Actor Darshan: ಮನೆ ಊಟ, ಹಾಸಿಗೆ ಪುಸ್ತಕಕ್ಕೆ ಬೇಡಿಕೆ ಇಟ್ಟ ದರ್ಶನ್‌; ದೇಹದ ತೂಕ ಇಳಿದ ಭಯದಲ್ಲಿ ಕೋರ್ಟ್ ಮೊರೆ! - Vistara News

ಸ್ಯಾಂಡಲ್ ವುಡ್

Actor Darshan: ಮನೆ ಊಟ, ಹಾಸಿಗೆ ಪುಸ್ತಕಕ್ಕೆ ಬೇಡಿಕೆ ಇಟ್ಟ ದರ್ಶನ್‌; ದೇಹದ ತೂಕ ಇಳಿದ ಭಯದಲ್ಲಿ ಕೋರ್ಟ್ ಮೊರೆ!

Actor Darshan: ನಟ ದರ್ಶನ್ ಅವರು ಜೈಲಿನಲ್ಲಿದ್ದು ಒಂದು ತಿಂಗಳು ಆಗುತ್ತಾ ಬಂದಿದೆ. ಹೊರಗಿದ್ದಾಗ ಅವರು ಮಾಂಸದೂಟ ಮಾಡಿಕೊಂಡು ಹಾಯಾಗಿ ಇದ್ದರು. ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಆದರೆ, ಜೈಲಿನಲ್ಲಿ ಆ ರೀತಿ ಇಲ್ಲ. ಜೈಲಿನ ಇತರ ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ಸೇವಿಸಬೇಕು. ದರ್ಶನ್ ಅವರಿಗೆ ನಿತ್ಯ ಚಿಂತೆ ಕಾಡುತ್ತಿದೆ. ಯಾವಾಗ ಹೊರಗೆ ಬರುತ್ತೇನೋ ಎನ್ನುವ ಆತಂಕ ಮೂಡಿದೆ. ಹೀಗಾಗಿ ಅವರು ಜೈಲಿನಲ್ಲಿ ಸರಿಯಾಗಿ ಊಟ ಮಾಡುತ್ತಿಲ್ಲ.

VISTARANEWS.COM


on

Actor Darshan asked For Home Food And Bed He Ask In Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ (Renuka swamy Murder) ಪ್ರಕರಣದಲ್ಲಿ ದರ್ಶನ್‌ (Actor Darshan: ) ಜೈಲು ಸೇರಿದ್ದಾರೆ. ದರ್ಶನ್ ಅವರು ಜೈಲಿನಲ್ಲಿದ್ದು ಒಂದು ತಿಂಗಳು ಆಗುತ್ತಾ ಬಂದಿದೆ. ಜಿಮ್‌ನಲ್ಲಿ ವರ್ಕೌಟ್‌ ಮಾಡಿಕೊಂಡು , ಹೊರಗಡೆ ಮೀನು, ಮಟನ್‌ ತಿಂದು ಕೊಂಡು ಹಾಯಾಗಿದ್ದ ದರ್ಶನ್‌, ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ಸೇವಿಸಬೇಕು.  ಹೀಗಾಗಿ ದರ್ಶನ್‌ ಅವರು ಸರಿಯಾಗಿ ಊಟ ಮಾಡುತ್ತಿಲ್ಲ ಎಂದು ತಿಳಿದು ಬಂದಿದೆ. ಈ ಕಾರಣದಿಂದಲೇ ಅವರು 25 ದಿನಗಳಲ್ಲಿ ಬರೋಬ್ಬರಿ 10 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ವರದಿ ಆಗಿದೆ. . ಈ ಕಾರಣದಿಂದ ದರ್ಶನ್ ಅವರು ಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಊಟ, ಹಾಸಿಗೆ ಜೊತೆ ಇನ್ನಷ್ಟು ವಸ್ತುಗಳನ್ನು ಕೋರಿ ನಟ ದರ್ಶನ್ ಕೋರ್ಟ್​ಗೆ ಮನವಿ ಮಾಡಿದ್ದಾರೆ.

ವಕೀಲ ಪ್ರವೀಣ್ ತಿಮ್ಮಯ್ಯ ಅವರ ಮೂಲಕ ಅರ್ಜಿ ಸಲ್ಲಿಕೆಯಾಗಿದೆ. ದರ್ಶನ್‌ಗೆ ಈಗ ದೇಹದ ತೂಕ ಇಳಿಕೆ ಆಗುತ್ತಿರುವ ಭಯವೂ ಕಾಡುತ್ತಿದೆ. ಊಟ, ಹಾಸಿಗೆ, ಪುಸ್ತಕ, ಬಟ್ಟೆ, ಚಮಚವನ್ನು ಮನೆಯಿಂದ ತರಿಸಿಕೊಳ್ಳಲು ದರ್ಶನ್ ಕೋರ್ಟ್ ಮುಂದೆ ಬೇಡಿಕೆ ಇಟ್ಟಿದ್ದಾರೆ. ಇವುಗಳನ್ನೆಲ್ಲಾ ಮನೆಯಿಂದ ಪಡೆಯಲು ಜೈಲು ಅಧಿಕಾರಿಗಳು ಅನುಮತಿಸಿಲ್ಲ. ಜೈಲಿನಲ್ಲಿ ನೀಡುತ್ತಿರುವ ಊಟ ಅವರಿಗೆ ಜೀರ್ಣವಾಗುತ್ತಿಲ್ಲ. ಅವರಿಗೆ ಫುಡ್ ಪಾಯಿಸನಿಂಗ್ ಆಗುತ್ತಿದೆ. ಇದರ ಜೊತೆಗೆ ಭೇದಿ ಕೂಡ ಆಗುತ್ತಿದೆ. ಹಲವು ಕೆಜಿಗಳಷ್ಟು ತೂಕವನ್ನು ದರ್ಶನ್ ಕಳೆದುಕೊಂಡಿದ್ದಾರೆ. ಹೀಗೆಂದು ಜೈಲಿನ ವೈದ್ಯರೇ ಅಭಿಪ್ರಾಯ ನೀಡಿದ್ದಾರೆ.

ಮನೆ ಊಟಕ್ಕೆ ಅನುಮತಿ ಕೋರಿದ್ದಕ್ಕೆ ಕೋರ್ಟ್ ಆದೇಶವಿಲ್ಲವೆಂದು ಜೈಲು ಅಧಿಕಾರಿಗಳು ಅನುಮತಿ ನೀಡಿಲ್ಲ’ ಎಂದು ಎಂದು ದರ್ಶನ್ ಪರ ವಕೀಲರು ಹೇಳಿದ್ದಾರೆ. ಮನೆ ಊಟಕ್ಕೆ ಅನುಮತಿ ನೀಡಿದರೆ ಯಾರಿಗೂ ತೊಂದರೆಯಾಗಲ್ಲ. ಹೀಗಾಗಿ ಕುಟುಂಬದವರಿಂದ ಮನೆ ಊಟ ಪಡೆಯಲು ಅನುಮತಿ ನೀಡಬೇಕು’ ಎಂದು ದರ್ಶನ್ ಪರ ವಕೀಲರು ಕೋರಿದ್ದಾರೆ.

ಇದನ್ನೂ ಓದಿ: Actor Darshan: ಆರೋಪಿಗಳಿಗೆ ಗಂಟಲು ಮುಳ್ಳಾದ ಗುರುತು ಪತ್ತೆ ಪರೇಡ್‌, ಬೆಟ್ಟು ಮಾಡಿ ತೋರಿಸಿದ ಸಾಕ್ಷಿಗಳು

ನಟ ದರ್ಶನ್ ಅವರು ಜೈಲಿನಲ್ಲಿದ್ದು ಒಂದು ತಿಂಗಳು ಆಗುತ್ತಾ ಬಂದಿದೆ. ಹೊರಗಿದ್ದಾಗ ಅವರು ಮಾಂಸದೂಟ ಮಾಡಿಕೊಂಡು ಹಾಯಾಗಿ ಇದ್ದರು. ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಆದರೆ, ಜೈಲಿನಲ್ಲಿ ಆ ರೀತಿ ಇಲ್ಲ. ಜೈಲಿನ ಇತರ ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ಸೇವಿಸಬೇಕು. ದರ್ಶನ್ ಅವರಿಗೆ ನಿತ್ಯ ಚಿಂತೆ ಕಾಡುತ್ತಿದೆ. ಯಾವಾಗ ಹೊರಗೆ ಬರುತ್ತೇನೋ ಎನ್ನುವ ಆತಂಕ ಮೂಡಿದೆ. ಹೀಗಾಗಿ ಅವರು ಜೈಲಿನಲ್ಲಿ ಸರಿಯಾಗಿ ಊಟ ಮಾಡುತ್ತಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ದರ್ಶನ್​ & ಗ್ಯಾಂಗ್​ಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ!

Actor Darshan: ಪವಿತ್ರಾ ಗೌಡ, ದರ್ಶನ್​ ಸೇರಿದಂತೆ ಪರಪ್ಪನ ಆಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ ನಾಲ್ವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

VISTARANEWS.COM


on

Darshan Judicial Custody extended till 14th August
Koo

ಬೆಂಗಳೂರು: ನಟ ದರ್ಶನ್‌ ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಆ.20ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೇ ದರ್ಶನ್‌ಗೆ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ಇಂದು (ಆಗಸ್ಟ್​ 1) ಈ ಕೇಸ್​ನ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಆರೋಪಿಗಳ ಹೆಸರು ಹೇಳಿ ಹಾಜರಾತಿ ಪಡೆದ ನ್ಯಾಯಾಧೀಶರು ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದ್ದಾರೆ. ಪವಿತ್ರಾ ಗೌಡ, ದರ್ಶನ್​ ಸೇರಿದಂತೆ ಪರಪ್ಪನ ಆಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ ನಾಲ್ವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ನಟ ದರ್ಶನ್‌ಗೆ ಆ. 20ರವರೆಗೆ ಜೈಲೂಟವೇ ಫಿಕ್ಸ್‌

ನಟ ದರ್ಶನ್‌ ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಆ.20ಕ್ಕೆ ಮುಂದೂಡಿದೆ. ಹೀಗಾಗಿ ಇನ್ನೂ 21 ದಿನ ದರ್ಶನ್‌ಗೆ (Actor Darshan) ಜೈಲೂಟವೇ ಗತಿಯಾಗಿದೆ. ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಸರ್ಕಾರ ಮತ್ತು ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಕರ್ನಾಟಕ ಕಾರಾಗೃಹಗಳ ಕಾಯ್ದೆ ಓದುತ್ತಾ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ ಅವರು, ಮ್ಯಾನ್ಯುವಲ್ ಪ್ರಕಾರ ವಿಚಾರಣಾಧೀನ ಕೈದಿಗೆ ಸ್ವಂತ ಖರ್ಚಿನಲ್ಲಿ ಖಾಸಗಿ ಊಟ ಪಡೆಯೋದಕ್ಕೆ ಅವಕಾಶ ಇದೆ. ಅಧೀನ ನ್ಯಾಯಾಲಯ ಇಲ್ಲಿ ಆ್ಯಕ್ಟ್‌ಗಿಂತ ಮ್ಯಾನ್ಯುಯಲ್ ಬಗ್ಗೆ ಪರಿಗಣಿಸಿದೆ. ಕರ್ನಾಟಕ ಪ್ರಿಸನ್ಸ್ ಆ್ಯಕ್ಟ್ 1963 ಅನ್ನು ಪರಿಗಣಸಿಯೇ ಇಲ್ಲ. ಸೆಕ್ಷನ್ 30ರಡಿಯಲ್ಲಿ ಮನೆ ಊಟ ಪಡೆಯಲು ಅವಕಾಶ ಇದೆ ಎಂದು ತಿಳಿಸಿದರು.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

ಇನ್ನು ದರ್ಶನ್‌ಗೆ ಅನಾರೋಗ್ಯವಾಗಿರುವ ಬಗ್ಗೆ ವರದಿ ಇದೆ. ಜೈಲಿನ ಮುಖ್ಯ ಆರೋಗ್ಯಾಧಿಕಾರಿ ವರದಿ ನೀಡಿದ್ದಾರೆ ಎಂದು ವಕೀಲರು ಹೇಳಿದ್ದಕ್ಕೆ, ಪ್ರತಿ ವಿಚಾರಣಾಧೀನ ಕೈದಿಯೂ ಈ ಸಮಸ್ಯೆ ಎದುರಿಸುತ್ತಾರೆ. ಅವರು ಮನುಷ್ಯರೇ ಅಲ್ಲವೇ ಎಂದು ಜಡ್ಜ್ ಪ್ರಶ್ನೆ ಮಾಡಿದರು. ನ್ಯೂಟ್ರಿಷನ್ ಕೊರತೆ ಇದ್ದರೆ ಜೈಲಿನ ವೈದ್ಯಾಧಿಕಾರಿ ಪ್ರಿಸ್ಕ್ರಿಪ್ಷನ್ ನೀಡುತ್ತಾರೆ ಎಂದು ಹೇಳಿದರು. ಡಾಕ್ಟರ್ ಏನು ಹೇಳುತ್ತಾರೋ ಅದನ್ನು ಜೈಲಿನಲ್ಲಿ ನೀಡಲಾಗುತ್ತದೆ. ಸೆಕ್ಷನ್ 30ರ ಬಗ್ಗೆ ಹೇಳಲು ಅವಕಾಶ ಇದೆ. ಆದರೆ ಮನೆ ಊಟದ ಬಗ್ಗೆ ಯಾಕೆ ಎಂದು ಜಡ್ಜ್‌ ಪ್ರಶ್ನಿಸಿದರು.

ಈ ವೇಳೆ ವೈದ್ಯಾಧಿಕಾರಿಗಳು, ದರ್ಶನ್‌ ಅನಾರೋಗ್ಯದ ಬಗ್ಗೆ ವರದಿಯನ್ನು ನೀಡಿದ್ದಾರೆ ಎಂದು ಪ್ರಭುಲಿಂಗ ನಾವದಗಿ ಉತ್ತರಿಸಿ, ಜೈಲಿನ ಮುಖ್ಯ ಆರೋಗ್ಯ ಅಧಿಕಾರಿಯ ವೈದ್ಯಕೀಯ ವರದಿ ಸಲ್ಲಿಸಿದರು. ಡಾಕ್ಟರ್ ಇದಕ್ಕಾಗಿಯೇ ಸ್ಪೆಸಿಫಿಕ್ ಆಗಿ ಹೇಳಿರಬೇಕು ಅಲ್ವಾ? ಆಗ ಮಾತ್ರ ಪರಿಗಣನೆಗೆ ಅವಕಾಶ ಇದೆ ಎಂದು ಜಡ್ಜ್‌ ಹೇಳಿದರು.

Continue Reading

ಸ್ಯಾಂಡಲ್ ವುಡ್

Actor Darshan: ನಟ ದರ್ಶನ್‌ಗೆ ಹುಬ್ಬಳ್ಳಿ ಸಿದ್ಧಾರೂಢ ಮಠದಿಂದ ಪುಸ್ತಕ ರವಾನೆ

Actor Darshan: 2011 ರಲ್ಲಿ ನಟ ದರ್ಶನ್ ಐತಿಹಾಸಿಕ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ದರು. ಆಗ ಸಿದ್ಧಾರೂಢರ ಬಗ್ಗೆ ಕೇಳಿ ತಿಳಿದುಕೊಂಡಿದ್ದರು. ಅದೇ ಕಾರಣಕ್ಕೆ ಈಗ ದರ್ಶನ್​ಗೆ ಸಿದ್ಧಾರೂಢರ ಚರಿತ್ರೆ ಪುಸ್ತಕವನ್ನು ಕಳಿಸಿಕೊಡಲಾಗಿದೆ. ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿರುವ ಫೋಟೋ ಹಾಗೂ ಪೋಸ್ಟ್ ಮಾಡಿರುವ ಕವರ್ ಕೂಡ ಇದೀಗ ವೈರಲ್ ಆಗುತ್ತಿದೆ.

VISTARANEWS.COM


on

Actor Darshan siddharudha life journey book sent to Darshan
Koo

ಹುಬ್ಬಳ್ಳಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ ಪರಪ್ಪನ ಜೈಲಿನಲ್ಲಿ (Actor Darshan) ಇದ್ದಾರೆ. ದರ್ಶನ್‌ ಸದ್ಯ ಯೋಗ, ಧ್ಯಾನ, ಪುಸ್ತಕದ ಮೊರೆ ಹೋಗಿದ್ದಾರೆ. ಇದೀಗ ಹುಬ್ಬಳ್ಳಿ ಸಿದ್ಧಾರೂಢ ಮಠದಿಂದಲೂ ದರ್ಶನ್​ಗೆ ಪುಸ್ತಕ ಕಳಿಸಿಕೊಡಲಾಗಿದೆ. ನಟ ದರ್ಶನಗೆ ಸದ್ಗುರು ಸಿದ್ಧಾರೂಢರ ಚರಿತ್ರೆ ಪುಸ್ತಕ ರವಾನೆಯಾಗಿದೆ. ಮಠದ ಧರ್ಮದರ್ಶಿ ಕಾರಾಗೃಹದಲ್ಲಿರುವ ದರ್ಶನಗೆ ಪುಸ್ತಕವನ್ನು ಪೋಸ್ಟ್‌ ಮೂಲಕ ರವಾನೆ ಮಾಡಿದ್ದಾರೆ.

ಶ್ರೀಮಠ ಟ್ರಸ್ಟ್ ಕಮಿಟಿಯ ಧರ್ಮದರ್ಶಿಗಳಾದ ಡಾ.ಗೋವಿಂದ ಮಣ್ಣೂರು ಮಾಧ್ಯಮವೊಂದಕ್ಕೆ ಈ ಬಗ್ಗೆ ಮಾತನಾಡಿ ʻʻಸಿದ್ಧಾರೂಢರ ಚರಿತಾಮೃತ ಪುಸ್ತಕ ಕಳಿಸಿದ್ದೇವೆ. ದರ್ಶನ್‌ ಜೈಲಿನಲ್ಲಿ ಕುಗ್ಗಿ ಹೋಗಿದ್ದಾರೆ. ಪುಸ್ತಕ ಓದಿದ ಬಳಿಕ ದರ್ಶನ ಮಾನಸಿಕವಾಗಿ ಬಲಗೊಳ್ಳುತ್ತಾರೆ. ಸುಮಾರು 200 ರಿಂದ 250 ಪುಟಗಳ ಪುಸ್ತಕ ಅದು. ಸಿದ್ದಾರೂಢರು ನಡೆದುಬಂದ ದಾರಿಯನ್ನು ಪುಸ್ತಕ ಒಳಗೊಂಡಿದೆ. ಪುಸ್ತಕ ಓದಿ ಖಂಡಿತ ದರ್ಶನ ಬದಲಾವಣೆ ಆಗುತ್ತಾರೆ ಎಂಬ ನಿರೀಕ್ಷೆ ಇದೆ’ ಎಂದಿದ್ದಾರೆ

2011 ರಲ್ಲಿ ನಟ ದರ್ಶನ್ ಐತಿಹಾಸಿಕ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ದರು. ಆಗ ಸಿದ್ಧಾರೂಢರ ಬಗ್ಗೆ ಕೇಳಿ ತಿಳಿದುಕೊಂಡಿದ್ದರು. ಅದೇ ಕಾರಣಕ್ಕೆ ಈಗ ದರ್ಶನ್​ಗೆ ಸಿದ್ಧಾರೂಢರ ಚರಿತ್ರೆ ಪುಸ್ತಕವನ್ನು ಕಳಿಸಿಕೊಡಲಾಗಿದೆ. ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿರುವ ಫೋಟೋ ಹಾಗೂ ಪೋಸ್ಟ್ ಮಾಡಿರುವ ಕವರ್ ಕೂಡ ಇದೀಗ ವೈರಲ್ ಆಗುತ್ತಿದೆ.

ನಟ ದರ್ಶನ್‌ ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಆ.20ಕ್ಕೆ ಮುಂದೂಡಿದೆ. ಹೀಗಾಗಿ ಇನ್ನೂ 21 ದಿನ ದರ್ಶನ್‌ಗೆ (Actor Darshan) ಜೈಲೂಟವೇ ಗತಿಯಾಗಿದೆ. ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಸರ್ಕಾರ ಮತ್ತು ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಕರ್ನಾಟಕ ಕಾರಾಗೃಹಗಳ ಕಾಯ್ದೆ ಓದುತ್ತಾ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ ಅವರು, ಮ್ಯಾನ್ಯುವಲ್ ಪ್ರಕಾರ ವಿಚಾರಣಾಧೀನ ಕೈದಿಗೆ ಸ್ವಂತ ಖರ್ಚಿನಲ್ಲಿ ಖಾಸಗಿ ಊಟ ಪಡೆಯೋದಕ್ಕೆ ಅವಕಾಶ ಇದೆ. ಅಧೀನ ನ್ಯಾಯಾಲಯ ಇಲ್ಲಿ ಆ್ಯಕ್ಟ್‌ಗಿಂತ ಮ್ಯಾನ್ಯುಯಲ್ ಬಗ್ಗೆ ಪರಿಗಣಿಸಿದೆ. ಕರ್ನಾಟಕ ಪ್ರಿಸನ್ಸ್ ಆ್ಯಕ್ಟ್ 1963 ಅನ್ನು ಪರಿಗಣಸಿಯೇ ಇಲ್ಲ. ಸೆಕ್ಷನ್ 30ರಡಿಯಲ್ಲಿ ಮನೆ ಊಟ ಪಡೆಯಲು ಅವಕಾಶ ಇದೆ ಎಂದು ತಿಳಿಸಿದರು.

Continue Reading

ಕರ್ನಾಟಕ

Kannada New Movie: ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

Kannada New Movie: ʼಇಬ್ಬನಿ ತಬ್ಬಿದ ಇಳೆಯಲಿʼ ಸಿನಿಮಾದ ಮತ್ತೊಂದು ಹಾಡು ರಿಲೀಸ್‌ ಆಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿʼ ಎಂಬ ಮೆಲೋಡಿ ಹಾಡನ್ನು ಚಿತ್ರತಂಡ ಇತ್ತೀಚೆಗೆ ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿದೆ. ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.

VISTARANEWS.COM


on

Ibbani Thabbida Ileyali movie Helu Gelati song released
Koo

ಬೆಂಗಳೂರು: ವಿಹಾನ್, ಅಂಕಿತಾ ಅಮರ್ ಪ್ರಮುಖ ಭೂಮಿಕೆಯಲ್ಲಿರುವ ʼಇಬ್ಬನಿ ತಬ್ಬಿದ ಇಳೆಯಲಿʼ ಸಿನಿಮಾದ ಮತ್ತೊಂದು ಹಾಡು ರಿಲೀಸ್‌ ಆಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿʼ ಎಂಬ ಮೆಲೋಡಿ ಹಾಡನ್ನು ಚಿತ್ರತಂಡ ಇತ್ತೀಚೆಗೆ ಬಿಡುಗಡೆ ಮಾಡಿದ್ದು, ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಚಿತ್ರತಂಡ (Kannada New Movie) ತಿಳಿಸಿದೆ.

ಈ ಹಿಂದೆ ಬಿಡುಗಡೆ ಮಾಡಿದ್ದ ಈ ಸಿನಿಮಾದ ಹಾಡುಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ರೆಟ್ರೋ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಈ ಮಾಧುರ್ಯಭರಿತ ಗೀತೆಯನ್ನು ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿದೆ. ಚರಣ್‌ರಾಜ್ ಈ ಗೀತೆಗೆ ಧನಿಗೂಡಿಸಿರುವುದು ವಿಶೇಷ.

ನಾಗಾರ್ಜುನ ಶರ್ಮಾ ಸಾಹಿತ್ಯವಿರುವ ಈ ಹಾಡಿಗೆ ಗಗನ್ ಬಡೇರಿಯಾ ಸಂಗೀತ ಸಂಯೋಜಿಸಿದ್ದಾರೆ. ಸದ್ಯ ಟ್ರೆಂಡ್ ಹುಟ್ಟುಹಾಕಿರುವ ಈ ಗೀತೆಗೆ ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನವಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಹಾಡಿಗೆ ಕೇಳುಗರು ಫಿದಾ ಆಗಿದ್ದಾರೆ.

ಕಿರಿಕ್ ಪಾರ್ಟಿ ಹಾಗೂ ಅವನ್ನೇ ಶ್ರೀಮನ್ನಾರಾಯಣ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್ ಬೆಳಿಯಪ್ಪ, ರಕ್ಷಿತ್‌ರ ‘ಸೆವೆನ್ ಆಡ್ಸ್’ಬರಹಗಾರರ ತಂಡದ ಪ್ರಮುಖ ಸದಸ್ಯ ಹಾಗೂ ಕಥಾಸಂಗಮ ಚಿತ್ರದ ನಿರ್ದೇಶಕರಲ್ಲೊಬ್ಬರಾಗಿದ್ದರು. ಇದೀಗ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಪರವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ, ರಕ್ಷಿತ್ ಶೆಟ್ಟಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ತೆಲುಗಿನ ಸೂಪರ್‌ಹಿಟ್ ‘ಗೀತಾಂಜಲಿʼ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ಗಿರಿಜಾ ಶೆಟ್ಟರ್ ಬಹಳ ವರ್ಷಗಳ ನಂತರ ನಟನೆಗೆ ಮರಳಿ ಬಂದಿದ್ದಾರೆ. ಮಯೂರಿ ನಟರಾಜ್, ಅನಿರುದ್ಧ್ ಭಟ್, ದಾಮಿನಿ ಧನರಾಜ್ ಮೊದಲಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.‌

ಇದನ್ನೂ ಓದಿ: Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

ಸದ್ಯ ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ಚಿತ್ರತಂಡ ಮಗ್ನವಾಗಿದ್ದು, ವಿಎಫ್‌ಎಕ್ಸ್ ಕೆಲಸ ಪಿನಾಕ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ, ರಕ್ಷಿತ್ ಕಾಪ್ ಸಂಕಲನ ಈ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Vinay Guruji: ಬೈಕೊಂಡು ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದೆ ಆದರೆ ನನ್ನ ಅಷ್ಟೂ ಜಾತಕ ಬಿಚ್ಚಿಟ್ರು ಎಂದ ಮಾಸ್ಟರ್ ಆನಂದ್ ಸಹೋದರ!

Vinay Guruji: ದೇವರನ್ನು ನಂಬುವುದು ಕಷ್ಟ ಎನ್ನುವ ಸಮಯದಲ್ಲಿ ದೇವ ಮನುಷ್ಯರನ್ನು ಹೇಗೆ ನಂಬಲಿ ಎಂದು ಪದೇ ಪದೇ ಹೇಳುತ್ತಿದ್ದ ಅರುಣ್ ಹರಿಹರನ್‌ ವಿನಯ್ ಗುರೂಜಿ (Vinay Guruji) ಅವರನ್ನು ಭೇಟಿ ಮಾಡಿದ ಕ್ಷಣವನ್ನು ಮಾಧ್ಯಮವೊಂದರಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Vinay Guruji met by master anand brother
Koo

ಬೆಂಗಳೂರು: ಮಾಸ್ಟರ್ ಆನಂದ್ ಸಹೋದರ ಮಾಸ್ಟರ್ ಅರುಣ್ ಹರಿಹರನ್ (Arun Hariharan) ಕೂಡ ನಿರ್ದೇಶಕದಲ್ಲಿ ಬ್ಯುಸಿಯಾಗಿದ್ದಾರೆ. ಖಾಸಗಿ ವಾಹಿನಿಯಲ್ಲಿ ಇದೀಗ ‘Huu ಅಂತೀಯಾ…Uhuu ಅಂತೀಯಾ’ ಎಂಬ ಹೊಸ ಬಗೆಯ ವಿನೂತನ ಗೇಮ್ ಶೋ ನಿರೂಪಕ ಕೂಡ ಆಗಿದ್ದಾರೆ. ದೇವರನ್ನು ನಂಬುವುದು ಕಷ್ಟ ಎನ್ನುವ ಸಮಯದಲ್ಲಿ ದೇವ ಮನುಷ್ಯರನ್ನು ಹೇಗೆ ನಂಬಲಿ ಎಂದು ಪದೇ ಪದೇ ಹೇಳುತ್ತಿದ್ದ ಅರುಣ್ ಹರಿಹರನ್‌ ವಿನಯ್ ಗುರೂಜಿ (Vinay Guruji) ಅವರನ್ನು ಭೇಟಿ ಮಾಡಿದ ಕ್ಷಣವನ್ನು ಮಾಧ್ಯಮವೊಂದರಲ್ಲಿ ಹಂಚಿಕೊಂಡಿದ್ದಾರೆ.

ಅರುಣ್ ಹರಿಹರನ್ ಮಾತನಾಡಿ ʻʻನಾನು ದೇವರನ್ನ ನಂಬಲ್ಲ. ಇನ್ನೂ ದೇವ ಮಾನವನ್ನು ನಂಬಲು ಹೇಗೆ ಸಾಧ್ಯ? ಆದರೆ ನಮ್ಮ ಅಣ್ಣ ಬಾ ಎಂದು ಹೇಳಿದ ಅಂತ ವಿನಯ್ ಗುರೂಜೀ ಅವರನ್ನು ಭೇಟಿ ಮಾಡಲು ಹೋದೆ. ಅಲ್ಲಿ ಹೋದಾಗ ನಾವು ಹೋಗುತ್ತಿದ್ದಂತೆ ಗೇಟ್‌ ಬಳಿ ನಿಂತಿದ್ದರು ‘ಬನ್ನಿ ಬನ್ನಿ ನಿಮಗಾಗಿ ಕಾಯುತ್ತಿದ್ದೆ’ ಅಂತ ಹೇಳಿದರು. ಆನಂತ್ ಸಂಪೂರ್ಣ ವ್ಯವಸ್ಥೆ ಮಾಡಿದ್ದಾನೆ ಅಂದುಕೊಂಡು ಸುಮ್ಮನಾದೆʼʼಎಂದು ಮಾತು ಮುಂದುವರಿಸಿದರು.

ʻʻಗುರೂಜಿ ಫುಲ್‌ ಶಾರ್ಟ್ಸ್‌ ಹಾಕ್ಕೊಂಡು ಕೂತಿದ್ದಾರೆ. ನಾನು ಮಾಮೂಲಿ ಖಾವಿನೋ ಅಥವಾ ಬಿಳಿ ಬಣ್ಣದ ಉಡುಪನ್ನೋ ಧರಿಸುತ್ತಾರೆ ಅಂದುಕೊಂಡಿದ್ದೆ. ಆದರೆ ನೋಡುವಾಗ ಅವರು ಹಾಗೆ ಕಂಡಿಲ್ಲ. ನಮ್ಮ ಅಣ್ಣ ಕರೆದುಕೊಂಡು ಬಂದ ಮಕ್ಕರ್‌ ಮಾಡಿದ ಎಂದು ಅಂದುಕೊಂಡಿದ್ದೆ. ಇಡೀ ಟೀಂ ನೋಡಿ ನಿಮಗೆ ಕಾಯುತ್ತಿದ್ದೆ ಎಂದರು. ಗುರೂಜಿ ಅವರು ಊಟ ಬಡಿಸುತ್ತಿದ್ದರು. ಬಜ್ಜಿ ಬಡಿಸುವಾಗ ಇದರಷ್ಟೇ ಖಾರ ಇದ್ಯಲ್ಲ ನೀನು? ಎಂದು ಕೇಳಿದ್ದರು. ಎಷ್ಟು ಬೈಕ್ಕೊಂಡೆ ಅಲ್ವಾ? ಎಂದರು ನಾನು ಅಣ್ಣನೇ ನನ್ನ ಬಗ್ಗೆ ಅವರಿಗೆ ಇದೆಲ್ಲ ಹೇಳಿರಬೇಕು ಎಂದು ಅಂದುಕೊಂಡೆ. ನಮ್ಮ ಡಿಒಪಿ ಮೊಬೈಲ್‌ ಒಡೆದಿದ್ದೂ ಹೇಳಿದ್ದರು. ಮನೆ ಕೂಡ ಬೇಗ ಆಗುತ್ತೆ ಎಂದೂ ಹೇಳುತ್ತಾರೆ. ಇಷ್ಟೆಲ್ಲ ಹೇಳಿದಾಗ ಅಣ್ಣನೇ ಎಲ್ಲವೂ ಹೇಳಿರುತ್ತಾರೆ ಅಂದುಕೊಂಡೆʼʼಎಂದರು.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

ʻʻನಾನು ಆಗಷ್ಟೇ ಮದುವೆಯಾಗಿದ್ದೆ. ಆಗ ನನ್ನ ಹಳೆ ಪರಚಿಕೊಂಡ ಗಾಯದ ಬಗ್ಗೆ ಹೇಳಿಬಿಟ್ಟರು. ಹೆಂಗಿದ್ದಾಳೋ ಅವಳು ಅಂದುಬಿಟ್ಟರು. ಕಾಲು ಕೈ ಎಲ್ಲಾ ತಣ್ಣಗಾಯ್ತು. ಅಣ್ಣ ಇಷ್ಟೋಂದು ಹೇಳಿದ್ದಾನ ಯಾವ ಹುಡುಗಿ ಹೆಸರು ಹೇಳಿರಬಹುದು ಅಂತ ಯೋಚನೆ ಮಾಡುತ್ತಿದ್ದೆ. ಮತ್ತೊಂದು ರೌಂಡ್‌ ಬಂದರು ಲಿಸ್ಟ್ ತೆಗೆದು ಯೋಚನೆ ಮಾಡುತ್ತಿದ್ದೀಯಾ ಅಂದ್ರು. ಆ ಕ್ಷಣಕ್ಕೆ ನಾನು ಅವರಿಗೆ ಏನೋ ಪವರ್ ಇದೆ ಎಂದು ಅವರಿಗೆ ಸರೆಂಡರ್ ಆಗಿಬಿಟ್ಟೆ. ತುಂಬಾ ಫ್ರೆಂಡ್ಲಿಯಾಗಿ ಮಾತನಾಡಿಸುತ್ತಾರೆ ಯಾರು ಏನೇ ಕೊಟ್ಟರೂ ನಮಗೆ ಕೊಡುತ್ತಿದ್ದರು’ ಎಂದಿದ್ದಾರೆ ಅರುಣ್.

Continue Reading
Advertisement
Former minister B Sriramulu alleged that the Congress government is not interested in the construction of the Kampli bridge
ಬಳ್ಳಾರಿ4 mins ago

Ballari News: ಕಂಪ್ಲಿ ಸೇತುವೆ ನಿರ್ಮಿಸಲು ಆಸಕ್ತಿ ವಹಿಸದ ಕಾಂಗ್ರೆಸ್ ಸರ್ಕಾರ; ಶ್ರೀರಾಮುಲು ಆರೋಪ

Whatsapp Shutdown
ತಂತ್ರಜ್ಞಾನ9 mins ago

Alternative to Whatsapp: ವಾಟ್ಸಾಪ್ ಸ್ಥಗಿತಗೊಂಡರೆ ಏನ್‌ ಮಾಡೋದು? ಇಲ್ಲಿದೆ ಪರ್ಯಾಯ ಆ್ಯಪ್‌ಗಳ ಪಟ್ಟಿ

Kerala Floods
ದೇಶ56 mins ago

Kerala Floods: ಕೇರಳದಲ್ಲಿ ಪ್ರವಾಹ; ಪ್ರಾಣವನ್ನೇ ಒತ್ತೆ ಇಟ್ಟು ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದ ಪತಿ, Video ಇದೆ

Paris Olympics 2024
ಪ್ರಮುಖ ಸುದ್ದಿ59 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ವಿವಾದ; ಮಹಿಳೆ ವಿರುದ್ಧ ಸ್ಪರ್ಧಿಸಲು ಬಾಕ್ಸಿಂಗ್​ ಕಣಕ್ಕೆ ಇಳಿದ ಪುರುಷ!

vyasana mukta dinacharane programme in hosapete
ವಿಜಯನಗರ1 hour ago

Vijayanagara News: ಹೊಸಪೇಟೆಯಲ್ಲಿ ವ್ಯಸನ ಮುಕ್ತ ದಿನಾಚರಣೆ; ಜನ ಜಾಗೃತಿ

utthana vaarshika katha spardhe the last date for submission of the story is october 10
ಬೆಂಗಳೂರು1 hour ago

Utthana Katha Spardhe 2024: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ; ಕಥೆ ತಲುಪಿಸಲು ಅ.10 ಕೊನೆಯ ದಿನ

World Breastfeeding Week
ಆರೋಗ್ಯ2 hours ago

World Breastfeeding Week: ವಿಶ್ವ ಸ್ತನ್ಯಪಾನ ಸಪ್ತಾಹ; ಹಾಲುಣಿಸಿದರೆ ಮಗುವಿಗೆ ಮಾತ್ರವಲ್ಲ, ತಾಯಿಗೂ ಲಾಭ!

Saree Fashion
ಫ್ಯಾಷನ್2 hours ago

Saree Fashion: ಕಂಟೆಂಪರರಿ ಪ್ರಿಂಟೆಡ್‌ ವಿನ್ಯಾಸದಲ್ಲೂ ಬಂತು ಆರ್ಗನ್ಜಾ ಸೀರೆ!

kotak bank smart watch
ವಾಣಿಜ್ಯ2 hours ago

kotak bank smart watch: ಮೊಬೈಲ್‌ ಬೇಕಿಲ್ಲ, ವಾಚ್‌ನಲ್ಲೇ ಆನ್‌ಲೈನ್‌ ಪೇಮೆಂಟ್‌! ಬಂದಿದೆ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವಾಚ್!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಭಾರತದವರೇ ಆದ ಎಚ್​ಎಸ್​ ಪ್ರಣಯ್​ ಸೋಲಿಸಿ ಕ್ವಾರ್ಟರ್​​ ಫೈನಲ್ಸ್​ಗೇರಿದ ಲಕ್ಷ್ಯ ಸೇನ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ8 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ9 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ9 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌