Road Accident: ಬೈಕ್‌ಗಳು ಮುಖಾಮುಖಿ ಡಿಕ್ಕಿ, ಇಬ್ಬರು ಸಾವು, ಇಬ್ಬರು ಗಂಭೀರ - Vistara News

ಬೆಳಗಾವಿ

Road Accident: ಬೈಕ್‌ಗಳು ಮುಖಾಮುಖಿ ಡಿಕ್ಕಿ, ಇಬ್ಬರು ಸಾವು, ಇಬ್ಬರು ಗಂಭೀರ

Road Accident: ಮೃತರನ್ನು ಬಸವರಾಜ ಪ್ರಭುನವರ್(48), ಯಲ್ಲಪ್ಪ ಕೊರವಿನಕೊಪ್ಪ( 46) ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಬೈಕ್ ಸವಾರರಿಗೆ ಗಂಭೀರ ‌ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

VISTARANEWS.COM


on

road accident savadatti belagavi news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಬೈಕ್‌ಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ‌ಇಬ್ಬರು ಸವಾರರು ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಬಳಿ ಘಟನೆ ನಡೆದಿದೆ.

ಮೃತರನ್ನು ಬಸವರಾಜ ಪ್ರಭುನವರ್(48), ಯಲ್ಲಪ್ಪ ಕೊರವಿನಕೊಪ್ಪ( 46) ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಬೈಕ್ ಸವಾರರಿಗೆ ಗಂಭೀರ ‌ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Road Rage: ರಸ್ತೆಯಲ್ಲಿ ಗೂಂಡಾಗಿರಿ, ಇನೋವಾ ಚಾಲಕನ ಮೇಲೆ ಫಾರ್ಚುನರ್‌ನಲ್ಲಿದ್ದ ತಂಡದಿಂದ ತೀವ್ರ ಹಲ್ಲೆ

ಬೆಂಗಳೂರು: ತಮ್ಮ ಐಷಾರಾಮಿ ಫಾರ್ಚುನರ್ ಕಾರು (Fortuner Car) ಹೋಗೋಕೆ ದಾರಿ ಬಿಡಲಿಲ್ಲ ಎಂದು ಬಾಡಿಗೆ ಇನೋವಾ ಕಾರಿನ (Innova Car) ಚಾಲಕನ ಮೇಲೆ ಒಂದು ತಂಡ ಯದ್ವಾತದ್ವಾ ಹಲ್ಲೆ (Assault Case) ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಧಾನಿಯಲ್ಲಿ ನಡೆಯುತ್ತಿರುವ ರೋಡ್‌ ರೇಜ್‌ (Road Rage) ಪ್ರಕರಣಗಳಿಗೆ ಇದು ಇನ್ನೊಂದು ಸೇರ್ಪಡೆ.

ರಸ್ತೆಯಲ್ಲಿ ಸಿನಿಮೀಯ ರೀತಿಯಲ್ಲಿ ಚಾಲಕನ ಮೇಲೆ ತಂಡ ಹಲ್ಲೆ ನಡೆಸಿದೆ. ಕಾಲಿನಿಂದ ತುಳಿದು, ಕರಾಟೆ ಕಿಕ್‌ ನೀಡಿ ಡ್ರೈವರ್‌ನನ್ನು ಗಾಯಗೊಳಿಸಲಾಗಿದೆ. ಈ ಘಟನೆ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಫಾರ್ಚುನರ್ ಕಾರಿನಲ್ಲಿ ಇದ್ದ ಪುಂಡರ ಗುಂಪು, ಮುಂದೆ ಇದ್ದ ಇನೋವಾ ಕಾರು ಚಾಲಕ ತಮ್ಮ ವಾಹನ ಮುಂದೆ ಹೋಗಲು ಬಿಟ್ಟಿಲ್ಲ ಎಂದು ಆತನನ್ನು ಹೊರಗೆಳೆದು ಅವನ ಮೇಲೆ ಹಲ್ಲೆ ನಡೆಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಡಾ. ಪ್ರಜ್ವಿತ್ ರೈ ಎಂಬವರು ಪೋಸ್ಟ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಸಹಾಯಕನ ಮೇಲೆ ಹೀಗೆ ಹಲ್ಲೆ ಮಾಡಲಾಗಿದೆ. ಈ ರೀತಿ ಅಸಹಾಯಕರ ಮೇಲೆ ದರ್ಪ ತೋರುವವರಿಗೆ ಶಿಕ್ಷೆ ಆಗಬೇಕು ಎಂದು ಪೋಸ್ಟ್ ಹಾಕಿದ್ದಾರೆ. ಪೋಸ್ಟ್‌ಗೆ ʼದರ್ಶನ್ʼ ಮತ್ತು ʼರೇಣುಕಾಸ್ವಾಮಿʼ ಹೆಸರಿನ ಹ್ಯಾಶ್‌ಟ್ಯಾಗ್ ಹಾಕಲಾಗಿದೆ. ಸದ್ಯ ಘಟನೆ ಸಂಬಂಧ ಪೊಲೀಸರು ಮಾಹಿತಿ ಪಡೆದಿದ್ದಾರೆ.

ಶಂಕಿತ ಡೆಂಗ್ಯು ಜ್ವರಕ್ಕೆ ಯುವತಿ ಸಾವು, ಮರಣ ಮೃದಂಗ ಬಾರಿಸುತ್ತಿರುವ ಜ್ವರ

ದಾವಣಗೆರೆ: ಜ್ವರದಿಂದ ಬಳಲುತ್ತಿದ್ದ ಯುವತಿಯೊಬ್ಬರು ಸಾವಿಗೀಡಾಗಿದ್ದಾರೆ. ಡೆಂಗ್ಯು ಜ್ವರದಿಂದ ಸಾವನ್ನಪ್ಪಿರುವ ಶಂಕೆ ಇದ್ದು, ಪರೀಕ್ಷಾ ವರದಿ ಬರಬೇಕಿದೆ.

ರೇಖಾ ಎನ್ (19) ಸಾವನ್ನಪ್ಪಿದ ಯುವತಿ. ದಾವಣಗೆರೆ ಜಿಲ್ಲೆಯ‌ ಜಗಳೂರ ಪಟ್ಟಣದ ರಾಮಾಲಯ ರಸ್ತೆ ನಿವಾಸಿ ರೇಖಾ ಕಳೆದ ಕೆಲ ದಿನಗಳ ಹಿಂದೆ ನಾಮಕರಣ ಶಾಸ್ತ್ರ ಕಾರ್ಯಕ್ರಮಕ್ಕೆ ಬಳ್ಳಾರಿಗೆ ತೆರಳಿದ್ದರು. ಅಲ್ಲಿ ತೀವ್ರ ಜ್ವರದಿಂದ ಬಳಲಿದ್ದ ರೇಖಾಗೆ ಬಳ್ಳಾರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಬಳ್ಳಾರಿಯಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಧಿಕೃತ ವರದಿ‌ ನಿರೀಕ್ಷಿಸಲಾಗಿದೆ. ಈ ಬಗ್ಗೆ ಜಗಳೂರು ತಾಲೂಕು ವೈದ್ಯಾಧಿಕಾರಿ ಡಾ. ವಿಶ್ವನಾಥ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Sexual Abuse : ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

Karnataka rain : ವ್ಯಾಪಕವಾಗಿ ಸುರಿಯುತ್ತಿರುವ ಮಳೆಯು ನಾನಾ ಅವಾಂತರವನ್ನೇ (Rain Effect) ಸೃಷ್ಟಿಸಿದೆ. ಚಿಕ್ಕಮಗಳೂರಲ್ಲಿ ಹಳ್ಳ ದಾಟಲು ಹೋದ ಜಾನುವಾರುವೊಂದು ನೀರುಪಾಲಾಗಿದೆ. ಜೋರಾಗಿ ಬೀಸಿದ ಬಿರುಗಾಳಿ ವಿಂಡ್‌ ಫ್ಯಾನ್‌ ನೆಲಕಚ್ಚಿದೆ.

VISTARANEWS.COM


on

By

karnataka Rain
Koo

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ ಭಯಂಕರ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು (Karnataka Rain) ಉಕ್ಕಿ ಉರಿಯುತ್ತಿದೆ. ಹೀಗೆ ಉಕ್ಕಿ ಉರಿಯುತ್ತಿದ್ದ ನೀರಿನಲ್ಲಿ ಹಳ್ಳ ದಾಟಲು ಹೋದ ಎಮ್ಮೆಯೊಂದು ನೀರುಪಾಲಾಗಿದೆ. ಕಳಸ ತಾಲೂಕಿನ ಮಾವಿನ ಹೊಲ ಬಳಿ ಘಟನೆ ನಡೆದಿದೆ. ಜನರ ಕಣ್ಣೆದುರೇ ರಭಸವಾದ ಹಳ್ಳದಲ್ಲಿ ಜಾನುವಾರು ಕೊಚ್ಚಿ ಹೋಗಿದೆ. ಈವರೆಗೂ ಕಳಸ ತಾಲೂಕಿನಲ್ಲೇ ಮೂರು ಹಸುಗಳು ಬಲಿಯಾಗಿವೆ.

ಬಳ್ಳಾರಿಯಲ್ಲಿ ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಎರಡು ದಿನಗಳಿಂದ ಬೀಸುತ್ತಿರುವ ಬಿರುಗಾಳಿಗೆ ತಡರಾತ್ರಿ ವಿಂಡ್ ಫ್ಯಾನ್ ನೆಲಕ್ಕೆ ಉರುಳಿದೆ. ನಿನ್ನೆ ಶುಕ್ರವಾರ ತಡರಾತ್ರಿ ಸಂಡೂರಿನ ಹೀರಾಳ್ ಬಳಿ ಇರುವ ಬೃಹತ್ ವಿಂಡ್ ಫ್ಯಾನ್ ಧರೆಗೆ ಉರುಳಿದೆ. ತಡ ರಾತ್ರಿಯಾಗಿರುವುದರಿಂದ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಜಿಂದಾಲ್ ಕಂಪನಿಗೆ ಸೇರಿದ ವಿಂಡ್ ಫ್ಯಾನ್ ಬಿದ್ದ ಪರಿಣಾಮ ಕೆಲಸ ತೆರಳುವವರಿಗೆ ತೊಂದರೆ ಆಯ್ತು. ವಿದ್ಯುತ್ ಉತ್ಪಾದನೆಗಾಗಿ ಜಿಂದಾಲ್ ಕಂಪನಿಯವರು ರೈತರ ಹೊಲದಲ್ಲಿ ವಿಂಡ್‌ ಫ್ಯಾನ್‌ ಅಳವಡಿಸಿದ್ದರು. ಚೋರನೂರು ಹೋಬಳಿಯಲ್ಲಿ ಬೃಹತ್ ಪ್ರಮಾಣದ ವಿಂಡ್ ಫ್ಯಾನ್‌ಗಳನ್ನು ಅಳವಡಿಸಲಾಗಿದೆ.

ಬೆಳೆಗಳನ್ನು ನುಂಗಿ ಹಾಕಿದ ಬಳ್ಳಾರಿ ನಾಲೆ

ಬಳ್ಳಾರಿ ನಾಲೆಯ ರುದ್ರ ನರ್ತನವನ್ನು ಡ್ರೋಣ್ ಕಣ್ಣು ಬಿಚ್ಚಿಟ್ಟಿದೆ. ಹೊಲ ಗದ್ದೆಗಳು ಹಾಗೂ ಅದರಲ್ಲಿದ್ದ ಬೆಳೆಗಳು ನಾಶವಾಗಿವೆ. ವಡಗಾಂವಿ, ಶಹಪೂರ, ಅನಗೋಳ, ಯಳ್ಳೂರು ಗ್ರಾಮದ ರೈತರ ಬೆಳೆ ಸರ್ವನಾಶವಾಗಿವೆ. ಸಾವಿರಾರು ಹೆಕ್ಟರ್ ಪ್ರದೇಶದಲ್ಲಿ ಬೆಳೆದ ಬೆಳೆ ನೀರು ಪಾಲಾಗಿದೆ. ಪಕ್ಕದಲ್ಲಿಯೇ ಇರುವ ಮನೆಗಳಿಗೂ ನೀರು ನುಗ್ಗುವ ಆತಂಕ ಎದುರಾಗಿದೆ. ಯಾವಾಗ ಮನೆಗೆ ನೀರು ನುಗ್ಗುತ್ತೊ ಎಂಬ ಆತಂಕದಲ್ಲಿಯೇ ಜನರು ದಿನದೂಡುತ್ತಿದ್ದಾರೆ. ಬಳ್ಳಾರಿ ನಾಲೆಯ ನೀರು ಎಲ್ಲ ಕಡೆ ನುಗ್ಗಿ ಆತಂಕ ಸೃಷ್ಟಿಸಿದೆ.

ದಡಕ್ಕೆ ಅಪ್ಪಳಿಸುತ್ತಿರುವ ಬೃಹತ್ ಗಾತ್ರದ ಅಲೆಗಳು

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮಳೆಯ ಜತೆಗೆ ಸಮುದ್ರದ ಅಲೆಗಳು ಅಬ್ಬರಿಸುತ್ತಿದೆ. ಕಡಲತೀರದಲ್ಲಿ ದಡಕ್ಕೆ ಬೃಹತ್ ಗಾತ್ರದ ಅಲೆಗಳು ಅಪ್ಪಳಿಸುತ್ತಿದೆ. ಉಡುಪಿ ತಾಲೂಕಿನ ಮಲ್ಪೆ ಸಮೀಪದ ಗುಜ್ಜರಬೆಟ್ಟುವಿನಲ್ಲಿ ರಕ್ಕಸ ಗಾತ್ರದ ಅಲೆಗೆ ತಡೆಗೋಡೆ, ತೆಂಗಿನ ಮರ ಸಮುದ್ರ ಪಾಲಾಗಿದೆ. ಈಗಾಗಲೇ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನೂ ನೀಡಲಾಗಿದೆ.

ಇದನ್ನೂ ಓದಿ: Murder Case : ಪತ್ನಿಗೆ ಗುಂಡು ಹಾರಿಸಿ ಕೊಂದು ಪೊಲೀಸರಿಗೆ ಶರಣಾದ ಪತಿ!

ಚೋರ್ಲಾ ಮಾರ್ಗದಲ್ಲಿ ಬಿರುಕು ಬಿಟ್ಟ ಸೇತುವೆ

ಗೋವಾ ಮಾರ್ಗವಾಗಿ ತೆರಳುವ ವಾಹನ ಸವಾರರಿಗೆ ಬೆಳಗಾವಿ ಪೊಲೀಸರು ಬದಲಾವಣೆ ಸೂಚಿಸಿದ್ದಾರೆ. ಚೋರ್ಲಾ ಮಾರ್ಗದಲ್ಲಿ ಸೇತುವೆ ಬಿರುಕುಗೊಂಡಿರುವ ಹಿನ್ನೆಲೆಯಲ್ಲಿ ಚೋರ್ಲಾ ಮಾರ್ಗದ ಬದಲಾಗಿ ಖಾನಾಪುರ ಮಾರ್ಗವಾಗಿ ಪ್ರಯಾಣಿಸಲು ಸೂಚನೆ ನೀಡಲಾಗಿದೆ. ಜಾಂಬೋಟಿ ಚೋರ್ಲಾ ಮಾರ್ಗದಲ್ಲಿ ಸತತ ಮಳೆ ಹಿನ್ನೆಲೆಯಿಂದಾಗಿ ಪೀರಣವಾಡಿ ಕ್ರಾಸ್‌ನಿಂದ ಖಾನಾಪುರ ಮಾರ್ಗವಾಗಿ ಚಲಿಸಲು ಸೂಚನೆ ನೀಡಲಾಗಿದೆ.

ಚಿಕ್ಕೋಡಿ: ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮುಂದುವರೆದ ಮಳೆ ಅಬ್ಬರದಿಂದಾಗಿ ನಿಪ್ಪಾಣಿ ತಾಲೂಕಿನ ಹಲವು ಗ್ರಾಮಗಳಿಗೆ ನೆರೆಯ ಆತಂಕ ಶುರುವಾಗಿದೆ. ಅಪಾಯದ ಮಟ್ಟ ಮೀರಿ ದೂದಗಂಗಾ ನದಿ ಹರಿಯುತ್ತಿದ್ದು, ಕಾರದಗಾ ಗ್ರಾಮದ ಬಂಗಾಲಿಬಾಬಾ ದರ್ಗಾ ಜಲಾವೃತಗೊಂಡಿದೆ. ನದಿ ನೀರು ಕ್ರಮೇಣ ಏರಿಕೆ ಆಗುತ್ತಿದ್ದು, ಗ್ರಾಮಕ್ಕೆ ನುಗ್ಗುವ ಆತಂಕವಿದೆ.

ಇತ್ತ ಬೆಳಗಾವಿ ನಗರದ ಹಲವು ಬಡಾವಣೆ ಜನರು ಆತಂಕದಲ್ಲೇ ದಿನದೂಡುವಂತಾಗಿದೆ. ಈಗಾಗಲೇ ಹೊಲ ಗದ್ದೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಸಿಯಾಗಿದೆ. ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ವಡಗಾಂವಿ ಅನಗೋಳ , ಶಹಪೂರ ಯಳ್ಳೂರು ಗ್ರಾಮಗಳಿಗೂ ಆತಂಕ ಹೆಚ್ಚಿದೆ. 2,500ಕ್ಕೂ ಹೆಚ್ಚು ಎಕರೆ ಪ್ರದೇಶ ನೀರಲ್ಲಿ ಮುಳುಗಿದೆ. ಸದ್ಯ ಭತ್ತ, ಕಬ್ಬು, ಜೋಳ ಬೆಳೆಗಳು ನೀರಲ್ಲಿ ತೇಲುತ್ತಿದೆ. ಪ್ರತಿ ವರ್ಷವೂ ಬಳ್ಳಾರಿ ನಾಲೆಯಿಂದ ಸಾವಿರಾರು ಎಕರೆ ಪ್ರದೇಶಕ್ಕೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗುತ್ತಿದೆ.

ಸೇತುವೆ ಮುಳುಗಡೆ- ಗ್ರಾಮಗಳ ಸಂಪರ್ಕ ಕಡಿತ

ಹಾವೇರಿಯ ಕುಮದ್ವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ಮೂರು ಗ್ರಾಮಗಳ ಸಂಪರ್ಕ ಸೇತುವೆ ಕಡಿತದಿಂದಾಗಿ ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಎಲಿವಾಳ ಮತ್ತು ರಟ್ಟಿಹಳ್ಳಿಯ ಸೇತುವೆ ನೀರಿನಲ್ಲಿ ಮುಳುಗಿ ಸಂಪರ್ಕ ಕಡಿತಗೊಂಡಿದೆ. ಯಡಗೋಡ ಮತ್ತು ಬಡಸಂಗಾಪುರ ಸಂಪರ್ಕ ಸೇತುವೆ ಬಂದ್ ಆಗಿದೆ. ಸೇತುವೆ ಮೇಲೆ ಗ್ರಾಮಸ್ಥರು ಓಡಾಡದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗಾಳಿ ಸಹಿತ ಜೋರು ಮಳೆ; 11 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather Forecast: ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿ ಸುತ್ತಮುತ್ತ ಭಾರಿ ಮಳೆಯಾಗಲಿದ್ದು, 11 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜತೆಗೆ ಹಾಸನದ ಕೆಲ ಶಾಲೆಗಳಿಗೆ ರಜೆ (Rain news) ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ (Heavy Rain) ಮಳೆಯಾಗಲಿದ್ದು, ಮುಂಜಾಗ್ರತಾ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ (Holiday) ಮಾಡಲಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು 28 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಗಾಳಿ ಸಹಿತ ಭಾರಿ ಮಳೆ- ರೆಡ್‌ ಅಲರ್ಟ್‌ ಘೋಷಣೆ

ನಿರಂತರ ಗಾಳಿ ಜತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

ಶನಿವಾರ ಹಾಸನದ ಕೆಲವುಶಾಲೆಗಳಿಗೆ ರಜೆ ಘೋಷಣೆ

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಆರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕಿನ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ನೀಡಲಾಗಿದೆ. ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ಎಚ್ ಕೆ ಪಾಂಡು ಆದೇಶ ಹೊರಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ವಾರಾಂತ್ಯದಲ್ಲಿ ಭಾರಿ ಮಳೆ ಎಚ್ಚರಿಕೆ, ಶಾಲೆಗಳಿಗೆ ರಜೆ ಘೋಷಣೆ

Karnataka Weather Forecast : ವಾಯುಭಾರ ಕುಸಿತದಿಂದಾಗಿ ವಾರಾಂತ್ಯದಲ್ಲಿ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಶನಿವಾರ ಹಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಟ್ರಫ್ ಹಾಗೂ ವಾಯುಭಾರ ಉಂಟಾಗಿರುವ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast ) ಮುನ್ಸೂಚನೆಯನ್ನು ನೀಡಿದೆ. ಮಳೆಯೊಂದಿಗೆ ಗಾಳಿ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಶನಿವಾರದಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ.

ಇನ್ನೂ ಹಾಸನ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇನ್ನೂ ಭಾನುವಾರದಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯ ವೇಗವು (30-40 ಕಿಮೀ) ವಿಪರೀತ ಮಳೆಯಾಗಲಿದೆ. ಒಳನಾಡಿನ ಬೆಳಗಾವಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು 35-45 ಕಿ.ಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ಮತ್ತು 20 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಕೊಚ್ಚಿ ಹೋದ ಕಾರ್ಮಿಕ; ಮನೆಯ ಗೋಡೆ ಕುಸಿದು ಗೃಹಿಣಿ ಸಾವು

ಶನಿವಾರ ಹಾಸನದ ಕೆಲವುಶಾಲೆಗಳಿಗೆ ರಜೆ ಘೋಷಣೆ

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಆರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕಿನ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ನೀಡಲಾಗಿದೆ. ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ಎಚ್ ಕೆ ಪಾಂಡು ಆದೇಶ ಹೊರಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಕೊಚ್ಚಿ ಹೋದ ಕಾರ್ಮಿಕ; ಮನೆಯ ಗೋಡೆ ಕುಸಿದು ಗೃಹಿಣಿ ಸಾವು

Karnataka Rain : ಹಾಸನದಲ್ಲಿ ಉಕ್ಕಿ ಹರಿಯುತ್ತಿದ್ದ ಹೊಳೆ ದಾಟಲು ಹೋದ ಕೂಲಿ ಕಾರ್ಮಿಕ ಕೊಚ್ಚಿ ಹೋಗಿದ್ದರೆ, ಇತ್ತ ಮೈಸೂರಿನಲ್ಲಿ ಮಳೆಗೆ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

VISTARANEWS.COM


on

By

Karnataka Rain
Koo

ಉಡುಪಿ/ಮೈಸೂರು: ಭಾರಿ ಮಳೆಗೆ (Karnataka Rain) ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಕೂಲಿಕಾರ್ಮಿಕ ಕೊಚ್ಚಿ ಹೋಗಿದ್ದಾರೆ. ಉಡುಪಿಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಚಿರೋಳ್ಳಿ ಎಂಬಲ್ಲಿ ಘಟನೆ ನಡೆದಿದೆ. ತುಮಕೂರು ಮೂಲದ ಆನಂದ್ (45) ನೀರು ಪಾಲಾದವರು. ಕೆಲಸಕ್ಕೆ ತೆರಳಲು ಸೀತ ನದಿಯ ಉಪನದಿಯನ್ನು ದಾಟುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಕಾಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಹಗ್ಗದ ಸಹಾಯದಿಂದ ಹೊಳೆ ದಾಟುವಾಗ ಹಗ್ಗ ತುಂಡಾಗಿದೆ. ಪರಿಣಾಮ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ನಾಡ್ಪಾಲಿನ ಮನೋರಮ ಹೆಗ್ಡೆ ಎಂಬುವರ ತೋಟದಲ್ಲಿ ಕೂಲಿಕಾರ್ಮಿಕರಾಗಿ ದುಡಿಯುತ್ತಿದ್ದರು. ಘಟನಾ ಸ್ಥಳಕ್ಕೆ ಹೆಬ್ರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಮಳೆಗೆ ಮೊದಲ ಬಲಿ

ಮೈಸೂರು ಜಿಲ್ಲೆಯಲ್ಲಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹೇಮಲತಾ (22) ಮೃತ ದುರ್ದೈವಿ. ಅವಘಡದಲ್ಲಿ ತಾಯಿ ಮೃತಪಟ್ಟರೆ ಜತೆಗಿದ್ದ ಮಗುವನ್ನು ರಕ್ಷಣೆ ಮಾಡಲಾಗಿದೆ. ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಮನೆ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲಿ ಭಾರಿ ಗಾಳಿ ಮಳೆಗೆ ಮನೆ ನೆಲಸಮ

ಚಿಕ್ಕಮಗಳೂರಿನಲ್ಲಿ ಅವಾಂತರಗಳು ಮುಂದುವರಿದಿದ್ದು, ಭಾರಿ ಗಾಳಿ ಮಳೆಗೆ ಮನೆಯೊಂದು ನೆಲಸಮವಾಗಿದೆ. ಗೋಡೆ ಕುಸಿದು ಮನೆಯ ಚಾವಣಿ ಧ್ವಂಸಗೊಂಡಿದೆ. ಮೂಡಿಗೆರೆ ತಾಲೂಕಿನ ಬೆಟ್ಟಿಗೆರಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಸುಂದರ್ ಎಂಬುವವರ ಮನೆಗೆ ಹಾನಿಯಾಗಿದ್ದು, ಮನೆಯಲ್ಲಿದ್ದ ಪೀಠೋಪಕರಣಗಳು, ಆಹಾರ ಪದಾರ್ಥ ನಾಶವಾಗಿವೆ. ಮನೆಯ ಗೋಡೆ ಕುಸಿದು ಸ್ವಲ್ಪದರಲ್ಲೇ ಕುಟುಂಬ ಸದಸ್ಯರು ಪಾರಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹಿರೇಕೊಳಲೆ, ಒಡೆಯರ ಪುರ ಗ್ರಾಮದಲ್ಲಿ ಗ್ರಾಮದ ದ್ಯಾವಯ್ಯ, ಲಕ್ಷ್ಮಮ್ಮ ಎಂಬುವರಿಗೆ ಸೇರಿದ ಮನೆಗೂ ಹಾನಿಯಾಗಿದೆ. ಜಿಲ್ಲೆಯಾದ್ಯಂತ ಮಳೆಗೆ 190ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಹಾಸನದಲ್ಲೂ ಕುಸಿದು ಬಿದ್ದ ಮನೆ ಗೋಡೆ

ಇತ್ತ ಹಾಸನ ಜಿಲ್ಲೆಯಲ್ಲೂ ಮಳೆ ಅಬ್ಬರಕ್ಕೆ ಜನರು ನಲುಗಿ ಹೋಗಿದ್ದಾರೆ. ವ್ಯಾಪಕವಾಗಿ ಸುರಿದ ಮಳೆಗೆ ಮನೆಯ ಗೋಡೆಯು ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ವಿಶೇಷ ಚೇತನ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಕಲೇಶಪುರ ತಾಲೂಕಿನ ಚಂಗಡಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ನಂದೀಶ್ ಮನೆಯಲ್ಲಿ ಒಬ್ಬರೇ ಇದ್ದಾಗ ಈ ಅವಘಡ ನಡೆದಿದೆ. ಮನೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದ್ದು, ವಾಸದ ಮನೆ ಕಳೆದುಕೊಂಡು ನಂದೀಶ್‌ ಕಂಗಾಲಾಗಿದ್ದಾರೆ.

ಇದನ್ನೂ ಓದಿ: Dengue Fever : ಡೆಂಗ್ಯೂ ಭೀತಿ- ಸೊಳ್ಳೆಗಳ ನಾಶಕ್ಕೆ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಹೆದ್ದಾರಿ ಮಧ್ಯೆ ನೆಲ ಕಚ್ಚಿದ ಬೃಹತ್‌ ಮರ

ರಾಜ್ಯ ಹೆದ್ದಾರಿಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದ್ದು, ಸೊರಬ – ಆನವಟ್ಟಿ – ಶಿರಸಿ ಸಂಚಾರ ವ್ಯತ್ಯಯವಾಗಿದೆ. ಒಂದು ಗಂಟೆಗೂ ಹೆಚ್ಚು ಕಾಲ ವಾಹನಗಳು ನಿಂತಲೇ ನಿಲ್ಲುವಂತಾಯಿತು. ಸ್ಥಳಕ್ಕೆ ಅರಣ್ಯಾಧಿಕಾರಿ ತಂಡ ಭೇಟಿ ನೀಡಿ ಮರ ತೆರವು ಮಾಡಿದ್ದಾರೆ. ಶಿವಮೊಗ್ಗದಲ್ಲಿ ಮಳೆಯು ಅಬ್ಬರಿಸುತ್ತಿದ್ದು, ತುಂಗಾ ನದಿ ಉಕ್ಕಿ ಹರಿಯುತ್ತಿದೆ. ಅಪಾಯ ಮಟ್ಟ ಮೀರಿ ನೀರು ಹರಿಯುತ್ತಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಹೆಚ್ಚಿಸಿದೆ. ಕ್ಷಣ ಕ್ಷಣಕ್ಕೂ ತುಂಗಾ ನದಿಯ ಹರಿವಿನ ಮಟ್ಟ ಏರಿಕೆ ಆಗುತ್ತಿದ್ದು, ಶಿವಮೊಗ್ಗ ನಗರದ ರಾಜೀವ್ ಗಾಂಧಿ ಬಡಾವಣೆ ಜನರು ಆತಂಕದಲ್ಲೇ ದಿನಕಳೆಯುವಂತಾಗಿದೆ.

ಅದ್ಯಪಾಡಿಯಲ್ಲಿ ನೆರೆ ಸೃಷ್ಟಿ

ದಕ್ಷಿಣ ಕನ್ನಡದ ಮಂಗಳೂರಿನ ಅದ್ಯಪಾಡಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಫಲ್ಗುಣಿ ನದಿಯಲ್ಲಿ ನೆರೆ ಬಂದು ಗ್ರಾಮಕ್ಕೆ ನೀರು ನುಗ್ಗಿದ್ದು, ಅದ್ಯಪಾಡಿಯಲ್ಲಿ 35 ಮನೆಗಳಿಗೆ ಜಲ ದಿಗ್ಬಂಧನ ಹಾಕಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಂತ್ರಸ್ತರ ಮನೆಗಳಿಗೆ ದೋಣಿಯಲ್ಲಿ ತೆರಳಿ ಪರಿಶೀಲನೆ ನಡೆಸಿದ್ದರು. ನೆರೆ ನೀರಿನಿಂದ ಸಂತ್ರಸ್ತರಾಗಿರುವ 80 ಮಂದಿಯ ಸ್ಥಳಾಂತರಕ್ಕೆ ಸೂಚನೆ ನೀಡಿದರು.

ನದಿ ದಾಟಲು ಎಮ್ಮೆ ಬಾಲವೇ ಆಸರೆ

ನದಿ ದಾಟಲು ಎಮ್ಮೆ ಬಾಲವೇ ರೈತರಿಗೆ ಆಸರೆಯಾಗಿದ್ದು, ಈ ದೃಶ್ಯ ಎದೆ ಝೆಲ್ ಎನಿಸುತ್ತದೆ. ಜೀವ ಪಣಕ್ಕಿಟ್ಟು ರೈತರು ಮಲಪ್ರಭಾ ನದಿ ದಾಟುತ್ತಿದ್ದಾರೆ. ಹತ್ತು ಸಾವಿರ ಕ್ಯೂಸೆಕ್‌ನಷ್ಟು ನೀರಿನ ಹರಿವಿನಲ್ಲಿ ನದಿ ದಾಟುತ್ತಿದ್ದು, ಬೆಳಗಾವಿಯ ಹುಣಶೀಕಟ್ಟಿ ಗ್ರಾಮದ ರೈತರು ಗೋಳಾಟ ಹೇಳತಿರದು. ದಿನವೂ ಪ್ರಾಣ ಕೈಯಲ್ಲಿ ಹಿಡಿದುಕೊಂಡು ನದಿ ದಾಟಿ ಜಮೀನಿಗೆ ಹೋಗುವ ಪರಿಸ್ಥಿತಿ ಇದೆ.

ಯುವಕರು ಎಮ್ಮೆಯೊಟ್ಟಿಗೆ ಈಜಿ ದಡ ಸೇರಿ ಜಮೀನಿನಲ್ಲಿ ಕೆಲಸ ಮಾಡಿದರೆ, ಮಹಿಳೆಯರು ತೆಪ್ಪದಲ್ಲಿ ನದಿ ದಾಟಿ ಜಮೀನಿಗೆ ಹೋಗುತ್ತಾರೆ. ಕಾರವಾರದಿಂದ ಈಗಾಗಲೇ ಒಂದು ಬೋಟ್ ನೀಡಿದರೂ ಪ್ರಯೋಜನವಾಗಿಲ್ಲ. ಬೋಟ್ ನಿರ್ವಹಣೆ ಮತ್ತು ಸಿಬ್ಬಂದಿಗೆ ಸಂಬಳ ಕೊಡಲು ಆಗದೇ ಸ್ಥಗಿತಗೊಂಡಿದೆ. ಹೊಲಗದ್ದಗಳಿಗೆ ಹೋಗುವುದಕ್ಕೆ ಇಲ್ಲಿ ತೆಪ್ಪವೇ ಆಸರೆಯಾಗಿದೆ. ಡಿಸೇಲ್ ಬೋಟ್ ಇದ್ದರೂ ಪ್ರಯೋಜನವಿಲ್ಲ. ಹೀಗಾಗಿ ಅನಿವಾರ್ಯವಾಗಿ ತೆಪ್ಪದಲ್ಲಿಯೇ ಹೊಲಗದ್ದೆಗಳಿಗೆ ತೆರಳುವಂತಾಗಿದೆ.

ಕುಮಟಾದಲ್ಲೂ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯಾಟಕ್ಕೆ ಈಗಾಗಲೇ ಶಿರೂರು ಗುಡ್ಡ ಕುಸಿದಿದೆ. ಇದೀಗ ಕುಮಟಾ ಭಾಗದಲ್ಲೂ ಗುಡ್ಡ ಕುಸಿದಿದೆ. ಕುಮಟಾ-ಸಿದ್ದಾಪುರ ಹೆದ್ದಾರಿಯ ಉಳ್ಳೂರುಮಠ ರಸ್ತೆಗೆ ಧರೆ ಕುಸಿದಿದೆ. ನೂರು ಮೀಟರ್ ಎತ್ತರದಿಂದ ಗುಡ್ಡದ ಮಣ್ಣು, ಮರವು ಕುಸಿದು ಹೆದ್ದಾರಿಗೆ ಬಿದ್ದಿದೆ. ಹೀಗಾಗಿ ಕುಮಟಾ-ಸಿದ್ದಾಪುರ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Shami-Sania Mirza
ಕ್ರೀಡೆ4 mins ago

Shami-Sania Mirza: ಸಾನಿಯಾ ಮಿರ್ಜಾ ಜತೆ ಮದುವೆ?; ಮೊದಲ ಬಾರಿಗೆ ಸ್ಪಷ್ಟನೆ ಕೊಟ್ಟ ಶಮಿ

Viral Video
ವೈರಲ್ ನ್ಯೂಸ್18 mins ago

Viral Video: ನೋಡ ನೋಡ್ತಿದ್ದಂತೆ ಕುಸಿದು ಬಿತ್ತು ಕ್ಲಾಸ್‌ರೂಂ ಗೋಡೆ; ಒಳಗಿದ್ದ ಮಕ್ಕಳ ಕತೆ ಏನಾಯ್ತು ಗೊತ್ತಾ? ವಿಡಿಯೋ ಇದೆ

karnataka Rain
ಮಳೆ39 mins ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

First Drug Testing Olympics
ಕ್ರೀಡೆ45 mins ago

First Drug Testing Olympics: ಒಲಿಂಪಿಕ್ಸ್​ನಲ್ಲಿ ಮೊದಲ ಬಾರಿಗೆ ಮಾದಕ ದ್ರವ್ಯ ಸೇವನೆ ಪ್ರಕರಣ ಬೆಳಕಿಗೆ ಬಂದದ್ದು ಯಾವಾಗ?

Actor Darshan Renuka Swamy assault scene recorded on iPhone
ಸಿನಿಮಾ53 mins ago

Actor Darshan: ರೇಣುಕಾ ಸ್ವಾಮಿ ಹಲ್ಲೆ ದೃಶ್ಯ ಐಫೋನ್‌ನಲ್ಲಿ ರೆಕಾರ್ಡ್‌; ಸಿನಿಮಾ ಶೈಲಿಯಲ್ಲಿ ನಡೆದಿತ್ತು ಕೃತ್ಯ!

Doda Encounter
ದೇಶ1 hour ago

Doda Encounter: ಜಮ್ಮು ದಾಳಿ ಹಿಂದೆ ಇದ್ಯಾ ಪಾಕ್‌ ಮಾಜಿ ಸೈನಿಕರ ಕೈವಾಡ? ಉಗ್ರರಿಗಿದ್ಯಾ ಸೇನಾ ತರಬೇತಿ?

Rajakaluve Encroachment
ಬೆಂಗಳೂರು1 hour ago

Rajakaluve Encroachment: ರಾಜಕಾಲುವೆ ಒತ್ತುವರಿದಾರರಿಗೆ ಮತ್ತೆ ನಡುಕ, ತೆರವಿಗೆ ಬಿಬಿಎಂಪಿ ಸಿದ್ಧತೆ

Paris Olympics
ಕ್ರೀಡೆ2 hours ago

Paris Olympics: ಟ್ರ್ಯಾಕ್‌ & ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದರೆ ಅಥ್ಲೀಟ್​ಗಳಿಗೆ ಸಿಗಲಿದೆ ಭಾರೀ ಮೊತ್ತದ ನಗದು ಬಹುಮಾನ

Murder case
ಕೊಡಗು2 hours ago

Murder Case : ಪತ್ನಿಗೆ ಗುಂಡು ಹಾರಿಸಿ ಕೊಂದು ಪೊಲೀಸರಿಗೆ ಶರಣಾದ ಪತಿ!

Shraddha Kapoor On Rumours Of Wedding To Rahul Mody
ಬಾಲಿವುಡ್2 hours ago

Shraddha Kapoor: ಮದುವೆ ಬಗ್ಗೆ ಶ್ರದ್ಧಾ ಕಪೂರ್ ಹೇಳಿದ್ದೇನು? ಹುಡುಗ ಯಾರು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ39 mins ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ24 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

ಟ್ರೆಂಡಿಂಗ್‌