Uttara Kannada News: ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಸೂಚನೆ - Vistara News

ಉತ್ತರ ಕನ್ನಡ

Uttara Kannada News: ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಸೂಚನೆ

Uttara Kannada News: ಯಲ್ಲಾಪುರ ಪಟ್ಟಣದ ಗಾಂಧಿ ಕುಟೀರದಲ್ಲಿ ಮಂಗಳವಾರ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಚಾಲನೆ ನೀಡಿದರು. ಅಧಿಕಾರಿಗಳು ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು. ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಮುಗಿಸಿ ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

VISTARANEWS.COM


on

MLA Shivaram Hebbar spoke in Taluk level janaspandana programme yallapur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ಶಾಸಕಾಂಗ ಮತ್ತು ಕಾರ್ಯಾಂಗ ಒಂದು ರಥದ ಎರಡು ಗಾಲಿಯಿದ್ದಂತೆ. ನಾವೆಷ್ಟೇ ವೇಗವಾಗಿ ಮುನ್ನಡೆದರೂ, ಅಧಿಕಾರಿಗಳು ಅದನ್ನು ಅಷ್ಟೇ ವೇಗವಾಗಿ ಜಾರಿಗೆ ತರದಿದ್ದರೆ, ಅಭಿವೃದ್ಧಿ ಸಾಧಿಸಲು ಸಾಧ್ಯವಾಗದು ಎಂದು ಶಾಸಕ ಶಿವರಾಮ ಹೆಬ್ಬಾರ್ (Uttara Kannada News) ಹೇಳಿದರು.

ಪಟ್ಟಣದ ಗಾಂಧಿ ಕುಟೀರದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು. ನೀವು ಮಾಡುವ ಕೆಲಸದಿಂದ ಬಡವರ ಕಷ್ಟ ದೂರವಾಗುವುದಿದ್ದರೆ, ಅದಕ್ಕಾಗಿ ಕಾನೂನಿನ ತೊಡಕನ್ನು ಮಧ್ಯ ತಾರದಿರಿ. ಕಷ್ಟವನ್ನು ಅರಿತವರು ಮಾತ್ರ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಸಾಧ್ಯ. ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಮುಗಿಸಿ ಎಂದು ತಿಳಿಸಿದರು.

ಇದನ್ನೂ ಓದಿ: Eshwar Khandre: ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ; ಸಚಿವ ಈಶ್ವರ ಖಂಡ್ರೆ

ಸಭೆಯುದ್ದಕ್ಕೂ ಹೆಸ್ಕಾಂ ಹಾಗೂ ಕೆಎಸ್‌ಆರ್‌ಟಿಸಿ ಚರ್ಚೆಯ ವಿಷಯವಾಗಿತ್ತು. ಹೆಸ್ಕಾಂ ಗ್ರಾಮೀಣ ಭಾಗದಲ್ಲಿ ಕರೆಂಟ್‌ ಕಣ್ಣಾಮುಚ್ಚಾಲೆಯಾಡುತ್ತಿದೆ. ಕಳಚೆ ಭಾಗದಲ್ಲಿ ಭೂಕುಸಿತದ ನಂತರ 3 ಕಿಮೀ ಹೊಸದಾಗಿ ಲೈನ್‌ ಎಳೆಯಲಾಗಿದ್ದು, ಈವರೆಗೂ ಸಹ ಅದರಿಂದ ಮನೆಗಳಿಗೆ ವಿದ್ಯುತ್‌ ಸಂಪರ್ಕ ನೀಡಲಾಗಿಲ್ಲ ಎಂದು ಗ್ರಾಮಸ್ಥರು ದೂರಿದರು. ಯು.ಕೆ. ನೇಚರ್‌ ಸ್ಟೇ ಮಾಲಿಕ ನಿರಂಜನ ಹೆಗಡೆ, ಪ್ರವಾಸೋದ್ಯಮವನ್ನು ಬೆಳೆಸಬೇಕೆಂದು ಎಲ್ಲರೂ ಹೇಳುತ್ತಾರೆ. ಆದರೆ ಗ್ರಾಮೀಣ ಭಾಗದಲ್ಲಿರುವ ಹೋಂ ಸ್ಟೇಗಳಿಗೆ ವಿದ್ಯುತ್‌ ವ್ಯತ್ಯಯ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಪಟ್ಟಣ ಪ್ರದೇಶದಲ್ಲಿ ಕರೆಂಟ್‌ ಇದ್ದರೂ, ಗ್ರಾಮೀಣ ಭಾಗದಲ್ಲಿ ಸಂಜೆ ಹೋದರೆ ಬೆಳಗ್ಗಿನವರೆಗೂ ಬರುವುದಿಲ್ಲ. ಇದರಿಂದ ನಾವು ಉದ್ಯಮ ನಡೆಸುವುದು ಕಷ್ಟಸಾಧ್ಯವಾಗಿದೆ ಎಂದು ಆರೋಪಿಸಿದರು.

ಆನಗೋಡು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೆಲ ಮನೆಗಳ ಮೇಲೆ ವಿದ್ಯುತ್‌ ತಂತಿ ಹಾದುಹೋಗುತ್ತಿದ್ದು, ಇದನ್ನು ತೆರವುಗೊಳಿಸುವಂತೆ ಪಂಚಾಯಿತಿ ಉಪಾಧ್ಯಕ್ಷೆ ಕೋರಿದರು. ತಾಲೂಕಿನಲ್ಲಿ ವಿದ್ಯುತ್‌ ಸಂಪರ್ಕಕ್ಕಾಗಿ ಕೋಟ್ಯಾಂತರ ರೂ.ಗಳನ್ನು ವ್ಯಯಿಸಲಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಮರ್ಪಕ ಸಂಪರ್ಕ ಒದಗಿಸಿ ಎಂದು ಶಾಸಕ ಶಿವರಾಮ ಹೆಬ್ಬಾರ್‌ ಸೂಚಿಸಿದರು.

ಇನ್ನು ಗ್ರಾಮೀಣ ಭಾಗದಲ್ಲಿ ಬಸ್‌ ಸೌಲಭ್ಯ ಸಮರ್ಪಕವಾಗಿಲ್ಲದಿದ್ದು, ಇದರಿಂದ ಪಟ್ಟಣಕ್ಕೆ ಬರುವ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹೆಚ್ಚುವರಿ ಬಸ್‌ಗಳನ್ನು ಬಿಡಬೇಕೆಂದು ಸಾರ್ವಜನಿಕರು ಆಗ್ರಹಿಸಿದರು.

ಇದನ್ನೂ ಓದಿ: Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

ಇದೇ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ಕುಟುಂಬಸ್ಥರು, ಇಲ್ಲಿನ ಸಿಬ್ಬಂದಿಗೆ ವಸತಿ ವ್ಯವಸ್ಥೆ ಇಲ್ಲದಾಗಿದೆ. ಇಲ್ಲಿ ಕಾರ್ಯ ನಿರ್ವಹಿಸುವ ಬಹುತೇಕರು ಉತ್ತರ ಕರ್ನಾಟಕ ಭಾಗದಿಂದ ಆಗಮಿಸಿರುತ್ತಾರೆ. ಬಾಡಿಗೆ ಮನೆ ನಿರ್ವಹಣೆ ಕಷ್ಟವಾಗಿದೆ. ಹೀಗಾಗಿ ಸಿಬ್ಬಂದಿಗಳಿಗಾಗಿ ವಸತಿ ಸಮುಚ್ಛಯ ನಿರ್ಮಾಣ ಮಾಡಿಕೊಡುವಂತೆ ಅವರು ತಮ್ಮ ಅಹವಾಲು ಸಲ್ಲಿಸಿದರು.

ತಾಲೂಕಿನ ಪ್ರವಾಸಿ ಸ್ಥಳಗಳಿಗೆ ಹೆಚ್ಚುವರಿ ವಾಹನ ಶುಲ್ಕ ವಸೂಲಾತಿ ಮಾಡಲಾಗುತ್ತಿರುವ ಕುರಿತು ದೂರು ಕೇಳಿಬಂದ ಹಿನ್ನೆಲೆಯಲ್ಲಿ, ಯಾವುದೇ ಕಾರಣಕ್ಕೂ ಜಿಲ್ಲಾಧಿಕಾರಿಗಳ ಆದೇಶ ಇಲ್ಲದೇ ಶುಲ್ಕ ವಸೂಲಾತಿ ಮಾಡಬಾರದು. ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸಬೇಕೆ ಹೊರತು ಪ್ರವಾಸಿಗರ ಮೇಲೆ ಹೊರೆ ಹೇರಬಾರದು ಎಂದು ಶಾಸಕ ಶಿವರಾಮ ಹೆಬ್ಬಾರ್‌ ಎಚ್ಚರಿಸಿದರು. ಈ ಕುರಿತು ವಿಎಫ್‌ಸಿ ಅಧ್ಯಕ್ಷರು ಹಾಗೂ ಪೊಲೀಸ್‌ ಇಲಾಖೆಯ ಒಂದು ಸಭೆ ಕರೆಯುವಂತೆ ಸಿಪಿಐ ಅವರಿಗೆ ಸೂಚಿಸಿದರು.

ಬೇಡ್ತಿ ಕುಡಿಯುವ ನೀರಿನ ಯೋಜನೆಗೆ ಬಳಸಲಾದ ಯಂತ್ರೋಪಕರಣಗಳು ಲಕ್ಷಾಂತರ ಮೌಲ್ಯದ್ದಾಗಿದ್ದು, ಅವುಗಳು ಕಳುವಾಗಿರುವ ಕುರಿತು ಸಮರ್ಪಕ ತನಿಖೆಯಾಗಬೇಕು ಎಂದು ಶಾಸಕರು ಆಗ್ರಹಿಸಿದರು. ಅಂತೆಯೇ ಸರ್ಕಾರಿ ಅಧಿಕಾರಿಗಳು, ಕೃಷಿ ಜಮೀನಿನಲ್ಲಿ ನಿರ್ಮಿಸಲಾದ ನಿವೇಶನಗಳನ್ನು ಕೊಂಡು, ಮನೆ ನಿರ್ಮಿಸುವ ಮುನ್ನ ಯೋಚಿಸಬೇಕು. ಅವುಗಳಿಗೆ ಈ ಸ್ವತ್ತು ಮಾಡಲು ಸಾಧ್ಯವಿಲ್ಲ. ಹೀಗಾಗಿ ಇನ್ನು ಮುಂದೆ ಆಲೋಚಿಸಿ ತಮ್ಮ ಹಣ ಹೂಡಿಕೆ ಮಾಡಿ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ 3 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಸೇರಿದಂತೆ ವಿವಿಧ ಇಲಾಖೆಯ ಫಲಾನುಭವಿಗಳಿಗೆ ಆದೇಶ ಪತ್ರ ಹಂಚಲಾಯಿತು. ಸಭೆಯಲ್ಲಿ 43 ಅರ್ಜಿ ಸಲ್ಲಿಕೆಯಾಗಿದ್ದು ಈ ಪೈಕಿ 17 ಅರ್ಜಿಯನ್ನು ಸ್ಥಳದಲ್ಲಿಯೇ ಪರಿಹರಿಸಿ ಆದೇಶ ಪತ್ರ ನೀಡಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎನ್.ಆರ್. ಹೆಗಡೆ, ಇಡಗುಂದಿ ಗ್ರಾ.ಪಂ. ಅಧ್ಯಕ್ಷ ಶ್ರೀಕಾಂತ ಶೆಟ್ಟಿ, ಪ.ಪಂ. ಸದಸ್ಯೆ ಸುನಂದಾ ದಾಸ್, ಗ್ರಾ.ಪಂ. ಅಧ್ಯಕ್ಷರು ಹಾಗೂ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ತಹಸೀಲ್ದಾರ್ ಅಶೋಕ್ ಭಟ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದಿಲೀಪ್‌ ದೊಡ್ಮನಿ ನಿರ್ವಹಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

Karnataka Rain : ಬೆಂಗಳೂರು, ಧಾರವಾಡ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ (Heavy Rain Effect) ಮಳೆಯಾಗಿದ್ದು, ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಮಳೆಗೆ ಮರಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಈ ಮಧ್ಯೆ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು/ಕಾರವಾರ: ಭಾನುವಾರವೂ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಕೆಲವೆಡೆ ಮಳೆಯು (Heavy Rain) ಅಬ್ಬರಿಸಿತ್ತು. ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣ (Karnataka Rain) ಇತ್ತು.. ಸಂಜೆ ಆಗುತ್ತಿದ್ದಂತೆ ಮೆಜೆಸ್ಟಿಕ್‌, ಕಾಟನ್‌ಪೇಟೆ, ಕೆಆರ್‌ ಮಾರ್ಕೆಟ್‌ ,ಟೌನ್ ಹಾಲ್, ಶಿವಾನಂದ ಸರ್ಕಲ್, ಮೈಸೂರು ಸರ್ಕಲ್ ಸುತ್ತಮುತ್ತ ಮಳೆಯಾಗಿದೆ. ಜಿಟಿ ಜಿಟಿಯಾಗಿ ಶುರುವಾದ ಮಳೆಯು ನಂತರ ಕೆಲ ಕಾಲ ಅಬ್ಬರಿಸಿತ್ತು. ಇತ್ತ ಧಾರವಾಡ ನಗರದಲ್ಲೂ ನಿರಂತರ ಮಳೆಯಾಗಿದೆ. ಬೆಳಗ್ಗೆಯಿಂದಲ್ಲೂ ಬಿಟ್ಟು ಬಿಡದೆ ಸುರಿಯುತ್ತಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಿಂದಾಗಿ ಸವಾರರು ಪರದಾಡಿದರು. ಧಾರವಾಡ ಗ್ರಾಮೀಣ ಕೆಲ ಭಾಗಗಳಲ್ಲಿ ಹೊರತುಪಡಿಸಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ.

ನಿರಂತರ ಮಳೆಗೆ ಗುಡ್ಡ ಕುಸಿತ

ಚಿಕ್ಕಮಗಳೂರಿನಲ್ಲಿ ಬಿಟ್ಟುಬಿಡದೆ ಮಳೆಯು ಸುರಿಯುತ್ತಿದ್ದು, ರಸ್ತೆ ಬದಿ ಗುಡ್ಡ ಕುಸಿತ ಹೆಚ್ಚಾಗುತ್ತಿದೆ. ಶೃಂಗೇರಿ ತಾಲೂಕಿನ ಕೂತು ಗೋಡು ಗ್ರಾಮದ ಬಳಿ ಘಟನೆ ನಡೆದಿದೆ. ಗುಡ್ಡ ಕುಸಿತದಿಂದಾಗಿ ಹಲವು ಗಂಟೆಗಳ ಕಾಲ ಸಂಚಾರ ಬಂದ್ ಆಗಿತ್ತು. ಅಧಿಕಾರಿಗಳು ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯದಲ್ಲಿ ತೊಡಗಿದ್ದರು. ಕಳೆದ ಏಳೆಂಟು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪದೆಪದೇ ಗುಡ್ಡದ ಮಣ್ಣು ಕುಸಿಯುತ್ತಿದೆ. ಹೀಗಾಗಿ ತಾಲೂಕು ಆಡಳಿತವು ಗುಡ್ಡಗಾಡು ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಅಂಕೋಲಾ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಗೆ ಮರವೊಂದು ಅಡ್ಡಲಾಗಿ ಬಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡಿತ್ತು. ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಇತ್ತ ಹೆದ್ದಾರಿ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆವರೆಗೆ ವಾಹನಗಳು ಹೆದ್ದಾರಿಯ ಮತ್ತೊಂದು ಬದಿಯಿಂದ ಸಂಚರಿಸುತ್ತಿದ್ದವು.

ಮುಂದುವರಿದ ಪ್ರವಾಸಿಗರ ಹುಚ್ಚಾಟ

ಬೆಳಗಾವಿಯ ಗೋಕಾಕ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ನೀರು ರಭಸವಾಗಿ ಧುಮ್ಮಿಕ್ಕುವ ಸ್ಥಳಗಳಲ್ಲಿ ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಜತೆಗೆ ಕೆಲವರು ಬಂಡೆಗಲ್ಲುಗಳ‌ ಮೇಲೆ ಕುಳಿತು ಊಟ ಮಾಡುತ್ತಿರುವುದು ಕಂಡು ಬಂದಿದೆ. ಜಲಪಾತಕ್ಕೆ ಭದ್ರತೆ ‌ಒದಗಿಸದೆ ಪೊಲೀಸರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಚೂರು ಆಯ ತಪ್ಪಿದರೂ ಸಹ ಅಪಾಯ ಗ್ಯಾರಂಟಿ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಮಳೆಯಲ್ಲೇ ಟ್ರಾಫಿಕ್‌ಗೆ ಸಿಲುಕಿದ ಪ್ರವಾಸಿಗರು

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಿತಾಣಕ್ಕೆ ಪ್ರವಾಸಿಗರ ದಂಡು ಹರಿದುಬರುತ್ತಿದ್ದು, ಮಳೆಯಲ್ಲೇ ಟ್ರಾಫಿಕ್‌ನಲ್ಲಿ ಸಿಲುಕಿದರು. ಸುಮಾರು ಎರಡು ಗಂಟೆ ಕಾಲ ನಿಂತಲ್ಲೇ ನಿಲ್ಲುಂತಾಯಿತು. ವೀಕೆಂಡ್ ಹಿನ್ನೆಲೆಯಲ್ಲಿ ಸಾವಿರಾರು ಟೂರಿಸ್ಟ್‌ಗಳು ಆಗಮಿಸಿದ್ದರು.

ಇದನ್ನೂ ಓದಿ: Rain News: ಕರಾವಳಿಯಲ್ಲಿ ಮುಂದುವರಿದ ವರುಣನ ಅಬ್ಬರ; ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ

ಮಳೆಗೆ ಜಲಾಶಯಗಳು ಭರ್ತಿ!

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ರಾಜ್ಯದ ಹಲವೆಡೆ ಜಲಾಶಯಗಳು ಭರ್ತಿಯಾಗುತ್ತಿವೆ. ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯ ಭರ್ತಿಗೆ ಎರಡು ಅಡಿ ಬಾಕಿ‌ ಇದೆ. ಕೇರಳದ ವೈನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ಒಳಹರಿವು ಗಣನೀಯವಾಗಿ ಏರಿಕೆ ಆಗುತ್ತಿದೆ. ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಅಣೆಕಟ್ಟಾಗಿದೆ.

ಇತ್ತ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳಗೊಂಡಿದೆ. ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರೀ ಪ್ರಮಾಣ ಹೆಚ್ಚಳವಾಗುತ್ತಿದ್ದು, 24 ಗಂಟೆಗಳಲ್ಲಿ ಬರೋಬ್ಬರಿ 5 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ನಿನ್ನೆ ಶನಿವಾರ 13.90 ಟಿಎಂಸಿ ಇದ್ದ ನೀರಿನ ಸಂಗ್ರಹ ಇಂದು ಭಾನುವಾರ 18. 24 ಗೆ ಏರಿಕೆ ಆಗಿದೆ.

ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳ ಹರಿವು ಇರುವುದರಿಂದ ರೈತರಲ್ಲಿ ಸಂತಸ ಹೆಚ್ಚಿಸಿದೆ. ತುಂಗಭದ್ರಾ ಜಲಾಶಯ ಕರ್ನಾಟಕ, ಆಂಧ್ರ ತೆಲಂಗಾಣ ರಾಜ್ಯಗಳ ರೈತರ ಜೀವನಾಡಿ ಆಗಿದೆ. ಇದೇ ರೀತಿ ಒಳ ಹರಿವು ಹೆಚ್ಚಾದರೆ 10 ರಿಂದ 15 ದಿನದಲ್ಲಿ ಜಲಾಶಯ ಭರ್ತಿ ಆಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain News: ಕರಾವಳಿಯಲ್ಲಿ ಮುಂದುವರಿದ ವರುಣನ ಅಬ್ಬರ; ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ

Rain News: ಕರಾವಳಿಯಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಧಾರಾಕಾರ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಹೆದ್ದಾರಿಯ ಒಂದು ಬದಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಭಾರೀ ಮಳೆಗೆ ಮಣ್ಣು ಸಡಿಲಗೊಂಡು ಕರ್ನಲ್ ಹಿಲ್ ಗುಡ್ಡ ಕುಸಿದು ರಾಷ್ಟ್ರೀಯ ಹೆದ್ದಾರಿ 66ಕ್ಕೆ ಮಣ್ಣು ಬಿದ್ದಿದೆ. ಅಲ್ಪ ಪ್ರಮಾಣದಲ್ಲಿ ಗುಡ್ಡ ಕುಸಿದ ಹಿನ್ನಲೆಯಲ್ಲಿ ಸಂಚಾರಕ್ಕೆ ಅವಕಾಶ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Rain News
Koo

ಉತ್ತರ ಕನ್ನಡ: ಕರಾವಳಿಯಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಧಾರಾಕಾರ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಹೆದ್ದಾರಿಯ ಒಂದು ಬದಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ (Rain News).

ಭಾರೀ ಮಳೆಗೆ ಮಣ್ಣು ಸಡಿಲಗೊಂಡು ಕರ್ನಲ್ ಹಿಲ್ ಗುಡ್ಡ ಕುಸಿದು ರಾಷ್ಟ್ರೀಯ ಹೆದ್ದಾರಿ 66ಕ್ಕೆ ಮಣ್ಣು ಬಿದ್ದಿದೆ. ಹೀಗಾಗಿ ಕುಮಟಾ-ಮಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಸದ್ಯ ಐಆರ್‌ಬಿ ಸಿಬ್ಬಂದಿ ಹೆದ್ದಾರಿ ಮೇಲೆ ಕುಸಿದ ಮಣ್ಣನ್ನು ತೆರವುಗೊಳಿಸುತ್ತಿದ್ದು, ಹೆದ್ದಾರಿಯ ಒಂದು ಬದಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಅಲ್ಪ ಪ್ರಮಾಣದಲ್ಲಿ ಗುಡ್ಡ ಕುಸಿದ ಹಿನ್ನಲೆಯಲ್ಲಿ ಸಂಚಾರಕ್ಕೆ ಅವಕಾಶ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕಡಲ ಅಬ್ಬರ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಡಲ ಅಬ್ಬರ ಜೋರಾಗಿದೆ. ಕಡಲತಡಿಯ ನಿವಾಸಿಗಳು ಅಲೆಗಳ ಅಬ್ಬರಕ್ಕೆ ಭಯಭೀತರಾಗಿದ್ದಾರೆ. ಜತೆಗೆ ಕಡಲ್ಕೊರೆತದಿಂದ ತೀರಪ್ರದೇಶದ ಮನೆ ಕುಸಿಯುವ ಅಪಾಯ ಎದುರಾಗಿದೆ. ಅಂಕೋಲಾ ತಾಲೂಕಿನ ಹಾರವಾಡ ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ಕಡಲ್ಕೊರೆತ ಕಂಡು ಬಂದಿದ್ದು, 50ಕ್ಕೂ ಅಧಿಕ ಮನೆಗಳು ಸಮುದ್ರ ಪಾಲಾಗುವ ಭೀತಿ ಎದುರಾಗಿದೆ. ಸದ್ಯ ತೀರ ಪ್ರದೇಶದ ನಿವಾಸಿಗಳು ಸಂಬಂಧಿಕರ ಮನೆಗಳಲ್ಲಿ ಆಶ್ರಯ ಪಡೆದಿದ್ದಾರೆ. ತಡೆಗೋಡೆ ಕೊಚ್ಚಿಹೋದ ಪರಿಣಾಮ ಕಳೆದ ಮೂರ್ನಾಲ್ಕು ದಿನಗಳಿಂದ ಕಡಲ್ಕೊರೆತ ತೀವ್ರವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸಮುದ್ರಕ್ಕೆ ಇಳಿಯದಂತೆ ಸೂಚನೆ

ಉಡುಪಿ: ಜಿಲ್ಲೆಯಲ್ಲಿ 3 ದಿನ ನಿರಂತರವಾಗಿ ಸುರಿದ ಮಳೆಗೆ ಇಂದು ಕೊಂಚ ಬಿಡುವು ಸಿಕ್ಕಿದೆ. ಹೀಗಾಗಿ ವೀಕೆಂಡ್ ಎಂಜಾಯ್ ಮಾಡಲು ಪ್ರವಾಸಿಗರರ ದಂಡು ಬೀಚ್‌ ಕಡೆಗೆ ಮುಖ ಮಾಡಿದೆ. ಆದರೆ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಉಡುಪಿ ಜಿಲ್ಲೆಯ ಕಾಪು ಬೀಚ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಸಮುದ್ರ ದಡದಲ್ಲಿಯೇ ಸೆಲ್ಫಿ ತೆಗೆದು ಸಮಾಧಾನಪಟ್ಟುಕೊಳ್ಳುತ್ತಿದ್ದಾರೆ. ಪ್ರವಾಸಿಗರಿಗೆ ಸಮುದ್ರಕ್ಕೆ ಇಳಿಯದಂತೆ ಲೈಫ್ ಗಾರ್ಡ್ಸ್ ಎಚ್ಚರಿಕೆ ನೀಡುತ್ತಿದ್ದು, ಬೀಚ್‌ ಉದ್ದಕ್ಕೂ ಕಣ್ಗಾವಲು ಇಟ್ಟಿದ್ದಾರೆ. ಹೀಗಾಗಿ ಪ್ರವಾಸಿಗರು ದೂರದಲ್ಲಿಯೇ ನಿಂತು ಕಡಲಬ್ಬರವನ್ನು ವೀಕ್ಷಿಸುತ್ತಿದ್ದಾರೆ. ಮಳೆ ನಿಂತ ಹಿನ್ನೆಲೆಯಲ್ಲಿ ಬೀಚ್‌ನಲ್ಲಿ ಸಮಯ ಕಳೆಯುವ ಉದ್ದೇಶದಿಂದ ಆಗಮಿಸಿದ ಪ್ರವಾಸಿಗರು ನಿರಾಸೆಯಿಂದ ವಾಪಸಾಗುತ್ತಿದ್ದಾರೆ.

ಸಮುದ್ರ ಪಾಲಾಗುತ್ತಿರುವ ಮೀನುಗಾರಿಕ ರಸ್ತೆ

ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಕಡಲು ಪ್ರಕ್ಷಬ್ಧಗೊಂಡಿದ್ದು, ಪಡುಕರೆ ಬೀಚ್‌ನಲ್ಲಿ ಅಬ್ಬರಿಸುತ್ತಿರುವ ರಕ್ಕಸಗಾತ್ರದ ಅಲೆಗಳಿಂದಾಗಿ ಮೀನುಗಾರಿಕ ರಸ್ತೆ ಸಮುದ್ರ ಪಾಲಾಗುತ್ತಿದೆ. ಸಮುದ್ರದ ಅಲೆಗಳ ಅಬ್ಬರ ಜಾಸ್ತಿಯಾದರೆ ರಸ್ತೆ ಸಂಪರ್ಕ ಕಡಿತವಾಗುವ ಭೀತಿ ಎದುರಾಗಿದೆ. ಗಾಳಿ ಮಳೆಯಿಂದಾಗಿ ಅರಬ್ಬಿ ಸಮುದ್ರ ಅಬ್ಬರಿಸುತ್ತಿದೆ. ಈಗಾಗಲೇ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Rain News: ಭಾರಿ ಮಳೆ ಹಿನ್ನೆಲೆ, ಜಲಪಾತ ವೀಕ್ಷಣೆ- ಟ್ರೆಕ್ಕಿಂಗ್‌ಗೆ ನಿರ್ಬಂಧ; ಈ ತಾಣಗಳಿಗೆ ಹೋಗಬೇಡಿ!

ಕಲಬುರಗಿಯಲ್ಲೂ ಮಳೆಯ ಅಬ್ಬರ

ಇನ್ನು ಕಲಬುರಗಿಯಲ್ಲಿ ಶನಿವಾರ ರಾತ್ರಿಯಿಡಿ ವರ್ಷಧಾರೆಯಾಗಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಫಜಲಪುರ ತಾಲೂಕಿನಲ್ಲಿ ಸಿದ್ದನೂರ್‌ನಿಂದ ರೆವೂರ್‌ಗೆ ಹೋಗುವ ಮಾರ್ಗದ ಬಳಿ ಇರುವ ಹಳ್ಳದಲ್ಲಿ ನೀರಿನ ಪ್ರಮಾನ ಹೆಚ್ಚಾಗಿದ್ದು, ಪ್ರಯಾಣಿಕರ ಪರದಾಡುತ್ತಿದ್ದಾರೆ.

Continue Reading

ಮಳೆ

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

Rain News : ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯು (Karnataka weather Forecast) ಅಬ್ಬರಿಸಲಿದ್ದು, ಗಾಳಿ ವೇಗವು ಗಂಟೆಗೆ 40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

VISTARANEWS.COM


on

By

karnataka weather Forecast
ಉಡುಪಿಯಲ್ಲಿ ರಸ್ತೆಯೇ ಕಾಣದಷ್ಟು ಅಬ್ಬರಿಸಿರುವ ಮಳೆ.. ರಸ್ತೆ ಕಾಣದೆ ಹೆಡ್‌ಲೈಟ್‌ ಹಾಕಿ ವಾಹನಗಳ ಸಂಚಾರ
Koo

ಬೆಂಗಳೂರು: ರಾಜ್ಯಾದ್ಯಂತ‌ ಮಳೆ ಅಬ್ಬರ (Karnataka Weather Forecast) ಮುಂದುವರಿದಿದೆ. ಕರ್ನಾಟಕ ಕರಾವಳಿಯಲ್ಲಿ ಭಾನುವಾರ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗಲಿದೆ. ಪ್ರತ್ಯೇಕ ಸ್ಥಳದಲ್ಲಿ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Heavy Rain Alert) ಸಾಧ್ಯತೆಯಿದೆ. ಇನ್ನೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ, ಕೆಲವಡೆ ಮಧ್ಯಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮಂಡ್ಯ, ರಾಮನಗರ, ಮೈಸೂರು ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಇನ್ನೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಯಚೂರು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಭಾಗದಲ್ಲಿ ಮಳೆಯಾಗಲಿದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

ಇದನ್ನೂ ಓದಿ: BESCOM Order : ವಿದ್ಯುತ್‌ ಕಂಬಗಳ ಮೇಲೆ ಅನಧಿಕೃತ ಕೇಬಲ್‌ ತೆರವಿಗೆ ಗಡುವು; ಬಿಸಿ ಮುಟ್ಟಿಸಲು ಸಜ್ಜಾದ ಬೆಸ್ಕಾಂ

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

40 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತಗೆ ಬೆಳಗಾವಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ಉ.ಕ ಜಿಲ್ಲೆಯಲ್ಲಿ ಕಡಿಮೆಯಾದ ಮಳೆ, 8 ಕಾಳಜಿ ಕೇಂದ್ರಗಳಲ್ಲಿ 26 ಜನರಿಗೆ ಆಶ್ರಯ: ಡಿಸಿ

Uttara Kannada News: ಉತ್ತರ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಬಹುತೇಕ ಮಂದಿ ತಮ್ಮ ನಿವಾಸಗಳಿಗೆ ತೆರಳಿದ್ದಾರೆ. ಪ್ರಸ್ತುತ 8 ಕಾಳಜಿ ಕೇಂದ್ರಗಳಲ್ಲಿ 26 ಜನರು ಆಶ್ರಯ ಪಡೆದಿದ್ದು, ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ತಿಳಿಸಿದ್ದಾರೆ.

VISTARANEWS.COM


on

26 people sheltered in 8 care centers of Uttara Kannada district says DC Lakshmipriya
Koo

ಕಾರವಾರ: ಜಿಲ್ಲೆಯಲ್ಲಿ ಶನಿವಾರ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಬಹುತೇಕ ಮಂದಿ ತಮ್ಮ ನಿವಾಸಗಳಿಗೆ ತೆರಳಿದ್ದಾರೆ. (Uttara Kannada News) ಪ್ರಸ್ತುತ 8 ಕಾಳಜಿ ಕೇಂದ್ರಗಳಲ್ಲಿ 26 ಜನರು ಆಶ್ರಯ ಪಡೆದಿದ್ದು, ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ವಿವಿಧ ಗ್ರಾಮಗಳ ಸಾರ್ವಜನಿಕರಿಗೆ ಹೊನ್ನಾವರದಲ್ಲಿ 7 ಮತ್ತು ಕುಮಟಾದಲ್ಲಿ 1 ಸೇರಿದಂತೆ ಒಟ್ಟು 8 ಕಾಳಜಿ ಕೇಂದ್ರಗಳನ್ನು ತೆರೆದಿದ್ದು, ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ತಾಲೂಕುಗಳ ತಹಸೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದೆ.
ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿಂದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

ಶನಿವಾರ ಕಾಳಿ ನದಿ ವ್ಯಾಪ್ತಿಯ ಕದ್ರಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಅಣೆಕಟ್ಟಿನಲ್ಲಿ ನೀರಿನ ಪ್ರಮಾಣವು ಜಿಲ್ಲಾಡಳಿತ ನಿಗದಿಪಡಿದ ಗರಿಷ್ಠ ಮಟ್ಟಕ್ಕಿಂತ ಕಡಿಮೆಯಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 3 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಬೆಂಗಳೂರಿನಿಂದ ಆಗಮಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣೆಯ 2 ತಂಡಗಳು ಮಂಕಿಯ ಪ್ರಾಕೃತಿಕ ವಿಕೋಪ ಕೇಂದ್ರದಲ್ಲಿ ತಂಗಿದ್ದು, ಯಾವುದೇ ತುರ್ತು ಕಾರ್ಯಾಚರಣೆಗೆ ಸಕಲ ರೀತಿಯಲ್ಲಿ ಈ ತಂಡಗಳು ಸನ್ನದ್ಧವಾಗಿವೆ.

ಇದನ್ನೂ ಓದಿ: Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಜಿಲ್ಲಾಡಳಿತದ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077 ಗೆ ಹಾಗೂ ಮೊ.ಸಂ. ಸಂಖ್ಯೆ 94835 11015 ಕರೆ, ಮೆಸೇಜ್, ವಾಟ್ಪಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ತಿಳಿಸಿದ್ದಾರೆ.

Continue Reading
Advertisement
Viral News
ದೇಶ9 mins ago

Viral News: ಶಾಕಿಂಗ್‌ ಘಟನೆ! ಬುದ್ದಿ ಹೇಳಿದ ಗುರುವನ್ನೇ ಚುಚ್ಚಿ ಕೊಂದ ವಿದ್ಯಾರ್ಥಿ

ಪ್ರಮುಖ ಸುದ್ದಿ17 mins ago

Ravi Bishnoi : ಭಾರತ ಪರ ಸ್ಪಿನ್​ ಬೌಲಿಂಗ್​​ನಲ್ಲಿ ವಿಶೇಷ ಸಾಧನೆ ಮಾಡಿದ ರವಿ ಬಿಷ್ಣೋಯ್​​

Shashi Tharoor
ಕ್ರೀಡೆ23 mins ago

Shashi Tharoor: ಜಿಂಬಾಬ್ವೆ ಎದುರು ಭಾರತಕ್ಕೆ ಸೋಲು: ಲೇವಡಿ ಮಾಡಿದ ಶಶಿ ತರೂರ್

Karnataka Rain
ಮಳೆ28 mins ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

Money Guide
ಮನಿ-ಗೈಡ್28 mins ago

Money Guide: ನಿಮ್ಮ ಎಲ್‌ಐಸಿ ಪಾಲಿಸಿ ಲ್ಯಾಪ್ಸ್‌ ಆಗಿದೆಯಾ? ನವೀಕರಿಸಲು ಹೀಗೆ ಮಾಡಿ

Mumbai Hit And Run
ದೇಶ29 mins ago

Mumbai Hit And Run: ಮುಂಬೈನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಮಹಿಳೆ ಬಲಿ; ಶಿವಸೇನೆ ನಾಯಕನ ಬಂಧನ!

Tharun Sudhir Bigg update marriage
ಸ್ಯಾಂಡಲ್ ವುಡ್39 mins ago

Tharun Sudhir: ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ತರುಣ್ ಸುಧೀರ್; ಹುಡುಗಿ ಹೇಗಿರಬೇಕು ಅಂದ್ರೆ….

Dengue Cases in Mysore
ಕರ್ನಾಟಕ40 mins ago

Dengue Cases in Mysore: ಮೈಸೂರಿನಲ್ಲಿ ಡೆಂಗ್ಯೂಗೆ ಜಯದೇವ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಸಾವು

ishan Kishan
ಪ್ರಮುಖ ಸುದ್ದಿ47 mins ago

Ishan Kishan : ನನ್ನನ್ನು ಹೊರಗಿಟ್ಟಿರುವ ತೀರ್ಮಾನ ಮೂರ್ಖತನದ್ದು; ಜಯ್​ ಶಾಗೆ ಟಾಂಗ್​ ಕೊಟ್ಟ ಇಶಾನ್​ ಕಿಶನ್​

Rishab Shetty Birthday pragati shetty cute wish
ಸಿನಿಮಾ1 hour ago

Rishab Shetty: ನನ್ನ ಜೀವನದ ಆಧಾರಸ್ತಂಭ ಎಂದು ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಪತ್ನಿ ಕ್ಯೂಟ್‌ ವಿಶ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ28 mins ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ11 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ23 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

ಟ್ರೆಂಡಿಂಗ್‌