Ajit Pawar: ಮಹಾರಾಷ್ಟ್ರದಲ್ಲಿ ಅಜಿತ್‌ ಪವಾರ್‌ಗೆ ಶಾಕ್‌; ಎನ್‌ಸಿಪಿಗೆ ರಾಜೀನಾಮೆ ನೀಡಿದ ಆಪ್ತ - Vistara News

ರಾಜಕೀಯ

Ajit Pawar: ಮಹಾರಾಷ್ಟ್ರದಲ್ಲಿ ಅಜಿತ್‌ ಪವಾರ್‌ಗೆ ಶಾಕ್‌; ಎನ್‌ಸಿಪಿಗೆ ರಾಜೀನಾಮೆ ನೀಡಿದ ಆಪ್ತ

Ajit Pawar: ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿನ ಕಳಪೆ ಪ್ರದರ್ಶನದ ನಂತರ ಮಹಾರಾಷ್ಟ್ರದಲ್ಲಿ ಅಜಿತ್‌ ಪವಾರ್‌ ನೇತೃತ್ವದ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿಗೆ ಮತ್ತೊಂದು ಆಘಾತ ಎದುರಾಗಿದೆ. ಪಿಂಪ್ರಿ ಚಿಂಚ್ವಾಡ್ದ ಉನ್ನತ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಅವರು ಶರದ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರುವ ಸಾಧ್ಯತೆ ಇದೆ.

VISTARANEWS.COM


on

Ajit Pawar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಇತ್ತೀಚಿನ ಲೋಕಸಭಾ ಚುನಾವಣೆ (Lok Sabha Election)ಯಲ್ಲಿನ ಕಳಪೆ ಪ್ರದರ್ಶನದ ನಂತರ ಮಹಾರಾಷ್ಟ್ರ (Maharashtra)ದಲ್ಲಿ ಅಜಿತ್‌ ಪವಾರ್‌ (Ajit Pawar) ನೇತೃತ್ವದ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ (Nationalist Congress Party)ಗೆ ಮತ್ತೊಂದು ಆಘಾತ ಎದುರಾಗಿದೆ. ಪಿಂಪ್ರಿ ಚಿಂಚ್ವಾಡ್ (Pimpri Chinchwad)ದ ನಾಲ್ವರು ಉನ್ನತ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಅವರು ಶರದ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರುವ ಸಾಧ್ಯತೆ ಇದೆ.

ಅಜಿತ್ ಪವಾರ್ ಅವರಿಗೆ ರಾಜೀನಾಮೆ ಸಲ್ಲಿಸಿದವರಲ್ಲಿ ಎನ್‌ಸಿಪಿಯ ಪಿಂಪ್ರಿ-ಚಿಂಚ್ವಾಡ್ ಘಟಕದ ಮುಖ್ಯಸ್ಥ ಅಜಿತ್ ಗವ್ಹಾನೆ ಕೂಡ ಸೇರಿದ್ದಾರೆ. ಪಿಂಪ್ರಿ ಚಿಂಚ್ವಾಡ್ ವಿದ್ಯಾರ್ಥಿ ಘಟಕದ ಮುಖ್ಯಸ್ಥ ಯಶ್ ಸಾನೆ, ಮಾಜಿ ಕಾರ್ಪೊರೇಟರ್‌ಗಳಾದ ರಾಹುಲ್ ಭೋಸಲೆ ಮತ್ತು ಪಂಕಜ್ ಭಲೇಕರ್ ರಾಜೀನಾಮೆ ನೀಡಿದ ಇತರ ನಾಯಕರು. ಅಜಿತ್ ಪವಾರ್ ಬಣದ ಕೆಲವು ನಾಯಕರು ಶರದ್ ಪವಾರ್ ಬಣಕ್ಕೆ ಮರಳಲು ಸಿದ್ಧರಾಗಿದ್ದಾರೆ ಎನ್ನುವ ವದಂತಿಯ ಮಧ್ಯೆ ಈ ಬೆಳವಣಿಗೆ ನಡೆದಿದೆ.

ಕಳೆದ ತಿಂಗಳು ಶರದ್ ಪವಾರ್ ಈ ಬಗ್ಗೆ ಮಾತನಾಡಿ, ತಮ್ಮ ಪಕ್ಷವನ್ನು ದುರ್ಬಲಗೊಳಿಸಲು ಬಯಸುವವರನ್ನು ಸೇರಿಸಿಕೊಳ್ಳುವುದಿಲ್ಲ. ಆದರೆ ಪಕ್ಷದ ವರ್ಚಸ್ಸಿಗೆ ಧಕ್ಕೆ ತರದ ನಾಯಕರನ್ನು ಸ್ವಾಗತಿಸುವುದಾಗಿ ತಿಳಿಸಿದ್ದರು. “ಪಕ್ಷವನ್ನು ದುರ್ಬಲಗೊಳಿಸಲು ಬಯಸುವವರನ್ನು ನಾವು ಸ್ವಾಗತಿಸುವುದಿಲ್ಲ. ಆದರೆ ಸಂಘಟನೆಯನ್ನು ಬಲಪಡಿಸಲು ಸಹಾಯ ಮಾಡುವ ಮತ್ತು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗದ ನಾಯಕರನ್ನು ಸೇರಿಸುತೇವೆ” ಎಂದು ಅವರು ಘೋಷಿಸಿದ್ದರು.

ಈ ಮಧ್ಯೆ ಎನ್‌ಸಿಪಿ ವಕ್ತಾರರು ಮಾತನಾಡಿ, “ಯಾವುದೇ ನಾಯಕರು ಪಕ್ಷವನ್ನು ತೊರೆಯುವುದು ಹಿನ್ನಡೆ ಎಂದೇ ಪರಿಗಣಿಸಲಾಗುತ್ತದೆ. ಆದರೆ ಅಜಿತ್ ಗವ್ಹಾನೆ ನಮ್ಮೊಂದಿಗೆ ಇರುತ್ತಾರೆ ಎಂಬ ವಿಶ್ವಾಸವಿದೆ. ಅವರು ಅಜಿತ್ ಪವಾರ್‌ನ ನಿಕಟವರ್ತಿ. ಆದ್ದರಿಂದ ಅವರು ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸವಿದೆ” ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅಹಿತ್‌ ಗವ್ಹಾನೆ , ʼʼಎನ್‌ಸಿಪಿಗೆ ರಾಜೀನಾಮೆ ನೀಡಿದ್ದೇನೆ. ಆದರೆ ಶರದ್‌ ಪವಾರ್‌ ಬಣಕ್ಕೆ ಸೇರುವ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಇಂದು (ಜುಲೈ 17) ಪತ್ರಿಕಾಗೋಷ್ಠಿ ಕರೆದು ನಿರ್ಧಾರ ಪ್ರಕಟಿಸುತ್ತೇನೆʼʼ ಎಂದು ತಿಳಿಸಿದ್ದಾರೆ.

2023ರಲ್ಲಿ ಅಜಿತ್ ಪವಾರ್ ತಮ್ಮ ಸಂಬಂಧಿ ಮತ್ತು ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ವಿರುದ್ಧ ದಂಗೆ ಎದ್ದ ನಂತರ ಪವಾರ್ ಕುಟುಂಬವು ಎರಡು ರಾಜಕೀಯ ಪಕ್ಷಗಳಾಗಿ ವಿಭಜನೆಯಾಯಿತು. ಶರದ್ ಪವಾರ್ ಪ್ರತಿಪಕ್ಷದ ಪಾಳಯದಲ್ಲಿ ಉಳಿದರೆ, ಅಜಿತ್ ಪವಾರ್ ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದ ಭಾಗವಾದರು. ಜತೆಗೆ ಅಜಿತ್ ಪವಾರ್ ಉಪಮುಖ್ಯಮಂತ್ರಿ ಹುದ್ದೆ ಅಲಂಕರಿಸಿದರು. ಅಜಿತ್ ಪವಾರ್ ಅವರ ಪಕ್ಷವು ಬಿಜೆಪಿ ನೇತೃತ್ವದ ಎನ್‌ಡಿಎಯ ಮಿತ್ರಪಕ್ಷವಾಗಿ ಲೋಕಸಭಾ ಚುನಾವಣೆ ಎದುರಿಸಿತು. ಆದರೆ ಒಂದು ಸ್ಥಾನವನ್ನು (ರಾಯಗಢ) ಮಾತ್ರ ಗೆದ್ದುಕೊಂಡಿದೆ. ಶರದ್ ಪವಾರ್ ಪಕ್ಷವು ಎಂಟು ಕ್ಷೇತ್ರಗಳಲ್ಲಿ ಗೆದ್ದಿದೆ.

ಇದನ್ನೂ ಓದಿ: Real NCP: ಅಜಿತ್‌ ಪವಾರ್‌ ಬಣದ್ದೇ ನಿಜವಾದ ಎನ್‌ಸಿಪಿ ಎಂದ ಆಯೋಗ; ಶರದ್‌ ಪವಾರ್‌ಗೆ ಹಿನ್ನಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

CV Ananda Bose: ಉಪಚುನಾವಣೆ ವೇಳೆ ವೋಟಿಂಗ್‌ ಹಕ್ಕು ಕಸಿದ ಟಿಎಂಸಿ ಕಾರ್ಯಕರ್ತರು; ಬಂಗಾಳ ರಾಜ್ಯಪಾಲರನ್ನು ಭೇಟಿಯಾದ ಮತದಾರರು

CV Ananda Bose: ಉಪಚುನಾವಣೆಯ ವೇಳೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮತ ಚಲಾಯಿಸಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿ ಸುಮಾರು 100 ಮತದಾರರು ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರನ್ನು ಭೇಟಿಯಾಗಿ ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಮನವಿ ಸಲ್ಲಿಸಿದ 100 ಮಂದಿ, ಉಪಚುನಾವಣೆ ಮತ್ತು ಲೋಕಸಭಾ ಚುನಾವಣೆಯ ವೇಳೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ತಮಗೆ ಮತದಾನದ ಹಕ್ಕನ್ನು ಚಲಾಯಿಸಲು ಅವಕಾಶ ನೀಡಲಿಲ್ಲ ಎಂದು ದೂರಿದ್ದಾರೆ.

VISTARANEWS.COM


on

CV Ananda Bose
Koo

ಕೋಲ್ಕತ್ತಾ: ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ವೇಳೆ ಪಶ್ಚಿಮ ಬಂಗಾಳದಲ್ಲಿ ಸುಮಾರು 2 ಲಕ್ಷ ಹಿಂದುಗಳ ಮತದಾನದ ಹಕ್ಕನ್ನು ಕಸಿಯಲಾಗಿತ್ತು ಎಂದು ಬಿಜೆಪಿ ಮುಖಂಡ ಸುವೇಂದು ಅಧಿಕಾರಿ (Suvendu Adhikari) ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಈ ವಿಚಾರ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ತೃಣಮೂಲ ಕಾಂಗ್ರೆಸ್ (Trinamool Congress) ಕಾರ್ಯಕರ್ತರು ಮತ ಚಲಾಯಿಸಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿ ಸುಮಾರು 100 ಮತದಾರರು ರಾಜ್ಯಪಾಲ ಸಿ.ವಿ.ಆನಂದ ಬೋಸ್ (CV Ananda Bose) ಅವರನ್ನು ಭೇಟಿಯಾಗಿ ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.

ರಾಜ್ಯ ವಿಧಾನಸಭೆಯ ಪ್ರತಿಪಕ್ಷದ ನಾಯಕರೂ ಆದ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಮನವಿ ಸಲ್ಲಿಸಿದ 100 ಮಂದಿ, ಉಪಚುನಾವಣೆ ಮತ್ತು ಲೋಕಸಭಾ ಚುನಾವಣೆಯ ವೇಳೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ತಮಗೆ ಮತದಾನದ ಹಕ್ಕನ್ನು ಚಲಾಯಿಸಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿದ್ದಾರೆ. ಈ ವಿಚಾರವಾಗಿ ಅವಕಾಶ ವಂಚಿತರೊಂದಿಗೆ ಮಾತುಕತೆ ನಡೆಸಿದ ಸಿ.ವಿ.ಆನಂದ ಬೋಸ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ.

ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, ʼʼಈ ವಿಷಯದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲು ಸಮಯ ಕೋರುತ್ತೇನೆ ಮತ್ತು ಈ ಮತದಾರರನ್ನು ಅವರ ಬಳಿಗೆ ಕರೆದೊಯ್ಯುತ್ತೇನೆ. ಈ ದೌರ್ಜನ್ಯವನ್ನು ಸುಮ್ಮನೆ ಬಿಡುವುದಿಲ್ಲʼʼ ಎಂದು ತಿಳಿಸಿದ್ದಾರೆ.

“ರಾಷ್ಟ್ರಪತಿ ಅವರಿಗೆ ಪಶ್ಚಿಮ ಬಂಗಾಳದಲ್ಲಿ ಏನು ನಡೆಯುತ್ತಿದೆ ಎನ್ನುವುದನ್ನು ಮನವರಿಕೆ ಮಾಡುತ್ತೇವೆ. ಈ ರೀತಿಯ ಅನ್ಯಾಯ ಮುಂದುವರಿಯಲು ಬಿಡಬಾರದು. ಅವಕಾಶ ವಂಚಿತರ ಪೈಕಿ ಪ್ರತಿನಿಧಿಗಳಾಗಿ ಐವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಳಿಗೆ ಕರೆದೊಯ್ಯುತ್ತೇನೆ” ಎಂದು ಹೇಳಿದ್ದಾರೆ.

ಏನಿದು ವಿವಾದ?

ಕೆಲವು ದಿನಗಳ ಹಿಂದೆ ಮಾಧ್ಯಮಗಳ ಜತೆಗೆ ಮಾತನಾಡಿದ ಸುವೇಂದು ಅಧಿಕಾರಿ ʼʼಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ಸಂಪೂರ್ಣ ನಾಶವಾಗಿದೆ. ಇದರ ವಿರುದ್ಧ ನಾವು ಹೋರಾಟ ನಡೆಸಲಿದ್ದೇವೆ. ಲೋಕಸಭಾ ಚುನಾವಣೆಯ ವೇಳೆ ಟಿಎಂಸಿ ಸುಮಾರು 50 ಲಕ್ಷ ಹಿಂದುಗಳಿಗೆ ತಮ್ಮ ಹಕ್ಕನ್ನು ಚಲಾಯಿಸಲು ಅವಕಾಶ ನೀಡಲಿಲ್ಲ. ಇನ್ನು ಇತ್ತೀಚೆಗೆ ನಡೆದ 4 ಕ್ಷೇತ್ರಗಳ ಉಪ ಚುನಾವಣೆಯಲ್ಲಿ 2 ಲಕ್ಷಕ್ಕಿಂತ ಅಧಿಕ ಹಿಂದುಗಳ ಹಕ್ಕನ್ನು ಹತ್ತಿಕ್ಕಲಾಯಿತುʼʼ ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ: Suvendu Adhikari: ಉಪಚುನಾವಣೆಯಲ್ಲಿ ಭಾರಿ ವಂಚನೆ? 2 ಲಕ್ಷ ಹಿಂದುಗಳ ವೋಟಿಂಗ್‌ ಹಕ್ಕು ಕಸಿಯಲಾಗಿತ್ತು ಎಂದ ಬಿಜೆಪಿ ನಾಯಕ

ಉಪಚುನಾವಣೆಯ ಫಲಿತಾಂಶ

ಜುಲೈ 13ರಂದು 7 ರಾಜ್ಯಗಳ 13 ಸ್ಥಾನಗಳ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. ಈ ಪೈಕಿ ಪ್ರತಿಪಕ್ಷಗಳ ಇಂಡಿ ಒಕ್ಕೂಟ 10 ಕಡೆ ಗೆದ್ದಿದ್ದರೆ ಬಿಜೆಪಿ ಕೇವಲ 2 ಕ್ಷೇತ್ರಗಳಲ್ಲಿ ಜಯ ಗಳಿಸಿತ್ತು. ಇನ್ನು ಪಶ್ಚಿಮ ಬಂಗಾಳದ ರಾಯ್‌ಗಂಜ್‌, ರಣಘತ್ ದಕ್ಷಿಣ, ಬಾಗ್ಡಾ, ಮತ್ತು ಮಾನಿಕ್ತಾಲಾ ಕ್ಷೇತ್ರಗಳಲ್ಲಿ ಟಿಎಂಸಿ ಗೆಲುವಿನ ನಗೆ ಬೀರಿತ್ತು.

Continue Reading

ಕರ್ನಾಟಕ

Assembly Session: ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದ ಡಿಕೆಶಿ!

Assembly Session: ಯಾರೋ ಅಧಿಕಾರಿ ಮಾಡಿದ ತಪ್ಪಿಗೆ ಸಚಿವರ ಮೇಲೆ ಆರೋಪ ಹೊರಿಸಲು ಆಗುವುದಿಲ್ಲ. ಮಂತ್ರಿಗಳು, ಶಾಸಕರು ಅಕ್ರಮಗಳಲ್ಲಿ ಭಾಗಿಯಾಗಿದ್ದರೆ ಯಾವುದೇ ಕಾರಣಕ್ಕೂ ನಾವು ಅದಕ್ಕೆ ಬೆಂಬಲವಾಗಿ ನಿಲ್ಲುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

Assembly Session
Koo

ಬೆಂಗಳೂರು: “ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ (Assembly Session) ರಾಷ್ಟ್ರೀಯ ಬ್ಯಾಂಕುಗಳು ಭಾಗಿಯಾಗಿದ್ದರೆ, ಅದಕ್ಕೆ ದೆಹಲಿಯ ಕೇಂದ್ರ ಸಚಿವರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಸಾಧ್ಯವೇ?, ಅಧಿಕಾರಿಗಳು ಮಾಡುವ ಅಕ್ರಮಕ್ಕೆ ಸಚಿವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವೇ?” ಎಂದು ಎಂಎಲ್‌ಸಿ ಸಿ.ಟಿ. ರವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

ವಿಧಾನ ಪರಿಷತ್‌ನಲ್ಲಿ ಮಂಗಳವಾರ ನಡೆದ ಕಲಾಪದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಸಿ.ಟಿ.ರವಿ ಅವರು, “ವಾಲ್ಮೀಕಿ ನಿಗಮದ ಹಗರಣ ಪೂರ್ವನಿಯೋಜಿತವಾಗಿದ್ದು, ಮೊದಲೇ ಇ ಸ್ಟಾಂಪ್ ಪೇಪರ್ ಖರೀದಿ ಮಾಡಿ, ಒಂದೇ ದಿನದಲ್ಲಿ ಸಾಲಕ್ಕೆ ಅರ್ಜಿ ಹಾಕಿ, ಸೆಕ್ಯುರಿಟಿ ಓವರ್ ಡ್ರಾಫ್ಟ್ ತೆಗೆದುಕೊಂಡು ಹಣ ಪಡೆಯಲಾಗಿದೆ” ಎಂಬ ವಿಚಾರ ಪ್ರಸ್ತಾಪಿಸಿದರು.

ಇದಕ್ಕೆ ಪ್ರತ್ಯುತ್ತರ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಿ.ಟಿ ರವಿ ಅವರು ಅಕ್ರಮದ ಬಗ್ಗೆ ಮಾತನಾಡುತ್ತಾ ಅಕ್ರಮ ಮಾಡಿದವರ ಒಂದು ಕೂಟ ಇದೆ ಎಂದೆಲ್ಲಾ ಪ್ರಸ್ತಾಪ ಮಾಡಿದ್ದಾರೆ. ಬ್ಯಾಂಕಿನಲ್ಲಿ ಆಗಿರುವ ಅಕ್ರಮದ ವಿಚಾರ ಪ್ರಸ್ತಾಪಿಸಿದ್ದಾರೆ. ಅಕ್ರಮವಾಗಿ ಬ್ಯಾಂಕಿಗೆ ವರ್ಗಾವಣೆಯಾದ ಹಣದ ಮೇಲೆ ಒಂದೇ ದಿನದಲ್ಲಿ ಸಾಲಕ್ಕೆ ಅರ್ಜಿ ಹಾಕಿದರು, ಓವರ್ ಡ್ರಾಫ್ಟ್ ತೆಗೆದುಕೊಂಡು ಹಣ ಬಿಡಿಸಿಕೊಂಡರು ಎಂದೆಲ್ಲ ವಿವರಿಸಿದ್ದಾರೆ. ಬ್ಯಾಂಕಿನಲ್ಲಿ ಒಂದೇ ದಿನದಲ್ಲಿ ಇಷ್ಟೆಲ್ಲಾ ಆಗಿದೆ ಎಂದರೆ ಇಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಸಹ ಭಾಗಿಯಾಗಿದೆ ಎಂದು ಅರ್ಥವಲ್ಲವೇ? ಹೀಗಾಗಿ ನಾನು ಇದರಲ್ಲಿ ದೆಹಲಿಯ ಸನ್ಮಾನ್ಯ ಕೇಂದ್ರ ಸಚಿವರು ಭಾಗಿಯಾಗಿದ್ದಾರೆ ಎಂದು ಹೇಳಲು ಆಗುತ್ತದೆಯೇ?” ಎಂದು ಪ್ರಶ್ನೆಸಿದರು.

ಇದನ್ನೂ ಓದಿ | Uttara Kannada News: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ; ಕಾಗೇರಿ

“ಯಾರೋ ಅಧಿಕಾರಿ ಮಾಡಿದ ತಪ್ಪಿಗೆ ಸಚಿವರ ಮೇಲೆ ಆರೋಪ ಹೊರಿಸಲು ಆಗುವುದಿಲ್ಲ. ಮಂತ್ರಿಗಳು, ಶಾಸಕರು ಅಕ್ರಮಗಳಲ್ಲಿ ಭಾಗಿಯಾಗಿದ್ದರೆ ಯಾವುದೇ ಕಾರಣಕ್ಕೂ ನಾವು ಅದಕ್ಕೆ ಬೆಂಬಲವಾಗಿ ನಿಲ್ಲುವುದಿಲ್ಲ. ಈ ಪ್ರಕರಣದಲ್ಲಿ ನಮ್ಮ ಸರ್ಕಾರ ನಿರ್ದಾಕ್ಷಿಣ್ಯವಾಗಿ ನಡೆದುಕೊಂಡು, ತನಿಖಾ ತಂಡ ರಚನೆ ಮಾಡಿದೆ. ತನಿಖಾ ತಂಡವು ಹಣವನ್ನು ಮರಳಿ ಪಡೆದಿದೆ. ಮಾಜಿ ಮಂತ್ರಿಗಳಿಗೆ ಹಾಗೂ ಶಾಸಕರಿಗೆ ನೋಟಿಸ್ ನೀಡಿದೆ. ಎಸ್ ಐಟಿ ಯಾವ ಕ್ರಮ ಬೇಕಾದರೂ ತೆಗೆದುಕೊಳ್ಳಲಿ. ಸಿಬಿಐ ಸೇರಿದಂತೆ ಯಾರು ಬೇಕಾದರೂ ಬಂದು ತನಿಖೆ ಮಾಡಲಿ. ಆದರೆ ನೀವು ಅದಕ್ಕಿಂತ ಮುಂಚಿತವಾಗಿ ಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿಸಿದರೆ ಹೇಗೆ? ನೀವು ಯಾವ ದೃಷ್ಟಿಕೋನದಲ್ಲಿ ಸರಕಾರ ಆರೋಪಿಗಳ ರಕ್ಷಣೆ ಮಾಡುತ್ತಾ ಇದೆ ಎಂದು ಹೇಳಲು ಹೊರಟಿದ್ದೀರಿ ಎಂದು ನನಗೆ ತಿಳಿದಿದೆ. ನೀವು ಅವರ ಹೆಸರು ಹೇಳಿ. ನಾನು ಸಹ ನನಗೆ ಗೊತ್ತಿರುವ ಹೆಸರುಗಳನ್ನು ಹೇಳುತ್ತೇನೆ” ಎಂದು ಸಿ.ಟಿ.ರವಿ ಅವರಿಗೆ ಕುಟುಕಿದರು.

ಕಲಾಪದ ನಡುವೆ ವಿರೋಧ ಪಕ್ಷದವರ ದೋಷಗಳನ್ನು ಕುಳಿತಲ್ಲೇ ತಿದ್ದಿದ ಸಿಎಂ

7th Pay Commission

ಬೆಂಗಳೂರು: 16ನೇ ವಿಧಾನಸಭೆಯ ನಾಲ್ಕನೇ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣ ಕುರಿತಂತೆ ಕಲಾಪದಲ್ಲಿ ಆಡಿದ ಪ್ರತೀ ಮಾತುಗಳನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಳಿಸಿಕೊಂಡರು.

ಸೋಮವಾರ ಮಧ್ಯಾಹ್ನ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರಿಂದ ಮಂಗಳವಾರ ರಾತ್ರಿ ಜೆಡಿಎಸ್ ನ ಶಾರದಾ ಪೂರ್ಯಾನಾಯ್ಕ್ ಮತ್ತು ಬಿಜೆಪಿಯ ಅರವಿಂದ್ ಬೆಲ್ಲದ್ ಅವರು ಮಾತನಾಡುವವರೆಗೂ ಪ್ರತಿಯೊಬ್ಬರ ಮಾತನ್ನೂ ಕೇಳಿಸಿಕೊಂಡರು.

ಎರಡೂ ದಿನದಲ್ಲಿ ಆರ್.ಅಶೋಕ್ ಅವರ ಸುದೀರ್ಘ ನಾಲ್ಕು ಗಂಟೆಗಳ ಮಾತಿನ ಸಮೇತ ಸ್ವಪಕ್ಷದವರ ಮತ್ತು ವಿರೋಧ ಪಕ್ಷದವರ ಮಾತುಗಳನ್ನು ಕೇಳಿಸಿಕೊಂಡರು. ಕುಳಿತ ಜಾಗದಿಂದ ಕದಲದಂತೆ ಶಾಂತಚಿತ್ತವಾಗಿ ಪ್ರತಿಯೊಬ್ಬರ ಮಾತನ್ನೂ ‘ಪಿನ್ ಟು ಪಿನ್’ ಕೇಳಿಸಿಕೊಂಡ ಸಿದ್ದರಾಮಯ್ಯ ಅವರು, ಕಲಾಪದ ನಡುವೆ ವಿರೋಧ ಪಕ್ಷದವರ factual errors ಗಳನ್ನು ಕುಳಿತಲ್ಲೇ ತಿದ್ದುತ್ತಾ ಮುತ್ಸದ್ದಿತನ‌ ಮೆರೆದರು.

ಇದನ್ನೂ ಓದಿ | Manikanta Rathod: ಅನ್ನ ಭಾಗ್ಯ ಅಕ್ಕಿ ಕಳವು ಕೇಸ್‌ನಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

ವಿರೋಧ ಪಕ್ಷದವರ ಎಂಟತ್ತು ಗಂಟೆಗಳ ಆರೋಪ, ದಾಳಿ, ಆಕ್ರೋಶದ ನುಡಿಗಳನ್ನು ಬಹುತೇಕ ಎಲ್ಲವನ್ನೂ ಹೆಚ್ಚಿನ ಅಡ್ಡಿ ಪಡಿಸದೆ ಮುಖ್ಯಮಂತ್ರಿಗಳು ಮತ್ತು ಆಡಳಿತ ಪಕ್ಷದ ಸದಸ್ಯರು ಆಲಿಸಿ ಸದನದ ಘನತೆ ಹೆಚ್ಚಿಸಿದರು. ವಾಲ್ಮೀಕಿ ನಿಗಮ ಪ್ರಕರಣದ ವಿರೋಧ ಪಕ್ಷದವರ ಎಲ್ಲಾ ಆರೋಪ ಮತ್ತು ಮಾತುಗಳಿಗೆ ಮುಖ್ಯಮಂತ್ರಿಗಳು ಗುರುವಾರ ಉತ್ತರ ನೀಡಲಿದ್ದಾರೆ.

Continue Reading

ಕರ್ನಾಟಕ

Assembly Session: ಲಾರ್ವಾ ಸರ್ವೇ; ಜಿಪಿಎಸ್ ಇಲ್ಲದ ಹಳೆ ಫೋಟೋ ತೋರಿಸಿ ಕೋಟ್ಯಂತರ ರೂ. ಮೋಸ; ಶರವಣ ಆರೋಪ

Assembly Session: ಲಾರ್ವಾ ಸಮೀಕ್ಷೆಯ ಜಿಪಿಎಸ್ ಇಲ್ಲದ ಹಳೇ ಫೋಟೋಗಳನ್ನು ತೋರಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳನ್ನು ಮೋಸ ಮಾಡುತ್ತಿದ್ದಾರೆ. ಇದು ನಾಗರಿಕರ ಆರೋಗ್ಯದ ಜತೆ ಚೆಲ್ಲಾಟ ನಡೆಸಿದಂತೆ. ಇಂತಹ ತಪ್ಪುಗಳು ಪುನರಾವರ್ತಿಸದಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಹಾಗೂ ತಪ್ಪುಗಳು ಪುನರಾವರ್ತಿಸಿದಲ್ಲಿ ಅಂತಹ ಅಧಿಕಾರಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂಎಲ್‌ಸಿ ಟಿ.ಎ. ಶರವಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.

VISTARANEWS.COM


on

Larva survey Show the old photo without GPS and get crores of rupees to the government Cheating Alleged by MLC TA Sharavana
Koo

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳು ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಶೂನ್ಯ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ (Assembly Session) ಪ್ರಸ್ತಾಪಿಸಿದರು.

ಇತ್ತೀಚಿಗೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವುದು ಜನರಲ್ಲಿ ಭಯ ಹುಟ್ಟಿಸುತ್ತಿದೆ. ಮಳೆಗಾಲದಲ್ಲಿ ಸೊಳ್ಳೆಗಳ ಸಂಖ್ಯೆ ಹೆಚ್ಚುವುದರಿಂದ ಡೆಂಗ್ಯೂ, ಮಲೇರಿಯಾ, ಚಿಕನ್‌ಗುನ್ಯಾದಂತಹ ರೋಗಗಳು ಜಾಸ್ತಿಯಾಗುತ್ತವೆ. ಈ ರೋಗಗಳ ನಿಯಂತ್ರಣಕ್ಕೆ ಪ್ರತಿ ವರ್ಷ ಸರ್ಕಾರ ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ.

ಇದನ್ನೂ ಓದಿ: Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

ಸರ್ಕಾರಕ್ಕೆ ಕೋಟ್ಯಂತರ ರೂ. ಮೋಸ

ಈ ಸಮೀಕ್ಷೆ ಮಾಡಲು ಪ್ರತಿ ಮಳೆಗಾಲದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರನ್ನೊಳಗೊಂಡ ತಂಡ ರಚಿಸಿ ಸಮೀಕ್ಷೆ ನಡೆಸಲಾಗುತ್ತದೆ. ಈ ಸಂಬಂಧ ನಗರ ಪ್ರದೇಶಗಳಲ್ಲಿ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶುಕ್ರವಾರ ಆರೋಗ್ಯ ನಿರೀಕ್ಷಣಾಧಿಕಾರಿಗಳು (HIO) ಮತ್ತು ಆರೋಗ್ಯ ಸುರಕ್ಷತಾಧಿಕಾರಿಗಳು (PHCO) ಲಾರ್ವಾ ಸಮೀಕ್ಷೆ ನಡೆಸುತ್ತಾರೆ. ಮನೆ-ಮನೆಗೆ ತೆರಳಿ ಸಮೀಕ್ಷೆ ಮಾಡಿ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು ಈ ಸಮೀಕ್ಷೆಯ ಮೂಲ ಉದ್ದೇಶ. ಆದರೆ ಇವರಿಗೆ ಒಂದು ದಿನಕ್ಕೆ ತಲಾ ತಿಂಗಳಿಗೆ 300 ರೂ. ಗಳನ್ನು ಕೊಡಲಾಗುತ್ತಿದೆ ಎಂದು ಹೇಳಿಕೊಳ್ಳುತ್ತಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಪಿಎಸ್ ಇಲ್ಲದ ಹಳೆಯ ಫೋಟೋಗಳನ್ನು ತೋರಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿಗಳನ್ನು ಮೋಸ ಮಾಡುತ್ತಿದ್ದಾರೆ ಎಂದು ಟಿ. ಎ. ಶರವಣ ಆರೋಪಿಸಿದರು.

ಇದನ್ನೂ ಓದಿ: Assembly Session: ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ; ಆರ್‌. ಅಶೋಕ್‌ ಆಗ್ರಹ

ಇದು ನಾಗರಿಕರ ಆರೋಗ್ಯದ ಜತೆ ಚೆಲ್ಲಾಟ ನಡೆಸಿದಂತೆ, ಇಂತಹ ತಪ್ಪುಗಳು ಪುನರಾವರ್ತಿಸದಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಹಾಗೂ ತಪ್ಪುಗಳು ಪುನರಾವರ್ತಿಸಿದಲ್ಲಿ ಅಂತಹ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಂಎಲ್‌ಸಿ ಟಿ.ಎ. ಶರವಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Continue Reading

ಕರ್ನಾಟಕ

Road Accident: ಕೊಡಗಿನ ಸುಂಟಿಕೊಪ್ಪ ಬಳಿ ಟಿಪ್ಪರ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ದುರ್ಮರಣ

Road Accident: ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೊಡಗರ ಹಳ್ಳಿಯಲ್ಲಿ ಭೀಕರ ಅಪಘಾತ ನಡೆದಿದೆ.

VISTARANEWS.COM


on

Road Accident
Koo

ಕೊಡಗು: ಬೈಕ್ ಹಾಗೂ‌ ಟಿಪ್ಪರ್ ನಡುವೆ ಭೀಕರ ಅಪಘಾತ ನಡೆದು, ಇಬ್ಬರು ಸವಾರರು ದುರ್ಮರಣ ಹೊಂದಿರುವ ಘಟನೆ (Road Accident) ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೊಡಗರ ಹಳ್ಳಿಯಲ್ಲಿ ನಡೆದಿದೆ. ಮಂಜು (25) ಹಾಗೂ ರಕ್ಷಿತ್ (24) ಮೃತರು.

ಸುಂಟಿಕೊಪ್ಪದಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಕುಶಾಲನಗರದಿಂದ ಮಡಿಕೇರಿ ಕಡೆ ಬರುತ್ತಿದ್ದ ಟಿಪ್ಪರ್ ಡಿಕ್ಕಿಯಾಗಿವೆ, ಇದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

ಓವರ್ ಟೇಕ್ ಮಾಡಲು ಹೋಗಿ ರಸ್ತೆ ಪಕ್ಕದ ತಗ್ಗಿಗೆ ಬಿದ್ದ ಬೈಕ್; ಇಬ್ಬರಿಗೆ ಗಾಯ

ಬಾಗಲಕೋಟೆ: ಓವರ್ ಟೇಕ್ ಮಾಡಲು ಹೋಗಿ ರಸ್ತೆ ಪಕ್ಕದ ತಗ್ಗಿಗೆ ಬೈಕ್ ಬಿದ್ದ ಹಿನ್ನೆಲೆಯಲ್ಲಿ ಪಿಯುಸಿ ಓದುವ ಇಬ್ಬರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಬೈಕ್‌ನಿಂದ ಬಿದ್ದು ಕೈ ಮುರಿದು ಏಳೋಕಾಗದೇ ಸ್ಥಳದಲ್ಲೇ ಓರ್ವ ವಿದ್ಯಾರ್ಥಿ ನರಳಾಡುತ್ತಿದ್ದ. ಮತ್ತೋರ್ವನ ಮುಖ, ಹಣೆ, ತಲೆ, ಮೂಗಿಗೆ ಗಾಯಗಳಾಗಿ ರಕ್ತಸ್ರಾವವಾಗುತ್ತಿತ್ತು.

ಬಾದಾಮಿ ತಾಲೂಕಿನ ಹಾಲಿಗೇರಿ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಬಸಯ್ಯ ಸೂಳಿಕೇರಿ (17), ಪ್ರಶಾಂತ್ (17) ಎಂಬ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಕಾಲೇಜು ಮುಗಿಸಿ ಕೆರೂರು ಪಟ್ಟಣದಿಂದ ಮನೆಗೆ ಹೋಗುವ ವೇಳೆ ಅಪಘಾತ ನಡೆದಿದೆ.

ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

ರಾಯಚೂರು: ರಾಯಚೂರಿನಲ್ಲಿ ಮೊಹರಂ ಆಚರಣೆ ವೇಳೆ ಕೊಂಡ ಹಾಯುವಾಗ (Muharram 2024) ವ್ಯಕ್ತಿಯೊಬ್ಬ ಆಯತಪ್ಪಿ ಬಿದ್ದು ಸುಟ್ಟು ಭಸ್ಮವಾಗಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಯಮನಪ್ಪ ನಾಯಕ್ (45)ಮೃತ ದುರ್ದೈವಿ.

ನಿಗಿ ನಿಗಿ ಕೆಂಡದಲ್ಲಿ ಬೇಯುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮೊಹರಂ ಹಬ್ಬ ಆಚರಣೆ ವೇಳೆ ಕೊಂಡ ಹಾಯುವುದು ಪದ್ಧತಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿದೆ. ಅದರಂತೆ ಬೆಂಕಿ ಹಾಯಲು ಯಮನಪ್ಪ ಮುಂದಾಗಿದ್ದರು. ಕೊಂಡ ಹಾಯುವಾಗ ಆಯತಪ್ಪಿ ಬೆಂಕಿಯೊಳಗೆ ಬಿದ್ದ ಪರಿಣಾಮ ಸುಟ್ಟುಕರಕಲಾಗಿದ್ದಾರೆ.

ಕೂಡಲೇ ಅಲ್ಲಿದ್ದವರು ಬೆಂಕಿ ಹಾರಿಸಲು ನೀರು ಎರಚಿ ರಕ್ಷಣೆ ಮುಂದಾದರೂ, ಆದರೆ ತೀವ್ರ ಬೆಂಕಿ ಆವರಿಸಿ ಯಮನಪ್ಪ ಸುಟ್ಟುಭಸ್ಮವಾದರು. ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್‌ರಿಂದ ಲಾಠಿ ಚಾರ್ಜ್

Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

ಮೊಹರಂ ಹಬ್ಬದ ಆಚರಣೆ ವೇಳೆ ಪೊಲೀಸ್‌ರಿಂದ ಲಾಠಿ ಚಾರ್ಜ್ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪಾಶ್ಚಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ಪಾಶ್ಚಾಪುರ ಗ್ರಾಮದ ನಡುವಿನ ಪೇಟೆ ಬಳಿ ಬಂದಾಗ ಏಕಾಏಕಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಎರಡು ದೇವರ ಭೇಟಿ ಸಂದರ್ಭದಲ್ಲಿ ಟೊನ್ನೆಬಾವು, ಕರಬಾಲ ಎಂಬ ಸಂಪ್ರದಾಯದ ಆಚರಣೆ ವೇಳೆ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಯಮಕನಮರಡಿ ಪೊಲೀಸ್ ಠಾಣೆಯ ಎಎಸ್‌ಐ ಮುರಗೋಡ ಹಾಗೂ ಓರ್ವ ಪೋಲಿಸ್ ಪೇದೆ ಮೇಲೆ ಹಲ್ಲೆ ನಡೆಸಲಾಗಿದೆ. ಉದ್ದೇಶಪೂರ್ವಕವಾಗಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪಿದೆ.

Continue Reading
Advertisement
Urfi Javed Steps Out Drunk For Third Time In A Month
ವೈರಲ್ ನ್ಯೂಸ್2 mins ago

Urfi Javed: ಮತ್ತೆ ಕುಡಿದು ತೇಲಾಡಿದ ಉರ್ಫಿ ಜಾವೇದ್; ವಿಡಿಯೊ ವೈರಲ್‌!

NMMS scholarship
ಕರ್ನಾಟಕ28 mins ago

NMMS Scholarship: ಎನ್‌ಎಂಎಂಎಸ್‌ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ ಯಾವಾಗ, ಅರ್ಜಿ ಸಲ್ಲಿಕೆ ಹೇಗೆ?

The Olympic Games
ಕ್ರೀಡೆ30 mins ago

The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?

jobs for kannadigas cm siddaramaiah
ಪ್ರಮುಖ ಸುದ್ದಿ35 mins ago

CM Siddaramaiah: ಖಾಸಗಿ ಕೈಗಾರಿಕೆಗಳ ಶೇ.100 ಉದ್ಯೋಗ ಕನ್ನಡಿಗರಿಗೆ: ಸಿದ್ದರಾಮಯ್ಯ ಕ್ಯಾಬಿನೆಟ್‌ ನಿರ್ಣಯ

Valmiki Corporation Scam
ಕರ್ನಾಟಕ39 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

Niveditha Gowda new reels with brother
ಸ್ಯಾಂಡಲ್ ವುಡ್1 hour ago

Niveditha Gowda: ನಾನೇನು ಬಾತ್‌ರೂಮ್‌ ಸಿಂಗರ್‌ ಅಲ್ಲ! ಚಂದನ್‌ ಶೆಟ್ಟಿಗೆ ಟಾಂಗ್‌ ಕೊಟ್ರಾ ನಿವೇದಿತಾ ಗೌಡ?

Gold Rate Today
ಚಿನ್ನದ ದರ1 hour ago

Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ; ಇಂದಿನ ದರ ಇಷ್ಟಿದೆ

IND vs SL
ಕ್ರೀಡೆ1 hour ago

IND vs SL: ಲಂಕಾ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ

gt world mall 2
ಪ್ರಮುಖ ಸುದ್ದಿ1 hour ago

GT World Mall: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ ಮುಂದೆ ಪಂಚೆ ಉಟ್ಟು ಪ್ರತಿಭಟನೆ, ಕ್ಷಮೆ ಕೇಳಿದ ಮಾಲೀಕ

Made In India
ದೇಶ2 hours ago

Made In India: ಜಾಗತಿಕವಾಗಿ ಪ್ರಭಾವ ಬೀರಿದ ʼಮೇಡ್‌ ಇನ್‌ ಇಂಡಿಯಾʼ ಉತ್ಪನ್ನಗಳು; ಪ್ರಧಾನಿ ಮೋದಿ ಮೆಚ್ಚುಗೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌