Nitin Gadkari: ರಸ್ತೆಗಿಳಿಯಲಿದೆ 132 ಸೀಟು, ಹೋಸ್ಟೆಸ್‌ ಒಳಗೊಂಡ ಬಸ್‌; ಸಾರಿಗೆ ವಲಯದಲ್ಲಿನ ಯೋಜನೆ ವಿವರಿಸಿದ ಸಚಿವ ನಿತಿನ್‌ ಗಡ್ಕರಿ - Vistara News

ದೇಶ

Nitin Gadkari: ರಸ್ತೆಗಿಳಿಯಲಿದೆ 132 ಸೀಟು, ಹೋಸ್ಟೆಸ್‌ ಒಳಗೊಂಡ ಬಸ್‌; ಸಾರಿಗೆ ವಲಯದಲ್ಲಿನ ಯೋಜನೆ ವಿವರಿಸಿದ ಸಚಿವ ನಿತಿನ್‌ ಗಡ್ಕರಿ

Nitin Gadkari: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಸಾರಿಗೆ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಮುಂದಾಗಿದ್ದಾರೆ. ”132 ಸೀಟುಗಳ ಬಸ್‌ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದರಲ್ಲಿ ವಿಮಾನದಲ್ಲಿರುವಂತೆ ಸಕಲ ಸೌಲಭ್ಯಗಳೂ ಇರಲಿದೆ. ಏರ್‌ ಹೋಸ್ಟೆಸ್‌ನಂತೆ ಬಸ್‌ ಹೋಸ್ಟೆಸ್‌ಗಳೂ ಕಾರ್ಯ ನಿರ್ವಹಿಸಲಿದ್ದು, ಈ ಬಸ್‌ನಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Nitin Gadkari
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ (Nitin Gadkari) ಅವರು ಸಾರಿಗೆ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಮುಂದಾಗಿದ್ದಾರೆ. ”132 ಸೀಟುಗಳ ಬಸ್‌ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದರಲ್ಲಿ ವಿಮಾನದಲ್ಲಿರುವಂತೆ ಸಕಲ ಸೌಲಭ್ಯಗಳೂ ಇರಲಿದೆ. ಏರ್‌ ಹೋಸ್ಟೆಸ್‌ನಂತೆ ಬಸ್‌ ಹೋಸ್ಟೆಸ್‌ಗಳೂ ಕಾರ್ಯ ನಿರ್ವಹಿಸಲಿದ್ದು, ಈ ಬಸ್‌ನಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ” ಎಂದು ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ʼʼಪರಿಸರ ಮಾಲಿನ್ಯ ಎನ್ನುವುದು ಸದ್ಯ ದೇಶ, ಜಗತ್ತು ಎದುರಿಸುವ ಬಹುದೊಡ್ಡ ಸಮಸ್ಯೆ. ಹೀಗಾಗಿ ಸರ್ಕಾರ ಪರಿಸರಕ್ಕೆ ಹಾನಿ ಉಂಟು ಮಾಡದ ಪರ್ಯಾಯ ವ್ಯವಸ್ಥೆಗಳಿಗೆ ಒತ್ತು ನೀಡಲಿದೆ. ಅದರ ಭಾಗವಾಗಿ ಸಾರ್ವಜನಿಕ ಸಾರಿಗೆ ವಿಭಾಗದಲ್ಲಿಯೂ ಅಮೂಲಾಗ್ರ ಬದಲಾವಣೆ ಜಾರಿಗೆ ತರಲಾಗುವುದುʼʼ ಎಂದು ಹೇಳಿದ್ದಾರೆ.

ಕನಸಿನ ಯೋಜನೆ

ಈ ವೇಳೆ ಅವರು ತಮ್ಮ ಕನಸಿನ 132 ಸೀಟುಗಳ ಬಸ್‌ನ ಯೋಜನೆ ಬಗ್ಗೆ ಮಾಹಿತಿ ನೀಡಿದ್ದಾರೆ. ʼʼ132 ಆಸನಗಳ ಬಸ್ ಅನ್ನು‌ ಪಚಯಿಸಲು ಮುಂದಾಗಿದ್ದೇವೆ. ಇದರ ಪ್ರಾಯೋಗಿಕ ಸಂಚಾರ ನಾಗ್ಪುರದಲ್ಲಿ ನಡೆಯಲಿದೆ. ಈ ಬಸ್‌ ವಿಮಾನದಂತಹ ಆಸನ ಮತ್ತು ಬಸ್ ಹೋಸ್ಟೆಸ್ ಅನ್ನು ಒಳಗೊಂಡಿದೆ. ಸಾಮಾನ್ಯ ಡೀಸೆಲ್ ಬಸ್‌ಗಳಿಗಿಂತ ಅಗ್ಗವಾಗಿರಲಿದೆ. ಮಾಲಿನ್ಯರಹಿತ ಶಕ್ತಿಯ ಮೂಲಗಳಲ್ಲಿ ಚಲಿಸಲಿದೆʼʼ ಎಂದು ವಿವರಿಸಿದ್ದಾರೆ. ʼʼಭಾರತವನ್ನು ಇಂಧನದ ಆಮದುದಾರ ದೇಶವನ್ನಾಗಿಸುವ ಬದಲು ಬದಲು ರಫ್ತುದಾರ ದೇಶವನ್ನಾಗಿಸುವುದೇ ನಮ್ಮ ಸರ್ಕಾರದ ಗುರಿʼʼ ಎಂದು ಅವರು ತಿಳಿಸಿದ್ದಾರೆ.

ಪರಿಸರ ಮಾಲಿನ್ಯ ಪ್ರಮುಖ ಸಮಸ್ಯೆ

ʼʼನಾವು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಪರಿಸರ ಮಾಲಿನ್ಯ ಮುಖ್ಯವಾದುದು. ದೇಶದಲ್ಲಿ ಅದರಲ್ಲಿಯೂ ರಾಜಧಾನಿ ದೆಹಲಿಯಲ್ಲಿ ವಾಯು, ಜಲ, ಶಬ್ದ ಮಾಲಿನ್ಯ ಮಿತಿ ಮೀರಿದೆ. ಹೀಗಾಗಿ ನಾವು ಮಾಲಿನ್ಯ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಹೀಗಾಗಿ ಕಡಿಮೆ ವೆಚ್ಚದ, ಪರಿಸರ ಸ್ನೇಹಿ ಸಂಚಾರ ವ್ಯವಸ್ಥೆ ಪರಿಚಯಿಸಲು ಚಿಂತನೆ ನಡೆಸಿದ್ದೇವೆ. ಅದರ ಭಾಗವಾಗಿ ಇಂಡಿಯನ್ ಆಯಿಲ್ 300 ಎಥೆನಾಲ್ ಪಂಪ್‌ಗಳನ್ನು ಸ್ಥಾಪಿಸಲಿದೆ. ಹೊಸ ಮಾದರಿಯ ವಾಹನ ನಿರ್ಮಾಣಕ್ಕೆ ತಯಾರಕರೂ ಮುಂದಾಗಿದ್ದಾರೆ. ಆದ್ದರಿಂದ 100 ರೂ. ಕೊಟ್ಟು ಒಂದು ಲೀಟರ್‌ ಪೆಟ್ರೋಲ್ ಖರೀದಿಸುವ ಬದಲು, 60 ರೂ. ಪಾವತಿಸಿ ಎಥೆನಾಲ್ ಖರೀದಿಸಬಹುದು. ಈ ಹೊಸ ಮಾದರಿಯ ವಾಹನವು ಶೇ. 60 ವಿದ್ಯುತ್ ಮತ್ತು ಶೇ. 40ರಷ್ಟು ಎಥೆನಾಲ್‌ನಲ್ಲಿ ಚಲಿಸಲಿದೆ. ಇದು ಮಾಲಿನ್ಯವನ್ನು ಸಹ ಕಡಿಮೆ ಮಾಡುತ್ತದೆ” ಎಂದು ಸಚಿವರು ಹೇಳಿದ್ದಾರೆ.

“ನಾವು ಟಾಟಾ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು ನಾಗ್ಪುರದಲ್ಲಿ ಪ್ರಾಯೋಗಿಕ ಯೋಜನೆಯನ್ನು ಜಾರಿಗೊಳಿಸಲಿದ್ದೇವೆ. ಜೆಕ್ ಗಣರಾಜ್ಯದಲ್ಲಿ ಮೂರು ಬಸ್ಸುಗಳನ್ನು ಸೇರಿಸಿ ಓಡಿಸುತ್ತಾರೆ. ಅದರಂತೆ ನಮ್ಮ ಈ ಯೋಜನೆ 132 ಸೀಟುಗಳ ಬಸ್‌ ಅನ್ನು ಹೊಂದಿದೆ. ಈ ಬಸ್‌ ರಿಂಗ್ ರಸ್ತೆಯಲ್ಲಿ 49 ಕಿ.ಮೀ. ಪ್ರಯಾಣಿಸುತ್ತದೆ. ಕೇವಲ 40 ಸೆಕೆಂಡು ಚಾರ್ಜ್ ಮಾಡಿದರೆ 40 ಕಿ.ಮೀ. ದೂರ ಸಂಚರಿಸಲಿದೆʼʼ ಎಂದು ಗಡ್ಕರಿ ತಿಳಿಸಿದ್ದಾರೆ.

ಬಸ್‌ನ ವೈಶಿಷ್ಟ್ಯ

“ಬಸ್‌ನಲ್ಲಿ ಎಲ್ಲ ಸೌಲಭ್ಯಗಳನ್ನು ಅಳವಡಿಸುವಂತೆ ಸೂಚಿಸಿದ್ದೇನೆ. ಸೀಟಿನ ಮುಂದೆ ಲ್ಯಾಪ್‌ಟಾಪ್‌ ಇಡಲು ಸ್ಥಳಾವಕಾಶ, ಹವಾನಿಯಂತ್ರಣ ವ್ಯವಸ್ಥೆ, ಆರಾಮದಾಯಕ ಕುರ್ಚಿಗಾಗಿ ಬೇಡಿಕೆ ಇಟ್ಟಿದ್ದೇನೆ. ಏರ್ ಹೋಸ್ಟೆಸ್‌ಗಳಂತೆ ಪ್ರಯಾಣಿಕರಿಗೆ ಹಣ್ಣು, ಪ್ಯಾಕ್ ಮಾಡಿದ ಆಹಾರ ಮತ್ತು ಪಾನೀಯಗಳನ್ನು ನೀಡಲು ಬಸ್ ಹೋಸ್ಟೆಸ್‌ಗಳು ಇರಲಿದ್ದಾರೆ. ನನ್ನ ಲೆಕ್ಕಾಚಾರದ ಪ್ರಕಾರ ಈ ಬಸ್‌ನ ವೆಚ್ಚ ಡೀಸೆಲ್ ಬಸ್‌ಗಿಂತ ಶೇ. 30ರಷ್ಟು ಕಡಿಮೆ ಇರಲಿದೆ. ಸೌರಶಕ್ತಿಯನ್ನು ಬಳಸಿದರೆ, ವೆಚ್ಚ ಇನ್ನೂ ಕಡಿಮೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಸಲಹೆಯನ್ನು ಸ್ವೀಕರಿಸಿದ್ದಕ್ಕಾಗಿ ಪೆಟ್ರೋಲಿಯಂ ಸಚಿವ ಹರ್ದೀಪ್ ಪುರಿ ಅವರಿಗೆ ಧನ್ಯವಾದ ಅರ್ಪಿಸಿದ ಗಡ್ಕರಿ, ʼʼಇಂಡಿಯನ್ ಆಯಿಲ್ ಕಸದಿಂದ 1 ಲಕ್ಷ ಲೀಟರ್ ಎಥೆನಾಲ್ ಮತ್ತು ಜೈವಿಕ ಬಿಟುಮೆನ್ ಉತ್ಪಾದಿಸುವ ಯೋಜನೆಯನ್ನು ಪ್ರಾರಂಭಿಸಿದೆ. 76,000 ಟನ್ ಜೈವಿಕ ವಾಯುಯಾನ ಇಂಧನವನ್ನು ಸಹ ಉತ್ಪಾದಿಸುತ್ತದೆʼʼ ಎಂದಿದ್ದಾರೆ.

ಇದನ್ನೂ ಓದಿ: Nitin Gadkari : ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

PM Modi Russia Visit: ರಷ್ಯಾ ತಲುಪಿದ ಮೋದಿಗೆ ಭಾರತದ ಸಂಪ್ರದಾಯದಂತೆ ಅದ್ಧೂರಿ ಸ್ವಾಗತ; Video ಇದೆ

PM Modi Russia Visit: ರಷ್ಯಾ ನಾಗರಿಕರು, ಕಲಾವಿದರಂತೂ ಮಾಸ್ಕೋದಲ್ಲಿರುವ, ಮೋದಿ ತಂಗಲಿರುವ ಹೋಟೆಲ್‌ ಎದುರು, ಭಾರತೀಯ ಶೈಲಿಯ ದಿರಸುಗಳನ್ನು ಧರಿಸಿ ಭಜನೆ, ಹಾಡು, ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

VISTARANEWS.COM


on

PM Modi Russia Visit
Koo

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ (PM Modi Russia Visit ) ಮೂರು ದಿನಗಳ ರಷ್ಯಾ (Russia) ಮತ್ತು ಆಸ್ಟ್ರೀಯಾ ಪ್ರವಾಸ (Austria) ಕೈಗೊಂಡಿದ್ದು, ಸೋಮವಾರ (ಜುಲೈ 8) ಸಂಜೆ ರಷ್ಯಾ ರಾಜಧಾನಿ ಮಾಸ್ಕೋ ತಲುಪಿದ್ದಾರೆ. ನರೇಂದ್ರ ಮೋದಿ (Narendra Modi) ಅವರು ರಷ್ಯಾ ತಲುಪುತ್ತಲೇ ಅದ್ಧೂರಿಯಾಗಿ ಸ್ವಾಗತ ಸಿಕ್ಕಿದೆ. ಅನಿವಾಸಿ ಭಾರತೀಯರು, ರಷ್ಯಾ ನಾಗರಿಕರು ಭಜನೆ, ಹಾಡು, ಜೈಕಾರದ ಮೂಲಕ ಭಾರತದ ಪ್ರಧಾನಿಯನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿದ್ದಾರೆ.

ಉಕ್ರೇನ್‌ ಹಾಗೂ ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ರಷ್ಯಾ ಪ್ರವಾಸ ಕೊಂಡಿದ್ದು, ಇಂದು ಮತ್ತು ನಾಳೆ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಬಳಿಕ ಬುಧವಾರ ಆಸ್ಟ್ರಿಯಾಗೆ ತೆರಳಿ ಗುರುವಾರದವರೆಗೂ ಅಲ್ಲೆ ಇರಲಿದ್ದಾರೆ. ರಷ್ಯಾ ನಾಗರಿಕರಂತೂ ಮಾಸ್ಕೋದಲ್ಲಿರುವ, ಮೋದಿ ತಂಗಲಿರುವ ಹೋಟೆಲ್‌ ಎದುರು, ಭಾರತೀಯ ಶೈಲಿಯ ದಿರಸುಗಳನ್ನು ಧರಿಸಿ ಭಜನೆ, ಹಾಡು, ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಇನ್ನು ಭಾರತ ಮತ್ತು ರಷ್ಯಾ ವಾರ್ಷಿಕ ಶೃಂಗಸಭೆಯು ಮೋದಿಯವರ ರಷ್ಯಾ ಭೇಟಿಯ ಪ್ರಮುಖ ಅಜೆಂಡಾವಾಗಿದ್ದು, ರಷ್ಯಾ-ಉಕ್ರೇನ್‌ ಯುದ್ಧದ ಬಳಿಕ ಮೊದಲ ಭೇಟಿಯಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್‌ ಪುಟಿನ್‌ ಅವರೊಂದಿಗೆ ಈ ಕುರಿತು ಮಾತುಕತೆ ನಡೆಸಲಿದ್ದಾರೆ. ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್‌ ಪುಟಿನ್‌ ಅವರು ಸೋಮವಾರ ನರೇಂದ್ರ ಮೋದಿ ಅವರಿಗೆ ಔತಣ ಕೂಡ ಏರ್ಪಡಿಸಿದ್ದಾರೆ. ಮಂಗಳವಾರ ಶೃಂಗಸಭೆ ನಡೆಯಲಿದ್ದು, ಉಭಯ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಜುಲೈ 8 ಹಾಗೂ 9ರಂದು ನರೇಂದ್ರ ಮೋದಿ ಅವರು ಮಾಸ್ಕೋದಲ್ಲಿ ಇರಲಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರನ್ನು ಭೇಟಿಯಾಗಲಿದ್ದಾರೆ. ಇದೇ ವೇಳೆ ಭಾರತ-ರಷ್ಯಾ ನಡುವಿನ 22ನೇ ವಾರ್ಷಿಕ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಭೇಟಿ ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಗೊಳಿಸಲಿದೆ. ಈ ಭೇಟಿ ವೇಳೆ ಉಭಯ ರಾಷ್ಟಗಳು ರಕ್ಷಣೆ, ಅನಿಲ ಮತ್ತು ಇತರೆ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Narendra Modi: ಬ್ರಿಟನ್‌ ನೂತನ ಪ್ರಧಾನಿ ಕೀರ್‌ ಸ್ಟಾರ್ಮರ್‌ಗೆ ಮೋದಿ ಕರೆ; ಭಾರತಕ್ಕೆ ಆಗಮಿಸುವಂತೆ ಮನವಿ!

Continue Reading

ದೇಶ

Terrorists Attack: ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ; ಇಬ್ಬರು ಯೋಧರಿಗೆ ಗಾಯ, ಉಗ್ರರಿಗಾಗಿ ಶೋಧ

Terrorists Attack: ಸೇನಾ ವಾಹನವನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಲೇ ಭಾರತೀಯ ಸೇನೆಯ ಯೋಧರು ತಿರುಗೇಟು ನೀಡುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಸುಮಾರು 2-3 ಉಗ್ರರು ಅಡಗಿರುವ ಶಂಕೆ ಇರುವ ಕಾರಣ ಯೋಧರು ಕಾರ್ಯಾಚರಣೆ ಆರಂಭಿಸಿದ್ದಾರೆ. ಇದು ಕಳೆದ ಒಂದು ವಾರದಲ್ಲಿ ಸೇನೆಯ ವಾಹನವನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ಎರಡನೇ ದಾಳಿಯಾಗಿದೆ.

VISTARANEWS.COM


on

Terrorists Attack
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರರ ಉಪಟಳ ಮುಂದುವರಿದಿದ್ದು, ಕಠುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ (Terrorists Attack) ನಡೆಸಿದ್ದಾರೆ. ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಸೋಮವಾರ (ಜುಲೈ 8) ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಇದರೊಂದಿಗೆ ಕಳೆದ ಒಂದು ವಾರದಲ್ಲಿಯೇ ಉಗ್ರರು ಸೇನಾ ವಾಹನವನ್ನು ಗುರಿಯಾಗಿಸಿ ಎರಡು ಬಾರಿ ದಾಳಿ ನಡೆಸಿದಂತಾಗಿದೆ.

ಉಗ್ರರಿಗಾಗಿ ಶೋಧ ಆರಂಭ

ಸೇನಾ ವಾಹನವನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಲೇ ಭಾರತೀಯ ಸೇನೆಯ ಯೋಧರು ತಿರುಗೇಟು ನೀಡುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಸುಮಾರು 2-3 ಉಗ್ರರು ಅಡಗಿರುವ ಶಂಕೆ ಇರುವ ಕಾರಣ ಯೋಧರು ಕಾರ್ಯಾಚರಣೆ ಆರಂಭಿಸಿದ್ದಾರೆ. ಹಲವು ಯೋಧರು ಇಡೀ ಅರಣ್ಯವನ್ನು ಸುತ್ತುವರಿದಿದ್ದು, ತೀವ್ರತರವಾದ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸೇನೆಯ ವಾಹನ ತೆರಳುವ ಕುರಿತು ಮಾಹಿತಿ ಪಡೆದಿದ್ದ ಉಗ್ರರು, ಯೋಜನೆ ರೂಪಿಸಿ, ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಇಲ್ಲಿದೆ ದಾಳಿಯ ವಿಡಿಯೊ

ಸೇನಾ ವಾಹನ ಬರುವುದನ್ನೇ ಕಾದು ಕುಳಿತಿದ್ದ ಹಲವು ಉಗ್ರರು, ವಾಹನದ ಮೇಲೆ ಗ್ರೆನೇಡ್‌ಗಳ ಮೂಲಕ ದಾಳಿ ನಡೆಸಿದ್ದಾರೆ. ಗಾಯಾಳು ಯೋಧರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರೂ ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಎರಡು ದಿನಗಳ ಹಿಂದಷ್ಟೇ ಭದ್ರತಾ ಸಿಬ್ಬಂದಿಯು ಆರು ಉಗ್ರರನ್ನು (Kashmir Encounter) ಹೊಡೆದುರುಳಿಸಿದ್ದಾರೆ. ಇನ್ನು ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಕುಲ್ಗಾಮ್‌ ಜಿಲ್ಲೆಯ ಫ್ರೈಸಲ್‌ ಚಿನ್ನಿಗಮ್‌ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ಕಾರ್ಯಾಚರಣೆ ಕೈಗೊಳ್ಳುತ್ತಲೇ ಉಗ್ರರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಆಗ ಮುನ್ನಡೆ ಸಾಧಿಸಿದ ಭದ್ರತಾ ಸಿಬ್ಬಂದಿಯು ನಾಲ್ವರು ಉಗ್ರರನ್ನು ಹತ್ಯೆಗೈದಿದ್ದಾರೆ. ಆರು ಉಗ್ರರು ಹಿಜ್ಬುಲ್‌ ಮುಜಾಹಿದ್ದೀನ್‌ ಉಗ್ರ ಸಂಘಟನೆಯವರು ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Reasi Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಕರ ಮೇಲೆ ಉಗ್ರರ ದಾಳಿ; ಹಲವೆಡೆ NIA ರೇಡ್‌

Continue Reading

ದೇಶ

Tamil Nadu Violence: NDA ಮಿತ್ರಪಕ್ಷದ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌

Tamil Nadu Violence:ಪಿಎಂಕೆ ನಾಯಕ ಶಿವಶಂಕರ್‌ ಮೇಲೆ ಈ ಮಾರಣಾಂತಿಕ ಹಲ್ಲೆ ನಡೆದಿದ್ದು, ಗಂಭೀಕರವಾಗಿ ಗಾಯಗೊಂಡಿರುವ ಅವರು ಜೋವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಮೂಲತಃ ಕೇಬಲ್‌ ಟಿವಿ ಆಪರೇಟರ್‌ ಆಗಿರುವ ಶಿವಶಂಕರ್‌, ತಿರುಪಾಪುಲಿಯೂರ್‌ನಲ್ಲಿರುವ ತಮ್ಮ ಮನೆಯ ಮುಂದೆ ನಿಂತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಕತ್ತಿಯಿಂದ ಹಲ್ಲೆಗೆ ಶುರು ಮಾಡಿದ್ದಾರೆ. ಶಿವಶಂಕರ್‌ ಓಡಲು ಶುರು ಮಾಡಿದಾಗ ದುಷ್ಕರ್ಮಿಗಳು ಅವರನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಇನ್ನು ಘಟನೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

VISTARANEWS.COM


on

Tamil Nadu violence
Koo

ಚೆನ್ನೈ: ಬಹುಜನ ಸಮಾಜ ಪಕ್ಷದ (BSP President) ತಮಿಳುನಾಡು ಘಟಕದ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್‌ (Armstrong) ಅವರನ್ನು ಹತ್ಯೆ ಬೆನ್ನಲ್ಲೇ ತಮಿಳುನಾಡಿನಲ್ಲಿ ಮತ್ತೊರ್ವ ರಾಜಕೀಯ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ(Tamil nadu Violence) ನಡೆದಿದೆ. ಕಡಲೂರಿನಲ್ಲಿ ಈ ಘಟನೆ ನಡೆದಿದ್ದು, ಎನ್‌ಡಿಎ ಮಿತ್ರಪಕ್ಷ, ಅನ್ಬುಮಣಿ ರಾಮದಾಸ್‌ ನೇತೃತ್ವದ ಪಟ್ಟಲ್ಲಿ ಮಕ್ಕಳ ಕಚ್ಚಿ(PMK) ಪಕ್ಷದ ಮುಖಂಡನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರ ಹಲ್ಲೆ ನಡೆಸಿದ್ದಾರೆ.

ಪಿಎಂಕೆ ನಾಯಕ ಶಿವಶಂಕರ್‌ ಮೇಲೆ ಈ ಮಾರಣಾಂತಿಕ ಹಲ್ಲೆ ನಡೆದಿದ್ದು, ಗಂಭೀಕರವಾಗಿ ಗಾಯಗೊಂಡಿರುವ ಅವರು ಜೋವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಮೂಲತಃ ಕೇಬಲ್‌ ಟಿವಿ ಆಪರೇಟರ್‌ ಆಗಿರುವ ಶಿವಶಂಕರ್‌, ತಿರುಪಾಪುಲಿಯೂರ್‌ನಲ್ಲಿರುವ ತಮ್ಮ ಮನೆಯ ಮುಂದೆ ನಿಂತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಕತ್ತಿಯಿಂದ ಹಲ್ಲೆಗೆ ಶುರು ಮಾಡಿದ್ದಾರೆ. ಶಿವಶಂಕರ್‌ ಓಡಲು ಶುರು ಮಾಡಿದಾಗ ದುಷ್ಕರ್ಮಿಗಳು ಅವರನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಇನ್ನು ಘಟನೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಾರಣಾಂತಿಕ ಹಲ್ಲೆಯಲ್ಲಿ ಶಿವಶಂಕರ್‌ ಕುತ್ತಿಗೆ ಬಾಯಿ ಮತ್ತು ಭುಜಕ್ಕೆ ಭಾರೀ ಗಾಯಗಳಾಗಿವೆ. ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆತನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಇನ್ನು ಘಟನೆಗೆ ಅನ್ಬುಮಣಿ ರಾಮದಾಸ್‌ ಖಂಡನೆ ವ್ಯಕ್ತಪಡಿಸಿದ್ದಾರೆ. ರಾಜ್ಯ ಪೊಲೀಸರ ನಿರ್ಲಕ್ಷ್ಯವೇ ಇಂತಹ ದುರ್ಘಟನೆಗೆ ಕಾರಣ. ಶಂಕರನ ಸಹೋದರ ಪ್ರಭು ಮೂರು ವರ್ಷಗಳ ಹಿಂದೆ ಬರ್ಬರವಾಗಿ ಕೊಲೆಯಾಗಿದ್ದ. ಕೊಲೆಯ ಪ್ರಮುಖ ಸಾಕ್ಷಿಯಾಗಿದ್ದ ಶಂಕರ್‌ಗೆ ತಂಡವೊಂದು ನ್ಯಾಯಾಲಯಕ್ಕೆ ಹಾಜರಾಗದಂತೆ ಬೆದರಿಕೆ ಹಾಕಿತ್ತು. ಆದರೆ ಆ ನಂತರವೂ ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಂಡಿಲ್ಲ, ಶಂಕರ್‌ಗೆ ರಕ್ಷಣೆಯನ್ನೂ ನೀಡಿಲ್ಲ. ಇದು ಕ್ರೂರ ಕೊಲೆ ಯತ್ನಕ್ಕೆ ಕಾರಣವಾಯಿತು. ಇದು ಪೊಲೀಸರ ಆಲಸ್ಯ ಮತ್ತು ಅಸಮರ್ಥತೆಯನ್ನು ತೋರಿಸುತ್ತದೆ ಎಂದು ದೂರಿದ್ದಾರೆ. ಘಟನೆಗೆ ಬಿಜೆಪಿ ನಾಯಕರು ಕೂಡ ಖಂಡನೆ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಹತ್ಯೆ, ಹಿಂಸಾಚಾರ, ಬೇರೆ ರಾಜಕೀಯ ಪಕ್ಷದ ನಾಯಕರ ಮೇಲೆ ಹಲ್ಲೆಗಳು ಕೇರಳ ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಲೇ ಇರುತ್ತವೆ. ಈಗ ಇಂತಹ ರಾಜಕೀಯ ದ್ವೇಷದ ಹತ್ಯೆಗಳು ತಮಿಳುನಾಡಿಗೂ ಕಾಲಿಟ್ಟಿವೆ. ಇದಕ್ಕೆ ನಿದರ್ಶನ ಎಂಬಂತೆ, ಕೆಲವು ದಿನಗಳ ಹಿಂದೆಯಷ್ಟೇ ಬಹುಜನ ಸಮಾಜ ಪಕ್ಷದ (BSP President) ತಮಿಳುನಾಡು ಘಟಕದ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್‌ (Armstrong) ಅವರನ್ನು ಹತ್ಯೆ ಮಾಡಲಾಗಿತ್ತು. ಚೆನ್ನೈನಲ್ಲಿರುವ (Chennai) ಅವರ ನಿವಾಸದ ಬಳಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ: Viral Video: ಹೃಷಿಕೇಶದ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿದ ವಿದೇಶಿಯರ ಮೋಜು ಮಸ್ತಿ!

Continue Reading

ದೇಶ

Rahul Gandhi: ಹಿಂದುಗಳಿಗೆ ಅವಮಾನ ಖಂಡಿಸಿ ದೇಗುಲದ ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಫೋಟೊ; ಇಲ್ಲಿದೆ Video

Rahul Gandhi: ಹಿಂದುಗಳ ಕುರಿತು ರಾಹುಲ್‌ ಗಾಂಧಿ ಅವರ ಹೇಳಿಕೆಯನ್ನು ಖಂಡಿಸಿ ಮಹಾರಾಷ್ಟ್ರದಲ್ಲಿ ದೇವಾಲಯವೊಂದರ ಆಡಳಿತ ಮಂಡಳಿಯು ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಅವರ ಫೋಟೊವನ್ನು ಅಳವಡಿಸಿದೆ. ದೇಗುಲಕ್ಕೆ ತೆರಳುವ ಭಕ್ತರು ರಾಹುಲ್‌ ಗಾಂಧಿ ಅವರ ಫೋಟೊ ಇರುವ ಡೋರ್‌ಮ್ಯಾಟ್‌ಅನ್ನು ತುಳಿದುಕೊಂಡು ಹೋಗುತ್ತಿರುವ ವಿಡಿಯೊ ಲಭ್ಯವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ ಶುರುವಾಗಿದೆ.

VISTARANEWS.COM


on

Rahul Gandhi
Koo

ಮುಂಬೈ: ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ (Rahul Gandhi) ಅವರು ಹಿಂದುಗಳ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೂಡ ಸಂಸತ್‌ನಲ್ಲಿ ರಾಹುಲ್‌ ಗಾಂಧಿ ಹೇಳಿಕೆಯನ್ನು ಖಂಡಿಸಿದ್ದಾರೆ. ಇದರ ಬೆನ್ನಲ್ಲೇ, ಹಿಂದುಗಳ ಕುರಿತು ರಾಹುಲ್‌ ಗಾಂಧಿ ನೀಡಿದ ಹೇಳಿಕೆಯನ್ನು ಖಂಡಿಸಿ ಮಹಾರಾಷ್ಟ್ರದ ದೇಗುಲದ (Maharashtra Temple) ಡೋರ್‌ ಮ್ಯಾಟ್‌ಗೆ ರಾಹುಲ್‌ ಗಾಂಧಿ ಅವರ ಫೋಟೊವನ್ನು ಅಳವಡಿಸಲಾಗಿದೆ. ಈ ವಿಡಿಯೊ (Viral Video) ಈಗ ವೈರಲ್‌ ಆಗಿದೆ.

ಹಿಂದುಗಳ ಕುರಿತು ರಾಹುಲ್‌ ಗಾಂಧಿ ಅವರ ಹೇಳಿಕೆಯನ್ನು ಖಂಡಿಸಿ ದೇವಾಲಯದ ಆಡಳಿತ ಮಂಡಳಿಯು ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಅವರ ಫೋಟೊವನ್ನು ಅಳವಡಿಸಿದೆ. ದೇಗುಲಕ್ಕೆ ತೆರಳುವ ಭಕ್ತರು ರಾಹುಲ್‌ ಗಾಂಧಿ ಅವರ ಫೋಟೊ ಇರುವ ಡೋರ್‌ಮ್ಯಾಟ್‌ಅನ್ನು ತುಳಿದುಕೊಂಡು ಹೋಗುತ್ತಿರುವ ವಿಡಿಯೊ ಲಭ್ಯವಾಗಿದೆ. ಅಷ್ಟೇ ಅಲ್ಲ, ಡೋರ್‌ ಮ್ಯಾಟ್‌ ಮೇಲೆ, “ಹಿಂದುಗಳನ್ನು ಹಿಂಸಾವಾದಿಗಳು ಎಂಬುದಾಗಿ ಕರೆಯಲು ನಿಮಗೆ ಎಷ್ಟು ಧೈರ್ಯ” ಎಂದು ಕೂಡ ಬರೆಯಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್‌ ಆಗುತ್ತಲೇ ಪರ-ವಿರೋಧ ಚರ್ಚೆಯಾಗುತ್ತಿದೆ.

ರಾಹುಲ್‌ ಗಾಂಧಿ ಹೇಳಿದ್ದೇನು?

“ಹಿಂದೂ ಧರ್ಮ ಹಾಗೂ ನಮ್ಮ ಅನೇಕ ಹಿಂದೂ ಮಹಾಪುರುಷರು ಅಹಿಂಸೆಯನ್ನು ಪ್ರತಿಪಾದಿಸುತ್ತಾರೆ. ಜೀಸಸ್‌ ಕ್ರೈಸ್ಟ್‌ ಕೂಡ ಅಹಿಂಸೆಯನ್ನೇ ಪ್ರತಿಪಾದಿಸುತ್ತಾನೆ. ಸ್ವತಃ ಕೈಯಲ್ಲಿ ತ್ರಿಶೂಲ ಹಿಡಿದಿರುವ ಮಹಾಶಿವನೂ ಅಹಿಂಸೆಯನ್ನೇ ಹೇಳುತ್ತಾನೆ. ಆದರೆ ದಿನದ 24 ಗಂಟೆ ಹಿಂದೂಗಳೆಂದು ಹೇಳುತ್ತಾ ತಿರುಗಾಡುವವರು ಹಿಂಸೆ, ಶತ್ರುತ್ವ, ಅಸತ್ಯವನ್ನೇ ಹೇಳುತ್ತಿದ್ದಾರೆ. ನೀವು ಹಿಂದೂಗಳೇ ಅಲ್ಲ” ಎಂದು ರಾಹುಲ್‌ ಗಾಂಧಿ ಸಂಸತ್‌ನಲ್ಲಿ ಜುಲೈ 1ರಂದು ಹೇಳಿದ್ದರು.

ಮೋದಿ ತಿರುಗೇಟು ಕೊಟ್ಟಿದ್ದರು

ರಾಹುಲ್‌ ಗಾಂಧಿ ಹೇಳಿಕೆಗೆ ನರೇಂದ್ರ ಮೋದಿ ಅವರು ಸಂಸತ್‌ನಲ್ಲಿಯೇ ತಿರುಗೇಟು ಕೊಟ್ಟಿದ್ದರು. “ಸ್ವಾಮಿ ವಿವೇಕಾನಂದರು ಯಾವ ಧರ್ಮದ ಕುರಿತು ಅಭಿಮಾನದಿಂದ ಹೇಳಿದ್ದರೋ, ಯಾವ ಧರ್ಮದ ಮಹತ್ವ, ಸಹಿಷ್ಣುತೆಯನ್ನು ಜಗತ್ತಿಗೇ ತಿಳಿಸಿದ್ದರೋ, ಅದೇ ಧರ್ಮದವರು ನಾವು. ಹಿಂದು ಧರ್ಮವು ಎಂದಿಗೂ ದ್ವೇಷ, ಹಿಂಸೆಯನ್ನು ಪ್ರಚೋದಿಸಿಲ್ಲ. ಬಿಜೆಪಿಯು ಇಂತಹ ಧರ್ಮದಲ್ಲಿ ನಂಬಿಕೆ ಇರಿಸಿದ್ದು, ರಾಜಕೀಯ ಕಾರಣಕ್ಕಾಗಿ ಕಾಂಗ್ರೆಸ್‌ ಹಿಂದುಗಳನ್ನು ಅವಮಾನಿಸುತ್ತಿದೆ. ಹಿಂದುಗಳು ಕಾಂಗ್ರೆಸ್‌ನ ಈ ಷಡ್ಯಂತ್ರವನ್ನು ತಿಳಿಯಬೇಕು. ದೇಶದಲ್ಲಿ ಹಿಂದುಗಳು ಕಾಂಗ್ರೆಸ್‌ ಬಗ್ಗೆ ಎಚ್ಚರದಿಂದ ಇರಬೇಕು” ಎಂದು ಹೇಳಿದ್ದರು.

“ಹಿಂದುಗಳ ಕುರಿತು ರಾಹುಲ್‌ ಗಾಂಧಿ ಅವರು ಸುಳ್ಳುಗಳನ್ನು ಹರಡಿಸುತ್ತಿದ್ದಾರೆ. ಹಿಂದುಗಳು ಹಿಂಸಾವಾದಿಗಳು ಎಂದು ಹೇಳುವ ಮೂಲಕ ಪ್ರಚೋದನೆ ನೀಡುತ್ತಿದೆ. ಇದು ಕಾಂಗ್ರೆಸ್‌ ಹಾಗೂ ಕಾಂಗ್ರೆಸ್‌ ನಾಯಕನ ಸಂಸ್ಕೃತಿ, ಇದು ನಿಮ್ಮ ವ್ಯಕ್ತಿತ್ವ, ಇವು ನಿಮ್ಮ ಕೆಟ್ಟ ವಿಚಾರಗಳು, ಹಿಂದುಗಳ ಮೇಲೆ ನೀವು ಹೊಂದಿರುವ ದ್ವೇಷ, ನಿಮ್ಮ ಚಟುವಟಿಕೆಗಳು ಹಿಂದುಗಳ ವಿರೋಧಿಯಾಗಿವೆ. ಇದನ್ನು ಹಿಂದುಗಳು ಗಮನಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Continue Reading
Advertisement
Viral News
Latest6 mins ago

Viral News: ಎಮ್ಮೆಗಾಗಿ ಮಾಲೀಕರ ಕಿತ್ತಾಟ; ಮಾಲೀಕನ ಹುಡುಕಲು ಎಮ್ಮೆಯ ಮೊರೆ ಹೋದ ಪೊಲೀಸರು!

Ambedkar's portrait
ಪ್ರಮುಖ ಸುದ್ದಿ25 mins ago

Ambedkar’s Portrait: ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ: ಸರ್ಕಾರ ಆದೇಶ

PM Modi Russia Visit
ದೇಶ26 mins ago

PM Modi Russia Visit: ರಷ್ಯಾ ತಲುಪಿದ ಮೋದಿಗೆ ಭಾರತದ ಸಂಪ್ರದಾಯದಂತೆ ಅದ್ಧೂರಿ ಸ್ವಾಗತ; Video ಇದೆ

Viral Video
ಕ್ರಿಕೆಟ್28 mins ago

Viral Video: ಲಂಡನ್​ನ ಇಸ್ಕಾನ್​ ಮಂದಿರದ ಸಂಕೀರ್ತನೆಯಲ್ಲಿ ಪಾಲ್ಗೊಂಡ ವಿರಾಟ್​ ಕೊಹ್ಲಿ-ಅನುಷ್ಕಾ ಶರ್ಮಾ

Ambani Family's Jewels
ಫ್ಯಾಷನ್45 mins ago

Ambani Family’s Jewels: ನೀತಾ ಅಂಬಾನಿಯ ನೆಕ್‌ಲೆಸ್‌ ಬೆಲೆ 500 ಕೋಟಿ ರೂ! ಅಂಬಾನಿ ಮಹಿಳೆಯರ ಬಳಿ ಎಂಥೆಂಥ ಆಭರಣಗಳಿವೆ ನೋಡಿ!

Self Harming
ಪ್ರಮುಖ ಸುದ್ದಿ1 hour ago

Self Harming: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ; ಕಾರಿನಲ್ಲೇ ವಿಷ ಸೇವನೆ

Terrorists Attack
ದೇಶ1 hour ago

Terrorists Attack: ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ; ಇಬ್ಬರು ಯೋಧರಿಗೆ ಗಾಯ, ಉಗ್ರರಿಗಾಗಿ ಶೋಧ

Tamil Nadu violence
ದೇಶ1 hour ago

Tamil Nadu Violence: NDA ಮಿತ್ರಪಕ್ಷದ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌

Rain Effect
ಮಳೆ1 hour ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Chirag Shetty
ಕ್ರೀಡೆ1 hour ago

Chirag Shetty: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗುಡುಗಿದ ಶಟ್ಲರ್ ಚಿರಾಗ್ ಶೆಟ್ಟಿ; ಕಾರಣವೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ1 hour ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ3 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ6 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು7 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ23 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌