R Ashok: ವಾಲ್ಮೀಕಿ ಹಗರಣ; ಮುಖ್ಯಮಂತ್ರಿ ಏನು ಕತ್ತೆ ಕಾಯುತ್ತಿದ್ದರೇ ಎಂದ ಆರ್‌. ಅಶೋಕ್‌ - Vistara News

ಕರ್ನಾಟಕ

R Ashok: ವಾಲ್ಮೀಕಿ ಹಗರಣ; ಮುಖ್ಯಮಂತ್ರಿ ಏನು ಕತ್ತೆ ಕಾಯುತ್ತಿದ್ದರೇ ಎಂದ ಆರ್‌. ಅಶೋಕ್‌

R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್‌ ಮಾಡಿದೆ. ಅದಕ್ಕೆ ಕ್ಲೀನ್‌ಚಿಟ್‌ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.

VISTARANEWS.COM


on

Opposition Party leader R Ashok pressmeet about Valmiki Development Corporation scam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಈಗ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆರೋಪಿಸಿದ್ದಾರೆ. ಎಲ್ಲ ತಪ್ಪುಗಳನ್ನು ಸಿದ್ದರಾಮಯ್ಯ ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ ಮುಖ್ಯಮಂತ್ರಿ ಏನು ಕತ್ತೆ ಕಾಯುತ್ತಿದ್ದರೇ ಎಂದು ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್‌ ಮಾಡಿದೆ. ಅದಕ್ಕೆ ಕ್ಲೀನ್‌ಚಿಟ್‌ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ, ಮುಖ್ಯಮಂತ್ರಿಯೇನು ಕತ್ತೆ ಕಾಯುತ್ತಿದ್ದರೇ? ಆ ಅಧಿಕಾರಿ ಹಿಂದೆಯೇ ತಪ್ಪು ಮಾಡಿದ್ದರೆ ಅದೇ ಹುದ್ದೆಯಲ್ಲಿ ಉಳಿಸಿಕೊಂಡಿದ್ದು ಏಕೆ? ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿ ಬಿದ್ದಿದ್ದು, ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ. ರಾಜ್ಯದ ಜನರ ಹಣವನ್ನು ಕಳ್ಳ ಖಾತೆಯಲ್ಲಿ ಇಟ್ಟಿದ್ದು ರಾಜ್ಯ ಸರ್ಕಾರ. ಇದರಲ್ಲಿ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಪಾತ್ರವೇ ಇಲ್ಲ. ಬ್ಯಾಂಕ್‌ ಅಧಿಕಾರಿಗಳು ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿದರು. ಆದರೆ ಸರ್ಕಾರ ವಿಶೇಷ ತನಿಖಾ ದಳಕ್ಕೆ ನೀಡಿ ಮುಚ್ಚಿ ಹಾಕಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: NEET UG 2024 Result: ಕ್ಷೇತ್ರವಾರು ನೀಟ್‌ ಪರೀಕ್ಷಾ ಫಲಿತಾಂಶ ಪ್ರಕಟ

ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಜಾಹೀರಾತು ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಜತೆಗೆ, ಜಾತಿ ಬಗ್ಗೆ ಹೇಳಿದ್ದಾರೆ. ನಿರ್ದಿಷ್ಟ ಜಾತಿಯ ವಿರುದ್ಧ ಯಾವುದೇ ಆಪಾದನೆ ಮಾಡಬಾರದು ಎಂದು ಸಂವಿಧಾನದಲ್ಲೇ ತಿದ್ದುಪಡಿ ಮಾಡಲಿ. ಸಿಎಂ ಸಿದ್ದರಾಮಯ್ಯ ಬೆಚ್ಚಿ ಬಿದ್ದಿರುವುದರಿಂದ ಹೀಗೆ ಮಾತಾಡುತ್ತಿದ್ದಾರೆ. 40 ಕ್ಕೂ ಅಧಿಕ ದಾಖಲೆಗಳನ್ನು ನಾನು ಕೊಟ್ಟಿದ್ದು, ಈ ಬಗ್ಗೆ ಸಿಎಂ ಸ್ಪಷ್ಟೀಕರಣ ಕೊಡದೆ ಎಲ್ಲಕ್ಕೂ ಪದ್ಮನಾಭ ಕಾರಣ ಎಂದು ಹೇಳಿದ್ದಾರೆ ಎಂದು ಆರೋಪಿಸಿದರು.

ಸಚಿವರ ತಪ್ಪಿಲ್ಲ ಎಂದ ಮೇಲೆ ಬಿ. ನಾಗೇಂದ್ರ ರಾಜೀನಾಮೆ ಯಾಕೆ ಕೊಟ್ಟರು? ಹಾಗಾದರೆ ಸಿಎಂ ಅವರನ್ನು ಅರ್ಧ ದಾರಿಯಲ್ಲೇ ಕೈ ಬಿಟ್ಟಿದ್ದಾರೆ ಎಂದರ್ಥ. ಲೋಕಸಭೆ ಚುನಾವಣೆಗಾಗಿ ನಾಗೇಂದ್ರ ಹಾಗೂ ಬಸವನಗೌಡ ದದ್ದಲ್‌ ಶ್ರಮ ವಹಿಸಿ, ಕಾಂಗ್ರೆಸ್‌ ಪಕ್ಷಕ್ಕಾಗಿ ಹಣ ಸಂಗ್ರಹ ಮಾಡಿ ತೆಲಂಗಾಣಕ್ಕೆ ಕಳುಹಿಸಿದ್ದಾರೆ ಎಂದು ದೂರಿದರು.

ತನಿಖೆ ಮಾಡಿ

ಬಿಜೆಪಿ ಸರ್ಕಾರದಲ್ಲಿ ಹಗರಣಗಳ ಸರಮಾಲೆ ಎಂದು ಆರೋಪ ಮಾಡಿ, ಅಧಿಕಾರಕ್ಕೆ ಬಂದು 15 ತಿಂಗಳಾದರೂ 40 ಪರ್ಸೆಂಟ್‌ ಆರೋಪದ ತನಿಖೆ ಇನ್ನೂ ಮುಗಿಸಿಲ್ಲ. ಹಿಂದಿನ ಸರ್ಕಾರ ಹಗರಣ ಮಾಡಿದ್ದರೆ, ಅದನ್ನು ತನಿಖೆ ಮಾಡಲು ಇಷ್ಟು ಸಮಯ ಬೇಕೆ ಎಂದು ಪ್ರಶ್ನೆ ಮಾಡಿದರು.

ಬಿಜೆಪಿಗೆ ಯಾವ ಒತ್ತಡವೂ ಇಲ್ಲ. ಆದರೆ ರಾಜ್ಯದ ಜನರ ಒತ್ತಡ ಮಾತ್ರ ಇದೆ. ಜನರಿಗಾಗಿ ಹಾಗೂ ದಲಿತರಿಗಾಗಿ ಈ ಮಟ್ಟಕ್ಕೆ ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ದಲಿತರ ಹಣ ವಾಪಸ್‌ ಸಿಗಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುವುದು ನಮ್ಮ ಪಕ್ಷದ ಉದ್ದೇಶ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪದ 21 ಹಗರಣಗಳನ್ನು ನಾವೇ ತನಿಖೆ ಮಾಡುತ್ತೇವೆ. ಅವರು ಅಧಿಕಾರದಿಂದ‌ ಕೆಳಕ್ಕಿಳಿದು ನಮಗೆ ಅಧಿಕಾರ ನೀಡಲಿ ಎಂದು ಆರ್‌.ಅಶೋಕ್‌ ಸವಾಲು ಹಾಕಿದರು.

ಇದನ್ನೂ ಓದಿ: Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಕನ್ನಡತಿ ಭಾವನಾ ಪ್ರದ್ಯುಮ್ನ

ಬ್ರ್ಯಾಂಡ್ ಬೆಂಗಳೂರು ಆಗಬೇಕೆಂದರೆ ಎಲ್ಲ ಕ್ಷೇತ್ರಗಳು ಅಭಿವೃದ್ಧಿಯಾಗಬೇಕು. ಬೆಂಗಳೂರಿನಲ್ಲಿ ಬಿಜೆಪಿ ಶಾಸಕರೇ ಹೆಚ್ಚಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಎಲ್ಲರ‌‌ ಬಳಿ ಚರ್ಚೆ ಮಾಡಿ ಅನುದಾನ ನೀಡಲಿ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಸರ್ಕಾರ ಅನುದಾನ ನೀಡಿತ್ತು. ಅದೇ ರೀತಿ ಕಾಂಗ್ರೆಸ್ ಕೂಡ ನಡೆದುಕೊಳ್ಳಲಿ. ಈಗಾಗಲೇ‌ ನಗರದಲ್ಲಿ ಕಸದ ರಾಶಿ ಹೆಚ್ಚಿದ್ದು, ವಿಲೇವಾರಿ ಮಾಡಲು ಕೂಡಲೇ ಕ್ರಮ ವಹಿಸಲಿ ಎಂದು ಆಗ್ರಹಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ಬಿಜೆಪಿ ತನ್ನ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಸಿಎಂ ಸಿದ್ದರಾಮಯ್ಯ

CM Siddaramaiah: ಈ ಹಿಂದೆ ಭೋವಿ ಅಭಿವೃದ್ಧಿ ನಿಗಮದಲ್ಲಿ 60 ಕೋಟಿ, ಅರಸು ಟ್ರಕ್ ಟರ್ಮಿನಲ್‌ನಲ್ಲಿ 47 ಕೋಟಿಗೂ ಹೆಚ್ಚು ಹಣ ತಿಂದು ಜೈಲಿಗೆ ಹೋದವರು ಯಾವ ಪಕ್ಷವರು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

VISTARANEWS.COM


on

CM Siddaramaiah
Koo

ಚಿತ್ರದುರ್ಗ: ಈಗಿನ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಆಗುತ್ತದೆ. ಆದರೆ, ಬಿಜೆಪಿಯವರು ತಮ್ಮ ಕಾಲದಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದ ಹಿಂದಿನ ಹಗರಣಗಳನ್ನು ಬೆಳಕಿಗೆ ತರುತ್ತಿದೆ ಎಂಬ ವಿರೋಧ ಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹಾಗಾದರೆ ಅವುಗಳು ಹಗರಣಗಳಲ್ಲವೇ? ಹಗರಣಗಳು ಎಂದು ಅವರು ಒಪ್ಪುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

ಈಗಿನ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಅವರ ಕಾಲದ ಅಕ್ರಮಗಳನ್ನು ಉಲ್ಲೇಖ ಮಾಡಿದ್ದು ಏಕೆಂದರೆ, ಅವರ ಕಾಲದಲ್ಲಿ ಜಾರಿ ನಿರ್ದೇಶನಾಲಯ ಮಧ್ಯ ಪ್ರವೇಶ ಮಾಡಲಿಲ್ಲ. ಭೋವಿ ಅಭಿವೃದ್ಧಿ ನಿಗಮದಲ್ಲಿ 60 ಕೋಟಿ ರೂ.ಗಳನ್ನು ನುಂಗಿಹಾಕಿದ್ದಾರೆ. ದೇವರಾಜ ಅರಸ್ ಟ್ರಕ್ ಟರ್ಮಿನಲ್‌ನಲ್ಲಿ 47 ಕೋಟಿ ರೂ.ಗಳಿಗೂ ಹೆಚ್ಚು ಹಣ ತಿಂದು ಜೈಲಿಗೆ ಹೋದವರು ಯಾವ ಪಕ್ಷವರು? ಇದನ್ನೆಲ್ಲಾ ಹೇಳಬಾರದೆ? ಎಂದರು. ಈಗಿನ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಆಗುತ್ತದೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ | LKG UKG in Anganwadis: ದೇಶದಲ್ಲೇ ಮೊದಲ ಬಾರಿ ಅಂಗನವಾಡಿಗಳಲ್ಲಿ ಎಲ್‌‌ಕೆಜಿ, ಯುಕೆಜಿ; ಜು.22ಕ್ಕೆ ಉದ್ಘಾಟನೆ

ಬೆದರಿಸುತ್ತಿಲ್ಲ, ವಸ್ತುಸ್ಥಿತಿಯನ್ನು ಮುಂದಿಟ್ಟಿದ್ದೇನೆ

ಮುಖ್ಯಮಂತ್ರಿಗಳು ಬೆದರಿಸುತ್ತಿದ್ದಾರೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಉತ್ತರಿಸಿದ ಸಿಎಂ ಬೆದರಿಸುತ್ತಿಲ್ಲ, ವಸ್ತುಸ್ಥಿತಿಯನ್ನು ಮುಂದಿಟ್ಟಿದ್ದೇನೆ ಎಂದರು.

ದೇವರಾಜ ಟ್ರಕ್ ಟರ್ಮಿನಲ್ ಅಧ್ಯಕ್ಷರಾಗಿದ್ದ ಡಿ.ಎಸ್.ವೀರಯ್ಯ ಹಾಗೂ ಎಂ.ಡಿ ಶಂಕರಪ್ಪ ಜೈಲಿಗೆ ಹೋಗಿದ್ದಾರೆ. ಅದನ್ನು ಯಾಕೆ ಪ್ರಸ್ತಾಪಿಸಿಲ್ಲ ? ಅದು ಕೂಡ ತೆರಿಗೆ ಹಣವಲ್ಲವೇ? ವಿರೋಧ ಪಕ್ಷವಾಗಿ ಅದನ್ನು ಯಾಕೆ ಪ್ರಶ್ನಿಸಲಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ

ಚಿತ್ರದುರ್ಗ: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ಅವಕಾಶ ಇಲ್ಲದವರು ಕುಲ ಕಸುಬನ್ನಷ್ಟೆ ಮಾಡಿಕೊಂಡು ಹಿಂದುಳಿದರು. ಶೋಷಿತ ಸಮುದಾಯಗಳ ವಿಮೋಚನೆಗೆ ಹೋರಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣದಿಂದಲೇ ಮೇಧಾವಿಯಾದರು ಎಂದು ವಿವರಿಸಿದರು.

ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಸ್ವಾಭಿಮಾನ ಬೆಳೆಸಿಕೊಂಡು ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದರು.

ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಶಿಕ್ಷಣ ಪಡೆಯಲು ಸಾಧ್ಯವಾಗಿಲ್ಲ. ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದರು.

ಎಸ್‌ಸಿ/ಎಸ್‌ಟಿ ಸಮುದಾಯಗಳ‌ ಜನಸಂಖ್ಯೆ ರಾಜ್ಯದಲ್ಲಿ ಶೇ.24 ಇದ್ದಾರೆ. ಈ ಜನಸಂಖ್ಯೆಗೆ ಸಮವಾಗಿ ಅಭಿವೃದ್ಧಿ ಆಯವ್ಯಯದ ಶೇ.24 ರಷ್ಟು ಹಣವನ್ನು ಈ ಸಮುದಾಯಗಳ ಏಳಿಗೆಗಾಗಿ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು ನಮ್ಮ ಸರ್ಕಾರ. ಭೋವಿ ಸಮುದಾಯದ ಪ್ರತಿನಿಧಿಯನ್ನು ಕೆಪಿಎಸ್‌ಸಿ ಸದಸ್ಯರನ್ನಾಗಿ ಮಾಡಿದ್ದು ನಮ್ಮ ಸರ್ಕಾರ ಎಂದರು.

ಇದನ್ನೂ ಓದಿ | CM Siddaramaiah: ಅಧಿಕಾರ ದುರುಪಯೋಗ ಆರೋಪ; ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ದೂರು

ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಗಮವಾಗಿ ಮರುನಾಮಕರಣ ಮಾಡುಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನು ಈಡೇರಿಸಲಾಗುವುದು. ಇನ್ನು ಸಿದ್ಧರಾಮೇಶ್ವರ ಅಧ್ಯಯನ‌ಪೀಠಕ್ಕಾಗಿ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದರು.

Continue Reading

ಬೆಂಗಳೂರು

Honor 200 Series : ಒಂದೇ ದಿನ 2 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಹಾನರ್

Honor 200 Series: ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಪೋರ್ಟ್ ಫೋಲಿಯೊವನ್ನು ವಿಸ್ತರಿಸುತ್ತಿರುವ ಹಾನರ್ ಇಂದು ತನ್ನ ಹಾನರ್ 200 ಸರಣಿಯನ್ನು ಬಿಡುಗಡೆ ಮಾಡಿದೆ. ಹಾನರ್ 200 ಪ್ರೊ 5ಜಿ ಮತ್ತು ಹಾನರ್ 200 5ಜಿ ಒಳಗೊಂಡಿರುವ ಈ ಹೊಸ ಸರಣಿಯು ಶಕ್ತಿ ಮತ್ತು ಸೃಜನಶೀಲತೆಯ ಗಡಿಗಳನ್ನು ದಾಟುತ್ತದೆ, ಅದ್ಭುತ ಎಐ-ಚಾಲಿತ ಪೋರ್ಟ್ರೇಟ್ ಸಾಮರ್ಥ್ಯಗಳು, ಇಮ್ಮರ್ಸಿವ್ ಡಿಸ್‌ಪ್ಲೇಗಳು, ದೃಢವಾದ ಹಾರ್ಡ್‌ವೇರ್ ಕಾರ್ಯಕ್ಷಮತೆ ಮತ್ತು ಅರ್ಥಗರ್ಭಿತ ಬಳಕೆದಾರ-ಕೇಂದ್ರಿತ ಎಐ ಅನುಭವಗಳೊಂದಿಗೆ ಗ್ರಾಹಕರಿಗೆ ಉನ್ನತ ದರ್ಜೆಯ ಅನುಭವವನ್ನು ನೀಡುತ್ತದೆ.

VISTARANEWS.COM


on

Honor Released Honor 200 Pro 5G and Honor 200 5G Smartphones
Koo

ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಮಾರುಕಟ್ಟೆ ವಿಸ್ತರಣೆ ಮಾಡುತ್ತಿರುವ ಪ್ರಮುಖ ಮೊಬೈಲ್ ತಯಾರಿಕ ಕಂಪನಿ ಹಾನರ್ (Honor 200 Series), ಶುಕ್ರವಾರ (ಜುಲೈ 19ರಂದು) ತನ್ನ ಹಾನರ್ 200 ಸರಣಿ (Honor 200 Series) ಎರಡು ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿದೆ. ಹಾನರ್ 200 ಪ್ರೊ 5ಜಿ ಮತ್ತು ಹಾನರ್ 200 5ಜಿ ಬಿಡುಗಡೆಗೊಂಡಿರುವ ಮೊಬೈಲ್​ಗಳು. ಎಐ-ಚಾಲಿತ ಪೋರ್ಟ್ರೇಟ್ ಸಾಮರ್ಥ್ಯಗಳು, ಇಮ್ಮರ್ಸಿವ್ ಡಿಸ್‌ಪ್ಲೇ, ದೃಢ ಹಾರ್ಡ್‌ವೇರ್ ಕಾರ್ಯಕ್ಷಮತೆ ಮತ್ತು ಬಳಕೆದಾರ-ಕೇಂದ್ರಿತ ಎಐ ಅನುಭವವನ್ನು ಈ ಸ್ಮಾರ್ಟ್​​ಫೋನ್ ನೀಡುತ್ತದೆ.

ಹಾನರ್ 200 ಪ್ರೊ 5ಜಿ

ಹಾನರ್ 200 ಪ್ರೊ 5ಜಿ ಓಷಿಯನ್ ಸಿಯಾನ್ ಮತ್ತು ಬ್ಲ್ಯಾಕ್ ಎಂಬ ಎರಡು ಬಣ್ಣಗಳಲ್ಲಿ ಲಭ್ಯವಿದ್ದು, ಇದರ ಬೆಲೆ 57,999 ರೂಪಾಯಿ. ಜುಲೈ 20 ರ ಮಧ್ಯರಾತ್ರಿ 12 ಗಂಟೆಯಿಂದ Amazon.in, ಬ್ರಾಂಡ್ ವೆಬ್ಸೈಟ್ – explorehonor.com ಮತ್ತು ಮೇನ್‌ಲೈನ್ ಮಳಿಗೆಗಳಲ್ಲಿ ಮಾರಾಟ ಪ್ರಾರಂಭವಾಗಿದೆ. ಜುಲೈ 20ರಿಂದ 23 ರ ವರೆಗೆ ಸ್ಮಾರ್ಟ್‌ ಫೋನ್ ಅನ್ನು ಎಲ್ಲಾ ಗ್ರಾಹಕರಿಗೆ 8000 ರೂ.ಗಳ ರಿಯಾಯಿತಿಯೊಂದಿಗೆ ನೀಡಲಾಗಿದೆ. ಇದಲ್ಲದೆ, ಐಸಿಐಸಿಐ ಬ್ಯಾಂಕ್ ಮತ್ತು ಎಸ್‌ಬಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಹೊಂದಿರುವವರು 3000 ರೂ.ಗಳ ರಿಯಾಯಿತಿಯನ್ನು ಪಡೆಯಬಹುದು. ಹೆಚ್ಚುವರಿಯಾಗಿ, ಗ್ರಾಹಕರು ಕೆಲವು ಆಯ್ದ ಮುಖ್ಯ ಲೈನ್ ಅಂಗಡಿಗಳಲ್ಲಿ 8,499 ಮೌಲ್ಯದ ಉಚಿತ ಹಾನರ್ ಉಡುಗೊರೆಗಳನ್ನು ಪಡೆಯಬಹುದು. ಅಥವಾ 2000 ರೂಪಾಯಿ ಕೂಪನ್ ರಿಯಾಯಿತಿ ಪಡೆಯಬಹುದು.

ಇದನ್ನೂ ಓದಿ: Kannada New Movie: ಜು.26ರಂದು ’ಕುಬುಸʼ ಚಿತ್ರ ರಾಜ್ಯಾದ್ಯಂತ ಬಿಡುಗಡೆ

ಹಾನರ್ 200 5ಜಿ

ಹಾನರ್ 200 5ಜಿ ಮೂನ್‌ಲೈಟ್ ವೈಟ್ ಮತ್ತು ಬ್ಲ್ಯಾಕ್ ಎಂಬ ಎರಡು ಬಣ್ಣಗಳಲ್ಲಿ ಲಭ್ಯವಿದೆ. 12 ಜಿಬಿ ರ್ಯಾಮ್​ ಮತ್ತು 512 ಜಿಬಿ ಸ್ಟೋರೇಜ್​ನೊಂದಿಗೆ ಇದು ಲಭ್ಯವಿದೆ. ಇದರ 39,999 ರೂಪಾಯಿ. ಆದರೆ, 8 ಜಿಬಿ ಮತ್ತು 256 ಸ್ಟೋರೇಜ್ ಹೊಂದಿರುವ ಮೊಬೈಲ್ 34,999 ರೂಪಾಯಿ. ಜುಲೈ 20 ರಿಂದ 23 ರವರೆಗೆ ಸ್ಮಾರ್ಟ್‌ ಫೋನ್‌ ಅನ್ನು 1000 ರೂ.ಗಳ ರಿಯಾಯಿತಿ ಮತ್ತು 2000 ರೂ.ಗಳ ಬ್ಯಾಂಕ್ ಡಿಸ್ಕೌಂಟ್​ನೊಂದಿಗೆ ಖರೀದಿ ಮಾಡಬಹುದು. ಗ್ರಾಹಕರು ಮೇನ್ ಲೈನ್ ಸ್ಟೋರ್ ಗಳಲ್ಲಿ 8,499 ಮೌಲ್ಯದ ಉಚಿತ ಹಾನರ್ ಗಿಫ್ಟ್​ಗಳನ್ನು ಪಡೆಯಬಹುದು. ಎಲ್ಲ ಸೇರಿದರೆ ಜುಲೈ 20 ರಿಂದ 23 ರಂದು 29,999* ರೂಪಾಯಿಗಳಿಗೆ ಮೊಬೈಲ್ ಲಭ್ಯವಾಗುತ್ತದೆ.

ವಿಶೇಷತೆ ಏನು?

ಹಾನರ್ 200 ಸರಣಿಯು ಟ್ರಿಪಲ್-ಕ್ಯಾಮೆರಾ ಹೊಂದಿದೆ. 50 ಎಂಪಿ ಪೋರ್ಟ್ರೇಟ್ ಮೇನ್​ ಕ್ಯಾಮೆರಾ, 50 ಎಂಪಿ ಪೋರ್ಟ್ರೇಟ್ ಟೆಲಿಫೋಟೋ ಕ್ಯಾಮೆರಾ, 12 ಎಂಪಿ ಅಲ್ಟ್ರಾ-ವೈಡ್ ಲೆನ್ಸ್ ಮತ್ತು 50 ಎಂಪಿ ಪೋರ್ಟ್ರೇಟ್ ಸೆಲ್ಫಿ ಕ್ಯಾಮೆರಾ ಇದರಲ್ಲಿದೆ.

ಇದನ್ನೂ ಓದಿ: Uttara Kannada News: ಭೂಕುಸಿತದಿಂದ ಕೊಚ್ಚಿ ಹೋದ ಟ್ಯಾಂಕರ್‌; ಗ್ರಾಮಸ್ಥರೀಗ ಗ್ಯಾಸ್ ಸ್ಫೋಟ ಅಪಾಯದಿಂದ ಪಾರು

ಎರಡೂ ಮೊಬೈಲ್​ಗಳು ಎಐ-ಚಾಲಿತ ಕಣ್ಣಿನ ಕಂಫರ್ಟ್ ಮತ್ತು ಅಮೋಲೆಡ್ ಕ್ವಾಡ್ ಕರ್ವ್ಡ್ ಡಿಸ್‌ಪ್ಲೇಗಳನ್ನು ಹೊಂದಿವೆ. ದಿ ಹಾನರ್‌ನ ಮ್ಯಾಜಿಕ್ ಎಲ್ಎಂ ಎಐನೊಂದಿಗೆ ಮ್ಯಾಜಿಕ್ಒಎಸ್ 8.0 (ಆಂಡ್ರಾಯ್ಡ್ 14) ನಲ್ಲಿ ಕಾರ್ಯನಿರ್ವಹಿಸುತ್ತವೆ. ಹಾನರ್ 200 ಪ್ರೊನಲ್ಲಿ ಸ್ನ್ಯಾಪ್‌ ಡ್ರ್ಯಾಗನ್‌ 8 ಎಸ್ ಜೆನ್​ 3 ಮತ್ತು ಹಾನರ್ 200 ನಲ್ಲಿ ಸ್ನ್ಯಾಪ್ ಡ್ರ್ಯಾಗನ್ 7 ಜೆನ್​​ 3 ಚಿಪ್​ಸೆಟ್​ ಇದೆ.

ಹಾನರ್ 200 ಸರಣಿಯು ಮಿಂಚಿನ ವೇಗದ 100W ವೈರ್ಡ್ ಹಾನರ್ ಸೂಪರ್ ಚಾರ್ಜಿಂಗ್​ ವ್ಯವಸ್ಥೆ ಹೊಂದಿದೆ. ಕೇವಲ 41 ನಿಮಿಷಗಳಲ್ಲಿ ಹಾನರ್ 200 ಪ್ರೊ ಅನ್ನು ಚಾರ್ಜ್ ಮಾಡಬಹುದು. ಪ್ರೊ ರೂಪಾಂತರವು 66W ವೈರ್‌ಲೆಸ್ ಹಾನರ್ ಸೂಪರ್ ಚಾರ್ಜ್ ಕೆಪಾಸಿಟಿ ಹೊಂದಿದೆ.

ಬಿಡುಗಡೆ ಕುರಿತು ಎಚ್‌ಟೆಕ್ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಸಿಪಿ ಖಂಡೇಲ್ವಾಲ್ ಮಾತನಾಡಿ, ಹಾನರ್ 200 ಸರಣಿಯ ಬಿಡುಗಡೆಯು ಭಾರತದಲ್ಲಿ ಸ್ಮಾರ್ಟ್ ಫೋನ್ ಅನುಭವವನ್ನು ಮರುವ್ಯಾಖ್ಯಾನಿಸುವ ಕುರಿತ ಮಹತ್ವದ ಮೈಲಿಗಲ್ಲಾಗಿದೆ. .

ಇದನ್ನೂ ಓದಿ: Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ

ನಮ್ಮ ಗ್ರಾಹಕರ ನಿರೀಕ್ಷೆಗಳನ್ನು ಪೂರೈಸುವುದು ಮಾತ್ರವಲ್ಲದೆ ಮೀರುವ ನವೀನ ಉತ್ಪನ್ನಗಳನ್ನು ತಲುಪಿಸಲು ನಾವು ಬದ್ಧರಾಗಿದ್ದೇವೆ ಮತ್ತು ಹಾನರ್ 200 ಸರಣಿಯು ಈ ಬದ್ಧತೆಗೆ ಉದಾಹರಣೆಯಾಗಿದೆ ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

Movie ticket price hike: ಸಿನಿಮಾ ಪ್ರೇಕ್ಷಕರ ಮೇಲೂ ತೆರಿಗೆ ಪ್ರಹಾರ; ಸಿನಿಮಾ ಟಿಕೆಟ್‌, OTT ಸಬ್‌ಸ್ಕ್ರಿಪ್ಶನ್ ಶುಲ್ಕ ಭಾರಿ ಏರಿಕೆ?

Movie ticket price hike: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಿ.ಎಂ ಸೀಟನ್ನು ಉಳಿಸಿಕೊಳ್ಳಲು ನಾಡಿನ ಸಿನಿ ಪ್ರಿಯರ ಬೆನ್ನಿಗೂ ತೆರಿಗೆ ಬರೆ ಎಳೆಯಲು ಮುಂದಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಟೀಕಿಸಿದೆ.

VISTARANEWS.COM


on

Movie ticket price hike
Koo

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಏರಿಕೆ ಬೆನ್ನಲ್ಲೇ ಇದೀಗ ಮನರಂಜನೆ ಕ್ಷೇತ್ರದ ಮೇಲೆ ರಾಜ್ಯ ಸರ್ಕಾರ ಕಣ್ಣಿಟ್ಟಿದೆ. ಸಿನಿಮಾ ಟಿಕೆಟ್ ಮತ್ತು ಒಟಿಟಿ ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್ ವಿಧಿಸಲು ಸರ್ಕಾರ ಮುಂದಾಗಿದ್ದು, ಇದಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ರಾಜ್ಯ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವ ರಾಜ್ಯ ಬಿಜೆಪಿ, ಎಲ್ಲದರ ಮೇಲೂ ತೆರಿಗೆಯನ್ನು ಹೇರಿರುವ ಸಿದ್ದರಾಮಯ್ಯ ಸರ್ಕಾರ, ಇದೀಗ ಸಿನಿಮಾ ಪ್ರೇಕ್ಷಕರ ಮೇಲೂ ತೆರಿಗೆ ಪ್ರಹಾರ (Movie ticket price hike) ಮಾಡಲು ‘ಕೈ’ ಎತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಿ.ಎಂ ಸೀಟನ್ನು ಉಳಿಸಿಕೊಳ್ಳಲು ನಾಡಿನ ಸಿನಿ ಪ್ರಿಯರ ಬೆನ್ನಿಗೂ ತೆರಿಗೆ ಬರೆ ಎಳೆಯಲು ಮುಂದಾಗಿದ್ದಾರೆ. ಕನ್ನಡ ಚಿತ್ರರಂಗ ಸಂಕಷ್ಟಗಳಿಂದ ಬಳಲುತ್ತಿದ್ದರೂ, ಅವುಗಳಿಗೆ ಕಿವಿಗೊಡದ ಸಿಎಂ, ಸಿನಿಮಾ ಟಿಕೆಟ್, ಒಟಿಟಿಗಳ ಚಂದಾದಾರಿಕೆಯ ಮೇಲೆ ಶೇ.2ರಷ್ಟು ತೆರಿಗೆಯನ್ನು ವಿಧಿಸಿ ಹಣದೋಚಲು ಮುಂದಾಗಿದ್ದಾರೆ. ಇದಕ್ಕಾಗಿ ವಿಧಾನಸಭೆಯಲ್ಲಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಹೋರಾಟಗಾರರ (ಕ್ಷೇಮಾಭಿವೃದ್ಧಿ) ಮಸೂದೆ-2024 ಅನ್ನು ಅನುಮೋದನೆಗೆ ಇಟ್ಟಿದ್ದಾರೆ. ಈಗಾಗಲೇ ಎಲ್ಲದರ ಮೇಲೂ ತೆರಿಗೆಯನ್ನು ಹೇರಿರುವ ರಣಹೇಡಿ ಕಾಂಗ್ರೆಸ್‌ ಸರ್ಕಾರ, ಈಗ ಸಿನಿಮಾ ಪ್ರೇಕ್ಷಕರ ಮೇಲೂ ತೆರಿಗೆ ಪ್ರಹಾರ ಮಾಡಲು ‘ಕೈ’ ಎತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದೆ.

ಮಸೂದೆ ಮಂಡನೆ

ರಾಜ್ಯ ಸರ್ಕಾರ, ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ಮಸೂದೆ 2024 ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದೆ. ಈ ಮಸೂದೆಯಲ್ಲಿ ಸಿನಿಮಾ, ಸಾಂಸ್ಕೃತಿಕ ಕಲಾವಿದರ ಅನುಕೂಲಕ್ಕಾಗಿ ಸಿನಿಮಾ ಟಿಕೆಟ್‌ ಮತ್ತು ಒಟಿಟಿ ಸಬ್‌ಸ್ಕ್ರಿಪ್ಶನ್ ಶುಲ್ಕದ ಮೇಲೆ ಶೇಕಡ 1ರಿಂದ 2ರಷ್ಟು ಹೊಸ ಸೆಸ್ ವಿಧಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಇದರಿಂದ ಸಿನಿಮಾ, ಸಾಂಸ್ಕೃತಿಕ ಕಲಾವಿದರಿಗೆ ಇಎಸ್ಐ, ಪಿಎಫ್ ಸೇರಿದಂತೆ ಅನೇಕ ಅನುಕೂಲಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ | Rakshit Shetty: ಕಿರುತೆರೆಗೂ ಲಗ್ಗೆ ಇಟ್ಟ ʼಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿʼ ಚಿತ್ರ; ಎಲ್ಲಿ, ಯಾವಾಗ ಪ್ರಸಾರ?

ರಾಜ್ಯದಲ್ಲಿನ ಸಿನಿಮಾ, ಸಾಂಸ್ಕೃತಿಕ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ & ಕಲ್ಯಾಣ ನಿಧಿ ಎಂಬ ನಿಧಿ ಸ್ಥಾಪಿಸಲಾಗುವುದು ಎಂದು ಮಸೂದೆಯಲ್ಲಿ ತಿಳಿಸಲಾಗಿದೆ. ಇದರಿಂದ ಸಿನಿಮಾ ಟಿಕೆಟ್ ಹಾಗೂ ಒಟಿಟಿ ಚಂದಾದಾರಿಕೆ ಮೇಲೆ ಶೇಕಡ 2 ಪರ್ಸೆಂಟ್ ಮೀರದಂತೆ ಶೇಕಡ 1 ಪರ್ಸೆಂಟ್​ಗಿಂತ ಕಡಿಮೆಯಾಗದಂತೆ ಸೆಸ್‌ ವಿಧಿಸಲಿದೆ. ಈ ಸೆಸ್ ಅನ್ನು ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ & ಕಲ್ಯಾಣ ನಿಧಿಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದೆ.

Continue Reading

ಶಿವಮೊಗ್ಗ

Karnataka Rain: ಸೊರಬ ತಾಲೂಕಿನ ವಿವಿಧೆಡೆ ಮಳೆ ಆರ್ಭಟ; ವರದಾ ನದಿ ತೀರದ ವ್ಯಾಪ್ತಿಯ ಕೃಷಿ ಭೂಮಿ ಜಲಾವೃತ

Karnataka Rain: ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮ ಸೇರಿದಂತೆ ಹೋಬಳಿಯಾದ್ಯಂತ ಮಳೆಯ ಅರ್ಭಟ ಮುಂದುವರೆದಿದ್ದು, ವರದಾ ನದಿ ತೀರದ ಪ್ರದೇಶಗಳ ಹೊಲ, ಗದ್ದೆ, ತೋಟಗಳು ನೀರಿನಲ್ಲಿ ಮುಳುಗಡೆಯಾಗಿವೆ.

VISTARANEWS.COM


on

Heavy rain in Chandragutti village and other places of Soraba taluk
Koo

ಸೊರಬ: ತಾಲೂಕಿನ ಚಂದ್ರಗುತ್ತಿ ಗ್ರಾಮ ಸೇರಿದಂತೆ ಹೋಬಳಿಯಾದ್ಯಂತ ಮಳೆಯ ಅರ್ಭಟ ಮುಂದುವರಿದಿದ್ದು, ವರದಾ ನದಿ ತೀರದ ಪ್ರದೇಶಗಳ ಹೊಲ, ಗದ್ದೆ, ತೋಟಗಳು ನೀರಿನಲ್ಲಿ (Karnataka Rain) ಮುಳುಗಡೆಯಾಗಿವೆ.

ತಾಲೂಕು ಹಾಗೂ ನೆರೆಯ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವರದಾನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಚಂದ್ರಗುತ್ತಿ ಸಮೀಪದ ಪುರಾ ಗ್ರಾಮದಲ್ಲಿ ಈಗಾಗಲೇ 5 ಕುಟುಂಬದ ಸುಮಾರು 30 ಜನ ನೆರೆಯ ಭೀತಿಯಿಂದ ಸಂಬಂಧಿಗಳ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ. ಉಳಿದಂತೆ ನೆರೆ ಎದುರಾದರೆ 11 ಮನೆಗಳಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.

ಈ ನಿಟ್ಟಿನಲ್ಲಿ ಗ್ರಾಮದ ಸರ್ಕಾರಿ ಕಿ.ಪ್ರಾ. ಶಾಲೆ ಅಥವಾ ಚಂದ್ರಗುತ್ತಿಯ ಯಾತ್ರಿ ನಿವಾಸದಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಲಾಗಿದೆ. ವರದಾ ನದಿಯ ಪ್ರವಾಹಕ್ಕೆ ಈಗಾಗಲೇ ಕಡಸೂರು, ತಟ್ಟಿಕೆರೆ, ಅಂದವಳ್ಳಿ, ಜೋಳದಗುಡ್ಡೆ, ಚನ್ನಪಟ್ಟಣ ಹಾಗೂ ಅನೇಕ ಗ್ರಾಮಗಳ ನೂರಾರು ಎಕರೆ ಜಮೀನುಗಳು ಜಲಾವೃತವಾಗಿವೆ.

ಇದನ್ನೂ ಓದಿ: Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

ಕಳೆದ 24 ಗಂಟೆಯಲ್ಲಿ ವಾಡಿಕೆ ಮಳೆಗಿಂತ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ಹೋಬಳಿ ವ್ಯಾಪ್ತಿಯಲ್ಲಿ ವಾಡಿಕೆ ಮಳೆ 28.4 ಮಿ.ಮೀ ಆಗಿದ್ದು, 121.2 ಮಿ.ಮೀ ಮಳೆ ದಾಖಲಾಗಿದೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆರೆಗಳು ಕೋಡಿ ಬಿದ್ದಿವೆ. ಕಮರೂರು ಗ್ರಾಮದಲ್ಲಿ ಕೆರೆ ನೀರು ರಸ್ತೆಗೆ ಬರುತ್ತಿದ್ದು, ಸಂಚಾರಕ್ಕೆ ತೊಡಕಾಗುತ್ತಿದೆ. ಈ ಹಿಂದೆ ಸಮರ್ಪಕವಾಗಿ ಕೆರೆ ಕೋಡಿ ದುರಸ್ತಿ ಮಾಡದಿರುವುದೇ ಸಮಸ್ಯೆಗೆ ಕಾರಣ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ಚಂದ್ರಗುತ್ತಿಯಿಂದ ಉತ್ತರ ಕನ್ನಡದ ಸಿದ್ದಾಪುರ ರಸ್ತೆಯ ಶಿವಪುರ ಸಮೀಪ ಭಂಗೀ ಭೂತಪ್ಪ ದೇವಸ್ಥಾನದ ಬಳಿ ಹಳ್ಳ ಉಕ್ಕಿದ್ದು, ಸುತ್ತಲಿನ ಪ್ರದೇಶ ಜಲಾವೃತವಾಗಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ಇದೇ ಪ್ರಮಾಣದಲ್ಲಿ ಮಳೆ ಮುಂದುವರೆದರೆ ಚಂದ್ರಗುತ್ತಿ-ಸಿದ್ದಾಪುರ ರಸ್ತೆ, ನ್ಯಾರ್ಸಿ ಸಮೀಪ ಹಳ್ಳ ಉಕ್ಕಿದರೆ ಹರೀಶಿ ಸಂಪರ್ಕ ರಸ್ತೆ, ಗುಂಜನೂರು ನರ್ಸರಿ ಬಳಿ ವರದಾ ನದಿ ಉಕ್ಕಿ ನೀರು ರಸ್ತೆಗೆ ಬಂದರೆ ಸೊರಬ ಸಂಪರ್ಕ ರಸ್ತೆ ಕಡಿತವಾಗುವ ಸಾಧ್ಯತೆ ಎದುರಾಗಿದೆ.

ಇದನ್ನೂ ಓದಿ: Shivamogga News: ಹುಲಗಾರು–ಮೈತಳ್ಳಿ ಸಂಪರ್ಕ ರಸ್ತೆಯಲ್ಲಿ ದರೆ ಕುಸಿತ; ಡಿಸಿ ಭೇಟಿ, ಪರಿಶೀಲನೆ

ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ

ಚಂದ್ರಗುತ್ತಿ ಹೋಬಳಿ ವ್ಯಾಪ್ತಿಯಲ್ಲಿ ಜನತೆಯ ಸುರಕ್ಷತೆ ದೃಷ್ಟಿಯಿಂದ ಸಿದ್ಧತಾ ಕಾರ್ಯಗಳನ್ನು ಮಾಡಿಕೊಳ್ಳಲಾಗಿದೆ. ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಾಗಿದೆ. ನೆರೆಯಿಂದ ಸಮಸ್ಯೆ ಎದುರಾದರೆ ಅಂತಹ ಸ್ಥಳದಲ್ಲಿನ ಕುಟುಂಬಗಳನ್ನು ಸ್ಥಳಾಂತರ ಮಾಡಿ ಸ್ಥಳೀಯ ಸರ್ಕಾರಿ ಶಾಲೆ ಅಥವಾ ಚಂದ್ರಗುತ್ತಿಯ ಯಾತ್ರಿ ನಿವಾಸದಲ್ಲಿ ಕಾಳಜಿ ಕೇಂದ್ರ ತೆರೆಯಲು ತಾಲೂಕು ಆಡಳಿತದಿಂದ ಸಿದ್ದತೆ ನಡೆದಿದೆ ಎಂದು ಉಪ ತಹಸೀಲ್ದಾರ್‌ ಪಿ.ಲಲಿತಾ ತಿಳಿಸಿದ್ದಾರೆ.

Continue Reading
Advertisement
CM Siddaramaiah
ಕರ್ನಾಟಕ14 mins ago

CM Siddaramaiah: ಬಿಜೆಪಿ ತನ್ನ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಸಿಎಂ ಸಿದ್ದರಾಮಯ್ಯ

Viral video
ವೈರಲ್ ನ್ಯೂಸ್18 mins ago

Viral Video: ಏಳು ತಿಂಗಳ ಮಗುವಿನ ಮೇಲೆ ಗುಂಡು ಹಾರಿಸಿದ ಕ್ರೂರ ಮಹಿಳೆ!

Honor Released Honor 200 Pro 5G and Honor 200 5G Smartphones
ಬೆಂಗಳೂರು21 mins ago

Honor 200 Series : ಒಂದೇ ದಿನ 2 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಹಾನರ್

Self Harming
Latest24 mins ago

Self Harming: ಹೆಂಡತಿಗೆ ಹೆದರಿಸಲು ಹೋಗಿ ಜೀವ ಕಳೆದುಕೊಂಡ ಲೋಕೋ ಪೈಲಟ್‍!

Health Tips Kannada
ಆರೋಗ್ಯ25 mins ago

Health Tips Kannada: ಮಳೆಗಾಲದಲ್ಲಿ ಹಾಗಲಕಾಯಿ ತಿಂದರೆ ಪ್ರಯೋಜನಗಳು ಎಷ್ಟೊಂದು!

Movie ticket price hike
ಕರ್ನಾಟಕ39 mins ago

Movie ticket price hike: ಸಿನಿಮಾ ಪ್ರೇಕ್ಷಕರ ಮೇಲೂ ತೆರಿಗೆ ಪ್ರಹಾರ; ಸಿನಿಮಾ ಟಿಕೆಟ್‌, OTT ಸಬ್‌ಸ್ಕ್ರಿಪ್ಶನ್ ಶುಲ್ಕ ಭಾರಿ ಏರಿಕೆ?

US Teacher
ವೈರಲ್ ನ್ಯೂಸ್43 mins ago

School Teacher: 14 ವರ್ಷದ ವಿದ್ಯಾರ್ಥಿಗೆ ತನ್ನ ಬೆತ್ತಲೆ ಫೋಟೊ ಕಳುಹಿಸಿದ ಶಿಕ್ಷಕಿ; ಈಗ ಜೈಲಿನ ಅತಿಥಿ

Mohammed Shami
ಕ್ರೀಡೆ52 mins ago

Mohammed Shami : ರೋಹಿತ್​ ಶರ್ಮಾಗೆ ನನ್ನ ಬೌಲಿಂಗ್​ ಎಂದರೆ ಭಯ; ಮೊಹಮ್ಮದ್ ಶಮಿ

Heavy rain in Chandragutti village and other places of Soraba taluk
ಶಿವಮೊಗ್ಗ54 mins ago

Karnataka Rain: ಸೊರಬ ತಾಲೂಕಿನ ವಿವಿಧೆಡೆ ಮಳೆ ಆರ್ಭಟ; ವರದಾ ನದಿ ತೀರದ ವ್ಯಾಪ್ತಿಯ ಕೃಷಿ ಭೂಮಿ ಜಲಾವೃತ

Sexual Abuse
Latest57 mins ago

Sexual Abuse: ವಿದ್ಯಾರ್ಥಿನಿಯನ್ನು ಅಪಹರಿಸಿ 12 ದಿನ ಅತ್ಯಾಚಾರ ಎಸಗಿ ಪೊಲೀಸ್‌ ಠಾಣೆ ಮುಂದೆಯೇ ಬಿಟ್ಟು ಹೋದರು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ9 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌