Karnataka Weather : ಕರಾವಳಿ, ಮಲೆನಾಡು ಸೇರಿ ಒಳನಾಡಲ್ಲಿ ಭಾರಿ ಮಳೆ; ಗಾಳಿಯ ಶರವೇಗ 50 ಕಿ.ಮೀ! - Vistara News

ಮಳೆ

Karnataka Weather : ಕರಾವಳಿ, ಮಲೆನಾಡು ಸೇರಿ ಒಳನಾಡಲ್ಲಿ ಭಾರಿ ಮಳೆ; ಗಾಳಿಯ ಶರವೇಗ 50 ಕಿ.ಮೀ!

Karnataka Weather Forecast : ರಾಜ್ಯದಲ್ಲಿ ಈ ವಾರ ಪೂರ್ತಿ ಮಳೆಯು (Karnataka Rain) ಅಬ್ಬರಿಸಲಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದ್ದು, ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

VISTARANEWS.COM


on

karnataka Weather Forecast
ಭಾರಿ ಮಳೆಗೆ ಶಿರಸಿಯ ಚೌಡೇಶ್ವರಿ ಕಾಲೋನಿಯಲ್ಲಿ ನೀರು ನಿಂತ ಪರಿಣಾಮ ಮನೆಯಲ್ಲೇ ಲಾಕ್‌ ಆದ ಮಂದಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜನ-ಜೀವನ (Karnataka Weather Forecast) ಅಸ್ತವ್ಯಸ್ತಗೊಂಡಿದೆ. ಶುಕ್ರವಾರವೂ ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮಲೆನಾಡು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭರ್ಜರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಕಡೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ

ಇದನ್ನೂ ಓದಿ: Kiccha Sudeep: ಸೆಲ್ಫಿಗಾಗಿ 2 ಗಂಟೆ ಕಾದ ಅಭಿಮಾನಿಗೆ ಕಿಚ್ಚ ಸುದೀಪ್ ಅವಮಾನ! ವಿಡಿಯೊ ನೋಡಿ

karnataka weather Forecast
ಭಾರಿ ಮಳೆಗೆ ಶಿರಸಿಯ ಬಡಾವಣೆಯೊಂದರಲ್ಲಿ ನೀರು ನಿಂತ ದೃಶ್ಯ

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಬೆಳಗಾವಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸುತ್ತಮುತ್ತ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿಗೆ 40-50 ಕಿ.ಮೀ ತಲುಪಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain : ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಜನರು ಕಂಗಲಾಗಿದ್ದಾರೆ. ಚಿಕ್ಕಮಗಳೂರಲ್ಲಿ ಮನೆ ಮುಂಭಾಗ ಕಂದಕ ನಿರ್ಮಾಣವಾಗಿದೆ. ಬೃಹತ್‌ ಮರಗಳು ಧರೆಗುರುಳಿದ್ದು, ಮನೆಯ ಚಾವಣಿಗಳು ಕುಸಿದು ಬಿದ್ದಿವೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಮಲೆನಾಡಿನ ಚಿಕ್ಕಮಗಳೂರು ಸೇರಿ ರಾಜ್ಯಾದ್ಯಂತ ಭಾರಿ (Karnataka Rain) ಮಳೆಯಾಗುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕವೊಂದು ಸೃಷ್ಟಿಯಾಗಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮೇಗೂರು ಗ್ರಾಮದಲ್ಲಿ ಮನೆಯ ಮುಂಭಾಗವೇ 30 ಅಡಿ ಆಳದ ಕಂದಕ ಸೃಷ್ಟಿಯಾಗಿದೆ. ಗ್ರಾಮದ ಪ್ರೇಮ ಬಾಬು ಗೌಡ ಎಂಬುವವರ ಮನೆ ಮುಂದೆ ಕಂದಕ ಸೃಷ್ಟಿಯಾಗಿದ್ದು, ವಿಚಿತ್ರ ಕಂದಕ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಕಂದಕದ ಒಳಗಿಂದ ಭೂಮಿ ಒಳಗೆ ನೀರಿನ ಬುಗ್ಗೆ ಹರಿಯುತ್ತಿದೆ. ಬಾವಿ ಆಕಾರದಲ್ಲಿ ಕಂದಕ ಸೃಷ್ಟಿಯಾಗಿದೆ.

ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜನ-ಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಅಬ್ಬರಕ್ಕೆ ಮನೆಯ ಹಿಂಭಾಗದಲ್ಲಿ ಭೂ ಕುಸಿತ ಉಂಟಾಗಿದೆ. ಕಳಸ ತಾಲೂಕಿನ ಮಾವಿನಕೆರೆ ಕಲ್ಲಾನೆಯಲ್ಲಿ ಘಟನೆ ನಡೆದಿದೆ. ಕಲ್ಲಾನೆಯ ಬಾಸ್ಕರ್ ಪೂಜಾರಿ ಎಂಬುವವರು ಕಂಗಲಾಗಿದ್ದಾರೆ. ಮಳೆ ಹೆಚ್ಚಾದಂತೆ ಸ್ವಲ್ಪ ಸ್ವಲ್ಪವೇ ಭೂಮಿ ಕುಸಿಯುತ್ತಿದೆ.

ಪ್ರಪಾತಕ್ಕೆ ಬಿದ್ದ ಲಾರಿ, ಚಾಲಕ ಗ್ರೇಟ್‌ ಎಸ್ಕೇಪ್‌

ಚಿಕ್ಕಮಗಳೂರಿನಲ್ಲಿ ಲಾರಿ ಚಾಲಕರೊಬ್ಬರು ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಲಾರಿ ಪ್ರಪಾತಕ್ಕೆ ಬಿದ್ದರೂ ಅದೃಷ್ಟವಶಾತ್ ಚಾಲಕ ಬದುಕುಳಿದಿದ್ದಾರೆ. ನಿರಂತರ ಮಳೆಗೆ ನೆಮ್ಮಾರು ಸಮೀಪದ ರಸ್ತೆ ಕುಸಿದು, ಲಾರಿಯೊಂದು ಸುಮಾರು 50 ಅಡಿ ಆಳದಲ್ಲಿ ಬಿದ್ದಿದೆ. ಲಾರಿ ಸಂಪೂರ್ಣ ನಜ್ಜು-ಗುಜ್ಜಾಗಿದ್ದು, ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. ಶೃಂಗೇರಿ ನೆಮ್ಮಾರು ಬಳಿ ರಸ್ತೆ ಕುಸಿದ ಪರಿಣಾಮ ಲಾರಿಯು ಪ್ರಪಾತಕ್ಕೆ ಬಿದ್ದಿದೆ. ನೆಮ್ಮಾರು ವ್ಯಾಪ್ತಿಯ ಹೊಸದೇವರಹಡ್ಳು ಸಮೀಪದಲ್ಲಿ ಘಟನೆ ನಡೆದಿದೆ.

ನಿದ್ರೆಗೆ ಜಾರಿದಾಗ ಮನೆ ಮೇಲೆ ಬಿದ್ದ ಬೃಹತ್‌ ಮರ

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರಿಕಟ್ಟೆ ಸುತ್ತಮುತ್ತ ಅಪಾಯದ ಮಟ್ಟ ಮೀರಿ ಹಳ್ಳ ಕೊಳ್ಳಗಳು ಹರಿಯುತ್ತಿದ್ದು, ಬಸರಿ ಕಟ್ಟೆ -ಬಿಲಾಳು ಕೊಪ್ಪ ರಸ್ತೆಯು ಜಲಾವೃತಗೊಂಡಿದೆ. ಇತ್ತ ಅಜ್ಜಂಪುರ ತಾಲೂಕಿನ ಗುಡ್ಡದಹಳ್ಳಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಕುಟುಂಬಸ್ಥರು ಮನೆಯಿಂದ ಎದ್ದು ಓಡಿದ್ದಾರೆ. ಕುಟುಂಬಸ್ಥರು ನಿದ್ದೆಯಲ್ಲಿದ್ದಾಗ ಏಕಾಏಕಿ ಮರ ಬಿದ್ದು, ಚಾವಣಿ ಸಂಪೂರ್ಣ ಹಾನಿಯಾಗಿದೆ. ಗ್ರಾಮದ ರವಿ ಎಂಬುವರಿಗೆ ಸೇರಿದ ಮನೆಯವರು ಪಾರಾಗಿದ್ದಾರೆ.

ಕೊಚ್ಚಿ ಹೋದ ಅಡಿಕೆ ತೋಟ

ಭದ್ರಾ ನದಿ ಪ್ರವಾಹದಿಂದ ತೋಟ-ಗೆದ್ದೆಗಳು ಜಲಾವೃತಗೊಂಡಿದೆ. ಮಹಾಮಳೆಗೆ ಅರ್ಧ ಎಕರೆ ಅಡಿಕೆ‌ ತೋಟ ಕೊಚ್ಚಿ ಹೋಗಿದೆ. ಕಳಸ ತಾಲೂಕಿನ ಮಕ್ಕಿಮನೆಯ ನಾಗೇಂದ್ರ ಎಂಬುವರಿಗೆ ಸೇರಿದ ತೋಟದಲ್ಲಿ ಮಣ್ಣು ಕುಸಿತವಾಗಿ ಅರ್ಧ ಎಕರೆ ಅಡಿಕೆ ಗಿಡಗಳು ಮಣ್ಣುಪಾಲಾಗಿದೆ. ನಡ್ಲುಮನೆಯ ವರ್ಧಮಾನಯ್ಯ ಎಂಬುವವರ 3 ಎಕರೆ ನಾಟಿ ಮಾಡಿದ ಭತ್ತದ ಗದ್ದೆ ಜಲಾವೃತವಾಗಿದೆ.

ಇದನ್ನೂ ಓದಿ: Kannada Actress: `ಬ್ಯಾಕ್‍ ಬೆಂಚರ್ಸ್’ ಬಿಡುಗಡೆಗೂ ಮುನ್ನವೇ ಹಲವು ಅವಕಾಶಗಳು ಈ ನಟಿಗೆ!

ಕೊಡಗಿನಲ್ಲಿ ಗುಡ್ಡ ಕುಸಿತ ಭೀತಿ; ರಾತ್ರಿ ಸಂಚಾರ ಬಂದ್‌

ಕೊಡಗಿನಲ್ಲಿ ಮಳೆ ತಗ್ಗಿದರೂ ಪ್ರವಾಹದ ಪರಿಸ್ಥಿತಿ ತಗ್ಗಿಲ್ಲ. ಕುಶಾಲನಗರದ ಸಾಯಿ ಬಡಾವಣೆಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಸುಮಾರು 25ಕ್ಕೂ ಅಧಿಕ ಮನೆಗಳಿರುವ ಸಾಯಿ ಬಡಾವಣೆಯೊಳಗೆ ಕಾವೇರಿ ನದಿ ನೀರು ನುಗ್ಗಿ‌ ಜಲಾವೃತಗೊಂಡಿದೆ. ಹೀಗಾಗಿ ನಿವಾಸಿಗಳು ಮನೆಗಳನ್ನು ತೊರೆಯುತ್ತಿದ್ದಾರೆ. ಮಳೆ ಹೆಚ್ಚಾದರೇ ಬಡಾವಣೆಯೇ ಮುಳುಗುವ ಆತಂಕವಿದೆ. ಸಾಯಿ ಬಡಾವಣೆ ಜತೆಗೆ ಕುವೆಂಪು ಬಡಾವಣೆಗೂ ಜಲ ಕಂಟಕವಿದೆ.

ಕೊಡಗು ಜಿಲ್ಲೆಯ ಮಡಿಕೇರಿ ಮಂಗಳೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಬಳಿ ಗುಡ್ಡ ಕುಸಿಯುವ ಭೀತಿ ಇದೆ. ಹೀಗಾಗಿ ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಿ ಕೊಡಗು ಡಿಸಿ ಆದೇಶ ಹೊರಡಿಸಿದ್ದಾರೆ. ಗುಡ್ಡದ ಕೆಳಭಾಗದಲ್ಲಿ ಸ್ವಲ್ಪ ಮಣ್ಣು ಜರಿದಿದ್ದು, ಬಿರುಕು ಮೂಡುವ ಸಾಧ್ಯತೆ ಇದೆ.

ಮೈಸೂರಿನಲ್ಲಿ ಜೋರು ಮಳೆಗೆ ಕುಸಿದು ಬಿದ್ದ ಮನೆ

ಕರಾವಳಿ, ಮಲೆನಾಡು ಮಾತ್ರವಲ್ಲದೇ ಒಳನಾಡು ಭಾಗದಲ್ಲೂ ಮಳೆಯು ಅಬ್ಬರಿಸುತ್ತಿದೆ. ಮೈಸೂರಿನಲ್ಲಿ ವರುಣನ ಆರ್ಭಟಕ್ಕೆ ಮನೆಯೊಂದು ಕುಸಿದು ಬಿದ್ದಿದೆ. ಮೈಸೂರಿನ ಸಾಲಿಗ್ರಾಮ ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಸರೋಜಮ್ಮ ದೇವೇಗೌಡ ಎಂಬುವರಿಗೆ ಸೇರಿದ ಮನೆ ಕುಸಿದು ಬಿದ್ದಿದೆ. ಮನೆಯಲ್ಲಿದ್ದ ಪಾತ್ರೆಗಳು, ದಿನಸಿ ಸಾಮಗ್ರಿಗಳು, ಬಟ್ಟೆ ಬರೆ ಎಲ್ಲವೂ ಹಾನಿಯಾಗಿದೆ. ಮನೆಯವರು ಕೆಲಸ ನಿಮಿತ್ತ ಹೊರಗಡೆ ಹೋದಾಗ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಮಳೆಯಿಂದ ವಾಸದ ಮನೆ ಕಳೆದುಕೊಂಡ ಸರೋಜಮ್ಮ, ದೇವೇಗೌಡ ಕಂಗಲಾಗಿದ್ದಾರೆ. ಸಾಲಿಗ್ರಾಮ ತಾಲೂಕು ಆಡಳಿತ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಜೋರಾಗಿ ಬೀಸಿದ ಗಾಳಿಗೆ ನೆಲಕ್ಕುರುಳಿದ ಟವರ್‌

ಭಾರಿ ಗಾಳಿ- ಮಳೆಗೆ ಬೃಹತ್ ಗಾತ್ರದ ಟವರ್ ನೆಲಕ್ಕೆ ಉರುಳಿ ಬಿದ್ದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಏಕಾಏಕಿ ಬೀಸಿದ ಭಾರೀ ಗಾಳಿಗೆ ಬೃಹತ್ ಟವರ್ ನೆಲಕ್ಕುರುಳಿದ ಪರಿಣಾಮ ಅಂಗಡಿ ಮುಂಗಟ್ಟು, ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ: Donald Trump: ಅಮೆರಿಕವೂ ಐರನ್ ಡೋಮ್ ಕ್ಷಿಪಣಿ ತಯಾರಿಸಲಿದೆ; ಡೊನಾಲ್ಡ್‌ ಟ್ರಂಪ್‌ ಸೂಚನೆ

ಹಾಸನದಲ್ಲಿ ಸೇತುವೆ ಮುಳುಗಡೆ, ಹೊಳೆಮಲ್ಲೇಶ್ವರ ದೇಗುಲ ಜಲಾವೃತ

ಹಾಸನ ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರಿದಿದೆ. ಭಾರಿ ಮಳೆಯಿಂದಾಗಿ ಬಾಣಗೇರಿ ಹೊಳೆ ನೀರು ಉಕ್ಕಿ ಹರಿಯುತ್ತಿದೆ. ಮಾಗೇರಿ ಗ್ರಾಮದ ಸೇತುವೆ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಸಕಲೇಶಪುರ ತಾಲೂಕಿನ ಮಾಗೇರಿ ಗ್ರಾಮದ ಸೇತುವೆ ಮುಳುಗಡೆಗೊಂಡಿದೆ. ಇದರಿಂದಾಗಿ ಸಕಲೇಶಪುರ-ಮಾಗೇರಿ-ಸೋಮವಾರಪೇಟೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ಹರಿಯುತ್ತಿರುವ ನೀರಿನಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ.

ಇನ್ನೂ ಸಕಲೇಶಪುರ, ಮೂಡಿಗೆರೆ ಭಾಗದಲ್ಲಿ ಮಳೆ ಮುಂದುವರಿದಿದ್ದು, ಹೇಮಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿಯ ಅಕ್ಕ-ಪಕ್ಕ ಹಾಗೂ ತಗ್ಗು ಪ್ರದೇಶಕ್ಕೂ ನೀರು ನುಗ್ಗಿದೆ. ಹೇಮಾವತಿ ನದಿ ದಂಡೆಯಲ್ಲಿರುವ ಸಕಲೇಶಪುರದ ಹೊಳೆಮಲ್ಲೇಶ್ವರ ದೇಗುಲದ ಮೆಟ್ಟಿಲು ಜಲಾವೃತಗೊಂಡಿದೆ. ಮಳೆ ಹೀಗೆ ಮುಂದುವರೆದರೆ ದೇಗುಲವೂ ಜಲಾವೃತವಾಗುವ ಸಾಧ್ಯತೆ ಇದೆ.

ಉಡುಪಿಯ ಆತ್ರಾಡಿಯಲ್ಲಿ ಕೃತಕ ನೆರೆ

ಉಡುಪಿಯ ಮಲ್ಪೆ- ಮೊಳಕಾಲ್ಮೂರು ಹೆದ್ದಾರಿ ಅವ್ಯವಸ್ಥೆಯಿಂದಾಗಿ ಆತ್ರಾಡಿ ಬಳಿ ಕೃತಕ ನೆರೆ ಸೃಷ್ಟಿಯಾಗಿದೆ. ಮಲ್ಪೆಯಿಂದ ಉಡುಪಿ ಮೂಲಕ ಮಣಿಪಾಲದ ಮೇಲೆ ಹಾದು ಹೋಗುವ ಹೆದ್ದಾರಿಯಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಆತ್ರಾಡಿಯ ಮನೆಗಳಿಗೆ ನೀರು ನುಗ್ಗಿದೆ. ಸರಿಯಾದ ಒಳಚರಂಡಿ ವ್ಯವಸ್ಥೆ ನಿರ್ಮಿಸಿದ ಹಿನ್ನೆಲೆಯಲ್ಲಿ ಚರಂಡಿ ನೀರು ನುಗ್ಗಿ ಈ ಸಮಸ್ಯೆ ಸೃಷ್ಟಿಯಾಗಿದೆ.

ಶಿರೂರು ಗುಡ್ಡ ಕುಸಿತ; ನಿಂತಲ್ಲೇ ನಿಂತ ಟ್ರಕ್‌ಗಳು

ಅಂಕೋಲಾ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಹಿನ್ನೆಲೆ, ಟ್ರಕ್ ಚಾಲಕರು ಕಂಗಾಲಾಗಿದ್ದಾರೆ. ಉಡುಪಿ ಜಿಲ್ಲೆಯ ಶಿರೂರು ಟೋಲ್ ಗೇಟ್‌ನಲ್ಲಿ ಕಳೆದ ಮೂರು ದಿನಗಳಿಂದ ಟ್ರಕ್‌ಗಳು ನಿಂತಲ್ಲೇ ನಿಲ್ಲುವಂತಾಗಿದೆ. ಹೆದ್ದಾರಿ ಮೇಲೆ ಬಿದ್ದಿರುವ ಮಣ್ಣು ತೆರವಾಗದ ಕಾರಣ ಸಂಪರ್ಕ ಬಂದ್ ಆಗಿದೆ. ಮಂಗಳೂರಿನಿಂದ ಎಲ್‌ಪಿಜಿ ಸಾಗಿಸುತ್ತಿದ್ದ ಟ್ಯಾಂಕರ್‌ಗಳು ಶಿರೂರು ಟೋಲ್ ನಲ್ಲಿಯೇ ಸ್ಟ್ರಕ್ ಆಗಿವೆ. ಸುಮಾರು 120 ಅಧಿಕ ಸರಕು ಮತ್ತು ಗ್ಯಾಸ್ ಟ್ಯಾಂಕರ್‌ಗಳು ಟೋಲ್ ಬಳಿ ಮೊಕ್ಕಾಂ ಹೂಡಿವೆ. ಮೂರು ದಿನಗಳಿಂದ ಟ್ರಕ್‌ಗಳಲ್ಲೆ ಅಡುಗೆ ಮನೆ ಮಾಡಿಕೊಂಡು, ಅಲ್ಲೆ ಊಟ ಅಲ್ಲೆ ನಿದ್ರೆ ಮಾಡುತ್ತಿದ್ದಾರೆ. ಹೆದ್ದಾರಿ ಮೇಲೆ ಬಿದ್ದಿರುವ ಮಣ್ಣು ತೆರವಾಗದೆ ಇಲ್ಲಿಂದ ತೆರಳಾಗದ ಸ್ಥಿತಿಯಲ್ಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain News: ಮಳೆ ಅನಾಹುತ; ಮನೆಗೋಡೆ ಕುಸಿದು ಇಬ್ಬರು ಕಂದಮ್ಮಗಳು ಸೇರಿ 3 ಸಾವು

Karnataka Rain News: ಅಮೂಲ್ಯ ಹಾಗೂ ಅನನ್ಯ ಮೃತಪಟ್ಟ ಎರಡು 2 ವರ್ಷದ ಅವಳಿಜವಳಿ ಕಂದಮ್ಮಗಳಾಗಿವೆ. ಇನ್ನೊಬ್ಬ ಮಹಿಳೆ ಚೆನ್ನಮ್ಮ (30) ಕೂಡ ಮೃತಪಟ್ಟಿದ್ದಾರೆ. ಮನೆಯೊಳಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

VISTARANEWS.COM


on

haveri karnataka rain news
Koo

ಹಾವೇರಿ: ರಾಜ್ಯದಲ್ಲಿ ಮಳೆ ಅನಾಹುತ (Karnataka Rain News) ಸೃಷ್ಟಿಸುತ್ತಿದೆ. ಹಾವೇರಿಯಲ್ಲಿ (Haveri news) ಮಳೆಗೆ ಒದ್ದೆಯಾದ ಮನೆಗೋಡೆ ಕುಸಿದು (Home collapse) ಎರಡು ಕಂದಮ್ಮಗಳು ಹಾಗೂ ಒಬ್ಬ ಮಹಿಳೆ (Rain deaths) ಸಾವಿಗೀಡಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ದುರಂತ ಸಂಭವಿಸಿದೆ.

ಅಮೂಲ್ಯ ಹಾಗೂ ಅನನ್ಯ ಮೃತಪಟ್ಟ ಎರಡು 2 ವರ್ಷದ ಅವಳಿಜವಳಿ ಕಂದಮ್ಮಗಳಾಗಿವೆ. ಇನ್ನೊಬ್ಬ ಮಹಿಳೆ ಚೆನ್ನಮ್ಮ (30) ಕೂಡ ಮೃತಪಟ್ಟಿದ್ದಾರೆ. ಮನೆಯೊಳಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ರಕ್ಷಣೆಗೆ ಧಾವಿಸಿದ್ದು, ಮೃತ ದೇಹಗಳನ್ನ ಹೊರ ತೆಗೆದು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಗಾಯಾಳುಗಳು ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಭೂಕುಸಿತ; ಶಿರಾಡಿ ಘಾಟ್​ನಲ್ಲಿ ಸಂಚಾರ ನಿಷೇಧ ​; ಬೆಂಗಳೂರು- ಮಂಗಳೂರು ಸಂಪರ್ಕ ಬಹುತೇಕ ಕಟ್​

ಹಾಸನ: ಹಾಸನ ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಘಾಟ್​ ಪ್ರದೇಶದ ಹಲವಡೆ ಗುಡ್ಡ ಕುಸಿತದ ಪ್ರಕಣಗಳು ಉಂಟಾಗುತ್ತಿವೆ. ಅಂತೆಯೇ ಶಿರಾಡಿ ಘಾಟ್​ನಲ್ಲಿ (Shiradi Ghat) ಗುಡ್ಡ ಕುಸಿತ ಸಂಭವಿಸಲಿದೆ ಎಂಬ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಮೂಲಕ ಪ್ರಯಾಣವನ್ನು ನಿಷೇಧ ಮಾಡ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದನ್ನು ಹೊರತುಪಡಿಸಿದರೆ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 278ರಲ್ಲಿ ರಾತ್ರಿ ವೇಳೆ ವಾಹನಗಳು ಸಾಗದಂತೆ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಡಿಕೇರಿ ಮೂಲಕ ಸಾಗುವ ಈ ರಸ್ತೆಯೂ ಬಂದ್ ಆಗಿರುವ ಕಾರಣ ಮಂಗಳೂರು ಮತ್ತು ಬೆಂಗಳೂರು (Bangalore To Mangalore) ನಡುವಿನ ಸಂಪರ್ಕ ಬಹುತೇಕ ಕಡಿತಗೊಂಡಿದೆ. ಇನ್ನು ಚಾರ್ಮಾಡಿ ಘಾಟ್ ಒಂದೇ ಉಳಿದಿದ್ದು ಅದರ ಮೇಲೆ ವಾಹನ ದಟ್ಟಣೆ ಜಾಸ್ತಿಯಾಗಲಿದೆ. ಆ ರಸ್ತೆಯಲ್ಲೂ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕಣಗಳು ಸಂಭವಿಸುತ್ತಿರುವುದರಿಂದ ಸಂಚಾರ ಸುರಕ್ಷಿತವಲ್ಲ.

ಶಿರಾಡಿಘಾಟ್ ನ ದೊಡ್ಡತಪ್ಪು ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿತ್ತು. ಅಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆಗಳಿವೆ. ಜುಲೈ 18ರಿಂದ ಅನ್ವಯವಾಗುವಂತೆ ಈ ರಸ್ತೆಯ ಮೂಲಕ ಪ್ರಯಾಣ ಮಾಡದಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ರಸ್ತೆ ದುರಸ್ತಿ ಆಗುವ ತನಕ ಎಲ್ಲ ರೀತಿಯ ವಾಹನ ಸಂಚಾರ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಿರಂತರ ಮಳೆ ಸುರಿಯುತ್ತಿರುವ ಕಾರಣ ಮತ್ತಷ್ಟು ಭೂ ಕುಸಿತದ ಉಂಟಾಗುವ ಸಾಧ್ಯತೆಗಳಿವೆ. ಮುಂಜಾಗ್ರತಾ ಕ್ರಮವಾಗಿ ಸಂಚಾರ ನಿಷೇಧಿಸಿ ಡಿಸಿ ಸಿ ಸತ್ಯಭಾಮ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಿಂದ -ಮಂಗಳೂರಿಗೆ ತೆರಳುವ ವಾಹನಗಳು ಚಾರ್ಮಾಡಿ ಘಾಟ್ ಮೂಲಕ ಅವರ ಸೂಚನೆ ನೀಡಿದ್ದಾರೆ.

ಸಂಪಾಜೆ ಘಾಟಿಯೂ ಬಂದ್‌

ಮಡಿಕೇರಿ: ಕೊಡಗು ಸೇರಿದಂತೆ ರಾಜ್ಯದ ಎಲ್ಲೆಡೆ ಸತತ ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದೆ (Rain News). ಹೀಗಾಗಿ ಘಟ್ಟ ಪ್ರದೇಶಗಳಲ್ಲಿ ಗುಡ್ಡ ಕುಸಿತ ಪ್ರಕರಣಗಳು ಸಂಭವಿಸುತ್ತಿವೆ. ಗುಡ್ಡದ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳ ಆತಂಕ ಇದರಿಂದಾಗಿ ಹೆಚ್ಚಾಗಿದೆ. ಇದೇ ವೇಳೆ ಕರ್ನಾಟಕದ ಪ್ರಮುಖ ಘಾಟಿಗಳಲ್ಲಿ ಹಾದು ಹೋಗಿರುವ ರಸ್ತೆ ಇಕ್ಕೆಲಗಳಲ್ಲಿ ಮಣ್ಣು ಕುಸಿತ ಉಂಟಾಗುತ್ತಿರುವ ಕಾರಣ ಮಡಿಕೇರಿ ಮೂಲಕ ಮಂಗಳೂರಿಗೆ ಸಂಪರ್ಕ ಕಲ್ಪಿಸುವ 275 ಬಂದ್ ಮಾಡಲಾಗಿದೆ.

ಮಡಿಕೇರಿ ಮಂಗಳೂರು ರಸ್ತೆಯ ಕರ್ತೋಜಿ ಬಳಿ ಗುಡ್ಡ ಕುಸಿಯುವ ಭೀತಿ ಉಂಟಾಗಿದ್ದು, ಯಾವುದೇ ಕ್ಷಣದಲ್ಲಿ ಗುಡ್ಡ ಜಾರಿ ರಸ್ತೆಗೆ ಬರುವ ಸಾಧ್ಯತೆಗಳಿವೆ. ಹೀಗಾಗಿ ಜುಲೈ 18ರಿಂದ 22ರವರೆಗೆ ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿ 275 ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಗುರುವಾರದಿಂದ 5 ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6 ಗಂಟೆವರೆಗೆ ಅಧಿಕಾರಿಗಳು ರಸ್ತೆ ಪ್ರಯಾಣಕ್ಕೆ ನಿರ್ಬಂಧ ಹೇರಿದ್ದಾರೆ ಕರ್ತವ್ಯ ನಿರತ ಅಧಿಕಾರಿಗಳ ವಾಹನ ಹೊರತುಪಡಿಸಿ ಉಳಿದ ವಾಹನ ಸಂಚಾರ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Continue Reading

ಶಿವಮೊಗ್ಗ

Shivamogga News: ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಲು ಸಂಸದ ಬಿ.ವೈ. ರಾಘವೇಂದ್ರ ಮನವಿ

Shivamogga News: ಪ್ರಸಕ್ತ ಸಾಲಿನಲ್ಲಿ ಅಧಿಕ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಈ ಕಾರಣದಿಂದ ನದಿಪಾತ್ರದ ಜಮೀನುಗಳಿಗೆ ಪ್ರವಾಹ ಎದುರಾಗಿದ್ದು, ರೈತ ಸಮೂಹ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಆದ್ದರಿಂದ ಬೆಳೆ ವಿಮೆ ಮಾಡಿಸದ ರೈತರು ಕೂಡಲೇ ಬೆಳೆ ವಿಮೆಗೆ ಮುಂದಾಗಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

VISTARANEWS.COM


on

Farmers should get crop insurance immediately says MP BY Raghavendra
Koo

ಸೊರಬ: ಪ್ರಸಕ್ತ ಸಾಲಿನಲ್ಲಿ ಅಧಿಕ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಈ ಕಾರಣದಿಂದ ನದಿಪಾತ್ರದ ಜಮೀನುಗಳಿಗೆ ಪ್ರವಾಹ ಎದುರಾಗಿದ್ದು, ರೈತ ಸಮೂಹ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಆದ್ದರಿಂದ ಬೆಳೆ ವಿಮೆ ಮಾಡಿಸದ ರೈತರು ಕೂಡಲೇ ಬೆಳೆ ವಿಮೆಗೆ ಮುಂದಾಗಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ (Shivamogga News) ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಮಳೆ ಹಾನಿ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆ ಕಳೆದ ಬಾರಿ ಬರಗಾಲ ಪರಿಸ್ಥಿತಿಯನ್ನು ಎದುರಿಸುವಂತಾಗಿತ್ತು. ಆದರೆ ಈ ಬಾರಿ ಮುಂಗಾರು ತಡವಾಗಿ ಪ್ರಾರಂಭವಾದರೂ ಉತ್ತಮ ಮಳೆಯಾಗುತ್ತಿದೆ. ಜಿಲ್ಲೆಯ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ ಎಂದರು.

ಇದನ್ನೂ ಓದಿ: Uttara Kannada News: ಗೋಕರ್ಣದ ʼಅಶೋಕೆʼಯಲ್ಲಿ ಜು. 21ರಿಂದ ರಾಘವೇಶ್ವರಶ್ರೀ ಚಾತುರ್ಮಾಸ್ಯ

ತಾಲೂಕಿನ ದಂಡಾವತಿ ಮತ್ತು ವರದಾ ನದಿಗಳು ಈಗಾಗಲೇ ತುಂಬಿ ಹರಿಯುತ್ತಿದ್ದು, ಅಪಾಯದ ಮಟ್ಟ ತಲುಪಿವೆ. ವಿಶೇಷವಾಗಿ ವರದಾ ನದಿ ಪ್ರವಾಹದಿಂದ ತಾಲೂಕಿನ ಅಬಸೆ, ಕಡಸೂರು, ಹೊಳೆಜೋಳದಗುಡ್ಡೆ, ತಟ್ಟಿಕೆರೆ, ಹೆಚ್ಚೆ, ಹಿರೇನೆಲ್ಲೂರು, ಸೈದೂರು, ತಾಳಗುಪ್ಪ ಗ್ರಾಮಗಳ ರೈತರ ಜಮೀನುಗಳು ಜಲಾವೃತವಾಗಿವೆ. ಸುಮಾರು 650 ಹೆಕ್ಟೇರ್ ಭತ್ತ ಮುಳುಗಡೆಯಾಗಿದೆ ಎಂದು ಹೇಳಿದರು.

ಇನ್ನೂ ಬೆಳೆ ವಿಮೆ ಮಾಡಿಸದ ರೈತರಿಗೆ ಜುಲೈ 31 ರವರೆಗೆ ಅವಕಾಶವಿದೆ. ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಹಾನಿಯಾದ ವರದಿ ಸರ್ಕಾರಕ್ಕೆ ಸಲ್ಲಿಸಿ

ಜಿಲ್ಲೆಯಲ್ಲಿ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ. 36ರಷ್ಟು ಮಳೆ ಕೊರತೆ ಎದುರಾಗಿತ್ತು. ಜುಲೈ ತಿಂಗಳ ವಾಡಿಕೆ ಮಳೆ 423 ಮಿ.ಮೀ. ಆದರೆ 577 ಮಿ.ಮೀ. ಮಳೆಯಾಗಿದ್ದು, ಶೇ. 36ರಷ್ಟು ಅಧಿಕ ಮಳೆಯಾಗಿದೆ. ತಾಲೂಕಿನಾದ್ಯಂತ 21 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 2 ಎಮ್ಮೆ, 1 ಹಸು ಮೃತಪಟ್ಟಿವೆ. ಈ ಕಾರಣ ತಹಸೀಲ್ದಾರ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ನೆರೆ ಪ್ರದೇಶದ ಗ್ರಾಮ ಮತ್ತು ಜಮೀನುಗಳಿಗೆ ಭೇಟಿ ನೀಡಿ ಮಳೆಯಿಂದ ಹಾನಿಯಾದ ಬಗ್ಗೆ ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಎಂದರು.

ಮಳೆಯಿಂದ ಮನೆಯ ಒಂದು ಭಾಗದ ಗೋಡೆ ಬಿದ್ದರೆ ಇಡೀ ಮನೆಗೆ ಹಾನಿಯಾದಂತೆ. ಹಾಗಾಗಿ ಅಧಿಕಾರಿಗಳು ಸಂಪೂರ್ಣ ಪರಿಹಾರಕ್ಕೆ ಇಂತಹ ಮನೆಗಳನ್ನೂ ಪರಿಗಣಿಸಬೇಕು ಎಂದ ಅವರು, ರಸ್ತೆಗಳಲ್ಲಿ ಸರಾಗವಾಗಿ ನೀರು ಹರಿಯದೇ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಜಿ.ಪಂ. ಮತ್ತು ಪಿ.ಡಬ್ಲ್ಯೂ.ಡಿ. ಇಲಾಖೆ ಹೆಚ್ಚಿನ ಗಮನ ಹರಿಸಿ, ರಸ್ತೆಯ ಎರಡೂ ಬದಿಗಳಲ್ಲಿ ಕಾಲುವೆ ನಿರ್ಮಿಸುವ ಮೂಲಕ ನೀರು ಸರಾಗವಾಗಿ ಹರಿಯಲು ಹೆಚ್ಚಿನ ನಿಗಾ ವಹಿಸಬೇಕು ಎಂದರು.

ಇದನ್ನೂ ಓದಿ: Kannada New Movie: ಹಾರರ್ ಜಾನರ್‌ನ ʼಹಗ್ಗʼ ಚಿತ್ರದ ಟೀಸರ್ ಅನಾವರಣ

ಸುದ್ದಿಗೋಷ್ಠಿಯಲ್ಲಿ ತಹಸೀಲ್ದಾರ್ ಮಂಜುಳಾ ಹೆಗಡಾಳ್, ಕೃಷಿ ಸಹಾಯಕ ನಿರ್ದೇಶಕ ಕೆ.ಜಿ. ಕುಮಾರ್ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಮತ್ತು ಮಾಜಿ ಶಾಸಕ ಕುಮಾರ ಬಂಗಾರಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಜಿಲ್ಲಾ ಕಾರ್ಯದರ್ಶಿ ದೇವೇಂದ್ರಪ್ಪ ಚನ್ನಾಪುರ, ಮುಖಂಡರಾದ ಗುರುಕುಮಾರ ಪಾಟೀಲ್, ಪ್ರಕಾಶ್ ಅಗಸನಹಳ್ಳಿ ಹಾಗೂ ಇತರರು ಇದ್ದರು.

Continue Reading

ಶಿವಮೊಗ್ಗ

Shivamogga News: ಸೊರಬದ ವಿವಿಧೆಡೆ ಮಳೆಯಿಂದ ಅಪಾರ ಹಾನಿ; ಸಂಸದ ಬಿ.ವೈ.ರಾಘವೇಂದ್ರ ಭೇಟಿ

Shivamogga News: ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೋಳದ ಗುಡ್ಡ, ಹೆಚ್ಚೆ, ಕಡಸೂರು, ತಟ್ಟಿಕೆರೆ, ಹಿರೇನಲ್ಲೂರು, ಸೈದೂರು, ಮಂಡಗಳಲೇ ಮತ್ತು ತಾಳಗುಪ್ಪ ಭಾಗಗಳಲ್ಲಿ ವ್ಯಾಪಕ ಮಳೆಯಿಂದ ಗ್ರಾಮದ ತಗ್ಗು ಪ್ರದೇಶಗಳಿಗೆ ಹಾಗೂ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಪ್ರದೇಶಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ, ಪರಿಶೀಲಿಸಿದರು.

VISTARANEWS.COM


on

Immense damage due to rain in various parts of Soraba Taluk MP BY Raghavendra visited and inspected
Koo

ಸೊರಬ: ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೋಳದ ಗುಡ್ಡ, ಹೆಚ್ಚೆ, ಕಡಸೂರು, ತಟ್ಟಿಕೆರೆ, ಹಿರೇನಲ್ಲೂರು, ಸೈದೂರು, ಮಂಡಗಳಲೇ ಮತ್ತು ತಾಳಗುಪ್ಪ ಭಾಗಗಳಲ್ಲಿ ವ್ಯಾಪಕ ಮಳೆಯಿಂದ ಗ್ರಾಮದ ತಗ್ಗು ಪ್ರದೇಶಗಳಿಗೆ ಹಾಗೂ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಪ್ರದೇಶಗಳಿಗೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ ನೀಡಿ, (Shivamogga News) ಪರಿಶೀಲಿಸಿದರು.

ಹಾನಿಗೊಳಗಾದವರಿಗೆ ತಕ್ಷಣವೇ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿ ರಾಜ್ಯ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: Ratna Bhandar: ಒಂದೇ ವಾರದಲ್ಲಿ ಎರಡನೇ ಬಾರಿ ತೆರೆದ ಪುರಿ ಜಗನ್ನಾಥನ ʼರತ್ನ ಭಂಡಾರʼ

ಈ ಸಂದರ್ಭದಲ್ಲಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಹಕ್ಕರೆ ಮಲ್ಲಿಕಾರ್ಜುನ್, ದೇವೇಂದ್ರಪ್ಪ, ಮಲ್ಲಿಕಾರ್ಜುನ್, ಆಗಸಹಳ್ಳಿ ಪ್ರಕಾಶ್, ಗುರುಕುಮಾರ ಪಾಟೀಲ್, ಈಶ್ವರಪ್ಪ ಚನ್ನಪಟ್ಟಣ, ಹೊಳಿಯಮ್ಮ ಹಾಗೂ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

ಸೊರಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ಜು.19 ರಂದು ರಜೆ ಘೋಷಣೆ

ಸೊರಬ ಪಟ್ಟಣ ಸೇರಿ ತಾಲೂಕಿನಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಹಿತ ದೃಷ್ಠಿಯಿಂದ ಅಂಗನವಾಡಿ ಕೇಂದ್ರಗಳು ಹಾಗೂ ಶಾಲಾ- ಕಾಲೇಜುಗಳಿಗೆ ಜು. 19ರಂದು ರಜೆ ಘೋಷಣೆ ಮಾಡಿರುವುದಾಗಿ ತಹಸೀಲ್ದಾರ್ ಮಂಜುಳಾ ಹೆಗಡಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading
Advertisement
Karnataka Rain
ಮಳೆ18 seconds ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Vaibhavi Jagdish Bold Photo shoot
ಸ್ಯಾಂಡಲ್ ವುಡ್32 seconds ago

Vaibhavi Jagdish: ಬೋಲ್ಡ್‌ ಫೋಟೊ ಹಂಚಿಕೊಂಡು ಕಮೆಂಟ್‌ ಸೆಕ್ಷನ್‌ ಆಫ್‌ ಮಾಡಿದ ಜೈ ಜಗದೀಶ್ ಪುತ್ರಿ!

Kannada Actress Many opportunities for this actress before the release Back Benchers'!
ಸ್ಯಾಂಡಲ್ ವುಡ್20 mins ago

Kannada Actress: `ಬ್ಯಾಕ್‍ ಬೆಂಚರ್ಸ್’ ಬಿಡುಗಡೆಗೂ ಮುನ್ನವೇ ಹಲವು ಅವಕಾಶಗಳು ಈ ನಟಿಗೆ!

Donald Trump
ವಿದೇಶ27 mins ago

Donald Trump: ಅಮೆರಿಕವೂ ಐರನ್ ಡೋಮ್ ಕ್ಷಿಪಣಿ ತಯಾರಿಸಲಿದೆ; ಡೊನಾಲ್ಡ್‌ ಟ್ರಂಪ್‌ ಸೂಚನೆ

ಪ್ರಮುಖ ಸುದ್ದಿ42 mins ago

Olympic Games: ಒಲಿಂಪಿಕ್ಸ್​ನಲ್ಲಿ ಮಹಿಳೆಯರು ಮೊದಲ ಬಾರಿಗೆ ಸ್ಪರ್ಧಿಸಿದ್ದು ಯಾವಾಗ?

Ram Pothineni double ismart second song out
ಟಾಲಿವುಡ್1 hour ago

Ram Pothineni: `ಡಬಲ್ ಇಸ್ಮಾರ್ಟ್’ ಸಿನಿಮಾದ ಎರಡನೇ ಹಾಡು ರಿಲೀಸ್!

UT Khader karnataka assembly live
ಪ್ರಮುಖ ಸುದ್ದಿ1 hour ago

Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

Sri Lanka Tour
ಕ್ರೀಡೆ1 hour ago

Sri Lanka Tour: ಸಂಜು, ಅಭಿಷೇಕ್​ಗೆ ಅವಕಾಶ ನೀಡದಕ್ಕೆ ಬಿಸಿಸಿಐ ವಿರುದ್ಧ ಕಿಡಿಕಾರಿದ ಸಂಸದ ​ತರೂರ್

Gold Rate Today
ಚಿನ್ನದ ದರ1 hour ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಬಂಗಾರ ಇಂದು ಇಷ್ಟು ಅಗ್ಗ

Tharun Sudhir gives Darshan a wedding invitation card and visits Jail
ಟಾಲಿವುಡ್2 hours ago

Tharun Sudhir: ದರ್ಶನ್‌ಗೆ ಮದುವೆ ಇನ್ವಿಟೇಶನ್‌ ಕಾರ್ಡ್‌ ಕೊಟ್ಟು, ಆಶೀರ್ವಾದ ಪಡೆಯಲು ಜೈಲಿಗೆ ಭೇಟಿ ಕೊಡಲಿದ್ದಾರಂತೆ ತರುಣ್ ಸುಧೀರ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 seconds ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ20 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ21 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ5 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

ಟ್ರೆಂಡಿಂಗ್‌