UK Parliament: ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಭಾರತೀಯ ಮೂಲದ ಇಂಗ್ಲೆಂಡ್‌ ಸಂಸದೆ ಶಿವಾನಿ; Video ಇಲ್ಲಿದೆ - Vistara News

ವಿದೇಶ

UK Parliament: ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಭಾರತೀಯ ಮೂಲದ ಇಂಗ್ಲೆಂಡ್‌ ಸಂಸದೆ ಶಿವಾನಿ; Video ಇಲ್ಲಿದೆ

UK Parliament: ಭಾರತ ಮೂಲದ, 29 ವರ್ಷದ ಸಂಸದೆ ಶಿವಾನಿ ರಾಜಾ ಇಂಗ್ಲೆಂಡ್‌ ಸಂಸತ್ತಿನಲ್ಲಿ ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ್ದು, ಗಮನ ಸೆಳೆದಿದೆ. ಈ ವಿಡಿಯೊ ವೈರಲ್‌ ಆಗಿದೆ. ಲೀಸೆಸ್ಟರ್ ಪೂರ್ವ ತ್ರದಿಂದ ಜಯ ಗಳಿಸಿ ಸಂಸದೆಯಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ನಿರ್ಮಿಸಿದ್ದ ಶಿವಾನಿ ಇದೀಗ ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿ ಭಾರತೀಯರ ಮೆಚ್ಚುಗೆ ಗಳಿಸಿದ್ದಾರೆ.

VISTARANEWS.COM


on

UK Parliament
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್‌: ಜಗತ್ತಿನ ಗಮನ ಸೆಳೆದಿದ್ದ ಇಂಗ್ಲೆಂಡ್‌ನ ಸಾರ್ವತ್ರಿಕ ಚುನಾವಣೆ(UK Election)ಯ ಫಲಿತಾಂಶ ಹೊರ ಬಿದ್ದಿದೆ. ನಿರೀಕ್ಷೆಯಂತೆಯೇ ಈ ಬಾರಿ ಕನ್ಸರ್ವೇಟಿವ್‌ ಪಕ್ಷದ, ಭಾರತದ ಮೂಲದ ರಿಷಿ ಸುನಕ್‌ (Rishi Sunak) ಅವರಿಗೆ ಭಾರೀ ಹಿನ್ನಡೆಯಾಗಿದ್ದು, ಲೇಬರ್‌ ಪಕ್ಷ (Labour Party) ಭರ್ಜರಿ ಗೆಲುವು ಸಾಧಿಸಿದೆ. ಇದೀಗ ಚುನಾಯಿತ ಜನಪ್ರತಿನಿಧಿಗಳು ಪ್ರತಿಜ್ಞೆ ಸ್ವೀಕರಿಸಿದ್ದಾರೆ. ಈ ಮಧ್ಯೆ ಭಾರತ ಮೂಲದ, 29 ವರ್ಷದ ಸಂಸದೆ ಶಿವಾನಿ ರಾಜಾ (Shivani Raja) ಇಂಗ್ಲೆಂಡ್‌ ಸಂಸತ್ತಿನಲ್ಲಿ (UK Parliament) ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ್ದು, ಗಮನ ಸೆಳೆದಿದೆ. ಈ ವಿಡಿಯೊ ವೈರಲ್‌ ಆಗಿದೆ (Viral Video).

ಲೀಸೆಸ್ಟರ್ ಪೂರ್ವ (Leicester East) ಕ್ಷೇತ್ರದಿಂದ ಜಯ ಗಳಿಸಿ ಸಂಸದೆಯಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ನಿರ್ಮಿಸಿದ್ದ ಶಿವಾನಿ ಇದೀಗ ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿ ಭಾರತೀಯರ ಮೆಚ್ಚುಗೆ ಗಳಿಸಿದ್ದಾರೆ.

ಲೀಸೆಸ್ಟರ್ ಪೂರ್ವದಿಂದ ಸ್ಪರ್ಧಿಸಿದ್ದ ಶಿವಾನಿ ರಾಜಾ ಅವರು ಲಂಡನ್‌ನ ಮಾಜಿ ಉಪ ಮೇಯರ್ ರಾಜೇಶ್ ಅಗರ್ವಾಲ್ ವಿರುದ್ಧ ಗೆಲುವು ಸಾಧಿಸಿ ಅಚ್ಚರಿಯ ಫಲಿತಾಂಶಕ್ಕೆ ಕಾರಣರಾಗಿದ್ದರು. ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಶಿವಾನಿ ಅವರು ಲೀಸೆಸ್ಟರ್ ಈಸ್ಟ್ ಅನ್ನು ಪ್ರತಿನಿಧಿಸುತ್ತಿರುವುದಕ್ಕೆ ಹೆಮ್ಮೆಯಾಗುತ್ತಿರುವುದಾಗಿ ಬರೆದುಕೊಂಡಿದ್ದಾರೆ. “ಲೀಸೆಸ್ಟರ್ ಈಸ್ಟ್ ಅನ್ನು ಪ್ರತಿನಿಧಿಸಿ ಪ್ರಮಾಣ ವಚನ ಸ್ವೀಕರಿಸಿರುವುದು ಗೌರವದ ಸಂಗತಿ. ಭಗವದ್ಗೀತೆಯ ಮೇಲೆ ಪ್ರಮಾಣ ಮಾಡಲು ನಾನು ನಿಜವಾಗಿಯೂ ಹೆಮ್ಮೆ ಪಡುತ್ತೇನೆ” ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಗುಜರಾತ್‌ ಮೂಲ

ಈ ಬಾರಿಯ ಇಂಗ್ಲೆಂಡ್‌ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಯ 28 ಭಾರತೀಯ ಮೂಲದ ಸಂಸದರು ಆಯ್ಕೆಯಾಗಿದ್ದಾರೆ. ಈ ಪೈಕಿ ಶಿವಾನಿ ಕೂಡ ಒಬ್ಬರು. ಇವರು ಗುಜರಾತಿ ಮೂಲದವರು. ಅವರ ಪೋಷಕರು 1970ರ ದಶಕದ ಲೀಸೆಸ್ಟರ್‌ಗೆ ವಲಸೆ ಹೋಗಿದ್ದರು. ಶಿವಾನಿ ಅವರು ಡಿ ಮಾಂಟ್ಫೋರ್ಟ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪೂರ್ಣಗೊಳಿಸಿದ್ದಾರೆ. Pharmaceutical and Cosmetic Scienceನಲ್ಲಿ ಪದವಿ ಪಡೆದ ಅವರು ಇಂಗ್ಲೆಂಡ್‌ನ ಹಲವು ಪ್ರಮುಖ ಸೌಂದರ್ಯವರ್ಧಕ ಬ್ರ್ಯಾಂಡ್‌ನಲ್ಲಿ ಉದ್ಯೋಗ ನಿರ್ವಹಿಸಿದ್ದಾರೆ. ಶಿವಾನಿ ಕನ್ಸರ್ವೇಟಿವ್‌ ಪಕ್ಷದಿಂದ ಕಣಕ್ಕಿಳಿದು ಜಯ ದಾಖಲಿಸಿದ್ದಾರೆ.

ಲೇಬರ್ ಪಕ್ಷದ ಪ್ರಚಂಡ ವಿಜಯಕ್ಕೆ ಹೋಲಿಸಿದರೆ ಈ ಬಾರಿ ಕನ್ಸರ್ವೇಟಿವ್‌ ಪಕ್ಷ ಕೇವಲ 121 ಸ್ಥಾನಕ್ಕೆ ಸೀಮಿತವಾಗಿದೆ. 650 ಸೀಟುಗಳ ಪೈಕಿ ಕೀರ್‌ ಸ್ಟಾರ್ಮರ್‌ (Keir Starmer) ನಾಯಕತ್ವದ ಲೇಬರ್ ಪಕ್ಷವು ಬರೋಬ್ಬರಿ 412 ಸ್ಥಾನಗಳಲ್ಲಿ ಗೆದ್ದಿದೆ. ಈ ಮೂಲಕ 2019ಕ್ಕಿಂತ 211 ಹೆಚ್ಚುವರಿ ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಭಾರತೀಯ ಮೂಲದ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷವು ಹಿಂದಿನ ಚುನಾವಣೆಗೆ ಹೋಲಿಸಿದರೆ 250 ಸ್ಥಾನಗಳನ್ನು ಕಳೆದುಕೊಂಡಿದೆ.

ಇದನ್ನೂ ಓದಿ: Keir Starmer: ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ನೇಮಕ; ಅಭಿನಂದನೆ ಸಲ್ಲಿಸಿದ ಮೋದಿ

ಬ್ರಿಟನ್‌ ಸಂಸತ್ತಿಗೆ ಆಯ್ಕೆಯಾದ 28 ಭಾರತೀಯ ಪೈಕಿ 12 ಮಂದಿ ಸಿಖ್‌ ಸಮುದಾಯದವರು, 6 ಮಂದಿ ಮಹಿಳೆಯರು ಸೇರಿದ್ದಾರೆ. ಗಮನಾರ್ಹ ಸಂಗತಿ ಎಂದರೆ ಈ ಎಲ್ಲ ಸಿಖ್‌ ಸಂಸದರು ಲೇಬರ್‌ ಪಕ್ಷದವರು. ಈ ಪೈಕಿ 9 ಮಂದಿ ಮೊದಲ ಬಾರಿ ಆಯ್ಕೆಯಾಗಿದ್ದಾರೆ. ಇನ್ನು ಇಬ್ಬರು ಸತತ ಮೂರನೇ ಬಾರಿಗೆ ಆಯ್ಕೆಯಾದರೆ, ಒಬ್ಬರು ಎರಡನೇ ಬಾರಿಗೆ ಸಂಸತ್‌ ಪ್ರವೇಶಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Oil Tanker Capsizes: ತೈಲ ತುಂಬಿದ್ದ ಹಡಗು ಮುಳುಗಡೆ; 13 ಭಾರತೀಯರು ಜಲಸಮಾಧಿ

Oil Tanker Capsizes:ಕೊಮೊರೊಸ್-ಧ್ವಜದ ತೈಲ ಟ್ಯಾಂಕರ್ ರಾಸ್ ಮದ್ರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲುಗಳಷ್ಟು ದೂರದಲ್ಲಿರುವ ಡುಕ್ಮ್ ಬಂದರು ಪಟ್ಟಣಕ್ಕೆ ಸಮೀಪದಲ್ಲಿ ಮುಳುಗಡೆಯಾಗಿದೆ ಎಂದು MSC X ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ. ಇನ್ನು ದುಕ್ಮ್‌ ಪಟ್ಟಣ ಒಮನ್‌ ಆಗ್ನೇ ಭಾಗದಲ್ಲಿದೆ. ಇನ್ನು ಮುಳುಗಡೆಯಾಗಿರುವ ಹಡಗನ್ನು ಪ್ರೆಸ್ಟೀಜ್ ಫಾಲ್ಕನ್ ಎಂದು ಗುರುತಿಸಲಾಗಿದ್ದು, ಅದರಲ್ಲಿ ಸಿಬ್ಬಂದಿ ಕಣ್ಮರೆಯಾಗಿದ್ದು, ಅವರಿಗಾಗಿ ಹುಡುಕಾಟ ಮುಂದುವರೆದಿದೆ.

VISTARANEWS.COM


on

Oil Tanker Capsizes
Koo

ಒಮನ್‌: ತೈಲ ತುಂಬಿದ್ದ ಹಡಗೊಂದು ಸಮುದ್ರದಲ್ಲಿ ಮುಳುಗಿರುವ ಘಟನೆ ಒಮನ್‌ನಲ್ಲಿ(Oil Tanker Capsizes) ನಡೆದಿದೆ. ಈ ಭಾರೀ ದುರ್ಘಟನೆಯಲ್ಲಿ 13 ಭಾರತೀಯರು ಸೇರಿದಂತೆ ಒಟ್ಟು 16 ನೌಕಾ ಸಿಬ್ಬಂದಿ ಕಣ್ಮರೆಯಾಗಿದ್ದಾರೆ. ಈ ಬಗ್ಗೆ ಸಾಗರ ಭದ್ರತಾ ಕೇಂದ್ರ(MSC) ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದು, ನೌಕೆಯಲ್ಲಿದ್ದ ಇತರ ಮೂವರ ಸಿಬ್ಬಂದಿಗಳು ಶ್ರೀಲಂಕಾ ಮೂಲದವರು ಎನ್ನಲಾಗಿದೆ.

ಕೊಮೊರೊಸ್-ಧ್ವಜದ ತೈಲ ಟ್ಯಾಂಕರ್ ರಾಸ್ ಮದ್ರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲುಗಳಷ್ಟು ದೂರದಲ್ಲಿರುವ ಡುಕ್ಮ್ ಬಂದರು ಪಟ್ಟಣಕ್ಕೆ ಸಮೀಪದಲ್ಲಿ ಮುಳುಗಡೆಯಾಗಿದೆ ಎಂದು MSC X ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ. ಇನ್ನು ದುಕ್ಮ್‌ ಪಟ್ಟಣ ಒಮನ್‌ ಆಗ್ನೇ ಭಾಗದಲ್ಲಿದೆ. ಇನ್ನು ಮುಳುಗಡೆಯಾಗಿರುವ ಹಡಗನ್ನು ಪ್ರೆಸ್ಟೀಜ್ ಫಾಲ್ಕನ್ ಎಂದು ಗುರುತಿಸಲಾಗಿದ್ದು, ಅದರಲ್ಲಿ ಸಿಬ್ಬಂದಿ ಕಣ್ಮರೆಯಾಗಿದ್ದು, ಅವರಿಗಾಗಿ ಹುಡುಕಾಟ ಮುಂದುವರೆದಿದೆ.

ಮತ್ತೊಂದೆಡೆ ಒಮಾನ್‌(Oman)ನ ರಾಜಧಾನಿ ಮಸ್ಕತ್‌(Muscat Terrorist Attack)ನಲ್ಲಿರುವ ವಾದಿ ಕಬೀರ್ ಪ್ರದೇಶದ ಮಸೀದಿಯೊಂದರಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಭಾರತೀಯ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಒಮಾನ್’ನ ಶಿಯಾ ಮುಸ್ಲಿಂ ಮಸೀದಿಯ ಮೇಲೆ ಸೋಮವಾರ ತಡರಾತ್ರಿ ನಡೆದ ದಾಳಿಯಲ್ಲಿ ಮೂವರು ದಾಳಿಕೋರರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಮತ್ತು ಒಬ್ಬ ಪೊಲೀಸ್ ಸೇರಿದ್ದಾರೆ ಎಂದು ಪಾಕಿಸ್ತಾನ ಮತ್ತು ಒಮಾನ್ ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಸೇರಿದಂತೆ ವಿವಿಧ ರಾಷ್ಟ್ರಗಳ 28 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಮಾನ್‌ನಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿಯು ಗುಂಡಿನ ದಾಳಿಯನ್ನು ಖಂಡಿಸಿದೆ ಮತ್ತು ಸತ್ತ ಪಾಕಿಸ್ತಾನಿಗಳ ಪಾರ್ಥಿವ ಶರೀರವನ್ನು ಮರಳಿ ತರಲು ಒಮಾನಿ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: Model Arrest: ತನ್ನ ಫಾಲೋವರ್ಸ್‌ಗಳನ್ನೇ ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದ ಖ್ಯಾತ ಮಾಡೆಲ್‌ಗೆ ಜೈಲು ಶಿಕ್ಷೆ!

Continue Reading

ವಿದೇಶ

Muscat Terrorist Attack: ಮಸ್ಕತ್‌ನಲ್ಲಿ ಉಗ್ರರ ಅಟ್ಟಹಾಸ; ಭಾರತೀಯ ಸೇರಿ 9ಮಂದಿ ಸಾವು

Muscat Terrorist Attack: ಒಮಾನ್’ನ ಶಿಯಾ ಮುಸ್ಲಿಂ ಮಸೀದಿಯ ಮೇಲೆ ಸೋಮವಾರ ತಡರಾತ್ರಿ ನಡೆದ ದಾಳಿಯಲ್ಲಿ ಮೂವರು ದಾಳಿಕೋರರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಮತ್ತು ಒಬ್ಬ ಪೊಲೀಸ್ ಸೇರಿದ್ದಾರೆ ಎಂದು ಪಾಕಿಸ್ತಾನ ಮತ್ತು ಒಮಾನ್ ಅಧಿಕಾರಿಗಳು ತಿಳಿಸಿದ್ದಾರೆ

VISTARANEWS.COM


on

Muscat Terrorist Attack
Koo

ಮಸ್ಕತ್: ಒಮಾನ್‌(Oman)ನ ರಾಜಧಾನಿ ಮಸ್ಕತ್‌(Muscat Terrorist Attack)ನಲ್ಲಿರುವ ವಾದಿ ಕಬೀರ್ ಪ್ರದೇಶದ ಮಸೀದಿಯೊಂದರಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಭಾರತೀಯ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಒಮಾನ್’ನ ಶಿಯಾ ಮುಸ್ಲಿಂ ಮಸೀದಿಯ ಮೇಲೆ ಸೋಮವಾರ ತಡರಾತ್ರಿ ನಡೆದ ದಾಳಿಯಲ್ಲಿ ಮೂವರು ದಾಳಿಕೋರರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಮತ್ತು ಒಬ್ಬ ಪೊಲೀಸ್ ಸೇರಿದ್ದಾರೆ ಎಂದು ಪಾಕಿಸ್ತಾನ ಮತ್ತು ಒಮಾನ್ ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಸೇರಿದಂತೆ ವಿವಿಧ ರಾಷ್ಟ್ರಗಳ 28 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಮಾನ್‌ನಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿಯು ಗುಂಡಿನ ದಾಳಿಯನ್ನು ಖಂಡಿಸಿದೆ ಮತ್ತು ಸತ್ತ ಪಾಕಿಸ್ತಾನಿಗಳ ಪಾರ್ಥಿವ ಶರೀರವನ್ನು ಮರಳಿ ತರಲು ಒಮಾನಿ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: Sadananda Suvarna : ʼಗುಡ್ಡದ ಭೂತʼ ಖ್ಯಾತಿಯ ಹಿರಿಯ ರಂಗಕರ್ಮಿ, ನಿರ್ದೇಶಕ ಸದಾನಂದ ಸುವರ್ಣ ಇನ್ನಿಲ್ಲ

Continue Reading

Latest

Model Arrest: ತನ್ನ ಫಾಲೋವರ್ಸ್‌ಗಳನ್ನೇ ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದ ಖ್ಯಾತ ಮಾಡೆಲ್‌ಗೆ ಜೈಲು ಶಿಕ್ಷೆ!

Model Arrest: ಬ್ರೆಜಿಲ್‌ನ ಮಾಜಿ ರೂಪದರ್ಶಿ ಕ್ಯಾಟ್ ಟೊರೆಸ್ ಅನ್ನು ಮಾನವ ಕಳ್ಳಸಾಗಣೆ ಮತ್ತು ಮಹಿಳೆಯರ ಗುಲಾಮಗಿರಿಗಾಗಿ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅವಳೊಂದಿಗೆ ವಾಸವಾಗಿದ್ದ ಇಬ್ಬರು ಮಹಿಳೆಯರು 2022ರಲ್ಲಿ ಕಾಣೆಯಾಗಿದ್ದರು. ಈ ಬಗ್ಗೆ ಎಫ್ಐಆರ್ ದಾಖಲಿಸಿದ ಪೊಲೀಸರು ತನಿಖೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು. ಆಕೆ ತನ್ನ ಫಾಲೋವರ್ಸ್‌ಗಳನ್ನು ಲೈಂಗಿಕ ಕೆಲಸದಲ್ಲಿ ತೊಡಗುವಂತೆ ಒತ್ತಾಯಿಸಿ ಅವರನ್ನು ತನ್ನ ಗುಲಾಮರಂತೆ ಇರಿಸಿಕೊಳ್ಳುತ್ತಿದ್ದಳು ಎಂಬುದಾಗಿ ತಿಳಿದು ಬಂದಿದೆ.

VISTARANEWS.COM


on

Model Arrest
Koo

ಬ್ರೆಜಿಲ್‌ನ ಮಾಜಿ ರೂಪದರ್ಶಿ ಮತ್ತು ಅಮೆರಿಕ ಮೂಲದ ವೆಲ್ನೆಸ್ ಇನ್ಫ್ಲುಯೆನ್ಸರ್ ಕ್ಯಾಟ್ ಟೊರೆಸ್‌ ಎಂಬುವಳನ್ನು ಮಾನವ ಕಳ್ಳಸಾಗಣೆ ಮತ್ತು ಮಹಿಳೆಯರ ಗುಲಾಮಗಿರಿಗಾಗಿ ಎಂಟು ವರ್ಷಗಳ ಜೈಲು ಶಿಕ್ಷೆ (Model Arrest) ವಿಧಿಸಲಾಗಿದೆ. ಅವಳೊಂದಿಗೆ ವಾಸವಾಗಿದ್ದ ಇಬ್ಬರು ಮಹಿಳೆಯರು 2022ರಲ್ಲಿ ಕಾಣೆಯಾಗಿದ್ದರು. ಈ ಬಗ್ಗೆ ಎಫ್‌ಐಆರ್ ದಾಖಲಿಸಿದ ಪೊಲೀಸರು ತನಿಖೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು. ಆಕೆ ತನ್ನ ಫಾಲೋವರ್ಸ್‌ಗಳನ್ನು ಲೈಂಗಿಕ ಕೆಲಸದಲ್ಲಿ ತೊಡಗುವಂತೆ ಒತ್ತಾಯಿಸಿ ಅವರನ್ನು ತನ್ನ ಗುಲಾಮರಂತೆ ಇರಿಸಿಕೊಳ್ಳುತ್ತಿದ್ದಳು ಎಂಬುದಾಗಿ ತಿಳಿದುಬಂದಿದೆ.

ಆಕೆಯಿಂದ ಗುಲಾಮಗಿರಿಗೆ ಒಳಗಾದ ಆ ಮಹಿಳೆಯರು ಆಕೆಯೊಂದಿಗೆ ವಾಸವಿದ್ದಾಗ ಅನುಭವಿಸಿದ ಭಯಾನಕ ಘಟನೆಗಳ ಬಗ್ಗೆ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಂತ್ರಸ್ತ ಮಹಿಳೆಯರು, ಆಕೆ ಮರುಳು ಮಾಡುವಂತೆ ಮಾತನಾಡುತ್ತಿದ್ದಳು. ಅವಳು ಹೇಳುವ ಮಾತನ್ನು ಕೇಳಿ ಆಕರ್ಷಿತರಾದೆವು. ನಟ ಲಿಯೊನಾರ್ಡೊ ಡಿಕಾಪ್ರಿಯೊ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾಳೆ ಎಂದು ಒಂದು ಕಾಲದಲ್ಲಿ ವದಂತಿಗಳಿದ್ದ ಟೊರೆಸ್, ತನ್ನ ಆಧ್ಯಾತ್ಮಿಕ ಶಕ್ತಿಯನ್ನು ಬಳಸಿಕೊಂಡು ಭವಿಷ್ಯ ನುಡಿಯಬಹುದು ಎಂದು ಪ್ರಸಿದ್ಧ ಬ್ರೆಜಿಲಿಯನ್ ಟಿವಿ ಕಾರ್ಯಕ್ರಮಗಳಲ್ಲಿ ಹೇಳಿದ್ದಳು. ಅಲ್ಲದೇ ಅವಳು ಮ್ಯಾಗಜೀನ್‌ಗಳ ಮುಖಪುಟಗಳಲ್ಲಿ ಕಾಣಿಸಿಕೊಂಡಿದ್ದಳು. ಹಾಲಿವುಡ್‌ ನಟ ಲಿಯೊನಾರ್ಡೊ ಡಿಕಾಪ್ರಿಯೊ ಅವರಂತಹ ಪ್ರಸಿದ್ಧ ವ್ಯಕ್ತಿಗಳೊಂದಿಗೆ ಕಾಣಿಸಿಕೊಂಡಳು. ಹಾಗಾಗಿ ಆಕೆ ಹೇಳುವುದನ್ನು ತಾವು ನಂಬಿರುವುದಾಗಿ ಮಹಿಳೆಯರು ತಿಳಿಸಿದ್ದಾರೆ.

Model Arrest

ಆಕೆ ವೆಲ್‍ನೆಸ್ ವೆಬ್‍ಸೈಟ್‍ ಮತ್ತು ಚಂದಾದಾರಿಕೆ ಸೇವೆಯನ್ನು ಅಭಿವೃದ್ಧಿಪಡಿಸಿ ಅದರಲ್ಲಿ ಸಂಬಂಧಗಳು, ಯೋಗಕ್ಷೇಮ, ಸಂಮೋಹನ, ಧ್ಯಾನ ಮತ್ತು ವ್ಯಾಯಾಮ ಕಾರ್ಯಕ್ರಮಗಳು ಸೇರಿದಂತೆ ವ್ಯವಹಾರ ಯಶಸ್ಸಿನ ಬಗ್ಗೆ ಸಲಹೆ ನೀಡುವ ಸ್ವ-ಸಹಾಯ ವೀಡಿಯೊಗಳನ್ನು ಸಹ ಮಾಡುತ್ತಿದ್ದಳು. ಹಾಗೇ ವಿಡಿಯೋ ಸಮಾಲೋಚನೆಗಳ ಮೂಲಕ ಮುಖಾಮುಖಿ ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಳು.

ಹಾಗಾಗಿ ಆ ಮಹಿಳೆಯರು 2019ರಲ್ಲಿ ಟೊರೆಸ್ ಅವರ ಲೈವ್-ಇನ್ ಸಹಾಯಕರಾಗಿ ಕೆಲಸ ಮಾಡಲು ನ್ಯೂಯಾಕ್‌ಗೆ ತೆರಳಿದರು. ಅಲ್ಲಿ ಅವಳ ಮನೆಕೆಲಸ ಹಾಗೂ ಪ್ರಾಣಿಗಳನ್ನು ನೋಡಿಕೊಳ್ಳುವ ಕೆಲಸದಲ್ಲಿ ನಿರತಳಾಗಿದ್ದರು. ಆದರೆ ಆಕೆ ಸಂಬಳ ಸರಿಯಾಗಿ ನೀಡುತ್ತಿರಲಿಲ್ಲ. ನಂತರ ಸ್ಥಳೀಯ ಸ್ಟ್ರಿಪ್ ಕ್ಲಬ್‍ನಲ್ಲಿ ಕೆಲಸ ಮಾಡುವಂತೆ ಅವರ ಮೇಲೆ ಒತ್ತಡ ಹೇರಿದ್ದಳು. ಇದಕ್ಕೆ ಅವರು ಒಪ್ಪದಿದ್ದಾಗ ಅವರನ್ನು ಯಾಮಾರಿಸಿ ವೇಶ್ಯಾವಾಟಿಕೆಯಲ್ಲಿ ತೊಡಗುವಂತೆ ಮಾಡಿದ್ದಳು.

ಇದನ್ನೂ ಓದಿ: ತರಕಾರಿ ಮಾರುವವಳ ಮಗ ಸಿಎ ಪರೀಕ್ಷೆಯಲ್ಲಿ ಪಾಸ್‌; ಹೃದಯಸ್ಪರ್ಶಿ ವಿಡಿಯೊ ಇಲ್ಲಿದೆ

ನಂತರ ಇಬ್ಬರು ಮಹಿಳೆಯರ ಸ್ನೇಹಿತರು ಮತ್ತು ಕುಟುಂಬವು ಅವರನ್ನು ಹುಡುಕಲು ಸಾಮಾಜಿಕ ಮಾಧ್ಯಮ ಅಭಿಯಾನಗಳನ್ನು ಪ್ರಾರಂಭಿಸಿತು. ಮಾಧ್ಯಮಗಳ ಗಮನದಿಂದ ತಪ್ಪಿಸಿಕೊಳ್ಳಲು, ಟೊರೆಸ್ ಆ ಮಹಿಳೆಯರಿಗೆ ತಾವು ಆರಾಮವಾಗಿ ಇದ್ದೀವಿ ಎಂದು ವಿಡಿಯೊ ಪೋಸ್ಟ್ ಮಾಡುವಂತೆ ಒತ್ತಾಯಿಸಿದ್ದಳು. ಈ ರೀತಿ ಆಕೆ ಮಹಿಳೆಯರನ್ನು ಬಳಸಿಕೊಳ್ಳುತ್ತಿದ್ದಳು ಎನ್ನಲಾಗಿದೆ. 20 ಕ್ಕೂ ಹೆಚ್ಚು ಮಹಿಳೆಯರು ಟೊರೆಸ್‌ನಿಂದ ವಂಚನೆಗೊಳಗಾದ ಅಥವಾ ಶೋಷಣೆಗೊಳಗಾದ ಬಗ್ಗೆ ತಿಳಿಸಿದ್ದಾರೆ. ಅವರು ಅನುಭವಿಸಿದ ಮತ್ತು ಅನುಭವದಿಂದ ಚೇತರಿಸಿಕೊಳ್ಳಲು ಅವರು ಇನ್ನೂ ಮನೋವೈದ್ಯಕೀಯ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

Continue Reading

Latest

Viral News: ಬಾಸ್‌ ಜತೆ ಚಕ್ಕಂದವಾಡುತ್ತಿದ್ದ ಕಿಲಾಡಿ ಪತ್ನಿ; ಡ್ರೋನ್‌ ಬಳಸಿ ಪತ್ತೆ ಹಚ್ಚಿದ ಚಾಲಾಕಿ ಗಂಡ!

Viral News: ಗಂಡನಿಗೆ ಹೆಂಡತಿಯ ಮೇಲೆ ಅನುಮಾನ, ಹೆಂಡತಿಗೆ ಗಂಡನ ಮೇಲೆ ಅನುಮಾನ ಇದು ಈಗ ಸಾಮಾನ್ಯವಾಗಿ ಬಿಟ್ಟಿದೆ. ಚೀನಾದಲ್ಲಿ ವಾಸಿಸುವ ವ್ಯಕ್ತಿಯೊಬ್ಬನಿಗೆ ತನ್ನ ಪತ್ನಿ ತನ್ನನ್ನು ನಿರ್ಲಕ್ಷಿಸುತ್ತಿರುವುದು ತಿಳಿದುಬಂದಿದೆ. ಇದರಿಂದ ಆತನಿಗೆ ತನ್ನ ಪತ್ನಿಯ ಮೇಲೆ ಅನುಮಾನ ಶುರುವಾಗಿದೆ. ಹಾಗಾಗಿ ಆತ ತನ್ನ ಹೆಂಡತಿಯ ಚಲನವಲನಗಳನ್ನು ಪತ್ತೆಹಚ್ಚಲು ಡ್ರೋನ್ ಅನ್ನು ಬಳಸಲು ಆತ ನಿರ್ಧರಿಸಿದ. ಕೊನೆಗೂ ಆತನ ಪತ್ನಿ ಬಾಸ್‌ ಜತೆ ಸರಸವಾಡುತ್ತಿರುವುದು ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ

VISTARANEWS.COM


on

Viral News
Koo

ಅಕ್ರಮ ಸಂಬಂಧದ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಕೇಳಿಬರುತ್ತಿದೆ. ಪತಿ ಪತ್ನಿಯರು ಒಬ್ಬರು, ಇನ್ನೊಬ್ಬರಿಗೆ ತಿಳಿಯದಂತೆ ತಮ್ಮ ಕಚೇರಿಗಳಲ್ಲಿ, ಅಥವಾ ಇನ್ನಿತರ ಸ್ಥಳಗಳಲ್ಲಿ ಬೇರೆಯವರೊಡನೆ ಅಕ್ರಮ ಸಂಬಂಧವನ್ನು ಹೊಂದುವ ಪ್ರಕರಣಗಳು ಬಯಲಾಗುತ್ತಿವೆ. ಇದು ಈಗ ಸಾಮಾನ್ಯ ಎಂಬಂತಾಗಿ ಬಿಟ್ಟಿದೆ. ಆದರೆ ಇದೀಗ ಮಹಿಳೆಯೊಬ್ಬಳು ತಮ್ಮ ಬಾಸ್ ಜೊತೆ ಅಕ್ರಮ ಸಂಬಂಧವನ್ನು ಹೊಂದಿದ್ದು, ಇದರಿಂದ ಅನುಮಾನಗೊಂಡಿದ್ದ ಪತಿ ತನ್ನ ಹೆಂಡತಿಯ ರಹಸ್ಯ ಸಂಬಂಧವನ್ನು ಕಂಡುಹಿಡಿಯಲು ಡ್ರೋನ್ ಬಳಸಿ ಯಶಸ್ವಿಯಾಗಿದ್ದಾನೆ. ಈ ಸುದ್ದಿ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral News )ಆಗಿದೆ.

Viral News

ಮಧ್ಯ ಹುಬೈ ಪ್ರಾಂತ್ಯದ ಶಿಯಾನ್‍ನಲ್ಲಿ ವಾಸಿಸುವ 33 ವರ್ಷದ ವ್ಯಕ್ತಿಯೊಬ್ಬನಿಗೆ ತನ್ನ ಪತ್ನಿ ತನ್ನನ್ನು ನಿರ್ಲಕ್ಷಿಸುತ್ತಿರುವುದು ತಿಳಿದುಬಂದಿದೆ. ಇದರಿಂದ ಆತನಿಗೆ ತನ್ನ ಪತ್ನಿಯ ಮೇಲೆ ಅನುಮಾನ ಶುರುವಾಗಿದೆ. ಅಲ್ಲದೇ ಆತನ ಪತ್ನಿಗೆ ಕೆಲಸದಲ್ಲಿ ಪ್ರಮೋಷನ್ ಸಿಕ್ಕಿದ್ದು, ತನ್ನ ಹೆತ್ತವರನ್ನು ಆಗಾಗ ಭೇಟಿ ಮಾಡಲು ಹೋಗುವುದು ಆತನಲ್ಲಿ ಅನುಮಾನವನ್ನುಂಟುಮಾಡಿದೆ. ಹಾಗಾಗಿ ಆತ ತನ್ನ ಹೆಂಡತಿಯ ಚಲನವಲನಗಳನ್ನು ಪತ್ತೆಹಚ್ಚಲು ಡ್ರೋನ್ ಅನ್ನು ಬಳಸಲು ನಿರ್ಧರಿಸಿದನು. ಪತ್ನಿಯ ಹಿಂದೆ ಡ್ರೋನ್ ಅನ್ನು ಕಳುಹಿಸಿದ ಆತ ಆಕೆ ಕಾರೊಂದರಲ್ಲಿ ದೂರದ ಪರ್ವತ ಪ್ರದೇಶಕ್ಕೆ ಹೋಗುವುದು ಕಂಡುಬಂದಿದೆ. ನಂತರ ಅಲ್ಲಿ ಅವಳು ಇನ್ನೊಬ್ಬ ವ್ಯಕ್ತಿಯೊಂದಿಗೆ ಕೈ ಕೈ ಹಿಡಿದು ನಡೆದು ಪಾಳುಬಿದ್ದ ಮಣ್ಣಿನ ಗೋಡೆಯ ಮನೆಯೊಳಗೆ ಹೋಗುತ್ತಿರುವುದು ಕಂಡಿದೆ. ಸುಮಾರು 20 ನಿಮಿಷಗಳ ನಂತರ, ಅವರು ಕಟ್ಟಡದಿಂದ ಹೊರಬಂದು ನಂತರ ಅವಳು ತನ್ನ ಕೆಲಸ ಮಾಡುವ ಕಾರ್ಖಾನೆಗೆ ಹಿಂತಿರುಗಿದ್ದಾಳೆ. ಆಗ ಪತಿಗೆ ಆಕೆಗೆ ಅಕ್ರಮ ಸಂಬಂಧವಿರುವುದು ತಿಳಿದು ಬಂದಿದೆ.

ಹಾಗಾಗಿ ಡ್ರೋನ್‍ನಿಂದ ಸಂಗ್ರಹಿಸಿದ ಪುರಾವೆಗಳಿಂದ ವಿಚ್ಛೇದನ ಪಡೆಯಲು ಮುಂದಾಗಿದ್ದಾನೆ ಎನ್ನಲಾಗಿದೆ. ಹಾಗೇ ಅವಳಿಗೆ ತನ್ನ ಬಾಸ್ ಜೊತೆ ಅಕ್ರಮ ಸಂಬಂಧವಿದ್ದು, ಕಾರ್ಖಾನೆಯಲ್ಲಿ ಅವರಿಗೆ ಸಂಬಂಧ ಹೊಂದಲು ಸಮಸ್ಯೆಯಾಗುತ್ತದೆ ಎಂದು ದೂರದ ಕಾಡಿನಲ್ಲಿ ಈ ಕೆಲಸ ಮಾಡಲು ಮುಂದಾಗಿರುವುದಾಗಿ ಪತಿ ತಿಳಿಸಿದ್ದಾನೆ. ಈ ವಿಚಾರವನ್ನು ಆತ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದು, ಪತ್ನಿಯ ಮೋಸವನ್ನು ಡ್ರೋನ್ ಮೂಲಕ ಬಯಲು ಮಾಡಿರುವ ಬಗ್ಗೆ ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಕೆಲವರು ಡ್ರೋನ್ ತಂತ್ರಜ್ಞಾನದಿಂದ ಆತನ ಪತ್ನಿಯ ಮೋಸ ಬಯಲಾಗಿದೆ ಎಂದು ಹೊಗಳಿದ್ದಾರೆ. ಹಾಗೇ ಡ್ರೋನ್‍ನಂತಹ ತಂತ್ರಜ್ಞಾನ ಇರುವ ಈ ಕಾಲದಲ್ಲಿ ಇಂತಹ ಮೋಸ ನಡೆಯುವುದಿಲ್ಲ ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ:  ಹೆಣ್ಣು ಮಕ್ಕಳಿಗೆ ಈಗ ಶಾಲೆ ಕೂಡ ಸುರಕ್ಷಿತವಲ್ಲ! ಶಾಲಾ ಶೌಚಾಲಯದಲ್ಲಿ ಬಾಲಕಿ ಮೇಲೆ ಬಾಲಕನಿಂದ ಅತ್ಯಾಚಾರ

ಡ್ರೋನ್ ತಂತ್ರಜ್ಞಾನ ಇತೀಚಿನ ದಿನಗಳಲ್ಲಿ ಹೆಚ್ಚಿನ ಕೆಲಸಕ್ಕೆ ಬಳಸಲಾಗುತ್ತಿದೆ. ಏಪ್ರಿಲ್ 2022ರಲ್ಲಿ ಶಾಂಘೈನಲ್ಲಿ ಕಟ್ಟುನಿಟ್ಟಾದ ಕೋವಿಡ್ -19 ಲಾಕ್‍ಡೌನ್ ಇದ್ದಾಗ, ವ್ಯಕ್ತಿಯೊಬ್ಬರು ಎತ್ತರದ ಕಟ್ಟಡದಲ್ಲಿ ವಾಸಿಸುತ್ತಿದ್ದ ನೆರೆಹೊರೆಯವರಿಗೆ ಮೀನು ಮತ್ತು ತರಕಾರಿಗಳಂತಹ ದೈನಂದಿನ ಅಗತ್ಯ ವಸ್ತುಗಳನ್ನು ಡ್ರೋನ್‍ನಲ್ಲಿ ವಿತರಿಸಿ ಗಮನ ಸೆಳೆದಿದ್ದರು.

Continue Reading
Advertisement
Oil Tanker Capsizes
ವಿದೇಶ10 mins ago

Oil Tanker Capsizes: ತೈಲ ತುಂಬಿದ್ದ ಹಡಗು ಮುಳುಗಡೆ; 13 ಭಾರತೀಯರು ಜಲಸಮಾಧಿ

Team India
ಪ್ರಮುಖ ಸುದ್ದಿ17 mins ago

Team India : ಶ್ರೀಲಂಕಾ ಪ್ರವಾಸದ ಟಿ20 ಸರಣಿಗೆ ಹಾರ್ದಿಕ್ ಬದಲಿಗೆ ಸೂರ್ಯಕುಮಾರ್ ನಾಯಕ

Ananth Ambani Wedding
ದೇಶ38 mins ago

Anant Ambani Wedding: ಅನಂತ್‌ ಅಂಬಾನಿ ಮದುವೆಯಲ್ಲಿ ಬಾಂಬ್‌ ಸ್ಫೋಟಕ್ಕೆ ನಡೆದಿತ್ತಾ ಸಂಚು? ಕಿಡಿಗೇಡಿ ಅರೆಸ್ಟ್‌

Yuvraj Singh
ಕ್ರೀಡೆ48 mins ago

Yuvraj Singh : ಅಂಗವಿಕಲರಂತೆ ರೀಲ್ಸ್​ ಮಾಡಿದ ಯುವರಾಜ್​, ಹರ್ಭಜನ್​ ಸಿಂಗ್ ವಿರುದ್ಧ ದೂರು ದಾಖಲು

Mosaic of Modernity art exhibition by Gallery G in Bengaluru
ಕರ್ನಾಟಕ1 hour ago

Bengaluru News: ಬೆಂಗಳೂರಿನಲ್ಲಿ ಗ್ಯಾಲರಿ ಜಿ ಯಿಂದ ‘ಮೊಸಾಯಿಕ್ ಆಫ್ ಮಾಡರ್ನಿಟಿ’ ಕಲಾ ಪ್ರದರ್ಶನ

Viral Video
ವೈರಲ್ ನ್ಯೂಸ್1 hour ago

Viral Video: ಪಕ್ಷದ ಕಾರ್ಯಕರ್ತನಿಗೆ ರಪ್‌ ಅಂತಾ ಕೆನ್ನೆಗೆ ಬಾರಿಸಿದ ಟಿಎಂಸಿ ನಾಯಕಿ; ವಿಡಿಯೋ ಇದೆ

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : 30 ಎಸೆತಕ್ಕೆ 30 ರನ್​ ಇದ್ದಾಗ ದಿಕ್ಕೇ ತೋಚದಂತಾಗಿದ್ದೆ! ಆ ತಲ್ಲಣ ವಿವರಿಸಿದ ಶರ್ಮಾ

Assembly Session
ಕರ್ನಾಟಕ2 hours ago

Assembly Session: ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದ ಡಿಕೆಶಿ!

A 15 year old boy weighing 111 kg underwent successful spinal disc surgery that avoided potential paralysis
ಕರ್ನಾಟಕ2 hours ago

Fortis Hospital: 111 ಕೆಜಿ ತೂಕವಿದ್ದ ಬಾಲಕನಿಗೆ ಪಾರ್ಶ್ವವಾಯು ತಪ್ಪಿಸಿದ ʼಬೆನ್ನೆಲುಬಿನ ಡಿಸ್ಕ್ʼ ಶಸ್ತ್ರಚಿಕಿತ್ಸೆ

Pooja Khedkar
ದೇಶ2 hours ago

Pooja Khedkar: ಪೂಜಾ ಖೇಡ್ಕರ್‌ ಪುಣೆ ಜಿಲ್ಲಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ11 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ13 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌