Tourism Policy: ಹೊಸ ಪ್ರವಾಸೋದ್ಯಮ ನೀತಿ; ಪ್ರವಾಸಿ ತಾಣಗಳ ಅಭಿವೃದ್ಧಿಗೆ ಮಾಸ್ಟರ್‌ ಪ್ಲ್ಯಾನ್‌ ರೂಪಿಸಲು ಸಿಎಂ ಸೂಚನೆ - Vistara News

ಕರ್ನಾಟಕ

Tourism Policy: ಹೊಸ ಪ್ರವಾಸೋದ್ಯಮ ನೀತಿ; ಪ್ರವಾಸಿ ತಾಣಗಳ ಅಭಿವೃದ್ಧಿಗೆ ಮಾಸ್ಟರ್‌ ಪ್ಲ್ಯಾನ್‌ ರೂಪಿಸಲು ಸಿಎಂ ಸೂಚನೆ

Tourism Policy: ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ಪಾಲಿಸಿಯನ್ನು ನಾವು ಮಾಡುತ್ತೇವೆ, ನೀವು ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿಕೊಂಡು ಬನ್ನಿ ಎಂದು ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

VISTARANEWS.COM


on

Tourism Policy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕವು ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ. 320 ಕಿಮಿ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇದರಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ (Tourism Policy) ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು ಎಂದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಎರಡನೇ ದಿನದ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ಪಾಲಿಸಿಯನ್ನು ನಾವು ಮಾಡುತ್ತೇವೆ, ನೀವು ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿಕೊಂಡು ಬನ್ನಿ. ರಾಜ್ಯದಲ್ಲಿ ಪ್ರವಾಸೋದ್ಯಮ ಅತ್ಯಂತ ನಿರ್ಲಕ್ಷ್ಯಕ್ಕೆ ಗುರಿಯಾಗಿದೆ. ಕರಾವಳಿಯಲ್ಲಿ ಉತ್ತಮ ಪಂಚತಾರಾ ಹೋಟೆಲ್ ಇಲ್ಲ. ವಿದೇಶಿ ಪ್ರವಾಸಿಗರು ಬಂದರೆ ಉಳಿದುಕೊಳ್ಳಲು ಗುಣಮಟ್ಟದ ಹೋಟೆಲ್ ಅಗತ್ಯವಿದೆ ಎಂದು ತಿಳಿಸಿದರು.

ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು. ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ ಅಭಿವೃದ್ಧಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರೂ, ಇದುವರೆಗೆ ಯಾವುದೇ ಅಭಿವೃದ್ಧಿಯಾಗಿಲ್ಲ. ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ ಬರುತ್ತಾರೆ ಎಂದರು.

ಇದನ್ನೂ ಓದಿ | CM Siddaramaiah: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ; ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯತೆಗಳನ್ನು ಗುರುತಿಸಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ ಸರ್ಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಎಲ್ಲಾ ಅಂಶಗಳನ್ನು ಸೇರಿಸಲಾಗುವುದು. ಇದಕ್ಕೆ ಪೂರಕವಾಗಿ ಅನುದಾನವನ್ನು ಒದಗಿಸಲಾಗುವುದು. ಕರಾವಳಿಯಲ್ಲಿ ಸಿಆರ್‌ಝಡ್‌ ಕಾಯ್ದೆಯಿಂದಾಗಿ ಅಭಿವೃದ್ಧಿಗೆ ಕೆಲವು ತೊಡಕುಗಳಿದ್ದು, ಇದನ್ನು ಬಗೆಹರಿಸಲು ಪ್ರಯತ್ನಿಸಬೇಕು ಎಂದರು.

ಪ್ರವಾಸೋದ್ಯಮ ಮಾಸ್ಟರ್‌ ಪ್ಲ್ಯಾನ್‌ ಸಿದ್ಧಪಡಿಸಿ

ರಾಜ್ಯದಲ್ಲಿ ಕೆಲವೇ ಪ್ರವಾಸೋದ್ಯಮ ತಾಣಗಳಿಗೆ (tourist destinations) ಫೋಕಸ್‌ ದೊರೆಯುತ್ತಿದೆ. 25 ಸಾವಿರ ಸ್ಮಾರಕಗಳಿವೆ. ಇವುಗಳ ಪೈಕಿ ಸುಮಾರು 23 ಸಾವಿರ ಸ್ಮಾರಕಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ ಕಾಯ್ದೆ 2015 ಅನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದರೆ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಸಾಧ್ಯವಿದೆ. ಪ್ರವಾಸೋದ್ಯಮ ತಾಣಗಳ ಸಮೀಕ್ಷೆ, ಸಂರಕ್ಷಣೆ ಇತ್ಯಾದಿಗಳ ಮಾಸ್ಟರ್‌ ಪ್ಲಾನ್‌ ಜಿಲ್ಲಾವಾರು ಸಿದ್ಧಪಡಿಸಬೇಕು. ಮೂರು ತಿಂಗಳ ಒಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಬೇಕು. ಪ್ರವಾಸಿಕ ತಾಣಗಳನ್ನು ಹಂತ ಹಂತವಾಗಿ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸ್ಥಳೀಯ ಜನರು, ಎನ್‌ಜಿಒಗಳ ಸಹಯೋಗ ಪಡೆದುಕೊಳ್ಳಬೇಕು. ಜಿಲ್ಲಾ ಪ್ರವಾಸೋದ್ಯಮ ಕುರಿತು ಪುಸ್ತಕಗಳನ್ನು ಬಿಡುಗಡೆಗೊಳಿಸಿ. ಸ್ಮಾರಕ ದತ್ತಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಆಸಕ್ತರು ಸ್ಮಾರಕಗಳನ್ನು ದತ್ತು ಪಡೆದು ಸಂರಕ್ಷಣೆ ಕಾರ್ಯ ಮಾಡಬಹುದಾಗಿದೆ ಎಂದು ಹೇಳಿದರು.

ಕರಾವಳಿ ಪ್ರವಾಸೋದ್ಯಮಕ್ಕೆ ಆದ್ಯತೆ

ಕರಾವಳಿಯಲ್ಲಿ ಮೆಡಿಕಲ್‌ ಕಾಲೇಜುಗಳು, ಬಂದರುಗಳು, ದೇವಾಲಯಗಳು ಸೇರಿದಂತೆ ಹಲವು ಪ್ರಮುಖ ಸ್ಥಳಗಳು ಇವೆ. ಆದರೆ ಒಂದೇ ಒಂದು ಪಂಚತಾರಾ ಹೊಟೇಲ್‌ ಇಲ್ಲ. ಸಂಜೆಯಾಗುತ್ತಿದ್ದಂತೆಯೇ ಇಡೀ ಮಂಗಳೂರು ಮುಚ್ಚಿಕೊಳ್ಳುತ್ತದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಕ್ಕೆ ಪ್ರತ್ಯೇಕ ಯೋಜನೆಯನ್ನು ರೂಪಿಸಬೇಕಿದೆ. ಕರಾವಳಿಯ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಕಂಡುಕೊಳ್ಳುವ ಅಗತ್ಯವಿದೆ. ಇದರಿಂದ ತೆರಿಗೆ ಸಂಗ್ರಹ ಹಾಗೂ ಸ್ಥಳೀಯರಿಗೆ ಉದ್ಯೋಗವಕಾಶ ಸೃಷ್ಟಿಸಲು ಸಾಧ್ಯವಿದೆ. ಕರಾವಳಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮುಂಬೈ, ಗಲ್ಫ್‌ ದೇಶಗಳಿಗೆ ಉದ್ಯೋಗ ಅರಸಿಕೊಂಡು ಹೋಗುವ ಪರಿಸ್ಥಿತಿ ಬದಲಾಗಬೇಕಿದೆ ಎಂದರು.

ಸಚಿವ ಎಚ್.ಕೆ.ಪಾಟೀಲ್ ಅವರ ಪ್ರಸ್ತಾವನೆ

ರಾಜ್ಯದಲ್ಲಿ 25 ಸಾವಿರ ಸ್ಮಾರಕಗಳಿವೆ. ಇವುಗಳ ಮಹತ್ವ ಅರಿತು ಗೈಡ್‌ಗಳನ್ನು ನೇಮಿಸುವುದಾಗಲಿ, ಸಮೀಕ್ಷೆ ನಡೆಸಿ, ಸಂರಕ್ಷಣೆ ಮಾಡಿ ನಿಮ್ಮ ನಿಮ್ಮ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಲು ಅವಕಾಶಗಳಿವೆ. ಇದಕ್ಕೆ ತಕ್ಕಂತೆ ಕ್ರಿಯಾ ಯೋಜನೆ ಮಾಡಿ, ಬಜೆಟ್ ಪ್ಲ್ಯಾನ್ ಸಿದ್ಧಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ. ನಿಮ್ಮ ನಿಮ್ಮ ಜಿಲ್ಲೆಗಳಲ್ಲಿನ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬಹುದು. ನಿಮ್ಮ ಜಿಲ್ಲೆಗಳಲ್ಲಿ ಎಷ್ಟೆಲ್ಲಾ ಉತ್ತಮ ಸಾಹಿತಿ, ಬರಹಗಾರರು, ಕಲಾವಿದರು ಇದ್ದಾರೆ. ಅವರ ನೆರವು ಪಡೆದು 3 ತಿಂಗಳಲ್ಲಿ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿ ಪ್ರವಾಸೋದ್ಯಮ ಸಮಿತಿ ಮುಂದೆ ಇಡಿ. ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವವರೂ ಇರ್ತಾರೆ. ಅವರನ್ನು ಗುರುತಿಸಿ. ನೀವು ಸಿದ್ಧಪಡಿಸುವ ಮಾಸ್ಟರ್ ಪ್ಲ್ಯಾನ್‌ಗೆ ಹಣಕಾಸು ಒದಗಿಸಲಾಗುವುದು ಎಂದು ಅಧಿಕಾರಿಗಳಿಗೆ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಇದನ್ನೂ ಓದಿ | land fraud: ಭೂ ವಂಚನೆ ತಡೆಗೆ ಪಹಣಿ-ಆಧಾರ್‌ ಜೋಡಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ

ಕಪ್ಪತ್ತಗುಡ್ಡ ನಿಸರ್ಗ ಪ್ರದೇಶವನ್ನು ಪ್ರವಾಸೋದ್ಯಮ ಕ್ಷೇತ್ರವಾಗಿ ಇನ್ನಷ್ಟು ಅಭಿವೃದ್ಧಿ ಪಡಿಸಲು ಸಾಧ್ಯವಿದೆ. ಈ ಬಗ್ಗೆ ಗಮನ ಹರಿಸಿ. ಎಲ್ಲಾ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿದರೆ ರಾಜ್ಯದ ಪ್ರತೀ ಜಿಲ್ಲೆಗಳನ್ನೂ ಪ್ರವಾಸೋದ್ಯಮ ಜಿಲ್ಲೆಗಳನ್ನಾಗಿ ಮಾಡಬಹುದಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಅವರು ಪ್ರಸ್ತಾವನೆಗೆ ಮುಂದಿಟ್ಟರು. ಇದಕ್ಕೆ ಧ್ವನಿಗೂಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಅತೀ ವಿಸ್ತಾರವಾದ ಕರಾವಳಿ ಪ್ರದೇಶವಿದೆ. ಕರಾವಳಿಯುದ್ಧಕ್ಕೂ ನಾವು ಪ್ರವಾಸೋದ್ಯಮ ಬೆಳೆಸುವ, ಅಭಿವೃದ್ಧಿಪಡಿಸುವ ಅವಕಾಶಗಳು ಹೇರಳವಾಗಿವೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

D. S. Veeraiah: ಅರಸು ಟ್ರಕ್ ಟರ್ಮಿನಲ್ ಹಗರಣ;‌ ಡಿ.ಎಸ್‌.ವೀರಯ್ಯಗೆ ಜು.30ರವರೆಗೆ ನ್ಯಾಯಾಂಗ ಬಂಧನ

D. S. Veeraiah: ಬೆಂಗಳೂರಿನ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿಜೆಪಿ ಮಾಜಿ ಎಂಎಲ್‌ಸಿ ಡಿ.ಎಸ್‌. ವೀರಯ್ಯರನ್ನು ಸಿಐಡಿ ಹಾಜರುಪಡಿಸಿತ್ತು. ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್‌, ಜುಲೈ 30ರವರೆಗೂ ನ್ಯಾಯಾಂಗ ಬಂಧನ ಒಪ್ಪಿಸಲು ಸೂಚಿಸಿದೆ.

VISTARANEWS.COM


on

DS Veeraiah
Koo

ಬೆಂಗಳೂರು: ದೇವರಾಜ ಅರಸು ಟ್ರಕ್ ಟರ್ಮಿನಲ್‌ ಹಗರಣದಲ್ಲಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಎಂಎಲ್‌ಸಿ ಡಿ.ಎಸ್‌. ವೀರಯ್ಯ (D. S. Veeraiah) ಅವರಿಗೆ ಜುಲೈ 30ರವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 47 ಕೋಟಿ ರೂ. ಹಗರಣ ಆರೋಪದಲ್ಲಿ ಬಂಧನವಾಗಿದ್ದ ವೀರಯ್ಯರನ್ನು ಸಿಐಡಿ ಅಧಿಕಾರಿಗಳು ನಗರದ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್‌ ನ್ಯಾಯಾಧೀಶರು, ವೀರಯ್ಯರನ್ನು ನ್ಯಾಯಾಂಗ ಬಂಧನ‌ಕ್ಕೆ ಒಪ್ಪಿಸಲು ಆದೇಶ ನೀಡಿದ್ದಾರೆ. ಮತ್ತೊಂದೆಡೆ ವೀರಯ್ಯ ಪರ ವಕೀಲ ವಕೀಲ ಶ್ಯಾಮಸುಂದರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ದೇವರಾಜ ಅರಸು ಟರ್ಮಿನಲ್ ಬಹುಕೋಟಿ ಹಗರಣಕ್ಕೆ (Devaraja Arasu truck terminal scam) ಸಂಬಂಧಿಸಿ ಬಿಜೆಪಿ ಮಾಜಿ ಎಂಎಲ್‌ಸಿ ಡಿ.ಎಸ್‌. ವೀರಯ್ಯಋನ್ನು ಜುಲೈ 12ರಂದು ಬಂಧಿಸಲಾಗಿತ್ತು. 47 ಕೋಟಿ ರೂ. ಹಗರಣದ ಆರೋಪದಲ್ಲಿ ಮೈಸೂರಿನಲ್ಲಿ ವೀರಯ್ಯರನ್ನು ಸಿಐಡಿ ಬಂಧಿಸಿತ್ತು. ಈ ಹಿಂದೆ ವಾರ್ತಾ ಇಲಾಖೆಯ ಶಂಕರಪ್ಪ ಬಂಧನವಾಗಿತ್ತು, ಇದಾದ ಬೆನ್ನಲ್ಲೇ ಮೈಸೂರಿನಲ್ಲಿ ಮುಡಾ ಅಕ್ರಮ ವಿರೋಧಿಸಿ ಪ್ರತಿಭಟನೆಗೆ ತೆರಳಿದ್ದಾಗ ವೀರಯ್ಯರನ್ನು ಬಂಧಿಸಲಾಗಿತ್ತು.

2021ರಿಂದ 2023ರವರೆಗೆ ಡಿ.ಎಸ್.ವೀರಯ್ಯ ಅವರು ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಗಮದ ಅಧ್ಯಕ್ಷರಾಗಿದ್ದಾಗ ನಡೆದಿದ್ದ ಸುಮಾರು 47 ಕೋಟಿ ರೂ. ಅಕ್ರಮದ ಬಗ್ಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿಎನ್​ ಶಿವಪ್ರಸಾದ್ ವಿಲ್ಸನ್​​ ಗಾರ್ಡ್​ನ್​ ಠಾಣೆಗೆ ದೂರು ನೀಡಿದ್ದರು. ತುಂಡು ಗುತ್ತಿದೆ ಆಧಾರದಲ್ಲಿ ಅಕ್ರಮ ನಡೆದಿದೆ ನೀಡಿದ್ದ ದೂರಿನ ಮೇರೆಗೆ 2023ರ ಸೆಪ್ಟೆಂಬರ್​ 23ರಂದು ಎಫ್​ಐಆರ್ ದಾಖಲಾಗಿತ್ತು. ಬಳಿಕ ವೀರಯ್ಯ ಅವರಿಗೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.

ಇದನ್ನೂ ಓದಿ | Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

ಏನಿದು ಹಗರಣ?

2021ರ ಅಕ್ಟೋಬರ್ 25ರಂದು ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ 194ನೇ ನಿರ್ದೇಶಕ ಮಂಡಳಿ ಸಭೆಯಲ್ಲಿ ಟ್ರಕ್ ಟರ್ಮಿನಲ್‌ಗಳ ದುರಸ್ತಿ ಹಾಗೂ ನಿರ್ವಹಣೆಗೆ 10 ಕೋಟಿ ರೂ.ಗಳವರೆಗೆ ತುಂಡು ಗುತ್ತಿಗೆ ನೀಡಲು ಅನುಮೋದನಾ ನಿರ್ಣಯ ಮಾಡಲಾಗಿತ್ತು. ಆನಂತರ ಕಾಮಗಾರಿ ನಡೆಸದೆ ನಕಲಿ ದಾಖಲೆ ಸೃಷ್ಟಿಸಿ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನಿಗಮದ ಹಾಲಿ ಎಂಡಿ, ಬಳಿಕ ವಿಲ್ಸನ್ ಗಾರ್ಡನ್ ಠಾಣೆಗೆ ತುಂಡು ಗುತ್ತಿಗೆ ಕಾಮಗಾರಿಯಲ್ಲಿ 47.10 ಕೋಟಿ ಅಕ್ರಮ ನಡೆದಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿತ್ತು.

Continue Reading

ಪ್ರಮುಖ ಸುದ್ದಿ

Pennar River Dispute: ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; 8 ವಾರದಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

Pennar River Dispute: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಯರಗೋಳ ಬಳಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿ, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್‌, 8 ವಾರಗಳಲ್ಲಿ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

VISTARANEWS.COM


on

Pennar River Dispute
Koo

ಬೆಂಗಳೂರು: ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ (Pennar River Dispute) ಸಂಬಂಧಿಸಿ 8 ವಾರಗಳಲ್ಲಿ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ನೀರು ಹಂಚಿಕೆ ಸಂಬಂಧ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ನ ನ್ಯಾ.ಹಿಮಾ ಕೊಯ್ಲಿ ನೇತೃತ್ವದ ಪೀಠ, ವಾಸ್ತವವಾಗಿ ಏನಾಗಿದೆ ಎಂಬುದನ್ನು ತಿಳಿಸುವಂತೆ ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ನಿರ್ದೇಶನ ನೀಡಿದೆ.

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಯರಗೋಳ ಬಳಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿತ್ತು. ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿತ್ತು. ಅಂತಾರಾಜ್ಯ ವಿವಾದವಾಗಿದ್ದರಿಂದ ನ್ಯಾಯಾಧೀಕರಣ ಸ್ಥಾಪನೆಗೆ ಆಗ್ರಹಿಸಿತ್ತು. ಆದರೆ ಮಾತುಕತೆಯಲ್ಲಿ ಇತ್ಯರ್ಥ ಮಾಡಿಕೊಳ್ಳುವ ಇರಾದೆಯನ್ನು ಕರ್ನಾಟಕ ವ್ಯಕ್ತಪಡಿಸಿತ್ತು. ಹಾಗಾಗಿ ವಾಸ್ತವವಾಗಿ ಏನಾಗಿದೆ ಎಂಬುದನ್ನು ತಿಳಿಸಲು 8 ವಾರಗಳಲ್ಲಿ ವರದಿ ನೀಡುವಂತೆ ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

2022ರ ಡಿಸೆಂಬರ್‌ನಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್‌ ನದಿ (ದಕ್ಷಿಣ ಪಿನಾಕಿನಿ) ನೀರು ಬಳಕೆ ವಿವಾದ ಬಗೆಹರಿಸಲು ಮೂರು ತಿಂಗಳೊಳಗೆ ನ್ಯಾಯಾಧಿಕರಣ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು. ಇದರಿಂದಾಗಿ, ಮಾತುಕತೆ ಮೂಲಕ ಜಲವಿವಾದ ಬಗೆಹರಿಸಿಕೊಳ್ಳುವ ಉದ್ದೇಶ ಹೊಂದಿದ್ದ ಕರ್ನಾಟಕಕ್ಕೆ ಹಿನ್ನಡೆಯಾಗಿತ್ತು.

ಏನಿದು ಪ್ರಕರಣ?

ದಕ್ಷಿಣ ಪಿನಾಕಿನಿಯ ಉಪನದಿಯಾದ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಯರಗೋಳ ಗ್ರಾಮದ ಬಳಿ ಅಣೆಕಟ್ಟು ನಿರ್ಮಿಸಲು ಮುಂದಾಗಿದೆ. ಕೋಲಾರ, ಮಾಲೂರು, ಬಂಗಾರಪೇಟೆಯ ಹಲವು ಹಳ್ಳಿಗಳು ಹಾಗೂ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದೆ. ಸುಮಾರು 240 ಕೋಟಿ ರೂ. ವೆಚ್ಚದ ಅಣೆಕಟ್ಟು ಯೋಜನೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಅನುಮತಿಯನ್ನೂ ಪಡೆದಿದೆ. ಆದರೆ, ಇದಕ್ಕೆ ತಮಿಳುನಾಡು ಸರ್ಕಾರ ತಕರಾರು ತೆಗೆದಿದ್ದು, ಸುಪ್ರೀಂ ಕೋರ್ಟ್‌ ಮೊರೆಹೋಗಿದೆ.

ತಮಿಳುನಾಡು ತಕರಾರು ಏನು?

ಪೆನ್ನಾರ್‌ ನದಿಯ ನೀರಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸುವುದು ಅಂತಾರಾಜ್ಯ ಜಲವಿವಾದ ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂಬುದು ತಮಿಳುನಾಡಿನ ತಕರಾರಾಗಿದೆ. ಮಾರ್ಕಂಡೇಯ ನದಿಯು ಪೆನ್ನಾರ್‌ನ ಉಪನದಿಯಾದ ಕಾರಣ ಅಣೆಕಟ್ಟು ನಿರ್ಮಿಸಿದರೆ ನದಿ ನೀರಿನ ಹರಿವಿಗೆ ತೊಂದರೆಯಾಗುತ್ತದೆ. ತಮಿಳುನಾಡಿನ ಜನರು ಕೃಷಿ ಹಾಗೂ ಕುಡಿಯಲು ಪೆನ್ನಾರ್‌ ನದಿ ನೀರನ್ನು ಅವಲಂಬಿಸಿದ್ದಾರೆ. ಹಾಗಾಗಿ, ಅಣೆಕಟ್ಟು ನಿರ್ಮಿಸಲು ಅವಕಾಶ ನೀಡಬಾರದು ಎಂದು ತಕರಾರು ತೆಗೆದಿದೆ.

ಇದನ್ನೂ ಓದಿ | Assembly Session: ವಾಲ್ಮೀಕಿ ನಿಗಮ ಅಕ್ರಮ ದಲಿತರಿಗೆ ಮಾಡಿರೋ ಅನ್ಯಾಯ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಕರ್ನಾಟಕದ ವಾದವೇನು?

ಅಣೆಕಟ್ಟು ನಿರ್ಮಾಣ ಯೋಜನೆ ವೈಜ್ಞಾನಿಕವಾಗಿದ್ದು, ಕೇಂದ್ರ ಜಲಶಕ್ತಿ ಸಚಿವಾಲಯವೇ ಅನುಮತಿ ನೀಡಿದೆ ಎಂದು ಕರ್ನಾಟಕ ವಾದ ಮಂಡಿಸಿದೆ. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂಬುದು ಕರ್ನಾಟಕದ ಉದ್ದೇಶವಾಗಿತ್ತು. ಇದನ್ನು ರಾಜ್ಯ ಸರ್ಕಾರವು ಕೇಂದ್ರಕ್ಕೂ ಮನವರಿಕೆ ಮಾಡಿತ್ತು. ನ್ಯಾಯಾಧಿಕರಣದ ರಚನೆಯು ಬಿಕ್ಕಟ್ಟು ಬಗೆಹರಿಸಲು ಸಮಯ ತೆಗೆದುಕೊಳ್ಳುವುದರಿಂದ ಮಾತುಕತೆಗೆ ಕರ್ನಾಟಕ ಆದ್ಯತೆ ನೀಡಿತ್ತು.

Continue Reading

ರಾಯಚೂರು

Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

Muharram 2024 : ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮವಾಗಿದ್ದಾರೆ. ಬೆಂಕಿಯಲ್ಲಿ ಬೇಯುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.

VISTARANEWS.COM


on

By

Muharram 2024 Man dies in fire during
Koo

ರಾಯಚೂರು: ರಾಯಚೂರಿನಲ್ಲಿ ಮೊಹರಂ ಆಚರಣೆ ವೇಳೆ ಕೊಂಡ ಹಾಯುವಾಗ (Muharram 2024) ವ್ಯಕ್ತಿಯೊಬ್ಬ ಆಯತಪ್ಪಿ ಬಿದ್ದು ಸುಟ್ಟು ಭಸ್ಮವಾಗಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಯಮನಪ್ಪ ನಾಯಕ್ (45)ಮೃತ ದುರ್ದೈವಿ.

ನಿಗಿ ನಿಗಿ ಕೆಂಡದಲ್ಲಿ ಬೇಯುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮೊಹರಂ ಹಬ್ಬ ಆಚರಣೆ ವೇಳೆ ಕೊಂಡ ಹಾಯುವುದು ಪದ್ಧತಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿದೆ. ಅದರಂತೆ ಬೆಂಕಿ ಹಾಯಲು ಯಮನಪ್ಪ ಮುಂದಾಗಿದ್ದರು. ಕೊಂಡ ಹಾಯುವಾಗ ಆಯತಪ್ಪಿ ಬೆಂಕಿಯೊಳಗೆ ಬಿದ್ದ ಪರಿಣಾಮ ಸುಟ್ಟುಕರಕಲಾಗಿದ್ದಾರೆ.

ಕೂಡಲೇ ಅಲ್ಲಿದ್ದವರು ಬೆಂಕಿ ಹಾರಿಸಲು ನೀರು ಎರಚಿ ರಕ್ಷಣೆ ಮುಂದಾದರೂ, ಆದರೆ ತೀವ್ರ ಬೆಂಕಿ ಆವರಿಸಿ ಯಮನಪ್ಪ ಸುಟ್ಟುಭಸ್ಮವಾದರು. ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್‌ರಿಂದ ಲಾಠಿ ಚಾರ್ಜ್

ಮೊಹರಂ ಹಬ್ಬದ ಆಚರಣೆ ವೇಳೆ ಪೊಲೀಸ್‌ರಿಂದ ಲಾಠಿ ಚಾರ್ಜ್ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪಾಶ್ಚಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ಪಾಶ್ಚಾಪುರ ಗ್ರಾಮದ ನಡುವಿನ ಪೇಟೆ ಬಳಿ ಬಂದಾಗ ಏಕಾಏಕಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಎರಡು ದೇವರ ಭೇಟಿ ಸಂದರ್ಭದಲ್ಲಿ ಟೊನ್ನೆಬಾವು, ಕರಬಾಲ ಎಂಬ ಸಂಪ್ರದಾಯದ ಆಚರಣೆ ವೇಳೆ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಯಮಕನಮರಡಿ ಪೊಲೀಸ್ ಠಾಣೆಯ ಎಎಸ್‌ಐ ಮುರಗೋಡ ಹಾಗೂ ಓರ್ವ ಪೋಲಿಸ್ ಪೇದೆ ಮೇಲೆ ಹಲ್ಲೆ ನಡೆಸಲಾಗಿದೆ. ಉದ್ದೇಶಪೂರ್ವಕವಾಗಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Assembly Session: ವಾಲ್ಮೀಕಿ ನಿಗಮ ಅಕ್ರಮ ದಲಿತರಿಗೆ ಮಾಡಿರೋ ಅನ್ಯಾಯ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

Assembly Session: ಸಚಿವರ ಮೌಖಿಕ ಸೂಚನೆ ಮೇರೆಗೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಹಣ ವರ್ಗಾವಣೆ ಮಾಡಿದ್ದಾರೆ. ದಲಿತರಿಗೆ ಆಗಿರುವ ಅನ್ಯಾಯ ಸರಿಪಡಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದರು.

VISTARANEWS.COM


on

Assembly Session
Koo

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದ ಅಕ್ರಮದಿಂದ ಚಂದ್ರಶೇಖರನ್ ಎಂಬ ಪ್ರಾಮಾಣಿಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಇದರಲ್ಲಿ ಸಚಿವರು, ಶಾಸಕರ (Assembly Session) ಪಾತ್ರ ಇಲ್ಲ ಎಂದು ಸಿಎಂ ಹೇಳಿಕೆ ನೀಡಿದ್ದರು. ಡಿಸಿಎಂ ಅವರು ಸದನದಲ್ಲೂ ಹೇಳಿದ್ದಾರೆ. ಈ ಮೂಲಕ ನಾಗೇಂದ್ರ ಅವರಿಗೆ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡಿದರು. ಆದರೆ, ಇದು ರಾಜ್ಯ ಸರ್ಕಾರದಿಂದ ದಲಿತರಿಗೆ ಮಾಡಿರುವ ಅನ್ಯಾಯ ಎಂದು ಶಾಸಕ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ನಿಯಮ 69ರಡಿ ಚರ್ಚೆ ಆರಂಭಿಸಿದ ವಿಜಯೇಂದ್ರ ಅವರು, ಹೊಸ ಸರ್ಕಾರ ಬಂದ ಬಳಿಕ 187 ಕೋಟಿ ಹಣ ಹೊರ ರಾಜ್ಯಕ್ಕೆ ಕಳುಹಿಸಿದ್ದಾರೆ, ಇದು ಅಕ್ಷಮ್ಯ ಅಪರಾಧ. ಹಗರಣದ ಬಗ್ಗೆ ಮಾಧ್ಯಮದರು ನಿರಂತರವಾಗಿ ವರದಿ ಪ್ರಸಾರ ಮಾಡಿದ್ದು, ಅವರಿಗೆ ಅಭಿನಂದನೆ ಸಲ್ಲಿಸುವೆ. ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 187 ಕೋಟಿ ದುರುಪಯೋಗ ಬಗ್ಗೆ ಡೆತ್ ನೋಟ್ ಬರೆಯದಿದ್ದರೆ ಪ್ರಕರಣ ಹೊರಗೆ ಬರುತ್ತಿರಲಿಲ್ಲ. ಆದರೆ, ದಲಿತರಿಗೆ ಆಗಿರುವ ಅನ್ಯಾಯ ಸರಿಪಡಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ | CM Siddaramaiah: ಆಸ್ತಿ ಬಗ್ಗೆ ತಪ್ಪು ಮಾಹಿತಿ; ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಮತ್ತೆರಡು ದೂರು

ಸಚಿವರ ಮೌಖಿಕ ಸೂಚನೆ ಮೇರೆಗೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಹಣ ವರ್ಗಾವಣೆ ಮಾಡಿದ್ದಾರೆ. ಹಂತ ಹಂತವಾಗಿ ಕೋಟಿಗಟ್ಟಲೆ ಹಣ ವರ್ಗಾವಣೆ ಮಾಡಿದ್ದಾರೆ. ರಾಜ್ಯ ಖಜಾನೆಯಿಂದಲೂ ಹಣ ವರ್ಗಾವಣೆ ಆಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೂರಾರು ಕೋಟಿ ಹಣ ಹೊರರಾಜ್ಯಕ್ಕೆ ವರ್ಗಾವಣೆ ಮಾಡಲಾಗಿದೆ. ಚಂದ್ರಶೇಖರ್ ಅವರಿಗೆ ಹಣ ವರ್ಗಾವಣೆ ಬಗ್ಗೆ ಮಾಹಿತಿ ಸಿಕ್ಕಿ, ಅನುಮಾನ ಬರುತ್ತದೆ. ಆಗ ಇದರ ಬಗ್ಗೆ ಮಾಹಿತಿ ಹೊರ ತರಲು ಮುಂದಾಗುತ್ತಾರೆ. ಹೊರಗೆ ಮಾಹಿತಿ ತಂದರೆ ಚಂದ್ರಶೇಖರ್ ಅವರನ್ನೂ ಸಿಲುಕಿಸೋ ಷಡ್ಯಂತ್ರ ಮಾಡಿದ್ದರು. ಕೊನೆಗೆ ಚಂದ್ರಶೇಖರ್ ತಲೆಗೆ ಕಟ್ಟುತ್ತಾರೆ. ಇದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಬಿಡುಗಡೆಯಾದ ಅನುದಾನವೂ ಖರ್ಚಾಗಲ್ಲ

ಹಗರಣದ ಬಗ್ಗೆ ವಿಪಕ್ಷ ನಾಯಕರು ಈಗಾಗಲೇ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ದಲಿತರು, ಹಿಂದುಳಿದ ವರ್ಗಗಳ ಪರವಾಗಿ ಅಧಿಕಾರ ನಡೆಸುತ್ತಾರೆ ಎಂದು ಜನ ನಿರೀಕ್ಷೆ ಇಟ್ಟಿದ್ದರು. ಆದರೆ ಶೋಷಿತರ ದನಿಯಾಗಿ ಇವರು ಕೆಲಸ ಮಾಡುತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಇಲ್ಲ. ಸಂಪೂರ್ಣ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿವೆ. ದೇವರಾಜ ಅರಸು ಅಭಿವೃದ್ಧಿ ನಿಗಮಕ್ಕೆ 190 ಕೋಟಿ ಅನುದಾನ ಇಟ್ಟಿದ್ದರು, 44 ಕೋಟಿ ವೆಚ್ಚವೇ ಆಗಿಲ್ಲ. ಮರಾಠ ಅಭಿವೃದ್ಧಿಗೆ 100 ಕೋಟಿ‌ ಘೋಷಣೆ ಆಗಿ, 70 ಕೋಟಿ ಅನುದಾನ ನೀಡಿದ್ದಾರೆ. ಇದರಲ್ಲಿ ಕೇವಲ‌ 30 ಕೋಟಿ‌ ವೆಚ್ಚ ಮಾಡಿದ್ದಾರೆ.ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ 25 ಕೋಟಿ‌ಯಲ್ಲಿ 9 ಕೋಟಿ ಮಾತ್ರ ಬಳಕೆಯಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ‌ 100 ಕೋಟಿ ನೀಡಿದ್ದು, ಇದರಲ್ಲಿ 25 ಕೋಟಿ ಮಾತ್ರ ಖರ್ಚಾಗಿದೆ. ಹಲವು ಅಭಿವೃದ್ಧಿ ನಿಗಮ ಇದೇ ರೀತಿ ಆಗಿದೆ. ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ನೀಡಿದ 13 ಕೋಟಿ ಪೈಕಿ 6.5 ಕೋಟಿ ಮಾತ್ರ ವೆಚ್ಚವಾಗಿದೆ ಎಂದು ಹೇಳಿದರು.

ದಲಿತರ ಹೆಸರೇಳಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ, ಎಸ್‌ಸಿ, ಎಸ್‌ಟಿಗಳ ಅಭಿವೃದ್ಧಿಗೆ ಈ ಹಿಂದೆ ಇದ್ದ ಹಣಕ್ಕಿಂತ ಈ ಬಾರಿ ಕಡಿಮೆ ಇಟ್ಟಿದ್ದಾರೆ. ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಪ್ರಕರಣವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಹೋರಾಟ ಕೂಡ ಮಾಡಿದ್ದೇವೆ‌. ನಿಗಮದ ಭ್ರಷ್ಟಾಚಾರದಲ್ಲಿ ಅನೇಕ ಅಧಿಕಾರಿಗಳ ಹೆಸರು ಕೆಳಿಬಂದಿದೆ. ಅನೇಕ ಸಚಿವರು, ಶಾಸಕರ ಹೆಸರೂ ಇದೆ. ಇನ್ನು ಇಷ್ಟೊಂದು ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯಗೆ ಯಾವುದೇ ವಿಚಾರ ಗೊತ್ತೇ ಇಲ್ಲ ಅನ್ನುವಂತೆ ನಡೆದುಕೊಳ್ಳುತ್ತಿದ್ದಾರೆ. ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿದ್ದೆವು, ತಡವಾಗಿಯಾದರೂ ಸಿಎಂ ನಾಗೇಂದ್ರ ರಾಜೀನಾಮೆ ಪಡೆದುಕೊಂಡರು ಎಂದು ಹೇಳಿದರು.

ಸಿಬಿಐ, ಇಡಿ ತನಿಖೆ ಬೇಡವೆಂದು ನಾವೇನೂ ಹೇಳುತ್ತಿಲ್ಲ: ಗೃಹ ಸಚಿವ

ವಿಜಯೇಂದ್ರ ಪ್ರಸ್ತಾಪದ ವೇಳೆ ಮಧ್ಯಪ್ರವೇಶ ಮಾಡಿದ ಗೃಹಸಚಿವ ಪರಮೇಶ್ವರ್ ಅವರು, ಇನ್ವೆಸ್ಟಿಗೇಷನ್ ಮುಂದೆ ವಿಚಾರ ಇದ್ದಾಗ ಏನೂ ಹೇಳಲು ಆಗಲ್ಲ. ಸಚಿವರು, ಅಧಿಕಾರಿಗಳು ದುಡ್ಡು ತೆಗೆದುಕೊಂಡಿದ್ದಾರೆ ಅಂತ ನಿರ್ದಿಷ್ಟವಾಗಿ ಹೇಳಲು ಬರುವುದಿಲ್ಲ. ಈಗ ಮೂರು ಸಂಸ್ಥೆಗಳು ತನಿಖೆ ಮಾಡುತ್ತಿದ್ದಾರೆ. ಸಿಬಿಐಗೆ ನಾವೇನೂ ಹೇಳಿರಲಿಲ್ಲ. ಆದರೂ ಅವರು ತನಿಖೆ ಮಾಡುತ್ತಿದ್ದಾರೆ. ಇಡಿ ಕೂಡ ತನಿಖೆ ಮಾಡುತ್ತಿದ್ದಾರೆ, ನಾವೇನು ಬೇಡ ಅಂತ‌ ಹೇಳಿಲ್ಲ. ಎಸ್‌ಐಟಿ ಕೂಡ ತನಿಖೆ ಮಾಡುತ್ತಿದ್ದು, ಅವರಿಗೂ ಹೇಳಲು ಆಗಲ್ಲ. ಯಾರಿಗೆ ನಾವು ಹೇಳಬೇಕು ಅಂತ ಗೊತ್ತಿಲ್ಲ ಎಂದರು.

ಇದನ್ನೂ ಓದಿ | Pooja Khedkar: ಐಎಎಸ್‌ಗಾಗಿ ನಕಲಿ ಜಾತಿ, ಕಡಿಮೆ ವಯಸ್ಸು, ದರ್ಪ; ಪೂಜಾ ಖೇಡ್ಕರ್‌ ಕಳ್ಳಾಟ ಒಂದೆರಡಲ್ಲ!

ಸುನೀಲ್‌ ಕುಮಾರ್‌ ಮೇಲೆ ಮುಗಿಬಿದ್ದ ಕೈ ಶಾಸಕರು

ಗೃಹಸಚಿವರು ಮಾತನಾಡುವಾಗ ಶಾಸಕ ಸುನೀಲ್ ಕುಮಾರ್ ಮಧ್ಯಪ್ರವೇಶ ಮಾಡಿ, ನಮ್ಮ ಶಾಸಕರು, ಸಚಿವರು ಯಾರೂ ಭಾಗಿಯೇ ಆಗಿಲ್ಲ ಎನ್ನುತ್ತೀರಿ. ಹಣವನ್ನು ಬಳ್ಳಾರಿ, ಅಮೇಥಿ ಯಾವ ಚುನಾವಣೆಗೆ ಬಳಸಿದೆವು ಅಂತ ಸ್ಪಷ್ಟವಾಗಿ ಹೇಳಿಬಿಡಿ ಎಂದರು. ಇದರಿಂದ ಕಾಂಗ್ರೆಸ್ ಶಾಸಕರು, ಸಚಿವರು ಕೆರಳಿದರು. ಈ ವೇಳೆ ಸದನದಲ್ಲಿ ಎರಡೂ ಪಕ್ಷದ ಶಾಸಕರ ನಡುವೆ ವಾಗ್ವಾದ ನಡೆಯಿತು.

Continue Reading
Advertisement
DS Veeraiah
ಕರ್ನಾಟಕ6 mins ago

D. S. Veeraiah: ಅರಸು ಟ್ರಕ್ ಟರ್ಮಿನಲ್ ಹಗರಣ;‌ ಡಿ.ಎಸ್‌.ವೀರಯ್ಯಗೆ ಜು.30ರವರೆಗೆ ನ್ಯಾಯಾಂಗ ಬಂಧನ

NEET-UG 2024
ದೇಶ19 mins ago

NEET UG 2024: ನೀಟ್‌ ಅಕ್ರಮ; ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಮತ್ತಿಬ್ಬರು ಆರೋಪಿಗಳು ಅರೆಸ್ಟ್‌

Olympics on television
ಕ್ರೀಡೆ30 mins ago

Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

Pennar River Dispute
ಪ್ರಮುಖ ಸುದ್ದಿ56 mins ago

Pennar River Dispute: ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; 8 ವಾರದಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

Rape Case
Latest1 hour ago

Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

ಕ್ರೀಡೆ1 hour ago

India at the Olympics: ಒಲಿಂಪಿಕ್ಸ್​ನಲ್ಲಿ ಭಾರತದ ಪದಕ ಸಾಧನೆಯ ಇಣುಕು ನೋಟ

Ambani Video
ಪ್ರಮುಖ ಸುದ್ದಿ1 hour ago

Ambani Video: 3 ವರ್ಷದ ಅಂಬಾನಿ ಮೊಮ್ಮಗ ವೇದಿಕೆ ಮೇಲೆ ಜಾರಿ ಬಿದ್ದ, ಆದರೆ ಜನರ ಹೃದಯ ಗೆದ್ದ!

Money Guide
ಮನಿ-ಗೈಡ್1 hour ago

Money Guide: ಹಿರಿಯರಿಗೆ ಆರೋಗ್ಯ ವಿಮೆ: ಯಾಕಾಗಿ? ಏನಿದರ ಉಪಯೋಗ?

Muharram 2024 Man dies in fire during
ರಾಯಚೂರು1 hour ago

Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

hit and run case
ದೇಶ2 hours ago

Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌