Actor Darshan: ಒಂದೇ ಸೆಲ್‌ನಲ್ಲಿದ್ದರೂ ಶಿಷ್ಯನ ಮಾತನಾಡಿಸದ ದರ್ಶನ್‌, ʼಸಾಕು ನಿಮ್ಮ ಸಹವಾಸʼ ಎಂದ ಡಿ ಬಾಸ್ - Vistara News

ಕ್ರೈಂ

Actor Darshan: ಒಂದೇ ಸೆಲ್‌ನಲ್ಲಿದ್ದರೂ ಶಿಷ್ಯನ ಮಾತನಾಡಿಸದ ದರ್ಶನ್‌, ʼಸಾಕು ನಿಮ್ಮ ಸಹವಾಸʼ ಎಂದ ಡಿ ಬಾಸ್

Actor Darshan: ನಾನು ತಪ್ಪು ಮಾಡಿಬಿಟ್ನೋ ಅಥವಾ ಜೊತೆಯಲ್ಲಿದ್ದವರ ಮಾತು ಕೇಳಿ ಕೆಟ್ನೋ ಗೊತ್ತಿಲ್ಲ ಎಂದು ಸಿಬ್ಬಂದಿಗಳ ಬಳಿ ಆತ ಮಾತಾಡಿದ್ದು ವರದಿಯಾಗಿದೆ. ತಾಯಿ ಬಂದಾಗಲೂ, ಪತ್ನಿ ಬಂದಾಗಲೂ, ರಕ್ಷಿತಾ ಪ್ರೇಮ್ ಬಂದಾಗಲೂ ದರ್ಶನ್ ಇದೇ ಮಾತು ಹೇಳಿದ್ದಾರೆ ಎನ್ನಲಾಗಿದೆ.

VISTARANEWS.COM


on

Actor Darshan his brother-in-law homeless
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ (Parappana Agrahara) ಜೈಲುಪಾಲಾಗಿರುವ ನಟ ದರ್ಶನ್‌ (Actor Darshan), ಒಂದೇ ಸೆಲ್‌ನಲ್ಲಿರುವ ತನ್ನ ಶಿಷ್ಯ ವಿನಯ್‌ ಅನ್ನು ಕೂಡ ಹೆಚ್ಚು ಮಾತನಾಡಿಸುತ್ತಿಲ್ಲ, ಮೌನವಾಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಚೋದಿಸಿ ತನ್ನಿಂದ ಕೊಲೆ (Murder Case) ಮಾಡಿಸಿದರು ಎಂಬ ಸಿಟ್ಟೇ ಇದಕ್ಕೆ ಕಾರಣ ಎನ್ನಲಾಗಿದೆ.

ಸಹವಾಸ ಮಾಡಿ ಕೆಟ್ಟ ಮೇಲೆ ದರ್ಶನ್‌ಗೆ ಬುದ್ಧಿ ಬಂದಂತಿದೆ. ರೇಣುಕಾ ಸ್ವಾಮಿ ಮೆಸೇಜ್‌ಗಳಿಂದ ಆಕ್ರೋಶಗೊಂಡಿದ್ದ ದರ್ಶನ್‌ಗೆ ಇನ್ನಷ್ಟು ಪ್ರಚೋದನೆ ನೀಡಿದವರು ಜೊತೆಯಲ್ಲಿದ್ದ ವಿನಯ್ ಮತ್ತು ಟೀಂ. ಶೆಡ್‌ನಲ್ಲಿ ಹಲ್ಲೆ ನಡೆಸುತ್ತಿದ್ದಾಗ ʼಬಾಸ್, ಬಿಡ್ಬೇಡಿ ಬಿಡ್ಬೇಡಿʼ ಎಂದು ಗ್ಯಾಂಗ್‌ ಪ್ರಚೋದನೆ ಕೊಟ್ಟಿತ್ತು. ಇದರಿಂದಾಗಿಯೇ ಕೈಮೀರಿ ಕೊಲೆ ನಡೆಯಿತು ಎಂದು ದರ್ಶನ್‌ ಭಾವಿಸಿದಂತಿದೆ.

ತಾನು ಮಾಡಿದ್ದು ತಪ್ಪೋ, ಇವರ ಮಾತು ಕೇಳಿ ಕೆಟ್ಟೆನೋ ಎಂಬ ಚಿಂತೆಯಲ್ಲೇ ಇರುವ ದರ್ಶನ್, ಇದೇ ಕಾರಣಕ್ಕೆ ಜೊತೆಯಲ್ಲೇ ಒಂದೇ ಬ್ಯಾರಕ್‌ನಲ್ಲಿದ್ದರೂ ವಿನಯ್‌ ಅನ್ನು ಹೆಚ್ಚು ಮಾತನಾಡಿಸುತ್ತಿಲ್ಲ. ಜೊತೆಗಿರುವವರ ಸಹವಾಸ ಬಿಟ್ಟು ಹೆಚ್ಚು ಒಂಟಿಯಾಗಿದ್ದಾನೆ.

ನಾನು ತಪ್ಪು ಮಾಡಿಬಿಟ್ನೋ ಅಥವಾ ಜೊತೆಯಲ್ಲಿದ್ದವರ ಮಾತು ಕೇಳಿ ಕೆಟ್ನೋ ಗೊತ್ತಿಲ್ಲ ಎಂದು ಸಿಬ್ಬಂದಿಗಳ ಬಳಿ ಆತ ಮಾತಾಡಿದ್ದು ವರದಿಯಾಗಿದೆ. ತಾಯಿ ಬಂದಾಗಲೂ, ಪತ್ನಿ ಬಂದಾಗಲೂ, ರಕ್ಷಿತಾ ಪ್ರೇಮ್ ಬಂದಾಗಲೂ ದರ್ಶನ್ ಇದೇ ಮಾತು ಹೇಳಿದ್ದಾರೆ ಎನ್ನಲಾಗಿದೆ.

ಈ ನಡುವೆ, ದರ್ಶನ್‌ ಕುಟುಂಬಸ್ಥರಿಗೆ ಬಿಟ್ಟು ಉಳಿದವರ ಭೇಟಿಗೆ ಅವಕಾಶ ಕೊಡದಿರಲು ಜೈಲಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಪ್ರತಿನಿತ್ಯ ಜೈಲಿನ ಬಳಿ ವಿಐಪಿಗಳು ಬಂದರೆ ಮೈಂಟೇನ್ ಮಾಡುವುದು ಕಷ್ಟ. ಭೇಟಿಗೆ ದರ್ಶನ್ ಹೊರ ಬಂದು ವಿಸಿಟರ್ ಛೇಂಬರ್ ಬಳಿ ಬಂದರೆ ಉಳಿದ ಕೈದಿಗಳನ್ನು ಮೈಂಟೇನ್ ಮಾಡುವುದೂ ಕಷ್ಟವಾಗುತ್ತದೆ.

ಕೆಲ ಕೈದಿಗಳನ್ನು ಭೇಟಿ ಮಾಡಲು ಬರುವ ಕುಟುಂಬಸ್ಥರು ಸಹ ಮುಗಿಬೀಳುತ್ತಾರೆ. ಕೈದಿಗಳು ಸಹ ದರ್ಶನ್ ಹೊರಬಂದಾಗ ಹಿಂದೆ ಓಡೋಡಿ ಬರುತ್ತಾರೆ. ಇದೆಲ್ಲದರಿಂದಾಗಿ ಜೈಲಿನೊಳಗೆ ಸುವ್ಯವಸ್ಥೆ ಸಮಸ್ಯೆ ಆಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ದರ್ಶನ್‌ ಭೇಟಿಯಾದ ಪವಿತ್ರಾ ಆಪ್ತೆ

ಜೈಲಿನಲ್ಲಿರುವ ನಟ ದರ್ಶನ್‌ನನ್ನು ಪವಿತ್ರಾ ಗೌಡ ಆಪ್ತ ಸ್ನೇಹಿತೆ ಮಂಗಳವಾರ ಭೇಟಿ ಮಾಡಿದ್ದಾರೆ. ಒಂದು ಕಡೆ ಪವಿತ್ರಾ ಸ್ನೇಹಿತೆ 15 ನಿಮಿಷ ದರ್ಶನ್ ಜತೆ ಮಾತುಕತೆ ನಡೆಸಿದ್ದರೆ, ಮತ್ತೊಂದೆಡೆ ದರ್ಶನ್‌ರನ್ನು‌ (Actor Darshan) ಭೇಟಿಯಾಗಲು ನಟ ಧನ್ವೀರ್‌ಗೆ ಅವಕಾಶ ಸಿಗದಿರುವುದು ಕಂಡುಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ದರ್ಶನ್ ಅಭಿಪ್ರಾಯ ತಿಳಿಯಲು ಪವಿತ್ರಾ ಗೌಡ ಯತ್ನಿಸಿದ್ದಾರೆ. ಹೀಗಾಗಿ ಅವರು ನೀಡಿದ ಮಾಹಿತಿಯನ್ನು ದರ್ಶನ್‌ಗೆ ಪವಿತ್ರಾ ಗೌಡ ಆಪ್ತ ಸ್ನೇಹಿತೆ ಸಮತಾ ರವಾನಿಸಿದ್ದಾರೆ ಎನ್ನಲಾಗಿದೆ.

ಜೈಲಿನಲ್ಲಿ ಬೇರೆ ಬೇರೆಯಾಗಿದ್ದರೂ ದರ್ಶನ್ ಮತ್ತು ಪವಿತ್ರಾಗೆ ಪರಸ್ಪರ ಮಾಹಿತಿ ಸಿಗುತ್ತಿದೆ. ಇದಕ್ಕೆ ಪವಿತ್ರಾ ಸ್ನೇಹಿತೆ ಸಮತಾ ಮಧ್ಯವರ್ತಿಯಾಗಿದ್ದಾರೆ. ನಟ ದರ್ಶನ್ ತನ್ನ ಬಗ್ಗೆ ಏನು ಹೇಳುತ್ತಿದ್ದಾರೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಅವರ ಅಭಿಪ್ರಾಯ ತಿಳಿಯಲು ಪವಿತ್ರಾ ಪ್ರಯತ್ನಿಸಿದ್ದಾರೆ. ಹೀಗಾಗಿ ಸ್ನೇಹಿತೆ ಮೂಲಕ ದರ್ಶನ್‌ರನ್ನು ಭೇಟಿ ಮಾಡಿಸಿದ್ದಾರೆ ಎನ್ನಲಾಗಿದೆ. ನಟ ದರ್ಶನ್ ಕೂಡ ಸಮತಾ ಭೇಟಿಗೆ ಓಕೆ ಅಂದಿದ್ದರು. ಹೀಗಾಗಿ ಅವರನ್ನು ಜೈಲಿನೊಳಗೆ ಕಳುಹಿಸಲಾಗಿದೆ.

ಇದನ್ನೂ ಓದಿ: Actor Darshan: ದರ್ಶನ್‌ ಮೇಲಿನ ಅಂಧಾಭಿಮಾನ; ಮಗನನ್ನೇ ಕೈದಿ ಮಾಡಿದ ಹುಚ್ಚು ಫ್ಯಾನ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

MUDA site scandal: ಸಿಎಂ ಆಪ್ತ ರಾಕೇಶ್‌ ಪಾಪಣ್ಣಗೆ ಹಂಚಿಕೆಯಾಗಿದ್ದ ಮುಡಾ ಸೈಟ್‌ಗೂ ತಡೆ!

MUDA site scandal: ಈ ಮೊದಲು ನ್ಯಾಯಾಲಯ ಆದೇಶದಂತೆ ರಾಕೇಶ್‌ ಪಾಪಣ್ಣಗೆ ಬದಲಿ ನಿವೇಶನ ಹಂಚಿಕೆ ಆಗಿತ್ತು. ಹಂಚಿಕೆ ವೇಳೆ ತಪ್ಪಾಗಿದೆ ಎಂದು ಗೊತ್ತಾಗಿದೆ. ಈಗ ಅದನ್ನೂ ತಡೆ ಹಿಡಿಯಲಾಗಿದೆ ಎಂದು ಮುಡಾ ಅಧ್ಯಕ್ಷ ಮರಿಗೌಡ ತಿಳಿಸಿದ್ದಾರೆ.

VISTARANEWS.COM


on

MUDA site scandal
Koo

ಮೈಸೂರು: ಮುಡಾ ನಿವೇಶನ ಹಗರಣ (MUDA site scandal) ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕಾನೂನು ಬಾಹಿರವಾಗಿ ಹಂಚಿಕೆಯಾದ ಸೈಟ್‌ಗಳನ್ನು ಅಮಾನತು ಮಾಡಿ, ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಇದೀಗ ಸಿಎಂ ಆಪ್ತ, ಜಿಪಂ ಮಾಜಿ ಸದಸ್ಯ ರಾಕೇಶ್‌ ಪಾಪಣ್ಣಗೆ ಹಂಚಿಕೆಯಾಗಿದ್ದ ಸೈಟ್‌ ಅನ್ನೂ ತಡೆ ಹಿಡಿದಿರುವುದು ಕಂಡುಬಂದಿದೆ.

ಸಿಎಂ ಆಪ್ತ ರಾಕೇಶ್‌ ಪಾಪಣ್ಣಗೆ ಮುಡಾ ಬದಲಿ ನಿವೇಶನ ಹಂಚಿಕೆ ವಿಚಾರದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮುಡಾ ಅಧ್ಯಕ್ಷ ಕೆ. ಮರಿಗೌಡ ಪ್ರತಿಕ್ರಿಯಿಸಿ, ನಿವೇಶನ ಹಂಚಿಕೆ ತಡೆ ಹಿಡಿಯಲಾಗಿದೆ. ಈ ಮೊದಲು ನ್ಯಾಯಾಲಯ ಆದೇಶದಂತೆ ಬದಲಿ ನಿವೇಶನ ಹಂಚಿಕೆ ಆಗಿತ್ತು. ಹಂಚಿಕೆ ವೇಳೆ ತಪ್ಪಾಗಿದೆ ಎಂದು ಗೊತ್ತಾಗಿದೆ. ಈಗ ಅದನ್ನೂ ತಡೆ ಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.

ಹಿನ್‌ಕಲ್ ಸರ್ವೆ ನಂ.211ರಲ್ಲಿ 3.05 ಗುಂಟೆ ಜಮೀನು ಸಂಬಂಧಿಸಿದ ಪ್ರಕರಣದಲ್ಲಿ 1981ರಲ್ಲಿ ಸ್ವಾದೀನ ಪಡೆದು, 1984ರಲ್ಲಿ ಕೈ ಬಿಡಲಾಗಿತ್ತು. ಅದಕ್ಕೆ 2024ರ ಜೂನ್‌ 12 ರಂದು ಪರಿಹಾರ ಕೊಡಲಾಗಿತ್ತು. 36,753 ಚದರ ಅಡಿ ಪರಿಹಾರ ಕೊಡಲಾಗಿತ್ತು. ಇದಕ್ಕಾಗಿ ವಿಜಯನಗರದ ವಿವಿಧ ಬಡಾವಣೆಗಳಲ್ಲಿ‌ 20 ನಿವೇಶನ ಕೊಟ್ಟು ಆದೇಶ ಮಾಡಲಾಗಿತ್ತು. ಈಗ ಆ ದೇಶಕ್ಕೂ ತಡೆ ಬಿದ್ದಿದೆ ಎಂದು ಹೇಳಿದ್ದಾರೆ.

ಎಂಎಲ್‌ಸಿ ಎಚ್. ವಿಶ್ವನಾಥ್ ಕೂಡ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ. ದೇವನೂರು 3ನೇ ಹಂತದ ಬದಲು ಮುಖ್ಯರಸ್ತೆಯಲ್ಲಿ ವಿಶ್ವನಾಥ್ ಪತ್ನಿ ಶಾಂತಮ್ಮ ಅವರ ಹೆಸರಿನಲ್ಲಿ 2017ರಲ್ಲಿ 60×40 ಅಳತೆಯ ಬದಲಿ ನಿವೇಶನ ಪಡೆದಿದ್ದಾರೆ. ರಾಜಕೀಯವಾಗಿ ದಿವಾಳಿಯಾಗಿರುವ ಅವರು ಈಗ ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಎಚ್‌.ವಿಶ್ವನಾಥ್‌ಗೂ ಬದಲಿ ನಿವೇಶನ

50-50 ಅನುಪಾತದಲ್ಲಿ ಸಿಎಂ ಕುಟುಂಬ ನಿಯಮಬಾಹಿರ ಸೈಟ್ ಪಡೆದ ಆರೋಪದ ಬಗ್ಗೆ ಶಾಸಕ ಹರೀಶ್‌ಗೌಡ ಪ್ರತಿಕ್ರಿಯಿಸಿ, ಇಡೀ ಪ್ರಕರಣದಲ್ಲಿ ಸಿಎಂ ಹಾಗೂ ಅವರ ಕುಟುಂಬ ಕಾನೂನಾತ್ಮಕವಾಗಿ ಇದೆ. ಇಲ್ಲಿ ಮುಡಾ, ಸಿಎಂ ಕುಟುಂಬಕ್ಕೆ 75 ಸಾವಿರ ಚದರ ಅಡಿ ಜಾಗ ಕೊಡಬೇಕಿತ್ತು. ಆದರೂ ಕೊಟ್ಟಿರುವ 38 ಸಾವಿರ ಚದ ಅಡಿಗೆ ನಮ್ಮ ನಾಯಕರ ತೃಪ್ತಿ ಪಟ್ಟುಕೊಂಡಿದ್ದಾರೆ. ಅಂತಹವರ ಮೇಲೆ ಸುಳ್ಳು ಆರೋಪ ಮಾಡೋದು ಸರಿಯಲ್ಲ. ಇಂತಹ ಆರೋಪ ಮಾಡುತ್ತಿರುವ ಎಚ್‌.ವಿಶ್ವನಾಥ್ ಕೂಡ ದೇವನೂರು ಬಡಾವಣೆಯಲ್ಲಿ ಬದಲಿ ನಿವೇಶನ ಪಡೆದಿದ್ದಾರೆ.
ಅವರ ಪತ್ನಿ ಶಾಂತಮ್ಮ ಹೆಸರಲ್ಲಿ ನಿವೇಶನ ಪಡೆದಿದ್ದರು. ನಿವೇಶನ ಸಂಖ್ಯೆ 2,525ರ ಬದಲಾಗಿ ಹೈವೆ ಬಳಿ ಬರುವ ನಿವೇಶನ ಸಂಖ್ಯೆ 307 ಅನ್ನು ಪಡೆದಿದ್ದಾರೆ. ಅಂತಹವರು ಸಿಎಂ ಬಗ್ಗೆ ಮಾತನಾಡುವಾಗ ಸರಿಯಾಗಿ ಮಾತನಾಡಬೇಕು ಎಂದರು.

ವಿಶ್ವನಾಥ್‌ರಂತಹ ದಿವಾಳಿ ರಾಜಕಾರಣಿ ಇನ್ನೊಬ್ಬ ಇಲ್ಲ. ಇಡೀ ಪ್ರಕರಣದಲ್ಲಿ ಅಕ್ರಮ ಎಸಗಿರುವ ಎಲ್ಲರ ಬಗ್ಗೆಯೂ ತನಿಖೆ ನಡೆಯುತ್ತಿದೆ. ಸದ್ಯದಲ್ಲೇ ಸತ್ಯಾಸತ್ಯತೆ ಹೊರ ಬರಲಿದೆ ಎಂದು ಹೇಳಿದರು.

50:50 ಅನುಪಾತದಲ್ಲಿ ನಿವೇಶನ ಕೊಡಲಿಕ್ಕೆ 2015ರಲ್ಲೇ ಗೆಜೆಟ್ ನೋಟಿಫಿಕೇಶನ್ ಆಗಿದೆ. ಆಗ 60:40 ಅನುಪಾತದಲ್ಲಿ ನೀಡಬೇಕೆಂದು ಆದೇಶ ಇದೆ. ಅದಾದ ಬಳಿಕ 2020ರಲ್ಲಿ 50:50 ಅನುಪಾತದಲ್ಲಿ ನಿವೇಶನ ನೀಡಲಿಕ್ಕೆ ಪ್ರಾಧಿಕಾರ ನಿರ್ಣಯ ಮಾಡಿತು ಎಂದು ತಿಳಿಸಿದರು.

Continue Reading

ಕ್ರೈಂ

Self Harming: ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

Self Harming: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಉಡುವಳ್ಳಿಯ ನವೋದಯ ಶಾಲೆಯಲ್ಲಿ 8 ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

Self Harming
Koo

ಚಿತ್ರದುರ್ಗ: ನವೋದಯ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಪ್ರೇಮ್ ಸಾಗರ್ (13) ನೇಣಿಗೆ ಶರಣಾದ ವಿದ್ಯಾರ್ಥಿ.

ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ನಿವಾಸಿಯಾದ ಪ್ರೇಮ ಸಾಗರ್‌ 8ನೇ ತರಗತಿ ಓದುತ್ತಿದ್ದ. ಆದರೆ, ಕೊಠಡಿಯಲ್ಲಿ ಸೋಮವಾರ ನೇಣಿಗೆ ಶರಣಾಗಿದ್ದಾನೆ. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರೇಮ ಸಾಗರ್ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲಬಾಧೆ ತಾಳಲಾರದೇ ವಿಷ ಸೇವಿಸಿ ರೈತ ಆತ್ಮಹತ್ಯೆ

ದಾವಣಗೆರೆ: ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವುದು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಬೆಳಗುತ್ತಿ ಗ್ರಾಮದಲ್ಲಿ ನಡೆದಿದೆ. ಬೆಳಗುತ್ತಿ ಗ್ರಾಮದ ಸೋಮಸುಂದರ ರಾಜ್ ಅರಸ್ (60) ಮೃತ ರೈತ.

ಸತತ ಮಳೆ ಕೊರತೆ ಹಾಗೂ ಕೃಷಿಗೆ ಮಾಡಿದ ಸಾಲದಿಂದ ಮನನೊಂದು ಕೀಟನಾಶಕ ಸೇವಿಸಿ ಆತ್ಮಹತ್ಯೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗುತ್ತಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2 ಲಕ್ಷ, ಎಲ್‌ಎನ್‌ಟಿ ಫೈನಾನ್ಸ್‌ನಲ್ಲಿ 1 ಲಕ್ಷ, ಗ್ರಾಮೀಣ ಕೂಟ ಫೈನಾನ್ಸ್‌ನಲ್ಲಿ 1 ಲಕ್ಷ, ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ಸೇರಿದಂತೆ ಕೈ ಗಡ ಸೇರಿ 10 ಲಕ್ಷ ರೂ. ಸಾಲ ಮಾಡಿದ್ದರು. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಿಪ್ಪರ್ ಹರಿದು ಬೈಕ್ ಸವಾರ ಸಾವು

ಕೊಪ್ಪಳ: ಟಿಪ್ಪರ್ ಹರಿದು ಬೈಕ್ ಸವಾರ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಕಾಸನಕಂಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಡಿಕ್ಕಿಯಾಗಿದೆ. ಈ ವೇಳೆ ಟಿಪ್ಪರ್ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾನೆ.

ಇದನ್ನೂ ಓದಿ | Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Student Death : ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Student death Nursing college student commits suicide in Bengaluru

ಬೆಂಗಳೂರು: ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ (Student Death) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.

ಪಶ್ಚಿಮ ಬಂಗಾಳ‌ ಮೂಲದ ದಿಯಾ ಮಂಡೋಲ್‌ ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು. ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ: Pakistan: ಛೇ..ಇವನೆಂಥಾ ಪಾಪಿ ತಂದೆ! ಚಿಕಿತ್ಸೆಗೆ ಹಣ ಇಲ್ಲವೆಂದು 15 ದಿನದ ಹಸುಳೆಯ ಜೀವಂತ ಸಮಾಧಿ

ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

Continue Reading

ದೇಶ

Mumbai Hit And Run: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ಘಟನೆಗೂ ಮುನ್ನ ಬಾರ್‌ಗೆ ಹೋಗಿದ್ದ ಆರೋಪಿ, 18 ಸಾವಿರ ಬಿಲ್‌!

Mumbai Hit And Run: ಈ ಬಗ್ಗೆ ಬಾರ್‌ ಮಾಲಿಕ ಕರಣ್‌ ಶಾ ಮಾಹಿತಿ ನೀಡಿದ್ದು, ಮಿಹಿರ್‌ ಶಾ ತನ್ನ ನಾಲ್ವರು ಸ್ನೇಹಿತರೊಂದಿಗೆ ಬಾರ್‌ಗೆ ಬಂದಿದ್ದ. ಈ ವೇಳೆ ಆತನ ಜೊತೆ ಯಾರೂ ಮಹಿಳೆಯರು ಇರಲಿಲ್ಲ. ಅವರು 18,730 ಬಿಲ್‌ ಪಾವತಿಸಿ ತಮ್ಮ ಮರ್ಸಿಡಿಸ್‌ ಬೆನ್ಸ್‌ ಕಾರಿನಲ್ಲಿ ತೆರಳಿದ್ದರು. ಮಿಹಿರ್‌ನ ಹೊರತಾಗಿ ಉಳಿದವರೆಲ್ಲವರೂ ಒಂದೊಂದು ಬಿಯರ್‌ ಕುಡಿದಿದ್ದರು. ಮಿಹಿರ್‌ ಮಾತ್ರ ರೆಡ್‌ ಬುಲ್‌ ಸೇವಿಸಿದ್ದ. ಬಾರ್‌ಗೆ ಅವರು ಪ್ರವೇಶಿಸುವ ಮುನ್ನ ಅವರ ಗುರುತಿನ ಚೀಟಿ ಪರಿಶೀಲನೆ ಮಾಡಲಾಗಿತ್ತು. ಪೊಲೀಸರಿಗೆ ಅಗತ್ಯವಿರವ ಎಲ್ಲಾ ಮಾಹಿತಿಯನ್ನು ನಾವು ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ.

VISTARANEWS.COM


on

Mumbai hit and run
Koo

ಮುಂಬೈ: ನಿನ್ನೆ ಮುಂಬೈನಲ್ಲಿ ನಡೆದ ಡ್ರಂಕ್‌ ಆಂಡ್‌ ಡ್ರೈವ್‌(Mumbai Hit And Run) ಕೇಸ್‌ನ ಪ್ರಮುಖ ಆರೋಪಿ ಶಿವಸೇನೆ ಮುಖಂಡ(ShivSena Leader)ನ ಪುತ್ರ ಘಟನೆಗೂ ಮುನ್ನ ಆರೋಪಿ ಮಿಹಿರ್‌ ಶಾ(Mihir Shah) ಮತ್ತು ಆತನ ಸ್ನೇಹಿತರು ಬಾರ್‌ಗೆ ತೆರಳಿದ್ದು, ಬರೋಬ್ಬರಿ 18 ಸಾವಿರಕ್ಕೂ ಅಧಿಕ ಬಿಲ್‌ ಆಗಿತ್ತು ಎಂಬ ವಿಚಾರ ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ. ಮಿಹಿರ್‌ ಹಾಗೂ ಆತನ ಸೇಹಿತರು ಜೂಹೂನಲ್ಲಿರುವ ಗ್ಲೋಬಲ್‌ ತಾಪಸ್‌ ಬಾರ್‌ಗೆ ತೆರಳಿದ್ದರು ಎನ್ನಲಾಗಿದೆ.

ಇನ್ನು ಈ ಬಗ್ಗೆ ಬಾರ್‌ ಮಾಲಿಕ ಕರಣ್‌ ಶಾ ಮಾಹಿತಿ ನೀಡಿದ್ದು, ಮಿಹಿರ್‌ ಶಾ ತನ್ನ ನಾಲ್ವರು ಸ್ನೇಹಿತರೊಂದಿಗೆ ಬಾರ್‌ಗೆ ಬಂದಿದ್ದ. ಈ ವೇಳೆ ಆತನ ಜೊತೆ ಯಾರೂ ಮಹಿಳೆಯರು ಇರಲಿಲ್ಲ. ಅವರು 18,730 ಬಿಲ್‌ ಪಾವತಿಸಿ ತಮ್ಮ ಮರ್ಸಿಡಿಸ್‌ ಬೆನ್ಸ್‌ ಕಾರಿನಲ್ಲಿ ತೆರಳಿದ್ದರು. ಮಿಹಿರ್‌ನ ಹೊರತಾಗಿ ಉಳಿದವರೆಲ್ಲವರೂ ಒಂದೊಂದು ಬಿಯರ್‌ ಕುಡಿದಿದ್ದರು. ಮಿಹಿರ್‌ ಮಾತ್ರ ರೆಡ್‌ ಬುಲ್‌ ಸೇವಿಸಿದ್ದ. ಬಾರ್‌ಗೆ ಅವರು ಪ್ರವೇಶಿಸುವ ಮುನ್ನ ಅವರ ಗುರುತಿನ ಚೀಟಿ ಪರಿಶೀಲನೆ ಮಾಡಲಾಗಿತ್ತು. ಪೊಲೀಸರಿಗೆ ಅಗತ್ಯವಿರವ ಎಲ್ಲಾ ಮಾಹಿತಿಯನ್ನು ನಾವು ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಆರೋಪಿಯ ತಂದೆ ಅರೆಸ್ಟ್‌

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಹಿರ್‌ನ ತಂದೆ, ಶಿವಸೇನೆ ನಾಯಕ ನಾಯಕ ರಾಜೇಶ್‌ ಶಾ ಅವರನ್ನು ಪಾಲ್ಘರ್‌ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರು ರಾಜೇಶ್‌ ಶಾ ಅವರ ಹೆಸರಿನಲ್ಲಿ ನೋಂದಣಿಯಾಗಿರುವ ಕಾರಣ ಅವರನ್ನು ಪೊಲೀಸರು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಕಾರು ಚಾಲಕ ರಾಜಋಷಿ ಬಿದಾವತ್‌ ಎಂಬುವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಮುಂಬೈನ ವೊರ್ಲಿಯಲ್ಲಿ ರಾಜೇಶ್‌ ಶಾ (Rajesh Shah) ಅವರ ಪುತ್ರ ಮಿಹಿರ್‌ ಶಾ (Mihir Shah) ಕುಡಿದು ವಾಹನ ಚಲಾಸುವಾಗ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದು, ಮಹಿಳೆ ಮೃತಪಟ್ಟಿದ್ದಾರೆ. ಆಕೆಯ ಪತಿಯು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ 24 ವರ್ಷದ ಮಿಹಿರ್‌ ಶಾ ಪರಾರಿಯಾಗಿದ್ದ, ಬಳಿಕ ಪೊಲೀಸರು ಅವನ ತಂದೆಯನ್ನು ವಶಪಡಿಸಿಕೊಂಡಿದ್ದಾರೆ.

ಕಾವೇರಿ ನಖ್ವಾ ಮತ್ತು ಪ್ರದೀಕ್‌ ನಖ್ವಾ ಎಂಬ ದಂಪತಿ ಹೋಗುತ್ತಿದ್ದ ಬೈಕ್‌ಗೆ BMW ಕಾರು ಡಿಕ್ಕಿ ಹೊಡೆದಿದ್ದು, ಕೂಡಲೇ ಮಿಹಿರ್‌ ಶಾ ಎಸ್ಕೇಪ್‌ ಆಗಿದ್ದಾನೆ. ಬೆಳಗ್ಗೆ 5:30ರ ಸಮಯದಲ್ಲಿ ದಂಪತಿ ಸಾಸಾನ್‌ ಡಾಕ್‌ ಮಾರುಕಟ್ಟೆಯಿಂದ ಮೀನು ಖರೀದಿಸಿ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ದಂಪತಿ ಪ್ರದೀಕ್‌ ನಖ್ವಾ ಮಾರುಕಟ್ಟೆಯಲ್ಲಿ ಮೀನಿನ ವ್ಯಾಪಾರಿಯಾಗಿದ್ದಾರೆ. ಕಾರು ಡಿಕ್ಕಿಯಗುತ್ತಿದ್ದಂತೆ ರಸ್ತೆಗೆ ಬಿದ್ದಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಕಾವೇರಿ ಮತ್ತು ಪ್ರದೀಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾವೇರಿ ಕೊನೆಯುಸಿರೆಳೆದಿದ್ದಾರೆ.

ಘಟನೆ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಮಿಹಿರ್‌ ಶಾ ನಾಪತ್ತೆಯಾಗಿದ್ದ. ಮಿಹಿರ್‌ ಶಾ ತನ್ನ ಫೋನನ್ನೂ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದರು. ಮಿಹಿರ್‌ ಪೊಲೀಸರಿಗೆ ಹೆದರಿ ತನ್ನ ಪ್ರೇಯಸಿ ಮನೆಯಲ್ಲಿ ಅವಿತಿದ್ದ. ಪೊಲೀಸರು ಆತನನ್ನು ಅರೆಸ್ಟ್‌ ಮಾಡಿದ್ದಾರೆ. ಪೊಲೀಸರ ಪ್ರಕಾರ ಮಿಹಿರ್‌ ಕಳೆದ ರಾತ್ರಿ ಜೂಹೂ ಪ್ರದೇಶದಲ್ಲಿರುವ ಬಾರ್‌ನಲ್ಲಿ ಕಂಠಪೂರ್ತಿ ಕುಡಿದಿದ್ದು. ತನ್ನ ಮನೆಗೆ ಹಿಂದಿರುಗುವ ವೇಳೆ ಲಾಂಗ್‌ ಡ್ರೈವ್‌ ಕರೆದುಕೊಂಡು ಹೋಗುವಂತೆ ಡ್ರೈವರ್‌ಗೆ ಹೇಳಿದ್ದಾನೆ. ವರ್ಲಿಗೆ ತಲುಪುತ್ತಿದ್ದಂತೆ ತಾನು ಕಾರು ಚಲಾಯಿಸುವುದಕ್ಕೆ ಮುಂದಾಗಿದ್ದಾನೆ. ಆಗ ಅತ್ಯಂತ ವೇಗವಾಗಿ ಕಾರು ಚಲಾಯಿಸಿದ ಮಿಹಿರ್, ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಇದನ್ನೂ ಓದಿ: Mumbai Rain : ಭಾನುವಾರ ರಾತ್ರಿ ಪೂರ್ತಿ ಸುರಿದ ಮಳೆಗೆ ಮುಂಬೈ ನಗರದ ಹಲವು ಪ್ರದೇಶಗಳು ಜಲಾವೃತ

Continue Reading

ಕ್ರೈಂ

Actor Darshan: ಆರೋಪಿಗಳಿಗೆ ಗಂಟಲು ಮುಳ್ಳಾದ ಗುರುತು ಪತ್ತೆ ಪರೇಡ್‌, ಬೆಟ್ಟು ಮಾಡಿ ತೋರಿಸಿದ ಸಾಕ್ಷಿಗಳು

Actor Darshan: ತುಮಕೂರು ಜೈಲಿನಲ್ಲಿ ಇಬ್ಬರು, ಬೆಂಗಳೂರು ಜೈಲಲ್ಲಿ ಒಬ್ಬನನ್ನು ಗುರುತು ಹಿಡಿಯಲಾಗಿದೆ. ಸಾಕ್ಷಿಗಳ ಮುಂದೆ ಪೊಲೀಸರು ಆರೋಪಿಗಳ ಐಡೆಂಟಿಫಿಕೇಶನ್ ಪರೇಡ್ ನಡೆಸಿದರು. ಕೃತ್ಯದ ದಿನ ಆರೋಪಿಗಳನ್ನು ನೋಡಿದ ಸಾಕ್ಷಿಗಳಿಂದ, ತಾಲೂಕು ದಂಡಾಧಿಕಾರಿಗಳ ಸಮ್ಮುಖದಲ್ಲಿಯೇ ಐಡೆಂಟಿಫಿಕೇಶನ್ ಪೆರೇಡ್ ನಡೆಯಿತು.

VISTARANEWS.COM


on

Actor Darshan Will Attend The Court Hearing From Online
Koo

ಬೆಂಗಳೂರು: ನಟ ದರ್ಶನ್‌ (Actor Darshan) ಭಾಗಿ ಆಗಿರುವ ರೇಣುಕಾ ಸ್ವಾಮಿ ಕೊಲೆ (Ranuka Swamy Murder) ಪ್ರಕರಣದಲ್ಲಿ, ಸಾಕ್ಷಿಗಳು (Witness) ಮೂವರು ಆರೋಪಿಗಳನ್ನು ಐಡೆಂಟಿಫಿಕೇಶನ್‌ ಸಂದರ್ಭದಲ್ಲಿ ನಿಖರವಾಗಿ ಪತ್ತೆ ಹಚ್ಚಿದ್ದಾರೆ. ಜೈಲಿನಲ್ಲಿ ನಡೆದ ಈ ಐಡೆಂಟಿಫಿಕೇಶನ್‌ ಪರೇಡ್‌ನಲ್ಲಿ (Identification parade) ಹತ್ತಾರು ಇತರ ಕೈದಿಗಳ ನಡುವೆ ಆರೋಪಿಗಳನ್ನು ಸಾಕ್ಷಿಗಳು ಖಚಿತವಾಗಿ ಕಂಡು ಹಿಡಿದರು.

ತುಮಕೂರು ಜೈಲಿನಲ್ಲಿ ಇಬ್ಬರು, ಬೆಂಗಳೂರು ಜೈಲಲ್ಲಿ ಒಬ್ಬನನ್ನು ಗುರುತು ಹಿಡಿಯಲಾಗಿದೆ. ಸಾಕ್ಷಿಗಳ ಮುಂದೆ ಪೊಲೀಸರು ಆರೋಪಿಗಳ ಐಡೆಂಟಿಫಿಕೇಶನ್ ಪರೇಡ್ ನಡೆಸಿದರು. ಕೃತ್ಯದ ದಿನ ಆರೋಪಿಗಳನ್ನು ನೋಡಿದ ಸಾಕ್ಷಿಗಳಿಂದ, ತಾಲೂಕು ದಂಡಾಧಿಕಾರಿಗಳ ಸಮ್ಮುಖದಲ್ಲಿಯೇ ಐಡೆಂಟಿಫಿಕೇಶನ್ ಪೆರೇಡ್ ನಡೆಯಿತು.

ಈ ಪರೇಡ್‌ನಲ್ಲಿ ಆರೋಪಿಗಳನ್ನು ಜೈಲಿನಲ್ಲಿರುವ ಇತರ ಕೈದಿಗಳ ನಡುವೆ ನಿಲ್ಲಿಸಿ, ತಾನು ನೋಡಿದ ಆರೋಪಿಯ ಗುರುತು ಹಿಡಿಯಲು ಸಾಕ್ಷಿಗೆ ಸೂಚಿಸಲಾಗುತ್ತದೆ. ಈ ವೇಳೆ ತಾಲೂಕು ದಂಡಾಧಿಕಾರಿಗಳು ಹಾಜರಿರುತ್ತಾರೆ. ಈ ರೀತಿಯಾಗಿ ಕಾರ್ತಿಕ್, ನಿಖಿಲ್ ನಾಯಕ್ ಹಾಗೂ ರಘುಗೆ ಐಡೆಂಟಿಫಿಕೇಶನ್ ಪೆರೇಡ್ ನಡೆಸಲಾಯಿತು. ತುಮಕೂರು ಜೈಲಲ್ಲಿ ಕಾರ್ತಿಕ್ ಹಾಗೂ ನಿಖಿಲ್‌ಗೆ, ಪರಪ್ಪನ ಆಗ್ರಹಾರ ಜೈಲಿನಲ್ಲಿ ರಘುಗೆ ಐಡೆಂಟಿಫಿಕೇಶನ್ ಪರೇಡ್ ನಡೆಯಿತು. ಈ ಐಡೆಂಟಿಫಿಕೇಶನ್ ಪರೇಡ್‌ನಲ್ಲಿ ಪತ್ತೆ ಹಚ್ಚಿದ್ದು ಐ ವಿಟ್ನೆಸ್ ಆಗಿ ಪರಿಗಣನೆ ಆಗಲಿದೆ.

ದರ್ಶನ್ ಕೇಸಲ್ಲೂ ಎರಡು ಪೆನ್ ಡ್ರೈವ್

ಈ ಪ್ರಕರಣದಲ್ಲೂ ದರ್ಶನ್‌ (Actor Darshan) ವಿರುದ್ಧ ಎರಡು ಪೆನ್ ಡ್ರೈವ್‌ಗಳು ಪ್ರಮುಖ ಸಾಕ್ಷಿಗಳಾಗಿವೆ. ಆದರೆ ಇವು ಆರೋಪಿ ಮಾಡಿದ್ದಲ್ಲ, ಬದಲಾಗಿ ಆರೋಪಿಗಳ ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿದ್ಧಪಡಿಸಿರುವ ಪೆನ್ ಡ್ರೈವ್.

8 ಜಿಬಿಯ ಎರಡು ಪೆನ್ ಡ್ರೈವ್ ಸಿದ್ಧಪಡಿಸಿರುವ ಪೊಲೀಸರು, ಆರೋಪಿಗಳಾದ ದೀಪಕ್ ಹಾಗೂ ನಂದೀಶ್ ಇವರ ಗೂಗಲ್ ಟೈಮ್ ಲೈನ್ ಡಾಟಾವನ್ನು ಅದರಲ್ಲಿ ಸಂಗ್ರಹಿಸಿದ್ದಾರೆ. ದೀಪಕ್ ಶಾಸಕರ ಸಂಬಂಧಿ, ನಂದೀಶ್ ದರ್ಶನ್ ಮನೆಯ ಕೆಲಸದವನು. ಇಬ್ಬರ ಮೊಬೈಲ್‌ನಲ್ಲೂ ಗೂಗಲ್ ಟೈಮ್ ಲೈನ್ ಇತ್ತು. ಅಪರಾಧ ನಡೆದ ಪ್ರತಿ ಜಾಗಕ್ಕೂ ಇವರಿಬ್ಬರು ಓಡಾಡಿದ್ದಾರೆ. ಹೀಗಾಗಿ ಇದನ್ನು ಎರಡು ಪೆನ್ ಡ್ರೈವ್‌ಗಳಲ್ಲಿ ಪೊಲೀಸರು ಶೇಖರಿಸಿಟ್ಟಿದ್ದಾರೆ. ಆರೋಪಿಗಳು ಘಟನಾ ಸ್ಥಳದಲ್ಲಿ ಇದ್ದರು ಎನ್ನುವುದಕ್ಕೆ ಈ ಎರಡು ಪೆನ್ ಡ್ರೈವ್ ನಲ್ಲಿರುವ ಡಾಟಾ ಮಹತ್ವದ ಸಾಕ್ಷಿಯಾಗಿದೆ.

ಪವಿತ್ರ ಗೌಡ ಆಪ್ತೆ, ಶಾಸಕರ ಕಾರು ಚಾಲಕನಿಗೆ ಸಂಕಷ್ಟ; 2ನೇ ಬಾರಿ ವಿಚಾರಣೆ, ಬಂಧನ?

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ (Renuka swamy Murder) ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು ಮತ್ತೆ ಎರಡನೇ ಬಾರಿ ವಿಚಾರಣೆಗಾಗಿ ಕರೆಸಿದ್ದಾರೆ. ಪ್ರಕರಣದಲ್ಲಿ ಇವರಿಬ್ಬರ ಭಾಗೀದಾರಿಕೆ ಗಂಭೀರ ಸ್ವರೂಪದ್ದಾಗಿದ್ದು, ಇಬ್ಬರಿಗೂ ಬಂಧನ ಭೀತಿ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರಲ್ಲಿ ಒಬ್ಬಾಕೆ ನಟ ದರ್ಶನ್‌ (Actor Darshan) ಹಾಗೂ ಪವಿತ್ರ ಗೌಡ (Pavithra Gowda) ಅನ್ನು ಭೇಟಿಯಾಗಲು ಜೈಲಿಗೆ ಬಂದಿದ್ದವಳು.

ಇವರಲ್ಲಿ ಒಬ್ಬಾತ ಕಾರ್ತಿಕ್‌ ಪುರೋಹಿತ್.‌ ಈತನಿಗೆ ಇಂದು ಇಂದು ವಿಚಾರಣೆಗೆ ಹಾಜರಾಗಲು ನೊಟೀಸ್ ಹೋಗಿದೆ. ಶನಿವಾರ ಸುಮಾರು ನಾಲ್ಕೈದು ಗಂಟೆಗಳ ಕಾಲ ಪೊಲೀಸರು ವಿಚಾರಣೆ ಮಾಡಿದ್ದರು. ಶಾಸಕರೊಬ್ಬರ ಕಾರು ಚಾಲಕನಾಗಿರುವ ಕಾರ್ತಿಕ್ ಪುರೋಹಿತ್, ರೇಣುಕಾ ಸ್ವಾಮಿ ಮೃತದೇಹ ಬಿಸಾಡಿದ ಬಳಿಕ ಆರೋಪಿ ಪ್ರದೋಶ್ ಅನ್ನು ಪಿಕ್‌ಅಪ್ ಮಾಡಿದ್ದ. ತನ್ನದೇ ಕಾರಿನಲ್ಲಿ ಪ್ರದೋಶ್‌ನನ್ನು ಗಿರಿನಗರಕ್ಕೆ ಕರೆದುಕೊಂಡು ಬಂದಿದ್ದ.

ಹೀಗಾಗಿ ಆವತ್ತು ಏನೆಲ್ಲಾ ಆಯ್ತು, ಕೊಲೆಯ ಮಾಹಿತಿ ಕಾರ್ತಿಕ್‌ಗೆ ಇತ್ತೇ ಎಂದು ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಕೊಲೆ ಮಾಹಿತಿ ಇದ್ದೂ ಪೊಲೀಸರಿಗೆ ತಿಳಿಸಲಿಲ್ಲವಾದರೆ ಸಂಕಷ್ಟ ಗ್ಯಾರಂಟಿ ಆಗಿದೆ. ಜೊತೆಗೆ ಎರಡು ದಿನಗಳ ಕಾಲ ಆರೋಪಿಗೆ ಆಶ್ರಯ ಕೊಟ್ಟಿರುವ ಶಂಕೆ ಇದೆ. ಆಶ್ರಯದ ಜೊತೆಗೆ ಹಣಕಾಸು ಸಹಾಯವೂ ಮಾಡಿರುವ ಅನುಮಾನ ಇದೆ. ಹೀಗಾಗಿ ಇಂದು ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಲಾಗಿದೆ.

ಜೊತೆಗೆ ಇಂದು ಪವಿತ್ರ ಗೌಡ ಆಪ್ತೆ ಸಮತಾ ವಿಚಾರಣೆ ಕೂಡ ನಡೆಯಲಿದೆ. ಈಗಾಗಲೇ ಸಮತಾ ಒಂದು ಬಾರಿ ವಿಚಾರಣೆಗೆ ಹಾಜರಾದ್ದಾಳೆ. ಈಕೆ ಆರೋಪಿ ಧನರಾಜ್‌ಗೆ 3 ಸಾವಿರ ರೂಪಾಯಿ ಹಣ ಕಳುಹಿಸಿದ್ದಳು. ಇದೇ ಹಣದಲ್ಲಿ ಧನರಾಜ್ ಎಲೆಕ್ಟ್ರಿಕ್ ಶಾಕ್ ಡಿವೈಸ್ ಖರೀದಿ ಮಾಡಿರುವ ಶಂಕೆ ಇದೆ. ಹೀಗಾಗಿ ಸಮತಾಳನ್ನು ಮತ್ತೆ ವಿಚಾರಣೆಗೆ ಪೊಲೀಸರು ಕರೆದಿದ್ದು, ಇಂದು ಹಾಜರಾಗಲು ಸೂಚಿಸಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣೆಯ ಎಸಿಪಿ ಕಚೇರಿಯಲ್ಲಿ ತನಿಖಾಧಿಕಾರಿ ಎಸಿಪಿ ಚಂದನ್ ಮುಂದೆ ಸಮತಾ ಹಾಜರಾಗಲಿದ್ದಾಳೆ.

ಇದನ್ನೂ ಓದಿ: Actor Darshan: ದರ್ಶನ್‌ಗಾಗಿ ವಿಶೇಷ ಪೂಜೆ ಮಾಡಿಸಿದ್ರಾ ವಿಜಯಲಕ್ಷ್ಮಿ? ಅಸಲಿ ಕಥೆ ಬೇರೆಯೇ ಇದೆ!

Continue Reading
Advertisement
MUDA site scandal
ಕರ್ನಾಟಕ1 min ago

MUDA site scandal: ಸಿಎಂ ಆಪ್ತ ರಾಕೇಶ್‌ ಪಾಪಣ್ಣಗೆ ಹಂಚಿಕೆಯಾಗಿದ್ದ ಮುಡಾ ಸೈಟ್‌ಗೂ ತಡೆ!

steel flyover bridge shivananda circle
ಪ್ರಮುಖ ಸುದ್ದಿ8 mins ago

Steel Flyover: ಬೆಂಗಳೂರಿನ ಮೊದಲ ಸ್ಟೀಲ್‌ ಫ್ಲೈಓವರ್‌ ಸೇತುವೆಯಲ್ಲಿ ಬಿರುಕು

Gurdaspur attack
ವಿದೇಶ10 mins ago

Gurdaspur Attack: ಗುರುದಾಸಪುರ ಉಗ್ರ ದಾಳಿಯ ರೂವಾರಿ, ಐಎಸ್ಐ ಅಧಿಕಾರಿಯನ್ನು ಕರಾಚಿಯಲ್ಲಿ ಫಿನಿಷ್ ಮಾಡಿದ ‘ಅಪರಿಚಿತರು’!

Karnataka Rain
ಮಳೆ11 mins ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Haveri accident Shivanna couple helped the money to families
ಸ್ಯಾಂಡಲ್ ವುಡ್19 mins ago

Shiva Rajkumar: ಹಾವೇರಿ ಅಪಘಾತ; ಮೃತಪಟ್ಟ ಕುಟುಂಬಗಳಿಗೆ ಧನ ಸಹಾಯ ಮಾಡಿದ ಶಿವಣ್ಣ ದಂಪತಿ

Mumbai Cricket Association
ಪ್ರಮುಖ ಸುದ್ದಿ25 mins ago

Mumbai Cricket Association : ಮುಂಬೈನಲ್ಲಿ ನಿರ್ಮಾಣವಾಗಲಿದೆ 1 ಲಕ್ಷ ಪ್ರೇಕ್ಷಕರ ಸಾಮರ್ಥ್ಯದ ಕ್ರಿಕೆಟ್​ ಸ್ಟೇಡಿಯಮ್​

Paris Olympics 2024
ದೇಶ39 mins ago

Paris Olympics 2024: ಸರ್ಕಾರಿ, ಖಾಸಗಿ ವಲಯದ ಪಾಲುದಾರಿಕೆಯಿಂದ ಕ್ರೀಡೆಗಳ ಭವಿಷ್ಯ ನಿರ್ಧಾರ: ಪಾರ್ಥ್ ಜಿಂದಾಲ್

gold rate today
ಕರ್ನಾಟಕ42 mins ago

Gold Rate Today: ಬಂಗಾರ ಖರೀದಿಸುವ ಪ್ಲ್ಯಾನ್‌ ಇದೆಯೇ? ಚಿನ್ನದ ದರ ಹೀಗಿದೆ ನೋಡಿ

Self Harming
ಕ್ರೈಂ46 mins ago

Self Harming: ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

Karnataka weather Forecast
ಮಳೆ56 mins ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ11 mins ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ56 mins ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

karnataka weather Forecast
ಮಳೆ18 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ20 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ21 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಟ್ರೆಂಡಿಂಗ್‌