Govt Employees: ಬೇಡಿಕೆ ಈಡೇರದಿದ್ದರೆ ಜುಲೈ ಕೊನೆ ವಾರದಿಂದ ರಾಜ್ಯ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಷಡಾಕ್ಷರಿ ಎಚ್ಚರಿಕೆ - Vistara News

ಪ್ರಮುಖ ಸುದ್ದಿ

Govt Employees: ಬೇಡಿಕೆ ಈಡೇರದಿದ್ದರೆ ಜುಲೈ ಕೊನೆ ವಾರದಿಂದ ರಾಜ್ಯ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಷಡಾಕ್ಷರಿ ಎಚ್ಚರಿಕೆ

Govt Employees: ಜುಲೈ 28ರೊಳಗೆ ಸಂಘದ ಪ್ರಮುಖ 3 ಬೇಡಿಕೆಗಳನ್ನು ಸರ್ಕಾರ ಈಡೇರಿಸದೇ ಇದ್ದಲ್ಲಿ ಅನಿವಾರ್ಯವಾಗಿ ಮೂರನೇ ಹಂತವಾಗಿ ಜುಲೈ ಕೊನೆಯ ವಾರದಿಂದ ಅನಿರ್ದಿಷ್ಟಾವಧಿ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಹೋರಾಟ ನಡೆಸಲಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ (CS Shadakshari) ಹೇಳಿದ್ದಾರೆ.

VISTARANEWS.COM


on

govt employees Shadakshari
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ (Govt Employees) ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಜುಲೈ ಕೊನೆಯ ವಾರದಿಂದ (July Last Week) ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಗೈರುಹಾಜರಿ ಮುಷ್ಕರವನ್ನು (Statewide protest) ಆರಂಭಿಸುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ (CS Shadakshari) ಎಚ್ಚರಿಕೆ ನೀಡಿದ್ದಾರೆ.

ರಾಜ್ಯ 7ನೇ ವೇತನ ಆಯೋಗವು (7th pay commission) ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸಬೇಕು, ಎನ್.ಪಿ.ಎಸ್ (NPS) ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು (Old Pension Scheme) ಮರು ಜಾರಿಗೊಳಿಸಬೇಕು, ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸ್ಸು ವರದಿಯಲ್ಲಿನ ಫಿಟ್‌ಮೆಂಟ್ ಸೌಲಭ್ಯವನ್ನು ಜಾರಿ ಮಾಡಬೇಕು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಮರುಚಾಲನೆ ನೀಡಬೇಕು ಮುಂತಾದ ನೌಕರರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈ ಕೂಡಲೇ ಅನುಷ್ಠಾನಕ್ಕೆ ತರುವಂತೆ ಅವರು ಆಗ್ರಹಿಸಿದ್ದಾರೆ.

ಹೋರಾಟದ ಮೊದಲ ಹಂತವಾಗಿ ಜುಲೈ 14ರವರೆಗೆ ಶಾಸಕರು, ಸಚಿವರು, ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ಗೆ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳ ಕುರಿತು ಆಯಾ ತಾಲ್ಲೂಕು-ಜಿಲ್ಲಾ ಶಾಖೆಗಳು ನೌಕರರು ಪದಾಧಿಕಾರಿಗಳು- ವೃಂದ ಸಂಘಗಳೊಂದಿಗೆ ಮನವಿ ಪತ್ರ ಸಲ್ಲಿಸುತ್ತಾರೆ. ಎರಡನೇ ಹಂತವಾಗಿ ಜುಲೈ 3ನೇ ವಾರದಲ್ಲಿ ರಾಜ್ಯ ಕಾರ್ಯಕಾರಿ ಹಾಗೂ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳ ಸಭೆಯನ್ನು ಕರೆದು ಹೋರಾಟದ ಅಂತಿಮ ನಿರ್ಣಯ ಕೈಗೊಳ್ಳಲಾಗುತ್ತದೆ. ಜುಲೈ 28ರೊಳಗೆ ಸಂಘದ ಪ್ರಮುಖ 3 ಬೇಡಿಕೆಗಳನ್ನು ಸರ್ಕಾರ ಈಡೇರಿಸದೇ ಇದ್ದಲ್ಲಿ ಅನಿವಾರ್ಯವಾಗಿ ಮೂರನೇ ಹಂತವಾಗಿ ಜುಲೈ ಕೊನೆಯ ವಾರದಿಂದ ಅನಿರ್ದಿಷ್ಟಾವಧಿ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಹೋರಾಟ ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

07-07-2024ರಂದು ಚಿಕ್ಕಮಗಳೂರಿನಲ್ಲಿ ನಡೆದ ಸಂಘದ ರಾಜ್ಯ ಸರ್ಕಾರಿ ನೌಕರರ ಸಂಘಟನೆಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ 3 ಪ್ರಮುಖ ಬೇಡಿಕೆಗಳ ಸಂಬಂಧ ಹಂತ ಹಂತವಾಗಿ ಹೋರಾಟದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಭೆಯು ಸರ್ವಾನುಮತದಿಂದ ನಿರ್ಣಯ ಕೈಗೊಂಡಿತ್ತು.

ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳು:

1) ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸುವುದು: ರಾಜ್ಯ 7ನೇ ವೇತನ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸ್ಸು ವರದಿಯಲ್ಲಿನ ಫಿಟ್‌ಮೆಂಟ್ ಸೌಲಭ್ಯವನ್ನು ಯಥಾವತ್ತಾಗಿ 01-07-2022ರಿಂದ ಅನ್ವಯವಾಗುವಂತೆ ವೇತನ ನಿಗದಿಪಡಿಸಿ, ದಿ: 01-04-2024 ರಿಂದ ಆರ್ಥಿಕ ಸೌಲಭ್ಯವನ್ನು ನೀಡಿ ಸರ್ಕಾರಿ ಆದೇಶ ಹೊರಡಿಸುವುದು.

2) ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು: ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತೀಸ್‌ ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್.
ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.

3) ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (ಕೆ.ಎ.ಎಸ್.ಎಸ್)ಯನ್ನು ಜಾರಿಗೆ ತರಲು ಈ ಹಿಂದಿನ ರಾಜ್ಯ ಸರ್ಕಾರವು 2021-22ರ ಆಯವ್ಯದಲ್ಲಿ ಘೋಷಿಸಿತ್ತು. ಈಗಾಗಲೇ ಸಚಿವ ಸಂಪುಟದ ಅನುಮೋದನೆ ಪಡೆದು ದಿನಾಂಕ: 05-09-2022 ರಂದು ಸರ್ಕಾರಿ ಆದೇಶ ಹೊರಡಿಸಿರುತ್ತದೆ. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ಯೋಜನೆಯ ಅನುಷ್ಟಾನಾಧಿಕಾರಿಗಳು ತಾಂತ್ರಿಕ ಹಾಗೂ ಇನ್ನಿತರೆ ಕಾರಣಗಳನ್ನು ನೀಡಿ ಈ ಯೋಜನೆಯನ್ನು ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದ್ದು, ಚಿಕಿತ್ಸೆ ಪಡೆಯಲು ನೌಕರರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಶೀಘ್ರವಾಗಿ ಈ ಯೋಜನೆಯನ್ನು ಲೋಕಾರ್ಪಣೆ ಮಾಡುವುದು.

ವೇತನ ಆಯೋಗ ವರದಿ

ರಾಜ್ಯ 6ನೇ ವೇತನ ಆಯೋಗದ ವರದಿಯು ಅನುಷ್ಟಾನಗೊಂಡು ದಿ: 31-06-2022ಕ್ಕೆ 5 ವರ್ಷ ಪೂರ್ಣಗೊಂಡಿರುವುದರಿಂದ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು ದಿನಾಂಕ:01-07-2022ರಿಂದ ಪರಿಷ್ಕರಣೆಗೊಳಿಸಬೇಕಾಗಿತ್ತು. ಸಂಘವು ಸರ್ಕಾರಕ್ಕೆ ಒತ್ತಡ ತಂದ ಹಿನ್ನೆಲೆಯಲ್ಲಿ; ಈ ಹಿಂದಿನ ಸರ್ಕಾರವು 19-11-2022 ರಂದು ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಕೆ.ಸುಧಾಕರ್‌ ರಾವ್‌ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿ, ಆರು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಆದೇಶಿಸಿತ್ತು. ಆಯೋಗವು ದಿ:16-03-2024ರಂದು ಸರ್ಕಾರಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದೆ. ವೇತನ ಆಯೋಗ ರಚನೆಯಾಗಿ ಇಂದಿಗೆ 19 ತಿಂಗಳು ಕಳೆದಿದ್ದು, ಇಂದಿಗೆ ಸರ್ಕಾರ ವರದಿ ಪಡೆದು 04 ತಿಂಗಳು ಪೂರ್ಣಗೊಳ್ಳುತ್ತಿದೆ.

ಈ ಮಧ್ಯೆ ಸಂಘವು ದಿನಾಂಕ: 01-03-2023 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡ ಪರಿಣಾಮ ಸರ್ಕಾರವು ದಿನಾಂಕ: 01-04-2023 ರಿಂದ ಅನ್ವಯವಾಗುವಂತೆ ಶೇ. 17 ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಸರ್ಕಾರಿ ಆದೇಶ ಹೊರಡಿಸಿತ್ತು. 27-02-2024ರಂದು ರಾಜ್ಯ ಮಟ್ಟದ ಮಹಾ ಸಮ್ಮೇಳನವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿ, 7ನೇ ವೇತನ ಆಯೋಗವು ವರದಿ ನೀಡಿದ ನಂತರ ಜಾರಿಗೊಳಿಸುವ ಸ್ಪಷ್ಟ ಭರವಸೆಯನ್ನು ನೌಕರರಿಗೆ ನೀಡಿದ್ದರು. ಈ ಸಂಬಂಧ ಮುಖ್ಯಮಂತ್ರಿಗಳನ್ನು ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನು ಸಂಘದ ನಿಯೋಗ
ಹಲವಾರು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಹಳೇ ಪಿಂಚಣಿ ಯೋಜನೆ

ಸಂಘದ ಮತ್ತೊಂದು ಪ್ರಮುಖ ಬೇಡಿಕೆಯಾದ 2006ರ ನಂತರ ಸರ್ಕಾರಿ ಸೇವೆಗೆ ನೇಮಕವಾದ ನೌಕರರ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಸಲುವಾಗಿ ಈ ಹಿಂದಿನ ಸರ್ಕಾರ ಇತರೆ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ವರದಿ ನೀಡಲು ಸರ್ಕಾರ ದಿ: 01-03-2023 ರಂದು ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತ್ತು. ಸಮಿತಿಯು ಇದುವರೆವಿಗೂ ಒಂದೂ ಸಭೆಯನ್ನು ನಡೆಸಿಲ್ಲ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಿರುವ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನವನ್ನೂ ಸಹ ನಡೆಸಿಲ್ಲ. ಅಲ್ಲದೆ ಈ ಸಂಬಂಧ ಸರ್ಕಾರಕ್ಕೆ ಯಾವುದೇ ವರದಿಯನ್ನು ಇಲ್ಲಿಯವರೆಗೂ ನೀಡಿಲ್ಲ. ಚುನಾವಣಾ ಪ್ರಣಾಳಿಕೆಯಲ್ಲಿ ಪಕ್ಷ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವ ಭರವಸೆಯನ್ನು ನೀಡಿದೆ. ಎನ್.ಪಿ.ಎಸ್. ಯೋಜನೆಯಲ್ಲಿ ನೇಮಕಗೊಂಡು ನಿವೃತ್ತಿಯಾಗಿರುವ ಸರ್ಕಾರಿ ನೌಕರರಿಗೆ ಮಾಸಿಕ ಕೇವಲ ರೂ.1500 ಪಿಂಚಣಿ ಲಭ್ಯವಾಗುತ್ತಿದ್ದು, ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 2.50 ಲಕ್ಷ ಎನ್.ಪಿ.ಎಸ್ ಯೋಜನೆ ವ್ಯಾಪ್ತಿಯ ನೌಕರರ ಸಂಧ್ಯಾ ಕಾಲದ ಬದುಕು ಆರ್ಥಿಕ ಭದ್ರತೆಯಿಲ್ಲದೆ ದುಸ್ತರಗೊಳ್ಳುತ್ತಿದೆ.

ಆರೋಗ್ಯ ಸಂಜೀವಿನಿ ಯೋಜನೆ

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (ಕೆ.ಎ.ಎಸ್.ಎಸ್)ಗೆ ಈ ಹಿಂದಿನ ರಾಜ್ಯ ಸರ್ಕಾರವು 2021-22ರ ಆಯವ್ಯದಲ್ಲಿ ಘೋಷಿಸಿತ್ತು. ಸಚಿವ ಸಂಪುಟದ ಅನುಮೋದನೆ ಪಡೆದು ಈ ಯೋಜನೆಯ ರೂಪ-ರೇಷೆಗಳನ್ನು ಸಿದ್ಧಪಡಿಸಿ ನಿರ್ವಹಣೆ ಮಾಡಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ಜವಾಬ್ದಾರಿಯನ್ನು ನೀಡಿ 5-9-2022 ರಂದು ಸರ್ಕಾರಿ ಆದೇಶ ಹೊರಡಿಸಿದೆ. ಹಿಂದಿನ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳು ಈ ಯೋಜನೆಯನ್ನು 20-03-2023
ರಂದು ಸಾಂಕೇತಿಕವಾಗಿ ಲೋಕಾರ್ಪಣೆ ಮಾಡಿದ್ದರು. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ರಾಜ್ಯದ ಬಹಳಷ್ಟು ಸಿ ಮತ್ತು ಡಿ ವರ್ಗದ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಗಂಭೀರ ಸ್ವರೂಪದ ಖಾಯಿಲೆಗಳಾದಲ್ಲಿ ಲಕ್ಷಾಂತರ ರೂಗಳನ್ನು ಭರಿಸಲು ಕಷ್ಟವಾಗುತ್ತಿದೆ ಎನ್ನುವುದನ್ನು ಷಡಾಕ್ಷರಿ ಸರ್ಕಾರದ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಜುಲೈನಿಂದ ಶೇ.23 ವೇತನ ಹೆಚ್ಚಳ ಮಾಡಿ: ಸಿ.ಎಸ್‌.ಷಡಾಕ್ಷರಿ ಒತ್ತಾಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

T20 World Cup 2024 : 30 ಎಸೆತಕ್ಕೆ 30 ರನ್​ ಇದ್ದಾಗ ದಿಕ್ಕೇ ತೋಚದಂತಾಗಿದ್ದೆ! ಆ ತಲ್ಲಣ ವಿವರಿಸಿದ ಶರ್ಮಾ

T20 World Cup 2024 : ಇಂಥ ಪರಿಸ್ಥಿತಿಯಲ್ಲಿ ಏನಾಗುತ್ತಿದೆ ಎಂದು ಗೊತ್ತಾಗಿರಲಿಲ್ಲ. ತಮ್ಮ ತಂಡದ ಆಟಗಾರರಿಗೆ ತಮ್ಮ ಸಂಯಮವನ್ನು ಕಾಪಾಡಿಕೊಳ್ಳುವಂತೆ ಕೇಳಿಕೊಳ್ಳುವುದು ಬಿಟ್ಟರೆ ಬೇರೆ ಆಯ್ಕೆ ಇರಲಿಲ್ಲ. ಪ್ರಶಸ್ತಿಯ ಆಕಾಂಕ್ಷೆಗಳು ಹೊತ್ತು ಕಳೆದಂತೆ ಕ್ಷೀಣಿಸಿತ್ತು ಎಂದು ರೋಹಿತ್​ ಶರ್ಮಾ ಹೇಳಿದ್ದಾರೆ

VISTARANEWS.COM


on

T20 World Cup 2024
Koo

ಬೆಂಗಳೂರು: ಜೂನ್​ನಲ್ಲಿ ವೆಸ್ಟ್​ ಇಂಡೀಸ್​ನ ಬಾರ್ಬಡೋಸ್​ನಲ್ಲಿ ನಡೆದ ಟಿ 20 ವಿಶ್ವಕಪ್ 2024 ರ (T20 World Cup 2024) ಫೈನಲ್​​ನಲ್ಲಿ ದಕ್ಷಿಣ ಆಫ್ರಿಕಾ ತಂಡ ಉತ್ತಮ ಪ್ರದರ್ಶನ ನೀಡುತ್ತಾ ಗೆಲುವಿನ ಕಡೆಗೆ ಮುನ್ನುಗ್ಗುತ್ತಿದ್ದಾಗ ತಮ್ಮ ಮನಸ್ಸಿನಲ್ಲಿ ಆದ ಭಾವನೆಗಳನ್ನು ಅವರು ವಿವರಿಸಿದ್ದಾರೆ. ಆ ವೇಳೆ ತಮ್ಮ ಮನಸ್ಸು ಸಂಪೂರ್ಣವಾಗಿ ನಿಶ್ಚಲವಾಗಿತ್ತು ಎಂಬುದನ್ನು ಒಪ್ಪಿಕೊಂಡಿದ್ದಾರೆ.

15ನೇ ಓವರ್​ನಲ್ಲಿ ಹೆನ್ರಿಕ್ ಕ್ಲಾಸೆನ್, ಅಕ್ಷರ್ ಪಟೇಲ್ ಅವರ ಒಂದೇ ಓವರ್​ನಲ್ಲಿ 24 ರನ್ ಬಾರಿಸಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ಗೆಲುವಿನತ್ತ ಸಾಗುತ್ತಿತ್ತು. ಮೊದಲ ವಿಶ್ವಕಪ್ ಗೆಲ್ಲಲು 177 ರನ್​ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾಕ್ಕೆ ಕೊನೆಯ ಐದು ಓವರ್​ಗಳಲ್ಲಿ ಕೇವಲ 30 ರನ್​ ಅವಶ್ಯಕತೆಯಿತ್ತು. ಕ್ಲಾಸೆನ್ 22 ಎಸೆತಗಳಲ್ಲಿ 49 ರನ್ ಗಳಿಸಿದರೆ, ಮಿಲ್ಲರ್ 7 ಎಸೆತಗಳಲ್ಲಿ 14 ರನ್ ಗಳಿಸಿ ಇದ್ದರು. ದಕ್ಷಿಣ ಆಫ್ರಿಕಾ ಆರು ವಿಕೆಟ್​ ಕೂಡ ಹೊಂದಿತ್ತು. ಟಿ 20 ಕ್ರಿಕೆಟ್​ನ ಅತ್ಯಂತ ಅಪಾಯಕಾರಿ ಬ್ಯಾಟರ್​ಗಳು ಅವರು.

ಇಂಥ ಪರಿಸ್ಥಿತಿಯಲ್ಲಿ ಏನಾಗುತ್ತಿದೆ ಎಂದು ಗೊತ್ತಾಗಿರಲಿಲ್ಲ. ತಮ್ಮ ತಂಡದ ಆಟಗಾರರಿಗೆ ತಮ್ಮ ಸಂಯಮವನ್ನು ಕಾಪಾಡಿಕೊಳ್ಳುವಂತೆ ಕೇಳಿಕೊಳ್ಳುವುದು ಬಿಟ್ಟರೆ ಬೇರೆ ಆಯ್ಕೆ ಇರಲಿಲ್ಲ. ಪ್ರಶಸ್ತಿಯ ಆಕಾಂಕ್ಷೆಗಳು ಹೊತ್ತು ಕಳೆದಂತೆ ಕ್ಷೀಣಿಸಿತ್ತು ಎಂದು ರೋಹಿತ್​ ಶರ್ಮಾ ಹೇಳಿದ್ದಾರೆ

ನಾನು ಸಂಪೂರ್ಣವಾಗಿ ಸ್ತಬ್ಧನಾಗಿದ್ದೆ. ನಾನು ಮುಂದೆ ಏನಾಗುತ್ತದೆ ಎಂದು ಯೋಚಿಸಲೂ ಸಮಯ ಇರಲಿಲ್ಲ. ಈ ವಾಸ್ತವದಲ್ಲೇ ಉಳಿಯುವುದು ಮತ್ತು ಕೆಲಸದ ಮೇಲೆ ಗಮನ ಹರಿಸುವುದು ಗುರಿಯಾಗಿತ್ತು. ನಾವೆಲ್ಲರೂ ಶಾಂತವಾಗಿದ್ದು ಯೋಜನೆಗಳನ್ನು ಕಾರ್ಯಗತಗೊಳಿಸಲು ಪ್ರಯತ್ನಿಸುವುದು ಬಹಳ ಮುಖ್ಯವಾಗಿತ್ತು”ಎಂದು ಡಲ್ಲಾಸ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರೋಹಿತ್ ಹೇಳಿದ್ದಾರೆ.

ಇದನ್ನೂ ಓದಿ: Chennai Super King : ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕ್ರಿಕೆಟ್ ಅಕಾಡೆಮಿ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್​

ಪಂದ್ಯಾವಳಿಯಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಆಗಿದ್ದ ರೋಹಿತ್​​ ಒತ್ತಡದಲ್ಲಿ ಭಯಭೀತರಾಗದೆ ಕಾರ್ಯಯೋಜನೆ ಮೇಲೆ ಗಮನ ಹರಿಸಿದ್ದಕ್ಕಾಗಿ ತಮ್ಮ ತಂಡವನ್ನು ಶ್ಲಾಘಿಸಿದರು.

ದಕ್ಷಿಣ ಆಫ್ರಿಕಾಕ್ಕೆ 30 ಎಸೆತಗಳಲ್ಲಿ 30 ರನ್​ಗಳ ಅಗತ್ಯವಿದ್ದಾಗ ನಾವು ತೀವ್ರ ಒತ್ತಡದಲ್ಲಿದ್ದೆವು. ನಾವು ಎಸೆದ ಐದು ಓವರ್​ಗಳು ನಾವು ಎಷ್ಟು ಸಂಯಮದಿಂದ ಇದ್ದೆವು ಎಂಬುದನ್ನು ತೋರಿಸಿತು. ನಾವು ಬೇರೆ ಯಾವುದರ ಬಗ್ಗೆಯೂ ಹೆಚ್ಚು ಯೋಚಿಸದೆ ನಮ್ಮ ಕೆಲಸದ ಮೇಲೆ ಕೇಂದ್ರೀಕರಿಸಿದೆವು. ನಾವು ಭಯಭೀತರಾಗಲಿಲ್ಲ; ಅದರ ಫಲಿತಾಂಶ ಸಿಕ್ಕಿತು ಎಂದು 37 ವರ್ಷದ ಆಟಗಾರ ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯ, ಅರ್ಶ್​ದೀಪ್​ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ ಕೊನೆಯ ಐದು ಓವರ್​ಗಳಲ್ಲಿ ಗಮನಾರ್ಹವಾಗಿ ಬೌಲಿಂಗ್ ಮಾಡಿ ಕೇವಲ 22 ರನ್​ ಬಿಟ್ಟುಕೊಟ್ಟು ಏಳು ರನ್​ಗಳ ಅಂತರದಿಂದ ಗೆದ್ದರು. ಇದರೊಂದಿಗೆ ಐಸಿಸಿ ಪ್ರಶಸ್ತಿಗಾಗಿ ಭಾರತದ 11 ವರ್ಷಗಳ ಕಾಯುವಿಕೆ ಕೊನೆಗೊಂಡಿತು.

Continue Reading

ಕರ್ನಾಟಕ

Dengue Fever: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ತೀವ್ರ ಏರಿಕೆ; ಮಂಗಳವಾರ 487 ಕೇಸ್‌ ಪತ್ತೆ!

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 487 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 128 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

Koo

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 487 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 128 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಂದಿಗೆ ಸೋಂಕು ದೃಢಪಟ್ಟಿದ್ದು, ಸದ್ಯ ರಾಜ್ಯದಲ್ಲಿ 358 ಸಕ್ರಿಯ ಪ್ರಕರಣಗಳ ಇವೆ.

ಕಳೆದ 24 ಗಂಟೆಗಳಲ್ಲಿ 4572 ಟೆಸ್ಟ್‌ ಮಾಡಿದ್ದು, ಇದರಲ್ಲಿ 487 ಮಂದಿಗೆ ಸೋಂಕು ದೃಢಪಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 283, ಬೆಂಗಳೂರು ನಗರ 5, ಬೆಂ. ಗ್ರಾಮಾಂತರ 3, ರಾಮನಗರ 1, ಕೋಲಾರ 3, ತುಮಕೂರು 18, ಚಿತ್ರದುರ್ಗ 10, ದಾವಣಗೆರೆ 12, ಶಿವಮೊಗ್ಗ 9, ವಿಜಯಪುರ 2, ಧಾರವಾಡ 17, ಹಾವೇರಿ 12, ಉತ್ತರ ಕನ್ನಡ 5, ಕಲಬುರಗಿ 12 ಬೀದರ್‌ 3, ವಿಜಯನಗರ 16, ಕೊಪ್ಪಳ 6, ಮೈಸೂರು 5, ಚಾಮರಾಜನಗರ 4, ಮಂಡ್ಯ 6, ಹಾಸನ 26, ಉಡುಪಿ 12, ಚಿಕ್ಕಮಗಳೂರು 9, ಕೊಡಗು ಜಿಲ್ಲೆಯಲ್ಲಿ 8 ಪ್ರಕರಣ ಪತ್ತೆಯಾಗಿವೆ.

ಇನ್ನು ರಾಜ್ಯದಲ್ಲಿ ಜನವರಿಯಿಂದ ಈವರೆಗೆ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 10449 ವರದಿಯಾಗಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಸದ್ಯ ಡಂಗ್ಯೂ ಮರಣ ಪ್ರಮಾಣ ಶೇ. 0.07 ಇದೆ.

ಇದನ್ನೂ ಓದಿ | Manikanta Rathod: ಅನ್ನ ಭಾಗ್ಯ ಅಕ್ಕಿ ಕಳವು ಕೇಸ್‌ನಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

ಮಹಾಮಾರಿ ಡೆಂಗ್ಯೂಗೆ ಯುವಕ ಬಲಿ

ಶಿವಮೊಗ್ಗ: ಮಹಾಮಾರಿ ಡೆಂಗ್ಯೂಗೆ ಯುವಕ ಬಲಿಯಾಗಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ಇದರಿಂದ ಒಂದೇ ವಾರದಲ್ಲಿ ಇಬ್ಬರು ಡೆಂಗ್ಯೂದಿಂದ ಮೃತಪಟ್ಟಂತಾಗಿದೆ. ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತಪಟ್ಟ ದುರ್ದೈವಿ.

ಶನಿವಾರದಿಂದ ಜ್ವರದಿಂದ ಬಳಲುತಿದ್ದ ಆಶಿಕ್ ರಸೂಲ್‌ಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಸಾವನ್ನಪ್ಪಿದ್ದಾನೆ. ಬಿಳಿರಕ್ತ ಕಣಗಳು ತೀವ್ರವಾಗಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಯುವಕ ಸಾವಿಗೀಡಾಗಿದ್ದಾನೆ. ಇತ್ತೀಚೆಗೆ ರಶ್ಮಿ ನಾಯಕ್ ಎನ್ನುವ ರಿಪ್ಪನ್‌ಪೇಟೆಯ ಬಿವಾಸು ಮಹಿಳೆ ಡೆಂಗ್ಯೂನಿಂದ ಮೃತಪಟ್ಟಿದ್ದಾರೆ.

Continue Reading

ಕ್ರೀಡೆ

Chennai Super King : ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕ್ರಿಕೆಟ್ ಅಕಾಡೆಮಿ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್​

Chennai Super King :

VISTARANEWS.COM


on

Chennai Super King
Koo

ಬೆಂಗಳೂರು: ಐದು ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (Chennai Super King) ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಅಂತಾರಾಷ್ಟ್ರೀಯ ಸೂಪರ್ ಕಿಂಗ್ಸ್ ಅಕಾಡೆಮಿ ಸ್ಥಾಪಿಸುವುದಾಗಿ ಘೋಷಿಸಿದೆ. ಜನಪ್ರಿಯ ಫ್ರ್ಯಾಂಚೈಸಿ ಇತರ ಅಂತಾರಾಷ್ಟ್ರೀಯ ಅಕಾಡೆಮಿಗಳು. ಅಮೆರಿಕದ ಡಲ್ಲಾಸ್ ಮತ್ತು ಯುನೈಟೆಡ್ ಕಿಂಗ್​​ಡಮ್​​ನ ರೀಡಿಂಗ್​​ನಲ್ಲಿವೆ.

ಸಿಡ್ನಿಯಲ್ಲಿರುವ ಸೂಪರ್ ಕಿಂಗ್ಸ್ ಅಕಾಡೆಮಿಯು ಸಿಡ್ನಿ ಒಲಿಂಪಿಕ್ ಪಾರ್ಕ್​​ನ ಸಿಲ್ವರ್​ವಾಟರ್ ರಸ್ತೆಯ ಕ್ರಿಕೆಟ್ ಸೆಂಟ್ರಲ್​ನಲ್ಲಿ ಸ್ಥಾಪನೆಯಾಗಲಿದೆ. ಅತ್ಯಾಧುನಿಕ ಕೇಂದ್ರವು ವರ್ಷಪೂರ್ತಿ ಒಳಾಂಗಣ ಮತ್ತು ಹೊರಾಂಗಣ ತರಬೇತಿ ಸೌಲಭ್ಯಗಳನ್ನು ಹೊಂದಿರುತ್ತದೆ. ಬಾಲಕ ಮತ್ತು ಬಾಲಕಿಯರಿಗೆ ಕ್ರಿಕೆಟ್ ತರಬೇತಿ ಸೆಪ್ಟೆಂಬರ್ ನಿಂದ ಪ್ರಾರಂಭವಾಗಲಿದೆ.

2008ರಲ್ಲಿ ಐಪಿಎಲ್ ಪ್ರಾರಂಭವಾದಾಗಿನಿಂದ ಪ್ರಾರಂಭವಾದ ಆಸ್ಟ್ರೇಲಿಯಾದೊಂದಿಗೆ ನಮ್ಮ ವಿಶೇಷ ಪ್ರಯಾಣವನ್ನು ವಿಸ್ತರಿಸಲು ನಾವು ಸಂತೋಷಪಡುತ್ತೇವೆ. ಆಸ್ಟ್ರೇಲಿಯಾವು ಬಲವಾದ ಕ್ರೀಡಾ ಸಂಸ್ಕೃತಿ ಮತ್ತು ಶ್ರೀಮಂತ ಕ್ರಿಕೆಟ್ ಪರಂಪರೆಯನ್ನು ಹೊಂದಿರುವ ಚಾಂಪಿಯನ್ ದೇಶವಾಗಿದೆ. ಸೂಪರ್ ಕಿಂಗ್ಸ್ ಅಕಾಡೆಮಿಯು ಹುಡುಗರು ಮತ್ತು ಬಾಲಕಿಯರಿಬ್ಬರ ಕ್ರಿಕೆಟ್ ಪ್ರತಿಭಾನ್ವೇಷನೆಗೆ ಸಹಾಯ ಮಾಡಲಿದೆ. ಇದು ದೇಶದಲ್ಲಿ ಈಗಾಗಲೇ ಬಲವಾದ ಕ್ರಿಕೆಟ್ ವ್ಯವಸ್ಥೇ ಹೊಂದಿದೆ”ಎಂದು ಸಿಎಸ್​ಕೆ ಸಿಇಒ ಕೆಎಸ್ ವಿಶ್ವನಾಥನ್ ಹೇಳಿದರು.

ಕಳೆದ ಕೆಲವು ವರ್ಷಗಳಿಂದ ಕ್ರಿಕೆಟ್​​ನಲ್ಲಿ ಭೌಗೋಳಿಕ ಗಡಿಗಳು ಕಡಿಮೆಯಾಗುತ್ತಿವೆ. ಭಾರತ, ಯುಎಸ್ಎ, ಯುಕೆ ಮತ್ತು ಈಗ ಆಸ್ಟ್ರೇಲಿಯಾದಲ್ಲಿ ಉಪಸ್ಥಿತಿಯೊಂದಿಗೆ ನಮ್ಮ ವಿಶ್ವ ದರ್ಜೆಯ ಸೌಲಭ್ಯಗಳು ಬಲವಾದ ಕೋಚಿಂಗ್ ವಿಯಷ, ವಿನಿಮಯ ಕಾರ್ಯಕ್ರಮಗಳ ಮೂಲಕ ಮುಂದಿನ ಪೀಳಿಗೆಯ ಕ್ರಿಕೆಟಿಗರನ್ನು ಅಭಿವೃದ್ಧಿಪಡಿಸಲು ನಮಗೆ ಅವಕಾಶವಿದೆ” ಎಂದು ಅವರು ಹೇಳಿದರು.

ಮ್ಯಾಥ್ಯೂ ಹೇಡನ್, ಶೇನ್ ವ್ಯಾಟ್ಸನ್ ಮತ್ತು ಪ್ರಸ್ತುತ ಬ್ಯಾಟಿಂಗ್ ಕೋಚ್ ಮೈಕೆಲ್ ಹಸ್ಸಿ ಅವರಂತಹ ಕೆಲವು ಪ್ರಸಿದ್ಧ ಆಟಗಾರರು ತಮ್ಮ ಜರ್ಸಿಯನ್ನು ಧರಿಸಿರುವುದರಿಂದ ಸೂಪರ್ ಕಿಂಗ್ಸ್ ಆಸ್ಟ್ರೇಲಿಯಾದೊಂದಿಗೆ ಉತ್ತಮ ಸಂಬಂಧವನ್ನು ಹಂಚಿಕೊಂಡಿದೆ. ಕ್ರೀಡೆಯನ್ನು ಪ್ರೀತಿಸುವ ರಾಷ್ಟ್ರದಲ್ಲಿ ಸೂಪರ್ ಕಿಂಗ್ಸ್ ಅಕಾಡೆಮಿಯನ್ನು ಸ್ಥಾಪಿಸುವ ಮೊದಲು ಇದು ಸಮಯದ ವಿಷಯವೆಂದು ತೋರುತ್ತದೆ ಎಂದು ನುಡಿದರು.

ಐಪಿಎಲ್ 2024 ರಲ್ಲಿ ಸಿಎಸ್​​ಕೆ ಪ್ರದರ್ಶನ ಹೇಗಿತ್ತು?

ಐಪಿಎಲ್ 17 ನೇ ಆವೃತ್ತಿಗೆ ಮುಂಚಿತವಾಗಿ ಮಹೇಂದ್ರ ಸಿಂಗ್ ಧೋನಿ ಋತುರಾಜ್ ಗಾಯಕ್ವಾಡ್​​ಗೆ ನಾಯಕತ್ವವನ್ನು ಹಸ್ತಾಂತರಿಸಿದರು. ಮೊದಲ ಆರು ಪಂದ್ಯಗಳಲ್ಲಿ ತಮ್ಮ ತಂಡವನ್ನು ನಾಲ್ಕು ಗೆಲುವುಗಳಿಗೆ ಮುನ್ನಡೆಸಿದ್ದರಿಂದ ಯುವ ಆಟಗಾರ ಉತ್ತಮ ಆರಂಭ ಹೊಂದಿದ್ದರು. ಆದಾಗ್ಯೂ, ಪಂದ್ಯಾವಳಿ ಮುಂದುವರೆದಂತೆ ಮೆನ್ ಇನ್ ಯೆಲ್ಲೋ ಪ್ರಭಾವ ಕಡಿಮೆಯಾಯಿತು. ಆರ್​ಸಿಬಿ ಜತೆ ಕೊನೇ ಪಂದ್ಯ ಸೋತು ಐದನೇ ಸ್ಥಾನ ಪಡೆಯಿತು.

ಇದನ್ನೂ ಓದಿ: Anushka Sharma : ಪತ್ನಿ ಅನುಷ್ಕಾ ಬರ್ತ್​​ಡೇಗೆ ಕೊಹ್ಲಿ ಕೇಕ್​ ಆರ್ಡರ್​ ಮಾಡಿದ್ದು ಬೆಂಗಳೂರಿನಿಂದ; ತಿಂಗಳುಗಳ ಬಳಿಕ ಮಾಹಿತಿ ಬಹಿರಂಗ

ಸಿಎಸ್​ಕೆಯ ಸಹೋದರಿ ಫ್ರಾಂಚೈಸಿಯಾದ ಟೆಕ್ಸಾಸ್ ಸೂಪರ್ ಕಿಂಗ್ಸ್ ಪ್ರಸ್ತುತ ಮೇಜರ್ ಲೀಗ್ ಕ್ರಿಕೆಟ್ (ಎಂಎಲ್​​​ಸಿ ) 2024 ರ ಎರಡನೇ ಆವೃತ್ತಿಯಲ್ಲಿ ಆಡುತ್ತಿದೆ. ಆಡಿರುವ ಮೊದಲ ಐದು ಪಂದ್ಯಗಳಲ್ಲಿ ಎರಡರಲ್ಲಿ ಗೆದ್ದಿರುವ ಅವರು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

Continue Reading

ಪ್ರಮುಖ ಸುದ್ದಿ

Anushka Sharma : ಪತ್ನಿ ಅನುಷ್ಕಾ ಬರ್ತ್​​ಡೇಗೆ ಕೊಹ್ಲಿ ಕೇಕ್​ ಆರ್ಡರ್​ ಮಾಡಿದ್ದು ಬೆಂಗಳೂರಿನಿಂದ; ತಿಂಗಳುಗಳ ಬಳಿಕ ಮಾಹಿತಿ ಬಹಿರಂಗ

Anushka Sharma: ಉತ್ತಿಷ್ಠ ಕುಮಾರ್ ಎಂಬುವರು ಮಂಗಳವಾರ ತಮ್ಮ ಇನ್ಸ್ಟಾಗ್ರಾಮ್ ಫೀಡ್​​ನಲ್ಲಿ ದಂಪತಿಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಬರ್ತ್​ಡೇ ಗರ್ಲ್​​ ಅನುಷ್ಕಾಗೆ ಅವರು ತಯಾರಿಸಿದ ಚಾಕೊಲೇಟ್ ಕೇಕ್ ನ ಚಿತ್ರವನ್ನು ಸಹ ಅವರು ಹಂಚಿಕೊಂಡಿದ್ದಾರೆ. ಕೇಕ್ ಮೇಲಿನ ಸಂದೇಶದಲ್ಲಿ “ಹ್ಯಾಪಿ ಬರ್ತ್ ಡೇ ಮ್ಯಾಡ್ ಒನ್” ಎಂದು ಬರೆಯಲಾಗಿದೆ. ಚಿತ್ರದಲ್ಲಿ ಅನುಷ್ಕಾ ಶರ್ಮಾ ಬಿಳಿ ಉಡುಪನ್ನು ಧರಿಸಿದ್ದರೆ, ವಿರಾಟ್ ಕೊಹ್ಲಿ ಬೀಗ್​ ಬಣ್ಣದ ಟೀ ಶರ್ಟ್ ಧರಿಸಿದ್ದಾರೆ.

VISTARANEWS.COM


on

Anushka Sharma
Koo

ನವದೆಹಲಿ: ಅನುಷ್ಕಾ ಶರ್ಮಾ (Anushka Sharma) ಅವರ 36ನೇ ಹುಟ್ಟುಹಬ್ಬದ ಆಚರಣೆ ಮೇ 1ರಂದು ನಡೆದಿತ್ತು. ಆ ದಿನದ ಸಂಭ್ರಮಾಚರಣೆಗಾಗಿ ಪತಿ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್​ ಕೊಹ್ಲಿ ಬೆಂಗಳೂರಿನಿಂದ ಕೇಕ್ ಆರ್ಡರ್ ಮಾಡಿದ್ದರು ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ಬೇಕರ್ ಒಬ್ಬರು ಅನುಷ್ಕಾ ಶರ್ಮಾ ಅವರ ಹುಟ್ಟುಹಬ್ಬದ ವಿಶೇಷ ಕೇಕ್ ತಯಾರಿಸಲು ವಿರಾಟ್ ಕೊಹ್ಲಿ ತಮ್ಮನ್ನು ಸಂಪರ್ಕಿಸಿದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಉತ್ತಿಷ್ಠ ಕುಮಾರ್ ಎಂಬುವರು ಮಂಗಳವಾರ ತಮ್ಮ ಇನ್ಸ್ಟಾಗ್ರಾಮ್ ಫೀಡ್​​ನಲ್ಲಿ ದಂಪತಿಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಬರ್ತ್​ಡೇ ಗರ್ಲ್​​ ಅನುಷ್ಕಾಗೆ ಅವರು ತಯಾರಿಸಿದ ಚಾಕೊಲೇಟ್ ಕೇಕ್ ನ ಚಿತ್ರವನ್ನು ಸಹ ಅವರು ಹಂಚಿಕೊಂಡಿದ್ದಾರೆ. ಕೇಕ್ ಮೇಲಿನ ಸಂದೇಶದಲ್ಲಿ “ಹ್ಯಾಪಿ ಬರ್ತ್ ಡೇ ಮ್ಯಾಡ್ ಒನ್” ಎಂದು ಬರೆಯಲಾಗಿದೆ. ಚಿತ್ರದಲ್ಲಿ ಅನುಷ್ಕಾ ಶರ್ಮಾ ಬಿಳಿ ಉಡುಪನ್ನು ಧರಿಸಿದ್ದರೆ, ವಿರಾಟ್ ಕೊಹ್ಲಿ ಬೀಗ್​ ಬಣ್ಣದ ಟೀ ಶರ್ಟ್ ಧರಿಸಿದ್ದಾರೆ.

ಅನುಷ್ಕಾ ಶರ್ಮಾ ಅವರ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಲು ವಿರಾಟ್ ಕೊಹ್ಲಿ ನನ್ನನ್ನು ಸಂಪರ್ಕಿಸಿದಾಗ, ನಾನು ವಿಶೇಷವಾದದ್ದನ್ನು ರಚಿಸಬೇಕು ಎಂದು ಯೋಚಿಸಿದೆ. ಹುಟ್ಟುಹಬ್ಬದ ಆಚರಣೆಗಾಗಿ ಕ್ಲಾಸಿಕ್ ಚಾಕೊಲೇಟ್ ಕೇಕ್ ಬಿಟ್ಟರೆ ಇನ್ಯಾವುದೂ ಇಲ್ಲ ಎಂದು ಅವರು ಹೇಳಿದ್ದಾರೆ.

ವಾರಾಂತ್ಯದಲ್ಲಿ ನನ್ನ ಅಮ್ಮನ ಅಡುಗೆ ಮನೆಯಲ್ಲಿ ಅಡುವೆ ಮಾಡುವುದರಿಂದ ಹಿಡಿದು ನಮ್ಮ ಯುಗದ ಅತ್ಯಂತ ಕ್ರೀಡಾಪಟುಗಳಲ್ಲಿ ಒಬ್ಬರಿಗೆ ಕೇಕ್ ತಯಾರಿಸುವವರೆಗೆ ಇದು ಕಳೆದ ಎಂಟು ವರ್ಷಗಳಲ್ಲಿ ಅದ್ಭುತ ಪ್ರಯಾಣವಾಗಿದೆ! ನನ್ನ ಎಲ್ಲಾ ಅದ್ಭುತ ಗ್ರಾಹಕರಿಗೆ ವಿಶೇಷ ಕೇಕ್ ಗಳನ್ನು ತಯಾರಿಸುವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: R Ashwin : ಸುನೀಲ್ ನರೈನ್ ರೀತಿ ಆರಂಭಿಕರಾಗಿ 20 ಎಸೆತಕ್ಕೆ 45 ರನ್ ಬಾರಿಸಿದ ಆರ್.​ ಅಶ್ವಿನ್​; ಇಲ್ಲಿದೆ ವಿಡಿಯೊ

ಅನುಷ್ಕಾ ಶರ್ಮಾ ಮೇ 1 ರಂದು ತಮ್ಮ 36 ನೇ ಹುಟ್ಟುಹಬ್ಬವನ್ನು ಬೆಂಗಳೂರಿನಲ್ಲಿ ಆಚರಿಸಿಕೊಂಡರು. ಈ ಹಿಂದೆ ಬಾಣಸಿಗ ಮನು ಚಂದ್ರ ಅವರು ಅನುಷ್ಕಾ ಶರ್ಮಾ ಅವರ ಹುಟ್ಟುಹಬ್ಬದ ಆಚರಣೆಯ ಚಿತ್ರ ಹಂಚಿಕೊಂಡಿದ್ದರು.

ಅನುಷ್ಕಾ ಶರ್ಮಾ ಅವರ ಹುಟ್ಟುಹಬ್ಬದಂದು, ವಿರಾಟ್ ಕೊಹ್ಲಿ ಅವರ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ ಮತ್ತು ನಾನು ನಿಮ್ಮನ್ನು ಕಂಡುಕೊಳ್ಳದೇ ಹೋಗಿದ್ದರೆ ನಾನು ಸಂಪೂರ್ಣವಾಗಿ ಕಳೆದುಹೋಗುತ್ತಿದ್ದೆ. ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದಿದ್ದರು.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಡಿಸೆಂಬರ್ 11, 2017 ರಂದು ವಿವಾಹವಾದರು. ಅವರು ವಾಮಿಕಾ ಮತ್ತು ಅಕಾಯ್​ ಎಂಬ ಇಬ್ಬರು ಮಕ್ಕಳ ಪೋಷಕರಾಗಿದ್ದಾರೆ. ಕ್ರಿಕೆಟಿಗ ಜೂಲನ್ ಗೋಸ್ವಾಮಿ ಜೀವನಾಧಾರಿತ ಚಿತ್ರ ‘ಚಕ್ಡಾ ಎಕ್ಸ್ಪ್ರೆಸ್’ನಲ್ಲಿ ಅನುಷ್ಕಾ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ.

Continue Reading
Advertisement
T20 World Cup 2024
ಪ್ರಮುಖ ಸುದ್ದಿ21 mins ago

T20 World Cup 2024 : 30 ಎಸೆತಕ್ಕೆ 30 ರನ್​ ಇದ್ದಾಗ ದಿಕ್ಕೇ ತೋಚದಂತಾಗಿದ್ದೆ! ಆ ತಲ್ಲಣ ವಿವರಿಸಿದ ಶರ್ಮಾ

Assembly Session
ಕರ್ನಾಟಕ35 mins ago

Assembly Session: ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದ ಡಿಕೆಶಿ!

A 15 year old boy weighing 111 kg underwent successful spinal disc surgery that avoided potential paralysis
ಕರ್ನಾಟಕ43 mins ago

Fortis Hospital: 111 ಕೆಜಿ ತೂಕವಿದ್ದ ಬಾಲಕನಿಗೆ ಪಾರ್ಶ್ವವಾಯು ತಪ್ಪಿಸಿದ ʼಬೆನ್ನೆಲುಬಿನ ಡಿಸ್ಕ್ʼ ಶಸ್ತ್ರಚಿಕಿತ್ಸೆ

Pooja Khedkar
ದೇಶ47 mins ago

Pooja Khedkar: ಪೂಜಾ ಖೇಡ್ಕರ್‌ ಪುಣೆ ಜಿಲ್ಲಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

Larva survey Show the old photo without GPS and get crores of rupees to the government Cheating Alleged by MLC TA Sharavana
ಕರ್ನಾಟಕ48 mins ago

Assembly Session: ಲಾರ್ವಾ ಸರ್ವೇ; ಜಿಪಿಎಸ್ ಇಲ್ಲದ ಹಳೆ ಫೋಟೋ ತೋರಿಸಿ ಕೋಟ್ಯಂತರ ರೂ. ಮೋಸ; ಶರವಣ ಆರೋಪ

A permanent solution to artificial flood on national highways says MP Vishweshwar Hegde Kageri
ಉತ್ತರ ಕನ್ನಡ51 mins ago

Uttara Kannada News: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ; ಕಾಗೇರಿ

ಕರ್ನಾಟಕ52 mins ago

Dengue Fever: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ತೀವ್ರ ಏರಿಕೆ; ಮಂಗಳವಾರ 487 ಕೇಸ್‌ ಪತ್ತೆ!

Chennai Super King
ಕ್ರೀಡೆ1 hour ago

Chennai Super King : ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕ್ರಿಕೆಟ್ ಅಕಾಡೆಮಿ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್​

Anushka Sharma
ಪ್ರಮುಖ ಸುದ್ದಿ2 hours ago

Anushka Sharma : ಪತ್ನಿ ಅನುಷ್ಕಾ ಬರ್ತ್​​ಡೇಗೆ ಕೊಹ್ಲಿ ಕೇಕ್​ ಆರ್ಡರ್​ ಮಾಡಿದ್ದು ಬೆಂಗಳೂರಿನಿಂದ; ತಿಂಗಳುಗಳ ಬಳಿಕ ಮಾಹಿತಿ ಬಹಿರಂಗ

Muscat Terrorist Attack
ವಿದೇಶ2 hours ago

Muscat Terrorist Attack: ಮಸ್ಕತ್‌ನಲ್ಲಿ ಉಗ್ರರ ಅಟ್ಟಹಾಸ; ಭಾರತೀಯ ಸೇರಿ 9ಮಂದಿ ಸಾವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ9 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ11 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌