Train Cancel: ರೈಲು ಪ್ರಯಾಣಿಕರೇ ಗಮನಿಸಿ; ಜುಲೈ ಅಂತ್ಯದಿಂದ 24 ಪ್ರಮುಖ ರೈಲು ಸಂಚಾರ ರದ್ದು - Vistara News

ದೇಶ

Train Cancel: ರೈಲು ಪ್ರಯಾಣಿಕರೇ ಗಮನಿಸಿ; ಜುಲೈ ಅಂತ್ಯದಿಂದ 24 ಪ್ರಮುಖ ರೈಲು ಸಂಚಾರ ರದ್ದು

ಉತ್ತರ ಭಾರತದ ಕಡೆ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಲೇಬೇಕಾದ ಸುದ್ದಿಯೊಂದಿದೆ. ಈಶಾನ್ಯ ರೈಲ್ವೆಯು ಒಟ್ಟು 24 ದೂರ ಪ್ರಯಾಣದ ರೈಲುಗಳನ್ನು ರದ್ದು (Train Cancel) ಗೊಳಿಸಿದೆ. ಹೀಗಾಗಿ ಇದನ್ನು ಗಮನಿಸಿ ಪ್ರಯಾಣಿಕರು ಪರ್ಯಾಯ ಯೋಜನೆಯನ್ನು ರೂಪಿಸಲು ಸೂಚಿಸಲಾಗಿದೆ. ರದ್ದಾದ ರೈಲುಗಳ ಕುರಿತ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೂರ ಪ್ರದೇಶಗಳಿಗೆ ತೆರಳುವ 24 ರೈಲುಗಳನ್ನು (train) ಈಶಾನ್ಯ ರೈಲ್ವೆ (Northeast Railway) ವಿವಿಧ ಕಡೆಗಳಲ್ಲಿ ಮೂಲ ಸೌಕರ್ಯ ನವೀಕರಣ ಪ್ರಯುಕ್ತ ರದ್ದುಗೊಳಿಸಿದೆ. ಜುಲೈ ಕೊನೆಯ ವಾರದಿಂದ ಆಗಸ್ಟ್ ಆರಂಭದವರೆಗೆ ಈ ರೈಲುಗಳ ಸಂಚಾರವನ್ನು ರದ್ದುಗೊಳಿಸಿರುವುದಾಗಿ (Train Cancel) ಪ್ರಕಟಣೆಯಲ್ಲಿ ತಿಳಿಸಿದೆ.

ರೈಲುಗಳು ರದ್ದುಗೊಂಡಿರುವುದರಿಂದ ಇದು ಸಾವಿರಾರು ಪ್ರಯಾಣಿಕರ ಪ್ರಯಾಣದ ಯೋಜನೆಗಳ ಮೇಲೆ ಪರಿಣಾಮ ಬೀರಲಿದೆ. ಉತ್ತರ ಪ್ರದೇಶದ (uttarpradesh) ಪ್ರಮುಖ ಮಾರ್ಗಗಳಲ್ಲಿ ರೈಲ್ವೆಯು ಮೂಲಸೌಕರ್ಯ ನವೀಕರಣಗಳನ್ನು ಕೈಗೊಂಡಿರುವ ಕಾರಣ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಷಹಜಹಾನ್‌ಪುರ- ಲಖನೌ ಮತ್ತು ರೋಜಾ- ಸೀತಾಪುರ್ ಸಿಟಿ ರೈಲ್ವೆ ವಿಭಾಗಗಳ ನಡುವೆ ನಡೆಯುತ್ತಿರುವ ಹಳಿಗಳ ದ್ವಿಗುಣಗೊಳಿಸುವಿಕೆ ಕಾಮಗಾರಿ ಈ ರದ್ದತಿಗೆ ಪ್ರಮುಖ ಕಾರಣವಾಗಿದೆ. ಇದರಿಂದಾಗಿ 12 ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲು ನಿರ್ಧರಿಸಲಾಗಿದೆ. ಈ ಅವಧಿಯಲ್ಲಿ ಹಲವಾರು ಇತರ ಮಾರ್ಗಗಳನ್ನು ಮಾರ್ಪಡಿಸಲಾಗುತ್ತದೆ.

ಪ್ರಯಾಣಿಕರು ವಿಶೇಷವಾಗಿ ಬಿಹಾರದಿಂದ ವೈಷ್ಣೋದೇವಿ ತೀರ್ಥಯಾತ್ರೆ, ಜಮ್ಮು, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಗೆ ಪ್ರಯಾಣಿಸುವವರು ಈ ರದ್ದತಿಯಿಂದಾಗಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ಮೂಲಸೌಕರ್ಯ ಕಾರ್ಯಗಳು ಪೂರ್ಣಗೊಂಡ ಅನಂತರ ಅಂದರೆ ಆಗಸ್ಟ್ ಮೊದಲ ವಾರದ ಬಳಿಕ ಸಾಮಾನ್ಯ ಕಾರ್ಯಾಚರಣೆಗಳು ಪುನರಾರಂಭಗೊಳ್ಳುವ ನಿರೀಕ್ಷೆಯಿದೆ ಎಂದು ಈಶಾನ್ಯ ರೈಲ್ವೆಯ ವಕ್ತಾರರು ತಿಳಿಸಿದ್ದಾರೆ.

ರದ್ದುಗೊಂಡ ರೈಲುಗಳು ಯಾವವು?

ಜಮ್ಮು ತಾವಿಯಿಂದ ಬರೌನಿಗೆ ತೆರಳುವ 12492 ಮೌರ್ ಧ್ವಜ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಜುಲೈ 26 ಮತ್ತು ಆಗಸ್ಟ್ 2 ರಂದು ರದ್ದಾಗಲಿದೆ.

ಅಮೃತಸರದಿಂದ ದರ್ಭಾಂಗಕ್ಕೆ ತೆರಳುವ 15212 ಜನ್ ನಾಯಕ್ ಎಕ್ಸ್‌ಪ್ರೆಸ್ ಜುಲೈ 25 ರಿಂದ ಆಗಸ್ಟ್ 6ರವರೆಗೆ, 14618 ಜನ ಸೇವಾ ಎಕ್ಸ್‌ಪ್ರೆಸ್ ಜುಲೈ 25 ರಿಂದ ಆಗಸ್ಟ್ 5 ರವರೆಗೆ, ಅಮೃತಸರದಿಂದ ಸಹರ್ಸಾಗೆ ತೆರಳುವ 14604 ಜನಸಾಧರನ್ ಎಕ್ಸ್‌ಪ್ರೆಸ್ ಜುಲೈ 24 ರಿಂದ 31 ರವರೆಗೆ, 22552 ಅಂತ್ಯೋದಯ ಎಕ್ಸ್‌ಪ್ರೆಸ್ ಜುಲೈ 28 ರಿಂದ ಆಗಸ್ಟ್ 4 ರವರೆಗೆ, 15904 ಜುಲೈ 31 ಮತ್ತು ಆಗಸ್ಟ್ 4 ರಂದು ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್, ಅಮೃತಸರದಿಂದ ಸಹರ್ಸಗೆ ತೆರಳುವ 12204 ಆಗಸ್ಟ್ 3 ಮತ್ತು 4 ರಂದು ಗರೀಬ್ ರಥ, 15909 ಅವಧ್ ಅಸ್ಸಾಂ ಎಕ್ಸ್‌ಪ್ರೆಸ್ ಲಾಲ್‌ಘರ್ ಜಂಕ್ಷನ್‌ನಿಂದ ಆಗಸ್ಟ್ 1 ರಿಂದ 4 ರವರೆಗೆ, ಜಮ್ಮು ತಾವಿಯಿಂದ ಗುವಾಹಟಿಗೆ ತೆರಳುವ 15654 ಅಮರನಾಥ್ ಎಕ್ಸ್‌ಪ್ರೆಸ್ ಆಗಸ್ಟ್ 2 ರಂದು, ಸಹರ್ಸಾದಿಂದ ಅಮೃತಸರಕ್ಕೆ ತೆರಳುವ ಜುಲೈ 21 ಮತ್ತು ಆಗಸ್ಟ್ 4 ರಂದು 15531 ಜನಸಾಧರನ್ ಎಕ್ಸ್‌ಪ್ರೆಸ್, ಅಮೃತಸರದಿಂದ ಹೊಸ ಜಲ್ಪೈಗುರಿಗೆ ತೆರಳುವ ಜುಲೈ 19 ಮತ್ತು ಆಗಸ್ಟ್ 2 ರಂದು 12408 ಕರ್ಮಭೂಮಿ ಎಕ್ಸ್‌ಪ್ರೆಸ್ ಡೌನ್ ಟ್ರೈನ್ ಗಳು ರದ್ದುಗೊಂಡಿವೆ.


ಉತ್ತರಪ್ರದೇಶದ ರೈಲುಗಳು

ಬರೌನಿಯಿಂದ ಜಮ್ಮು ತಾವಿಗೆಗೆ ತೆರಳುವ 12491 ಮೌರ್ ಧ್ವಜ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಜುಲೈ 28 ಮತ್ತು ಆಗಸ್ಟ್ 4 ರಂದು, ದರ್ಭಾಂಗದಿಂದ ಅಮೃತಸರಕ್ಕೆ ತೆರಳುವ 15211 ಜನ್ ನಾಯಕ್ ಎಕ್ಸ್‌ಪ್ರೆಸ್ ಜುಲೈ 23 ರಿಂದ ಆಗಸ್ಟ್ 4 ರವರೆಗೆ, ಜುಲೈ 27 ರಿಂದ ಆಗಸ್ಟ್ 7 ರವರೆಗೆ 14617 ಜನ ಸೇವಾ ಎಕ್ಸ್‌ಪ್ರೆಸ್, ಸಹರ್ಸಾದಿಂದ ಅಮೃತಸರಕ್ಕೆ ತೆರಳುವ 14603 ಜನಸಾಧರನ್ ಎಕ್ಸ್‌ಪ್ರೆಸ್ ಜುಲೈ 26 ರಿಂದ ಆಗಸ್ಟ್ 2 ರವರೆಗೆ, 22551 ಅಂತ್ಯೋದಯ ಎಕ್ಸ್‌ಪ್ರೆಸ್ ಜುಲೈ 27 ರಿಂದ ಆಗಸ್ಟ್ 3 ರವರೆಗೆ, 15903 ದಿಬ್ರುಗಢ- ಚಂಡೀಗಢ ಎಕ್ಸ್‌ಪ್ರೆಸ್ ಜುಲೈ 29 ಮತ್ತು ಆಗಸ್ಟ್ 2 ರಂದು, ಸಹರ್ಸದಿಂದ ಅಮೃತಸರಕ್ಕೆ ತೆರಳುವ 12203 ಆಗಸ್ಟ್ 4 ಮತ್ತು 5 ರಂದು ಗರೀಬ್ ರಥ, 15910 ಅವಧ್ ಅಸ್ಸಾಂ ಎಕ್ಸ್‌ಪ್ರೆಸ್ ಜುಲೈ 29 ರಿಂದ ಆಗಸ್ಟ್ 1 ರವರೆಗೆ, ಜುಲೈ 31 ರಂದು ಗುವಾಹಟಿಯಿಂದ ಜಮ್ಮು ತಾವಿಗೆ ತೆರಳುವ 15653 ಅಮರನಾಥ್ ಎಕ್ಸ್‌ಪ್ರೆಸ್, ಸಹರ್ಸಾದಿಂದ ಅಮೃತಸರಕ್ಕೆ ತೆರಳುವ 15531 ಜನಸಾಧರನ್ ಎಕ್ಸ್‌ಪ್ರೆಸ್ ಜುಲೈ 21 ಮತ್ತು ಆಗಸ್ಟ್ 4 ರಂದು, ಹೊಸ ಜಲ್ಪೈಗುರಿಯಿಂದ ಅಮೃತಸರಕ್ಕೆ ತೆರಳುವ 12407 ಕರ್ಮಭೂಮಿ ಎಕ್ಸ್‌ಪ್ರೆಸ್ ಜುಲೈ 24 ಮತ್ತು ಆಗಸ್ಟ್ 7 ರಂದು ರದ್ದಾಗಲಿದೆ.

ಇದನ್ನೂ ಓದಿ: PM Modi Russia Visit : ಮೋದಿಯನ್ನು ಪಕ್ಕದಲ್ಲಿ ಕೂರಿಸಿ ಕಾರು ಡ್ರೈವ್ ಮಾಡಿಕೊಂಡು ಮನೆ ಸುತ್ತಲೂ ತೋರಿಸಿದ ರಷ್ಯಾ ಅಧ್ಯಕ್ಷ ಪುಟಿನ್​; ಇಲ್ಲಿದೆ ವಿಡಿಯೊ

ರದ್ದುಗೊಂಡಿರುವ ರೈಲುಗಳ ಸಂಚಾರ ಅವಧಿಯನ್ನು ಗಮನಿಸಿ ಪ್ರಯಾಣಿಕರು ಪರ್ಯಾಯ ಪ್ರಯಾಣದ ವ್ಯವಸ್ಥೆ ಮಾಡಲು ಅನುಕೂಲವಾಗುವಂತೆ ರೈಲ್ವೇ ಅಧಿಕಾರಿಗಳು ಪ್ರಯಾಣಿಕರ ಮಾಹಿತಿಗಾಗಿ ರದ್ದಾದ ರೈಲುಗಳ ವಿವರವಾದ ಪಟ್ಟಿಯನ್ನು ಪ್ರಕಟಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Anant Ambani Wedding: ಅನಂತ್‌ ಅಂಬಾನಿ ಮದುವೆಯಲ್ಲಿ ಬಾಂಬ್‌ ಸ್ಫೋಟಕ್ಕೆ ನಡೆದಿತ್ತಾ ಸಂಚು? ಕಿಡಿಗೇಡಿ ಅರೆಸ್ಟ್‌

Anant Ambani Wedding:ಬಂಧಿತನನ್ನು ಗುಜರಾತ್‌ ಮೂಲದ ಎಂಜಿನಿಯರ್‌ ವಿರಲ್‌ ಶಾ ಎಂದು ಗುರುತಿಸಲಾಗಿದ್ದು, ಈತನನ್ನು ವಢೋದರಾದಲ್ಲಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ ವಿರಲ್‌ ಶಾ, ಜು.13ರಂದು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿ, ಅಂಬಾನಿ ಮದುವೆಯಲ್ಲಿ ಸ್ಫೋಟಿಸಲಿದ್ದು, ನಾಳೆ ಇಡೀ ಪ್ರಪಂಚವೇ ಮೇಲೆ ಕೆಳಗೆ ಆಗಲಿದೆ. ಇದಕ್ಕಾಗಿ ನಾನು ಕಾತರದಿಂದ ಕಾಯುತ್ತಿದ್ದೇನೆ ಎಂದು ಬರೆದುಕೊಂಡಿದ್ದ.

VISTARANEWS.COM


on

Ananth Ambani Wedding
Koo

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani Wedding) ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್‌ ಅವರ ಪುತ್ರಿ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹವು ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಈ ನಡುವೆ ಮದುವೆ ಸಮಾರಂಭ ನಡೆಯುವಲ್ಲಿ ಬಾಂಬ್‌ ಸ್ಫೋಟಿಸುವುದಾಗಿ(Bomb Threat) ಬೆದರಿಕೆವೊಡ್ಡಿದ್ದ ವ್ಯಕ್ತಿಯನ್ನು ಮುಂಬೈ ಕ್ರೈಂ ಬ್ರ್ಯಾಂಚ್‌ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಇನ್ನು ಬಂಧಿತನನ್ನು ಗುಜರಾತ್‌ ಮೂಲದ ಎಂಜಿನಿಯರ್‌ ವಿರಲ್‌ ಶಾ ಎಂದು ಗುರುತಿಸಲಾಗಿದ್ದು, ಈತನನ್ನು ವಢೋದರಾದಲ್ಲಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ ವಿರಲ್‌ ಶಾ, ಜು.13ರಂದು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿ, ಅಂಬಾನಿ ಮದುವೆಯಲ್ಲಿ ಸ್ಫೋಟಿಸಲಿದ್ದು, ನಾಳೆ ಇಡೀ ಪ್ರಪಂಚವೇ ಮೇಲೆ ಕೆಳಗೆ ಆಗಲಿದೆ. ಇದಕ್ಕಾಗಿ ನಾನು ಕಾತರದಿಂದ ಕಾಯುತ್ತಿದ್ದೇನೆ ಎಂದು ಬರೆದುಕೊಂಡಿದ್ದ.

ಇದರ ಬೆನ್ನಲ್ಲೇ ಕಾರ್ಯಕಪ್ರವೃತರಾದ ಪೊಲೀಸರು, ಸೈಬರ್‌ ಪೊಲೀಸರ ನೆರವಿನಿಂದ ವಿರಲ್‌ನನ್ನು ಪತ್ತೆ ಹಚ್ಚಿದ್ದು, ನೇರವಾಗಿ ಗುಜರಾತ್‌ಗೆ ತೆರಳಿ ಆತನ ಹೆಡೆಮುರಿ ಕಟ್ಟಿ ಮುಂಬೈಗೆ ಕರೆತಂದಿದ್ದಾರೆ. ಸದ್ಯ ಆತನ ವಿಚಾರಣೆ ಮುಂದುವರೆದಿದ್ದು, ಆತನ ಉದ್ದೇಶ ಏನೆಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ನಡುವೆ ಈ ಸಮಾರಂಭದ ವೇಳೆ ಅನಂತ್ –ರಾಧಿಕಾ ಆರತಕ್ಷತೆಗೆ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಪ್ರವೇಶಿಸಿ ಅಡ್ಡಿಯನ್ನುಂಟುಮಾಡಿದ್ದಾರೆ. ಜುಲೈ 14ರಂದು ನಡೆದ ಅಂಬಾನಿ ಕುಟುಂಬದ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದೆ ಪ್ರವೇಶಿಸಲು ಯತ್ನಸಿದ ಯೂಟ್ಯೂಬರ್ ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಆರತಕ್ಷತೆ ಜುಲೈ 14ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಯೂಟ್ಯೂಬರ್ ವೆಂಕಟೇಶ್ ನರಸಯ್ಯ (26) ಮತ್ತು ಇನ್ನೊಬ್ಬ ವ್ಯಕ್ತಿ ಉದ್ಯಮಿ ಎಂದು ಹೇಳಿಕೊಂಡ ಲುಕಾಮ್ ಮೊಹಮ್ಮದ್ ಶಫಿ ಶೇಖ್ (28) ಆಂಧ್ರಪ್ರದೇಶದಿಂದ ಮುಂಬೈಗೆ ಬಂದಿದ್ದರು. ಇವರಿಗೆ ವಿವಾಹಕ್ಕೆ ಆಹ್ವಾನ ನೀಡದಿದ್ದರೂ ಕೂಡ ಗೇಟ್ ಕ್ರಾಸಿಂಗ್ ಮಾಡಿದ್ದಕ್ಕಾಗಿ ಪೊಲೀಸರು ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಇಬ್ಬರನ್ನು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ವೆಂಕಟೇಶ್ ಮತ್ತು ಲುಕಮ್ ಇಬ್ಬರೂ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ಗೆ ಆಗಮಿಸಿದ್ದರು. ಅನುಮಾನಗೊಂಡ ಭದ್ರತಾ ಅಧಿಕಾರಿಗಳು ಅವರನ್ನು ತಡೆದು ವಿಚಾರಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇವರಿಬ್ಬರನ್ನು ಬಿಕೆಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರ ವಿರುದ್ಧ ಅತಿಕ್ರಮಣ ಪ್ರಕರಣ ದಾಖಲಿಸಲಾಗಿದೆ.
ನೋಟಿಸ್ ನೀಡಿದ ನಂತರ ಕಾನೂನು ಕ್ರಮ ಕೈಗೊಂಡ ಪೊಲೀಸರು ಇಬ್ಬರನ್ನು ಬಿಡುಗಡೆ ಮಾಡಿದರು ಎನ್ನಲಾಗಿದೆ.

ಅನಂತ್ ಮತ್ತು ರಾಧಿಕಾ ಅವರ ವಿವಾಹ ಆರತಕ್ಷತೆಯಲ್ಲಿ ಗೋವಿಂದಾ, ಕತ್ರಿನಾ ಕೈಫ್, ವಿಕ್ಕಿ ಕೌಶಲ್, ತಮನ್ನಾ ಭಾಟಿಯಾ, ಬಿಪಾಶಾ ಬಸು, ಕರಣ್ ಸಿಂಗ್ ಗ್ರೋವರ್, ಭಾಗ್ಯಶ್ರೀ, ರಾಜ್ ಕುಮಾರ್ ರಾವ್, ಜಾಕಿ ಶ್ರಾಫ್, ಟೈಗರ್ ಶ್ರಾಫ್, ರಾಕುಲ್ ಪ್ರೀತ್ ಸಿಂಗ್ ಸೇರಿದಂತೆ ಅನೇಕ ಸಿನಿಮಾ ನಟ ನಟಿಯರು ಭಾಗವಹಿಸಿದ್ದರು. ಅದ್ಧೂರಿ ವಿವಾಹ ಆರತಕ್ಷತೆಯ ನಂತರ, ಅಂಬಾನಿ ಕುಟುಂಬವು ಮದುವೆಯ ನಂತರ ದ ಆಚರಣೆಗಳನ್ನು ಮುಂದುವರಿಸಲು ಲಂಡನ್‌ಗೆ ತೆರಳಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:Ananth Ambani Fashion: ಅನಂತ್‌ ಅಂಬಾನಿ ಬಳಿ ಇದೆ ಡೈಮಂಡ್‌ ಬ್ರೂಚ್‌ಗಳ ಕಲೆಕ್ಷನ್‌! ಇವುಗಳ ಮೌಲ್ಯ ಎಷ್ಟಿರಬಹುದು?

Continue Reading

ವೈರಲ್ ನ್ಯೂಸ್

Viral Video: ಪಕ್ಷದ ಕಾರ್ಯಕರ್ತನಿಗೆ ರಪ್‌ ಅಂತಾ ಕೆನ್ನೆಗೆ ಬಾರಿಸಿದ ಟಿಎಂಸಿ ನಾಯಕಿ; ವಿಡಿಯೋ ಇದೆ

Viral Video: ಕೋಲ್ಕತ್ತಾ ಮಹಾನಗರ ಪಾಲಿಕೆಯ ವಾರ್ಡ್‌ ನಂ 18ರ ಕೌನ್ಸಿಲರ್‌ ಸುನಂದಾ ಸರ್ಕಾರ್‌, ವಾರ್ಡ್‌ನ ಯುವ ಮೋರ್ಛಾ ಅಧ್ಯಕ್ಷ ಕೇದಾರ್‌ ದಾಸ್‌ಗೆ ಕಪಾಳಮೋಕ್ಷ ಮಾಡಿದ್ದಾರೆ. ಅಲ್ಲದೇ ಆತನನ್ನು ಥಳಿಸಿ ಹಲ್ಲೆ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಸುನಂದಾ ಹಲವಾರು ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಕೇದಾರ್‌ ಆರೋಪ ಮಾಡಿದ್ದರು. ಇದೇ ವಿಚಾರಕ್ಕೆ ಇಬ್ಬರ ನಡುವೆ ಭಾರೀ ಗಲಾಟೆ ನಡೆದಿದ್ದು, ಮಾತಿಗೆ ಮಾತು ಬೆಳೆದು ಸುನಂದಾ ಕೇದರ್‌ಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ.

VISTARANEWS.COM


on

Viral Video
Koo

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್‌ (TMC)ನ ಮಹಾನಗರ ಪಾಲಿಕೆ ಸದಸ್ಯೆಯೊಬ್ಬರು ಪಕ್ಷ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ. ಮಾತಿಗೆ ಮಾತು ಬೆಳೆದು ಪಕ್ಷದ ಯುವ ಮೋರ್ಚಾದ ಅಧ್ಯಕ್ಷನ ಮೇಲೆ ಪಾಲಿಕೆ ಸದಸ್ಯೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗುತ್ತಿದೆ.

ಕೋಲ್ಕತ್ತಾ ಮಹಾನಗರ ಪಾಲಿಕೆಯ ವಾರ್ಡ್‌ ನಂ 18ರ ಕೌನ್ಸಿಲರ್‌ ಸುನಂದಾ ಸರ್ಕಾರ್‌, ವಾರ್ಡ್‌ನ ಯುವ ಮೋರ್ಛಾ ಅಧ್ಯಕ್ಷ ಕೇದಾರ್‌ ದಾಸ್‌ಗೆ ಕಪಾಳಮೋಕ್ಷ ಮಾಡಿದ್ದಾರೆ. ಅಲ್ಲದೇ ಆತನನ್ನು ಥಳಿಸಿ ಹಲ್ಲೆ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಸುನಂದಾ ಹಲವಾರು ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಕೇದಾರ್‌ ಆರೋಪ ಮಾಡಿದ್ದರು. ಇದೇ ವಿಚಾರಕ್ಕೆ ಇಬ್ಬರ ನಡುವೆ ಭಾರೀ ಗಲಾಟೆ ನಡೆದಿದ್ದು, ಮಾತಿಗೆ ಮಾತು ಬೆಳೆದು ಸುನಂದಾ ಕೇದರ್‌ಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ.

ಟಿಎಂಸಿ ವಕ್ತಾರ ಕುನಾಲ್ ಘೋಷ್ ಘಟನೆಯನ್ನು ದುರದೃಷ್ಟಕರ ಎಂದು ಕರೆದಿದ್ದಾರೆ ಮತ್ತು ಹಿರಿಯ ನಾಯಕರು ಮತ್ತು ಸಾರ್ವಜನಿಕ ಪ್ರತಿನಿಧಿಗಳು ಹೆಚ್ಚು ಜಾಗರೂಕರಾಗಿರಬೇಕು, ಇದು ಹಾಸ್ಯಾಸ್ಪದವಾಗಿದೆ. ಬಿಜೆಪಿ ಈ ಘಟನೆಯನ್ನು ಖಂಡಿಸಿದ್ದು, ಟಿಎಂಸಿ ಕೆಟ್ಟ ರಾಜಕೀಯ ಸ್ಥಿತಿಗೆ ಇದು ಉದಾಹರಣೆ ಎಂದು ಟೀಕಿಸಿದೆ.

ಕೆಲವು ದಿನಗಳ ಹಿಂದೆ ಬಿಹಾರಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ಒಡಿಶಾ ರಾಜ್ಯಪಾಲರ ಪುತ್ರನ ವಿರುದ್ಧ ಗಂಭೀರವಾದ ಆರೋಪವೊಂದು ಕೇಳಿಬಂದಿದ್ದು, ರಾಜಭವನದಲ್ಲೇ ಕರ್ತವ್ಯನಿರತ ಸರ್ಕಾರಿ ನೌಕರನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ರಾಜ್ಯಪಾಲ ರಘುಬರ್‌ ದಾಸ್‌ ಅವರ ಪುತ್ರ ಲಲಿತ್‌ ದಾಸ್‌ ವಿರುದ್ಧ ರಾಜಭವನದಲ್ಲಿ ನಿಯೋಜನೆಗೊಂಡಿರುವ ರಾಜ್ಯ ಸಂಸದೀಯ ವ್ಯವಹಾರಗಳ ಇಲಾಖೆ ಅಧಿಕಾರಿ ಭೈಕುಂಠದಾಸ್‌ ಪ್ರಧಾನ್‌ ಹಲ್ಲೆ ಆರೋಪ ಮಾಡಿದ್ದಾರೆ. ಪುರಿ ಜಗನ್ನಾಥ ದೇಗುಲದಲ್ಲಿ ರಥಯಾತ್ರೆ ಪ್ರಯುಕ್ತ ಜು.7 ಮತ್ತು 8ರಂದು ರಾಷ್ಟ್ರಪತಿ ದ್ರೌಪದಿಮುರ್ಮು ಅವರು ಪುರಿಗೆ ಭೇಟಿ ಕೊಟ್ಟಿದ್ದರು. ಇದೇ ಸಂದರ್ಭದಲ್ಲಿ ಅವರು ರಾಜಭವನಕ್ಕೆ ಭೇಟಿ ನೀಡುವ ಕಾರಣ ಎಲ್ಲಾ ಸಿದ್ದತೆಗಳ ಮೇಲುಸ್ತುವಾರಿಯನ್ನು ಪ್ರಧಾನ್‌ ನೋಡಿಕೊಳ್ಳುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ಲಲಿತ್‌ ದಾಸ್‌ ಪ್ರಧಾನ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: One Nation One Rate: ಚಿನ್ನಕ್ಕೆ ದೇಶಾದ್ಯಂತ ಒಂದೇ ದರ! ಹೊಸ ನಿಯಮ ಶೀಘ್ರ! ಬಂಗಾರ ದರ ಇಳಿಕೆ?

Continue Reading

ದೇಶ

Pooja Khedkar: ಪೂಜಾ ಖೇಡ್ಕರ್‌ ಪುಣೆ ಜಿಲ್ಲಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

Pooja Khedkar: ಇನ್ನು ಮಹಿಳಾ ಪೊಲೀಸ್‌ ಪೇದೆ ಪೂಜಾ ಮನೆಗೆ ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ. ಇನ್ನು ಮನೆಗೆ ಪೊಲೀಸರು ಬಂದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದ ಪೂಜಾ, ಸ್ವಲ್ಪ ಕೆಲಸ ಇತ್ತು. ಹಾಗಾಗಿ ಪೊಲೀಸರನ್ನು ಮನೆಗೆ ಕರೆಸಿಕೊಂಡಿದ್ದೆ ಎಂದಿದ್ದರು.

VISTARANEWS.COM


on

Pooja Khedkar
Koo

ಮುಂಬೈ: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ (Pooja Khedkar) ಪುಣೆ ಜಿಲ್ಲಾಧಿಕಾರಿ ಸುಹಾಸ್‌ ದಿವಾಸೆ ವಿರುದ್ಧ ಲೈಂಗಿಕ ಕಿರುಕುಳ(Sexual Harassment)ದ ಆರೋಪ ಹೊರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮ್ಮನ್ನು ಪುಣೆಯಿಂದ ವಾಸಿಂಗೆ ವರ್ಗಾವಣೆ ಮಾಡಿದ್ದ ಸುಹಾಸ್‌ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೂಜಾ ದೂರಿದ್ದಾರೆ. ಇನ್ನು ಮಹಿಳಾ ಪೊಲೀಸ್‌ ಪೇದೆ ಪೂಜಾ ಮನೆಗೆ ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ. ಇನ್ನು ಮನೆಗೆ ಪೊಲೀಸರು ಬಂದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದ ಪೂಜಾ, ಸ್ವಲ್ಪ ಕೆಲಸ ಇತ್ತು. ಹಾಗಾಗಿ ಪೊಲೀಸರನ್ನು ಮನೆಗೆ ಕರೆಸಿಕೊಂಡಿದ್ದೆ ಎಂದಿದ್ದರು. ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ ಅವರ ಒಂದೊಂದೇ ಕಳ್ಳಾಟಗಳು ಬಯಲಾಗುತ್ತಿವೆ.

ಇನ್ನು ಮಸೂರಿಯಲ್ಲಿರುವ ಲಾಲ್‌ ಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಸೇವಾ ಅಕಾಡೆಮಿ ಖೇಡ್ಕರ್‌ ಅವರನ್ನು ತರಬೇತಿ ಶಿಬಿರಕ್ಕೆ ಕರೆದು ಅವರ ತರಬೇತಿಯನ್ನು ತಡೆ ಹಿಡಿದಿರುವ ಬಗ್ಗೆ ಆದೇಶ ಹೊರಡಿಸಲಾಗಿದೆ. ಮಹಾರಾಷ್ಟ್ರದ ರಾಜ್ಯ ಸರ್ಕಾರದ ಜಿಲ್ಲಾ ತರಬೇತಿ ಕಾರ್ಯಕ್ರಮದಿಂದ “ನಿಮ್ಮನ್ನು ತರಬೇತಿಯಿಂದ ರಿಲೀವ್‌ ಮಾಡಲಾಗಿದೆ. ಆದಷ್ಟು ಬೇಗ ಅಕಾಡೆಮಿಗೆ ಬಂದು ಸೇರಿಕೊಳ್ಳಿ” ಎಂದು ಅಕಾಡೆಮಿ ಖೇಡ್ಕರ್‌ ಅವರಿಗೆ ಹೇಳಿದೆ.

ತಮ್ಮ ಖಾಸಗಿ ಕಾರಿಗೆ ‘ಕೆಂಪು ಗೂಟ’ ಅಳವಡಿಸಿದ್ದು ಸೇರಿ ಹಲವು ರೀತಿಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು, ವರ್ಗಾವಣೆಯ ಶಿಕ್ಷೆ ಅನುಭವಿಸುತ್ತಿರುವ ಪೂಜಾ ಖೇಡ್ಕರ್‌ ಅವರು ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ತಯಾರಿಸಿದ ಆರೋಪಗಳನ್ನೂ ಎದುರಿಸುತ್ತಿದ್ದಾರೆ.

ನಿಯಮಿತ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಪುಣೆಯಿಂದ (ಅಸಿಸ್ಟಂಟ್‌ ಕಲೆಕ್ಟರ್)‌ ವಾಶಿಂಗೆ ವರ್ಗಾವಣೆಗೊಂಡಿರುವ 34 ವರ್ಷದ ಅಧಿಕಾರಿಯು, ಒಬಿಸಿ ಜಾತಿ ಪ್ರಮಾಣಪತ್ರ ಲಗತ್ತಿಸಿ ಯುಪಿಎಸ್‌ಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದಾರೆ. ಆದರೆ, ಅವರು ಒಬಿಸಿ ಜಾತಿ ಪ್ರಮಾಣಪತ್ರದ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಇನ್ನು ವಿಶೇಷ ಚೇತನ ಎಂಬುದಾಗಿಯೂ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮೆಡಿಕಲ್‌ ಟೆಸ್ಟ್‌ ಪ್ರಕಾರ ಪೂಜಾ ಖೇಡ್ಕರ್‌ ಅವರು ಫಿಟ್‌ ಇದ್ದಾರೆ ಎಂದು ಹೇಳಲಾಗುತ್ತಿದೆ.‌ 2007ರಲ್ಲಿ ಅವರು ಎಂಬಿಬಿಎಸ್‌ಗೆ ಅರ್ಜಿ ಸಲ್ಲಿಸಿದಾಗ ದೈಹಿಕವಾಗಿ ಫಿಟ್‌ ಇರುವುದಾಗಿ ದಾಖಲೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಯಸ್ಸಿನ ಕುರಿತೂ ಸುಳ್ಳು ದಾಖಲೆ

ಜಾತಿ, ವಿಶೇಷ ಚೇತನ ಪ್ರಮಾಣಪತ್ರದ ಜತೆಗೆ ಪೂಜಾ ಖೇಡ್ಕರ್‌ ಅವರು ವಯಸ್ಸಿನ ಕುರಿತು ಕೂಡ ಸುಳ್ಳು ದಾಖಲೆ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2020ರಿಂದ 2023ರ ಅವಧಿಯಲ್ಲಿ ಅವರು ಸಲ್ಲಿಸಿದ ದಾಖಲೆಗಳ ಪ್ರಕಾರ, ಮೂರು ವರ್ಷದಲ್ಲಿ ಅವರ ವಯಸ್ಸು ದಾಖಲೆಯಲ್ಲಿ ಒಂದೇ ವರ್ಷ ಹೆಚ್ಚಾಗಿದೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ವಯಸ್ಸಿನ ಮಿತಿ ಇರುವ ಕಾರಣ ಅವರು ವಯಸ್ಸಿನ ಕುರಿತು ಕೂಡ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ತಿಳಿದುಬಂದಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ.

27 ಸಾವಿರ ರೂ. ದಂಡ ಬಿದ್ದಿದ್ದೇಕೆ?

ಅಧಿಕಾರದ ದುರುಪಯೋಗ, ನಕಲಿ ದಾಖಲೆ ಸೃಷ್ಟಿ ಜತೆಗೆ ಸಂಚಾರ ದಟ್ಟಣೆ ನಿಯಮಗಳ ಉಲ್ಲಂಘನೆಯಲ್ಲೂ ಮುಂದಿದ್ದಾರೆ. ವಾಶಿಂ ಮಹಿಳಾ ಪೊಲೀಸರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಪೂಜಾ ಖೇಡ್ಕರ್‌ ಅವರು ಎರಡು ತಾಸು ಚರ್ಚಿಸಿದ್ದಾರೆ. ಯಾವ ವಿಷಯದ ಕುರಿತು ಚರ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗದಿದ್ದರೂ, ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 27 ಸಾವಿರ ರೂ. ದಂಡ ವಿಧಿಸಲಾಗಿದ್ದು, ಅದರ ನೋಟಿಸ್‌ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Manorathangal Trailer: ಗಮನ ಸೆಳೆದ ʼಮನೋರಥಂಗಳ್‌ʼ ಟ್ರೈಲರ್‌; 8 ನಿರ್ದೇಶಕರ 9 ಎಪಿಸೋಡ್‌ನಲ್ಲಿ ಸ್ಟಾರ್‌ಗಳ ಸಮಾಗಮ

Continue Reading

ವಿದೇಶ

Muscat Terrorist Attack: ಮಸ್ಕತ್‌ನಲ್ಲಿ ಉಗ್ರರ ಅಟ್ಟಹಾಸ; ಭಾರತೀಯ ಸೇರಿ 9ಮಂದಿ ಸಾವು

Muscat Terrorist Attack: ಒಮಾನ್’ನ ಶಿಯಾ ಮುಸ್ಲಿಂ ಮಸೀದಿಯ ಮೇಲೆ ಸೋಮವಾರ ತಡರಾತ್ರಿ ನಡೆದ ದಾಳಿಯಲ್ಲಿ ಮೂವರು ದಾಳಿಕೋರರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಮತ್ತು ಒಬ್ಬ ಪೊಲೀಸ್ ಸೇರಿದ್ದಾರೆ ಎಂದು ಪಾಕಿಸ್ತಾನ ಮತ್ತು ಒಮಾನ್ ಅಧಿಕಾರಿಗಳು ತಿಳಿಸಿದ್ದಾರೆ

VISTARANEWS.COM


on

Muscat Terrorist Attack
Koo

ಮಸ್ಕತ್: ಒಮಾನ್‌(Oman)ನ ರಾಜಧಾನಿ ಮಸ್ಕತ್‌(Muscat Terrorist Attack)ನಲ್ಲಿರುವ ವಾದಿ ಕಬೀರ್ ಪ್ರದೇಶದ ಮಸೀದಿಯೊಂದರಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಭಾರತೀಯ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಒಮಾನ್’ನ ಶಿಯಾ ಮುಸ್ಲಿಂ ಮಸೀದಿಯ ಮೇಲೆ ಸೋಮವಾರ ತಡರಾತ್ರಿ ನಡೆದ ದಾಳಿಯಲ್ಲಿ ಮೂವರು ದಾಳಿಕೋರರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಮತ್ತು ಒಬ್ಬ ಪೊಲೀಸ್ ಸೇರಿದ್ದಾರೆ ಎಂದು ಪಾಕಿಸ್ತಾನ ಮತ್ತು ಒಮಾನ್ ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಸೇರಿದಂತೆ ವಿವಿಧ ರಾಷ್ಟ್ರಗಳ 28 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಮಾನ್‌ನಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿಯು ಗುಂಡಿನ ದಾಳಿಯನ್ನು ಖಂಡಿಸಿದೆ ಮತ್ತು ಸತ್ತ ಪಾಕಿಸ್ತಾನಿಗಳ ಪಾರ್ಥಿವ ಶರೀರವನ್ನು ಮರಳಿ ತರಲು ಒಮಾನಿ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: Sadananda Suvarna : ʼಗುಡ್ಡದ ಭೂತʼ ಖ್ಯಾತಿಯ ಹಿರಿಯ ರಂಗಕರ್ಮಿ, ನಿರ್ದೇಶಕ ಸದಾನಂದ ಸುವರ್ಣ ಇನ್ನಿಲ್ಲ

Continue Reading
Advertisement
Team India
ಪ್ರಮುಖ ಸುದ್ದಿ25 seconds ago

Team India : ಶ್ರೀಲಂಕಾ ಪ್ರವಾಸದ ಟಿ20 ಸರಣಿಗೆ ಹಾರ್ದಿಕ್ ಬದಲಿಗೆ ಸೂರ್ಯಕುಮಾರ್ ನಾಯಕ

Ananth Ambani Wedding
ದೇಶ22 mins ago

Anant Ambani Wedding: ಅನಂತ್‌ ಅಂಬಾನಿ ಮದುವೆಯಲ್ಲಿ ಬಾಂಬ್‌ ಸ್ಫೋಟಕ್ಕೆ ನಡೆದಿತ್ತಾ ಸಂಚು? ಕಿಡಿಗೇಡಿ ಅರೆಸ್ಟ್‌

Yuvraj Singh
ಕ್ರೀಡೆ32 mins ago

Yuvraj Singh : ಅಂಗವಿಕಲರಂತೆ ರೀಲ್ಸ್​ ಮಾಡಿದ ಯುವರಾಜ್​, ಹರ್ಭಜನ್​ ಸಿಂಗ್ ವಿರುದ್ಧ ದೂರು ದಾಖಲು

Mosaic of Modernity art exhibition by Gallery G in Bengaluru
ಕರ್ನಾಟಕ1 hour ago

Bengaluru News: ಬೆಂಗಳೂರಿನಲ್ಲಿ ಗ್ಯಾಲರಿ ಜಿ ಯಿಂದ ‘ಮೊಸಾಯಿಕ್ ಆಫ್ ಮಾಡರ್ನಿಟಿ’ ಕಲಾ ಪ್ರದರ್ಶನ

Viral Video
ವೈರಲ್ ನ್ಯೂಸ್1 hour ago

Viral Video: ಪಕ್ಷದ ಕಾರ್ಯಕರ್ತನಿಗೆ ರಪ್‌ ಅಂತಾ ಕೆನ್ನೆಗೆ ಬಾರಿಸಿದ ಟಿಎಂಸಿ ನಾಯಕಿ; ವಿಡಿಯೋ ಇದೆ

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : 30 ಎಸೆತಕ್ಕೆ 30 ರನ್​ ಇದ್ದಾಗ ದಿಕ್ಕೇ ತೋಚದಂತಾಗಿದ್ದೆ! ಆ ತಲ್ಲಣ ವಿವರಿಸಿದ ಶರ್ಮಾ

Assembly Session
ಕರ್ನಾಟಕ2 hours ago

Assembly Session: ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದ ಡಿಕೆಶಿ!

A 15 year old boy weighing 111 kg underwent successful spinal disc surgery that avoided potential paralysis
ಕರ್ನಾಟಕ2 hours ago

Fortis Hospital: 111 ಕೆಜಿ ತೂಕವಿದ್ದ ಬಾಲಕನಿಗೆ ಪಾರ್ಶ್ವವಾಯು ತಪ್ಪಿಸಿದ ʼಬೆನ್ನೆಲುಬಿನ ಡಿಸ್ಕ್ʼ ಶಸ್ತ್ರಚಿಕಿತ್ಸೆ

Pooja Khedkar
ದೇಶ2 hours ago

Pooja Khedkar: ಪೂಜಾ ಖೇಡ್ಕರ್‌ ಪುಣೆ ಜಿಲ್ಲಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

Larva survey Show the old photo without GPS and get crores of rupees to the government Cheating Alleged by MLC TA Sharavana
ಕರ್ನಾಟಕ2 hours ago

Assembly Session: ಲಾರ್ವಾ ಸರ್ವೇ; ಜಿಪಿಎಸ್ ಇಲ್ಲದ ಹಳೆ ಫೋಟೋ ತೋರಿಸಿ ಕೋಟ್ಯಂತರ ರೂ. ಮೋಸ; ಶರವಣ ಆರೋಪ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ11 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ12 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌