DK Shivakumar: ಬಿಎಸ್‌ವೈ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿಕೆಶಿ ಆರೋಪ - Vistara News

ಕರ್ನಾಟಕ

DK Shivakumar: ಬಿಎಸ್‌ವೈ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿಕೆಶಿ ಆರೋಪ

DK Shivakumar: ಬಿಜೆಪಿಯ ಅಕ್ರಮಗಳನ್ನು ತನಿಖೆ ಮಾಡುತ್ತೇವೆ. ಅಕ್ರಮಗಳ ಹಿಂದೆ ಇದ್ದ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳ ಬಗ್ಗೆ ಜನರಿಗೆ ತಿಳಿಸುತ್ತೇವೆ ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: “ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು 300 ಕೋಟಿ ರೂ.ಗಳಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ 87 ಕೋಟಿ ರೂ., ಎಪಿಎಂಸಿಯ 47 ಕೋಟಿ ರೂ., 2019ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ 22 ಕೋಟಿ ರೂ., ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್ ಅಲ್ಲಿನ ಹಣ ಜೂನ್ 2018 ರಲ್ಲಿ 5 ಕೋಟಿ ರೂ., ದೇವರಾಜ್ ಅರಸು ನಿಗಮದ 47 ಕೋಟಿ ರೂ., ಮಾಲಿನ್ಯ ನಿಯಂತ್ರಣ ಮಂಡಲಿಯ 10 ಕೋಟಿ ರೂ. ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ” ಎಂದು ಆರೋಪಿಸಿದರು.

ಬಿಜೆಪಿಯ ಅಕ್ರಮಗಳನ್ನು ತನಿಖೆ ನಡೆಸುವಿರಾ ಎಂದು ಪ್ರಶ್ನಿಸಿದಾಗ “ಖಂಡಿತವಾಗಿಯೂ ತನಿಖೆ ನಡೆಸುತ್ತೇವೆ. ಆದರೆ ಎಲ್ಲವೂ ದಾಖಲೆಯಲ್ಲಿ ಇರಬೇಕು ಎನ್ನುವ ಕಾರಣಕ್ಕೆ ಸದನದಲ್ಲಿ ಎಲ್ಲಾ ದಾಖಲೆಗಳನ್ನು ಬಯಲು ಮಾಡುತ್ತೇವೆ. ಅಕ್ರಮಗಳ ಹಿಂದೆ ಇರುವ ಯಾವ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳು ಇದ್ದರು ಎಂದು ಜನರಿಗೆ ತಿಳಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ | Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

“ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ ರೂ., ಮಂತ್ರಿ ಸ್ಥಾನಕ್ಕೆ 100 ಕೋಟಿ ರೂ. ನೀಡಬೇಕು ಎನ್ನುವ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪ ಹಾಗೂ ಭೋವಿ ನಿಗಮದ ಅಕ್ರಮದ ಬಗ್ಗೆ ಗೂಳಿಹಟ್ಟಿ ಶೇಖರ್ ಮಾಡಿದ ಆರೋಪಗಳ ಮೇಲೆ ಏಕೆ ಬಿಜೆಪಿ ತನಿಖೆ ನಡೆಸಲಿಲ್ಲ” ಎಂದು ಮರುಪ್ರಶ್ನಿಸಿದರು.

“ಯಾವುದೇ ಭ್ರಷ್ಟಾಚಾರದ ಮೇಲೆ ತನಿಖೆ ನಡೆಯುತ್ತಿದ್ದರೆ ಆ ವಿಚಾರದಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ. ಆದರೆ ನಾವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಕೊಟ್ಟು ಸದನದಲ್ಲಿ ಚರ್ಚೆ ಅವಕಾಶ ಮಾಡಿಕೊಟ್ಟಿದ್ದೇವೆ. ಅಕ್ರಮ ಎಸಗಿದ್ದರೆ ಯಾವುದೇ ಅಧಿಕಾರಿ, ಮಂತ್ರಿ, ಶಾಸಕ, ಯಾರೇ ಆಗಿರಲಿ ಅವರನ್ನು ರಕ್ಷಿಸುವ ಉದ್ದೇಶ ನಮಗಿಲ್ಲ” ಎಂದು ಹೇಳಿದರು.

ಇದನ್ನೂ ಓದಿ | Sameer Nigam: 25,000 ಜನರಿಗೆ ಉದ್ಯೋಗ ಕೊಟ್ಟಿದ್ದೇನೆ, ನನ್ನ ಮಕ್ಕಳು ರಾಜ್ಯದಲ್ಲಿ ಕೆಲಸ ಮಾಡಬಾರದಾ?: ಫೋನ್‌ಪೇ ಸಿಇಒ ಆಕ್ರೋಶ

“ವಾಲ್ಮೀಕಿ ನಿಗಮದ 86 ಕೋಟಿ ರೂ. ಹಣ ತೆಲಂಗಾಣಕ್ಕೆ ಅಕ್ರಮವಾಗಿ ವರ್ಗಾವಣೆಯಾದ ತನಿಖೆ ನಡೆಸಲು ಎಸ್‌ಐಟಿ ರಚನೆ ಮಾಡಿದ್ದೇವೆ. ತನಿಖಾ ತಂಡವು ಸುಮಾರು 36 ಕೋಟಿ ರೂ.ಗಳಷ್ಟು ಹಣವನ್ನು ವಶಕ್ಕೆ ಪಡೆದುಕೊಂಡಿದೆ. ಬ್ಯಾಂಕ್ ಅಧಿಕಾರಿ ಒಂದೇ ದಿನದಲ್ಲಿ ಕೋಟ್ಯಂತರ ರೂಪಾಯಿ ಸಾಲ ಮಂಜೂರು ಮಾಡಿದ್ದಾನೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲು ಆಗುತ್ತದೆಯೇ? ನಾವು ಪ್ರತಿಪಕ್ಷಗಳಿಗೆ ಈ ವಿಚಾರವಾಗಿ ಉತ್ತರ ಕೊಡಬೇಕಾಗಿದೆ” ಎಂದು ಖಾರವಾಗಿ ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ವಾಲ್ಮೀಕಿ ನಿಗಮ ಅಕ್ರಮಕ್ಕೆ ಸರ್ಕಾರ ಹೊಣೆಯಲ್ಲ; ಚಂದ್ರಶೇಖರನ್‌ ಆತ್ಮಹತ್ಯೆಗೆ ಅಧಿಕಾರಿಗಳು ಕಾರಣ ಎಂದ ಸಿಎಂ!

CM Siddaramaiah: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿಲ್ಲ ಎಂದು ನಾವು ಹೇಳ್ತಿಲ್ಲ. ಅಕ್ರಮ ಯಾರು ಮಾಡಿದ್ದಾರೆ, ಇದಕ್ಕೆ ಯಾರು ಜವಾಬ್ದಾರಿ ಇದ್ದಾರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

VISTARANEWS.COM


on

CM Siddaramaiah
Koo

ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮದ ಬಗ್ಗೆ ನಿಗಮ ಅಧಿಕಾರಿಗಳು, ಬ್ಯಾಂಕ್ ಸಿಬ್ಬಂದಿಯ ಮೇಲೆ ದೂರು ದಾಖಲಾಗಿದೆ. ಸರ್ಕಾರಕ್ಕೂ ಇದಕ್ಕೂ ಸಂಬಂಧ ಇಲ್ಲ. ಈ ಹಗರಣದಲ್ಲಿ ಎಸ್‌ಐಟಿ, ಸಿಬಿಐ ತನಿಖೆ ಮಾಡುತ್ತಿವೆ. ಇಡಿ ಸುಮೊಟೋ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ನಾಗೇಂದ್ರ ಬಂಧನವಾಗಿದೆ, ದದ್ದಲ್ ಮನೆ ಮೇಲೆ ದಾಳಿ ಮಾಡಿ ತನಿಖೆ ನಡೆಸಿದ್ದಾರೆ. ಯಾರು ತಪ್ಪು ಮಾಡಿದ್ದಾರೋ, ಅವರಿಗೆ ಶಿಕ್ಷೆ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಈ ಬಾರಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು ಎಂದು ಹೇಳಲಾಗಿತ್ತು. ಆದರೆ, ಬಿಜೆಪಿ- ಜೆಡಿಎಸ್‌ನವರು ವಾಲ್ಮೀಕಿ ಹಗರಣ ಚರ್ಚೆಗೆ ತಂದರು. ನಿಯಮ 69ರಡಿ ಚರ್ಚೆಗೆ ಅವಕಾಶ ನೀಡಲಾಗಿದೆ. ನಾವೇನು ಚರ್ಚೆಗೆ ವಿರೋಧ ಮಾಡಲಿಲ್ಲ, ಗುರುವಾರ ಮಧ್ಯಾಹ್ನದವರೆಗೂ ಚರ್ಚೆ ಮಾಡಿದರು. ಒಟ್ಟು 7 ಗಂಟೆಗೂ ಹೆಚ್ಚು ಕಾಲ ಚರ್ಚೆ ಮಾಡಿದರು ಎಂದು ತಿಳಿಸಿದರು.

ಯಾವುದೇ ತುರ್ತು ವಿಚಾರವನ್ನು ಪ್ರಸ್ತಾಪ ಮಾಡಿದಾಗ ವಿಪಕ್ಷದವರಿಗೆ ಅವಕಾಶ ಇದೆ, ಅಷ್ಟೇ ಸರ್ಕಾರಕ್ಕೂ ತನ್ನ ನಿಲುವು ಹೇಳುವ ಹಕ್ಕಿದೆ. ನಾಗೇಂದ್ರ ರಾಜೀನಾಮೆ ಕೊಟ್ಟಮೇಲೆ ನಾನೆ ಆ ಇಲಾಖೆ ಖಾತೆ ಇಟ್ಟುಕೊಂಡಿದ್ದೇನೆ. ನಾವು ಅಕ್ರಮ ಆಗಿಲ್ಲ ಅಂತ ಹೇಳ್ತಿಲ್ಲ, ಅಕ್ರಮ ಆಗಿದೆ ಅಂತಲೇ ಹೇಳಿದ್ದೇವೆ. ಅಕ್ರಮ ಯಾರು ಮಾಡಿದ್ದಾರೆ, ಇದಕ್ಕೆ ಯಾರು ಜವಾಬ್ದಾರಿ ಇದ್ದಾರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಸಂತನಗರ ಬ್ಯಾಂಕ್‌ನಲ್ಲಿ ಹಣ ಇಡಲಾಗಿತ್ತು. ಇಲಾಖೆಯ ಎಂಡಿಗೆ ಹಣ ನೋಡಿಕೊಳ್ಳುವ ಜವಾಬ್ದಾರಿ ಇರುತ್ತದೆ. ಮಿನಿಸ್ಟರ್ ಪಾಲಿಸಿ ಮೇಕರ್ ಅಷ್ಟೇ, ಎಂಡಿ ಎಕ್ಸಿಕ್ಯೂಟಿವ್ ಹೆಡ್ ಆಗಿರುತ್ತಾರೆ. ಇಲಾಖೆ ಅಧ್ಯಕ್ಷರು ಇದಕ್ಕೆ ಜವಾಬ್ದಾರರಲ್ಲ ಎಂದು ಹೇಳಿದರು.

ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ವಸಂತನಗರ ಬ್ರಾಂಚ್ ಮ್ಯಾನೇಜರ್ ಶೋಭನಾ, ಎಂಜಿ ರೋಡ್‌ನ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ಹಣ ವರ್ಗಾವಣೆ ಮಾಡಿದ್ದರು. ಬೇರೆ ಬೇರೆ ಕಡೆಯಿಂದ ಒಟ್ಟು 187 ಕೋಟಿ 33 ಲಕ್ಷ ಹಣ ವರ್ಗಾವಣೆ ಆಗಿದೆ. ಚೀಫ್‌ ಮ್ಯಾನೇಜರ್ ಸುಚಿಶ್ಮಿತಾ ರಾವ್, ಡೆಪ್ಯುಟಿ ಮ್ಯಾನೇಜರ್ ದೀಪಾ, ಕೃಷ್ಣ ಮೂರ್ತಿ ಕ್ರೆಡಿಟ್ ಆಫೀಸರ್ ಬ್ಯಾಂಕ್ ಉಸ್ತುವಾರಿ ಹೊತ್ತಿದ್ದಾರೆ. 187.33 ಕೋಟಿಯಲ್ಲಿ 89.63 ಕೋಟಿ ತೆಲಂಗಾಣದ ಹೈದರಾಬಾದ್ ಬ್ಯಾಂಕ್‌ಗೆ ಹೋಗಿದೆ ಎಂದು ತಿಳಿಸಿದರು.

ಒಟ್ಟು 217 ಅಕೌಂಟ್‌ಗೆ ಹಣ ಹೋಗಿದೆ. ರತ್ನಾಕರ ಕೋ ಆಪರೇಟಿವ್ ಲಿಮಿಟೆಡ್‌ಗೆ ಹೋಗಿದೆ 89 ಕೋಟಿ ಹೋಗಿದೆ. ಆ 3 ಜನ ಬ್ಯಾಂಕ್ ಅಧಿಕಾರಿಗಳು ಕೇಳಬೇಕಲ್ಲವೇ ಎಂದು ಪ್ರಶ್ನಿಸಿದರು.

ಅಧಿಕಾರಿಗಳೇ ಚಂದ್ರಶೇಖರನ್‌ ಆತ್ಮಹತ್ಯೆಗೆ ಕಾರಣ

ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಡೆತ್ ನೋಟ್‌ನಲ್ಲಿ ಹೇಳಿದ್ದಾರೆ. ವಾಲ್ಮೀಕಿ ನಿಗಮದ ಎಂಡಿ ಪದ್ಮನಾಭ, ಚೀಪ್ ಅಕೌಂಟ್ ಅಫೀಸರ್ ಪರಶುರಾಮ, ಎಂಜಿ ರಸ್ತೆ ಯೂನಿಯನ್‌ ಬ್ಯಾಂಕ್‌ ಚೀಫ್‌ ಮ್ಯಾನೇಜರ್ ಸುಚಿಸ್ಮಿತಾ ಕಾರಣ ಅಂತ ಬರೆದಿದ್ದಾರೆ.

ಅಕೌಂಟ್ ಸೂಪರಿಂಟೆಂಡೆಂಟ್ ಚಂದ್ರಶೇಖರ್ ತಮಿಳುನಾಡಿನ ಭೋವಿ ಜನಾಂಗದವರು. ಶಿವಮೊಗ್ಗದ ವಿನೋಬಾ ನಗರದಲ್ಲಿ ವಾಸವಾಗಿದ್ದಾರೆ. ಹೆಂಡತಿ ದೊಡ್ಡಪ್ಪನ ಅಂತ್ಯಕ್ರಿಯೆಗೆ ಹೋದಾಗ ಈತ ಮೇ 26 ನೇಣಿಗೆ ಶರಣಾಗಿದ್ದ. ಆ‌ಮೇಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಟಿವಿ ಹಿಂಭಾಗದಲ್ಲಿ ಒಂದು ನೋಟ್ ಬುಕ್ ಸಿಗುತ್ತೆ, ಅದರಲ್ಲಿ ಡೆತ್‌ಗೆ ಕಾರಣ ಬರೆದಿದ್ದ. ಅದರಲ್ಲಿ ಸ್ಪಷ್ಟವಾಗಿ ಎಂಡಿ ಪದ್ಮನಾಭ, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ, ಎಂಜಿ ರೋಡ್ ಶಾಖೆ ಮ್ಯಾನೇಜರ್ ಸುಚಿಸ್ಮಿತಾ ನನ್ನ ಸಾವಿಗೆ ಕಾರಣ ಅಂತ ಎಂದು ಸ್ಪಷ್ಟವಾಗಿ ಬರೆದಿದ್ದ ಎಂದು ಸಿಎಂ ತಿಳಿಸಿದರು.

ಆತ್ಮಹತ್ಯೆ ಮಾಡಿಕೊಂಡ ಮೇಲೆ ಅವನ ಹೆಂಡತಿ ಕವಿತಾ, ಮೇ 27 ತಾರೀಖು ಕಂಪ್ಲೆಂಟ್ ಕೊಟ್ಟಿದ್ದರು. ಎಫ್‌ಐಆರ್‌ ಆದಮೇಲೆ ಕೇಸ್‌ ಕೋರ್ಟ್‌ಗೆ ಹೋಗುತ್ತದೆ. 3 ಜನರ ಮೇಲೆ ಎಫ್‌ಐಆರ್‌ ಆಗಿತ್ತು. ಮೇ 28ರಂದು ನಿಗಮದ ಎಂಡಿ ರಾಜಶೇಖರ್ ಕಂಪ್ಲೆಂಟ್ ಕೊಟ್ಟಿದ್ದರು. ಬ್ಯಾಂಕ್ ಅಧಿಕಾರಿಗಳು ಸುಚಿಸ್ಮಿತಾ ಮೇಲೆ ಕಂಪ್ಲೆಂಟ್ ಕೊಟ್ಟಿದ್ದರು. ಇದೆಲ್ಲಾ ಆದಮೇಲೆ ನನಗೆ ಪೋಲೀಸರು ಮಾಹಿತಿ ನೀಡಿದ್ದರು. ಹೀಗಾಗಿ ತನಿಖೆಗಾಗ ನಾನು ಎಸ್‌ಐಟಿ ರಚನೆ ಮಾಡಿದ್ದೆ ಎಂದು ತಿಳಿಸಿದರು.

ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಶಿವಕುಮಾರ್ ಹೆಸರೇ ಇಲ್ಲ. ಸಾಯಿತೇಜ ಎಂಬಾತನನ್ನು ಕರೆಸಿ ಶಿವಕುಮಾರ್ ಎಂದು ಹೆಸರಿಟ್ಟಿದ್ದರು. ಇವನು ಯಾರು ಎಂದು ಪರಿಶೀಲನೆ ಮಾಡಲ್ಲ. ಅಧಿಕಾರಿ ದೀಪಾ ನೋಡಿಲ್ಲ, ಕೃಷ್ಣಮೂರ್ತಿಯೂ ನೋಡಿಲ್ಲ. ಬ್ಯಾಂಕಿನವರೇ ಅವರ ಬ್ಯಾಂಕಿನ ಅಧಿಕಾರಿಗಳ ಮೇಲೆ ದೂರು ಕೊಟ್ಟಿದ್ದಾರೆ. ಇವರ ಮೇಲೆ ತನಿಖೆ ನಡೆಸಲು ಅನುಮತಿ ನೀಡಿದ್ದರು ಎಂದು ತಿಳಿಸಿದರು.

ಈ ಹಗರಣದಲ್ಲಿ ಎಸ್‌ಐಟಿ, ಸಿಬಿಐ ತನಿಖೆ ಮಾಡುತ್ತಿವೆ. ಇಡಿ ಸುಮೊಟೋ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿವೆ. ನಾಗೇಂದ್ರ ಬಂಧನವಾಗಿದೆ, ದದ್ದಲ್ ಮನೆ ಮೇಲೆ ದಾಳಿ ಮಾಡಿ ತನಿಖೆ ನಡೆಸಿದ್ದಾರೆ. ಎಸ್‌ಐಟಿ 12 ಮಂದಿಯನ್ನು ವಶಕ್ಕೆ ಪಡೆದು, ಈ ಪೈಕಿ 9 ಆರೋಪಿಗಳನ್ನು ಜೈಲಿಗೆ ಕಳುಹಿಸಿದ್ದಾರೆ, ಮೂವರು ಕಸ್ಟಡಿಯಲ್ಲಿ ಇದ್ದಾರೆ. ತನಿಖೆ ವೇಳೆ 85 ಕೋಟಿ ರೂ.ಗಳಲ್ಲಿ 34 ಕೋಟಿ ಕೋಟಿ ವಾಪಾಸ್ ಬಂದಿದೆ ಎಂದರು.

Continue Reading

ಬೆಂಗಳೂರು

Dengue Fever : ಡೆಂಗ್ಯೂ ಭೀತಿ- ಸೊಳ್ಳೆಗಳ ನಾಶಕ್ಕೆ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Dengue Fever : ಡೆಂಗ್ಯೂ ವಿರುದ್ಧದ ಜಾಗೃತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ವತಃ ಫೀಲ್ಡಿಗಿಳಿದರು. ಇದೇ ವೇಳೆ ಬೆಂಗಳೂರಿನ ರಾಮಸ್ವಾಮಿಪಾಳ್ಯ ಕೊಳೆಗೆರೆ ಪ್ರದೇಶದಲ್ಲಿ ಫೀವರ್ ಕ್ಲಿನಿಕ್‌ಗೆ ಚಾಲನೆ ನೀಡಿ, ವಸಂತನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶೀಘ್ರ ಉಚಿತ ಡಯಾಲಿಸಿಸ್ ಸೇವೆ ಪ್ರಾರಂಭಿಸಲು ಸೂಚನೆ ನೀಡಿದರು.

VISTARANEWS.COM


on

By

Dengue Fever
Koo

ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ಡೆಂಗ್ಯೂ ಪ್ರಕರಣಗಳು (Dengue Fever) ಹೆಚ್ಚಾಗುತ್ತಿದೆ. ಹೀಗಾಗಿ ಖುದ್ದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರೇ ಫೀಲ್ಡಿಗಿಳಿದು ಜಾಗೃತಿ ಮೂಡಿಸಲು ಮುಂದಾದರು. ಡೆಂಗ್ಯೂ ನಿಯಂತ್ರಣಕ್ಕೆ ಪ್ರತಿ ಶುಕ್ರವಾರ ಆರೋಗ್ಯ ಇಲಾಖೆ ನಡೆಸುತ್ತಿರುವ ಈಡಿಸ್ ಲಾರ್ವಾ ನಾಶಪಡಿಸುವ ಅಭಿಯಾನದಲ್ಲಿ ಸಚಿವರು ಭಾಗಿಯಾದರು.

ಬೆಂಗಳೂರಿನ ವಸಂತನಗರ, ರಾಮಸ್ವಾಮಿಪಾಳ್ಯದಲ್ಲಿ ಮನೆ ಮನೆಗೆ ತೆರಳಿ ಡೆಂಗ್ಯೂ ಹರಡುವ ಸೊಳ್ಳೆ ಉತ್ಪತ್ತಿ ತಾಣಗಳ ಪರಿಶೀಲನೆ ನಡೆಸಿದರು. ಲಾರ್ವಾ ನಾಶಪಡಿಸುವ ಔಷಧಿ ಸಿಂಪಡಿಸಿದ ಸಚಿವರು, ಫಾಗಿಂಗ್ ಕೂಡ ಮಾಡುವ ಮೂಲಕ ತಳ ಮಟ್ಟದಲ್ಲಿ ಸ್ವಚ್ಚತೆ ಕಾಪಾಡುವಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಸಿಬ್ಬಂದಿಗಳ ಕಾರ್ಯಕ್ಕೆ ಉತ್ಸಾಹ ತುಂಬಿದರು. ಅಲ್ಲದೇ ನಿವಾಸಿಗಳಲ್ಲಿ ಡೆಂಗ್ಯೂ ವಿಚಾರವಾಗಿ ಎಚ್ಚರ ವಹಿಸಿ, ನೀರು ಶೇಖರಣೆಯಾಗದಂತೆ ಮುಂಜಾಗೃತೆ ಕ್ರಮಗಳನ್ನು ಅನುಸರಿಸಿ ಎಂದು ಕರೆ ನೀಡಿದರು.

ರಾಮಸ್ವಾಮಿ ಪಾಳ್ಯದ ಕೊಳಗೇರಿ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಡೀಟ್(Odomos) ಕ್ರೀಮ್ ವಿತರಿಸಿದ ಆರೋಗ್ಯ ಸಚಿವರು, ಕೈ ಮತ್ತು ಕಾಲುಗಳಿಗೆ ಹಚ್ಚಿಕೊಳ್ಳಲು ತಿಳಿಸಿದರು. ಅಲ್ಲದೆ ಡೆಂಗ್ಯೂ ನಿಯಂತ್ರಣಕ್ಕಾಗಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲು ನಿಮ್ಮ ಮನೆಯಲ್ಲಿ ಪೋಷಕರು ಹಾಗೂ ಸುತ್ತಮುತ್ತಲಿನ ಮನೆಯವರಲ್ಲಿ ಅರಿವು ಮೂಡಿಸಲು ವಿದ್ಯಾರ್ಥಿಗಳಿಗೆ ತಿಳಿಸಿದರು.

ಇದನ್ನೂ ಓದಿ: Road Accident : ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ದಂಪತಿ ಗಂಭೀರ; ಎಎಸ್‌ಐಗೆ ಬಡಿದ ಅಪರಿಚಿತ ವಾಹನ

100 ಮೀ ಅಂತರದಲ್ಲಿ ಡೆಂಗ್ಯೂ ಹೆಚ್ಚಾದರೆ ಹಾಟ್‌ ಸ್ಪಾಟ್‌ ಎಂದು ಗುರುತು

100 ಮೀಟರ್ ವ್ಯಾಪ್ತಿಯಲ್ಲಿ 2 ಕ್ಕಿಂತ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡು ಬಂದರೆ ಅದನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗುತ್ತದೆ. ಬೆಂಗಳೂರಿನ ರಾಮಸ್ವಾಮಿ ಪಾಳ್ಯದ ಕೊಳಗೇರಿ ಪ್ರದೇಶದಲ್ಲಿ ಫೀವರ್ ಕ್ಲಿನಿಕ್‌ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಬಳಿಕ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಹೆಚ್ಚು ಪ್ರಕರಣಗಳು ಕಂಡುಬರುವ ಕೊಳಗೇರಿ ಪ್ರದೇಶಗಳಲ್ಲಿ ಫೀವರ್ ಕ್ಲಿನಿಕ್‌ಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಇದೇ ವೇಳೆ ಸೂಚಿಸಿದರು.

Dengue Fever

ನಗರದಲ್ಲಿ 100 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ 2 ಕ್ಕಿಂತ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡು ಬಂದರೆ ಅದನ್ನು ಹಾಟ್ ಸ್ಪಾಟ್ ಎಂದು ಗುರುತಿಸಬೇಕು. ಜೊತೆಗೆ 100 ಮೀಟರ್ ವ್ಯಾಪ್ತಿಯಲ್ಲಿ ಬರುವ ಮನೆಗಳಿಗೆ ಭೇಟಿ ನೀಡಿ ಫೀವರ್ ಪರೀಕ್ಷೆ, ಲಾರ್ವಾ ಸರ್ವೆ, ಫಾಗಿಂಗ್, ಸ್ಪ್ರೇ ಹಾಗೂ ಡೆಂಘೀ ಹರಡದಂತೆ ಮುಂಜಾಗ್ರತಾ ವಹಿಸಲು ಬಿತ್ತಿ ಪತ್ರಗಳನ್ನು ವಿತರಿಸಿ ಅರಿವು ಮೂಡಿಸಬೇಕು. ಇದಲ್ಲದೆ ಸೊಳ್ಳೆಗಳು ಕಚ್ಚದಂತೆ ಡೀಟ್(Odomos) ಕ್ರೀಮ್ ವಿತರಿಸಿ ಕೈ ಮತ್ತು ಕಾಲುಗಳಿಗೆ ಹಚ್ಚಿಕೊಳ್ಳಲು ತಿಳಿಸುವಂತೆ ಅಧಿಕಾರಿಗಳಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.

ನಗರದಲ್ಲಿ ಡೆಂಗ್ಯೂ ತಡೆಗಟ್ಟಲು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸುಮಾರು 3161 ತಂಡಗಳಿಂದ 25 ಲಕ್ಷ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಗುತ್ತಿದೆ. ನಗರದಲ್ಲಿ ಪ್ರತಿನಿತ್ಯ ಸರಾಸರಿ 130 ರಿಂದ 150 ಪ್ರಕರಣಗಳು ಕಂಡು ಬರುತ್ತಿವೆ.

ಶೀಘ್ರ ಉಚಿತ ಡಯಾಲಿಸಿಸ್ ಕೇಂದ್ರ ಆರಂಭ

ವಸಂತನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಡಯಾಲಿಸಿಸ್ ಕೇಂದ್ರ ಶೀಘ್ರದಲ್ಲಿ ಪ್ರಾರಂಭಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಉಚಿತ ಡಯಾಲಿಸಿಸ್ ಸೇವೆ ಪ್ರಾರಂಭಿಸಿಸುವುದರಿಂದ ಇಲ್ಲಿನ ಸುತ್ತಮುತ್ತಲಿನ ಬಡವರ್ಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದ್ದು, ಅದಕ್ಕಾಗಿ ಅಗತ್ಯ ಉಪಕರಣಗಳ ವ್ಯವಸ್ಥೆ ಮಾಡಿಕೊಂಡು ತ್ವರಿತಗತಿಯಲ್ಲಿ ಕೇಂದ್ರವನ್ನು ಆರಭಿಸಬೇಕೆಂದು ತಿಳಿಸಿದರು ವಸಂತನಗರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇದೇ ವೇಳೆ ಭೇಟಿ ನೀಡಿ ಕೇಂದ್ರದ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಈ ವೇಳೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಹರ್ಷದ್, ಆರೋಗ್ಯ ಇಲಾಖೆಯ ಆಯುಕ್ತರಾದ ಡಿ. ರಂದೀಪ್, ಎನ್.ಎಚ್.ಎಮ್ ಎಂ.ಡಿ ಡಾ. ನವೀನ್ ಭಟ್ ಉಪಸ್ಥಿತರಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

KPSC Recruitment 2024: ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

KPSC Recruitment 2024: 2024ನೇ ಸಾಲಿನ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯುವ ದಿನಾಂಕವನ್ನು ಕೆಪಿಎಸ್‌ಸಿ ಬಿಡುಗಡೆ ಮಾಡಿದೆ. ಯಾವೆ ಇಲಾಖೆ ಪರೀಕ್ಷೆ ಯಾವಾಗ ನಡೆಯಲಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

KPSC Recruitment 2024
Koo

ಬೆಂಗಳೂರು: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಕರ್ನಾಟಕ ಲೋಕಸೇವಾ ಆಯೋಗ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಸೇರಿ ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿಯನ್ನು (KPSC Recruitment 2024) ಬಿಡುಗಡೆ ಮಾಡಲಾಗಿದೆ.

ವಿವಿಧ ಪರೀಕ್ಷೆ ವೇಳಾಪಟ್ಟಿ

ಅಧಿಸೂಚನೆ ಸಂಖ್ಯೆ: ಪಿಎಸ್‌ಸಿ 1 ಆರ್‌ಟಿಬಿ- 1/2023 ದಿನಾಂಕ 13-03-2024 ರ ಹುದ್ದೆಗಳಿಗೆ ಪರೀಕ್ಷೆ

  • ಕನ್ನಡ ಭಾಷಾ ಪರೀಕ್ಷೆ (ಉಳಿಕೆ ಮೂಲ ವೃಂದ): 14-09-2024 (ಶನಿವಾರ ಮಧ್ಯಾಹ್ನ)
  • ಸಾಮಾನ್ಯ ಪತ್ರಿಕೆ-I (ಉಳಿಕೆ ಮೂಲ ವೃಂದ) : 15-09-2024 (ಭಾನುವಾರ ಬೆಳಗ್ಗೆ)
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು (ಉಳಿಕೆ ಮೂಲ ವೃಂದ) : 15-09-2024 (ಭಾನುವಾರ ಮಧ್ಯಾಹ್ನ) (ನಿರ್ದಿಷ್ಟ ಪತ್ರಿಕೆ)

ಅಧಿಸೂಚನೆ ಸಂಖ್ಯೆ ಪಿಎಸ್‌ಸಿ 1 ಆರ್‌ಟಿಬಿ- 2/2023 ದಿನಾಂಕ 13-03-2024 ರಂದು ಅಧಿಸೂಚಿಸಿದ ಹುದ್ದೆಗಳಿಗೆ ಪರೀಕ್ಷೆ

  • ಕನ್ನಡ ಭಾಷಾ ಪರೀಕ್ಷೆ (ಹೈದರಾಬಾದ್ ಕರ್ನಾಟಕ ) : 19-10-2024 (ಶನಿವಾರ ಮಧ್ಯಾಹ್ನ)
  • ಸಾಮಾನ್ಯ ಪತ್ರಿಕೆ-I (ಹೈದರಾಬಾದ್ ಕರ್ನಾಟಕ ) : 20-10-2024 (ಭಾನುವಾರ ಬೆಳಗ್ಗೆ)
  • ಸಾಮಾನ್ಯ ಪತ್ರಿಕೆ-I (ಹೈದರಾಬಾದ್ ಕರ್ನಾಟಕ ) : 20-10-2024 (ಭಾನುವಾರ ಬೆಳಗ್ಗೆ)
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು (ಹೈದರಾಬಾದ್ ಕರ್ನಾಟಕ ) : 19-10-2024 (ಭಾನುವಾರ ಮಧ್ಯಾಹ್ನ) (ನಿರ್ದಿಷ್ಟ ಪತ್ರಿಕೆ)

ಅಧಿಸೂಚನೆ: ಇ(2) 598/ 2023-24 ಪಿಎಸ್‌ಸಿ ದಿನಾಂಕ 15-03-2024 ರಂದು ಅಧಿಸೂಚಿಸಿದ ಹುದ್ದೆಗಳಿಗೆ ಪರೀಕ್ಷೆ

  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ – 97 ಹುದ್ದೆಗಳು (ಹೈದರಾಬಾದ್ ಕರ್ನಾಟಕ) : 16-11-2024 (ಶನಿವಾರ ಮಧ್ಯಾಹ್ನ) ಕನ್ನಡ ಭಾಷಾ ಪರೀಕ್ಷೆ. 17-11-2024 (ಭಾನುವಾರ) (ಸ್ಪರ್ಧಾತ್ಮಕ ಪರೀಕ್ಷೆ)

ಅಧಿಸೂಚನೆ: ಇ(2) 597/ 2023-24 ಪಿಎಸ್‌ಸಿ ದಿನಾಂಕ 15-03-2024 ರಂದು ಅಧಿಸೂಚಿಸಿದ ಹುದ್ದೆಗಳಿಗೆ ಪರೀಕ್ಷೆ ವೇಳಾಪಟ್ಟಿ

  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ – 150 ಹುದ್ದೆಗಳು (ಉಳಿಕೆ ಮೂಲ ವೃಂದ) : 07-12-2024 (ಶನಿವಾರ) (ಮಧ್ಯಾಹ್ನ) ಕನ್ನಡ ಭಾಷಾ ಪರೀಕ್ಷೆ. 08-12-2024 (ಭಾನುವಾರ) (ಸ್ಪರ್ಧಾತ್ಮಕ ಪರೀಕ್ಷೆ)

Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Job Alert: HALನಲ್ಲಿದೆ ವಿವಿಧ ಹುದ್ದೆ; ಬೆಂಗಳೂರಿನಲ್ಲಿ ಉದ್ಯೋಗ ಹುಡುಕುವವರಿಗೆ ಉತ್ತಮ ಅವಕಾಶ

ಬೆಂಗಳೂರು: ಬೆಂಗಳೂರಿನಲ್ಲಿ ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಬಯಸಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (Hindustan Aeronautics Limited)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (HAL India Recruitment 2024). ಟೆಕ್ನಿಷಿಯನ್, ಅಸಿಸ್ಟಂಟ್‌, ಫಿಟ್ಟರ್‌ ಸೇರಿ 28 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜುಲೈ 18 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಡಿಪ್ಲೊಮಾ ಟೆಕ್ನಿಷಿಯನ್ (ಮೆಕ್ಯಾನಿಕಲ್) – 9 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್
ಡಿಪ್ಲೊಮಾ ಟೆಕ್ನಿಷಿಯನ್ (ಎಲೆಕ್ಟ್ರಿಕಲ್)- 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್
ಅಸಿಸ್ಟೆಂಟ್ (ಸಿವಿಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಸಿವಿಲ್ ಎಂಜಿನಿಯರಿಂಗ್
ಟೆಕ್ನಿಷಿಯನ್ (ಫಿಟ್ಟರ್) – 7 ಹುದ್ದೆ, ವಿದ್ಯಾರ್ಹತೆ: ಐಟಿಐ
ಟೆಕ್ನಿಷಿಯನ್ (ಎಲೆಕ್ಟ್ರಿಕಲ್) – 5 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಎಲೆಕ್ಟ್ರಿಷಿಯನ್
ಟೆಕ್ನಿಷಿಯನ್ (ಮೆಷಿನಿಸ್ಟ್) -2 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಮೆಷಿನಿಸ್ಟ್
ಟರ್ನರ್‌ನಲ್ಲಿ ಟೆಕ್ನಿಷಿಯನ್ (ಫಿಟ್ಟರ್) -1 ಹುದ್ದೆ, ವಿದ್ಯಾರ್ಹತೆ: ಐಟಿಐ
ಟೆಕ್ನಿಷಿಯನ್ (ಎಲೆಕ್ಟ್ರಾನಿಕ್ಸ್-ಮೆಕ್ಯಾನಿಕ್ಸ್) -1 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಎಲೆಕ್ಟ್ರಾನಿಕ್ಸ್-ಮೆಕ್ಯಾನಿಕ್ಸ್

ವಯೋಮಿತಿ

ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ-ಎನ್‌ಸಿಎಲ್‌ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ)-10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ)-13 ವರ್ಷ, ಪಿಡಬ್ಲ್ಯುಬಿಡಿ (ಎಸ್‌ಸಿ/ಎಸ್‌ಟಿ)-15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ, ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 22,000 ರೂ.-46,511 ರೂ. ಮಾಸಿಕ ವೇತನವಿದೆ. ಆಯ್ಕೆಯಾದವರಿಗೆ 1 ವರ್ಷ ಅವಧಿಯ ತರಬೇತಿ ನೀಡಲಾಗುತ್ತದೆ. ಉದ್ಯೋಗದ ಸ್ಥಳ: ಬೆಂಗಳೂರು.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://halardc.formflix.com/apply-online)
  • ಅಗತ್ಯ ಮಾಹಿತಿ, ಇಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಹೆಸರು, ವಿಳಾಸ, ಶೈಕ್ಷಣಿಕ ಮಾಹಿಸಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.
  • ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: https://www.hal-india.co.in/ಗೆ ಭೇಟಿ ನೀಡಿ.

HAL India Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Continue Reading

ಹಾಸನ

Dengue Fever: ಹಾಸನದಲ್ಲಿ ಡೆಂಗ್ಯೂಗೆ ಎಂಬಿಬಿಎಸ್‌ ವಿದ್ಯಾರ್ಥಿ ಬಲಿ; ಧಾರವಾಡದಲ್ಲಿ 5 ತಿಂಗಳ ಮಗು ಸಾವು

Dengue Fever: ಹಾಸನದಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿ ಹಾಗೂ ಧಾರವಾಡದಲ್ಲಿ 5 ತಿಂಗಳ ಮಗುವೊಂದು ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Dengue Fever
Koo

ಹಾಸನ: ಹಾಸನದಲ್ಲಿ‌ ಡೆಂಗ್ಯೂಗೆ (Dengue Fever) ಮತ್ತೊಬ್ಬ ಯುವಕ ಬಲಿಯಾಗಿದ್ದಾನೆ. ಎಂಬಿಬಿಎಸ್ ವಿದ್ಯಾರ್ಥಿ ಕುಶಾಲ್ (22) ಡೆಂಗ್ಯು ಜ್ವರದಿಂದ ಮೃತಪಟ್ಟವರು. ಹಾಸನದ ಹೊಳೆನರಸೀಪುರ ‌ತಾಲೂಕಿನ ಹಳ್ಳೀ ಮೈಸೂರು ಸಮೀಪದ ಗೋಹಳ್ಳಿ ಗ್ರಾಮದ ಕುಶಾಲ್‌, ಒಂದು ವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಗುರುವಾರ ರಾತ್ರಿ ಕುಶಾಲ್‌ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತ ಹಾಗೂ ಬಡ ವಿದ್ಯಾರ್ಥಿಯಾಗಿದ್ದ ಕುಶಾಲ್, ಹಾಸನದ ಹಿಮ್ಸ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದ. ಕುಶಾಲ್ ಸಾವನ್ನಪ್ಪಿದ ಆಸ್ಪತ್ರೆಯಲ್ಲೇ ತಾಯಿ ರೇಖಾ ಅವರು ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಯಿ ರೇಖಾ ಮತ್ತು ತಂದೆ ಮಂಜುನಾಥ್ ಮಗನ ಎಂಬಿಬಿಎಸ್ ಕನಸು ಹೊತ್ತಿದ್ದರು. ರೇಖಾ ಟೈಲರ್ ವೃತ್ತಿ ಮಾಡುತ್ತಿದ್ದರೆ, ಮಂಜುನಾಥ್‌ ಅವರು ಶಿಕ್ಷಕ ವೃತ್ತಿಯಲ್ಲಿದ್ದರು. ಆದರೆ ಇದೀಗ ಡೆಂಗ್ಯೂಗೆ ಮಗ ಕುಶಾಲ್‌ ಬಲಿಯಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Road Accident : ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಛಿದ್ರಗೊಂಡ ದಂಪತಿ; ಎಎಸ್‌ಐಗೆ ಬಡಿದ ಅಪರಿಚಿತ ವಾಹನ

ಧಾರವಾಡದಲ್ಲೂ ಡೆಂಗ್ಯೂಗೆ ಮಗು ಬಲಿ

ಧಾರವಾಡದಲ್ಲಿ ಡೆಂಗ್ಯೂ ಜ್ವರಕ್ಕೆ ಮತ್ತೊಂದು ಮಗು ಬಲಿಯಾಗಿದೆ. ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 5 ತಿಂಗಳ ಆರಾಧ್ಯ ಲಮಾಣಿ ಡೆಂಗ್ಯೂಯಿಂದ ಮೃತಪಟ್ಟಿದೆ. ಧಾರವಾಡ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿರುವ ಗೋಪಾಲ್ ಲಮಾಣಿ ಮಗು ಆರಾಧ್ಯ ಮೃತ ದುರ್ದೈವಿ. ಕಳೆದ ಜುಲೈ 15ರಂದು ಜ್ವರದಿಂದ ಬಳಲುತಿದ್ದ ಆರಾಧ್ಯಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಬರದೇ ಮಗು ಮೃತಪಟ್ಟಿದೆ.

ಡೆಂಗ್ಯೂ ಭೀತಿ; ಶಾಲೆ ಸುತ್ತಲ ಕೊಳಚೆ ನೀರು

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹೊತ್ತಿನಲ್ಲಿ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು. ಆದರೆ ಕೊಪ್ಪಳದ ಬೆಟಗೇರಿ ಗ್ರಾಮದಲ್ಲಿ ಶಾಲೆಯ ಸುತ್ತಲೂ ಕೊಳಚೆ ನೀರು ತುಂಬಿದ್ದು, ಮಕ್ಕಳಿಗೆ ಡೆಂಗ್ಯೂ ಜ್ವರ ಕಾಣಿಸಿಕೊಳ್ಳುತ್ತಿದೆ. ಶಾಲೆ ಸುತ್ತಲು ಸ್ವಚ್ಛತೆ ಕಾಪಾಡಲು ಆಗ್ರಹಿಸಿ, ಮಕ್ಕಳ ಪಾಲಕರು ಬೆಟೆಗೇರಿ ಗ್ರಾಮ ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಿದರು. ಬೆಟಗೇರಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುತ್ತಲು ಕೊಳಚೆ ನೀರು ಇದೆ. ಈಗಾಗಲೇ ಕೊಳಚೆಯಿಂದಾಗಿ ನಾಲ್ಕು ಜನರಿಗೆ ಡೆಂಗ್ಯೂ ಕಾಣಿಸಿಕೊಂಡಿದೆ ಎಂದು ಕಿಡಿಕಾರಿದರು.

ಸಾವಿನ ಸಂಖ್ಯೆ 8ಕ್ಕೆ ಏರಿಕೆ

ರಾಜ್ಯಾದ್ಯಂತ ಡೆಂಗ್ಯೂಗೆ 8 ಮಂದಿ ಮೃತಪಟ್ಟಿದ್ದಾರೆ. ಜನವರಿಯಿಂದ ಈವರೆಗೆ (ಜು.18) 85,270 ಮಂದಿ ರಕ್ತ ಮಾದರಿಯನ್ನು ಪರೀಕ್ಷಿಸಿದ್ದು, ಇದರಲ್ಲಿ 11,451 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ. ಇದರಲ್ಲಿ 620 ಸಕ್ರಿಯ ಪ್ರಕರಣಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pooja Khedkar
ದೇಶ12 mins ago

Pooja Khedkar: IAS ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ FIR ದಾಖಲಿಸಿದ UPSC

CM Siddaramaiah
ಕರ್ನಾಟಕ27 mins ago

CM Siddaramaiah: ವಾಲ್ಮೀಕಿ ನಿಗಮ ಅಕ್ರಮಕ್ಕೆ ಸರ್ಕಾರ ಹೊಣೆಯಲ್ಲ; ಚಂದ್ರಶೇಖರನ್‌ ಆತ್ಮಹತ್ಯೆಗೆ ಅಧಿಕಾರಿಗಳು ಕಾರಣ ಎಂದ ಸಿಎಂ!

Ishan Kishan
ಕ್ರಿಕೆಟ್30 mins ago

Ishan Kishan: ಟೀಮ್​ ಇಂಡಿಯಾದಲ್ಲಿ ಇಶಾನ್ ಕಿಶನ್​ಗೆ ಬಾಗಿಲು ಬಂದ್​?

Krishan Kumar Daughter Tishaa Dies Of Cancer At 21
ಬಾಲಿವುಡ್38 mins ago

Krishan Kumar: ಕೇವಲ 21ನೇ ವಯಸ್ಸಿಗೆ ನಿಧನ ಹೊಂದಿದ ‘ಅನಿಮಲ್’ ಸಿನಿಮಾ ನಿರ್ಮಾಪಕನ ಮಗಳು

Indian Navy Recruitment
ಉದ್ಯೋಗ52 mins ago

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ 741 ಹುದ್ದೆ; 10ನೇ ತರಗತಿ ಪಾಸಾದವರಿಗೂ ಇದೆ ಅವಕಾಶ

Microsoft Windows Outage
ಪ್ರಮುಖ ಸುದ್ದಿ59 mins ago

Microsoft Windows Outage: ಮೈಕ್ರೊಸಾಫ್ಟ್​​ ಸಮಸ್ಯೆ ; ಬೆಂಗಳೂರು ಸೇರಿದಂತೆ ದೇಶದ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲಕಲ್ಲೋಲ

Dengue Fever
ಬೆಂಗಳೂರು1 hour ago

Dengue Fever : ಡೆಂಗ್ಯೂ ಭೀತಿ- ಸೊಳ್ಳೆಗಳ ನಾಶಕ್ಕೆ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Accident Video
Latest1 hour ago

Accident Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌

Indian Olympics History
ಕ್ರೀಡೆ1 hour ago

Indian Olympics History: ಭಾರತಕ್ಕೆ ಒಲಿಂಪಿಕ್ಸ್​ನಲ್ಲಿ ವೈಯಕ್ತಿಕ ಚಿನ್ನ ಗೆದ್ದ ಮೊದಲ ಸಾಧಕ ಅಭಿನವ್‌ ಬಿಂದ್ರಾ

Sexual Abuse
Latest1 hour ago

Sexual Abuse : ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌