Kannada New Movie: ವಸಿಷ್ಠ ಸಿಂಹ ಅಭಿನಯದ "Love ಲಿ" ಸಿನಿಮಾಕ್ಕೆ 25 ದಿನಗಳ ಸಂಭ್ರಮ - Vistara News

ಕರ್ನಾಟಕ

Kannada New Movie: ವಸಿಷ್ಠ ಸಿಂಹ ಅಭಿನಯದ “Love ಲಿ” ಸಿನಿಮಾಕ್ಕೆ 25 ದಿನಗಳ ಸಂಭ್ರಮ

Kannada New Movie: ಅಭುವನಸ ಕ್ರಿಯೇಷನ್ಸ್ ಲಾಂಛನದಲ್ಲಿ ರವೀಂದ್ರ ಕುಮಾರ್ ಅವರು ನಿರ್ಮಿಸಿರುವ, ಚೇತನ್ ಕೇಶವ್ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯ ಹಾಗೂ ಕಂಠದಿಂದ ಜನಮನಸೂರೆಗೊಂಡಿರುವ ವಸಿಷ್ಠ ಸಿಂಹ ನಾಯಕರಾಗಿ ನಟಿಸಿರುವ “Love ಲಿ” ಚಿತ್ರ ಬಿಡುಗಡೆಯಾಗಿ 25 ದಿನಗಳಾಗಿದ್ದು, ಪ್ರಸ್ತುತ ಕರ್ನಾಟಕದ 30ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ‌.

VISTARANEWS.COM


on

Vasishtha Simha starring Love Li Kannada movie celebrating 25 days
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಭುವನಸ ಕ್ರಿಯೇಷನ್ಸ್ ಲಾಂಛನದಲ್ಲಿ ರವೀಂದ್ರ ಕುಮಾರ್ ಅವರು ನಿರ್ಮಿಸಿರುವ, ಚೇತನ್ ಕೇಶವ್ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯ ಹಾಗೂ ಕಂಠದಿಂದ ಜನಮನಸೂರೆಗೊಂಡಿರುವ ವಸಿಷ್ಠ ಸಿಂಹ ನಾಯಕರಾಗಿ ನಟಿಸಿರುವ “Love ಲಿ” ಚಿತ್ರ ಬಿಡುಗಡೆಯಾಗಿ 25 ದಿನಗಳಾಗಿದ್ದು, ಪ್ರಸ್ತುತ ಕರ್ನಾಟಕದ 30ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ (Kannada New Movie) ಕಾಣುತ್ತಿದೆ‌. ಈ ಸಂದರ್ಭದಲ್ಲಿ ಸಮಾರಂಭ ಆಯೋಜಿಸಿದ್ದ ನಿರ್ಮಾಪಕರು ಚಿತ್ರತಂಡದ ಸದಸ್ಯರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

ನಮ್ಮ ಚಿತ್ರವನ್ನು ಮೊದಲಿನಿಂದಲೂ ಪ್ರೋತ್ಸಾಹಿಸುತ್ತಾ ಬಂದಿರುವ ಮಾಧ್ಯಮದವರಿಗೆ ಹಾಗೂ ಚಿತ್ರ ನೋಡಿ ಹಾರೈಸುತ್ತಿರುವ ಪ್ರೇಕ್ಷಕರಿಗೆ ಧನ್ಯವಾದ ಎಂದು ತಿಳಿಸಿದ ನಾಯಕ ವಸಿಷ್ಠ ಸಿಂಹ, ಜೂನ್ ತಿಂಗಳು ನಮಗೆ ಮಾರಕವಾಯಿತು ಎಂದರೆ ತಪ್ಪಾಗಲಾರದು. ನಮ್ಮ ಚಿತ್ರ ಬಿಡುಗಡೆ ಸಮಯದಲ್ಲಿ ಒಂದಲ್ಲಾ ಒಂದು ಸಮಸ್ಯೆ ಎದುರಾಯಿತು. ಆ ಸಮಸ್ಯೆಗಳ ನಡುವೆ ನಮ್ಮ ಚಿತ್ರ ತೆರೆ ಕಂಡಿತ್ತು. ಚೇತನ್ ಕೇಶವ ಅವರ ಮೊದಲ ನಿರ್ದೇಶನದಲ್ಲೇ ಜನರ ಮನಸ್ಸಿಗೆ ಹತ್ತಿರವಾಗಿದ್ದಾರೆ. ಚಿತ್ರ ನೋಡಿದವರು ಕಥೆಯನ್ನು ಮೆಚ್ಚಿಕೊಂಡಿದ್ದಾರೆ‌. ಇಷ್ಟೆಲ್ಲದರ ನಡುವೆ ನಾವು ನಿರೀಕ್ಷಿಸಿದಷ್ಟು ಜನ ಬರುತ್ತಿಲ್ಲ ಎಂಬ ಬೇಸರ ಚಿತ್ರತಂಡಕ್ಕಿದೆ‌. ದಯವಿಟ್ಟು ಕನ್ನಡ ಚಿತ್ರಗಳನ್ನು ಹೆಚ್ಚು ಪ್ರೋತ್ಸಾಹಿಸಿ. ಈಗಾಗಲೇ ಚಿತ್ರ ನೋಡಿರುವವರಿಗೆ ಧನ್ಯವಾದ. ನೋಡದೇ ಇರುವವರು ಈಗಲೇ ನೋಡಿ ಎಂದರು‌‌.

ಇದನ್ನೂ ಓದಿ: PM Modi Russia Visit : ಭಾರತ-ರಷ್ಯಾ ಇಂಧನ ಪಾಲುದಾರಿಕೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಮೊದಲು ನಮ್ಮ ಚಿತ್ರ ಇಪ್ಪತ್ತೈದು ದಿನ ಪೂರೈಸಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ. ನಮ್ಮ ಚಿತ್ರ ನೋಡಿದವರಿಗೆ ತುಂಬಾ ಇಷ್ಟವಾಗಿದೆ‌. ಆದರೆ ಇಲ್ಲಿನ ಜನ ಬೇರೆ ಭಾಷೆಗಳ ಚಿತ್ರಗಳಿಗೆ ನೀಡುವ ಪ್ರೋತ್ಸಾಹವನ್ನು ನಮ್ಮ ಕನ್ನಡ ಚಿತ್ರಗಳಿಗೆ ನೀಡುವುದಿಲ್ಲ ಎಂಬ ಬೇಸರ ಬಹಳ ಇದೆ. ದಯಮಾಡಿ ಕರ್ನಾಟಕದ ಜನರು ಕನ್ನಡ ಚಿತ್ರಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ. ಒಬ್ಬ ನಿರ್ಮಾಪಕ ಗೆದ್ದರೆ, ಅದರಿಂದ ಬಂದ ಹಣವನ್ನು ಮತ್ತೊಂದು ಚಿತ್ರಕ್ಕೆ ಹಾಕುತ್ತಾನೆ. ಅದರಿಂದ ಸಾಕಷ್ಟು ಜನರಿಗೆ ಉದ್ಯೋಗ ಸಿಗುತ್ತದೆ ಎಂದು ಕಾರ್ಯಕಾರಿ ನಿರ್ಮಾಪಕರಾದ ಬಾಲಕೃಷ್ಣ ಹಾಗೂ ಕೃಷ್ಣ ತಿಳಿಸಿದರು.

“ಮಫ್ತಿ” ಚಿತ್ರದ ನಿರ್ದೇಶಕ ನರ್ತನ್, ಪ್ರಶಾಂತ್ ನೀಲ್ ಅಂತಹವರ ಬಳಿ ಕೆಲಸ ಮಾಡಿ ಬಂದಿರುವ ನನಗೆ ಇದು ಮೊದಲ ನಿರ್ದೇಶನ ಚಿತ್ರ. ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಚಿತ್ರ ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈ ಚಿತ್ರದ ಮೂಲಕ ಈಡೇರಿದೆ‌. ಜನ ಚಿತ್ರದ ಬಗ್ಗೆ ಪ್ರಶಂಸೆಯ ಮಾತುಗಳಾಡುತ್ತಿರುವುದಕ್ಕೆ ಖುಷಿಯಿದೆ‌. ಆದರೆ ಎಲ್ಲರೂ ಹೇಳಿದಂತೆ ನಿರೀಕ್ಷಿಸಿದಷ್ಟು ಜನರು ಚಿತ್ರ ನೋಡಿಲ್ಲ ಎಂಬ ಬೇಸರ ನನಗೂ ಇದೆ. ನಮ್ಮ ಚಿತ್ರವನ್ನು ಹೆಚ್ಚಿನ ಜನರು ನೋಡಿ ಎಂದರು ನಿರ್ದೇಶಕ ಚೇತನ್ ಕೇಶವ್.

ಇದನ್ನೂ ಓದಿ: Sugar Eating: ನಾವು ತಿನ್ನುವ ಸಕ್ಕರೆ ಪ್ರಮಾಣ ಅತಿಯಾಗುತ್ತಿದೆ ಅನ್ನೋದನ್ನ ತಿಳಿಯೋದು ಹೇಗೆ?

ನಾಯಕಿ ಸ್ಟೆಫಿ ಪಟೇಲ್ ಕನ್ನಡದಲ್ಲಿ ಎಲ್ಲರಿಗೂ ಧನ್ಯವಾದ ತಿಳಿಸಿದರು. ಚಿತ್ರದಲ್ಲಿ ನಟಿಸಿರುವ ಹಿರಿಯ ನಟ ದತ್ತಣ್ಣ, ಕಾಕ್ರೋಜ್ ಸುಧೀ, ಶೇಖರ್, ವರ್ಧನ್, ಬೇಬಿ ವಂಶಿಕ, ಸಂಗೀತ ನಿರ್ದೇಶಕ ಅನೂಪ್ ಸೀಳಿನ್, ಹಾಡು ಬರೆದಿರುವ ಪ್ರಮೋದ್ ಮರವಂತೆ, ಛಾಯಾಗ್ರಾಹಕ ಅಶ್ವಿನ ಕೆನ್ನೆಡಿ ಹಾಗೂ ಸಂಕಲನಕಾರ ಹರೀಶ್ ಕೊಮ್ಮೆ, ಸೌಂಡ್ ಡಿಸೈನರ್ ಅಭಿನಂದನ್ ಸೇರಿದಂತೆ ಅನೇಕರು ಚಿತ್ರದ ಕುರಿತು ಮಾತನಾಡಿದರು. ಸಮಾರಂಭದಲ್ಲಿ ನಿರ್ದೇಶಕ ಮಹೇಶ್ ಕುಮಾರ್ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assembly Session: ಲೂಟಿಕೋರರ ಪಿತಾಮಹ ನೀನು: ಸದನದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಕೆಶಿ!

Assembly Session: ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ನಂತರ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Assembly Session
Koo

ಬೆಂಗಳೂರು: ವಿಧಾನಮಂಡಲದ ಅಧಿವೇಶನದಲ್ಲಿ (Assembly Session) ಎರಡನೇ ದಿನವಾದ ಮಂಗಳವಾರವೂ ವಾಲ್ಮೀಕಿ ನಿಗಮದ ಹಗರಣವು (Valmiki Corporation Scam) ಸದ್ದು ಮಾಡಿದೆ. ಚರ್ಚೆಯ ವೇಳೆ ಸಿಎಂ ಸಿದ್ದರಾಮಯ್ಯ (CM Siddaramaiah) ಗೈರುಹಾಜರಿಯನ್ನು ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥ್‌ ನಾರಾಯಣ್‌ (Ashwath narayan) ಆಕ್ಷೇಪಿಸಿದರು. ಈ ವೇಳೆ ʼಲೂಟಿಕೋರರ ಪಿತಾಮಹʼ ನೀನು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿರುವುದು ಕಂಡುಬಂದಿದೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ನಂತರ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಚರ್ಚೆ ಮೇಲಿನ ಪ್ರಸ್ತಾಪ ಮುಂದುವರಿಸಲು ಮುಂದಾದರು. ಈ ವೇಳೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಹಗಲು ದರೋಡೆ ಮಾಡಿರುವ ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ಅವರು ಸದನಕ್ಕೆ ಹಾಜರಾಗಬೇಕು ಎಂದು ಪಟ್ಟು ಹಿಡಿದರು.

ಅಶೋಕ್ ಚರ್ಚೆ ಮಾಡುವಾಗ ಸಿಎಂ ಸಿದ್ದರಾಮಯ್ಯ ಗೈರಾದ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಅಶ್ವತ್ಥ್‌ ನಾರಾಯಣ್, ನೇರವಾಗಿ ಇದು ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರ. ಹಣಕಾಸು ಸಚಿವರಾಗಿರೋ ಸಿಎಂ ಮೇಲೆ ಗಂಭೀರ ಆರೋಪ ಇದೆ. ಕೂಡಲೇ ಅವರನ್ನು ಕರೆಸಿ ಅಂತ ಆಗ್ರಹಿಸಿದರು. ಈ ವೇಳೆ ಸದನದಲ್ಲಿ ಎದ್ದು ನಿದ್ದು ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದ ಡಿಸಿಎಂ ಡಿಕೆಶಿ, ಸಿಎಂಗೆ ಗೌರವ ಕೊಡೋದನ್ನು ಕಲಿಯಿರಿ ಅಂತ ಆಕ್ರೋಶ ಹೊರಹಾಕಿದರು. ಈ ವೇಳೇ ಲೂಟಿಕೋರರ ಪಿತಾಮಹ ನೀನು ಅಂತ ಅಶ್ವತ್ಥ್‌ ನಾರಾಯಣ್ ಕಡೆ ಬೊಟ್ಟು ಮಾಡಿ ಕಿಡಿಕಾರಿದರು. ಈ ವೇಳೆ ಡಿಸಿಎಂ ವಿರುದ್ಧ ಮುಗಿಬಿದ್ದ ಬಿಜೆಪಿ ಶಾಸಕರು, ನೀವೇನು ಎಂಬುವುದು ಎಲ್ಲರಿಗೂ ಗೊತ್ತಿದೆ ಅಂತ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ | Lakshmi Hebbalkar: ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಹೆಬ್ಬಾಳಕರ್ ಭರವಸೆ

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, ಸಿದ್ದರಾಮಯ್ಯ ಅವರು ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ವಿಷಯದ ಚರ್ಚೆಗೆ ಪ್ರಸ್ತಾಪ ಮಾಡಿದಾಗೆಲ್ಲ ಬಿಜೆಪಿಯ ಮುಖ್ಯಮಂತ್ರಿಗಳು ಸದನದಲ್ಲಿ ಹಾಜರಿರುತ್ತಿದ್ದರೇ? ಅವರು ಗೈರಾಗಿರಲಿಲ್ಲವೇ? ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಶ್ವತ್ಥ್ ನಾರಾಯಣ ಅವರು ಮಾಡಬಾರದನ್ನು ಮಾಡಿರುವುದಕ್ಕೇ ಜನ ನಮ್ಮನ್ನು ಇಲ್ಲಿ ಕೂರಿಸಿ, ನಿಮ್ಮನ್ನು ಅಲ್ಲಿ ಕೂರಿಸಿ ತೀರ್ಪು ಕೊಟ್ಟಿದ್ದಾರೆ” ಎಂದು ಹರಿಹಾಯ್ದರು.

“ನನ್ನ ಹೆಸರು ಹೇಳಿ ಆಪಾದನೆ ಮಾಡಲಾಗಿದೆ, ಸಾಕ್ಷಿ ನೀಡಬೇಕು” ಎಂದು ಅಶ್ವತ್ಥ್ ನಾರಾಯಣ ಹೇಳಿದಾಗ “ಮಾಡಬಾರದ್ದು ಮಾಡಿರುವ ನಿಮ್ಮದನ್ನು ತೆಗೆಯುತ್ತೇವೆ, ಮಾತನಾಡುತ್ತೇವೆ ತಡೆಯಿರಿ” ಎಂದು ಗುಡುಗಿದರು.

“ನನ್ನ ವಿರುದ್ದ ಮಾಡಿದ ಆಪಾದನೆ ಹಿಟ್ ಆ್ಯಂಡ್ ರನ್” ಎಂದು ಅಶ್ವತ್ಥ್ ನಾರಾಯಣ ಗದ್ದಲ ಎಬ್ಬಿಸಿದಾಗ “ರಾಮನಗರದ ಕಸ ಗುಡಿಸುತ್ತೇನೆ ಎಂದು ಹೇಳಿದ ನಿಮಗೆ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಒಂದು ಸೀಟು ಗೆಲ್ಲಲು ಆಗಲಿಲ್ಲ” ಎಂದು ಡಿಸಿಎಂ ಕುಟುಕಿದರು.

ಮುಂದುವರಿದು “ಇಷ್ಟು ಹೊತ್ತಿನ ತನಕ ಮುಖ್ಯಮಂತ್ರಿಗಳು ಕುಳಿತಿರಲಿಲ್ಲವೇ? ಸದನದಲ್ಲಿ ನಾವೆಲ್ಲಾ ಕುಳಿತಿಲ್ಲವೇ? ಮುಖ್ಯಮಂತ್ರಿಗಳ ಮೇಲೆ ಆರೋಪವಿದೆ ಎಂದು ಹೇಗೆ ಹೇಳುತ್ತಾರೆ ಇವರು?” ಎಂದು ಬಿಜೆಪಿ ಶಾಸಕರ ಮೇಲೆ ಡಿಸಿಎಂ ಮುಗಿಬಿದ್ದರು. ʼ ಈ ರೀತಿ ಯಾರ ಹೆಸರನ್ನು ಬೇಕಾದರೂ ನಾವು ಬಳಸಿಕೊಳ್ಳಬಹುದೇ” ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಹೇಳಿದಾಗ “ಇವರು (ಅಶ್ವತ್ಥ್ ನಾರಾಯಣ) ಮುಖ್ಯಮಂತ್ರಿಗಳ ಹೆಸರನ್ನು ಹೇಗೆ ಬಳಸಿಕೊಂಡರು? ಎಂದು ಕಟುವಾಗಿ ಮರುಪ್ರಶ್ನಿಸಿದರು.

ಶಿವಕುಮಾರ್ ಅವರ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಶಾಸಕರು ಗದ್ದಲ ಮಾಡಿದಾಗ ಕಲಾಪವನ್ನು ಮುಂದೂಡಲಾಯಿತು. “ಎಸ್ಐಟಿ ಎಂದರೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಎಂದು ಶಾಸಕ ಸುರೇಶ್ ಕುಮಾರ್ ಹೇಳಿದ್ದಾರೆ, ಇದನ್ನು ಸಹ ಕಡತದಿಂದ ತೆಗೆದುಹಾಕಬೇಕು” ಎಂದು ಡಿಸಿಎಂ ಅವರು ಸ್ವೀಕರ್ ಗೆ ಮನವಿ ಮಾಡಿದರು.

ಇದನ್ನೂ ಓದಿ | D. S. Veeraiah: ಅರಸು ಟ್ರಕ್ ಟರ್ಮಿನಲ್ ಹಗರಣ;‌ ಡಿ.ಎಸ್‌.ವೀರಯ್ಯಗೆ ಜು.30ರವರೆಗೆ ನ್ಯಾಯಾಂಗ ಬಂಧನ

ಇದೇ ವೇಳೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ “ ನಾನು ಸ್ಪೀಕರ್ ಅವರ ಬಳಿ ಮನವಿ ಮಾಡುತ್ತಿದ್ದೇನೆ. ನನಗೂ ಈ ಸದನದ ಕಾನೂನು ಗೊತ್ತಿದೆ” ಎಂದಾಗ, “ನೀವು ಸಿಬಿಐ ಬಗ್ಗೆ ಹೇಳಿದ್ದೀರಲ್ಲ” ಎಂದು ವಿಪಕ್ಷ ನಾಯಕ ಅಶೋಕ್ ಹೇಳಿದರು. “ಮೊದಲು ಹೇಳಿದವರು ನೀವು ಮತ್ತು ದೇವೇಗೌಡರು” ಎಂದು ಶಿವಕುಮಾರ್ ಅವರು ತಿರುಗೇಟು ಕೊಟ್ಟರು.

Continue Reading

ಕೊಪ್ಪಳ

Koppala News: ಕನಕಗಿರಿಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Koppala News: ಕನಕಗಿರಿ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವ-ಸಹಾಯ ಗುಂಪಿನ ಸದಸ್ಯರಿಗೆ ಹಮ್ಮಿಕೊಳ್ಳಲಾಗಿದ್ದ ಆರು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ ನಡೆಯಿತು.

VISTARANEWS.COM


on

Entrepreneurship Development Training Concluding Ceremony at Kanakagiri
Koo

ಕನಕಗಿರಿ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವ-ಸಹಾಯ ಗುಂಪಿನ ಸದಸ್ಯರಿಗೆ ಹಮ್ಮಿಕೊಳ್ಳಲಾಗಿದ್ದ ಆರು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ (Koppala News) ನಡೆಯಿತು.

ಇದನ್ನೂ ಓದಿ: KSRTC Package Tour: ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌; ದರವೆಷ್ಟು?

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಕೊಪ್ಪಳ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜಶೇಖರ್‌ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

ಈ ಸಂಧರ್ಭದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ಮಾರೆಪ್ಪ ಎನ್‌., ತಾಲೂಕಿನ ವಲಯ ಮೇಲ್ವೀಚಾರಕಿ ರೇಣುಕಾ ಕೆ ದೇವರಮನಿ, ಸಿಡಾಕ್‌ ಸಂಸ್ಥೆಯ ತರಬೇತಿ ಸಂಯೋಜಕರಾದ ಅಕ್ಷತಾ ಮತ್ತು ಶೋಭಾ, ಸಂಜೀವಿನಿ ಯೋಜನೆಯ ಬಿಆರ್‌ಪಿ ಇಪಿ ಮತ್ತು ಉದ್ಯಮಶೀಲತಾ ತರಬೇತಿಗೆ ಹಾಜರಾದ ಸ್ವ ಸಹಾಯ ಗುಂಪಿನ ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು.

Continue Reading

ತುಮಕೂರು

Shira News: ಶಿರಾದಲ್ಲಿ ಫುಟ್‌ಪಾತ್‌ಗಳ ತೆರವು ಕಾರ್ಯಾಚರಣೆ

Shira News: ಶಿರಾ ನಗರದ ವಿವಿಧೆಡೆ ಫುಟ್‌ಪಾತ್‌ ಆಕ್ರಮಿಸಿಕೊಂಡು ವ್ಯಾಪಾರ-ವಹಿವಾಟು ನಡೆಸುತ್ತಿದ್ದ ಅಂಗಡಿ-ಮುಂಗಟ್ಟುಗಳ ತೆರವು ಕಾರ್ಯಾಚರಣೆಯು ಮಂಗಳವಾರ ಬೆಳಿಗ್ಗೆ ಶಿರಾ ಉಪ ವಿಭಾಗ ಡಿವೈಎಸ್ಪಿ ಬಿ.ಕೆ. ಶೇಖರ್‌ ನೇತೃತ್ವದಲ್ಲಿ ನಡೆಯಿತು.

VISTARANEWS.COM


on

Clearance of footpaths in Shira
Koo

ಶಿರಾ: ನಗರದ ವಿವಿಧೆಡೆ ಫುಟ್‌ಪಾತ್‌ ಆಕ್ರಮಿಸಿಕೊಂಡು ವ್ಯಾಪಾರ-ವಹಿವಾಟು ನಡೆಸುತ್ತಿದ್ದ ಅಂಗಡಿ-ಮುಂಗಟ್ಟುಗಳ ತೆರವು ಕಾರ್ಯಾಚರಣೆಯು ಮಂಗಳವಾರ ಬೆಳಗ್ಗೆ ಶಿರಾ ಉಪ ವಿಭಾಗ ಡಿವೈಎಸ್ಪಿ ಬಿ. ಕೆ. ಶೇಖರ್‌ ನೇತೃತ್ವದಲ್ಲಿ (Shira News) ನಡೆಯಿತು.

ಶಿರಾ ಉಪ ವಿಭಾಗ ಡಿವೈಎಸ್ಪಿ ಬಿ.ಕೆ. ಶೇಖರ್‌ ಅವರ ನೇತೃತ್ವದಲ್ಲಿ ಶಿರಾ ನಗರ ಠಾಣೆಯ ಸಿಬ್ಬಂದಿ ತೆರವು ಕಾರ್ಯಾಚರಣೆ ಕೈಗೊಂಡು ರಸ್ತೆ ಬದಿಯ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ, ಪಾದಾಚಾರಿಗಳು ಸೇರಿದಂತೆ ದ್ವಿಚಕ್ರ ವಾಹನಗಳ ನಿಲುಗಡೆಗೆ ತೀವ್ರ ತೊಂದರೆ ಅನುಭವಿಸುವಂತಾಗಿತ್ತು.

ಇದನ್ನೂ ಓದಿ: KSRTC Package Tour: ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌; ದರವೆಷ್ಟು?

ನಗರದ ಖಾಸಗಿ ಬಸ್‌ ನಿಲ್ದಾಣ ಮುಂಭಾಗ, ಸಾರ್ವಜನಿಕ ಆಸ್ಪತ್ರೆ ಮುಂಭಾಗ, ಪಶು ಆಸ್ಪತ್ರೆ, ಬುಕ್ಕಾಪಟ್ಟಣ ರಸ್ತೆಯ ಬಳಿ ಹಾಗೂ ಇತರೆಡೆ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ, ವ್ಯಾಪಾರ-ವಹಿವಾಟು ನಡೆಸಲಾಗುತ್ತಿತ್ತು. ಇದರಿಂದಾಗಿ ಪ್ರತಿನಿತ್ಯ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಮಂಗಳವಾರ ತೆರವು ಕಾರ್ಯಾಚರಣೆ ನಡೆಯಿತು. ಹಣ್ಣು ಮತ್ತು ಹೂ, ತರಕಾರಿ ವ್ಯಾಪಾರ ಮಾಡಲು ಇರಿಸಲಾಗಿದ್ದ ಪೆಟ್ಟಿಗೆ ಅಂಗಡಿಗಳು ಸೇರಿದಂತೆ ಇತರೆ ವ್ಯಾಪಾರ ಚಟುವಟಿಕೆಗಳನ್ನು ಈ ವೇಳೆ ತೆರವು ಕಾರ್ಯಾಚರಣೆ ನಡೆಸಲಾಯಿತು.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

ಈ ವೇಳೆ ವ್ಯಾಪಾರಿಗಳಿಗೆ ಫುಟ್‌ಪಾತ್‌ ಮೇಲೆ ವ್ಯಾಪಾರ-ವಹಿವಾಟು ನಡೆಸದಂತೆ ಹಾಗೂ ನಿಗದಿತ ಸ್ಥಳಗಳಲ್ಲಿ ವ್ಯಾಪಾರ ನಡೆಸುವಂತೆ ಸೂಚನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಿರಾ ನಗರ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ನಾಳೆಗೂ ಮಳೆ ಮುನ್ನೆಚ್ಚರಿಕೆ; ಸೆ.30ರವರೆಗೆ ಈ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್‌ ನಿಷೇಧ

Karnataka Weather Forecast : ಬುಧವಾರವೂ ಗುಡುಗು ಸಹಿತ ಭಾರಿ ಮಳೆಯಾಗುವ (Heavy rain alert) ಸಾಧ್ಯತೆ ಇದೆ. ಚಿಕ್ಕಮಗಳೂರಿನಲ್ಲಿ ಅಬ್ಬರಿಸುತ್ತಿರುವ ಮಳೆ ಕಾರಣಕ್ಕೆ ಎರಡೂವರೆ ತಿಂಗಳು ಕೆಲವು ಪ್ರವಾಸಿತಾಣಗಳಿಗೆ ಟ್ರಕ್ಕಿಂಗ್‌ ನಿಷೇಧಿಸಲಾಗಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು (karnataka Weather Forecast) ಸಕ್ರಿಯವಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯು (Heavy Rain Alert) ಅಬ್ಬರಿಸುತ್ತಿದ್ದು, ಆಗುಂಬೆ 33, ಅಂಕೋಲಾ 26, ಕಾರವಾರ 23, ಹಾಗೂ ಗೇರ್ಸೊಪ್ಪ 21 ಸೆಂ.ಮೀ ಮಳೆಯಾಗಿದೆ. ಇನ್ನೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 30ರವರೆಗೆ ಚಾರಣಕ್ಕೆ ನಿಷೇಧಿಸಲಾಗಿದೆ.

ಚಿಕ್ಕಮಗಳೂರಿನ ಬಲ್ಲಾಳ ರಾಯನ ದುರ್ಗ, ರಾಣಿಝರಿ, ಬಂಡಾಜೆ ಫಾಲ್ಸ್ ಟ್ರಕ್ಕಿಂಗ್‌ಗೆ ನಿರ್ಬಂಧ ಹಾಕಲಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಳಗೊಂಡಿದೆ. ಪ್ರವಾಸಿಗರು ಚಾರಣದ ವೇಳೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಪ್ರವಾಸಿಗರ ಹಿತದೃಷ್ಟಿಯಿಂದ ಮೂಡಿಗೆರೆ ತಾಲೂಕಿನ ಬಲ್ಲಾಳ ರಾಯನ ದುರ್ಗ ಪ್ರವಾಸಿ ತಾಣ, ಕಳಸ ತಾಲೂಕಿನ ಬಂಡಾಜೆ ಫಾಲ್ಸ್‌ಗೆ ಕೊಪ್ಪ ವಿಭಾಗದ ಅರಣ್ಯ ಇಲಾಖೆ ಈ ಕ್ರಮಕೈಗೊಂಡಿದೆ.

ಇದನ್ನೂ ಓದಿ: Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

ಶಿವಮೊಗ್ಗದಲ್ಲಿ ಕುಸಿದು ಬಿದ್ದ ಮನೆ

ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮನೆಯೊಂದು ಕುಸಿದು ಬಿದ್ದಿದೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಕುಸ್ಕೂರು ಗ್ರಾಮದಲ್ಲಿ ಘಟನೆ ನಡೆದಿದೆ. ಮಂಜಾನಾಯ್ಕ ಎಂಬುವವರಿಗೆ ಸೇರಿದ ಮನೆ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮನೆಯಲ್ಲಿದ್ದ ಗೃಹ ಬಳಕೆ ವಸ್ತುಗಳು ನೀರುಪಾಲಾಗಿವೆ.

ಉಡುಪಿಯಲ್ಲಿ ಮಳೆಗೆ ಉಕ್ಕಿ ಹರಿದ ಬ್ರಹ್ಮಾವರ ಮಡಿಸಾಲು ಹೊಳೆ

ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆಗೆ ಬ್ರಹ್ಮಾವರ ಮಡಿಸಾಲು ಹೊಳೆ ಉಕ್ಕಿ ಹರಿದಿದೆ. ಇದರಿಂದಾಗಿ ಆರೂರು ಬೆಳ್ಮಾರು ನೆರೆ ಹಾವಳಿ ಸೃಷ್ಟಿಯಾಗಿದೆ. ನೂರಾರು ಎಕರೆ ಕೃಷಿ ಭೂಮಿ ನೆರೆ ನೀರಿನಲ್ಲಿ ಮುಳುಗಿ ನಷ್ಟವಾಗಿದೆ. ಮಂಗಳವಾರ ಮಧ್ಯಾಹ್ನದ ನಂತರ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿದೆ. ಆದರೂ ಘಟ್ಟ ಪ್ರದೇಶದಿಂದ ಹರಿದು ಬರುತ್ತಿರುವ ನೀರಿನಿಂದಾಗಿ ನೆರೆ ಸೃಷ್ಟಿಯಾಗುತ್ತಿದೆ.

ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ

ಮುಂದಿನ 24 ಗಂಟೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಜತೆಗೆ ನಿರಂತರ ಗಾಳಿಯ ವೇಗವು 40-50 ಕಿಮೀ ಇರಲಿದೆ. ಒಳನಾಡಿನ ಬೆಳಗಾವಿ ಮತ್ತು ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Paris Olympics 2024
ಪ್ರಮುಖ ಸುದ್ದಿ17 mins ago

Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Dog Ethnicwear
ಫ್ಯಾಷನ್21 mins ago

Dog Ethnicwear: ನಾಯಿಗಳಿಗೂ ಬಂತು ಎಥ್ನಿಕ್‌ ವೇರ್ಸ್! ಎಷ್ಟು ಮುದ್ದಾಗಿ ಕಾಣಿಸುತ್ತಿವೆ!

SIM Cards
ಗ್ಯಾಜೆಟ್ಸ್27 mins ago

SIM Cards: ಮಿತಿ ಮೀರಿ ಮೊಬೈಲ್‌ ಸಿಮ್ ಹೊಂದಿದ್ದೀರಾ? ಕಾದಿದೆ ಭಾರಿ ದಂಡ, ಶಿಕ್ಷೆ!

Assembly Session
ಕರ್ನಾಟಕ31 mins ago

Assembly Session: ಲೂಟಿಕೋರರ ಪಿತಾಮಹ ನೀನು: ಸದನದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಕೆಶಿ!

Ananth Ambani Fashion
ಫ್ಯಾಷನ್42 mins ago

Ananth Ambani Fashion: ಅನಂತ್‌ ಅಂಬಾನಿ ಬಳಿ ಇದೆ ಡೈಮಂಡ್‌ ಬ್ರೂಚ್‌ಗಳ ಕಲೆಕ್ಷನ್‌! ಇವುಗಳ ಮೌಲ್ಯ ಎಷ್ಟಿರಬಹುದು?

Entrepreneurship Development Training Concluding Ceremony at Kanakagiri
ಕೊಪ್ಪಳ48 mins ago

Koppala News: ಕನಕಗಿರಿಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Pooja Khedkar
ದೇಶ50 mins ago

Pooja Khedkar: ಪೂಜಾ ಖೇಡ್ಕರ್‌ಗೆ ಮತ್ತೊಂದು ಬಿಗ್‌ ಶಾಕ್‌; ತರಬೇತಿಗೆ ತಡೆ, ಅಕಾಡೆಮಿಗೆ ವಾಪಸ್‌

Clearance of footpaths in Shira
ತುಮಕೂರು50 mins ago

Shira News: ಶಿರಾದಲ್ಲಿ ಫುಟ್‌ಪಾತ್‌ಗಳ ತೆರವು ಕಾರ್ಯಾಚರಣೆ

karnataka weather Forecast
ಮಳೆ52 mins ago

Karnataka Weather : ನಾಳೆಗೂ ಮಳೆ ಮುನ್ನೆಚ್ಚರಿಕೆ; ಸೆ.30ರವರೆಗೆ ಈ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್‌ ನಿಷೇಧ

R Ashok demands that Valmiki Development Corporation scam should be investigated by CBI and CM Siddaramaiah should resign
ಕರ್ನಾಟಕ53 mins ago

Assembly Session: ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ; ಆರ್‌. ಅಶೋಕ್‌ ಆಗ್ರಹ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌