Road Accident: ನಿರ್ಲಕ್ಷ್ಯದಿಂದ ಓಡಿಸಿ ಎಂಬಿಬಿಎಸ್‌ ವಿದ್ಯಾರ್ಥಿಯ ಜೀವ ತೆಗೆದ ಟ್ಯಾಂಕರ್ ಚಾಲಕ - Vistara News

ಬೆಂಗಳೂರು

Road Accident: ನಿರ್ಲಕ್ಷ್ಯದಿಂದ ಓಡಿಸಿ ಎಂಬಿಬಿಎಸ್‌ ವಿದ್ಯಾರ್ಥಿಯ ಜೀವ ತೆಗೆದ ಟ್ಯಾಂಕರ್ ಚಾಲಕ

Road Accident: ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 23 ವರ್ಷದ ಇಶಾನ್ ಎಂಬ ಎಂಬಿಬಿಎಸ್‌ ವಿದ್ಯಾರ್ಥಿಗೆ. ಎದುರುಗಡೆಯಿಂದ ಯಮನಂತೆ ಬಂದ ವಾಟರ್ ಟ್ಯಾಂಕರ್‌ ಅಪ್ಪಳಿಸಿದೆ. ವಿದ್ಯಾರ್ಥಿಗೆ ಗುದ್ದಿ, ಇಶಾನ್ ಮೇಲೆಯೇ ಹರಿದಿದೆ.

VISTARANEWS.COM


on

road accident mbbs student death
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಾಟರ್‌ ಟ್ಯಾಂಕರ್‌ (Water Tanker) ಚಾಲಕನೊಬ್ಬನ (Tanker Driver) ನಿರ್ಲಕ್ಷ್ಯ ಹಾಗೂ ವೇಗದ ಚಾಲನೆಗೆ ಎಂಬಿಬಿಎಸ್‌ ವಿದ್ಯಾರ್ಥಿಯೊಬ್ಬ (MBBS Student) ಬಲಿಯಾಗಿದ್ದಾನೆ. ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಈ ರಸ್ತೆ ಅಪಘಾತ (Road Accident) ನಡೆದಿದೆ.

ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 23 ವರ್ಷದ ಇಶಾನ್ ಎಂಬ ಎಂಬಿಬಿಎಸ್‌ ವಿದ್ಯಾರ್ಥಿಗೆ. ಎದುರುಗಡೆಯಿಂದ ಯಮನಂತೆ ಬಂದ ವಾಟರ್ ಟ್ಯಾಂಕರ್‌ ಅಪ್ಪಳಿಸಿದೆ. ವಿದ್ಯಾರ್ಥಿಗೆ ಗುದ್ದಿ, ಇಶಾನ್ ಮೇಲೆಯೇ ಹರಿದಿದೆ. ಇಷ್ಟಾದರೂ ಚಾಲಕ ತಕ್ಷಣ ನಿಲ್ಲಿಸದೆ ಮುಂದೆ (Hit and Run) ಸಾಗಿದ್ದಾನೆ. ಚಲಿಸುತ್ತಿದ್ದ ಟ್ಯಾಂಕರ್ ಅನ್ನು ದ್ವಿಚಕ್ರ ವಾಹನ ಸವಾರರು ತಡೆದು ನಿಲ್ಲಿಸಿ ಚಾಲಕನನ್ನು ಹಿಡಿದಿದ್ದಾರೆ.

ಸ್ಥಳಕ್ಕೆ ಬಂದು ಮಗನ ಮೃತ ದೇಹ ನೋಡಿದ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಬಿಕ್ಕಿ ಬಿಕ್ಕಿ ಅತ್ತ ತಾಯಿ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಶಾನ್ ಎಂಬಿಬಿಎಸ್ ಫೈನಲ್ ಇಯರ್ ಸ್ಟೂಡೆಂಟ್ ಆಗಿದ್ದು, ಇವರ ಕುಟುಂಬ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ವಾಸವಿತ್ತು. ನಿನ್ನೆ ಸಂಜೆ ಸ್ನೇಹಿತನನ್ನು ಮೀಟ್ ಆಗಲು ಥಣಿಸಂದ್ರ ಬಳಿ ಈತ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ.

ಮದ್ಯ ಸೇವಿಸಿ ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದ ರೈಲು, ಮೂವರು ಯುವಕರ ಸಾವು

ಕೊಪ್ಪಳ: ರೇಲ್ವೆ ಟ್ರ್ಯಾಕ್ (Railway Track) ಮೇಲೆ ಮದ್ಯ ಸೇವಿಸಿ (Liquor) ಅಲ್ಲೇ ಮಲಗಿದ್ದ ಯುವಕರ‌ ಮೇಲೆ ರೈಲು (Train Accident) ಹರಿದಿದ್ದು, ಸ್ಥಳದಲ್ಲಿಯೇ ಮೂರು ಜನ ಯುವಕರು ಸಾವಿಗೀಡಾಗಿದ್ದಾರೆ. ಈ ಘೋರ ದುರಂತ (Horrible Accident) ಕೊಪ್ಪಳ ಜಿಲ್ಲೆ (Koppala news) ಗಂಗಾವತಿ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಮೃತ ಯುವಕರನ್ನು ಮೌನೇಶ್ ಪತ್ತಾರ(23), ಸುನೀಲ್ (23), ವೆಂಕಟ ಭೀಮನಾಯ್ಕ (20) ಎಂದು ಗುರುತಿಸಲಾಗಿದೆ. ಮೂವರೂ ಗಂಗಾವತಿಯವರಾಗಿದ್ದಾರೆ. ಇವರು ಕುಡಿದ ಮತ್ತಿನಲ್ಲಿ ರೇಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದರು ಎಂಬುದಕ್ಕೆ ಸ್ಥಳದಲ್ಲಿದ್ದ ಮದ್ಯದ ಬಾಟಲಿಗಳು ಸಾಕ್ಷಿಯಾಗಿವೆ. ರೈಲು ಹುಬ್ಬಳ್ಳಿಯಿಂದ ಸಿಂಧನೂರಿಗೆ ತೆರಳುತ್ತಿತ್ತು. ಮದ್ಯದ ಅಮಲಿನಲ್ಲಿ ರೈಲಿನ ಆಗಮನ ಯುವಕರಿಗೆ ಗೊತ್ತಾಗಿರಲಿಕ್ಕಿಲ್ಲ ಎನ್ನಲಾಗಿದೆ. ಗದಗ ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆ ಅನಾಹುತ; ಮನೆಗೋಡೆ ಕುಸಿದು ಇಬ್ಬರು ಕಂದಮ್ಮಗಳು ಸೇರಿ 3 ಸಾವು

ಹಾವೇರಿ: ರಾಜ್ಯದಲ್ಲಿ ಮಳೆ ಅನಾಹುತ ಸೃಷ್ಟಿಸುತ್ತಿದೆ. ಹಾವೇರಿಯಲ್ಲಿ ಮಳೆಗೆ ಒದ್ದೆಯಾದ ಮನೆಗೋಡೆ ಕುಸಿದು ಎರಡು ಕಂದಮ್ಮಗಳು ಹಾಗೂ ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ದುರಂತ ಸಂಭವಿಸಿದೆ.

ಅಮೂಲ್ಯ ಹಾಗೂ ಅನನ್ಯ ಮೃತಪಟ್ಟ ಎರಡು 2 ವರ್ಷದ ಅವಳಿಜವಳಿ ಕಂದಮ್ಮಗಳಾಗಿವೆ. ಇವರ ತಾಯಿ ಚೆನ್ನಮ್ಮ (30) ಕೂಡ ಮೃತಪಟ್ಟಿದ್ದಾರೆ. ಮನೆಯೊಳಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ರಕ್ಷಣೆಗೆ ಧಾವಿಸಿದ್ದು, ಮೃತ ದೇಹಗಳನ್ನ ಹೊರ ತೆಗೆದು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಗಾಯಾಳುಗಳು ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Illicit relationship : ಪರ ಪುರುಷನೊಂದಿಗೆ ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

DK Shivakumar: ಬಿಎಸ್‌ವೈ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿಕೆಶಿ ಆರೋಪ

DK Shivakumar: ಬಿಜೆಪಿಯ ಅಕ್ರಮಗಳನ್ನು ತನಿಖೆ ಮಾಡುತ್ತೇವೆ. ಅಕ್ರಮಗಳ ಹಿಂದೆ ಇದ್ದ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳ ಬಗ್ಗೆ ಜನರಿಗೆ ತಿಳಿಸುತ್ತೇವೆ ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: “ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು 300 ಕೋಟಿ ರೂ.ಗಳಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ 87 ಕೋಟಿ ರೂ., ಎಪಿಎಂಸಿಯ 47 ಕೋಟಿ ರೂ., 2019ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ 22 ಕೋಟಿ ರೂ., ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್ ಅಲ್ಲಿನ ಹಣ ಜೂನ್ 2018 ರಲ್ಲಿ 5 ಕೋಟಿ ರೂ., ದೇವರಾಜ್ ಅರಸು ನಿಗಮದ 47 ಕೋಟಿ ರೂ., ಮಾಲಿನ್ಯ ನಿಯಂತ್ರಣ ಮಂಡಲಿಯ 10 ಕೋಟಿ ರೂ. ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ” ಎಂದು ಆರೋಪಿಸಿದರು.

ಬಿಜೆಪಿಯ ಅಕ್ರಮಗಳನ್ನು ತನಿಖೆ ನಡೆಸುವಿರಾ ಎಂದು ಪ್ರಶ್ನಿಸಿದಾಗ “ಖಂಡಿತವಾಗಿಯೂ ತನಿಖೆ ನಡೆಸುತ್ತೇವೆ. ಆದರೆ ಎಲ್ಲವೂ ದಾಖಲೆಯಲ್ಲಿ ಇರಬೇಕು ಎನ್ನುವ ಕಾರಣಕ್ಕೆ ಸದನದಲ್ಲಿ ಎಲ್ಲಾ ದಾಖಲೆಗಳನ್ನು ಬಯಲು ಮಾಡುತ್ತೇವೆ. ಅಕ್ರಮಗಳ ಹಿಂದೆ ಇರುವ ಯಾವ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳು ಇದ್ದರು ಎಂದು ಜನರಿಗೆ ತಿಳಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ | Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

“ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ ರೂ., ಮಂತ್ರಿ ಸ್ಥಾನಕ್ಕೆ 100 ಕೋಟಿ ರೂ. ನೀಡಬೇಕು ಎನ್ನುವ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪ ಹಾಗೂ ಭೋವಿ ನಿಗಮದ ಅಕ್ರಮದ ಬಗ್ಗೆ ಗೂಳಿಹಟ್ಟಿ ಶೇಖರ್ ಮಾಡಿದ ಆರೋಪಗಳ ಮೇಲೆ ಏಕೆ ಬಿಜೆಪಿ ತನಿಖೆ ನಡೆಸಲಿಲ್ಲ” ಎಂದು ಮರುಪ್ರಶ್ನಿಸಿದರು.

“ಯಾವುದೇ ಭ್ರಷ್ಟಾಚಾರದ ಮೇಲೆ ತನಿಖೆ ನಡೆಯುತ್ತಿದ್ದರೆ ಆ ವಿಚಾರದಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ. ಆದರೆ ನಾವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಕೊಟ್ಟು ಸದನದಲ್ಲಿ ಚರ್ಚೆ ಅವಕಾಶ ಮಾಡಿಕೊಟ್ಟಿದ್ದೇವೆ. ಅಕ್ರಮ ಎಸಗಿದ್ದರೆ ಯಾವುದೇ ಅಧಿಕಾರಿ, ಮಂತ್ರಿ, ಶಾಸಕ, ಯಾರೇ ಆಗಿರಲಿ ಅವರನ್ನು ರಕ್ಷಿಸುವ ಉದ್ದೇಶ ನಮಗಿಲ್ಲ” ಎಂದು ಹೇಳಿದರು.

ಇದನ್ನೂ ಓದಿ | Sameer Nigam: 25,000 ಜನರಿಗೆ ಉದ್ಯೋಗ ಕೊಟ್ಟಿದ್ದೇನೆ, ನನ್ನ ಮಕ್ಕಳು ರಾಜ್ಯದಲ್ಲಿ ಕೆಲಸ ಮಾಡಬಾರದಾ?: ಫೋನ್‌ಪೇ ಸಿಇಒ ಆಕ್ರೋಶ

“ವಾಲ್ಮೀಕಿ ನಿಗಮದ 86 ಕೋಟಿ ರೂ. ಹಣ ತೆಲಂಗಾಣಕ್ಕೆ ಅಕ್ರಮವಾಗಿ ವರ್ಗಾವಣೆಯಾದ ತನಿಖೆ ನಡೆಸಲು ಎಸ್‌ಐಟಿ ರಚನೆ ಮಾಡಿದ್ದೇವೆ. ತನಿಖಾ ತಂಡವು ಸುಮಾರು 36 ಕೋಟಿ ರೂ.ಗಳಷ್ಟು ಹಣವನ್ನು ವಶಕ್ಕೆ ಪಡೆದುಕೊಂಡಿದೆ. ಬ್ಯಾಂಕ್ ಅಧಿಕಾರಿ ಒಂದೇ ದಿನದಲ್ಲಿ ಕೋಟ್ಯಂತರ ರೂಪಾಯಿ ಸಾಲ ಮಂಜೂರು ಮಾಡಿದ್ದಾನೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲು ಆಗುತ್ತದೆಯೇ? ನಾವು ಪ್ರತಿಪಕ್ಷಗಳಿಗೆ ಈ ವಿಚಾರವಾಗಿ ಉತ್ತರ ಕೊಡಬೇಕಾಗಿದೆ” ಎಂದು ಖಾರವಾಗಿ ತಿಳಿಸಿದರು.

Continue Reading

ಪ್ರಮುಖ ಸುದ್ದಿ

Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

Karnataka Job Reservation: ಕನ್ನಡಿಗರಿಗೆ ಮೀಸಲಾತಿ ಕಾಯ್ದೆಗೆ ಫೋನ್‌ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಫೋನ್ ಪೇ ಕಂಪನಿಗೆ ಬಿಸಿ ತಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರುವಾಗಿದೆ.

VISTARANEWS.COM


on

Koo

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆ (Karnataka Job Reservation) ಜಾರಿಗೆ ಆಗ್ರಹಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಕಾಯ್ದೆ ಜಾರಿ ಮಾಡುವುದಾಗಿ ಹೇಳಿದ ಬೆನ್ನಲ್ಲೇ ನಿರ್ಧಾರ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಮತ್ತೊಂದೆಡೆ ಕನ್ನಡಿಗರಿಗೆ ಮೀಸಲಾತಿ ಕಾಯ್ದೆಗೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ʼಫೋನ್ ಪೇʼ ಬಾಯ್ಕಾಟ್ ಅಭಿಯಾನ (‘PhonePe’ boycott campaign) ಶುರುವಾಗಿದೆ.

ಖಾಸಗಿ ಕಂಪನಿಗಳ ಒತ್ತಡಕ್ಕೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮಣಿಯಬಾರದು. ಶೀಘ್ರವೇ ಮಸೂದೆ ಜಾರಿಗೊಳಿಸಬೇಕೆಂದು ಕನ್ನಡಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆದಿದೆ. ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈಗೆ ಕನ್ನಡದ ನೆಲ, ಜಲ ಬೇಕು. ಆದರೆ, ಕನ್ನಡಿಗರಿಗೆ ನೌಕರಿ ಕೊಡಿ ಎಂದರೆ ಇವರಿಗೆ ತೊಂದರೆ. ನಾವು ಮುಂದಿನ ದಿನಗಳಲ್ಲಿ ಅವರ ಕಂಪನಿಗಳಿಗೆ ಮುತ್ತಿಗೆ ಹಾಕುತ್ತೇವೆ. ಸಿಎಂ ಮಸೂದೆ ಜಾರಿಗೆ ತರದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಕರವೇ ಪ್ರವೀಣ್ ಶೆಟ್ಟಿ ಹೇಳಿದರು.

ಈ ವೇಳೆ ಕಿರಣ್ ಮಜುಂದಾರ್ ಶಾ, ಮೋಹನ್‌ ದಾಸ್‌ ಪೈ ಭಾವಚಿತ್ರ ಹಿಡಿದು ಕಾರ್ಯಕರ್ತರು ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಫೋನ್ ಪೇ ಬಾಯ್ಕಾಟ್ ಮಾಡುವಂತೆ ಅಭಿಯಾನ ಆರಂಭ

ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಕನ್ನಡಿಗರ ವಿಷಯದಲ್ಲಿ ಫೋನ್ ಪೇ ಸಿಇಒ ಸಮೀರ್ ನಿಗಮ್ ಉದ್ಧಟತನ ತೋರಿದ್ದಾರೆ. ಹೀಗಾಗಿ ಫೋನ್‌ ಪೇ ಆ್ಯಪ್ ಅನ್ನು ಯಾರೂ ಬಳಸಬೇಡಿ. 1 ರೇಟಿಂಗ್ ನೀಡಿದ ಬಳಿಕ ಆ್ಯಪ್ ಡಿಲಿಟ್ ಮಾಡುವಂತೆ ಅಭಿಯಾನ ಶುರು ಮಾಡಲಾಗಿದೆ.

ಇನ್ನು ಕೆಲ ನೆಟ್ಟಿಗರು, ಯಾರಾದರೂ ನನ್ನ ಹೆಸರಲ್ಲಿ ಫೋನ್ ಪೇ ಮಾಡಿ ಎಂದರೆ ಯಾರು ಮಾಡಬೇಡಿ. ಯಾಕೆಂದರೆ ನನ್ನ ಹತ್ತಿರ ಫೋನ್ ಪೇ ಇಲ್ಲ. ಕನ್ನಡಿಗರಿಗೆ ಕೆಲಸದಲ್ಲಿ ಮೀಸಲಾತಿ ಕೊಡುವುದಕ್ಕೆ ಎದುರು ಮಾಡಿರುವ ಫೋನ್‌ಪೇ ಸಿಇಒಗೆ ಬುದ್ಧಿ ಕಲಿಸಲು ಫೋನ್‌ಪೇ ಅನ್‌ಇನ್ಸ್ಟಾಲ್ ಮಾಡಿ. ಕನ್ನಡಿಗರ ಬಲ ತೋರಿಸಿ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

25,000 ಜನರಿಗೆ ಉದ್ಯೋಗ ಕೊಟ್ಟಿದ್ದೇನೆ, ನನ್ನ ಮಕ್ಕಳು ರಾಜ್ಯದಲ್ಲಿ ಕೆಲಸ ಮಾಡಬಾರದಾ?: ಫೋನ್‌ಪೇ ಸಿಇಒ

Sameer Nigam

ಬೆಂಗಳೂರು: ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ. 50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಸದ್ಯ ಈ ಬಗ್ಗೆ ಪರ-ವಿರೋಧ ಅಬಿಪ್ರಾಯ ವ್ಯಕ್ತವಾಗುತ್ತಿದೆ. ಈ ಮಧ್ಯೆ ಫೋನ್‌ಪೇ (PhonePe) ಸಿಇಒ ಮತ್ತು ಸಹ ಸಂಸ್ಥಾಪಕ ಸಮೀರ್ ನಿಗಮ್ (Sameer Nigam) ಅವರು ಕರ್ನಾಟಕ ಸರ್ಕಾರದ ಖಾಸಗಿ ಉದ್ಯೋಗ ಕೋಟಾ ಮಸೂದೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Karnataka Jobs Reservation: ಉರಿವ ಮನೆಯಿಂದ ಗಳ ಹಿರಿದ ಆಂಧ್ರಪ್ರದೇಶ; ʼನಮ್ಮಲ್ಲಿಗೇ ಬನ್ನಿʼ ಎಂದು ಖಾಸಗಿ ಉದ್ಯಮಗಳಿಗೆ ಭಿಕ್ಷಾಪಾತ್ರೆ ಒಡ್ಡಿದ ಸಚಿವ

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ನನಗೆ 46 ವರ್ಷ ವಯಸ್ಸು. ನಾನು ಯಾವುದೇ ರಾಜ್ಯದಲ್ಲಿ 15 ವರ್ಷಕ್ಕೂ ಹೆಚ್ಚು ಕಾಲ ವಾಸಿಸಿಲ್ಲ. ನನ್ನ ತಂದೆ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ದೇಶಾದ್ಯಂತ ಕಾರ್ಯ ನಿರ್ವಹಿಸಿದ್ದಾರೆ. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ನಾನು ಕಂಪನಿಗಳನ್ನು ಸ್ಥಾಪಿಸಿ ಭಾರತದಾದ್ಯಂತ 25,000+ ಉದ್ಯೋಗಗಳನ್ನು ಸೃಷ್ಟಿಸಿದ್ದೇನೆ. ಹಾಗಾದರೆ ನನ್ನ ಮಕ್ಕಳು ತಮ್ಮ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ?ʼʼ ಎಂದು ಪ್ರಶ್ನಿಸಿದ್ದಾರೆ. ಸರ್ಕಾರ ಈ ಮಸೂದೆಯನ್ನು ತಡೆಹಿಡಿಯುವ ಮೊದಲ ಅವರು ಈ ಅಭಿಪ್ರಾಯ ಹಂಚಿಕೊಂಡಿದ್ದರು.

Continue Reading

ಉತ್ತರ ಕನ್ನಡ

Uttara Kannada Landslide: 6 ಜನರ ಶವ ಪತ್ತೆ, ಇನ್ನೂ ನಾಲ್ವರಿಗಾಗಿ ಶೋಧ; ಭಾರಿ ಮಳೆ ನಡುವೆ ಮಣ್ಣು ತೆರವು

Uttara Kannada Landslide: ನಿನ್ನೆ ಸಂಜೆ ವೇಳೆಗೆ ಅಂಕೋಲಾ ತಾಲೂಕಿನ ಬೆಳಂಬಾರ ಕಡಲತೀರದಲ್ಲಿ ಛಿದ್ರಗೊಂಡಿದ್ದ ದೇಹವೊಂದು ಪತ್ತೆಯಾಗಿದ್ದು, ಅದು ಇಲ್ಲಿಂದ ಕೊಚ್ಚಿಕೊಂಡು ಹೋದ ವ್ಯಕ್ತಿಯ ಶವವಿರಬಹುದು ಎಂದು ಶಂಕಿಸಲಾಗಿದೆ. ಇನ್ನೂ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ.

VISTARANEWS.COM


on

Uttara kannada landslide 3
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Uttara Kannada Landslide) ಅಂಕೋಲಾ- ಶಿರೂರು ಗುಡ್ಡಕುಸಿತ (Ankola Shiruru landslide) ಪ್ರಕರಣದಲ್ಲಿ ಹೆದ್ದಾರಿಯ ಮೇಲೆ ಬಿದ್ದಿರುವ ಮಣ್ಣು ತೆಗೆಯುವ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ದುರಂತದಲ್ಲಿ ನಾಪತ್ತೆಯಾದ 10 ಜನರಲ್ಲಿ ನಿನ್ನೆಯವರೆಗೆ 6 ಮಂದಿಯ ಶವ ಪತ್ತೆಯಾಗಿದೆ. ಇನ್ನೂ ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಈ ನಡುವೆ ನಿನ್ನೆ ಸಂಜೆ ವೇಳೆಗೆ ಅಂಕೋಲಾ ತಾಲೂಕಿನ ಬೆಳಂಬಾರ ಕಡಲತೀರದಲ್ಲಿ ಛಿದ್ರಗೊಂಡಿದ್ದ ದೇಹವೊಂದು ಪತ್ತೆಯಾಗಿದ್ದು, ಅದು ಇಲ್ಲಿಂದ ಕೊಚ್ಚಿಕೊಂಡು ಹೋದ ವ್ಯಕ್ತಿಯ ಶವವಿರಬಹುದು ಎಂದು ಶಂಕಿಸಲಾಗಿದೆ. ಇನ್ನೂ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಜಿಲ್ಲಾಡಳಿತದ ಮಾಹಿತಿಯಂತೆ ಇಲ್ಲಿ 10 ಮಂದಿ ಕಣ್ಮರೆಯಾಗಿದ್ದಾರೆ; ಇವರಲ್ಲಿ 6 ಮಂದಿಯ ಶವಗಳು ಸಿಕ್ಕಿವೆ ಹಾಗೂ ಇನ್ನೂ ನಾಲ್ವರಿಗಾಗಿ ಶೋಧ ನಡೆಯುತ್ತಿದೆ.

ಮತ್ತೆ ಗುಡ್ಡ ಕುಸಿತದ ಆತಂಕ

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಣ್ಣು ತೆರವು ಕಾರ್ಯಕ್ಕೆ ಅಡ್ಡಿಯಾಗಿದೆ. ಧಾರಾಕಾರ ಮಳೆಯ ನಡುವೆಯೂ ಮಣ್ಣು ತೆರವು ಭರದಿಂದ ಸಾಗಿದ್ದು, ಐಆರ್‌ಬಿ ಸಿಬ್ಬಂದಿ ತೆರವು ಮಾಡುತ್ತಿದ್ದಾರೆ. ಎನ್‌ಡಿಆರ್‌ಎಫ್‌, ಪೊಲೀಸ್ ತಂಡಗಳು ಶೋಧ ಕಾರ್ಯ ಮುನ್ನಡೆಸಿವೆ. ಮಳೆಯಿಂದಾಗಿ ಗುಡ್ಡದಿಂದ ಝರಿಯಂತೆ ನೀರು ಹರಿದುಬರುತ್ತಿದ್ದು, ಮತ್ತೆ ಗುಡ್ಡ ಕುಸಿತ ಭೀತಿ ತಲೆದೋರಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಾಚರಣೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

ವಿಸ್ತಾರ ನ್ಯೂಸ್‌ಗೆ ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಪ್ರತಿಕ್ರಿಯೆ ನೀಡಿದ್ದು, ಇನ್ನೂ 40 ಮೀಟರ್ ಕೆಲಸ ಬಾಕಿ ಇದೆ, ಇಂದು ಪೂರ್ಣಗೊಳ್ಳಬಹುದು ಎಂದಿದ್ದಾರೆ. ಆದರೆ ಇಲ್ಲಿನ ಇನ್ನೊಂದು ಬದಿ ಕುಸಿಯುವ ಆತಂಕ ಎದುರಾಗಿದೆ. ನಿನ್ನೆ ಅಲ್ಪ ಪ್ರಮಾಣದಲ್ಲಿದ್ದ ಬಿರುಕು ಇಂದು ಹೆಚ್ಚಾಗಿದೆ. ಅದೂ ಕುಸಿದರೆ ಮತ್ತೆ ಕಾರ್ಯಾಚರಣೆಗೆ ಹಿನ್ನಡೆಯಾಗಬಹುದು ಎಂದಿದ್ದಾರೆ.

ಗಂಗಾವಳಿ ನದಿಯಲ್ಲಿ ಮಣ್ಣಿನ ದಿಬ್ಬಗಳು ನಿರ್ಮಾಣವಾಗಿವೆ. ಇದರಿಂದ ನದಿಯ ಹರಿವು ರಸ್ತೆಗೆ ಕೊರೆತ ಉಂಟುಮಾಡುವ ಸಾಧ್ಯತೆಯಿದೆ. ಈ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಗುಡ್ಡ ಕುಸಿತದಿಂದ ಉಳುವರೆ ಗ್ರಾಮದ ಮನೆಗಳಿಗೆ ಹಾನಿಯಾದ ವಿಚಾರದಲ್ಲಿ, ಆಸ್ಪತ್ರೆಗೆ ದಾಖಲಾಗಿದ್ದ 15 ಮಂದಿಗೆ ಬಾಡಿಗೆ ಮನೆ ಮಾಡಿ ಇರಿಸಲು ಚಿಂತನೆ ನಡೆಸಲಾಗಿದೆ. ಗುಡ್ಡ ಕುಸಿತದಿಂದ ಮನೆ ಕಳೆದುಕೊಂಡಿರುವ ಉಳುವರೆ ಗ್ರಾಮದ ನಿವಾಸಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕಾಳಜಿ ಕೇಂದ್ರದ ಬದಲು ಬಾಡಿಗೆ ಮನೆ ವ್ಯವಸ್ಥೆ ಮಾಡಲಾಗುತ್ತಿದೆ. ಮನೆ ನಿರ್ಮಾಣವಾಗುವವರೆಗೆ ಬಾಡಿಗೆ ಮನೆ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ.

ಗ್ಯಾಸ್‌ ಟ್ಯಾಂಕರ್‌ನ ಅನಿಲ

ಮಣ್ಣು ಕುಸಿತದ ವೇಳೆ ನದಿಯಲ್ಲಿ ತೇಲಿಹೋಗಿದ್ದ ಗ್ಯಾಸ್ ಟ್ಯಾಂಕರ್‌ನಿಂದ ತಜ್ಞರ ತಂಡ ಅನಿಲ ಟ್ಯಾಂಕರ್ ಖಾಲಿ ಮಾಡುವ ಕಾರ್ಯ ಮಾಡುತ್ತಿದೆ. ಉಳಿದ ಅನಿಲ ಇಂದು ಖಾಲಿ ಮಾಡುತ್ತೇವೆ. ಭಾರೀ ಮಳೆ ಹಾಗೂ ಗಾಳಿ‌ ಇರುವುದರಿಂದ ಅನಿಲ ಖಾಲಿ ಮಾಡಲು ಯಾವುದೇ ತೊಂದರೆ ಇಲ್ಲ ಎಂದು ಸತೀಶ್‌ ಸೈಲ್‌ ತಿಳಿಸಿದ್ದಾರೆ.

ನದಿಯಲ್ಲಿ ತೇಲಿಹೋಗಿದ್ದ ಟ್ಯಾಂಕರ್‌ ಅನ್ನು ಸದ್ಯ ಸಗಡಗೇರಿ‌ ಬಳಿ ನೌಕಾನೆಲೆ, NDRF ತಂಡಗಳು ತಡೆದು ನಿಲ್ಲಿಸಿದ್ದವು. ನಿನ್ನೆ ಶೇ.60ರಷ್ಟು ಗ್ಯಾಸ್ ಅನ್ನು ಗಂಗಾವಳಿ ನದಿಗೆ ಬಿಟ್ಟಿದ್ದ ಹೆಚ್‌ಪಿಎಲ್ ಕಂಪೆನಿ ತಜ್ಞರು, ಇಂದು ಮತ್ತೆ ಶೇ.40ರಷ್ಟು ಗ್ಯಾಸ್ ನೀರಿಗೆ ಬಿಡಲಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕದಳ, SDRF, NDRF, ಪೊಲೀಸರು, ವೈದ್ಯಾಧಿಕಾರಿಗಳ ತಂಡ ಮೊಕ್ಕಾಂ ಹೂಡಿದೆ. ಎರಡು ಆ್ಯಂಬುಲೆನ್ಸ್ ಸ್ಥಳದಲ್ಲಿ ನಿಯೋಜನೆಯಾಗಿದೆ. ಗ್ರಾಮದ 34 ಮನೆಗಳ ಜನರನ್ನು ಜಿಲ್ಲಾಡಳಿತ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಿದೆ. ಟ್ಯಾಂಕರ್ ಒಟ್ಟು 18 ಕ್ವಿಂಟಾಲ್ ಗ್ಯಾಸ್ ಹೊಂದಿತ್ತು.

ಇದನ್ನೂ ಓದಿ: Uttara Kannada Landslide: ಭೂಕುಸಿತದ ಜಾಗದ ಬಳಿಯೇ ʼಸುನಾಮಿʼ ಎಫೆಕ್ಟ್‌; ನೀರಿನ ರಭಸಕ್ಕೆ ಕೊಚ್ಚಿಹೋದ ಮಹಿಳೆ

Continue Reading

ಪ್ರಮುಖ ಸುದ್ದಿ

Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

Karnataka Assembly Live: “ಸದ್ಯ ಪೈಲಟ್‌ ಪ್ರಾಜೆಕ್ಟ್‌ ಆಗಿ ಇದನ್ನು ಅಳವಡಿಸಿದ್ದೇವೆ. ಪರಿಣಾಮ ನೋಡಿಕೊಂಡು ನಿಮ್ಮ ಅಭಿಪ್ರಾಯ ತಿಳಿಸಿ. ಸಕಾರಾತ್ಮಕ ಅಭಿಪ್ರಾಯ ಬಂದರೆ ಮುಂದಿನ ಅಧಿವೇಶನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಳವಡಿಸುತ್ತೇವೆ” ಎಂದು ಖಾದರ್‌ ತಿಳಿಸಿದರು. ಸ್ಪೀಕರ್‌ ಕ್ರಮಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ʼಇನ್ನೂ ಎರಡು ವರ್ಷದಲ್ಲಿ ಏನೇನು ಮಾಡಿಸ್ತೀರೋ ನೀವುʼ ಎಂಬ ಉದ್ಗಾರವೂ ಶಾಸಕರ ಕಡೆಯಿಂದ ಕೇಳಿಬಂತು.

VISTARANEWS.COM


on

UT Khader karnataka assembly live
Koo

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ (Vidhan sabha Session) ಶಾಸಕರ ಹಾಜರಾತಿ ಕೊರತೆ ತುಂಬುವ ವಿಶಿಷ್ಟ ಪ್ರಯತ್ನವೊಂದನ್ನು ಸ್ಪೀಕರ್‌ ಯ.ಟಿ ಖಾದರ್‌ (Speaker UT Khader) ಕೈಗೊಂಡಿದ್ದಾರೆ. ಮಧ್ಯಾಹ್ನ ಭೋಜನದ ಬಳಿಕ ಶಾಸಕರು ವಿಶ್ರಾಂತಿ ಪಡೆಯಲು ಸುಖಾಸನಗಳನ್ನು (ರಿಕ್ಲೈನರ್ಸ್)‌ ಹಾಕಿಸಿದ್ದು, ಇಲ್ಲಿ ಶಾಸಕರು ವಿಶ್ರಾಂತಿ ಪಡೆಯಬಹುದಾಗಿದೆ. ಈ ವಿಚಾರವನ್ನು ಸ್ಪೀಕರ್‌ ಇಂದು ಕಲಾಪದಲ್ಲಿ (karnataka assembly live) ತಿಳಿಸಿದರು.

ಇಂದು ವಿಧಾನಸಭೆ ಕಲಾಪ ಆರಂಭವಾಗುತ್ತಲೇ ಸ್ಪೀಕರ್‌ ಈ ವಿಚಾರವನ್ನು ಪ್ರಸ್ತಾವಿಸಿದರು. ಹಾಜರಾತಿಯ ಕೊರತೆಯ ಬಗ್ಗೆ ಉಲ್ಲೇಖಿಸಿದರು. ಹಾಜರಾತಿ ಹೆಚ್ಚಿಸಲು ತಾವು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದರು. “ಶಾಸಕರು ಬೆಳಗ್ಗೆ ಬೇಗ ಬರಲಿ ಅನ್ನುವ ಉದ್ದೇಶದಿಂದ ಬೆಳಗ್ಗೆ ತಿಂಡಿಯ ವ್ಯವಸ್ಥೆ ಮಾಡಿಸಿದೆ. ಆಮೇಲೆ ಮಧ್ಯಾಹ್ನ ಊಟಕ್ಕಾಗಿ ದೂರ ಹೋಗಿ ಬರುವುದಕ್ಕೆ ತಡವಾಗುತ್ತದೆ ಎಂಬ ಕಾರಣಕ್ಕಾಗಿ ಉತ್ತಮವಾದ ಊಟದ ವ್ಯವಸ್ಥೆ ಮಾಡಿಸಲಾಗಿದೆ. ಕೆಲವರು ಊಟ ಚೆನ್ನಾಗಿತ್ತು, ಶಾಸಕರ ಭವನಕ್ಕೆ ಹೋಗಿ ನಿದ್ದೆ ಮಾಡಿ ಬರುತ್ತೇನೆ ಎಂದವನು ಬಳಿಕ ಬರುವುದೇ ಇಲ್ಲ. ಇದನ್ನು ತಡೆಯಲು ಇಲ್ಲೇ ಸುಖಾಸನಗಳನ್ನು (ರಿಕ್ಲೈನರ್ಸ್)‌ ಹಾಕಿಸಿದ್ದೇನೆ. ನಿದ್ರೆ ಬಂದರೆ ಇಲ್ಲೇ ಮಾಡಿ. ದೂರ ಹೋಗಬೇಡಿ. ನಿಮ್ಮ ಅಗತ್ಯ ಬಿದ್ದರೆ ಕೂಡಲೇ ಕರೆಸಿಕೊಳ್ಳಲು ಇದರಿಂದ ಸಾಧ್ಯವಾಗುತ್ತದೆ” ಎಂದು ಸ್ಪೀಕರ್‌ ವಿವರಿಸಿದರು.

“ಸದ್ಯ ಪೈಲಟ್‌ ಪ್ರಾಜೆಕ್ಟ್‌ ಆಗಿ ಇದನ್ನು ಅಳವಡಿಸಿದ್ದೇವೆ. ಪರಿಣಾಮ ನೋಡಿಕೊಂಡು ನಿಮ್ಮ ಅಭಿಪ್ರಾಯ ತಿಳಿಸಿ. ಸಕಾರಾತ್ಮಕ ಅಭಿಪ್ರಾಯ ಬಂದರೆ ಮುಂದಿನ ಅಧಿವೇಶನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಳವಡಿಸುತ್ತೇವೆ” ಎಂದು ಖಾದರ್‌ ತಿಳಿಸಿದರು. ಸ್ಪೀಕರ್‌ ಕ್ರಮಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ʼಇನ್ನೂ ಎರಡು ವರ್ಷದಲ್ಲಿ ಏನೇನು ಮಾಡಿಸ್ತೀರೋ ನೀವುʼ ಎಂಬ ಉದ್ಗಾರವೂ ಶಾಸಕರ ಕಡೆಯಿಂದ ಕೇಳಿಬಂತು.

ʼಲಾಂಜ್‌ನಲ್ಲಿ ಶಿಸ್ತು ಕಾಪಾಡಿ. ಪಿಎಗಳನ್ನು ಮತ್ತಿತರರನ್ನು ಕರೆದುಕೊಂಡು ಸ್ಪೀಕರ್‌ ಕೊಠಡಿಗೆ ನುಗ್ಗಬೇಡಿ. ಮಾರ್ಷಲ್‌ಗಳ ಜೊತೆಗೆ ಗುದ್ದಾಡಬೇಡಿ. ಇದರಿಂದ ನಿಮ್ಮ ಘನತೆ ಹೆಚ್ಚುವುದಿಲ್ಲ. ಅವರು ನಮ್ಮ ಆದೇಶ ಪಾಲಿಸುತ್ತಾರೆ ಅಷ್ಟೇʼʼ ಎಂದು ಸ್ಪೀಕರ್‌ ಶಾಸಕರಿಗೆ ಕಿವಿಮಾತು ಹೇಳಿದರು.

ಕಲಾಪ ಮುಂದೂಡಿಕೆ

ಇಂದು ಕಲಾಪ ಆರಂಭವಾಗುತ್ತಿದ್ದಂತೆ ಗದ್ದಲ ಶುರುವಾಯಿತು. ವಾಲ್ಮೀಕಿ ಹಗರಣದಲ್ಲಿ (Valmiki corporation Scam) ದುಡ್ಡು ಹೊಡೆದ ಸರ್ಕಾರಕ್ಕೆ ಧಿಕ್ಕಾರ ಎಂದು ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಕೂಗಿದರು. ಸದನದಲ್ಲಿ ಮತ್ತೆ ಹೋರಾಟ ಮಾಡಲು ಮುಂದಾದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ನಿಂತರು. ಇದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಸದಸ್ಯರು ಕೂಡ ಎದ್ದುನಿಂತು ಕೂಗಾಡಿದರು. ಉಭಯ ಪಕ್ಷಗಳ ಸದಸ್ಯರನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಗದೆ ಸದನವನ್ನು ಸ್ಪೀಕರ್‌ ಹತ್ತು ನಿಮಿಷಗಳ ಕಾಲ ಮುಂದೂಡಿದರು.

ಇದನ್ನೂ ಓದಿ: Karnataka Assembly Live: 4ನೇ ದಿನದ ವಿಧಾನಮಂಡಲ ಕಲಾಪದಲ್ಲೂ ವಾಲ್ಮೀಕಿ ಹಗರಣದ ಕರಿನೆರಳು ನಿರೀಕ್ಷೆ; ಅಸೆಂಬ್ಲಿ ಲೈವ್‌ ಇಲ್ಲಿದೆ ನೋಡಿ

Continue Reading
Advertisement
Microsoft Global Outage
ದೇಶ5 mins ago

Microsoft Global Outage: ವಿಶ್ವಾದ್ಯಂತ ನೆಲಕಚ್ಚಿದ ಮೈಕ್ರೋಸಾಫ್ಟ್‌; ವಿಂಡೋಸ್‌ನಲ್ಲಿ ತಾಂತ್ರಿಕ ದೋಷ

Electric Shock
ದಕ್ಷಿಣ ಕನ್ನಡ10 mins ago

Electric shock : ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ, ವೃದ್ಧ ಸೇರಿ ಶ್ವಾನಗಳು ಸಾವು

DK Shivakumar
ಕರ್ನಾಟಕ13 mins ago

DK Shivakumar: ಬಿಎಸ್‌ವೈ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿಕೆಶಿ ಆರೋಪ

Virat Kohli
ಕ್ರೀಡೆ24 mins ago

Virat Kohli: ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿ ಕೋಚ್​ ಗಂಭೀರ್​ ವಿಚಾರದಲ್ಲಿ ಕೊಹ್ಲಿ ಕೊಟ್ಟ ಆಶ್ವಾಸನೆ ಏನು?

karnataka Rain
ಮಳೆ31 mins ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

ಪ್ರಮುಖ ಸುದ್ದಿ45 mins ago

Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

Kanwar Yatra
ದೇಶ50 mins ago

Kanwar Yatra: ಕನ್ವರ್‌ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ: ಯೋಗಿ ಆದಿತ್ಯನಾಥ್

Uttara kannada landslide 3
ಉತ್ತರ ಕನ್ನಡ1 hour ago

Uttara Kannada Landslide: 6 ಜನರ ಶವ ಪತ್ತೆ, ಇನ್ನೂ ನಾಲ್ವರಿಗಾಗಿ ಶೋಧ; ಭಾರಿ ಮಳೆ ನಡುವೆ ಮಣ್ಣು ತೆರವು

England vs West Indies
ಕ್ರೀಡೆ1 hour ago

England vs West Indies: ವೇಗದ ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಇಂಗ್ಲೆಂಡ್

Karnataka Rain
ಮಳೆ1 hour ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ31 mins ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 hour ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ21 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ23 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌