Tantrik Arrest: ರೋಗ ಗುಣಪಡಿಸುವುದಾಗಿ ಹೇಳಿ ಯುವತಿಯ ತಲೆಗೆ 18 ಸೂಜಿ ಚುಚ್ಚಿದ ಮಂತ್ರವಾದಿ! - Vistara News

ಕ್ರೈಂ

Tantrik Arrest: ರೋಗ ಗುಣಪಡಿಸುವುದಾಗಿ ಹೇಳಿ ಯುವತಿಯ ತಲೆಗೆ 18 ಸೂಜಿ ಚುಚ್ಚಿದ ಮಂತ್ರವಾದಿ!

Tantrik Arrest: ವೈದ್ಯಕೀಯ ರಂಗ ಎಷ್ಟೇ ಮುಂದುವರಿದಿದ್ದರೂ ಜನ ಮಾತ್ರ ಇನ್ನೂ ಸುಧಾರಿಸಿಲ್ಲ. ಆರೋಗ್ಯದ ಸಮಸ್ಯೆ ಕಾಡಿದಾಕ್ಷಣ ಆಸ್ಪತ್ರೆಗೆ ಹೋಗಿ ಸೂಕ್ತ ಚಿಕಿತ್ಸೆ ಪಡೆಯುವ ಬದಲು ತಂತ್ರಿಗಳ ಮನೆಮುಂದೆ ಹೋಗಿ ನಿಲ್ಲುತ್ತಾರೆ. ಇದರಿಂದ ಆರೋಗ್ಯವನ್ನು ಇನ್ನಷ್ಟು ಹದಗೆಡಿಸಿಕೊಳ್ಳುತ್ತಾರೆ. ಒಡಿಶಾದ ಯುವತಿಯೊಬ್ಬಳು ನಾಲ್ಕು ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಳು. ವೈದ್ಯಕೀಯ ಚಿಕಿತ್ಸೆಯನ್ನು ಪಡೆದರೂ ಕೂಡ ಅವಳ ಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿಲ್ಲ. ಆಗ ಅವಳ ಕುಟುಂಬದವರು ತಂತ್ರಿ ಸಹಾಯವನ್ನು ಪಡೆಯಲು ಮುಂದಾಗಿದ್ದರು. ಇದರ ಪರಿಣಾಮ ಮಾತ್ರ ಭೀಕರ.

VISTARANEWS.COM


on

Tantrik Arrest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಂತ್ರವಿದ್ಯೆಗಳ ಪ್ರಯೋಗದ ಬಗ್ಗೆ ಜನರಿಗೆ ಇಂದಿಗೂ ನಂಬಿಕೆ ಇದೆ. ಹಾಗಾಗಿ ಕೆಲವು ಜನ ತಮಗೆ ಯಾವುದೇ ಸಮಸ್ಯೆಯಾದರೂ ಅದಕ್ಕಾಗಿ ಆಸ್ಪತ್ರೆಗೆ ಹೋಗುವ ಬದಲು ಭೂತ ಪ್ರೇತದ ನೆಪದಲ್ಲಿ ತಂತ್ರಿಗಳ ಬಳಿಗೆ ಹೋಗಿ ತಂತ್ರ ವಿದ್ಯೆ ಪ್ರಯೋಗಿಸುತ್ತಾರೆ. ಇದರಿಂದ ಮತ್ತಷ್ಟು ಸಮಸ್ಯೆಗೆ ಒಳಗಾಗುತ್ತಾರೆ. ಇದೀಗ ಅಂತಹದೊಂದು ಘಟನೆ ಒಡಿಶಾದಲ್ಲಿ ನಡೆದಿದ್ದು, ಇದರಿಂದ ಯುವತಿಯ ಸ್ಥಿತಿ ಗಂಭೀರವಾಗಿದೆ. ಒಡಿಶಾದ ಬಾಲಂಗೀರ್ ಜಿಲ್ಲೆಯಲ್ಲಿ ವೈದ್ಯಕೀಯ ಸಮಸ್ಯೆಯಿಂದ ಬಳಲುತ್ತಿದ್ದ 19 ವರ್ಷದ ಯುವತಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ತಲೆಗೆ ಅನೇಕ ಸೂಜಿಗಳನ್ನು ಚುಚ್ಚಿದ ಆರೋಪದ ಮೇಲೆ ತಂತ್ರಿಯೊಬ್ಬನ್ನು (Tantrik Arrest) ಬಂಧಿಸಲಾಗಿದೆ.

Tantrik Arrest

ಈ ಘಟನೆ ಬೆಳಕಿಗೆ ಬಂದ ನಂತರ ಗಂಭೀರ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವರಗಳ ಪ್ರಕಾರ, ಯುವತಿ ಕಳೆದ ನಾಲ್ಕು ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಳು. ವೈದ್ಯಕೀಯ ಚಿಕಿತ್ಸೆಯನ್ನು ಪಡೆದರೂ ಕೂಡ ಅವಳ ಸ್ಥಿತಿಯನ್ನು ಸುಧಾರಿಸಲು ಸಾಧ್ಯವಾಗಲಿಲ್ಲ, ಆಗ ಅವಳ ಕುಟುಂಬದವರು ತಂತ್ರಿ ಸಹಾಯವನ್ನು ಪಡೆಯಲು ಮುಂದಾಗಿದ್ದಾರೆ. ಹಾಗಾಗಿ ಯುವತಿ ತನ್ನ ಹೆತ್ತವರೊಂದಿಗೆ ತಂತ್ರಿಗಳ ಬಳಿಗೆ ಬಂದಿದ್ದಾಳೆ.

ಆರೋಪಿಯನ್ನು ತಂತ್ರಿ ಸಂತೋಷ್ ರಾಣಾ ಎಂಬುದಾಗಿ ಗುರುತಿಸಲಾಗಿದೆ. ಆತ ಮಹಿಳೆಯನ್ನು ಕೋಣೆಯೊಳಗೆ ಕರೆದೊಯ್ದಿದ್ದಾನೆ. ಒಂದು ಗಂಟೆಯ ನಂತರ ಅವನು ಅವಳನ್ನು ಹೊರಗೆ ಕರೆತಂದ. ಆದರೆ ಯುವತಿಯ ಪೋಷಕರು ಆಕೆ ಮತ್ತಷ್ಟು ಅಸ್ವಸ್ಥಗೊಂಡಿರುವುದನ್ನು ಗಮನಿಸಿದ ನಂತರ ಅವಳ ತಲೆಯೊಳಗೆ ಸೂಜಿಗಳನ್ನು ಪತ್ತೆ ಮಾಡಿದರು. ತನ್ನ ಮಗಳ ತಲೆಯೊಳಗೆ ಎಂಟು ಸೂಜಿಗಳನ್ನು ತೆಗೆದುಹಾಕಿದ್ದೇನೆ ಎಂಬುದಾಗಿ ಆಕೆಯ ತಂದೆ ತಿಳಿಸಿದ್ದಾರೆ. ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಸಿಟಿ ಸ್ಕ್ಯಾನ್ ನಡೆಸಲಾಯಿತು, ಆಗ ಆಕೆಯ ತಲೆಯಲ್ಲಿ ಇನ್ನೂ 10 ಸೂಜಿಗಳನ್ನು ಚುಚ್ಚಲಾಗಿದೆ ಎಂಬುದಾಗಿ ತಿಳಿದುಬಂದಿದೆ. ಈ ಸಮಯದಲ್ಲಿ ಅವಳು ಪ್ರಜ್ಞೆ ತಪ್ಪಿದ್ದಳು. ಹಾಗಾಗಿ ತಲೆಗೆ ಸೂಜಿ ಚುಚ್ಚಿದ ಬಗ್ಗೆ ಆಕೆಗೆ ಹೇಳಲು ಆಗಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಬಾಲಕಿ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ; ವಿಡಿಯೊ ಮನೆಗೇ ಕಳಿಸಿದ ದುಷ್ಟರು

ಈ ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ತಂತ್ರಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎನ್ನಲಾಗಿದೆ. ಈ ಘಟನೆಯು ಸಮುದಾಯದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ಇದು ತಂತ್ರ ವಿದ್ಯೆಗಳ ಮೂಲಕ ನೀಡುವ ಚಿಕಿತ್ಸೆಗಳಿಗೆ ಸಂಬಂಧಿಸಿದ ಅಪಾಯಗಳನ್ನು ತಿಳಿಸುತ್ತದೆ ಮತ್ತು ವೈದ್ಯಕೀಯ ಚಿಕಿತ್ಸೆ ಪಡೆಯಲು ಸಾಧ್ಯವಾಗದವರ ದುರ್ಬಲತೆಯನ್ನು ಎತ್ತಿ ತೋರಿಸಿದೆ. ಹಾಗಾಗಿ ಇಂತಹ ಸಂದರ್ಭಗಳಲ್ಲಿ ಅರ್ಹ ವೈದ್ಯಕೀಯ ಸಹಾಯವನ್ನು ಪಡೆಯುವುದು ಉತ್ತಮ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಮತ್ತು ಅಂತಹ ತಂತ್ರಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Viral Video: ಅತೀ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ; ಮೇಲೆ ಹಾರಿ ನೆಲಕ್ಕೆ ಅಪ್ಪಳಿಸಿದ ದಂಪತಿ

Viral Video: ವೇಗವಾಗಿ ಬಂದ ಕಾರೊಂದು ದಂಪತಿ ಹೋಗುತ್ತಿದ್ದ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ನಂತರ ಅವರು ಮೇಲೆ ಹಾರಿ ನೆಲಕ್ಕೆ ಅಪ್ಪಳಿಸಿ ಬಿದ್ದಿದ್ದಾರೆ. ಪುಣೆ ಜಿಲ್ಲೆಯ ಜುನ್ನಾರ್ ತಾಲ್ಲೂಕಿನ ಪಿಂಪ್ರಿ ಪೆಂಧರ್ ಗ್ರಾಮದ ಬಳಿ ಗುರುವಾರ ಈ ಘಟನೆ ನಡೆದಿದೆ. ದಂಪತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಅಲ್ಲದೆ, ಕಾರಿನ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

VISTARANEWS.COM


on

Viral Video
Koo

ಪುಣೆ: ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ದಂಪತಿ ಹಾರಿ ರಸ್ತೆಯ ಮೇಲೆ ಬಿದ್ದ ಘಟನೆ ಪುಣೆಯ ಅಹ್ಮದ್ ನಗರ-ಕಲ್ಯಾಣ್ ಹೆದ್ದಾರಿಯಲ್ಲಿ ನಡೆದಿದೆ. ಅದೃಷ್ಟವಶಾತ್, ದಂಪತಿಗೆ ಅಪಘಾತದಲ್ಲಿ ಗಾಯವಾದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿವೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬರುವಂತೆ, ವೇಗವಾಗಿ ಬಂದ ಕಾರು ದಂಪತಿ ಹೋಗುತ್ತಿದ್ದ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ನಂತರ ಅವರು ಮೇಲೆ ಹಾರಿ ಹೋಗಿ ನೆಲಕ್ಕೆ ಅಪ್ಪಳಿಸಿ ಬಿದ್ದಿದ್ದಾರೆ. ಪುಣೆ ಜಿಲ್ಲೆಯ ಜುನ್ನಾರ್ ತಾಲ್ಲೂಕಿನ ಪಿಂಪ್ರಿ ಪೆಂಧರ್ ಗ್ರಾಮದ ಬಳಿ ಗುರುವಾರ ಈ ಘಟನೆ ನಡೆದಿದೆ. ದಂಪತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಅಲ್ಲದೆ, ಕಾರಿನ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಕಳೆದ ಕೆಲವು ತಿಂಗಳುಗಳಿಂದ ಪುಣೆ ಹೈ ಪ್ರೊಫೈಲ್ ಹಿಟ್ ಅಂಡ್ ರನ್ ಪ್ರಕರಣಗಳಿಗೆ ಸಾಕ್ಷಿಯಾಗಿದೆ. ಉದ್ಯಮಿಯ ಅಪ್ರಾಪ್ತ ವಯಸ್ಸಿನ ಮಗನೊಬ್ಬನ ಕಾರು ಅಪಘಾತವು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಗಿತ್ತು. ಅಪ್ರಾಪ್ತ ವಯಸ್ಕನೊಬ್ಬ ಚಲಾಯಿಸುತ್ತಿದ್ದ ಐಷಾರಾಮಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಪುಣೆಯಲ್ಲಿ ನಡೆದಿದೆ. 17 ವರ್ಷದ ಕಾರು ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕಲ್ಯಾಣಿ ನಗರದಲ್ಲಿ ಮೇ 18ರಂದು ಮುಂಜಾನೆ 3.15 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ, ಇಲ್ಲಿನ ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಮುಗಿಸಿದ ಸ್ನೇಹಿತರ ಗುಂಪು ತಮ್ಮ ಮೋಟಾರು ಬೈಕುಗಳಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಲ್ಯಾಣಿ ನಗರ ಜಂಕ್ಷನ್ ಬಳಿ, ವೇಗವಾಗಿ ಬಂದ ಐಷಾರಾಮಿ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಅದರ ಇಬ್ಬರು ಸವಾರರು ವಾಹನದಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕಾರಿನಲ್ಲಿ ಬಂದ ಡಕಾಯಿತರು; ಬ್ಯಾಗ್‌ ಕಸಿಯಲು ವಿದ್ಯಾರ್ಥಿನಿಯನ್ನು 20 ಅಡಿ ದೂರ ಎಳೆದೊಯ್ದರು! ಆಘಾತಕಾರಿ ವಿಡಿಯೊ

ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದೆ, ಇದರಲ್ಲಿ ಅಪಘಾತಕ್ಕೀಡಾದ ಕಾರಿನಿಂದ ಹೊರಬರಲು ಪ್ರಯತ್ನಿಸಿದ ಚಾಲಕನನ್ನು ಜನರ ಗುಂಪು ಥಳಿಸುತ್ತಿರುವುದು ಕಂಡುಬಂದಿದೆ. ಕಾರು ಚಾಲಕನ ವಿರುದ್ಧ ಯೆರವಾಡಾ ಪೊಲೀಸ್ ಠಾಣೆಯಲ್ಲಿ ವಿವಿಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ,

Continue Reading

ಬೆಳಗಾವಿ

Belgavi News : ಬೆಳಗಾವಿಯಲ್ಲಿ ಮದ್ದು ಕುಟ್ಟುವಾಗ ಭಾರಿ ಸ್ಫೋಟ; ವ್ಯಕ್ತಿ ಸಜೀವ ದಹನ

Belgavi News : ಪಂಚಮಿ ಹಬ್ಬಕ್ಕೆಂದು ಮದ್ದು ಕುಟ್ಟುವಾಗ ಏಕಾಏಕಿ ಸ್ಫೋಟಗೊಂಡಿದ್ದು, ವ್ಯಕ್ತಿಯೊಬ್ಬರು ಸಜೀವ ದಹನ ಆಗಿದ್ದಾರೆ. ಬೆಳಗಾವಿಯಲ್ಲಿ ಈ ದುರ್ಘಟನೆ ನಡೆದಿದ್ದು, ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದಾರೆ.

VISTARANEWS.COM


on

By

Belgavi News
Koo

ಬೆಳಗಾವಿ: ಮದ್ದು ತಯಾರಿಸುವ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಜೀವ ದಹನವಾಗಿದ್ದಾರೆ. ಬೆಳಗಾವಿಯ (Belgavi News) ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮಲ್ಲಪ್ಪ ಸತ್ಯಪ್ಪ ಕಂಕಣವಾಡಿ (38) ಮೃತ ದುರ್ದೈವಿ.

ಮಲ್ಲಪ್ಪ ಪಂಚಮಿ ಹಬ್ಬದಂದು ಮದ್ದು ಹಾರಿಸಲು ತಯಾರು ಮಾಡುತ್ತಿದ್ದರು. ಮದ್ದು ತಯಾರಿಸುವ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡು ದುರ್ಘಟನೆ ಸಂಭವಿಸಿದೆ. ಏಕಾಏಕಿ ಬೆಂಕಿ ಎಲ್ಲೆಡೆ ಆವರಿಸಿದ್ದರಿಂದ ಮಲ್ಲಪ್ಪ ಸುಟ್ಟು ಭಸ್ಮವಾಗಿದ್ದಾರೆ. ಸ್ಥಳಕ್ಕೆ ಘಟಪ್ರಭಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇಇರುವುದೇ ಈ ಆಚಾತುರ್ಯಕ್ಕೆ ಕಾರಣಕ್ಕೆ ಎನ್ನಲಾಗಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Udupi News : ಸತ್ತ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದ ಅಸಾಮಿ!

ಫುಟ್‌ಪಾತ್ ಮೇಲೆ ನಿಂತಿದ್ದ ಕಾರ್ಮಿಕರ ಮೇಲೆ ಹರಿದ ಟಾಟಾ ಏಸ್

ಚಿಕ್ಕಬಳ್ಳಾಪುರ: ಫುಟ್‌ಪಾತ್‌ ಮೇಲೆ ನಿಂತಿದ್ದ ಕೂಲಿ ಕಾರ್ಮಿಕರ ಮೇಲೆ ಟಾಟಾ ಏಸ್‌ ವಾಹನವೊಂದು (Road Accident) ಹರಿದಿದೆ. ಅಪಘಾತದ ತೀವ್ರತೆಗೆ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟರೆ, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಚಿಕ್ಕಬಳ್ಳಾಪುರದ ಪೋಶೆಟ್ಟಿಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ.

ಚಿಂತಾಮಣಿ ತಾಲೂಕಿನ ನರಸಿಂಹ (50) ಮೃತ ದುರ್ದೈವಿ. ಬೆಳಗ್ಗೆ ಕೂಲಿಗೆ ಹೋಗಲು ಬಸ್‌ಗಾಗಿ ಫುಟ್ ಪಾತ್ ಮೇಲೆ ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಟಾಟಾಏಸ್‌ ವಾಹನವು ಏಕಾಏಕಿ ನಿಯಂತ್ರಣ ತಪ್ಪಿ ಕೂಲಿ ಕಾರ್ಮಿಕರಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ನರಸಿಂಹ ಸ್ಥಳದಲ್ಲೇ ಮೃತಪಟ್ಟರೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ನಾಲ್ವರು ಪಾರಾಗಿದ್ದಾರೆ. ಇತ್ತ ನರಸಿಂಹ ಮೃತದೇಹದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಅಪರಿಚಿತ ವಾಹನಕ್ಕೆ ಬೈಕ್‌ ಸವಾರ ಸೇರಿ ಕರಡಿ ಬಲಿ

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ಘಟನೆ ನಡೆದಿದೆ. ದ್ಯಾಮಣ್ಣ ಶಂಕ್ರಪ್ಪ ಇಂಚಲ (40) ಸ್ಥಳದಲ್ಲೇ ಮೃತಪಟ್ಟವರು. ಧಾರವಾಡದಿಂದ ಅಮ್ಮಿನಬಾವಿ ಗ್ರಾಮಕ್ಕೆ ಆಗಮಿಸುತ್ತಿದ್ದಾಗ ಧಾರವಾಡ ಕಡೆಯಿಂದ ಬಂದ ವಾಹನವೊಂದು ಹರಿದಿದೆ. ಗಂಭೀರ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತ ಅಪರಿಚಿತ ವಾಹನ ಡಿಕ್ಕಿಯಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರಡಿಯೊಂದು ಮೃತಪಟ್ಟಿದೆ. ಚಿತ್ರದುರ್ಗದ ಹೊರವಲಯದ ತಮಟಕಲ್ಲು ಸಮೀಪ ಘಟನೆ ನಡೆದಿದೆ. ಜೋಗಿಮಟ್ಟಿ ಅರಣ್ಯ ಧಾಮದ ಬಳಿ ವನ್ಯ ಜೀವಿಗಳ ಓಡಾಟ ಹೆಚ್ಚು ಇರುತ್ತದೆ. ರಾತ್ರಿ ವೇಳೆ ರಸ್ತೆ ದಾಟುವಾಗ ವಾಹನವೊಂದು ಕರಡಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

ಬೆಳಗಾವಿಯಲ್ಲಿ ಬೈಕ್‌ ಮುಖಾಮುಖಿ ಡಿಕ್ಕಿ, ಸವಾರರಿಬ್ಬರು ಸಾವು

ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ‌ಇಬ್ಬರು ಸವಾರರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಬಳಿ ಘಟನೆ ನಡೆದಿದೆ. ಬಸವರಾಜ ಪ್ರಭುನವರ್(48), ಯಲ್ಲಪ್ಪ ಕೊರವಿನಕೊಪ್ಪ( 46) ಮೃತ ದುರ್ದೈವಿಗಳು. ಮತ್ತಿಬ್ಬರು ಬೈಕ್ ಸವಾರಿಗೆ ಗಂಭೀರ ‌ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಗಲಕೋಟೆಯಲ್ಲಿ ಟ್ರಕ್ – ಬೊಲೆರೊ ಮುಖಾಮುಖಿ ಡಿಕ್ಕಿ

ಟ್ರಕ್ ಹಾಗೂ ಬೊಲೆರೊ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬೊಲೆರೋ ವಾಹನದ ಮುಂಭಾಗ ನಜ್ಜು ಗುಜ್ಜಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ‌ ತಾಲೂಕಿನ ಬೆಳಗಲಿ ಪಟ್ಟಣದ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಬೊಲೆರೋ ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಗಾಯಾಳನ್ನು ಮುಧೋಳ ತಾಲ್ಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಮುಧೋಳ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದಲ್ಲದೇ ಕುಡುಕನೊಬ್ಬ ಮಹಿಳೆಯರಿಗೆ ಗುದ್ದಿದ್ದಾನೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ನಗರದ ಟಿಪ್ಪು ನಗರದಲ್ಲಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಇಬ್ಬರು ಮಹಿಳೆಯರಿಗೆ ಗುದ್ದಿ ಮುಂದೆ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ.

ರಿಯಾಜ್ ದುಮ್ಮಾದ್ರಿ ಎಂಬಾತ ಕುಡಿದು ವಾಹನ ಚಲಾಯಿಸಿದವನು. ಕಾರು ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿನ್ನೆ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಐಶ್ವರ್ಯ ರಾಮಚಂದ್ರ ಗೊಲ್ಲರ್ (16), ಯಲ್ಲವ್ವ ಪರಶುರಾಮ ಗೊಲ್ಲರ್ (50) ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ವಿಜಯಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮೀರಜ್‌ಗೆ ಕರದೊಯ್ಯಲಾಗಿದೆ. ಸದ್ಯ ದೇವರ ಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಹಾಗೂ ಕಾರನ್ನು ದೇವರ ಹಿಪ್ಪರಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Udupi News : ಸತ್ತ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದ ಅಸಾಮಿ!

ಉಡುಪಿಯಲ್ಲಿ ಅಸಾಮಿಯೊಬ್ಬ ಸತ್ತ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ರಸ್ತೆಯುದ್ಧಕ್ಕೂ (Udupi News) ಎಳೆದೊಯ್ದಿದ್ದಾನೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಈ ಸಂಬಂಧ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VISTARANEWS.COM


on

By

udupi News
Koo

ಉಡುಪಿ: ಉಡುಪಿಯಲ್ಲೊಂದು (Udupi News) ಅಮಾನವೀಯ ಘಟನೆ ನಡೆದಿದೆ. ಅಸಾಮಿಯೊಬ್ಬ ಸತ್ತು ಹೋದ ನಾಯಿಯ ಕೊರಳಿಗೆ ಸರಪಳಿ ಬಿಗಿದು ದ್ವಿಚಕ್ರ ವಾಹನಕ್ಕೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದಿರುವ ಘಟನೆ ನಡೆದಿದೆ.

ಕಾಪುವಿನ ಕೊಂಬಗುಡ್ಡೆಯ ನಿವಾಸಿ ಖಾದರ್ ಎಂಬಾತ ಸತ್ತಿರುವ ನಾಯಿಯ ಕೊರಳಿಗೆ ಸರಪಳಿ ಬಿಗಿದ್ದಿದ್ದಾನೆ. ಬಳಿಕ ಕೊಂಬಗುಡ್ಡೆಯಿಂದ ಶಿರ್ವ ಪೇಟೆಯವರೆಗೆ ಸುಮಾರು 5 ಕಿ.ಮೀ ದೂರದವರೆಗೆ ಎಳೆದುಕೊಂಡು ಹೋಗಿದ್ದಾನೆ. ಆದರೆ ಯಾಕಾಗಿ ಹೀಗೆ ಮಾಡಿದ್ದು? ನಾಯಿ ಸತ್ತಿದ್ದು ಹೇಗೆ? ಅದು ತಾನೇ ಸಾಕಿದ ಶ್ವಾನವಾ ಅಥವಾ ಬೀದಿ ನಾಯಿನಾ ಎಂಬುದು ತಿಳಿದು ಬಂದಿಲ್ಲ.

ಸದ್ಯ ಸ್ಥಳೀಯರಿಂದ ಈ ವಿಡಿಯೊ ವೈರಲ್ ಆದ ಬೆನ್ನಲ್ಲೆ ಶಿರ್ವ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಫುಟ್‌ಪಾತ್ ಮೇಲೆ ನಿಂತಿದ್ದ ಕಾರ್ಮಿಕರ ಮೇಲೆ ಹರಿದ ಟಾಟಾ ಏಸ್; ನದಿಗೆ ಜಾರಿ ಬಿದ್ದ ವ್ಯಕ್ತಿ, ಗ್ರೇಟ್‌ ಎಸ್ಕೇಪ್‌

ಕಾಲು ತೊಳೆಯಲು ಹೋಗಿ ನದಿಗೆ ಜಾರಿ ಬಿದ್ದ ವ್ಯಕ್ತಿ

ರಭಸವಾಗಿ ಹರಿಯುತ್ತಿದ್ದ ಕೃಷ್ಣ ನದಿ ದಡಕ್ಕೆ ಕಾಲು ತೊಳೆಯಲು ಹೋಗಿದ್ದ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿದ್ದ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಬಳಿ ಕೃಷ್ಣ ನದಿಯಲ್ಲಿ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ‌ ಸದ್ಯ ವಿಡಿಯೊ ವೈರಲ್ ಆಗುತ್ತಿದೆ.

ತಿಂಥಣಿ ಗ್ರಾಮದ ಕಾಸಿಂಸಾಬ್ ಎಂಬಾತ ಕಾಲು ಜಾರಿ ನದಿಗೆ ಬಿದ್ದವನು. ನೀರಿನ ಸೆಳೆತಕ್ಕೆ ಸಿಲುಕಿ ಕೊಂಚಿಕೊಂಡು ಹೋಗುತ್ತಿದ್ದವನನ್ನು ಕೂಡಲೇ ಕೂಡ್ಲೆ ಗ್ರಾಮದ ಅಂಬಿಗರು ತೆಪ್ಪದ ಮೂಲಕ ತೆರಳಿ ಕಾಸಿಂಸಾಬ್‌ನನ್ನು ರಕ್ಷಣೆ ಮಾಡಿದ್ದಾರೆ. ಅಂಬಿಗರ ಸಾಹಸಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Robbery Case: ಕಾರಿನಲ್ಲಿ ಬಂದ ಡಕಾಯಿತರು; ಬ್ಯಾಗ್‌ ಕಸಿಯಲು ವಿದ್ಯಾರ್ಥಿನಿಯನ್ನು 20 ಅಡಿ ದೂರ ಎಳೆದೊಯ್ದರು! ಆಘಾತಕಾರಿ ವಿಡಿಯೊ

Robbery Case: ದುಡಿದು ಜೀವನ ಸಾಗಿಸುವುದಕ್ಕೆ ಸಾವಿರ ದಾರಿಯಿದ್ದರೂ, ಕೆಲವರು ಕಳ್ಳತನವನ್ನೇ ಕಾಯಕವನ್ನಾಗಿಸಿಕೊಂಡಿದ್ದಾರೆ. ಬಸ್‌ಗಾಗಿ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿನಿಯಿಂದ ದರೋಡೆಕೋರರು ಸರ, ಮೊಬೈಲ್ ಫೋನ್ ಮತ್ತು ಪರ್ಸ್ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಅವಳ ಕುತ್ತಿಗೆಯಲ್ಲಿದ್ದ ಬ್ಯಾಗ್ ಅನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಈ ಯತ್ನದಲ್ಲಿ ಅವರು ಆಕೆಯನ್ನು ಹಿಡಿದುಕೊಂಡೇ ಕಾರನ್ನು ಓಡಿಸಿದ್ದಾರೆ. ಈ ವಿಡಿಯೊ ಬೆಚ್ಚ ಬೀಳಿಸುತ್ತದೆ.

VISTARANEWS.COM


on

Robbery Case
Koo

ಮಂಡಿ-ಪಠಾಣ್ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಘಟನೆಯ ವಿಡಿಯೊ ವೈರಲ್ ಆದ ನಂತರ ಮೂವರನ್ನು ಬಂಧಿಸಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪಂಜಾಬ್ ಮೂಲದ ಮೂವರು ವ್ಯಕ್ತಿಗಳು, ಶುಕ್ರವಾರ ಮಧ್ಯಾಹ್ನ 3:00 ರ ಸುಮಾರಿಗೆ ಸುಜಾ ಸಂದ್ರಾಹಲ್ ಗ್ರಾಮದ ನಿವಾಸಿ ನೇಹಾ ವರ್ಮಾ (20) ಎಂಬ ಕಾಲೇಜು ವಿದ್ಯಾರ್ಥಿನಿ ಬಸ್‍ಗಾಗಿ ಕಾಯುತ್ತಿದ್ದಾಗ ಅವಳನ್ನು ಗುರಿಯಾಗಿಸಿಕೊಂಡರು. ನಂತರ ಅವಳಿಂದ ಸರ, ಮೊಬೈಲ್ ಪೋನ್ ಮತ್ತು ಪರ್ಸ್ ಕಸಿದುಕೊಂಡಿದ್ದಾರೆ. ಅವಳ ಕುತ್ತಿಗೆಯಲ್ಲಿದ್ದ ಬ್ಯಾಗ್ ಅನ್ನು ಕಸಿದುಕೊಳ್ಳಲು ಅವರಿಗೆ ಸಾಧ್ಯವಾಗಲಿಲ್ಲ. ಆಗ ಅವರು ಆಕೆಯನ್ನು ಹಿಡಿದುಕೊಂಡೇ ಕಾರನ್ನು ಓಡಿಸಿದರು, ನೇಹಾಳನ್ನು ಸುಮಾರು 20 ಅಡಿಗಳಷ್ಟು ಎಳೆದುಕೊಂಡು ಹೋಗಿ ರಸ್ತೆಗೆ ಎಸೆದಿದ್ದಾರೆ.

ಈ ಘಟನೆಯ ನಂತರ, ಶಂಕಿತರು ಜೋಗಿಂದರ್ ನಗರದತ್ತ ತೆರಳಿದರು, ಅಲ್ಲಿ ಅವರು ಸಾಯಿ ಬಜಾರ್‌ನಲ್ಲಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಹೋಮ್ ಗಾರ್ಡ್ ಅಧಿಕಾರಿ ಮತ್ತು ಮಹಿಳೆಯ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು. ಹೋಮ್‌ಗಾರ್ಡ್ ಅಧಿಕಾರಿ ಶಂಕಿತರಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾದರು, ಆದರೆ ಗೊಂದಲದಲ್ಲಿ, ದಾಳಿಕೋರರು ಅಲ್ಲಿ ನಿಲ್ಲಿಸಿದ್ದ ಐದು ವಾಹನಗಳಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌

ಅವರು ಅಪ್ರೋಚ್ ರಸ್ತೆಯ ಬಳಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದರು. ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾರಿನ ನಂಬರ್ ಪ್ಲೇಟನ್ನು ಕೂಡ ಬದಲಾಯಿಸಿದರೂ, ಅಂತಿಮವಾಗಿ ಗುಮ್ಮಾದಲ್ಲಿ ಪೊಲೀಸರು ಶಂಕಿತರನ್ನು ಸೆರೆಹಿಡಿದಿದ್ದಾರೆ. ಮೂವರು ವ್ಯಕ್ತಿಗಳನ್ನು ಪಂಜಾಬ್ ಮೂಲದವರು ಎಂದು ಗುರುತಿಸಲಾಗಿದ್ದು, ಈಗ ಪೊಲೀಸ್ ಕಸ್ಟಡಿಯಲ್ಲಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ಬೈಜನಾಥ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Continue Reading
Advertisement
union budget 2024
ಬಜೆಟ್ 20245 mins ago

Union Budget 2024: ಷೇರು ಮಾರುಕಟ್ಟೆ ಮೇಲೆ ಬಜೆಟ್ ದಿನದ ಎಫೆಕ್ಟ್‌ ಏನು? ಇಲ್ಲಿದೆ 10 ವರ್ಷಗಳ ಹಿನ್ನೋಟ

Viral Video
ಕ್ರೈಂ17 mins ago

Viral Video: ಅತೀ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ; ಮೇಲೆ ಹಾರಿ ನೆಲಕ್ಕೆ ಅಪ್ಪಳಿಸಿದ ದಂಪತಿ

CM Siddaramaiah
ರಾಜಕೀಯ41 mins ago

CM Siddaramaiah: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ

Monsoon Fashion
ಫ್ಯಾಷನ್47 mins ago

Monsoon Fashion: ಮಾನ್ಸೂನ್‌ಗೆ ತಕ್ಕಂತೆ ಬದಲಾದ ಸೂಪರ್‌ ಮಾಡೆಲ್‌ ಸಂತೋಷ್‌ ರೆಡ್ಡಿ ಫ್ಯಾಷನ್‌!

karnataka rain
ಮಳೆ50 mins ago

Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

Paris Olympic 2024:
ಕ್ರೀಡೆ53 mins ago

Paris Olympic 2024 : ಒಲಿಂಪಿಕ್ ಪದಕ ಗೆದ್ದ ಭಾರತದ ಮೊದಲ ಮಹಿಳಾ ಅಥ್ಲೀಟ್​ ಕರ್ಣಂ ಮಲ್ಲೇಶ್ವರಿ ಸಾಧನೆಯ ವಿವರ ಇಲ್ಲಿದೆ

Manoj Soni
ದೇಶ1 hour ago

Manoj Soni: ಅಕ್ರಮ ಆರೋಪದ ಬೆನ್ನಲ್ಲೇ ಯುಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಮನೋಜ್‌ ಸೋನಿ ರಾಜೀನಾಮೆ

ಕರ್ನಾಟಕ1 hour ago

CM Siddaramaiah: ಅಧಿಕಾರ ದುರುಪಯೋಗ ಆರೋಪ; ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ದೂರು

UP Minister Resigns
ದೇಶ2 hours ago

UP Minister Resigns: ಯೋಗಿ ಸರ್ಕಾರದಿಂದ ಒಂದು ವಿಕೆಟ್‌ ಪತನ; ಸಚಿವೆ ಸೋನಮ್‌ ಚಿಶ್ಟಿ ರಾಜೀನಾಮೆ

Belgavi News
ಬೆಳಗಾವಿ2 hours ago

Belgavi News : ಬೆಳಗಾವಿಯಲ್ಲಿ ಮದ್ದು ಕುಟ್ಟುವಾಗ ಭಾರಿ ಸ್ಫೋಟ; ವ್ಯಕ್ತಿ ಸಜೀವ ದಹನ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ7 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌