Viral News: ಸ್ತನ ಸೌಂದರ್ಯ ಶಸ್ತ್ರಚಿಕಿತ್ಸೆಯ ವಿಡಿಯೊ; ಆಸ್ಪತ್ರೆ ವಿರುದ್ಧ ಮಹಿಳೆಯಿಂದ ಕೇಸ್‌! - Vistara News

ವೈರಲ್ ನ್ಯೂಸ್

Viral News: ಸ್ತನ ಸೌಂದರ್ಯ ಶಸ್ತ್ರಚಿಕಿತ್ಸೆಯ ವಿಡಿಯೊ; ಆಸ್ಪತ್ರೆ ವಿರುದ್ಧ ಮಹಿಳೆಯಿಂದ ಕೇಸ್‌!

Viral News: ವೈದ್ಯೋ ನಾರಾಯಣೋ ಹರಿಃ ಎನ್ನುತ್ತಾರೆ. ತಮ್ಮ ಕಾಯಿಲೆಯ ವಿಷಯವನ್ನು ವೈದ್ಯರು ಗೌಪ್ಯವಾಗಿ ಇಡುತ್ತಾರೆ ಎಂಬ ನಂಬಿಕೆ. ಆದರೆ ಚೀನಾದ ಈ ಆಸ್ಪತ್ರೆಯೊಂದು ಮಹಿಳೆಯೊಬ್ಬಳ ಖಾಸಗಿ ಅಂಗದ ಶಸ್ತ್ರಚಿಕಿತ್ಸೆಯ ವಿಡಿಯೊವನ್ನು ಎಲ್ಲೆಡೆ ಹರಿಬಿಟ್ಟು ಮಹಿಳೆ ತಲೆತಗ್ಗಿಸುವ ಹಾಗೆ ಮಾಡಿದೆ. ಮಹಿಳೆ ಜನವರಿಯಲ್ಲಿ ಮಧ್ಯ ಚೀನಾದ ಕಾಸ್ಮೆಟಿಕ್ ಸರ್ಜರಿ ಆಸ್ಪತ್ರೆಯಲ್ಲಿ ಸ್ತನದ ಗಾತ್ರ ಹೆಚ್ಚಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಳು. ತಿಂಗಳುಗಳ ನಂತರ, ಇತರ ಹಲವಾರು ಮಹಿಳೆಯರೊಂದಿಗೆ ತನ್ನ ವಿಡಿಯೊ ಚೀನಾದ ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರವಾಗುತ್ತಿರುವುದನ್ನು ಕಂಡು ಅವಳು ಶಾಕ್ ಆಗಿ ಕ್ರಮಕ್ಕೆ ಮುಂದಾಗಿದ್ದಾಳೆ.

VISTARANEWS.COM


on

Viral News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೆಲವೊಂದು ಆಸ್ಪತ್ರೆಗಳು ತಮ್ಮಲ್ಲಿ ನಡೆದ ಶಸ್ತ್ರಚಿಕಿತ್ಸೆಗಳನ್ನು ವಿಡಿಯೊ ಮಾಡಿ ಯುಟ್ಯೂಬ್‍ನಲ್ಲಿ ಪೋಸ್ಟ್ ಮಾಡುತ್ತಾರೆ. ಹಾಗಾಗಿ ನಾವು ಯುಟ್ಯೂಬ್‍ನಲ್ಲಿ ಹಲವು ಶಸ್ತ್ರಚಿಕಿತ್ಸೆಗಳ ವಿಡಿಯೊಗಳನ್ನು ನೋಡುತ್ತೇವೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬಳ ಸ್ತನ ಇಂಪ್ಲಾಂಟ್‌ ಶಸ್ತ್ರಚಿಕಿತ್ಸೆಯನ್ನು ರಹಸ್ಯವಾಗಿ ಚಿತ್ರೀಕರಿಸಿದ ಆಸ್ಪತ್ರೆ ಅದನ್ನು ಆನ್‍ಲೈನ್‍ನಲ್ಲಿ ಪೋಸ್ಟ್ ಮಾಡಿದೆ. ಈ ವಿಡಿಯೊ ಎಲ್ಲೆಡೆ ವೈರಲ್‌ (Viral News) ಆಗಿದೆ. ಇದರಿಂದ ನೊಂದ ಮಹಿಳೆ ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾಳೆ.

ವರದಿ ಪ್ರಕಾರ, ಮಹಿಳೆ ಜನವರಿಯಲ್ಲಿ ಮಧ್ಯ ಚೀನಾದ ಕಾಸ್ಮೆಟಿಕ್ ಸರ್ಜರಿ ಆಸ್ಪತ್ರೆಯಲ್ಲಿ ಸ್ತನದ ಗಾತ್ರದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಳು. ತಿಂಗಳುಗಳ ನಂತರ, ಇತರ ಹಲವಾರು ಮಹಿಳೆಯರೊಂದಿಗೆ ತನ್ನ ವಿಡಿಯೊ ಚೀನಾದ ಸೋಶಿಯಲ್ ಮೀಡಿಯಾದ ಪ್ಲಾಟ್‍ಫಾರ್ಮ್‍ನಲ್ಲಿ ಪ್ರಸಾರವಾಗುತ್ತಿರುವುದನ್ನು ಕಂಡು ಅವಳು ಶಾಕ್‌ ಆದಳು. ಈ ಕ್ಲಿಪ್‍ನಲ್ಲಿ ಆಕೆಗೆ ಶಸ್ತ್ರಚಿಕಿತ್ಸೆಯ ನಂತರ, ಬ್ಯಾಂಡೇಜ್ ಮತ್ತು ಅರಿವಳಿಕೆಗೆ ಒಳಗಾಗಿರುವುದನ್ನು ತೋರಿಸಿದೆ ಎಂದು ವರದಿಯಾಗಿದೆ.

Viral News

ಈ ಘಟನೆಯ ಬಗ್ಗೆ ಬೇಸರಗೊಂಡ ಮಹಿಳೆ ತನ್ನ ಜೀವನದಲ್ಲಿ ರಹಸ್ಯವಾಗಿಡಬೇಕಾಗಿದ್ದ ಈ ವಿಚಾರವನ್ನು ಬಹಿರಂಗಪಡಿಸಬಾರದೆಂದು ತಿಳಿಸಿ ವಿಡಿಯೊ ಶೂಟ್ ಮಾಡಿದ ವ್ಯಕ್ತಿಯನ್ನು ಗುರುತಿಸುವಂತೆ ಮತ್ತು ವಿಡಿಯೊವನ್ನು ಡಿಲೀಟ್ ಮಾಡುವಂತೆ ಆಕೆ ಪದೇ ಪದೇ ಆಸ್ಪತ್ರೆಯನ್ನು ಸಂಪರ್ಕಿಸಿ ವಿನಂತಿಸಿಕೊಂಡಿದ್ದಾಳೆ. ಹಾಗೂ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಮತ್ತು ಪರಿಹಾರವನ್ನು ನೀಡುವಂತೆ ಆಕೆ ಆಸ್ಪತ್ರೆಯ ಅಧಿಕಾರಿಗಳನ್ನು ಕೇಳಿದ್ದಾಳೆ. ಆದರೆ ಆಸ್ಪತ್ರೆಯ ಅಧಿಕಾರಿಗಳು ಕ್ಷಮೆಯಾಚಿಸಲು ಹಾಗೂ ವಿಡಿಯೊವನ್ನು ಡಿಲೀಟ್ ಮಾಡಲು ನಿರಾಕರಿಸಿದ್ದಾರೆ. ಈ ವಿಡಿಯೊವನ್ನು ಯಾರು ಮಾಡಿದರೆಂದು ಪತ್ತೆಹಚ್ಚುವುದು ಅಸಾಧ್ಯ ಎಂದು ಆಸ್ಪತ್ರೆ ಹೇಳಿದೆ.

ಆದರೆ ವಿಡಿಯೊವನ್ನು ಚಿತ್ರೀಕರಿಸಿದ ವ್ಯಕ್ತಿ ಯಾರು ಎಂಬುದು ಆಸ್ಪತ್ರೆಯವರಿಗೆ ತಿಳಿದಿರಬೇಕು. ಯಾಕೆಂದರೆ ಆಸ್ಪತ್ರೆಯ ಆಪರೇಟಿಂಗ್ ಥಿಯೇಟರ್‌ನೊಳಗೆ ವೈದ್ಯರ ಅನುಮತಿ ಇಲ್ಲದೇ ಸಾಮಾನ್ಯ ಜನರು ಬರಲು ನಿಷೇಧವಿದೆ. ಮತ್ತು ಈ ವಿಡಿಯೊದಲ್ಲಿ ವೈದ್ಯರು ಮತ್ತು ನರ್ಸ್‍ಗಳಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಇದರಿಂದಾಗಿ ಹೊರಗಿನವರು ಪ್ರವೇಶಿಸಲು ಮತ್ತು ವಿಡಿಯೊ ಮಾಡಲು ಸಾಧ್ಯವಿಲ್ಲ ಎಂದು ಮಹಿಳೆ ವಾದಿಸಿದ್ದಾಳೆ. ಆದರೆ ವಿಡಿಯೊವನ್ನು ರೆಕಾರ್ಡ್ ಮಾಡಿದ ವ್ಯಕ್ತಿಯು ಆಸ್ಪತ್ರೆಯಿಂದ ಹೊರಹೋಗಿದ್ದಾನೆ ಮತ್ತು ಅವರು ತಮ್ಮ ಬಗ್ಗೆ ಮಾಹಿತಿಯನ್ನು ನೀಡಿಲ್ಲ ಎಂದು ಆಸ್ಪತ್ರೆ ಹೇಳಿಕೊಂಡಿದೆ. ಹಾಗಾಗಿ ಆಸ್ಪತ್ರೆಯ ವಿರುದ್ದ ಸಿಟ್ಟಿಗೆದ್ದ ಮಹಿಳೆ ಆಸ್ಪತ್ರೆಯ ವಿರುದ್ಧ ಮೊಕದ್ದಮೆ ಹೂಡಲು ನಿರ್ಧರಿಸಿದ್ದಾಳೆ.

ಇದನ್ನೂ ಓದಿ: ವಾಟರ್‌ ಟ್ಯಾಂಕ್‌ ಮೇಲಿನಿಂದ ಜಿಗಿದ ವಿದ್ಯಾರ್ಥಿ; ವಿಡಿಯೋ ಇದೆ

ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಕಾರಣ ಆಸ್ಪತ್ರೆಯ ಈ ಪ್ರತಿಕ್ರಿಯೆಗೆ ಆನ್‍ಲೈನ್‍ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ಆಸ್ಪತ್ರೆಯ ಬೇಜವಾಬ್ದಾರಿಯ ಬಗ್ಗೆ ನೆಟ್ಟಿಗರು ರೊಚ್ಚಿಗೆದ್ದಿದ್ದಾರೆ. ಈ ಘಟನೆಯ ಬಗ್ಗೆ ಮಾತನಾಡಿದ ಹೆನಾನ್ನ ಟಿಯಾನ್ಕ್ಸಿನ್(Tianxin) ಕಾನೂನು ಸಂಸ್ಥೆಯ ವಕೀಲ ಮಾ ಬಿನ್, ರೋಗಿಗಳ ಮುಖಗಳನ್ನು ಅವರ ಒಪ್ಪಿಗೆಯಿಲ್ಲದೆ ತೋರಿಸುವ ವಿಡಿಯೊಗಳನ್ನು ಆನ್‍ಲೈನ್‍ನಲ್ಲಿ ಪೋಸ್ಟ್ ಮಾಡುವುದು ಗೌಪ್ಯತೆ ಹಕ್ಕುಗಳು ಮತ್ತು ಇಮೇಜ್ ಹಕ್ಕುಗಳ ಉಲ್ಲಂಘನೆಯಾಗಿದೆ . ವಿಡಿಯೊವನ್ನು ಹೊರಗಿನ ವ್ಯಕ್ತಿ ಮಾಡಿದ್ದರೂ ಕೂಡ ಅದಕ್ಕೆ ಆಸ್ಪತ್ರೆಯೇ ಜವಾಬ್ದಾರವಾಗಿರುತ್ತದೆ ಎಂದು ತಿಳಿಸಿದ್ದಾರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Viral Video: ಅತೀ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ; ಮೇಲೆ ಹಾರಿ ನೆಲಕ್ಕೆ ಅಪ್ಪಳಿಸಿದ ದಂಪತಿ

Viral Video: ವೇಗವಾಗಿ ಬಂದ ಕಾರೊಂದು ದಂಪತಿ ಹೋಗುತ್ತಿದ್ದ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ನಂತರ ಅವರು ಮೇಲೆ ಹಾರಿ ನೆಲಕ್ಕೆ ಅಪ್ಪಳಿಸಿ ಬಿದ್ದಿದ್ದಾರೆ. ಪುಣೆ ಜಿಲ್ಲೆಯ ಜುನ್ನಾರ್ ತಾಲ್ಲೂಕಿನ ಪಿಂಪ್ರಿ ಪೆಂಧರ್ ಗ್ರಾಮದ ಬಳಿ ಗುರುವಾರ ಈ ಘಟನೆ ನಡೆದಿದೆ. ದಂಪತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಅಲ್ಲದೆ, ಕಾರಿನ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

VISTARANEWS.COM


on

Viral Video
Koo

ಪುಣೆ: ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ದಂಪತಿ ಹಾರಿ ರಸ್ತೆಯ ಮೇಲೆ ಬಿದ್ದ ಘಟನೆ ಪುಣೆಯ ಅಹ್ಮದ್ ನಗರ-ಕಲ್ಯಾಣ್ ಹೆದ್ದಾರಿಯಲ್ಲಿ ನಡೆದಿದೆ. ಅದೃಷ್ಟವಶಾತ್, ದಂಪತಿಗೆ ಅಪಘಾತದಲ್ಲಿ ಗಾಯವಾದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿವೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬರುವಂತೆ, ವೇಗವಾಗಿ ಬಂದ ಕಾರು ದಂಪತಿ ಹೋಗುತ್ತಿದ್ದ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ನಂತರ ಅವರು ಮೇಲೆ ಹಾರಿ ಹೋಗಿ ನೆಲಕ್ಕೆ ಅಪ್ಪಳಿಸಿ ಬಿದ್ದಿದ್ದಾರೆ. ಪುಣೆ ಜಿಲ್ಲೆಯ ಜುನ್ನಾರ್ ತಾಲ್ಲೂಕಿನ ಪಿಂಪ್ರಿ ಪೆಂಧರ್ ಗ್ರಾಮದ ಬಳಿ ಗುರುವಾರ ಈ ಘಟನೆ ನಡೆದಿದೆ. ದಂಪತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಅಲ್ಲದೆ, ಕಾರಿನ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಕಳೆದ ಕೆಲವು ತಿಂಗಳುಗಳಿಂದ ಪುಣೆ ಹೈ ಪ್ರೊಫೈಲ್ ಹಿಟ್ ಅಂಡ್ ರನ್ ಪ್ರಕರಣಗಳಿಗೆ ಸಾಕ್ಷಿಯಾಗಿದೆ. ಉದ್ಯಮಿಯ ಅಪ್ರಾಪ್ತ ವಯಸ್ಸಿನ ಮಗನೊಬ್ಬನ ಕಾರು ಅಪಘಾತವು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಗಿತ್ತು. ಅಪ್ರಾಪ್ತ ವಯಸ್ಕನೊಬ್ಬ ಚಲಾಯಿಸುತ್ತಿದ್ದ ಐಷಾರಾಮಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಪುಣೆಯಲ್ಲಿ ನಡೆದಿದೆ. 17 ವರ್ಷದ ಕಾರು ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕಲ್ಯಾಣಿ ನಗರದಲ್ಲಿ ಮೇ 18ರಂದು ಮುಂಜಾನೆ 3.15 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ, ಇಲ್ಲಿನ ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಮುಗಿಸಿದ ಸ್ನೇಹಿತರ ಗುಂಪು ತಮ್ಮ ಮೋಟಾರು ಬೈಕುಗಳಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಲ್ಯಾಣಿ ನಗರ ಜಂಕ್ಷನ್ ಬಳಿ, ವೇಗವಾಗಿ ಬಂದ ಐಷಾರಾಮಿ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಅದರ ಇಬ್ಬರು ಸವಾರರು ವಾಹನದಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕಾರಿನಲ್ಲಿ ಬಂದ ಡಕಾಯಿತರು; ಬ್ಯಾಗ್‌ ಕಸಿಯಲು ವಿದ್ಯಾರ್ಥಿನಿಯನ್ನು 20 ಅಡಿ ದೂರ ಎಳೆದೊಯ್ದರು! ಆಘಾತಕಾರಿ ವಿಡಿಯೊ

ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದೆ, ಇದರಲ್ಲಿ ಅಪಘಾತಕ್ಕೀಡಾದ ಕಾರಿನಿಂದ ಹೊರಬರಲು ಪ್ರಯತ್ನಿಸಿದ ಚಾಲಕನನ್ನು ಜನರ ಗುಂಪು ಥಳಿಸುತ್ತಿರುವುದು ಕಂಡುಬಂದಿದೆ. ಕಾರು ಚಾಲಕನ ವಿರುದ್ಧ ಯೆರವಾಡಾ ಪೊಲೀಸ್ ಠಾಣೆಯಲ್ಲಿ ವಿವಿಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ,

Continue Reading

ವಿದೇಶ

Pakistan Crisis: ಲೀಟರ್‌ ಪೆಟ್ರೋಲ್‌ಗೆ 275 ರೂ., ಸಾಲ 79 ಲಕ್ಷ ಕೋಟಿ ರೂ.; ಪಾಕ್‌ ಸಂಪೂರ್ಣ ದಿವಾಳಿ

Pakistan Crisis: ಪಾಕಿಸ್ತಾನವು ಮೂರು ವರ್ಷಗಳಿಗಾಗಿ ಆರ್ಥಿಕ ನೀತಿಗಳನ್ನು ರೂಪಿಸಿದ್ದು, ಬಜೆಟ್‌ನಲ್ಲಿ ಪ್ರಾಂತ್ಯಗಳ ಪಾಲನ್ನು ಶೇ.39.4ರಿಂದ ಶೇ.48.7ಕ್ಕೆ ಏರಿಕೆ ಮಾಡಲು ಚಿಂತನೆ ನಡೆಸಿದೆ. ಇದರಿಂದಾಗಿ ಪಾಕಿಸ್ತಾನದ ಆಂತರಿಕ ಹಾಗೂ ವಿದೇಶಿ ಸಾಲದ ಮೊತ್ತವು ಗಣನೀಯವಾಗಿ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Pakistan Crisis
Koo

ಇಸ್ಲಾಮಾಬಾದ್: ಉಗ್ರರ ಪೋಷಣೆ, ಉಗ್ರರಿಗೆ ಹಣಕಾಸು ನೆರವು, ಚೀನಾದ ಯೋಜನೆಗಳಿಗೆ ಹಣ ಸುರಿಯುವುದು, ಅಸಮರ್ಥ ನಾಯಕತ್ವ, ದೂರದೃಷ್ಟಿಯೇ ಇಲ್ಲದ ಆರ್ಥಿಕ ನೀತಿಗಳಿಂದಾಗಿ ಪಾಕಿಸ್ತಾನವು (Pakistan) ಸಂಪೂರ್ಣವಾಗಿ ದಿವಾಳಿ ಅಂಚಿಗೆ ಬಂದುನಿಂತಿದೆ. ಅಗತ್ಯ ವಸ್ತುಗಳ ಬೆಲೆಯು ಗಗನಕ್ಕೇರಿದ್ದು, ಬಡವರು ನಿತ್ಯ ಪರದಾಡುತ್ತಿದ್ದಾರೆ. ಜಾಗತಿಕವಾಗಿಯೂ ಪಾಕಿಸ್ತಾನಕ್ಕೆ (Pakistan Crisis) ಹಣಕಾಸು ನೆರವು ಸಿಗುತ್ತಿಲ್ಲ. ಹೆಚ್ಚಿನ ಸಾಲವೂ ಸಿಗುತ್ತಿಲ್ಲ. ಇದರ ಬೆನ್ನಲ್ಲೇ, ಪಾಕಿಸ್ತಾನದ ಸಾಲದ ಪ್ರಮಾಣವು 2025ರ ವೇಳೆಗೆ 79 ಲಕ್ಷ ಕೋಟಿ ರೂ. (ಪಾಕಿಸ್ತಾನದ ಕರೆನ್ಸಿ) (Pakistan Debt) ಆಗಲಿದೆ ಎಂದು ವರದಿಯೊಂದು ತಿಳಿಸಿದೆ.

ಹೌದು, ಪಾಕಿಸ್ತಾನವು ಮೂರು ವರ್ಷಗಳಿಗಾಗಿ ಆರ್ಥಿಕ ನೀತಿಗಳನ್ನು ರೂಪಿಸಿದ್ದು, ಬಜೆಟ್‌ನಲ್ಲಿ ಪ್ರಾಂತ್ಯಗಳ ಪಾಲನ್ನು ಶೇ.39.4ರಿಂದ ಶೇ.48.7ಕ್ಕೆ ಏರಿಕೆ ಮಾಡಲು ಚಿಂತನೆ ನಡೆಸಿದೆ. ಇದರಿಂದಾಗಿ ಪಾಕಿಸ್ತಾನದ ಆಂತರಿಕ ಹಾಗೂ ವಿದೇಶಿ ಸಾಲದ ಮೊತ್ತವು ಗಣನೀಯವಾಗಿ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ. ಪಾಕಿಸ್ತಾನವು ಸದ್ಯ 73 ಲಕ್ಷ ಕೋಟಿ ರೂ. ಸಾಲ ಹೊಂದಿದೆ. 2022-23ರಲ್ಲಿ 71 ಲಕ್ಷ ಕೋಟಿ ರೂ. ಸಾಲ ಹೊಂದಿತ್ತು. ಈಗ ಮತ್ತೆ ಸಾಲ ಮಾಡುವ ಮೂಲಕ ಪಾಕಿಸ್ತಾನವು ಅಪಾಯದ ಅಂಚಿಗೆ ಹೋಗುತ್ತಿದೆ ಎಂದೇ ಆರ್ಥಿಕ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಲೀಟರ್‌ ಪೆಟ್ರೋಲ್‌ಗೆ 275 ರೂ.

ಪಾಕಿಸ್ತಾನದಲ್ಲಿ ಒಂದು ಲೀಟರ್‌ ಹಾಲಿನ ಬೆಲೆ 220 ರೂ. ಇದೆ. ಒಂದು ಲೀಟರ್‌ ಪೆಟ್ರೋಲ್‌ಗೆ 275 ರೂ., ಲೀಟರ್‌ ಡೀಸೆಲ್‌ಗೆ 83 ರೂ., ಮೊಟ್ಟೆಗೆ 66 ರೂ., ಲೀಟರ್‌ ಅಡಗೆ ಎಣ್ಣೆಗೆ 560 ರೂ., ಒಂದು ರೊಟ್ಟಿಗೆ 30 ರೂ. ಆಗಿದೆ. ಪ್ರತಿಯೊಂದು ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಇದರಿಂದ ಬಡವರು ಮೂರು ಹೊತ್ತು ಹೊಟ್ಟೆ ತುಂಬಿಸಿಕೊಳ್ಳಲೂ ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಾಕಿಸ್ತಾನದ ಹಣಕಾಸು ನೀತಿಗಳ ವಿರುದ್ಧ ಬಲೂಚಿಸ್ತಾನ ಸೇರಿ ಹಲವು ಪ್ರಾಂತ್ಯಗಳಲ್ಲಿ ದಂಗೆ, ಪ್ರತಿಭಟನೆ, ಹಿಂಸಾಚಾರಗಳು ಭುಗಿಲೆದ್ದಿವೆ.

ಸರ್ಕಾರಿ ಸಂಸ್ಥೆಗಳ ಮಾರಾಟಕ್ಕೆ ತೀರ್ಮಾನ

ಸರ್ಕಾರಿ ನೌಕರರಿಗೆ ಸಂಬಳ ಕೊಡಲೂ ಆಗದ ಕಾರಣ ಪಾಕಿಸ್ತಾನವು ಕಾರ್ಯತಂತ್ರದ ಘಟಕಗಳನ್ನು ಹೊರತುಪಡಿಸಿ ಎಲ್ಲ ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ. ಈ ಬಗ್ಗೆ ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ತಿಳಿಸಿದ್ದಾರೆ. ಶೆಹಬಾಜ್ ಷರೀಫ್ ನೇತೃತ್ವದಲ್ಲಿ ನಡೆದ ಸರ್ಕಾರಿ ಉದ್ಯಮಗಳ (SOEs) ಖಾಸಗೀಕರಣ ಪ್ರಕ್ರಿಯೆಯ ಪರಿಶೀಲನಾ ಸಭೆಯ ನಂತರ ಈ ನಿರ್ಧಾರ ಪ್ರಕಟಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದು 2024ರಿಂದ 29ರವರೆಗೆ ಹಂತ ಹಂತವಾಗಿ ನಡೆಯಲಿರುವ ಖಾಸಗೀಕರಣದ ಮಾರ್ಗಸೂಚಿಯನ್ನು ಈ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಇದನ್ನೂ ಓದಿ: Doda Encounter: ಜಮ್ಮು ದಾಳಿ ಹಿಂದೆ ಇದ್ಯಾ ಪಾಕ್‌ ಮಾಜಿ ಸೈನಿಕರ ಕೈವಾಡ? ಉಗ್ರರಿಗಿದ್ಯಾ ಸೇನಾ ತರಬೇತಿ?

Continue Reading

ಉಡುಪಿ

Udupi News : ಸತ್ತ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದ ಅಸಾಮಿ!

ಉಡುಪಿಯಲ್ಲಿ ಅಸಾಮಿಯೊಬ್ಬ ಸತ್ತ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ರಸ್ತೆಯುದ್ಧಕ್ಕೂ (Udupi News) ಎಳೆದೊಯ್ದಿದ್ದಾನೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಈ ಸಂಬಂಧ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VISTARANEWS.COM


on

By

udupi News
Koo

ಉಡುಪಿ: ಉಡುಪಿಯಲ್ಲೊಂದು (Udupi News) ಅಮಾನವೀಯ ಘಟನೆ ನಡೆದಿದೆ. ಅಸಾಮಿಯೊಬ್ಬ ಸತ್ತು ಹೋದ ನಾಯಿಯ ಕೊರಳಿಗೆ ಸರಪಳಿ ಬಿಗಿದು ದ್ವಿಚಕ್ರ ವಾಹನಕ್ಕೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದಿರುವ ಘಟನೆ ನಡೆದಿದೆ.

ಕಾಪುವಿನ ಕೊಂಬಗುಡ್ಡೆಯ ನಿವಾಸಿ ಖಾದರ್ ಎಂಬಾತ ಸತ್ತಿರುವ ನಾಯಿಯ ಕೊರಳಿಗೆ ಸರಪಳಿ ಬಿಗಿದ್ದಿದ್ದಾನೆ. ಬಳಿಕ ಕೊಂಬಗುಡ್ಡೆಯಿಂದ ಶಿರ್ವ ಪೇಟೆಯವರೆಗೆ ಸುಮಾರು 5 ಕಿ.ಮೀ ದೂರದವರೆಗೆ ಎಳೆದುಕೊಂಡು ಹೋಗಿದ್ದಾನೆ. ಆದರೆ ಯಾಕಾಗಿ ಹೀಗೆ ಮಾಡಿದ್ದು? ನಾಯಿ ಸತ್ತಿದ್ದು ಹೇಗೆ? ಅದು ತಾನೇ ಸಾಕಿದ ಶ್ವಾನವಾ ಅಥವಾ ಬೀದಿ ನಾಯಿನಾ ಎಂಬುದು ತಿಳಿದು ಬಂದಿಲ್ಲ.

ಸದ್ಯ ಸ್ಥಳೀಯರಿಂದ ಈ ವಿಡಿಯೊ ವೈರಲ್ ಆದ ಬೆನ್ನಲ್ಲೆ ಶಿರ್ವ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಫುಟ್‌ಪಾತ್ ಮೇಲೆ ನಿಂತಿದ್ದ ಕಾರ್ಮಿಕರ ಮೇಲೆ ಹರಿದ ಟಾಟಾ ಏಸ್; ನದಿಗೆ ಜಾರಿ ಬಿದ್ದ ವ್ಯಕ್ತಿ, ಗ್ರೇಟ್‌ ಎಸ್ಕೇಪ್‌

ಕಾಲು ತೊಳೆಯಲು ಹೋಗಿ ನದಿಗೆ ಜಾರಿ ಬಿದ್ದ ವ್ಯಕ್ತಿ

ರಭಸವಾಗಿ ಹರಿಯುತ್ತಿದ್ದ ಕೃಷ್ಣ ನದಿ ದಡಕ್ಕೆ ಕಾಲು ತೊಳೆಯಲು ಹೋಗಿದ್ದ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿದ್ದ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಬಳಿ ಕೃಷ್ಣ ನದಿಯಲ್ಲಿ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ‌ ಸದ್ಯ ವಿಡಿಯೊ ವೈರಲ್ ಆಗುತ್ತಿದೆ.

ತಿಂಥಣಿ ಗ್ರಾಮದ ಕಾಸಿಂಸಾಬ್ ಎಂಬಾತ ಕಾಲು ಜಾರಿ ನದಿಗೆ ಬಿದ್ದವನು. ನೀರಿನ ಸೆಳೆತಕ್ಕೆ ಸಿಲುಕಿ ಕೊಂಚಿಕೊಂಡು ಹೋಗುತ್ತಿದ್ದವನನ್ನು ಕೂಡಲೇ ಕೂಡ್ಲೆ ಗ್ರಾಮದ ಅಂಬಿಗರು ತೆಪ್ಪದ ಮೂಲಕ ತೆರಳಿ ಕಾಸಿಂಸಾಬ್‌ನನ್ನು ರಕ್ಷಣೆ ಮಾಡಿದ್ದಾರೆ. ಅಂಬಿಗರ ಸಾಹಸಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

King Cobra Rescue: 12 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪವನ್ನು ಹಿಡಿದದ್ದು ಹೇಗೆ? ವಿಡಿಯೊ ನೋಡಿ

King Cobra Rescue: ಆಗುಂಬೆಯಲ್ಲಿ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನು ವನ್ಯಜೀವಿ ಅಧಿಕಾರಿಗಳು ರಕ್ಷಿಸಿ ಇತ್ತೀಚೆಗೆ ಕಾಡಿಗೆ ಬಿಟ್ಟಿದ್ದರು. ಆಗುಂಬೆ ರೈನ್ ಫಾರೆಸ್ಟ್ ಸಂಶೋಧನಾ ಕೇಂದ್ರದ (ಎಆರ್‌ಆರ್‌ಎಸ್‌) ಕ್ಷೇತ್ರ ನಿರ್ದೇಶಕ ಅಜಯ್ ಗಿರಿ ಅವರು ಅದರ ವಿಡಿಯೊ ಮಾಡಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನು ಭಾರತೀಯ ಅರಣ್ಯ ಸೇವೆಗಳ ಅಧಿಕಾರಿ ಸುಸಂತ ನಂದ ಅವರು ತಮ್ಮ ಪೇಜ್‍ನಲ್ಲಿ ಹಂಚಿಕೊಂಡಿದ್ದಾರೆ. ನೀವೂ ಈ ವಿಡಿಯೊ ನೋಡಿ.

VISTARANEWS.COM


on

King Cobra Rescue
Koo

ಬೆಂಗಳೂರು: ಕಾಳಿಂಗ ಸರ್ಪ ಬಹಳ ಅಪರೂಪವಾಗಿ ಕಂಡುಬರುವಂತಹ ಹಾವು. ಇದು ಬಹಳ ಅಪಾಯಕಾರಿ ಕೂಡ. ಇವು ಹೆಚ್ಚಾಗಿ ದಟ್ಟ ಕಾಡಿನ ಪೊದೆಗಳಲ್ಲಿ ಕಂಡು ಬರುತ್ತದೆ. ಆಗುಂಬೆಯ ಸಮೀಪ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ(King Cobra Rescue)ವೊಂದು ಪ್ರತ್ಯಕ್ಷವಾಗಿ ಆತಂಕ ಮೂಡಿಸಿತ್ತು. ಅದನ್ನು ರಕ್ಷಣೆ ಮಾಡಿರುವ ವಿಡಿಯೊ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಆಗುಂಬೆಯಲ್ಲಿ 12 ಅಡಿ ಉದ್ದದ ಈ ಬೃಹತ್ ಕಾಳಿಂಗ ಸರ್ಪವನ್ನು ವನ್ಯಜೀವಿ ಅಧಿಕಾರಿಗಳು ರಕ್ಷಿಸಿ ಕಾಡಿಗೆ ಬಿಟ್ಟಿದ್ದರು. ಆಗುಂಬೆ ರೈನ್ ಫಾರೆಸ್ಟ್ ಸಂಶೋಧನಾ ಕೇಂದ್ರದ (ಎಆರ್‌ಆರ್‌ಎಸ್‌) ಕ್ಷೇತ್ರ ನಿರ್ದೇಶಕ ಅಜಯ್ ಗಿರಿ ಅವರು ಅದರ ವಿಡಿಯೊ ಮಾಡಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನು ಭಾರತೀಯ ಅರಣ್ಯ ಸೇವೆಗಳ ಅಧಿಕಾರಿ ಸುಸಂತ ನಂದ ಅವರು ತಮ್ಮ ಪೇಜ್‍ನಲ್ಲಿ ಹಂಚಿಕೊಂಡಿದ್ದಾರೆ. ಇದು ಈಗ ವೈರಲ್ ಆಗಿದೆ.

ಕಾಳಿಂಗ ಸರ್ಪ ರಸ್ತೆ ದಾಟುತ್ತಿರುವುದನ್ನು ಗ್ರಾಮಸ್ಥರು ನೋಡಿದ್ದರು. ಆದರೆ ನಂತರ ಅದು ಮನೆಯೊಂದರ ಕಾಂಪೌಂಡ್‍ನಲ್ಲಿರುವ ಪೊದೆಯಲ್ಲಿ ವಾಸವಾಗಿದ್ದು, ಇದನ್ನು ನೋಡಿದ ಮನೆಯ ಮಾಲೀಕರು ಕೂಡಲೇ ಅರಣ್ಯ ಇಲಾಖೆ ಮತ್ತು ಎಆರ್‌ಆರ್‌ಎಸ್‌ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಿರ್ದೇಶಕ ಅಜಯ್ ಗಿರಿ ಅವರು ಸರ್ಪದ ಬಳಿ ಹೋಗದಂತೆ ಎಚ್ಚರಿಕೆ ನೀಡಿದ್ದಾರೆ. ನಂತರ ಗಿರಿ ಮತ್ತು ಅವರ ತಂಡ ಸ್ಥಳಕ್ಕೆ ಬಂದು ರಾಡ್ ಸಹಾಯದಿಂದ ಮರವೇರಿದ ಸರ್ಪವನ್ನು ಕೆಳಗಿಳಿಸಿದರು. ನಂತರ, ಅದನ್ನು ಚೀಲದಲ್ಲಿ ಹಾಕಿ ಶೀಘ್ರದಲ್ಲೇ ಕಾಡಿಗೆ ಬಿಡಲಾಯಿತು.

ಘಟನೆಯನ್ನು ವಿವರಿಸಿದ ಗಿರಿ ತಮ್ಮ ಪೋಸ್ಟ್ ನಲ್ಲಿ, “ಪರಿಸ್ಥಿತಿಯ ಬಗ್ಗೆ ಎಆರ್‌ಆರ್‌ಎಸ್‍ಗೆ ಮಾಹಿತಿ ನೀಡಲಾಯಿತು. ಕರೆ ಮಾಡಿದಾಗ ನಾವು ಸ್ಥಳೀಯರಿಗೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ವಿಷಯಗಳ ಬಗ್ಗೆ ಸೂಚನೆ ನೀಡಿದೆವು. ನಂತರ ಸ್ಥಳಕ್ಕೆ ಧಾವಿಸಿದ್ದೇವೆ. ತಪಾಸಣೆಯ ನಂತರ ನಾವು ಹಾವನ್ನು ಚೀಲದೊಳಗೆ ಹಾಕಿ ರಕ್ಷಿಸಿದೆವು. ನಾವು ಸ್ಥಳೀಯರಿಗೆ ಸರ್ಪದ ಬಗ್ಗೆ ಜಾಗೃತಿ ಮೂಡಿಸುವ ಮಾಹಿತಿ ನೀಡಿದೆವು. ಸರ್ಪವನ್ನು ಹಿಡಿಯಲು ಅದಕ್ಕೆ ಬೇಕಾದ ಸಾಮಗ್ರಿಗಳನ್ನೂ ಕೊಟ್ಟಿದ್ದೇವೆ. ನಂತರ ಸ್ಥಳೀಯರು ಮತ್ತು ಉಸ್ತುವಾರಿ ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಹಾವನ್ನು ಹಿಡಿದು ಕಾಡಿಗೆ ಬಿಡಲಾಯಿತು ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಮಗಳೊಂದಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗುಪ್ತಾಂಗ ತೋರಿಸಿದ ವಿಕೃತ ಕಾಮಿ!

ಇನ್ಸ್ಟಾಗ್ರಾಂನಲ್ಲಿ ಸುಮಾರು 13,000 ಫಾಲೋವರ್ಸ್‌ಗಳನ್ನು ಹೊಂದಿರುವ ಅಜಯ್ ಗಿರಿ, ಆಗಾಗ ಹಾವುಗಳಿಗೆ ಸಂಬಂಧಿಸಿದ ವಿಡಿಯೊಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ. ಕಾಳಿಂಗ ಸರ್ಪದ ಈ ವಿಡಿಯೊಗೆ ಸಂಬಂಧಿಸಿದಂತೆ, ಸುಸಂತ ನಂದ ಅವರು ಯಶಸ್ವಿ ರಕ್ಷಣಾ ಕಾರ್ಯಾಚರಣೆ ನಡೆಸಿದ ಅಜಯ್ ಗಿರಿ ಮತ್ತು ಅವರ ತಂಡವನ್ನು ಶ್ಲಾಘಿಸಿದ್ದಾರೆ.

Continue Reading
Advertisement
Viral Video
ಕ್ರೈಂ11 mins ago

Viral Video: ಅತೀ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ; ಮೇಲೆ ಹಾರಿ ನೆಲಕ್ಕೆ ಅಪ್ಪಳಿಸಿದ ದಂಪತಿ

CM Siddaramaiah
ರಾಜಕೀಯ34 mins ago

CM Siddaramaiah: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ

Monsoon Fashion
ಫ್ಯಾಷನ್41 mins ago

Monsoon Fashion: ಮಾನ್ಸೂನ್‌ಗೆ ತಕ್ಕಂತೆ ಬದಲಾದ ಸೂಪರ್‌ ಮಾಡೆಲ್‌ ಸಂತೋಷ್‌ ರೆಡ್ಡಿ ಫ್ಯಾಷನ್‌!

karnataka rain
ಮಳೆ44 mins ago

Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

Paris Olympic 2024:
ಕ್ರೀಡೆ46 mins ago

Paris Olympic 2024 : ಒಲಿಂಪಿಕ್ ಪದಕ ಗೆದ್ದ ಭಾರತದ ಮೊದಲ ಮಹಿಳಾ ಅಥ್ಲೀಟ್​ ಕರ್ಣಂ ಮಲ್ಲೇಶ್ವರಿ ಸಾಧನೆಯ ವಿವರ ಇಲ್ಲಿದೆ

Manoj Soni
ದೇಶ1 hour ago

Manoj Soni: ಅಕ್ರಮ ಆರೋಪದ ಬೆನ್ನಲ್ಲೇ ಯುಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಮನೋಜ್‌ ಸೋನಿ ರಾಜೀನಾಮೆ

ಕರ್ನಾಟಕ1 hour ago

CM Siddaramaiah: ಅಧಿಕಾರ ದುರುಪಯೋಗ ಆರೋಪ; ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ದೂರು

UP Minister Resigns
ದೇಶ1 hour ago

UP Minister Resigns: ಯೋಗಿ ಸರ್ಕಾರದಿಂದ ಒಂದು ವಿಕೆಟ್‌ ಪತನ; ಸಚಿವೆ ಸೋನಮ್‌ ಚಿಶ್ಟಿ ರಾಜೀನಾಮೆ

Belgavi News
ಬೆಳಗಾವಿ1 hour ago

Belgavi News : ಬೆಳಗಾವಿಯಲ್ಲಿ ಮದ್ದು ಕುಟ್ಟುವಾಗ ಭಾರಿ ಸ್ಫೋಟ; ವ್ಯಕ್ತಿ ಸಜೀವ ದಹನ

Sonu Sood
ದೇಶ2 hours ago

Sonu Sood : ಸೋನು ಸೂದ್​, ಕಂಗನಾ ರಣಾವತ್​ ‘ಎಂಜಲು ರೊಟ್ಟಿಯ’ ಗಲಾಟೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ7 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌