Paris Olympics 2024: ಅತ್ಲೀಟ್​ಗಳ ಕ್ರೀಡಾಗ್ರಾಮಕ್ಕೆ ಲಭಿಸಿತು ಅಧಿಕೃತ ಚಾಲನೆ - Vistara News

ಕ್ರೀಡೆ

Paris Olympics 2024: ಅತ್ಲೀಟ್​ಗಳ ಕ್ರೀಡಾಗ್ರಾಮಕ್ಕೆ ಲಭಿಸಿತು ಅಧಿಕೃತ ಚಾಲನೆ

Paris Olympics 2024: ಎಲ್ಲ ಕ್ರೀಡಾಕೂಡ ಮುಕ್ತಾಯದ ಬಳಿಕ ಈ ಕ್ರೀಡಾಗ್ರಾಮದ ಒಳಗಿನ ಅಪಾರ್ಟ್ಮೆಂಟ್​ಗಳನ್ನು ವಸತಿಗಳಾಗಿ ಪರಿವರ್ತಿಸಲಾಗುತ್ತದೆ. ಕನಿಷ್ಠ ಮೂರನೇ ಒಂದು ಭಾಗವನ್ನು ಸಾರ್ವಜನಿಕ ವಸತಿ ಉದ್ದೇಶಗಳಿಗಾಗಿ ಮೀಸಲಿಡಲಾಗುತ್ತದೆ.

VISTARANEWS.COM


on

Paris Olympics 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್: ವಿಶ್ವ ಮಟ್ಟದಲ್ಲಿ ಪ್ರಮುಖ ಕ್ರೀಡಾಕೂಟವಾದ ಒಲಿಂಪಿಕ್ಸ್ (Paris Olympics 2024) ಆರಂಭಕ್ಕೆ ಇನ್ನು ಕೇವಲ ಒಂದು ವಾರ ಮಾತ್ರ ಬಾಕಿ ಉಳಿದಿವೆ. ಕ್ರೀಡಾಕೂಟದ ಆತಿಥ್ಯ ವಹಿಸಿಕೊಂಡಿರುವ ಫ್ರಾನ್ಸ್​ ಸರ್ವ ಸನ್ನದ್ಧವಾಗಿದೆ. ಎಲ್ಲ ದೇಶದ ಕ್ರೀಡಾಪಟುಗಳು ಇದೀಗ ಫ್ರಾನ್ಸ್​ಗೆ ಆಗಮಿಸುತ್ತಿದ್ದಾರೆ. ಕ್ರೀಡಾಪಟುಗಳಿಗೆ ವಸತಿ ವ್ಯವಸ್ಥೆ ಹೊಂದಿರುವ ಕ್ರೀಡಾಗ್ರಾಮ ಅಧಿಕೃತವಾಗಿ(Paris Olympic Village) ತೆರೆದುಕೊಂಡಿದೆ. ಈ ಕ್ರೀಡಾಗ್ರಾಮವನ್ನು ಪ್ಯಾರಿಸ್​ನ ಉತ್ತರ ಭಾಗದಲ್ಲಿ ನಿರ್ಮಿಸಲಾಗಿದ್ದು, ಇದು ಗರಿಷ್ಠ 14,500 ಮಂದಿಗೆ ಅತಿಥ್ಯವಹಿಸಲು ಸಿದ್ಧವಾಗಿದೆ. ಆಸ್ಟ್ರೇಲಿಯ ಹಾಗೂ ಬ್ರೆಝಿಲ್ ತಮ್ಮ ತಂಡದ ಸದಸ್ಯರನ್ನು ಕ್ರೀಡಾಗ್ರಾಮಕ್ಕೆ ಕಳುಹಿಸಿಕೊಟ್ಟ ಮೊದಲ ದೇಶಗಳಾಗಿವೆ.

ಕ್ರೀಡಾಗ್ರಾಮವು ಕ್ರೀಡಾಪಟುಗಳಿಗೆ ವಿಶ್ರಾಂತಿ ಹಾಗೂ ಅವರ ಸ್ಪರ್ಧೆಗಳಿಗೆ ತಯಾರಿ ಮಾಡಲು ಆರಾಮದಾಯಕ ಹಾಗೂ ಸುರಕ್ಷಿತ ವಾತಾವರಣ ಒದಗಿಸುತ್ತದೆ. ಒಲಿಂಪಿಕ್ಸ್ ವಿಲೇಜ್, ಕ್ರೀಡಾಕೂಟ ಸಂಘಟಕರಿಗೆ ಹೆಮ್ಮೆಗೆ ಕಾರಣವಾಗಿದ್ದು, ಇದು ಒಂದು ವಿಶಿಷ್ಟ ವೈಶಿಷ್ಟವನ್ನು ಹೊಂದಿದೆ. ಗ್ರಾಮದ ನಿವಾಸಿಗಳಿಗೆ ಅರಾಮದಾಯಕವಾದ ತಾಪಮಾನ ನಿರ್ವಹಿಸಲು ಹವಾನಿಯಂತ್ರಣವನ್ನು ಅವಲಂಬಿಸಿಲ್ಲ. ಬೇಸಿಗೆಯ ಸಮಯದಲ್ಲಿ ಹೊರಭಾಗಕ್ಕಿಂತ ಕನಿಷ್ಠ 6 ಡಿಗ್ರಿ ಸೆಲ್ಸಿಯಸ್ ತಂಪಾಗಿರುವಂತೆ ಗ್ರಾಮದ ಒಳಭಾಗವನ್ನು ವಿನ್ಯಾಸಗೊಳಿಸಲಾಗಿದೆ.

ಎಲ್ಲ ಕ್ರೀಡಾಕೂಡ ಮುಕ್ತಾಯದ ಬಳಿಕ ಈ ಕ್ರೀಡಾಗ್ರಾಮದ ಒಳಗಿನ ಅಪಾರ್ಟ್ಮೆಂಟ್​ಗಳನ್ನು ವಸತಿಗಳಾಗಿ ಪರಿವರ್ತಿಸಲಾಗುತ್ತದೆ. ಕನಿಷ್ಠ ಮೂರನೇ ಒಂದು ಭಾಗವನ್ನು ಸಾರ್ವಜನಿಕ ವಸತಿ ಉದ್ದೇಶಗಳಿಗಾಗಿ ಮೀಸಲಿಡಲಾಗುತ್ತದೆ.

ಇದನ್ನೂ ಓದಿ Paris Olympics: ಅತಿ ಹೆಚ್ಚು ಒಲಿಂಪಿಕ್ಸ್ ಆತಿಥ್ಯ ವಹಿಸಿದ ದೇಶ ಯಾವುದು?

ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ “ಇಂಡಿಯಾ ಹೌಸ್” ಕಾಣಬಹುದಾಗಿದೆ. ಭಾರತೀಯ ಒಲಿಂಪಿಕ್ಸ್ ಒಕ್ಕೂಟದ (ಐಒಎ) ಸಹಭಾಗಿತ್ವ ವಹಿಸಿರುವಂಥ ರಿಲಯನ್ಸ್ ಫೌಂಡೇಷನ್ ನಿಂದ ಈ “ಇಂಡಿಯಾ ಹೌಸ್” ಪರಿಕಲ್ಪನೆ ಮೂಡಿದೆ. ಈ ಇಂಡಿಯಾ ಹೌಸ್ ನಲ್ಲಿ ಭಾರತದ ಕ್ರೀಡಾ ಸಂಸ್ಕೃತಿ- ಪರಂಪರೆಯನ್ನು ಪ್ರದರ್ಶಿಸಲಾಗುತ್ತದೆ. ಅದರಲ್ಲಿ ಕ್ರೀಡೆಗೆ ಸಂಬಂಧಿಸಿ ಭಾರತದ ಭೂತ- ಭವಿಷ್ಯತ್ ಹಾಗೂ ವರ್ತಮಾನದ ಸಾಧನೆ, ಕನಸುಗಳನ್ನು ಸಹ ತೋರಿಸಲಾಗುತ್ತದೆ. ತಂತ್ರಜ್ಞಾನ ಮತ್ತು ಡಿಜಿಟಲೈಸೇಷನ್ ನಲ್ಲಿ ಭಾರತದ ಸಾಧನೆಯನ್ನು ಜಗತ್ತಿನೆದುರು ತೆರೆದಿಡಲಾಗುತ್ತದೆ. ವಿಶ್ವದ ವಿವಿಧ ಅಥ್ಲೀಟ್ ಗಳು, ಗಣ್ಯರು, ಕ್ರೀಡಾ ಉತ್ಸಾಹಿಗಳು ಈ ಇಂಡಿಯಾ ಹೌಸ್ ಗೆ ಭೇಟಿ ನೀಡುವ ನಿರೀಕ್ಷೆ ಇದೆ. ಇನ್ನು ಭಾರತದ ನೀತಿಯನ್ನು ವ್ಯಾಖ್ಯಾನಿಸುವ ಏಕತೆ, ವೈವಿಧ್ಯತೆ ಮತ್ತು ಶ್ರೇಷ್ಠತೆಯನ್ನು ಸಾರುವುದಕ್ಕೂ ಇದು ಸಹಕಾರಿ ಆಗುತ್ತದೆ.

ಇಂಡಿಯಾ ಹೌಸ್ ಭಾರತದ ವಿಜಯಗಳು ಮತ್ತು ಪದಕ ಗೆಲುವುಗಳನ್ನು ಆಚರಿಸುವ ಗುರಿಯನ್ನು ಹೊಂದಿದೆ. ಸಂದರ್ಶಕರು, ಕ್ರೀಡಾ ದಂತಕಥೆಗಳೊಂದಿಗೆ ಮಾತುಕತೆ ನಡೆಸಲು ಮತ್ತು ತೊಡಗಿಸಿಕೊಳ್ಳುವ ಕಾರ್ಯಕ್ರಮಗಳ ಮೂಲಕ ಸ್ನೇಹಿತರೊಂದಿಗೆ ಪ್ರಮುಖ ಘಟನೆಗಳನ್ನು ಸ್ಮರಣೀಯವಾಗಿಸುವ ಗಮ್ಯಸ್ಥಾನವಾಗಿದೆ. ಇದು ಎಲ್ಲಾ ದೇಶಗಳ ಮಾಧ್ಯಮ ಮತ್ತು ಅಭಿಮಾನಿಗಳಿಗೆ ಮುಕ್ತವಾಗಿರುತ್ತದೆ. ಪ್ರಮುಖ ಭಾರತೀಯ ಕಾರ್ಯಕ್ರಮಗಳ ಸಂಭ್ರಮಾಚರಣೆಯನ್ನು ಇಂಡಿಯಾ ಹೌಸ್‌ನಲ್ಲಿ ಭಾರತದಲ್ಲಿ ಒಲಂಪಿಕ್ ಗೇಮ್ಸ್‌ನ ವಿಶೇಷ ಮಾಧ್ಯಮ ಹಕ್ಕುದಾರರಾದ ವಯಾಕಾಮ್18 ಸಹಭಾಗಿತ್ವದಲ್ಲಿ ಪ್ರತ್ಯೇಕವಾಗಿ ನಡೆಸಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Olympic Games: ಒಲಿಂಪಿಕ್ಸ್​ನಲ್ಲಿ ಮಹಿಳೆಯರು ಮೊದಲ ಬಾರಿಗೆ ಸ್ಪರ್ಧಿಸಿದ್ದು ಯಾವಾಗ?

Olympic Games:2012ರ ಲಂಡನ್‌ ಒಲಿಂಪಿಕ್ಸ್​ನಲ್ಲಿ ಪುರುಷರಂತೆ ಎಲ್ಲ ಸ್ಪರ್ಧೆಗಳಲ್ಲೂ ಮಹಿಳೆಯರು ಪಾಲ್ಗೊಂಡ ಸಮಾನತೆಯ ಮೊದಲ ಒಲಿಂಪಿಕ್ಸ್‌ ಎನಿಸಿತ್ತು. ಅಲ್ಲದೆ ಎಲ್ಲ ದೇಶಗಳಿಂದ ಮಹಿಳಾ ಸ್ಪರ್ಧಿಗಳೂ ಭಾಗವಹಿಸಿದ್ದರು.

VISTARANEWS.COM


on

Koo

ಬೆಂಗಳೂರು: ಬರೋಬ್ಬರಿ 100 ವರ್ಷಗಳ ಬಳಿಕ ಒಲಿಂಪಿಕ್ಸ್​ ಕ್ರೀಡಾಕೂಡವನ್ನು(Olympic Games) ನಡೆಸುತ್ತಿರುವ ಪ್ಯಾರಿಸ್​ ನಗರಿಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಸರ್ವ ರೀತಿಯಲ್ಲಿಯೂ ಫ್ರಾನ್ಸ್(paris olympics 2024)​ ಸಿಂಗರಿಸಿ ನಿಂತಿದೆ. ಪ್ಯಾರಿಸ್‌ ಆತಿಥ್ಯದಲ್ಲಿ ನಡೆಯಲಿರುವ 3ನೇ ಒಲಿಂಪಿಕ್ಸ್‌ ಕೀಡಾಕೂಟ ಇದಾಗಿದೆ. ಸಾವಿರಾರು(Olympic Games History) ವರ್ಷಗಳ ಇತಿಹಾಸ ಹೊಂದಿರುವ ಪ್ರತಿಷ್ಠಿತ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಮೊತ್ತ ಮೊದಲ ಬಾರಿಗೆ ಮಹಿಳಾ ಕ್ರೀಡಾಳುಗಳು ಸ್ಪರ್ಧಿಸಿದ್ದು ಕೂಡ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿಯೇ.

ಹೌದು, 1896ರಲ್ಲಿ ಗ್ರೀಸ್‌ನ ಅಥೆನ್ಸ್‌ನಲ್ಲಿ ನಡೆದ ಮೊದಲ ಒಲಿಂಪಿಕ್ಸ್‌ನಲ್ಲಿ ಮಹಿಳಾ ಸ್ಪರ್ಧಿಗಳಿರಲಿಲ್ಲ. ಎಲ್ಲ 241 ಸ್ಪರ್ಧಿಗಳು ಪುರುಷರೇ ಆಗಿದ್ದರು. 1900ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(1900 Olympics) ಮೊದಲ ಬಾರಿ 22 ಮಹಿಳೆಯರು ಪಾಲ್ಗೊಂಡಿದ್ದರು. ಆ ಬಳಿಕದ ಒಲಿಂಪಿಕ್ಸ್​ನಲ್ಲಿ ಮಹಿಳಾ ಸ್ಪರ್ಧಿಗಳ ಸಂಖ್ಯೆ ಹೆಚ್ಚುತ್ತಾ ಸಾಗಿತು.

2012ರ ಲಂಡನ್‌ ಒಲಿಂಪಿಕ್ಸ್​ನಲ್ಲಿ ಪುರುಷರಂತೆ ಎಲ್ಲ ಸ್ಪರ್ಧೆಗಳಲ್ಲೂ ಮಹಿಳೆಯರು ಪಾಲ್ಗೊಂಡ ಸಮಾನತೆಯ ಮೊದಲ ಒಲಿಂಪಿಕ್ಸ್‌ ಎನಿಸಿತ್ತು. ಅಲ್ಲದೆ ಎಲ್ಲ ದೇಶಗಳಿಂದ ಮಹಿಳಾ ಸ್ಪರ್ಧಿಗಳೂ ಭಾಗವಹಿಸಿದ್ದರು. ಈ ಬಾರಿಯ ಉದ್ಘಾಟನಾ ಸಮಾರಂಭದ ಕ್ರೀಡಾಪಟುಗಳ ಪಥಸಂಚಲನದಲ್ಲಿ ಎಲ್ಲ ತಂಡಗಳಿಗೆ ತಲಾ ಇಬ್ಬರು ಧ್ವಜಧಾರಿಗಳನ್ನು ಹೊಂದಲು ಅವಕಾಶ ನೀಡುವ ಮೂಲಕ ಲಿಂಗ ಸಮಾನತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಒಲಿಂಪಿಕ್ಸ್​ ಇತಿಹಾಸದಲ್ಲೇ ವಿಶೇಷ ಮಹತ್ವ ಪಡೆದಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಒಲಿಂಪಿಕ್ಸ್‌ 5 ರಿಂಗ್​ಗಳ ಮಹತ್ವವೇನು?

5 ಖಂಡಗಳನ್ನು ಪ್ರತಿನಿಧಿಸುವ 5 ರಿಂಗ್‌ಗಳುಳ್ಳ ಒಲಿಂಪಿಕ್ಸ್‌ ಧ್ವಜವನ್ನು 1913ರಲ್ಲಿ ಆಧುನಿಕ ಒಲಿಂಪಿಕ್ಸ್‌ ಪಿತಾಮಹ ಫ್ರಾನ್ಸ್‌ನ ಪಿಯರ್‌ ಡಿ ಕೌಬರ್ಟಿನ್‌ ವಿನ್ಯಾಸಗೊಳಿಸಿದರು. ಈ ಬಾರಿಯ ಒಲಿಂಪಿಕ್ಸ್​ ಕೂಡ ಫ್ರಾನ್ಸ್​ನಲ್ಲಿಯೇ ನಡೆಯುತ್ತಿರುವುದು ವಿಶೇಷ. ಈ ಒಲಿಂಪಿಕ್ಸ್‌ ಧ್ವಜ 1920ರ ಬೆಲ್ಜಿಯಂನ ಅಂಟ್ವೆರ್ಪ್​ನಲ್ಲಿ ಮೊದಲ ಬಾರಿ ಅಧಿಕೃತವಾಗಿ ಹಾರಾಡಿಸಲಾಯಿತು. ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಪ್ರತಿ ದೇಶದ ರಾಷ್ಟ್ರಧ್ವಜವೂ ಈ ರಿಂಗ್‌ಗಳ ಒಂದಾದರೂ ಬಣ್ಣವನ್ನು ಒಳಗೊಂಡಿರುವುದು ಈ ರಿಂಗ್​ನ ವಿಶೇಷತೆ.

ವೈವಿಧ್ಯಮಯ ಭಾಷೆ, ಸಂಸ್ಕೃತಿ, ಹವಾಮಾನ, ಆರ್ಥಿಕತೆ, ಆಹಾರ ಪದ್ಧತಿ ಮತ್ತು ಮೈಬಣ್ಣದ ಜನರೆಲ್ಲ ಒಂದಾಗಿ ಸೇರುವ ವಿಶ್ವದ ಅತಿದೊಡ್ಡ ವೇದಿಕೆ ಒಲಿಂಪಿಕ್ಸ್ ಕ್ರೀಡಾಕೂಟವಾಗಿದೆ. ಹಲವು ವೈವಿಧ್ಯಗಳ ನಡುವೆಯೂ ಒಲಿಂಪಿಕ್ಸ್ ಏಕತೆಯನ್ನು ಸಾರುವುದು ಈ ಕ್ರೀಡಾಕೂಟದ ವಿಶೇಷತೆ.

Continue Reading

ಕ್ರೀಡೆ

Sri Lanka Tour: ಸಂಜು, ಅಭಿಷೇಕ್​ಗೆ ಅವಕಾಶ ನೀಡದಕ್ಕೆ ಬಿಸಿಸಿಐ ವಿರುದ್ಧ ಕಿಡಿಕಾರಿದ ಸಂಸದ ​ತರೂರ್

Sri Lanka Tour: ಕೋಚ್​ ಗೌತಮ್ ಗಂಭೀರ್‌ ಖಡಕ್​ ಎಚ್ಚರಿಕೆ ನೀಡಿದ ಕಾರಣ ವಿಶ್ರಾಂತಿಯಲ್ಲಿದ್ದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ, ಜಸ್​ಪ್ರೀತ್​ ಬುಮ್ರಾ ಮತ್ತು ರವೀಂದ್ರ ಜಡೇಜಾ ತಮ್ಮ ವಿಶ್ರಾಂತಿ ಮೊಟಕುಗೊಳಿಸಿ ತಂಡಕ್ಕೆ ಮರಳಿದ್ದಾರೆ.

VISTARANEWS.COM


on

Sri Lanka Tour
Koo

ನವದೆಹಲಿ: ಮುಂಬರುವ ಶ್ರೀಲಂಕಾ ಪ್ರವಾಸಕ್ಕಾಗಿ(Sri Lanka Tour) ಗುರುವಾರ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿತ್ತು. ಆದರೆ, ಏಕದಿನ ತಂಡದಿಂದ ಸಂಜು ಸ್ಯಾಮ್ಸನ್​(Sanju Samson) ಮತ್ತು ಅಭಿಷೇಕ್​ ಶರ್ಮ(Abhishek Sharma) ಅವರನ್ನು ಸರಣಿಗೆ ಆಯ್ಕೆ ಮಾಡದ್ದಕ್ಕೆ ಸಂಸದ ಶಶಿ ತರೂರ್(Member of Parliament Shashi Tharoor) ಆಯ್ಕೆ ಸಮಿತಿ ಮತ್ತು ಬಿಸಿಸಿಐ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ವರ್ಷ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಸ್ಯಾಮ್ಸನ್ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಅಭಿಷೇಕ್ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ತಮ್ಮ ನಿರ್ಭೀತ ಬ್ಯಾಟಿಂಗ್‌ನಿಂದ ಎಲ್ಲರನ್ನೂ ಆಕರ್ಷಿಸಿದ್ದರು. ಆದರೂ ಕೂಡ ಈ ಪ್ರತಿಭಾನ್ವಿತ ಆಟಗಾರರನ್ನು ಕೈಬಿಟ್ಟಿರುವುದು ನಿಜ್ಜಕ್ಕೂ ಬೇಸರದ ಸಂಗತಿ ಎಂದು ತರೂರ್(Shashi Tharoor)​ ಹೇಳಿದ್ದಾರೆ.

“ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡದ ಆಯ್ಕೆ ಕುತೂಹಲಕಾರಿಯಾಗಿದೆ. ತಮ್ಮ ಕೊನೆಯ ಏಕದಿನದಲ್ಲಿ ಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್​ ಅವರನ್ನು ಏಕದಿನಕ್ಕೆ ಆಯ್ಕೆ ಮಾಡಲಾಗಿಲ್ಲ. ಜಿಂಬಾಬ್ವೆ ಟಿ20 ಸರಣಿಯಲ್ಲಿ ವೇಗದ ಶತಕ ಬಾರಿಸಿದ್ದ ಅಭಿಷೇಕ್​ ಶರ್ಮ ಕೂಡ ಆಯ್ಕೆಯಾಗಿಲ್ಲ. ಅಪರೂಪಕ್ಕೊಮ್ಮೆ ಆಯ್ಕೆಯಾದರು, ತಂಡಕ್ಕೆ ಶುಭವಾಗಲಿ,” ಎಂದು ತರೂರ್ ತಂಡದ ಆಟಗಾರರ ಪಟ್ಟಿಯನ್ನು ಹಂಚಿಕೊಂಡು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ಟಿ20 ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶದೀಪ್​ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್​ ಸಿರಾಜ್.

ಇದನ್ನೂ ಓದಿ Team India Srilanka Tour : ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಸೂರ್ಯಕುಮಾರ್​ಗೆ ಟಿ20 ನಾಯಕತ್ವ

ಏಕದಿನ ತಂಡ


ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

ಮುಂದಿನ ವರ್ಷ ಪಾಕಿಸ್ತಾನ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೂ ಮೊದಲು ಭಾರತ ತಂಡ ಕೆಲವೇ ಏಕದಿನ ಪಂದ್ಯಗಳನ್ನು ಮಾತ್ರ ಆಡುತ್ತಿದೆ. ಹೆಚ್ಚಾಗಿ ಟಿ20 ಸರಣಿ ಮಾತ್ರ ಆಡಲಿದೆ. ಕಡಿಮೆ ಏಕದಿನ ಪಂದ್ಯ ಇರುವ ಕಾರಣ ಅನುಭವಿ ಆಟಗಾರರು ಈ ಪ್ರವಾಸದಲ್ಲಿ ಪಾಲ್ಗೊಳ್ಳಬೇಕು ಎಂದು ನೂತನ ಕೋಚ್​ ಗೌತಮ್ ಗಂಭೀರ್‌ ಖಡಕ್​ ಎಚ್ಚರಿಕೆ ನೀಡಿದ ಕಾರಣ ವಿಶ್ರಾಂತಿಯಲ್ಲಿದ್ದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ, ಜಸ್​ಪ್ರೀತ್​ ಬುಮ್ರಾ ಮತ್ತು ರವೀಂದ್ರ ಜಡೇಜಾ ತಮ್ಮ ವಿಶ್ರಾಂತಿ ಮೊಟಕುಗೊಳಿಸಿ ತಂಡಕ್ಕೆ ಮರಳಿದ್ದಾರೆ.

ಪ್ರವಾಸದ ಮೊದಲ 3 ಟಿ20 ಪಂದ್ಯಗಳು ಜುಲೈ 27, 28 ಮತ್ತು 30ರಂದು ಪಲ್ಲೆಕಿಲೆಯಲ್ಲಿ ನಡೆಯಲಿವೆ. ಮೊದಲು ಪ್ರಕಟಗೊಂಡಿದ್ದ ವೇಳಾಪಟ್ಟಿಯಲ್ಲಿ 26ರಿಂದ ಟಿ20 ಪಂದ್ಯ ಆರಂಭವಾಗಬೇಕಿತ್ತು. ಏಕದಿನ ಸರಣಿ ಕೂಡ ಒಂದು ದಿನ ತಡವಾಗಿ ಶುರುವಾಗಬೇಕಿತ್ತು. ಏಕದಿನ ಆಗಸ್ಟ್​ 1ರದ ಬದಲಾಗಿ ಆಗಸ್ಟ್​ 2ರಿಂದ ಆರಂಭಗೊಳ್ಳಲಿದೆ. ಉಳಿದ ಪಂದ್ಯಗಳ ದಿನಾಂಕ ಬದಲಾಗಲಿಲ್ಲ. ಈ ಹಿಂದಿನಂತೆ ಆಗಸ್ಟ್​ 4 ಮತ್ತು 7ರಂದೇ ನಡೆಯಲಿದೆ.

Continue Reading

ಕ್ರೀಡೆ

Hardik Pandya: ವಿಚ್ಛೇದಿತ ಪತ್ನಿ ನತಾಶಾಗೆ ಶೇ.70ರಷ್ಟು ಜೀವನಾಂಶ ನೀಡಲಿದ್ದಾರಾ ಹಾರ್ದಿಕ್​ ಪಾಂಡ್ಯ?

Hardik Pandya: ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು.

VISTARANEWS.COM


on

Hardik Pandya
Koo

ಮುಂಬಯಿ: ಟೀಮ್​ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ ನತಾಶಾ ಸ್ಟಾಂಕೋವಿಕ್(Natasa Stankovic)​ ಅವರಿಗೆ ವಿಚ್ಛೇದನ ನೀಡುವ ಮೂಲಕ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ್ದಾರೆ. ಪತ್ನಿಗೆ ವಿಚ್ಛೇದನ ನೀಡಿರುವ ವಿಚಾರವನ್ನು ಪಾಂಡ್ಯ ಗುರುವಾರ ಅಧಿಕೃತ ಪ್ರಕಟನೆಯೊಂದಿಗೆ ತಿಳಿಸಿದ್ದರು. ಇದೀಗ ಪಾಂಡ್ಯ ತನ್ನ ಆಸ್ತಿಯಲ್ಲಿ ಪತ್ನಿಗೆ ಜೀವನಾಂಶವಾಗಿ ಶೇ. 70 ಪ್ರತಿಶತವನ್ನು ಬಿಟ್ಟುಕೊಡಬೇಕು ಎನ್ನುವ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.

ತಾಯಿಯ ಹೆಸರಿನಲ್ಲಿ ಆಸ್ತಿ ಮಾಡಿದ ಪಾಂಡ್ಯ


ಹಾರ್ದಿಕ್​ ಪಾಂಡ್ಯ ತಮ್ಮ ಎಲ್ಲ ಆಸ್ತಿಯನ್ನು ತಾಯಿಯ ಹೆಸರಿನಲ್ಲಿ ಮಾಡಿಟ್ಟಿದ್ದಾರೆ. ಈ ವಿಚಾರವನ್ನು ಸ್ವತಃ ಅವರೇ ರಿವೀಲ್​ ಮಾಡಿದ್ದರು. ಹಿಂದೊಮ್ಮೆ ಸಂದರ್ಶನದಲ್ಲಿ ಮುಕ್ತವಾಗಿ ಮಾತನಾಡಿದ್ದ ಪಾಂಡ್ಯ “ನಾನು ಜಾಹಿರಾತು, ಕ್ರಿಕೆಟ್​ ಸೇರಿ ಇನ್ನಿತರ ಮೂಲಗಳಿಂದ ಎಷ್ಟೇ ಹಣ ಸಂಪಾದಿಸಿದರೂ ಕೂಡ ಇದನೆಲ್ಲ ನನ್ನ ಹೆಸರಿನಲ್ಲಿ ಇಟ್ಟಿಲ್ಲ. ನನ್ನ ಬಳಿ ದುಬಾರಿ ಕಾರು, ಬಂಗಲೆ ಇದ್ದರೂ ಕೂಡ ಇದೆಲ್ಲ ನನ್ನ ತಾಯಿಯ ಹೆಸರಿನಲ್ಲಿದೆ. ಹೀಗಾಗಿ ನಾನು ಯಾವುದೇ ಸಮಸ್ಯೆ ಬಂದರೂ ಕೂಡ ಯಾರೀಗೂ ನನ್ನ ಆಸ್ತಿಯಲ್ಲಿ ಶೇ. 50ರಷ್ಟು ಜೀವನಾಂಶ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ Hardik Pandya: ಫಿಟ್ನೆಸ್‌ ಬಗ್ಗೆ ಪ್ರಶ್ನೆ ಮಾಡಿದವರಿಗೆ ಸಿಕ್ಸ್​ ಪ್ಯಾಕ್​ ಮೂಲಕ ತಿರುಗೇಟು ಕೊಟ್ಟ ಹಾರ್ದಿಕ್​ ಪಾಂಡ್ಯ

ಸದ್ಯ ಪಾಂಡ್ಯ ಅವರು ಪತ್ನಿಗೆ ಜೀವನಾಂಶ ನೀಡುವ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಇಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸುಳ್ಳಾಗಿದೆ. ನತಾಶ ಇದುವರೆಗೆ ಹಾರ್ದಿಕ್‌ ಅವರಿಂದ ಜೀವನಾಂಶವಾಗಿ ಯಾವುದೇ ರೀತಿಯ ಪಾಲು ಕೇಳಿಲ್ಲ. ಹೀಗಾಗಿ ಪಾಂಡ್ಯ ಮತ್ತು ನತಾಶ ಜೀವನಾಂಶದ ಬಗ್ಗೆ ಹರಿದಾಡುತ್ತಿರುವ ಸುದ್ದಿಯಲ್ಲಿ ಸತ್ಯಾಂಶವಿಲ್ಲ.

“ನಾಲ್ಕು ವರ್ಷಗಳ ಕಾಲ ಒಂದಾಗಿ ಜೀವನ ನಡೆಸಿದ್ದ ನತಾಶಾ ಮತ್ತು ನಾನು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ. ಇದು ನಮ್ಮಿಬ್ಬರ ಹಿತಾಸಕ್ತಿಗಾಗಿ ಎಂದು ನಾವು ನಂಬುತ್ತೇವೆ. ಇದು ಕಠಿಣ ನಿರ್ಧಾರವಾಗಿದೆ. ನಾವು ಒಟ್ಟಿಗೆ ಆನಂದಿಸಿದ ಸಂತೋಷ, ಪರಸ್ಪರ ಗೌರವ ಮತ್ತು ಒಡನಾಟವನ್ನು ಹೊಂದಿದ್ದೇವೆ. ಮಗ ನಮ್ಮಿಬ್ಬರ ಜೀವನದ ಕೇಂದ್ರದಲ್ಲಿ ಮುಂದುವರಿಯುತ್ತಾನೆ” ಎಂದು ಬರೆದುಕೊಂಡು ಪಾಂಡ್ಯ ವಿಚ್ಛೇದನವನ್ನು ಖಚಿತಪಡಿಸಿದ್ದರು.

ಮಗ ಯಾರ ಬಳಿ ಇರುತ್ತಾನೆ?


ದಂಪತಿ ಬೇರೆಯಾದ ಬಳಿಕ ಮಗ ಯಾರ ಬಳಿಯಿರುತ್ತಾನೆ ಎಂಬ ಪ್ರಶ್ನೆಗಳಿಗೂ ಪಾಂಡ್ಯ ಮತ್ತು ನತಾಶ ಜಂಟಿ ಹೇಳಿಕೆಯಲ್ಲಿ ಉತ್ತರಿಸಿದ್ದಾರೆ. “ನಾನು ಮತ್ತು ನತಾಶಾ ಇಬ್ಬರೂ ಪುತ್ರ ಅಗಸ್ತ್ಯನನ್ನು ಸಹ-ಪೋಷಕರಾಗಿ ನೋಡಿಕೊಳ್ಳುತ್ತೇವೆ. ಅವನಿಗೆ ಯಾವುದೇ ಕಾರಣಕ್ಕೂ ಯಾವ ಕೊರತೆಯೂ ಆಗದಂತೆ ನಾವಿಬ್ಬರೂ ಸಮನಾಗಿ ಅವನ ಜವಾಬ್ದಾರಿ ಹಂಚಿಕೊಳ್ಳಲಿದ್ದೇವೆ” ಎಂದು ಹೇಳಿದ್ದಾರೆ.

ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು.

Continue Reading

ಕ್ರಿಕೆಟ್

Kannadiga quota: ಆರ್​ಸಿಬಿ ತಂಡದಲ್ಲೂ ಕನ್ನಡಿಗರಿಗೆ ಮೀಸಲಾತಿ ನೀಡಿ; ಅಭಿಮಾನಿಗಳಿಂದ ಆಗ್ರಹ

Kannadiga quota: ಆರ್​ಸಿಬಿ(RCB Reservation) ತಂಡದಲ್ಲಿಯೂ ಕೂಡ ಮೀಸಲಾತಿ ನೀಡಬೇಕು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

VISTARANEWS.COM


on

Kannadiga quota
Koo

ಬೆಂಗಳೂರು: ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ(Kannadiga quota) ಶೇ.50 ಹಾಗೂ ಆಡಳಿತಾತ್ಮಕವಲ್ಲದ(Karnataka Jobs Reservation) ಹುದ್ದೆಗಳಲ್ಲಿ ಶೇ.75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಇದೀಗ ಆರ್​ಸಿಬಿ(RCB Reservation) ತಂಡದಲ್ಲಿಯೂ ಕೂಡ ಮೀಸಲಾತಿ ನೀಡಬೇಕು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

ಹೌದು, ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದಲ್ಲಿ ಪ್ರತಿ ಬಾರಿಯೂ ಕನ್ನಡಿಗ ಆಟಗಾರರಿಗೆ ಅವಕಾಶ ನೀಡುವುದಿಲ್ಲ. ಒಂದೆಡರು ಮಂದಿಯನ್ನು ಹರಾಜಿನಲ್ಲಿ ಖರೀದಿ ಮಾಡಿದರೂ ಕೂಡ ಇವರಿಗೆ ಆಡುವ ಅವಕಾಶ ನೀಡದೆ ಕೇವಲ ಬೆಂಚ್​ ಕೂರಿಸಿಯೇ ಬಿಡುತ್ತಾರೆ. ಪ್ರತಿ ಬಾರಿ ಹರಾಜು ನಡೆದಾಗಲೂ ಆರ್​ಸಿಬಿ ಅಭಿಮಾನಿಗಳು ಕನ್ನಡಿಗ ಆಟಗಾರರ ಕಡೆಗಣನೆಯ ಬಗ್ಗೆ ಫ್ರಾಂಚೈಸಿ ವಿರುದ್ಧ ಆಕ್ರೋಶ ಹೊರಹಾಕುತ್ತಲೇ ಇರುತ್ತಾರೆ. ಇದೀಗ ಕರ್ನಾಟಕದಲ್ಲಿ ಖಾಸಗಿ ಕೈಗಾರಿಕೆಗಳಲ್ಲಿ ಸರ್ಕಾರ ಮೀಸಲಾತಿ ಜಾರಿಗೆ ತರುವ ಚಿಂತನೆ ನಡೆಸಿದ ಬೆನ್ನಲ್ಲೇ ಐಪಿಎಲ್​ನಲ್ಲಿ ಆರ್​ಸಿಬಿ ತಂಡದಲ್ಲಿಯೂ ಶೇ 50ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿದ್ದಾರೆ.

ಆರ್​ಸಿಬಿಯ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮೀಸಲಾತಿ ಜಾರಿ ಮಾಡುವಂತೆ ಹಲವು ಟ್ವೀಟ್​ ಮಾಡಲಾರಂಭಿಸಿದ್ದಾರೆ. ಐಪಿಎಲ್​ ಆರಂಭವಾಗಿ 17 ಆವೃತ್ತಿ ಕಳೆದರೂ ಕೂಡ ಆರ್​ಸಿಬಿ ಕಪ್​ ಗೆದ್ದಿಲ್ಲ. ನಮ್ಮ ರಾಜ್ಯದ ಅದೆಷ್ಟೋ ಸ್ಟಾರ್​ ಆಟಗಾರರಿದ್ದರೂ ಕೂಡ ಅವರನ್ನು ಆರ್​ಸಿಬಿ ಖರೀದಿ ಮಾಡದೆ ಸರಿಯಾಗಿ ಆಡಲು ಬಾರದ ಆಟಗಾರರಿಗೆ ಅತ್ಯಧಿಕ ಮೊತ್ತದ ಬಿಡ್​ ಮಾಡಿ ತಂಡ ಸೇರಿಸಿಕೊಳ್ಳುತ್ತಿದೆ. ಈ ಬಾರಿಯ ಮೆಗಾ ಹರಾಜಿನಲ್ಲಾದರು ಕನ್ನಡಿಗ ಆಟಗಾರರಿಗೆ ಅವಕಾಶ ನೀಡಲಿದೆಯಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ RCB: ಆರ್​ಸಿಬಿ ಕಪ್​ ಗೆಲ್ಲದಿರಲು ನೈಜ ಕಾರಣ ತಿಳಿಸಿದ ತಂಡದ ಮಾಜಿ ಆಟಗಾರ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತಗೊಂಡಿತ್ತು. ಪ್ರಮುಖ ಉದ್ಯಮಿಗಳಾದ ಮೋಹನ್ ದಾಸ್ ಪೈ,ಕಿರಣ್ ಮಜುಂದಾರ್ ಅವರು ಈ ಬಗ್ಗೆ ಆಕ್ಷೇಪ ಎತ್ತಿದ್ದರು. ನೆರೆ ರಾಜ್ಯದ ಸರ್ಕಾರಗಳೂ ಇದರ ಬಗ್ಗೆ ತಕರಾರು ಎತ್ತಿದ್ದವು. ಈ ಒತ್ತಡಕ್ಕೆ ಬಗ್ಗಿರುವ ಸರ್ಕಾರ ಮಸೂದಗೆ ತಾತ್ಕಾಲಿಕ ತಡೆಯನ್ನು ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಮಸೂದೆಯಲ್ಲೇನಿದೆ?

ಈ ಮಸೂದೆಯಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಸ್ಥಳೀಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುತ್ತದೆ. ಸಾಕಷ್ಟು ಅರ್ಹ ಅಭ್ಯರ್ಥಿಗಳು ಇಲ್ಲದೇ ಇದ್ದರೆ ಸರ್ಕಾರದ ಸಹಯೋಗದೊಂದಿಗೆ ಉದ್ಯಮವು ಮೂರು ವರ್ಷಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಅವರನ್ನು ತೊಡಗಿಸಿಕೊಳ್ಳಬೇಕು. ಪ್ರಸ್ತಾವಿತ ಕಾನೂನಿನ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳ ಕಾಲಾವಕಾಶ ನೀಡಲು ಸರ್ಕಾರ ಯೋಜನೆ ರೂಪಿಸುತ್ತಿದೆ.

Continue Reading
Advertisement
Kannada Actress Many opportunities for this actress before the release Back Benchers'!
ಸ್ಯಾಂಡಲ್ ವುಡ್19 mins ago

Kannada Actress: `ಬ್ಯಾಕ್‍ ಬೆಂಚರ್ಸ್’ ಬಿಡುಗಡೆಗೂ ಮುನ್ನವೇ ಹಲವು ಅವಕಾಶಗಳು ಈ ನಟಿಗೆ!

Donald Trump
ವಿದೇಶ26 mins ago

Donald Trump: ಅಮೆರಿಕವೂ ಐರನ್ ಡೋಮ್ ಕ್ಷಿಪಣಿ ತಯಾರಿಸಲಿದೆ; ಡೊನಾಲ್ಡ್‌ ಟ್ರಂಪ್‌ ಸೂಚನೆ

ಪ್ರಮುಖ ಸುದ್ದಿ41 mins ago

Olympic Games: ಒಲಿಂಪಿಕ್ಸ್​ನಲ್ಲಿ ಮಹಿಳೆಯರು ಮೊದಲ ಬಾರಿಗೆ ಸ್ಪರ್ಧಿಸಿದ್ದು ಯಾವಾಗ?

Ram Pothineni double ismart second song out
ಟಾಲಿವುಡ್1 hour ago

Ram Pothineni: `ಡಬಲ್ ಇಸ್ಮಾರ್ಟ್’ ಸಿನಿಮಾದ ಎರಡನೇ ಹಾಡು ರಿಲೀಸ್!

UT Khader karnataka assembly live
ಪ್ರಮುಖ ಸುದ್ದಿ1 hour ago

Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

Sri Lanka Tour
ಕ್ರೀಡೆ1 hour ago

Sri Lanka Tour: ಸಂಜು, ಅಭಿಷೇಕ್​ಗೆ ಅವಕಾಶ ನೀಡದಕ್ಕೆ ಬಿಸಿಸಿಐ ವಿರುದ್ಧ ಕಿಡಿಕಾರಿದ ಸಂಸದ ​ತರೂರ್

Gold Rate Today
ಚಿನ್ನದ ದರ1 hour ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಬಂಗಾರ ಇಂದು ಇಷ್ಟು ಅಗ್ಗ

Tharun Sudhir gives Darshan a wedding invitation card and visits Jail
ಟಾಲಿವುಡ್2 hours ago

Tharun Sudhir: ದರ್ಶನ್‌ಗೆ ಮದುವೆ ಇನ್ವಿಟೇಶನ್‌ ಕಾರ್ಡ್‌ ಕೊಟ್ಟು, ಆಶೀರ್ವಾದ ಪಡೆಯಲು ಜೈಲಿಗೆ ಭೇಟಿ ಕೊಡಲಿದ್ದಾರಂತೆ ತರುಣ್ ಸುಧೀರ್

Train services
ಬೆಂಗಳೂರು2 hours ago

Train services: ವಿವಿಧ ಕಾಮಗಾರಿ ಹಿನ್ನೆಲೆ ಈ ಮಾರ್ಗದ ರೈಲುಗಳು ಸಂಚಾರ ಭಾಗಶಃ ರದ್ದು

road accident mbbs student death
ಬೆಂಗಳೂರು2 hours ago

Road Accident: ನಿರ್ಲಕ್ಷ್ಯದಿಂದ ಓಡಿಸಿ ಎಂಬಿಬಿಎಸ್‌ ವಿದ್ಯಾರ್ಥಿಯ ಜೀವ ತೆಗೆದ ಟ್ಯಾಂಕರ್ ಚಾಲಕ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ21 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ5 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ5 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌