Gautam Gambhir : ಬೌಲಿಂಗ್​, ಬ್ಯಾಟಿಂಗ್​ ಕೋಚ್​ಗಳ ಆಯ್ಕೆಯಲ್ಲಿ ಗಂಭೀರ್​ ಬೇಡಿಕೆಗಳನ್ನು ತಿರಸ್ಕರಿಸಿದ ಬಿಸಿಸಿಐ - Vistara News

ಪ್ರಮುಖ ಸುದ್ದಿ

Gautam Gambhir : ಬೌಲಿಂಗ್​, ಬ್ಯಾಟಿಂಗ್​ ಕೋಚ್​ಗಳ ಆಯ್ಕೆಯಲ್ಲಿ ಗಂಭೀರ್​ ಬೇಡಿಕೆಗಳನ್ನು ತಿರಸ್ಕರಿಸಿದ ಬಿಸಿಸಿಐ

Gautam Gambhir :ಭಾರತೀಯ ಕೋಚಿಂಗ್ ಸಿಬ್ಬಂದಿಯಲ್ಲಿ ಸ್ಥಾನ ಪಡೆಯಬಲ್ಲ ವ್ಯಕ್ತಿ ನಾಯರ್ ಆಗಿರಬಹುದು. ಅವರು ಭಾರತಕ್ಕಾಗಿ ಕೇವಲ ಮೂರು ಏಕದಿನ ಪಂದ್ಯಗಳನ್ನು ಆಡಿದ್ದಾರೆ ಮತ್ತು ಕೋಚಿಂಗ್ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೆ ಏರಿದ್ದಾರೆ. ಐಪಿಎಲ್​ನಲ್ಲಿ ಕೆಕೆಆರ್​ಗೆ ಸಹಾಯಕ ಕೋಚ್ ಮತ್ತು ಟ್ಯಾಲೆಂಟ್ ಸ್ಕೌಟ್ ಆಗಿ ಇದ್ದರು. ದಿನೇಶ್ ಕಾರ್ತಿಕ್ ಮತ್ತು ಶ್ರೇಯಸ್ ಅಯ್ಯರ್ ಅವರಂತಹ ಆಟಗಾರರ ಪುನರುತ್ಥಾನಕ್ಕೆ ಅವರು ಕಾರಣರಾಗಿದ್ದಾರೆ.

VISTARANEWS.COM


on

Gautam Gambhir
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಹುಲ್ ದ್ರಾವಿಡ್ ಬದಲಿಗೆ ಗೌತಮ್ ಗಂಭೀರ್ (Gautam Gambhir) ಅವರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಿಸಲಾಗಿದ್ದು, ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಅವರು ಸಜ್ಜಾಗಿದ್ದಾರೆ. ಅವರು ತಮ್ಮ ಜತೆ ಕೆಲಸ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮುಂದೆ ನಿರ್ದಿಷ್ಟ ಕೋಚಿಂಗ್ ವ್ಯವಸ್ಥೆಯನ್ನು ಕೋರಿದ್ದಾರೆ ಎಂದು ವರದಿಯಾಗಿದೆ. ಮಾರ್ನೆ ಮಾರ್ಕೆಲ್ ಮತ್ತು ಅಭಿಷೇಕ್ ನಾಯರ್ ಅವರನ್ನು ಕ್ರಮವಾಗಿ ಬೌಲಿಂಗ್ ಮತ್ತು ಬ್ಯಾಟಿಂಗ್ ತರಬೇತುದಾರರಾಗಿ ನೇಮಕ ಮಾಡುವಂತೆ ಮ್ಯಾನೇಜ್ಮೆಂಟ್ ವಿನಂತಿಸಿದರು ಎಂದು ವರದಿಯಾಗಿತ್ತು.

ವರದಿಗಳ ಪ್ರಕಾರ, ಬಿಸಿಸಿಐ ಅವರ ಬೇಡಿಕೆಗಳನ್ನು ರದ್ದು ಮಾಡಿದೆ. ವಿಶೇಷವೆಂದರೆ, ಗಂಭೀರ್ ಈ ಹಿಂದೆ ವಿನಯ್ ಕುಮಾರ್ ಮತ್ತು ಲಕ್ಷ್ಮೀಪತಿ ಬಾಲಾಜಿ ಅವರನ್ನು ಬೌಲಿಂಗ್ ತರಬೇತುದಾರರಾಗಿ ಬೇಕು ಎಂದು ಕೋರಿದ್ದರು. ಮೊದಲ ಸುತ್ತಿನ ಚರ್ಚೆಯ ಸಮಯದಲ್ಲಿ ಮ್ಯಾನೇಜ್ಮೆಂಟ್ ಈ ವಿನಂತಿಯನ್ನು ತಡೆಹಿಡಿದಿತ್ತು. ಇದಲ್ಲದೆ ಮಾಜಿ ಆರಂಭಿಕ ಆಟಗಾರ ರಿಯಾನ್ ಟೆನ್ ಡೊಸ್ಚಾಟ್ ಮತ್ತು ಜಾಂಟಿ ರೋಡ್ಸ್ ಅವರನ್ನು ಫೀಲ್ಡಿಂಗ್ ತರಬೇತುದಾರರಾಗಿ ಹೊಂದುವ ಆಯ್ಕೆಗಳನ್ನು ಕೋರಿದ್ದರು. ಆದರೆ ಅಂತಿಮವಾಗಿ ಅದನ್ನು ತಿರಸ್ಕರಿಸಲಾಯಿತು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ವಿನಯ್ ಮತ್ತು ಬಾಲಾಜಿ ಗಂಭೀರ್ ಅವರ ಜತೆ ಕೋಲ್ಕತಾ ನೈಟ್ ರೈಡರ್ಸ್ ಬಳಗದಲ್ಲಿ ಇದ್ದರು.

ಇದನ್ನೂ ಓದಿ: ICC T20 Ranking: ಟಿ20 ರ್ಯಾಂಕಿಂಗ್​ನಲ್ಲಿ ಭರ್ಜರಿ ಬಡ್ತಿ ಪಡೆದ ಯಶಸ್ವಿ ಜೈಸ್ವಾಲ್​, ಶುಭ್​ಮನ್​ ಗಿಲ್​

ಭಾರತೀಯ ಕೋಚಿಂಗ್ ಸಿಬ್ಬಂದಿಯಲ್ಲಿ ಸ್ಥಾನ ಪಡೆಯಬಲ್ಲ ವ್ಯಕ್ತಿ ನಾಯರ್ ಆಗಿರಬಹುದು. ಅವರು ಭಾರತಕ್ಕಾಗಿ ಕೇವಲ ಮೂರು ಏಕದಿನ ಪಂದ್ಯಗಳನ್ನು ಆಡಿದ್ದಾರೆ ಮತ್ತು ಕೋಚಿಂಗ್ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೆ ಏರಿದ್ದಾರೆ. ಐಪಿಎಲ್​ನಲ್ಲಿ ಕೆಕೆಆರ್​ಗೆ ಸಹಾಯಕ ಕೋಚ್ ಮತ್ತು ಟ್ಯಾಲೆಂಟ್ ಸ್ಕೌಟ್ ಆಗಿ ಇದ್ದರು. ದಿನೇಶ್ ಕಾರ್ತಿಕ್ ಮತ್ತು ಶ್ರೇಯಸ್ ಅಯ್ಯರ್ ಅವರಂತಹ ಆಟಗಾರರ ಪುನರುತ್ಥಾನಕ್ಕೆ ಅವರು ಕಾರಣರಾಗಿದ್ದಾರೆ. ಇದಲ್ಲದೆ, ಉದಯೋನ್ಮುಖ ಪ್ರತಿಭೆ ರಿಂಕು ಸಿಂಗ್ ಅವರನ್ನು ಗುರುತಿಸಿ ಮಾರ್ಗದರ್ಶನ ನೀಡಿದವರು ಅವರು ಎಂದು ಹೇಳಲಾಗುತ್ತಿದೆ.

ಮುಖ್ಯ ತರಬೇತುದಾರರ ಆಯ್ಕೆಗಳನ್ನು ಈ ಹಿಂದೆ ಪರಿಗಣಿಸಲಾಗಿತ್ತು

ಗೌತಮ್ ಗಂಭೀರ್ ಅವರ ಬೇಡಿಕೆಗಳಿಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳಿಗೆ ವ್ಯತಿರಿಕ್ತವಾಗಿ, ಭಾರತದ ಮಾಜಿ ತರಬೇತುದಾರರು ಯಾವಾಗಲೂ ತಮಗೆ ಬೇಕಾದ ಸಿಬ್ಬಂದಿಯನ್ನೇ ಪಡೆದುಕೊಂಡಿದ್ದರು. ಆಯ್ಕೆಗಳನ್ನು ಬಿಸಿಸಿಐ ಮನ್ನಿಸಿತ್ತು. ಉದಾಹರಣೆಗೆ ಭಾರತದ ಪ್ರಸ್ತುತ ಬೌಲಿಂಗ್ ಮತ್ತು ಫೀಲ್ಡಿಂಗ್ ಕೋಚ್ ಪರಾಸ್ ಮಾಂಬ್ರೆ ಮತ್ತು ಟಿ ದಿಲೀಪ್ ಅವರು ದ್ರಾವಿಡ್ ಅವರ ನೇರ ಆಯ್ಕೆಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Travel Influencer : ರೀಲ್ಸ್​ ಮಾಡುತ್ತಲೇ ಜಲಪಾತದ ಕಮರಿಗೆ ಬಿದ್ದು ಪ್ರಾಣಬಿಟ್ಟ 26 ವರ್ಷದ ಯುವತಿ

Travel Influencer

VISTARANEWS.COM


on

Koo

ರಾಯಗಢ: ಮಹಾರಾಷ್ಟ್ರದ ರಾಯಗಢ ಬಳಿಯ ಕುಂಭೆ ಜಲಪಾತದಲ್ಲಿ ವಿಡಿಯೊ ಮಾಡುತ್ತಿದ್ದ 26 ವರ್ಷದ ಇನ್ಸ್ಟಾಗ್ರಾಮ್ ಇನ್​ಫ್ಲ್ಯುಯೆನ್ಸರ್ (Travel Influencer)​ ಕಮರಿಗೆ ಬಿದ್ದು ಮೃತಪಟ್ಟಿದ್ದಾರೆ. ಮುಂಬೈ ನಿವಾಸಿ ಅನ್ವಿ ಕಾಮ್ದಾರ್ ರೀಲ್ ಮಾಡುತ್ತಾ 300 ಅಡಿ ಆಳದ ಕಮರಿಗೆ ಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅನ್ವಿ ಜುಲೈ 16 ರಂದು ಏಳು ಸ್ನೇಹಿತರೊಂದಿಗೆ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದರು. ಇಂದು ಬೆಳಿಗ್ಗೆ 10.30ಕ್ಕೆ ವಿಡಿಯೊ ಮಾಡುವಾಗ ಅನ್ವಿ ಆಳವಾದ ಕಮರಿಗೆ ಬಿದ್ದಿದ್ದಾರೆ ಎಂದು ಪೊಲೀಸರಿಗೆ ಹೇಳಿದ್ದಾರೆ.

ಸ್ಥಳೀಯ ಅಧಿಕಾರಿಗಳು ತುರ್ತು ಪರಿಸ್ಥಿತಿಗೆ ತ್ವರಿತವಾಗಿ ಸ್ಪಂದಿಸಿದರು ಮತ್ತು ರಕ್ಷಣಾ ತಂಡವು ಘಟನಾ ಸ್ಥಳಕ್ಕೆ ನೀಡಿ ಯುವತಿಯ ಪತ್ತೆಗಾಗಿ ಶ್ರಮವಹಿಸುತ್ತಿದೆ. ನಾವು ಸ್ಥಳಕ್ಕೆ ತಲುಪಿದ ಕೂಡಲೇ, ಯುವತಿ ಸುಮಾರು 300ರಿಂದ 350 ಅಡಿ ಕೆಳಗೆ ಬಿದ್ದಿದ್ದಾಳೆ ಎಂಬದು ಗೊತ್ತಾಯಿತು. ಅವರು ಗಂಭೀರ ಗಾಯಗೊಂಡಿದ್ದರಿಂದ ಮತ್ತು ಭಾರಿ ಮಳೆಯಾಗುತ್ತಿದ್ದ ಕಾರಣ ಅವಳನ್ನು ಮೇಲಕ್ಕೆತ್ತುವುದು ಕಷ್ಟಕರವಾಗಿತ್ತು. ಬಳಿಕ ಸರಪಳಿಯ ಮೂಲಕ ಅವರನ್ನು ಹೊರತೆಗೆದೆವು ಎಂದು ಅಧಿಕಾರಿಗಳು ಹೊರಟ್ಟಿದ್ದಾರೆ.

ಆರು ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ, ಅನ್ವಿಯನ್ನು ಕಮರಿಯಿಂದ ಹೊರತೆಗೆಯಲಾಯಿತು. ತೀವ್ರ ಗಾಯಗಳಿಂದಾಗಿ ಮನಗಾಂವ್ ಉಪ-ಜಿಲ್ಲಾ ಆಸ್ಪತ್ರೆಯಲ್ಲಿ ನಿಧನಹೊಂದಿದ್ದಾರೆ. ತಹಶೀಲ್ದಾರ್ ಮತ್ತು ಮನಗಾಂವ್ ಪೊಲೀಸ್ ಇನ್​ಸ್ಪೆಕ್ಟರ್​ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಪ್ರವಾಸಿಗರು ಮತ್ತು ನಾಗರಿಕರಿಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ಪ್ರತಿಯೊಬ್ಬರೂ ಪ್ರವಾಸೋದ್ಯಮವನ್ನು ಜವಾಬ್ದಾರಿಯುತವಾಗಿ ಆನಂದಿಸಬೇಕು ಮತ್ತು ಸಹ್ಯಾದ್ರಿ ಶ್ರೇಣಿಗಳ ರಮಣೀಯ ಸೌಂದರ್ಯವನ್ನು ಅನ್ವೇಷಿಸುವಾಗ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Mosquitoes Bite: ಎಣ್ಣೆ ಹೊಡೆಯುವವರನ್ನು ಸೊಳ್ಳೆಗಳು ಕಚ್ಚುವುದು ಹೆಚ್ಚು! ಇದಕ್ಕಿದೆ ವೈಜ್ಞಾನಿಕ ಕಾರಣ!

Continue Reading

ಕ್ರಿಕೆಟ್

Natasa Stankovic : ಹಾರ್ದಿಕ್​ ಪಾಂಡ್ಯಗೆ ಕೈಕೊಟ್ಟು ಸರ್ಬಿಯಾದಲ್ಲಿ ಜಾಲಿ ಟ್ರಿಪ್ ಹೊರಟ ನತಾಶಾ

Natasa Stankovic: ಹಾರ್ದಿಕ್ ಪಾಂಡ್ಯ ನಾನಾ ಸಮಸ್ಯೆಗಳಲ್ಲಿ ಸಿಲುಕಿರುವ ಕಾರಣ ಅವರ ಬದಲಿಗೆ ಸೂರ್ಯಕುಮಾರ್ ಯಾದವ್ ಅವರನ್ನು ಟಿ 20 ಐ ನಾಯಕನನ್ನಾಗಿ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅದೇ ರೀತಿ ವೈಯಕ್ತಿಕ ಕಾರಣಗಳಿಂದಾಗಿ ಹಾರ್ದಿಕ್ ಶ್ರೀಲಂಕಾ ಏಕದಿನ ಸರಣಿಯಲ್ಲಿ ಭಾಗವಹಿಸುತ್ತಿಲ್ಲ ಎನ್ನಲಾಗಿದೆ. ಏತನ್ಮಧ್ಯೆ, ನತಾಶಾ ಮತ್ತು ಅಗಸ್ತ್ಯ ಸೆರ್ಬಿಯಾಗೆ ಹೋಗುವ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Natasa Stankovic
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಹಿಂದಿನ ಆವೃತ್ತಿಯ ಬಳಿಕ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಅವರ ವೈಯಕ್ತಿಕ ಜೀವನದ ಬಗ್ಗೆ ಚರ್ಚೆ ನಡೆಯುತ್ತಿದೆ. ಪತ್ನಿ ನತಾಶಾ ಸ್ಟಾಂಕೋವಿಕ್ (Natasa Stankovic ) ಅವರಿಗೆ ವಿಚ್ಛೇದನ ಕೊಟ್ಟಿದ್ದಾರೆ ಎಂಬುದೇ ಈ ಸುದ್ದಿಗೆ ಮೂಲ. ಆದರೆ, ಇಬ್ಬರೂ ಈ ಬಗ್ಗೆ ಅಧಿಕೃತ ಮಾಹಿತಿ ಕೊಟ್ಟಿಲ್ಲ. ಆದರೆ, ಇಬ್ಬರೂ ಜತೆಯಾಗಿ ಕಾಣಿಸುತ್ತಿಲ್ಲ. ಅನಂತ್​​ ಅಂಬಾನಿ (Ananat Ambani) ಮದುವೆ ವೇಳೆಯೂ ಹಾರ್ದಿಕ್ ಒಬ್ಬರೇ ಪಾಲ್ಗೊಂಡು ಡಾನ್ಸ್ ಮಾಡಿದ್ದರು. ಅಂತೆಯೇ ಇದೀಗ ಇತ್ತೀಚಿನ ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ, ಅವರ ಪತ್ನಿ ನತಾಶಾ ಮಗ ಅಗಸ್ತ್ಯಜತೆ ಸೆರ್ಬಿಯಾಕ್ಕೆ ಹೋಗಿದ್ದಾರೆ. ಈ ಮೂಲಕ ಗಂಡನನ್ನು ಬಿಟ್ಟು ಜಾಲಿ ಟ್ರಿಪ್ ಹೊರಟಿದ್ದಾರೆ ಎನ್ನಲಾಗಿದೆ.

ಹಾರ್ದಿಕ್ ಪಾಂಡ್ಯ ನಾನಾ ಸಮಸ್ಯೆಗಳಲ್ಲಿ ಸಿಲುಕಿರುವ ಕಾರಣ ಅವರ ಬದಲಿಗೆ ಸೂರ್ಯಕುಮಾರ್ ಯಾದವ್ ಅವರನ್ನು ಟಿ 20 ಐ ನಾಯಕನನ್ನಾಗಿ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅದೇ ರೀತಿ ವೈಯಕ್ತಿಕ ಕಾರಣಗಳಿಂದಾಗಿ ಹಾರ್ದಿಕ್ ಶ್ರೀಲಂಕಾ ಏಕದಿನ ಸರಣಿಯಲ್ಲಿ ಭಾಗವಹಿಸುತ್ತಿಲ್ಲ ಎನ್ನಲಾಗಿದೆ. ಏತನ್ಮಧ್ಯೆ, ನತಾಶಾ ಮತ್ತು ಅಗಸ್ತ್ಯ ಸೆರ್ಬಿಯಾಗೆ ಹೋಗುವ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ಚಿತ್ರವಿದೆ

ನತಾಶಾ ತನ್ನ ಪ್ಯಾಕಿಂಗ್​​ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ, “ಇದು ವರ್ಷದ ಆ ಸಮಯ” ಎಂದು ಶೀರ್ಷಿಕೆ ನೀಡಿದ್ದಾರೆ. ಐಪಿಎಲ್ ನಂತರ, ಹಾರ್ದಿಕ್ ಪಾಂಡ್ಯ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ಬೇರ್ಪಡುತ್ತಾರೆ ಎಂಬ ವದಂತಿಗಳು ಹರಡಲು ಪ್ರಾರಂಭಿಸಿದವು. ಐಪಿಎಲ್, ಟಿ 20 ವಿಶ್ವಕಪ್ ಮತ್ತು ಇತ್ತೀಚೆಗೆ ನಡೆದ ಅನಂತ್ ಅಂಬಾನಿ ಮದುವೆಯಲ್ಲಿ ಜೋಡಿ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ.

ಇದನ್ನೂ ಓದಿ: Kapil Dev : ಟಿ20 ವಿಶ್ವ ಕಪ್ ಚಾಂಪಿಯನ್ಸ್​ ಕೊಹ್ಲಿ, ರೋಹಿತ್ ಶ್ಲಾಘಿಸಿದ 1983ರ ವಿಶ್ವ ಕಪ್ ವಿಜೇತ ಕಪಿಲ್​ ದೇವ್​​

ಸೂರ್ಯಕುಮಾರ್ ಯಾದವ್ ನಾಯಕ ?

ವದಂತಿಗಳ ಪ್ರಕಾರ, ಬಿಸಿಸಿಐ ಟಿ 20 ಐ ನಾಯಕತ್ವವನ್ನು ಸೂರ್ಯಕುಮಾರ್ ಯಾದವ್​ಗೆ ಹಸ್ತಾಂತರಿಸಬಹುದು. ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಿಂದ ನಿವೃತ್ತರಾಗುವುದರೊಂದಿಗೆ ಕೊಹ್ಲಿ ಮತ್ತು ಜಡೇಜಾ ಇಬ್ಬರೂ ನಿವೃತ್ತರಾಗುವುದರೊಂದಿಗೆ, ಹಾರ್ದಿಕ್ ಪಾಂಡ್ಯ ಭಾರತ ಮತ್ತು ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್​ನಂತ ಫ್ರಾಂಚೈಸಿಗಳನ್ನು ಮುನ್ನಡೆಸಿದ ಅನುಭವದಿಂದಾಗಿ ಸ್ಪಷ್ಟ ಆಯ್ಕೆಯಂತೆ ಕಾಣುತ್ತಿದ್ದರು. ಆದಾಗ್ಯೂ, ಹಾರ್ದಿಕ್ ಅವರ ಫಿಟ್ನೆಸ್​​ ಬಗ್ಗೆ ಕಳವಳಗಳು ಬಿಸಿಸಿಐಗೆ ಇತರ ಆಯ್ಕೆಗಳನ್ನು ಪರಿಗಣಿಸಲು ಉತ್ತೇಜನ ನೀಡಿದೆ. ಸೂರ್ಯಕುಮಾರ್ ಯಾದವ್ ಶೀಘ್ರದಲ್ಲೇ ಟಿ 20 ಪಂದ್ಯಗಳಲ್ಲಿ ಭಾರತದ ನಾಯಕತ್ವದ ಪಾತ್ರವನ್ನು ತೆಗೆದುಕೊಳ್ಳಬಹುದು ಎಂದು ತೋರುತ್ತದೆ.

Continue Reading

ಪ್ರಮುಖ ಸುದ್ದಿ

Karnataka Jobs Reservation : ಕನ್ನಡಿಗರಿಗೆ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮೀಸಲಾತಿ ಮಸೂದೆಗೆ ತಾತ್ಕಾಲಿಕ ತಡೆ; ಉದ್ಯಮಿಗಳ ಒತ್ತಡ?

Karnataka Jobs Reservation : ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತಗೊಂಡಿತ್ತು. ಪ್ರಮುಖ ಉದ್ಯಮಿಗಳಾದ ಮೋಹನ್ ದಾಸ್ ಪೈ,ಕಿರಣ್ ಮಜುಂದಾರ್ ಅವರು ಈ ಬಗ್ಗೆ ಆಕ್ಷೇಪ ಎತ್ತಿದ್ದರು. ನೆರೆ ರಾಜ್ಯದ ಸರ್ಕಾರಗಳೂ ಇದರ ಬಗ್ಗೆ ತಕರಾರು ಎತ್ತಿದ್ದವು. ಈ ಒತ್ತಡಕ್ಕೆ ಬಗ್ಗಿರುವ ಸರ್ಕಾರ ಮಸೂದಗೆ ತಾತ್ಕಾಲಿಕ ತಡೆಯನ್ನು ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

VISTARANEWS.COM


on

Karnataka Jobs Reservation
Koo

ಬೆಂಗಳೂರು: ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಸಂಪುಟ ಅನುಮೋದನೆ ನೀಡಲಾಗಿದ್ದ ಮಸೂದೆ ಕುರಿತು ಮುಂದಿನ ದಿನಗಳಲ್ಲಿ ಮತ್ತೊಂದು ಬಾರಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತಗೊಂಡಿತ್ತು. ಪ್ರಮುಖ ಉದ್ಯಮಿಗಳಾದ ಮೋಹನ್ ದಾಸ್ ಪೈ,ಕಿರಣ್ ಮಜುಂದಾರ್ ಅವರು ಈ ಬಗ್ಗೆ ಆಕ್ಷೇಪ ಎತ್ತಿದ್ದರು. ನೆರೆ ರಾಜ್ಯದ ಸರ್ಕಾರಗಳೂ ಇದರ ಬಗ್ಗೆ ತಕರಾರು ಎತ್ತಿದ್ದವು. ಈ ಒತ್ತಡಕ್ಕೆ ಬಗ್ಗಿರುವ ಸರ್ಕಾರ ಮಸೂದಗೆ ತಾತ್ಕಾಲಿಕ ತಡೆಯನ್ನು ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಮಸೂದೆಯಲ್ಲೇನಿದೆ?

ಈ ಮಸೂದೆಯಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಸ್ಥಳೀಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುತ್ತದೆ. ಸಾಕಷ್ಟು ಅರ್ಹ ಅಭ್ಯರ್ಥಿಗಳು ಇಲ್ಲದೇ ಇದ್ದರೆ ಸರ್ಕಾರದ ಸಹಯೋಗದೊಂದಿಗೆ ಉದ್ಯಮವು ಮೂರು ವರ್ಷಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಅವರನ್ನು ತೊಡಗಿಸಿಕೊಳ್ಳಬೇಕು. ಪ್ರಸ್ತಾವಿತ ಕಾನೂನಿನ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳ ಕಾಲಾವಕಾಶ ನೀಡಲು ಸರ್ಕಾರ ಯೋಜನೆ ರೂಪಿಸುತ್ತಿದೆ.

ಮೂರು ವರ್ಷಗಳ ಆನಂತರವೂ ಉದ್ಯಮಕ್ಕೆ ಈ ಸಮಸ್ಯೆ ಎದುರಾದರೆ ತರಬೇತಿಯ ಅನಂತರವೂ ಸಾಕಷ್ಟು ಸೂಕ್ತ ಸ್ಥಳೀಯರು ಲಭ್ಯವಾಗದೇ ಇದ್ದರೆ ವಿಚಾರಣೆಯ ಅನಂತರ ಉದ್ಯಮವನ್ನು ಮೀಸಲಾತಿ ನಿಬಂಧನೆಗಳಿಂದ ವಿನಾಯಿತಿ ನೀಡುವ ಸರ್ಕಾರದ ಅಧಿಕಾರವನ್ನು ಮಸೂದೆ ಒದಗಿಸುತ್ತದೆ. ವೃತ್ತಿಪರರನ್ನು ನೇಮಿಸಿಕೊಳ್ಳಲು ಕಂಪೆನಿಗಳಿಗೆ ಅವಕಾಶವನ್ನು ಒದಗಿಸುತ್ತದೆ. ಆದರೆ ಈ ಅವಕಾಶ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 25ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 50ರಷ್ಟು ಸ್ಥಳೀಯರನ್ನು ಭರ್ತಿ ಮಾಡಿದರೆ ಮಾತ್ರ ಸಿಗುತ್ತದೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಇದನ್ನೂ ಓದಿ: Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ?

ಸ್ಥಳೀಯರು ಅಂದರೆ ಯಾರು?

ಕರ್ನಾಟಕದಲ್ಲಿ ಹುಟ್ಟಿರುವ, 15 ವರ್ಷಗಳಿಂದ ರಾಜ್ಯದಲ್ಲಿ ನೆಲೆಸಿರುವ, ಕನ್ನಡ ಭಾಷೆಯನ್ನು ಓದುವುದು ಮತ್ತು ಬರೆಯುವುದನ್ನು ಚೆನ್ನಾಗಿ ತಿಳಿದಿರುವವರನ್ನು ಸ್ಥಳೀಯರು ಎಂದು ಮಸೂದೆಯಲ್ಲಿ ವ್ಯಾಖ್ಯಾನಿಸಲಾಗಿದೆ.
ಈ ಕಾನೂನಿನ ಅಡಿಯಲ್ಲಿ ಪ್ರಯೋಜನವನ್ನು ಬಯಸುವವರು ಕನ್ನಡ ಮಾಧ್ಯಮದಲ್ಲಿ ಹಿರಿಯ, ಮಾಧ್ಯಮಿಕ ಹಂತದಲ್ಲಿ ಓದಿರುವವರು ರಾಜ್ಯ ಸರ್ಕಾರದ ಭಾಷಾ ಪ್ರಾವೀಣ್ಯತೆಯ ಪರೀಕ್ಷೆಯನ್ನು ತೇರ್ಗಡೆಗೊಳಿಸಬೇಕು.

ಆಡಳಿತಾತ್ಮಕ, ಆಡಳಿತಾತ್ಮಕವಲ್ಲದ ಹುದ್ದೆಗಳು ಯಾವುದು?

ಆಡಳಿತಾತ್ಮಕ ಹುದ್ದೆಗಳೆಂದರೆ ನಿರ್ದೇಶಕರನ್ನು ಹೊರತುಪಡಿಸಿ ಮೇಲ್ವಿಚಾರಣೆ, ತಾಂತ್ರಿಕ, ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಪಾತ್ರಗಳಲ್ಲಿನ ಸ್ಥಾನಗಳನ್ನು ಒಳಗೊಂಡಿದೆ. ಆಡಳಿತಾತ್ಮಕವಲ್ಲದ ಹೊರಗುತ್ತಿಗೆ ಉದ್ಯೋಗಗಳು ಸೇರಿದಂತೆ ಕ್ಲೆರಿಕಲ್ ಹುದ್ದೆಗಳು, ಅರೆ ಮತ್ತು ನುರಿತ ಕೆಲಸಗಾರರಂತಹ ಎಲ್ಲಾ ಇತರ ಹುದ್ದೆಗಳನ್ನು ಸೇರಿಸಲಾಗಿದೆ.

ಇದನ್ನು ಯಾರು ಜಾರಿಗೆ ತರುತ್ತಾರೆ?

ಈ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸರ್ಕಾರವು ಏಜೆನ್ಸಿಯನ್ನು ನೇಮಿಸುತ್ತದೆ. ಬಹುತೇಕ ಕಾರ್ಮಿಕ ಇಲಾಖೆಯೇ ಇದನ್ನು ನಿರ್ವಹಿಸಲಿದೆ. ವ್ಯವಸ್ಥಾಪಕ ಮತ್ತು ನಿರ್ವಾಹಕೇತರ ಹುದ್ದೆಗಳ ನೇಮಕಾತಿಗಳ ಕುರಿತು ವರದಿ ಪಡೆಯಲು, ಅನುಸರಣೆ ಇಲ್ಲದಿದ್ದಲ್ಲಿ ವಿಚಾರಣೆ ನಡೆಸಲು ಏಜೆನ್ಸಿಗೆ ಅಧಿಕಾರವಿದೆ. ಕ್ಲೈಮ್‌ಗಳನ್ನು ಪರಿಶೀಲಿಸಲು ಏಜೆನ್ಸಿಯು ಉದ್ಯೋಗದಾತರಿಂದ ಯಾವುದೇ ದಾಖಲೆಗಳನ್ನು ಪಡೆಯಬಹುದು. ಅಗತ್ಯಬಿದ್ದರೆ ಉದ್ಯಮದೊಳಗೆ ಪ್ರವೇಶಿಸಿ ಪರಿಶೀಲಿಸುವ ಅಧಿಕಾರವೂ ಸಂಸ್ಥೆಯ ಅಧಿಕಾರಿಗಳಿಗೆ ಇರುತ್ತದೆ. ಪ್ರಸ್ತಾವಿತ ಕಾನೂನಿನ ಅನುಷ್ಠಾನಕ್ಕಾಗಿ ಪ್ರಾಧಿಕಾರವು ಸಹಾಯಕ ಕಾರ್ಮಿಕ ಆಯುಕ್ತರ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯನ್ನು ನೇಮಿಸಲಿದೆ.

ಕಾನೂನು ಪಾಲನೆಯಾಗದೇ ಇದ್ದರೆ?

ಪ್ರಸ್ತಾವಿತ ಕಾನೂನು ಸರಿಯಾಗಿ ಪಾಲನೆ ಆಗದೇ ಇದ್ದರೆ ಅಥವಾ ಕಾನೂನನ್ನು ಉಲ್ಲಂಘಿಸಿದರೆ ಕನಿಷ್ಠ 10,000 ರೂ.ನಿಂದ ಗರಿಷ್ಠ 25,000 ರೂ.ವರೆಗೆ ದಂಡವನ್ನು ನಿಗದಿಪಡಿಸಲಾಗಿದೆ. ಕಾನೂನಿನ ಉಲ್ಲಂಘನೆ ಮುಂದುವರಿದರೆ ದಂಡದ ಮೊತ್ತವನ್ನು 1 ಲಕ್ಷ ರೂ.ವರೆಗೆ ಹೆಚ್ಚಿಸಲಾಗುತ್ತದೆ. ಜೈಲು ಶಿಕ್ಷೆಯ ಬಗ್ಗೆ ಉಲ್ಲೇಖವಿಲ್ಲ. ಮಸೂದೆಯು ಆರು ತಿಂಗಳವರೆಗೆ ಕಾಲಾವಕಾಶ ನೀಡಲಿದೆ.

ಏನು ಇದರ ಪರಿಣಾಮ?

ಪ್ರಸ್ತಾವಿತ ಈ ಕಾನೂನು ಜಾರಿಯಾದರೆ 1.5 ಮಿಲಿಯನ್ ಉದ್ಯೋಗಿಗಳನ್ನು ಹೊಂದಿರುವ 245 ಬಿಲಿಯನ್ ಡಾಲರ್ ಮೌಲ್ಯದ ಬೆಂಗಳೂರು ತಂತ್ರಜ್ಞಾನ ಉದ್ಯಮದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ಸಿಗಲಿದೆ. ಯಾಕೆಂದರೆ ಇಲ್ಲಿ ಕೆಲಸ ಮಾಡುವ ಹೆಚ್ಚಿನ ಜನರು ಕನ್ನಡೇತರರು. ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ ಎಂಬ ಕೂಗು ಮೊದಲಿನಿಂದಲೂ ಕೇಳಿ ಬರುತ್ತಿದೆ.

ರಾಜ್ಯ ಸರ್ಕಾರದ ಪ್ರಕಾರ ಬೆಂಗಳೂರು ಕರ್ನಾಟಕದ ಆರ್ಥಿಕತೆಗೆ ಶೇ. 43.86ರಷ್ಟು ಕೊಡುಗೆ ನೀಡುತ್ತಿದೆ. ಕಳೆದ ವರ್ಷ ಮಂಡಿಸಲಾದ 2022-23ರ ಬಜೆಟ್‌ನಲ್ಲಿ ರಾಜ್ಯ ಹಣಕಾಸು ಇಲಾಖೆಯ ಅಂದಾಜಿನ ಪ್ರಕಾರ ರಾಷ್ಟ್ರೀಯ ಜಿಡಿಪಿಗೆ ಕರ್ನಾಟಕ ಶೇ. 7ರಷ್ಟು ಕೊಡುಗೆ ನೀಡುತ್ತಿದೆ. ಮಸೂದೆಯಲ್ಲಿನ ನಿರ್ಬಂಧಗಳು ಮುಂದಿನ ಐದು ವರ್ಷಗಳಲ್ಲಿ ಒಂದು ಟ್ರಿಲಿಯನ್ ಡಾಲರ್ ಮೌಲ್ಯದ ರಾಜ್ಯ ಸರ್ಕಾರದ ಯೋಜನೆಗಳ ಮೇಲೆ ಪರಿಣಾಮ ಬೀರಬಹುದು ಎನ್ನುತ್ತಾರೆ ಉದ್ಯಮ ತಜ್ಞರು.

Continue Reading

ಕ್ರೀಡೆ

Kapil Dev : ಟಿ20 ವಿಶ್ವ ಕಪ್ ಚಾಂಪಿಯನ್ಸ್​ ಕೊಹ್ಲಿ, ರೋಹಿತ್ ಶ್ಲಾಘಿಸಿದ 1983ರ ವಿಶ್ವ ಕಪ್ ವಿಜೇತ ಕಪಿಲ್​ ದೇವ್​​

Kapil Dev:

VISTARANEWS.COM


on

Kapil Dev
Koo

ನವದೆಹಲಿ: ಭಾರತದ ಮಾಜಿ ನಾಯಕ ಕಪಿಲ್ ದೇವ್ (Kapil Dev) ಇತ್ತೀಚೆಗೆ ಭಾರತದ ಸ್ಟಾರ್ ಬ್ಯಾಟರ್​ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ಭಾರತೀಯ ಕ್ರಿಕೆಟ್ ತಂಡಕ್ಕೆ ನೀಡಿರುವ ಅಮೂಲ್ಯ ಕೊಡುಗೆಗಳಿಗಾಗಿ ಶ್ಲಾಘಿಸಿದ್ದಾರೆ. ಇಬ್ಬರೂ ಬ್ಯಾಟರ್​ಗಳು ಭಾರತೀಯ ಕ್ರಿಕೆಟ್​ ಕಂಡ ದೊಡ್ಡ ಆಟಗಾರರು. ಇವರಿಬ್ಬರಿಗೆ ಸಮಾನಾದ ಆಟಗಾರರು ಇನ್ಯಾರೂ ಇಲ್ಲ ಎಂದು ಅವರು ಹೇಳಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ಇತ್ತೀಚೆಗೆ ಭಾರತಕ್ಕಾಗಿ ಟಿ 20 ವಿಶ್ವಕಪ್ ಗೆದ್ದ ನಂತರ ಟಿ 20 ಯಿಂದ ನಿವೃತ್ತಿ ಪಡೆದಿದ್ದಾರೆ. ಮೆನ್ ಇನ್ ಬ್ಲೂ ವಿಶ್ವ ಕಪ್​ ಪಂದ್ಯಾವಳಿಯುದ್ದಕ್ಕೂ ಅಜೇಯವಾಗಿ ಉಳಿದಿತ್ತು. ಫೈನಲ್ ಮುಖಾಮುಖಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ 11 ವರ್ಷಗಳ ಬಳಿಕ ವಿಶ್ವ ಕಪ್​ ಟ್ರೋಫಿ ಗೆದ್ದುಕೊಂಡಿತು. ಇದು ಭಾರತೀಯರಲ್ಲಿ ಸಂಚಲನ ಮೂಡಿಸಿದೆ. ಜತೆಗೆ ಕೊಹ್ಲಿ ಮತ್ತು ರೋಹಿತ್ ಅವರ ಅಮೋಘ ಆಟವೂ ಖುಷಿ ತಂದಿದೆ.

ಭಾರತೀಯ ಕ್ರಿಕೆಟ್​ನಲ್ಲಿ ಅವರ ಪ್ರಭಾವದ ಬಗ್ಗೆ ಮಾತನಾಡಿದ ಕಪಿಲ್ ದೇವ್, ಕೊಹ್ಲಿ ಮತ್ತು ರೋಹಿತ್ ಅವರನ್ನು ಸಚಿನ್ ತೆಂಡೂಲ್ಕರ್ ಮತ್ತು ಎಂಎಸ್ ಧೋನಿಗೆ ಹೋಲಿಸಿದ್ದಾರೆ.

“ಭಾರತ ತಂಡದಲ್ಲಿ ವಿರಾಟ್ ಮತ್ತು ರೋಹಿತ್ ಅವರ ಸ್ಥಾನವನ್ನು ಯಾವುದೇ ಸ್ವರೂಪದಲ್ಲಿ ಯಾರೂ ತುಂಬಲು ಸಾಧ್ಯವಿಲ್ಲ. ಅವರು ಭಾರತೀಯ ಕ್ರಿಕೆಟ್​​ನ ದೊಡ್ಡ ಸೇವಕರಾಗಿದ್ದಾರೆ. ಇದು ಅವರಿಗೆ ಸಂತೋಷದ ವಿದಾಯವಾಗಿತ್ತು. ವಿರಾಟ್ ಎಲ್ಲಾ ಸ್ವರೂಪಗಳಲ್ಲಿ ತನ್ನದೇ ಆದ ಸ್ಥಾನಮಾನ ಹೊಂದಿದ್ದಾರೆ. ಅವರನ್ನು ಟಿ 20 ಪಂದ್ಯಗಳಲ್ಲಿ ಖಂಡಿತವಾಗಿಯೂ ಮಿಸ್ ಮಾಡಿಕೊಳ್ಳಲಾಗುತ್ತದೆ. ಇಬ್ಬರೂ ಸಚಿನ್ ತೆಂಡೂಲ್ಕರ್ ಮತ್ತು ಎಂಎಸ್ ಧೋನಿ ಅವರಂತೆಯೇ. ಅವರು ಸರಿದೂಗಿಸಲು ಸಾಧ್ಯವಿಲ್ಲ” ಎಂದು ಕಪಿಲ್ ದೇವ್ ಹೇಳಿದ್ದಾರೆ.

ಭಾರತದ ಸಾಧನೆ ನಿರಂತರ: ಕಪಿಲ್ ದೇವ್

ಮುಂಬರುವ ಶ್ರೀಲಂಕಾ ಪ್ರವಾಸದಿಂದ ಮಾಜಿ ಬ್ಯಾಟರ್​ ಗೌತಮ್ ಗಂಭೀರ್ ಅವರನ್ನು ಭಾರತದ ಹೊಸ ಮುಖ್ಯ ಕೋಚ್ ಆಗಿ ಬಿಸಿಸಿಐ ಇತ್ತೀಚೆಗೆ ಘೋಷಿಸಾಗಿದೆ. ಅವರಿಗೂ ಕಪಿಲ್ ದೇವ್ ಶುಭ ಹಾರೈಸಿದ್ದಾರೆ. ಜೆಗೆ ಭಾರತ ತಂಡಕ್ಕೆ ಶುಭವಾಗಲಿ ಎಂದಿದ್ದಾರೆ.

ಇದನ್ನೂ ಓದಿ: KL Rahul : ಅಮಿರ್​ ಖಾನ್ ಮನೆ ಪಕ್ಕದಲ್ಲೇ 20 ಕೋಟಿ ಫ್ಲ್ಯಾಟ್ ಖರೀದಿಸಿದ ರಾಹುಲ್, ಅಥಿಯಾ ದಂಪತಿ

ಗೌತಮ್ ಗಂಭೀರ್ ಅವರು ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆ ವಹಿಸಿಕೊಂಡಿದ್ದಾರೆ. ನಾನು ಅವರಿಗೆ ಮತ್ತು ತಂಡಕ್ಕೆ ಶುಭ ಹಾರೈಸುತ್ತೇನೆ. ನಾವು ಈ ಹಿಂದೆ ಮಾಡಿದ್ದಕ್ಕಿಂತ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ನಾನು ಭಾರತೀಯ ಆಟಗಾರರಿಗೆ ಶುಭ ಹಾರೈಸಲು ಬಯಸುತ್ತೇನೆ, “ಎಂದು ಕಪಿಲ್ ದೇವ್ ಹೇಳಿದ್ದಾರೆ.

ಮೂರು ಪಂದ್ಯಗಳ ಏಕದಿನ ಮತ್ತು ಮೂರು ಪಂದ್ಯಗಳ ಟಿ 20 ಐ ಸರಣಿಗಾಗಿ ಭಾರತವು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ತಮ್ಮ ಕರ್ತವ್ಯಗಳಿಂದ ವಿಶ್ರಾಂತಿ ನೀಡುವುದರಿಂದ ಸರಣಿಯಿಂದ ಹೊರಗುಳಿಯುವ ನಿರೀಕ್ಷೆಯಿದೆ.

Continue Reading
Advertisement
Oil Tanker Capsizes
ವಿದೇಶ4 mins ago

Oil Tanker Capsizes:ತೈಲ ತುಂಬಿದ್ದ ಹಡಗು ಮುಳುಗಡೆ; ಕಣ್ಮರೆಯಾಗಿದ್ದ 8 ಭಾರತೀಯರು ಸೇರಿ ಒಟ್ಟು 9 ನಾವಿಕರ ರಕ್ಷಣೆ

ಪ್ರಮುಖ ಸುದ್ದಿ18 mins ago

Travel Influencer : ರೀಲ್ಸ್​ ಮಾಡುತ್ತಲೇ ಜಲಪಾತದ ಕಮರಿಗೆ ಬಿದ್ದು ಪ್ರಾಣಬಿಟ್ಟ 26 ವರ್ಷದ ಯುವತಿ

Viral Video
ವೈರಲ್ ನ್ಯೂಸ್28 mins ago

Viral Video: ಹೃದಯಾಘಾತದಿಂದ ಕೆಳಗ್ಗೆ ಬಿದ್ದು ಒದ್ದಾಡುತ್ತಿದ್ದವನ ಪಾಲಿಗೆ ದೇವರಂತೆ ಬಂದ್ಳು! ಈ ಮಹಿಳೆಯ ವಿಡಿಯೋ ಎಲ್ಲೆಡೆ ವೈರಲ್‌

Mosquitoes Bite
ಆರೋಗ್ಯ1 hour ago

Mosquitoes Bite: ಎಣ್ಣೆ ಹೊಡೆಯುವವರನ್ನು ಸೊಳ್ಳೆಗಳು ಕಚ್ಚುವುದು ಹೆಚ್ಚು! ಇದಕ್ಕಿದೆ ವೈಜ್ಞಾನಿಕ ಕಾರಣ!

Actress Hina Khan
Latest1 hour ago

Actress Hina Khan: ಕಿಮೋಥೆರಪಿ ಅನುಭವ ಹಂಚಿಕೊಂಡಿದ್ದಾರೆ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಖ್ಯಾತ ಬಾಲಿವುಡ್‌ ನಟಿ

Naxalites Killed
ದೇಶ1 hour ago

Naxalites Killed: 6 ಗಂಟೆ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 12 ನಕ್ಸಲರ ಎನ್‌ಕೌಂಟರ್

Walking Benefits
ಆರೋಗ್ಯ2 hours ago

Walking Benefits: ಊಟದ ಬಳಿಕ ಕಿರು ನಡಿಗೆಯಿಂದ ಸಿಗುವ ಆರೋಗ್ಯ ಲಾಭಗಳು ಏನೇನು?

Natasa Stankovic
ಕ್ರಿಕೆಟ್2 hours ago

Natasa Stankovic : ಹಾರ್ದಿಕ್​ ಪಾಂಡ್ಯಗೆ ಕೈಕೊಟ್ಟು ಸರ್ಬಿಯಾದಲ್ಲಿ ಜಾಲಿ ಟ್ರಿಪ್ ಹೊರಟ ನತಾಶಾ

Mattress Buying Guide
ಲೈಫ್‌ಸ್ಟೈಲ್2 hours ago

Mattress Buying Guide: ಹಾಸಿಗೆಗಳಲ್ಲಿ ಎಷ್ಟೊಂದು ವಿಧ? ಯಾವುದು ಸೂಕ್ತ ಆಯ್ಕೆ ಮಾಡಿಕೊಳ್ಳಿ

Karnataka Jobs Reservation
ಪ್ರಮುಖ ಸುದ್ದಿ2 hours ago

Karnataka Jobs Reservation : ಕನ್ನಡಿಗರಿಗೆ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮೀಸಲಾತಿ ಮಸೂದೆಗೆ ತಾತ್ಕಾಲಿಕ ತಡೆ; ಉದ್ಯಮಿಗಳ ಒತ್ತಡ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌