Sanju Samson: 'ಔಟ್​ ಆಫ್​ ದಿ ಪಾರ್ಕ್​'​ ಸಿಕ್ಸರ್​ ಬಾರಿಸಿದ ಸಂಜು ಸ್ಯಾಮ್ಸನ್​; ವಿಡಿಯೊ ವೈರಲ್ - Vistara News

ಕ್ರೀಡೆ

Sanju Samson: ‘ಔಟ್​ ಆಫ್​ ದಿ ಪಾರ್ಕ್​’​ ಸಿಕ್ಸರ್​ ಬಾರಿಸಿದ ಸಂಜು ಸ್ಯಾಮ್ಸನ್​; ವಿಡಿಯೊ ವೈರಲ್

ಸಂಜು ಈ ಬಾರಿಯ ಐಪಿಎಲ್​ನಲ್ಲಿಯೂ ಪ್ರಚಂಡ ಬ್ಯಾಟಿಂಗ್​ ನಡೆಸಿ ಗಮನಸೆಳೆದಿದ್ದರು. ಇದೇ ಕಾರಣಕ್ಕೆ ಅವರನ್ನು ಟಿ20 ವಿಶ್ವಕಪ್ ಟೂರ್ನಿಗೂ ಆಯ್ಕೆ ಮಾಡಲಾಗಿತ್ತು. ಆದರೆ ಅವರಿಗೆ ಒಂದೇ ಒಂದು ಪಂದ್ಯ ಆಡುವ ಅವಕಾಶ ಲಭಿಸಿರಲಿಲ್ಲ.

VISTARANEWS.COM


on

Sanju Samson
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹರಾರೆ: ಜಿಂಬಾಬ್ವೆ(IND vs ZIM) ವಿರುದ್ಧ ಭಾನುವಾರ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಭಾರತ 42 ರನ್​ ಅಂತರದ ಗೆಲುವು ಸಾಧಿಸಿ ಸರಣಿಯನ್ನು 4-1 ಅಂತರದಿಂದ ಕೈವಶ ಮಾಡಿಕೊಂಡಿತ್ತು. ಅಂತಿಮ ಪಂದ್ಯದಲ್ಲಿ ಸಂಜು ಸ್ಯಾಮ್ಸನ್(Sanju Samson)​ ಬಾರಿಸಿದ ಬಿಗ್​ ಹಿಟ್ಟರ್​ ಸಿಕ್ಸರ್​ನ ವಿಡಿಯೊವೊಂದು ಇದೀಗ ವೈರಲ್​ ಆಗಿದೆ.

ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್​ ನಡೆಸಿದ ಸಂಜು ಸ್ಯಾಮ್ಸನ್​ ಒಟ್ಟು 45 ಎಸೆತಗಳನ್ನು ಎದುರಿಸಿ 1 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಒಳಗೊಂಡಂತೆ 58 ರನ್‌ ಬಾರಿಸಿದರು. ಇದರಲ್ಲಿ ಒಂದು ಸಿಕ್ಸರ್​ 110 ಮೀಟರ್(Sanju Samson Smashes 110m Six)​ ದೂರ ಚಿಮ್ಮಿತು. ಈ ಸಿಕ್ಸರ್​ನ ವಿಡಿಯೊವನ್ನು ಸೋನಿ ಸ್ಪೋರ್ಟ್ಸ್​ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ. ಜತೆಗೆ ಚೆಂಡನ್ನು ಕಕ್ಷೆಗೆ ಉಡಾಯಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಸಂಜು ಈ ಬಾರಿಯ ಐಪಿಎಲ್​ನಲ್ಲಿಯೂ ಪ್ರಚಂಡ ಬ್ಯಾಟಿಂಗ್​ ನಡೆಸಿ ಗಮನಸೆಳೆದಿದ್ದರು. ಇದೇ ಕಾರಣಕ್ಕೆ ಅವರನ್ನು ಟಿ20 ವಿಶ್ವಕಪ್ ಟೂರ್ನಿಗೂ ಆಯ್ಕೆ ಮಾಡಲಾಗಿತ್ತು. ಆದರೆ ಅವರಿಗೆ ಒಂದೇ ಒಂದು ಪಂದ್ಯ ಆಡುವ ಅವಕಾಶ ಲಭಿಸಿರಲಿಲ್ಲ.

ಇಲ್ಲಿನ ಹರಾರೆ ಸ್ಪೋರ್ಟ್ಸ್​ ಕ್ಲಬ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಸೋತ ಜಿಂಬಾಬ್ವೆ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 167 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಜಿಂಬಾಬ್ವೆ 18.3 ಓವರ್​ಗಳಲ್ಲಿ 125 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

ಮೊದಲು ಬ್ಯಾಟ್ ಮಾಡಿದ ಭಾರತ ತಂಡ 12 ರನ್​ಗಳಿಗೆ ಯಶಸ್ವಿ ಜೈಸ್ವಾಲ್ ಔಟಾಗುವ ಮೂಲಕ ಆರಂಭಿಕ ಹಿನ್ನಡೆಗೆ ಒಳಗಾಯಿತು. ಜತೆಗೆ ಶುಭ್​ಮನ್ ಗಿಲ್​ ಕೂಡ 13 ರನ್​ಗೆ ಸೀಮಿತಗೊಂಡರು. ನಂತರದಲ್ಲಿ ಅಭಿಷೇಕ್ ಶರ್ಮಾ 14 ರನ್​ಗೆ ಔಟಾಗುವ ಮೂಲಕ 40 ರನ್​ಗಳಿಗೆ 3 ವಿಕೆಟ್ ನಷ್ಟ ಮಾಡಿಕೊಂಡಿತು. ಸಂಜು ಸ್ಯಾಮ್ಸನ್ (58) ಹಾಗೂ ರಿಯಾನ್ ಪರಾಗ್​ (22) ತಂಡವನ್ನು ಆರಂಭಿಕ ಆಘಾತದಿಂದ ಕಾಪಾಡಿದರು. ಇವರಿಬ್ಬರೂ ಸೇರಿ ತಂಡದ ಮೊತ್ತವನ್ನು 105 ರನ್​ಗಳಿಗೆ ಕೊಂಡೊಯ್ದರು. 

ಇದನ್ನೂ ಓದಿ IND vs ZIM : ಜಿಂಬಾಬ್ವೆ ವಿರುದ್ಧದ ಐದನೇ ಪಂದ್ಯದಲ್ಲಿಯೂ ವಿಜಯ, 4-1 ಅಂತರದಲ್ಲಿ ಸರಣಿ ಭಾರತದ ಕೈವಶ

ಬೌಲರ್​ಗಳ ಅಬ್ಬರ

ಭಾರತ ನೀಡಿದ ಸ್ಪರ್ಧಾತ್ಮಕ ಗುರಿಯನ್ನು ಬೆನ್ನಟ್ಟಿದ ಜಿಂಬಾಬ್ವೆ ಶೂನ್ಯಕ್ಕೆ ಔಟಾದರು. 15 ರನ್​ಗೆ 2 ವಿಕೆಟ್​ ಕಳೆದುಕೊಂಡು ಆತಂಕಕ್ಕೆ ಬಿತ್ತು. ಬಳಿಕ ಡಿಯೋನ್​ ಮೈರ್ಸ್​ 34 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಅಲ್ಲದೆ ಕೊನೆಯಲ್ಲಿ ಫರಾಜ್ ಅಕ್ರಮ್ 27 ರನ್ ಬಾರಿಸಿದರು. ಮರುಮಣಿ 27 ರನ್ ಬಾರಿಸಿದ್ದು ಹೊರತುಪಡಿಸಿದರೆ ಜಿಂಬಾಬ್ವೆ ತಂಡದಿಂದ ಹೆಚ್ಚು ಪ್ರತಿರೋಧ ಬರಲಿಲ್ಲ. ಇನ್ನೂ 9 ಎಸೆತಗಳು ಇರುವಂತೆಯೇ ಆಲ್​ಔಟ್​ ಆಯಿತು. ಭಾರತ ಪರ ಬೌಲಿಂಗ್​ನಲ್ಲಿ ಮುಕೇಶ್ ಕುಮಾರ್​ 22 ರನ್​ಗಳಿಎ 4 ವಿಕೆಟ್​ ಉರುಳಿಸಿದರೆ ಶಿವಂ ದುಬೆ 2 ವಿಕೆಟ್ ತಮ್ಮದಾಗಿಸಿಕೊಂಡರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

T20 World Cup 2024 : 30 ಎಸೆತಕ್ಕೆ 30 ರನ್​ ಇದ್ದಾಗ ದಿಕ್ಕೇ ತೋಚದಂತಾಗಿದ್ದೆ! ಆ ತಲ್ಲಣ ವಿವರಿಸಿದ ಶರ್ಮಾ

T20 World Cup 2024 : ಇಂಥ ಪರಿಸ್ಥಿತಿಯಲ್ಲಿ ಏನಾಗುತ್ತಿದೆ ಎಂದು ಗೊತ್ತಾಗಿರಲಿಲ್ಲ. ತಮ್ಮ ತಂಡದ ಆಟಗಾರರಿಗೆ ತಮ್ಮ ಸಂಯಮವನ್ನು ಕಾಪಾಡಿಕೊಳ್ಳುವಂತೆ ಕೇಳಿಕೊಳ್ಳುವುದು ಬಿಟ್ಟರೆ ಬೇರೆ ಆಯ್ಕೆ ಇರಲಿಲ್ಲ. ಪ್ರಶಸ್ತಿಯ ಆಕಾಂಕ್ಷೆಗಳು ಹೊತ್ತು ಕಳೆದಂತೆ ಕ್ಷೀಣಿಸಿತ್ತು ಎಂದು ರೋಹಿತ್​ ಶರ್ಮಾ ಹೇಳಿದ್ದಾರೆ

VISTARANEWS.COM


on

T20 World Cup 2024
Koo

ಬೆಂಗಳೂರು: ಜೂನ್​ನಲ್ಲಿ ವೆಸ್ಟ್​ ಇಂಡೀಸ್​ನ ಬಾರ್ಬಡೋಸ್​ನಲ್ಲಿ ನಡೆದ ಟಿ 20 ವಿಶ್ವಕಪ್ 2024 ರ (T20 World Cup 2024) ಫೈನಲ್​​ನಲ್ಲಿ ದಕ್ಷಿಣ ಆಫ್ರಿಕಾ ತಂಡ ಉತ್ತಮ ಪ್ರದರ್ಶನ ನೀಡುತ್ತಾ ಗೆಲುವಿನ ಕಡೆಗೆ ಮುನ್ನುಗ್ಗುತ್ತಿದ್ದಾಗ ತಮ್ಮ ಮನಸ್ಸಿನಲ್ಲಿ ಆದ ಭಾವನೆಗಳನ್ನು ಅವರು ವಿವರಿಸಿದ್ದಾರೆ. ಆ ವೇಳೆ ತಮ್ಮ ಮನಸ್ಸು ಸಂಪೂರ್ಣವಾಗಿ ನಿಶ್ಚಲವಾಗಿತ್ತು ಎಂಬುದನ್ನು ಒಪ್ಪಿಕೊಂಡಿದ್ದಾರೆ.

15ನೇ ಓವರ್​ನಲ್ಲಿ ಹೆನ್ರಿಕ್ ಕ್ಲಾಸೆನ್, ಅಕ್ಷರ್ ಪಟೇಲ್ ಅವರ ಒಂದೇ ಓವರ್​ನಲ್ಲಿ 24 ರನ್ ಬಾರಿಸಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ಗೆಲುವಿನತ್ತ ಸಾಗುತ್ತಿತ್ತು. ಮೊದಲ ವಿಶ್ವಕಪ್ ಗೆಲ್ಲಲು 177 ರನ್​ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾಕ್ಕೆ ಕೊನೆಯ ಐದು ಓವರ್​ಗಳಲ್ಲಿ ಕೇವಲ 30 ರನ್​ ಅವಶ್ಯಕತೆಯಿತ್ತು. ಕ್ಲಾಸೆನ್ 22 ಎಸೆತಗಳಲ್ಲಿ 49 ರನ್ ಗಳಿಸಿದರೆ, ಮಿಲ್ಲರ್ 7 ಎಸೆತಗಳಲ್ಲಿ 14 ರನ್ ಗಳಿಸಿ ಇದ್ದರು. ದಕ್ಷಿಣ ಆಫ್ರಿಕಾ ಆರು ವಿಕೆಟ್​ ಕೂಡ ಹೊಂದಿತ್ತು. ಟಿ 20 ಕ್ರಿಕೆಟ್​ನ ಅತ್ಯಂತ ಅಪಾಯಕಾರಿ ಬ್ಯಾಟರ್​ಗಳು ಅವರು.

ಇಂಥ ಪರಿಸ್ಥಿತಿಯಲ್ಲಿ ಏನಾಗುತ್ತಿದೆ ಎಂದು ಗೊತ್ತಾಗಿರಲಿಲ್ಲ. ತಮ್ಮ ತಂಡದ ಆಟಗಾರರಿಗೆ ತಮ್ಮ ಸಂಯಮವನ್ನು ಕಾಪಾಡಿಕೊಳ್ಳುವಂತೆ ಕೇಳಿಕೊಳ್ಳುವುದು ಬಿಟ್ಟರೆ ಬೇರೆ ಆಯ್ಕೆ ಇರಲಿಲ್ಲ. ಪ್ರಶಸ್ತಿಯ ಆಕಾಂಕ್ಷೆಗಳು ಹೊತ್ತು ಕಳೆದಂತೆ ಕ್ಷೀಣಿಸಿತ್ತು ಎಂದು ರೋಹಿತ್​ ಶರ್ಮಾ ಹೇಳಿದ್ದಾರೆ

ನಾನು ಸಂಪೂರ್ಣವಾಗಿ ಸ್ತಬ್ಧನಾಗಿದ್ದೆ. ನಾನು ಮುಂದೆ ಏನಾಗುತ್ತದೆ ಎಂದು ಯೋಚಿಸಲೂ ಸಮಯ ಇರಲಿಲ್ಲ. ಈ ವಾಸ್ತವದಲ್ಲೇ ಉಳಿಯುವುದು ಮತ್ತು ಕೆಲಸದ ಮೇಲೆ ಗಮನ ಹರಿಸುವುದು ಗುರಿಯಾಗಿತ್ತು. ನಾವೆಲ್ಲರೂ ಶಾಂತವಾಗಿದ್ದು ಯೋಜನೆಗಳನ್ನು ಕಾರ್ಯಗತಗೊಳಿಸಲು ಪ್ರಯತ್ನಿಸುವುದು ಬಹಳ ಮುಖ್ಯವಾಗಿತ್ತು”ಎಂದು ಡಲ್ಲಾಸ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರೋಹಿತ್ ಹೇಳಿದ್ದಾರೆ.

ಇದನ್ನೂ ಓದಿ: Chennai Super King : ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕ್ರಿಕೆಟ್ ಅಕಾಡೆಮಿ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್​

ಪಂದ್ಯಾವಳಿಯಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಆಗಿದ್ದ ರೋಹಿತ್​​ ಒತ್ತಡದಲ್ಲಿ ಭಯಭೀತರಾಗದೆ ಕಾರ್ಯಯೋಜನೆ ಮೇಲೆ ಗಮನ ಹರಿಸಿದ್ದಕ್ಕಾಗಿ ತಮ್ಮ ತಂಡವನ್ನು ಶ್ಲಾಘಿಸಿದರು.

ದಕ್ಷಿಣ ಆಫ್ರಿಕಾಕ್ಕೆ 30 ಎಸೆತಗಳಲ್ಲಿ 30 ರನ್​ಗಳ ಅಗತ್ಯವಿದ್ದಾಗ ನಾವು ತೀವ್ರ ಒತ್ತಡದಲ್ಲಿದ್ದೆವು. ನಾವು ಎಸೆದ ಐದು ಓವರ್​ಗಳು ನಾವು ಎಷ್ಟು ಸಂಯಮದಿಂದ ಇದ್ದೆವು ಎಂಬುದನ್ನು ತೋರಿಸಿತು. ನಾವು ಬೇರೆ ಯಾವುದರ ಬಗ್ಗೆಯೂ ಹೆಚ್ಚು ಯೋಚಿಸದೆ ನಮ್ಮ ಕೆಲಸದ ಮೇಲೆ ಕೇಂದ್ರೀಕರಿಸಿದೆವು. ನಾವು ಭಯಭೀತರಾಗಲಿಲ್ಲ; ಅದರ ಫಲಿತಾಂಶ ಸಿಕ್ಕಿತು ಎಂದು 37 ವರ್ಷದ ಆಟಗಾರ ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯ, ಅರ್ಶ್​ದೀಪ್​ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ ಕೊನೆಯ ಐದು ಓವರ್​ಗಳಲ್ಲಿ ಗಮನಾರ್ಹವಾಗಿ ಬೌಲಿಂಗ್ ಮಾಡಿ ಕೇವಲ 22 ರನ್​ ಬಿಟ್ಟುಕೊಟ್ಟು ಏಳು ರನ್​ಗಳ ಅಂತರದಿಂದ ಗೆದ್ದರು. ಇದರೊಂದಿಗೆ ಐಸಿಸಿ ಪ್ರಶಸ್ತಿಗಾಗಿ ಭಾರತದ 11 ವರ್ಷಗಳ ಕಾಯುವಿಕೆ ಕೊನೆಗೊಂಡಿತು.

Continue Reading

ಕ್ರೀಡೆ

Chennai Super King : ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕ್ರಿಕೆಟ್ ಅಕಾಡೆಮಿ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್​

Chennai Super King :

VISTARANEWS.COM


on

Chennai Super King
Koo

ಬೆಂಗಳೂರು: ಐದು ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (Chennai Super King) ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಅಂತಾರಾಷ್ಟ್ರೀಯ ಸೂಪರ್ ಕಿಂಗ್ಸ್ ಅಕಾಡೆಮಿ ಸ್ಥಾಪಿಸುವುದಾಗಿ ಘೋಷಿಸಿದೆ. ಜನಪ್ರಿಯ ಫ್ರ್ಯಾಂಚೈಸಿ ಇತರ ಅಂತಾರಾಷ್ಟ್ರೀಯ ಅಕಾಡೆಮಿಗಳು. ಅಮೆರಿಕದ ಡಲ್ಲಾಸ್ ಮತ್ತು ಯುನೈಟೆಡ್ ಕಿಂಗ್​​ಡಮ್​​ನ ರೀಡಿಂಗ್​​ನಲ್ಲಿವೆ.

ಸಿಡ್ನಿಯಲ್ಲಿರುವ ಸೂಪರ್ ಕಿಂಗ್ಸ್ ಅಕಾಡೆಮಿಯು ಸಿಡ್ನಿ ಒಲಿಂಪಿಕ್ ಪಾರ್ಕ್​​ನ ಸಿಲ್ವರ್​ವಾಟರ್ ರಸ್ತೆಯ ಕ್ರಿಕೆಟ್ ಸೆಂಟ್ರಲ್​ನಲ್ಲಿ ಸ್ಥಾಪನೆಯಾಗಲಿದೆ. ಅತ್ಯಾಧುನಿಕ ಕೇಂದ್ರವು ವರ್ಷಪೂರ್ತಿ ಒಳಾಂಗಣ ಮತ್ತು ಹೊರಾಂಗಣ ತರಬೇತಿ ಸೌಲಭ್ಯಗಳನ್ನು ಹೊಂದಿರುತ್ತದೆ. ಬಾಲಕ ಮತ್ತು ಬಾಲಕಿಯರಿಗೆ ಕ್ರಿಕೆಟ್ ತರಬೇತಿ ಸೆಪ್ಟೆಂಬರ್ ನಿಂದ ಪ್ರಾರಂಭವಾಗಲಿದೆ.

2008ರಲ್ಲಿ ಐಪಿಎಲ್ ಪ್ರಾರಂಭವಾದಾಗಿನಿಂದ ಪ್ರಾರಂಭವಾದ ಆಸ್ಟ್ರೇಲಿಯಾದೊಂದಿಗೆ ನಮ್ಮ ವಿಶೇಷ ಪ್ರಯಾಣವನ್ನು ವಿಸ್ತರಿಸಲು ನಾವು ಸಂತೋಷಪಡುತ್ತೇವೆ. ಆಸ್ಟ್ರೇಲಿಯಾವು ಬಲವಾದ ಕ್ರೀಡಾ ಸಂಸ್ಕೃತಿ ಮತ್ತು ಶ್ರೀಮಂತ ಕ್ರಿಕೆಟ್ ಪರಂಪರೆಯನ್ನು ಹೊಂದಿರುವ ಚಾಂಪಿಯನ್ ದೇಶವಾಗಿದೆ. ಸೂಪರ್ ಕಿಂಗ್ಸ್ ಅಕಾಡೆಮಿಯು ಹುಡುಗರು ಮತ್ತು ಬಾಲಕಿಯರಿಬ್ಬರ ಕ್ರಿಕೆಟ್ ಪ್ರತಿಭಾನ್ವೇಷನೆಗೆ ಸಹಾಯ ಮಾಡಲಿದೆ. ಇದು ದೇಶದಲ್ಲಿ ಈಗಾಗಲೇ ಬಲವಾದ ಕ್ರಿಕೆಟ್ ವ್ಯವಸ್ಥೇ ಹೊಂದಿದೆ”ಎಂದು ಸಿಎಸ್​ಕೆ ಸಿಇಒ ಕೆಎಸ್ ವಿಶ್ವನಾಥನ್ ಹೇಳಿದರು.

ಕಳೆದ ಕೆಲವು ವರ್ಷಗಳಿಂದ ಕ್ರಿಕೆಟ್​​ನಲ್ಲಿ ಭೌಗೋಳಿಕ ಗಡಿಗಳು ಕಡಿಮೆಯಾಗುತ್ತಿವೆ. ಭಾರತ, ಯುಎಸ್ಎ, ಯುಕೆ ಮತ್ತು ಈಗ ಆಸ್ಟ್ರೇಲಿಯಾದಲ್ಲಿ ಉಪಸ್ಥಿತಿಯೊಂದಿಗೆ ನಮ್ಮ ವಿಶ್ವ ದರ್ಜೆಯ ಸೌಲಭ್ಯಗಳು ಬಲವಾದ ಕೋಚಿಂಗ್ ವಿಯಷ, ವಿನಿಮಯ ಕಾರ್ಯಕ್ರಮಗಳ ಮೂಲಕ ಮುಂದಿನ ಪೀಳಿಗೆಯ ಕ್ರಿಕೆಟಿಗರನ್ನು ಅಭಿವೃದ್ಧಿಪಡಿಸಲು ನಮಗೆ ಅವಕಾಶವಿದೆ” ಎಂದು ಅವರು ಹೇಳಿದರು.

ಮ್ಯಾಥ್ಯೂ ಹೇಡನ್, ಶೇನ್ ವ್ಯಾಟ್ಸನ್ ಮತ್ತು ಪ್ರಸ್ತುತ ಬ್ಯಾಟಿಂಗ್ ಕೋಚ್ ಮೈಕೆಲ್ ಹಸ್ಸಿ ಅವರಂತಹ ಕೆಲವು ಪ್ರಸಿದ್ಧ ಆಟಗಾರರು ತಮ್ಮ ಜರ್ಸಿಯನ್ನು ಧರಿಸಿರುವುದರಿಂದ ಸೂಪರ್ ಕಿಂಗ್ಸ್ ಆಸ್ಟ್ರೇಲಿಯಾದೊಂದಿಗೆ ಉತ್ತಮ ಸಂಬಂಧವನ್ನು ಹಂಚಿಕೊಂಡಿದೆ. ಕ್ರೀಡೆಯನ್ನು ಪ್ರೀತಿಸುವ ರಾಷ್ಟ್ರದಲ್ಲಿ ಸೂಪರ್ ಕಿಂಗ್ಸ್ ಅಕಾಡೆಮಿಯನ್ನು ಸ್ಥಾಪಿಸುವ ಮೊದಲು ಇದು ಸಮಯದ ವಿಷಯವೆಂದು ತೋರುತ್ತದೆ ಎಂದು ನುಡಿದರು.

ಐಪಿಎಲ್ 2024 ರಲ್ಲಿ ಸಿಎಸ್​​ಕೆ ಪ್ರದರ್ಶನ ಹೇಗಿತ್ತು?

ಐಪಿಎಲ್ 17 ನೇ ಆವೃತ್ತಿಗೆ ಮುಂಚಿತವಾಗಿ ಮಹೇಂದ್ರ ಸಿಂಗ್ ಧೋನಿ ಋತುರಾಜ್ ಗಾಯಕ್ವಾಡ್​​ಗೆ ನಾಯಕತ್ವವನ್ನು ಹಸ್ತಾಂತರಿಸಿದರು. ಮೊದಲ ಆರು ಪಂದ್ಯಗಳಲ್ಲಿ ತಮ್ಮ ತಂಡವನ್ನು ನಾಲ್ಕು ಗೆಲುವುಗಳಿಗೆ ಮುನ್ನಡೆಸಿದ್ದರಿಂದ ಯುವ ಆಟಗಾರ ಉತ್ತಮ ಆರಂಭ ಹೊಂದಿದ್ದರು. ಆದಾಗ್ಯೂ, ಪಂದ್ಯಾವಳಿ ಮುಂದುವರೆದಂತೆ ಮೆನ್ ಇನ್ ಯೆಲ್ಲೋ ಪ್ರಭಾವ ಕಡಿಮೆಯಾಯಿತು. ಆರ್​ಸಿಬಿ ಜತೆ ಕೊನೇ ಪಂದ್ಯ ಸೋತು ಐದನೇ ಸ್ಥಾನ ಪಡೆಯಿತು.

ಇದನ್ನೂ ಓದಿ: Anushka Sharma : ಪತ್ನಿ ಅನುಷ್ಕಾ ಬರ್ತ್​​ಡೇಗೆ ಕೊಹ್ಲಿ ಕೇಕ್​ ಆರ್ಡರ್​ ಮಾಡಿದ್ದು ಬೆಂಗಳೂರಿನಿಂದ; ತಿಂಗಳುಗಳ ಬಳಿಕ ಮಾಹಿತಿ ಬಹಿರಂಗ

ಸಿಎಸ್​ಕೆಯ ಸಹೋದರಿ ಫ್ರಾಂಚೈಸಿಯಾದ ಟೆಕ್ಸಾಸ್ ಸೂಪರ್ ಕಿಂಗ್ಸ್ ಪ್ರಸ್ತುತ ಮೇಜರ್ ಲೀಗ್ ಕ್ರಿಕೆಟ್ (ಎಂಎಲ್​​​ಸಿ ) 2024 ರ ಎರಡನೇ ಆವೃತ್ತಿಯಲ್ಲಿ ಆಡುತ್ತಿದೆ. ಆಡಿರುವ ಮೊದಲ ಐದು ಪಂದ್ಯಗಳಲ್ಲಿ ಎರಡರಲ್ಲಿ ಗೆದ್ದಿರುವ ಅವರು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

Continue Reading

ಪ್ರಮುಖ ಸುದ್ದಿ

Anushka Sharma : ಪತ್ನಿ ಅನುಷ್ಕಾ ಬರ್ತ್​​ಡೇಗೆ ಕೊಹ್ಲಿ ಕೇಕ್​ ಆರ್ಡರ್​ ಮಾಡಿದ್ದು ಬೆಂಗಳೂರಿನಿಂದ; ತಿಂಗಳುಗಳ ಬಳಿಕ ಮಾಹಿತಿ ಬಹಿರಂಗ

Anushka Sharma: ಉತ್ತಿಷ್ಠ ಕುಮಾರ್ ಎಂಬುವರು ಮಂಗಳವಾರ ತಮ್ಮ ಇನ್ಸ್ಟಾಗ್ರಾಮ್ ಫೀಡ್​​ನಲ್ಲಿ ದಂಪತಿಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಬರ್ತ್​ಡೇ ಗರ್ಲ್​​ ಅನುಷ್ಕಾಗೆ ಅವರು ತಯಾರಿಸಿದ ಚಾಕೊಲೇಟ್ ಕೇಕ್ ನ ಚಿತ್ರವನ್ನು ಸಹ ಅವರು ಹಂಚಿಕೊಂಡಿದ್ದಾರೆ. ಕೇಕ್ ಮೇಲಿನ ಸಂದೇಶದಲ್ಲಿ “ಹ್ಯಾಪಿ ಬರ್ತ್ ಡೇ ಮ್ಯಾಡ್ ಒನ್” ಎಂದು ಬರೆಯಲಾಗಿದೆ. ಚಿತ್ರದಲ್ಲಿ ಅನುಷ್ಕಾ ಶರ್ಮಾ ಬಿಳಿ ಉಡುಪನ್ನು ಧರಿಸಿದ್ದರೆ, ವಿರಾಟ್ ಕೊಹ್ಲಿ ಬೀಗ್​ ಬಣ್ಣದ ಟೀ ಶರ್ಟ್ ಧರಿಸಿದ್ದಾರೆ.

VISTARANEWS.COM


on

Anushka Sharma
Koo

ನವದೆಹಲಿ: ಅನುಷ್ಕಾ ಶರ್ಮಾ (Anushka Sharma) ಅವರ 36ನೇ ಹುಟ್ಟುಹಬ್ಬದ ಆಚರಣೆ ಮೇ 1ರಂದು ನಡೆದಿತ್ತು. ಆ ದಿನದ ಸಂಭ್ರಮಾಚರಣೆಗಾಗಿ ಪತಿ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್​ ಕೊಹ್ಲಿ ಬೆಂಗಳೂರಿನಿಂದ ಕೇಕ್ ಆರ್ಡರ್ ಮಾಡಿದ್ದರು ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ಬೇಕರ್ ಒಬ್ಬರು ಅನುಷ್ಕಾ ಶರ್ಮಾ ಅವರ ಹುಟ್ಟುಹಬ್ಬದ ವಿಶೇಷ ಕೇಕ್ ತಯಾರಿಸಲು ವಿರಾಟ್ ಕೊಹ್ಲಿ ತಮ್ಮನ್ನು ಸಂಪರ್ಕಿಸಿದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಉತ್ತಿಷ್ಠ ಕುಮಾರ್ ಎಂಬುವರು ಮಂಗಳವಾರ ತಮ್ಮ ಇನ್ಸ್ಟಾಗ್ರಾಮ್ ಫೀಡ್​​ನಲ್ಲಿ ದಂಪತಿಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಬರ್ತ್​ಡೇ ಗರ್ಲ್​​ ಅನುಷ್ಕಾಗೆ ಅವರು ತಯಾರಿಸಿದ ಚಾಕೊಲೇಟ್ ಕೇಕ್ ನ ಚಿತ್ರವನ್ನು ಸಹ ಅವರು ಹಂಚಿಕೊಂಡಿದ್ದಾರೆ. ಕೇಕ್ ಮೇಲಿನ ಸಂದೇಶದಲ್ಲಿ “ಹ್ಯಾಪಿ ಬರ್ತ್ ಡೇ ಮ್ಯಾಡ್ ಒನ್” ಎಂದು ಬರೆಯಲಾಗಿದೆ. ಚಿತ್ರದಲ್ಲಿ ಅನುಷ್ಕಾ ಶರ್ಮಾ ಬಿಳಿ ಉಡುಪನ್ನು ಧರಿಸಿದ್ದರೆ, ವಿರಾಟ್ ಕೊಹ್ಲಿ ಬೀಗ್​ ಬಣ್ಣದ ಟೀ ಶರ್ಟ್ ಧರಿಸಿದ್ದಾರೆ.

ಅನುಷ್ಕಾ ಶರ್ಮಾ ಅವರ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಲು ವಿರಾಟ್ ಕೊಹ್ಲಿ ನನ್ನನ್ನು ಸಂಪರ್ಕಿಸಿದಾಗ, ನಾನು ವಿಶೇಷವಾದದ್ದನ್ನು ರಚಿಸಬೇಕು ಎಂದು ಯೋಚಿಸಿದೆ. ಹುಟ್ಟುಹಬ್ಬದ ಆಚರಣೆಗಾಗಿ ಕ್ಲಾಸಿಕ್ ಚಾಕೊಲೇಟ್ ಕೇಕ್ ಬಿಟ್ಟರೆ ಇನ್ಯಾವುದೂ ಇಲ್ಲ ಎಂದು ಅವರು ಹೇಳಿದ್ದಾರೆ.

ವಾರಾಂತ್ಯದಲ್ಲಿ ನನ್ನ ಅಮ್ಮನ ಅಡುಗೆ ಮನೆಯಲ್ಲಿ ಅಡುವೆ ಮಾಡುವುದರಿಂದ ಹಿಡಿದು ನಮ್ಮ ಯುಗದ ಅತ್ಯಂತ ಕ್ರೀಡಾಪಟುಗಳಲ್ಲಿ ಒಬ್ಬರಿಗೆ ಕೇಕ್ ತಯಾರಿಸುವವರೆಗೆ ಇದು ಕಳೆದ ಎಂಟು ವರ್ಷಗಳಲ್ಲಿ ಅದ್ಭುತ ಪ್ರಯಾಣವಾಗಿದೆ! ನನ್ನ ಎಲ್ಲಾ ಅದ್ಭುತ ಗ್ರಾಹಕರಿಗೆ ವಿಶೇಷ ಕೇಕ್ ಗಳನ್ನು ತಯಾರಿಸುವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: R Ashwin : ಸುನೀಲ್ ನರೈನ್ ರೀತಿ ಆರಂಭಿಕರಾಗಿ 20 ಎಸೆತಕ್ಕೆ 45 ರನ್ ಬಾರಿಸಿದ ಆರ್.​ ಅಶ್ವಿನ್​; ಇಲ್ಲಿದೆ ವಿಡಿಯೊ

ಅನುಷ್ಕಾ ಶರ್ಮಾ ಮೇ 1 ರಂದು ತಮ್ಮ 36 ನೇ ಹುಟ್ಟುಹಬ್ಬವನ್ನು ಬೆಂಗಳೂರಿನಲ್ಲಿ ಆಚರಿಸಿಕೊಂಡರು. ಈ ಹಿಂದೆ ಬಾಣಸಿಗ ಮನು ಚಂದ್ರ ಅವರು ಅನುಷ್ಕಾ ಶರ್ಮಾ ಅವರ ಹುಟ್ಟುಹಬ್ಬದ ಆಚರಣೆಯ ಚಿತ್ರ ಹಂಚಿಕೊಂಡಿದ್ದರು.

ಅನುಷ್ಕಾ ಶರ್ಮಾ ಅವರ ಹುಟ್ಟುಹಬ್ಬದಂದು, ವಿರಾಟ್ ಕೊಹ್ಲಿ ಅವರ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ ಮತ್ತು ನಾನು ನಿಮ್ಮನ್ನು ಕಂಡುಕೊಳ್ಳದೇ ಹೋಗಿದ್ದರೆ ನಾನು ಸಂಪೂರ್ಣವಾಗಿ ಕಳೆದುಹೋಗುತ್ತಿದ್ದೆ. ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದಿದ್ದರು.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಡಿಸೆಂಬರ್ 11, 2017 ರಂದು ವಿವಾಹವಾದರು. ಅವರು ವಾಮಿಕಾ ಮತ್ತು ಅಕಾಯ್​ ಎಂಬ ಇಬ್ಬರು ಮಕ್ಕಳ ಪೋಷಕರಾಗಿದ್ದಾರೆ. ಕ್ರಿಕೆಟಿಗ ಜೂಲನ್ ಗೋಸ್ವಾಮಿ ಜೀವನಾಧಾರಿತ ಚಿತ್ರ ‘ಚಕ್ಡಾ ಎಕ್ಸ್ಪ್ರೆಸ್’ನಲ್ಲಿ ಅನುಷ್ಕಾ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ.

Continue Reading

ಪ್ರಮುಖ ಸುದ್ದಿ

R Ashwin : ಸುನೀಲ್ ನರೈನ್ ರೀತಿ ಆರಂಭಿಕರಾಗಿ 20 ಎಸೆತಕ್ಕೆ 45 ರನ್ ಬಾರಿಸಿದ ಆರ್.​ ಅಶ್ವಿನ್​; ಇಲ್ಲಿದೆ ವಿಡಿಯೊ

R Ashwin : ಟಿಎನ್​ಪಿಎಲ್​​ ಪ್ರಸಕ್ತ ಋತುವಿನಲ್ಲಿ ಆರ್ ಅಶ್ವಿನ್ ದಿಂಡಿಗಲ್ ಪರ ಬ್ಯಾಟಿಂಗ್ ಆರಂಭಿಸುತ್ತಿದ್ದಾರೆ. ತಿರುಚ್ಚಿ ಮತ್ತು ಸೇಲಂ ವಿರುದ್ಧ ಕೇವಲ 5 ಮತ್ತು 6 ರನ್ ಗಳಿಸಿದ್ದ ಅಶ್ವಿನ್ ಅಂತಿಮವಾಗಿ ಅಜೇಯ 45 ರನ್ ಗಳಿಸುವ ಮೂಲಕ ತಮ್ಮ ಹೊಣೆಗಾರಿಕೆ ಪ್ರದರ್ಶಿಸಿದರು.

VISTARANEWS.COM


on

R Ashwin
Koo

ಕೊಯಮತ್ತೂರು: ಕೊಯಮತ್ತೂರಿನಲ್ಲಿ ಭಾನುವಾರ ನಡೆದ ತಮಿಳುನಾಡು ಪ್ರೀಮಿಯರ್ ಲೀಗ್ (TNPL) ಪಂದ್ಯದಲ್ಲಿ ದಿಂಡಿಗಲ್ ಡ್ರಾಗನ್ಸ್ ಪರ ಆಡಿದ ಭಾರತ ತಂಡದ ಸ್ಪಿನ್ನ ಬೌಲರ್​ ಆರ್​. ಅಶ್ವಿನ್ ಕೆಕೆಆರ್​ ಪರ ಸುನೀಲ್ ನರೈನ್ ಅವರಂತೆಯೇ ಅಬ್ಬರದ ಬ್ಯಾಟಿಂಗ್​ ಪ್ರದರ್ಶಿಸಿ ಗಮನ ಸೆಳೆದಿದ್ದಾರೆ. ಚೆಪಾಲ್ ಸೂಪರ್ ಗಿಲ್ಲಿಸ್ ವಿರುದ್ಧ ಪಂದ್ಯದಲ್ಲಿ ಅವರು ಕೇವಲ 25 ಎಸೆತಗಳಲ್ಲಿ 45 ರನ್ ಗಳಿಸಿದ್ದಾರೆ.

ಪಂದ್ಯದ ಎರಡನೇ ಓವರ್​ನಲ್ಲಿ ದಿಂಡಿಗಲ್ ಡ್ರ್ಯಾಗನ್ಸ್ 3 ವಿಕೆಟ್ ನಷ್ಟಕ್ಕೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಅಭಿಷೇಕ್ ತನ್ವರ್ ಮೊದಲ ಓವರ್​ನಲ್ಲಿ ಎರಡು ಆರಂಭಿಕ ವಿಕೆಟ್​ಗಳನ್ನು ಪಡೆದರೆ, ರಾಹಿಲ್ ಶಾ ಎರಡನೇ ಓವರ್​ನಲ್ಲಿ ಬಾಬಾ ಇಂದ್ರಜಿತ್ ಅವರ ವಿಕೆಟ್ ಪಡೆದರು. 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆರ್.ವಿಮಲ್ ಕುಮಾರ್, ಗಣೇಶನ್ ಪೆರಿಯಸ್ವಾಮಿ ಹಾಕಿದ ಓವರ್​ನಲ್ಲಿ ಎರಡು ಬೌಂಡರಿಗಳನ್ನು ಬಾರಿಸಿದ ಒತ್ತಡ ಕಡಿಮೆ ಮಾಡಲು ನೆರವಾದರು. ಆದಾಗ್ಯೂ, ಆರ್ ಅಶ್ವಿನ್ ಅವರು ನಾಲ್ಕನೇ ಓವರ್​ನಲ್ಲಿ ರಾಹಿಲ್ ಶಾ ಓವರ್​ಗೆ ಎರಡು ಸಿಕ್ಸರ್ ಮತ್ತು ಒಂದು ಬೌಂಡರಿಗೆ ಹೊಡೆದು ತಮ್ಮ ಅಬ್ಬರದ ಆಟ ಆರಂಭಿಸಿದರು.

ಐದನೇ ಓವರ್ ನ ಮೊದಲ ಎಸೆತದಲ್ಲಿ ವಿಮಲ್ ಕುಮಾರ್ ಔಟಾದ ಕಾರಣ ಆರ್​. ಅಶ್ವಿನ್ ಪಾಲುದಾರರನ್ನು ಕಳೆದುಕೊಂಡರು. ಆದಾಗ್ಯೂ, ಬಾಲು ಸೂರ್ಯ ವಿರುದ್ಧದ ಓವರ್​ನಲ್ಲಿ ಅಶ್ವಿನ್ ಎರಡು ಬೌಂಡರಿ ಹೊಡೆದರು. ಅಭಿಷೇಕ್ ತನ್ವರ್ ವಿರುದ್ಧ ಆರನೇ ಓವರ್​ನಲ್ಲಿ ಅಶ್ವಿನ್ ಎರಡು ಸಿಕ್ಸರ್​​ ಬಾರಿಸುವ ಮೂಲಕ ದಿಂಡಿಗಲ್ 7 ಓವರ್​​ನಲ್ಲಿ 6 ವಿಕೆಟ್ ನಷ್ಟಕ್ಕೆ 64 ರನ್ ಪೇರಿಸುವಂತೆ ಮಾಡಿದರು.

ಇದನ್ನೂ ಓದಿ: Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

ಸ್ಪಿನ್ನರ್​ಗಳ ವಿರುದ್ಧ ಬೃಹತ್ ಸಿಕ್ಸರ್ಗಳನ್ನು ಬಾರಿಸಿ ಮೇಲಗೈ ಸಾಧಿಸಿದರು. ಈ ಮೂಲಕ ಐಪಿಎಲ್ 2024 ರಲ್ಲಿ ಕೆಕೆಆರ್​​ ​ತಂಡಕ್ಕಾಗಿ ಸುನಿಲ್ ನರೈನ್ ವಹಿಸಿದ ಪಾತ್ರವನ್ನು ವಹಿಸಿದರು. ಅಶ್ವಿನ್ ನಾಲ್ಕು ಸಿಕ್ಸರ್ ಮತ್ತು 3 ಬೌಂಡರಿಗಳನ್ನು ಬಾರಿಸುವ ಮೂಲಕ ಒಟ್ಟು 45 ರನ್ ಗಳಿಸಿದರು. ದಿಂಡಿಗಲ್​​ನ ಇತರ ಬ್ಯಾಟರ್​ಗಳು 15 ರನ್​​​ ದಾಟಲಿಲ್ಲ.

ಆರಂಭಿಕ ಬ್ಯಾಟಿಂಗ್ ಹೊಣೆ

ಟಿಎನ್​ಪಿಎಲ್​​ ಪ್ರಸಕ್ತ ಋತುವಿನಲ್ಲಿ ಆರ್ ಅಶ್ವಿನ್ ದಿಂಡಿಗಲ್ ಪರ ಬ್ಯಾಟಿಂಗ್ ಆರಂಭಿಸುತ್ತಿದ್ದಾರೆ. ತಿರುಚ್ಚಿ ಮತ್ತು ಸೇಲಂ ವಿರುದ್ಧ ಕೇವಲ 5 ಮತ್ತು 6 ರನ್ ಗಳಿಸಿದ್ದ ಅಶ್ವಿನ್ ಅಂತಿಮವಾಗಿ ಅಜೇಯ 45 ರನ್ ಗಳಿಸುವ ಮೂಲಕ ತಮ್ಮ ಹೊಣೆಗಾರಿಕೆ ಪ್ರದರ್ಶಿಸಿದರು.

ಆರ್ ಅಶ್ವಿನ್ ಈ ವರ್ಷದ ಕೊನೆಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಸಜ್ಜಾಗುತ್ತಿರುವುದರಿಂದ ಟಿಎನ್​ಪಿಎಲ್​ನಲ್ಲಿ ತಮ್ಮ ಬ್ಯಾಟಿಂಗ್ ಮೇಲೆ ಗಮನ ಹರಿಸುತ್ತಿದ್ದಾರೆ. ಆಫ್-ಸ್ಪಿನ್ನರ್ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿರಲಿಲ್ಲ. ಸೆಪ್ಟೆಂಬರ್​ನಲ್ಲಿ ತಂಡವು ಬಾಂಗ್ಲಾದೇಶವನ್ನು ಎರಡು ಟೆಸ್ಟ್ ಸರಣಿಯಲ್ಲಿ ಭಾರತ ಎದುರಿಸುವಾಗ ಅವರು ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ.

Continue Reading
Advertisement
T20 World Cup 2024
ಪ್ರಮುಖ ಸುದ್ದಿ3 mins ago

T20 World Cup 2024 : 30 ಎಸೆತಕ್ಕೆ 30 ರನ್​ ಇದ್ದಾಗ ದಿಕ್ಕೇ ತೋಚದಂತಾಗಿದ್ದೆ! ಆ ತಲ್ಲಣ ವಿವರಿಸಿದ ಶರ್ಮಾ

Assembly Session
ಕರ್ನಾಟಕ17 mins ago

Assembly Session: ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದ ಡಿಕೆಶಿ!

A 15 year old boy weighing 111 kg underwent successful spinal disc surgery that avoided potential paralysis
ಕರ್ನಾಟಕ25 mins ago

Fortis Hospital: 111 ಕೆಜಿ ತೂಕವಿದ್ದ ಬಾಲಕನಿಗೆ ಪಾರ್ಶ್ವವಾಯು ತಪ್ಪಿಸಿದ ʼಬೆನ್ನೆಲುಬಿನ ಡಿಸ್ಕ್ʼ ಶಸ್ತ್ರಚಿಕಿತ್ಸೆ

Pooja Khedkar
ದೇಶ29 mins ago

Pooja Khedkar: ಪೂಜಾ ಖೇಡ್ಕರ್‌ ಪುಣೆ ಜಿಲ್ಲಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

Larva survey Show the old photo without GPS and get crores of rupees to the government Cheating Alleged by MLC TA Sharavana
ಕರ್ನಾಟಕ30 mins ago

Assembly Session: ಲಾರ್ವಾ ಸರ್ವೇ; ಜಿಪಿಎಸ್ ಇಲ್ಲದ ಹಳೆ ಫೋಟೋ ತೋರಿಸಿ ಕೋಟ್ಯಂತರ ರೂ. ಮೋಸ; ಶರವಣ ಆರೋಪ

A permanent solution to artificial flood on national highways says MP Vishweshwar Hegde Kageri
ಉತ್ತರ ಕನ್ನಡ33 mins ago

Uttara Kannada News: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ; ಕಾಗೇರಿ

ಕರ್ನಾಟಕ34 mins ago

Dengue Fever: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ತೀವ್ರ ಏರಿಕೆ; ಮಂಗಳವಾರ 487 ಕೇಸ್‌ ಪತ್ತೆ!

Chennai Super King
ಕ್ರೀಡೆ43 mins ago

Chennai Super King : ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕ್ರಿಕೆಟ್ ಅಕಾಡೆಮಿ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್​

Anushka Sharma
ಪ್ರಮುಖ ಸುದ್ದಿ1 hour ago

Anushka Sharma : ಪತ್ನಿ ಅನುಷ್ಕಾ ಬರ್ತ್​​ಡೇಗೆ ಕೊಹ್ಲಿ ಕೇಕ್​ ಆರ್ಡರ್​ ಮಾಡಿದ್ದು ಬೆಂಗಳೂರಿನಿಂದ; ತಿಂಗಳುಗಳ ಬಳಿಕ ಮಾಹಿತಿ ಬಹಿರಂಗ

Muscat Terrorist Attack
ವಿದೇಶ1 hour ago

Muscat Terrorist Attack: ಮಸ್ಕತ್‌ನಲ್ಲಿ ಉಗ್ರರ ಅಟ್ಟಹಾಸ; ಭಾರತೀಯ ಸೇರಿ 9ಮಂದಿ ಸಾವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ9 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ11 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌