Job Alert: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಅರ್ಜಿ ಸಲ್ಲಿಕೆಗೆ ನಾಳೆ ಕೊನೆಯ ದಿನ - Vistara News

ಉದ್ಯೋಗ

Job Alert: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಅರ್ಜಿ ಸಲ್ಲಿಕೆಗೆ ನಾಳೆ ಕೊನೆಯ ದಿನ

Job Alert: ರೈಲ್ವೆ ರಿಕ್ರೂಟ್‌ಮೆಂಟ್‌ ಸೆಲ್‌ ಈಶಾನ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 1,104 ತರಬೇತುದಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 1 ವರ್ಷಗಳ ತರಬೇತಿ ಅವಧಿ ಇದಾಗಿದ್ದು, ಐಟಿಐ ಪಾಸಾಗಿ ದೇಶದ ಯಾವುದೇ ಭಾಗದಲ್ಲಿ ಉದ್ಯೋಗ ನಿರ್ವಹಿಸಲು ತಯಾರಿರುವವರು ಸರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ನಾಳೆ (ಜುಲೈ 11). ಹೀಗಾಗಿ ಬೇಗ ಅಪ್ಲೈ ಮಾಡಿ.

VISTARANEWS.COM


on

Job Alert
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ರೈಲ್ವೆ ರಿಕ್ರೂಟ್‌ಮೆಂಟ್‌ ಸೆಲ್‌ (Railway Recruitment Cell) ಈಶಾನ್ಯ ರೈಲ್ವೆ ವಿಭಾಗ (North Eastern Railway)ದಲ್ಲಿ ಖಾಲಿ ಇರುವ 1,104 ತರಬೇತುದಾರ ಹುದ್ದೆಗಳ (Apprentice posts) ಭರ್ತಿಗೆ ಅರ್ಜಿ ಆಹ್ವಾನಿಸಿದೆ (RRC NER Apprentice Recruitment 2024). 1 ವರ್ಷಗಳ ತರಬೇತಿ ಅವಧಿ ಇದಾಗಿದ್ದು, ಐಟಿಐ ಪಾಸಾಗಿ ದೇಶದ ಯಾವುದೇ ಭಾಗದಲ್ಲಿ ಉದ್ಯೋಗ ನಿರ್ವಹಿಸಲು ತಯಾರಿರುವವರು ಸರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ನಾಳೆ (ಜುಲೈ 11) (Job Alert).

ಹುದ್ದೆಗಳ ವಿವರ

ಮೆಕ್ಯಾನಿಕಲ್ ವರ್ಕ್‌ಶಾಪ್‌ ಗೋರಖ್‌ಪುರ್- 411
ಸಿಗ್ನಲ್ ವರ್ಕ್‌ಶಾಪ್‌ ಗೋರಖ್‌ಪುರ್- 63
ಬ್ರಿಡ್ಜ್‌ ವರ್ಕ್‌ಶಾಪ್‌ ಗೋರಖ್‌ಪುರ್‌- 35
ಮೆಕ್ಯಾನಿಕಲ್ ವರ್ಕ್‌ಶಾಪ್‌ ಇಜ್ಜಾತ್‌ ನಗರ್- 151
ಡೀಸೆಲ್ ಶೇಡ್‌ ಇಜ್ಜಾತ್ ನಗರ್- 60
ಕ್ಯಾರಿಯೇಜ್ ಆ್ಯಂಡ್‌ ವ್ಯಾಗನ್ ಇಜ್ಜಾತ್ ನಗರ್- 64
ಕ್ಯಾರಿಯೇಜ್ ಅಂಡ್ ವ್ಯಾಗನ್ ಲಕ್ನೊ ಜಂಕ್ಷನ್- 155
ಡೀಸೆಲ್‌ ಶೆಡ್ ಗೊಂಡ- 90
ಕ್ಯಾರಿಯೇಜ್ ಆ್ಯಂಡ್‌ ವ್ಯಾಗನ್ ವಾರಣಾಸಿ- 75 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಎಸ್‌ಎಸ್‌ಎಲ್‌ಸಿ ನಂತರ ಫಿಟ್ಟರ್, ವೆಲ್ಡರ್, ಎಲೆಕ್ಟ್ರಿಷಿಯನ್‌, ಕಾರ್ಪೆಂಟರ್, ಮಷಿನಿಸ್ಟ್‌ ಮತ್ತಿತರ ಟ್ರೇಡ್‌ಗಳಲ್ಲಿ ಐಟಿಐ ತೇರ್ಗಡೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಕನಿಷ್ಠ ಶೇ. 50 ಅಂಕಗಳೊಂದಿಗೆ ಐಟಿಐ ತೇರ್ಗಡೆ ಹೊಂದಿರುವುದು ಕಡ್ಡಾಯ. ಜತೆಗೆ ಎನ್‌ಸಿವಿಟಿ / ಎಸ್‌ಸಿವಿಟಿ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 15 ವರ್ಷ ಮತ್ತು ಗರಿಷ್ಠ ವಯಸ್ಸು 24 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ವಿಶೇಷ ಚೇತನರಿಗೆ 10 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ರಿಯಾಯಿತಿ ಇದೆ ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 100 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಆರ್ಥಿಕವಾಗಿ ಹಿಂದುಳಿದವರು / ಮಹಿಳಾ ಅಭ್ಯರ್ಥಿಗಳು, ವಿಶೇಷ ಚೇತನರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

RRC NER Apprentice Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://apprentice.rrcner.net/)
  • ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಲಗತ್ತಿಸಿ ಲಾಗಿನ್‌ ಆಗಿ.
  • ಸೂಕ್ತ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಇಂದೇ ಅಪ್ಲೈ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಅಂಚೆ ಇಲಾಖೆಯಿಂದ ಬೃಹತ್‌ ನೇಮಕಾತಿ; ಕರ್ನಾಟಕದಲ್ಲಿಯೂ ಇದೆ 1,940 ಹುದ್ದೆ: ಹೀಗೆ ಅಪ್ಲೈ ಮಾಡಿ

Job Alert: ಭಾರತೀಯ ಅಂಚೆ ಇಲಾಖೆ ಬಹುನಿರೀಕ್ಷಿತ ಗ್ರಾಮೀಣ ಡಾಕ್ ಸೇವಕ್‌ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ನಮ್ಮ ರಾಜ್ಯದಲ್ಲಿ 1,940 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಗ್ರಾಮೀಣ ಡಾಕ್‌ ಸೇವಕ್‌ (ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌) ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಕೊನೆಯ ದಿನ ಆಗಸ್ಟ್‌ 5. ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಭಾರತೀಯ ಅಂಚೆ ಇಲಾಖೆ (India Post Office) ಬಹುನಿರೀಕ್ಷಿತ ಗ್ರಾಮೀಣ ಡಾಕ್ ಸೇವಕ್‌ (Gramin Dak Sevak) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ದೇಶಾದ್ಯಂತ ಸುಮಾರು 44,228 ಹುದ್ದೆಗಳು ಖಾಲಿ ಇವೆ. ಈ ಪೈಕಿ ನಮ್ಮ ರಾಜ್ಯದಲ್ಲಿ 1,940 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ (Karnataka Postal Circle Recruitment 2024). ಗ್ರಾಮೀಣ ಡಾಕ್‌ ಸೇವಕ್‌ (ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌) ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಕೊನೆಯ ದಿನ ಆಗಸ್ಟ್‌ 5 (Job Alert).

ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆ?

ಬಾಗಲಕೋಟೆ 23, ಬಳ್ಳಾರಿ 50, ಬೆಂಗಳೂರು ಜಿಪಿಒ 4, ಬೆಳಗಾವಿ 33, ಬೆಂಗಳೂರು ಪೂರ್ವ 83, ಬೆಂಗಳೂರು ದಕ್ಷಿಣ 62, ಬೆಂಗಳೂರು ಪಶ್ಚಿಮ 39, ಬೀದರ್ 59, ಚನ್ನಪಟ್ಟಣ 87, ಚಿಕ್ಕಮಗಳೂರು 60, ಚಿಕ್ಕೋಡಿ 19, ಚಿತ್ರದುರ್ಗ 27, ದಾವಣಗೆರೆ ಕಚೇರಿ 40, ಧಾರವಾಡ 22, ಗದಗ 18, ಗೋಕಾಕ್ 7, ಹಾಸನ 78, ಹಾವೇರಿ 44, ಕಲಬುರಗಿ 83, ಕಾರವಾರ 43, ಕೊಡಗು 76, ಕೋಲಾರ 106, ಕೊಪ್ಪಳ 36, ಮಂಡ್ಯ 65, ಮಂಗಳೂರು 62, ಮೈಸೂರು 42, ನಂಜನಗೂಡು 66, ಪುತ್ತೂರು 89, ರಾಯಚೂರು 63, ಆರ್‌ಎಂಎಸ್‌ ಎಚ್‌ಬಿ 3, ಆರ್‌ಎಂಎಸ್‌ ಕ್ಯೂ 9, ಶಿವಮೊಗ್ಗ 89, ಶಿರಸಿ 66, ತುಮಕೂರು 107, ಉಡುಪಿ 90, ವಿಜಯಪುರ 40, ಯಾದಗಿರಿ 50 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಭಾರತದ ಯಾವುದೇ ಶಿಕ್ಷಣ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ (ಇಂಗ್ಲಿಷ್‌ ಮತ್ತು ಗಣಿತ ವಿಷಯ ಒಳಗೊಂಡಿರುವುದು ಕಡ್ಡಾಯ) ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಅರ್ಜಿ ಶುಲ್ಕವಾಗಿ ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು 100 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಅಂಗವಿಕಲ ವಿಭಾಗದ ಮತ್ತು ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. 10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌-12,000 ರೂ. -29,380 ರೂ., ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌-10,000 ರೂ. – 24,470 ರೂ. ಮಾಸಿಕ ವೇತನ ಇದೆ.

India Post GDS Recruitment 2024 ಅಧಿಕೃತ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://indiapostgdsonline.gov.in/)
  • ಹೆಸರು ನೋಂದಾಯಿಸಿ.
  • ಲಾಗಿನ್‌ ಆಗಿ ವಿವರಗಳನ್ನು ಭರ್ತಿ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ, ಸಹಿಯನ್ನು ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Continue Reading

ಉದ್ಯೋಗ

Job Alert: ಅಂಚೆ ಇಲಾಖೆಯಿಂದ ಗುಡ್‌ನ್ಯೂಸ್‌: 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

Job Alert: ಭಾರತೀಯ ಅಂಚೆ ಇಲಾಖೆ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಗ್ರಾಮೀಣ ಡಾಕ್ ಸೇವಕ್‌, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 5. ಇಂದಿನಿಂದಲೇ (ಜುಲೈ 15) ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ನವದೆಹಲಿ: ಒಂದೊಳ್ಳೆ ಉದ್ಯೋಗ ಹುಡುಕುತ್ತಿರುವವರಿಗೆ ಭಾರತೀಯ ಅಂಚೆ ಇಲಾಖೆ (India Post Office) ಗುಡ್‌ನ್ಯೂಸ್‌ ನೀಡಿದೆ. ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ (India Post GDS Recruitment 2024). ಗ್ರಾಮೀಣ ಡಾಕ್ ಸೇವಕ್‌, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 5. ಇಂದಿನಿಂದಲೇ (ಜುಲೈ 15) ಅರ್ಜಿ ಸಲ್ಲಿಸಬಹುದು (Job Alert).

ಕರ್ನಾಟಕದಲ್ಲಿಯೂ ಇದೆ ಹುದ್ದೆ

ಕರ್ನಾಟಕದ ಜತೆಗೆ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ದೆಹಲಿ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಜಾರ್ಖಂಡ್, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಈಶಾನ್ಯ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಈ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಭಾರತದ ಯಾವುದೇ ಶಿಕ್ಷಣ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಇಂಗ್ಲಿಷ್‌ ಮತ್ತು ಗಣಿತ ವಿಷಯವನ್ನು ಒಳಗೊಂಡಿರುವುದು ಕಡ್ಡಾಯ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು 100 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಅಂಗವಿಕಲ ವಿಭಾಗದ ಮತ್ತು ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ

10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 10,000 ರೂ. – 29,380 ರೂ. ಮಾಸಿಕ ವೇತನವಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

India Post GDS Recruitment 2024 ಅಧಿಕೃತ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://indiapostgdsonline.gov.in/Reg_validation.aspx)
  • ಇಮೇಲ್‌ ಐಡಿ, ಫೋನ್‌ ನಂಬರ್‌ ನೀಡಿ ಹೆಸರು ನಮೂದಿಸಿ.
  • ರಚಿಸಲಾದ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಅಪ್ಲಿಕೇಷನ್‌ ಫಾರಂನಲ್ಲಿ ಕಂಡುಬರುತ್ತದೆ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ನಿಮ್ಮ ಇತ್ತೀಚಿನ ಫೋಟೊ ಮತ್ತು ಸಹಿಯನ್ನು ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: https://indiapostgdsonline.gov.in/ಕ್ಕೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Continue Reading

ಉದ್ಯೋಗ

Job Alert: HALನಲ್ಲಿದೆ ವಿವಿಧ ಹುದ್ದೆ; ಬೆಂಗಳೂರಿನಲ್ಲಿ ಉದ್ಯೋಗ ಹುಡುಕುವವರಿಗೆ ಉತ್ತಮ ಅವಕಾಶ

Job Alert: ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಟೆಕ್ನಿಷಿಯನ್, ಅಸಿಸ್ಟಂಟ್‌, ಫಿಟ್ಟರ್‌ ಸೇರಿ 28 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜುಲೈ 18.

VISTARANEWS.COM


on

Job Alert
Koo

ಬೆಂಗಳೂರು: ಬೆಂಗಳೂರಿನಲ್ಲಿ ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಬಯಸಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (Hindustan Aeronautics Limited)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (HAL India Recruitment 2024). ಟೆಕ್ನಿಷಿಯನ್, ಅಸಿಸ್ಟಂಟ್‌, ಫಿಟ್ಟರ್‌ ಸೇರಿ 28 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜುಲೈ 18 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಡಿಪ್ಲೊಮಾ ಟೆಕ್ನಿಷಿಯನ್ (ಮೆಕ್ಯಾನಿಕಲ್) – 9 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್
ಡಿಪ್ಲೊಮಾ ಟೆಕ್ನಿಷಿಯನ್ (ಎಲೆಕ್ಟ್ರಿಕಲ್)- 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್
ಅಸಿಸ್ಟೆಂಟ್ (ಸಿವಿಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಸಿವಿಲ್ ಎಂಜಿನಿಯರಿಂಗ್
ಟೆಕ್ನಿಷಿಯನ್ (ಫಿಟ್ಟರ್) – 7 ಹುದ್ದೆ, ವಿದ್ಯಾರ್ಹತೆ: ಐಟಿಐ
ಟೆಕ್ನಿಷಿಯನ್ (ಎಲೆಕ್ಟ್ರಿಕಲ್) – 5 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಎಲೆಕ್ಟ್ರಿಷಿಯನ್
ಟೆಕ್ನಿಷಿಯನ್ (ಮೆಷಿನಿಸ್ಟ್) -2 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಮೆಷಿನಿಸ್ಟ್
ಟರ್ನರ್‌ನಲ್ಲಿ ಟೆಕ್ನಿಷಿಯನ್ (ಫಿಟ್ಟರ್) -1 ಹುದ್ದೆ, ವಿದ್ಯಾರ್ಹತೆ: ಐಟಿಐ
ಟೆಕ್ನಿಷಿಯನ್ (ಎಲೆಕ್ಟ್ರಾನಿಕ್ಸ್-ಮೆಕ್ಯಾನಿಕ್ಸ್) -1 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಎಲೆಕ್ಟ್ರಾನಿಕ್ಸ್-ಮೆಕ್ಯಾನಿಕ್ಸ್

ವಯೋಮಿತಿ

ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ-ಎನ್‌ಸಿಎಲ್‌ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ)-10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ)-13 ವರ್ಷ, ಪಿಡಬ್ಲ್ಯುಬಿಡಿ (ಎಸ್‌ಸಿ/ಎಸ್‌ಟಿ)-15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ, ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 22,000 ರೂ.-46,511 ರೂ. ಮಾಸಿಕ ವೇತನವಿದೆ. ಆಯ್ಕೆಯಾದವರಿಗೆ 1 ವರ್ಷ ಅವಧಿಯ ತರಬೇತಿ ನೀಡಲಾಗುತ್ತದೆ. ಉದ್ಯೋಗದ ಸ್ಥಳ: ಬೆಂಗಳೂರು.

HAL India Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://halardc.formflix.com/apply-online)
  • ಅಗತ್ಯ ಮಾಹಿತಿ, ಇಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಹೆಸರು, ವಿಳಾಸ, ಶೈಕ್ಷಣಿಕ ಮಾಹಿಸಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: https://www.hal-india.co.in/ಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Continue Reading

ಮನಿ-ಗೈಡ್

Employees’ Provident Fund: ಪಿಂಚಣಿ ಲಾಭ ಹೆಚ್ಚಳಕ್ಕಾಗಿ EPFOಗೆ ಸಂಬಂಧಿಸಿ ವೇತನ ಮಿತಿ ಏರಿಸಲು ಚಿಂತನೆ

ಕೇಂದ್ರ ಸರ್ಕಾರವು ನೌಕರರ ಭವಿಷ್ಯ ನಿಧಿ (Employees’ Provident Fund) ಸಂಸ್ಥೆ ಮತ್ತು ನೌಕರರ ರಾಜ್ಯ ವಿಮಾ ನಿಗಮ (ESIC) ಗಳಿಗೆ ವೇತನ ಮಿತಿಯನ್ನು ಹೆಚ್ಚಿಸಲು ಯೋಜನೆ ಮಾಡುತ್ತಿದೆ. ವೇತನ ಮಿತಿ ಕ್ರಮವಾಗಿ 15,000 ರೂ ಮತ್ತು 21,000 ರೂ ಆಗಿದ್ದು, ಇದನ್ನು 25,000 ರೂ. ಗೆ ಹೆಚ್ಚಿಸಲು ಸರ್ಕಾರ ಯೋಜನೆ ಮಾಡುತ್ತಿದೆ ಎನ್ನಲಾಗಿದೆ.

VISTARANEWS.COM


on

By

Employees' Provident Fund
Koo

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (Employees’ Provident Fund) ಭಾರತದ (India) ಸಾಮಾಜಿಕ ಭದ್ರತಾ ರಚನೆಯ ಮೇಲೆ ಪರಿಣಾಮ ಬೀರುವ ಬಹುದೊಡ್ಡ ಕ್ರಮಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರವು (central govt) ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಮತ್ತು ನೌಕರರ ರಾಜ್ಯ ವಿಮಾ ನಿಗಮ (ESIC) ಗಳಿಗೆ ವೇತನ ಮಿತಿಯನ್ನು ಹೆಚ್ಚಿಸಲು ಯೋಜನೆ ಮಾಡುತ್ತಿದೆ ಎನ್ನಲಾಗಿದೆ.

ನೌಕರರ ಭವಿಷ್ಯ ನಿಧಿ ಸಂಸ್ಥೆ ಮತ್ತು ಉದ್ಯೋಗಿಗಳ ರಾಜ್ಯ ವಿಮಾ ನಿಗಮಗಳ (ಇಎಸ್‌‌ಐ) ವೇತನ ಮಿತಿ ಈಗ ಕ್ರಮವಾಗಿ 15,000 ರೂ ಮತ್ತು 21,000 ರೂ ಆಗಿದ್ದು, ಇದನ್ನು 25,000 ರೂ. ಗೆ ಹೆಚ್ಚಿಸಲು ಸರ್ಕಾರ ಚಿಂತನೆ ಮಾಡುತ್ತಿದೆ. ಔಪಚಾರಿಕ ವಲಯದ ಉದ್ಯೋಗಿಗಳೆಂದು ವರ್ಗೀಕರಿಸಲಾದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಈ ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ. ಈಗ 15 ಸಾವಿರ ಮಿತಿ ಇರುವುದರಿಂದ 1250 ರೂ. ಮಾತ್ರ ಪಿಂಚಣಿ ಪ್ರಯೋಜನಗಳ ಖಾತೆಗೆ ಜಮೆಯಾಗುತ್ತದೆ. ಇದನ್ನು 25 ಸಾವಿರ ರೂ.ಗೆ ಏರಿಸಿದರೆ ಉದ್ಯೋಗಿಗಳು ನಿವೃತ್ತರಾದಾಗ ಸಿಗುವ ಮೊತ್ತವೂ ಗಣನೀಯವಾಗಿ ಏರುತ್ತದೆ.

20 ಅಥವಾ ಅದಕ್ಕಿಂತ ಹೆಚ್ಚಿನ ಉದ್ಯೋಗಿಗಳನ್ನು ಹೊಂದಿರುವ ಕಂಪೆನಿಗಳಲ್ಲಿ ಉದ್ಯೋಗದಲ್ಲಿರುವ ವ್ಯಕ್ತಿಗಳ ಅರ್ಹತೆಯನ್ನು ನಿರ್ಧರಿಸುವ ಗರಿಷ್ಠ ಗಳಿಕೆಯ ಮಿತಿ ಮತ್ತು ವಯಸ್ಸಿನ ನವೀಕರಣ ಮಾಡಿಲ್ಲ. ಇಪಿಎಫ್ ಒ ಗಾಗಿ ಕೊನೆಯ ಪರಿಷ್ಕರಣೆಯು 2014ರಲ್ಲಿ ನಡೆದಿತ್ತು ಮತ್ತು ಇಎಸ್ ಇಸಿಗಾಗಿ 2017ರಲ್ಲಿ ನವೀಕರಣ ನಡೆಸಲಾಗಿತ್ತು.
ಈ ವರ್ಷದ ಏಪ್ರಿಲ್‌ನಲ್ಲಿ ಇಪಿಎಫ್‌ಒ ದಾಖಲೆಯ 18.92 ಲಕ್ಷ ಸದಸ್ಯರನ್ನು ಸೇರಿಸಿಕೊಂಡಿದೆ. ಏಪ್ರಿಲ್ 2018 ರಲ್ಲಿ ಮೊದಲ ವೇತನದಾರರ ಡೇಟಾವನ್ನು ಪ್ರಕಟಿಸಿದ ಅನಂತರ ಇದು ಗರಿಷ್ಠ ದಾಖಲೆಯಾಗಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಅಂಕಿಅಂಶಗಳು ತಿಳಿಸಿವೆ.

ನಿವ್ವಳ ಸದಸ್ಯರ ಸಂಖ್ಯೆಯು ಮಾರ್ಚ್ 2024 ರ ಅನುಗುಣವಾದ ಅಂಕಿ ಅಂಶಕ್ಕಿಂತ ಶೇ. 31.29ರಷ್ಟು ಹೆಚ್ಚಾಗಿದೆ ಎಂದು ತಾತ್ಕಾಲಿಕ ವೇತನದಾರರ ಡೇಟಾ ತೋರಿಸುತ್ತದೆ. ವರ್ಷದಿಂದ ವರ್ಷಕ್ಕೆ ಹೋಲಿಸಿದರೆ ನಿವ್ವಳ ಸದಸ್ಯರ ಸೇರ್ಪಡೆಯಲ್ಲಿ ಶೇ.10 ರಷ್ಟು ಬೆಳವಣಿಗೆಯಾಗಿದೆ. ಸದಸ್ಯತ್ವದಲ್ಲಿನ ಈ ಹೆಚ್ಚಳವು ಹೆಚ್ಚಿದ ಉದ್ಯೋಗಾವಕಾಶಗಳು, ಉದ್ಯೋಗಿಗಳ ಪ್ರಯೋಜನಗಳ ಬಗ್ಗೆ ಹೆಚ್ಚುತ್ತಿರುವ ಅರಿವು ಮತ್ತು ಇಪಿಎಫ್ ಓ ​​ನ ಕಾರ್ಯಕ್ರಮಗಳ ಪರಿಣಾಮಕಾರಿತ್ವಕ್ಕೆ ಉದಾಹರಣೆಯಾಗಿದೆ ಎಂದು ಕೇಂದ್ರ ಸಚಿವಾಲಯ ಹೇಳಿದೆ.


ಹೊಸ ಸದಸ್ಯರ ಸಂಖ್ಯೆಯಲ್ಲಿ ಹೆಚ್ಚಳ

ಏಪ್ರಿಲ್ 2024ರಲ್ಲಿ ಸುಮಾರು 8.87 ಲಕ್ಷ ಹೊಸ ಸದಸ್ಯರು ಸೇರಿಕೊಂಡಿದ್ದಾರೆ ಎಂದು ಡೇಟಾ ಸೂಚಿಸುತ್ತದೆ. ಡೇಟಾದ ಗಮನಾರ್ಹ ಅಂಶವೆಂದರೆ 18- 25 ವಯೋಮಾನದವರ ಪ್ರಾಬಲ್ಯ ಹೆಚ್ಚಾಗಿದೆ. 2024ರ ಏಪ್ರಿಲ್ ನಲ್ಲಿ ಸೇರಿಸಲಾದ ಸದಸ್ಯರ ಪೈಕಿ ಇವರ ಪ್ರಮಾಣ ಶೇ. 55.5ರಷ್ಟಿದೆ.

ಮರು ಸೇರ್ಪಡೆ

ವೇತನದಾರರ ಅಂಕಿಅಂಶಗಳ ಪ್ರಕಾರ ಸರಿಸುಮಾರು 14.53 ಲಕ್ಷ ಸದಸ್ಯರು ನಿರ್ಗಮಿಸಿದರು ಮತ್ತು ಅನಂತರ ಇಪಿಎಫ್‌ಒಗೆ ಮರುಸೇರ್ಪಡೆಯಾದರು. ಮಾರ್ಚ್ 2024 ರ ಹಿಂದಿನ ತಿಂಗಳಿಗೆ ಹೋಲಿಸಿದರೆ ಈ ಅಂಕಿ ಅಂಶವು ಶೇ. 23.15 ರಷ್ಟು ಹೆಚ್ಚಳವನ್ನು ತೋರಿಸಿದೆ. ಈ ಸದಸ್ಯರು ತಮ್ಮ ಉದ್ಯೋಗಗಳನ್ನು ಬದಲಾಯಿಸಿದರು ಮತ್ತು ಇಪಿಎಫ್ ಒ ​​ವ್ಯಾಪ್ತಿಗೆ ಒಳಪಡುವ ಸಂಸ್ಥೆಗಳಿಗೆ ಮರು ಸೇರ್ಪಡೆಗೊಂಡರು ಮತ್ತು ಅಂತಿಮ ಇತ್ಯರ್ಥಕ್ಕೆ ಅರ್ಜಿ ಸಲ್ಲಿಸುವ ಬದಲು ತಮ್ಮ ಸಂಗ್ರಹಣೆಯನ್ನು ವರ್ಗಾಯಿಸಲು ನಿರ್ಧರಿಸಿದರು. ಹೀಗಾಗಿ, ರಕ್ಷಣೆ ದೀರ್ಘಾವಧಿಯ ಆರ್ಥಿಕ ಯೋಗಕ್ಷೇಮ ಮತ್ತು ಅವರ ಸಾಮಾಜಿಕ ಭದ್ರತೆ ರಕ್ಷಣೆಯನ್ನು ವಿಸ್ತರಿಸುವುದು.

ಮಹಿಳಾ ಸದಸ್ಯರು

ವೇತನದಾರರ ದತ್ತಾಂಶದ ಲಿಂಗವಾರು ವಿಶ್ಲೇಷಣೆಯು 8.87 ಲಕ್ಷ ಹೊಸ ಸದಸ್ಯರಲ್ಲಿ ಸುಮಾರು 2.49 ಲಕ್ಷ ಹೊಸ ಮಹಿಳಾ ಸದಸ್ಯರನ್ನು ಹೊಂದಿದೆ.

ತಿಂಗಳಿನಲ್ಲಿ ನಿವ್ವಳ ಮಹಿಳಾ ಸದಸ್ಯರ ಸೇರ್ಪಡೆಯು ಸುಮಾರು 3.91 ಲಕ್ಷದಷ್ಟಿತ್ತು, ಇದು ಮಾರ್ಚ್ 2024 ರ ಹಿಂದಿನ ತಿಂಗಳಿಗೆ ಹೋಲಿಸಿದರೆ ಸರಿಸುಮಾರು ಶೇ. 35.06ರಷ್ಟು ಹೆಚ್ಚಳವನ್ನು ತೋರಿಸಿದೆ. ಮಹಿಳಾ ಸದಸ್ಯರ ಹೆಚ್ಚಳವು ಹೆಚ್ಚು ಅಂತರ್ಗತ ಮತ್ತು ವೈವಿಧ್ಯಮಯ ಕಡೆಗೆ ವ್ಯಾಪಕ ಬದಲಾವಣೆಯನ್ನು ಸೂಚಿಸುತ್ತದೆ.

ಮಹಾರಾಷ್ಟ್ರ ಮುಂಚೂಣಿಯಲ್ಲಿ

ವೇತನದಾರರ ದತ್ತಾಂಶದ ರಾಜ್ಯವಾರು ವಿಶ್ಲೇಷಣೆಯು ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಗುಜರಾತ್ ಮತ್ತು ಹರಿಯಾಣದ ಐದು ರಾಜ್ಯಗಳಲ್ಲಿ ನಿವ್ವಳ ಸದಸ್ಯರ ಸೇರ್ಪಡೆ ಅತ್ಯಧಿಕವಾಗಿದೆ ಎಂದು ಸೂಚಿಸುತ್ತದೆ.

ಇದನ್ನೂ ಓದಿ: Forex Reserves: ವಿದೇಶಿ ವಿನಿಮಯ ಸಂಗ್ರಹದಲ್ಲಿ 43,081 ಕೋಟಿ ರೂ. ಏರಿಕೆ; ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಒಟ್ಟು ಮೌಲ್ಯ

ಈ ರಾಜ್ಯಗಳು ನಿವ್ವಳ ಸದಸ್ಯರ ಸೇರ್ಪಡೆಯಲ್ಲಿ ಸುಮಾರು ಶೇ. 58.3ರಷ್ಟನ್ನು ಹೊಂದಿದ್ದು, ತಿಂಗಳಲ್ಲಿ ಒಟ್ಟು 11.03 ಲಕ್ಷ ನಿವ್ವಳ ಸದಸ್ಯರನ್ನು ಸೇರಿಸುತ್ತವೆ. ಎಲ್ಲಾ ರಾಜ್ಯಗಳಲ್ಲಿ, ಮಹಾರಾಷ್ಟ್ರವು ತಿಂಗಳಲ್ಲಿ ಶೇ. 20.42 ರಷ್ಟು ನಿವ್ವಳ ಸದಸ್ಯರನ್ನು ಸೇರಿಸುವ ಮೂಲಕ ಮುಂಚೂಣಿಯಲ್ಲಿದೆ.

ಒಟ್ಟು ನಿವ್ವಳ ಸದಸ್ಯತ್ವದಲ್ಲಿ ಸುಮಾರು ಶೇ. 41.41 ರಷ್ಟು ಸೇರ್ಪಡೆಯು ಪರಿಣಿತ ಸೇವೆಗಳಿಂದ ಅಂದರೆ ಮಾನವಶಕ್ತಿ ಪೂರೈಕೆದಾರರು, ಸಾಮಾನ್ಯ ಗುತ್ತಿಗೆದಾರರು, ಭದ್ರತಾ ಸೇವೆಗಳು, ವಿವಿಧ ಚಟುವಟಿಕೆಗಳನ್ನು ಒಳಗೊಂಡಿರುತ್ತದೆ.

Continue Reading
Advertisement
Ambani Video
ಪ್ರಮುಖ ಸುದ್ದಿ8 mins ago

Ambani Video: 3 ವರ್ಷದ ಅಂಬಾನಿ ಮೊಮ್ಮಗ ವೇದಿಕೆ ಮೇಲೆ ಜಾರಿ ಬಿದ್ದ, ಆದರೆ ಜನರ ಹೃದಯ ಗೆದ್ದ!

Money Guide
ಮನಿ-ಗೈಡ್8 mins ago

Money Guide: ಹಿರಿಯರಿಗೆ ಆರೋಗ್ಯ ವಿಮೆ: ಯಾಕಾಗಿ? ಏನಿದರ ಉಪಯೋಗ?

Muharram 2024 Man dies in fire during
ರಾಯಚೂರು18 mins ago

Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

hit and run case
ದೇಶ20 mins ago

Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

Assembly Session
ಕರ್ನಾಟಕ26 mins ago

Assembly Session: ವಾಲ್ಮೀಕಿ ನಿಗಮ ಅಕ್ರಮ ದಲಿತರಿಗೆ ಮಾಡಿರೋ ಅನ್ಯಾಯ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

Paris Olympics 2024
ಪ್ರಮುಖ ಸುದ್ದಿ43 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಕಡಿಮೆ ಪದಕಗಳು ಸಿಗುವುದು ಯಾಕೆ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ

BMTC staff commits suicide at headquarters
ಬೆಂಗಳೂರು1 hour ago

BMTC staff : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ

ಪ್ರಮುಖ ಸುದ್ದಿ1 hour ago

Uttara Kannada Rain: ಭಾರಿ ಮಳೆಗೆ ತತ್ತರಿಸಿದ ಉತ್ತರ ಕನ್ನಡ; ಭೂಕುಸಿತಕ್ಕೆ 11 ಸಾವು, ರಸ್ತೆಗಳೇ ಮಾಯ, ತೋಟ ಗದ್ದೆ ಮುಳುಗಡೆ

Pooja Khedkar
ಪ್ರಮುಖ ಸುದ್ದಿ1 hour ago

Pooja Khedkar: ಐಎಎಸ್‌ಗಾಗಿ ನಕಲಿ ಜಾತಿ, ಕಡಿಮೆ ವಯಸ್ಸು, ದರ್ಪ; ಪೂಜಾ ಖೇಡ್ಕರ್‌ ಕಳ್ಳಾಟ ಒಂದೆರಡಲ್ಲ!

Viral Video
Latest1 hour ago

Viral Video : ಡ್ಯಾನ್ಸ್‌ ಆಯ್ತು, ಹೊಡೆದಾಟವಾಯ್ತು, ಈಗ ಹುಡುಗಿಯರ ಮೇಕಪ್‌ಗೂ ಸಾಕ್ಷಿಯಾಯ್ತು ದೆಹಲಿ ಮೆಟ್ರೊ! ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ23 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌