US Presidential Election: ಬಾಯ್ತಪ್ಪಿ ಕಮಲಾ ಹ್ಯಾರೀಸ್‌ ಬದಲಿಗೆ ಟ್ರಂಪ್‌ ಹೆಸರು ಪ್ರಸ್ತಾಪ; ಭಾರೀ ವೈರಲ್‌ ಆಗ್ತಿದೆ ಬೈಡೆನ್‌ ವಿಡಿಯೋ - Vistara News

ವಿದೇಶ

US Presidential Election: ಬಾಯ್ತಪ್ಪಿ ಕಮಲಾ ಹ್ಯಾರೀಸ್‌ ಬದಲಿಗೆ ಟ್ರಂಪ್‌ ಹೆಸರು ಪ್ರಸ್ತಾಪ; ಭಾರೀ ವೈರಲ್‌ ಆಗ್ತಿದೆ ಬೈಡೆನ್‌ ವಿಡಿಯೋ

US Presidential Election: ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಬೈಡೆನ್‌, ಕಮಲಾ ಹ್ಯಾರೀಸ್‌ ಪರ ಪ್ರಚಾರ ಮಾಡಿದರು. ಈ ವೇಳೆ ಮಾತನಾಡುತ್ತಾ ಉಪಾಧ್ಯಕ್ಷ ಟ್ರಂಪ್‌ ಅವರು ಅಧ್ಯಕ್ಷರಾಗಲು ಅರ್ಹರಲ್ಲ ಎಂದು ನಾನು ಭಾವಿಸದಿದ್ದರೆ ನಾನು ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡುತ್ತಿರಲಿಲ್ಲ ಎಂದು ಹೇಳಿದ್ದಾರೆ. ತಕ್ಷಣ ಪತ್ರಕರ್ತರೊಬ್ಬರು ಈ ತಪ್ಪನ್ನು ಪ್ರಸ್ತಾಪಿಸಿದಾಗ ಅದನ್ನು ಏನೂ ಮಾತನಾಡದೇ ಸುಮ್ಮನೆ ನಗಾಡಿದ್ದಾರೆ.

VISTARANEWS.COM


on

US Presidential Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್‌: ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅಥವಾ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ಬಾಯ್ತಪ್ಪಿ ಮಾತನಾಡುವುದು ಇದೆ. ಅಂತಹ ಹೇಳಿಕೆಗಳು ಕೆಲವೊಮ್ಮೆ ತೀರ ಅಸಂಬದ್ಧ ಹಾಗೂ ಹಾಸ್ಯಾಸ್ಪದವೂ ಆಗಿರುತ್ತದೆ. ಇದೀಗ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌(Joe Biden) ಕೂಡ ಇಂತಹದ್ದೇ ಒಂದು ಹೇಳಿಕೆಯಿಂದ ನಗೆಪಾಟಲಿಗೀಡಾಗಿದ್ದಾರೆ. ವಾಷಿಂಗ್ಟನ್‌ನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ(US Presidential Election) ಮಾತನಾಡುವಾಗ, ಉಪಾಧ್ಯಕ್ಷೆ ಕಮಲಾ ಹ್ಯಾರೀಸ್‌(Kamala Harris) ಹೆಸರಿಗೆ ಬದಲಾಗಿ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೆಸರು ಪ್ರಸ್ತಾಪಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಬೈಡೆನ್‌, ಕಮಲಾ ಹ್ಯಾರೀಸ್‌ ಪರ ಪ್ರಚಾರ ಮಾಡಿದರು. ಈ ವೇಳೆ ಮಾತನಾಡುತ್ತಾ ಉಪಾಧ್ಯಕ್ಷ ಟ್ರಂಪ್‌ ಅವರು ಅಧ್ಯಕ್ಷರಾಗಲು ಅರ್ಹರಲ್ಲ ಎಂದು ನಾನು ಭಾವಿಸದಿದ್ದರೆ ನಾನು ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡುತ್ತಿರಲಿಲ್ಲ ಎಂದು ಹೇಳಿದ್ದಾರೆ. ತಕ್ಷಣ ಪತ್ರಕರ್ತರೊಬ್ಬರು ಈ ತಪ್ಪನ್ನು ಪ್ರಸ್ತಾಪಿಸಿದಾಗ ಅದನ್ನು ಏನೂ ಮಾತನಾಡದೇ ಸುಮ್ಮನೆ ನಗಾಡಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದಿಂದ ಸತತ ಎರಡನೇ ಅವಧಿಗೆ ಆಯ್ಕೆ ಬಯಸಿರುವ ಹಾಲಿ ಅಧ್ಯಕ್ಷ ಜೋ ಬೈಡನ್ ಅವರಿಗೆ ಒಂದರ ಹಿಂದೊಂದರಂತೆ ಅಡೆತಡೆಗಳು ಎದುರಾಗುತ್ತಿವೆ. ಸ್ವಪಕ್ಷದಲ್ಲಿಯೇ ಬೈಡನ್ ಸ್ಪರ್ಧೆಗೆ ವಿರೋಧ ವ್ಯಕ್ತವಾಗುತ್ತಿದೆ. ಡೆಮಾಕ್ರಟಿಕ್ ಪಕ್ಷದ ಮುಂಚೂಣಿ ದೇಣಿಗೆದಾರರಲ್ಲಿ ಒಬ್ಬರಾದ ನಟ ಜಾರ್ಜ್ ಕ್ಲೂನಿ, ಚುನಾವಣೆಯಿಂದ ಹಿಂದೆ ಸರಿಯುವಂತೆ ಬೈಡನ್‌ಗೆ ಒತ್ತಾಯಿಸಿದ್ದಾರೆ.

ಆರಂಭದಿಂದಲೂ ಎಡವಟ್ಟುಗಳಿಂದಲೇ ತುಂಬಿರುವ ಜೋ ಬೈಡನ್ ಅವರ ಮರು ಚುನಾವಣೆ ಪ್ರಚಾರವನ್ನು ಅಂತ್ಯಗೊಳಿಸುವಂತೆ ಕ್ಲೂನಿ ಅವರು ಭಾವನಾತ್ಮಕ ಮನವಿಯನ್ನು ಸಲ್ಲಿಸಿದ್ದಾರೆ. ಡೆಮಾಕ್ರಟಿಕ್ ಪಕ್ಷಕ್ಕೆ ತೀವ್ರ ಬೆಂಬಲ ನೀಡುತ್ತಿರುವ ಹಾಲಿವುಡ್‌ನ ದಿಗ್ಗಜ ನಟರಲ್ಲಿ ಒಬ್ಬರಾಗಿರುವ ಕ್ಲೂನಿ, ಕಳೆದ ತಿಂಗಳು ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ವಿರುದ್ಧದ ಸಂವಾದದಲ್ಲಿನ ಜೋ ಬೈಡನ್ ಅವರ ಶೋಚನೀಯ ಪ್ರದರ್ಶನದ ಬಳಿಕ ಬೈಡನ್ ಅವರ ನಿರ್ಗಮನಕ್ಕೆ ಆಗ್ರಹಿಸಿರುತ್ತಿರುವ ಪ್ರಮುಖ ಗಣ್ಯರ ಸಾಲಿಗೆ ಸೇರಿದ್ದಾರೆ. ಬೈಡನ್ ಅವರಿಗೆ ಗೆಲುವು ಸಾಧಿಸುವುದು ಸಾಧ್ಯವಿಲ್ಲ ಎಂದು ಕ್ಲೂನಿ ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಂದೆಡೆ ಬೈಡೆನ್‌ ವಿರುದ್ಧ ಪ್ರತಿಸ್ಪರ್ಧಿ ಡೊನಾಲ್ಡ್‌ ಟ್ರಂಪ್‌ ವಾಗ್ದಾಳಿ ನಡೆಸಿದ್ದಾರೆ. ಬೈಡನ್‌‌ಗೆ ಬಹಿರಂಗ ಸವಾಲು ಹಾಕಿರುವ ಟ್ರಂಪ್‌, ಈ ವಾರ ತಮ್ಮ ಜೊತೆ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದಾರೆ. ಫ್ಲೋರಿಡಾದಲ್ಲಿ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಟ್ರಂಪ್, ಜಗತ್ತಿನ ಎದುರು ತಮ್ಮ ಸಾಮರ್ಥ್ಯ ಸಾಬೀತುಪಡಿಸಿಕೊಳ್ಳಲು ಜೋ ಬೈಡನ್‌ ಅವರಿಗೆ ಅಧಿಕೃತವಾಗಿ ಅವಕಾಶ ನೀಡುತ್ತಿದ್ದೇನೆ. ಈ ವಾರ ಮತ್ತೊಂದು ಚರ್ಚೆ ನಡೆಸೋಣ. ಈ ಬಾರಿ ನೇರಾನೇರ ಚರ್ಚೆ ಇರಲಿ, ಮಧ್ಯಸ್ಥಿಕೆಗೆ ಯಾರೂ ಬೇಡ. ಎಲ್ಲಿ, ಯಾವಾಗಲಾದರೂ ನಾನು ಸಿದ್ಧ ಎಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ:Viral Video: ಹೃಷಿಕೇಶದ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿದ ವಿದೇಶಿಯರ ಮೋಜು ಮಸ್ತಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Moon: ಭೂಮಿಯಿಂದ ದೂರ ಹೊರಟ ಚಂದ್ರ, ಮುಂದೆ ದಿನಕ್ಕೆ 24 ಅಲ್ಲ 25 ಗಂಟೆಗಳು ಇರಲಿವೆ!

Moon: ವರ್ಷದಿಂದ ವರ್ಷಕ್ಕೆ ಚಂದಿರನು ಭೂಮಿಯಿಂದ ದೂರವಾಗುತ್ತಿದ್ದಾನೆ ಎಂದು ಅಮೆರಿಕದ ಯುನಿವರ್ಸಿಟಿ ಆಫ್‌ ವಿಸ್ಕಾನ್ಸಿನ್-ಮ್ಯಾಡಿಸನ್‌ನ ತಜ್ಞರು ಮಾಡಿದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 90 ದಶಲಕ್ಷ ವರ್ಷದಷ್ಟು ಹಳೆಯದಾದ ಶಿಲೆಯ ಮೇಲೆ ಗಮನ ಕೇಂದ್ರೀಕರಿಸಿ ಅಧ್ಯಯನ ನಡೆಸಲಾಗಿದ್ದು, ಭೂಮಿಯಿಂದ ಚಂದ್ರನು ಬೇರ್ಪಡುವುದರಿಂದ ಆಗುವ ಪರಿಣಾಮಗಳ ಕುರಿತು ಕೂಡ ಅವರು ಬೆಳಕು ಚೆಲ್ಲಿದ್ದಾರೆ.

VISTARANEWS.COM


on

Moon
Koo

ನವದೆಹಲಿ: ಚಂದಿರನಿಗೂ ಮಾನವನಿಗೂ ಎಲ್ಲಿಲ್ಲದ ನಂಟು. ಚಂದಿರನನ್ನು ತೋರಿಸಿ ಅಮ್ಮ ಕೈತುತ್ತು ತಿನಿಸಿದ, ಚಂದ್ರನ ಬೆಳಕಿನಲ್ಲಿ ರಾತ್ರಿ ರೈತ ಜಮೀನಿನಲ್ಲಿ ಕೆಲಸ ಮಾಡಿದ, ಚಂದಿರನ ಬೆಳದಿಂಗಳಲ್ಲಿ ಊರೆಲ್ಲ ಸುತ್ತಾಡಿದ ನೆನಪುಗಳು ಕಾಡುತ್ತವೆ. ಇನ್ನು ದೇಶದ ಕವಿಗಳೂ ಅಷ್ಟೇ, ಚಂದಿರನ ಬಗ್ಗೆ ಬಗೆಬಗೆಯ ಕವಿತೆಗಳನ್ನು ಬರೆಯುವ ಮೂಲಕ ನಮಗೆ ಚಂದಿರ ಏಕೆ ಮುಖ್ಯ ಎಂಬುದನ್ನು ಸಾರಿದ್ದಾರೆ. ಚಂದಮಾಮ ಎಂದೂ ಕೂಡ ವರ್ಣಿಸಿದ್ದಾರೆ. ಇಂತಹ ಚಂದಮಾಮ ಈಗ ಭೂಮಿಯಿಂದ ದೂರವಾಗುತ್ತಿದ್ದಾನೆ. ಅಷ್ಟೇ ಅಲ್ಲ, ಮುಂದೆ ನಮಗೆ ದಿನದಲ್ಲಿ 24 ಗಂಟೆ ಬದಲು 25 ಗಂಟೆ ಇರಲಿವೆ ಎಂದು ಅಧ್ಯಯನವೊಂದು ಭೀಕರ ಮಾಹಿತಿಯನ್ನು ಬಿಚ್ಚಿಟ್ಟಿದೆ.

ಹೌದು, ವರ್ಷದಿಂದ ವರ್ಷಕ್ಕೆ ಚಂದಿರನು ಭೂಮಿಯಿಂದ ದೂರವಾಗುತ್ತಿದ್ದಾನೆ ಎಂದು ಅಮೆರಿಕದ ಯುನಿವರ್ಸಿಟಿ ಆಫ್‌ ವಿಸ್ಕಾನ್ಸಿನ್-ಮ್ಯಾಡಿಸನ್‌ನ ತಜ್ಞರು ಮಾಡಿದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 90 ದಶಲಕ್ಷ ವರ್ಷದಷ್ಟು ಹಳೆಯದಾದ ಶಿಲೆಯ ಮೇಲೆ ಗಮನ ಕೇಂದ್ರೀಕರಿಸಿ ಅಧ್ಯಯನ ನಡೆಸಲಾಗಿದ್ದು, ಭೂಮಿಯಿಂದ ಚಂದ್ರನು ಬೇರ್ಪಡುವುದರಿಂದ ಆಗುವ ಪರಿಣಾಮಗಳ ಕುರಿತು ಕೂಡ ಅವರು ಬೆಳಕು ಚೆಲ್ಲಿದ್ದಾರೆ. ಈ ಅಧ್ಯಯನ ವರದಿ ಈಗ ಜಗತ್ತಿನಾದ್ಯಂತ ಸುದ್ದಿಯಾಗಿದೆ.

ದಿನಕ್ಕೆ 25 ಗಂಟೆ ಹೇಗೆ?

ಪ್ರತಿ ವರ್ಷ ಚಂದ್ರನು ಭೂಮಿಯಿಂದ 3.8 ಸೆಂಟಿಮೀಟರ್‌ ದೂರವಾಗುತ್ತಿದ್ದಾನೆ. ಇದರಿಂದಾಗಿ ಭೂಮಿಯ ಒಂದು ದಿನದ ಅವಧಿಯು ಹೆಚ್ಚಾಗುತ್ತದೆ. ಅಂದರೆ, ಈಗ ದಿನಕ್ಕೆ 24 ಗಂಟೆ ಇದ್ದರೆ, ಮುಂಬರುವ ವರ್ಷಗಳಲ್ಲಿ ದಿನಕ್ಕೆ 25 ಗಂಟೆ ಇರಲಿವೆ. ಕಾಲಕಾಲಕ್ಕೆ ಭೂಮಿಯ ಮೇಲಿನ ಒಂದು ದಿನದಲ್ಲಿರುವ ಗಂಟೆಗಳ ಸಂಖ್ಯೆ ಹೆಚ್ಚಾಗುತ್ತದೆ. ಇದು ಸಹಜ ಪ್ರಕ್ರಿಯೆಯಾಗಿದೆ ಎಂಬುದಾಗಿ ವಿಜ್ಞಾನಿಗಳು ತಿಳಿಸಿದ್ದಾರೆ.

ಮುಂದಿನ 200 ದಶಲಕ್ಷ ವರ್ಷಗಳ ಬಳಿಕ ದಿನದಲ್ಲಿ 25 ಗಂಟೆ ಇರಲಿವೆ ಎಂದು ವಿಜ್ಞಾನಿಗಳು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಸುಮಾರು 1.4 ಶತಕೋಟಿ ವರ್ಷಗಳ ಹಿಂದೆ, ಭೂಮಿಯ ಅವಧಿಯು ದಿನಕ್ಕೆ ಕೇವಲ 18 ಗಂಟೆಯಾಗಿತ್ತು. ಕಾಲಕಾಲಕ್ಕೆ ಅದು ಹೆಚ್ಚಾಗುತ್ತ 24 ಗಂಟೆಗೆ ಏರಿಕೆಯಾಗಿದೆ. “ಭೂಮಿಯಿಂದ ಸೂರ್ಯನು ದೂರವಾಗುತ್ತ ಹೋದರೆ, ಭೂಮಿಯ ಮೇಲಿನ ಒಂದು ದಿನದ ಅವಧಿಯು ವಿಸ್ತರಣೆಯಾಗುತ್ತದೆ” ಎಂದು ವಿವಿ ಪ್ರೊಫೆಸರ್‌ ಸ್ಟೀಫನ್‌ ಮೇಯರ್ಸ್‌ ಹೇಳಿದ್ದಾರೆ.

ಇದನ್ನೂ ಓದಿ: DMK leader Controversy: ಶ್ರೀರಾಮನ ಅಸ್ತಿತ್ವಕ್ಕೆ ಪುರಾವೆಗಳೇ ಇಲ್ಲ: ಡಿಎಂಕೆ ನಾಯಕನ ವಿಡಿಯೋ ಫುಲ್‌ ವೈರಲ್‌

Continue Reading

ವಿದೇಶ

Ismail Haniyh Killing: ಹನಿಯೆಹ್‌ ಹತ್ಯೆ ಹಿಂದೆ ಇಸ್ರೇಲ್‌ನ ಮಾಸ್ಟರ್‌ ಪ್ಲ್ಯಾನ್‌? ಮೊಸಾದ್‌ನ ಸೀಕ್ರೆಟ್‌ ಏಜೆಂಟ್‌ಗಳಿಂದ ಬಾಂಬ್‌ ಸ್ಫೋಟ?

Ismail Haniyh Killing: ಇಂಗ್ಲೆಂಡ್‌ ಮೂಲದ ಪತ್ರಿಕೆ ಟೆಲಿಗ್ರಾಫ್‌ ವರದಿ ಮಾಡಿದ್ದು, ಆರಂಭದಲ್ಲಿ ಇಸ್ರೇಲ್‌, ಇಸ್ಮಾಯಿಲ್‌ ಹನಿಯೆಹ್‌ ಹತ್ಯೆಗೆ ಮೇನಲ್ಲೇ ಪ್ಲ್ಯಾನ್‌ ರೂಪಿಸಿತ್ತು. ಮಾಜಿ ಇರಾನಿಯನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅಂತ್ಯಕ್ರಿಯೆಗೆ ಆಗಮಿಸಿದ್ದ ಸಂದರ್ಭದಲ್ಲಿ ಹನಿಯೆಹ್‌ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಆದರೆ ಅತಿ ದೊಡ್ಡ ಪ್ರಮಾಣದ ಜನ ಕಾರ್ಯಕ್ರಮದಲ್ಲಿ ಜಮಾಯಿಸಿದ್ದ ಕಾರಣ ಆ ಯೋಜನೆಯನ್ನು ಕೈಬಿಡಲಾಗಿತ್ತು.

VISTARANEWS.COM


on

Ismail Haniyeh
Koo

ಟೆಹ್ರಾನ್‌: ಇರಾನ್‌(Iran) ರಾಜಧಾನಿ ಟೆಹ್ರಾನ್‌ನಲ್ಲಿ ಎರಡು ದಿನಗಳ ಹಿಂದೆಯಷ್ಟೇ ಹಮಾಸ್‌(Hamas) ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನ (Ismail Haniyh Killing) ಹತ್ಯೆಗೆ ಒಂದು ತಿಂಗಳ ಹಿಂದೆಯೇ ಆತ ತಂಗುವ ಅತಿಥಿಗೃಹದಲ್ಲಿ ಬಾಂಬ್‌ ಅಳವಡಿಸಲಾಗಿತ್ತು ಎಂಬ ವಿಚಾರ ಬಯಲಾಗಿದೆ. ಇದರ ಬೆನ್ನಲ್ಲೇ ಈ ಕೃತ್ಯಕ್ಕೆ ಇಸ್ರೇಲ್‌ನ ಗುಪ್ತಚರ ಇಲಾಖೆ ಮೊಸಾದ್‌ ಇರಾನ್‌ನಲ್ಲಿ ಗೂಢಾಚಾರನನ್ನು ನೇಮಿಸಿತ್ತು ಎಂಬ ವಿಚಾರ ಇದೀಗ ಬಹಳ ಚರ್ಚೆಯಾಗುತ್ತಿದೆ.

ಇಂಗ್ಲೆಂಡ್‌ ಮೂಲದ ಪತ್ರಿಕೆ ಟೆಲಿಗ್ರಾಫ್‌ ವರದಿ ಮಾಡಿದ್ದು, ಆರಂಭದಲ್ಲಿ ಇಸ್ರೇಲ್‌, ಇಸ್ಮಾಯಿಲ್‌ ಹನಿಯೆಹ್‌ ಹತ್ಯೆಗೆ ಮೇನಲ್ಲೇ ಪ್ಲ್ಯಾನ್‌ ರೂಪಿಸಿತ್ತು. ಮಾಜಿ ಇರಾನಿಯನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅಂತ್ಯಕ್ರಿಯೆಗೆ ಆಗಮಿಸಿದ್ದ ಸಂದರ್ಭದಲ್ಲಿ ಹನಿಯೆಹ್‌ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಆದರೆ ಅತಿ ದೊಡ್ಡ ಪ್ರಮಾಣದ ಜನ ಕಾರ್ಯಕ್ರಮದಲ್ಲಿ ಜಮಾಯಿಸಿದ್ದ ಕಾರಣ ಆ ಯೋಜನೆಯನ್ನು ಕೈಬಿಡಲಾಗಿತ್ತು. ಇದರ ನಂತರ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಗೆಸ್ಟ್‌ಹೌಸ್‌ನ ಮೂರು ಕೊಠಡಿಗಳಲ್ಲಿ ಇಬ್ಬರು ಏಜೆಂಟ್‌ಗಳು ಸ್ಫೋಟಕಗಳನ್ನು ಅಳವಡಿಸಿದ್ದರು. ಮೊಸ್ಸಾದ್ ಈ ಇಬ್ಬರು ಏಜೆಂಟ್‌ಗಳನ್ನು ನೇಮಿಸಿಕೊಂಡಿದ್ದರು.

ಏಜೆಂಟ್‌ಗಳು ಹನಿಯೆಹ್‌ ಇದ್ದ ಗೆಸ್ಟ್‌ ಹೌಸ್‌ ಒಳಗೆ ಅವಸರವಾಗಿ ಪ್ರವೇಶಿಸುವುದು ಮತ್ತು ಹೊರಹೋಗುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ ಎಂದು ವರದಿಯಾಗಿದೆ. ಈ ಇಬ್ಬರು ಏಜೆಂಟ್‌ಗಳು ಇರಾನ್‌ನಿಂದ ಹೊರಬಂದ ನಂತರ, ಅವರು ಸ್ಫೋಟಕಗಳನ್ನು ದೂರದಿಂದಲೇ ಸ್ಫೋಟಿಸಿ, ಹನಿಯೆಹ್‌ನನ್ನು ಹತ್ಯೆಗೈದಿದ್ದಾರೆ ಎಂದು ಪತ್ರಿಕೆಗಳು ವರದಿ ಮಾಡಿವೆ.

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್‌ ಹನಿಯೆಹ್‌ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್‌ ಹನಿಯೆಹ್‌ ಸೇರಿ ಆತನ ಅಂಗರಕ್ಷಕನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗುಪ್ತಚರ ಇಲಾಖೆ ನಿಖರ ಮಾಹಿತಿ, ಅತ್ಯಾಧುನಿಕ ಕ್ಷಿಪಣಿ, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ.

ಹನಿಯೆಹ್‌ ಹತ್ಯೆಗೆ ಪ್ರತೀಕಾರ ತೆಗೆದುಕೊಳ್ಳಲು ನಪಣ ತೊಟ್ಟಿರುವ ಇರಾನ್‌ ಶೀಘ್ರದಲ್ಲಿ ಇಸ್ರೇಲ್‌ ಮೇಲೆ ಪ್ರತಿದಾಳಿ ನಡೆಸಲಿದೆ ಎಂಬ ಬಗ್ಗೆ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಬುಧವಾರ ಬೆಳಗ್ಗೆ ಅಯತೊಲ್ಲಾ ಅಲಿ ಖಮೇನಿ ಇರಾನ್‌ನ ಸುಪ್ರೀಂ ನ್ಯಾಶನಲ್ ಸೆಕ್ಯುರಿಟಿ ಕೌನ್ಸಿಲ್‌ನ ತುರ್ತು ಸಭೆಯಲ್ಲಿ ಖಮೇನಿ ಈ ಆದೇಶವನ್ನು ನೀಡಿದರು. ಇನ್ನು ಹನಿಯೆಹ್‌ ಹತ್ಯೆಗೆ ಇರಾನ್‌ ಮತ್ತು ಹಮಾಸ್‌ ನೇರವಾಗಿ ಇಸ್ರೇಲ್‌ ಅನ್ನು ಹೊಣೆಯಾಗಿಸಿದೆ. ಆದರೆ ಈ ದಾಳಿಯ ಹೊಣೆಯನ್ನು ಇದುವರೆಗೆ ಇಸ್ರೇಲ್‌ ಒಪ್ಪಿಕೊಂಡಿಲ್ಲ. ಅಲ್ಲದೇ ನಿರಕಾರಿಸಿಯೂ ಇಲ್ಲ.

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಹಮಾಸ್‌ ಉಗ್ರರಿಗೆ ಇರಾನ್‌ನಲ್ಲಿ ತರಬೇತಿ, ಹಣಕಾಸು ನೆರವು ಸೇರಿ ಹಲವು ರೀತಿಯಲ್ಲಿ ಸಹಕಾರ ಸಿಗುತ್ತಿರುವ ಕಾರಣ ಇಸ್ಮಾಯಿಲ್‌ ಹನಿಯೆಹ್‌ ಇರಾನ್‌ಗೆ ತೆರಳಿದ್ದ. ಇದರ ಮಧ್ಯೆಯೇ ಆತ ಮಂಗಳವಾರ (ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ್ದ. ಇಸ್ರೇಲ್‌ ದಾಳಿ, ಇರಾನ್‌ ಜತೆಗಿನ ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದ.

ಇದನ್ನೂ ಓದಿ: Mohammed Deif: ಹಮಾಸ್‌ ಉಗ್ರರಿಗಿಲ್ಲ ಉಳಿಗಾಲ; ಹಮಾಸ್‌ ಮಿಲಿಟರಿ ಚೀಫ್‌ನನ್ನೂ ಕೊಂದ ಇಸ್ರೇಲ್‌!

Continue Reading

ವಿದೇಶ

US Military: ಇರಾನ್, ಹಮಾಸ್, ಹೆಜ್ಬುಲ್ಲಾ ದಾಳಿಯಿಂದ ಇಸ್ರೇಲ್ ರಕ್ಷಿಸಲು ಭದ್ರಕೋಟೆ ನಿರ್ಮಿಸಿದ ಅಮೆರಿಕ

US Military:ನೌಕಾಪಡೆಯ ಕ್ರೂಸರ್‌ಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹೊಡೆದುರುಳಿಸುವ ವಿಧ್ವಂಸಕಗಳನ್ನು ಈ ಪ್ರದೇಶಕ್ಕೆ ಕಳುಹಿಸುವ ನಿರ್ಧಾರವನ್ನು US ರಕ್ಷಣಾ ಕಾರ್ಯದರ್ಶಿ ಲ್ಯೋಡ್ ಆಸ್ಟಿನ್ ಅನುಮೋದಿಸಿದರು. ವಾಷಿಂಗ್ಟನ್ ಹೆಚ್ಚುವರಿ ಸ್ಕ್ವಾಡ್ರನ್ ಫೈಟರ್ ಜೆಟ್‌ಗಳನ್ನು ಮಧ್ಯಪ್ರಾಚ್ಯಕ್ಕೆ ಕಳುಹಿಸಲಿದೆ.ಆ ಮೂಲಕ ಅಮೆರಿಕ ಇರಾನ್, ಹಮಾಸ್, ಹಿಜ್ಬುಲ್ಲಾ ದಾಳಿಯಿಂದ ಇಸ್ರೇಲ್ ರಕ್ಷಿಸಲು ಭದ್ರಕೋಟೆ ನಿರ್ಮಿಸಿದೆ.

VISTARANEWS.COM


on

US Military
Koo

ವಾಷಿಂಗ್ಟನ್‌: ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿ ಹಮಾಸ್‌ ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನನ್ನು ವಾಯುದಾಳಿ ನಡೆಸಿ ಹತ್ಯೆ ನಡೆದಿರುವ ಬೆನ್ನಲ್ಲೇ ಭಾರೀ ಬೆದರಿಕೆ ಎದುರಿಸುತ್ತಿರುವ ಇಸ್ರೇಲ್(Israel)ಗೆ ಇದೀಗ ಬೆಂಗಾವಲಾಗಿ ನಿಲ್ಲಲು ಅಮೆರಿಕ ಮುಂದಾಗಿದೆ. ಇರಾನ್(Iran), ಹಮಾಸ್(Hamas) ಮತ್ತು ಹಿಜ್ಬುಲ್‌ ಉಗ್ರ ಸಂಘಟನೆಗಳಿಂದ ಬೆದರಿಕೆಯನ್ನು ಎದುರಿಸುತ್ತಿರುವ ಕಾರಣ, ಮಧ್ಯಪ್ರಾಚ್ಯದಲ್ಲಿ ಯುಎಸ್ ಮಿಲಿಟರಿ ಹೆಚ್ಚುವರಿ ಯುದ್ಧ ವಿಮಾನಗಳು ಮತ್ತು ನೌಕಾಪಡೆಯ ಯುದ್ಧನೌಕೆಗಳನ್ನು(US Military) ನಿಯೋಜಿಸಲಿದೆ ಎಂದು ಪೆಂಟಗನ್ ಶುಕ್ರವಾರ (ಆಗಸ್ಟ್ 2) ದೃಢಪಡಿಸಿದೆ.

ನೌಕಾಪಡೆಯ ಕ್ರೂಸರ್‌ಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹೊಡೆದುರುಳಿಸುವ ವಿಧ್ವಂಸಕಗಳನ್ನು ಈ ಪ್ರದೇಶಕ್ಕೆ ಕಳುಹಿಸುವ ನಿರ್ಧಾರವನ್ನು US ರಕ್ಷಣಾ ಕಾರ್ಯದರ್ಶಿ ಲ್ಯೋಡ್ ಆಸ್ಟಿನ್ ಅನುಮೋದಿಸಿದರು. ವಾಷಿಂಗ್ಟನ್ ಹೆಚ್ಚುವರಿ ಸ್ಕ್ವಾಡ್ರನ್ ಫೈಟರ್ ಜೆಟ್‌ಗಳನ್ನು ಮಧ್ಯಪ್ರಾಚ್ಯಕ್ಕೆ ಕಳುಹಿಸಲಿದೆ.ಆ ಮೂಲಕ ಅಮೆರಿಕ ಇರಾನ್, ಹಮಾಸ್, ಹಿಜ್ಬುಲ್ಲಾ ದಾಳಿಯಿಂದ ಇಸ್ರೇಲ್ ರಕ್ಷಿಸಲು ಭದ್ರಕೋಟೆ ನಿರ್ಮಿಸಿದೆ.

ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿ ಹಮಾಸ್‌ ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನನ್ನು ವಾಯುದಾಳಿ ನಡೆಸಿ ಹತ್ಯೆ ನಡೆದಿರುವ ಬೆನ್ನಲ್ಲೇ ಇಸ್ರೇಲ್‌ ಮೇಲೆ ನೇರ ವೈಮಾನಿಕ ದಾಳಿ ನಡೆಸಿ ಹೊಡೆದುರುಳಿಸುವಂತೆ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(Ayatollah Ali Khamenei) ಆದೇಶ ನೀಡಿದ್ದಾನೆ. ಹನಿಯೆಹ್‌ ಹತ್ಯೆಗೆ ಪ್ರತೀಕಾರ ತೆಗೆದುಕೊಳ್ಳಲು ಪಣ ತೊಟ್ಟಿರುವ ಇರಾನ್‌ ಶೀಘ್ರದಲ್ಲಿ ಇಸ್ರೇಲ್‌ ಮೇಲೆ ಪ್ರತಿದಾಳಿ ನಡೆಸಲಿದೆ ಎಂಬ ಬಗ್ಗೆ ಅಲ್ಲಿನ ಮಾಧ್ಯಮಗಳು ಈಗಾಗಲೇ ವರದಿ ಮಾಡಿವೆ.

ಬುಧವಾರ ಬೆಳಗ್ಗೆ ಅಯತೊಲ್ಲಾ ಅಲಿ ಖಮೇನಿ ಇರಾನ್‌ನ ಸುಪ್ರೀಂ ನ್ಯಾಶನಲ್ ಸೆಕ್ಯುರಿಟಿ ಕೌನ್ಸಿಲ್‌ನ ತುರ್ತು ಸಭೆಯಲ್ಲಿ ಖಮೇನಿ ಈ ಆದೇಶವನ್ನು ನೀಡಿದರು. ಇನ್ನು ಹನಿಯೆಹ್‌ ಹತ್ಯೆಗೆ ಇರಾನ್‌ ಮತ್ತು ಹಮಾಸ್‌ ನೇರವಾಗಿ ಇಸ್ರೇಲ್‌ ಅನ್ನು ಹೊಣೆಯಾಗಿಸಿದೆ. ಆದರೆ ಈ ದಾಳಿಯ ಹೊಣೆಯನ್ನು ಇದುವರೆಗೆ ಇಸ್ರೇಲ್‌ ಒಪ್ಪಿಕೊಂಡಿಲ್ಲ. ಅಲ್ಲದೇ ನಿರಕಾರಿಸಿಯೂ ಇಲ್ಲ.

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಹಮಾಸ್‌ ಉಗ್ರರಿಗೆ ಇರಾನ್‌ನಲ್ಲಿ ತರಬೇತಿ, ಹಣಕಾಸು ನೆರವು ಸೇರಿ ಹಲವು ರೀತಿಯಲ್ಲಿ ಸಹಕಾರ ಸಿಗುತ್ತಿರುವ ಕಾರಣ ಇಸ್ಮಾಯಿಲ್‌ ಹನಿಯೆಹ್‌ ಇರಾನ್‌ಗೆ ತೆರಳಿದ್ದ. ಇದರ ಮಧ್ಯೆಯೇ ಆತ ಮಂಗಳವಾರ (ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ್ದ. ಇಸ್ರೇಲ್‌ ದಾಳಿ, ಇರಾನ್‌ ಜತೆಗಿನ ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದ.

2023ರ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ನಡೆಸಿದ ದಾಳಿಯಲ್ಲಿ ಒಂದು ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ. ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ ಪ್ರತಿದಾಳಿ ಆರಂಭಿಸಿದ್ದು, ಗಾಜಾದಲ್ಲಿ ಇದುವರೆಗೆ ಇಸ್ರೇಲ್‌ ದಾಳಿಗೆ 39,400 ಮಂದಿ ಮೃತಪಟ್ಟಿದ್ದಾರೆ. ಸುಮಾರು 90 ಸಾವಿರ ಜನ ಗಾಯಗೊಂಡಿದ್ದಾರೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಹಮಾಸ್‌ ಉಗ್ರರ ಜತೆಗೆ ಹಮಾಸ್‌ ಉಗ್ರ ಸಂಘಟನೆಯ ಪ್ರಮುಖ ನಾಯಕರನ್ನು ಇಸ್ರೇಲ್‌ ಯೋಧರು ಹುಡುಕಿ ಹುಡುಕಿ ಕೊಲ್ಲುತ್ತಿದ್ದಾರೆ.

ಇದನ್ನೂ ಓದಿ: Mohammed Deif: ಹಮಾಸ್‌ ಉಗ್ರರಿಗಿಲ್ಲ ಉಳಿಗಾಲ; ಹಮಾಸ್‌ ಮಿಲಿಟರಿ ಚೀಫ್‌ನನ್ನೂ ಕೊಂದ ಇಸ್ರೇಲ್‌!

Continue Reading

ವಿದೇಶ

Kamala Harris: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಹೆಸರು ಅಂತಿಮ

Kamala Harris: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಪಕ್ಷ ಅಭ್ಯರ್ಥಿಯಾಗಿ ಉಪಾಧ್ಯಕ್ಷೆ, ಭಾರತದ ಮೂಲದ ಕಮಲಾ ಹ್ಯಾರಿಸ್ ಅವರ ಹೆಸರು ಅಂತಿಮವಾಗಿದೆ. ಈ ತಿಂಗಳ ಕೊನೆಯಲ್ಲಿ ಚಿಕಾಗೋದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ 59 ವರ್ಷದ ಕಮಲಾ ಹ್ಯಾರಿಸ್ ಅವರು, “ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಲು ನನಗೆ ಹೆಮ್ಮೆ ಇದೆ” ಎಂದು ಹೇಳಿದ್ದಾರೆ.

VISTARANEWS.COM


on

Kamala Harris
Koo

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ (US Presidential Election 2024) ಸ್ಥಾನಕ್ಕೆ ರಿಪಬ್ಲಿಕನ್‌ (Republican) ಪಕ್ಷದ ಡೊನಾಲ್ಡ್‌ ಟ್ರಂಪ್‌ (Donald Trump) ವಿರುದ್ಧ ಡೆಮಾಕ್ರಟಿಕ್ ಪಕ್ಷ (Democratic party)ದ ಅಭ್ಯರ್ಥಿಯಾಗಿ ಉಪಾಧ್ಯಕ್ಷೆ, ಭಾರತದ ಮೂಲದ ಕಮಲಾ ಹ್ಯಾರಿಸ್ (Kamala Harris) ಅವರ ಹೆಸರು ಅಂತಿಮವಾಗಿದೆ.

ಈ ತಿಂಗಳ ಕೊನೆಯಲ್ಲಿ ಚಿಕಾಗೋದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ 59 ವರ್ಷದ ಕಮಲಾ ಹ್ಯಾರಿಸ್ ಅವರು, “ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಲು ನನಗೆ ಹೆಮ್ಮೆ ಇದೆ” ಎಂದು ಹೇಳಿದ್ದಾರೆ.

ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಲವು ದಿನಗಳ ಹಿಂದೆ ಅಮೆರಿಕ ಅಧ್ಯಕ್ಷ, ಡೆಮಾಕ್ರಟಿಕ್‌ ಪಕ್ಷದ ಜೋ ಬೈಡೆನ್‌ (Joe Biden) ಅವರು ಚುನಾವಣೆ ರೇಸ್‌ನಿಂದಲೇ ಹಿಂದೆ ಸರಿದಿದ್ದರು. ಇದು ಅಮೆರಿಕ ಮಾತ್ರವಲ್ಲ, ಜಗತ್ತಿನಾದ್ಯಂತ ಸಂಚಲನ ಮೂಡಿಸಿತ್ತು. ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುವ ಕುರಿತು ಜೋ ಬೈಡೆನ್‌ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪತ್ರದ ಮೂಲಕ ಘೋಷಿಸಿದ್ದರು.

“ನಾನು ಕಳೆದ ಮೂರುವರೆ ವರ್ಷಗಳಿಂದ ಅಮೆರಿಕ ಅಧ್ಯಕ್ಷನಾಗಿ, ದೇಶದ ಏಳಿಗೆಗೆ ದುಡಿದಿದ್ದೇನೆ. ನಿಮ್ಮೆಲ್ಲರ ಅಧ್ಯಕ್ಷನಾಗಿ ಸೇವೆ ಮಾಡಿದ್ದು ನನಗೆ ಖುಷಿಯಾಗಿದೆ. ಎರಡನೇ ಬಾರಿ ಆಯ್ಕೆಗೂ ನಾನು ಮನಸ್ಸು ಮಾಡಿದ್ದೆ. ಆದರೆ ದೇಶ ಹಾಗೂ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ” ಎಂದು ಅವರು ಹೇಳಿದ್ದರು.

ಅಂದಿನಿಂದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರ ಹೆಸರು ಹೆಚ್ಚು ಚಾಲ್ತಿಗೆ ಬಂದಿತ್ತು. ಅವರೇ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಮಾತು ಕೇಳಿ ಬರತೊಡಗಿತ್ತು. ಕಮಲಾ ಹ್ಯಾರಿಸ್‌ ಆಯ್ಕೆಗೆ ಪಕ್ಷದ ಒಳಗೆ ಯಾವುದೇ ಆಕ್ಷೇಪ ವ್ಯಕ್ತವಾಗದಿದ್ದು ಕೂಡ ಪ್ಲಸ್‌ ಪಾಯಿಂಟ್ ಆಗಿತ್ತು. ಈಗಾಗಲೇ ಅವರು ಸಮಾವೇಶ ನಡೆಸಿ ಮತದಾರರ ಗಮನವನ್ನೂ ಸೆಳೆದಿದ್ದಾರೆ.

ಇದನ್ನೂ ಓದಿ: Kamala Harris: ಅಮೆರಿಕ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್‌ ಹಿನ್ನೆಲೆ ಏನು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ಕಮಲಾ ಹ್ಯಾರಿಸ್‌ ಪರ ನಿಂತ ಬರಾಕ್‌ ಒಬಾಮಾ

ಈಗಾಗಲೇ ಕಮಲಾ ಹ್ಯಾರಿಸ್‌ ಅವರಿಗೆ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ (Barack Obama) ಹಾಗೂ ಅವರ ಪತ್ನಿ ಮಿಚೆಲ್‌ ಒಬಾಮಾ ಅವರು ಬೆಂಬಲ ಸೂಚಿಸಿದ್ದಾರೆ. ಇತ್ತೀಚೆಗೆ ಬರಾಕ್‌ ಒಬಾಮಾ ಹಾಗೂ ಅವರ ಪತ್ನಿ ಮಿಚೆಲ್‌ ಒಬಾಮಾ ಅವರು ಕಮಲಾ ಹ್ಯಾರಿಸ್‌ ಅವರಿಗೆ ಕರೆ ಮಾಡಿ, ಬೆಂಬಲ ಘೋಷಿಸಿದ್ದರು. “ಕೆಲ ದಿನಗಳ ಹಿಂದೆ ನಾನು ಹಾಗೂ ಮಿಚೆಲ್‌ ಅವರು ಗೆಳತಿ ಕಮಲಾ ಹ್ಯಾರಿಸ್‌ ಅವರಿಗೆ ಕರೆ ಮಾಡಿದ್ದೆವು. ನೀವು ಅಮೆರಿಕ ಅಧ್ಯಕ್ಷರಾದರೆ ಒಳ್ಳೆಯದಾಗುತ್ತದೆ. ನಿಮಗೆ ನಮ್ಮ ಬೆಂಬಲವಿದೆ ಎಂಬುದನ್ನು ತಿಳಿಸಿದೆವು. ದೇಶವು ಮಹತ್ವದ ಘಟ್ಟದಲ್ಲಿರುವ ಇಂತಹ ಹೊತ್ತಿನಲ್ಲಿ ಕಮಲಾ ಹ್ಯಾರಿಸ್‌ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗಲು ನಾವು ಎಲ್ಲ ರೀತಿಯ ಸಹಕಾರ, ಬೆಂಬಲ ನೀಡುತ್ತೇವೆ. ನೀವು ಕೂಡ ನಮ್ಮ ಜತೆಗೂಡಿ” ಎಂದು ಬರಾಕ್‌ ಒಬಾಮಾ ಪೋಸ್ಟ್‌ ಮಾಡಿದ್ದರು.

Continue Reading
Advertisement
Wayanad Landslide
ಕರ್ನಾಟಕ21 mins ago

Wayanad Landslide: ವಯನಾಡು ಸಂತ್ರಸ್ತರಿಗೆ ಮಿಡಿದ ಕರುನಾಡು; ಸರ್ಕಾರದ ಜತೆಗೆ ಜನರಿಂದಲೂ ನೆರವು!

Kavya Maran
ಕ್ರಿಕೆಟ್54 mins ago

Kavya Maran : ಐಪಿಎಲ್​ ಆಟಗಾರರ ಹರಾಜಿನ ನಿಯಮಗಳ ಬಗ್ಗೆ ಕಾವ್ಯಾ ಮಾರನ್ ಇಟ್ಟಿರುವ ಬೇಡಿಕೆಗಳು ಇವು…

Champions Trophy 2025
ಪ್ರಮುಖ ಸುದ್ದಿ1 hour ago

Champions Trophy 2025 : ಚಾಂಪಿಯನ್ಸ್​ ಟ್ರೋಫಿಗಾಗಿ 544 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಐಸಿಸಿ

Viral Video
ವೈರಲ್ ನ್ಯೂಸ್1 hour ago

Viral Video: ಪ್ರವಾಹದಲ್ಲಿ ಸಿಲುಕಿದ ನಾಯಿಗಳಿಗೆ ಡ್ರೋನ್‌ ಮೂಲಕ ಬಿರಿಯಾನಿ ರವಾನೆ; ಮಾನವೀಯತೆ ಅಂದ್ರೆ ಇದು!

Best Teacher Award
ಕರ್ನಾಟಕ1 hour ago

Best Teacher Award: ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

Union Minister Pralhad Joshi latest statement at Mysore Chalo Padayatra
ಕರ್ನಾಟಕ2 hours ago

BJP-JDS Padayatra: ವಾಲ್ಮೀಕಿ ನಿಗಮ, ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಶೇರ್ ಹೋಲ್ಡರ್: ಪ್ರಲ್ಹಾದ್‌ ಜೋಶಿ ಆರೋಪ

Farmer dies after falling under power tiller wheel in Moralli village
ಉತ್ತರ ಕನ್ನಡ2 hours ago

Farmer Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ರೈತ ದಾರುಣ ಸಾವು

KHIR City project Launch on August 23 at bengaluru says Minister MB Patil
ಕರ್ನಾಟಕ2 hours ago

KHIR City: ಬೆಂಗಳೂರಿನಲ್ಲಿ ದೇಶದಲ್ಲೇ ಮೊದಲ ‘ನಾಲೆಡ್ಜ್, ಹೆಲ್ತ್, ಇನ್ನೋವೇಶನ್ ಆಂಡ್ ರೀಸರ್ಚ್ ಸಿಟಿ’; ಆ.23ರಂದು ಉದ್ಘಾಟನೆ

IND vs SL ODI
ಪ್ರಮುಖ ಸುದ್ದಿ2 hours ago

IND vs SL ODI : ಶ್ರೀಲಂಕಾ ವಿರುದ್ಧ ಭಾನುವಾರ ಎರಡನೇ ಪಂದ್ಯ; ಮತ್ತೊಂದು ಥ್ರಿಲ್ಲರ್ ನಿರೀಕ್ಷೆ

Indian Organ Donation Day program inauguration by Minister Dinesh Gundurao at Belagavi
ಕರ್ನಾಟಕ2 hours ago

Belagavi News: ಸ್ವಾತಂತ್ರ್ಯ ದಿ‌ನಾಚರಣೆಯಂದು ಅಂಗಾಂಗ ದಾನಿಗಳ ಕುಟುಂಬಗಳಿಗೆ ಗೌರವ; ದಿ‌ನೇಶ್ ಗುಂಡೂರಾವ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ10 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌