IPL 2025: ಮುಂದಿನ ವರ್ಷ ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ? - Vistara News

ಕ್ರೀಡೆ

IPL 2025: ಮುಂದಿನ ವರ್ಷ ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ?

IPL 2025: ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿ ಮತ್ತೆ ನಾಯಕನಾದರೂ ಅಚ್ಚರಿಯಿಲ್ಲ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದರೂ ಕೂಡ ಕೊಹ್ಲಿ ಇದಕ್ಕೆ ಒಪ್ಪಲಿದ್ದಾರಾ ಎನ್ನುವುದು ಕುತೂಹಲ.

VISTARANEWS.COM


on

IPL 2025
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್​ ಕೊಹ್ಲಿ(Virat Kohli) ಅವರು ಮತ್ತೆ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಇದು ಆರ್​ಸಿಬಿ ಮತ್ತು ಕೊಹ್ಲಿ ಅಭಿಮಾನಿಗಳಿಗೆ ಕುತೂಹಲ ಮೂಡಿಸುವಂತೆ ಮಾಡಿದೆ.

ಮುಂದಿನ ವರ್ಷ ಮೆಗಾ ಹರಾಜು ಕೂಡ ನಡೆಯಲಿದೆ. (IPL 2025)​ 18ನೇ ಆವೃತ್ತಿಯಲ್ಲಿ ಬೆಂಗಳೂರು ತಂಡದಲ್ಲಿ ಕೂಡ ದೊಡ್ಡ ಬದಲಾವಣೆಯೊಂದು ಸಂಭವಿಸುವ ಮುನ್ಸೂಚನೆಯೊಂದು ಲಭಿಸಿದೆ. ಈ ಹಿಂದೆ ತಂಡದ ನಾಯಕನಾಗಿದ್ದ ದಕ್ಷಿಣ ಆಫ್ರಿಕಾದ ಡುಪ್ಲೆಸಿಸ್​ ಅವರನ್ನು ಕೈ ಬಿಟ್ಟು ಮಾಜಿ ನಾಯಕ ವಿರಾಟ್​ ಕೊಹ್ಲಿ(Virat Kohli)ಗೆ ಮತ್ತೆ ನಾಯಕತ್ವ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿರಾಟ್​ ಕೊಹ್ಲಿ ಅವರು ಭಾರತ ತಂಡದ ಮೂರು ಮಾದರಿಯ ನಾಯಕತ್ವ ವಹಿಸಿಕೊಂಡಿದ್ದ ವೇಳೆ ಐಪಿಎಲ್​ನಲ್ಲಿಯೂ ತಂಡವನ್ನು ಮುನ್ನಡೆಸುವುದು ಕಷ್ಟವಾಗುತ್ತದೆ, ಕೆಲಸದ ಒತ್ತಡದಿಂದಾಗಿ ಆಟದ ಕಡೆ ಸರಿಯಾಗಿ ಗಮನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಐಪಿಎಲ್​ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಸೂಕ್ತ ನಾಯಕನ ಸ್ಥಾನಕ್ಕೆ ಚೆನ್ನೈ ತಂಡದಲ್ಲಿದ್ದ ಫಾಫ್​ ಡುಪ್ಲೆಸಿಸ್​ ಅವರನ್ನು ಖರೀದಿ ಮಾಡಿ ಅವರಿಗೆ ನಾಯಕತ್ವ ನೀಡಲಾಗಿತ್ತು.

ಕಳೆದ ಮೂರು ಸೀಸನ್​ನಲ್ಲಿ ಡುಪ್ಲೆಸಿಸ್ ಆರ್​ಸಿಬಿ ತಂಡವನ್ನು ಮುನ್ನಡೆಸಿದರೂ ತಂಡದ ಭವಿಷ್ಯ ಮಾತ್ರ ಬದಲಾಗಲಿಲ್ಲ. ಕಳೆದ ಬಾರಿಯಂತೂ ಲೀಗ್​ನಿಂದಲೇ ಹೊರಬಿದ್ದಿತ್ತು. ಇದೀಗ ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿ ಮತ್ತೆ ನಾಯಕನಾದರೂ ಅಚ್ಚರಿಯಿಲ್ಲ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದರೂ ಕೂಡ ಕೊಹ್ಲಿ ಇದಕ್ಕೆ ಒಪ್ಪಲಿದ್ದಾರಾ ಎನ್ನುವುದು ಕುತೂಹಲ. ಈ ಐಪಿಎಲ್​ನಲ್ಲಿ ಕೊಹ್ಲಿ ಪ್ರಚಂಡ ಬ್ಯಾಟಿಂಗ್​ ಮೂಲಕ 700ಕ್ಕೂ ಅಧಿಕ ರನ್​ ಕಲೆ ಹಾಕಿ ಟೂರ್ನಿಯ ಅತ್ಯಧಿಕ ಸ್ಕೋರ್​ ಎನಿಸಿಕೊಂಡಿದ್ದರು.

ಇದನ್ನೂ ಓದಿ Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

ಕನ್ನಡಿಗ ಕೆ.ಎಲ್​ ರಾಹುಲ್​ ಕೂಡ ಆರ್​ಸಿಬಿ ತಂಡಕ್ಕೆ ಬರಲಿದ್ದಾರೆ ಎನ್ನುವ ಮಾತುಗಳು ಕೂಡ ಕೆಲ ತಿಂಗಳಿನಿಂದ ಕೇಳಿರುತ್ತಿದೆ. ಒಂದೊಮ್ಮೆ ಕೊಹ್ಲಿ ನಾಯಕನ ಸ್ಥಾನ ತಿರಸ್ಕರಿಸಿದರೆ, ರಾಹುಲ್​ ಆರ್​ಸಿಬಿ ಸೇರಿದರೆ ನಾಯಕತ್ವ ಅವರ ಪಾಲಾಗುವು ಸಾಧ್ಯತೆ ಇದೆ.

ಕೊಹ್ಲಿಯ ನಾಕಯತ್ವ ಸಾಧನೆ ಹೇಗಿದೆ?

ವಿರಾಟ್​ ಕೊಹ್ಲಿ 2013ರಲ್ಲಿ ಆರ್​ಸಿಬಿಯ ಪೂರ್ಣ ಪ್ರಮಾಣದ ನಾಯಕನಾಗಿ ನೇಮಕಗೊಂಡಿದ್ದರು. 2021ರ ತನಕ ಅವರು ಆರ್​ಸಿಬಿಯನ್ನು ಮುನ್ನಡೆಸಿದ್ದರು. ಕೊಹ್ಲಿ ನಾಯಕತ್ವದಲ್ಲಿ ಒಟ್ಟು 140 ಪಂದ್ಯಗಳನ್ನು ಆಡಿದ್ದ ಆರ್​​ಸಿಬಿ 66 ಪಂದ್ಯಗಳನ್ನು ಜಯಿಸಿದೆ. 70 ಪಂದ್ಯಗಳಲ್ಲಿ ಸೋಲು ಕಂಡಿದೆ. ಐಪಿಎಲ್​ ಇತಿಹಾಸದಲ್ಲಿ ವಿನ್ನಿಂಗ್ಸ್​ ಸರಾಸರಿಯಲ್ಲಿ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರ ನಾಯಕತ್ವದ ಸರಾಸರಿ ಗೆಲುವು ಶೇ. 46.15 ರಷ್ಟಿದೆ. ದಾಖಲೆ ಧೋನಿ ಹೆಸರಿನಲ್ಲಿದೆ. ಧೋನಿ ನಾಯಕತ್ವದ ಗೆಲುವಿನ ಸರಾಸರಿ 60.38 ರಷ್ಟಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Kuldeep Yadav: ಕುಲ್​ದೀಪ್ ಯಾದವ್​ರನ್ನು​ ಅಭಿನಂದಿಸಿದ ಯೋಗಿ ಆದಿತ್ಯನಾಥ್

Kuldeep Yadav: ಕುಲ್​ದೀಪ್​ ಯಾದವ್​ ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 10 ವಿಕೆಟ್​ ಕಿತ್ತು ಮಿಂಚಿದ್ದರು. ಉತ್ತಮ ಎಕಾನಮಿಯಲ್ಲಿ ಬೌಲಿಂಗ್​ ನಡೆಸಿ ಗಮನಸೆಳೆದಿದ್ದರು.

VISTARANEWS.COM


on

Koo

ಕಾನ್ಪುರ: ಟಿ29 ವಿಶ್ವಕಪ್​ ತಂಡದ ಭಾಗವಾಗಿದ್ದ ಭಾರತದ ಸ್ಪಿನ್ನರ್ ಕುಲ್​ದೀಪ್ ಯಾದವ್(Kuldeep Yadav) ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ(Chief Minister of Uttar Pradesh) ಯೋಗಿ ಆದಿತ್ಯನಾಥ್(Yogi Adityanath) ಅವರು ಅಭಿನಂದಿಸಿದ್ದಾರೆ. ಜತೆಗೆ ಸ್ಮರಣಿಯನ್ನು ನೀಡಿ ಗೌರವಿಸಿದ್ದಾರೆ. ಈ ಫೋಟೊ ವೈರಲ್​ ಆಗಿದೆ.

ಕುಲ್​ದೀಪ್​ ಯಾದವ್​ ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 10 ವಿಕೆಟ್​ ಕಿತ್ತು ಮಿಂಚಿದ್ದರು. ಉತ್ತಮ ಎಕಾನಮಿಯಲ್ಲಿ ಬೌಲಿಂಗ್​ ನಡೆಸಿ ಗಮನಸೆಳೆದಿದ್ದರು.

ಟಿ20 ವಿಶ್ವಕಪ್(T20 World Cup) ಗೆಲುವಿನ ಬಳಿಕ ಟ್ರೋಫಿ ಎತ್ತಿ ಹಿಡಿಯುವಾಗ ನಾಯಕ ರೋಹಿತ್ ಶರ್ಮ ವಿಶೇಷ ರೀತಿಯಲ್ಲಿ ಹೆಜ್ಜೆ ಹಾಕಿ ಸಂಭ್ರಮಿಸಿದ್ದರು. ಈ ಬಗ್ಗೆ ಪ್ರಧಾನಿ ಮೋದಿ(Narendra Modi) ಪ್ರಶ್ನೆ ಕೇಳಿದಾಗ ಕುಲ್​ದೀಪ್​(Kuldeep Yadav) ನೀಡಿರುವ ಉತ್ತರ ಕೇಳಿ ಮೋದಿ ಸೇರಿ ಟೀಮ್​ ಇಂಡಿಯಾ ಆಟಗರರು ನಗೆಗಡಲಲ್ಲಿ ತೇಲಿದ್ದರು.

ರೋಹಿತ್​ ಬಳಿ ಮೋದಿ ಅವರು ಈ ರೀತಿ ಸಂಭ್ರಮಿಸಲು ಚಾಹಲ್ ಸಲಹೆ ನೀಡಿದರೇ? ಎಂದು ಕೇಳಿದರು. ಈ ವೇಳೆ ನಗುಮುಖದಿಂದಲೇ ರೋಹಿತ್, ‘ಹೌದು ಚಾಹಲ್ ಹಾಗೂ ಕುಲದೀಪ್ ಅವರು ಸಲಹೆ ನೀಡಿದ್ದರು’ ಎಂದು ತಿಳಿಸಿದರು. ಈ ವೇಳೆ ಕುಲದೀಪ್ ಅವರಲ್ಲಿ ನಿಮ್ಮ ನಾಯಕನನ್ನು ನೃತ್ಯ ಮಾಡುವಂತೆ ಹೇಳಲು ಹೇಗೆ ಧೈರ್ಯ ಬಂತು ಎಂದು ಪ್ರಧಾನಿ ಕೇಳಿದರು. ಇದಕ್ಕೆ ಉತ್ತರಿಸಿದ ಕುಲ್​ದೀಪ್​, ನಾನು ಹೇಳಿಕೊಟ್ಟಂತೆ ರೋಹಿತ್ ಅನುಕರಿಸಲಿಲ್ಲ ಎಂದು ಹೇಳಿದರು. ಈ ಮಾತು ಕೇಳಿ ಮೋದಿ ಜೋರಾಗಿ ನಕ್ಕರು.

ಇದನ್ನೂ ಓದಿ Kuldeep Yadav : ತಮ್ಮ ನೆಚ್ಚಿನ ಸ್ವಾಮೀಜಿಯ ಆಶೀರ್ವಾದ ಪಡೆದ ಕುಲ್ದೀಪ್​ ಯಾದವ್​​

ಆಟಗಾರರೆಲ್ಲ ಪದಕ ಸ್ವೀಕರಿಸುತ್ತಿದ್ದ ವೇಳೆ ಕುಲ್​ದೀಪ್​ ಅವರು ರೋಹಿತ್​ ಅವರಿಗೆ ಯಾವ ರೀತಿಯಲ್ಲಿ ಬಂದು ಕಪ್​ ಎತ್ತಬೇಕು ಎಂದು ನಟನೆ ಮಾಡಿ ತೋರಿಸಿದ್ದರು. ಈ ವೇಳೆ ರೋಹಿತ್​ ಓಕೆ ಓಕೆ.. ಎಂದು ಹೇಳಿದ್ದರು. ಬಳಿಕ ವಿಶ್ವಕಪ್ ಟ್ರೋಫಿಯೊಂದಿಗೆ ಫೋಟೊಗೆ ಫೋಸ್​ ನೀಡಲು ಬರುವ ವೇಳೆ ಕುಲ್​ದೀಪ್​ ಹೇಳಿಕೊಟ್ಟಂತೆ ರೋಹಿತ್ ಅವರು ಅಂದು​ ಮೆಸ್ಸಿ ನಡೆದು ಬಂದು ಟ್ರೋಫಿಯನ್ನು ಎತ್ತಿ ಹಿಡಿದ ರೀತಿಯಲ್ಲೇ ವಿಶ್ವಕಪ್​ ಟ್ರೋಫಿಯನ್ನು ಎತ್ತಿ ಸಂಭ್ರಮಿಸಿದ್ದರು. ಟೀಮ್​ ಇಂಡಿಯಾ ಆಟಗಾರರು ಕೂಡ ಅರ್ಜೆಂಟೀನಾ ಫುಟ್ಬಾಲ್​ ತಂಡದ ಆಟಗಾರರಂತೆ ಸಂಭ್ರಮಿಸಿದ್ದರು.

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29ರಂದು ನಡೆದಿದ್ದ ಟಿ20 ವಿಶ್ವಕಪ್​ ಫೈನಲ್(​T20 World Cup 2024) ಪಂದ್ಯದಲ್ಲಿ ಭಾರತ ತಂಡ(Team India) ದಕ್ಷಿಣ ಆಫ್ರಿಕಾ(South Africa vs India) ವಿರುದ್ಧ 7 ರನ್​ಗಳ ಸಾಧಿಸುವ ಮೂಲಕ 13 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರವೊಂದನ್ನು ನೀಗಿಸಿತ್ತು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

Continue Reading

ಕ್ರೀಡೆ

Jay Shah: ಬಿಸಿಸಿಐ ಕಾರ್ಯದರ್ಶಿ ಸ್ಥಾನಕ್ಕೆ ದಿಢೀರ್​ ರಾಜೀನಾಮೆ ನೀಡಲು ಮುಂದಾದ ಜಯ್ ಶಾ; ಕಾರಣವೇನು?

Jay Shah: ಈಗಾಗಲೇ ಜಯ್​ ಶಾ ಬಿಸಿಸಿಐ ಜತೆಗೆ ಐಸಿಸಿ ಸಮಿತಿಯಲ್ಲಿ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ಮಾತ್ರವಲ್ಲದೆ ಏಷ್ಯಾ ಕ್ರಿಕೆಟ್ ಕೌನ್ಸಿಲ್‌ (ಎಸಿಸಿ) ಅಧ್ಯಕ್ಷರೂ ಆಗಿದ್ದಾರೆ.

VISTARANEWS.COM


on

Jay Shah
Koo

ಮುಂಬಯಿ: ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿ ಜಯ್‌ ಶಾ(Jay Shah) ಅವರು ತಮ್ಮ ಈ ಹುದ್ದೆಯನ್ನು ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಐಸಿಸಿಯ(ICC) ಹೊಸ ಅಧ್ಯಕ್ಷರ ಚುನಾವಣೆಗೆ ಜಯ್ ಶಾ ಸ್ಪರ್ಧಿಸಲಿರುವ ಕಾರಣದಿಂದ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಐಸಿಸಿ ಚುನಾವಣೆ ಇದೇ ವರ್ಷ ನವೆಂಬರ್​ನಲ್ಲಿ ನಡೆಯಲಿದೆ.

ಈಗಾಗಲೇ ಜಯ್​ ಶಾ ಬಿಸಿಸಿಐ ಜತೆಗೆ ಐಸಿಸಿ ಸಮಿತಿಯಲ್ಲಿ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ಮಾತ್ರವಲ್ಲದೆ ಏಷ್ಯಾ ಕ್ರಿಕೆಟ್ ಕೌನ್ಸಿಲ್‌ (ಎಸಿಸಿ) ಅಧ್ಯಕ್ಷರೂ ಆಗಿದ್ದಾರೆ. ಇದೀಗ ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿಂದೆಯೂ ಹಲವು ಬಾರಿ ಜಯ್​ ಶಾ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅವರು ಸ್ಪಧಿಸಿರಲಿಲ್ಲ. ಈ ಬಾರಿ ಖಚಿತ ಎಂದು ಜಯ್​ ಶಾ ಆಪ್ತ ಮೂಲಗಳು ಮಾಹಿತಿ ನೀಡಿದೆ. ಜಯ್ ಶಾ 2019 ರಲ್ಲಿ ಬಿಸಿಸಿಐ ಕಾರ್ಯದರ್ಶಿ ಹುದ್ದೆಯನ್ನು ವಹಿಸಿಕೊಂಡಿದ್ದರು.

ಇದನ್ನೂ ಓದಿ Jay Shah: ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತ ಜಯ್​ ಶಾ; ವಿಡಿಯೊ ವೈರಲ್​

35 ವರ್ಷದ ಜಯ್​ ಶಾ ಒಂದೊಮ್ಮೆ ಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಐಸಿಸಿಯ ಅತ್ಯಂತ ಕಿರಿಯ ಅಧ್ಯಕ್ಷರಾದ ಗೌರವಕ್ಕೆ ಪಾತ್ರರಾಗಲಿದ್ದಾರೆ. ಪ್ರಸ್ತುತ ಐಸಿಸಿ ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೇ ಅಧಿಕಾರದಲ್ಲಿದ್ದಾರೆ. 2020ರಲ್ಲಿ ಈ ಸ್ಥಾನಕ್ಕೆ ಇವರು ಆಯ್ಕೆ ಆಗಿದ್ದರು. ಈ ವರ್ಷ ಅವರ ಅಧಿಕಾರಾವಧಿ ಕೊನೆಯಾಗಲಿದೆ.

ಜಯ್​ ಶಾ ನಾಯಕತ್ವವು ವಿಶ್ವಾದ್ಯಂತ ಕ್ರಿಕೆಟ್‌ನಲ್ಲಿ ಅಳಿಸಲಾಗದ ಛಾಪನ್ನು ಮೂಡಿಸಿದೆ. ಐಸಿಸಿ ಪುರುಷರ ವಿಶ್ವಕಪನ್ನು ಅವರು ಹೊಸ ಎತ್ತರಕ್ಕೆ ಮುನ್ನಡೆಸಿದ್ದಾರೆ. ಲಿಂಗ ಸಮಾನತೆಯನ್ನು ತರುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್​ನಲ್ಲಿ ಪುರುಷ ಮತ್ತು ಮಹಿಳಾ ಆಟಗಾರ್ತಿಯರಿಗೆ ಸಮಾನ ವೇತನ ಪದ್ಧತಿಯನ್ನು ಕೂಡ ಇವರ ಕಾರ್ಯವಧಿಯಲ್ಲಿ ಜಾರಿಗೆ ತರಲಾಗಿತ್ತು. ಮತ್ತು ಮಹಿಳಾ ಪ್ರೀಮಿಯರ್ ಲೀಗ್‌ನ ರಚನೆ, ಒಲಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆ, ಹೀಗೆ ಅನೇಕ ಕಾರ್ಯಗಳ ಮೂಲಕ ಕ್ರಿಕೆಟ್​ ಕ್ಷೇತ್ರದಲ್ಲಿ ಬದಲಾವಣೆಯನ್ನು ಮಾಡಿದ್ದಾರೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮುಖ್ಯಸ್ಥರಾದ ಅತ್ಯಂತ ಕಿರಿಯ ಎನ್ನುವ ಹೆಗ್ಗಳಿಕೆಯೂ ಜಯ್​ ಶಾ ಅವರದ್ದಾಗಿದೆ. ಭಾರತದ ದೇಶೀಯ ಕ್ರಿಕೆಟ್ ಭವಿಷ್ಯವನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಜಯ್​ ಶಾ ಹಲವು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದಾರೆ.

ಪಾಕ್‌ಗೆ ಭಾರತ ಹೋಗಲ್ಲ; ಜಯ್​ ಶಾ


2025ರಲ್ಲಿ ಪಾಕಿಸ್ತಾನದಲ್ಲಿ ಆಯೋಜನೆಗೊಂಡಿರುವ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಜಯ್​ ಶಾ ಹೇಳಿದ್ದಾರೆ. ಕೆಲದಿನಗಳ ಹಿಂದಷ್ಟೇ ಚಾಂಪಿಯನ್ಸ್‌ ಟ್ರೋಫಿಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌, ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ನಿಗದಿ ಮಾಡಿತ್ತು. ಆದರೆ, ಭದ್ರತೆಯ ಕಾರಣವನ್ನು ನೀಡಿರುವ ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ನಿರಾಕರಿಸಿದೆ ಎಂದು ವರದಿಗಳು ತಿಳಿಸಿವೆ.

Continue Reading

ಕ್ರೀಡೆ

Maldives: ವಿಶ್ವಕಪ್​ ಗೆಲುವಿನ ಸಂಭ್ರಮಾಚರಣೆಗೆ ಭಾರತ ತಂಡವನ್ನು ಆಹ್ವಾನಿಸಿದ ಮಾಲ್ಡೀವ್ಸ್‌

Maldives: ‘ಮಾಲ್ಡೀವ್ಸ್‌ ಮಾರ್ಕೆಟಿಂಗ್ ಮತ್ತು ಪಬ್ಲಿಕ್ ರಿಲೇಶನ್ಸ್ ಕಾರ್ಪೊರೇಶನ್(ಎಂಎಂಪಿಆರ್‌ಸಿ), ಮಾಲ್ಡೀವ್ಸ್ ಅಸೋಸಿಯೇಶನ್ ಆಫ್ ಟೂರಿಸಂ ಇಂಡಸ್ಟ್ರೀ(ಎಂಎಟಿಐ) ಜಂಟಿಯಾಗಿ ಟೀಮ್​ ಇಂಡಿಯಾಕ್ಕೆ ಮುಕ್ತ ಆಹ್ವಾನವನ್ನು ನೀಡುತ್ತಿದ್ದೇವೆ’ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

VISTARANEWS.COM


on

Maldives
Koo

ಮಾಲೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ತೆರಳಿ, ಅಲ್ಲಿನ ಪ್ರವಾಸೋದ್ಯಮಕ್ಕೆ (Lakshadweep) ಉತ್ತೇಜನ ನೀಡಬೇಕು ಎಂದಿದ್ದಕ್ಕೇ ತಗಾದೆ ತೆಗೆದಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ (Maldives Tourism) ಭಾರಿ ಹೊಡೆತ ಬಿದ್ದಿದೆ. ಇದೀಗ ಮತ್ತೆ ಭಾರತದ ಜತೆ ಉತ್ತಮ ಸ್ನೇಹ ಬಾಂಧವ್ಯ ಸಂಪಾದಿಸಲು ಹರಸಾಹಸ ಪಡುತ್ತಿದೆ. ಇದೀಗ ಟಿ20 ವಿಶ್ವಕಪ್(T20 World Cup)​ ವಿಜೇತ ಭಾರತ ತಂಡದ ಸಂಭ್ರಮಾಚರಣೆಯನ್ನು ಮಾಲ್ಡೀವ್ಸ್‌ನಲ್ಲಿ ಆಚರಿಸುವಂತೆ(Maldives Tourism Invites Team India) ಅಲ್ಲಿನ ಪ್ರವಾಸೋದ್ಯಮ ಸಂಘ ಮತ್ತು ಮಾರ್ಕೆಟಿಂಗ್ ಹಾಗೂ ಸಾರ್ವಜನಿಕ ಸಂಪರ್ಕ ನಿಗಮ ಆಹ್ವಾನಿಸಿದೆ.

ಜೂನ್ 29ರಂದು ಬಾರ್ಬಡೋಸ್‌ನಲ್ಲಿ ನಡೆದ ಟಿ-ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸುವ ಮೂಲಕ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಟ್ರೋಫಿ ಎತ್ತಿಹಿಡಿದಿತ್ತು. ಬಳಿಕ ತವರಿಗೆ ಆಗಮಿಸಿದ ಭಾರತ ತಂಡಕ್ಕೆ ಮುಂಬೈನಲ್ಲಿ ಭರ್ಜರಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಮಾರಂಭದಲ್ಲಿ ಸಾಗರೋಪಾದಿಯಲ್ಲಿ ಸೇರಿದ ಜನರನ್ನು ಕಂಡು ಎಲ್ಲರು ಅಚ್ಚರಿಗೊಂಡಿದ್ದರು. ಇದೀಗ ಟಿ20 ವಿಶ್ವಕಪ್​ ವಿಜೇತ ಭಾರತ ತಂಡವನ್ನು ಮಾಲ್ಡೀವ್ಸ್‌ಗೆ ಆಹ್ವಾನಿಸಿ ಮತ್ತೆ ಭಾರತೀಯರನ್ನು ತನ್ನತ್ತ ಸೆಳೆಯುವ ಪ್ರಯತ್ನ ಮಾಡಿದೆ.

‘ಮಾಲ್ಡೀವ್ಸ್‌ ಮಾರ್ಕೆಟಿಂಗ್ ಮತ್ತು ಪಬ್ಲಿಕ್ ರಿಲೇಶನ್ಸ್ ಕಾರ್ಪೊರೇಶನ್(ಎಂಎಂಪಿಆರ್‌ಸಿ), ಮಾಲ್ಡೀವ್ಸ್ ಅಸೋಸಿಯೇಶನ್ ಆಫ್ ಟೂರಿಸಂ ಇಂಡಸ್ಟ್ರೀ(ಎಂಎಟಿಐ) ಜಂಟಿಯಾಗಿ ಟೀಮ್​ ಇಂಡಿಯಾಕ್ಕೆ ಮುಕ್ತ ಆಹ್ವಾನವನ್ನು ನೀಡುತ್ತಿದ್ದೇವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

‘ವಿಶ್ವ ವಿಜೇತ ತಂಡಕ್ಕೆ ಆತಿಥ್ಯ ನೀಡಲು ನಾವು ಸಿದ್ಧರಾಗಿದ್ದೇವೆ. ವಿಶ್ರಾಂತಿಯ ಅನುಭವಗಳಿಂದ ತುಂಬಿರುವುದನ್ನು ಖಚಿತಪಡಿಸಲು ನಾವು ಇಚ್ಛಿಸುತ್ತೇವೆ’ಎಂದು ಎಂಎಂ‍ಪಿಆರ್‌ಸಿ ಸಿಇಒ ಇಬ್ರಾಹಿಂ ಶಿಯುರಿ ಮತ್ತು ಎಂಎಟಿಐ ಕಾರ್ಯದರ್ಶಿ ಅಹ್ಮದ್ ನಜೀರ್ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಾರತ ಹಾಗೂ ಮೋದಿ ಕುರಿತು ಮಾಲ್ಡೀವ್ಸ್‌ ಅಸಮಾಧಾನದ ಹೇಳಿಕೆ ನೀಡಿದ ಬಳಿಕ ದೇಶದಲ್ಲಿ ಬಾಯ್ಕಾಟ್‌ ಮಾಲ್ಡೀವ್ಸ್‌ ಅಭಿಯಾನ ಶುರುವಾದ ಕಾರಣ ಆ ದೇಶಕ್ಕೆ ತೆರಳುವವರ ಸಂಖ್ಯೆ ಭಾರಿ ಕುಸಿದಿದೆ.

ಇದನ್ನೂ ಓದಿ Team India : ಭಾರತ ತಂಡಕ್ಕೆ ಸಿಕ್ಕಿದ 125 ಕೋಟಿ ರೂ. ಬಹುಮಾನದಲ್ಲಿ ಯಾರಿಗೆ ಎಷ್ಟು? ಮಾಹಿತಿ ಬಹಿರಂಗ

ಭಾರತೀಯರ ಭೇಟಿ ಕುಸಿತ

ಮಾಲ್ಡೀವ್ಸ್‌ಗೆ ತೆರಳುವ ಪ್ರವಾಸಿಗರಲ್ಲಿ ಭಾರತೀಯರ ಸಂಖ್ಯೆಯೇ ಹೆಚ್ಚಿತ್ತು. ಆದರೆ, ಬಾಯ್ಕಾಟ್‌ ಅಭಿಯಾನದ ಬಳಿಕ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. 2024ರ ಏಪ್ರಿಲ್‌ 10ರವರೆಗೆ ಮಾಲ್ಡೀವ್ಸ್‌ಗೆ 6.63 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಚೀನಾದ 71 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಬ್ರಿಟನ್‌, ರಷ್ಯಾ, ಇಟಲಿ, ಜರ್ಮನಿ ಹಾಗೂ ಭಾರತದ ಪ್ರವಾಸಿಗರಿದ್ದಾರೆ.

ಮಾಲ್ಡೀವ್ಸ್‌ ಪ್ರವಾಸೋದ್ಯಮ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, 2023ರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. 2023ರಲ್ಲಿ ಭಾರತದಿಂದ ಮಾಲ್ಡೀವ್ಸ್‌ಗೆ 2,09,198 ಜನ ಭೇಟಿ ನೀಡಿದರೆ, ರಷ್ಯಾದಿಂದ 2,09,146 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇನ್ನು, ಚೀನಾದಿಂದ ಕಳೆದ ವರ್ಷ 1,87,118 ಮಂದಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ಕಾರಣಕ್ಕಾಗಿಯೇ ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಸಂಘವು, ಭಾರತದ ವಿರುದ್ಧ ಸಚಿವರು ನೀಡಿದ ಉದ್ಧಟತನದ ಹೇಳಿಕೆಯನ್ನು ಖಂಡಿಸಿದೆ. ಅಲ್ಲದೆ, ಭಾರತದ ಮನವೊಲಿಸಲು ಯತ್ನಿಸುತ್ತಿದೆ.

ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು ಮಾಲ್ಡೀವ್ಸ್‌ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್‌ ಟ್ರಿಪ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್‌ ಎದುರಿಸುತ್ತಿದೆ.

Continue Reading

ಕ್ರಿಕೆಟ್

Viral Video: ಲಂಡನ್​ನ ಇಸ್ಕಾನ್​ ಮಂದಿರದ ಸಂಕೀರ್ತನೆಯಲ್ಲಿ ಪಾಲ್ಗೊಂಡ ವಿರಾಟ್​ ಕೊಹ್ಲಿ-ಅನುಷ್ಕಾ ಶರ್ಮಾ

Viral Video: ಮಹಿಯಾ ಎನ್ನುವ ನೆಟ್ಟಿಗರೊಬ್ಬರು ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ವಿರಾಟ್​ ಕೊಹ್ಲಿ ಮತ್ತು ಅನುಷ್ಕಾ ಲಂಡನ್​ನಲ್ಲಿ ನಡೆದ ಕೃಷ್ಣ ದಾಸ್ ಅವರ ಭಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Viral Video
Koo

ಲಂಡನ್​: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ(virat kohli) ಮತ್ತು ಅವರ ಪತ್ನಿ ಅನುಷ್ಕಾ ಶರ್ಮ(Anushka Sharma) ಭಾರತ ತೊರೆದು ಲಂಡನ್​ನಲ್ಲಿ ವಾಸವಾಗಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಕೊಹ್ಲಿ ಮತ್ತು ಅನುಷ್ಕಾ ಲಂಡನ್​ನಲ್ಲಿರುವ ಇಸ್ಕಾನ್​ ಮಂದಿರದಲ್ಲಿ ನಡೆದ ಸಂಕೀರ್ತನೆಯಲ್ಲಿ ಕಾಣಿಸಿಕೊಂಡ ವಿಡಿಯೊವೊಂದು(Viral Video) ವೈರಲ್ ಆಗಿದೆ.

ಮಹಿಯಾ ಎನ್ನುವ ನೆಟ್ಟಿಗರೊಬ್ಬರು ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ವಿರಾಟ್​ ಕೊಹ್ಲಿ ಮತ್ತು ಅನುಷ್ಕಾ ಲಂಡನ್​ನಲ್ಲಿ ನಡೆದ ಕೃಷ್ಣ ದಾಸ್ ಅವರ ಭಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ವಿಡಿಯೊವನ್ನು ಹಂಚಿಕೊಂಡಿದ್ದು. ಎಲ್ಲರೂ ಮುಕೇಶ್‌ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ವಿವಾಹಪೂರ್ವ ಕಾರ್ಯಕ್ರಮದಲ್ಲಿ ಬ್ಯೂಸಿಯಾಗಿದ್ದರೆ, ನನ್ನ ರೋಲ್​ ಮಾಡಲ್​ ವಿರಾಟ್​ ಕೊಹ್ಲಿ ಲಂಡನ್​ನ ಇಸ್ಕಾನ್​ ಮಂದಿರದಲ್ಲಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಸದ್ಯ ವೈರಲ್​ ಆಗುತ್ತಿರುವ ಈ ವಿಡಿಯೊ ಹೊಸತೋ ಅಲ್ಲ ಹಳೆಯದ್ದೋ ಎನ್ನುವುದು ಖಚಿತತೆ ಇಲ್ಲ.

ಕ್ರಿಕೆಟ್​ಗೆ​ ಪದಾರ್ಪಣೆ ಮಾಡಿದ ಆರಂಭಿಕ ದಿನಗಳಲ್ಲಿ ದೇವರ ಮೇಲೆ ಹೆಚ್ಚು ನಂಬಿಕೆ ಇಲ್ಲ ಎಂದು ಹೇಳಿದ್ದ ವಿರಾಟ್​ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಆಧ್ಯಾತ್ಮಿಕದ ಮೇಲೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ದೇವಾಲಯಗಳಿಗೆ ಭೇಟಿ ಕೊಡುವುದು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದು ಸಾಮಾನ್ಯವಾಗಿಬಿಟ್ಟಿದೆ.

ಲಂಡನ್​ಗೆ ಶಿಫ್ಟ್​ ಆಗಲಿದ್ದಾರಾ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಭಾರತ ತೊರೆದು ಕುಟುಂಬ ಸಮೇತರಾಗಿ ಲಂಡನ್​ನಲ್ಲಿ ನೆಲೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದೆ. ಟಿ20 ವಿಶ್ವಕಪ್​ ಗೆದ್ದು ಭಾರತಕ್ಕೆ ಬಂದ ದಿನವೇ ಕೊಹ್ಲಿ ಮುಂಬೈನಲ್ಲಿ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮ ಮುಗಿಸಿ ರಾತ್ರೋರಾತ್ರಿ ಲಂಡನ್​ಗೆ ವಿಮಾನ ಏರಿದ್ದರು. ಹೀಗಾಗಿ ಕೆಲ ನೆಟ್ಟಿಗರುವ ಕೊಹ್ಲಿ ಇನ್ನು ಮುಂದೆ ಲಂಡನ್​ನಲ್ಲಿಯೇ ವಾಸಿಸುವ ಸಾಧ್ಯತೆ ಇದೆ ಎಂದಿದ್ದರು. ಬಾಲಿವುಡ್ ಕಾರ್ಯಕ್ರಮಗಳು ಮತ್ತು ಚಲನಚಿತ್ರಗಳಿಂದಲೂ ಅನುಷ್ಕಾ ಶರ್ಮಾ ದೂರ ಉಳಿದಿರುವುದು ಕೂಡ ಊಹಾಪೋಹಗಳಿಗೆ ಕಾರಣವಾಗಿದೆ.

ಇದನ್ನೂ ಓದಿ Virat Kohli : ನಿವೃತ್ತಿ ಬಳಿಕ ಪತ್ನಿ ಜತೆ ಲಂಡನ್​ಗೆ ತೆರಳಿ ನೆಲೆಸಲಿದ್ದಾರೆ ವಿರಾಟ್​ ಕೊಹ್ಲಿ,

ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಅನುಷ್ಕಾ ಮತ್ತು ವಿರಾಟ್ ಯುಕೆ ಮೂಲದ ಕಂಪನಿಯ ನಿರ್ದೇಶಕರಾಗಿದ್ದಾರೆ. ಯುಕೆ ಸರ್ಕಾರದ ಫೈಂಡ್ ಅಂಡ್ ಅಪ್ಡೇಟ್ ಕಂಪನಿಯ ಮಾಹಿತಿ ಸೇವೆಯ ಪ್ರಕಾರ, ದಂಪತಿಗಳು ಮ್ಯಾಜಿಕ್ ಲ್ಯಾಂಪ್​​ನ ಮೂವರು ನಿರ್ದೇಶಕರಲ್ಲಿ ಇಬ್ಬರು. ಇದು ಆಗಸ್ಟ್ 1, 2022 ರಂದು ಆರಂಭಗೊಂಡ ಸಲಹಾ ಸಂಸ್ಥೆಯಾಗಿದೆ. ಕಂಪನಿಯ ಅಧಿಕೃತ ಕಚೇರಿ ವಿಳಾಸವು ಯುಕೆಯ ವೆಸ್ಟ್ ಯಾರ್ಕ್​ಶೈರ್​ನಲ್ಲಿದೆ.

ಟಿ20ಗೆ ವಿದಾಯ ಹೇಳಿದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಟಿ20 ವಿಶ್ವಕಪ್​ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಫೈನಲ್​ ಪಂದ್ಯದಲ್ಲಿ 76 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದ್ದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದಿದ್ದರು. ಕೊಹ್ಲಿ ತಮ್ಮ 125 ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಸ್ವರೂಪದಲ್ಲಿ ಕೊನೆಗೊಳಿಸಿದ್ದಾರೆ. 4188 ರನ್, 48.69 ಸರಾಸರಿ ಮತ್ತು ಸ್ಟ್ರೈಕ್ ರೇಟ್ 137.04 ಹೊಂದಿದ್ದಾರೆ.

Continue Reading
Advertisement
MLA Satish Sail visited the flood affected areas of Karwar taluk
ಉತ್ತರ ಕನ್ನಡ9 mins ago

Uttara Kannada News: ಕಾರವಾರ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಸತೀಶ ಕೆ. ಸೈಲ್ ಭೇಟಿ

Union Budget 2024
ದೇಶ30 mins ago

Union Budget 2024: ಕೇಂದ್ರ ಬಜೆಟ್;‌ 8ನೇ ವೇತನ ಆಯೋಗ ಸೇರಿ 7 ಬೇಡಿಕೆ ಇಟ್ಟ ಸರ್ಕಾರಿ ನೌಕರರು!

Dengue Cases
ಕರ್ನಾಟಕ37 mins ago

Dengue Cases: ರಾಜ್ಯದಲ್ಲಿ ಸೋಮವಾರ 197 ಡೆಂಗ್ಯೂ ಕೇಸ್‌ಗಳು ಪತ್ತೆ, ಒಬ್ಬರ ಸಾವು

ಕ್ರೀಡೆ42 mins ago

Kuldeep Yadav: ಕುಲ್​ದೀಪ್ ಯಾದವ್​ರನ್ನು​ ಅಭಿನಂದಿಸಿದ ಯೋಗಿ ಆದಿತ್ಯನಾಥ್

Channappa Gowda Mosambi elected as new District President of Akhila bharata Veerashaiva Mahasabha
ಯಾದಗಿರಿ1 hour ago

Yadgiri News: ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಅವಿರೋಧ ಆಯ್ಕೆ

Maharashtra Rain
Latest1 hour ago

Maharashtra Rain: ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ; ರಾಯಗಢ ಕೋಟೆಯಲ್ಲಿ ಪ್ರವಾಸಿಗರಿಗೆ ಪ್ರಾಣ ಸಂಕಟ; ವಿಡಿಯೊ ನೋಡಿ

Money Guide
ಮನಿ-ಗೈಡ್1 hour ago

Money Guide: ಕಡಿಮೆ ಅವಧಿಯಲ್ಲಿ 1 ಕೋಟಿ ರೂ. ಗಳಿಸುವುದು ಹೇಗೆ? ಇಲ್ಲಿದೆ ಹೂಡಿಕೆಯ ಲೆಕ್ಕಾಚಾರ

land fraud
ಕರ್ನಾಟಕ1 hour ago

land fraud: ಭೂ ವಂಚನೆ ತಡೆಗೆ ಪಹಣಿ-ಆಧಾರ್‌ ಜೋಡಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ

Golden Star Ganesh starring Krishnam Pranaya Sakhi movie releasing on 15th August
ಕರ್ನಾಟಕ1 hour ago

Kannada New Movie: ಗಣೇಶ್‌ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರ ʼಕೃಷ್ಣಂ ಪ್ರಣಯ ಸಖಿʼ

Heavy rain in coastal areas of Uttara Kannada district
ಉತ್ತರ ಕನ್ನಡ1 hour ago

Uttara Kannada News: ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 12 ಕಾಳಜಿ ಕೇಂದ್ರಗಳಲ್ಲಿ 437 ಜನರಿಗೆ ಆಸರೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ4 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ6 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ9 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು10 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌