Ganja seized: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 3.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ - Vistara News

ಬೆಂಗಳೂರು

Ganja seized: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 3.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

Ganja seized: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಆರೋಪಿ, ಲಗೇಜ್ ಬ್ಯಾಗ್‌ನಲ್ಲಿ ಗಾಂಜಾ ಅಡಗಿಸಿಕೊಂಡು ತಂದಿದ್ದ. ಅಧಿಕಾರಿಗಳ ಪರಿಶೀಲನೆ ವೇಳೆ ಆರೋಪಿ ಸಿಕ್ಕಿಬಿದ್ದಿದ್ದಾನೆ.

VISTARANEWS.COM


on

Ganja seized
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೇವನಹಳ್ಳಿ: ವಿದೇಶದಿಂದ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಅಧಿಕಾರಿಗಳು ಬಂಧಿಸಿ, 3.5 ಕೆಜಿ ಹೈಡ್ರೊಪೋನಿಕ್ ಗಾಂಜಾವನ್ನು (Ganja seized) ವಶಕ್ಕೆ ಪಡೆದಿರುವ ಘಟನೆ ದೇವನಹಳ್ಳಿಯ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ನಡೆದಿದೆ.

6E1056 ಇಂಡಿಗೋ ವಿಮಾನದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಆರೋಪಿ, ಲಗೇಜ್ ಬ್ಯಾಗ್‌ನಲ್ಲಿ ಗಾಂಜಾ ಅಡಗಿಸಿಕೊಂಡು ತಂದಿದ್ದ. ಏರ್‌ಪೋರ್ಟ್‌ನಲ್ಲಿ ಪರಿಶೀಲನೆ ವೇಳೆ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಮೇತ ಆರೋಪಿಯನ್ನು ವಶಕ್ಕೆ ಪಡೆದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಆರೋಪಿಯಿಂದ 3.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ ಪಡೆಯಲಾಗಿದೆ. ಹೈಡ್ರೋಪೋನಿಕ್ ಗಾಂಜಾ ಎಂದರೆ ಹೈಡ್ರೋಪೋನಿಕ್ (ಜಲಕೃಷಿ) ವಿಧಾನದಿಂದ ಬೆಳೆಯುವ ಗಾಂಜಾ. ಜಲಕೃಷಿ ಎಂದರೆ ಮಣ್ಣನ್ನು ಬಳಸದೆ ನೀರಿನಲ್ಲಿ ಪೋಷಕಾಂಶಗಳನ್ನು ಬಳಸಿಕೊಂಡು ಸಸಿಗಳನ್ನು ಬೆಳೆಸುವ ಒಂದು ವಿಧಾನವಾಗಿದೆ.

ಇದನ್ನೂ ಓದಿ | Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಎದೆಯ ಮೇಲೆ ಪೊಲೀಸರಿಗೆ ಅವಮಾನ ಮಾಡುವ ರೀತಿ ಟ್ಯಾಟು: ಆರ್ಟಿಸ್ಟ್‌ ವಿರುದ್ಧ ಕೇಸ್‌

ಬೆಂಗಳೂರು: ಎದೆಯ ಮೇಲೆ ಪೊಲೀಸರಿಗೆ ಅವಮಾನ ಮಾಡುವ ರೀತಿ ಟ್ಯಾಟು ಹಾಕಿದ್ದ ಅರ್ಟಿಸ್ಟ್‌ ವಿರುದ್ಧ ಕೇಸ್‌ ದಾಖಲಾಗಿದೆ. “F**k The Police” ಎಂದು ಟ್ಯಾಟು ಇದ್ದ ಫೋಟೊವನ್ನು ಟ್ಯಾಟು ಆರ್ಟಿಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ. Tatto.sutra ಎಂಬ ಇನ್ಸ್ಟಾಗ್ರಾಂ ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು.

ಬೇರೊಬ್ಬನಿಗೆ ಟ್ಯಾಟು ಹಾಕಿ ಅದನ್ನು ರಿತೇಶ್ ಆಗಾರಿಯಾ ಎಂಬ ಆರ್ಟಿಸ್ಟ್‌ ಪೋಸ್ಟ್ ಮಾಡಿದ್ದ. ಈತ ಬ್ರಿಗೇಡ್ ರೋಡ್‌ನಲ್ಲಿ ಟ್ಯಾಟು ಸ್ಟುಡಿಯೋ ನಡೆಸುತ್ತಿದ್ದಾನೆ. ಕೆಲ ದಿನಗಳ ಹಿಂದೆ ಬೇರೊಬ್ಬ ವ್ಯಕ್ತಿಗೆ ರಿತೇಶ್ ಈ ರೀತಿ ಟ್ಯಾಟು ಹಾಕಿದ್ದ. ಟ್ಯಾಟು ಹಾಕಿದ್ದನ್ನು ಫೋಟೊ ತೆಗೆದು ಇನ್ಸ್ಟಾಗ್ರಾಂನಲ್ಲಿ ಹಾಕಿದ್ದ.

ಈ ಬಗ್ಗೆ ಸಾರ್ವಜನಿಕರ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಟ್ಯಾಟು ಆರ್ಟಿಸ್ಟ್ ವಿರುದ್ಧ ಶಾಂತಿ ಭಂಗಕ್ಕೆ ಪ್ರಚೋದನೆ, ಉದ್ದೇಶಪೂರ್ವಕ ಅವಮಾನ ಎಂದು ಬಿಎನ್‌ಎಸ್‌ ಕಾಯ್ದೆಯಡಿ ಕೇಸ್ ದಾಖಲಾಗಿದ್ದು, ಸದ್ಯ ಆರೋಪಿಗೆ ನೋಟಿಸ್ ನೀಡಲಾಗಿದೆ.

ಡ್ರೈವಿಂಗ್‌ ಹೇಳಿಕೊಡುವ ನೆಪದಲ್ಲಿ ಖಾಸಗಿ ಅಂಗ ತೋರಿಸಿದ ಟ್ರೇನರ್‌, ಯುವತಿಯ ದೂರು

ಬೆಂಗಳೂರು: ರಾಜಧಾನಿಯಲ್ಲಿ ಮಹಿಳೆಯರಿಗೆ ಪುಂಡ ಪೋಕರಿಗಳ‌ ಕಿರುಕುಳ ಹೆಚ್ಚಾಗುತ್ತಿದೆ ಎಂಬ ದೂರುಗಳ ನಡುವೆ, ಇನ್ನೊಂದು ಅಂಥದೇ ಘಟನೆ ನಡೆದಿದೆ. ಕಾರ್ ಡ್ರೈವಿಂಗ್ (Car driving) ಹೇಳಿಕೊಡುವ‌ ನೆಪದಲ್ಲಿ ಟ್ರೈನರ್ (Driving trainer) ಒಬ್ಬ ಅಸಭ್ಯ ವರ್ತನೆ (Obscene Act) ತೋರಿಸಿದ್ದಾನೆ.

ಯುವತಿಯನ್ನು ಕಾರು ಚಾಲನೆಯ ನೆಪದಲ್ಲಿ ಕೂರಿಸಿಕೊಂಡು ಕರೆದುಕೊಂಡು ಖಾಸಗಿ ಅಂಗ ಪ್ರದರ್ಶಿಸಿ ಟ್ರೇನರ್‌ ಅಸಭ್ಯ ವರ್ತನೆ ತೋರಿದ್ದಾನೆ. ನ್ಯಾಷನಲ್ ಪಬ್ಲಿಕ್ ಸ್ಕೂಲ್ ಫ್ಲೈಓವರ್‌ನಲ್ಲಿ ಈ ಘಟನೆ ನಡೆದಿದೆ. 18 ವರ್ಷದ ಯುವತಿಯ ಜೊತೆ ಕಾರ್ ಡ್ರೈವಿಂಗ್ ಟ್ರೈನರ್ ಅಸಭ್ಯ ವರ್ತನೆ ತೋರಿದ್ದಾನೆ.

ಇದನ್ನೂ ಓದಿ | Actor Darshan: ರೇಣುಕಾ ಸ್ವಾಮಿ ಹಲ್ಲೆ ದೃಶ್ಯ ಐಫೋನ್‌ನಲ್ಲಿ ರೆಕಾರ್ಡ್‌; ಸಿನಿಮಾ ಶೈಲಿಯಲ್ಲಿ ನಡೆದಿತ್ತು ಕೃತ್ಯ!

ಬಸವೇಶ್ವರ ನಗರದ ಮಾರುತಿ ಡ್ರೈವಿಂಗ್ ಸ್ಕೂಲ್‌ನಲ್ಲಿ ಯುವತಿ ಟ್ರೈನಿಂಗ್‌ಗೆ ಸೇರಿದ್ದರು. ಈ ವೇಳೆ ಅಣ್ಣಪ್ಪ ಎಂಬಾತ ಪರ್ಸನಲ್ ಟ್ರೈನರ್ ಆಗಿ ಡ್ರೈವಿಂಗ್ ಕಲಿಸಿಕೊಡಲು ಮುಂದಾಗಿದ್ದ. ಆದರೆ ಕಳೆದ ವಾರ ಬೆಳಗ್ಗೆ 6.30ಕ್ಕೆ ಕಾರ್‌ನಲ್ಲಿದ್ದ ಅಣ್ಣಪ್ಪ ಅಸಭ್ಯ ವರ್ತನೆ ತೋರಿದ್ದಾನೆ. ಯುವತಿ ಪಕ್ಕದಲ್ಲಿ ಕೂತು ಖಾಸಗಿ ಅಂಗ ಪ್ರದರ್ಶನ ಮಾಡಿದ್ದಾನೆ. ಈ ಬಗ್ಗೆ ಬಸವೇಶ್ವರ ನಗರ ಠಾಣೆಗೆ ಯುವತಿ ದೂರು ನೀಡಿದ್ದಾರೆ. ಅಣ್ಣಪ್ಪನ ವಿರುದ್ಧ FIR ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

Karnataka Rain : ಭಾರಿ ಮಳೆ ಎಫೆಕ್ಟ್‌ನಿಂದಾಗಿ ಸಾವು-ನೋವು ಸಂಭವಿಸುತ್ತಿದೆ. ಸದ್ಯ ಗುಡ್ಡ ಕುಸಿತ ಪ್ರಕರಣಗಳೇ ಹೆಚ್ಚಾಗುತ್ತಿದ್ದು, ಚಿಕ್ಕಮಗಳೂರಲ್ಲಿ ನೂರಾಕ್ಕೂ ಹೆಚ್ಚು ಅಪಾಯಕಾರಿ ಜಾಗಗಳ ಗುರುತು ಹಾಕಲಾಗಿದೆ. ಇತ್ತ ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌ ಆಗಿರುವುದರಿಂದ ರೈಲು ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

By

karnataka rain
ಸಾಂದರ್ಭಿಕ ಚಿತ್ರ
Koo

ಭಾರಿ ಮಳೆಯಿಂದಾಗಿ (Karnataka Rain) ಅಂಕೋಲಾ ಶಿರೂರು ಬಳಿ ಹೆದ್ದಾರಿಯ ಮೇಲೆ ಗುಡ್ಡ ಕುಸಿತದಿಂದ ಹೆದ್ದಾರಿ ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಇಲಾಖೆಯು ರೈಲು ವ್ಯವಸ್ಥೆ ಮಾಡಿದೆ. ಗೋವಾಕ್ಕೆ ತೆರಳುವ ಮುಖ್ಯ ಮಾರ್ಗ ಬಂದ್‌ ಆಗಿರುವ ಹಿನ್ನೆಲೆಯಲ್ಲಿ ರೈಲು ಸೇವೆ ಇರಲಿದೆ. ಮಾಡಗಾಂವ್ ಜಂಕ್ಷನ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಮೀಸಲರಹಿತ ರೈಲು ಓಡಾಡಲಿದೆ. ಜುಲೈ 20, 21, 22 ರಂದು 2 ಕೇಂದ್ರಗಳ ನಡುವೆ ಮೂರು ದಿನಗಳ ಕಾಲ ಸಂಚರಿಸಲಿದೆ. ಬೆಳಗ್ಗೆ ಮಾಡಗಾಂವ್ ಜಂಕ್ಷನ್‌ನಿಂದ 6 ಗಂಟೆಗೆ ಹೊರಡಲಿರುವ ವಿಶೇಷ ರೈಲು ಮಧ್ಯಾಹ್ನ 12:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಮರು ಪ್ರಯಾಣದಲ್ಲಿ ಮಧ್ಯಾಹ್ನ 12:40ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು 7 ಗಂಟೆಗೆ ಮಡಗಾಂವ್ ತಲುಪಲಿದೆ . ಕಾಣಕೋಣ, ಕಾರವಾರ, ಹರ್ವಾಡ, ಅಂಕೋಲ ಜೊತೆ ಬಹುತೇಕ ಎಲ್ಲಾ ಸ್ಟೇಷನ್ಗಳಲ್ಲೂ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.

ಚಿಕ್ಕಮಗಳೂರಲ್ಲಿವೆ 158 ‌ಅಪಾಯಕಾರಿ ಜಾಗಗಳು

ಚಿಕ್ಕಮಗಳೂರು: ಮುಂಗಾರು ಮಳೆ ಆರ್ಭಟ (Karnataka rain) ಬೆನ್ನಲ್ಲೇ ಕಾಫಿನಾಡು ಚಿಕ್ಕಮಗಳೂರಿಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಕಿಂಗ್ ನ್ಯೂಸ್‌ ನೀಡಿದೆ. ಮಳೆಯಿಂದ ಅಪಾಯ ಸಂಭವಿಸಬಹುದಾದ ಜಾಗಗಳ ಗುರುತು ಮಾಡಿದೆ. ಆಗಸ್ಟ್ ತಿಂಗಳಲ್ಲಿ ಮಳೆ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ. ಹೀಗಾಗಿ ಗುಡ್ಡ ಕುಸಿತ ರೀತಿಯ ಅಪಾಯಕಾರಿ ಸ್ಥಳಗಳ ಮಾಹಿತಿ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಸುತ್ತಮುತ್ತ ಸುಮಾರು 158 ‌ ಸ್ಥಳಗಳು ಅಪಾಯಕಾರಿಯಾಗಿವೆ. ಅದರಲ್ಲಿ ಶೃಂಗೇರಿ ತಾಲೂಕಿನಲ್ಲಿ ಬರೋಬ್ಬರಿ 87, ಎನ್‌ಆರ್‌ ಪುರ ತಾಲೂಕಿನಲ್ಲಿ 21, ಮೂಡಿಗೆರೆ ತಾಲೂಕಿನಲ್ಲಿ 17 ಡೇಂಜರ್ ಸ್ಪಾಟ್‌ಗಳಿವೆ.

ಅಪಾಯಕಾರಿ ಸ್ಥಳಗಳ ಮೇಲೆ ಜಿಲ್ಲಾಡಳಿತ, ವಿಪತ್ತು ನಿರ್ವಹಣಾ ತಂಡ ತೀವ್ರ ನಿಗಾವಹಿಸಿದ್ದಾರೆ. ಅಪಾಯ ಸಂಭವಿಸಿದರೆ ಸ್ಥಳಾಂತರಿಸಲು 77 ಸುರಕ್ಷಿತ ಜಾಗಗಳನ್ನು ಸಹ ಗುರುತು ಮಾಡಲಾಗಿದೆ. ಕೊಪ್ಪ ತಾಲೂಕಿನ ಗುಡ್ಡೆ ತೋಟದ 14 ಕುಟುಂಬಗಳ ಮೇಲು ತೀವ್ರ ನಿಗಾವಹಿಸಲಾಗಿದೆ. ಭಾರಿ ಮಳೆ ಸುರಿದರೆ ಕುಟುಂಬಗಳು ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಅದರಲ್ಲೂ ಆಗಸ್ಟ್ ತಿಂಗಳಲ್ಲಿ ಚಿಕ್ಕಮಗಳೂರಿಗೆ ಕಂಟಕ ಕಾದಿದ್ದು, ಮೊದಲೇ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ.

ನಿರಂತರ ಮಳೆಗೆ ಭೂ ಕುಸಿತ

ಅರಮನೆ ನಗರಿ ಮೈಸೂರಿನಲ್ಲಿ ನಿರಂತರ ಮಳೆಗೆ ಶ್ರೀರಾಂಪುರ ಜಂಕ್ಷನ್ ಸಮೀಪದ ರಿಂಗ್ ರಸ್ತೆಯಲ್ಲಿ ಭೂಮಿ ಕುಸಿದಿದೆ. ಮುಖ್ಯ ರಸ್ತೆಯಲ್ಲೇ ಭೂಮಿ ಕುಸಿದಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಹೀಗಾಗಿ ಸರ್ವಿಸ್ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.

ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ತರಾತುರಿಯಲ್ಲಿ ದುರಸ್ತಿ ಕಾರ್ಯಕ್ಕೆ ಮುಂದಾದರು. ಜೆಸಿಬಿ ಯಂತ್ರದ ಮೂಲಕ ದುರಸ್ತಿ ಕಾರ್ಯ ನೆರವೇರಿಸಿದರು. ಇನ್ನೂ ಸಾರ್ವಜನಿಕರು ಹೊಂಡವನ್ನು ಕುತೂಹಲದಿಂದ ನೋಡುತ್ತಿರುವುದು ಕಂಡು ಬಂತು. ಭಾರಿ ಗಾತ್ರದ ವಾಹನಗಳು ಕೂಡ ಸರ್ವೀಸ್ ರಸ್ತೆಯಲ್ಲಿ ಚಲಿಸುತ್ತಿದ್ದವು.

ಇದನ್ನೂ ಓದಿ: Road Accident : ಫುಟ್‌ಪಾತ್ ಮೇಲೆ ನಿಂತಿದ್ದ ಕಾರ್ಮಿಕರ ಮೇಲೆ ಹರಿದ ಟಾಟಾ ಏಸ್; ನದಿಗೆ ಜಾರಿ ಬಿದ್ದ ವ್ಯಕ್ತಿ, ಗ್ರೇಟ್‌ ಎಸ್ಕೇಪ್‌

ಮಳೆಗೆ ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಸಸಿ ನೆಟ್ಟು ಆಕ್ರೋಶ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿರುವ ಮತ್ತಿಘಟ್ಟ ಗ್ರಾಮ ಪಂಚಾಯತಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪ್ರಮುಖ ರಸ್ತೆಗಳು ಕೆಸರು ಗದ್ದೆಯಂತಾಗಿದೆ. ಹೀಗಾಗಿ ಕೆಸರು ರಸ್ತೆಗೆ ರಾಗಿ ಸಸಿ ನೆಟ್ಟು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ನಾಲ್ಕೈದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಒಂದು ಕಡೆಯಿಂದ ಮತ್ತೊಂದು ಕಡೆಗೆ ಓಡಾಟಲು ಹರಸಾಹಸ ಪಡೆಯುವಂತಾಗಿದೆ. ಪರ್ಯಾಯ ರಸ್ತೆಯಿಲ್ಲದೇ ಕೆಸರು ರಸ್ತೆಯಲ್ಲೆ ಓಡಾಟ ನಡೆಸುವ ಪರಿಸ್ಥಿತಿ ಇದೆ.

ವರದಾ ನದಿಯಲ್ಲಿ ಈಶ್ವರ ದೇಗುಲ ಮುಳುಗಡೆ

ಹಾವೇರಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ವರದಾ ನದಿ ತುಂಬಿ ಹರಿಯುತ್ತಿದೆ. ವರದಾ ನದಿಯಲ್ಲಿ ನೀರಿನ‌ ಹರಿವು ಹೆಚ್ಚಾಗಿದ್ದು, ಹಾವೇರಿಯ ದೇವಗಿರಿ ಬಳಿ ದೇಗುಲ ಮುಳುಗಡೆಯಾಗಿದೆ. ನದಿ ದಡದಲ್ಲಿದ್ದಈಶ್ವರ ದೇಗುಲ ಮುಳುಗುಡೆಯಾಗಿದೆ. ಇತ್ತ ಹಾಸನ ಜಿಲ್ಲೆಯಲ್ಲಿ ಮಳೆಗೆ ಇತಿಹಾಸ ಪ್ರಸಿದ್ಧ ವಿಷ್ಣುಸಮುದ್ರ (ಬಿಸ್ಟಮ್ಮನ ಕೆರೆ) ಕೆರೆ ಕೋಡಿ ಬಿದ್ದಿದೆ. ಬೇಲೂರು ಪಟ್ಟಣದಲ್ಲಿರುವ ಬಿಸ್ಟಮ್ಮನ ಕೆರೆಯು ಕಳೆದ ಎರಡು ವರ್ಷಗಳ ಹಿಂದೆ ಕೋಡಿ ಬಿದ್ದಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

CM Siddaramaiah: ಅಧಿಕಾರ ದುರುಪಯೋಗ ಆರೋಪ; ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ದೂರು

CM Siddaramaiah: ಮುಡಾ ನಿಯಮಗಳ ವಿರುದ್ಧ ನಿವೇಶನಗಳನ್ನು ಪತ್ನಿ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ನೀಡಿದ್ದಾರೆ.

VISTARANEWS.COM


on

Koo

ಬೆಂಗಳೂರು: ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯನವರು (CM Siddaramaiah) ಕಾನೂನಿನ ಎಲ್ಲಾ ನಿಯಮ ಗಾಳಿಗೆ ತೂರಿ ಪತ್ನಿ ಹೆಸರಿಗೆ ಮೂಡ ನಿವೇಶನ ನೋಂದಣಿ ಮಾಡಿಸಿಕೊಂಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ಸಲ್ಲಿಸಿದ್ದಾರೆ.

ಜೆ.ಎಚ್. ಪಟೇಲ್ ಸರ್ಕಾರ ಹಾಗೂ ಧರ್ಮಸಿಂಗ್ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿ ಆಗಿದ್ದಾಗ ಹಾಗೂ 2017-18ರಲ್ಲಿ ಸಿಎಂ ಆಗಿದ್ದಾಗ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ವಿಜಯನಗರ ಬಡಾವಣೆಯಲ್ಲಿ ಮುಡಾ ನಿಯಮಗಳ ವಿರುದ್ಧ ನಿವೇಶನಗಳನ್ನು ಪತ್ನಿ ಹೆಸರಿಗೆ ಮಾಡಿಸಿಕೊಂಡಿದ್ದಾರೆ. 39 ಚದರ ಅಡಿಯ 14 ನಿವೇಶನಗಳನ್ನು ನೊಂದಣಿ ಮಾಡಿಕೊಂಡಿದ್ದಾರೆ. ಹೀಗಾಗಿ ಸಿಎಂ ಹಾಗೂ ಮುಡಾ ಅಧಿಕಾರಿಗಳ ವಿರುದ್ಧ ದೂರು ಕೊಟ್ಟಿದ್ದೇನೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ತಿಳಿಸಿದ್ದಾರೆ.

ಇದನ್ನೂ ಓದಿ | DK Shivakumar: ನಮ್ಮ ಅಧಿಕಾರಿಗಳು ಬಹಳ ಖದೀಮರಿದ್ದಾರೆ, ಡಿ ಗ್ರೇಡ್ ಕ್ಲರ್ಕ್‌ಗಳೆಲ್ಲಾ ಅಧೀಕ್ಷಕ, ಎಂಡಿಗಳಾಗಿದ್ದಾರೆ ಎಂದ ಡಿಕೆಶಿ

ವಾರದಲ್ಲಿ 4 ದಿನ ಶಾಲೆಗಳಿಗೆ ಮೊಟ್ಟೆ ಪೂರೈಸಲು ಅಜೀಂ ಪ್ರೇಮ್‌ಜಿ ಫೌಂಡೇಶನ್ ಜತೆ ಒಪ್ಪಂದ: ಸಿಎಂ

ಬೆಂಗಳೂರು: ವಾರದಲ್ಲಿ 4 ದಿನಗಳು ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಮೊಟ್ಟೆಯನ್ನು ಸರಬರಾಜು ಮಾಡಲು ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸರ್ಕಾರಿ ಶಾಲೆಗಳಲ್ಲಿ ವಾರದಲ್ಲಿ 6 ದಿನ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದ ಅವರು, ಮಕ್ಕಳು ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರ ಅಗತ್ಯ. ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ. ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್‌ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ. ಅವರಿಗೆ ಧನ್ಯವಾದಗಳು ಎಂದು ತಿಳಿಸಿದರು.

ವೈಜ್ಞಾನಿಕವಾಗಿ, ವೈಚಾರಿಕವಾಗಿ ಮಕ್ಕಳು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗಲು ಸಾಧ್ಯ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೆ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.

ನಾಳೆ ಅಂಕೋಲಾಕ್ಕೆ ಭೇಟಿ

ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಬೇಕೆಂದು ಸೂಚಿಸಲಾಗಿದೆ ಎಂದ ಮುಖ್ಯಮಂತ್ರಿಗಳು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸೇತುವೆ ಪರಿಶೀಲಿಸಲು ನಾಳೆ (ಜುಲೈ 21) ತೆರಳುತ್ತಿರುವುದಾಗಿ ತಿಳಿಸಿದರು.

ಇದನ್ನೂ ಓದಿ | Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

ಕಾರ್ಯಕ್ರಮದಲ್ಲಿ ಈ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಖಾನ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

DK Shivakumar: ನಮ್ಮ ಅಧಿಕಾರಿಗಳು ಬಹಳ ಖದೀಮರಿದ್ದಾರೆ, ಡಿ ಗ್ರೇಡ್ ಕ್ಲರ್ಕ್‌ಗಳೆಲ್ಲಾ ಅಧೀಕ್ಷಕ, ಎಂಡಿಗಳಾಗಿದ್ದಾರೆ ಎಂದ ಡಿಕೆಶಿ

DK Shivakumar: ವಾಲ್ಮೀಕಿ ನಿಗಮ ಅಕ್ರಮದ ಹಿನ್ನೆಲೆಯಲ್ಲಿ ನಿಗಮ ಮಂಡಳಿಗಳಲ್ಲಿ‌ ಪಾರದರ್ಶಕತೆ ತರುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ನಿಗಮ-ಮಂಡಳಿಗಳ ಅಧ್ಯಕ್ಷರಿಗೆ ಈಗಾಗಲೇ ಹೇಳಿದ್ದೇವೆ. ನಮ್ಮ‌ ಅಧಿಕಾರಿಗಳು ಬಹಳ ಖದೀಮರಿದ್ದಾರೆ, ಅಲ್ಲಿದ್ದ (ಹಿಂದಿನ ಸರ್ಕಾರ) ಖದೀಮರು ಇಲ್ಲಿಗೂ ಬಂದು ಸೇರಿಕೊಂಡಿದ್ದಾರೆ. 300-400 ಕೋಟಿ‌ ರೂ. ಅಲ್ಲಿ ತಿಂದ‌ ಅದೇ ಅಧಿಕಾರಿಗಳು ಇಲ್ಲಿದ್ದಾರೆ. ಬಹಳ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಡಿ ಗ್ರೇಡ್ ಕ್ಲರ್ಕ್‌ಗಳಲ್ಲಾ ಸೂಪರಿಂಟೆಂಡೆಂಟ್, ಎಂಡಿಗಳನ್ನಾಗಿ ಮಾಡಿಬಿಟ್ಟಿದ್ದಾರೆ. ಅಂತವರ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ತಿಳಿಸಿದ್ದಾರೆ.

ವಾಲ್ಮೀಕಿ ನಿಗಮ ಅಕ್ರಮದ ಹಿನ್ನೆಲೆಯಲ್ಲಿ ನಿಗಮ ಮಂಡಳಿಗಳಲ್ಲಿ‌ ಪಾರದರ್ಶಕತೆ ತರುವ ವಿಚಾರದ ಬಗ್ಗೆ ಮಾತನಾಡಿರುವ ಅವರು, ಆರ್ಥಿಕ ಇಲಾಖೆಯ ಖಜಾನೆಯಲ್ಲಿ ಕಂಟ್ರೋಲ್ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ವಾಲ್ಮೀಕಿ ನಿಗಮ ಮಂಡಳಿ ಹಗರಣದಲ್ಲಿ‌ ಸಿಎಂ ಹಾಗೂ ಡಿಸಿಎಂ ಹೆಸರು ಹೇಳುವಂತೆ ಒತ್ತಡ ವಿಚಾರಕ್ಕೆ ಪ್ರತಿಕ್ರಿಯಿಸಿ, ಬೇಡವೆಂದವರು ಯಾರು?, ನೀವೂ ಹೇಳಿ, ಅವರೂ ಹೇಳಲಿ ಎಂದರು.

ರಾಜ್ಯದ ಹಲವೆಡೆ ಮಳೆಯಾಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ದೇವರ ಕೃಪೆಯಿಂದ ಮಳೆ‌ ಚೆನ್ನಾಗಿ ಆಗುತ್ತಿದೆ. 2-3 ದಿನಗಳಲ್ಲಿ‌ ಕೆಆರ್‌ಎಸ್ ಜಲಾಶಯ ತುಂಬಲಿದೆ. ತಮಿಳುನಾಡಿಗೆ ನೀರು ಬಿಡುವಂತೆ ಕೋರ್ಟ್ ಆದೇಶ ಕೊಟ್ಟಿತ್ತು. ಅದನ್ನ ಪಾಲನೆ ಮಾಡುವ ಸೂಚನೆಗಳು‌ ತಮಗೆಲ್ಲ ಕಾಣುತ್ತಿದೆ. ಮುಂಜಾಗ್ರತೆಯಾಗಿ ಕೆಲವು ಕಡೆ ನೀರು ಬಿಡಬೇಕಾಗುತ್ತದೆ. ಹೆಚ್ಚು ಕಡಿಮೆ‌ ಆಗಬಾರದು ಅಂತ ಪಕ್ಷಿಧಾಮಗಳ ಕಡೆ ದೋಣಿ ಸಂಚಾರ ಎಲ್ಲವನ್ನೂ ನಿಲ್ಲಿಸಿದ್ದೀವಿ. ಮುಂಜಾಗ್ರತಾವಾಗಿ ಹೊಳೆಗಳ ಪಕ್ಕದಲ್ಲಿರುವ ಮನೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದೇವೆ ಎಂದರು.

ಕಾರವಾರದಲ್ಲಿ ವಿಪರೀತ ಮಳೆ ಆಗುತ್ತಿದೆ, ಕೆಲಸಕ್ಕೆ ಬಹಳ ತೊಂದರೆ ಆಗುತ್ತಿದೆ. ಕೇರಳದಿಂದ ಮೂಲದ ಚಾಲಕ ವಾಹನ ಸಮೇತ ಸಿಲುಕಿಕೊಂಡಿದ್ದಾನೆ. 85-90 ಗಂಟೆಗಳು ಕಳೆದು ಹೋಗಿದೆ, ನಮಗೆ‌ ಟ್ರೇಸ್ ಮಾಡೋಕೆ‌ ಆಗಲಿಲ್ಲ. ಬಹಳ ಪ್ರಯತ್ನ ಮಾಡ್ತಾ ಇದ್ದೀವಿ, ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳದಲ್ಲಿದ್ದಾರೆ. ಅವರವರ ಕೆಲಸಗಳನ್ನ ಮಾಡ್ತಾ ಇದ್ದಾರೆ ಎಂದು ತಿಳಿಸಿದರು.

ನಮ್ಮ ರೈತರ ಹಿತಕ್ಕೆ ಏನೇನು ಬೇಕೋ ಅದನ್ನು ಮಾಡುತ್ತೇವೆ. ಕೆರೆಗಳನ್ನು ತುಂಬಿಸೋದಕ್ಕೂ ರೈತರಿಗೆ ಬೇಕಾದ ವ್ಯವಸ್ಥೆ ಮಾಡುತ್ತೇವೆ. ಇದಕ್ಕಾಗಿ ಕೆಲವು ಚಾನೆಲ್‌ಗಳನ್ನು ಓಪನ್ ಮಾಡಿದ್ದೇವೆ. ಭತ್ತ ನಾಟಿ ಮಾಡುವ ಸಂದರ್ಭದಲ್ಲಿ‌ ಸ್ವಲ್ಪ ತಾಳ್ಮೆಯಿಂದ ಇರಬೇಕು. ಕೃಷಿ ಇಲಾಖೆ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದರು.

ಇದನ್ನೂ ಓದಿ | Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

ಅಂಕೋಲಾಕ್ಕೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಿಲಿಟರಿ ಕರೆದುಕೊಂಡು ಇಳಿದಿದ್ದರೆ ಫೀಲ್ಡಿಗೆ ಬಂದಿದ್ದಾರೆ ಅಂತ ಹೇಳಬಹುದು. ಸುಮ್ಮನೇ ವಿಸಿಟ್ ಮಾಡಿ ಬಂದರೆ ಏನಾದ್ರೂ ಆಗುತ್ತಾ? ಒಂದೇ ಗಂಟೆಯಲ್ಲಿ ನಮ್ಮ ಕ್ಯಾಬಿನೆಟ್ ಸಚಿವರನ್ನು ಅಲ್ಲಿಗೆ‌ ಓಡಿಸಿದ್ದೇವೆ. ಮಂಕಾಳ್ ವೈದ್ಯ, ಕೃಷ್ಣಬೈರೇಗೌಡ ಅಲ್ಲಿಗೆ ಹೋಗಿದ್ದರು. ಏನೇನು ಮಾಡಬೇಕೊ ಅದನ್ನು ಮಾಡಿದ್ದಾರೆ, ಅಧಿಕಾರಿಗಳಿಗೆ ಸೂಚನೆ‌ ಕೊಟ್ಟಿದ್ದಾರೆ. ನಮ್ಮ ಸರ್ಕಾರ ಏನು ಮಾಡಬೇಕೋ ಅದನ್ನು ಮಾಡುತ್ತದೆ. ಈಗ ರಾಜಕಾರಣ ಬೇಡ, ಜನರನ್ನು ಉಳಿಸಿಕೊಳ್ಳುವ ಕೆಲಸ ಮಾಡೋಣ ಎಂದು ತಿಳಿಸಿದರು.

Continue Reading

ಕರ್ನಾಟಕ

R Ashok: ವಾಲ್ಮೀಕಿ ಹಗರಣ; ಮುಖ್ಯಮಂತ್ರಿ ಏನು ಕತ್ತೆ ಕಾಯುತ್ತಿದ್ದರೇ ಎಂದ ಆರ್‌. ಅಶೋಕ್‌

R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್‌ ಮಾಡಿದೆ. ಅದಕ್ಕೆ ಕ್ಲೀನ್‌ಚಿಟ್‌ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.

VISTARANEWS.COM


on

Opposition Party leader R Ashok pressmeet about Valmiki Development Corporation scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಈಗ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆರೋಪಿಸಿದ್ದಾರೆ. ಎಲ್ಲ ತಪ್ಪುಗಳನ್ನು ಸಿದ್ದರಾಮಯ್ಯ ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ ಮುಖ್ಯಮಂತ್ರಿ ಏನು ಕತ್ತೆ ಕಾಯುತ್ತಿದ್ದರೇ ಎಂದು ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್‌ ಮಾಡಿದೆ. ಅದಕ್ಕೆ ಕ್ಲೀನ್‌ಚಿಟ್‌ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ, ಮುಖ್ಯಮಂತ್ರಿಯೇನು ಕತ್ತೆ ಕಾಯುತ್ತಿದ್ದರೇ? ಆ ಅಧಿಕಾರಿ ಹಿಂದೆಯೇ ತಪ್ಪು ಮಾಡಿದ್ದರೆ ಅದೇ ಹುದ್ದೆಯಲ್ಲಿ ಉಳಿಸಿಕೊಂಡಿದ್ದು ಏಕೆ? ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ. ರಾಜ್ಯದ ಜನರ ಹಣವನ್ನು ಕಳ್ಳ ಖಾತೆಯಲ್ಲಿ ಇಟ್ಟಿದ್ದು ರಾಜ್ಯ ಸರ್ಕಾರ. ಇದರಲ್ಲಿ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಪಾತ್ರವೇ ಇಲ್ಲ. ಬ್ಯಾಂಕ್‌ ಅಧಿಕಾರಿಗಳು ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿದರು. ಆದರೆ ಸರ್ಕಾರ ವಿಶೇಷ ತನಿಖಾ ದಳಕ್ಕೆ ನೀಡಿ ಮುಚ್ಚಿ ಹಾಕಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: NEET UG 2024 Result: ಕ್ಷೇತ್ರವಾರು ನೀಟ್‌ ಪರೀಕ್ಷಾ ಫಲಿತಾಂಶ ಪ್ರಕಟ

ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಜಾಹೀರಾತು ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಜತೆಗೆ, ಜಾತಿ ಬಗ್ಗೆ ಹೇಳಿದ್ದಾರೆ. ನಿರ್ದಿಷ್ಟ ಜಾತಿಯ ವಿರುದ್ಧ ಯಾವುದೇ ಆಪಾದನೆ ಮಾಡಬಾರದು ಎಂದು ಸಂವಿಧಾನದಲ್ಲೇ ತಿದ್ದುಪಡಿ ಮಾಡಲಿ. ಸಿಎಂ ಸಿದ್ದರಾಮಯ್ಯ ಬೆಚ್ಚಿ ಬಿದ್ದಿರುವುದರಿಂದ ಹೀಗೆ ಮಾತಾಡುತ್ತಿದ್ದಾರೆ. 40 ಕ್ಕೂ ಅಧಿಕ ದಾಖಲೆಗಳನ್ನು ನಾನು ಕೊಟ್ಟಿದ್ದು, ಈ ಬಗ್ಗೆ ಸಿಎಂ ಸ್ಪಷ್ಟೀಕರಣ ಕೊಡದೆ ಎಲ್ಲಕ್ಕೂ ಪದ್ಮನಾಭ ಕಾರಣ ಎಂದು ಹೇಳಿದ್ದಾರೆ ಎಂದು ಆರೋಪಿಸಿದರು.

ಸಚಿವರ ತಪ್ಪಿಲ್ಲ ಎಂದ ಮೇಲೆ ಬಿ. ನಾಗೇಂದ್ರ ರಾಜೀನಾಮೆ ಯಾಕೆ ಕೊಟ್ಟರು? ಹಾಗಾದರೆ ಸಿಎಂ ಅವರನ್ನು ಅರ್ಧ ದಾರಿಯಲ್ಲೇ ಕೈ ಬಿಟ್ಟಿದ್ದಾರೆ ಎಂದರ್ಥ. ಲೋಕಸಭೆ ಚುನಾವಣೆಗಾಗಿ ನಾಗೇಂದ್ರ ಹಾಗೂ ಬಸವನಗೌಡ ದದ್ದಲ್‌ ಶ್ರಮ ವಹಿಸಿ, ಕಾಂಗ್ರೆಸ್‌ ಪಕ್ಷಕ್ಕಾಗಿ ಹಣ ಸಂಗ್ರಹ ಮಾಡಿ ತೆಲಂಗಾಣಕ್ಕೆ ಕಳುಹಿಸಿದ್ದಾರೆ ಎಂದು ದೂರಿದರು.

ತನಿಖೆ ಮಾಡಿ

ಬಿಜೆಪಿ ಸರ್ಕಾರದಲ್ಲಿ ಹಗರಣಗಳ ಸರಮಾಲೆ ಎಂದು ಆರೋಪ ಮಾಡಿ, ಅಧಿಕಾರಕ್ಕೆ ಬಂದು 15 ತಿಂಗಳಾದರೂ 40 ಪರ್ಸೆಂಟ್‌ ಆರೋಪದ ತನಿಖೆ ಇನ್ನೂ ಮುಗಿಸಿಲ್ಲ. ಹಿಂದಿನ ಸರ್ಕಾರ ಹಗರಣ ಮಾಡಿದ್ದರೆ, ಅದನ್ನು ತನಿಖೆ ಮಾಡಲು ಇಷ್ಟು ಸಮಯ ಬೇಕೆ ಎಂದು ಪ್ರಶ್ನೆ ಮಾಡಿದರು.

ಬಿಜೆಪಿಗೆ ಯಾವ ಒತ್ತಡವೂ ಇಲ್ಲ. ಆದರೆ ರಾಜ್ಯದ ಜನರ ಒತ್ತಡ ಮಾತ್ರ ಇದೆ. ಜನರಿಗಾಗಿ ಹಾಗೂ ದಲಿತರಿಗಾಗಿ ಈ ಮಟ್ಟಕ್ಕೆ ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ದಲಿತರ ಹಣ ವಾಪಸ್‌ ಸಿಗಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುವುದು ನಮ್ಮ ಪಕ್ಷದ ಉದ್ದೇಶ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪದ 21 ಹಗರಣಗಳನ್ನು ನಾವೇ ತನಿಖೆ ಮಾಡುತ್ತೇವೆ. ಅವರು ಅಧಿಕಾರದಿಂದ‌ ಕೆಳಕ್ಕಿಳಿದು ನಮಗೆ ಅಧಿಕಾರ ನೀಡಲಿ ಎಂದು ಆರ್‌.ಅಶೋಕ್‌ ಸವಾಲು ಹಾಕಿದರು.

ಇದನ್ನೂ ಓದಿ: Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಕನ್ನಡತಿ ಭಾವನಾ ಪ್ರದ್ಯುಮ್ನ

ಬ್ರ್ಯಾಂಡ್ ಬೆಂಗಳೂರು ಆಗಬೇಕೆಂದರೆ ಎಲ್ಲ ಕ್ಷೇತ್ರಗಳು ಅಭಿವೃದ್ಧಿಯಾಗಬೇಕು. ಬೆಂಗಳೂರಿನಲ್ಲಿ ಬಿಜೆಪಿ ಶಾಸಕರೇ ಹೆಚ್ಚಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಎಲ್ಲರ‌‌ ಬಳಿ ಚರ್ಚೆ ಮಾಡಿ ಅನುದಾನ ನೀಡಲಿ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಸರ್ಕಾರ ಅನುದಾನ ನೀಡಿತ್ತು. ಅದೇ ರೀತಿ ಕಾಂಗ್ರೆಸ್ ಕೂಡ ನಡೆದುಕೊಳ್ಳಲಿ. ಈಗಾಗಲೇ‌ ನಗರದಲ್ಲಿ ಕಸದ ರಾಶಿ ಹೆಚ್ಚಿದ್ದು, ವಿಲೇವಾರಿ ಮಾಡಲು ಕೂಡಲೇ ಕ್ರಮ ವಹಿಸಲಿ ಎಂದು ಆಗ್ರಹಿಸಿದರು.

Continue Reading
Advertisement
union budget 2024
ಬಜೆಟ್ 20247 mins ago

Union Budget 2024: ಷೇರು ಮಾರುಕಟ್ಟೆ ಮೇಲೆ ಬಜೆಟ್ ದಿನದ ಎಫೆಕ್ಟ್‌ ಏನು? ಇಲ್ಲಿದೆ 10 ವರ್ಷಗಳ ಹಿನ್ನೋಟ

Viral Video
ಕ್ರೈಂ19 mins ago

Viral Video: ಅತೀ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ; ಮೇಲೆ ಹಾರಿ ನೆಲಕ್ಕೆ ಅಪ್ಪಳಿಸಿದ ದಂಪತಿ

CM Siddaramaiah
ರಾಜಕೀಯ43 mins ago

CM Siddaramaiah: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ

Monsoon Fashion
ಫ್ಯಾಷನ್49 mins ago

Monsoon Fashion: ಮಾನ್ಸೂನ್‌ಗೆ ತಕ್ಕಂತೆ ಬದಲಾದ ಸೂಪರ್‌ ಮಾಡೆಲ್‌ ಸಂತೋಷ್‌ ರೆಡ್ಡಿ ಫ್ಯಾಷನ್‌!

karnataka rain
ಮಳೆ52 mins ago

Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

Paris Olympic 2024:
ಕ್ರೀಡೆ55 mins ago

Paris Olympic 2024 : ಒಲಿಂಪಿಕ್ ಪದಕ ಗೆದ್ದ ಭಾರತದ ಮೊದಲ ಮಹಿಳಾ ಅಥ್ಲೀಟ್​ ಕರ್ಣಂ ಮಲ್ಲೇಶ್ವರಿ ಸಾಧನೆಯ ವಿವರ ಇಲ್ಲಿದೆ

Manoj Soni
ದೇಶ1 hour ago

Manoj Soni: ಅಕ್ರಮ ಆರೋಪದ ಬೆನ್ನಲ್ಲೇ ಯುಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಮನೋಜ್‌ ಸೋನಿ ರಾಜೀನಾಮೆ

ಕರ್ನಾಟಕ1 hour ago

CM Siddaramaiah: ಅಧಿಕಾರ ದುರುಪಯೋಗ ಆರೋಪ; ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ದೂರು

UP Minister Resigns
ದೇಶ2 hours ago

UP Minister Resigns: ಯೋಗಿ ಸರ್ಕಾರದಿಂದ ಒಂದು ವಿಕೆಟ್‌ ಪತನ; ಸಚಿವೆ ಸೋನಮ್‌ ಚಿಶ್ಟಿ ರಾಜೀನಾಮೆ

Belgavi News
ಬೆಳಗಾವಿ2 hours ago

Belgavi News : ಬೆಳಗಾವಿಯಲ್ಲಿ ಮದ್ದು ಕುಟ್ಟುವಾಗ ಭಾರಿ ಸ್ಫೋಟ; ವ್ಯಕ್ತಿ ಸಜೀವ ದಹನ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ7 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌