Kangana Ranaut: ನನ್ನನ್ನು ಭೇಟಿಯಾಗಲು ಬರುವವರು ಆಧಾರ್‌ ಕಾರ್ಡ್‌ ತನ್ನಿ ಎಂದ ಕಂಗನಾ ರಣಾವತ್;‌ ಏನ್‌ ದೌಲತ್ತು ನೋಡಿ! - Vistara News

ದೇಶ

Kangana Ranaut: ನನ್ನನ್ನು ಭೇಟಿಯಾಗಲು ಬರುವವರು ಆಧಾರ್‌ ಕಾರ್ಡ್‌ ತನ್ನಿ ಎಂದ ಕಂಗನಾ ರಣಾವತ್;‌ ಏನ್‌ ದೌಲತ್ತು ನೋಡಿ!

Kangana Ranaut: ಮಂಡಿ ಕ್ಷೇತ್ರದಲ್ಲಿ ನನ್ನನ್ನು ಭೇಟಿಯಾಗಲು ಬರುವವರು ಜತೆಗೆ ಆಧಾರ್‌ ಕಾರ್ಡ್‌ ತರಬೇಕು. ನೀವು ಯಾವುದೇ ರೀತಿಯ ತೊಂದರೆ ಅನುಭವಿಸದರಿಲು ನಿಮ್ಮ ಕೆಲಸದ ಕುರಿತು ಪತ್ರದಲ್ಲಿ ಬರೆದುಕೊಂಡು ಬರಬೇಕು ಎಂದು ಕಂಗನಾ ರಣಾವತ್‌ ಅವರು ಹೇಳಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Kangana Ranaut
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿಮ್ಲಾ: ಕಳೆದ ಲೋಕಸಭೆ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut) ಅವರು ಗೆಲುವು ಸಾಧಿಸಿ, ಈಗ ಸಂಸದೆಯಾಗಿದ್ದಾರೆ. ಇದರ ಬೆನ್ನಲ್ಲೇ, ಕಂಗನಾ ರಣಾವತ್‌ ಅವರು ಈಗ ನೀಡಿರುವ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. “ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದ ಜನರು ನನ್ನನ್ನು ಭೇಟಿಯಾಗಲು ಬರುವಾಗ ಆಧಾರ್‌ ಕಾರ್ಡ್‌ ತರಬೇಕು” ಎಂದು ಅವರು ಹೇಳಿದ್ದು, ಕಾಂಗ್ರೆಸ್‌ ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದೆ.

“ಹಿಮಾಚಲ ಪ್ರದೇಶಕ್ಕೆ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಾರೆ. ಮಂಡಿ ಕ್ಷೇತ್ರದಲ್ಲಿ ನನ್ನನ್ನು ಭೇಟಿಯಾಗಲು ಬರುವವರು ಜತೆಗೆ ಆಧಾರ್‌ ಕಾರ್ಡ್‌ ತರಬೇಕು. ನೀವು ಯಾವುದೇ ರೀತಿಯ ತೊಂದರೆ ಅನುಭವಿಸದರಿಲು ನಿಮ್ಮ ಕೆಲಸದ ಕುರಿತು ಪತ್ರದಲ್ಲಿ ಬರೆದುಕೊಂಡು ಬರಬೇಕು” ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಕಂಗನಾ ರಣಾವತ್‌ ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನಾಯಕ, ಕಳೆದ ಚುನಾವಣೆಯಲ್ಲಿ ಸೋಲನುಭವಿಸಿದ್ದ ವಿಕ್ರಮಾದಿತ್ಯ ಸಿಂಗ್‌ ಅವರು ತಿರುಗೇಟು ನೀಡಿದ್ದು, “ನಾನು ಜನರ ಪರವಾಗಿ ಕೆಲಸ ಮಾಡುತ್ತೇನೆ. ನನ್ನನ್ನು ಭೇಟಿಯಾಗಲು ಬರುವವರು ಆಧಾರ್‌ ಕಾರ್ಡ್‌ ತರಬೇಕಿಲ್ಲ” ಎಂದಿದ್ದಾರೆ.

“ಜನಪ್ರತಿನಿಧಿಗಳಾದವರು ಜನರನ್ನು ಭೇಟಿ ಮಾಡಲು ಹಿಂಜರಿಯಬಾರದು ಹಾಗೂ ಅದು ಅವರ ಜವಾಬ್ದಾರಿಯಾಗಿದೆ. ರಾಜ್ಯದ ಪ್ರತಿಯೊಬ್ಬರೂ ಜನಪ್ರತಿನಿಧಿಗಳನ್ನು ಭೇಟಿಯಾಗಬಹುದು. ಸಣ್ಣ ಕೆಲಸ ಇರಲಿ, ದೊಡ್ಡ ಕೆಲಸ ಇರಲಿ, ನೀತಿಗಳ ಕುರಿತೇ ಇರಲಿ ಅಥವಾ ವೈಯಕ್ತಿಕ ಕೆಲಸಗೇ ಇರಲಿ, ಪ್ರತಿಯೊಬ್ಬರೂ ಜನಪ್ರತಿನಿಧಿಗಳನ್ನು ಭೇಟಿಯಾಗಬೇಕು ಹಾಗೂ ಅದಕ್ಕೆ ಜನಪ್ರತಿನಿಧಿಗಳು ಮುಕ್ತ ಅವಕಾಶ ನೀಡಬೇಕು” ಎಂದಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕಂಗನಾ ರಣಾವತ್‌ ಅವರು ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ 72,088 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ನಟನೆ ತೊರೆಯುವುದಾಗಿ ಕಂಗನಾ ರಣಾವತ್‌ ಈಗಾಗಲೇ ಘೋಷಣೆ ಮಾಡಿದ್ದಾರೆ. ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಈ ಘೋಷಣೆ ಮಾಡಿದ್ದರು

“ನೀವು ಮಂಡಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ ಏನೆಲ್ಲ ಮಾಡುತ್ತೀರಿ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೌದು, ಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದಾರೆ. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದಾರೆ.

ಇದನ್ನೂ ಓದಿ: Kangana Ranaut: ನಿಮ್ಮೊಳಗೆ ರಾಷ್ಟ್ರೀಯ ಪ್ರಶಸ್ತಿ ಇದೆಯಾ ಎಂದು ಕಂಗನಾಗೆ ಡಬಲ್‌ ಮೀನಿಂಗ್‌ ಪ್ರಶ್ನೆ;ಬಿದ್ದು ಬಿದ್ದು ನಕ್ಕ ಆರ್ ಮಾಧವನ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

NEET UG 2024: ನೀಟ್‌ ಅಕ್ರಮ; ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಮತ್ತಿಬ್ಬರು ಆರೋಪಿಗಳು ಅರೆಸ್ಟ್‌

NEET UG 2024: ಇನ್ನು ಬಂಧಿತರನ್ನು ಪಂಕಜ್‌ ಕುಮಾರ್‌ ಮತ್ತು ರಾಜು ಸಿಂಗ್‌ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಪ್ರಕರಣದ ಪ್ರಮುಖ ಆರೋಪಿ ಸಂಜೀವ್‌ ಮುಖಿಯಾ ಜೊತೆ ನೇರ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಪಂಕಜ್‌ ಕುಮಾರ್‌ 2017 ಬ್ಯಾಚ್‌ನ ಸಿವಿಲ್‌ ಎಂಜಿನಿಯರ್‌ ಆಗಿದ್ದು, ಈತ ಜಮ್ಶೆಡ್‌ಪುರದ ಎನ್‌ಐಟಿಯಲ್ಲಿ ಎಂಜಿಯರಿಂಗ್‌ ಪದವಿ ಪಡೆದಿದ್ದಾನೆ. ಈತ ಹಜಾರಿಭಾಗ್‌ನಲ್ಲಿ ಪ್ರಶ್ನೆ ಪತ್ರಿಕೆ ಕದ್ದಿದ್ದ ಎನ್ನಲಾಗಿದೆ.

VISTARANEWS.COM


on

NEET-UG 2024
Koo

ಪಾಟ್ನಾ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಪ್ರಶ್ನೆಪತ್ರಿಕೆ (NEET UG 2024 Paper Leak) ಸೋರಿಕೆ ಪ್ರಕರಣದ ಕಿಂಗ್‌ಪಿನ್‌ ಬಂಧನ ಆಗಿರುವ ಬೆನ್ನಲ್ಲೇ ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಸಿಬಿಐ ಅರೆಸ್ಟ್‌ ಮಾಡಿದೆ. ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ.

ಇನ್ನು ಬಂಧಿತರನ್ನು ಪಂಕಜ್‌ ಕುಮಾರ್‌ ಮತ್ತು ರಾಜು ಸಿಂಗ್‌ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಪ್ರಕರಣದ ಪ್ರಮುಖ ಆರೋಪಿ ಸಂಜೀವ್‌ ಮುಖಿಯಾ ಜೊತೆ ನೇರ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಪಂಕಜ್‌ ಕುಮಾರ್‌ 2017 ಬ್ಯಾಚ್‌ನ ಸಿವಿಲ್‌ ಎಂಜಿನಿಯರ್‌ ಆಗಿದ್ದು, ಈತ ಜಮ್ಶೆಡ್‌ಪುರದ ಎನ್‌ಐಟಿಯಲ್ಲಿ ಎಂಜಿಯರಿಂಗ್‌ ಪದವಿ ಪಡೆದಿದ್ದಾನೆ. ಈತ ಹಜಾರಿಭಾಗ್‌ನಲ್ಲಿ ಪ್ರಶ್ನೆ ಪತ್ರಿಕೆ ಕದ್ದಿದ್ದ ಎನ್ನಲಾಗಿದೆ. ಸದ್ಯ ಆತನನ್ನು ಪಾಟ್ನಾದಿಂದ ಅರೆಸ್ಟ್‌ ಮಾಡಲಾಗಿದೆ. ಕಾಗದವನ್ನು ಕದ್ದು ಇತರ ಗ್ಯಾಂಗ್ ಸದಸ್ಯರಿಗೆ ರವಾನಿಸಲು ಕುಮಾರ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ರಾಜು ಸಿಂಗ್‌ನನ್ನು ಸಿಬಿಐ ಬಂಧಿಸಿದೆ, ಸಿಂಗ್ ಅವರನ್ನು ಹಜಾರಿಬಾಗ್‌ನಿಂದ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ,

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ನೀಟ್‌ ಪರೀಕ್ಷೆಯನ್ನೇ ರದ್ದುಗೊಳಿಸಬೇಕು ಎಂದು ಆಗ್ರಹಿಸಲಾಗುತ್ತಿದೆ. ಇದರ ಮಧ್ಯೆಯೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಹತ್ವದ ಮುನ್ನಡೆ ಸಾಧಿಸಿದ್ದು, ನೀಟ್‌ ಪ್ರಶ್ನೆಪತ್ರಿಕೆ (NEET UG 2024 Paper Leak) ಸೋರಿಕೆ ಪ್ರಕರಣದ ಕಿಂಗ್‌ಪಿನ್‌ ಆಗಿರುವ ರಾಕೇಶ್‌ ರಂಜನ್‌ (Rakesh Ranjan) ಎಂಬಾತನನ್ನು ಬಂಧಿಸಿದ್ದರು.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದರ ಮಧ್ಯೆಯೇ, ಬಿಹಾರದ ಪಟನಾದಲ್ಲಿ ಎರಡು ಕಡೆ ಹಾಗೂ ಪಶ್ಚಿಮ ಬಂಗಾಳದ ಕೋಲ್ಕೊತಾದಲ್ಲಿ ಎರಡು ಕಡೆ ಸಿಬಿಐ ಅಧಿಕಾರಿಗಳು ಗುರುವಾರ (ಜುಲೈ 11) ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಬಿಹಾರದ ಪಟನಾದಲ್ಲಿ ರಾಕೇಶ್‌ ರಂಜನ್‌ ಅಲಿಯಾಸ್‌ ರಾಕಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಈತನನ್ನು ಕೋರ್ಟ್‌ಗೂ ಹಾಜರುಪಡಿಸಲಾಗಿದ್ದು, 10 ದಿನ ಸಿಬಿಐ ಕಸ್ಟಡಿಗೆ ನೀಡಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ಜುಲೈ 18ರಂದು ಸುಪ್ರೀಂ ಕೋರ್ಟ್‌ ವಿಚಾರಣೆ

ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌, ಜುಲೈ 18ಕ್ಕೆ ವಿಚಾರಣೆಯನ್ನು ಮುಂದೂಡಿದೆ. ನೀಟ್‌ ಅಕ್ರಮದ ಕುರಿತಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ವರದಿಗಳನ್ನು ಪಡೆದಿರುವ ಸುಪ್ರೀಂ ಕೋರ್ಟ್‌, ಜುಲೈ 18ರಂದು ವಿಚಾರಣೆ ನಡೆಸಲು ತೀರ್ಮಾನಿಸಿತು.

ಏನಿದು ಪ್ರಕರಣ?

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಇದನ್ನೂ ಓದಿ: Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

Continue Reading

ದೇಶ

Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

Hit And Run Case: ಮಿಹಿರ್‌ನ ಪೊಲೀಸ್‌ ಕಸ್ಟಡಿ ಮುಗಿದಿರುವ ಹಿನ್ನೆಲೆ ಮಂಗಳವಾರ ಶಿವಧಿ ಕೋರ್ಟ್‌ಗೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನು ಈ ಪ್ರಕರಣದ ಮತ್ತೊರ್ವ ಆರೋಪಿ ಮಿಹಿರ್‌ನ ತಂದೆ ರಾಜೇಶ್‌ ಶಾ ಸದ್ಯ ಜಾಮೀನಿನ ಮೂಲಕ ಹೊರಬಂದಿದ್ದಾರೆ.

VISTARANEWS.COM


on

hit and run case
Koo

ಮುಂಬೈ: ಜು. 7ರಂದು ಮಹಾರಾಷ್ಟ್ರದ ವರ್ಲಿಯಲ್ಲಿ ಬಿಎಂಡಬ್ಲ್ಯು ಕಾರು ಚಲಾಯಿಸಿ(Hit And Run Case), ಸ್ಕೂಟರ್‌ಗೆ ಗುದ್ದಿ ಓರ್ವ ಮಹಿಳೆಯ ಸಾವಿಗೆ ಕಾರಣನಾದ ಶಿವಸೇನೆ ಮುಖಂಡ ರಾಜೇಶ್‌ ಶಾ (Rajesh Shah) ಅವರ ಪುತ್ರ ಮಿಹಿರ್‌ ಶಾ (Mihir Shah)ಗೆ ಜು.30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮಿಹಿರ್‌ನ ಪೊಲೀಸ್‌ ಕಸ್ಟಡಿ ಮುಗಿದಿರುವ ಹಿನ್ನೆಲೆ ಮಂಗಳವಾರ ಶಿವಧಿ ಕೋರ್ಟ್‌ಗೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನು ಈ ಪ್ರಕರಣದ ಮತ್ತೊರ್ವ ಆರೋಪಿ ಮಿಹಿರ್‌ನ ತಂದೆ ರಾಜೇಶ್‌ ಶಾ ಸದ್ಯ ಜಾಮೀನಿನ ಮೂಲಕ ಹೊರಬಂದಿದ್ದಾರೆ.

ಶಿವಸೇನೆ (ಏಕನಾಥ್ ಶಿಂಧೆ ಬಣ) ನಾಯಕರಾಗಿರುವ ರಾಜೇಶ್‌ ಶಾ ಅವರ 24 ವರ್ಷದ ಪುತ್ರ ಮಿಹಿರ್‌ ಶಾ ಕುಡಿದು ಕಾರು ಚಲಾಯಿಸಿ ವರ್ಲಿಯಲ್ಲಿ ಮೀನು ಮಾರಾಟಗಾರ ದಂಪತಿ ಪ್ರದೀಪ್ ನಖ್ವಾ ಮತ್ತು ಕಾವೇರಿ ನಖ್ವಾ ಅವರು ಸಂಚರಿಸುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದ. ಭಾನುವಾರ ಬೆಳಿಗ್ಗೆ 5.30ರ ಸುಮಾರಿಗೆ ಈ ಘಟನೆ ನಡೆದಿತ್ತು. ಕಾರು ಡಿಕ್ಕಿ ಹೊಡೆದ ಪರಿಣಾಮ ಪ್ರದೀಪ್ ಎಸೆಯಲ್ಪಟ್ಟರೆ, ಕಾವೇರಿ ಅವರ ದೇಹ ಚಕ್ರಗಳ ಅಡಿಯಲ್ಲಿ ಸಿಕ್ಕಿ ಬಿದ್ದಿದ್ದು, ಕಾರು 1.5 ಕಿ.ಮೀ. ದೂರ ಎಳೆದೊಯ್ದಿತ್ತು.

ಅಪಘಾತ ನಡೆದ ನಂತರ ಮಿಹಿರ್‌ ಚಾಲಕ ರಾಜರ್ಷಿ ಬಿದಾವತ್‌ನನ್ನು ಡ್ರೈವರ್‌ ಸೀಟ್‌ನಲ್ಲಿ ಕೂರಿಸಿದ್ದನು. ಬಳಿಕ ಅವರು ಬಾಂದ್ರಾದ ಕಲಾ ನಗರಕ್ಕೆ ತೆರಳಿ ಅಲ್ಲಿ ನಂಬರ್ ಪ್ಲೇಟ್ ಅನ್ನು ತೆಗೆದು ತಲೆ ಮರೆಸಿಕೊಂಡಿದ್ದರು. ಈ ವೇಳೆ ಮಿಹಿರ್‌ ಶಾ ತನ್ನ ಪ್ರೇಯಸಿಯೊಂದಿಗೆ ಸುಮಾರು 40 ಬಾರಿ ಮಾತನಾಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಕಲಾ ನಗರದಲ್ಲಿ ಕಾರು ನಿಲ್ಲಿಸಿ ಮಿಹಿರ್‌ ಶಾ ಆಟೋ ಹತ್ತಿ ಗೋರೆಗಾಂವ್‌ನಲ್ಲಿರುವ ಪ್ರೇಯಸಿ ಮನೆಗೆ ತೆರಳಿದ್ದ. ಅಪಘಾತದ ವಿಚಾರವನ್ನು ಪ್ರೇಯಸಿ ತನ್ನ ಸಹೋದರಿ ಜತೆಗೆ ಹಂಚಿಕೊಂಡಿದ್ದಳು. ಬಳಿಕ ಸಹೋದರಿ ಆಗಮಿಸಿ ಮಿಹಿರ್‌ನನ್ನು ಬೋರಿವಲಿಯಲ್ಲಿರುವ ತಮ್ಮ ಮನೆಗೆ ಕರೆದೊಯ್ದಿದ್ದರು. ಈ ವೇಳೆ ಮಿಹಿರ್‌ನ ಕುಟುಂಬ ಆತ ಎಲ್ಲಿ ತಲೆ ಮರೆಸಿಕೊಂಡಿದ್ದಾನೆ ಎನ್ನುವ ವಿಚಾರವನ್ನು ಪೊಲೀಸರಿಗೆ ತಿಳಿಸಿರಲಿಲ್ಲ. ಪೊಲೀಸರ 14 ತಂಡ ಆತನಿಗಾಗಿ ತೀವ್ರ ಶೋಧ ನಡೆಸುತ್ತಿತ್ತು.

ಸೋಮವಾರ ರಾತ್ರಿ ಮಿಹಿರ್‌ ವಿರಾರ್‌ನಲ್ಲಿರುವ ತನ್ನ ಮನೆಗೆ ತೆರಳಿದ್ದ. ಮಂಗಳವಾರ ಬೆಳಿಗ್ಗೆ ಆತನ ಸ್ನೇಹಿತ ಅವದೀಪ್ ತನ್ನ ಫೋನ್ ಅನ್ನು 15 ನಿಮಿಷಗಳ ಕಾಲ ಆನ್ ಮಾಡಿದಾಗ ಪೊಲೀಸರು ಅವರಿರುವ ಜಾಗ ಪತ್ತೆ ಮಾಡಿ ಮಿಹಿರ್‌ನನ್ನು ವಶಕ್ಕೆ ಪಡೆದುಕೊಂಡಿದ್ದರು. ಮಿಹಿರ್‌ನನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜುಲೈ 16ರವರೆಗೆ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.

10 ಲಕ್ಷ ರೂ. ಪರಿಹಾರ ಘೋಷಣೆ

ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಮೃತ ಕಾವೇರಿ ನಖ್ವಾ ಅವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. “ನಾವು ಸಂತ್ರಸ್ತೆಯ ಕುಟುಂಬದೊಂದಿಗೆ ನಿಲ್ಲುತ್ತೇವೆ. ಅವರೂ ನಮ್ಮ ಕುಟುಂಬ. ಅವರಿಗೆ ಯಾವುದೇ ಸಹಾಯದ ಅಗತ್ಯವಿದ್ದರೂ ಅದು ಕಾನೂನು ಅಥವಾ ಆರ್ಥಿಕವಾಗಿರಲಿ ಒದಗಿಸಲಾಗುವುದು. ಸಂತ್ರಸ್ತೆಯ ಕುಟುಂಬಕ್ಕೆ ಸರ್ಕಾರ 10 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: BSP President: ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಕೊಲೆ; ಹಂತಕನ ಎನ್‌ಕೌಂಟರ್‌- ಮತ್ತೊಂದೆಡೆ ಹತ್ಯೆಯ ಭೀಕರ ದೃಶ್ಯ ವೈರಲ್‌

Continue Reading

ಪ್ರಮುಖ ಸುದ್ದಿ

Pooja Khedkar: ಐಎಎಸ್‌ಗಾಗಿ ನಕಲಿ ಜಾತಿ, ಕಡಿಮೆ ವಯಸ್ಸು, ದರ್ಪ; ಪೂಜಾ ಖೇಡ್ಕರ್‌ ಕಳ್ಳಾಟ ಒಂದೆರಡಲ್ಲ!

Pooja Khedkar: ಟ್ರೈನಿ ಐಎಎಸ್‌ ಅಧಿಕಾರಿಯಾಗಿದ್ದಾಗಲೇ ಖಾಸಗಿ ವಾಹನಕ್ಕೆ ಕೆಂಪು ಗೂಟ ಅಳವಡಿಸಿಕೊಂಡು, ಅಧಿಕಾರ ದುರುಪಯೋಗದ ಆರೋಪ ಹೊತ್ತಿರುವ ಪೂಜಾ ಖೇಡ್ಕರ್‌ ಅವರ ಕಳ್ಳಾಟಗಳು ಬಯಲಾಗುತ್ತಿವೆ. ಅವರ ವಿರುದ್ಧ ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿರುವುದು ಸೇರಿ ಅವರ ವಿರುದ್ಧ ಹತ್ತಾರು ಆರೋಪಗಳು ಕೇಳಿಬರುತ್ತಿವೆ.

VISTARANEWS.COM


on

Pooja Khedkar
Koo

ಮುಂಬೈ: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ (Pooja Khedkar) ಅವರ ಒಂದೊಂದೇ ಕಳ್ಳಾಟಗಳು ಬಯಲಾಗುತ್ತಿವೆ. ತಮ್ಮ ಖಾಸಗಿ ಕಾರಿಗೆ ‘ಕೆಂಪು ಗೂಟ’ ಅಳವಡಿಸಿದ್ದು ಸೇರಿ ಹಲವು ರೀತಿಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು, ವರ್ಗಾವಣೆಯ ಶಿಕ್ಷೆ ಅನುಭವಿಸುತ್ತಿರುವ ಪೂಜಾ ಖೇಡ್ಕರ್‌ ಅವರು ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ತಯಾರಿಸಿದ ಆರೋಪಗಳನ್ನೂ ಎದುರಿಸುತ್ತಿದ್ದಾರೆ.

ನಿಯಮಿತ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಪುಣೆಯಿಂದ (ಅಸಿಸ್ಟಂಟ್‌ ಕಲೆಕ್ಟರ್)‌ ವಾಶಿಂಗೆ ವರ್ಗಾವಣೆಗೊಂಡಿರುವ 34 ವರ್ಷದ ಅಧಿಕಾರಿಯು, ಒಬಿಸಿ ಜಾತಿ ಪ್ರಮಾಣಪತ್ರ ಲಗತ್ತಿಸಿ ಯುಪಿಎಸ್‌ಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದಾರೆ. ಆದರೆ, ಅವರು ಒಬಿಸಿ ಜಾತಿ ಪ್ರಮಾಣಪತ್ರದ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಇನ್ನು ವಿಶೇಷ ಚೇತನ ಎಂಬುದಾಗಿಯೂ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮೆಡಿಕಲ್‌ ಟೆಸ್ಟ್‌ ಪ್ರಕಾರ ಪೂಜಾ ಖೇಡ್ಕರ್‌ ಅವರು ಫಿಟ್‌ ಇದ್ದಾರೆ ಎಂದು ಹೇಳಲಾಗುತ್ತಿದೆ.‌ 2007ರಲ್ಲಿ ಅವರು ಎಂಬಿಬಿಎಸ್‌ಗೆ ಅರ್ಜಿ ಸಲ್ಲಿಸಿದಾಗ ದೈಹಿಕವಾಗಿ ಫಿಟ್‌ ಇರುವುದಾಗಿ ದಾಖಲೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಯಸ್ಸಿನ ಕುರಿತೂ ಸುಳ್ಳು ದಾಖಲೆ

ಜಾತಿ, ವಿಶೇಷ ಚೇತನ ಪ್ರಮಾಣಪತ್ರದ ಜತೆಗೆ ಪೂಜಾ ಖೇಡ್ಕರ್‌ ಅವರು ವಯಸ್ಸಿನ ಕುರಿತು ಕೂಡ ಸುಳ್ಳು ದಾಖಲೆ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2020ರಿಂದ 2023ರ ಅವಧಿಯಲ್ಲಿ ಅವರು ಸಲ್ಲಿಸಿದ ದಾಖಲೆಗಳ ಪ್ರಕಾರ, ಮೂರು ವರ್ಷದಲ್ಲಿ ಅವರ ವಯಸ್ಸು ದಾಖಲೆಯಲ್ಲಿ ಒಂದೇ ವರ್ಷ ಹೆಚ್ಚಾಗಿದೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ವಯಸ್ಸಿನ ಮಿತಿ ಇರುವ ಕಾರಣ ಅವರು ವಯಸ್ಸಿನ ಕುರಿತು ಕೂಡ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ತಿಳಿದುಬಂದಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ.

27 ಸಾವಿರ ರೂ. ದಂಡ ಬಿದ್ದಿದ್ದೇಕೆ?

ಅಧಿಕಾರದ ದುರುಪಯೋಗ, ನಕಲಿ ದಾಖಲೆ ಸೃಷ್ಟಿ ಜತೆಗೆ ಸಂಚಾರ ದಟ್ಟಣೆ ನಿಯಮಗಳ ಉಲ್ಲಂಘನೆಯಲ್ಲೂ ಮುಂದಿದ್ದಾರೆ. ವಾಶಿಂ ಮಹಿಳಾ ಪೊಲೀಸರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಪೂಜಾ ಖೇಡ್ಕರ್‌ ಅವರು ಎರಡು ತಾಸು ಚರ್ಚಿಸಿದ್ದಾರೆ. ಯಾವ ವಿಷಯದ ಕುರಿತು ಚರ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗದಿದ್ದರೂ, ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 27 ಸಾವಿರ ರೂ. ದಂಡ ವಿಧಿಸಲಾಗಿದ್ದು, ಅದರ ನೋಟಿಸ್‌ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ.

ಪೂಜಾ ಖೇಡ್ಕರ್‌ ಪ್ರತಿಕ್ರಿಯೆ ಏನು?

ನಕಲಿ ದಾಖಲೆ, ಅಧಿಕಾರ ದುರುಪಯೋಗ ಸೇರಿ ಹಲವು ಆರೋಪಗಳ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ಮೊದಲ ಬಾರಿಗೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. “ಯಾರೇ ಆಗಲಿ, ಆರೋಪ ಸಾಬೀತಾಗುವವರೆಗೆ ಅವರು ಆರೋಪಿಯೇ. ಮಾಧ್ಯಮಗಳ ವರದಿಗಳು, ತೀರ್ಪುಗಳು ನಾನು ಏನೆಂಬುದನ್ನು ತೀರ್ಮಾನಿಸುವುದಿಲ್ಲ. ತನಿಖೆಗೆ ರಚನೆಯಾಗಿರುವ ಸಮಿತಿಯ ತೀರ್ಮಾನದ ಬಳಿಕವೇ ಸತ್ಯ ಏನೆಂಬುದು ಗೊತ್ತಾಗುತ್ತದೆ. ಮಾಧ್ಯಮಗಳು ಅಥವಾ ಜನರು ನನ್ನನ್ನು ತೀರ್ಮಾನಿಸುವುದಿಲ್ಲ” ಎಂದು ಮಾಧ್ಯಮಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Pooja Khedkar: ಎಂಬಿಬಿಎಸ್ ಪ್ರವೇಶಕ್ಕೆ ಒಬಿಸಿ ಕೆನೆಪದರ ರಹಿತ ಪ್ರಮಾಣಪತ್ರ ಸಲ್ಲಿಸಿದ್ದ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್

Continue Reading

ದೇಶ

Kashmir Encounter: ಸೇನಾ ಮುಖ್ಯಸ್ಥರ ಜೊತೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಮಾತುಕತೆ; ಸೇನೆಗೆ ಸಂಪೂರ್ಣ ಅಧಿಕಾರ

Kashmir Encounter: ಇನ್ನು ರಾಜನಾಥ್‌ ಸಿಂಗ್‌ ಅವರು ಸೇನಾ ಮುಖ್ಯಸ್ಥರ ಜೊತೆ ಘಟನೆ ಬಗ್ಗೆ ಮಾತುಕತೆ ನಡೆಸಿದ್ದು, ದೋಡಾ ಪ್ರದೇಶದಲ್ಲಿ ಪ್ರಸ್ತುತ ಸ್ಥಿತಿಗತಿ ಮತ್ತು ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಘಟನೆಗೆ ಪ್ರತಿಕಾರವಾಗಿ ಯಾವುದೇ ಕ್ರಮ ಕೈಗೊಳ್ಳ ಸಂಪೂರ್ಣ ಅನುಮತಿ ನೀಡಿದ್ದಾರೆ ಎನ್ನಲಾಗಿದೆ.

VISTARANEWS.COM


on

Rajnath Singh
Koo

ಹೊಸದಿಲ್ಲಿ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರರ ಉಪಟಳ ಮುಂದುವರಿದಿದೆ. ದೋಡಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ (Kashmir Encounter) ಒಬ್ಬ ಅಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಇದರ ಬೆನ್ನಲ್ಲೇ ಉಗ್ರರನ್ನು ಮಟ್ಟ ಹಾಕಲು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌(Rajnath Singh) ಸೇನೆಗೆ ಸಂಪೂರ್ಣ ಅಧಿಕಾರ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ರಾಜನಾಥ್‌ ಸಿಂಗ್‌ ಅವರು ಸೇನಾ ಮುಖ್ಯಸ್ಥರ ಜೊತೆ ಘಟನೆ ಬಗ್ಗೆ ಮಾತುಕತೆ ನಡೆಸಿದ್ದು, ದೋಡಾ ಪ್ರದೇಶದಲ್ಲಿ ಪ್ರಸ್ತುತ ಸ್ಥಿತಿಗತಿ ಮತ್ತು ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಘಟನೆಗೆ ಪ್ರತಿಕಾರವಾಗಿ ಯಾವುದೇ ಕ್ರಮ ಕೈಗೊಳ್ಳ ಸಂಪೂರ್ಣ ಅನುಮತಿ ನೀಡಿದ್ದಾರೆ ಎನ್ನಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರಿದಿದೆ. ದೋಡಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಅಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ದಾಳಿಯ ವೇಳೆ ಜಮ್ಮು-ಕಾಶ್ಮೀರ ಪೊಲೀಸ್‌ ಅಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ದೋಡಾ ಜಿಲ್ಲೆಯ ದೇಸಾ ಎಂಬ ಪ್ರದೇಶದ ಅರಣ್ಯದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಸೋಮವಾರ (ಜುಲೈ 16) ರಾತ್ರಿಯೇ ಕಾರ್ಯಾಚರಣೆ ಆರಂಭಿಸಿದ್ದಾರೆ. ಉಗ್ರರಿಗಾಗಿ ನಡೆದ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಯೋಧರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದಾರೆ. ಇದೇ ವೇಳೆ ಯೋಧರು ಕೂಡ ಗುಂಡಿನ ದಾಳಿ ಆರಂಭಿಸಿದ್ದಾರೆ. ರಾತ್ರೋರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ಉಪಟಳ ಜಾಸ್ತಿಯಾಗಿರುವ ಕಾರಣ ಭಾರತೀಯ ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಕಾರ್ಯಾಚರಣೆಗಳನ್ನು ಕೈಗೊಳ್ಳುತ್ತಲೇ ಇರುತ್ತಾರೆ. ಜುಲೈ 6 ಮತ್ತು 7 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಭದ್ರತಾ ಪಡೆಗಳು ಆರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದವು. ಇದಾದ ಕೇವಲ ಒಂದು ವಾರದ ನಂತರ ಈ ಕಾರ್ಯಾಚರಣೆಯು ನಡೆದಿದೆ. ಸೈನಿಕರು ಹಾಗೂ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಉಗ್ರರು ಇತ್ತೀಚೆಗೆ ದಾಳಿ ನಡೆಸುತ್ತಿದ್ದಾರೆ.

ಕುಪ್ವಾರ ಜಿಲ್ಲೆಯಲ್ಲಿ ಸೋಮವಾರ (ಜುಲೈ 15) ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದರು. ಎಲ್‌ಒಸಿಯಲ್ಲಿ ಕುಪ್ವಾರದ ಕೆರಾನ್ ಸೆಕ್ಟರ್‌ನಲ್ಲಿ ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಲಾಯಿತು. “ಕೆರಾನ್ ಸೆಕ್ಟರ್‌ನಲ್ಲಿನ ಎಲ್‌ಒಸಿಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ-ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ. ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: Manorathangal Trailer: ಗಮನ ಸೆಳೆದ ʼಮನೋರಥಂಗಳ್‌ʼ ಟ್ರೈಲರ್‌; 8 ನಿರ್ದೇಶಕರ 9 ಎಪಿಸೋಡ್‌ನಲ್ಲಿ ಸ್ಟಾರ್‌ಗಳ ಸಮಾಗಮ

Continue Reading
Advertisement
DS Veeraiah
ಕರ್ನಾಟಕ5 mins ago

D. S. Veeraiah: ಅರಸು ಟ್ರಕ್ ಟರ್ಮಿನಲ್ ಹಗರಣ;‌ ಡಿ.ಎಸ್‌.ವೀರಯ್ಯಗೆ ಜು.30ರವರೆಗೆ ನ್ಯಾಯಾಂಗ ಬಂಧನ

NEET-UG 2024
ದೇಶ17 mins ago

NEET UG 2024: ನೀಟ್‌ ಅಕ್ರಮ; ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಮತ್ತಿಬ್ಬರು ಆರೋಪಿಗಳು ಅರೆಸ್ಟ್‌

Olympics on television
ಕ್ರೀಡೆ29 mins ago

Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

Pennar River Dispute
ಪ್ರಮುಖ ಸುದ್ದಿ55 mins ago

Pennar River Dispute: ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; 8 ವಾರದಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

Rape Case
Latest1 hour ago

Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

ಕ್ರೀಡೆ1 hour ago

India at the Olympics: ಒಲಿಂಪಿಕ್ಸ್​ನಲ್ಲಿ ಭಾರತದ ಪದಕ ಸಾಧನೆಯ ಇಣುಕು ನೋಟ

Ambani Video
ಪ್ರಮುಖ ಸುದ್ದಿ1 hour ago

Ambani Video: 3 ವರ್ಷದ ಅಂಬಾನಿ ಮೊಮ್ಮಗ ವೇದಿಕೆ ಮೇಲೆ ಜಾರಿ ಬಿದ್ದ, ಆದರೆ ಜನರ ಹೃದಯ ಗೆದ್ದ!

Money Guide
ಮನಿ-ಗೈಡ್1 hour ago

Money Guide: ಹಿರಿಯರಿಗೆ ಆರೋಗ್ಯ ವಿಮೆ: ಯಾಕಾಗಿ? ಏನಿದರ ಉಪಯೋಗ?

Muharram 2024 Man dies in fire during
ರಾಯಚೂರು1 hour ago

Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

hit and run case
ದೇಶ2 hours ago

Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌