Viral Video: ಮಕ್ಕಳು ಫುಟ್ಬಾಲ್ ಆಡುತ್ತಿದ್ದ ಮೈದಾನದ ಮೇಲೆ ಇಸ್ರೇಲ್ ಬಾಂಬ್ ದಾಳಿ; ಭೀಕರ ದೃಶ್ಯ ವಿಡಿಯೊದಲ್ಲಿ ಸೆರೆ - Vistara News

Latest

Viral Video: ಮಕ್ಕಳು ಫುಟ್ಬಾಲ್ ಆಡುತ್ತಿದ್ದ ಮೈದಾನದ ಮೇಲೆ ಇಸ್ರೇಲ್ ಬಾಂಬ್ ದಾಳಿ; ಭೀಕರ ದೃಶ್ಯ ವಿಡಿಯೊದಲ್ಲಿ ಸೆರೆ

Viral Video: ಗಾಜಾದ ಅಬಾಸಾನ್ನ ಅಲ್-ಅವ್ದಾ ಶಾಲೆಯ ಮಕ್ಕಳು ಫುಟ್ಬಾಲ್ ಆಡುತ್ತಿದ್ದಾಗ ಇಸ್ರೇಲ್ ಬಾಂಬ್ ದಾಳಿ ನಡೆಸಿದೆ.‌ ಜನರು ಜೀವ ಉಳಿಸಿಕೊಳ್ಳಲು ಪ್ರಾಣಭಯದಿಂದ ಓಡಿದ್ದಾರೆ. ಈ ದಾಳಿ ವೇಳೆ ಮಧ್ಯ ಗಾಜಾದಲ್ಲಿ ಆರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ 25 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ, ಅವರಲ್ಲಿ ಕೆಲವರು ಇಸ್ರೇಲ್ ಮಿಲಿಟರಿ ಘೋಷಿಸಿದ “ಸುರಕ್ಷಿತ ವಲಯ”ದೊಳಗೇ ಇದ್ದರು ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಾಜಾ: ದೇಶ ದೇಶಗಳ ನಡುವೆ ಆಗಾಗ ಯುದ್ಧಗಳು ನಡೆಯುತ್ತಿರುತ್ತದೆ. ಕೆಲವೊಮ್ಮೆ ಈ ಯುದ್ಧ ಅತಿರೇಕಕ್ಕೆ ಹೋಗಿ ನೇರವಾಗಿ ಒಂದು ದೇಶದ ಮೇಲೆ ಮತ್ತೊಂದು ದೇಶ ಬಾಂಬ್ ದಾಳಿ ನಡೆಸುತ್ತದೆ. ಇದರಲ್ಲಿ ಹಲವಾರು ಜನರು ಸಾವನಪ್ಪುತ್ತುತ್ತಾರೆ. ಅಂತಹದೊಂದು ಘಟನೆ ಗಾಜಾದಲ್ಲಿ ನಡೆದಿದೆ. ಗಾಜಾದ ಅಲ್-ಅವ್ದಾ ಶಾಲೆಯಲ್ಲಿ ಫುಟ್ಬಾಲ್ ಆಡುತ್ತಿದ್ದ ಮಕ್ಕಳ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು, ಈ ಭಯಾನಕ ಕ್ಷಣವನ್ನು ತೋರಿಸುವ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video )ಆಗಿದೆ.

ವಿಡಿಯೊದಲ್ಲಿ ಅಬಾಸಾನ್‌ನ ಅಲ್-ಅವ್ದಾ ಶಾಲೆಯಲ್ಲಿ ಮಕ್ಕಳು ಫುಟ್‌ಬಾಲ್ ಆಡುತ್ತಿದ್ದರು. ಅಲ್ಲಿ ಫುಟ್ಬಾಲ್ ಪಂದ್ಯಕ್ಕಾಗಿ ಡಜನ್ ಗಟ್ಟಲೆ ಜನರು ಜಮಾಯಿಸಿದ್ದರು. ಆ ವೇಳೆ ಶಾಲೆಯ ಹೊರಗೆ ಸ್ಫೋಟ ಸಂಭವಿಸಿದ್ದು, ಜನರು ಜೀವ ಉಳಿಸಿಕೊಳ್ಳಲು ಪ್ರಾಣಭಯದಿಂದ ಓಡಾಡುತ್ತಿರುವುದು ಕಂಡುಬಂದಿದೆ. ಈ ದಾಳಿಯಲ್ಲಿ ಮಧ್ಯ ಗಾಜಾದಲ್ಲಿ ಆರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ 25 ಪ್ಯಾಲೆಸ್ತೀನ್‌ಯನ್ನರು ಸಾವನ್ನಪ್ಪಿದ್ದಾರೆ, ಅವರಲ್ಲಿ ಕೆಲವರು ಇಸ್ರೇಲ್ ಮಿಲಿಟರಿ ಘೋಷಿಸಿದ “ಸುರಕ್ಷಿತ ವಲಯ” ದೊಳಗೆ ಇದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ದಾಳಿಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ಕೂಡಲೇ, ಇಸ್ರೇಲ್ ಸೇನೆಯು ಶಾಲೆಯ ಬಳಿ ವೈಮಾನಿಕ ದಾಳಿ ಮತ್ತು ನಾಗರಿಕರ ಸಾವುನೋವುಗಳ ವರದಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದೆ. ಅಕ್ಟೋಬರ್ 7 ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಭಾಗವಹಿಸಿದ ಹಮಾಸ್ ಉಗ್ರಗಾಮಿಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿರುದಾಗಿ ತಿಳಿಸಿದೆ. ಆದರೆ ಇಸ್ರೇಲ್ ಸೈನ್ಯವು ತನ್ನ ಹೇಳಿಕೆಗಳನ್ನು ಬೆಂಬಲಿಸಲು ಯಾವುದೇ ಪುರಾವೆಗಳನ್ನು ಒದಗಿಸಲಿಲ್ಲ ಎನ್ನಲಾಗಿದೆ.

ಇದರ ಮಧ್ಯೆ ಇಸ್ರೇಲಿ ಮಿಲಿಟರಿ ಎಲ್ಲಾ ಪ್ಯಾಲೆಸ್ತೀನ್‌ರಿಗೆ ಮುತ್ತಿಗೆ ಹಾಕಿದ ನಗರವಾದ ಗಾಜಾ ನಗರದಿಂದ ಸ್ಥಳಾಂತರಿಸಗೊಳ್ಳುವಂತೆ ಆದೇಶಿಸಿ ಪತ್ರ ಬಿಡುಗಡೆ ಮಾಡಿದೆ. ಹಾಗಾಗಿ ಇತ್ತೀಚಿನ ದಿನಗಳಲ್ಲಿ ಸಾವಿರಾರು ಪ್ಯಾಲೆಸ್ತೀನ್‌ಯರು ಪಲಾಯನ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಣವೀರ್‌ ಎದುರೇ ದೀಪಿಕಾ ಬೇಬಿ ಬಂಪ್ ಮೇಲೆ ಕೈಯಿಟ್ಟ ಒರಿ; ನೆಟ್ಟಿಗರಿಗೆ ಉರಿ!

ಅಕ್ಟೋಬರ್‌ನಿಂದ ಗಾಜಾದಲ್ಲಿ ಇಸ್ರೇಲ್‍ನ ಸಂಘರ್ಷದಲ್ಲಿ ಕನಿಷ್ಠ 38,243 ಸಾವುಗಳು ಮತ್ತು 88,243 ಜನರು ಗಾಯಗೊಂಡಿದ್ದಾರೆ. ಅಕ್ಟೋಬರ್ 7 ರಂದು ಹಮಾಸ್ ನೇತೃತ್ವದ ದಾಳಿಯಿಂದ ಇಸ್ರೇಲ್‍ನಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸುಮಾರು 1,139 ರಷ್ಟಿದೆ, ಅನೇಕರು ಇನ್ನೂ ಗಾಜಾದಲ್ಲಿ ಸೆರೆಯಾಳುಗಳಾಗಿದ್ದಾರೆ ಎನ್ನಲಾಗಿದೆ.
.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BJP-JDS Padayatra: ವಾಲ್ಮೀಕಿ ನಿಗಮ, ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಶೇರ್ ಹೋಲ್ಡರ್: ಪ್ರಲ್ಹಾದ್‌ ಜೋಶಿ ಆರೋಪ

BJP-JDS Padayatra: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾತೆತ್ತಿದರೆ ತಮ್ಮ ಜೀವನ ತೆರೆದ ಪುಸ್ತಕ, ತಾವು ಶುದ್ಧ ಹಸ್ತದ ರಾಜಕಾರಣ ಎನ್ನುತ್ತಾರೆ ಆದರೆ, 2013-18 ರವರೆಗೆ ರಿಡು ಮಾಡಿದ್ಯಾರು? 80 ಲಕ್ಷ ರೂ. ವಾಚ್ ಕಟ್ಟಿ ವಿವಾದವಾಗುತ್ತಲೇ ವಾಪಸ್ ಕೊಟ್ಟಿದ್ಯಾರು ಎಂದು ಪ್ರಶ್ನಿಸಿದ ಪ್ರಲ್ಹಾದ್‌ ಜೋಶಿ, ಸಿಎಂ ಸಿದ್ದರಾಮಯ್ಯ ಅಂದೂ ಭ್ರಷ್ಟಾಚಾರಿ, ಇಂದೂ ಭ್ರಷ್ಟಾಚಾರಿಯೇ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

VISTARANEWS.COM


on

Union Minister Pralhad Joshi latest statement at Mysore Chalo Padayatra
Koo

ಬೆಂಗಳೂರು: ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಹ ಶೇರ್ ಹೋಲ್ಡರ್ಸ್ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (BJP-JDS Padayatra) ನೇರ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಇಂದು ಎನ್‌ಡಿಎ ಮೈತ್ರಿಕೂಟದ ನೇತೃತ್ವದಲ್ಲಿ ನಡೆಸಿದ ಮೈಸೂರು ಚಲೋ ಪಾದಯಾತ್ರೆ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಸಚಿವರು, ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ಈ ಹಗರಣಗಳಲ್ಲಿ ಪಾಲುದಾರರು. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ಧೈರ್ಯ ಅವರಿಗಿಲ್ಲವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Pralhad Joshi: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್‌‌ನಿಂದ ರಾಜಕೀಯ; ಪ್ರಲ್ಹಾದ್‌ ಜೋಶಿ

ಕಾಂಗ್ರೆಸ್ ಹೈಕಮಾಂಡ್‌ನ ಈ ಇಬ್ಬರೂ ನಾಯಕರು ಭ್ರಷ್ಟಾಚಾರ ಪ್ರಕರಣದಲ್ಲಿ ಬೇಲ್ ಪಡೆದು ಹೊರಗಿದ್ದಾರೆ. ಈಗ ರಾಜ್ಯದಲ್ಲಿ ವಾಲ್ಮೀಕಿ, ಮುಡಾ ಹಗರಣದಲ್ಲಿ ಜೈಲಿಗೆ ಹೋಗುವವರನ್ನು ತಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಿಎಂ ಮನೆಗೆ ಹೋಗೋ ಕಾಲ ಬಂದಿದೆ

ವಾಲ್ಮೀಕಿ ನಿಗಮ ಮತ್ತು ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಹಾಗಾಗಿ ಇದರ ವಿರುದ್ಧ ಕಾನೂನು ಮತ್ತು ರಾಜಕೀಯವಾಗಿ ಹೋರಾಟ ಮಾಡಿ ಈ ಭ್ರಷ್ಟಾಚಾರ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಹಾಡುತ್ತೇವೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಸಿದರು.

ರಿಡು- 80 ಲಕ್ಷ ವಾಚ್ ರೂವಾರಿ ಯಾರು?

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾತೆತ್ತಿದರೆ ತಮ್ಮ ಜೀವನ ತೆರೆದ ಪುಸ್ತಕ, ತಾವು ಶುದ್ಧ ಹಸ್ತದ ರಾಜಕಾರಣ ಎನ್ನುತ್ತಾರೆ ಆದರೆ, 2013-18 ರವರೆಗೆ ರಿಡು ಮಾಡಿದ್ಯಾರು? 80 ಲಕ್ಷ ರು. ವಾಚ್ ಕಟ್ಟಿ ವಿವಾದವಾಗುತ್ತಲೇ ವಾಪಸ್ ಕೊಟ್ಟಿದ್ಯಾರು? ಎಂದು ಪ್ರಶ್ನಿಸಿದ ಪ್ರಲ್ಹಾದ್‌ ಜೋಶಿ, ಸಿಎಂ ಸಿದ್ದರಾಮಯ್ಯ ಅಂದೂ ಭ್ರಷ್ಟಾಚಾರಿ, ಇಂದೂ ಭ್ರಷ್ಟಾಚಾರಿಯೇ ಎಂದು ಆರೋಪಿಸಿದರು.

ಇದನ್ನೂ ಓದಿ: National Cricket Academy : ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ 45 ಪಿಚ್​ಗಳಿರುವ ಬೃಹತ್​​ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ

ಭ್ರಷ್ಟ ಕಾಂಗ್ರೆಸ್ ಕಿತ್ತೊಗೆಯಿರಿ

ದೇಶದಲ್ಲೇ ಆಗಲಿ, ರಾಜ್ಯದಲ್ಲೇ ಆಗಲಿ ಕಾಂಗ್ರೆಸ್ ಆಡಳಿತ ಇದ್ದಾಗ ಭ್ರಷ್ಟಾಚಾರದಲ್ಲಿ ಮುಳುಗಿದೆ. ಭ್ರಷ್ಟಾಚಾರ ಕಾಂಗ್ರೆಸ್ಸಿಗರಿಗೆ ರಕ್ತಗತವಾಗಿ ಬಂದಿದ್ದು, ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕಿತ್ತೆಸೆಯಿರಿ ಎಂದು ಸಚಿವರು ತಿಳಿಸಿದರು.

Continue Reading

ಕರ್ನಾಟಕ

MB Patil: ರಾಜ್ಯ ಸರ್ಕಾರವನ್ನು ಉರುಳಿಸಲು ಬಿಜೆಪಿ, ಜೆಡಿಎಸ್ ಷಡ್ಯಂತ್ರ; ಎಂ‌.ಬಿ. ಪಾಟೀಲ ಆರೋಪ

MB Patil: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರ ಏನೇನೂ ಇಲ್ಲ. ಸ್ವತಃ ಮುಡಾ ತನ್ನ ತಪ್ಪನ್ನು ಒಪ್ಪಿಕೊಂಡು, ಮುಖ್ಯಮಂತ್ರಿಗಳ ಪತ್ನಿಗೆ ಬದಲಿ ನಿವೇಶನಗಳನ್ನು ಕೊಟ್ಟಿದೆ. ಇದೆಲ್ಲ ನಡೆದಿರುವುದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ. ಆಗ ಮುಡಾದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಾಯಕರಾದ ಸಾ.ರಾ. ಮಹೇಶ್, ಜಿ.ಟಿ. ದೇವೇಗೌಡ ಮತ್ತು ರಾಮದಾಸ್ ಅವರೇ ಇದ್ದರು ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ಆರೋಪಿಸಿದ್ದಾರೆ.

VISTARANEWS.COM


on

Minister MB Patil statement in janandolana programme by congress party at ramanagara
Koo

ರಾಮನಗರ: ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಅವರ ಸರ್ಕಾರವನ್ನು ಉರುಳಿಸಲು ಬಿಜೆಪಿ ಮತ್ತು ಜೆಡಿಎಸ್ ಷಡ್ಯಂತ್ರ ರೂಪಿಸಿವೆ. ಇದರ ಹಿಂದೆ ನರೇಂದ್ರ ಮೋದಿ ಮತ್ತು ಅಮಿತ್ ಷಾ ಇದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ (MB Patil) ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯ ವಿರುದ್ಧ ಕಾಂಗ್ರೆಸ್ ಪಕ್ಷವು ಶನಿವಾರ ಇಲ್ಲಿ ಹಮ್ಮಿಕೊಂಡಿದ್ದ ಜನಾಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರ ಏನೇನೂ ಇಲ್ಲ. ಸ್ವತಃ ಮುಡಾ ತನ್ನ ತಪ್ಪನ್ನು ಒಪ್ಪಿಕೊಂಡು, ಮುಖ್ಯಮಂತ್ರಿಗಳ ಪತ್ನಿಗೆ ಬದಲಿ ನಿವೇಶನಗಳನ್ನು ಕೊಟ್ಟಿದೆ. ಇದೆಲ್ಲ ನಡೆದಿರುವುದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ. ಆಗ ಮುಡಾದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಾಯಕರಾದ ಸಾ.ರಾ. ಮಹೇಶ್, ಜಿ.ಟಿ. ದೇವೇಗೌಡ ಮತ್ತು ರಾಮದಾಸ್ ಅವರೇ ಇದ್ದರು ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

ಈಗ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಒಂದು ಖಾಸಗಿ ದೂರಿನ ಮೇಲೆ ರಾಜ್ಯಪಾಲರು ಸಿದ್ದರಾಮಯ್ಯ ಅವರಿಗೆ ನೋಟಿಸ್ ಕೊಟ್ಟಿದ್ದಾರೆ. ಈ ಮೂಲಕ ಅವರು ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಆದರೆ ನಾವು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಅವ್ಯವಹಾರಗಳನ್ನು ಬಯಲಿಗೆ ಎಳೆಯಲಿದ್ದೇವೆ ಎಂದು ಸಚಿವರು ತಿಳಿಸಿದರು.

ಯಡಿಯೂರಪ್ಪನವರು ಮಾರಿಷಸ್‌ನಲ್ಲಿ ಹತ್ತು ಸಾವಿರ ಕೋಟಿ ರೂಪಾಯಿ ಇಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರೇ ಆರೋಪಿಸಿದ್ದಾರೆ. ಮೋದಿ ಸರ್ಕಾರವು ನಮಗೆ ಬರ ಪರಿಹಾರ, ಬಜೆಟ್ ಹಂಚಿಕೆ, ತೆರಿಗೆ ವಿತರಣೆ ಎಲ್ಲದರಲ್ಲೂ ಅನ್ಯಾಯ ಮಾಡುತ್ತಿದೆ. ಈಗ ಚುನಾಯಿತ ಸರ್ಕಾರವನ್ನು ಉರುಳಿಸುವ ದುಸ್ಸಾಹಸಕ್ಕೆ ಬಿಜೆಪಿ ಮತ್ತು ಜೆಡಿಎಸ್ ಇಳಿದಿವೆ ಎಂದು ಆರೋಪಿಸಿದರು.

ಎಚ್.ಡಿ. ಕುಮಾರಸ್ವಾಮಿ ಅವರಿಗೆ ಯಾವ ಸಿದ್ಧಾಂತವೂ ಇಲ್ಲ. ಹೇಗಾದರೂ ಮಾಡಿ ಅಧಿಕಾರ ಹಿಡಿಯುವುದೇ ಅವರ ಸೂತ್ರ. ಹಿಂದೆ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಆದರು. ಈಗ ಬಿಜೆಪಿಯನ್ನು ಹಿಡಿದುಕೊಂಡು ಹೋಗಿದ್ದಾರೆ. ಹಿಂದುಳಿದವರು ಮತ್ತು ದಮನಿತರ ಪರವಾಗಿ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ವಿರುದ್ಧ ಈಗ ಅವರು ಕಾಲು‌ ಕೆರೆಯುತ್ತಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ ಟೀಕಿಸಿದರು.

ಇದನ್ನೂ ಓದಿ: Ginger Benefits: ಮಳೆಗಾಲದ ಸೋಂಕುಗಳಿಗೆ ಬೇಕು ಶುಂಠಿಯೆಂಬ ಮದ್ದು!

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ ಡಾ.ಎಂ.ಸಿ.ಸುಧಾಕರ, ಜಮೀರ್ ಅಹಮದ್, ಕೆ.ಎಚ್. ಮುನಿಯಪ್ಪ, ಡಾ. ಶರಣು ಪ್ರಕಾಶ ಪಾಟೀಲ್, ಶಾಸಕ ಇಕ್ಬಾಲ್ ಹುಸೇನ್, ಮಾಜಿ ಸಂಸದ ಡಿ.ಕೆ. ಸುರೇಶ್‌ ಹಾಗೂ ಇತರರು ಪಾಲ್ಗೊಂಡಿದ್ದರು.

Continue Reading

Latest

Wayanad Tragedy: ವಯನಾಡ್ ಭೂಕುಸಿತ; ದಕ್ಷಿಣ ಭಾರತದ ಸಿನಿಮಾ ನಟರಿಂದ ಸಂತ್ರಸ್ತರಿಗೆ ನೆರವಿನ‌ ಮಹಾಪೂರ

Wayanad Tragedy: ಭಾರೀ ಮಳೆಯಿಂದಾಗಿ ಕೇರಳದ ವಯನಾಡ್ ಗುಡ್ಡಗಾಡು ಪ್ರದೇಶಗಳಲ್ಲಿ ಮುಂಜಾನೆ ಭಾರಿ ಭೂಕುಸಿತ ಉಂಟಾಗಿದೆ. ಇದರಿಂದ ಮುನ್ನೂರಕ್ಕೂ ಹೆಚ್ಚು ಜನರು ಸಾವನಪ್ಪಿದ್ದಾರೆ. ನೂರಾರು ಜನ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಚಲನಚಿತ್ರೋದ್ಯಮದ ಸೆಲೆಬ್ರಿಟಿಗಳಾದ ಮೋಹನ್‌‌ಲಾಲ್, ನಟಿ ಜ್ಯೋತಿಕಾ, ನಟ ಕಾರ್ತಿ ಮತ್ತು ಸೂರ್ಯ, ಫಹಾದ್ ಫಾಸಿಲ್ ಮತ್ತು ನಜ್ರಿಯಾ ನಜೀಮ್, ನಟ ವಿಕ್ರಮ್, ಮಮ್ಮುಟ್ಟಿ ಮತ್ತು ಅವರ ಪುತ್ರ ಮತ್ತು ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಸಂತ್ರಸ್ತರಿಗೆ ಸಹಾಯ ಮಾಡಲು ಮುಂದೆ ಬಂದಿದ್ದಾರೆ.

VISTARANEWS.COM


on

Wayanad Tragedy
Koo

ಭಾರೀ ಮಳೆಯಿಂದಾಗಿ ಕೇರಳದ ವಯನಾಡ್ ಜಿಲ್ಲೆಯ (Wayanad Tragedy )ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ (ಜುಲೈ 30) ಮುಂಜಾನೆ ಭಾರಿ ಭೂಕುಸಿತ ಉಂಟಾಗಿದೆ. ಇದರಿಂದ ಹಲವು ಜನರು ಸಾವನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಬದುಕುಳಿದವರಲ್ಲಿ ಅನೇಕ ಜನರು ತಮ್ಮ ಮನೆ, ಕುಟುಂಬದವರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಈ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಚಲನಚಿತ್ರೋದ್ಯಮದ ಹಲವಾರು ಸೆಲೆಬ್ರಿಟಿಗಳು ಸಂತ್ರಸ್ತರಿಗೆ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ಅದಕ್ಕಾಗಿ ತಮ್ಮ ಕೈಲಾದಷ್ಟು ಸಹಾಯ ಹಸ್ತ ನೀಡಿದ್ದಾರೆ.

ಖ್ಯಾತ ನಟ ಮೋಹನ್ ಲಾಲ್ 3 ಕೋಟಿ ರೂ. ನೆರವು ನೀಡಿದ್ದಾರೆ. ನಟಿ ಜ್ಯೋತಿಕಾ, ನಟ ಕಾರ್ತಿ ಮತ್ತು ನಟ ಸೂರ್ಯ ಅವರು ಕೇರಳದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಹಾಗೇ ಮಲಯಾಳಂ ನಟ ದಂಪತಿ ಫಹಾದ್ ಫಾಸಿಲ್ ಮತ್ತು ನಜ್ರಿಯಾ ನಜೀಮ್ ಕೂಡ ಸಂತ್ರಸ್ತರಿಗೆ ಸಹಾಯ ಮಾಡಲು 25 ಲಕ್ಷ ರೂ. ನೀಡಿದ್ದಾರೆ. ಅವರು ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿ, “ನಾವು ಸಿಎಂಡಿಆರ್ ಎಫ್ ಗೆ 25 ಲಕ್ಷ ರೂ.ಗಳ ದೇಣಿಗೆ ನೀಡುತ್ತಿದ್ದೇವೆ. ಇದನ್ನು ತೀವ್ರ ಅಗತ್ಯವಿರುವವರಿಗೆ ಅಗತ್ಯತೆಗಳನ್ನು ಪೂರೈಸಲು ಸಹಾಯ ಮಾಡುತ್ತದೆ ಎಂದು ನಾವು ಭಾವಿಸುತ್ತೇವೆ” ಎಂಬುದಾಗಿ ತಿಳಿಸಿದ್ದಾರೆ.

ಹಾಗೇ ಪೊನ್ನಿಯಿನ್ ಸೆಲ್ವನ್ ಪಾರ್ಟ್ 1 ಮತ್ತು ರಾವಣನ್‍ನಂತಹ ಚಿತ್ರಗಳಲ್ಲಿ ನಟಿಸಿದ ಖ್ಯಾತ ತಮಿಳು ನಟ ವಿಕ್ರಮ್ ಭೂಕುಸಿತದ ಸಂತ್ರಸ್ತರಿಗೆ 20 ಲಕ್ಷ ರೂ. ನೀಡಿದ್ದಾರೆ. ಈ ವಿಚಾರವನ್ನು ಅವರ ಮ್ಯಾನೇಜರ್ ಯುವರಾಜ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ತಬ್ಬಲಿ ಶಿಶುಗಳಿಗೆ ಎದೆಹಾಲು ನೀಡಿ ಪೋಷಿಸಿದ ʼಮಹಾತಾಯಿʼಗೆ ವ್ಯಾಪಕ ಪ್ರಶಂಸೆ

ಅಲ್ಲದೇ ಮಲಯಾಳಂ ನಟ ಮಮ್ಮುಟ್ಟಿ ಮತ್ತು ಅವರ ಪುತ್ರ ಮತ್ತು ನಟ ದುಲ್ಕರ್ ಸಲ್ಮಾನ್ ಕೂಡ ಪರಿಹಾರ ನಿಧಿಗೆ 35 ಲಕ್ಷ ರೂ. ನೀಡಿದ್ದಾರೆ. ಈ ವಿಚಾರವನ್ನು ನಟ ಮುಮ್ಮಟಿ ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ. ವರದಿಗಳ ಪ್ರಕಾರ, ಅವರ ಚಾರಿಟಬಲ್ ಟ್ರಸ್ಟ್ ತೀವ್ರ ಅಗತ್ಯವಿರುವವರಿಗೆ ಸಹಾಯ ಮಾಡುತ್ತಿದೆ ಮತ್ತು ಸಂತ್ರಸ್ತರಿಗೆ ಅಗತ್ಯ ವಸ್ತುಗಳಾದ ಆಹಾರ ಪದಾರ್ಥಗಳು, ಔಷಧಿಗಳು, ಬಟ್ಟೆಗಳು ಮತ್ತು ಇತರ ಪ್ರಮುಖ ವಸ್ತುಗಳನ್ನು ಪೂರೈಸುತ್ತಿದೆ ಎಂಬುದಾಗಿ ತಿಳಿದುಬಂದಿದೆ. ಹಾಗೇ ನಟಿ ರಶ್ಮಿಕಾ ಮಂದಣ್ಣ ಕೂಡ ಸಂತ್ರಸ್ತರಿಗೆ 10 ಲಕ್ಷ ರೂ. ದೇಣಿಗೆ ನೀಡಿರುವುದಾಗಿ ತಿಳಿದುಬಂದಿದೆ.

Continue Reading

Latest

Viral Video: ಮೈಗೆ ಟವೆಲ್ ಸುತ್ತಿಕೊಂಡು ಬೀದಿ ತುಂಬಾ ಓಡಾಡಿದ ಯುವತಿ; ನೋಡಿದ ಜನ ಸುಸ್ತು!

Viral Video: ಮಿಂತ್ರಾ ಫ್ಯಾಷನ್ ಸೂಪರ್ ಸ್ಟಾರ್ ವಿಜೇತೆ ಮತ್ತು ಇನ್ಸ್ಟಾಗ್ರಾಂನಲ್ಲಿ 37,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ತನುಮಿತಾ ಘೋಷ್ ಇತ್ತೀಚೆಗೆ ಮುಂಬೈನ ಜನರು ಓಡಾಡುತ್ತಿದ್ದ ಬೀದಿಗಳಲ್ಲಿ ದೇಹಕ್ಕೆ ಟವೆಲ್ ಸುತ್ತಿಕೊಂಡು ಪ್ರದರ್ಶನ ನೀಡಿದವರು. ಈ ವೈರಲ್ ಆಗಿರುವ ವಿಡಿಯೊದಲ್ಲಿ, ತನುಮಿತಾ ಟವೆಲ್ ಸುತ್ತಿಕೊಂಡು ಯಾವುದೇ ಮುಜುಗರವಿಲ್ಲದೇ ನಡೆದಿದ್ದು ಕಂಡು ಬಂದಿದೆ. ಇದನ್ನು ನೋಡಿದವರಿಗೆ ಆಕೆ ಬಾತ್‍ರೂಂನಿಂದ ಹೊರಬಂದಂತೆ ಕಾಣಿಸುತ್ತದೆ. ಆದರೆ ಅಸಲಿ ಕತೆ ಬೇರೆಯೇ ಇದೆ!

VISTARANEWS.COM


on

Viral Video
Koo


ಮುಂಬೈ : ಯುವಕ ಯುವತಿಯರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ವಿವಿಧ ರೀತಿಯ ರೀಲ್ಸ್ ಗಳನ್ನು ಮಾಡಲು ಹೋಗಿ ಕೋಲಾಹಲವನ್ನು ಸೃಷ್ಟಿಸುತ್ತಿದ್ದಾರೆ. ಸಾಮಾನ್ಯವಾಗಿ ಯುವತಿಯರು ಸ್ನಾನ ಮಾಡಿ ಬಾತ್‍ರೂಂನಿಂದ ಹೊರಗೆ ಬರುವಾಗ ದೇಹಕ್ಕೆ ಟವೆಲ್ ಸುತ್ತಿಕೊಂಡು ಮನೆಯೊಳಗೆ ಓಡಾಡುವುದನ್ನು ನಾವು ನೋಡಿರುತ್ತೇವೆ. ಆದರೆ ಇಲ್ಲೊಬ್ಬ ಯುವತಿ ತನ್ನ ದೇಹವನ್ನು ಟವೆಲ್‍ನಿಂದ ಸುತ್ತಿಕೊಂಡು ರಸ್ತೆಗೆ ಬಂದಿದ್ದಾಳೆ. ಇವಳನ್ನು ನೋಡಿ ದಾರಿಹೋಕರು ದಿಗ್ಭ್ರಮೆಗೊಂಡಿದ್ದಾರೆ. ಈ ವಿಡಿಯೊ ಸೊಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದ್ದು, ವ್ಯಾಪಕ ಚರ್ಚೆ ಮತ್ತು ಟೀಕೆಗೆ ಕಾರಣವಾಗಿದೆ.

ಮಿಂತ್ರಾ ಫ್ಯಾಷನ್ ಸೂಪರ್ ಸ್ಟಾರ್ ವಿಜೇತೆ ಮತ್ತು ಇನ್ಸ್ಟಾಗ್ರಾಂನಲ್ಲಿ 37,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ತನುಮಿತಾ ಘೋಷ್ ಇತ್ತೀಚೆಗೆ ಮುಂಬೈನ ಜನರು ಓಡಾಡುತ್ತಿದ್ದ ಬೀದಿಗಳಲ್ಲಿ ದೇಹಕ್ಕೆ ಟವೆಲ್ ಸುತ್ತಿಕೊಂಡು ಪ್ರದರ್ಶನ ನೀಡಿದವರು. ಈ ವೈರಲ್ ಆಗಿರುವ ವಿಡಿಯೊದಲ್ಲಿ, ತನುಮಿತಾ ಟವೆಲ್ ಸುತ್ತಿಕೊಂಡು ಯಾವುದೇ ಮುಜುಗರವಿಲ್ಲದೇ ನಡೆಯುತ್ತಿದ್ದಾರೆ. ಇದನ್ನು ನೋಡಿದವರಿಗೆ ಆಕೆ ಬಾತ್‍ರೂಂನಿಂದ ಹೊರಬಂದಂತೆ ಕಾಣಿಸುತ್ತದೆ. ವಿಡಿಯೊದಲ್ಲಿ ‘ತೌಬಾ-ತೌಬಾ’ ಹಾಡು ಹಿನ್ನೆಲೆಯಲ್ಲಿ ಪ್ಲೇ ಆಗುತ್ತಿದೆ. ಈ ವಿಡಿಯೊ ಶೀರ್ಷಿಕೆಯಲ್ಲಿ, ಮುಂಬೈನ ಪ್ರೇಕ್ಷಕರು ತನ್ನ ನೋಟವನ್ನು ನೋಡಿ ‘ತೌಬಾ-ತೌಬಾ’ ಎಂದು ಉದ್ಗರಿಸುತ್ತಿದ್ದಾರೆ ಎಂದು ಅವರು ಹಾಸ್ಯಮಯವಾಗಿ ಬರೆದಿದ್ದಾರೆ.

ಈ ಅಸಾಮಾನ್ಯ ಉಡುಗೆಯ ಜೊತೆಗೆ ಕಿವಿಯೋಲೆಗಳನ್ನು ಧರಿಸಿದ್ದರು ಮತ್ತು ಸ್ಟೈಲಿಶ್ ಸ್ಪೋರ್ಟ್ಸ್ ಶೂಗಳನ್ನು ಧರಿಸಿದ್ದರು. ಅವರು ಈ ವೇಷದಲ್ಲಿ ಬಸ್ ನಿಲ್ದಾಣದಿಂದ ಅಂಗಡಿಯ ಕಡೆಗೆ ಹೋಗುತ್ತಿದ್ದಾಗ, ಅಲ್ಲಿದ್ದ ದಾರಿಹೋಕರು ಇವರನ್ನು ದಿಟ್ಟಿಸಿ ನೋಡುತ್ತಿದ್ದಾರೆ. ಈ ವಿಡಿಯೊದ ಕೊನೆಯಲ್ಲಿ ತನುಮಿತಾ ತನ್ನ ಕೂದಲಿಗೆ ಹಾಗೂ ದೇಹಕ್ಕೆ ಸುತ್ತಿದ್ದ ಟವೆಲ್ ಅನ್ನು ತೆಗೆದಿದ್ದಾರೆ. ಆದರೆ ಅದರೊಳಗೆ ಅವರು ಬಟ್ಟೆ ಧರಿಸಿದರು. ಈ ವಿಡಿಯೊ ಪ್ರೇಕ್ಷಕರಿಗೆ ಹಾಗೂ ದಾರಿಹೋಕರಿಗೆ ಆಶ್ಚರ್ಯ ಮತ್ತು ಕುತೂಹಲವನ್ನುಂಟು ಮಾಡಿದಂತು ನಿಜ.

ಈ ವಿಡಿಯೊ ಇನ್ಸ್ಟಾಗ್ರಾಂನಲ್ಲಿ ವೈರಲ್ ಆಗಿದ್ದು, 10 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳು ಮತ್ತು ಸಾವಿರಾರು ಲೈಕ್‍ಗಳು ಮತ್ತು ಶೇರ್ ಗಳನ್ನು ಗಳಿಸಿದೆ. ಇದಕ್ಕೆ ಹಲವಾರು ಕಾಮೆಂಟ್‍ಗಳು ಸಹ ಬಂದಿವೆ, ಹೆಚ್ಚಿನವರು ಅವರ ಈ ಕಾರ್ಯದ ಉದ್ದೇಶ ಮತ್ತು ಪರಿಣಾಮವನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಪ್ಯಾರಿಸ್‌ಗೆ ಹೋದರೂ ಅಂಬಾನಿ ಸೊಸೆ ಕರಿಮಣಿ ಮರೆಯಲಿಲ್ಲ! ಸೋಷಿಯಲ್‌ ಮೀಡಿಯಾದಲ್ಲೀಗ ಇದೇ ಚರ್ಚೆ!

ಆದರೆ ತನುಮಿತಾ ಅವರು ಇದನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಮತ್ತು ಸೋನಾಕ್ಷಿ ಸಿನ್ಹಾ, ಶಲೀನಾ ನಥಾನಿ, ಮನೀಶ್ ಮಲ್ಹೋತ್ರಾ ಮತ್ತು ಡಿನೋ ಮೋರಿಯಾ ಅವರಂತಹ ಸೆಲೆಬ್ರಿಟಿಗಳಂತೆ ತಾನು ಮನರಂಜನೆಗಾಗಿ ಮಾಡಿರುವುದಾಗಿ ತಿಳಿಸಿದ್ದಾರೆ.ಅವರ ವಿವರಣೆಯ ಹೊರತಾಗಿಯೂ, ಕೆಲವು ಬಳಕೆದಾರರು ನಿರಾಶೆಯನ್ನು ವ್ಯಕ್ತಪಡಿಸುತ್ತಲೇ ಇದ್ದರು, ಇದು ಸಂಪ್ರದಾಯಸ್ಥ ಕುಟುಂಬದವರಿಗೆ ಮುಜುಗರವನ್ನುಂಟು ಮಾಡುವಂತಿದೆ ಎಂದು ಹೇಳಿದ್ದಾರೆ.

Continue Reading
Advertisement
Uttar Pradesh
ದೇಶ27 mins ago

ಪತ್ನಿ ಇದ್ದರೂ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ವ್ಯಕ್ತಿ ಸರಸ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ ಮಾಡಿದ್ದೇನು? Video ಇದೆ

Wasim Jaffer
ಕ್ರೀಡೆ1 hour ago

Wasim Jaffer : ಪಂಜಾಬ್ ತಂಡದ ಕೋಚ್​ ಆಗಿ ಮಾಜಿ ಬ್ಯಾಟರ್​ ವಾಸಿಮ್​ ಜಾಫರ್ ನೇಮಕ

Ayodhya
ದೇಶ1 hour ago

Ayodhya: ಅಯೋಧ್ಯೆಗೆ ವಿಮಾನ ತಲುಪುತ್ತಲೇ ಭೂಮಿಗೆ ನಮಸ್ಕರಿಸಿದ ಗಗನಸಖಿ; ಭುಗಿಲೆದ್ದಿತು ವಿವಾದ!

Wayanad Landslide
ಕರ್ನಾಟಕ2 hours ago

Wayanad Landslide: ವಯನಾಡು ಸಂತ್ರಸ್ತರಿಗೆ ಮಿಡಿದ ಕರುನಾಡು; ಸರ್ಕಾರದ ಜತೆಗೆ ಜನರಿಂದಲೂ ನೆರವು!

Kavya Maran
ಕ್ರಿಕೆಟ್3 hours ago

Kavya Maran : ಐಪಿಎಲ್​ ಆಟಗಾರರ ಹರಾಜಿನ ನಿಯಮಗಳ ಬಗ್ಗೆ ಕಾವ್ಯಾ ಮಾರನ್ ಇಟ್ಟಿರುವ ಬೇಡಿಕೆಗಳು ಇವು…

Champions Trophy 2025
ಪ್ರಮುಖ ಸುದ್ದಿ3 hours ago

Champions Trophy 2025 : ಚಾಂಪಿಯನ್ಸ್​ ಟ್ರೋಫಿಗಾಗಿ 544 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಐಸಿಸಿ

Viral Video
ವೈರಲ್ ನ್ಯೂಸ್3 hours ago

Viral Video: ಪ್ರವಾಹದಲ್ಲಿ ಸಿಲುಕಿದ ನಾಯಿಗಳಿಗೆ ಡ್ರೋನ್‌ ಮೂಲಕ ಬಿರಿಯಾನಿ ರವಾನೆ; ಮಾನವೀಯತೆ ಅಂದ್ರೆ ಇದು!

Best Teacher Award
ಕರ್ನಾಟಕ3 hours ago

Best Teacher Award: ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

Union Minister Pralhad Joshi latest statement at Mysore Chalo Padayatra
ಕರ್ನಾಟಕ4 hours ago

BJP-JDS Padayatra: ವಾಲ್ಮೀಕಿ ನಿಗಮ, ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಶೇರ್ ಹೋಲ್ಡರ್: ಪ್ರಲ್ಹಾದ್‌ ಜೋಶಿ ಆರೋಪ

Farmer dies after falling under power tiller wheel in Moralli village
ಉತ್ತರ ಕನ್ನಡ4 hours ago

Farmer Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ರೈತ ದಾರುಣ ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ12 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌