Karnataka Jobs Reservation: ಉರಿವ ಮನೆಯಿಂದ ಗಳ ಹಿರಿದ ಆಂಧ್ರಪ್ರದೇಶ; ʼನಮ್ಮಲ್ಲಿಗೇ ಬನ್ನಿʼ ಎಂದು ಖಾಸಗಿ ಉದ್ಯಮಗಳಿಗೆ ಭಿಕ್ಷಾಪಾತ್ರೆ ಒಡ್ಡಿದ ಸಚಿವ - Vistara News

ಪ್ರಮುಖ ಸುದ್ದಿ

Karnataka Jobs Reservation: ಉರಿವ ಮನೆಯಿಂದ ಗಳ ಹಿರಿದ ಆಂಧ್ರಪ್ರದೇಶ; ʼನಮ್ಮಲ್ಲಿಗೇ ಬನ್ನಿʼ ಎಂದು ಖಾಸಗಿ ಉದ್ಯಮಗಳಿಗೆ ಭಿಕ್ಷಾಪಾತ್ರೆ ಒಡ್ಡಿದ ಸಚಿವ

Karnataka Jobs Reservation: ಕರ್ನಾಟಕ ಸರಕಾರದ ನಿಲುವಿನ ಕುರಿತು ಆಕ್ರೋಶ ವ್ಯಕ್ತಪಡಿಸಿದ ನಾಸ್ಕಾಂ ಸಂಘಟನೆಯ ಟ್ವೀಟ್‌ ಅನ್ನು ಶೇರ್‌ ಮಾಡಿರುವ ಆಂಧ್ರಪ್ರದೇಶ ಮಾನವ ಸಂಪನ್ಮೂಲ ಇಲಾಖೆ ಸಚಿವ ಲೋಕೇಶ್‌ ನಾರಾ, ʼನಮ್ಮಲ್ಲಿಗೆ ಬನ್ನಿʼ ಎಂದು ಖಾಸಗಿ ಕಂಪನಿಗಳಿಗೆ ಕರೆ ನೀಡಿದ್ದಾರೆ.

VISTARANEWS.COM


on

Karnataka Jobs Reservation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಉದ್ಯಮಗಳಲ್ಲಿ ಮೀಸಲು (Karnataka Jobs Reservation) ಕಡ್ಡಾಯ ಮಾಡುವ ಕುರಿತು ರಾಜ್ಯ ಸರ್ಕಾರದ (Karnataka Government) ನಿಲುವಿನಿಂದಾಗಿ ಸೃಷ್ಟಿಯಾದ ಗೊಂದಲದ ನಡುವೆ, ʼಉರಿಯುವ ಮನೆಯಲ್ಲಿ ಗಳ ಹಿರಿದರುʼ ಎಂಬಂತೆ ಲಾಭ ಮಾಡಿಕೊಳ್ಳಲು ಆಂಧ್ರಪ್ರದೇಶ (Andhra Pradesh) ಮುಂದಾಗಿದೆ.

ಕರ್ನಾಟಕ ಸರಕಾರದ ನಿಲುವಿನ ಕುರಿತು ಆಕ್ರೋಶ ವ್ಯಕ್ತಪಡಿಸಿದ ನಾಸ್ಕಾಂ ಸಂಘಟನೆಯ ಟ್ವೀಟ್‌ ಅನ್ನು ಶೇರ್‌ ಮಾಡಿರುವ ಆಂಧ್ರಪ್ರದೇಶ ಮಾನವ ಸಂಪನ್ಮೂಲ ಇಲಾಖೆ ಸಚಿವ ಲೋಕೇಶ್‌ ನಾರಾ, ʼನಮ್ಮಲ್ಲಿಗೆ ಬನ್ನಿʼ ಎಂದು ಖಾಸಗಿ ಕಂಪನಿಗಳಿಗೆ ಕರೆ ನೀಡಿದ್ದಾರೆ.

“ನಿಮ್ಮ ನಿರಾಶೆಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ವೈಜಾಗ್‌ನಲ್ಲಿರುವ ನಮ್ಮ IT, IT ಸೇವೆಗಳು, AI ಮತ್ತು ಡೇಟಾ ಸೆಂಟರ್ ಕ್ಲಸ್ಟರ್‌ಗೆ ನಿಮ್ಮ ವ್ಯವಹಾರಗಳನ್ನು ವಿಸ್ತರಿಸಲು ಅಥವಾ ಸ್ಥಳಾಂತರಿಸಲು ನಾವು ನಿಮ್ಮನ್ನು ಸ್ವಾಗತಿಸುತ್ತೇವೆ. ನಾವು ನಿಮಗೆ ಅತ್ಯುತ್ತಮ ದರ್ಜೆಯ ಸೌಲಭ್ಯಗಳು, ತಡೆರಹಿತ ವಿದ್ಯುತ್, ಮೂಲಸೌಕರ್ಯ ಮತ್ತು ನಿಮ್ಮ ಐಟಿ ಉದ್ಯಮಕ್ಕೆ ಸರ್ಕಾರದಿಂದ ಯಾವುದೇ ನಿರ್ಬಂಧಗಳಿಲ್ಲದೆ ಅತ್ಯಂತ ಸೂಕ್ತವಾದ ಕೌಶಲ್ಯಭರಿತ ಪ್ರತಿಭೆಗಳನ್ನು ನೀಡುತ್ತೇವೆ. ಆಂಧ್ರಪ್ರದೇಶ ನಿಮ್ಮನ್ನು ಸ್ವಾಗತಿಸಲು ಸಿದ್ಧವಾಗಿದೆ. ದಯವಿಟ್ಟು ಸಂಪರ್ಕದಲ್ಲಿರಿ!” ಎಂದು ನಾರಾ ಟ್ವೀಟ್‌ ಮಾಡಿದ್ದಾರೆ.

“ಕರ್ನಾಟಕದ ಜಿಡಿಪಿಗೆ ಖಾಸಗಿ ಉದ್ಯಮ ವಲಯ 25% ಕೊಡುಗೆ ನೀಡುತ್ತಿದೆ. ಆದರೆ ಕೌಶಲ್ಯಭರಿತ ಉದ್ಯೋಗಿಗಳ ಕೊರತೆಯಿದೆ. ಇಂಥ ಕಾನೂನು ತಂದರೆ ಉದ್ಯಮ ನಡೆಸುವುದು ಕಷ್ಟವಾಗಲಿದ್ದು, ಉದ್ಯಮಿಗಳು ಬೇರೆ ಕಡೆ ಸ್ಥಳಾಂತರಿಸುವ ಬಗ್ಗೆ ಚಿಂತನೆ ನಡೆಸಬೇಕಾಗುತ್ತದೆ” ಎಂದು ಔದ್ಯಮಿಕ ಒಕ್ಕೂಟ ನಾಸ್ಕಾಮ್‌ (NASSCOM) ಎಚ್ಚರಿಕೆ ನೀಡಿತ್ತು.

ಸರ್ಕಾರದ ನಿಲುವಿಗೆ ಬಿವೈ ವಿಜಯೇಂದ್ರ ಖಂಡನೆ

ಖಾಸಗಿ ಉದ್ಯಮದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಒದಗಿಸುವ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲು ಬಗ್ಗೆ ವಿಧೇಯಕ ತಡೆಹಿಡಿದ ಸರಕಾರದ ಕ್ರಮವನ್ನು ಅವರು ಟೀಕಿಸಿದ್ದಾರೆ. ಈ ಬಗ್ಗೆ ಅವರು ʼಎಕ್ಸ್‌ʼನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?” ಎಂದು ಅವರು ಪ್ರಶ್ನಿಸಿದ್ದಾರೆ. “ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ” ಎಂದಿದ್ದಾರೆ.

“ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು ‘ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ? ಮುಖ್ಯಮಂತ್ರಿಗಳು ಈ ಕುರಿತು ತಮ್ಮ X ಖಾತೆಯಲ್ಲಿ ಮೂರು ಬಾರಿ ‘ಯೂ ಟರ್ನ್ ಹೊಡೆದು’ ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮ ಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿಸುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ”

“ಇಂಡಿ ಕೂಟದಲ್ಲಿ ಯಾವಾಗ ಬಿರುಕು ಮೂಡುತ್ತದೋ ಎಂಬ ಭೀತಿಯಲ್ಲಿರುವ ದೆಹಲಿಯ ದೊಡ್ಡ ‘ಕೈ’ ಮುಖ್ಯಮಂತ್ರಿಗಳ ಕೈ ಕಟ್ಟಿಹಾಕಿರಲೇಬೇಕು, ಇಲ್ಲದಿದ್ದರೇ ಕನ್ನಡಿಗರ ಬದುಕು ಹಸನಾಗಿಸುವ ವಿಧೇಯಕವನ್ನು ಬದಿಗೆ ಸರಿಸುವ ಪಲಾಯನವಾದಿ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ? ಸದ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಮುತ್ತಿರುವ ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳಿಂದ ತತ್ತರಿಸಿರುವ ಕಾಂಗ್ರೆಸ್ ತನ್ನ ಮುಖ ಮುಚ್ಚಿಕೊಳ್ಳಲು ಹಗರಣದ ಚರ್ಚೆ ಹಾಗೂ ತನಿಖೆಯನ್ನು ದಿಕ್ಕು ತಪ್ಪಿಸಲು ಹಾಗೂ ಜನರ ಗಮನ ವಿಚಲಿತಗೊಳಿಸುವ ಕುತಂತ್ರದಿಂದ ಕನ್ನಡ ಪರ ವಿಧೇಯಕವನ್ನು ತಡೆಹಿಡಿದು ಗುರಾಣಿ ಮಾಡಿಕೊಳ್ಳುವ ಹುನ್ನಾರ ನಡೆಸಿದ್ದರೆ ರಾಜ್ಯದ ಜನತೆ ಕಾಂಗ್ರೆಸ್ಸಿಗರನ್ನು ಎಂದಿಗೂ ಕ್ಷಮಿಸರು.”

“ವಿಧೇಯಕದ ಕುರಿತು ಮಾಧ್ಯಮಗಳಲ್ಲಿ ಹೆಮ್ಮೆಯಿಂದ ಬೀಗಿದ್ದ ಸಚಿವರುಗಳು ಹಾಗೂ ಕಾಂಗ್ರೆಸ್ ಮುಖಂಡರು ಕೆಲವೇ ಸಮಯದ ಅಂತರದಲ್ಲಿ ನಾಡ ಜನರ ಬಗೆಗಿನ ಐತಿಹಾಸಿಕ ವಿಧೇಯಕ ಹಿಂತೆಗೆದುಕೊಂಡ ಬಗ್ಗೆ ಸಮಸ್ತ ಕನ್ನಡ ಜನತೆಯ ಮುಂದೆ ತಲೆ ಎತ್ತಿ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ಅರ್ಹತೆ ಇದ್ದರೂ ಉದ್ಯೋಗಾವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ದವಾಗಲಿ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: Karnataka Jobs Reservation : ಕನ್ನಡಿಗರಿಗೆ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮೀಸಲಾತಿ ಮಸೂದೆಗೆ ತಾತ್ಕಾಲಿಕ ತಡೆ; ಉದ್ಯಮಿಗಳ ಒತ್ತಡ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Bike Stunt Video: ಪುಟ್ಟ ಮಗುವನ್ನು ಮುಂದೆ ಕೂರಿಸಿಕೊಂಡು ಬೈಕ್‌ ಸ್ಟಂಟ್‌! ಒದ್ದು ಒಳಗೆ ಹಾಕಿ ಅಂತಿದ್ದಾರೆ ನೆಟ್ಟಿಗರು

Bike Stunt Video: ಉತ್ತರ ಪ್ರದೇಶದ ಸೀತಾಪುರದಲ್ಲಿ ಯುವಕನೊಬ್ಬ ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತಿರುವ ಮಗುವಿನೊಂದಿಗೆ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಬೈಕ್ ರೈಡ್ ಮಾಡುತ್ತಾ ಅಪಾಯಕಾರಿ ಸ್ಟಂಟ್‌ಗಳನ್ನು ಮಾಡುತ್ತಿರುವುದು ಕಂಡುಬಂದಿದೆ. ಯುವಕನು ಅಪಾಯಕಾರಿ ಸ್ಟಂಟ್ ಮಾಡುತ್ತಿರುವುದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ.

VISTARANEWS.COM


on

Dangerous Bike Stunt
Koo

ಕೆಲವು ಹುಡುಗರು ಬೈಕ್‍ನಲ್ಲಿ ಹೋಗುವಾಗ ವಿವಿಧ ರೀತಿಯ (Bike Stunt Video) ಸ್ಟಂಟ್‍ಗಳನ್ನು ಮಾಡುತ್ತಾರೆ. ಅದರಲ್ಲೂ ಕೆಲವರು ಬೈಕ್‌ನಲ್ಲಿ ಹೋಗುವಾಗ ರಸ್ತೆಯಲ್ಲಿ ಹುಡುಗಿಯರನ್ನು ಕಂಡರೆ ಸಾಕು, ಅವರ ಮುಂದೆ ಶೋ ಮಾಡಲು ಅಪಾಯಕಾರಿ ಸ್ಟಂಟ್‍ಗಳನ್ನು ಮಾಡಲು ಮುಂದಾಗುತ್ತಾರೆ. ಆದರೆ ಇದರಿಂದ ಎಷ್ಟೋ ಹುಡುಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮತ್ತೆ ಕೆಲವರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಅದೇರೀತಿ ಇದೀಗ ವ್ಯಕ್ತಿಯೊಬ್ಬ ಗೂಳಿಯಿಂದ ತಪ್ಪಿಸಿಕೊಳ್ಳಲು ಮಗುವಿನೊಂದಿಗೆ ಬೈಕ್‍ನಲ್ಲಿ ಹೋಗುವಾಗ ಸ್ಟಂಟ್(Dangerous Bike Stunt) ಮಾಡಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಸೀತಾಪುರದಲ್ಲಿ ವ್ಯಕ್ತಿಯೊಬ್ಬ ಸ್ಪೆಂಡ್ಲರ್‌ ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತಿರುವ ಮಗುವಿನೊಂದಿಗೆ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಬೈಕ್ ರೈಡ್ ಮಾಡುತ್ತಾ ಅಪಾಯಕಾರಿ ಸ್ಟಂಟ್‍ಗಳನ್ನು ಮಾಡುತ್ತಿರುವುದು ಕಂಡು ಬಂದಿದೆ. ವ್ಯಕ್ತಿಯು ಅಪಾಯಕಾರಿ ಸ್ಟಂಟ್ ಮಾಡುತ್ತಿರುವುದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ. ವಿಡಿಯೊದಲ್ಲಿ ವ್ಯಕ್ತಿಯು ಹೆದ್ದಾರಿಯಲ್ಲಿ ಜಿಗ್ಜಾಗ್ ಮಾದರಿಯಲ್ಲಿ ಬೈಕ್ ಓಡಿಸುತ್ತಿದ್ದ ಮತ್ತು ಹಾಗೆ ಮಾಡುವಾಗ ಬೈಕಿನ ಮೇಲೆ ನಿಂತಿರುವುದನ್ನು ಕಾಣಬಹುದು. ಅವನು ಹಲವು ಬಾರಿ ಬೈಕಿನಲ್ಲಿ ಕುಳಿತು ಮತ್ತೊಮ್ಮೆ ನಿಂತಿರುವುದನ್ನು ಕಾಣಬಹುದು. ಮತ್ತು ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಒಂದು ಸಣ್ಣ ಮಗು ಕೂಡ ಕುಳಿತಿದೆ. ಬೈಕಿನಲ್ಲಿ ಕುಳಿತಿದ್ದ ಆ ಮುಗ್ಧ ಮಗುವಿನ ಜೀವದ ಬಗ್ಗೆ ಆತನಿಗೆ ಸ್ವಲ್ಪವೂ ಕಾಳಜಿ ಇಲ್ಲದಿರುವುದು ಇದರಿಂದ ತಿಳಿಯುತ್ತದೆ.

ಅಲ್ಲದೇ ಆತ ಅಪಾಯಕಾರಿ ಸ್ಟಂಟ್ ಮಾಡುತ್ತಿರುವಾಗ, ಇತರ ಕಾರುಗಳು ಮತ್ತು ಬೈಕುಗಳು ಸಹ ಅಲ್ಲಿ ಓಡಾಡುತ್ತಿರುವುದು ಕಂಡುಬಂದಿದೆ. ಅಷ್ಟೇಅಲ್ಲದೇ ದಾರಿತಪ್ಪಿದ ಗೂಳಿಯೊಂದು ರಸ್ತೆ ದಾಟುವುದನ್ನು ಕಾಣಬಹುದು. ಆದರೆ ಗೂಳಿಯನ್ನು ನೋಡಿದರೂ ಆತ ಸ್ಟಂಟ್ ಮಾಡುವುದನ್ನು ನಿಲ್ಲಿಸಲಿಲ್ಲ. ಆ ವ್ಯಕ್ತಿ ಗೂಳಿಯಿಂದ ತಪ್ಪಿಸಿಕೊಂಡು ಮತ್ತೆ ತನ್ನ ಸ್ಟಂಟನ್ನು ಮುಂದುವರಿಸಿದ್ದಾನೆ.

ಹೆದ್ದಾರಿಯಲ್ಲಿ ಈತನ ಬೈಕ್ ಅನ್ನು ಹಿಂಬಾಲಿಸುತ್ತಿದ್ದ ಇನ್ನೊಬ್ಬ ಪ್ರಯಾಣಿಕ ಇದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಮತ್ತು ಆ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. “ಮುಗ್ಧ ಮಗುವನ್ನು ಬೈಕ್ ಮೇಲೆ ಕೂರಿಸುವ ಮೂಲಕ ಅಪಾಯಕಾರಿ ಸ್ಟಂಟ್ ಮಾಡಿದ ಈ ಹಠಮಾರಿ ವ್ಯಕ್ತಿಗೆ ದಯವಿಟ್ಟು ಬೇಗ ಪಾಠ ಕಲಿಸಿ” ಎಂದು ಬರೆದಿದ್ದಾರೆ. ವೈರಲ್ ವಿಡಿಯೊದಲ್ಲಿ ಕಂಡುಬರುವ ಬೈಕಿನ ಸಂಖ್ಯೆ ಸೀತಾಪುರದಿಂದ ಬಂದಿದೆ ಎಂಬುದಾಗಿ ತಿಳಿದುಬಂದಿದೆ. ಈ ವೈರಲ್ ವಿಡಿಯೊಗೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಇನ್‌ಸ್ಟಾಗ್ರಾಂನಲ್ಲಿಯೇ ಗಂಡನಿಗೆ ಡಿವೋರ್ಸ್‌‌ ನೀಡಿದ ದುಬೈ ರಾಜಕುಮಾರಿ! ಏನು ಬರೆದಿದ್ದಾಳೆ ನೋಡಿ!

ಯುಪಿ ಪೊಲೀಸರು ಈ ವಿಡಿಯೊವನ್ನು ಸೀತಾಪುರ ಪೊಲೀಸರನ್ನು ಟ್ಯಾಗ್ ಮಾಡಿದ್ದು, ಇದಕ್ಕೆ ಉತ್ತರಿಸಿದ ಸೀತಾಪುರ ಪೊಲೀಸರು, ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಟ್ರಾಫಿಕ್ ಇನ್ಸ್ ಪೆಕ್ಟರ್‌ಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಇಂಥ ಪುಂಡರನ್ನು ಪೊಲೀಸರು ಒದ್ದು ಒಳಗೆ ಹಾಕಬೇಕು ಎಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.

Continue Reading

Latest

Sexual Abuse: ಶಾಲಾ ಬಾಲಕಿಯನ್ನು ಕ್ರೂರವಾಗಿ ಥಳಿಸಿ ಗುಪ್ತಾಂಗಕ್ಕೆ ಕೋಲು ತುರುಕಿದ ಮಹಿಳೆ!

Sexual Abuse: ಬಾಲಕಿ ಕೆಲವು ದಿನಗಳ ಹಿಂದೆ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಭಗವತಿ ಕುಶ್ವಾಹ ಎಂಬ ಮಹಿಳೆಯ ಅಂಗಡಿಗೆ ಹೋಗಿದ್ದಳು. ಅಲ್ಲಿ ಕುಶ್ವಾಹ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾಳೆ ಮತ್ತು ಅವಳ ಪುರುಷ ಸಹಚರರ ಮುಂದೆ ಬಲವಂತವಾಗಿ ಬಟ್ಟೆಗಳನ್ನು ಬಿಚ್ಚಿದ್ದಾಳೆ. ಇದರಿಂದ ಸಂತ್ರಸ್ತೆ ಅಳುತ್ತಾ ಮನೆಗೆ ಬಂದು ಅಕ್ಕನಿಗೆ ದೂರು ನೀಡಿದ್ದಾಳೆ. ಆಗ ಅಕ್ಕ ಆರೋಪಿ ಕುಶ್ವಾಹಳ ಅಂಗಡಿಗೆ ಬಂದು ಈ ಬಗ್ಗೆ ಅವಳನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ. ಇದಕ್ಕೆ ಸೇಡು ತೀರಿಸಿಕೊಳ್ಳಲು, ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬಾಲಕಿಗೆ ಚಿತ್ರ ಹಿಂಸೆ ನೀಡಲಾಗಿದೆ.

VISTARANEWS.COM


on

Sexual Abuse
Koo


ಮಹಿಳೆಯ ಜೊತೆ ಪುರುಷರು ಕ್ರೂರವಾಗಿ ವರ್ತಿಸುವಾಗ ಮತ್ತೊಬ್ಬ ಮಹಿಳೆ ಸಹಾಯಕ್ಕೆ ಬರುವುದನ್ನು ನಾವು ಹಲವು ಕಡೆ ನೋಡಿರುತ್ತೇವೆ. ಆದರೆ ಹೆಣ್ಣಿಗೆ ಹೆಣ್ಣೇ ಶತ್ರು ಎಂಬುದು ಈ ಘಟನೆಯಿಂದ ತಿಳಿಯುತ್ತದೆ. ಮಹಿಳೆಯೊಬ್ಬಳು ತನ್ನ ಮೂವರು ಪುರುಷ ಸಹಚರರೊಂದಿಗೆ ಸೇರಿ ಅಪ್ರಾಪ್ತ ಬಾಲಕಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದಲ್ಲದೇ ಆಕೆಯ ಬಟ್ಟೆಗಳನ್ನು ಬಿಚ್ಚಿ (Sexual Abuse) ಹಿಂಸಿಸಿದ್ದಾಳೆ. ಅಲ್ಲದೇ, ಆಕೆಯ ಖಾಸಗಿ ಭಾಗಕ್ಕೆ ಕೋಲನ್ನು ತೂರಿಸಿ ಗಾಯಗೊಳಿಸಿದ್ದಾಳೆ. ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಈ ಘಟನೆ ನಡೆದಿದೆ.

ಮಾಹಿತಿ ಪ್ರಕಾರ, ಮುರಾರ್ ಪೊಲೀಸ್ ಠಾಣೆ ಪ್ರದೇಶದ ನಿವಾಸಿಯಾದ ಸಂತ್ರಸ್ತೆ ಬಾಲಕಿ ಕೆಲವು ದಿನಗಳ ಹಿಂದೆ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಭಗವತಿ ಕುಶ್ವಾಹ ಎಂಬ ಮಹಿಳೆಯ ಅಂಗಡಿಗೆ ಹೋಗಿದ್ದಳು. ಅಲ್ಲಿ ಕುಶ್ವಾಹ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾಳೆ ಮತ್ತು ಅವಳ ಪುರುಷ ಸಹಚರರ ಮುಂದೆ ಬಲವಂತವಾಗಿ ಬಟ್ಟೆಗಳನ್ನು ಬಿಚ್ಚಿದ್ದಾಳೆ. ಇದರಿಂದ ಸಂತ್ರಸ್ತೆ ಅಳುತ್ತಾ ತನ್ನ ಮನೆಗೆ ಬಂದು ತನ್ನ ಅಕ್ಕನಿಗೆ ದೂರು ನೀಡಿದ್ದಾಳೆ. ಆಗ ಅಕ್ಕ ಆರೋಪಿ ಕುಶ್ವಾಹಳ ಅಂಗಡಿಗೆ ಬಂದು ಈ ಬಗ್ಗೆ ಅವಳನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ.

ನಂತರ, ಮಂಗಳವಾರ, ಆರೋಪಿ ಭಗವತಿ ಕುಶ್ವಾಹ ಮತ್ತು ಅವಳ ಸಹಚರರಾದ ಜೀತು ಕುಶ್ವಾಹ, ಸಂತೋಷ್ ಮತ್ತು ರಾಹುಲ್ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಸಂತ್ರಸ್ತೆ ಬಾಲಕಿ ಮೇಲೆ ಹಲ್ಲೆ ನಡೆಸಿದರು. ಆಕೆಗೆ ಕೋಲಿನಿಂದ ಹೊಡೆದು ಥಳಿಸಿದ್ದಲ್ಲದೇ ಅವಳ ಖಾಸಗಿ ಭಾಗಕ್ಕೆ ಕೋಲನ್ನು ತುರುಕಿದರು. ಈ ಹಲ್ಲೆಯಿಂದ 15 ವರ್ಷದ ಸಂತ್ರಸ್ತೆಯ ಕಾಲು ಮುರಿತಕ್ಕೊಳಗಾಗಿದ್ದಲ್ಲದೇ ದೇಹದಲ್ಲಿ ಗಂಭೀರ ಗಾಯಗಳು ಕೂಡ ಕಂಡು ಬಂದಿವೆ.

ಇಂತಹ ಪರಿಸ್ಥಿತಿಯಲ್ಲಿ ಸಂತ್ರಸ್ತೆ ತನ್ನ ಕಾಲಿಗೆ ಪ್ಲಾಸ್ಟರ್ ಕಟ್ಟಿಕೊಂಡು ಜುಲೈ 16ರಂದು ಎಸ್ಪಿ ಕಚೇರಿಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ತನಗೆ ಹಿಂಸೆ ನೀಡಿದ ಎಲ್ಲಾ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಲ್ಲಿ ವಿನಂತಿಸಿಕೊಂಡಿದ್ದಾಳೆ. ಹಾಗಾಗಿ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಆರೋಪಿ ಸಂಸದ ಭರತ್ ಸಿಂಗ್ ಕುಶ್ವಾಹ ಅವರ ಆಪ್ತನಾಗಿದ್ದು, ಪೊಲೀಸರು ಆತನ ವಿರುದ್ಧ ಇನ್ನೂ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಸಂತ್ರಸ್ತೆಯ ಹಿರಿಯ ಸಹೋದರಿ ಆರೋಪಿಸಿದ್ದಾರೆ.

ಇದನ್ನೂ ಓದಿ:  8 ವರ್ಷದ ಮಗನ ತಲೆ ನೆಲಕ್ಕೆ ಅಪ್ಪಳಿಸಿ, ಮೈಕೈಯೆಲ್ಲ ಕಚ್ಚಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

ಈ ವಿಷಯಕ್ಕೆ ಸಂಬಂಧಿಸಿದಂತೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಿರಂಜನ್ ಶರ್ಮಾ, “ಈ ಪ್ರಕರಣದಲ್ಲಿ, ಇಬ್ಬರ ನಡುವೆ ಜಗಳವಾಗಿತ್ತು ಮತ್ತು ಇಬ್ಬರು ವಿರುದ್ಧ ಪ್ರಕರಣ ದಾಖಲಿಸಿವೆ ಎಂದು ಹೇಳಿದರು. ವಿದ್ಯಾರ್ಥಿನಿಯನ್ನು ಸಾಕಷ್ಟು ಥಳಿಸಲಾಗಿದೆ ಮತ್ತು ಅವಳ ಕಾಲು ಮುರಿದಿದೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆರೋಪಿಗಳ ವಿರುದ್ಧ ಆರೋಪವನ್ನು ಸಾಬೀತುಪಡಿಸಲು ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲು ಸಂಬಂಧಪಟ್ಟ ಅಧಿಕಾರಿಗೆ ಸೂಚನೆ ನೀಡಲಾಗಿದೆ. ಸಂತ್ರಸ್ತೆಯ ಹೇಳಿಕೆಯನ್ನು ಮತ್ತೆ ತೆಗೆದುಕೊಳ್ಳಲಾಗುವುದು ಮತ್ತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂಬುದಾಗಿ ತಿಳಿಸಿದ್ದಾರೆ.

Continue Reading

ಕ್ರೀಡೆ

Paris Olympics: ಅತಿ ಹೆಚ್ಚು ಒಲಿಂಪಿಕ್ಸ್ ಆತಿಥ್ಯ ವಹಿಸಿದ ದೇಶ ಯಾವುದು?

Paris Olympics: ಪ್ಯಾರಿಸ್‌ ಆತಿಥ್ಯದಲ್ಲಿ ನಡೆಯಲಿರುವ 3ನೇ ಒಲಿಂಪಿಕ್ಸ್‌ ಕೀಡಾಕೂಡ ಇದಾಗಿದೆ. ಮೊದಲ ಒಲಿಂಪಿಕ್ಸ್‌ ನಡೆದದ್ದು 1900ರಲ್ಲಿ. ಇದಾದ ಬಳಿಕ 1924ರಲ್ಲಿ ಆತಿಥ್ಯ ವಹಿಸಿತ್ತು. ಇದೀಗ ಬರೋಬ್ಬರಿ 100 ವರ್ಷಗಳ ಬಳಿಕ ಇಲ್ಲಿ ಪ್ಯಾರಿಸ್​ನ್ಲಿ ಒಲಿಂಪಿಕ್ಸ್​ ನಡೆಯುತ್ತಿದೆ.

VISTARANEWS.COM


on

Paris Olympics
Koo

ಬೆಂಗಳೂರು: ಸಾವಿರಾರು(Olympic Games History) ವರ್ಷಗಳ ಇತಿಹಾಸ ಹೊಂದಿರುವ ಪ್ರತಿಷ್ಠಿತ ಒಲಿಂಪಿಕ್ಸ್​ ಕ್ರೀಡಾಕೂಟವನ್ನು ಯಾವ ದೇಶ ಅತ್ಯಧಿಕ ಬಾರಿ ಆತಿಥ್ಯ ವಹಿಸಿದೆ ಎನ್ನುವ ಕುತೂಹಲಕಾರಿ ವಿವರ ಇಲ್ಲಿದೆ. ಇದುವರೆಗೂ ಅತಿ ಹೆಚ್ಚು ಒಲಿಂಪಿಕ್ಸ್​ ಸಂಘಟಿಸಿದ ದಾಖಲೆ ಲಂಡನ್‌ ಹೆಸರಿನಲ್ಲಿತ್ತು. ಇದೀಗ ಈ ದಾಖಲೆಯನ್ನು ಪ್ಯಾರಿಸ್(Paris Olympics)​ ಸರಿಗಟ್ಟಿದೆ.

ಹೌದು, ಪ್ಯಾರಿಸ್‌ ಆತಿಥ್ಯದಲ್ಲಿ ನಡೆಯಲಿರುವ 3ನೇ ಒಲಿಂಪಿಕ್ಸ್‌ ಕೀಡಾಕೂಡ ಇದಾಗಿದೆ. ಮೊದಲ ಒಲಿಂಪಿಕ್ಸ್‌ ನಡೆದದ್ದು 1900ರಲ್ಲಿ. ಇದಾದ ಬಳಿಕ 1924ರಲ್ಲಿ ಆತಿಥ್ಯ ವಹಿಸಿತ್ತು. ಇದೀಗ ಬರೋಬ್ಬರಿ 100 ವರ್ಷಗಳ ಬಳಿಕ ಇಲ್ಲಿ ಪ್ಯಾರಿಸ್​ನ್ಲಿ ಒಲಿಂಪಿಕ್ಸ್​ ನಡೆಯುತ್ತಿದೆ.

ಲಂಡನ್‌ ಒಟ್ಟು 3 ಬಾರಿ ಒಲಿಂಪಿಕ್‌ ಕ್ರೀಡಾಕೂಟವನ್ನು ನಡೆಸಿಕೊಟ್ಟ ಹೆಗ್ಗಳಿಕೆ ಹೊಂದಿದೆ. 1908, 1948 ಮತ್ತು 2012ರಲ್ಲಿ ಲಂಡನ್​ ಒಲಿಂಪಿಕ್ಸ್‌ ಆತಿಥ್ಯ ವಹಿಸಿಕೊಂಡಿತ್ತು. ಲಂಡನ್​ ಮತ್ತು ಪ್ಯಾರಿಸ್​ ಮೂರು ಒಲಿಂಪಿಕ್ಸ್​ ನಡೆಸಿದ ಖ್ಯಾತಿ ಗಳಿಸಲಿದೆ. ಮುಂದಿನ ಸಲ ಅಮೆರಿಕದ ಲಾಸ್‌ ಏಂಜಲೀಸ್‌ ಕೂಡ ಈ ಸಾಲಿಗೆ ಸೇರಲಿದೆ. ಇಲ್ಲಿ 1932 ಮತ್ತು 1984ರ ಒಲಿಂಪಿಕ್ಸ್‌ ನಡೆದಿತ್ತು.

ಇದನ್ನೂ ಓದಿ Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

ಒಲಿಂಪಿಕ್ಸ್​ ಆತಿಥ್ಯ ವಹಿಸಿಕೊಂಡ ದೇಶ


1. ಲಂಡನ್​- 3 ಬಾರಿ (1908,1948,2012)

2. ಪ್ಯಾರಿಸ್​- 3 ಬಾರಿ (1900,1924,2024)

3. ಲಾಸ್‌ ಏಂಜಲೀಸ್‌-2 ಬಾರಿ (1932,1984)

4. ಟೋಕಿಯೊ- 2 ಬಾರಿ (1964,2021)

5. ಅಥೆನ್ಸ್-2 ಬಾರಿ (1986,2004)

ಇದನ್ನೂ ಓದಿ The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?

ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಒಲಿಂಪಿಕ್ಸ್​ ಇತಿಹಾಸದಲ್ಲೇ ವಿಶೇಷ ಮಹತ್ವ ಪಡೆದಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಇದನ್ನೂ ಓದಿ Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

ಚೊಚ್ಚಲ ಒಲಿಂಪಿಕ್​ ಸಂಘಟಿಸಿದ ಹೆಗ್ಗಳಿಕೆ ಗ್ರೀಸ್​ ದೇಶಕ್ಕೆ ಸಲ್ಲುತ್ತದೆ. ಸುಮಾರು ಕ್ರಿ.ಪೂ. 776ರಲ್ಲಿ ಗ್ರೀಸ್‌ನ ಒಲಿಂಪಿಯಾದಲ್ಲಿ ಮೊದಲ ಬಾರಿಗೆ ಒಲಿಂಪಿಕ್‌ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಮೂರ್ನಾಲ್ಕು ಶತಮಾನದವರೆಗೆ ಈ ಕೂಟವನ್ನು ಆಯೋಜಿಸಲಾಗುತ್ತಿತ್ತು. ಬಳಿಕ ಕ್ರಮೇಣ ನಿಂತುಹೋದ ಒಲಿಂಪಿಕ್‌ಗೆ ಚಾಲನೆ ಸಿಕ್ಕಿದ್ದು 1859ರಲ್ಲಿ. ಇವಾಂಜೆಲಾಸ್‌ ಝಪ್ಪಾಸ್‌ ಎಂಬಾತ ಪ್ರಪ್ರಥಮ ಅಂತಾರಾಷ್ಟ್ರೀಯ ಒಲಿಂಪಿಕ್‌ ಕ್ರೀಡಾಕೂಟವನ್ನು ಪ್ರಾಯೋಜಿಸಿದನು. ಬಳಿಕ 1894ರಲ್ಲಿ ಫ್ರಾನ್ಸ್‌ನ ಪಿಯರೆ ಡಿ ಕ್ಯುಬರ್ತಿನ್‌ ಎಂಬುವವನು ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಯನ್ನು ಹುಟ್ಟುಹಾಕಿ, 1896ರಲ್ಲಿ ಪ್ರಥಮ ಬಾರಿಗೆ ಗ್ರೀಸ್‌ನ ಈಗಿನ ರಾಜಧಾನಿ ಅಥೆನ್ಸ್‌ ನಗರದಲ್ಲಿ ಬೇಸಿಗೆ ಒಲಿಂಪಿಕ್‌ ಕ್ರೀಡಾಕೂಟ ಆಯೋಜಿಸಲಾಯಿತು. ಇದು ಮೊದಲ ಆಧುನಿಕ ಒಲಿಂಪಿಕ್‌ ಕ್ರೀಡಾಕೂಟ.

ಇದನ್ನೂ ಓದಿ Paris Olympics 2024: ಮೊಟ್ಟಮೊದಲ ಒಲಿಂಪಿಕ್ಸ್ ಕ್ರೀಡಾಕೂಟದ 10 ಕುತೂಹಲಕರ ಸಂಗತಿಗಳಿವು

ಮೊದಲ ಒಲಿಂಪಿಕ್​ ಸಂಘಟಿಸಿದ ಕಾರಣ ಪ್ರತಿ ಬಾರಿಯ ಉದ್ಘಾಟನ ಸಮಾರಂಭದಲ್ಲಿ ಕ್ರೀಡಾಪಟುಗಳ ಪಥಸಂಚಲನ ನಡೆಯುವಾಗ ಗ್ರೀಸ್​ ತಂಡವೇ ಮುಂಚೂಣಿಯಲ್ಲಿರುತ್ತದೆ. ಬಳಿಕ ಆತಿಥೇಯ ದೇಶದ ಭಾಷೆಯ ಅಲ್ಪಾಬೆಟಿಕ್‌ ಅಕ್ಷರಮಾಲೆಯನ್ನು ಅನುಸರಿಸಿ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಳ್ಳುತ್ತವೆ. ಆತಿಥೇಯ ತಂಡ ಯಾವಾಗಲೂ ಕೊನೆಯ ಸ್ಥಾನದಲ್ಲಿರುತ್ತದೆ.

Continue Reading

Latest

Nita Ambani : ನೀತಾ ಅಂಬಾನಿ ಪ್ರಸ್ತುತಪಡಿಸಿದ್ದಾರೆ ವಿಷ್ಣುವಿನ ‘ದಶಾವತಾರ’ದ ಚಿತ್ರಣ; ವಿಡಿಯೊ ನೋಡಿ

Nita Ambani: ಬನಾರಸ್ ಹಿನ್ನೆಲೆಯನ್ನು ಹೊಂದಿರುವ ‘ದಶಾವತಾರ’ ಹಿಂದೂ ಸಂಪ್ರದಾಯದ ಆಳವಾದ ಅನ್ವೇಷಣೆಯನ್ನು ನೀಡುತ್ತದೆ. ಇದನ್ನು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಅನಂತ್ ಮತ್ತು ರಾಧಿಕಾ ಅಂಬಾನಿ ಅವರ ವಿವಾಹ ಆಚರಣೆ ಹಿನ್ನೆಲೆಯಲ್ಲಿ ವಿಶೇಷವಾಗಿ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದೆ. ಕಲೆ ಮತ್ತು ಕಲಾವಿದರ ತವರೂರಾದ ಎನ್ಎಂಎಸಿಸಿ ಈ ಸಾಂಸ್ಕೃತಿಕ ವೈಭವವನ್ನು ಸಾರ್ವಜನಿಕ ವೀಕ್ಷಣೆಗೆ ತೆರೆದಿಡುವ ಮೂಲಕ ಈ ಬದ್ಧತೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದೆ.

VISTARANEWS.COM


on

Nita Ambani
Koo


ಮುಂಬೈ : ಅಂಬಾನಿ ಕುಟುಂಬದವರು ದೇವರ ಬಗ್ಗೆ ಅಪಾರವಾದ ಗೌರವವನ್ನು ಹೊಂದಿದ್ದಾರೆ. ಈ ವಿಚಾರ ಈ ಹಿಂದೆ ಅನಂತ್ ಅಂಬಾನಿಯವರ ಮದುವೆ ಆಮಂತ್ರಣ ಪತ್ರಿಕೆಯನ್ನು ನೋಡಿದಾಗ ತಿಳಿಯುತ್ತದೆ. ಇದೀಗ ಸಾಂಸ್ಕೃತಿಕ ಕೇಂದ್ರ ಎನ್ಎಂಎಸಿಸಿಯ ಸ್ಥಾಪಕಿ ಮತ್ತು ಅಧ್ಯಕ್ಷೆಯಾದ ನೀತಾ ಅಂಬಾನಿ (Nita Ambani )ಅವರು ವಿಷ್ಣುವಿನ ಹತ್ತು ಅವತಾರಗಳನ್ನು ಪ್ರದರ್ಶಿಸುವ ‘ದಶಾವತಾರ’ ಎಂಬ ಅದ್ಭುತ ಆಡಿಯೊ-ವಿಶುವಲ್ ಅನುಭವವನ್ನು ಪ್ರಸ್ತುತಪಡಿಸಲಿದ್ದಾರೆ.

ಬನಾರಸ್ ಹಿನ್ನೆಲೆಯನ್ನು ಹೊಂದಿರುವ ‘ದಶಾವತಾರ’ ಹಿಂದೂ ಸಂಪ್ರದಾಯದ ಆಳವಾದ ಅನ್ವೇಷಣೆಯನ್ನು ನೀಡುತ್ತದೆ. ಇದನ್ನು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಅನಂತ್ ಮತ್ತು ರಾಧಿಕಾ ಅಂಬಾನಿ ಅವರ ವಿವಾಹ ಆಚರಣೆಗಾಗಿ ವಿಶೇಷವಾಗಿ ಆಯೋಜಿಸಲಾಗಿದೆ. ಇದನ್ನು ಈಗ ಸಾರ್ವಜನಿಕರು ನೋಡಬಹುದಾಗಿದೆ. ಕಲೆ ಮತ್ತು ಕಲಾವಿದರ ತವರೂರಾದ ಎನ್ಎಂಎಸಿಸಿ ಈ ಸಾಂಸ್ಕೃತಿಕ ವೈಭವವನ್ನು ಸಾರ್ವಜನಿಕ ವೀಕ್ಷಣೆಗೆ ತೆರೆದಿಡುವ ಮೂಲಕ ಈ ಬದ್ಧತೆಯನ್ನು ಮತ್ತಷ್ಟು ಮುಂದಕ್ಕೆ ಕೊಂಡೊಯ್ದಿದೆ.

‘ದಶಾವತಾರ’ ಹಿಂದೂ ಸಂಸ್ಕೃತಿಯ ಶ್ರೀಮಂತಿಕೆಯನ್ನು ಸುಂದರವಾಗಿ ಸಾಕಾರಗೊಳಿಸುತ್ತದೆ ಮತ್ತು ಅದರ ಭವ್ಯತೆಗೆ ಸಾಕ್ಷಿಯಾಗಲು ಎಲ್ಲರಿಗೂ ಆಹ್ವಾನವನ್ನು ನೀಡಲಾಗುತ್ತಿದೆ. ಹಾಗಾಗಿ ಪವಿತ್ರ ನಗರವಾದ ಕಾಶಿಯಿಂದ ಸ್ಫೂರ್ತಿ ಪಡೆದ ದೃಶ್ಯಗಳು ಮತ್ತು ಶಬ್ದಗಳ ಈ ಅದ್ಭುತ ಪ್ರದರ್ಶನವನ್ನು ವೀಕ್ಷಿಸಲು ತಯಾರಾಗಿ.

ನೀತಾ ಮುಖೇಶ್ ಅಂಬಾನಿ ಅವರ ಸಾಂಸ್ಕೃತಿಕ ಕೇಂದ್ರ (ಎನ್ಎಂಎಸಿಸಿ) ಕಲೆಗಳಿಗೆ ಮೀಸಲಾಗಿರುವ ಅದ್ಭುತ, ಬಹು-ಶಿಸ್ತಿನ ಸಾಂಸ್ಕೃತಿಕ ಕೇಂದ್ರವಾಗಿದೆ. ವೈವಿಧ್ಯಮಯ ಕಲಾತ್ಮಕ ಅಭಿವ್ಯಕ್ತಿಗಳ ಮೂಲಕ ಭಾರತದ ಶ್ರೀಮಂತ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಸಂರಕ್ಷಿಸುವುದು ಮತ್ತು ಉತ್ತೇಜಿಸುವುದು ನೀತಾ ಅಂಬಾನಿ ಅವರ ಉದ್ದೇಶವಾಗಿದೆ. ‘ದಶಾವತಾರ’ ಗ್ರೌಂಡ್ ಲೆವೆಲ್ ಎನ್ಎಂಎಸಿಸಿಯಲ್ಲಿ ಇಂಗ್ಲಿಷ್ ಮತ್ತು ಹಿಂದಿ ಎರಡರಲ್ಲೂ ಲಭ್ಯವಿರುತ್ತದೆ.

ಇದನ್ನೂ ಓದಿ: ಅನಂತ್‌-ರಾಧಿಕಾಗೆ ಗುಜರಾತ್‌ ಜನತೆಯಿಂದ ಅದ್ಧೂರಿ ಸ್ವಾಗತ; ವಿಡಿಯೊ ನೋಡಿ

ಮುಂಬೈ ನಿವಾಸಿಗಳು ಈಗ nmacc.com ಮತ್ತು bookmyshow.com ನಲ್ಲಿ ತಮ್ಮ ಟಿಕೆಟ್‍ಗಳನ್ನು ಬುಕಿಂಗ್‍ ಮಾಡಬಹುದು. ಮುಂಬಯಿಯ ಬಾಂದ್ರಾದ ಕುರ್ಲಾದಲ್ಲಿರುವ ಜಿಯೊ ವರ್ಲ್ಡ್‌ ಸೆಂಟರ್‌ನಲ್ಲಿ ಈ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜುಲೈ 20ರಿಂದ 28ರವರೆಗೆ ಈ ಪ್ರದರ್ಶನ ಲಭ್ಯ. ಇದರ ಅವಧಿ 10 ನಿಮಿಷ ಮಾತ್ರ. ಟಿಕೆಟ್‌ ದರ 199 ರೂಪಾಯಿ. ಬೆಳಗ್ಗೆ 11ರಿಂದ ರಾತ್ರಿ 7.40ರವರೆಗೆ ಹಲವು ಶೋಗಳು ಇರುತ್ತವೆ.

Continue Reading
Advertisement
Dangerous Bike Stunt
Latest5 mins ago

Bike Stunt Video: ಪುಟ್ಟ ಮಗುವನ್ನು ಮುಂದೆ ಕೂರಿಸಿಕೊಂಡು ಬೈಕ್‌ ಸ್ಟಂಟ್‌! ಒದ್ದು ಒಳಗೆ ಹಾಕಿ ಅಂತಿದ್ದಾರೆ ನೆಟ್ಟಿಗರು

Sexual Abuse
Latest17 mins ago

Sexual Abuse: ಶಾಲಾ ಬಾಲಕಿಯನ್ನು ಕ್ರೂರವಾಗಿ ಥಳಿಸಿ ಗುಪ್ತಾಂಗಕ್ಕೆ ಕೋಲು ತುರುಕಿದ ಮಹಿಳೆ!

Paris Olympics
ಕ್ರೀಡೆ22 mins ago

Paris Olympics: ಅತಿ ಹೆಚ್ಚು ಒಲಿಂಪಿಕ್ಸ್ ಆತಿಥ್ಯ ವಹಿಸಿದ ದೇಶ ಯಾವುದು?

Nita Ambani
Latest25 mins ago

Nita Ambani : ನೀತಾ ಅಂಬಾನಿ ಪ್ರಸ್ತುತಪಡಿಸಿದ್ದಾರೆ ವಿಷ್ಣುವಿನ ‘ದಶಾವತಾರ’ದ ಚಿತ್ರಣ; ವಿಡಿಯೊ ನೋಡಿ

karnataka Rain
ಮಳೆ53 mins ago

Karnataka Rain : ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ; ಕುಸಿದು ಬಿದ್ದ ಮನೆಗಳು, ರಸ್ತೆ ಕಾಣದೆ ಕಂದಕ್ಕೆ ನುಗ್ಗಿದ ಕಾರು

Akshay Kumar Rushes To Save Actor Who Faints Mid-Air During A Stunt
ಬಾಲಿವುಡ್54 mins ago

Akshay Kumar: ಹಗ್ಗದಲ್ಲಿ ನೇತಾಡುವಾಗ ಮೂರ್ಛೆ ಹೋದ ನಟ; ರಕ್ಷಿಸಿದ ʻಕಿಲಾಡಿʼ ಅಕ್ಷಯ್​​ ಕುಮಾರ್ !

Priyank Kharge karnataka jobs reservation
ಪ್ರಮುಖ ಸುದ್ದಿ1 hour ago

Karnataka Jobs Reservation: ಕನ್ನಡಿಗರಿಗೆ ಮೀಸಲು ಕಡ್ಡಾಯ ಮಾಡಲು ಕಾನೂನು ಸಮಸ್ಯೆ: ಖರ್ಗೆ

Re-NEET
ದೇಶ1 hour ago

Re-NEET: ನೀಟ್-ಯುಜಿ 2024 ವಿವಾದ; ಇಡೀ ಪರೀಕ್ಷೆಯ ಪಾವಿತ್ರ್ಯತೆಯ ಮೇಲೆ ಪರಿಣಾಮ ಬೀರಿದ್ದರೆ ಮಾತ್ರ ರಿಟೆಸ್ಟ್‌ ಎಂದ ಸುಪ್ರೀಂ ಕೋರ್ಟ್‌

Star Suvarna Akhand Deepa at Sigandur Sri Chaudeshwari Temple Shri Devi Mahatme serial team contribution
ಕಿರುತೆರೆ1 hour ago

Star Suvarna: ಸಿಗಂದೂರು ದೇವಸ್ಥಾನದಲ್ಲಿ ‘ಸುವರ್ಣ ಅಖಂಡ ದೀಪ’ಕ್ಕೆ ಚಾಲನೆ; `ಶ್ರೀ ದೇವೀ ಮಹಾತ್ಮೆ’ ಧಾರಾವಾಹಿ ತಂಡದ ಕೊಡುಗೆ

karnataka Rain
ಮಳೆ2 hours ago

Karnataka Rain : ಹಾಸನದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿತ; ಬೆಳಗಾವಿಯಲ್ಲಿ ರಸ್ತೆಗೆ ಉರುಳಿದ ಬೃಹತ್‌ ಬಂಡೆಗಲ್ಲು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ5 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌