Kanwar Yatra: ಕನ್ವರ್‌ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ: ಯೋಗಿ ಆದಿತ್ಯನಾಥ್ - Vistara News

ದೇಶ

Kanwar Yatra: ಕನ್ವರ್‌ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ: ಯೋಗಿ ಆದಿತ್ಯನಾಥ್

Kanwar Yatra: ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿನ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಿಗಳು ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.

VISTARANEWS.COM


on

Kanwar Yatra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಕನ್ವರ್ ಯಾತ್ರೆ (Kanwar Yatra) ಸಾಗುವ ಮಾರ್ಗದಲ್ಲಿನ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಶ್ರಾವಣ ಮಾಸದಲ್ಲಿ ಈ ಯಾತ್ರೆ ನಡೆಯುತ್ತದೆ. ಈ ಯಾತ್ರೆಯ ಮೂಲಕ ಶಿವಭಕ್ತರು ಹರಿದ್ವಾರದಿಂದ ಪುಣ್ಯ ತೀರ್ಥ ತಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಮಾರ್ಗವಾಗಿ ತೆರಳುತ್ತಾರೆ. ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22ರಂದು ಪ್ರಾರಂಭವಾಗಿ ಆಗಸ್ಟ್ 2ರವರೆಗೆ ನಡೆಯಲಿದೆ.

ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಿಗಳು ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಜಾಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಗುರುವಾರ ತಿಳಿಸಿದ್ದರು. ಅದಾಗ್ಯೂ ಪ್ರತಿಪಕ್ಷಗಳು ಈ ನಡೆಯನ್ನು ಖಂಡಿಸಿದ್ದವು. ಇದೀಗ ಸ್ವತಃ ಮುಖ್ಯಮಂತ್ರಿಯೇ ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ʼʼಧಾರ್ಮಿಕ ಯಾತ್ರಾರ್ಥಿಗಳ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದ ಹಿನ್ನೆಲೆಯಲ್ಲಿ ಮುಜಾಫರ್‌ನಗರ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದನ್ನು ಸಿಎಂ ಯೋಗಿ ಆದಿತ್ಯನಾಥ್‌ ಗಮನಿಸಿದರು. ಹೀಗಾಗಿ ಅವರು ರೆಸ್ಟೋರೆಂಟ್, ಹೋಟೆಲ್‌, ರಸ್ತೆಬದಿಯ ಢಾಬಾ ಅಥವಾ ಆಹಾರದ ಗಾಡಿ ಸೇರಿದಂತೆ ಪ್ರತಿಯೊಂದು ಕಡೆ ಮಾಲೀಕರ ಹೆಸರು ಮತ್ತು ವಿವರಗಳನ್ನು ಪ್ರದರ್ಶಿಸುವಂತೆ ಸೂಚಿಸಿದ್ದಾರೆʼʼ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಉತ್ತರ ಪ್ರದೇಶದ ಸಚಿವ ಕಪಿಲ್ ದೇವ್ ಅಗರ್ವಾಲ್ ಅವರು ಮಾತನಾಡಿ, ಮುಸ್ಲಿಂ ಮಾರಾಟಗಾರರು ಹಿಂದುಗಳಂತೆ ನಟಿಸಿ ಯಾತ್ರಾರ್ಥಿಗಳಿಗೆ ಮಾಂಸಾಹಾರವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. “ಅವರು ವೈಷ್ಣೋ ಡಾಬಾ ಭಂಡಾರ್, ಶಕುಂಭರಿ ದೇವಿ ಹೋಟೆಲ್‌ ಮತ್ತು ಶುದ್ಧ ಸಸ್ಯಾಹಾರಿ ಎಂದು ಬೋರ್ಡ್‌ ಸ್ಥಾಪಿಸಿ ಮಾಂಸಾಹಾರ ಮಾರಾಟ ಮಾಡುತ್ತಾರೆ” ಎಂದು ಅವರು ತಿಳಿಸಿದ್ದರು.

ಮುಜಾಫರ್‌ನಗರ ಪೊಲೀಸರ ಆದೇಶಕ್ಕೆ ಕಿಡಿ ಕಾರಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಹೊಟೇಲ್‌ಗಳಲ್ಲಿ ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಪ್ರದರ್ಶಿಸಬೇಕೆಂಬ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂತಹ ಆದೇಶಗಳನ್ನು ತಹೊರಡಿಲಾಗುತ್ತಿದೆʼʼ ಎಂದು ಅವರು ಕಿಡಿಕಾರಿದ್ದಾರೆ.

“ಉತ್ತರ ಪ್ರದೇಶ ಪೊಲೀಸರ ಈ ಆದೇಶವು ವರ್ಣಭೇದ ಹಾಗೂ ಹಿಟ್ಲರ್‌ ನೀತಿಗೆ ಸಮವಾಗಿದೆ. ಕನ್ವರ್‌ ಯಾತ್ರಿಗಳು ಮುಸ್ಲಿಮರ ಬಳಿ ವ್ಯಾಪಾರ ಮಾಡಬಾರದು ಎನ್ನುವುದು ಇದರ ಉದ್ದೇಶ” ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅಭಿಪ್ರಾಯಪಟ್ಟಿದ್ದಾರೆ. ಒಟ್ಟಿನಲ್ಲಿ ಈ ಆದೇಶ ಇನ್ನೊಂದು ಸುತ್ತಿನ ಧರ್ಮ ದಂಗಲ್‌ಗೆ ಕಾರಣವಾಗುವ ಲಕ್ಷಣಗಳಿವೆ.

ಇದನ್ನೂ ಓದಿ: Doda Attack: ಯೋಧನ ಶಿರಚ್ಛೇದಕ್ಕೆ ಯತ್ನಿಸಿದ ವಿಡಿಯೊ ಬಿಡುಗಡೆ ಮಾಡಿದ ಭಯೋತ್ಪಾದಕರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Supreme Court: ಕ್ರಿಮಿನಲ್ ಮೊಕದ್ದಮೆಯಿಂದ ರಾಜ್ಯಪಾಲರಿಗೆ ವಿನಾಯಿತಿ; ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಸಮ್ಮತಿ

Supreme Court: ಮಹತ್ವದ ಬೆಳವಣಿಗೆಯೊಂದರಲ್ಲಿ ಕ್ರಿಮಿನಲ್ ಮೊಕದ್ದಮೆಯಿಂದ ರಾಜ್ಯಪಾಲರಿಗೆ ಸಂಪೂರ್ಣ ವಿನಾಯಿತಿ ನೀಡುವ ಸಾಂವಿಧಾನಿಕ ನಿಬಂಧನೆಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ. ಮಹಿಳೆ ತನ್ನ ವಿರುದ್ಧ ನೀಡಿದ ಲೈಂಗಿಕ ಕಿರುಕುಳ ದೂರಿಗೆ ಸಂಬಂಧಿಸಿದಂತೆ ರಾಜ್ಯಪಾಲ ಬೋಸ್ ಅವರು ಕೋರಿರುವ ವಿನಾಯಿತಿಯನ್ನು ಅರ್ಜಿಯು ಪ್ರಶ್ನಿಸಿದೆ.

VISTARANEWS.COM


on

Supreme Court
Koo

ನವದೆಹಲಿ: ಕ್ರಿಮಿನಲ್ ಮೊಕದ್ದಮೆಯಿಂದ ರಾಜ್ಯಪಾಲರಿಗೆ ಸಂಪೂರ್ಣ ವಿನಾಯಿತಿ ನೀಡುವ ಸಾಂವಿಧಾನಿಕ ನಿಬಂಧನೆಯನ್ನು (Blanket immunity) ಪರಿಶೀಲಿಸಲು ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ಒಪ್ಪಿಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ.ಆನಂದ ಬೋಸ್ (CV Ananda Bose) ವಿರುದ್ಧ ರಾಜಭವನದ ಮಾಜಿ ಮಹಿಳಾ ಉದ್ಯೋಗಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರದಲ್ಲಿ ಭಾರತದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರ ಸಹಾಯವನ್ನು ಕೋರಿತು.

ಮಹಿಳೆ ತನ್ನ ವಿರುದ್ಧ ನೀಡಿದ ಲೈಂಗಿಕ ಕಿರುಕುಳ ದೂರಿಗೆ ಸಂಬಂಧಿಸಿದಂತೆ ರಾಜ್ಯಪಾಲ ಬೋಸ್ ಅವರು ಕೋರಿರುವ ವಿನಾಯಿತಿಯನ್ನು ಅರ್ಜಿಯು ಪ್ರಶ್ನಿಸಿದೆ. ಮಹಿಳೆಯ ಪರವಾಗಿ ಹಾಜರಾದ ಹಿರಿಯ ವಕೀಲ ಶ್ಯಾಮ್ ದಿವಾನ್, “ತನಿಖೆ ನಡೆಸುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಆರೋಪಕ್ಕೆ ಸಂಬಂಧಿಸಿದಂತೆ ಈಗಲೇ ಪುರಾವೆಗಳನ್ನು ಸಂಗ್ರಹಿಸಬೇಕು. ರಾಜ್ಯಪಾಲರು ಅಧಿಕಾರದಿಂದ ಕೆಳಗಿಳಿಯುವವರೆಗೂ ವಿಚಾರಣೆ ಅನಿರ್ದಿಷ್ಟವಾಗಿ ಮುಂದೂಡಲು ಸಾಧ್ಯವಿಲ್ಲ. 361ನೇ ವಿಧಿಯ ಕಲಂ 2ರ ಅಡಿಯಲ್ಲಿ ರಾಜ್ಯಪಾಲರಿಗೆ ನೀಡಲಾದ ವಿನಾಯಿತಿಯಿಂದ ತನಿಖೆಯನ್ನು ತಪ್ಪಿಸಲು ಸಾಧ್ಯವಿಲ್ಲʼʼ ಎಂದು ವಾದಿಸಿದರು.

ಹೆಚ್ಚುವರಿಯಾಗಿ ಕ್ರಿಮಿನಲ್ ಮೊಕದ್ದಮೆಯಿಂದ ರಾಜ್ಯಪಾಲರಿಗೆ ನೀಡಬಹುದಾದ ವಿನಾಯಿತಿಗೆ ಸಂಬಂಧಿಸಿದಂತೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ರೂಪಿಸಲು ನಿರ್ದೇಶನಗಳನ್ನು ನೀಡುವಂತೆ ಅರ್ಜಿದಾರರು ನ್ಯಾಯಾಲಯವನ್ನು ಕೋರಿದರು.

“ಸಂವಿಧಾನದ 361ನೇ ವಿಧಿಯ ಕಲಂ (2)ರ ಅಡಿಯಲ್ಲಿ ರಾಜ್ಯಪಾಲರಿಗೆ ನೀಡಲಾಗುವ ರಕ್ಷಣೆಯ ವ್ಯಾಪ್ತಿಗೆ ಸಂಬಂಧಿಸಿದ ವಿಷಯವನ್ನು ಅರ್ಜಿಯು ಪ್ರಶ್ನಿಸುತ್ತದೆ” ಎಂದು ನ್ಯಾಯಪೀಠವು ರಾಜ್ಯ ಸರ್ಕಾರ ಮತ್ತು ಇತರರಿಗೆ ನೀಡಿದ ನೋಟಿಸ್‌ನಲ್ಲಿ ತಿಳಿಸಿದೆ.

ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ವಿನಾಯಿತಿ ನೀಡುವ 361ನೇ ವಿಧಿಯ ಪ್ರಕಾರ, ಅವರ ವಿರುದ್ಧ ಯಾವುದೇ ನ್ಯಾಯಾಲಯದಲ್ಲಿ, ಯಾವುದೇ ಕ್ರಿಮಿನಲ್ ವಿಚಾರಣೆಯನ್ನು ಪ್ರಾರಂಭಿಸಬಾರದು ಅಥವಾ ಮುಂದುವರಿಸಬಾರದು. ರಾಷ್ಟ್ರಪತಿ ಅಥವಾ ರಾಜ್ಯಪಾಲರ ಬಂಧನಕ್ಕೆ ಯಾವುದೇ ನ್ಯಾಯಾಲಯದಿಂದ ಹೊರಡಿಸುವಂತಿಲ್ಲ.

ರಕ್ಷಣೆ ಒದಗಿಸಿ

ಈ ಪ್ರಕರಣದ ಬಗ್ಗೆ ಪಶ್ಚಿಮ ಬಂಗಾಳ ಪೊಲೀಸರು ತನಿಖೆ ನಡೆಸಬೇಕು ಮತ್ತು ಮಹಿಳೆ ಮತ್ತು ಆಕೆಯ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಏಪ್ರಿಲ್ 24 ಮತ್ತು ಮೇ 2ರಂದು ರಾಜ್ಯಪಾಲರ ನಿವಾಸದಲ್ಲಿ ಆನಂದ ಬೋಸ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ರಾಜಭವನದ ಗುತ್ತಿಗೆ ಉದ್ಯೋಗಿಯಾಗಿದ್ದ ಮಹಿಳೆ ಕೋಲ್ಕತಾ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ: West Bengal Governor: ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ; TMC ಆಕ್ರೋಶ

ಆರೋಪಗಳನ್ನು ತಳ್ಳಿ ಹಾಕಿದ ರಾಜ್ಯಪಾಲ

ರಾಜ್ಯಪಾಲ ಸಿ.ವಿ.ಆನಂದ್‌ ಬೋಸ್‌ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳನ್ನು ಅಂದೇ ತಳ್ಳಿ ಹಾಕಿದ್ದರು. ಈ ಕುರಿತು ಪ್ರತಿಕ್ರಿಯಿಸಿದ್ದ ಅವರು, ʼʼಸತ್ಯ ಎಂದಿಗೂ ಗೆದ್ದೇ ಗೆಲ್ಲುತ್ತದೆ. ಇಂತಹ ಕಟ್ಟು ಕಥೆಗಳನ್ನು ನಿಜ ಎಂದು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ನನ್ನ ಗೌರವಕ್ಕೆ ಚ್ಯುತಿ ತಂದು ತೇಜೋವಧೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ. ಬಂಗಾಳದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ನನ್ನ ಹೋರಾಟ ನಿಲ್ಲಿಸಲು ಇದೊಂದು ಪಿತೂರಿ ಅಷ್ಟೇ. ಆದರೆ ನನ್ನ ಈ ಹೋರಾಟ ಎಂದಿಗೂ ನಿಲ್ಲುವುದಿಲ್ಲ. ನನ್ನ‌ ವಿರುದ್ಧ ಆರೋಪ ಮಾಡಿರುವ ಮಹಿಳೆ ಕಾಂಗ್ರೆಸ್‌ನ ಏಜೆಂಟ್‌ʼʼ ಎಂದು ಅವರು ತಿರುಗೇಟು ಕೊಟ್ಟಿದ್ದರು.

Continue Reading

ದೇಶ

School Transfer Certificate: ಶಾಲಾ ಪ್ರವೇಶಕ್ಕೆ ವರ್ಗಾವಣೆ ಪ್ರಮಾಣಪತ್ರದ ಅಗತ್ಯ ಇಲ್ಲ; ಹೈಕೋರ್ಟ್‌ ಮಹತ್ವದ ತೀರ್ಪು

School Transfer Certificate: ತಮಿಳುನಾಡಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಹಿಂದಿನ ಶಿಕ್ಷಣ ಸಂಸ್ಥೆಗಳಿಂದ ವರ್ಗಾವಣೆ ಪ್ರಮಾಣಪತ್ರಗಳನ್ನು ತಯಾರಿಸಲು ಒತ್ತಾಯಿಸದಂತೆ ಸೂಚನೆ ನೀಡಿ ರಾಜ್ಯಾದ್ಯಂತ ಶಾಲಾ ಆಡಳಿತ ಮಂಡಳಿಗಳಿಗೆ ಸುತ್ತೋಲೆ ಹೊರಡಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ (Madras High Court) ನಿರ್ದೇಶನ ನೀಡಿದೆ.

VISTARANEWS.COM


on

By

School Transfer Certificate
Koo

ಶಾಲಾ ಪ್ರವೇಶಕ್ಕೆ (School Admission) ಯಾವುದೇ ರೀತಿಯ (School Transfer Certificate) ವರ್ಗಾವಣೆ ಪ್ರಮಾಣ ಪತ್ರಗಳ (Transfer Certificates) ಅಗತ್ಯವಿಲ್ಲ. ಶಾಲಾ ವರ್ಗಾವಣೆ ಪ್ರಕ್ರಿಯೆಯನ್ನು ಸರಳಗೊಳಿಸುವಂತೆ ಮದ್ರಾಸ್ ಹೈಕೋರ್ಟ್ (Madras High Court) ತಮಿಳುನಾಡಿನ (Tamil Nadu Schools) ಎಲ್ಲ ಶಾಲೆಗಳಿಗೆ ನಿರ್ದೇಶನ ನೀಡಿದೆ. ಹೊಸ ವಿದ್ಯಾರ್ಥಿಗಳ ಸೇರ್ಪಡೆಗೆ ವರ್ಗಾವಣೆ ಪ್ರಮಾಣ ಪತ್ರ ತರಲು ಒತ್ತಾಯಿಸದಂತೆ ಸೂಚಿಸಿದೆ.

ತಮಿಳುನಾಡಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಹಿಂದಿನ ಶಿಕ್ಷಣ ಸಂಸ್ಥೆಗಳಿಂದ ವರ್ಗಾವಣೆ ಪ್ರಮಾಣಪತ್ರಗಳನ್ನು ತಯಾರಿಸಲು ಒತ್ತಾಯಿಸದಂತೆ ಸೂಚನೆ ನೀಡಿ ರಾಜ್ಯಾದ್ಯಂತ ಶಾಲಾ ಆಡಳಿತ ಮಂಡಳಿಗಳಿಗೆ ಸುತ್ತೋಲೆ ಹೊರಡಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿದೆ.

ಹೈಕೋರ್ಟ್ ಬಾರ್ ಮತ್ತು ಬೆಂಚ್ ವರದಿ ಮಾಡಿದಂತೆ, ವರ್ಗಾವಣೆ ಪ್ರಮಾಣ ಪತ್ರಗಳಲ್ಲಿ ಶಾಲಾ ಶುಲ್ಕವನ್ನು ಪಾವತಿಸದಿರುವ ಅಥವಾ ವಿಳಂಬವಾದ ಪಾವತಿಗೆ ಸಂಬಂಧಿಸಿದ ಅನಗತ್ಯ ನಮೂದುಗಳನ್ನು ಶಾಲೆಗಳು ಮಾಡುವುದಕ್ಕೆ ನ್ಯಾಯಾಲಯವು ನಿಷೇಧ ವಿಧಿಸಿದೆ. ನ್ಯಾಯಮೂರ್ತಿಗಳಾದ ಎಸ್‌.ಎಂ. ಸುಬ್ರಮಣ್ಯಂ ಮತ್ತು ಸಿ. ಕುಮಾರಪ್ಪನ್ ಅವರ ಪೀಠವು, ಶಾಲೆಗಳು ವಿದ್ಯಾರ್ಥಿಯ ಟಿಸಿಯನ್ನು ಶುಲ್ಕದ ಬಾಕಿ ವಸೂಲಿ ಮಾಡುವ ಸಾಧನವಾಗಿ ದುರ್ಬಳಕೆ ಮಾಡಬಾರದು ಎಂದು ಎಚ್ಚರಿಸಿದೆ.

ನ್ಯಾಯಾಲಯದ ನಿರ್ದೇಶನಗಳು ಎಲ್ಲಾ ಶುಲ್ಕ ಬಾಕಿಗಳನ್ನು ತೆರವುಗೊಳಿಸುವವರೆಗೆ ಶಾಲೆಗಳು ಟಿಸಿಗಳನ್ನು ಹಿಡಿದಿಟ್ಟುಕೊಳ್ಳುವುದನ್ನು ತಡೆಯುವ ಗುರಿಯನ್ನು ಹೊಂದಿವೆ. ಟಿಸಿಯಲ್ಲಿ ಬಾಕಿ ಇರುವ ಅಥವಾ ಶುಲ್ಕವನ್ನು ಪಾವತಿಸದಿರುವ ನಮೂದುಗಳನ್ನು ಮಾಡುವುದನ್ನು ಇದು ತಡೆಯುತ್ತದೆ. ಯಾಕೆಂದರೆ ಇದು ಶಿಕ್ಷಣ ಹಕ್ಕು (RTE) ಕಾಯಿದೆಯ ಉಲ್ಲಂಘನೆಯಾಗಿದೆ ಮತ್ತು ಮಾನಸಿಕ ಕಿರುಕುಳವನ್ನು ಉಂಟು ಮಾಡುತ್ತದೆ ಎಂದು ಆರ್ಟಿಇ ಕಾಯಿದೆಯ ಸೆಕ್ಷನ್ 17ರ ಅಡಿಯಲ್ಲಿ ವ್ಯಾಖ್ಯಾನಿಸಲಾಗಿದೆ.

ಇದನ್ನೂ ಓದಿ: Udhayanidhi Stalin: ತಮಿಳುನಾಡು ಉಪ ಮುಖ್ಯಮಂತ್ರಿಯಾಗಿ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್?

Continue Reading

ಕ್ರೈಂ

Khalistani Terrorist: ಖಲಿಸ್ತಾನಿ ಭಯೋತ್ಪಾದಕ ಲಾಂಡಾನ ಪ್ರಮುಖ ಸಹಾಯಕ ಬಲ್ಜೀತ್ ಸಿಂಗ್ ಬಂಧನ

ಮಾರಕಾಸ್ತ್ರಗಳ ಪೂರೈಕೆಗೆ ಸಂಬಂಧಿಸಿದ ಪ್ರಮುಖ ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಜಾಲವನ್ನು ಭೇದಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು, ಮಧ್ಯಪ್ರದೇಶದ ಬದ್ವಾನಿ ಜಿಲ್ಲೆಯಲ್ಲಿ ಬಲ್ಜೀತ್ ಸಿಂಗ್ ಅಲಿಯಾಸ್ ರಾಣಾ ಭಾಯ್ ಅಲಿಯಾಸ್ ಬಲ್ಲಿ ಎಂಬಾತನನ್ನು ಗುರುವಾರ ಪಂಜಾಬ್‌ನಲ್ಲಿ ಬಂಧಿಸಿದೆ. ಈ ಮೂಲಕ ಖಲಿಸ್ತಾನಿ ಉಗ್ರರ ವಿರುದ್ಧ ತನಿಖಾ ಸಂಸ್ಥೆಗಳು ಯಶ ಸಾಧಿಸಿದಂತಾಗಿದೆ.

VISTARANEWS.COM


on

By

Khalistani Terrorist
Koo

ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳಿಗೆ ಮಾರಾಕಾಸ್ತ್ರಗಳ ಪೂರೈಕೆಗೆ (supply of deadly weapons) ಸಂಬಂಧಿಸಿ ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಲಖ್ಬೀರ್ ಸಿಂಗ್ ಸಂಧು ಅಲಿಯಾಸ್ ಲಾಂಡಾನ ಪ್ರಮುಖ ಸಹಾಯಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency) ಶುಕ್ರವಾರ ಬಂಧಿಸಿದೆ.

ಮಾರಕಾಸ್ತ್ರಗಳ ಪೂರೈಕೆಗೆ ಸಂಬಂಧಿಸಿದ ಪ್ರಮುಖ ಭಯೋತ್ಪಾದನಾ ಜಾಲವನ್ನು ಭೇದಿಸಿದ ಎನ್‌ಐಎ, ಮಧ್ಯಪ್ರದೇಶದ ಬದ್ವಾನಿ ಜಿಲ್ಲೆಯ ಬಲ್ಜೀತ್ ಸಿಂಗ್ ಅಲಿಯಾಸ್ ರಾಣಾ ಭಾಯ್ ಅಲಿಯಾಸ್ ಬಲ್ಲಿ ಎಂಬಾತನನ್ನು ಗುರುವಾರ ಪಂಜಾಬ್‌ನಲ್ಲಿ ಬಂಧಿಸಿದೆ. ಬಲ್ಜೀತ್ ಸಿಂಗ್ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪಂಜಾಬ್‌ನಲ್ಲಿರುವ ಲಾಂಡಾನ ಏಜೆಂಟ್‌ಗಳಿಗೆ ಪ್ರಮುಖ ಶಸ್ತ್ರಾಸ್ತ್ರ ಪೂರೈಕೆದಾರ ಎಂದು ತಿಳಿದು ಬಂದಿದೆ.

Khalistani Terrorist


ಭಯೋತ್ಪಾದನಾ ವಿರೋಧಿ ಏಜೆನ್ಸಿ ಪ್ರಕಾರ, ಈ ಶಸ್ತ್ರಾಸ್ತ್ರಗಳನ್ನು ಉದ್ಯಮಿಗಳು ಮತ್ತು ಇತರರಿಂದ ಹಣ ಸುಲಿಗೆ ಸೇರಿದಂತೆ ದೊಡ್ಡ ಪ್ರಮಾಣದ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಬಳಸಲಾಗುತ್ತಿತ್ತು. ಗುರುಪ್ರೀತ್ ಸಿಂಗ್ ಮತ್ತು ಸತ್ನಾಮ್ ಸಿಂಗ್ ಸತ್ತಾ ಎಂಬುವರನ್ನು ಈ ಹಿಂದೆ ಬಂಧಿಸಲಾಗಿತ್ತು. ಅವರು ನೀಡಿದ ಸುಳಿವು ಆಧರಿಸಿ ಎನ್‌ಐಎ ಈ ಬಂಧನ ನಡೆಸಿದೆ.

ಕಳೆದ ವರ್ಷ ಜುಲೈ 10ರಂದು ಎನ್‌ಐಎ ಸ್ವಯಂಪ್ರೇರಿತವಾಗಿ ದಾಖಲಿಸಿದ ಪ್ರಕರಣದ ತನಿಖೆ ವೇಳೆ ಪಂಜಾಬ್ ಮತ್ತು ಇತರ ಕೆಲವು ಸ್ಥಳಗಳಲ್ಲಿ ನಡೆದಿದ್ದ ಹಿಂಸಾತ್ಮಕ ಕೃತ್ಯಗಳಲ್ಲಿ ಖಲಿಸ್ತಾನಿ ಭಯೋತ್ಪಾದಕ ಸಂಘಟನೆಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಲು ಸತ್ನಾಮ್ ಸಿಂಗ್ ಸತ್ತಾಗೆ ಬಲ್ಜೀತ್ ಸಿಂಗ್ ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Khalistani Terrorists: ಬಿಜೆಪಿ ತೊರೆಯದಿದ್ದರೆ ಸಾಯಲು ಸಿದ್ಧರಾಗಿ; ಸಿಖ್‌ ನಾಯಕರಿಗೆ ಖಲಿಸ್ತಾನಿ ಉಗ್ರರಿಂದ ಜೀವ ಬೆದರಿಕೆ

ಖಲಿಸ್ತಾನಿ ಭಯೋತ್ಪಾದಕ ಸಂಘಟನೆಗಳ ವಿರುದ್ಧದ ಕಾರ್ಯಾಚರಣೆಯ ಭಾಗವಾಗಿ ತನಿಖೆಯನ್ನು ಮುಂದುವರಿಸಿರುವ ಎನ್‌ಐಎ, ಭಾರತದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸಲು ಲಾಂಡಾ ಮತ್ತು ಸತ್ತಾ ಇಬ್ಬರೂ ವಿದೇಶಗಳಿಂದ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಿದೆ.

Continue Reading

ದೇಶ

Microsoft Global Outage: ವಿಶ್ವಾದ್ಯಂತ ನೆಲಕಚ್ಚಿದ ಮೈಕ್ರೋಸಾಫ್ಟ್‌; ವಿಂಡೋಸ್‌ನಲ್ಲಿ ತಾಂತ್ರಿಕ ದೋಷ

Microsoft Global Outage: ಮೈಕ್ರೋಸಾಫ್ಟ್‌ನ ವಿಂಡೋಸ್‌ನಲ್ಲಿ ಇಂದು ತಾಂತ್ರಿಕ ಸಮಸ್ಯೆಯಿಂದ ಕಂಡು ಬಂದಿದ್ದು, ವಿಶ್ವಾದ್ಯಂತದ ಬಳಕೆದಾರರು ಪರದಾಡಿದರು. ಇದ್ದಕ್ಕಿದ್ದಂತೆ ಕಂಪ್ಯೂಟರ್‌, ಲ್ಯಾಪ್‌ಟಾಪ್‌ ರಿಸ್ಟಾರ್ಟ್‌ ಆಗಿ ಹೈರಾಣಾದರು. ಓಪರೇಟಿಂಗ್‌ ಸಿಸ್ಟಮ್‌ (OS) ಸಮಸ್ಯೆಯಲ್ಲಿ ಸಿಲುಕಿದೆ ಎಂಬ ಸಂದೇಶ ನೀಲಿ ಬಣ್ಣದ ಸಂದೇಶ ಡಿಸ್‌ಪ್ಲೇಯಲ್ಲಿ ಮೂಡಿರುವುದಾಗಿ ಅನೇಕ ಬಳಕೆದಾರರು ತಿಳಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಮೈಕ್ರೊಸಾಫ್ಟ್‌ ಕಂಪನಿ, “ಕ್ರೌಡ್‌ಸ್ಟ್ರೈಕ್‌ ಅಪ್‌ಡೇಟ್‌ ಪರಿಣಾಮವಾಗಿ ಈ ಸಮಸ್ಯೆ ಕಂಡು ಬಂದಿದೆ. ಆತಂಕಗೊಳ್ಳಬೇಡಿ, ಇದು ಸರಿಯಾಗಲಿದೆʼʼ ಎಂದಿದೆ.

VISTARANEWS.COM


on

Microsoft Global Outage
Koo

ನವದೆಹಲಿ: ಮೈಕ್ರೋಸಾಫ್ಟ್‌ನ ವಿಂಡೋಸ್‌ನಲ್ಲಿ ಇಂದು ತಾಂತ್ರಿಕ ಸಮಸ್ಯೆ ಕಂಡು ಬಂದಿದ್ದು, ವಿಶ್ವಾದ್ಯಂತದ ಬಳಕೆದಾರರು ಪರದಾಡಿದರು (Microsoft Global Outage). ಇದ್ದಕ್ಕಿದ್ದಂತೆ ಕಂಪ್ಯೂಟರ್‌, ಲ್ಯಾಪ್‌ಟಾಪ್‌ ರಿಸ್ಟಾರ್ಟ್‌ ಆಗಿ ಹೈರಾಣಾದರು. ಓಪರೇಟಿಂಗ್‌ ಸಿಸ್ಟಮ್‌ (OS) ಸಮಸ್ಯೆಯಲ್ಲಿ ಸಿಲುಕಿದೆ ಎಂಬ ಸಂದೇಶ ನೀಲಿ ಬಣ್ಣದ ಸಂದೇಶ ಡಿಸ್‌ಪ್ಲೇಯಲ್ಲಿ ಮೂಡಿರುವುದಾಗಿ ಅನೇಕ ಬಳಕೆದಾರರು ತಿಳಿಸಿದ್ದಾರೆ. ಈ ಚಿತ್ರಗಳನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟ್‌ ಮಾಡಿ ಮೈಕ್ರೋಸಾಫ್ಟ್ ಮತ್ತು ಸಿಇಒ ಸತ್ಯ ನಾದೆಲ್ಲಾ ಅವರನ್ನು ಟ್ಯಾಗ್ ಮಾಡಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಮೈಕ್ರೊಸಾಫ್ಟ್‌ ಕಂಪನಿ, “ಕ್ರೌಡ್‌ಸ್ಟ್ರೈಕ್‌ ಅಪ್‌ಡೇಟ್‌ ಪರಿಣಾಮವಾಗಿ ಈ ಸಮಸ್ಯೆ ಕಂಡು ಬಂದಿದೆ. ಆತಂಕಗೊಳ್ಳಬೇಡಿ, ಇದು ಸರಿಯಾಗಲಿದೆʼʼ ಎಂದಿದೆ.

“ವಿಂಡೋಸ್ ಕಂಪ್ಯೂಟರ್‌ನ ಸ್ಕ್ರೀನ್‌ ಸಡನ್‌ ಆಫ್‌ ಆಯ್ತು”, “ಕಂಪ್ಯೂಟರ್‌ ಆಗಾಗ ರಿಸ್ಟ್ರಾರ್ಟ್‌ ಆಗುತ್ತಿದೆ” ಎಂದೆಲ್ಲ ಕೆಲವರು ಪೋಸ್ಟ್‌ ಮಾಡಿದ್ದಾರೆ. ʼʼನಿಮ್ಮ ಡಿವೈಸ್‌ನಲ್ಲಿ ಸಮಸ್ಯೆ ಇದೆ. ರಿಸ್ಟಾರ್ಟ್‌ ಮಾಡಬೇಕು. ಎರರ್‌ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆʼʼ ಮುಂತಾದ ಸಂದೇಶ ಪರದೆ ಮೇಲೆ ಮೂಡಿದೆ ಎಂದು ಹಲವರು ತಿಳಿಸಿದ್ದಾರೆ.

ಮೈಕ್ರೋಸಾಫ್ಟ್‌ ಸೇವೆಗಳಲ್ಲಿನ ಈ ಎರರ್‌ ವಿಮಾನಯಾನ, ಬ್ಯಾಂಕುಗಳು ಸೇರಿ ವಿಶ್ವದಾದ್ಯಂತದ ಹಲವು ಉದ್ಯಮಗಳ ಮೇಲೆ ಪರಿಣಾಮ ಬೀರಿದೆ. ಭಾರತದಲ್ಲಿ ಸ್ಪೈಸ್ ಜೆಟ್, ಅಕಾಸಾ ಏರ್‌ಲೈನ್ಸ್‌ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಸೇರಿದಂತೆ ಭಾರತೀಯ ವಿಮಾನಯಾನ ಸಂಸ್ಥೆಗಳೂ ತೊಂದರೆಗೆ ಒಳಗಾಗಿವೆ. ಇದು ವಿಮಾನ ರದ್ದತಿ ಮತ್ತು ವಿಳಂಬಕ್ಕೆ ಕಾರಣವಾಗಿದೆ. “ನಾವು ಪ್ರಸ್ತುತ ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಈ ಸಮಸ್ಯೆಯನ್ನು ಪರಿಹರಿಸಲು ನಮ್ಮ ತಂಡವು ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಮತ್ತು ಸಮಸ್ಯೆಯನ್ನು ಪರಿಹರಿಸಿದ ನಂತರ ನಿಮಗೆ ಮಾಹಿತಿ ನೀಡುತ್ತೇವೆ. ನಿಮ್ಮ ಸಹಕಾರಕ್ಕೆ ಧನ್ಯವಾದಗಳು” ಎಂದು ಸ್ಪೈಸ್ ಜೆಟ್ ಹೇಳಿದೆ.

2023ರಲ್ಲಿಯೂ ಇದೇ ರೀತಿಯ ಸಮಸ್ಯೆ ಕಾಣಿಸಿಕೊಂಡಿತ್ತು. ಇದೀಗ ಶೀಘ್ರ ಸರಿಪಡಿಸುವುದಾಗಿ ಕಂಪನಿ ಬಳಕೆದಾರರಿಗೆ ಭರವಸೆ ನೀಡಿದೆ.

ಇದನ್ನೂ ಓದಿ: Facebook Server: ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಸರ್ವರ್‌ ಡೌನ್;‌ ನಿಮ್ಮ ಖಾತೆ ಚೆಕ್‌ ಮಾಡಿಕೊಳ್ಳಿ

Continue Reading
Advertisement
Wedding FilmerVishal Punjabi recent chat
ಬಾಲಿವುಡ್4 mins ago

Vishal Punjabi: ಮದುವೆಯಾದ 2 ತಿಂಗಳಿಗೆ ಪತ್ನಿಗೆ ಮೋಸ ಮಾಡಿ, ಇನ್ನೊಬ್ಬಳ ಜತೆ ಈ ನಟ ಬೆತ್ತಲೆಯಾಗಿ ಸಿಕ್ಕಿಬಿದ್ದಿದ್ದನಂತೆ!

Supreme Court
ದೇಶ8 mins ago

Supreme Court: ಕ್ರಿಮಿನಲ್ ಮೊಕದ್ದಮೆಯಿಂದ ರಾಜ್ಯಪಾಲರಿಗೆ ವಿನಾಯಿತಿ; ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಸಮ್ಮತಿ

Paris Olympics 2024:
ಪ್ರಮುಖ ಸುದ್ದಿ19 mins ago

Paris Olympics 2024 : ಸಿಗರೇಟ್​ ಸೇದಿದ ಕಾರಣಕ್ಕೆ ಒಲಿಂಪಿಕ್ಸ್​ ಸರ್ಧೆಯ ಅವಕಾಶ ಕಳೆದುಕೊಂಡ ಜಪಾನ್​ ಮಹಿಳಾ ಜಿಮ್ನಾಸ್ಟಿಕ್ ಪಟು

School Transfer Certificate
ದೇಶ20 mins ago

School Transfer Certificate: ಶಾಲಾ ಪ್ರವೇಶಕ್ಕೆ ವರ್ಗಾವಣೆ ಪ್ರಮಾಣಪತ್ರದ ಅಗತ್ಯ ಇಲ್ಲ; ಹೈಕೋರ್ಟ್‌ ಮಹತ್ವದ ತೀರ್ಪು

Road Accident
ಮೈಸೂರು21 mins ago

Road Accident : ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಛಿದ್ರಗೊಂಡ ದಂಪತಿ; ಎಎಸ್‌ಐಗೆ ಬಡಿದ ಅಪರಿಚಿತ ವಾಹನ

Khalistani Terrorist
ಕ್ರೈಂ30 mins ago

Khalistani Terrorist: ಖಲಿಸ್ತಾನಿ ಭಯೋತ್ಪಾದಕ ಲಾಂಡಾನ ಪ್ರಮುಖ ಸಹಾಯಕ ಬಲ್ಜೀತ್ ಸಿಂಗ್ ಬಂಧನ

Suryakumar Yadav
ಕ್ರಿಕೆಟ್48 mins ago

Suryakumar Yadav: ಸೂರ್ಯಕುಮಾರ್​ಗೆ ನಾಯಕತ್ವ ಒಲಿದದ್ದು ಕಾಪು ಮಾರಿಯಮ್ಮನ ಆಶೀರ್ವಾದದಿಂದ!

Trinity Golf Champions League
ಪ್ರಮುಖ ಸುದ್ದಿ50 mins ago

Trinity Golf Champions League : ಕಪಿಲ್ ದೇವ್​ ನೇತೃತ್ವದ ಟ್ರಿನಿಟಿ ಗಾಲ್ಫ್ ಚಾಂಪಿಯನ್ಸ್ ಲೀಗ್​​ನ 2ನೇ ಆವೃತ್ತಿಗೆ ಬೆಂಗಳೂರು ಆತಿಥ್ಯ

OTT Releases
Latest51 mins ago

OTT Releases : ಈ ವಾರ ಥಿಯೇಟರ್ ಮತ್ತು ಒಟಿಟಿಯಲ್ಲಿ ಬಿಡುಗಡೆ ಆಗಲಿವೆ ಈ ಚಿತ್ರಗಳು; ಟ್ರೇಲರ್‌ ನೋಡಿ

Self Harming
ಬೆಂಗಳೂರು ಗ್ರಾಮಾಂತರ53 mins ago

Self Harming : ಆನೇಕಲ್ ಸರ್ಕಾರಿ ಆಸ್ಪತ್ರೆ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ23 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌