Assembly Monsoon Session: ಮುಂಗಾರು ಅಧಿವೇಶನಕ್ಕೆ ಮುನ್ನವೇ 2 ಕೋಟಿ ಖರ್ಚು ಮಾಡಿ ವಿಧಾನಸೌಧ ಸಿಂಗಾರ! - Vistara News

ಪ್ರಮುಖ ಸುದ್ದಿ

Assembly Monsoon Session: ಮುಂಗಾರು ಅಧಿವೇಶನಕ್ಕೆ ಮುನ್ನವೇ 2 ಕೋಟಿ ಖರ್ಚು ಮಾಡಿ ವಿಧಾನಸೌಧ ಸಿಂಗಾರ!

Assembly Monsoon Session: ವಿಧಾನಸಭೆ ಒಳಾಂಗಣ ರೋಸ್‌ವುಡ್ ಡೋರ್, ಕಾರ್ಪೆಟ್, ಫ್ಲೋರ್ ಮ್ಯಾಟ್, ಪಿಲ್ಲರ್‌ಗಳಿಗೆ ರೋಸ್ ವುಡ್ ಕ್ಲಾಡಿಂಗ್ ಸೇರಿದಂತೆ ರೀ ಫರ್ನಿಶಿಂಗ್ ಮಾಡಲಾಗಿದೆ. ಸ್ಪೀಕರ್ ಕಚೇರಿಗೆ ಹೊಸ ಬಾಗಿಲು, ಫ್ಲೋರ್ ಮ್ಯಾಟ್, ಇತರೆ ನವೀಕರಣ ಮಾಡಲಾಗಿದೆ. PWD ಕೆಲಸವನ್ನು ಸ್ಪೀಕರ್ ಕಚೇರಿಯಿಂದಲೇ ನಿರ್ವಹಣೆ ಮಾಡಲಾಗಿದೆ.

VISTARANEWS.COM


on

Assembly monsoon session UT Khader karnataka assembly live
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 16ನೇ ವಿಧಾನಸಭೆಯ ಮಳೆಗಾಲದ ಅಧಿವೇಶನಕ್ಕೆ (Vidhan Sabha Session, Assembly monsoon session) ) ಮುನ್ನವೇ ವಿಧಾನಸೌಧವನ್ನು (Vidhana Soudha) ಹೊಸದಾಗಿ ಶೃಂಗರಿಸಲಾಗಿದ್ದು, ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ಒಳಾಂಗಣವನ್ನು (renovation) ನವೀಕರಣಗೊಳಿಸಲಾಗಿದೆ. ಸ್ಪೀಕರ್‌ ಯು.ಟಿ ಖಾದರ್‌ (Speaker UT Khader) ಅವರು ಮುತುವರ್ಜಿ ವಹಿಸಿ ಈ ನವೀಕರಣ ನಡೆಸಿದ್ದು, ಇದೀಗ ಒಳಾಂಗಣ ಹೈಟೆಕ್ ಸ್ಪರ್ಶದಿಂದ ಕಂಗೊಳಿಸುತ್ತಿದೆ.

ವಿಧಾನಸಭೆ ಒಳಾಂಗಣ ರೋಸ್‌ವುಡ್ ಡೋರ್, ಕಾರ್ಪೆಟ್, ಫ್ಲೋರ್ ಮ್ಯಾಟ್, ಪಿಲ್ಲರ್‌ಗಳಿಗೆ ರೋಸ್ ವುಡ್ ಕ್ಲಾಡಿಂಗ್ ಸೇರಿದಂತೆ ರೀ ಫರ್ನಿಶಿಂಗ್ ಮಾಡಲಾಗಿದೆ. ಸ್ಪೀಕರ್ ಕಚೇರಿಗೆ ಹೊಸ ಬಾಗಿಲು, ಫ್ಲೋರ್ ಮ್ಯಾಟ್, ಇತರೆ ನವೀಕರಣ ಮಾಡಲಾಗಿದೆ. PWD ಕೆಲಸವನ್ನು ಸ್ಪೀಕರ್ ಕಚೇರಿಯಿಂದಲೇ ನಿರ್ವಹಣೆ ಮಾಡಲಾಗಿದೆ.

ಮಧ್ಯಾಹ್ನ ಹೊತ್ತು ಊಟದ ಲಾಂಜ್‌ನಲ್ಲಿ ಶಾಸಕರಿಗೆ ವಿಶ್ರಾಂತಿ ಪಡೆಯಲು ಅಳವಡಿಸಲಾದ ರಿಕ್ಲೈನರ್‌ಗಳ ಬಗೆಗೆ ನಿನ್ನೆ ಸ್ಪೀಕರ್‌ ಕಲಾಪದಲ್ಲಿ ಹೇಳಿದ್ದರು. ಶಾಸಕರ ಗೈರುಹಾಜರು ತಪ್ಪಿಸಲು ಈ ಕ್ರಮ ತೆಗೆದುಕೊಂಡಿರುವುದಾಗಿ ತಿಳಿಸಿದ್ದರು.

ಯಾವುದಕ್ಕೆ ಎಷ್ಟೆಷ್ಟು ಖರ್ಚು?

ವಿಧಾನಸೌಧದ ಪಶ್ಚಿಮ ಭಾಗದ ಅಸೆಂಬ್ಲಿ ಪ್ರವೇಶದ್ವಾರ, ಅಸೆಂಬ್ಲಿ ಪ್ರವೇಶದ ಮುಂಭಾಗ ಮತ್ತು ಹಿಂಭಾಗದ ಪಿಲ್ಲರ್‌ಗಳಿಗೆ ರೋಸ್ ವುಡ್ ಕ್ಲಾಡಿಂಗ್ ಮತ್ತು ಮುಂಭಾಗದ ಪಿಲ್ಲರ್ ಮತ್ತು ಹೊಸ ಬಾಗಿಲಿನ ನಡುವೆ 1 ವಾಲ್ ಕ್ಲಾಡಿಂಗ್ ಹಾಕಲು- 43 ಲಕ್ಷ

ಅಸೆಂಬ್ಲಿ ಪ್ರವೇಶ, ಆಡಳಿತ ಮತ್ತು ವಿರೋಧ ಪಕ್ಷದ ಲಾಂಜ್ ಪ್ರವೇಶ ಕಾರಿಡಾರ್, ಪಶ್ಚಿಮ ಭಾಗದ ಅಸೆಂಬ್ಲಿ ಪ್ರವೇಶ ಹಂತಗಳಿಗೆ ನೆಲದ ಕಾರ್ಪೆಟ್ ಹಾಕಲು- 32 ಲಕ್ಷ 50 ಸಾವಿರ

ಪಾಲಿಕಾರ್ಬೊನೇಟ್ ಶೀಟ್‌ನಿಂದ ಒಳಗಿನ ಕಾರಿಡಾರ್ ಓಪನ್ನಿಂಗ್‌ನ 3 ಅಸೆಂಬ್ಲಿ ಪ್ರವೇಶದ್ವಾರದ ಸುತ್ತಲೂ 10 ರಿಂದ 12 ಮಿಮೀ ದಪ್ಪದ ಟಫನ್ ಗ್ಲಾಸ್ ವಿಭಾಗವನ್ನು ಒದಗಿಸುವುದು ಮತ್ತು ಪ್ಯಾರಪೆಟ್ ರಂಧ್ರಗಳನ್ನು ಮುಚ್ಚುವುದು- 8 ಲಕ್ಷ 90 ಸಾವಿರ

ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಕ್ಕೆ ಯಾಂತ್ರಿಕೃತ ರಿಕ್ಲೈನರ್ ಕುರ್ಚಿಗಳನ್ನು ಒದಗಿಸುವುದು- 23 ಲಕ್ಷ 60 ಸಾವಿರ

ಅಸೆಂಬ್ಲಿ ಪ್ರವೇಶ ಕಾರಿಡಾರ್ ಮತ್ತು ಪೂರ್ವ ಭಾಗದ ಸೆಂಟ್ರಲ್ ಹಾಲ್ ಮತ್ತು ಗ್ರ್ಯಾಂಡ್ ಸ್ಟೆಪ್ ಪ್ರವೇಶ ಗೋಡೆಗಳಿಗೆ ಪೇಂಟಿಂಗ್ ಮತ್ತು ಪಾಲಿಶಿಂಗ್ ಮಾಡುವುದು- 14 ಲಕ್ಷ 80 ಸಾವಿರ

ಸಿಎಂ ಚೇಂಬರ್, ಪ್ರೆಸ್ ಲಾಂಜ್, ಸಚಿವರ ಲಾಂಜ್ ಮತ್ತು ಮಹಿಳಾ ಲಾಂಜ್‌ನ ಶೌಚಾಲಯ ನವೀಕರಣ- 18 ಲಕ್ಷ 50 ಸಾವಿರ

ಮೊದಲ ಮಹಡಿಯ ಸೆಂಟ್ರಲ್ ಹಾಲ್‌ನಲ್ಲಿ ತಾತ್ಕಾಲಿಕ ಅಡಿಗೆ, ಊಟ, ಕುರ್ಚಿಗಳು, ಟೇಬಲ್‌ಗಳು, ವಿಭಜನೆ, ಬ್ಯಾರಿಕೇಡ್‌ಗಳನ್ನು ಹಾಕುವುದು ಮತ್ತು ಊಟದ ಟೇಬಲ್, ಟ್ಯಾಪ್ ಕ್ಲಾತ್‌ಗಳು, ಆಡಳಿತ ಮತ್ತು ವಿರೋಧ ಪಕ್ಷದಲ್ಲಿ ಕುರ್ಚಿಗಳನ್ನು ಹಾಕುವುದು ಅಧಿವೇಶನದಲ್ಲಿ ಅಸೆಂಬ್ಲಿಗೆ ಇತರ ಸಂಬಂಧಿತ ಕೆಲಸಗಳಿಗೆ- 27 ಲಕ್ಷ 75 ಸಾವಿರ

ಕಾರ್ಪೆಟ್, ಕುರ್ಚಿಗಳು, ಸೋಫಾಗಳು ಮತ್ತು ಅವುಗಳನ್ನು ತೊಳೆಯುವುದು, ನೀರು ಸರಬರಾಜು, ಪೇಂಟಿಂಗ್ ಮತ್ತು ಇತರ ಸಂಬಂಧಿತ ಕೆಲಸಗಳಿಗೆ- 10 ಲಕ್ಷ 35 ಸಾವಿರ

ಮೊದಲನೇ ಮಹಡಿಗೆ ಸ್ಟೇನ್‌ಲೆಸ್ ಸ್ಟೀಲ್ ನೇಮ್ ಬೋರ್ಡ್‌ಗಳಲ್ಲಿ ಅಸೆಂಬ್ಲಿ ಪ್ರವೇಶ ಕಾರಿಡಾರ್‌ನ ಎರಡೂ ಬದಿಗಳಿಗೆ ಸ್ಟೇನ್‌ಲೆಸ್ ಸ್ಟೀಲ್ ಗ್ರಿಲ್‌ಗಳನ್ನು ಒದಗಿಸುವುದು, ಅಸೆಂಬ್ಲಿ ಪ್ರವೇಶ ನಾಮ ಫಲಕ ಅಳವಡಿಕೆಗೆ- 16 ಲಕ್ಷ 60 ಸಾವಿರ

ಒಟ್ಟು 1 ಕೋಟಿ 96 ಲಕ್ಷ ವ್ಯಯ ಮಾಡಲಾಗಿದ್ದು, ಈ ಮೂಲಕ ವಿಧಾನಸೌಧ ಹೈಟೆಕ್ ಜೊತೆ ಆಧುನಿಕ ಮಾಡಲಾಗಿದೆ.

ಇದನ್ನೂ ಓದಿ: Karnataka Assembly Live: ಇಡಿಗೆ ಹೆದರುವುದಿಲ್ಲ, ನಿಮ್ಮನ್ನು ಬಲಿ ಹಾಕಿಯೇ ಸಿದ್ಧ: ವಾಲ್ಮೀಕಿ ಹಗರಣ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

ವಿಸ್ತಾರ ನ್ಯೂಸ್‌ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯಿಂದ ಕಿರಣ್‌ ಕುಮಾರ್‌ ಡಿ ಕೆ ಅಮಾನತು

ವಿಸ್ತಾರ ಮೀಡಿಯಾ ಪ್ರೈವೆಟ್‌ ಲಿಮಿಟೆಡ್‌ ಕಾರ್ಯ ನಿರ್ವಾಹಕ ನಿರ್ದೇಶಕ ಹುದ್ದೆಯಿಂದ ಕಿರಣ್‌ ಕುಮಾರ್‌ ಡಿ ಕೆ ಅವರನ್ನು ಅಮಾನತು ಮಾಡಲಾಗಿದ್ದು, ಅವರೊಂದಿಗೆ ಇನ್ನು ಮುಂದೆ ಯಾವುದೇ ವ್ಯವಹಾರ ಮಾಡಬಾರದು ಎಂದು ಸಂಸ್ಥೆಯ ಆಡಳಿತ ಮಂಡಳಿ ವಿನಂತಿಸಿದೆ.

VISTARANEWS.COM


on

Kiran Kumar
Koo


ಬೆಂಗಳೂರು: ವಿಸ್ತಾರ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ನಲ್ಲಿ ಕಾರ್ಯ ನಿರ್ವಾಹಕ ನಿರ್ದೇಶಕರಾಗಿದ್ದ ಕಿರಣ್‌ ಕುಮಾರ್‌ ಡಿ ಕೆ ಅವರನ್ನು ದಿನಾಂಕ 19-07-2024ರಂದು ಸೇವೆಯಿಂದ ಅಮಾನತು ಮಾಡಲಾಗಿದ್ದು, ಇನ್ನು ಮುಂದೆ ಇವರೊಂದಿಗೆ ನಮ್ಮ ಸಂಸ್ಥೆಗೆ ಸಂಬಂಧಿಸಿದ ಯಾವುದೇ ವ್ಯವಹಾರ ಮಾಡುವಂತಿಲ್ಲ ಎಂದು ಸಂಸ್ಥೆಯ ಆಡಳಿತ ಮಂಡಳಿ ಹೇಳಿದೆ.

ಇವರೊಂದಿಗೆ ನಮ್ಮ ಸಂಸ್ಥೆಗೆ ಸಂಬಂಧಿಸಿ ಯಾವುದೇ ಮಾಹಿತಿ ಹಂಚಿಕೊಳ್ಳುವಂತಿಲ್ಲ. ಯಾರಾದರೂ ಆ ರೀತಿ ಮಾಡಿದ್ದಲ್ಲಿ ಅದಕ್ಕೆ ಅವರೇ ಹೊಣೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಪ್ರಮುಖ ಸುದ್ದಿ

Bangladesh Protests: ಬಾಂಗ್ಲಾದಲ್ಲಿ ಹಿಂಸಾಚಾರ ಉಲ್ಬಣ, 105 ಸಾವು; 300 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ

Bangladesh Protests: ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ಮತ್ತು ಗಲಭೆಗಳು ನಡೆಯುತ್ತಿದೆ. ಸುಮಾರು 15,000 ಭಾರತೀಯ ಪ್ರಜೆಗಳು ಬಾಂಗ್ಲಾದಲ್ಲಿದ್ದು, ಅವರೆಲ್ಲ ಕ್ಷೇಮವಾಗಿದ್ದಾರೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಹೇಳಿದೆ. ಆದರೆ ಸುಮಾರು 300 ರಷ್ಟು ಆತಂಕಿತ ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ.

VISTARANEWS.COM


on

bangladesh protests dhaka
Koo

ಢಾಕಾ: ಕಳೆದ ಕೆಲದಿನಗಳಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ (Bangladesh Protests) ಪ್ರತಿಭಟನೆ ಹಾಗೂ ಹಿಂಸಾಚಾರ (Bangladesh Violence) ಇದೀಗ ಉಲ್ಬಣಿಸಿದ್ದು, ಅಲ್ಲಿರುವ ಸುಮಾರು 300 ಭಾರತೀಯ ವಿದ್ಯಾರ್ಥಿಗಳು (Indian Students) ಸ್ವದೇಶಕ್ಕೆ ಮರಳಿದ್ದಾರೆ. ಹಿಂಸಾಚಾರದಲ್ಲಿ 105 ಮಂದಿ ಮೃತಪಟ್ಟಿದ್ದಾರೆ. ದೇಶವಿಡೀ ಕರ್ಫ್ಯೂ ಹಾಕಲಾಗಿದೆ.

ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ಮತ್ತು ಗಲಭೆಗಳು ನಡೆಯುತ್ತಿದೆ. ಸುಮಾರು 15,000 ಭಾರತೀಯ ಪ್ರಜೆಗಳು ಬಾಂಗ್ಲಾದಲ್ಲಿದ್ದು, ಅವರೆಲ್ಲ ಕ್ಷೇಮವಾಗಿದ್ದಾರೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಹೇಳಿದೆ. ಆದರೆ ಸುಮಾರು 300 ರಷ್ಟು ಆತಂಕಿತ ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ.

ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಹಲವಾರು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಸ್ವರೂಪ ಪಡೆದಿದ್ದು, ಸಾವುನೋವಿಗೆ ಕಾರಣವಾಗಿದೆ. ಶುಕ್ರವಾರ ಕೂಡ ಬಾಂಗ್ಲಾದೇಶದಲ್ಲಿ ಘರ್ಷಣೆಗಳು ಮತ್ತು ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರೆದಿವೆ. ಪ್ರತಿಭಟನಾ ನಿರತರು ನರಸಿಂಗಡಿ ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡಿ ನೂರಾರು ಕೈದಿಗಳನ್ನು ಬಿಡುಗಡೆ ಮಾಡಿದ್ದಾರೆ. ನಂತರ ಜೈಲಿಗೆ ಬೆಂಕಿ ಹಚ್ಚಿದ್ದಾರೆ. ಗಲಭೆಯ ಬಿಸಿ ಸಾಮಾನ್ಯ ಜನರ ಬದುಕಿಗೂ ತಟ್ಟಿದೆ.

ದೇಶಾದ್ಯಂತ ಹರಡಿರುವ ಅಶಾಂತಿಯನ್ನು ತಡೆಯಲು ಪೊಲೀಸರು ಕೂಡ ವಿಫಲವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ಶುಕ್ರವಾರ ಕರ್ಫ್ಯೂ ಮತ್ತು ಮಿಲಿಟರಿ ಪಡೆಗಳ ನಿಯೋಜನೆಯನ್ನು ಘೋಷಿಸಿದೆ. ಆಸ್ಪತ್ರೆಗಳು ನೀಡಿದ ವರದಿಗಳನ್ನು ಉಲ್ಲೇಖಿಸಿ ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಈ ವಾರದ ಘರ್ಷಣೆಯಲ್ಲಿ ಕನಿಷ್ಠ 105 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. 15 ವರ್ಷಗಳ ಅಧಿಕಾರದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿ ಶೇಖ್ ಹಸೀನಾ ಸರ್ಕಾರ ದೊಡ್ಡ ಸವಾಲನ್ನು ಎದುರಿಸಿದೆ.

ಪ್ರತಿಭಟನೆಗಳು ಪ್ರಾರಂಭವಾದ ನಂತರ ಮೊದಲ ಬಾರಿಗೆ ಹೆಚ್ಚಿನ ಹಿಂಸಾಚಾರವನ್ನು ತಡೆಯುವ ಪ್ರಯತ್ನದಲ್ಲಿ ರಾಜಧಾನಿ ಢಾಕಾದಲ್ಲಿ ಪೊಲೀಸರು ಮೊದಲ ದಿನ ಎಲ್ಲಾ ಸಾರ್ವಜನಿಕ ಸಭೆಗಳನ್ನು ನಿಷೇಧಿಸಿದ್ದಾರೆ. ‘ನಾವು ಇಂದು ಢಾಕಾದಲ್ಲಿ ಎಲ್ಲಾ ರ್ಯಾಲಿಗಳು, ಮೆರವಣಿಗೆಗಳು ಮತ್ತು ಸಾರ್ವಜನಿಕ ಸಭೆಗಳನ್ನು ನಿಷೇಧಿಸಿದ್ದೇವೆ’ ಎಂದು ಪೊಲೀಸ್ ಮುಖ್ಯಸ್ಥ ಹಬೀಬುರ್ ರೆಹಮಾನ್ ತಿಳಿಸಿದ್ದಾರೆ.

ರ್ಯಾಲಿಗಳನ್ನು ವಿಫಲಗೊಳಿಸಲು ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ. ಆದರೆ ನಗರದಲ್ಲಿ ಜನರ ಬೃಹತ್ ಗುಂಪುಗಳು ಜಮಾಯಿಸಿವೆ. ಇದು ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾರಣಾಂತಿಕ ಘರ್ಷಣೆಗೆ ಕಾರಣವಾಯಿತು. ‘ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ’ ಎಂದು ರಾಜಧಾನಿಯಲ್ಲಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದವರು ಘೋಷಿಸಿದ್ದಾರೆ. ‘ಈ ಹತ್ಯೆಗಳಿಗೆ ಸರ್ಕಾರವೇ ಹೊಣೆಯಾಗಿರುವುದರಿಂದ ಶೇಖ್ ಹಸೀನಾ ಅವರು ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

1971ರಲ್ಲಿ ಪಾಕಿಸ್ತಾನದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಯೋಧರ ಸಂಬಂಧಿಕರಿಗೆ ಕೆಲವು ಸಾರ್ವಜನಿಕ ವಲಯದ ಉದ್ಯೋಗಗಳನ್ನು ಮೀಸಲಿಡುವ ವ್ಯವಸ್ಥೆಯ ವಿರುದ್ಧ ಢಾಕಾ ಮತ್ತು ಇತರ ನಗರಗಳಲ್ಲಿ ಹಲವಾರು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ.

ಇದನ್ನೂ ಓದಿ: Bangladesh Violence: ಬಾಂಗ್ಲಾ ಧಗ ಧಗ; ಭುಗಿಲೆದ್ದ ಹಿಂಸಾಚಾರಕ್ಕೆ 35 ಮಂದಿ ಬಲಿ

Continue Reading

Latest

Pets in Designer Outfits : ಅನಂತ್-ರಾಧಿಕಾ ಮದುವೆಯಲ್ಲಿ ಅಂಬಾನಿ ಕುಟುಂಬದ ನಾಯಿಗಳ ಸಂಭ್ರಮ ನೋಡಿ!

Pets in Designer Outfits: ಅಹ್ಮದಾಬಾದ್‍ನ ಡಿಸೈನರ್ ಪೆಟ್‌ವೇರ್ ಬ್ರಾಂಡ್ ಅಂಬಾನಿ ಕುಟುಂಬದ ಸಾಕುಪ್ರಾಣಿಗಳಿಗಾಗಿ 29ಕ್ಕೂ ಹೆಚ್ಚು ಉಡುಪುಗಳನ್ನು ವಿನ್ಯಾಸಗೊಳಿಸಿದೆ. “ನಾವು ನಾಯಿಗಳಿಗಾಗಿ 29 ಉಡುಗೆಗಳನ್ನು ತಯಾರಿಸಿದ್ದೇವೆ, ಅವುಗಳಲ್ಲಿ 14 #HappyAmbani ಮತ್ತು 14#PopcornMerchant ಗಾಗಿ ಟ್ವಿನ್ನಿಂಗ್ ಮತ್ತು 1#ChasePiramalಗಾಗಿ. ನೀವೆಲ್ಲರೂ ನಮ್ಮ ಕೆಲಸವನ್ನು ಇಷ್ಟಪಟ್ಟಿದ್ದೀರಿ ಎಂದು ನಮಗೆ ತುಂಬಾ ಸಂತೋಷವಾಗಿದೆ. ನಮ್ಮ ಬ್ರಾಂಡ್‍ನಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರಿಗೆ ನಾವು ಧನ್ಯವಾದ ಅರ್ಪಿಸುತ್ತೇವೆ” ಎಂದು ಬ್ರಾಂಡ್ ತನ್ನ ಇನ್ಸ್ಟಾಗ್ರಾಮ್‍ನಲ್ಲಿ ಬರೆದಿದೆ.

VISTARANEWS.COM


on

Pets in Designer Outfits
Koo

ಮುಂಬೈ : ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಅವರ ವಿವಾಹದ ಸಂಭ್ರಮಾಚರಣೆಯಲ್ಲಿ ಅಂಬಾನಿ ಕುಟುಂಬದವರು ಬಣ್ಣ ಬಣ್ಣದ ಹಾಗೂ ಚಿನ್ನದಿಂದ ತಯಾರಿಸಿದ ಬಟ್ಟೆಗಳನ್ನು ಧರಿಸಿ ಮಿಂಚಿದ್ದಾರೆ. ಮಾತ್ರವಲ್ಲ ಈ ಮದುವೆಯಲ್ಲಿ ಅವರ ಮನೆಯಲ್ಲಿ ಸಾಕಿದ ನಾಯಿಗಳಿಗೂ (Pets in Designer Outfits) ಕೂಡ ವಿಶೇಷವಾಗಿ ವಿನ್ಯಾಸ ಮಾಡಿದ ಬಟ್ಟೆಗಳನ್ನು ತೊಡಿಸಿದ್ದಾರೆ. ಹಾಗಾಗಿ ಅವುಗಳು ಅನಂತ್ ಮದುವೆಯಲ್ಲಿ ಬಹಳ ಅದ್ಭುತವಾಗಿ ಕಾಣುತ್ತಿದ್ದವು. ಮದುವೆಯಲ್ಲಿ ಅವುಗಳು ಸುಂದರವಾದ ಬಟ್ಟೆಯಲ್ಲಿ ಮಿಂಚಿದ ವಿಡಿಯೊ ವೈರಲ್ ಆಗಿದೆ.

ಅಹ್ಮದಾಬಾದ್‍ನ ಡಿಸೈನರ್ ಪೆಟ್‌ವೇರ್ ವಿನ್ಯಾಸಗೊಳಿಸಿದ ಸೂಪರ್ ಸ್ಟೈಲಿಶ್ ಗುಲಾಬಿ ಬನಾರಸಿ ಸಿಲ್ಕ್ ಬ್ರೊಕೇಡ್ ಜಾಕೆಟ್ ಧರಿಸಿ ಗೋಲ್ಡನ್ ರಿಟ್ರೀವರ್ ಹ್ಯಾಪಿ (ನಾಯಿ) ಅಂಬಾನಿ ಮದುವೆ ಮಂಟಪದಲ್ಲಿ ಕಂಡುಬಂದಿದೆ.

ಹ್ಯಾಪಿಗಾಗಿ ತಯಾರಿಸಿದ ಕಸ್ಟಮ್-ಮೇಡ್ ಉಡುಪುಗಳನ್ನು ಬಹಿರಂಗಪಡಿಸುವ ವಿಡಿಯೊವನ್ನು ಬ್ರಾಂಡ್ ಹಂಚಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಹ್ಯಾಪಿಗೆ ಮಾತ್ರ ಫ್ಯಾಶನ್ ಡ್ರೆಸ್ ತೊಡಿಸಿರಲಿಲ್ಲ, ಅದರ ಜೊತೆ ರಾಧಿಕಾ ಕುಟುಂಬದ ಬುಲ್ಡಾಗ್ ಪಾಪ್ಕಾರ್ನ್ ಮರ್ಚೆಂಟ್ ಕೂಡ ಕೆಲವು ಡಿಸೈನರ್ ಉಡುಪುಗಳನ್ನು ಧರಿಸಿ ಮಿಂಚಿತು.

ಅಲ್ಲದೇ ಮುಕೇಶ್-ನೀತಾ ಅಂಬಾನಿಯವರ ಪುತ್ರಿ ಇಶಾ ಅಂಬಾನಿ ಅವರ ಪತಿ ಆನಂದ್ ಪಿರಮಾಲ್ ಅವರ ಕುಟುಂಬದ ನಾಯಿ ಚೇಸ್ ಪಿರಮಾಲ್ ಕೂಡ ಮದುವೆಗೆ ಡಿಸೈನ್‌ನಿಂದ ಕೂಡಿದ ಬಟ್ಟೆಯನ್ನು ಧರಿಸಿ ತಾನೇನು ಕಡಿಮೆ ಇಲ್ಲ ನೋಡಿ ಎಂದು ಬೀಗಿತು.

ಅಹ್ಮದಾಬಾದ್‍ನ ಡಿಸೈನರ್ ಪೆಟ್‌ವೇರ್ ಬ್ರಾಂಡ್ ಈ ಕುಟುಂಬದ ಸಾಕುಪ್ರಾಣಿಗಳಿಗಾಗಿ 29 ಕ್ಕೂ ಹೆಚ್ಚು ಉಡುಪುಗಳನ್ನು ವಿನ್ಯಾಸಗೊಳಿಸಿದೆ. “ನಾವು ನಾಯಿಗಳಿಗಾಗಿ 29 ಉಡುಗೆಗಳನ್ನು ತಯಾರಿಸಿದ್ದೇವೆ, ಅವುಗಳಲ್ಲಿ 14 #HappyAmbani ಮತ್ತು 14#PopcornMerchant ಗಾಗಿ ಟ್ವಿನ್ನಿಂಗ್ ಮತ್ತು 1#ChasePiramal ನೀವೆಲ್ಲರೂ ನಮ್ಮ ಕೆಲಸವನ್ನು ಇಷ್ಟಪಟ್ಟಿದ್ದೀರಿ ಎಂದು ನಮಗೆ ತುಂಬಾ ಸಂತೋಷವಾಗಿದೆ. ನಮ್ಮ ಬ್ರಾಂಡ್‍ನಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರಿಗೆ ನಾವು ಧನ್ಯವಾದ ಅರ್ಪಿಸುತ್ತೇವೆ” ಎಂದು ಬ್ರಾಂಡ್ ತನ್ನ ಇನ್ಸ್ಟಾಗ್ರಾಮ್‍ನಲ್ಲಿ ಬರೆದಿದೆ.

ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಜನರು ಆಶ್ವರ್ಯ ವ್ಯಕ್ತಪಡಿಸಿದ್ದಾರೆ ಮತ್ತು ಹಲವರು ಕಾಮೆಂಟ್ ಕೂಡ ಮಾಡಿದ್ದಾರೆ. ಒಬ್ಬ ಬಳಕೆದಾರರು ನಾಯಿಗಳು ನಮಗಿಂತ ಒಳ್ಳೆಯ ಬಟ್ಟೆಗಳನ್ನು ಧರಿಸಿವೆ ಎಂದು ಹೇಳಿದ್ದಾರೆ. ಮತ್ತೊಬ್ಬರು ನಾಯಿಗಳೆಲ್ಲವೂ ಬಟ್ಟೆ ಧರಿಸಿ ತುಂಬಾ ಸುಂದರವಾಗಿ ಕಾಣುತ್ತಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:  ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

ಜನವರಿ 2023 ರಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ನಿಶ್ಚಿತಾರ್ಥದ ಪಾರ್ಟಿಯಲ್ಲಿ ಹ್ಯಾಪಿ ಕುಟುಂಬದ ಭಾವಚಿತ್ರಕ್ಕೆ ಪೋಸ್ ನೀಡುವ ಮೂಲಕ ಜನರ ಮನಗೆದ್ದಿತ್ತು.

Continue Reading

ಪ್ರಮುಖ ಸುದ್ದಿ

Dengue fever: ಶಂಕಿತ ಡೆಂಗ್ಯು ಜ್ವರಕ್ಕೆ ಯುವತಿ ಸಾವು, ರಾಜ್ಯದಲ್ಲಿ ಡೆಂಗ್ಯು ಸಾವು 9ಕ್ಕೆ ಏರಿಕೆ

Dengue Fever: ರೇಖಾ ಎನ್ (19) ಸಾವನ್ನಪ್ಪಿದ ಯುವತಿ. ದಾವಣಗೆರೆ ಜಿಲ್ಲೆಯ‌ ಜಗಳೂರ ಪಟ್ಟಣದ ರಾಮಾಲಯ ರಸ್ತೆ ನಿವಾಸಿ ರೇಖಾ ಕಳೆದ ಕೆಲ ದಿನಗಳ ಹಿಂದೆ ನಾಮಕರಣ ಶಾಸ್ತ್ರ ಕಾರ್ಯಕ್ರಮಕ್ಕೆ ಬಳ್ಳಾರಿಗೆ ತೆರಳಿದ್ದರು. ಅಲ್ಲಿ ತೀವ್ರ ಜ್ವರದಿಂದ ಬಳಲಿದ್ದ ರೇಖಾಗೆ ಬಳ್ಳಾರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.

VISTARANEWS.COM


on

dengue fever death davanagere
Koo

ದಾವಣಗೆರೆ: ಜ್ವರದಿಂದ ಬಳಲುತ್ತಿದ್ದ ದಾವಣಗೆರೆಯ (Davanagere news) ಯುವತಿಯೊಬ್ಬರು ಸಾವಿಗೀಡಾಗಿದ್ದಾರೆ. ಡೆಂಗ್ಯು ಜ್ವರದಿಂದ (Dengue Fever) ಸಾವನ್ನಪ್ಪಿರುವ ಶಂಕೆ ಇದ್ದು, ಪರೀಕ್ಷಾ ವರದಿ ಬರಬೇಕಿದೆ.

ರೇಖಾ ಎನ್ (19) ಸಾವನ್ನಪ್ಪಿದ ಯುವತಿ. ದಾವಣಗೆರೆ ಜಿಲ್ಲೆಯ‌ ಜಗಳೂರ ಪಟ್ಟಣದ ರಾಮಾಲಯ ರಸ್ತೆ ನಿವಾಸಿ ರೇಖಾ ಕಳೆದ ಕೆಲ ದಿನಗಳ ಹಿಂದೆ ನಾಮಕರಣ ಶಾಸ್ತ್ರ ಕಾರ್ಯಕ್ರಮಕ್ಕೆ ಬಳ್ಳಾರಿಗೆ ತೆರಳಿದ್ದರು. ಅಲ್ಲಿ ತೀವ್ರ ಜ್ವರದಿಂದ ಬಳಲಿದ್ದ ರೇಖಾಗೆ ಬಳ್ಳಾರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಬಳ್ಳಾರಿಯಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಧಿಕೃತ ವರದಿ‌ ನಿರೀಕ್ಷಿಸಲಾಗಿದೆ. ಈ ಬಗ್ಗೆ ಜಗಳೂರು ತಾಲೂಕು ವೈದ್ಯಾಧಿಕಾರಿ ಡಾ. ವಿಶ್ವನಾಥ ಮಾಹಿತಿ ನೀಡಿದ್ದಾರೆ.

ಹಾಸನದಲ್ಲಿ ಡೆಂಗ್ಯೂಗೆ ಎಂಬಿಬಿಎಸ್‌ ವಿದ್ಯಾರ್ಥಿ ಬಲಿ

ಹಾಸನ: ಹಾಸನದಲ್ಲಿ‌ ಡೆಂಗ್ಯೂಗೆ (Dengue Feverಮತ್ತೊಬ್ಬ ಯುವಕ ಬಲಿಯಾಗಿದ್ದಾನೆ. ಎಂಬಿಬಿಎಸ್ ವಿದ್ಯಾರ್ಥಿ ಕುಶಾಲ್ (22) ಡೆಂಗ್ಯು ಜ್ವರದಿಂದ ಮೃತಪಟ್ಟವರು. ಹಾಸನದ ಹೊಳೆನರಸೀಪುರ ‌ತಾಲೂಕಿನ ಹಳ್ಳೀ ಮೈಸೂರು ಸಮೀಪದ ಗೋಹಳ್ಳಿ ಗ್ರಾಮದ ಕುಶಾಲ್‌, ಒಂದು ವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಗುರುವಾರ ರಾತ್ರಿ ಕುಶಾಲ್‌ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತ ಹಾಗೂ ಬಡ ವಿದ್ಯಾರ್ಥಿಯಾಗಿದ್ದ ಕುಶಾಲ್, ಹಾಸನದ ಹಿಮ್ಸ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದ. ಕುಶಾಲ್ ಸಾವನ್ನಪ್ಪಿದ ಆಸ್ಪತ್ರೆಯಲ್ಲೇ ತಾಯಿ ರೇಖಾ ಅವರು ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಯಿ ರೇಖಾ ಮತ್ತು ತಂದೆ ಮಂಜುನಾಥ್ ಮಗನ ಎಂಬಿಬಿಎಸ್ ಕನಸು ಹೊತ್ತಿದ್ದರು. ರೇಖಾ ಟೈಲರ್ ವೃತ್ತಿ ಮಾಡುತ್ತಿದ್ದರೆ, ಮಂಜುನಾಥ್‌ ಅವರು ಶಿಕ್ಷಕ ವೃತ್ತಿಯಲ್ಲಿದ್ದರು. ಆದರೆ ಇದೀಗ ಡೆಂಗ್ಯೂಗೆ ಮಗ ಕುಶಾಲ್‌ ಬಲಿಯಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಧಾರವಾಡದಲ್ಲೂ ಡೆಂಗ್ಯೂಗೆ ಮಗು ಬಲಿ

ಧಾರವಾಡದಲ್ಲಿ ಡೆಂಗ್ಯೂ ಜ್ವರಕ್ಕೆ ಮತ್ತೊಂದು ಮಗು ಬಲಿಯಾಗಿದೆ. ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 5 ತಿಂಗಳ ಆರಾಧ್ಯ ಲಮಾಣಿ ಡೆಂಗ್ಯೂಯಿಂದ ಮೃತಪಟ್ಟಿದೆ. ಧಾರವಾಡ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿರುವ ಗೋಪಾಲ್ ಲಮಾಣಿ ಮಗು ಆರಾಧ್ಯ ಮೃತ ದುರ್ದೈವಿ. ಕಳೆದ ಜುಲೈ 15ರಂದು ಜ್ವರದಿಂದ ಬಳಲುತಿದ್ದ ಆರಾಧ್ಯಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಬರದೇ ಮಗು ಮೃತಪಟ್ಟಿದೆ.

ಡೆಂಗ್ಯೂ ಭೀತಿ; ಶಾಲೆ ಸುತ್ತಲ ಕೊಳಚೆ ನೀರು

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹೊತ್ತಿನಲ್ಲಿ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು. ಆದರೆ ಕೊಪ್ಪಳದ ಬೆಟಗೇರಿ ಗ್ರಾಮದಲ್ಲಿ ಶಾಲೆಯ ಸುತ್ತಲೂ ಕೊಳಚೆ ನೀರು ತುಂಬಿದ್ದು, ಮಕ್ಕಳಿಗೆ ಡೆಂಗ್ಯೂ ಜ್ವರ ಕಾಣಿಸಿಕೊಳ್ಳುತ್ತಿದೆ. ಶಾಲೆ ಸುತ್ತಲು ಸ್ವಚ್ಛತೆ ಕಾಪಾಡಲು ಆಗ್ರಹಿಸಿ, ಮಕ್ಕಳ ಪಾಲಕರು ಬೆಟೆಗೇರಿ ಗ್ರಾಮ ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಿದರು. ಬೆಟಗೇರಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುತ್ತಲು ಕೊಳಚೆ ನೀರು ಇದೆ. ಈಗಾಗಲೇ ಕೊಳಚೆಯಿಂದಾಗಿ ನಾಲ್ಕು ಜನರಿಗೆ ಡೆಂಗ್ಯೂ ಕಾಣಿಸಿಕೊಂಡಿದೆ ಎಂದು ಕಿಡಿಕಾರಿದರು.

ಸಾವಿನ ಸಂಖ್ಯೆ 8ಕ್ಕೆ ಏರಿಕೆ

ರಾಜ್ಯಾದ್ಯಂತ ಡೆಂಗ್ಯೂಗೆ 8 ಮಂದಿ ಮೃತಪಟ್ಟಿರುವುದು ದೃಢವಾಗಿದೆ. ಜನವರಿಯಿಂದ ಈವರೆಗೆ (ಜು.18) 85,270 ಮಂದಿ ರಕ್ತ ಮಾದರಿಯನ್ನು ಪರೀಕ್ಷಿಸಿದ್ದು, ಇದರಲ್ಲಿ 11,451 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ. ಇದರಲ್ಲಿ 620 ಸಕ್ರಿಯ ಪ್ರಕರಣಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Road Accident : ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಛಿದ್ರಗೊಂಡ ದಂಪತಿ; ಎಎಸ್‌ಐಗೆ ಬಡಿದ ಅಪರಿಚಿತ ವಾಹನ

Continue Reading
Advertisement
LKG UKG in Anganwadis
ಕರ್ನಾಟಕ8 mins ago

LKG UKG in Anganwadis: ದೇಶದಲ್ಲೇ ಮೊದಲ ಬಾರಿ ಅಂಗನವಾಡಿಗಳಲ್ಲಿ ಎಲ್‌‌ಕೆಜಿ, ಯುಕೆಜಿ; ಜು.22ಕ್ಕೆ ಉದ್ಘಾಟನೆ

Viral Video
ಕ್ರಿಕೆಟ್24 mins ago

Viral Video: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಗುಳ್ಳೆ ನರಿ; ವಿಡಿಯೊ ವೈರಲ್​

terror activities
ದೇಶ32 mins ago

Terror Activities: ಉಗ್ರರ ಬೇಟೆಗೆ 500ಕ್ಕೂ ಹೆಚ್ಚು ಪ್ಯಾರಾ ಕಮಾಂಡೋಗಳು ಗಡಿಯಲ್ಲಿ ಸಜ್ಜು

Siddaramaiah
ಕರ್ನಾಟಕ46 mins ago

CM Siddaramaiah: ವಾರದಲ್ಲಿ 4 ದಿನ ಶಾಲೆಗಳಿಗೆ ಮೊಟ್ಟೆ ಪೂರೈಸಲು ಅಜೀಂ ಪ್ರೇಮ್‌ಜಿ ಫೌಂಡೇಶನ್ ಜತೆ ಒಪ್ಪಂದ: ಸಿಎಂ

Viral News
ವೈರಲ್ ನ್ಯೂಸ್1 hour ago

Viral News: ಸ್ತನ ಸೌಂದರ್ಯ ಶಸ್ತ್ರಚಿಕಿತ್ಸೆಯ ವಿಡಿಯೊ; ಆಸ್ಪತ್ರೆ ವಿರುದ್ಧ ಮಹಿಳೆಯಿಂದ ಕೇಸ್‌!

gold rate today
ವಾಣಿಜ್ಯ1 hour ago

Gold Rate Today: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಸ್ವರ್ಣ ಪ್ರಿಯರಿಗೆ ಶುಭ ಸುದ್ದಿ

karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

Tanisha Kuppanda Lip lock with Pooja Gandhi shares her experience
ಸ್ಯಾಂಡಲ್ ವುಡ್1 hour ago

Tanisha Kuppanda: ಪೂಜಾ ಗಾಂಧಿ ಜತೆ ಲಿಪ್ ಲಾಕ್; 6 ಟೇಕ್ಸ್‌ ತೆಗೆದುಕೊಂಡ ಅನುಭವ ಹಂಚಿಕೊಂಡ ʻಬೆಂಕಿʼ ತನಿಷಾ!

Tantrik Arrest
ಕ್ರೈಂ1 hour ago

Tantrik Arrest: ರೋಗ ಗುಣಪಡಿಸುವುದಾಗಿ ಹೇಳಿ ಯುವತಿಯ ತಲೆಗೆ 18 ಸೂಜಿ ಚುಚ್ಚಿದ ಮಂತ್ರವಾದಿ!

Ganja seized
ಬೆಂಗಳೂರು1 hour ago

Ganja seized: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 3.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌