Road Accident: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತ; ಡಿವೈಡರ್‌ಗೆ ಕಾರು ಡಿಕ್ಕಿಯಾಗಿ 2 ಸಾವು - Vistara News

ಕ್ರೈಂ

Road Accident: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತ; ಡಿವೈಡರ್‌ಗೆ ಕಾರು ಡಿಕ್ಕಿಯಾಗಿ 2 ಸಾವು

Road Accident: ಬೆಂಗಳೂರು- ಮೈಸೂರು ಹೆದ್ದಾರಿಯ ನಡುವಿನ, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದಲ್ಲಿ ಅಪಘಾತ ನಡೆದಿದೆ. ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಪುತ್ರ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

VISTARANEWS.COM


on

road accident bangalore mysore highway
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ (Road Divider) ಕಾರು ಡಿಕ್ಕಿಯಾದ (Car Accident) ಪರಿಣಾಮ ಇಬ್ಬರು ಸಾವಿಗೀಡಾಗಿ, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವ ದುರ್ಘಟನೆ (Road Accident) ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ (Bangalore Mysore Highway) ಘಟಿಸಿದೆ.

ಬೆಂಗಳೂರು- ಮೈಸೂರು ಹೆದ್ದಾರಿಯ ನಡುವಿನ, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದಲ್ಲಿ ಅಪಘಾತ ನಡೆದಿದೆ. ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಪುತ್ರ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಬಗಲಕುಂಟೆ ನಿವಾಸಿಗಳಾದ ಕಲಾ (40), ಪುತ್ರ ದರ್ಶನ್ (21) ಮೃತಪಟ್ಟವರು.

ಕಾರಿನ ಹಿಂಬದಿಯಲ್ಲಿದ್ದ ಪುತ್ರಿ ಮೇಘನ ಹಾಗೂ ಅಳಿಯ ಮಂಜುನಾಥ್ ಅವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಮಿಮ್ಸ್ ಶವಗಾರಕ್ಕೆ ಮೃತ ದೇಹಗಳನ್ನು ರವಾನಿಸಲಾಗಿದ್ದು, ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಕ್ಷಣಗಳಿಗೆ ಅಡ್ಡಿಯಾಯ್ತೆಂದು ಪ್ರೇಯಸಿಯ ಮಗುವನ್ನು ಕೊಂದ ದುಷ್ಟ

ಬೆಂಗಳೂರು: ವಿವಾಹಿತೆ ಜತೆಗೆ ಅನೈತಿಕ ಸಂಬಂಧ ಹೊಂದಿದ್ದ ದುಷ್ಟನೊಬ್ಬ ತನ್ನ ಖಾಸಗಿ ಕ್ಷಣಗಳಿಗೆ ಮಗು (3) ಅಡ್ಡಿಯಾಗಿದ್ದಕ್ಕೆ ಕೊಂದು (Murder case) ಹಾಕಿದ್ದಾನೆ. ಮಗುವನ್ನು ಹತ್ಯೆ ಮಾಡಿದ್ದಕ್ಕೇ ಪ್ರಿಯಕರನ ವಿರುದ್ಧವೇ ಪ್ರಿಯತಮೆ ದೂರು ನೀಡಿದ್ದಾಳೆ. ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮೂರು ವರ್ಷದ ಅಶ್ವಿನ್ ಕೊಲೆಯಾದ ದುರ್ದೈವಿ ಮಗು. ಅಶ್ವಿನ್‌ ತಾಯಿ ರಮ್ಯಾ ಎಂಬಾಕೆ ನೀಡಿದ ದೂರಿನ ಮೇರೆಗೆ ಪ್ರಿಯಕರ ಮೈಕೆಲ್ ರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅವಿವಾಹಿತನಾಗಿದ್ದ ಮೈಕೆಲ್‌ ರಾಜ್‌ ಬೊಮ್ಮನಹಳ್ಳಿಯ ವಿರಾಟ್ ನಗರದ ನಿವಾಸಿ ಆಗಿದ್ದು, ಗ್ಯಾರೇಜ್ ಅಂಗಡಿಯನ್ನು ಇಟ್ಟುಕೊಂಡಿದ್ದ.

ಇದೇ ಏರಿಯಾ ಸಮೀಪದಲ್ಲಿ ರಮ್ಯ ಬಾಡಿಗೆ ಮನೆಯೊಂದರಲ್ಲಿ ವಾಸಿವಿದ್ದಳು. ರಮ್ಯಾ ಆರು ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದಳು. ಆದರೆ ಒಂದು ವರ್ಷದ ಹಿಂದೆ ದಂಪತಿ ಮಧ್ಯೆ ವೈಮನಸ್ಸು ಉಂಟಾಗಿತ್ತು. ಹೀಗಾಗಿ ಪತಿಯಿಂದ ರಮ್ಯ ದೂರವಾಗಿದ್ದಳು. ಈ ವೇಳೆ ಆರೋಪಿ ಮೈಕೆಲ್ ರಾಜ್‌ನ ಪರಿಚಯವಾಗಿತ್ತು.

ಇದನ್ನೂ ಓದಿ: Fraud Case : ‌ಸಿಸಿಬಿ ಬಲೆಗೆ ಬಿದ್ದ ಖತರ್ನಾಕ್‌ ನಯ ವಂಚಕ; ಡಿಸಿ, ಜಡ್ಜ್‌ ಹೆಸರು ಬಳಸಿ ಲಕ್ಷ ಲಕ್ಷ ಲೂಟಿ

ಪರಿಚಯವು ಕ್ರಮೇಣ ಇಬ್ಬರ ಸಂಬಂಧ ಆತ್ಮೀಯತೆಗೆ ತಿರುಗಿತ್ತು. ಸ್ನೇಹವು ಪ್ರೀತಿಗೆ ತಿರುಗಿತ್ತು. ಕಳೆದ ಆರೇಳು ತಿಂಗಳಿಂದ ರಮ್ಯಾಳ ಮನೆಗೆ ಮೈಕಲ್‌ ಬಂದು ಹೋಗುತ್ತಿದ್ದ. ಕಳೆದ ಜುಲೈ 6ರಂದು ಮನೆಗೆ ಬಂದಾಗ ಅಶ್ವಿನ್‌ನನ್ನು ಕಂಡು ಕೋಪಗೊಂಡಿದ್ದ. ತಮ್ಮಿಬ್ಬರ ಸಂಬಂಧಕ್ಕೆ ಮಗು ಅಡ್ಡಿಯಾಗಲಿದೆ ಎಂದು ಭಾವಿಸಿ ಕೆನ್ನೆಗೆ ಹೊಡೆದು, ನಂತರ ಬಾತ್ ರೂಮಿನ ಗೋಡೆಗೆ ತಲೆಯನ್ನು ಗುದ್ದಿಸಿ ಊತ ಬರುವಂತೆ ಮಾಡಿದ್ದ.

ಇದನ್ನು ರಮ್ಯಳಿಗೆ ಹೇಳದೆ ಮಾರೆ ಮಾಚಿ ಕಾಲ್ಕಿತ್ತಿದ್ದ. ಇತ್ತ ಮಗುವಿನ ಮೇಲೆ ಹಲ್ಲೆ ಆಗಿರುವ ವಿಷಯ ರಮ್ಯಾಗೆ ತಿಳಿದಿರಲಿಲ್ಲ. ಅದೇ ದಿನ ರಾತ್ರಿ ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮಗು ಅಶ್ವಿನ್‌ ಮೃತಪಟ್ಟಿದೆ.

ಇದನ್ನೂ ಓದಿ: Dengue Fever: ರಾಜ್ಯದಲ್ಲಿ ಶುಕ್ರವಾರ 437 ಮಂದಿಗೆ ಡೆಂಗ್ಯೂ; ಸಕ್ರಿಯ ಪ್ರಕರಣಗಳ ಸಂಖ್ಯೆ 388ಕ್ಕೇರಿಕೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

Rape Case: ಕಾಮಾಸಕ್ತರಿಗೆ ಭಯ ಮತ್ತು ಲಜ್ಜೆ ಎರಡೂ ಇರುವುದಿಲ್ಲವಂತೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸ್ನೇಹಿತನ ತಾಯಿಯ ಮೇಲೆ ಅತ್ಯಾಚಾರ ಎಸಗಿದ ಹೇಯವಾದ ಘಟನೆಯೊಂದು ನಡೆದಿದೆ. ಸ್ನೇಹಿತನು ಇಲ್ಲದ ವೇಳೆ ನೋಡಿಕೊಂಡು ಮನೆಗೆ ಬಂದ ಆತನ ಕಾಮುಕ ಗೆಳೆಯ ಸ್ನೇಹಿತನ ತಾಯಿಯನ್ನೇ ತನ್ನ ಚಪಲಕ್ಕೆ ಬಳಸಿಕೊಂಡಿದ್ದಾನೆ. ತಾಯಿ ಇದಕ್ಕೆ ವಿರೋಧಿಸಿದಾಗ ಮಗನನ್ನು ಕೊಲ್ಲುವುದಾಗಿ ಬೆದರಿಯೊಡ್ಡಿದ್ದಾನೆ. ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮತ್ತು ತಲೆಮರೆಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

VISTARANEWS.COM


on

Rape Case
Koo

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳಿಬರುತ್ತಿದೆ. ಕಾಮುಕರು ತಮ್ಮ ಕಾಮತೃಷೆಯನ್ನು ತೀರಿಸಿಕೊಳ್ಳಲು ಮುಗ್ಧ ಬಾಲಕಿ, ಯುವತಿರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ತಾಯಿಯ ವಯಸ್ಸಿನವರನ್ನು ಕೂಡ ಬಿಡುತ್ತಿಲ್ಲ. ಅಂತಹದೊಂದು ಘಟನೆ ಇದೀಗ ಮಧ್ಯಪ್ರದೇಶದ ಅವಧ್ಪುರಿಯಲ್ಲಿ ನಡೆದಿದೆ. ಮಹಿಳೆಯ ಮಗನ ಸ್ನೇಹಿತನೇ ಆಕೆಯ ಮೇಲೆ ಅತ್ಯಾಚಾರ (Rape Case) ಎಸಗಿದ್ದಾನೆ.

ಮಧ್ಯಪ್ರದೇಶದ ಭೋಪಾಲ್‌ನ ಅವಧ್ಪುರಿಯಲ್ಲಿ ಜುಲೈ 12ರಂದು 43 ವರ್ಷದ ಮಹಿಳೆಯ ಮೇಲೆ ಆಕೆಯ ಮಗನ ಸ್ನೇಹಿತ, ಮಗನನ್ನು ಕೊಲ್ಲುವುದಾಗಿ ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಮತ್ತು ಸಂತ್ರಸ್ತೆ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅಲ್ಲದೆ ಸಂತ್ರಸ್ತೆಯ ಮಗ ಹಾಗೂ ಆರೋಪಿ ಸ್ನೇಹಿತರಾಗಿದ್ದರು. ಹಾಗಾಗಿ ಆರೋಪಿ ಆಗಾಗ ಆಕೆಯ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಆದರೆ ಶುಕ್ರವಾರ ರಾತ್ರಿ ಆಕೆಯ ಮಗ ಮತ್ತು ಆರೋಪಿ ಹೊರಗೆ ಹೋಗಿದ್ದರು. ಸಂತ್ರಸ್ತೆ ಮನೆಯಲ್ಲಿ ಒಬ್ಬಳೆ ಇರುವುದನ್ನು ಅರಿತ ಆತ ಒಬ್ಬನೇ ತನ್ನ ಸ್ನೇಹಿತನ ಮನೆಗೆ ಹಿಂದಿರುಗಿ ಸಂತ್ರಸ್ತೆಯ ಬಾಗಿಲು ತಟ್ಟಿದ್ದಾನೆ. ಆಗ ಬಾಗಿಲು ತೆರೆದ ಸಂತ್ರಸ್ತೆಯ ಮನೆಗೆ ನುಗ್ಗಿದ್ದಾನೆ.

ಆಗ ಸಂತ್ರಸ್ತೆ ತನ್ನ ಮಗನ ಬಗ್ಗೆ ಕೇಳಿದಾಗ ಆತ ಚೆನ್ನಾಗಿ ಕುಡಿದು ಮಲಗಿರುವುದಾಗಿ ತಿಳಿಸಿದ್ದಾನೆ. ಬಳಿಕ ಆತ ಆಕೆಯ ಜತೆ ಅಸಭ್ಯವಾಗಿ ವರ್ತಿಸಲು ಪ್ರಯತ್ನಿಸಿದ್ದಾನೆ. ಆಗ ಆಕೆ ಅದನ್ನು ವಿರೋಧಿಸಿದಾಗ ಅತ್ಯಾಚಾರ ಪ್ರಯತ್ನವನ್ನು ವಿರೋಧಿಸಿದರೆ ಅವಳ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆಯ ನಂತರ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಮರುದಿನ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹುಡುಗಿಯ ಮೇಲೆ ಏಕಾಏಕಿ ದಾಳಿ ಮಾಡಿದ ಕೋತಿ; ವಿಡಿಯೊ ಇದೆ

ಮಹಿಳೆಯ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು, ಇಂತಹ ಪ್ರಕರಣಗಳು ಈ ಹಿಂದೆ ಹಲವು ನಡೆದಿದ್ದು, ಇದರಲ್ಲಿ ಮಹಿಳೆಯರು ಬಲಿಯಾಗಿದ್ದಾರೆ. ಪತ್ನಿಯ ಮೇಲಿನ ಅನುಮಾನದಿಂದ ಪತಿಯೇ ಆಕೆಯ ಕತ್ತು ಹಿಸುಕಿ ಶವವನ್ನು ಸುಟ್ಟು ಹೂತು ಹಾಕಿದ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದ್ದು, ಪತಿಯನ್ನು ಬಂಧಿಸಲಾಗಿತ್ತು. ಮತ್ತೊಂದು ಘಟನೆಯಲ್ಲಿ, ಜಬಲ್ಪುರ ನಗರದ ಓಮ್ತಿ ಪ್ರದೇಶದಲ್ಲಿ ಜುಲೈ 1 ರಂದು 17 ವರ್ಷದ ಬಾಲಕಿಯನ್ನು 20 ವರ್ಷದ ಗುಫ್ರಾನ್ ಎಂಬ ವ್ಯಕ್ತಿ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಆರೋಪಿಯೊಂದಿಗೆ ಮಾತನಾಡಲು ಸಂತ್ರಸ್ತೆ ನಿರಾಕರಿಸಿದ್ದು ಈ ಅಪರಾಧದ ಹಿಂದಿನ ಉದ್ದೇಶವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

ರಾಯಚೂರು

Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

Muharram 2024 : ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮವಾಗಿದ್ದಾರೆ. ಬೆಂಕಿಯಲ್ಲಿ ಬೇಯುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.

VISTARANEWS.COM


on

By

Muharram 2024 Man dies in fire during
Koo

ರಾಯಚೂರು: ರಾಯಚೂರಿನಲ್ಲಿ ಮೊಹರಂ ಆಚರಣೆ ವೇಳೆ ಕೊಂಡ ಹಾಯುವಾಗ (Muharram 2024) ವ್ಯಕ್ತಿಯೊಬ್ಬ ಆಯತಪ್ಪಿ ಬಿದ್ದು ಸುಟ್ಟು ಭಸ್ಮವಾಗಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಯಮನಪ್ಪ ನಾಯಕ್ (45)ಮೃತ ದುರ್ದೈವಿ.

ನಿಗಿ ನಿಗಿ ಕೆಂಡದಲ್ಲಿ ಬೇಯುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮೊಹರಂ ಹಬ್ಬ ಆಚರಣೆ ವೇಳೆ ಕೊಂಡ ಹಾಯುವುದು ಪದ್ಧತಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿದೆ. ಅದರಂತೆ ಬೆಂಕಿ ಹಾಯಲು ಯಮನಪ್ಪ ಮುಂದಾಗಿದ್ದರು. ಕೊಂಡ ಹಾಯುವಾಗ ಆಯತಪ್ಪಿ ಬೆಂಕಿಯೊಳಗೆ ಬಿದ್ದ ಪರಿಣಾಮ ಸುಟ್ಟುಕರಕಲಾಗಿದ್ದಾರೆ.

ಕೂಡಲೇ ಅಲ್ಲಿದ್ದವರು ಬೆಂಕಿ ಹಾರಿಸಲು ನೀರು ಎರಚಿ ರಕ್ಷಣೆ ಮುಂದಾದರೂ, ಆದರೆ ತೀವ್ರ ಬೆಂಕಿ ಆವರಿಸಿ ಯಮನಪ್ಪ ಸುಟ್ಟುಭಸ್ಮವಾದರು. ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್‌ರಿಂದ ಲಾಠಿ ಚಾರ್ಜ್

ಮೊಹರಂ ಹಬ್ಬದ ಆಚರಣೆ ವೇಳೆ ಪೊಲೀಸ್‌ರಿಂದ ಲಾಠಿ ಚಾರ್ಜ್ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪಾಶ್ಚಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ಪಾಶ್ಚಾಪುರ ಗ್ರಾಮದ ನಡುವಿನ ಪೇಟೆ ಬಳಿ ಬಂದಾಗ ಏಕಾಏಕಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಎರಡು ದೇವರ ಭೇಟಿ ಸಂದರ್ಭದಲ್ಲಿ ಟೊನ್ನೆಬಾವು, ಕರಬಾಲ ಎಂಬ ಸಂಪ್ರದಾಯದ ಆಚರಣೆ ವೇಳೆ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಯಮಕನಮರಡಿ ಪೊಲೀಸ್ ಠಾಣೆಯ ಎಎಸ್‌ಐ ಮುರಗೋಡ ಹಾಗೂ ಓರ್ವ ಪೋಲಿಸ್ ಪೇದೆ ಮೇಲೆ ಹಲ್ಲೆ ನಡೆಸಲಾಗಿದೆ. ಉದ್ದೇಶಪೂರ್ವಕವಾಗಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

Hit And Run Case: ಮಿಹಿರ್‌ನ ಪೊಲೀಸ್‌ ಕಸ್ಟಡಿ ಮುಗಿದಿರುವ ಹಿನ್ನೆಲೆ ಮಂಗಳವಾರ ಶಿವಧಿ ಕೋರ್ಟ್‌ಗೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನು ಈ ಪ್ರಕರಣದ ಮತ್ತೊರ್ವ ಆರೋಪಿ ಮಿಹಿರ್‌ನ ತಂದೆ ರಾಜೇಶ್‌ ಶಾ ಸದ್ಯ ಜಾಮೀನಿನ ಮೂಲಕ ಹೊರಬಂದಿದ್ದಾರೆ.

VISTARANEWS.COM


on

hit and run case
Koo

ಮುಂಬೈ: ಜು. 7ರಂದು ಮಹಾರಾಷ್ಟ್ರದ ವರ್ಲಿಯಲ್ಲಿ ಬಿಎಂಡಬ್ಲ್ಯು ಕಾರು ಚಲಾಯಿಸಿ(Hit And Run Case), ಸ್ಕೂಟರ್‌ಗೆ ಗುದ್ದಿ ಓರ್ವ ಮಹಿಳೆಯ ಸಾವಿಗೆ ಕಾರಣನಾದ ಶಿವಸೇನೆ ಮುಖಂಡ ರಾಜೇಶ್‌ ಶಾ (Rajesh Shah) ಅವರ ಪುತ್ರ ಮಿಹಿರ್‌ ಶಾ (Mihir Shah)ಗೆ ಜು.30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮಿಹಿರ್‌ನ ಪೊಲೀಸ್‌ ಕಸ್ಟಡಿ ಮುಗಿದಿರುವ ಹಿನ್ನೆಲೆ ಮಂಗಳವಾರ ಶಿವಧಿ ಕೋರ್ಟ್‌ಗೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನು ಈ ಪ್ರಕರಣದ ಮತ್ತೊರ್ವ ಆರೋಪಿ ಮಿಹಿರ್‌ನ ತಂದೆ ರಾಜೇಶ್‌ ಶಾ ಸದ್ಯ ಜಾಮೀನಿನ ಮೂಲಕ ಹೊರಬಂದಿದ್ದಾರೆ.

ಶಿವಸೇನೆ (ಏಕನಾಥ್ ಶಿಂಧೆ ಬಣ) ನಾಯಕರಾಗಿರುವ ರಾಜೇಶ್‌ ಶಾ ಅವರ 24 ವರ್ಷದ ಪುತ್ರ ಮಿಹಿರ್‌ ಶಾ ಕುಡಿದು ಕಾರು ಚಲಾಯಿಸಿ ವರ್ಲಿಯಲ್ಲಿ ಮೀನು ಮಾರಾಟಗಾರ ದಂಪತಿ ಪ್ರದೀಪ್ ನಖ್ವಾ ಮತ್ತು ಕಾವೇರಿ ನಖ್ವಾ ಅವರು ಸಂಚರಿಸುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದ. ಭಾನುವಾರ ಬೆಳಿಗ್ಗೆ 5.30ರ ಸುಮಾರಿಗೆ ಈ ಘಟನೆ ನಡೆದಿತ್ತು. ಕಾರು ಡಿಕ್ಕಿ ಹೊಡೆದ ಪರಿಣಾಮ ಪ್ರದೀಪ್ ಎಸೆಯಲ್ಪಟ್ಟರೆ, ಕಾವೇರಿ ಅವರ ದೇಹ ಚಕ್ರಗಳ ಅಡಿಯಲ್ಲಿ ಸಿಕ್ಕಿ ಬಿದ್ದಿದ್ದು, ಕಾರು 1.5 ಕಿ.ಮೀ. ದೂರ ಎಳೆದೊಯ್ದಿತ್ತು.

ಅಪಘಾತ ನಡೆದ ನಂತರ ಮಿಹಿರ್‌ ಚಾಲಕ ರಾಜರ್ಷಿ ಬಿದಾವತ್‌ನನ್ನು ಡ್ರೈವರ್‌ ಸೀಟ್‌ನಲ್ಲಿ ಕೂರಿಸಿದ್ದನು. ಬಳಿಕ ಅವರು ಬಾಂದ್ರಾದ ಕಲಾ ನಗರಕ್ಕೆ ತೆರಳಿ ಅಲ್ಲಿ ನಂಬರ್ ಪ್ಲೇಟ್ ಅನ್ನು ತೆಗೆದು ತಲೆ ಮರೆಸಿಕೊಂಡಿದ್ದರು. ಈ ವೇಳೆ ಮಿಹಿರ್‌ ಶಾ ತನ್ನ ಪ್ರೇಯಸಿಯೊಂದಿಗೆ ಸುಮಾರು 40 ಬಾರಿ ಮಾತನಾಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಕಲಾ ನಗರದಲ್ಲಿ ಕಾರು ನಿಲ್ಲಿಸಿ ಮಿಹಿರ್‌ ಶಾ ಆಟೋ ಹತ್ತಿ ಗೋರೆಗಾಂವ್‌ನಲ್ಲಿರುವ ಪ್ರೇಯಸಿ ಮನೆಗೆ ತೆರಳಿದ್ದ. ಅಪಘಾತದ ವಿಚಾರವನ್ನು ಪ್ರೇಯಸಿ ತನ್ನ ಸಹೋದರಿ ಜತೆಗೆ ಹಂಚಿಕೊಂಡಿದ್ದಳು. ಬಳಿಕ ಸಹೋದರಿ ಆಗಮಿಸಿ ಮಿಹಿರ್‌ನನ್ನು ಬೋರಿವಲಿಯಲ್ಲಿರುವ ತಮ್ಮ ಮನೆಗೆ ಕರೆದೊಯ್ದಿದ್ದರು. ಈ ವೇಳೆ ಮಿಹಿರ್‌ನ ಕುಟುಂಬ ಆತ ಎಲ್ಲಿ ತಲೆ ಮರೆಸಿಕೊಂಡಿದ್ದಾನೆ ಎನ್ನುವ ವಿಚಾರವನ್ನು ಪೊಲೀಸರಿಗೆ ತಿಳಿಸಿರಲಿಲ್ಲ. ಪೊಲೀಸರ 14 ತಂಡ ಆತನಿಗಾಗಿ ತೀವ್ರ ಶೋಧ ನಡೆಸುತ್ತಿತ್ತು.

ಸೋಮವಾರ ರಾತ್ರಿ ಮಿಹಿರ್‌ ವಿರಾರ್‌ನಲ್ಲಿರುವ ತನ್ನ ಮನೆಗೆ ತೆರಳಿದ್ದ. ಮಂಗಳವಾರ ಬೆಳಿಗ್ಗೆ ಆತನ ಸ್ನೇಹಿತ ಅವದೀಪ್ ತನ್ನ ಫೋನ್ ಅನ್ನು 15 ನಿಮಿಷಗಳ ಕಾಲ ಆನ್ ಮಾಡಿದಾಗ ಪೊಲೀಸರು ಅವರಿರುವ ಜಾಗ ಪತ್ತೆ ಮಾಡಿ ಮಿಹಿರ್‌ನನ್ನು ವಶಕ್ಕೆ ಪಡೆದುಕೊಂಡಿದ್ದರು. ಮಿಹಿರ್‌ನನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜುಲೈ 16ರವರೆಗೆ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.

10 ಲಕ್ಷ ರೂ. ಪರಿಹಾರ ಘೋಷಣೆ

ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಮೃತ ಕಾವೇರಿ ನಖ್ವಾ ಅವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. “ನಾವು ಸಂತ್ರಸ್ತೆಯ ಕುಟುಂಬದೊಂದಿಗೆ ನಿಲ್ಲುತ್ತೇವೆ. ಅವರೂ ನಮ್ಮ ಕುಟುಂಬ. ಅವರಿಗೆ ಯಾವುದೇ ಸಹಾಯದ ಅಗತ್ಯವಿದ್ದರೂ ಅದು ಕಾನೂನು ಅಥವಾ ಆರ್ಥಿಕವಾಗಿರಲಿ ಒದಗಿಸಲಾಗುವುದು. ಸಂತ್ರಸ್ತೆಯ ಕುಟುಂಬಕ್ಕೆ ಸರ್ಕಾರ 10 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: BSP President: ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಕೊಲೆ; ಹಂತಕನ ಎನ್‌ಕೌಂಟರ್‌- ಮತ್ತೊಂದೆಡೆ ಹತ್ಯೆಯ ಭೀಕರ ದೃಶ್ಯ ವೈರಲ್‌

Continue Reading

ಬೆಂಗಳೂರು

BMTC staff : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ

Bengaluru News : ಬೆಂಗಳೂರಿನ ಬಿಎಂಟಿಸಿ ಕೇಂದ್ರ ಕಚೇರಿಯೊಳಗೆ ಸಿಬ್ಬಂದಿಯೊಬ್ಬ (BMTC staff) ನೇಣು ಬಿಗಿದುಕೊಂಡು (Self Harming) ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

BMTC staff commits suicide at headquarters
Koo

ಬೆಂಗಳೂರು: ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿಯ ಪಕ್ಕದಲ್ಲಿರುವ ಬಿಎಂಟಿಸಿ ಕಚೇರಿಯೊಳಗೆ ಬಿಎಂಟಿಸಿ ಸಿಬ್ಬಂದಿ (BMTC staff) ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಅಥಣಿ ಮೂಲದ ಮಹೇಶ್ ಆತ್ಮಹತ್ಯೆ ಮಾಡಿಕೊಂಡವರು.

ಡಿಪೋ ನಂಬರ್ 12ರಲ್ಲಿ ಮಹೇಶ್‌ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ. ನಿನ್ನೆ ಸೋಮವಾರ ಬೆಳಗ್ಗೆ ರೆಕಾರ್ಡ್ ರೂಂ ಕೀ ಕೇಳಿದ್ದ. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ನಿನ್ನೆ ಸಂಜೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿನ್ನೆ ಸೆಕ್ಯೂರಿಟಿ ಗಾರ್ಡ್ ಬಳಿ ಮಹೇಶ್ ರೆಕಾರ್ಡ್ ಸೆಕ್ಷನ್ ಕೀ ಪಡೆದು, ಬೆಳಗ್ಗೆಯಿಂದಲ್ಲೂ ರೂಮಿನೊಳಗೆ ಓಡಾಟ ನಡೆಸಿದ್ದ. ಸಂಜೆ ಯಾರು ಇಲ್ಲದ ವೇಳೆ ವೈರ್ ಬಳಸಿ ಫ್ಯಾನ್‌ಗೆ ವೈರ್ ಹಾಕಿಕೊಂಡು ನೇಣು ಬಿಗಿದುಕೊಂಡಿದ್ದಾರೆ. ಮುಂಜಾನೆ ಸಿಬ್ಬಂದಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

ಗದಗದಲ್ಲಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ

ಸೇತುವೆ ಮೇಲಿಂದ ನದಿಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ತುಂಗಭದ್ರಾ ನದಿಯಲ್ಲಿ ಘಟನೆ ನಡೆದಿದೆ. ಗದಗ ಹಾಗೂ ಬಳ್ಳಾರಿ ಜಿಲ್ಲೆ‌ಗಳ‌ ಮಧ್ಯ ಸಂಪರ್ಕಿಸುವ ಸೇತುವೆ ಇದಾಗಿದ್ದು, ತುಂಗಭದ್ರಾ ನದಿಗೆ‌ ಅಡ್ಡಲಾಗಿ ನಿರ್ಮಿಸಿರುವ ಸೇತುವೆ‌ ಮೇಲಿಂದ ನದಿಗೆ ಹಾರಿದ್ದಾನೆ. ಕರಿಬಸಪ್ಪ (30) ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದವನು. ಕರಿಬಸಪ್ಪ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮೀರಾಕೊರಳಹಳ್ಳಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಕರಿಬಸಪ್ಪ ನದಿಗೆ ಹಾರಿದ್ದನ್ನು ಗಮನಿಸಿದ ಕೊರ್ಲಹಳ್ಳಿ ಗ್ರಾಮದ ಪುನೀತ್, ಕೃಷ್ಣ, ಹನುಮಂತ ಎಂಬುವವರು ಕೂಡಲೇ ರಕ್ಷಣೆ ಮಾಡಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pennar River Dispute
ಪ್ರಮುಖ ಸುದ್ದಿ16 mins ago

Pennar River Dispute: ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; 8 ವಾರದಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

Rape Case
Latest25 mins ago

Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

ಕ್ರೀಡೆ28 mins ago

India at the Olympics: ಒಲಿಂಪಿಕ್ಸ್​ನಲ್ಲಿ ಭಾರತದ ಪದಕ ಸಾಧನೆಯ ಇಣುಕು ನೋಟ

Ambani Video
ಪ್ರಮುಖ ಸುದ್ದಿ40 mins ago

Ambani Video: 3 ವರ್ಷದ ಅಂಬಾನಿ ಮೊಮ್ಮಗ ವೇದಿಕೆ ಮೇಲೆ ಜಾರಿ ಬಿದ್ದ, ಆದರೆ ಜನರ ಹೃದಯ ಗೆದ್ದ!

Money Guide
ಮನಿ-ಗೈಡ್40 mins ago

Money Guide: ಹಿರಿಯರಿಗೆ ಆರೋಗ್ಯ ವಿಮೆ: ಯಾಕಾಗಿ? ಏನಿದರ ಉಪಯೋಗ?

Muharram 2024 Man dies in fire during
ರಾಯಚೂರು49 mins ago

Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

hit and run case
ದೇಶ52 mins ago

Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

Assembly Session
ಕರ್ನಾಟಕ57 mins ago

Assembly Session: ವಾಲ್ಮೀಕಿ ನಿಗಮ ಅಕ್ರಮ ದಲಿತರಿಗೆ ಮಾಡಿರೋ ಅನ್ಯಾಯ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಕಡಿಮೆ ಪದಕಗಳು ಸಿಗುವುದು ಯಾಕೆ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ

BMTC staff commits suicide at headquarters
ಬೆಂಗಳೂರು2 hours ago

BMTC staff : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ24 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌