: ಜುಲೈ 23ರಂದು ಕೇಂದ್ರ ಬಜೆಟ್‌ ಮಂಡನೆ; ಸಾಮಾನ್ಯ ಜನರಿಗೆ ಏನಿದೆ ನಿರೀಕ್ಷೆ?

Continue Reading

ದೇಶ

ಪಿಎಂ ಆವಾಸ್‌ ಯೋಜನೆಯ 40 ಸಾವಿರ ರೂ. ಪಡೆದು 11 ಸ್ತ್ರೀಯರು ಗೆಳೆಯರೊಂದಿಗೆ ಪರಾರಿ; ಕಂಗಾಲಾದ ಪತಿಯರು!

ಉತ್ತರ ಪ್ರದೇಶದ ನಿಚ್ಲಾಲ್‌ ಬ್ಲಾಕ್‌ನಲ್ಲಿರುವ 11 ಗ್ರಾಮಗಳ ಮಹಿಳೆಯರು ತಮ್ಮ ಬ್ಯಾಂಕ್‌ ಖಾತೆಗೆ ಪಿಎಂ ಆವಾಸ್‌ ಯೋಜನೆಯ ಮೊದಲ ಕಂತಿನ ಮೊತ್ತವು ಜಮೆಯಾಗುತ್ತಲೇ ಪತಿಯರನ್ನು ತೊರೆದು ಪರಾರಿಯಾಗಿದ್ದಾರೆ. ಪ್ರಕರಣದ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿರುವ ಮಧ್ಯೆಯೇ, ಮಹಿಳೆಯರ ಗಂಡಂದಿರು ಹಿರಿಯ ಅಧಿಕಾರಿಗಳ ಮೊರೆ ಹೋಗಿದ್ದಾರೆ.

VISTARANEWS.COM


on

Viral News
Koo

ಲಖನೌ: ಸರ್ಕಾರಿ ಯೋಜನೆಗಳ ಲಾಭ ಪಡೆದು, ಸಂಸಾರ ಸಾಗಿಸುವ ಕೋಟ್ಯಂತರ ಮಹಿಳೆಯರು ದೇಶದಲ್ಲಿದ್ದಾರೆ. ಆದರೆ, ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ ಜಿಲ್ಲೆಯ (Maharajganj District) ನಿಚ್ಲಾಲ್‌ ಬ್ಲಾಕ್‌ನಲ್ಲಿ ವಿಚಿತ್ರ ಪ್ರಕರಣವು ಭಾರಿ ಸುದ್ದಿಯಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆಯ (PM Awas Yojana) ಮೊದಲ ಕಂತಿನ ಮೊತ್ತವಾದ 40 ಸಾವಿರ ರೂ. ಖಾತೆಗೆ ಜಮೆಯಾಗುತ್ತಲೇ 11 ವಿವಾಹಿತ ಮಹಿಳೆಯರು ತಮ್ಮ ಪ್ರಿಯತಮರೊಂದಿಗೆ ಪರಾರಿಯಾಗಿದ್ದಾರೆ. ಇದರಿಂದ ಮಹಿಳೆಯರ ಗಂಡಂದಿರು ಕಂಗಲಾಗಿದ್ದಾರೆ.

ಹೌದು, ನಿಚ್ಲಾಲ್‌ ಬ್ಲಾಕ್‌ನಲ್ಲಿರುವ 11 ಗ್ರಾಮಗಳ ಮಹಿಳೆಯರು ತಮ್ಮ ಬ್ಯಾಂಕ್‌ ಖಾತೆಗೆ ಪಿಎಂ ಆವಾಸ್‌ ಯೋಜನೆಯ ಮೊದಲ ಕಂತಿನ ಮೊತ್ತವು ಜಮೆಯಾಗುತ್ತಲೇ ಪತಿಯರನ್ನು ತೊರೆದು ಪರಾರಿಯಾಗಿದ್ದಾರೆ. ಪ್ರಕರಣದ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿರುವ ಮಧ್ಯೆಯೇ, ಮಹಿಳೆಯರ ಗಂಡಂದಿರು ಹಿರಿಯ ಅಧಿಕಾರಿಗಳ ಮೊರೆ ಹೋಗಿದ್ದಾರೆ. ನಮ್ಮ ಪತ್ನಿಯರು ಪರಾರಿಯಾಗಿದ್ದು, ಅವರ ಬ್ಯಾಂಕ್‌ ಖಾತೆಗೆ ಎರಡನೇ ಕಂತಿನ ಮೊತ್ತವನ್ನು ಜಮೆ ಮಾಡದಂತೆ ಅಂಗಲಾಚಿದ್ದಾರೆ ಎಂದು ತಿಳಿದುಬಂದಿದೆ.

2023-24ನೇ ವಿತ್ತೀಯ ಸಾಲಿನಲ್ಲಿ ಮಹಾರಾಜ್‌ಗಂಜ್‌ ಜಿಲ್ಲೆ ನಿಚ್ಲಾಲ್‌ ಬ್ಲಾಕ್‌ನ 108 ಗ್ರಾಮಗಳ 2,350 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಇವುಗಳಲ್ಲಿ ಶೇ.90ರಷ್ಟು ಮನೆಗಳ ನಿರ್ಮಾಣವು ಪೂರ್ಣಗೊಂಡಿದೆ. ತುತ್ತಿಬರಿ, ಶೀತಲಾಪುರ, ಚಾಟಿಯಾ, ರಾಮನಗರ, ಕಿಶನ್‌ಪುರ, ಮೇಧೌಳಿ ಸೇರಿ 11 ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ಮೊದಲ ಕಂತಿನ 40 ಸಾವಿರ ರೂ. ಜಮೆಯಾಗಿದೆ. ಖಾತೆಗೆ ಹಣ ಜಮೆಯಾಗುವ ಕುರಿತು ಮೊದಲೇ ಮಾಹಿತಿ ಇದ್ದ ಮಹಿಳೆಯರು, ತಮ್ಮ ಪ್ರಿಯತಮರಿಗೆ ವಿಷಯ ತಿಳಿಸಿದ್ದರು. ಹಣ ಜಮೆಯಾಗುತ್ತಲೇ ಅವರು ಗೆಳೆಯರೊಂದಿಗೆ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಮನೆ ಆಸೆಗೆ ಮಡದಿಯ ಕಳೆದುಕೊಂಡರು

ಸ್ವಂತ ಮನೆ ಹೊಂದುವ ಕನಸಿನೊಂದಿಗೆ ಮಹಿಳೆಯರ ಪತಿಯರು ಪಿಎಂ ಆವಾಸ್‌ ಯೋಜನೆಗೆ ಅರ್ಜಿ ಹಾಕಿದ್ದರು. ಅರ್ಜಿ ಹಾಕುವಾಗ ಪತ್ನಿಯರ ಬ್ಯಾಂಕ್‌ ಖಾತೆಯ ಸಂಖ್ಯೆಯನ್ನೇ ನಮೂದಿಸಿದ್ದರು. ಹಾಗಾಗಿ ಅವರ ಬ್ಯಾಂಕ್‌ ಖಾತೆಗಳಿಗೆ ಹಣ ಜಮೆಯಾಗಿದೆ. ಈಗ ಪತಿಯರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ನಮ್ಮ ಬ್ಯಾಂಕ್‌ ಖಾತೆಯಿಂದ ಮಾಸಿಕವಾಗಿ ಹಣ ಕಡಿತಗೊಳಿಸಬಾರದು ಎಂಬುದಾಗಿ ಅಂಗಲಾಚುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Murder case : ಕಾಡಿಗೆ ಹೋದ ಮಹಿಳೆಯ ಕತ್ತು ಕೊಯ್ದು ಕೊಲೆ; ಹಂತಕರು ಪರಾರಿ

Continue Reading
Advertisement
Shashi Tharoor
ಕ್ರೀಡೆ2 mins ago

Shashi Tharoor: ಜಿಂಬಾಬ್ವೆ ಎದುರು ಭಾರತಕ್ಕೆ ಸೋಲು: ಲೇವಡಿ ಮಾಡಿದ ಶಶಿ ತರೂರ್

Karnataka Rain
ಮಳೆ7 mins ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

Money Guide
ಮನಿ-ಗೈಡ್8 mins ago

Money Guide: ನಿಮ್ಮ ಎಲ್‌ಐಸಿ ಪಾಲಿಸಿ ಲ್ಯಾಪ್ಸ್‌ ಆಗಿದೆಯಾ? ನವೀಕರಿಸಲು ಹೀಗೆ ಮಾಡಿ

Mumbai Hit And Run
ದೇಶ8 mins ago

Mumbai Hit And Run: ಮುಂಬೈನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಮಹಿಳೆ ಬಲಿ; ಶಿವಸೇನೆ ನಾಯಕನ ಬಂಧನ!

Tharun Sudhir Bigg update marriage
ಸ್ಯಾಂಡಲ್ ವುಡ್18 mins ago

Tharun Sudhir: ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ತರುಣ್ ಸುಧೀರ್; ಹುಡುಗಿ ಹೇಗಿರಬೇಕು ಅಂದ್ರೆ….

Dengue Cases in Mysore
ಕರ್ನಾಟಕ20 mins ago

Dengue Cases in Mysore: ಮೈಸೂರಿನಲ್ಲಿ ಡೆಂಗ್ಯೂಗೆ ಜಯದೇವ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಸಾವು

ishan Kishan
ಪ್ರಮುಖ ಸುದ್ದಿ26 mins ago

Ishan Kishan : ನನ್ನನ್ನು ಹೊರಗಿಟ್ಟಿರುವ ತೀರ್ಮಾನ ಮೂರ್ಖತನದ್ದು; ಜಯ್​ ಶಾಗೆ ಟಾಂಗ್​ ಕೊಟ್ಟ ಇಶಾನ್​ ಕಿಶನ್​

Rishab Shetty Birthday pragati shetty cute wish
ಸಿನಿಮಾ40 mins ago

Rishab Shetty: ನನ್ನ ಜೀವನದ ಆಧಾರಸ್ತಂಭ ಎಂದು ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಪತ್ನಿ ಕ್ಯೂಟ್‌ ವಿಶ್

Union Budget 2024
ದೇಶ50 mins ago

Union Budget 2024: ಆಯುಷ್ಮಾನ್‌ ಭಾರತ್‌ ಫಲಾನುಭವಿಗಳು ಡಬಲ್, ವಿಮೆ ಮೊತ್ತ 10 ಲಕ್ಷ ರೂ.ಗೆ ಏರಿಕೆ?

Mahadayi Water Dispute
ಕರ್ನಾಟಕ1 hour ago

Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 mins ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ10 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ22 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

ಟ್ರೆಂಡಿಂಗ್‌