KL Rahul : ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲಕ್ಕೆ ಕ್ರಿಕೆಟಿಗ ಕೆ. ಎಲ್​ ರಾಹುಲ್​ ದಂಪತಿ ಭೇಟಿ - Vistara News

ಕ್ರೀಡೆ

KL Rahul : ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲಕ್ಕೆ ಕ್ರಿಕೆಟಿಗ ಕೆ. ಎಲ್​ ರಾಹುಲ್​ ದಂಪತಿ ಭೇಟಿ

KL Rahul : ಅವಕಾಶದ ನಿರೀಕ್ಷೆಯಲ್ಲಿರುವ ಅವರೀಗ ಅಮೂಲ್ಯ ಸಮಯವನ್ನು ಕುಟುಂಬದ ಜತೆ ಕಳೆಯುತ್ತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಅನಂತ್​ ಅಂಬಾನಿ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದಂಪತಿ ಜತೆಯಾಗಿ ಭಾಗಿಯಾಗಿದ್ದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿಕಾಣಿಸಿಕೊಂಡಿದ್ದವು.

VISTARANEWS.COM


on

KL Rahul
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಭಾರತ ತಂಡದ ಬಲಗೈ ಬ್ಯಾಟರ್ ಹಾಗೂ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ (KL Rahul) ಇಲ್ಲಿನ ಐತಿಹಾಸಿಕ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭಾನುವಾರ ಭೇಟಿ ನೀಡಿದ್ದಾರೆ. ಪತ್ನಿ ಅತಿಯಾ ಶೆಟ್ಟಿ ಅವರ ಜತೆ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು. ಬಪ್ಪನಾಡು ಕ್ಷೇತ್ರವು ಮಂಗಳೂರು ನಗರದ ಹೊರವಲಯದ ಮುಲ್ಕಿ ಸಮೀಪ ಇದೆ. ದೇಗುಲಕ್ಕೆ ಭೇಟಿ ನೀಡಿದ ದಂಪತಿಗೆ ದೇವಾಲಯದ ವತಿಯಿಂದ ವಿಶೇಷ ಗೌರವ ಸಲ್ಲಿಸಲಾಯಿತು.

ವಿಶ್ವ ಕಪ್​ ತಂಡದಲ್ಲಿ ಅವಕಾಶ ಪಡೆಯದೇ ಕೆ. ಎಲ್ ರಾಹುಲ್​ ಮುಂಬರುವ ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡ ಸೇರುವ ನಿರೀಕ್ಷೆಯಿದೆ. ಆದರೆ ಅದಿನ್ನೂ ಸ್ಪಷ್ಟವಾಗಿಲ್ಲ. ತಂಡವೂ ಪ್ರಕಟಗೊಂಡಿಲ್ಲ. ಅವಕಾಶದ ನಿರೀಕ್ಷೆಯಲ್ಲಿರುವ ಅವರೀಗ ಅಮೂಲ್ಯ ಸಮಯವನ್ನು ಕುಟುಂಬದ ಜತೆ ಕಳೆಯುತ್ತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಅನಂತ್​ ಅಂಬಾನಿ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದಂಪತಿ ಜತೆಯಾಗಿ ಭಾಗಿಯಾಗಿದ್ದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿಕಾಣಿಸಿಕೊಂಡಿದ್ದವು.

ಶ್ರೀಲಂಕಾ ಪ್ರವಾಸದ ಏಕ ದಿನ ತಂಡಕ್ಕೆ ಕೆ. ಎಲ್ ರಾಹುಲ್ ನಾಯಕ?

ಜಿಂಬಾಬ್ವೆ ಪ್ರವಾಸದ ಬಳಿಕ ಟೀಮ್ ಇಂಡಿಯಾ ತನ್ನ ಮುಂದಿನ ಕಾರ್ಯಯೋಜನೆಗೆ ಸಜ್ಜಾಗಬೇಕಾಗಿದೆ ವೈಟ್-ಬಾಲ್ ಸರಣಿಗಾಗಿ ಭಾರತ ಬಳಗ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಹೊಸ ಕೋಚ್​ ಗೌತಮ್ ಗಂಭೀರ್ ಅಡಿಯಲ್ಲಿ ಈ ತಂಡ ದ್ವೀಪ ರಾಷ್ಟ್ರಕ್ಕೆ ಹೋಗಲಿದೆ. ಈ ಸರಣಿಯಲ್ಲಿ ಯಾರೆಲ್ಲ ಇರುತ್ತಾರೆ ಎಂಬ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಆದರೆ, ವರದಿಗಳ ಪ್ರಕಾರ, ಸ್ಟಾರ್ ಬ್ಯಾಟರ್​ ಹಾಗೂ ಕನ್ನಡಿಗ ಕೆಎಲ್ ರಾಹುಲ್ (KL Rahul) ತಂಡಕ್ಕೆ ಮರಳಲಿದ್ದು ತಂಡವನ್ನು ಮುನ್ನಡೆಸುವ ನಿರೀಕ್ಷೆಯಿದೆ.

ಏಕದಿನ ಸರಣಿಯಿಂದ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ವಿರಾಟ್ ಕೊಹ್ಲಿಗೂ ವಿಶ್ರಾಂತಿ ನೀಡಲಾಗಿದೆ ಎಂದು ವರದಿಯಾಗಿದೆ. ಈ ಸರಣಿಯು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಅಡಿಯಲ್ಲಿ ತಂಡಕ್ಕೆ ಮೊದಲನೆಯದು ಶ್ರೀಲಂಕಾ ಸವಾಲು. ಹೀಗಾಗಿ ಈ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲು ಕೆಎಲ್ ರಾಹುಲ್ ಮುಂಚೂಣಿಯಲ್ಲಿ ಆಯ್ಕೆಯಾಗಿದ್ದಾರೆ.

ಕೆಎಲ್ ರಾಹುಲ್ ಟಿ 20 ವಿಶ್ವಕಪ್​​ ಗೆ ಹೋಗಿದ್ದ ಭಾರತದ ತಂಡದಿಂದ ಹೊರಗುಳಿದಿದ್ದರು. ಆದರೆ ಈಗ ಶ್ರೀಲಂಕಾ ಪ್ರವಾಸದ ಏಕದಿನ ಹಂತದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ನಾಯಕತ್ವದ ಪಾತ್ರವನ್ನು ಸಹ ತೆಗೆದುಕೊಳ್ಳಲಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ 20 ಯಿಂದ ನಿವೃತ್ತರಾಗುವುದರೊಂದಿಗೆ ಆಲ್ರೌಂಡರ್ ಹಾರ್ದಿಕ್ ಚುಟುಕು ಸ್ವರೂಪದ ಕ್ರಿಕೆಟ್​​ನಲ ಲಿ ತಂಡದ ಜವಾಬ್ದಾರಿ ವಹಿಸುವ ನಿರೀಕ್ಷೆಯಿದೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ, ಏಕೆಂದರೆ ಅವರು ದೀರ್ಘ ಸ್ವರೂಪದಲ್ಲಿ ರನ್ ಗಳಿಸುತ್ತಾರೆ ಎಂದು ಮಂಡಳಿಯು ನಂಬಿದೆ ಎಂದು ಪತ್ರಕರ್ತ ವಿಪುಲ್ ಕಶ್ಯಪ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Paris Olympics 2024 : ಜಿಯೋಸಿನಿಮಾದಲ್ಲಿ ಪ್ಯಾರಿಸ್​ ಒಲಿಂಪಿಕ್ಸ್​​ ಉಚಿತ ನೇರಪ್ರಸಾರ

ಮೂಲಗಳ ಪ್ರಕಾರ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ಅರ್ಹ ವಿರಾಮ ತೆಗೆದುಕೊಳ್ಳಲಿದ್ದಾರೆ ಮತ್ತು ಸದ್ಯಕ್ಕೆ ಟೆಸ್ಟ್ ಕ್ರಿಕೆಟ್​ ಕಡೆಗೆ ಮಾತ್ರ ಗಮನ ಹರಿಸಲಿದ್ದಾರೆ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಇಂಗ್ಲೆಂಡ್ ವಿರುದ್ಧ ಮೂರು ಏಕದಿನ ಪಂದ್ಯಗಳು ನಡೆಯಲಿದ್ದು, ಇವರಿಬ್ಬರಿಗೆ ಇದು ಸಾಕಷ್ಟು ಅಭ್ಯಾಸ ಸಿಗಲಿದೆ.
ಏಕದಿನ ತಂಡದಲ್ಲಿ ಕೊಹ್ಲಿ ಮತ್ತು ರೋಹಿತ್​ಗೆ ಆಯ್ಕೆಗಳಿವೆ. ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ಇಂಗ್ಲೆಂಡ್ ವಿರುದ್ಧದ ಮೂರು 50 ಓವರ್​ಗಳ ಪಂದ್ಯಗಳು ಅವರಿಗೆ ಸಾಕಷ್ಟು ಅಭ್ಯಾಸ ನೀಡಲಿದೆ ಮುಂದಿನ ಕೆಲವು ತಿಂಗಳುಗಳವರೆಗೆ, ಇಬ್ಬರೂ ಟೆಸ್ಟ್​​ಗೆ ಆದ್ಯತೆ ನೀಡುತ್ತಾರೆ /ಭಾರತವು ಸೆಪ್ಟೆಂಬರ್​ನಿಂದ ಜನವರಿ ನಡುವೆ ಅವುಗಳಲ್ಲಿ 10 ಪಂದ್ಯಗಳನ್ನು ಆಡಲಿದೆ,” ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ

ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಆಗಸ್ಟ್ 2024 ರಲ್ಲಿ ಪ್ರಾರಂಭವಾಗಲಿದೆ. ನಾಯಕ ಯಾರೆಂಬುದನ್ನು ಇನ್ನೂ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಿದರೆ, ಹಾರ್ದಿಕ್ ಪಾಂಡ್ಯ ಅವರಿಗೂ ಅನುಕೂಲವಾಗಬಹುದು. ಇತ್ತೀಚಿನ ವರದಿಗಳು ಪಾಂಡ್ಯ ಶ್ರೀಲಂಕಾ ವಿರುದ್ಧ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ಸೂಚಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Vinesh Phogat: ವಿನೇಶ್‌ ಪೋಗಟ್‌ಗೆ ಭಾರೀ ಹಿನ್ನಡೆ; ಬೆಳ್ಳಿ ಪದಕ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Vinesh Phogat: ಪ್ಯಾರಿಸ್​ ಒಲಿಂಪಿಕ್ಸ್​ ಕುಸ್ತಿ ಫೈನಲ್​ ಪಂದ್ಯಕ್ಕೂ ಮುನ್ನ ದೇಹತೂಕ ಪರೀಕ್ಷೆಯಲ್ಲಿ 100 ಗ್ರಾಂ ಹೆಚ್ಚು ಕಂಡು ಬಂದ ಕಾರಣ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿತ್ತು. ಇದರಿಂದ ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕ ಲಭಿಸುವ ಅವಕಾಶ ಕೈಜಾರಿತ್ತು. ಅನರ್ಹ ಮಾಡಿದ್ದ ಬಗ್ಗೆ ಪ್ರಶ್ನಿಸಿ ವಿನೇಶ್ ಅವರು ತಮಗೆ ಜಂಟಿ ಬೆಳ್ಳಿ ಪದಕವನ್ನು ನೀಡಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದರು.

VISTARANEWS.COM


on

Vinesh Phogat
Koo

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌(Paris Olympics 2024)ನಲ್ಲಿ ಕೇವಲ 100ಗ್ರಾಂ ಹೆಚ್ಚು ತೂಕದಿಂದಾಗಿ ಫೈನಲ್‌ ಪಂದ್ಯಾಟದಿಂದ ಅನರ್ಹತೆಗೊಂಡಿದ್ದ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಅವರಿಗೆ ಭಾರೀ ಹಿನ್ನಡೆಯಾಗಿದೆ. ತಮ್ಮ ಅನರ್ಹತೆ ಪ್ರಶ್ನಿಸಿ ಬೆಳ್ಳಿ ಪದಕ ನೀಡುವಂತೆ ಕೋರಿ ವಿನೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ(CAS) ತಿರಸ್ಕರಿಸಿದೆ. ಆಮೂಲಕ ರಜತ ಪದಕ(Silver Medal)ವೂ ವಿನೇಶ್‌ ಪೋಗಟ್‌ ಕೈತಪ್ಪಿದೆ.

ಪ್ಯಾರಿಸ್​ ಒಲಿಂಪಿಕ್ಸ್​ ಕುಸ್ತಿ ಫೈನಲ್​ ಪಂದ್ಯಕ್ಕೂ ಮುನ್ನ ದೇಹತೂಕ ಪರೀಕ್ಷೆಯಲ್ಲಿ 100 ಗ್ರಾಂ ಹೆಚ್ಚು ಕಂಡು ಬಂದ ಕಾರಣ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿತ್ತು. ಇದರಿಂದ ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕ ಲಭಿಸುವ ಅವಕಾಶ ಕೈಜಾರಿತ್ತು. ಅನರ್ಹ ಮಾಡಿದ್ದ ಬಗ್ಗೆ ಪ್ರಶ್ನಿಸಿ ವಿನೇಶ್ ಅವರು ತಮಗೆ ಜಂಟಿ ಬೆಳ್ಳಿ ಪದಕವನ್ನು ನೀಡಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದರು.

ಇದನ್ನು ಒಲಿಂಪಿಕ್ಸ್‌ನಲ್ಲಿರುವ ಕ್ರೀಡಾ ನ್ಯಾಯಮಂಡಳಿಯ ಹಂಗಾಮಿ ಪೀಠವು ವಿಚಾರಣೆ ನಡೆಸಿ ಒಲಿಂಪಿಕ್ಸ್​ ಮುಕ್ತಾಯಕ್ಕೂ ಮುನ್ನ ತೀರ್ಪು ಪ್ರಕಟಿಸುವುದಾಗಿ ತಿಳಿಸಿತ್ತು. ಆದರೆ 2 ಬಾರಿ ಈ ತೀರ್ಪು ಪ್ರಕಟ ಮುಂದೂಡಿಕೆಯಾಗಿತ್ತು. ಇದೀಗ ಇಂದು ತೀರ್ಪು ಪ್ರಕಟಿಸಿರವ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ(CAS) ಪೋಗಟ್‌ ಅರ್ಜಿ ವಜಾಗೊಳಿಸಿದೆ.

ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ವಿದುಶ್ಪತ್ ಸಿಂಘಾನಿಯಾ ಸೇರಿದಂತೆ ವಿನೇಶ್ ಅವರ ವಕೀಲರು ವಿನೇಶ್​ ಪರ ವಾದ ಮಾಡಿದ್ದಾರೆ. ತೂಕ ಹೆಚ್ಚಳವು ದೇಹದ ನೈಸರ್ಗಿಕ ಚೇತರಿಕೆ ಪ್ರಕ್ರಿಯೆಯಿಂದಾಗಿ ಮತ್ತು ದೇಹ ನೋಡಿಕೊಳ್ಳುವುದು ಕ್ರೀಡಾಪಟುವಿನ ಮೂಲಭೂತ ಹಕ್ಕು ಎಂದು ವಾದಿಸಿದ್ದಾರೆ. ಸ್ಪರ್ಧೆಯ 1ನೇ ದಿನದಂದು ಆಕೆಯ ದೇಹದ ತೂಕವು ನಿಗದಿತ ಮಿತಿಗಿಂತ ಕಡಿಮೆಯಾಗಿತ್ತು. ಬಳಿಕ ಏಕಾಏಕಿ ಏರಿಕೆಯಾಗಿದೆ. ಅದು ವಂಚನೆಯಲ್ಲ ಎಂದು ಅವರು ವಾದಿಸಿದ್ದಾರೆ.

ಸೆಮಿಫೈನಲ್​ ವೇಳೆ ವಿನೇಶ್​ 49.9 ಕೆಜಿ ತೂಕವಿದ್ದರು. 3 ಬೌಟ್‌ಗಳು ಮುಗಿಯುವ ವೇಳೆಗೆ ಶಕ್ತಿ ಕಾಪಾಡಿಕೊಳ್ಳಲು ಹೈ ಎನರ್ಜಿ ಆಹಾರ ಸೇವಿಸಿದ ಕಾರಣ ಅವರ ತೂಕ 2.8 ಕೆಜಿ ಹೆಚ್ಚಳವಾಗಿತ್ತು. ಈ 2.8 ಕೆಜಿಯನ್ನು ಕಡಿಮೆ ಮಾಡಲು ವಿನೇಶ್‌ ರಾತ್ರಿಯಿಡೀ ಯಾವುದೇ ಆಹಾರ ಸೇವಿಸದೇ, ಸೈಕ್ಲಿಂಗ್‌ ನಡೆಸಿ, ಸ್ಕಿಪ್ಪಿಂಗ್‌ ಮಾಡಿದ್ದರು. ತೂಕ ಇಳಿಸಲು ಬೇಕಾಗುವ ಎಲ್ಲ ಕಸರತ್ತುಗಳನ್ನು ಕೈಗೊಂಡಿದ್ದರು. ಈ ಮೂಲಕ ಅವರು ಸಾಕಷ್ಟು ತೂಕ ಇಳಿಸಿದ್ದರು. ಕೊನೆ ಕ್ಷಣದಲ್ಲಿ ಅವರ ಕೂದಲು ಕತ್ತರಿಸಿ, ಬಟ್ಟೆಗಳ ಗಾತ್ರವನ್ನು ಕುಗ್ಗಿಸಿ ಪರೀಕ್ಷೆಗೆ ಕಳುಹಿಸಲಾಯಿತು. ಆದರೂ 100 ಗ್ರಾಂ ಹೆಚ್ಚಿದ್ದ ಕಾರಣ ಅನರ್ಹಗೊಂಡರು.

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಮಹಿಳೆಯರ 50 ಕೆ.ಜಿ ಚಿನ್ನದ ಪದಕದಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿದ ಬೆನ್ನಲ್ಲೇ ವಿಶ್ವ ಕುಸ್ತಿ ಆಡಳಿತ ಮಂಡಳಿ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ತಮ್ಮ ನಿಯಮದಲ್ಲಿ ಬದಲಾವಣೆ ಮಾಡಲು ಮುಂದಾಗಿದೆ. ತೂಕದ ನಿಯಮಗಳು ಸಂಪೂರ್ಣವಾಗಿ ಬದಲಾಗುವ ಸಾಧ್ಯತೆಯಿಲ್ಲವಾದರೂ, ಕ್ರೀಡಾಪಟುಗಳ ಸುರಕ್ಷತೆ ಮತ್ತು ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕೆಲವು ಸಣ್ಣ ಮಾರ್ಪಾಡುಗಳನ್ನು ಮಾಡಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: Vinesh Phogat : ವಿನೇಶ್​ ಪೋಗಟ್​ ಅನರ್ಹತೆ ತೀರ್ಪು ಆಗಸ್ಟ್​​​ 16ಕ್ಕೆ ಮುಂದೂಡಿಕೆ

Continue Reading

ಕ್ರೀಡೆ

Duleep Trophy: ದುಲೀಪ್‌ ಟ್ರೋಫಿ ತಂಡ ಪ್ರಕಟ; ಪಟ್ಟಿಯಲ್ಲಿಲ್ಲ ಕೊಹ್ಲಿ, ಶರ್ಮಾ ಹೆಸರು- ನಾಲ್ಕು ಟೀಮ್‌ಗಳ ನಾಯಕರು ಇವರೇ!

Duleep Trophy: ಸೆಪ್ಟಂಬರ್ 5 ರಿಂದ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು ನಾಲ್ಕು ತಂಡಗಳು ಭಾಗವಹಿಸುತ್ತಿವೆ. ಟೀಮ್ ಇಂಡಿಯಾದ ನಾಯಕ ರೋಹಿತ್‌ ಶರ್ಮಾ(Rohit Sharma) ಹಾಗೂ ವಿರಾಟ್‌ ಕೊಹ್ಲಿ(Virat Kohli) ದುಲೀಪ್‌ ಟ್ರೋಫಿಯಲ್ಲಿ ಆಡುವುದಿಲ್ಲ. ಇವರು ಈ ಹಿಂದೆಯೇ ಆಟ ಆಡುವುದಿಲ್ಲ ಎಂದು ಘೋಷಿಸಿದ್ದರು. ಇನ್ನು ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್ ಮತ್ತು ರಿಂಕು ಸಿಂಗ್ ಕೂಡ ಆಯ್ಕೆಯಾಗಲಿಲ್ಲ.

VISTARANEWS.COM


on

duleep trophy
Koo

ನವದೆಹಲಿ: ಮುಂದಿನ ತಿಂಗಳು ಸೆಪ್ಟೆಂಬರ್ 5ನೇ ತಾರೀಕಿನಿಂದ ದುಲೀಪ್ ಟ್ರೋಫಿ ಶುರುವಾಗಲಿದ್ದು, ಇಂದು ತಂಡಗಳನ್ನು ಪ್ರಕಟಿಸಲಾಗಿದೆ. ದುಲೀಪ್​​ ಟ್ರೋಫಿ(Duleep Trophy)ಯ ಎ ತಂಡಕ್ಕೆ ಶುಭಮನ್ ಗಿಲ್(Shubman Gill), ಬಿ ತಂಡಕ್ಕೆ ಅಭಿಮನ್ಯು ಈಶ್ವರನ್(Abhimanyu Easwaran), ಸಿ ತಂಡಕ್ಕೆ ರುತುರಾಜ್ ಗಾಯಕ್‌ವಾಡ್(Ruturaj Gaikwad) ಮತ್ತು ಡಿ ತಂಡಕ್ಕೆ ಶ್ರೇಯಸ್ ಅಯ್ಯರ್(Shreyas Iyer) ನಾಯಕರಾಗಿ ನೇಮಕಗೊಂಡಿದ್ದಾರೆ. ದುಲೀಪ್​​ ಟ್ರೋಫಿ ಸೆ.5ನೇ ತಾರೀಕಿನಿಂದ ಸೆ. 22ರ ತನಕ ನಡೆಯಲಿದೆ.

ಸೆಪ್ಟಂಬರ್ 5 ರಿಂದ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು ನಾಲ್ಕು ತಂಡಗಳು ಭಾಗವಹಿಸುತ್ತಿವೆ. ಟೀಮ್ ಇಂಡಿಯಾದ ನಾಯಕ ರೋಹಿತ್‌ ಶರ್ಮಾ(Rohit Sharma) ಹಾಗೂ ವಿರಾಟ್‌ ಕೊಹ್ಲಿ(Virat Kohli) ದುಲೀಪ್‌ ಟ್ರೋಫಿಯಲ್ಲಿ ಆಡುವುದಿಲ್ಲ. ಇವರು ಈ ಹಿಂದೆಯೇ ಆಟ ಆಡುವುದಿಲ್ಲ ಎಂದು ಘೋಷಿಸಿದ್ದರು. ಇನ್ನು ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್ ಮತ್ತು ರಿಂಕು ಸಿಂಗ್ ಕೂಡ ಆಯ್ಕೆಯಾಗಲಿಲ್ಲ.

ತಂಡಗಳು ಹೀಗಿವೆ

ತಂಡ ಎ: ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ ಜುರೆಲ್ (ವಿಕೆಟ್‌ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ , ಶಾಶ್ವತ್ ರಾವತ್.

ತಂಡ ಬಿ: ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್, ಮುಶೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಾಹರ್, ಆರ್ ಸಾಯಿ ಕಿಶೋರ್, ಮೋಹಿತ್ ಅವಸ್ತಿ , ಎನ್ ಜಗದೀಸನ್ (ವಿಕೆಟ್‌ ಕೀಪರ್).

ತಂಡ ಸಿ: ರುತುರಾಜ್ ಗಾಯಕ್‌ವಾಡ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿಕೆಟ್‌ ಕೀಪರ್), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ಉಮ್ರಾನ್ ಮಲಿಕ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮರ್ಕಂಡೆ (ವಿಕೆಟ್‌ ಕೀಪರ್), ಸಂದೀಪ್ ವಾರಿಯರ್.

ತಂಡ ಡಿ: ಶ್ರೇಯಸ್ ಲೈಯರ್ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್‌ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ (ವಿಕೆಟ್‌ ಕೀಪರ್), ಸೌರಭ್ ಕುಮಾರ್.

ಈ ಬಾರಿ ಯಾವೆಲ್ಲಾ ಆಟಗಾರರು ಮಿಸ್?

ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್, ಸಂಜು ಸಾಸ್ಮಾನ್, ಯುಜ್ವೇಂದ್ರ ಚಾಹಲ್, ಶಾರ್ದೂಲ್ ಠಾಕೂರ್ ಮತ್ತು ಹಾರ್ದಿಕ್ ಪಾಂಡ್ಯ ದುಲೀಪ್‌ ಟ್ರೋಫಿಯಲ್ಲಿ ಆಡುವುದನ್ನು ಕಾಣುವುದಿಲ್ಲ. ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಕೂಡ ದುಲೀಪ್ ಟ್ರೋಫಿಯನ್ನು ಆಡುತ್ತಿಲ್ಲ.

ಇದನ್ನೂ ಓದಿ: Dodda Ganesh: ಕೀನ್ಯಾ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್

Continue Reading

ಕ್ರೀಡೆ

IPL 2025: ಗೆಳೆಯ ಕೆ.ಎಲ್​ ರಾಹುಲ್​ರನ್ನು ಮತ್ತೆ ಆರ್​ಸಿಬಿಗೆ ಕರೆತರಲು ಮುಂದಾದ ಕೊಹ್ಲಿ

IPL 2025: ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿಯೇ ಮತ್ತೆ ಆರ್​ಸಿಬಿಗೆ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ

VISTARANEWS.COM


on

IPL 2025
Koo

ಬೆಂಗಳೂರು: ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಅವರು ಮುಂದಿನ ವರ್ಷ ನಡೆಯಲಿರುವ 18ನೇ ಆವೃತ್ತಿಯ ಐಪಿಎಲ್​ನಲ್ಲಿ(IPL 2025) ಆರ್​ಸಿಬಿ(RCB) ಪರ ಆಡಲಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಕೇಳಿ ಬರುತ್ತಲೇ ಇದೆ. ಇದೀಗ ರಾಹುಲ್​ ಆರ್​ಸಿಬಿ ಸೇರುವ ಕುರಿತು ಮತ್ತೊಂದು ಬಿಗ್​ ಅಪ್ಡೇಟ್​ ಸಿಕ್ಕಿದೆ. ಹೌದು, ರಾಹುಲ್​ ಅವರನ್ನು ಆರ್​ಸಿಬಿಗೆ ಕರೆತರಲು ಅವರ ಗೆಳೆಯ ವಿರಾಟ್​ ಕೊಹ್ಲಿ(Virat Kohli) ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದೇ ವರ್ಷ ನಡೆದಿದ್ದ ಐಪಿಎಲ್​ ವೇಳೆ ಆರ್.ಅಶ್ವಿನ್ ಜತೆಗಿನ ಕುಟ್ಟಿ ಸ್ಟೋರೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆಎಲ್ ರಾಹುಲ್, 2013ರಲ್ಲಿ ವಿರಾಟ್ ಕೊಹ್ಲಿ ಅವರು ತನ್ನನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಂಡರು. ನಾನು ಬೆಂಗಳೂರು ತಂಡದಲ್ಲಿ ಆಡಲು ಇಷ್ಟಪಡುತ್ತೇನೆ. ನಾನು ಅಲ್ಲಿದಂದಲೇ ಈ ಪಯಣ ಆರಂಭಿಸಿದೆ. ಅಲ್ಲಿಯೇ ಇದನ್ನು ಅಂತ್ಯಗೊಳಿಸಲು ಬಯುಸುತ್ತೇನೆ. ಅದು ತನ್ನ ತಲೆಯಲ್ಲಿದೆ ಎಂದು ಹೇಳಿದ್ದರು. ಇದೀಗ ಕೊಹ್ಲಿ ಮತ್ತೆ ರಾಹುಲ್​ ಅವರನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಳ್ಳಲು ಫ್ರಾಂಚೈಸಿ ಜತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಲಕ್ನೋ ತಂಡದ ಮಾಲಿಕ ಗೋಯೆಂಕಾ ತೋರಿದ್ದ ವರ್ತನೆನಿಂದ ಬೇಸರಗೊಂಡಿರುವ ರಾಹುಲ್ ಈ ಬಾರಿ ಲಕ್ನೋ ತೊರೆಯುವುದು ಬಹುತೇಕ ಖಚಿತವಾಗಿದೆ. ಈ ಬಾರಿ ಆರ್​ಸಿಬಿ ಕೇವಲ ಮೂರು ಆಟಗಾರರನ್ನು ಮಾತ್ರ ರೀಟೈನ್​ ಮಾಡಿಕೊಳ್ಳಲಿದೆ ಎನ್ನಲಾಗಿದೆ. ವಿರಾಟ್​ ಕೊಹ್ಲಿ, ಮೊಹಮ್ಮದ್​ ಸಿರಾಜ್​ ಮತ್ತು ವಿಲ್​ ಜಾಕ್ಸ್​ ಈ ಮೂವರು ಆಟಗಾರರು ಎನ್ನಲಾಗಿದೆ. ಕಳೆದ ಮೂರು ಸೀಸನ್​ನಲ್ಲಿ ಫಾಫ್​ ಡು ಪ್ಲೆಸಿಸ್ ಆರ್​ಸಿಬಿ ತಂಡವನ್ನು ಮುನ್ನಡೆಸಿದರೂ ತಂಡದ ಭವಿಷ್ಯ ಮಾತ್ರ ಬದಲಾಗಲಿಲ್ಲ. ಹೀಗಾಗಿ ಅವರನ್ನು ಈ ಬಾರಿ ತಂಡದಿಂದ ಕೈಬಿಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ IPL 2025: ಫ್ರಾಂಚೈಸಿಗಳ ಒತ್ತಾಯಕ್ಕೆ ಮಣಿದು ಇಷ್ಟು ಆಟಗಾರರ ರಿಟೇನ್​ಗೆ ಅವಕಾಶ ನೀಡಲಿದೆ ಬಿಸಿಸಿಐ

ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿಯೇ ಮತ್ತೆ ಆರ್​ಸಿಬಿಗೆ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ. ವಿರಾಟ್​ ಕೊಹ್ಲಿ ಅವರು ಭಾರತ ತಂಡದ ಮೂರು ಮಾದರಿಯ ನಾಯಕತ್ವ ವಹಿಸಿಕೊಂಡಿದ್ದ ವೇಳೆ ಐಪಿಎಲ್​ನಲ್ಲಿಯೂ ತಂಡವನ್ನು ಮುನ್ನಡೆಸುವುದು ಕಷ್ಟವಾಗುತ್ತದೆ, ಕೆಲಸದ ಒತ್ತಡದಿಂದಾಗಿ ಆಟದ ಕಡೆ ಸರಿಯಾಗಿ ಗಮನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಐಪಿಎಲ್​ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. 

ವಿರಾಟ್​ ಕೊಹ್ಲಿ 2013ರಲ್ಲಿ ಆರ್​ಸಿಬಿಯ ಪೂರ್ಣ ಪ್ರಮಾಣದ ನಾಯಕನಾಗಿ ನೇಮಕಗೊಂಡಿದ್ದರು. 2021ರ ತನಕ ಅವರು ಆರ್​ಸಿಬಿಯನ್ನು ಮುನ್ನಡೆಸಿದ್ದರು. ಕೊಹ್ಲಿ ನಾಯಕತ್ವದಲ್ಲಿ ಒಟ್ಟು 140 ಪಂದ್ಯಗಳನ್ನು ಆಡಿದ್ದ ಆರ್​​ಸಿಬಿ 66 ಪಂದ್ಯಗಳನ್ನು ಜಯಿಸಿದೆ. 70 ಪಂದ್ಯಗಳಲ್ಲಿ ಸೋಲು ಕಂಡಿದೆ. ಐಪಿಎಲ್​ ಇತಿಹಾಸದಲ್ಲಿ ವಿನ್ನಿಂಗ್ಸ್​ ಸರಾಸರಿಯಲ್ಲಿ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರ ನಾಯಕತ್ವದ ಸರಾಸರಿ ಗೆಲುವು ಶೇ. 46.15 ರಷ್ಟಿದೆ. ದಾಖಲೆ ಧೋನಿ ಹೆಸರಿನಲ್ಲಿದೆ. ಧೋನಿ ನಾಯಕತ್ವದ ಗೆಲುವಿನ ಸರಾಸರಿ 60.38 ರಷ್ಟಿದೆ.

Continue Reading

ಕ್ರೀಡೆ

ICC ODI Rankings: ದ್ವಿತೀಯ ಸ್ಥಾನಕ್ಕೆ ನೆಗೆದ ರೋಹಿತ್​ ಶರ್ಮ; ಕುಸಿತ ಕಂಡ ಗಿಲ್​

ICC ODI Rankings: ಚೈನಾಮನ್​ ಖ್ಯಾತಿಯ ಸ್ಪಿನ್ನರ್​ ಕುಲ್ದೀಪ್ ಯಾದವ್ ಬೌಲಿಂಗ್​ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಭಾರತದ ಅಗ್ರ ಶ್ರೇಯಾಂಕದ ಏಕದಿನ ಬೌಲರ್ ಆಗಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

ICC ODI Rankings
Koo

ದುಬೈ: ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಅವರು ನೂತನ ಏಕದಿನ ಬ್ಯಾಟಿಂಗ್​(ICC ODI Rankings) ಶ್ರೇಯಾಂಕದಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಅಗ್ರ ಸ್ಥಾನದಲ್ಲಿರುವ ಪಾಕಿಸ್ತಾನದ ಬಾಬರ್​ ಅಜಂ(Babar Azam) ಅವರಿಗಿಂತ ಕೇವಲ 59 ಅಂಕಗಳ ಹಿನ್ನಡೆಯಲ್ಲಿದ್ದಾರೆ. ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಸೆರಣಿಯಲ್ಲಿ ರೋಹಿತ್, 157 ರನ್ ಗಳಿಸಿದ್ದರು.​ ಇದು ಅವರ ಶ್ರೇಯಾಂಕ ಪ್ರಗತಿಗೆ ಕಾರಣ.

ಈ ಹಿಂದೆ 2ನೇ ಸ್ಥಾನದಲ್ಲಿದ್ದ ಯುವ ಬ್ಯಾಟರ್​ ಶುಭಮನ್​ ಗಿಲ್​(763 ರೇಟಿಂಗ್​ ಅಂಕ) ಒಂದು ಸ್ಥಾನಗಳ ಕುಸಿತ ಕಂಡು ಮೂರಕ್ಕೆ ಇಳಿದಿದ್ದಾರೆ. ವಿರಾಟ್​ ಕೊಹ್ಲಿ(746 ರೇಟಿಂಗ್​ ಅಂಕ) ನಾಲ್ಕನೇ ಸ್ಥಾನಿಯಾಗಿದ್ದಾರೆ. ಒಟ್ಟಾರೆ ಮೂರು ಭಾರತೀಯ ಬ್ಯಾಟರ್​ಗಳು ಟಾಪ್​ 10ನಲ್ಲಿ ಕಾಣಿಸಿಕೊಂಡಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ರೋಹಿತ್​(765), ಅಗ್ರಸ್ಥಾನಿ ಬಾಬರ್​(824) ರೇಟಿಂಗ್​ ಅಂಕ ಹೊಂದಿದ್ದಾರೆ. ಲಂಕಾ ಸರಣಿಯ 2 ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್​ ಪ್ರದರ್ಶಿಸಿದ ಕೆ.ಎಲ್​ ರಾಹುಲ್ (644 ರೇಟಿಂಗ್​ ಅಂಕ)​ ಒಂದು ಸ್ಥಾನ ಕುಸಿದು 22ನೇ ಸ್ಥಾನ ಪಡೆದಿದ್ದಾರೆ.

ಚೈನಾಮನ್​ ಖ್ಯಾತಿಯ ಸ್ಪಿನ್ನರ್​ ಕುಲ್ದೀಪ್ ಯಾದವ್ ಬೌಲಿಂಗ್​ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಭಾರತದ ಅಗ್ರ ಶ್ರೇಯಾಂಕದ ಏಕದಿನ ಬೌಲರ್ ಆಗಿ ಕಾಣಿಸಿಕೊಂಡಿದ್ದಾರೆ. ಲಂಕಾ ವಿರುದ್ಧ ಏಕದಿನ ಆಡದ ಜಸ್​ಪ್ರೀತ್​ ಬುಮ್ರಾ 645 ರೇಟಿಂಗ್​ ಅಂಕದೊಂದಿಗೆ 8ನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಕೇಶವ್ ಮಹಾರಾಜ್, ಆಸ್ಟ್ರೇಲಿಯಾದ ವೇಗಿ ಜೋಶ್ ಹ್ಯಾಜಲ್​ವುಡ್​ ಮತ್ತು ಆ್ಯಡಂ ಝಂಪಾ ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಆಲ್​ರೌಂಡರ್​ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ 16ನೇ ಸ್ಥಾನಿಯಾಗಿದ್ದಾರೆ. ಅಫಘಾನಿಸ್ತಾನದ ಹಿರಿಯ ಆಟಗಾರ ಮೊಹಮ್ಮದ್​ ನಬಿ ಅಗ್ರಸ್ಥಾನ ಪಡೆದಿದ್ದಾರೆ. ಹಾರ್ದಿಕ್​ ಪಾಂಡ 4 ಸ್ಥಾನಗಳ ಕುಸಿತದೊಂದಿಗೆ 27ನೇ ಸ್ಥಾನ ಪಡೆದಿದ್ದಾರೆ. ಲಂಕಾ ವಿರುದ್ಧದ ಏಕದಿನ ಸರಣಿಯನ್ನಾಡುತ್ತಿದ್ದರೆ ಪ್ರಗತಿ ಸಾಧಿಸಬಹುದಿತ್ತು.

ಇದನ್ನೂ ಓದಿ Duleep Trophy 2024: ದುಲೀಪ್ ಟ್ರೋಫಿ ವೇಳಾಪಟ್ಟಿ ಪ್ರಕಟ; ಕೊಹ್ಲಿ, ರೋಹಿತ್​ ಭಾಗವಹಿಸುವ ನಿರೀಕ್ಷೆ

ಟಾಪ್​ 5 ಬ್ಯಾಟರ್​ಗಳು


ಬಾಬರ್​ ಅಜಂ-ಪಾಕಿಸ್ತಾನ

ರೋಹಿತ್​ ಶರ್ಮ-ಭಾರತ

ಶುಭಮನ್​ ಗಿಲ್​-ಭಾರತ

ವಿರಾಟ್​ ಕೊಹ್ಲಿ-ಭಾರತ

ಹ್ಯಾರಿ ಟೆಕ್ಟರ್-ಐರ್ಲೆಂಡ್​

ಟಾಪ್​ 5 ಬೌಲರ್​ಗಳು


ಕೇಶವ್​ ಮಹಾರಾಜ್​-ದಕ್ಷಿಣ ಆಫ್ರಿಕಾ

ಜೋಶ್​ ಹ್ಯಾಜಲ್​ವುಡ್​-ಆಸ್ಟ್ರೇಲಿಯಾ

ಆ್ಯಡಂ ಜಂಪಾ-ಆಸ್ಟ್ರೇಲಿಯಾ

ಕುಲ್​ದೀಪ್​ ಯಾದವ್​-ಭಾರತ

ಬರ್ನಾರ್ಡ್ ಸ್ಕೋಲ್ಟ್ಜ್-ನಮೀಬಿಯಾ

ಟಾಪ್​ 5 ಆಲ್​ರೌಂಡರ್​


ಮೊಹಮ್ಮದ್ ನಬಿ-ಅಫಘಾನಿಸ್ತಾನ

ಶಕಿಲ್​ ಅಲ್​ ಹಸನ್​-ಬಾಂಗ್ಲಾದೇಶ

ಸಿಕಂದರ್​ ರಾಜಾ-ಜಿಂಬಾಬ್ವೆ

ಅಸ್ಸಾದ್ ವಾಲಾ-ಪಪುವಾ ನ್ಯೂಗಿನಿಯಾ

ರಶೀದ್​ ಖಾನ್-ಅಫಘಾನಿಸ್ತಾನ

Continue Reading
Advertisement
Gallantry awards
ಪ್ರಮುಖ ಸುದ್ದಿ2 hours ago

Gallantry Awards: 103 ಶೌರ್ಯ ಪ್ರಶಸ್ತಿ ಪಟ್ಟಿ ಪ್ರಕಟ; ಪಟ್ಟಿಯಲ್ಲಿವೆ 4 ಕೀರ್ತಿ ಚಕ್ರಗಳು

Vinesh Phogat
ಪ್ರಮುಖ ಸುದ್ದಿ3 hours ago

Vinesh Phogat: ವಿನೇಶ್‌ ಪೋಗಟ್‌ಗೆ ಭಾರೀ ಹಿನ್ನಡೆ; ಬೆಳ್ಳಿ ಪದಕ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

duleep trophy
ಕ್ರೀಡೆ3 hours ago

Duleep Trophy: ದುಲೀಪ್‌ ಟ್ರೋಫಿ ತಂಡ ಪ್ರಕಟ; ಪಟ್ಟಿಯಲ್ಲಿಲ್ಲ ಕೊಹ್ಲಿ, ಶರ್ಮಾ ಹೆಸರು- ನಾಲ್ಕು ಟೀಮ್‌ಗಳ ನಾಯಕರು ಇವರೇ!

Reliance Foundation
ದೇಶ3 hours ago

Reliance Foundation: ಡಿಗ್ರಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ರಿಲಯನ್ಸ್ ಫೌಂಡೇಷನ್‌ನಿಂದ ವಿದ್ಯಾರ್ಥಿ ವೇತನ

Bank FD Rates
ಮನಿ-ಗೈಡ್3 hours ago

Bank FD Rates: ಪರಿಷ್ಕೃತ ಲೆಕ್ಕಾಚಾರದ ಪ್ರಕಾರ ಎಫ್‌ಡಿ ಬಡ್ಡಿ ದರ ಯಾವ ಬ್ಯಾಂಕ್‌ನಲ್ಲಿ ಎಷ್ಟಿದೆ?

Banking Recruitment 2024
ಉದ್ಯೋಗ4 hours ago

Banking Recruitment 2024: 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 4455 ಹುದ್ದೆ; ಐಬಿಪಿಎಸ್‌ನಿಂದ ಮತ್ತೆ ನೇಮಕ; complete details

Necklace Mangalya Fashion
ಫ್ಯಾಷನ್4 hours ago

Necklace Mangalya Fashion: ವಿವಾಹಿತರ ಮಾಂಗಲ್ಯಕ್ಕೂ ಸಿಕ್ತು ವೈವಿಧ್ಯಮಯ ನೆಕ್ಲೇಸ್‌ ರೂಪ!

Arun Yogiraj
ಬೆಂಗಳೂರು4 hours ago

Arun Yogiraj: ʼವಿಶ್ವ ಶ್ರೇಷ್ಠ ಕನ್ನಡಿಗ 2024ʼ ಪ್ರಶಸ್ತಿಗೆ ಶ್ರೀರಾಮ ವಿಗ್ರಹದ ರೂವಾರಿ ಅರುಣ್ ಯೋಗಿರಾಜ್‌ ಆಯ್ಕೆ

Shira News
ತುಮಕೂರು4 hours ago

Shira News: ಉದ್ಯೋಗ ಕೌಶಲಕ್ಕಾಗಿ ಶಿರಾದಲ್ಲಿ ಸ್ಕಿಲ್ ಯುನಿವರ್ಸಿಟಿ ಸ್ಥಾಪನೆ; ಟಿ.ಬಿ. ಜಯಚಂದ್ರ

Murder Case
ಕರ್ನಾಟಕ4 hours ago

Murder Case: ಪತ್ನಿಯನ್ನು ಸ್ಮಶಾನಕ್ಕೆ ಕರೆದೊಯ್ದು ಕೊಲೆಗೈದ ಪತಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌