Kannada New Movie: ‘ಪ್ರಕರಣ ತನಿಖಾ ಹಂತದಲ್ಲಿದೆ’ ಮೋಷನ್ ಪೋಸ್ಟರ್ ಬಿಡುಗಡೆ - Vistara News

ಸ್ಯಾಂಡಲ್ ವುಡ್

Kannada New Movie: ‘ಪ್ರಕರಣ ತನಿಖಾ ಹಂತದಲ್ಲಿದೆ’ ಮೋಷನ್ ಪೋಸ್ಟರ್ ಬಿಡುಗಡೆ

Kannada New Movie: ಚಿತ್ರದ ಹೆಸರೇ ಹೇಳುವಂತೆ ಇದೊಂದು ಕ್ರೈಮ್‍ ಜಾನರ್ ಕುರಿತಾದ ಚಿತ್ರ. ತನಿಖೆಯೊಂದರ ಸುತ್ತ ಸುತ್ತವಂತಹ ಚಿತ್ರ. ಡ್ರಗ್ಸ್ ಮಾಫಿಯಾ ಹಿನ್ನೆಲೆಯಲ್ಲಿ ಸಾಗುವ ಕಥೆ ಸಾಕಷ್ಟು ತಿರುವುಗಳನ್ನು ಪಡೆಯುತ್ತಾ ಹೋಗುತ್ತವೆ. ಮುಂದೆ ಏನೆಲ್ಲಾ ಆಗುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು.

VISTARANEWS.COM


on

Kannada New Movie prakarana tanikha hantadalli ide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು (Kannada New Movie) ಹೊಸಬರ ತಂಡಗಳು ಬರುತ್ತಿವೆ. ಅದರಲ್ಲೂ ರಂಗಭೂಮಿಯಲ್ಲಿ ಕೆಲಸ ಮಾಡಿ ಅನುಭವ ಗಳಿಸಿರುವ ಒಂದಿಷ್ಟು ಯುವಕರು, ಕನ್ನಡ ಚಿತ್ರರಂಗಕ್ಕೆ ಹೊಸ ಆಲೋಚನೆಗಳನ್ನು ಇಟ್ಟುಕೊಂಡು ಬರುತ್ತಿದ್ದಾರೆ. ಅಂತವರ ಸಾಲಿಗೆ ಈಗ ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರ ಸೇರಿಕೊಳ್ಳಲಿದೆ.

‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರವನ್ನು ಕರದಾಯಾಮ ಸ್ಟುಡಿಯೋಸ್‍ ಸಂಸ್ಥೆಯಡಿ ಚಿಂತನ್‍ ಕಂಬಣ್ಣ ನಿರ್ಮಿಸಿದರೆ, ಸುಂದರ್‍ ಎಸ್‍ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಬುಧವಾರ ಸಂಜೆ Karadaayaama Studios ಯೂಟ್ಯೂಬ್‍ ಚಾನಲ್‍ನಲ್ಲಿ ಚಿತ್ರದ ಮೋಷನ್‍ ಪೋಸ್ಟರ್‍ ಬಿಡುಗಡೆ ಆಗಿದೆ.

ಚಿತ್ರದ ಹೆಸರೇ ಹೇಳುವಂತೆ ಇದೊಂದು ಕ್ರೈಮ್‍ ಜಾನರ್ ಕುರಿತಾದ ಚಿತ್ರ. ತನಿಖೆಯೊಂದರ ಸುತ್ತ ಸುತ್ತವಂತಹ ಚಿತ್ರ. ಡ್ರಗ್ಸ್ ಮಾಫಿಯಾ ಹಿನ್ನೆಲೆಯಲ್ಲಿ ಸಾಗುವ ಕಥೆ ಸಾಕಷ್ಟು ತಿರುವುಗಳನ್ನು ಪಡೆಯುತ್ತಾ ಹೋಗುತ್ತವೆ. ಮುಂದೆ ಏನೆಲ್ಲಾ ಆಗುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು.

ಇದನ್ನೂ ಓದಿ: Kannada New Movie: ಹೊಸಬರ ತಂಡ ಸಿದ್ದಪಡಿಸಿರುವ ಹೊಸತನದ ಸಿನಿಮಾ; ಲೈಫ್ ಆಫ್ ಮೃದುಲ ಹಾಡು ಬಿಡುಗಡೆ!

ಒಂದಿಷ್ಟು ರಂಗಭೂಮಿ ಗೆಳೆಯರು ಸೇರಿ ಮಾಡಿದ ಚಿತ್ರವಿದು. ಬೇರೆ ಬೇರೆ ರಂಗತಂಡಗಳಲ್ಲಿ ಸಕ್ರಿಯರಾಗಿದ್ದ ಒಂದಿಷ್ಟು ಗೆಳೆಯರು ಒಟ್ಟಿಗೆ ಸೇರಿ ಈ ಚಿತ್ರವನ್ನು ಮಾಡಿದ್ದಾರೆ. ರಂಗಭೂಮಿಯಲ್ಲಿ ಅನುಭವಿಗಳಾದರೂ ಚಿತ್ರರಂಗಕ್ಕೆ ಎಲ್ಲರೂ ಹೊಸಬರೇ. ಮಹಿನ್‍ ಕುಬೇರ್‍, ಮುತ್ತುರಾಜ್‍ ಟಿ, ನಟ ಗಗನ್, ಚಿಂತನ್‍ ಕಂಬಣ್ಣ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬೆಂಗಳೂರು ಮತ್ತು ಕನಕಪುರದಲ್ಲಿ ಚಿತ್ರೀಕರಣವಾಗಿದೆ.

‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರಕ್ಕೆ ಮೋಹನ್ ಎಂ.ಎಸ್ ಮತ್ತು ಜಗದೀಶ್ ಆರ್ ಛಾಯಾಗ್ರಹಣ, ನಾನಿ ಕೃಷ್ಣ ಸಂಕಲನ ಮತ್ತು ಶಿವೋಂ ಸಂಗೀತವಿದೆ. ವಿ.ಎಫ್.ಎಕ್ಸ್ ಜವಾಬ್ದಾರಿಯನ್ನು ಲಕ್ಷ್ಮೀಪತಿ ಎಂ.ಕೆ ಹೊತ್ತಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕೊನೆಯ ಹಂತದಲ್ಲಿದ್ದು, ಆಗಸ್ಟ್ ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರತಂಡ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ದರ್ಶನ್‌ &ಗ್ಯಾಂಗ್‌ಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ; ಕಾರಣಗಳು ಹೀಗಿವೆ!

Actor Darshan: ಹಾಗೇ ಆಗಸ್ಟ್ 1 ರವರೆಗೆ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ವಿಶ್ವನಾಥ‌ ಸಿ ಗೌಡರ್ ಆದೇಶವಾಗಿದೆ.

VISTARANEWS.COM


on

Actor Darshan Judicial Custody Extended Till Aug 1
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ (Actor Darshan) ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ ಮನೆ ಊಟ, ಮಲಗಲು ಹಾಸಿಗೆ, ಓದಲು ಕೆಲವು ಪುಸ್ತಕಗಳನ್ನು ಮನೆಯಿಂದ ತರಿಸಿಕೊಳ್ಳಲು ಅವಕಾಶ ಕೊಡಬೇಕೆಂದು ಹೈಕೋರ್ಟ್​ಗೆ ಜುಲೈ 19 ರಂದು ರಿಟ್ ಅರ್ಜಿ ಸಲ್ಲಿಸಿದ್ದರು. ಅಂದರೆ ಜುಲೈ 18ಕ್ಕೆ ಮುಂದೂಡಿತ್ತು. ಆದರೆ ಈಗ ರಿಟ್ ಅರ್ಜಿಯ ವಿಚಾರಣೆಯನ್ನು ಜುಲೈ 19 ಅಂದರೆ ನಾಳೆಗೆ ಮುಂದೂಡಲಾಗಿದೆ. ಹಾಗೇ ಆಗಸ್ಟ್ 1 ರವರೆಗೆ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ವಿಶ್ವನಾಥ‌ ಸಿ ಗೌಡರ್ ಆದೇಶವಾಗಿದೆ.

ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆಗೆ 13 ಕಾರಣ ನೀಡಿದ ಪೊಲೀಸರು.

1) ಪ್ರಕರಣದ ಎ1 ರಿಂದ ಎ17 ಆರೋಪಿಗಳು ಅಪಹರಣ, ಕೊಲೆ, ಒಳ ಸಂಚು, ಮತ್ತು ಸಾಕ್ಷಿನಾಶಪಡಿಸಿದಂತ ಒಂದು ಗಂಭೀರ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವುದು ಇದುವರೆಗೂ ಸಂಗ್ರಹಿಸಿದ ಪ್ರತ್ಯಕ್ಷ ಸಾಕ್ಷಿದಾರರ ಹೇಳಿಕೆ, ತಾಂತ್ರಿಕ ಮತ್ತು ಸಾಕ್ಷಾಧಾರಗಳಿಂದ ದೃಢಪಟ್ಟಿರುತ್ತದೆ.

2) ಪ್ರಕರಣದಲ್ಲಿ ಈವರೆಗೆ 83,65,500/- ರೂಗಳನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದು ಸದರಿ ಹಣವನ್ನು ಆರೋಪಿಗಳಿಗೆ ನೀಡಿರುವ ಕೆಲವು ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿ ಹೇಳಿಕೆಗಳನ್ನು ಪಡೆದುಕೊಂಡಿರುತ್ತದೆ, ಮುಂದುವರೆದು ಆರೋಪಿಗಳಿಗೆ ಹಣ ನೀಡಿದ ಇನ್ನು ಕೆಲವರನ್ನು ವಿಚಾರಣೆ ಮಾಡಿ ಹೇಳಿಕೆ ಪಡೆದುಕೊಳ್ಳುವುದು ಹಾಗೂ ಹಾಗೂ ಹಣದ ಮೂಲದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಬೇಕಾಗಿರುತ್ತದೆ.

3) ಪ್ರಕರಣದ ತನಿಖಾ ಕಾಲದಲ್ಲಿ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ವಾಹನಗಳ ಪೈಕಿ ಕೆಲವು ವಾಹನಗಳು ಬೇರೆ ಬೇರೆಯವರ ಹೆಸರಿನಲ್ಲಿದ್ದು ಸದರಿ ವಾಹನದ ಆರ್‌ಸಿ ಮಾಲೀಕರನ್ನು ಪತ್ತೆ ಮಾಡಿ ಹೇಳಿಕೆ ದಾಖಲಿಸಿಕೊಳ್ಳಬೇಕಾಗಿರುತ್ತದೆ.

4) ಎಲ್ಲಾ ಎ1 ರಿಂದ ಎ17 ಆರೋಪಿಗಳು ಸಮಾನ ಉದ್ದೇಶದಿಂದ ಕೃತ್ಯ ವೆಸಗಲು ಒಳಸಂಚು ರೂಪಿಸಿರುವುದು ಮತ್ತು ಕೃತ್ಯ ನಡೆದ ನಂತರ ಭೌತಿಕ ಮತ್ತು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ಈಗಾಗಲೇ ನಾಶಪಡಿಸಿರುವುದು ಮತ್ತು ನಾಶಪಡಿಸಲು ಪ್ರಯತ್ನಿಸಿರುವುದು ತನಿಖೆಯಲ್ಲಿ ದೃಢಪಟ್ಟಿರುತ್ತದೆ.

5) ಪ್ರಕರಣದ ಎ-13 ಆರೋಪಿಯ ವರ್ತಮಾನದ ಮೇರೆಗೆ ಅಮಾನತ್ತುಪಡಿಸಿಕೊಂಡ ಹೊಂಡಾ ಡಿಯೋ ಕೆ.ಎ- 51, ಹೆಚ್‌ಡಿ-9022 ಈ ವಾಹನವು ಕಳುವಾಗಿರುವ ಬಗ್ಗೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿರುವುದು ತನಿಖೆಯಲ್ಲಿ ತಿಳಿದು ಬಂದಿದ್ದು ಈ ಬಗ್ಗೆ ಸದರಿ ಪೊಲೀಸ್ ಠಾಣೆಯಿಂದ ದಾಖಲಾತಿಗಳನ್ನು ಸಂಗ್ರಹಿಸಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಬೇಕಾಗಿರುತ್ತದೆ

ಇದನ್ನೂ ಓದಿ: Actor Darshan: ಇಂದು ಜಡ್ಜ್​ ಮುಂದೆ ದರ್ಶನ್ & ಟೀಂ ಹಾಜರು; ಜೈಲುವಾಸ ಮುಕ್ತಾಯವಾಗುತ್ತಾ?

6) ಆರೋಪಿಗಳ ಪೈಕಿ ಕೆಲವು ಆರೋಪಿಗಳು ಕೃತ್ಯಕ್ಕೆ ಬಳಸಿಕೊಂಡಿದ್ದ ಮೊಬೈಲ್ ಸಿಮ್ ಗಳನ್ನು ಬೇರೆಯವರ ಹೆಸರಿನಲ್ಲಿ ಖರೀದಿ ಮಾಡಿ ಉಪಯೋಗಿಸಿರುವುದು ತನಿಖೆಯಲ್ಲಿ ದೃಡಪಟ್ಟಿದ್ದು, ಸದರಿ ಸಿಮ್ಗಳು ನೊಂದಣಿಯಾದ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಿಸಿ ಹೇಳಿಕೆ ದಾಖಲಿಸಿದ್ದು ಇನ್ನು ಕೆಲವು ಸಿಮ್ ಖರೀದಿದಾರರ ವಿಳಾಸವನ್ನು ಪತ್ತೆ ದಾಖಲಿಸಿಕೊಳ್ಳಬೇಕಾಗಿರುತ್ತದೆ. ಮಾಡಿ ಅವರುಗಳನ್ನು ಮಾಡಿ ವಿಚಾರಣೆ ಹೇಳಿಕೆ.

7) ಪ್ರಕರಣದ ತನಿಖಾ ಕಾಲದಲ್ಲಿ ಅಮಾನತ್ತು ಪಡಿಸಿಕೊಂಡು ಪರಿಶೀಲಿಸಲಾದ ತಾಂತ್ರಿಕ ಸಾಕ್ಷ್ಯಾಧಾರಗಳಲ್ಲಿ ಎಲ್ಲಾ ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದಿದ್ದು ಇನ್ನೂ ಹಲವಾರು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ತಜ್ಞರ ಪರಿಶೀಲನೆಗೆ ಕಳುಹಿಸಿದ್ದು ವರದಿ ಸಂಗ್ರಹಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಬೇಕಾಗಿರುತ್ತದೆ.

8) ಪ್ರಕರಣದಲ್ಲಿ ಅಮಾನತ್ತುಪಡಿಸಿಕೊಂಡ ಆರೋಪಿಗಳಿಗೆ ಸಂಬಂಧಿಸಿದ ಮೊಬೈಲ್‌ಗಳನ್ನು ಹಾಗೂ ಸಾಕ್ಷಿದಾರರಿಂದ ಅಮಾನತ್ತುಪಡಿಸಿಕೊಂಡ ಮೊಬೈಲ್ ಪೋನ್‌ಗಳಲ್ಲಿನ ಪ್ರಕರಣಕ್ಕೆ ಪೂರಕವಾದ ದತ್ತಾಂಶವನ್ನು ಸಂಗ್ರಹಿಸಲು ಮತ್ತು ದತ್ತಾಂಶದ ಅಸಲುತನದ ಪರೀಕ್ಷೆಗಾಗಿ ಸಿ.ಎಫ್.ಎಸ್.ಎಲ್ ಹೈದ್ರಾಬಾದ್‌ಗೆ ಕಳುಹಿಸಿಕೊಟ್ಟಿದ್ದು ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ.

9) ಪ್ರಕರಣದಲ್ಲಿ ಅಮಾನತ್ತುಪಡಿಸಿಕೊಂಡಿರುವ ಡಿ.ವಿ.ಆರ್‌ಗಳಲ್ಲಿನ ದತ್ತಾಂಶದ ರಿಟ್ರಿವ್ ಕಾರ್ಯವು ಸಿಐಡಿ ಅಧಿಕಾರಿಗಳ ಬಳಿ ಇನ್ನು ಪ್ರಗತಿಯಲ್ಲಿರುತ್ತದೆ, ಡಿವಿಆರ್‌ನಲ್ಲಿನ ದತ್ತಾಂಶವನ್ನು ಸಂಗ್ರಹಿಸಿದ ನಂತರ ಪರಿಶೀಲನೆ ಮಾಡಿ ಆರೋಪಿಗಗಳು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳನ್ನು ಸಂಗ್ರಹಿಸಿ ಎಫ್.ಎಸ್.ಎಲ್‌ಗೆ ಕಳುಹಿಸಿ ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ.

10) ಪ್ರಕರಣದಲ್ಲಿ ಆರೋಪಿಗಳು ಕೃತ್ಯಕ್ಕೆ ಮೊದಲು ಹಾಗೂ ಕೃತ್ಯದ ಸಮಯದಲ್ಲಿ ಹಾಗೂ ಕೃತ್ಯದ ನಂತರ ಹಲವಾರು ವ್ಯಕ್ತಿಗಳನ್ನು ಸಂಪರ್ಕಿಸಿದ್ದು ಅವರ ಪೈಕಿ ಕೆಲವಾರು ಸಾಕ್ಷಿದಾರರನ್ನು ವಿಚಾರಣೆ ಮಾಡಿದ್ದು, ಇನ್ನು ಹಲವು ಸಾಕ್ಷಿದಾರರುಗಳನ್ನು ವಿಚಾರಣೆ ಮಾಡಿ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿರುತ್ತದೆ. ಈ ಸಮಯದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದ್ದಲ್ಲಿ ಸಾಕ್ಷ್ಯ ನಾಶ ಮಾಡುವ ಸಾದ್ಯತೆ ಹೆಚ್ಚಾಗಿರುತ್ತದೆ.

11) ಪ್ರಕರಣದಲ್ಲಿ ಇನ್ನೂ ಹಲವಾರು ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷಿದಾರರುಗಳನ್ನು ವಿಚಾರಣೆ ಮಾಡಿ ಹೇಳಿಕೆಗಳನ್ನು ಹಾಗೂ ಕಲಂ 164 ಅಡಿ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿದ್ದು ಈ ಹಂತದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದಲ್ಲಿ ಪ್ರಕರಣದ ಸಾಕ್ಷಿದಾರರಿಗೆ ಹೇಳಿಕೆ ನೀಡದಂತೆ ನೇರವಾಗಿ ಮತ್ತು ಅವರ ಸಹಚರರ ಮೂಲಕ ಬೆದರಿಕೆ ಹಾಕುವ ಮತ್ತು ವ್ಯವಸ್ಥಿತ ರೀತಿಯಲ್ಲಿ ಸಾಕ್ಷ್ಯ ನಾಶ ಮಾಡುವ ಸಾದ್ಯತೆ ಹೆಚ್ಚಾಗಿರುತ್ತದೆ. ಅಲ್ಲದೇ ಸಾಕ್ಷಿದಾರರಿಗೆ ಬೆದರಿಕೆ ಹಾಕಿರುವ ಬಗ್ಗೆ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ನಂ-315/2024 ರೀತ್ಯ ದೂರು ದಾಖಲಾಗಿರುತ್ತದೆ

12) ಪ್ರಕರಣದ ಆರೋಪಿಗಳು ಪ್ರಭಾವಿಗಳು ಹಾಗೂ ಹಣಬಲ ಮತ್ತು ಅಭಿಮಾನಿ ಬಳಗವನ್ನು ಹೊಂದಿದ್ದು ಪ್ರಕರಣದಲ್ಲಿ ಇನ್ನೂ ಹಲವಾರು ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷ್ಯಗಳನ್ನು ಸಂಗ್ರಹಿಸಬೇಕಾಗಿರುತ್ತದೆ. ಈ ಸಮಯದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದ್ದಲ್ಲಿ ತಮ್ಮ ಪ್ರಭಾವಗಳನ್ನು ಬಳಸಿ ಪ್ರಕರಣದ ಸಾಕ್ಷಿದಾರರುಗಳಿಗೆ ಸಾಕ್ಷಿ ನುಡಿಯದಂತೆ ಬೆದರಿಕೆ ಹಾಕುವ ಮತ್ತು ವ್ಯವಸ್ಥಿತ ರೀತಿಯನ್ನು ಸಾಕ್ಷ್ಯನಾಶ ಪಡಿಸುವ ಸಾದ್ಯತೆಗಳು ಹೆಚ್ಚಾಗಿರುತ್ತದೆ.

13) ಪ್ರಕರಣವು ಹಾಲಿ ತನಿಖೆಯಲ್ಲಿದ್ದು ಪ್ರಕರಣದಲ್ಲಿ ಎಲ್ಲಾ ಆರೋಪಿಗಳ ಕೃತ್ಯದಲ್ಲಿನ ಅವರ ಸಂಪೂರ್ಣ ಪಾತ್ರದ ಬಗ್ಗೆ ಹೆಚ್ಚಿನ ವಿಷಯಗಳನ್ನು ತಿಳಿಯಬೇಕಾಗಿದ್ದು ಈ ಬಗ್ಗೆ ತನಿಖೆ ಮುಂದುವರೆದಿರುತ್ತದೆ.

ಈ ಮೇಲ್ಕಂಡ ಎಲ್ಲಾ ಕಾರಣಗಳಿಂದ ಎ1 ರಿಂದ ಎ17 ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡದೇ ನ್ಯಾಯಾಂಗ ಬಂಧನ ಮುಂದುವರಿಸುವಂತೆ ಮನವಿ.

Continue Reading

ಕರ್ನಾಟಕ

Kannada New Movie: ಹಾರರ್ ಜಾನರ್‌ನ ʼಹಗ್ಗʼ ಚಿತ್ರದ ಟೀಸರ್ ಅನಾವರಣ

Kannada New Movie: ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ, ವೇಣು ಪ್ರಮುಖಪಾತ್ರದಲ್ಲಿ ನಟಿಸಿರುವ, ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್. ನಿರ್ದೇಶನದ “ಹಗ್ಗ” ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು. ಖ್ಯಾತ ನಿರ್ದೇಶಕ ಆರ್. ಚಂದ್ರು ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರದ ನಿರ್ಮಾಪಕರಾದ ಕೆ.ಮಂಜು,‌ ದಯಾಳ್ ಅವರು ಸೇರಿದಂತೆ ಅನೇಕ ಗಣ್ಯರು “ಹಗ್ಗ” ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

VISTARANEWS.COM


on

Director R Chandru unveiled the teaser of Hagga movie
Koo

ಬೆಂಗಳೂರು: ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್. ನಿರ್ದೇಶನದ ಹಾಗೂ ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ, ವೇಣು ಪ್ರಮುಖಪಾತ್ರದಲ್ಲಿ ನಟಿಸಿರುವ “ಹಗ್ಗ” ಚಿತ್ರದ (Kannada New Movie) ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು. ಖ್ಯಾತ ನಿರ್ದೇಶಕ ಆರ್. ಚಂದ್ರು ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಚಿತ್ರದ ನಿರ್ಮಾಪಕರಾದ ಕೆ.ಮಂಜು,‌ ದಯಾಳ್ ಸೇರಿದಂತೆ ಅನೇಕ ಗಣ್ಯರು “ಹಗ್ಗ” ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಟೀಸರ್ ಬಿಡುಗಡೆ ನಂತರ ಮಾತನಾಡಿದ ನಿರ್ದೇಶಕ ಅವಿನಾಶ್, ನಾನು ಮೂಲತಃ ಮೆಕಾನಿಕಲ್ ಎಂಜಿನಿಯರ್. ಸಿನಿಮಾ ನಿರ್ದೇಶನ ನನ್ನ ಕನಸು. ಆ ಕನಸು “ಹಗ್ಗ” ಚಿತ್ರದ ಮೂಲಕ ಈಡೇರಿದೆ. ಈ ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಚ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆದರೆ “ಹಗ್ಗ”ವೇ ನಮ್ಮ ಚಿತ್ರದ ನಾಯಕ. ಇದು ಹಾರರ್ ಜಾನರ್‌ನ ಚಿತ್ರವಾದರೂ, ಚಿತ್ರದಲ್ಲಿ ಒಂದು ಪ್ರಮುಖ ಸಂದೇಶ ಸಹ ಇದೆ ಎಂದರು.

ಇದನ್ನೂ ಓದಿ: Paris Olympics: ಅತಿ ಹೆಚ್ಚು ಒಲಿಂಪಿಕ್ಸ್ ಆತಿಥ್ಯ ವಹಿಸಿದ ದೇಶ ಯಾವುದು?

ಚಿತ್ರಕ್ಕೆ ನಾನೇ ಕಥೆ‌ ಬರೆದು ನಿರ್ಮಾಣ ಮಾಡಿದ್ದೇನೆ.‌ ಅವಿನಾಶ್ ನಿರ್ದೇಶನ ಮಾಡಿದ್ದಾರೆ. ಟೀಸರ್ ಬಿಡುಗಡೆ ಬಂದಿರುವ ಎಲ್ಲಾ ಗಣ್ಯರಿಗೂ ಧನ್ಯವಾದ. ಈಗಾಗಲೇ ಮೋಷನ್ ಪೋಸ್ಟರ್ ಮೂಲಕ “ಹಗ್ಗ” ಜನರ ಮನಸ್ಸಿಗೆ ಹತ್ತಿರವಾಗಿದೆ. ಈಗ ಟೀಸರ್ ಬಿಡುಗಡೆಯಾಗಿದೆ. ಆಗಸ್ಟ್‌ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ಮಾಪಕ ರಾಜ್ ಭಾರದ್ವಾಜ್ ತಿಳಿಸಿದರು.

ಅವಿನಾಶ್ ಅವರು ಚಿತ್ರದ ಕುರಿತು ಹೇಳಿದಾಗ ನನ್ನ ಪಾತ್ರ ಬಹಳ ಇಷ್ಟವಾಯಿತು. ನನ್ನನ್ನು “ಸೂಪರ್ ಹೀರೋ” ಎಂದು ತೋರಿಸಿದ್ದಾರೆ. ಪಾತ್ರದ ಬಗ್ಗೆ ಹೆಚ್ಚು ಹೇಳುವ ಹಾಗಿಲ್ಲ‌‌. ಆದರೆ ಒಳ್ಳೆಯ ಪಾತ್ರ ಕೊಟ್ಟ ನಿರ್ದೇಶಕರಿಗೆ ಹಾಗೂ ನಿರ್ಮಾಪಕರಿಗೆ ಧನ್ಯವಾದ ಎಂದರು ನಟಿ ಅನು ಪ್ರಭಾಕರ್.

ನನ್ನದು ಈ ಚಿತ್ರದಲ್ಲಿ ಪತ್ರಕರ್ತೆಯ ಪಾತ್ರ. ಯಾವುದೋ ಒಂದು ವಿಷಯದ ಅನ್ವೇಷಣೆಗಾಗಿ ಹಳ್ಳಿಗೆ ಹೋಗುತ್ತೇನೆ. ಈ ಚಿತ್ರದಲ್ಲಿ ಜೀಪ್ ಕೂಡ ಡ್ರೈವ್ ಮಾಡಿದ್ದೇನೆ ಎಂದು ಹರ್ಷಿಕಾ ಪೂಣಚ್ಚ ತಿಳಿಸಿದರು.

ಇದು ನನ್ನ ಮೊದಲ ಚಿತ್ರ. ನಟನೆಗೆ ತಬಲ ನಾಣಿ ಅವರು ಬಹಳ ಸಹಾಯ ಮಾಡಿದರು. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಾಯಕ ವೇಣು. ನಟ ತಬಲ ನಾಣಿ ಸಹ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ನಿರ್ಮಾಪಕ ರಾಜ್ ಭಾರದ್ವಾಜ್ ಅವರೆ “ಹಗ್ಗ” ಚಿತ್ರಕ್ಕೆ ಕಥೆ ಬರೆದಿದ್ದು, ಚಿತ್ರಕಥೆ ರಾಜ್ ಭಾರದ್ವಾಜ್, ಅವಿನಾಶ್ ಹಾಗೂ ಮನೋಹರ್ ಅವರದು. ಮ್ಯಾಥ್ಯೂಸ್ ಮನು ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ ಹಾಗೂ ಎನ್.ಎಂ. ವಿಶ್ವ ಅವರ ಸಂಕಲನವಿರುವ ಈ ಚಿತ್ರಕ್ಕೆ ಮನೋಹರ್ ಎಸ್.ಪಿ. ಸಂಭಾಷಣೆ ಬರೆದಿದ್ದಾರೆ.

ಇದನ್ನೂ ಓದಿ: Media Connect: ಮೀಡಿಯಾ ಕನೆಕ್ಟ್‌ಗೆ ಭರವಸೆಯ ಪಿಆರ್‌ ಸೇವಾ ಪ್ರಶಸ್ತಿ

ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ, ತಬಲನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ಹೊಸಬರ ತಂಡ ಸಿದ್ದಪಡಿಸಿರುವ ಹೊಸತನದ ಸಿನಿಮಾ; ಲೈಫ್ ಆಫ್ ಮೃದುಲ ಹಾಡು ಬಿಡುಗಡೆ!

Kannada New Movie: ಕಾಲ್ಪನಿಕ ಡಾರ್ಕ್ ಡ್ರಾಮಾ ಜಾನರ್‌ನ ಕಥೆಯಾಗಿದ್ದು, ಮೃದುಲಾ ಎಂಬುವಳ ಜೀವನದಲ್ಲಿ ಎದುರಾಗುವ ಮೂರು ವಿಭಿನ್ನ ಕಾಲ ಘಟ್ಟಗಳು ಬರುತ್ತದೆ. ಆಕೆಗೆ ಬದುಕಲ್ಲಿ ಅನಿರೀಕ್ಷಿತವಾಗಿ ಬರುವ ಸವಾಲನ್ನು ಯಾವ ರೀತಿ ಎದುರಿಸುತ್ತಾಳೆ ಎಂಬುದನ್ನು ಕುತೂಹಲ ತಿರುವುಗಳ ಮೂಲಕ ಥ್ರಿಲ್ಲರ್ ರೂಪದಲ್ಲಿ ತೋರಿಸಲಾಗಿದೆ.

VISTARANEWS.COM


on

Kannada New Movie life of mradula song out
Koo

ಬೆಂಗಳೂರು: ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ’ಲೈಫ್ ಆಫ್ ಮೃದುಲ’ ಚಿತ್ರವನ್ನು ಮದನ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಮದನ್‌ಕುಮಾರ್.ಸಿ ನಾಯಕ ಮತು ನಿರ್ಮಾಪಕ. ಸಂಭಾಷಣೆ ಬರೆದಿರುವ ಯೋಗಿ ದೇವಗಂಗೆ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಹಲವು ನಿರ್ದೇಶಕರ ಬಳಿ ಕೆಲಸ ಕಲಿತಿರುವ ಕೋಲಾರದ ಚೇತನ್ ತ್ರಿವೇಣ್ ಸಿನಿಮಾಕ್ಕೆ ರಚನೆ,ಚಿತ್ರಕಥೆ, ಸಾಹಸ ಹಾಗೂ ಆಕ್ಷನ್ ಕಟ್ ಹೇಳಿದ್ದಾರೆ.

ಪ್ರಚಾರದ ಮೊದಲ ಹಂತವಾಗಿ ಹಾಡು ಬಿಡುಗಡೆ ಸಮಾರಂಭವು ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಅದ್ಧೂರಿಯಾಗಿ ನಡೆಯಿತು. ಯುವ ಮುಖಂಡ ಮೊಹ್ಮದ್ ನಲಪಾಡ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡುತ್ತಾ, ’ಬಗ್ಸೋದೇ ಬಡಿಯೋದೆ’ ಹಾಡಿನ ಸಾಲು ಯುವ ಜನಾಂಗಕ್ಕೆ ತಪ್ಪು ಸಂದೇಶ ಸಾರುತ್ತದೆ. ಇದನ್ನು ಯುವಕರಿಗೆ ತೋರಿಸಬಾರದು, ಮಾಡಬಾರದು. ಈಗಾಗಲೇ ಅದರ ಅನುಭವ ಪಡೆದಿದ್ದೇನೆ. ರ‍್ಯಾಪ್ ಸಾಂಗ್ ಅಂದರೆ ತಕ್ಷಣ ವೈಯಲೆಂಟ್ ಆಗಿರಬೇಕು ಎಂದು ಯಾರೂ ಹೇಳಿಲ್ಲ. ಒಳ್ಳೆತನದಲ್ಲೂ ರ‍್ಯಾಪ್ ಮಾಡಬಹುದು. ಇಂತಹ ಪದಗಳು ಬದಲಾದರೆ, ಮುಂದಿನ ತಲಮಾರು ಬದಲಾವಣೆ ಆಗಲು ಸಾಧ್ಯವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಒಳ್ಳೆತನ ಬೆಳೆಸೋಣ, ಮಾಡೋಣವೆಂದು ತಂಡಕ್ಕೆ ಶುಭ ಹಾರೈಸಿದರು.

ಕಾಲ್ಪನಿಕ ಡಾರ್ಕ್ ಡ್ರಾಮಾ ಜಾನರ್‌ನ ಕಥೆಯಾಗಿದ್ದು, ಮೃದುಲಾ ಎಂಬುವಳ ಜೀವನದಲ್ಲಿ ಎದುರಾಗುವ ಮೂರು ವಿಭಿನ್ನ ಕಾಲ ಘಟ್ಟಗಳು ಬರುತ್ತದೆ. ಆಕೆಗೆ ಬದುಕಲ್ಲಿ ಅನಿರೀಕ್ಷಿತವಾಗಿ ಬರುವ ಸವಾಲನ್ನು ಯಾವ ರೀತಿ ಎದುರಿಸುತ್ತಾಳೆ ಎಂಬುದನ್ನು ಕುತೂಹಲ ತಿರುವುಗಳ ಮೂಲಕ ಥ್ರಿಲ್ಲರ್ ರೂಪದಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: Actor  Karthi: ನಟ ಕಾರ್ತಿ ಸಿನಿಮಾ ಸೆಟ್‌ನಲ್ಲಿ ಅವಘಡ; 20 ಅಡಿಯಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಸಾವು

ಇದನ್ನೂ ಓದಿ: Actor  Karthi: ನಟ ಕಾರ್ತಿ ಸಿನಿಮಾ ಸೆಟ್‌ನಲ್ಲಿ ಅವಘಡ; 20 ಅಡಿಯಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಸಾವು

ನಾಯಕಿಯಾಗಿ ಪೊಜಾಲೋಕಾಪುರ. ಇವರೊಂದಿಗೆ ಆಶಾಸುಜಯ್, ಶಶಾಂಕ್, ಕುಲದೀಪ್, ಯೋಗಿದೇವಗಂಗೆ, ಅನೂಪ್‌ಥಾಮಸ್, ಪ್ರೀತಿಚಿದಾನಂದ್, ಶರೀಫ್ ಮುಂತಾದವರು ನಟಿಸಿದ್ದಾರೆ. ಸಂಗೀತ ರಾಹುಲ್.ಎಸ್.ವಾಸ್ತರ್, ಛಾಯಾಗ್ರಹಣ ಅಚ್ಚುಸುರೇಶ್, ಸಂಕಲನ ವಸಂತಕುಮಾರ್.ಕೆ ಅವರದಾಗಿದೆ. ಬೆಂಗಳೂರು, ಕುಂದಾಪುರ ಸುಂದರ ತಾಣಗಳಲ್ಲಿ 25 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಸೆನ್ಸಾರ್‌ನಿಂದ ಪ್ರಶಂಸೆ ಪಡೆದುಕೊಂಡ ಚಿತ್ರವನ್ನು ಆಗಸ್ಟ್ ತಿಂಗಳಲ್ಲಿ ತೆರೆಗೆ ತರಲು ನಿರ್ಮಾಪಕರು ಯೋಜನೆ ರೂಪಿಸಿಕೊಂಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ಇಂದು ಜಡ್ಜ್​ ಮುಂದೆ ದರ್ಶನ್ & ಟೀಂ ಹಾಜರು; ಜೈಲುವಾಸ ಮುಕ್ತಾಯವಾಗುತ್ತಾ?

Actor Darshan: ಇನ್ನೂ ಇವತ್ತು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್​ರನ್ನ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಲಿದ್ದಾರೆ. 24 ನೇ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಮತ್ತೊಂದು ಕಡೆ ಜೈಲು ಊಟಕ್ಕೆ ಬೇಸತ್ತು, ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ದರ್ಶನ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಕೂಡ ಇಂದೇ ನಡೆಯಲಿದೆ.

VISTARANEWS.COM


on

Actor Darshan Judicial Custody Ends Today May Extend Again
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ (Actor Darshan) ಅರೆಸ್ಟ್ ಆಗಿರುವುದು ಗೊತ್ತೇ ಇದೆ. ಇಂದು ದರ್ಶನ್ ಹಾಗೂ ಅವರ ಸಹಚರರ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಪೂರ್ಣಗೊಳ್ಳಲಿದೆ. ಆದರೆ ಈ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ ಆಗುವ ಸಾಧ್ಯತೆ ಇದೆ. ಯಾಕೆಂದರೆ, ದರ್ಶನ್​ಹಾಗೂ ಇತರ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಪಟ್ಟಿಯನ್ನ ಪೊಲೀಸರು ಸಿದ್ಧ ಪಡಿಸಿದ್ದಾರೆ. ವತ್ತು ನ್ಯಾಯಾಲಯಕ್ಕೆ ರಿಮಾಂಡ್ ಅರ್ಜಿಯನ್ನು ಸಲ್ಲಿಸಲಿದ್ದಾರೆ.

ನಟ ದರ್ಶನ್ ಹಾಗೂ ಇತರರು ಜೂನ್ 11ರಂದು ಬಂಧನಕ್ಕೆ ಒಳಗಾದರು. ಬಂಧನದ ಬಳಿಕ ಒಂದೊಂದೇ ಸತ್ಯ ಹೊರ ಬರುತ್ತಿದೆ. ಇನ್ನೂ ಚಾರ್ಜ್​ಶೀಟ್ ಸಲ್ಲಿಕೆ ಮಾಡಿಲ್ಲ. ಇದೇ ಕಾರಣ ಇಟ್ಟುಕೊಂಡು ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೆ ಕೋರಲು ನಿರ್ಧರಿಸಲಾಗಿದೆ. ನಟ ದರ್ಶನ್ ಅವರಿಗೆ ಜಾಮೀನು ಸಿಕ್ಕರೆ ಹೊರ ಬಂದು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಪೊಲೀಸರು ಕೋರ್ಟ್ ಎದುರು ಆತಂಕ ಹೊರಹಾಕಲಿದ್ದಾರೆ. ವಿದೇಶಕ್ಕೆ ತೆರಳುವ ಭಯವೂ ಇದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನೂ ಇವತ್ತು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್​ರನ್ನ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಲಿದ್ದಾರೆ. 24 ನೇ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಮತ್ತೊಂದು ಕಡೆ ಜೈಲು ಊಟಕ್ಕೆ ಬೇಸತ್ತು, ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ದರ್ಶನ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಕೂಡ ಇಂದೇ ನಡೆಯಲಿದೆ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ದೇಹ ಪೋಸ್ಟ್‌ ಮಾರ್ಟಮ್‌ ಮಾಡಿದ ವೈದ್ಯ ಪವಿತ್ರ ಗೌಡ ಆಪ್ತೆಯ ಪತಿ!

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ದೇಹ ಪೋಸ್ಟ್‌ ಮಾರ್ಟಮ್‌ ಮಾಡಿದ ವೈದ್ಯ ಪವಿತ್ರ ಗೌಡ ಆಪ್ತೆಯ ಪತಿ!

ದರ್ಶನ್ ಬಂಧನವಾಗಿ 36 ದಿನಗಳಾಗಿವೆ. ಆದರೆ ಇಲ್ಲಿಯವರೆಗೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಸಿಲ್ಲ. ಪೊಲೀಸರಿಂದ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಆಗಲಿ ಎಂದು ದರ್ಶನ್ ಪರ ವಕೀಲರು ಕಾಯುತ್ತಿದ್ದಾರೆ.

Continue Reading
Advertisement
Virat Kohli
ಕ್ರೀಡೆ1 min ago

Virat Kohli: ಮೊದಲ ಬಾರಿಗೆ ಮಗ ಅಕಾಯ್ ಜತೆ ಕಾಣಿಸಿಕೊಂಡ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Golden Designer Fashion Wears Trendy Golden Designer Wedding Fashion
ಫ್ಯಾಷನ್6 mins ago

Golden Designer Fashion Wears: ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಶೈಲಿಯ ಗೋಲ್ಡನ್‌ ಡಿಸೈನರ್‌ವೇರ್ಸ್!

NEET-UG 2024
ದೇಶ9 mins ago

NEET UG 2024: “ವಿದ್ಯಾರ್ಥಿಗಳ ಗುರುತು ಬಹಿರಂಗ ಪಡಿಸದೇ ನೀಟ್‌ ಫಲಿತಾಂಶ ಪ್ರಕಟಿಸಿ”-NTAಗೆ ಸುಪ್ರೀಂ ಸೂಚನೆ; ವಿಚಾರಣೆ ಮುಂದೂಡಿಕೆ

Money Guide
ಮನಿ-ಗೈಡ್16 mins ago

Money Guide: ಇಎಂಐ ಮೂಲಕ ಮೊಬೈಲ್‌ ಖರೀದಿಸುವ ಯೋಚನೆಯಲ್ಲಿದ್ದೀರಾ? ಈ ಅಂಶ ನಿಮಗೆ ತಿಳಿದಿರಲೇ ಬೇಕು

Babar Azam
ಕ್ರೀಡೆ27 mins ago

Babar Azam: 18 ವರ್ಷದ ನೆಟ್​ ಬೌಲರ್​ ಮುಂದೆ ಪರದಾಡಿದ ಪಾಕ್​ ನಾಯಕ ಬಾಬರ್​ ಅಜಂ; ವಿಡಿಯೊ ವೈರಲ್​

Train Accident
ಪ್ರಮುಖ ಸುದ್ದಿ48 mins ago

Train Accident : ಎಕ್ಸ್​ಪ್ರೆಸ್​ ರೈಲು ಅಪಘಾತ; ನಾಲ್ವರ ಸಾವು, ಹಲವರಿಗೆ ಗಾಯ

Uttar pradesh Politics
ದೇಶ50 mins ago

Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

ಯಾದಗಿರಿ1 hour ago

Murder case : ಪತ್ನಿ, ಅತ್ತೆ ಹಾಗೂ ಮಾವನಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು, ಚಾಕುವಿನಿಂದ ಇರಿದು ಕೊಂದ

b nagendra valmiki corporation scam 2
ಕ್ರೈಂ1 hour ago

Valmiki Corporation Scam: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಮತ್ತೆ 5 ದಿನ ಇಡಿ ಕಸ್ಟಡಿಗೆ

INDW vs PAKW
ಕ್ರೀಡೆ2 hours ago

INDW vs PAKW: ನಾಳೆಯಿಂದ ಮಹಿಳಾ ಏಷ್ಯಾ ಕಪ್​; ಭಾರತಕ್ಕೆ ಪಾಕ್​ ಎದುರಾಳಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Uttara Kannada Landslide
ಮಳೆ2 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

ಟ್ರೆಂಡಿಂಗ್‌