SIIMA 2024: ಸೈಮಾ ನಾಮಿನೇಷನ್ ರೇಸ್‌ನಲ್ಲಿ ʻಕಾಟೇರʼ, ʻಸಪ್ತ ಸಾಗರದಾಚೆ ಎಲ್ಲೋ ಸೈಡ್-ಎʼ! - Vistara News

ಸ್ಯಾಂಡಲ್ ವುಡ್

SIIMA 2024: ಸೈಮಾ ನಾಮಿನೇಷನ್ ರೇಸ್‌ನಲ್ಲಿ ʻಕಾಟೇರʼ, ʻಸಪ್ತ ಸಾಗರದಾಚೆ ಎಲ್ಲೋ ಸೈಡ್-ಎʼ!

SIIMA 2024:ಸ್ಯಾಂಡಲ್‌ವುಡ್‌ನಿಂದ ದರ್ಶನ್ ನಟಿಸಿದ ‘ಕಾಟೇರ’ ಹಾಗೂ ‘ಸಪ್ತಸಾಗರದಾಚೆ ಎಲ್ಲೋ ಸೈಡ್-ಎ’ ಸಿನಿಮಾಗಳು ಸೈಮಾ ಪ್ರಶಸ್ತಿಯ ನಾಮನಿರ್ದೇಶನಗೊಂಡ ಪಟ್ಟಿಯಲ್ಲಿವೆ. ತರುಣ್ ಸುಧೀರ್ ನಿರ್ದೇಶಿಸಿದ್ದ ‘ಕಾಟೇರ’ ಸಿನಿಮಾ ಸುಮಾರು 8 ವಿಭಾಗಗಗಳಲ್ಲಿ ನಾಮನಿರ್ದೇಶನಗೊಂಡಿದೆ.

VISTARANEWS.COM


on

SIIMA 2024 nomination list announced kaatera
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರತಿಷ್ಠಿತ ಸೈಮಾ ಪ್ರಶಸ್ತಿ (SIIMA 2024) ಮತ್ತೆ ಬಂದಿದೆ. ಈ ಅವಾರ್ಡ್ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ. ಸೈಮಾ ಎಂದರೆ, ‘ಸೌತ್ ಇಂಡಿಯನ್ ಇಂಟರ್‌ನ್ಯಾಷನಲ್ ಅವಾರ್ಡ್’ ಎಂದು. ಈ ಪ್ರಶಸ್ತಿಯನ್ನು ಪ್ರಮುಖವಾಗಿ ಸೌತ್ ಸಿನಿಮಾರಂಗದಲ್ಲಿ ತಯಾರಾಗುವ ಸಿನಿಮಾಗಳಿಗೆ ಮಾತ್ರವೇ ಕೊಡಲಾಗುತ್ತದೆ. ಪ್ರತಿ ಬಾರಿ ಈ ಪ್ರಶಸ್ತಿ ಪಡದುಕೊಳ್ಳುವ ಸಿನಿಮಾ ಯಾವುವು, ಕಲಾವಿದರು ಯಾರು ಎನ್ನುವ ಕುತೂಹಲ ಇದ್ದೇ ಇರುತ್ತದೆ. 2024ರ ಸೈಮಾ ನಾಮೀಷನ್ ಪಟ್ಟಿ ಬಿಡುಗಡೆಯಾಗಿದ್ದು, ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂನ ಯಾವ ಸಿನಿಮಾಗಳು ರೇಸ್ ನಲ್ಲಿವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

SIIMA ನ ಅಧ್ಯಕ್ಷರಾದ ಬೃಂದಾ ಪ್ರಸಾದ್ ಅವರು 2023ರ SIIMA ನಾಮನಿರ್ದೇಶನ ಸಿನಿಮಾ ಪಟ್ಟಿ ಘೋಷಿಸಿದ್ದಾರೆ. ನಾಮನಿರ್ದೇಶನ ಸಿನಿಮಾ ಬಗ್ಗೆ ಮಾತನಾಡುತ್ತಾ ಬೃಂದಾ ಪ್ರಸಾದ್ “ಕಳೆದ ಎರಡು ವರ್ಷಗಳಲ್ಲಿ ದಕ್ಷಿಣ ಭಾರತದ ಸಿನಿಮಾದ ಪ್ರಾದೇಶಿಕ ಸಿನಿಮಾಗಳು ಭಾಷೆಯನ್ನು ಮೀರಿ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಹೀಗಾಗಿ SIIMA 2024 ಪ್ರಬಲ ಸ್ಪರ್ಧಿಗಳ ಪಟ್ಟಿಯನ್ನು ಹೊಂದಿರುತ್ತದೆ” ಎಂದಿದ್ದಾರೆ.

ಸ್ಯಾಂಡಲ್‌ವುಡ್‌ನಿಂದ ದರ್ಶನ್ ನಟಿಸಿದ ‘ಕಾಟೇರ’ ಹಾಗೂ ‘ಸಪ್ತಸಾಗರದಾಚೆ ಎಲ್ಲೋ ಸೈಡ್-ಎ’ ಸಿನಿಮಾಗಳು ಸೈಮಾ ಪ್ರಶಸ್ತಿಯ ನಾಮನಿರ್ದೇಶನಗೊಂಡ ಪಟ್ಟಿಯಲ್ಲಿವೆ. ತರುಣ್ ಸುಧೀರ್ ನಿರ್ದೇಶಿಸಿದ್ದ ‘ಕಾಟೇರ’ ಸಿನಿಮಾ ಸುಮಾರು 8 ವಿಭಾಗಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಇದರೊಂದಿಗೆ ರಕ್ಷಿತ್ ಶೆಟ್ಟಿ ನಟಿಸಿ, ಹೇಮಂತ್ ರಾವ್ ನಿರ್ದೇಶಿಸಿದ ‘ಸಪ್ತಸಾಗರದಾಚೆ ಎಲ್ಲೋ ಸೈಡ್-ಎ’ ಸಿನಿಮಾ ಸುಮಾರು 7 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.

ಇದನ್ನೂ ಓದಿ: Paris Olympics 2024 : ಜಿಯೋಸಿನಿಮಾದಲ್ಲಿ ಪ್ಯಾರಿಸ್​ ಒಲಿಂಪಿಕ್ಸ್​​ ಉಚಿತ ನೇರಪ್ರಸಾರ

ಇದನ್ನೂ ಓದಿ : Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

ಸೈಮಾ ರೇಸ್‌ನಲ್ಲಿರುವ ಸಿನಿಮಾಗಳು

ಕನ್ನಡ-ಕಾಟೇರ
ತೆಲುಗು-ದಸರಾ
ತಮಿಳು-ಜೈಲರ್
ಮಲಯಾಳಂ-2018

ಕಾಟೇರ ಹಾಗೂ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಸಿನಿಮಾಗಳು ಸೈಮಾ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿವೆ. ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಚಿತ್ರ 8 ವಿಭಾಗಗಗಳಲ್ಲಿ ನಾಮಿನೇಟ್ ಆಗಿದೆ. ಅತ್ತ ರಕ್ಷಿತ್ ಶೆಟ್ಟಿ ನಟನೆಯ, ಹೇಮಂತ್ ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಚಿತ್ರ 7 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.

ತೆಲುಗಿನಲ್ಲಿ, ನಾನಿ ಮತ್ತು ಕೀರ್ತಿ ಸುರೇಶ್ ಅಭಿನಯದ ಶ್ರೀಕಾಂತ್ ಒಡೆಲಾ ನಿರ್ದೇಶನದ ‘ದಸರಾ’ ಚಿತ್ರ 11 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದ್ದು, ನಾನಿ ಮತ್ತು ಮೃಣಾಲ್ ಠಾಕೂರ್ ಅಭಿನಯದ ‘ಹಾಯ್ ನಾನ್ನ’ 10 ವಿಭಾಗಗಳಲ್ಲಿ ನಾಮಿನೇಷನ್ ಗೊಂಡಿದೆ.

ತಮಿಳಿನಲ್ಲಿ, ರಜನಿಕಾಂತ್ ಅಭಿನಯದ ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್’ 11 ವಿಭಾಗದಲ್ಲಿ ನಾಮನಿರ್ದೇಶನಗಳೊಂದಿಗೆ ಮುಂಚೂಣಿಯಲ್ಲಿದ್ದರೆ, ಉದಯನಿಧಿ ಸ್ಟಾಲಿನ್ ಮತ್ತು ಕೀರ್ತಿ ಸುರೇಶ್ ಅಭಿನಯದ ‘ಮಾಮಣ್ಣನ್’ ಸಿನಿಮಾ 9 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.

ಮಲಯಾಳಂನಲ್ಲಿ, ಟೋವಿನೋ ಥಾಮಸ್ ಮತ್ತು ಆಸಿಫ್ ಅಲಿ ಅಭಿನಯದ ಜೂಡ್ ಆಂಥನಿ ಜೋಸೆಫ್ ನಿರ್ದೇಶನದ ‘2018’ ಸಿನಿಮಾ 8 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ, ಮಮ್ಮುಟ್ಟಿ ಮತ್ತು ಜ್ಯೋತಿಕಾ ಅಭಿನಯದ ‘ಕಾತಲ್ – ದಿ ಕೋರ್’ 7 ವಿಭಾಗಗಳಲ್ಲಿ ನಾಮಿನೇಷನ್ ಆಗಿದೆ.

ಆನ್‌ಲೈನ್ ವೋಟಿಂಗ್ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ.
ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಯರು ಮತ್ತು ಚಲನಚಿತ್ರಗಳಿಗೆ www.siima.in ಮತ್ತು SIIMA ನ ಫೇಸ್‌ಬುಕ್ ಪುಟದಲ್ಲಿ ವೋಟ್ ಮಾಡಬಹುದು. ದುಬೈನಲ್ಲಿ ಸೆಪ್ಟಂಬರ್ 14 ಮತ್ತು 15ರಂದು 2024ರ ಸೈಮಾ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Niveditha Gowda: ನಾನೇನು ಬಾತ್‌ರೂಮ್‌ ಸಿಂಗರ್‌ ಅಲ್ಲ! ಚಂದನ್‌ ಶೆಟ್ಟಿಗೆ ಟಾಂಗ್‌ ಕೊಟ್ರಾ ನಿವೇದಿತಾ ಗೌಡ?

Niveditha Gowda: ಇದೀಗ ಸಹೋದರನ ಕುರಿತು ರೀಲ್ಸ್‌ವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ಬಾತ್‌ರೂಮ್‌ ಸಿಂಗರ್‌ ಅಲ್ಲ ಆಯ್ತಾ! ಎಂದು ನಿವೇದಿತಾ ಹೇಳಿದ್ದಕ್ಕೆ ತಮ್ಮ ʻನೀನು ಸಿಂಗರೇ ಅಲ್ಲʼ! ಎಂದು ಕಾಲೆಳೆದಿದ್ದಾರೆ. ಇದೀಗ ನೆಟ್ಟಿಗರು ಚಂದನ್‌ಗೆ ನಿವ್ವಿ ಟಾಂಗ್‌ ಕೊಟ್ಟಿರಬಹುದು ಎಂದು ಕಮೆಂಟ್‌ ಮಾಡುತ್ತಿದ್ದಾರೆ.

VISTARANEWS.COM


on

Niveditha Gowda new reels with brother
Koo

ಬೆಂಗಳೂರು: ಚಂದನ್‌ ಶೆಟ್ಟಿ (Niveditha Gowda) ಅವರಿಂದ ದೂರವಾದ ಬಳಿಕ ನಿವೇದಿತಾ ಗೌಡ ರೀಲ್ಸ್‌ ಮಾಡುವುದು ಹೆಚ್ಚಾಗಿದೆ. ಎಷ್ಟೇ ಟ್ರೋಲ್ ಆದರೂ ನಿವೇದಿತಾ ತಲೆ ಕೆಡಿಸಿಕೊಳ್ಳದೇ ತಮ್ಮ ಪಾಡಿಗೆ ರೀಲ್ಸ್ ಮಾಡುತ್ತಲೇ ಇದ್ದಾರೆ. ಇದೀಗ ಇವರ ಈ ರೀಲ್ಸ್ ಪ್ರಪಂಚಕ್ಕೆ ಇವರ ಸಹೋದರ ಕೂಡ ಬಂದಿದ್ದಾರೆ. ಇದೀಗ ಸಹೋದರನ ಕುರಿತು ರೀಲ್ಸ್‌ವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ಬಾತ್‌ರೂಮ್‌ ಸಿಂಗರ್‌ ಅಲ್ಲ ಆಯ್ತಾ! ಎಂದು ನಿವೇದಿತಾ ಹೇಳಿದ್ದಕ್ಕೆ ತಮ್ಮ ʻನೀನು ಸಿಂಗರೇ ಅಲ್ಲʼ! ಎಂದು ಕಾಲೆಳೆದಿದ್ದಾರೆ. ಇದೀಗ ನೆಟ್ಟಿಗರು ಚಂದನ್‌ಗೆ ನಿವ್ವಿ ಟಾಂಗ್‌ ಕೊಟ್ಟಿರಬಹುದು ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ನಿವೇದಿತಾ ಶೇರ್‌ ಮಾಡಿಕೊಂಡಿರುವ ವಿಡಿಯೊದಲ್ಲಿ ಇಂಗ್ಲೀಷ್‌ ಹಾಡಿಗೆ ನಿವೇದಿತಾ ಹಾಡಲು ಪ್ರಯತ್ನಿಸುತ್ತಿರುತ್ತಾರೆ. ಸಹೋದರ ಅಕ್ಕನಿಗೆ ಹಾಡಲು ಬಿಡುವುದಿಲ್ಲ ಎಂದಾಗ,ನಾನು ಬಾತುರೂಮ್ ಸಿಂಗರ್‌ ಅಲ್ಲ ಆಯ್ತಾ ಎಂದು ನಿವೇದಿತಾ ಹೇಳಿದ್ದಕ್ಕೆ, ತಮ್ಮ ನೀನು ಸಿಂಗರೇ ಅಲ್ಲ ಎಂದು ಕಾಲೆಳೆದಿದ್ದಾರೆ.ಇನ್ನೂ ನನಗೆ ಹಸಿವು ಆಗುತ್ತಿದೆ ಏನಾದರೂ ಅಡುಗೆ ಮಾಡು ಎಂದು ತಮ್ಮ ಹೇಳಿದ್ದಕ್ಕೆ ನೀನು ಊಟಕ್ಕೆ ಇನ್ನೊಬ್ಬರನ್ನು ಡಿಪೆಂಡ್ ಆಗಿರುವುದ್ಯಾಕೆ ಎಂದು ಕೇಳಿದ್ದಾರೆ ನಿವೇದಿತಾ. ತರಲೆ ತಮಾಷೆ ಒಳಗೊಂಡ ವಿಡಿಯೊವನ್ನು ಹಂಚಿಕೊಂಡಿರುವ ನಿವೇದಿತಾ, ಸಹೋದರರೆಲ್ಲರೂ ಇದೇ ರೀತಿ ಕಿರಿಕಿರಿನಾ? ಎಂಬ ಪ್ರಶ್ನೆಯನ್ನು ಕೇಳಿದ್ದಾರೆ. ಇದೀಗ ರೀಲ್ಸ್‌ ಕಂಡು ನೆಟ್ಟಿಗರು ಚಂದನ್‌ಗೆ ನಿವ್ವಿ ಟಾಂಗ್‌ ಕೊಡುತ್ತಿದ್ದಾರೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: Niveditha Gowda: ಡಿವೋರ್ಸ್‌ ಬಳಿಕ ಹೊಸ ರೀಲ್ಸ್‌ ಹಂಚಿಕೊಂಡ ನಿವೇದಿತಾ: ಲೈಕ್ಸ್‌ ಸುರಿಮಳೆ!

ಈಗಾಗಲೇ ನಿವೇದಿತಾ ಹಾಗೂ ಚಂದನ್‌ ಸಿನಿಮಾಗಳಲ್ಲಿ ಬ್ಯುಸಿಯಾಗುತ್ತಿದ್ದಾರೆ. ಕ್ಯಾಂಡಿ ಕ್ರಶ್ ಸಿನಿಮಾ ಹೊರತು ಪಡಿಸಿದರೆ ನಿವೇದಿತಾ ಗೌಡ ಸೃಜನ್ ಲೋಕೇಶ್ ನಿರ್ದೇಶನದ ಜಿಎಸ್‌ಟಿ ಚಿತ್ರದಲ್ಲಿ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ವಿಶೇಷ ಅಂದರೆ ಈ ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಇದೆ.

ಇನ್ನು ಚಂದನ್‌ ಶೆಟ್ಟಿ ಅಭಿನಯದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’   ಟೀಸರ್‌, ಹಾಡುಗಳು ಮತ್ತು ಎರಡು ಟ್ರೈಲರ್‌ಗಳಿಂದ ಗಮನಸೆಳೆದಿದೆ. ಅರುಣ್‍ ಅಮುಕ್ತ ರಚಿಸಿ-ನಿರ್ದೇಶಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Chandan Shetty) ಚಿತ್ರವು ಇದೇ ಶುಕ್ರವಾರ (ಜುಲೈ 19) ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ, ಇತ್ತೀಚೆಗೆ ದುಬೈನಲ್ಲಿ ಚಿತ್ರದ ಪ್ರೀಮಿಯರ್‌ ಶೋ ಆಗಿದ್ದು, ಚಿತ್ರ ನೋಡಿರುವ ಅನಿವಾಸಿ ಕನ್ನಡಿಗರು ಚಿತ್ರವನ್ನು ಮೆಚ್ಚಿಕೊಂಡಿರುವುದಷ್ಟೇ ಅಲ್ಲ, ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Chandan Shetty: ಚಂದನ್‌ ಶೆಟ್ಟಿ ಅಭಿನಯದ ಸಿನಿಮಾ ದುಬೈನಲ್ಲಿ ಪ್ರೀಮಿಯರ್‌ ಶೋ; ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ!

Chandan Shetty: ಈ ವಿಷಯವನ್ನು ಹಂಚಿಕೊಳ್ಳುವುದಕ್ಕೆ ಇತ್ತೀಚೆಗೆ ಚಿತ್ರತಂಡದವರು ಮಾಧ್ಯಮಗೋಷ್ಠಿ ಆಯೋಜಿಸಿ, ಚಿತ್ರದ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಚಂದನ್‍ ಶೆಟ್ಟಿ, ಸುನೀಲ್‍ ಪುರಾಣಿಕ್‍, ಅರವಿಂದ್ ರಾವ್‍, ಪ್ರಶಾಂತ್ ಸಂಬರ್ಗಿ, ದುಬೈನಲ್ಲಿ ಚಿತ್ರ ಬಿಡುಗಡೆ ಮಾಡಿರುವ OMG Moviesನ ಮಮತಾ ಸೆಂಧಿಲ್‍, ಅಮರ್‍, ಮನೋಜ್‍, ಮನಸ್ವಿ ಸೇರಿದಂತೆ ಚಿತ್ರತಂಡದ ಹಲವರು ಹಾಜರಿದ್ದರು.

VISTARANEWS.COM


on

Chandan Shetty vidyarthi vidyarthiniyare kannada movie dubai premere
Koo

ಬೆಂಗಳೂರು: ಈಗಾಗಲೇ ಟೀಸರ್‌, ಹಾಡುಗಳು ಮತ್ತು ಎರಡು ಟ್ರೈಲರ್‌ಗಳಿಂದ ಗಮನಸೆಳೆದಿರುವ ಅರುಣ್‍ ಅಮುಕ್ತ ರಚಿಸಿ-ನಿರ್ದೇಶಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ(Chandan Shetty) ಚಿತ್ರವು ಇದೇ ಶುಕ್ರವಾರ (ಜುಲೈ 19) ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ, ಇತ್ತೀಚೆಗೆ ದುಬೈನಲ್ಲಿ ಚಿತ್ರದ ಪ್ರೀಮಿಯರ್‌ ಶೋ ಆಗಿದ್ದು, ಚಿತ್ರ ನೋಡಿರುವ ಅನಿವಾಸಿ ಕನ್ನಡಿಗರು ಚಿತ್ರವನ್ನು ಮೆಚ್ಚಿಕೊಂಡಿರುವುದಷ್ಟೇ ಅಲ್ಲ, ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ಈ ವಿಷಯವನ್ನು ಹಂಚಿಕೊಳ್ಳುವುದಕ್ಕೆ ಇತ್ತೀಚೆಗೆ ಚಿತ್ರತಂಡದವರು ಮಾಧ್ಯಮಗೋಷ್ಠಿ ಆಯೋಜಿಸಿ, ಚಿತ್ರದ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಚಂದನ್‍ ಶೆಟ್ಟಿ, ಸುನೀಲ್‍ ಪುರಾಣಿಕ್‍, ಅರವಿಂದ್ ರಾವ್‍, ಪ್ರಶಾಂತ್ ಸಂಬರ್ಗಿ, ದುಬೈನಲ್ಲಿ ಚಿತ್ರ ಬಿಡುಗಡೆ ಮಾಡಿರುವ OMG Moviesನ ಮಮತಾ ಸೆಂಧಿಲ್‍, ಅಮರ್‍, ಮನೋಜ್‍, ಮನಸ್ವಿ ಸೇರಿದಂತೆ ಚಿತ್ರತಂಡದ ಹಲವರು ಹಾಜರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಚಂದನ್‍ ಶೆಟ್ಟಿ, ‘ಇದು ಬಿಡುಗಡೆಯಾಗುತ್ತಿರುವ ನನ್ನ ಮೊದಲ ಚಿತ್ರ. ಈ ಚಿತ್ರವನ್ನು ಜನ ಒಪ್ಪುತ್ತಾರಾ? ನನ್ನ ಅಭಿನಯ ಇಷ್ಟವಾಗುತ್ತದಾ? ಎಂಬ ಭಯ ಇತ್ತು. ಈಗ ಒಂದು ಮಟ್ಟಕ್ಕೆ ರಿಲ್ಯಾಕ್ಸ್ ಆಗಿದ್ದೀನಿ. ಅದಕ್ಕೆ ಕಾರಣ ದುಬೈನಲ್ಲಿ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ. ಅಲ್ಲಿ ಸಾಕಷ್ಟು ಕನ್ನಡಿಗರು ಚಿತ್ರ ನೋಡಿದರು. ಅವರು ಎಲ್ಲ ಸಿನಿಮಾಗಳನ್ನು ಅಷ್ಟು ಸುಲಭವಾಗಿ ಒಪ್ಪುವುದಿಲ್ಲ. ಇಡೀ ಚಿತ್ರಮಂದಿರ ತುಂಬಿತ್ತು. ಚಿತ್ರ ಮುಗಿದ ಮೇಲೆ ಎಲ್ಲರೂ ಒಳ್ಳೆಯ ಅಭಿಪ್ರಾಯಗಳನ್ನು ಹೇಳಿದ್ದಾರೆ. ಅವರಿಗೆ ನಾನು ಸದಾ ಚಿರಋಣಿ. ಈ ತಂಡದ ಭಾಗವಾಗಿರುವುದಕ್ಕೆ ನಾನು ನಿಜಕ್ಕೂ ಅದೃಷ್ಟವಂತ ಎಂದರೆ ತಪ್ಪಿಲ್ಲ. ನಮ್ಮ ನಿರ್ಮಾಪಕರು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದೆ, ಎಲ್ಲದಕ್ಕೂ ಬಹಳ ಸಹಕಾರ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ನಾನು ಹೀರೋ ಎನ್ನುವುದಕ್ಕಿಂತ, ಅಮರ್, ಭಾವನಾ, ಮನಸ್ವಿ, ಸಿಂಚನಾ ಮತ್ತು ಮನೋಜ್‍ ಪ್ರಮುಖ ಪಾತ್ರಧಾರಿಗಳು. ಅವರೆಲ್ಲಾ ತುಂಬಾ ಚೆನ್ನಾಗಿ ನಟಿಸಿದ್ದಾರೆ. ಈ ಚಿತ್ರದ ನಿಜವಾದ ಹೀರೋ ನಿರ್ದೇಶಕರು. ಒಂದೊಳ್ಳೆಯ ಕಥೆಯನ್ನು ಅವರು ಈ ಚಿತ್ರದ ಮೂಲಕ ಹೇಳಿದ್ದಾರೆ. ಮಕ್ಕಳು ಮತ್ತು ಅವರ ಪೋಷಕರು ಇಬ್ಬರೂ ಕೂತು ಒಟ್ಟಿಗೆ ನೋಡುವಂಥ ಚಿತ್ರ ಇದು. ಎಲ್ಲರೂ ಬಂದು ಚಿತ್ರ ನೋಡಿ’ ಎಂದರು.

ಇದನ್ನೂ ಓದಿ: Chandan Shetty: ನಿವೇದಿತಾ ಇನ್ನೊಂದು ಮದುವೆ ಆದ್ರೆ ಓಕೆ ನಾ? ಚಂದನ್‌ ಶೆಟ್ಟಿ ಹೇಳಿದ್ದೇನು?

ಅರುಣ್‍ ಅಮುಕ್ತ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುವುದಷ್ಟೇ ಅಲ್ಲ, ಚಿತ್ರವನ್ನು ತಾವೇ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ‘ನಮಗೆ ಯಾವ ಅಭಿಮಾನಿಗಳಿಲ್ಲ. ನಮ್ಮ ಚಿತ್ರ ನೋಡುವುದಕ್ಕೆ ಬರುವವರೇನಿದ್ದರೂ ಟ್ರೇಲರ್‌ ಮತ್ತು ಹಾಡುಗಳನ್ನು ನೋಡಿ ಬರಬೇಕು. ನಮ್ಮ ಪ್ರೇಕ್ಷಕರೇನಿದ್ದರೂ ಇವತ್ತಿನ ಯುವಜನತೆ. ಅವರಿಗೆ ಚಿತ್ರ ತಲುಪಿಸಬೇಕು. ಹೇಗೆ ತಲುಪಿಸಬೇಕು ಎಂಬುದರ ಕುರಿತು ನನಗೆ ಕೆಲವು ಯೋಚನೆಗಳಿದ್ದವು. ಹಾಗಾಗಿ, ನಾನೇ ಈ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾದೆ. ಸುಮಾರು 140 ಕೇಂದ್ರಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇನೆ. ಚಿತ್ರದ ಟ್ರೇಲರ್‍ ಮತ್ತು ಹಾಡು ನೋಡಿ, ಕೆಲವು ಚಿತ್ರಮಂದಿರದವರು ಕರೆದು ಚಿತ್ರ ಪ್ರದರ್ಶಿಸುವ ಅವಕಾಶ ಕೊಟ್ಟಿದ್ದಾರೆ. ಆಮೇಲೆ ನೋಡೋಣ ಎಂದು ಕಾಯದೇ ಮೊದಲ ದಿನವೇ ಬಂದು ಚಿತ್ರ ನೋಡಿ’ ಎಂದು ಕರೆನೀಡಿದರು.

ದುಬೈನಲ್ಲಿ ಚಿತ್ರ ಬಿಡುಗಡೆ ಮಾಡಿರುವ ಮಮತಾ ಸೆಂಧಿಲ್‍ ಮಾತನಾಡಿ, ‘ಇದಕ್ಕೂ ಮುನ್ನ ‘ಕಾಟೇರ’ ಚಿತ್ರವನ್ನು ಬಿಡಗುಡೆ ಮಾಡಿದ್ದೆವು. ಇದು ನಮ್ಮ ಎರಡನೆಯ ಚಿತ್ರ. ನೋಡಿದವರೆಲ್ಲರೂ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಬೇರೆ ದೇಶಗಳಲ್ಲೂ ಚಿತ್ರ ಬಿಡುಗಡೆ ಮಾಡುವುದಕ್ಕೆ ಅಲ್ಲಿನ ಕನ್ನಡಿಗರು ಕೇಳುತ್ತಿದ್ದು, ಮುಂದಿನ ದಿನಗಳಲ್ಲಿ ಆಸ್ಟ್ರೇಲಿಯಾ ಮುಂತಾದ ಕಡೆ ಚಿತ್ರ ಬಿಡುಗಡೆ ಮಾಡುತ್ತಿರುವುದಾಗಿ’ ಹೇಳಿದರು.

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವನ್ನು ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ. ಶಿವಲಿಂಗೇಗೌಡ ನಿರ್ಮಿಸಿದ್ದಾರೆ. ತಮ್ಮ ಮೊದಲ ಪ್ರಯತ್ನಕ್ಕೆ ಕನ್ನಡಿಗರ ಪ್ರೋತ್ಸಾಹ, ಬೆಂಬಲವಿರಲಿ ಎಂದು ನಿರ್ಮಾಪಕರು ಇದೇ ಸಂದರ್ಭದಲ್ಲಿ ಕೇಳಿಕೊಂಡರು.

ಸುನೀಲ್‍ ಪುರಾಣಿಕ್‍, ಅರವಿಂದ್ ರಾವ್‍, ಪ್ರಶಾಂತ್ ಸಂಬರ್ಗಿ, ಅಮರ್‌, ಮನೋಜ್‍, ಮನಸ್ವಿ ಮುಂತಾದವರು ಮಾತನಾಡಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬಂದು ಚಿತ್ರವನ್ನು ನೋಡಿ ಹರಸಿ-ಹಾರೈಸುವುದಕ್ಕೆ ಮನವಿ ಮಾಡಿದರು.

Continue Reading

ಸ್ಯಾಂಡಲ್ ವುಡ್

Director Arrest: ಕೊಲೆ ಕೇಸ್​​ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸ್ಯಾಂಡಲ್​ವುಡ್ ನಿರ್ದೇಶಕ ಅರೆಸ್ಟ್​!

Director Arrest: 2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್​ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಕೊಲೆ ಕೇಸ್​ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ.

VISTARANEWS.COM


on

Director Arrest gajendra in murder case
Koo

ಬೆಂಗಳೂರು: ಕೊಲೆ ಕೇಸ್‌ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡು, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ (Director Arrest) ಸಿನಿಮಾ ನಿರ್ದೇಶಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು (CCB Police) ಗಜೇಂದ್ರ ಅಲಿಯಾಸ್ ಗಜನನ್ನು ಅರೆಸ್ಟ್‌ ಮಾಡಿದ್ದಾರೆ. ಗಜೇಂದ್ರ ಕನ್ನಡ ಚಿತ್ರರಂಗದಲ್ಲಿ (Kannada Film Industry) ಮಾತ್ರವಲ್ಲದೆ ಕಾಲಿವುಡ್ (Kollywood) ಇಂಡಸ್ಟ್ರಿಯಲ್ಲೂ ಒಂದೆರಡು ಸಿನಿಮಾ ಮಾಡಿದ್ದ. 2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್​ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಈ ಕೊಲೆ ಕೇಸ್​​ನಲ್ಲಿ ಚಂದ್ರಪ್ಪ, ಅಲ್ಯೂಮಿನಿಯಂ ಬಾಬು ಜೊತೆಗೆ ನಿರ್ದೇಶಕ ಗಜೇಂದ್ರ ಎಂಟನೇ ಆರೋಪಿಯಾಗಿದ್ದ.

2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್​ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಕೊಲೆ ಕೇಸ್​ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ.

ಇದನ್ನೂ ಓದಿ: Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

ಜಾಮೀನು ಪಡೆದ ಬಳಿಕ ಹಲವು ವರ್ಷಗಳಿಂದ ಕೋರ್ಟ್​ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. 20 ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿಲ್ಲ. ಈ ಹಿಂದೆ ಪುಟಾಣಿ ಪವರ್ ಹಾಗೂ ರುದ್ರ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ. ಅಷ್ಟೇ ಅಲ್ಲದೇ ತಮಿಳಿನಲ್ಲಿ ಒಂದೆರಡು ಸಿನಿಮಾ ಮಾಡಿರೋದಾಗಿ ಹೇಳಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಇದೀಗ ಗಜೇಂದ್ರನನ್ನು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Samarjit Lankesh: ‘ಮೊನಾಲಿಸಾ’ ಚಿತ್ರಕ್ಕೆ 20 ವರ್ಷಗಳ ಸಂಭ್ರಮ: ರಿಲೀಸ್ ಆಯ್ತು ‘ಗೌರಿ’ ಚಿತ್ರದ ಹಾಡುಗಳು

Samarjit Lankesh: “ಮೊನಾಲಿಸಾ” ಚಿತ್ರ ತೆರೆಕಂಡು ಇಪ್ಪತ್ತು ವರ್ಷಗಳಾಗಿದೆ. ಚಿತ್ರತಂಡದ ಸದಸ್ಯರೊಡನೆ ಕೇಕ್ ಕಟ್ ಮಾಡುವ ಮೂಲಕ “ಮೊನಾಲಿಸಾ” ಚಿತ್ರದ ಇಪ್ಪತ್ತರ ಸಂಭ್ರಮವನ್ನು ಆಚರಿಸಲಾಯಿತು. ನಿರ್ದೇಶಕ ಇಂದ್ರಜಿತ್ ಲಂಕೇಶ್, ನಾಯಕ ಧ್ಯಾನ್, ನಾಯಕಿ ಸದಾ, ನಟ ಶರಣ್, ಸಂಭಾಷಣೆ ಬರೆದಿದ್ದ ಬಿ.ಎ.ಮಧು, ಸ್ಥಿರ ಛಾಯಾಗ್ರಾಹಕ ಗುಂಡ್ಲುಪೇಟೆ ಸುರೇಶ್, ಡಿಸೈನರ್ ಮಣಿ ಸೇರಿದಂತೆ “ಮೊನಾಲಿಸಾ” ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

VISTARANEWS.COM


on

Samarjit Lankesh Monalisa Kannada Movie 20 Years Celebration Gowri Movie 2 Songs Released
Koo

ಬೆಂಗಳೂರು: ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಧ್ಯಾನ್ ಹಾಗೂ ಸದಾ ನಾಯಕ, ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ “ಮೊನಾಲಿಸಾ” ಚಿತ್ರ ತೆರೆಕಂಡು ಇಪ್ಪತ್ತು ವರ್ಷಗಳಾಗಿದೆ. ಚಿತ್ರತಂಡದ ಸದಸ್ಯರೊಡನೆ ಕೇಕ್ ಕಟ್ ಮಾಡುವ ಮೂಲಕ “ಮೊನಾಲಿಸಾ” ಚಿತ್ರದ ಇಪ್ಪತ್ತರ ಸಂಭ್ರಮವನ್ನು ಆಚರಿಸಲಾಯಿತು. ನಿರ್ದೇಶಕ ಇಂದ್ರಜಿತ್ ಲಂಕೇಶ್, ನಾಯಕ ಧ್ಯಾನ್, ನಾಯಕಿ ಸದಾ, ನಟ ಶರಣ್, ಸಂಭಾಷಣೆ ಬರೆದಿದ್ದ ಬಿ.ಎ.ಮಧು, ಸ್ಥಿರ ಛಾಯಾಗ್ರಾಹಕ ಗುಂಡ್ಲುಪೇಟೆ ಸುರೇಶ್, ಡಿಸೈನರ್ ಮಣಿ ಸೇರಿದಂತೆ “ಮೊನಾಲಿಸಾ” ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಈ ಸಂಭ್ರಮದ ಸಂಧರ್ಭದಲ್ಲಿ ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಅವರ ಮಗ ಸಮರ್ಜಿತ್ ಲಂಕೇಶ್ ನಾಯಕನಾಗಿ ಪದಾರ್ಪಣೆ ಮಾಡುತ್ತಿರುವ “ಗೌರಿ” ಚಿತ್ರದ “ಮುದ್ದಾದ” ಹಾಡು ಸೇರಿದಂತೆ ಎರಡು ಹಾಡುಗಳು ಬಿಡುಗಡೆಯಾಯಿತು. ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ “ಗೌರಿ” ಹಾಡನ್ನು ಬಿಡುಗಡೆ ಮಾಡಿದರು. ಇಂದಿರಾ ಲಂಕೇಶ್ ಅವರು ಉಪಸ್ಥಿತರಿದ್ದರು. ಈ ಹಾಡನ್ನು ಇಂದ್ರಜಿತ್ ಅವರ ಸಹೋದರಿ ಗೌರಿ ಲಂಕೇಶ್ ಅವರಿಗೆ ಅರ್ಪಿಸಲಾಗಿದೆ. “ಮದ್ದಾದ” ಹಾಡನ್ನು “ಮೊನಾಲಿಸಾ” ಚಿತ್ರದ ನಾಯಕ ಧ್ಯಾನ್, ನಾಯಕಿ ಸದಾ ಹಾಗೂ”ಗೌರಿ” ಚಿತ್ರದ ನಾಯಕ ಸಮರ್ಜಿತ್ ಹಾಗೂ ನಾಯಕಿ ಸಾನ್ಯ ಅಯ್ಯರ್ ಸೇರಿ ಬಿಡುಗಡೆ ಮಾಡಿದರು. “ಗೌರಿ” ಹಾಡನ್ನು ಕೆ.ಕಲ್ಯಾಣ್ ಹಾಗೂ “ಮುದ್ದಾದ” ಹಾಡನ್ನು ಕವಿರಾಜ್ ಬರೆದಿದ್ದಾರೆ. ಆನಂದ್ ಆಡಿಯೋ ಮೂಲಕ ಹಾಡುಗಳು ಬಿಡುಗಡೆಯಾಗಿದೆ.

ಇದನ್ನೂ ಓದಿ: Samarjit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಅಭಿನಯದ `ಗೌರಿ’ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ಹಾಡು ಬಿಡುಗಡೆ ಮಾಡಿ ಮಾತನಾಡಿದ ಹಂಸಲೇಖ ಅವರು, ʻʻಸಂಗೀತ ಎಂದರೆ ಸಿನಿಮಾ. ಸಿನಿಮಾ ಎಂದರೆ ಸಂಗೀತ. ಸಂಗೀತವಿಲ್ಲದ ಸಿನಿಮಾವನ್ನು ಊಹಿಸಿಕೊಳ್ಳಲು ಅಸಾಧ್ಯ. ಸ್ಟೈಲಿಶ್ ಚಿತ್ರಗಳಿಗೆ ಹೆಸರಾದ ಇಂದ್ರಜಿತ್ ಅವರು ಈ ಚಿತ್ರವನ್ನೂ ನಿರ್ದೇಶಿಸಿದ್ದಾರೆ. ತಮ್ಮ ನಿರ್ದೇಶನದಲ್ಲೇ ಮಗನನ್ನು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿಸುತ್ತಿದ್ದಾರೆ. ಇಂದು ನನ್ನಿಂದ ಬಿಡುಗಡೆಯಾದ ಹಾಡನ್ನು ಗೌರಿ ಲಂಕೇಶ್ ಅವರಿಗೆ ಅರ್ಪಿಸಿದ್ದಾರೆ. “ಗೌರಿ” ಚಿತ್ರ ಯಶಸ್ವಿಯಾಗಲಿʼʼ ಎಂದು ಹಾರೈಸಿದರು.

ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಮಾತನಾಡಿ,ʻʻ “ಗೌರಿ” ಚಿತ್ರದಲ್ಲಿ ಏಳು ಹಾಡುಗಳಿದೆ. ಇದೊಂದು ಸಂಗೀತ ಪ್ರಧಾನ ಚಿತ್ರವಾಗಿರುವುದರಿಂದ ಹಂಸಲೇಖ ಅವರಿಂದಲೇ ಹಾಡು ಬಿಡುಗಡೆ ಮಾಡಿಸಬೇಕೆಂಬ ಹಂಬಲ ನನ್ನಗಿತ್ತು. ಹಾಡು ಬಿಡುಗಡೆ ಮಾಡಿಕೊಟ್ಟ ಅವರಿಗೆ ವಂದನೆ.‌ ಇಂದು ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದು, “ಮುದ್ದಾದ” ಹಾಡನ್ನು ಕವಿರಾಜ್ ಅವರು ಬರೆದಿದ್ದು, ನಿಹಾಲ್ ತವ್ರು ಹಾಡಿದ್ದಾರೆ. ಜೆಸ್ಸಿ ಗಿಫ್ಟ್ ಸಂಗೀತ ನೀಡಿದ್ದಾರೆ. ಮತ್ತೊಂದು ಹಾಡನ್ನು ಕೆ.ಕಲ್ಯಾಣ್ ಅವರು ಬರೆದಿದ್ದು, ಆ ಹಾಡನ್ನು ನನ್ನ ಅಕ್ಕ ಗೌರಿ ಲಂಕೇಶ್ ಅವರಿಗೆ ಅರ್ಪಣೆ ಮಾಡಲಾಗಿದೆ. ಇನ್ನು ಚಿತ್ರಕ್ಕೆ ಸೆನ್ಸಾರ್ ಮಂಡಳಿ “ಯು” ಪ್ರಮಾಣ ಪತ್ರ ನೀಡಿದೆ. ಆಗಸ್ಟ್ ಹದಿನೈದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಗಂಗಾಧರ್ ಮೈಸೂರು ಭಾಗದ ವಿತರಕರು. ಮೈಸೂರು ಒಂದನ್ನು ಬಿಟ್ಟು ವಿಶಾಲ ಕರ್ನಾಟಕಕ್ಕೆ ಜಯಣ್ಣ ಫಿಲಂಸ್ ಅವರು ವಿತರಣೆ ಮಾಡುತ್ತಿದ್ದಾರೆ. ಡಬ್ಬಿಂಗ್ ರೈಟ್ಸ್ ಕೂಡ ಮಾರಾಟವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಹಾಗೂ ಟೀಸರ್ ಮೂಲಕ ನಮ್ಮ ಚಿತ್ರ ಗೆದ್ದಿದೆ. ಇನ್ನೇನಿದ್ದರೂ ನಿರ್ದೇಶಕನಾಗಿ ನಾನ ಗೆಲ್ಲಬೇಕುʼʼ ಎಂದರು.

ನನ್ನ ಬಹು ದಿನಗಳ ಕನಸು ನನಸ್ಸಾಗುವ ಸಮಯ ಸಮೀಪಿಸಿದೆ. ಮೊದಲು ನಾನು ನನ್ನ ಅಪ್ಪನಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ಹೇಳುತ್ತೇನೆ ಎಂದರು ನಾಯಕ ಸಮರ್ಜಿತ್ ಲಂಕೇಶ್.
ಇಷ್ಟು ದಿಗ್ಗಜ್ಜರ ನಡುವೆ ನಮ್ಮ ಚಿತ್ರದ ಹಾಡು ಬಿಡುಗಡೆಯಾಗಿದು ಖುಷಿಯಾಗಿದೆ ಎಂದರು ನಾಯಕಿ ಸಾನ್ಯಾ ಅಯ್ಯರ್. “ಗೌರಿ” ಚಿತ್ರದ ಛಾಯಾಗ್ರಾಹಕ ಕೆ.ಕೆ, ಗೀತರಚನೆ ಮಾಡಿರುವ ಕೆ.ಕಲ್ಯಾಣ್, ಕವಿರಾಜ್ ಚಿತ್ರದ ಕುರಿತು ಮಾತನಾಡಿದರು.

“ಮೊನಲಿಸ” ಚಿತ್ರದ ಬಗ್ಗೆ ನಾಯಕ ಧ್ಯಾನ್, ನಾಯಕಿ ಸದಾ, ಸಂಭಾಷಣೆ ಬರೆದಿರುವ ಬಿ.ಎ.ಮಧು ಮುಂತಾದವರು ಅನುಭವಗಳನ್ನು ಹಂಚಿಕೊಂಡರು.

Continue Reading
Advertisement
Niveditha Gowda new reels with brother
ಸ್ಯಾಂಡಲ್ ವುಡ್16 mins ago

Niveditha Gowda: ನಾನೇನು ಬಾತ್‌ರೂಮ್‌ ಸಿಂಗರ್‌ ಅಲ್ಲ! ಚಂದನ್‌ ಶೆಟ್ಟಿಗೆ ಟಾಂಗ್‌ ಕೊಟ್ರಾ ನಿವೇದಿತಾ ಗೌಡ?

Gold Rate Today
ಚಿನ್ನದ ದರ17 mins ago

Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ; ಇಂದಿನ ದರ ಇಷ್ಟಿದೆ

IND vs SL
ಕ್ರೀಡೆ31 mins ago

IND vs SL: ಲಂಕಾ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ

gt world mall 2
ಪ್ರಮುಖ ಸುದ್ದಿ38 mins ago

GT World Mall: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ ಮುಂದೆ ಪಂಚೆ ಉಟ್ಟು ಪ್ರತಿಭಟನೆ, ಕ್ಷಮೆ ಕೇಳಿದ ಮಾಲೀಕ

Made In India
ದೇಶ44 mins ago

Made In India: ಜಾಗತಿಕವಾಗಿ ಪ್ರಭಾವ ಬೀರಿದ ʼಮೇಡ್‌ ಇನ್‌ ಇಂಡಿಯಾʼ ಉತ್ಪನ್ನಗಳು; ಪ್ರಧಾನಿ ಮೋದಿ ಮೆಚ್ಚುಗೆ

Mahanati Show Darshan wished Priyanka the contestant
ಕಿರುತೆರೆ1 hour ago

Mahanati Show: ಈ` ಮಹಾನಟಿ’ ಸ್ಪರ್ಧಿಗೆ ಶುಭ ಹಾರೈಸಿದ್ರಂತೆ ದರ್ಶನ್‌; ಅವರ ತಂದೆ ಕೂಡ ದಚ್ಚುಗೆ ಕ್ಲೋಸ್‌ ಫ್ರೆಂಡ್‌!

Suryakumar Yadav
ಕ್ರೀಡೆ2 hours ago

Suryakumar Yadav: ಹಾರ್ದಿಕ್​ ಕೈಬಿಟ್ಟು ಸೂರ್ಯಕುಮಾರ್​ಗೆ ಟಿ20 ನಾಯಕತ್ವ ನೀಡಲು ಬಿಸಿಸಿಐ ಮುಂದಾಗಿದ್ದೇಕೆ?

Viral Video
Latest2 hours ago

Viral Video: ಚಾಕೋಲೇಟ್ ತಿನ್ನುವ ಆಸೆಯಾಗಿ ಅಂಗಡಿಗೆ ಹೋಗಿದ್ದ ಬಾಲಕ ಶವವಾಗಿ ಮನೆಗೆ ಬಂದ; ಆಗಿದ್ದೇನು? ವಿಡಿಯೊ ನೋಡಿ

Anant Radhika Wedding
ವಾಣಿಜ್ಯ2 hours ago

Anant Radhika Wedding: ಮನಮುಟ್ಟುವಂತೆ ಕನ್ಯಾದಾನದ ಮಹತ್ವ ತಿಳಿಸಿದ ನೀತಾ ಅಂಬಾನಿ; ಭಾವುಕರಾದ ಅತಿಥಿಗಳು; ವಿಡಿಯೊ ನೋಡಿ

Chandan Shetty vidyarthi vidyarthiniyare kannada movie dubai premere
ಸ್ಯಾಂಡಲ್ ವುಡ್2 hours ago

Chandan Shetty: ಚಂದನ್‌ ಶೆಟ್ಟಿ ಅಭಿನಯದ ಸಿನಿಮಾ ದುಬೈನಲ್ಲಿ ಪ್ರೀಮಿಯರ್‌ ಶೋ; ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌