Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರ - Vistara News

ದೇಶ

Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರ

Narendra Modi: ಮುಂದಿನ 5 ವರ್ಷಗಳಲ್ಲಿ ನಾವು ನಮ್ಮ ಹಿಂದಿನ ಎಲ್ಲ ರೆಕಾರ್ಡ್‌ಗಳನ್ನು ಮುರಿಯುತ್ತೇವೆ. ಇನ್ನೂ ಮೂರು ಕೋಟಿ ಬಡವರಿಗೆ ಸುಸಜ್ಜಿತವಾದ ಮನೆಗಳನ್ನು ನಿರ್ಮಿಸಿಕೊಡುತ್ತೇವೆ. ದೇಶದ ಬಡವರು, ರೈತರು, ಹೆಣ್ಣುಮಕ್ಕಳ ಸಬಲೀಕರಣಕ್ಕಾಗಿ ದುಡಿಯುತ್ತೇವೆ. ವಿಕಸಿತ ಭಾರತಕ್ಕೆ ಭದ್ರ ಬುನಾದಿಯನ್ನು ಹಾಕಿಕೊಡುತ್ತೇವೆ. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್ ತತ್ವದಲ್ಲಿ ಆಡಳಿತ ನಡೆಸುತ್ತೇವೆ ಎಂದು ನರೇಂದ್ರ ಮೋದಿ ಹೇಳಿದರು.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜವಾಹರ ಲಾಲ್‌ ನೆಹರು ಅವರಿಂದ ಹಿಡಿದು ಸೀತಾರಾಮ್‌ ಕೇಸರಿ ಅವರತನಕ ಉದಾಹರಣೆ, ನಿದರ್ಶನ, ಕತೆಗಳು, ಉಪಕತೆಗಳ ಮೂಲಕ ನರೇಂದ್ರ ಮೋದಿ (Narendra Modi) ಅವರು ಸಂಸತ್‌ನಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದ ನರೇಂದ್ರ ಮೋದಿ, ರಾಹುಲ್‌ ಗಾಂಧಿ (Rahul Gandhi), ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು. ಇನ್ನು ಭಾಷಣದ ಕೊನೆಯಲ್ಲಿ, “ನನ್ನ ದನಿ ಇನ್ನೂ ಗಟ್ಟಿ ಇದೆ. ಸಂಕಲ್ಪವೂ ಅಷ್ಟೇ ದೃಢವಾಗಿದೆ. ಈ ಮೋದಿ ಯಾರಿಗೂ ಹೆದರುವುದಿಲ್ಲ” ಎಂದು ಅಬ್ಬರಿಸಿದರು.

“ನಾನು ಕಾಂಗ್ರೆಸ್‌ನವರಿಗೆ ಜಾಣತನ ಕೊಡಲಿ ಎಂಬುದಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ. ಬಾಲಬುದ್ಧಿಯ ನಾಯಕನಿಗೂ ಬುದ್ಧಿ ಕೊಡಲಿ. ರಾಷ್ಟ್ರಪತಿಯವರ ಭಾಷಣಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ಹಾಗೆಯೇ, ಇಷ್ಟು ಹೊತ್ತು ನನಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿಯೂ ಧನ್ಯವಾದ ತಿಳಿಸುತ್ತೇನೆ. ಯಾರು ಎಷ್ಟೇ ಗಲಾಟೆ ಮಾಡಿದರೂ ನನ್ನ ಧ್ವನಿಯನ್ನು, ಸತ್ಯದ ಧ್ವನಿಯನ್ನು ಅಡಗಿಸಲು ಆಗುವುದಿಲ್ಲ. ನಾನು ಇದುವರೆಗೆ ಸತ್ಯದ ಅನುಭವವನ್ನು ಅನುಭವಿಸಿದ್ದೇನೆ” ಎಂದು ಹೇಳಿದರು.

ನೀಟ್‌ ಅಕ್ರಮ ಕುರಿತು ಪ್ರಸ್ತಾಪ

ಪ್ರತಿಪಕ್ಷಗಳ ಆಗ್ರಹದ ಮಧ್ಯೆಯೇ ನರೇಂದ್ರ ಮೋದಿ ಅವರು ನೀಟ್‌ ಅಕ್ರಮದ ಕುರಿತು ಮಾತನಾಡಿದರು. “ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಗಂಭೀರ ವಿಷಯವಾಗಿದೆ. ಇದು ನಮಗೂ ಆತಂಕ ತಂದಿದೆ. ಆದರೆ, ದೇಶದ ಯುವಕ-ಯುವತಿಯರಿಗೆ ನಮ್ಮ ಸರ್ಕಾರ ಒಂದು ಭರವಸೆ ನೀಡುತ್ತದೆ. ಯಾವುದೇ ಕಾರಣಕ್ಕೂ ನಿಮ್ಮ ಭವಿಷ್ಯಕ್ಕೆ ತೊಂದರೆಯಾಗಲು ನಾವು ಬಿಡುವುದಿಲ್ಲ. ನೀಟ್‌ ವಿಷಯದಲ್ಲಿ ಅಕ್ರಮ ಎಸಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದೆ. ಇದಕ್ಕಾಗಿ ಮುಂದಿನ ದಿನಗಳಲ್ಲೂ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈಗಾಗಲೇ ಹಲವು ಕ್ರಮ ತೆಗೆದುಕೊಳ್ಳಲಾಗಿದೆ. ಹಾಗಾಗಿ, ದೇಶದ ಯುವಕ-ಯುವತಿಯರು ಯೋಚಿಸಬೇಕಾದ ಅವಶ್ಯಕತೆ ಇಲ್ಲ” ಎಂದು ಹೇಳಿದರು.

ಲೋಕಸಭೆ ಚುನಾವಣೆ ಗೆಲುವಿನ ಕುರಿತು ಕೂಡ ನರೇಂದ್ರ ಮೋದಿ ಮಾತನಾಡಿದರು. “ದೇಶದಲ್ಲಿ ಮೂರನೇ ಬಾರಿಗೆ ಆಡಳಿತಕ್ಕೆ ಬರುವುದು ಸುಲಭವಲ್ಲ. ಜನರ ಪರವಾದ ಆಡಳಿತವನ್ನೇ ತಪಸ್ಸಿನ ರೀತಿ ಮಾಡಿದ ಕಾರಣದಿಂದಾಗಿ ನಮಗೆ ದೇಶದ ಜನ ಮೂರನೇ ಬಾರಿಗೆ ಅವಕಾಶ ನೀಡಿದ್ದಾರೆ. ಕಳೆದ 60 ವರ್ಷಗಳಲ್ಲಿಯೇ ದೇಶದ ಜನರು ಯಾರನ್ನೂ ಮೂರನೇ ಬಾರಿಗೆ ಆಯ್ಕೆ ಮಾಡಿಲ್ಲ. ನಮ್ಮ ಮೇಲಿನ ಭರವಸೆ, ನಂಬಿಕೆಯಿಂದಲೇ ಮೂರನೇ ಬಾರಿಗೆ ಗೆಲ್ಲಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: Narendra Modi: ಸಂಸತ್ತಲ್ಲಿ ಹಿಂದುಗಳಿಗೆ ಅವಮಾನ, ದೇವರಿಗೆ ಅಪಮಾನ, ಇದನ್ನು ಹಿಂದುಗಳು ಮರೆಯಲಾರರು ಎಂದ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Union Budget 2024: ಆಯುಷ್ಮಾನ್‌ ಭಾರತ್‌ ಫಲಾನುಭವಿಗಳು ಡಬಲ್, ವಿಮೆ ಮೊತ್ತ 10 ಲಕ್ಷ ರೂ.ಗೆ ಏರಿಕೆ?

Union Budget 2024: ಬಜೆಟ್‌ಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ನೌಕರರಿಗೆ ತೆರಿಗೆ ವಿನಾಯಿತಿ, ಬಡವರು, ಮಧ್ಯಮ ವರ್ಗದವರಿಗೆ ನಿರೀಕ್ಷೆಗಳು ಹೆಚ್ಚಾಗಿವೆ. ಹಾಗೆಯೇ, ಆಯುಷ್ಮಾನ್‌ ಭಾರತ್‌ ಯೋಜನೆಯ ಫಲಾನುಭವಿಗಳ ಸಂಖ್ಯೆ ಹಾಗೂ ವಿಮಾ ಮೊತ್ತವನ್ನು 10 ಲಕ್ಷ ರೂ.ಗೆ ಏರಿಸುವ ಕುರಿತು ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Union Budget 2024
Koo

ನವದೆಹಲಿ: ದೇಶದ ಜನ ನಿರೀಕ್ಷೆ ಇಟ್ಟುಕೊಂಡು ಕಾಯುತ್ತಿರುವ ಕೇಂದ್ರ ಬಜೆಟ್‌ಗೆ (Union Budget 2024) ದಿನಾಂಕ ನಿಗದಿಯಾಗಿದೆ. ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ (Union Budget Session) ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಇದರ ಬೆನ್ನಲ್ಲೇ, ನೌಕರರಿಗೆ ತೆರಿಗೆ ವಿನಾಯಿತಿ, ಬಡವರು, ಮಧ್ಯಮ ವರ್ಗದವರಿಗೆ ನಿರೀಕ್ಷೆಗಳು ಹೆಚ್ಚಾಗಿವೆ. ಹಾಗೆಯೇ, ಆಯುಷ್ಮಾನ್‌ ಭಾರತ್‌ (Ayushman Bharat) ಯೋಜನೆಯ ಫಲಾನುಭವಿಗಳ ಸಂಖ್ಯೆ ಹಾಗೂ ವಿಮಾ ಮೊತ್ತವನ್ನು 10 ಲಕ್ಷ ರೂ.ಗೆ ಏರಿಸುವ ಕುರಿತು ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ದೇಶದ ಸುಮಾರು 50 ಕೋಟಿ ಬಡವರಿಗೆ ಆಯುಷ್ಮಾನ್‌ ಭಾರತ್‌ ಯೋಜನೆ ಅಡಿಯಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಇನ್ನು, 70 ವರ್ಷ ದಾಟಿದ ಎಲ್ಲರಿಗೂ ಆಯುಷ್ಮಾನ್‌ ಭಾರತ್‌ ಯೋಜನೆಯ ಸೌಲಭ್ಯವನ್ನು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದರ ಜತೆಗೆ, ವಿಮಾ ಮೊತ್ತವನ್ನು 5 ಲಕ್ಷ ರೂ.ನಿಂದ 10 ಲಕ್ಷ ರೂ.ಗೆ ಏರಿಕೆ ಮಾಡುವ ಕುರಿತು ಕೂಡ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,076 ಕೋಟಿ ರೂ. ಹೆಚ್ಚುವರಿಯಾಗಿ ಖರ್ಚಾಗಲಿದೆ ಎಂದು ತಿಳಿದುಬಂದಿದೆ.

Ayushman Bharat Yojana

ಬೇರೆ ನಿರೀಕ್ಷೆಗಳೂ ಇವೆ

ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ: Union Budget 2024: ಜುಲೈ 23ರಂದು ಕೇಂದ್ರ ಬಜೆಟ್‌ ಮಂಡನೆ; ಸಾಮಾನ್ಯ ಜನರಿಗೆ ಏನಿದೆ ನಿರೀಕ್ಷೆ?

Continue Reading

ದೇಶ

ಪಿಎಂ ಆವಾಸ್‌ ಯೋಜನೆಯ 40 ಸಾವಿರ ರೂ. ಪಡೆದು 11 ಸ್ತ್ರೀಯರು ಗೆಳೆಯರೊಂದಿಗೆ ಪರಾರಿ; ಕಂಗಾಲಾದ ಪತಿಯರು!

ಉತ್ತರ ಪ್ರದೇಶದ ನಿಚ್ಲಾಲ್‌ ಬ್ಲಾಕ್‌ನಲ್ಲಿರುವ 11 ಗ್ರಾಮಗಳ ಮಹಿಳೆಯರು ತಮ್ಮ ಬ್ಯಾಂಕ್‌ ಖಾತೆಗೆ ಪಿಎಂ ಆವಾಸ್‌ ಯೋಜನೆಯ ಮೊದಲ ಕಂತಿನ ಮೊತ್ತವು ಜಮೆಯಾಗುತ್ತಲೇ ಪತಿಯರನ್ನು ತೊರೆದು ಪರಾರಿಯಾಗಿದ್ದಾರೆ. ಪ್ರಕರಣದ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿರುವ ಮಧ್ಯೆಯೇ, ಮಹಿಳೆಯರ ಗಂಡಂದಿರು ಹಿರಿಯ ಅಧಿಕಾರಿಗಳ ಮೊರೆ ಹೋಗಿದ್ದಾರೆ.

VISTARANEWS.COM


on

Viral News
Koo

ಲಖನೌ: ಸರ್ಕಾರಿ ಯೋಜನೆಗಳ ಲಾಭ ಪಡೆದು, ಸಂಸಾರ ಸಾಗಿಸುವ ಕೋಟ್ಯಂತರ ಮಹಿಳೆಯರು ದೇಶದಲ್ಲಿದ್ದಾರೆ. ಆದರೆ, ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ ಜಿಲ್ಲೆಯ (Maharajganj District) ನಿಚ್ಲಾಲ್‌ ಬ್ಲಾಕ್‌ನಲ್ಲಿ ವಿಚಿತ್ರ ಪ್ರಕರಣವು ಭಾರಿ ಸುದ್ದಿಯಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆಯ (PM Awas Yojana) ಮೊದಲ ಕಂತಿನ ಮೊತ್ತವಾದ 40 ಸಾವಿರ ರೂ. ಖಾತೆಗೆ ಜಮೆಯಾಗುತ್ತಲೇ 11 ವಿವಾಹಿತ ಮಹಿಳೆಯರು ತಮ್ಮ ಪ್ರಿಯತಮರೊಂದಿಗೆ ಪರಾರಿಯಾಗಿದ್ದಾರೆ. ಇದರಿಂದ ಮಹಿಳೆಯರ ಗಂಡಂದಿರು ಕಂಗಲಾಗಿದ್ದಾರೆ.

ಹೌದು, ನಿಚ್ಲಾಲ್‌ ಬ್ಲಾಕ್‌ನಲ್ಲಿರುವ 11 ಗ್ರಾಮಗಳ ಮಹಿಳೆಯರು ತಮ್ಮ ಬ್ಯಾಂಕ್‌ ಖಾತೆಗೆ ಪಿಎಂ ಆವಾಸ್‌ ಯೋಜನೆಯ ಮೊದಲ ಕಂತಿನ ಮೊತ್ತವು ಜಮೆಯಾಗುತ್ತಲೇ ಪತಿಯರನ್ನು ತೊರೆದು ಪರಾರಿಯಾಗಿದ್ದಾರೆ. ಪ್ರಕರಣದ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿರುವ ಮಧ್ಯೆಯೇ, ಮಹಿಳೆಯರ ಗಂಡಂದಿರು ಹಿರಿಯ ಅಧಿಕಾರಿಗಳ ಮೊರೆ ಹೋಗಿದ್ದಾರೆ. ನಮ್ಮ ಪತ್ನಿಯರು ಪರಾರಿಯಾಗಿದ್ದು, ಅವರ ಬ್ಯಾಂಕ್‌ ಖಾತೆಗೆ ಎರಡನೇ ಕಂತಿನ ಮೊತ್ತವನ್ನು ಜಮೆ ಮಾಡದಂತೆ ಅಂಗಲಾಚಿದ್ದಾರೆ ಎಂದು ತಿಳಿದುಬಂದಿದೆ.

2023-24ನೇ ವಿತ್ತೀಯ ಸಾಲಿನಲ್ಲಿ ಮಹಾರಾಜ್‌ಗಂಜ್‌ ಜಿಲ್ಲೆ ನಿಚ್ಲಾಲ್‌ ಬ್ಲಾಕ್‌ನ 108 ಗ್ರಾಮಗಳ 2,350 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಇವುಗಳಲ್ಲಿ ಶೇ.90ರಷ್ಟು ಮನೆಗಳ ನಿರ್ಮಾಣವು ಪೂರ್ಣಗೊಂಡಿದೆ. ತುತ್ತಿಬರಿ, ಶೀತಲಾಪುರ, ಚಾಟಿಯಾ, ರಾಮನಗರ, ಕಿಶನ್‌ಪುರ, ಮೇಧೌಳಿ ಸೇರಿ 11 ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ಮೊದಲ ಕಂತಿನ 40 ಸಾವಿರ ರೂ. ಜಮೆಯಾಗಿದೆ. ಖಾತೆಗೆ ಹಣ ಜಮೆಯಾಗುವ ಕುರಿತು ಮೊದಲೇ ಮಾಹಿತಿ ಇದ್ದ ಮಹಿಳೆಯರು, ತಮ್ಮ ಪ್ರಿಯತಮರಿಗೆ ವಿಷಯ ತಿಳಿಸಿದ್ದರು. ಹಣ ಜಮೆಯಾಗುತ್ತಲೇ ಅವರು ಗೆಳೆಯರೊಂದಿಗೆ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಮನೆ ಆಸೆಗೆ ಮಡದಿಯ ಕಳೆದುಕೊಂಡರು

ಸ್ವಂತ ಮನೆ ಹೊಂದುವ ಕನಸಿನೊಂದಿಗೆ ಮಹಿಳೆಯರ ಪತಿಯರು ಪಿಎಂ ಆವಾಸ್‌ ಯೋಜನೆಗೆ ಅರ್ಜಿ ಹಾಕಿದ್ದರು. ಅರ್ಜಿ ಹಾಕುವಾಗ ಪತ್ನಿಯರ ಬ್ಯಾಂಕ್‌ ಖಾತೆಯ ಸಂಖ್ಯೆಯನ್ನೇ ನಮೂದಿಸಿದ್ದರು. ಹಾಗಾಗಿ ಅವರ ಬ್ಯಾಂಕ್‌ ಖಾತೆಗಳಿಗೆ ಹಣ ಜಮೆಯಾಗಿದೆ. ಈಗ ಪತಿಯರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ನಮ್ಮ ಬ್ಯಾಂಕ್‌ ಖಾತೆಯಿಂದ ಮಾಸಿಕವಾಗಿ ಹಣ ಕಡಿತಗೊಳಿಸಬಾರದು ಎಂಬುದಾಗಿ ಅಂಗಲಾಚುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Murder case : ಕಾಡಿಗೆ ಹೋದ ಮಹಿಳೆಯ ಕತ್ತು ಕೊಯ್ದು ಕೊಲೆ; ಹಂತಕರು ಪರಾರಿ

Continue Reading

ದೇಶ

Amritpal Singh: ತಾಯಿ ವಿರುದ್ಧವೇ ಹೇಳಿಕೆ ನೀಡಿದ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್‌ಪಾಲ್‌ ಸಿಂಗ್‌; ಕಾರಣವೇನು?

Amritpal Singh: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಜೈಲಿನಿಂದಲೇ ಸ್ಪರ್ಧಿಸಿ ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ ಜಯಗಳಿಸಿರುವ ಖಲಿಸ್ತಾನಿ ತ್ಯೇಕತಾವಾದಿ ಅಮೃತ್‌ಪಾಲ್‌ ಸಿಂಗ್‌ ತನ್ನ ತಾಯಿ ಬಲ್ವಿಂದರ್ ಕೌರ್ ಹೇಳಿದ್ದ ತಾನು ಖಲಿಸ್ತಾನಿ ಬೆಂಬಲಿಗನಲ್ಲ ಎಂಬ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾನೆ. ಶುಕ್ರವಾರ ಹೇಳಿಕೆ ನೀಡಿದ್ದ ಬಲ್ವಿಂದರ್ ಕೌರ್ ತನ್ನ ಮಗ (ಅಮೃತ್‌ಪಾಲ್‌) ಖಲಿಸ್ತಾನಿ ಬೆಂಬಲಿಗನಲ್ಲ ಎಂದು ಹೇಳಿದ್ದರು.

VISTARANEWS.COM


on

Amritpal Singh
Koo

ಚಂಡಿಗಢ: ಈ ಬಾರಿಯ ಲೋಕಸಭೆ ಚುನಾವಣೆ (Lok Sabha Election)ಯಲ್ಲಿ ಜೈಲಿನಿಂದಲೇ ಸ್ಪರ್ಧಿಸಿ ಪಂಜಾಬ್‌ನ ಖದೂರ್ ಸಾಹಿಬ್ (Khadoor Sahib) ಕ್ಷೇತ್ರದಿಂದ ಜಯಗಳಿಸಿರುವ ಖಲಿಸ್ತಾನಿ (Khalistani) ಪ್ರತ್ಯೇಕತಾವಾದಿ ಅಮೃತ್‌ಪಾಲ್‌ ಸಿಂಗ್‌(Amritpal Singh) ತನ್ನ ತಾಯಿ ಬಲ್ವಿಂದರ್ ಕೌರ್ (Balwinder Kaur) ಹೇಳಿದ್ದ ತಾನು ಖಲಿಸ್ತಾನಿ ಬೆಂಬಲಿಗನಲ್ಲ ಎಂಬ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾನೆ. ಶುಕ್ರವಾರ ಹೇಳಿಕೆ ನೀಡಿದ್ದ ಬಲ್ವಿಂದರ್ ಕೌರ್ ತನ್ನ ಮಗ (ಅಮೃತ್‌ಪಾಲ್‌) ಖಲಿಸ್ತಾನಿ ಬೆಂಬಲಿಗನಲ್ಲ ಎಂದು ಹೇಳಿದ್ದರು. ಇದನ್ನು ನಿರಾಕರಿಸಿರುವ ಅಮೃತ್‌ಪಾಲ್‌, ತನ್ನ ತಾಯಿಯನ್ನು ಟೀಕಿಸಿ, ಖಾಲ್ಸಾ ರಾಜ್ ಕನಸು ಕಾಣುವುದು ಅಪರಾಧವಲ್ಲ, ಅದು ಹೆಮ್ಮೆಯ ವಿಷಯ ಎಂದು ತಿರುಗೇಟು ನೀಡಿದ್ದಾನೆ. ಜತೆಗೆ ಪಂತ್ (ಧರ್ಮ) ಮತ್ತು ಕುಟುಂಬ ಎಂಬ ಎರಡು ಆಯ್ಕೆಯ ಪೈಕಿ ತನ್ನ ಆದ್ಯತೆ ಯಾವತ್ತಿದ್ದರೂ ಧರ್ಮವೇ ಆಗಿರುತ್ತದೆ ಎಂದು ಹೇಳಿದ್ದಾನೆ.

ದೆಹಲಿಯಲ್ಲಿ ತಮ್ಮ ಮಗ ಸಂಸದನಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಲ್ವಿಂದರ್ ಕೌರ್, ʼʼಅಮೃತ್‌ಪಾಲ್‌ ಖಲಿಸ್ತಾನಿ ಬೆಂಬಲಿಗನಲ್ಲ. ಹೀಗಾಗಿ ಆತನನ್ನು ಜೈಲಿನಿಂದ ತಕ್ಷಣವೇ ಬಿಡುಗಡೆ ಮಾಡಬೇಕು. ಆತ ಪಂಜಾಬ್‌ ಹಕ್ಕುಗಳ ಬಗ್ಗೆ ಮಾತನಾಡುತ್ತಾನೆ ಮತ್ತು ಪಂಜಾಬ್‌ನ ಯುವಕರನ್ನು ಮಾದಕ ವಸ್ತುಗಳಿಂದ ರಕ್ಷಿಸುವ ಬಗ್ಗೆ ಒಲವು ಹೊಂದಿದ್ದಾನೆ. ಇಂತಹವರು ಹೇಗೆ ತಾನೆ ಖಲಿಸ್ತಾನದ ಬೆಂಬಲಿಗರಾಗುತ್ತಾರೆ? ಆತ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಈಗ ಪ್ರಮಾಣ ವಚನ ಸ್ವೀಕರಿಸಿದ್ದಾನೆ. ಆತ ಪಂಜಾಬ್‌ಗಾಗಿ ಧ್ವನಿ ಎತ್ತಲಿದ್ದಾನೆʼʼ ಎಂದು ತಿಳಿಸಿದ್ದರು.

ಅಮೃತ್‌ಪಾಲ್‌ ಹೇಳಿದ್ದೇನು?

ಇದಕ್ಕೆ ತಿರುಗೇಟು ನೀಡಿರುವ ಅಮೃತ್‌ಪಾಲ್‌ ಸಿಂಗ್‌, “ನಿನ್ನೆ ಮಾತಾಜಿ ನೀಡಿದ ಹೇಳಿಕೆಯಿಂದ ನನಗೆ ತುಂಬಾ ದುಃಖವಾಯಿತು. ಮಾತಾಜಿ ತಿಳಿಯದೆ ಈ ರೀತಿಯ ಹೇಳಿಕೆ ನೀಡಿದ್ದಾರೆ. ಅಂತಹ ಹೇಳಿಕೆ ನನ್ನ ಕುಟುಂಬದಿಂದ ಅಥವಾ ನನ್ನನ್ನು ಬೆಂಬಲಿಸುವ ಯಾರಿಂದಲೂ ಬರಬಾರದು. ಖಾಲ್ಸಾ ರಾಜ್ ಕನಸು ಕಾಣುವುದು ಅಪರಾಧವಲ್ಲ, ಅದು ಹೆಮ್ಮೆಯ ವಿಷಯ. ಲಕ್ಷಾಂತರ ಸಿಖರು ತಮ್ಮ ಪ್ರಾಣ ತ್ಯಾಗ ಮಾಡಿದ ಈ ಮಾರ್ಗದಿಂದ ನಾನು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನನ್ನ ಮುಂದೆ ಕುಟುಂಬ ಮತ್ತು ಧರ್ಮದ ಆಯ್ಕೆ ಇಟ್ಟರೆ ನಾನು ಧರ್ಮವನ್ನೇ ಆರಿಸುತ್ತೇನೆ. ಭವಿಷ್ಯದಲ್ಲಿ ಸಂವಹನ ನಡೆಸುವಾಗ ಇಂತಹ ನಿರ್ಲಕ್ಷ್ಯ ಮತ್ತೆ ಸಂಭವಿಸಬಾರದು” ಎಂದು ಹೇಳಿದ್ದಾನೆ.

ಯೂಟರ್ನ್‌ ಹೊಡೆದ ಬಲ್ವಿಂದರ್ ಕೌರ್

ಬಲ್ವಿಂದರ್ ಕೌರ್ ಅವರ ಹೇಳಿಕೆಯು ಚುನಾವಣೆಯಲ್ಲಿ ಅಮೃತ್‌ಪಾಲ್‌ ಸಿಂಗ್‌ಗೆ ಮತ ಚಲಾಯಿಸಿದ ಖಲಿಸ್ತಾನಿ ಪರ ಬೆಂಬಲಿಗರನ್ನು ಕೆರಳಿಸಿದೆ. ಇದರಿಂದ ಎಚ್ಚೆತ್ತ ಬಲ್ವಿಂದರ್ ಕೌರ್ ಮಾಧ್ಯಮಗಳ ಮೇಲೆ ತಪ್ಪು ಹೊರಿಸಿದ್ದಾರೆ. ತನ್ನ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ನಿರೂಪಿಸುತ್ತಿವೆ ಎಂದು ಜಾರಿಕೊಳ್ಳಲು ಯತ್ನಿಸಿದ್ದಾರೆ.

“ನಾವು ಸಂವಿಧಾನದ ಪ್ರಕಾರ ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ನಾನು ಹೇಳಿದ್ದೆ. ಖಲಿಸ್ತಾನದ ಬಗ್ಗೆ ಕೇಳುವ ಮೂಲಕ ಮಾಧ್ಯಮಗಳು ನನ್ನ ದಾರಿ ತಪ್ಪಿಸಿವೆ. ಮಾಧ್ಯಮಗಳು ಸತ್ಯಗಳನ್ನು ತಪ್ಪಾಗಿ ನಿರೂಪಿಸುವ ಅಭ್ಯಾಸವನ್ನು ಹೊಂದಿರುವುದರಿಂದ ಬೆಂಬಲಿಗರು ನನ್ನ ಹೇಳಿಕೆಯನ್ನು ಬೇರೆ ರೀತಿಯಲ್ಲಿ ಅರ್ಥೈಸಬಾರದು” ಎಂದು ಸಮರ್ಥನೆ ಮಾಡಿಕೊಳ್ಳಲು ಮುಂದಾಗಿದ್ದಾರೆ.

ಇದನ್ನೂ ಓದಿ: ವಿಸ್ತಾರ Explainer: ಯಾರು ಈ ಖಲಿಸ್ತಾನಿ, ಪ್ರತ್ಯೇಕತಾವಾದಿ ನಾಯಕ ಅಮೃತ್​ಪಾಲ್​ ಸಿಂಗ್‌?

Continue Reading

ದೇಶ

Hit and Run Case: ಶಿವಸೇನೆ ಮುಖಂಡನ ಪುತ್ರನಿಂದ ಡ್ರಂಕ್‌ ಆ್ಯಂಡ್‌ ಡ್ರೈವ್‌; ಸ್ಕೂಟರ್‌ಗೆ BMW ಕಾರು ಡಿಕ್ಕಿ ಹೊಡೆದು ಮಹಿಳೆ ಸಾವು

Hit and Run Case:ಕೋಳಿವಾಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಾವೇರಿ ನಖ್ವಾ ಮತ್ತು ಪ್ರದೀಕ್‌ ನಖ್ವಾ ಎಂಬ ದಂಪತಿ ಹೋಗುತ್ತಿದ್ದ ಬೈಕ್‌ಗೆ BMW ಕಾರು ಡಿಕ್ಕಿ ಹೊಡೆದು ಎಸ್ಕೇಪ್‌ ಆಗಿದ್ದಾನೆ. ಬೆಳಗ್ಗೆ 5:30ರ ಸಮಯದಲ್ಲಿ ದಂಪತಿ ಸಾಸಾನ್‌ ಡಾಕ್‌ ಮಾರುಕಟ್ಟೆಯಿಂದ ಮೀನು ಖರೀದಿಸಿ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ದಂಪತಿ ಪ್ರದೀಕ್‌ ನಖ್ವಾ ಮಾರುಕಟ್ಟೆಯಲ್ಲಿ ಮೀನಿನ ವ್ಯಾಪಾರಿಯಾಗಿದ್ದಾರೆ.

VISTARANEWS.COM


on

Hit and Run case
Koo

ಮುಂಬೈ: ಪುಣೆ ಪೋರ್ಶ್‌ ಕಾರು ಹಿಟ್‌ ಆಂಡ್‌ ರನ್‌ ಕೇಸ್‌(Hit and Run Case) ಮಾಸುವ ಮುನ್ನವೇ ಮುಂಬೈನಲ್ಲೂ ಅಂತಹದ್ದೇ ಒಂದು ಘಟನೆ ವರದಿಯಾಗಿದೆ. ಮೀನು ತರಲೆಂದು ಮನೆಯಿಂದ ಹೊರಗೆ ಬಂದಿದ್ದ ದಂಪತಿಗೆ ಬಿಎಂಡಬ್ಲ್ಯೂ ಕಾರು(BMW Car) ಡಿಕ್ಕಿ ಹೊಡೆದಿದೆ. ಇನ್ನು ಕುಡಿದು ಕಾರು ಓಡಿಸಿದ ಚಾಲಕ ಘಟನೆ ಬಳಿಕ ಕಾರು ಸಮೇತ ಎಸ್ಕೇಪ್‌ ಆಗಿದ್ದಾನೆ. ಮುಂಬೈಯ ವರ್ಲಿಯಲ್ಲಿ ಈ ಘಟನೆ ನಡೆದಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ಪತಿಗೆ ಗಂಭೀರ ಗಾಯಗಳಾಗಿವೆ.

ಕೋಳಿವಾಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಾವೇರಿ ನಖ್ವಾ ಮತ್ತು ಪ್ರದೀಕ್‌ ನಖ್ವಾ ಎಂಬ ದಂಪತಿ ಹೋಗುತ್ತಿದ್ದ ಬೈಕ್‌ಗೆ BMW ಕಾರು ಡಿಕ್ಕಿ ಹೊಡೆದು ಎಸ್ಕೇಪ್‌ ಆಗಿದ್ದಾನೆ. ಬೆಳಗ್ಗೆ 5:30ರ ಸಮಯದಲ್ಲಿ ದಂಪತಿ ಸಾಸಾನ್‌ ಡಾಕ್‌ ಮಾರುಕಟ್ಟೆಯಿಂದ ಮೀನು ಖರೀದಿಸಿ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ದಂಪತಿ ಪ್ರದೀಕ್‌ ನಖ್ವಾ ಮಾರುಕಟ್ಟೆಯಲ್ಲಿ ಮೀನಿನ ವ್ಯಾಪಾರಿಯಾಗಿದ್ದಾರೆ. ಕಾರು ಡಿಕ್ಕಿಯಗುತ್ತಿದ್ದಂತೆ ರಸ್ತೆಗೆ ಬಿದ್ದಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಕಾವೇರಿ ಮತ್ತು ಪ್ರದೀಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾವೇರಿ ಕೊನೆಯುಸಿರೆಳೆದಿದ್ದಾರೆ.

ಶಿವಸೇನೆ ನಾಯಕನ ಪುತ್ರನಿಂದ ಡ್ರಂಕ್‌ ಆಂಡ್‌ ಡ್ರೈವ್‌

ಇನ್ನು ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಕಾರನ್ನು ಪತ್ತೆ ಹಚ್ಚಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆಯವರ ಶಿವಸೇನೆ ಬಣದ ಪಾಲ್ಗರ್‌ ಜಿಲ್ಲಾ ಉಪಾಧ್ಯಕ್ಷ ರಾಜೇಶ್‌ ಅವರ ಪುತ್ರನಿಂದ ಈ ಕೃತ್ಯ ನಡೆದಿದೆ ಎಂಬುದು ಬಯಲಾಗಿದೆ. ರಾಜೇಶ್‌ ಅವರ 24 ವರ್ಷದ ಪುತ್ರ ಮಿಹಿರ್‌ ಶಾ ಕುಡಿದು ವಾಹನ ಚಲಾಯಿಸಿ ಮಹಿಳೆಯ ಸಾವಿಗೆ ಕಾರಣವಾಗಿದ್ದಾನೆ. ಮಿಹಿರ್‌ ಮತ್ತು ಆತನ ಕಾರಿನ ಚಾಲಕ ಕಾರಿನಲ್ಲಿದ್ದರು ಎನ್ನಲಾಗಿದೆ.

ಮಿಹಿರ್‌ ನಾಪತ್ತೆ, ಪೊಲೀಸರ ಹುಡುಕಾಟ

ಇನ್ನು ಘಟನೆ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಮಿಹಿರ್‌ ಶಾ ನಾಪತ್ತೆಯಾಗಿದ್ದಾನೆ. ಮಿಹಿರ್‌ ಶಾ ತನ್ನ ಫೋನನ್ನೂ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ. ಪೊಲೀಸರ ಪ್ರಕಾರ ಮಿಹಿರ್‌ ಕಳೆದ ರಾತ್ರಿ ಜೂಹೂ ಪ್ರದೇಶದಲ್ಲಿರುವ ಬಾರ್‌ನಲ್ಲಿ ಕಂಠಪೂರ್ತಿ ಕುಡಿದಿದ್ದು. ತನ್ನ ಮನೆಗೆ ಹಿಂದಿರುಗುವ ವೇಳೆ ಲಾಂಗ್‌ ಡ್ರೈವ್‌ ಕರೆದುಕೊಂಡು ಹೋಗುವಂತೆ ಡ್ರೈವರ್‌ಗೆ ಹೇಳಿದ್ದಾನೆ. ವರ್ಲಿಗೆ ತಲುಪುತ್ತಿದ್ದಂತೆ ತಾನು ಕಾರು ಚಲಾಯಿಸುವುದಕ್ಕೆ ಮುಂದಾಗಿದ್ದಾನೆ. ಆಗ ಅತ್ಯಂತ ವೇಗವಾಗಿ ಕಾರು ಚಲಾಯಿಸಿದ ಮಿಹಿರ್, ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಸಿಎಂ ಪ್ರತಿಕ್ರಿಯೆ

ಇನ್ನು ಘಟನೆ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾತ್‌ ಶಿಂಧೆ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ದುರಾದೃಷ್ಟಕರವಾದುದು. ಕಾನೂನಿನ ಎದುರು ಎಲ್ಲರೂ ಸಮಾನ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ. ಪೊಲೀಸರು ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Nafees Iqbal : ಬಾಂಗ್ಲಾದೇಶದ ಮಾಜಿ ಕ್ರಿಕೆಟಿಗನಿಗೆ ಮೆದುಳಿನ ರಕ್ತಸ್ರಾವ; ಪರಿಸ್ಥಿತಿ ಗಂಭೀರ

Continue Reading
Advertisement
Union Budget 2024
ದೇಶ4 mins ago

Union Budget 2024: ಆಯುಷ್ಮಾನ್‌ ಭಾರತ್‌ ಫಲಾನುಭವಿಗಳು ಡಬಲ್, ವಿಮೆ ಮೊತ್ತ 10 ಲಕ್ಷ ರೂ.ಗೆ ಏರಿಕೆ?

Mahadayi Water Dispute
ಕರ್ನಾಟಕ15 mins ago

Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

kalaburagi news
ಕಲಬುರಗಿ16 mins ago

Kalaburagi News : ಆಕ್ಸಿಜನ್ ಸೋರಿಕೆ! ತಾಲೂಕು ಆಸ್ಪತ್ರೆಯಿಂದ ಹೊರಗೆ ಓಡಿದ ರೋಗಿಗಳು

Kannada New Movie Firefly movie entry by achyuth kumar
ಸಿನಿಮಾ27 mins ago

Kannada New Movie: ಶಿವಣ್ಣನ ಪುತ್ರಿ ಜತೆ ಕೈ ಜೋಡಿಸಿದ ಅಚ್ಯುತ್ ಕುಮಾರ್!

Paris Olympics 2024
ಕ್ರೀಡೆ28 mins ago

Paris Olympics 2024: ಒಲಿಂಪಿಕ್ಸ್‌ಗೆ ಭಾರತದ ಎಲ್ಲ ಕ್ರೀಡಾಪಟುಗಳು ಫಿಟ್‌ ಎಂದ ಐಒಎ

Dolly Dhananjay zebra movie look out
ಸ್ಯಾಂಡಲ್ ವುಡ್43 mins ago

Dolly Dhananjay: ʻಜೀಬ್ರಾʼ ತಂಡದಿಂದ ಹೊರ ಬಿತ್ತು ʻಸತ್ಯದೇವ್ʼ ಫಸ್ಟ್‌ ಲುಕ್‌!

Viral News
ದೇಶ47 mins ago

ಪಿಎಂ ಆವಾಸ್‌ ಯೋಜನೆಯ 40 ಸಾವಿರ ರೂ. ಪಡೆದು 11 ಸ್ತ್ರೀಯರು ಗೆಳೆಯರೊಂದಿಗೆ ಪರಾರಿ; ಕಂಗಾಲಾದ ಪತಿಯರು!

Amritpal Singh
ದೇಶ47 mins ago

Amritpal Singh: ತಾಯಿ ವಿರುದ್ಧವೇ ಹೇಳಿಕೆ ನೀಡಿದ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್‌ಪಾಲ್‌ ಸಿಂಗ್‌; ಕಾರಣವೇನು?

Leopard attack three in Raichur
ರಾಯಚೂರು56 mins ago

Leopard attack : ರಾಯಚೂರಿನಲ್ಲಿ ಮೂವರ ಮೇಲೆ ದಾಳಿ ಮಾಡಿ ಕಾಲ್ಕಿತ್ತ ಚಿರತೆ!

Hit and Run case
ದೇಶ57 mins ago

Hit and Run Case: ಶಿವಸೇನೆ ಮುಖಂಡನ ಪುತ್ರನಿಂದ ಡ್ರಂಕ್‌ ಆ್ಯಂಡ್‌ ಡ್ರೈವ್‌; ಸ್ಕೂಟರ್‌ಗೆ BMW ಕಾರು ಡಿಕ್ಕಿ ಹೊಡೆದು ಮಹಿಳೆ ಸಾವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ10 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ21 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ಟ್ರೆಂಡಿಂಗ್‌