Valmiki Corp scam: ವಾಲ್ಮೀಕಿ ನಿಗಮ ಅಕ್ರಮದಲ್ಲಿ ನನ್ನ ಪಾತ್ರ ಇಲ್ಲ; ಸಿಎಂ ಮುಂದೆ ಶಾಸಕ ದದ್ದಲ್ ಕಣ್ಣೀರು - Vistara News

ಕರ್ನಾಟಕ

Valmiki Corp scam: ವಾಲ್ಮೀಕಿ ನಿಗಮ ಅಕ್ರಮದಲ್ಲಿ ನನ್ನ ಪಾತ್ರ ಇಲ್ಲ; ಸಿಎಂ ಮುಂದೆ ಶಾಸಕ ದದ್ದಲ್ ಕಣ್ಣೀರು

Valmiki Corp scam: ಈ ಪ್ರಕರಣದಿಂದ ನಮ್ಮ ಕುಟುಂಬದ ಸದಸ್ಯರು ಹೆದರಿಕೊಂಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಳಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹೇಳಿಕೊಂಡಿದ್ದಾರೆ.

VISTARANEWS.COM


on

Valmiki Corp scam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣ (Valmiki Corp scam) ಸಂಬಂಧ ಎಸ್‌ಐಟಿ ವಿಚಾರಣೆಗೆ ಹಾಜರಾದ ಬಳಿಕ ಮೂರು ದಿನಗಳಿಂದ ಎಲ್ಲೂ ಕಾಣಿಸಿಕೊಳ್ಳದ ಶಾಸಕ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಸೋಮವಾರ ವಿಧಾನ ಮಂಡಲ ಅಧಿವೇಶನಕ್ಕೆ ಹಾಜರಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಶಾಸಕ ದದ್ದಲ್‌(Basanagouda Daddal), ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ, ಈ ಘಟನೆಯಿಂದ ನಮ್ಮ ಕುಟುಂಬದ ಸದಸ್ಯರು ಹೆದರಿಕೊಂಡಿದ್ದಾರೆ ಎಂದು ಹೇಳುತ್ತಾ ಕಣ್ಣೀರು ಹಾಕಿದ್ದಾರೆ.

ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ದದ್ದಲ್, ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ದದ್ದಲ್ ನಾಪತ್ತೆ ಅಂತ ಬಿಜೆಪಿ‌ಯವರು ಸುಮ್ಮನೇ ಪೋಸ್ಟರ್ ವೈರಲ್ ಮಾಡುತ್ತಿದ್ದಾರೆ. ಯಾವ ಇಡಿಯವರೂ ನನ್ನ ಬೆನ್ನತ್ತಿಲ್ಲ. ಬಿಜೆಪಿ ನಾಯಕರು ಬೇಕು ಅಂತಲೇ ಸುದ್ದಿ ಹಬ್ಬಿಸುತ್ತಿದ್ದಾರೆ. ನಾನು ನಾಪತ್ತೆಯಾಗಿಲ್ಲ. ಈ ಘಟನೆಯಿಂದ ನಮ್ಮ ಕುಟುಂಬದ ಸದಸ್ಯರು ಹೆದರಿಕೊಂಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ ಅಂತ ಸಿಎಂ ಮುಂದೆ ಕಣ್ಣೀರು ಹಾಕಿದ್ದಾರೆ.

ನನ್ನ ಮನೆಗೆ ಇಡಿ ಅಧಿಕಾರಿಗಳು ಬಂದಿದ್ದರು. ಬಂದಾಗ ಕೆಲ ದಾಖಲೆಗಳನ್ನು ಕೇಳಿದ್ದರು, ಕೊಟ್ಟಿದ್ದೇನೆ. ತನಿಖೆ ಸಹಕಾರ ನೀಡಿದ್ದೇನೆ. ಎಸ್.ಐ.ಟಿಯವರು ನೋಟಿಸ್ ಕೊಟ್ಟಿದ್ದರು, ಹಾಗಾಗಿ ವಿಚಾರಣೆ ಹಾಜರ್ ಆಗಿದ್ದೆ‌. ಇಡಿಯವರು ವಿಚಾರಣೆಗೆ ಕರೆದರೆ ಬರಬೇಕು ಎಂದು ಹೇಳಿದ್ದರು. ನೀವು ಕರೆದಾಗ ಬರುತ್ತೇನೆ ಎಂದು ಹೇಳಿದ್ದೇನೆ. ಆದರೆ ಇಡಿಯವರು ಈವರೆಗೂ ನನ್ನನ್ನು ವಿಚಾರಣೆ ಕರೆದಿಲ್ಲ. ಒಂದು ವೇಳೆ ಕರೆದರೆ ಹೋಗುತ್ತೇನೆ. ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ ಎಂದು ಸಿಎಂ ಬಳಿ ಹೇಳಿದ್ದಾರೆ.

ಇದನ್ನೂ ಓದಿ | Revenue Officers: ಹೆಚ್ಚು ದೂರುಗಳಿರುವ ಕಂದಾಯ ಅಧಿಕಾರಿಗಳ ಪಟ್ಟಿ ನೀಡುವಂತೆ ಸಚಿವ ಕೃಷ್ಣಭೈರೇಗೌಡ ಸೂಚನೆ

ವಿಧಾನಸಭೆ ಕಲಾಪಕ್ಕೆ ಹಾಜರಾಗಿ ಸೇಫ್‌ ಆದ ಬಸವನಗೌಡ ದದ್ದಲ್‌

ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಅವ್ಯವಹಾರ (Valmiki Corporation Scam) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ತನಿಖೆಗಾಗಿ ಬೇಕಾಗಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್‌, ಇಂದು ವಿಧಾನಸಭೆ ಕಲಾಪಕ್ಕೆ (Karnataka Session Live) ಹಾಜರಾಗುವ ‌ಮೂಲಕ, ಅಧಿವೇಶನ (Assembly Session) ಮುಗಿಯುವ ಹತ್ತು ದಿನಗಳ ಕಾಲ ಅವರು ಇಡಿ ಬಂಧನದಿಂದ ಸೇಫ್‌ ಆಗಿದ್ದಾರೆ.

ಕಳೆದ ಮೂರು ದಿನಗಳಿಂದ ಬಸವನಗೌಡ ದದ್ದಲ್‌ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ನಾಲ್ಕು ದಿನಗಳ ಹಿಂದೆ ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ದದ್ದಲ್‌ ನಿವಾಸ ಹಾಗೂ ಕಚೇರಿಗಳಿಗೆ ದಾಳಿ ಮಾಡಿದ್ದರು. ನಾಗೇಂದ್ರ ಅವರನ್ನು ಪ್ರಶ್ನಿಸಿದ ಬಳಿಕ ವಶಕ್ಕೆ ಪಡೆದಿದ್ದರು. ಇದರೊಂದಿಗೆ ದದ್ದಲ್‌ ಅವರಿಗೂ ಬಂಧನ ಭೀತಿ ಶುರುವಾಗಿತ್ತು. ಇಡಿ ಅಧಿಕಾರಿಗಳು ಹುಡುಕಾಡುತ್ತಿದ್ದಂತೆ ದದ್ದಲ್‌ ನಾಪತ್ತೆಯಾಗಿದ್ದರು.

ದದ್ದಲ್‌ ಅವರು ವಾಲ್ಮೀಕಿ ನಿಗಮದ ಅಧ್ಯಕ್ಷರೂ ಆಗಿದ್ದಾರೆ. ವಾಲ್ಮೀಕಿ ಹಗರಣದಲ್ಲಿ ಅವರ ಹೆಸರೂ ಕೇಳಿಬಂದಿದೆ. ದದ್ದಲ್‌ ಅವರ ಪಿಎ ಸಾಕಷ್ಟು ಹಣದ ಡೀಲಿಂಗ್‌ ನಡೆಸಿರುವುದು ಪತ್ತೆಯಾಗಿದ್ದು, ಇದರಿಂದ ಆರೋಪದ ತೂಗುಗತ್ತಿ ದದ್ದಲ್‌ ಅವರ ಮೇಲೂ ತೂಗುತ್ತಿದೆ. ಮೊನ್ನೆ ಇಡಿ ಬಂಧನದಿಂದ ಪಾರಾಗಲು ದದ್ದಲ್‌ ಅವರು ಎಸ್‌ಐಟಿ ಮುಂದೆ ಹಾಜರಾಗಿ ಇಡೀ ದಿನ ಅಲ್ಲಿ ಕುಳಿತಿದ್ದರು. ಸಂಜೆ ಬಳಿಕ ಕಣ್ಮರೆಯಾಗಿದ್ದರು.

ಇದನ್ನೂ ಓದಿ | Midday meal workers: ಅಕ್ಷರ ದಾಸೋಹ ನೌಕರರ ಅನಿರ್ದಿಷ್ಟಾವಧಿ ಹೋರಾಟ ಆರಂಭ; ಗೌರವಧನ ಹೆಚ್ಚಳ ಸೇರಿ ವಿವಿಧ ಬೇಡಿಕೆ

ಸದ್ಯ ವಿಧಾನಸಭೆ ಕಲಾಪಕ್ಕೆ ಆಗಮಿಸುವ ಮೂಲಕ ಅವರು ಬಂಧನದಿಂದ ಬಚಾವ್ ಆಗಿದ್ದಾರೆ. ಇನ್ನೂ ಹತ್ತು ದಿನ ಶಾಸಕ ದದ್ದಲ್ ಬಂಧನ ಸಾಧ್ಯತೆ ಕಡಿಮೆ. ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಒಂದು ವೇಳೆ ಅಧಿವೇಶನ ಸಂದರ್ಭದಲ್ಲೆ ಶಾಸಕರ ತನಿಖೆ ನಡೆಸಬೇಕು, ಬಂಧನ ಮಾಡಬೇಕು ಎಂದರೆ ಸ್ಪೀಕರ್ ಅನುಮತಿ ಪಡೆಯುವುದು ಕಡ್ಡಾಯವಾಗಲಿದೆ. ಅತ್ತ ಇಡಿ ಅಥವಾ ಎಸ್ಐಟಿ ನೊಟೀಸ್ ನೀಡಿದರೂ ಸದನಕ್ಕೆ ಹಾಜರಾಗಬೇಕು ಎಂದು ಸಬೂಬು ನೀಡಬಹುದು. ಹೀಗಾಗಿ ಅಧಿವೇಶನ ಮುಗಿಯುವವರೆಗೂ ದದ್ದಲ್ ಬಂಧನ ಸಾಧ್ಯತೆ ಇಲ್ಲದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Gauri Lankesh Murder: ಗೌರಿ ಲಂಕೇಶ್‌ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು

Gauri Lankesh Murder: ಇವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಕಲಬುರ್ಗಿ ಪೀಠದ ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ಕಳೆದ 6 ವರ್ಷಗಳಿಂದ ಆರೋಪಿಗಳು ಜೈಲಿನಲ್ಲಿದ್ದಾರೆ. ವಿಚಾರಣೆ ಮುಗಿಯದೇ ದೀರ್ಘ ಕಾಲ‌ ಜೈಲಿನಲ್ಲಿಡುವಂತಿಲ್ಲವೆಂದು ತೀರ್ಪು ಇದೆ.

VISTARANEWS.COM


on

Gauri Lankesh murder
Koo

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ (Journalist Gauri Lankesh) ಪ್ರಕರಣದ ಮೂವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ (Karnataka High Court) ಮಂಗಳವಾರ ಜಾಮೀನು (Bail) ಮಂಜೂರು ಮಾಡಿದೆ. ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಅಮಿತ್‌ ದಿಗ್ವೇಕರ್‌ ಅಲಿಯಾಸ್‌ ಅಮಿತ್‌ ಅಲಿಯಾಸ್‌ ಪ್ರದೀಪ್‌ ಮಹಾಜನ್‌, ಏಳನೇ ಆರೋಪಿ ಸುರೇಶ್‌ ಎಚ್‌.ಎಲ್‌ ಅಲಿಯಾಸ್‌ ಟೀಚರ್‌ ಮತ್ತು 17ನೇ ಆರೋಪಿ ಕೆ.ಟಿ ನವೀನ್‌ ಕುಮಾರ್‌ ಅಲಿಯಾಸ್‌ ನವೀನ್‌ಗೆ ಜಾಮೀನು ದೊರೆತಿದೆ.

ಇವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಕಲಬುರ್ಗಿ ಪೀಠದ ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ಕಳೆದ 6 ವರ್ಷಗಳಿಂದ ಆರೋಪಿಗಳು ಜೈಲಿನಲ್ಲಿದ್ದಾರೆ. ವಿಚಾರಣೆ ಮುಗಿಯದೇ ದೀರ್ಘ ಕಾಲ‌ ಜೈಲಿನಲ್ಲಿಡುವಂತಿಲ್ಲವೆಂದು ತೀರ್ಪು ಇದೆ. ಹೀಗಾಗಿ ಷರತ್ತುಬದ್ಧ ಜಾಮೀನು ನೀಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಆರೋಪಿಗಳ ಪರ ನ್ಯಾಯವಾದಿಗಳಾದ ಅರುಣ್ ಶ್ಯಾಮ್, ಮಧುಕರ್ ದೇಶಪಾಂಡೆ, ಬಸವರಾಜ ಸಪ್ಪಣ್ಣವರ್ ವಾದಿಸಿದ್ದರು.

11ನೇ ಆರೋಪಿ ಮೋಹನ್‌ ನಾಯಕ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುದು ಎಲ್ಲಾ ಅರ್ಜಿದಾರರ ವಾದವಾಗಿತ್ತು. ಇದಕ್ಕೆ ತೀವ್ರವಾಗಿ ಆಕ್ಷೇಪಿಸಿದ ಪ್ರಾಸಿಕ್ಯೂಷನ್‌ “ಮೋಹನ್‌ ನಾಯಕ್‌ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಬೇರೊಂದು ಪೀಠವು ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು ಎಂದಿದೆ. ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್‌ ನಾಯಕ್‌. ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಅದು ವಿಚಾರಣೆಗೆ ಬಾಕಿಯಿದೆ” ಎಂದಿತ್ತು.

ಸಂಚಲನ ಮೂಡಿಸಿದ್ದ ಗೌರಿ ಕೊಲೆ

ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಗೌರಿ ಲಂಕೇಶ್‌ ಅವರನ್ನು 2017ರ ಸೆಪ್ಟೆಂಬರ್‌ 5ರಂದು ಕೆಲಸ ಮುಗಿಸಿ ಮನೆಗೆ ಮರಳಿದ ವೇಳೆ ಗುಂಡು ಹಾರಿಸಿ ಕೊಲ್ಲಲಾಗಿತ್ತು. ಹತ್ಯೆಯ ಸಂಚು ರೂಪಿಸಿದ ಪ್ರಮುಖ ರೂವಾರಿ ಎಂದು ಅಮೋಲ್ ಕಾಳೆ ಮೇಲೆ ಆರೋಪವಿದ್ದರೆ, ಗುಂಡು ಹಾರಿಸಿದ ಆರೋಪ ಪರಶುರಾಮ್ ವಾಗ್ಮೋರೆ ಮೇಲೆ ಹಾಗೂ ಆತನನ್ನು ಕೂರಿಸಿಕೊಂಡು ಬೈಕ್ ಚಲಾಯಿಸಿ ತಪ್ಪಿಸಿಕೊಳ್ಳಲು ನೆರವಾದ ಆರೋಪ ಗಣೇಶ್ ಮಿಸ್ಕಿನ್ ಮೇಲೆ ಇದೆ.

ಅಮೋಲ್ ಕಾಳೆ, ಪರಶುರಾಮ್ ವಾಗ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ಬಾಡ್, ಅಮಿತ್ ದೆಗ್ವೇಕರ್, ಭರತ್ ಕುರಣೆ, ಸುರೇಶ್ ಹೆಚ್ ಎಲ್, ರಾಜೇಶ್ ಬಂಗೇರ, ಸುಧನ್ವ ಗೊಂದಲೇಕರ್, ಶರದ್ ಕಾಲಸ್ಕರ್, ಮೋಹನ್ ನಾಯಕ್, ವಾಸುದೇವ್ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ ಎಡವೆ, ವಿಕಾಸ್‌ ಪಾಟೀಲ್‌, ಶ್ರೀಕಾಂತ್ ಪಂಗರ್ಕರ್, ಕೆ ಟಿ ನವೀನ್ ಕುಮಾರ್ ಮತ್ತು ಹೃಶಿಕೇಶ್ ದಿಯೋದಿಕರ್‌ ಪ್ರಕರಣದ ಆರೋಪಿಗಳಾಗಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 302, 120ಬಿ, 114, 118, 109, 201, 203, 204 ಮತ್ತು 35, ಸಶಸ್ತ್ರ ಕಾಯಿದೆಯ ಸೆಕ್ಷನ್‌ಗಳಾದ 25(1), 25(1B), 27(1) ಮತ್ತು ಕೋಕಾ ಕಾಯಿದೆಯ ಸೆಕ್ಷನ್‌ಗಳಾದ 3(1)(I), 3(2), 3(3), 3(4) ಅಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Kalaburagi News : ಕಲಬುರಗಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ನದಿಗೆ ಹಾರಿ ಯುವಕ-ಯುವತಿ ಆತ್ಮಹತ್ಯೆ

Continue Reading

ಮಳೆ

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

Karnataka Rain: ಹಾಸನದಲ್ಲಿ ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದಿದೆ. ಉಡುಪಿಯಲ್ಲಿ ಶಾಲೆಯೊಂದು ಜಲಾವೃತಗೊಂಡರೆ, ನಂಜನಗೂಡಿನ ಹದಿನಾರು ಕಾಲು ಮಂಟಪ ಮುಳುಗಡೆಯಾಗಿದೆ.

VISTARANEWS.COM


on

By

karnataka Rain
Koo

ಹಾಸನ/ಉಡುಪಿ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮಠದಕೊಪ್ಪಲ್‌ನಲ್ಲಿ ಭಾರಿ ಮಳೆಯಿಂದಾಗಿ (Karnataka Rain) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದಿದೆ. ರಿಡ್ಜ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಲ್ವರ ಪೈಕಿ ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಕೆರೆಯೊಳಗಿದ್ದ ಕಾರನ್ನು ಜೆಸಿಬಿ ಬಳಸಿ ಹೊರತೆಗೆಯಲಾಗಿದೆ. ಭಾರಿ ಮಳೆ ಇದ್ದ ಕಾರಣಕ್ಕೆ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ.

ಉಡುಪಿಯಲ್ಲಿ ಜಲಾವೃತಗೊಂಡ ಶಾಲೆ

ಉಡುಪಿಯ ಉಪ್ಪೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ನೆರೆಯಿಂದ ಜಲಾವೃತಗೊಂಡಿದೆ. ಬ್ರಹ್ಮಾವರ ತಾಲೂಕಿನ ಉಪ್ಪುರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರಕಾರಿ ಶಾಲೆಯು ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿದೆ. ತಗ್ಗು ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಪ್ರತಿ ವರ್ಷವೂ ಇಲ್ಲಿ ನೆರೆಹಾವಳಿ ಸೃಷ್ಟಿಯಾಗುತ್ತದೆ. ಮಡಿಸಾಲು ಹೊಳೆ ಉಕ್ಕಿ ಹರಿದ ಪರಿಣಾಮ ಶಾಲೆ ಜಲಾವೃತಗೊಂಡಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಶಾಲೆಗೆ ರಜೆ ನೀಡಲಾಗಿದೆ ಹೀಗಾಗಿ ಯಾವುದೇ ಸಮಸ್ಯೆಯಾಗಿಲ್ಲ.

ಜಲಾವೃತಗೊಂಡ ರಸ್ತೆಯಲ್ಲಿ ಸಿಲುಕಿದ ರೋಗಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ಜಲಾವೃತಗೊಂಡ ಪರಿಣಾಮ ಚಿಕಿತ್ಸೆಗೆ ಹೊರಟಿದ್ದ ಪಾಶ್ವವಾಯು ಪೀಡಿತ ರಸ್ತೆಯಲ್ಲೇ ಸಿಲುಕುವಂತಾಯಿತು. ಕಾರವಾರದ ಅರಗಾ ಬಳಿ ಹೆದ್ದಾರಿ ಮೇಲೆ ನಿಂತ ನೀರು ಪರಿಣಾಮ ತೊಂದರೆಯುನ್ನುಂಟಾಯಿತು. ತಡರಾತ್ರಿಯಿಂದ ಸುರಿದ ಭಾರೀ ಮಳೆಗೆ ಹೆದ್ದಾರಿ ಜಲಾವೃತಗೊಂಡಿದೆ. ಹೆದ್ದಾರಿ ಬಂದ್ ಆದ ಪರಿಣಾಮ ರಸ್ತೆಯಲ್ಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಎದೆಮಟ್ಟದ ನೀರಿನಲ್ಲಿ ಬ್ಯಾಗ್ ತಲೆಯ ಮೇಲೆ ಹೊತ್ತು ರಸ್ತೆ ದಾಟುತ್ತಿರುವುದು ಕಂಡು ಬಂತು. ಮತ್ತೊಂದು ಕಡೆ ಜಲಾವೃತಗೊಂಡ ಹೆದ್ದಾರಿಯಲ್ಲಿ ಕಾರು ತಳ್ಳಿಕೊಂಡು ತೆರಳಿದರು. ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ನೀರಿನ ಪ್ರಮಾಣ ಇನ್ನೂ ಕಡಿಮೆಯಾಗಿಲ್ಲ. ಗೋವಾ-ಮಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ: Karnataka Weather : ಅಬ್ಬರಿಸುತ್ತಿರುವ ಮುಂಗಾರು; ಕರಾವಳಿ, ಮಲೆನಾಡಿನಲ್ಲಿ ಇಂದು ಸಹ ಜೋರು ಮಳೆ

ನಂಜನಗೂಡಿನ ಹದಿನಾರು ಕಾಲು ಮಂಟಪ ಮುಳುಗಡೆ

ವೈನಾಡಿನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಮೈಸೂರಿನ ನಂಜನಗೂಡಿನ ಕಪಿಲ ನದಿಗೆ 20 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಪರಿಣಾಮ ನಂಜನಗೂಡಿನ ಹದಿನಾರು ಕಾಲು ಮಂಟಪ ಮುಳುಗಡೆಯಾಗಿದೆ. ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ಸ್ನಾನಘಟ್ಟವೂ ಮುಳುಗಡೆಯಾಗಿದ್ದು, ನೀರು ಕಡಿಮೆಯಾಗುವ ತನಕ ನದಿ ದಂಡೆಗೆ ಹೋಗದಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ನದಿ ಅಂಚಿನ ಒಕ್ಕಲಗೇರಿ ತೋಪಿನ ಬೀದಿ ಬಡಾವಣೆಯ ಜನರನ್ನು ಸ್ಥಳಾಂತರ ಮಾಡಲಾಗಿದೆ. ಜಿಲ್ಲಾಡಳಿತ ಕಪಿಲ ನದಿ ಅಂಚಿನಲ್ಲಿರುವ ಜನವಸತಿ ಪ್ರದೇಶಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಎಚ್‌ಡಿ ಕೋಟೆ ತಾಲೂಕಿನ ಶಾಲೆಗಳಿಗೆ ರಜೆ

ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ತಹಸೀಲ್ದಾರ್, ಬಿಇಒ ಮೌಖಿಕ ಆದೇಶ ಹೊರಡಿಸಿದ್ದಾರೆ. ಮಳೆಯಿಂದ ವಿದ್ಯಾರ್ಥಿಗಳಿಗೆ ಆಗುವ ಅನಾನುಕೂಲ ತಪ್ಪಿಸಲು ಕ್ರಮವಹಿಸಲಾಗಿದೆ. ಒಂದು ವಾರದಿಂದಲೂ ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸರ್ಕಾರಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಕಾಲೇಜುಗಳು ತೆರೆದಿರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Darshan: ರೇಣುಕಾ ಸ್ವಾಮಿ ದೇಹ ಪೋಸ್ಟ್‌ ಮಾರ್ಟಮ್‌ ಮಾಡಿದ ವೈದ್ಯ ಪವಿತ್ರ ಗೌಡ ಆಪ್ತೆಯ ಪತಿ!

Actor Darshan: ಶಾಕಿಂಗ್ ಸಂಗತಿ ಏನು ಅಂದರೆ ರೇಣುಕಾ ಸ್ವಾಮಿಯ ಶವ ಪೋಸ್ಟ್‌ಮಾರ್ಟಮ್ ಮಾಡಿದ್ದೇ ಸಮತಳ ಪತಿ! ಸಮತ ಪತಿ ಡಾ. ಸುರೇಶ್ ಅವರಿಂದ ರೇಣುಕಾ ಸ್ವಾಮಿ ಶವದ ಮರಣೋತ್ತರ ಪರೀಕ್ಷೆ ನಡೆದಿತ್ತು. ಆ ಮರಣೋತ್ತರ ಪರೀಕ್ಷೆ ಪೊಲೀಸರ ಕೈ ಸೇರುವ ಮೊದಲೇ ಜೈಲಿನಲ್ಲಿ ದರ್ಶನ್ ಹಾಗೂ ಪವಿತ್ರರನ್ನು ಸಮತ ಭೇಟಿ ಮಾಡಿದ್ದಳು.

VISTARANEWS.COM


on

actor darshan samata husband
Koo

ಬೆಂಗಳೂರು: ನಟ ದರ್ಶನ್ (Actor Darshan) ಗ್ಯಾಂಗ್‌ನಿಂದ ನಡೆದ ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದ ವಿಚಾರಣೆಗೆ ಮತ್ತೊಂದು ಟ್ವಿಸ್ಟ್‌ ದೊರೆತಿದೆ. ಮೃತ ರೇಣುಕಾಸ್ವಾಮಿ ಶವ ಪೋಸ್ಟ್‌ ಮಾರ್ಟಮ್‌ (Post Martem) ನಡೆಸಿದ ವೈದ್ಯ ಬೇರೆ ಯಾರೂ ಅಲ್ಲ, ಜೈಲಿನಲ್ಲಿ ದರ್ಶನ್‌ ಹಾಗೂ ಪವಿತ್ರ ಗೌಡ (Pavitra Gowda) ಅವರನ್ನು ಭೇಟಿಯಾಗಿದ್ದ ಪವಿತ್ರ ಆಪ್ತೆ ಸಮತ ಅವರ ಪತಿ!

ಅಂದರೆ, ಈ ಪ್ರಕರಣದ ಸಾಕ್ಷ್ಯಗಳನ್ನು ತಿರುಚುವಲ್ಲಿ ಸಮತ ಕೈವಾಡ ಇದೆಯಾ, ಇದ್ದರೆ ಎಷ್ಟು ಎನ್ನುವ ಬಗ್ಗೆ ಈಗ ಪೊಲೀಸರು ತಲೆ ಕೆಡಿಸಿಕೊಂಡಿದ್ದಾರೆ. ಆ ಶಾಕಿಂಗ್ ಸ್ಟೋರಿಯ ಕಥನಾಯಕಿಯೇ ಪವಿತ್ರಗೌಡ ಸ್ನೇಹಿತೆ ಸಮತ. ಕೊಲೆ ಕೇಸ್‌ನಲ್ಲಿ ಜೈಲುಪಾಲಾಗಿರುವ ಪವಿತ್ರ ಗೌಡಳನ್ನು ಸಮತ ಭೇಟಿ ಮಾಡಿದ್ದಳು. ಪವಿತ್ರ ಗೌಡ ಮಾತ್ರವಲ್ಲದೇ ದರ್ಶನ್ ಜೊತೆಗೂ ಮಾತುಕತೆ ನಡೆಸಿದ್ದಳು. ಸಮತಳ ಜೈಲು ಭೇಟಿಯಿಂದ ತನಿಖಾಧಿಕಾರಿಗಳ ತಲೆಯಲ್ಲಿ ಅನುಮಾನ ಮೂಡಿತ್ತು. ಡೌಟ್ ಹಿನ್ನೆಲೆಯಲ್ಲಿ, ವಿಚಾರಣೆಗೆ ಹಾಜರಾಗುವಂತೆ ತನಿಖಾಧಿಕಾರಿ ನೋಟೀಸ್ ನೀಡಿದ್ದರು.

ಸಮತಳನ್ನು ಆಡುಗೋಡಿ ಟೆಕ್ನಿಕಲ್ ಸೆಲ್‌ನಲ್ಲಿ ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ, ಪೊಲೀಸರೇ ಒಂದು ಕ್ಷಣ ಶಾಕ್ ಆಗುವಂಥ ಸಂಗತಿ ಬೆಳಕಿಗೆ ಬಂದಿತ್ತು. ಆ ವಿಚಾರ, ರೇಣುಕ ಸ್ವಾಮಿ ದೇಹದ ಪೋಸ್ಟ್‌ಮಾರ್ಟಮ್ ಮಾಡಿದ ವೈದ್ಯರ ಮೇಲೂ ಪೊಲೀಸರಿಗೆ ಅನುಮಾನ ಮೂಡಿಸುವಂತಿತ್ತು. ಆ ಅನುಮಾನ ಮೂಡಲು ಕಾರಣವಾದದ್ದು ಸಮತಳ ಪತಿಯ ವರ್ತನೆ. ಸಮತಳಿಂದ ಪವಿತ್ರ ಗೌಡ ಹಾಗೂ ದರ್ಶನ್ ಭೇಟಿ ಬಳಿಕ ಕೇಸ್‌ನಲ್ಲಿ ಈ ಬಿಗ್ ಟ್ವಿಸ್ಟ್ ದೊರೆತಿದೆ.

ಶಾಕಿಂಗ್ ಸಂಗತಿ ಏನು ಅಂದರೆ ರೇಣುಕಾ ಸ್ವಾಮಿಯ ಶವ ಪೋಸ್ಟ್‌ಮಾರ್ಟಮ್ ಮಾಡಿದ್ದೇ ಸಮತಳ ಪತಿ! ಸಮತ ಪತಿ ಡಾ. ಸುರೇಶ್ ಅವರಿಂದ ರೇಣುಕಾ ಸ್ವಾಮಿ ಶವದ ಮರಣೋತ್ತರ ಪರೀಕ್ಷೆ ನಡೆದಿತ್ತು. ಆ ಮರಣೋತ್ತರ ಪರೀಕ್ಷೆ ಪೊಲೀಸರ ಕೈ ಸೇರುವ ಮೊದಲೇ ಜೈಲಿನಲ್ಲಿ ದರ್ಶನ್ ಹಾಗೂ ಪವಿತ್ರರನ್ನು ಸಮತ ಭೇಟಿ ಮಾಡಿದ್ದಳು. ಹಾಗಾದರೆ ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿದ್ದುವ ಯತ್ನ ನಡೆದಿತ್ತೇ? ಈ ಅನುಮಾನದಲ್ಲಿ ಸಮತಳನ್ನು ತನಿಖಾ ತಂಡ ತೀವ್ರ ವಿಚಾರಣೆಗೆ ಒಳಪಡಿಸಿತ್ತು.

ತನಿಖೆಗೊಳಪಡಿಸಿ ಸಮತ ನೀಡಿದ ಹೇಳಿಕೆಯನ್ನು ಪೊಲೀಸರು ದಾಖಲು ಮಾಡಿಕೊಂಡಿದ್ದಾರೆ. ಜೊತೆಗೆ ಸಮತ ಪತಿ ಡಾ. ಸುರೇಶ್ ಅವರ ಕಾಲ್ ಡಿಟೇಲ್ಸ್, ಚಾಟಿಂಗ್ಸ್ ಪರಿಶೀಲಿಸಲಾಗಿದೆ. ರೇಣುಕಾ ಸ್ವಾಮಿ ಶವ ಮರಣೋತ್ತರ ಪರೀಕ್ಷೆ ನಡೆಸುವ ವೇಳೆ, ತಮ್ಮ ಡ್ಯೂಟಿಗೆ ರಜೆ ಇದ್ದರೂ ಸುರೇಶ್‌ ಕರ್ತವ್ಯಕ್ಕೆ ಹಾಜರಾಗಿದ್ದರು. ತಾನೇ ಖುದ್ದು ಮುಂದೆ ನಿಂತು ರೇಣುಕಾಸ್ವಾಮಿ ಶವ ಮರಣೋತ್ತರ ಪರೀಕ್ಷೆ ಮಾಡಿಸಿದ್ದರು.

ಪವಿತ್ರ ಗೌಡ ಕ್ಲೋಸ್ ಫ್ರೆಂಡ್ ಪತಿಯಾಗಿರುವ ಕಾರಣ ಮರಣೋತ್ತರ ಪರೀಕ್ಷೆ ವರದಿಯನ್ನು ಮತ್ತೊಮ್ಮೆ ಪರಿಶೀಲನೆ ಮಾಡಲಾಗುತ್ತಿದೆ. ಪರಿಶೀಲನೆ ನಡೆಸಿ ಡಾ. ಪ್ರದೀಪ್ ಎಂಬ ವೈದ್ಯರಿಂದ ಪೊಲೀಸರಿಗೆ ಮತ್ತೆ ಮರಣೋತ್ತರ ಪರೀಕ್ಷಾ ವರದಿ ಸಲ್ಲಿಕೆ ಮಾಡಲಾಗುತ್ತಿದೆ. ಜೈಲಿಗೆ ತರಾತುರಿಯಿಂದ ಬಂದು ದರ್ಶನ್‌ ಹಾಗೂ ಪವಿತ್ರರನ್ನು ಭೇಟಿಯಾದದ್ದೇ ಇದೀಗ ಈ ಪ್ರಕರಣದ ಸಾಕ್ಷಿ ನಾಶದ ಪ್ರಯತ್ನದಲ್ಲಿ ಇನ್ನೊಂದು ಬಿಗ್‌ ಟ್ವಿಸ್ಟ್‌ ನೀಡಿದೆ.

ಇದನ್ನೂ ಓದಿ: Actor Darshan: ಪವಿತ್ರಾ ಗೌಡ ಆರೋಗ್ಯದಲ್ಲೂ ಏರುಪೇರು; ಚಿಕಿತ್ಸೆ ನೀಡಿದ ವೈದ್ಯರು

Continue Reading

ಮಳೆ

Karnataka Rain : ರಣಭೀಕರ ಮಳೆಗೆ ಶಿರೂರು ಬಳಿ ಗುಡ್ಡ ಕುಸಿತ; ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

Karnataka Rain : ರಣಭೀಕರ ಮಳೆಗೆ ಶಿರೂರು ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಹಾಸನದಲ್ಲಿ ತೆಂಗಿನ ಮರ ಬಿದ್ದು ಮನೆ ಜಖಂಗೊಂಡು ವಿದ್ಯುತ್ ಸಂಪರ್ಕ ಕಡಿತಗೊಂಡರೆ, ಹಾಸನ, ಶಿವಮೊಗ್ಗದಲ್ಲಿ ಕಲ್ಲುಹಳ್ಳ ಸೇತುವೆಯ ತಡೆಗೋಡೆ ಕುಸಿದು ಬಿದ್ದಿದೆ.

VISTARANEWS.COM


on

By

Karnataka Rain
Koo

ಉತ್ತರಕನ್ನಡ ಉತ್ತರಕನ್ನಡದಲ್ಲಿ ರಣಭೀಕರ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿದೆ. ಅಂಕೋಲಾ ತಾಲೂಕಿನ ಶಿರೂರು ಬಳಿ ಅಂಗಡಿಯೊಂದರ ಮೇಲೆ ಗುಡ್ಡ ಕುಸಿದಿದೆ. 5ಕ್ಕೂ ಹೆಚ್ಚು ಮಂದಿ ಗುಡ್ಡದ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ.

ಒಂದೇ ಕುಟಂಬದ ಐವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಲಕ್ಷ್ಮಣ ನಾಯ್ಕ(47), ಶಾಂತಿ ನಾಯ್ಕ(36), ರೋಶನ(11), ಅವಂತಿಕಾ(6), ಜಗನ್ನಾಥ(55) ಎಂಬುವವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಐಆರ್‌ಬಿ ಕಂಪೆನಿಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

Karnataka Rain

5 ಮಂದಿ ಕುಟುಂಬ ವಾಸವಿದ್ದ ಅಂಗಡಿ ಮೇಲೆ ಗುಡ್ಡ ಕುಸಿದಿದ್ದು, ಗ್ರಾಹಕರು ಸೇರಿ ಮನೆಯವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಧಾರಾಕಾರ ಮಳೆಯಿಂದಾಗಿ ಹೆದ್ದಾರಿ ಪಕ್ಕದ ಗುಡ್ಡ ಸಡಿಲಗೊಂಡಿತ್ತು. ಗಂಗಾವಳಿ ನದಿಗೆ ಹೊಂದಿಕೊಂಡಿರುವ ಶಿರೂರು ಪ್ರದೇಶ ಇದಾಗಿದ್ದು, ರಾಷ್ಟ್ರೀಯ ಹೆದ್ದಾರಿ 66ರ ಅಂಕೋಲಾ-ಕುಮಟಾ ನಡುವೆ ಸಂಚಾರ ಸಂಪೂರ್ಣ ಬಂದ್ ಆಗಿದೆ.

karnataka Rain

ಗುಡ್ಡ ಕುಸಿದ ರಭಸಕ್ಕೆ ನದಿಗೆ ಬಿದ್ದ ಗ್ಯಾಸ್ ಟ್ಯಾಂಕರ್

ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿದ ರಭಸಕ್ಕೆ ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್ ನದಿಗೆ ಬಿದ್ದಿದೆ. ಶಿರೂರಿನ ಬೊಮ್ಮಯ್ಯ ದೇವಸ್ಥಾನದ ಬಳಿ ಗುಡ್ದ ಕುಸಿದ ಪರಿಣಾಮ ಟೀ ಸ್ಟಾಲ್ ಸೇರಿ ಹಲವು ಅಂಗಡಿಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಒಂದೇ ಕುಟುಂಬದ ಐವರು ಸೇರಿ ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಸ್ಥಳಕ್ಕೆ ಅಂಕೋಲಾ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ, ಎನ್‌ಹೆಚ್‌ಎಐ ಆಂಬ್ಯುಲೆನ್ಸ್ ದೌಡಾಯಿಸಿದೆ.

ಇದನ್ನೂ ಓದಿ: Rain News: ಮಳೆಯ ಅಬ್ಬರಕ್ಕೆ ಧಡಾರ್‌ ಎಂದು ನೆಲಕಚ್ಚಿದ ಕೊಟ್ಟಿಗೆಹಾರ ಬಸ್‌ ನಿಲ್ದಾಣ!

karnataka Rain

ಹಾಸನದಲ್ಲಿ ಮರ ಬಿದ್ದು ಮನೆ ಜಖಂ, ವಿದ್ಯುತ್ ಸಂಪರ್ಕ ಕಡಿತ

ಭಾರಿ ಮಳೆ- ಗಾಳಿಗೆ ತೆಂಗಿನ ಮರವೊಂದು ಮನೆ ಮೇಲೆ, ವಿದ್ಯುತ್ ತಂತಿ ಮೇಲೆ ಬಿದ್ದಿದೆ. ಪರಿಣಾಮ ಮನೆ ಸಂಪೂರ್ಣ ಜಖಂಗೊಂಡರೆ, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ. ಮಾಜಿ ಶಾಸಕ ದಿ.ವೈ.ಎನ್.ರುದ್ರೇಶ್‌ಗೌಡರಿಗೆ ಸೇರಿದ ಮನೆ ಹಾನಿಯಾಗಿದೆ. ವಿದ್ಯುತ್ ಇಲ್ಲದ ನಿವಾಸಿಗಳು ಪರದಾಡುತ್ತಿದ್ದಾರೆ. ಕೂಡಲೇ ಮರ ತೆರವುಗೊಳಿಸಿ ವಿದ್ಯುತ್ ಪೂರೈಕೆ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.

karnataka rain

ಶಿವಮೊಗ್ಗದಲ್ಲಿ ಕಲ್ಲುಹಳ್ಳ ಸೇತುವೆ ತಡೆಗೋಡೆ ಕುಸಿತ

ಶಿವಮೊಗ್ಗದ ಹೊಸನಗರ ಸಮೀಪ ಇರುವ ಕಲ್ಲುಹಳ್ಳ ಸೇತುವೆಯ ತಡೆಗೋಡೆ ಕುಸಿತಗೊಂಡಿದ್ದು, ಬಾರಿ ಅನಾಹುತವೊಂದು ತಪ್ಪಿದೆ. ರಾಣಿಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ 766 c ಸೇರಿದ ತಡೆಗೋಡೆ ಕುಸಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಡಿಯಲ್ಲಿ ಸುಮಾರು 5 ಕೋಟಿ ಅನುದಾನದಲ್ಲಿ ಸೇತುವೆ ನಿರ್ಮಾಣ ಮಾಡಲಾಗಿತ್ತು. ಲೋಕಾರ್ಪಣೆಗೊಳ್ಳುವ ಮೊದಲೇ ಸೇತುವೆಯ ತಡೆಗೋಡೆ ಕುಸಿದಿದೆ. ಇದೇ ರೀತಿ ಮಳೆ ಮುಂದುವರೆದಲ್ಲಿ ಇನ್ನಷ್ಟು ಭಾಗ ಕುಸಿಯುವ ಭೀತಿ ಇದೆ.

ಹಾಸನದಲ್ಲೂ ಮಳೆ ಅಬ್ಬರಕ್ಕೆ ತಡೆಗೋಡೆ ಕುಸಿತ

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆ ಗೋಡೆ ಕುಸಿದಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಂಕ್ರೀಟ್ ರಸ್ತೆಯ ತಡೆಗೋಡೆ ಸಂಪೂರ್ಣ ಕುಸಿದಿದ್ದು, ಒಂದು ಬದಿಯ ರಸ್ತೆ ಸಂಚಾರ ಬಂದ್ ಆಗುವ ಆತಂಕ ಇದೆ. ಸಕಲೇಶಪುರ ತಾಲೂಕಿನ ಗುಲಗಳಲೆ ಗ್ರಾಮದ, ರಾಟೆಮನೆ ಸಮೀಪ ಘಟನೆ ನಡೆದಿದೆ.

Karnataka Rain

ಸುಮಾರು 40 ಅಡಿಯಷ್ಟು ಎತ್ತರಕ್ಕೆ ನಿರ್ಮಿಸಿದ್ದ ತಡೆಗೋಡೆಯು ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಕುಸಿದು ಬಿದ್ದಿದೆ. ವಾಹನ ಸಂಚಾರ ಹೆಚ್ಚಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಂಕ್ರೀಟ್ ರಸ್ತೆ ಬಿರುಕು ಬಿಡುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Gauri Lankesh murder
ಕ್ರೈಂ11 mins ago

Gauri Lankesh Murder: ಗೌರಿ ಲಂಕೇಶ್‌ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು

karnataka Rain
ಮಳೆ17 mins ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

Road Accident
ದೇಶ20 mins ago

Road Accident: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ಅಪಘಾತ; ಪಂಢರಪುರಕ್ಕೆ ತೆರಳುತ್ತಿದ್ದ ಐವರು ಭಕ್ತರ ಸಾವು

actor darshan samata husband
ಪ್ರಮುಖ ಸುದ್ದಿ34 mins ago

Actor Darshan: ರೇಣುಕಾ ಸ್ವಾಮಿ ದೇಹ ಪೋಸ್ಟ್‌ ಮಾರ್ಟಮ್‌ ಮಾಡಿದ ವೈದ್ಯ ಪವಿತ್ರ ಗೌಡ ಆಪ್ತೆಯ ಪತಿ!

Karnataka Rain
ಮಳೆ47 mins ago

Karnataka Rain : ರಣಭೀಕರ ಮಳೆಗೆ ಶಿರೂರು ಬಳಿ ಗುಡ್ಡ ಕುಸಿತ; ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

Rishabh Pant
ಕ್ರೀಡೆ57 mins ago

Rishabh Pant: ಡೆಲ್ಲಿ ತೊರೆದು ಮುಂದಿನ ಐಪಿಎಲ್​ನಲ್ಲಿ ಈ ಫ್ರಾಂಚೈಸಿ ಪರ ಆಡಲಿದ್ದಾರೆ ರಿಷಭ್​ ಪಂತ್​

Job Alert
ಉದ್ಯೋಗ1 hour ago

Job Alert: ಅಂಚೆ ಇಲಾಖೆಯಿಂದ ಬೃಹತ್‌ ನೇಮಕಾತಿ; ಕರ್ನಾಟಕದಲ್ಲಿಯೂ ಇದೆ 1,940 ಹುದ್ದೆ: ಹೀಗೆ ಅಪ್ಲೈ ಮಾಡಿ

Viral Video
Latest1 hour ago

Viral Video: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Jitan Sahani
ದೇಶ2 hours ago

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

karnataka assembly live
ಪ್ರಮುಖ ಸುದ್ದಿ2 hours ago

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ17 mins ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ18 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

ಟ್ರೆಂಡಿಂಗ್‌