Rakshit Shetty: ಕಾಪಿ ರೈಟ್ಸ್ ಉಲ್ಲಂಘನೆ; ಜಾಮೀನು ಕೋರಿ ರಕ್ಷಿತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜು.24ಕ್ಕೆ ಮುಂದೂಡಿಕೆ - Vistara News

ಕರ್ನಾಟಕ

Rakshit Shetty: ಕಾಪಿ ರೈಟ್ಸ್ ಉಲ್ಲಂಘನೆ; ಜಾಮೀನು ಕೋರಿ ರಕ್ಷಿತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜು.24ಕ್ಕೆ ಮುಂದೂಡಿಕೆ

Rakshit Shetty: ಪರಂವ್ಹ ಸ್ಟೂಡಿಯೋಸ್ ನಿರ್ಮಿಸಿರುವ ಬ್ಯಾಚುಲರ್ಸ್ ಪಾರ್ಟಿ ಸಿನಿಮಾಗಾಗಿ ಅನಧಿಕೃತವಾಗಿ ಹಾಡು ಬಳಕೆ ಆರೋಪ ನಟ ರಕ್ಷಿತ್‌ ಶೆಟ್ಟಿ ವಿರುದ್ಧ ಕೇಳಿಬಂದಿದೆ. ಹೀಗಾಗಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

VISTARANEWS.COM


on

Rakshit Shetty
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಪಿ ರೈಟ್ಸ್ ಉಲ್ಲಂಘನೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನಟ ರಕ್ಷಿತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜುಲೈ 24ಕ್ಕೆ ಸೆಷನ್ಸ್ ಕೋರ್ಟ್‌ ಮುಂದೂಡಿದೆ. ಪ್ರಕರಣದಲ್ಲಿ ಬಂಧನ ಭೀತಿ ಎದುರಾದ ಹಿನ್ನೆಲೆಯಲ್ಲಿ ನಟ ರಕ್ಷಿತ್ ಶೆಟ್ಟಿ (Rakshit Shetty) ಅವರು ನಿರೀಕ್ಷಿತ ಜಾಮೀನಿಗಾಗಿ ಕೋರ್ಟ್‌ ಮೊರೆ ಹೋಗಿದ್ದಾರೆ.

ಪರಂವ್ಹ ಸ್ಟೂಡಿಯೋಸ್ ನಿರ್ಮಿಸಿರುವ ಬ್ಯಾಚುಲರ್ಸ್ ಪಾರ್ಟಿ ಸಿನಿಮಾಗಾಗಿ ಅನಧಿಕೃತವಾಗಿ ಹಾಡು ಬಳಕೆ ಆರೋಪ ನಟ ರಕ್ಷಿತ್‌ ಶೆಟ್ಟಿ ವಿರುದ್ಧ ಕೇಳಿಬಂದಿದೆ. ನ್ಯಾಯ ಎಲ್ಲಿದೆ ಚಿತ್ರದ ʼನ್ಯಾಯ ಎಲ್ಲಿದೆʼ ಹಾಡು ಹಾಗೂ ಗಾಳಿ ಮಾತು ಚಿತ್ರದ ʼಒಮ್ಮೆ ನಿನ್ನನ್ನುʼ ಹಾಡಿನ ಕಾಪಿ ರೈಟ್ಸ್ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಯ ನವೀನ್ ಕುಮಾರ್ ದೂರು ನೀಡಿದ್ದರು. ಹೀಗಾಗಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ನಿರೀಕ್ಷಣಾ ಜಾಮೀನು ಕೋರಿ ರಕ್ಷಿತ್‌ ಶೆಟ್ಟಿ, ಬೆಂಗಳೂರಿನ‌ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಕ್ಷಿತ್ ಶೆಟ್ಟಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಪಬ್ಲಿಕ್ ಪ್ರಾಸಿಕ್ಯೂಟರ್ ಕಾಲಾವಕಾಶ ಕೋರಿದ್ದು, ವಿಚಾರಣೆಯನ್ನು ಜುಲೈ 24ಕ್ಕೆ ಸೆಷನ್ಸ್ ಕೋರ್ಟ್‌ ಮುಂದೂಡಿದೆ.

ಇದನ್ನೂ ಓದಿ | Rakshit Shetty: ಬ್ಯಾಚಲರ್‌ ಪಾರ್ಟಿ ‌’ಕಿರಿಕ್’; ಕೇಸ್‌ ಬೆನ್ನಲ್ಲೇ ಕಾನೂನು ಹೋರಾಟ ಎಂದ ರಕ್ಷಿತ್‌ ಶೆಟ್ಟಿ; ಇಲ್ಲಿದೆ ಪತ್ರ

ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಜನವರಿ 26 ರಂದು ರಿಲೀಸ್‌ ಆಗಿತ್ತು. ಕಾಮಿಡಿ ಜಾನರ್‌ನ ಈ ಸಿನಿಮಾದಲ್ಲಿ ನಟ ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತ್ ಕುಮಾ‌ರ್, ನಟಿ ಸಿರಿ ರವಿಕುಮಾರ್‌ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಕಿರಿಕ್ ಪಾರ್ಟಿ’ ಚಿತ್ರದ ಬರಹಗಾರ ಅಭಿಜಿತ್ ಮಹೇಶ್ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದರು. ಕಿರಿಕ್‌ ಪಾರ್ಟಿಯ ಬರಹಗಾರರಲ್ಲಿ ಅಭಿಜಿತ್ ಮಹೇಶ್ ಕೂಡ ಒಬ್ಬರು. ಈ ಚಿತ್ರದ ಮೂಲಕ ಅವರು ಸ್ವತಂತ್ರ ನಿರ್ದೇಶಕರಾಗಿ ಬೆಳ್ಳಿ ಪರದೆಗೆ ಕಾಲಿಟ್ಟಿದ್ದರು. ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ಹಾಗೂ ಅಮಿತ್ ಗುಪ್ತ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದು, ಅರವಿಂದ್ ಛಾಯಾಗ್ರಹಣ, ಅರ್ಜುನ್ ರಾಮು ಸಂಗೀತ ನಿರ್ದೇಶನ ಈ ಚಿತ್ರಕ್ಕಿತ್ತು.

ಏನಿದು ಪ್ರಕರಣ?

ಈ ಹಿಂದೆ ‘ಸಿಂಪಲ್ ಸ್ಟಾರ್ರಕ್ಷಿತ್ ಶೆಟ್ಟಿ ಅಭಿನಯದ ರಿಷಬ್ ಶೆಟ್ಟಿ (Rakshit Shetty)ನಿರ್ದೇಶನದ ‘ಕಿರಿಕ್ ಪಾರ್ಟಿ’ 2016ರಲ್ಲಿ ತೆರೆಗೆ ಬಂದಿತ್ತು. ‘ಕಿರಿಕ್ ಪಾರ್ಟಿ’ ಸಿನಿಮಾ ‘ಕಾಪಿರೈಟ್’ ವಿಚಾರವಾಗಿ ವಿವಾದಕ್ಕೂ ಗ್ರಾಸವಾಗಿತ್ತು. ಇದೀಗ ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದ ಸರದಿ.

ʻನ್ಯಾಯ ಎಲ್ಲಿದೆʼ ಟೈಟಲ್ ಸಾಂಗ್ ಹಾಗೂ ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ” ಹಾಡುಗಳನ್ನು ಕದ್ದಿದ್ದಾರೆ ಎನ್ನುವ ಆರೋಪ ನಟ ರಕ್ಷಿತ್‌ ಶೆಟ್ಟಿ ವಿರುದ್ಧ ಕೇಳಿ ಬಂದಿದೆ. ಈ ಹಿಂದೆ ನವೀನ್ ಕುಮಾರ್ ಎಂಬುವವರ ಜತೆ ಹಾಡುಗಳ ಬಗ್ಗೆ ಮಾತುಕತೆ ನಡೆದಿತ್ತು. ನವೀನ್ ಕುಮಾರ್ ಹಾಡುಗಳ ಕಾಪಿರೈಟ್ ಪಡೆದು ಮಾರಾಟ ಮಾಡುವ ಬ್ಯುಸಿನೆಸ್ ಮೆನ್ ಆಗಿದ್ದರು. ಇವರ ಜೊತೆ ಹಾಡಿಗೆ ಸಂಬಂಧಿಸಿದ ಮಾತುಕತೆ ನಡೆದಿತ್ತು. ಆದರೆ ನಾನಾ ಕಾರಣಕ್ಕೆ ಈ ಡೀಲ್ ಮುರಿದು ಬಿದ್ದಿತ್ತು. ಆದರೂ ಆ ಹಾಡನ್ನು ಮಾಲೀಕರ ಅನುಮತಿ ಇಲ್ಲದೆ ಬಳಕೆ ಆಗಿತ್ತು. ಚಿತ್ರದಲ್ಲಿ ಎರಡೂ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿದ್ದಾರೆಂದು ನವೀನ್‌ರಿಂದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಇದನ್ನೂ ಓದಿ | Rakshit Shetty: ರಕ್ಷಿತ್‌ ಶೆಟ್ಟಿಗೆ ತಪ್ಪದ ಸಂಕಷ್ಟ; ಮತ್ತೊಂದು ದೂರು ದಾಖಲು!

ಈ ಮುಂಚೆ ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಬಳಕೆಯಾದ ಒಂದು ಹಾಡಿನ ವಿರುದ್ಧ ಲಹರಿ ಮ್ಯೂಸಿಕ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿತ್ತು. ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಕಾಪಿರೈಟ್ ನಿಯಮ ಉಲ್ಲಂಘಿಸಿ ತಮ್ಮ ಸಂಸ್ಥೆಯ ಹಾಡುಗಳನ್ನು ಅಕ್ರಮವಾಗಿ ಬಳಕೆ ಮಾಡಿಕೊಳ್ಳಲಾಗಿದೆ, ಅನುಮತಿ ಇಲ್ಲದೆ ಹಾಡು ಬಳಸಲಾಗಿದೆ ಎಂದು ಆರೋಪಿಸಿ ಲಹರಿ ಸಂಸ್ಥೆ ಕೇಸ್ ಹಾಕಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

IT Employees: ಕರ್ನಾಟಕದ ಐಟಿ ಉದ್ಯೋಗಿಗಳೇ, ದಿನಕ್ಕೆ 14 ಗಂಟೆ ಕೆಲಸ ಮಾಡಲು ಸಜ್ಜಾಗಿ; ರಾಜ್ಯ ಸರ್ಕಾರದ ನಿರ್ಧಾರ ಹೀಗಿದೆ

IT Employees: ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಐಟಿ, ಐಟಿ ಆಧಾರಿತ ಸೇವೆಗಳ ಉದ್ಯೋಗಿಗಳ ಒಕ್ಕೂಟವು (KITU) ವಿರೋಧ ವ್ಯಕ್ತಪಡಿಸಿದೆ. ಕೆಐಟಿಯು ಸದಸ್ಯರು ಈಗಾಗಲೇ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರನ್ನು ಭೇಟಿಯಾಗಿ, ಸರ್ಕಾರದ ಪ್ರಸ್ತಾಪದ ಕುರಿತು ಆತಂಕ ವ್ಯಕ್ತಪಡಿಸಿದೆ.

VISTARANEWS.COM


on

IT Employees
Koo

ಬೆಂಗಳೂರು: “ಈಗಿನ ಯುವಕರು ವಾರದಲ್ಲಿ 70 ಗಂಟೆ ಕೆಲಸ ಮಾಡಬೇಕು” ಎಂಬುದಾಗಿ ಇನ್ಫೋಸಿಸ್‌ ಸಂಸ್ಥಾಪಕ ಎನ್‌.ಆರ್. ನಾರಾಯಣ ಮೂರ್ತಿ (N R Narayana Murthy) ಅವರು ನೀಡಿದ ಹೇಳಿಕೆಯು ಕೆಲ ತಿಂಗಳ ಹಿಂದೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಪರ-ವಿರೋಧ, ಸಕಾರಾತ್ಮಕ-ನಕಾರಾತ್ಮಕ ಅಂಶಗಳ ಕುರಿತು ಚರ್ಚೆಗಳು ನಡೆದಿದ್ದವು. ಇದರ ಮಧ್ಯೆಯೇ, ಕರ್ನಾಟಕ ಸರ್ಕಾರವು‌ (Karnataka Government) ಐಟಿ ಉದ್ಯೋಗಿಗಳ (IT Employees Working Hours) ಕೆಲಸ ಅವಧಿಯನ್ನು 12 ತಾಸಿಗಿಂತ ಹೆಚ್ಚು ಅಥವಾ 14 ತಾಸುಗಳಿಗೆ ವಿಸ್ತರಿಸುವ ಕುರಿತು ತಿದ್ದುಪಡಿ ತರಲು ಚಿಂತನೆ ನಡೆಸಿದೆ.

ಹೌದು, ರಾಜ್ಯ ಸರ್ಕಾರವು ಕರ್ನಾಟಕ ಶಾಪ್ಸ್‌ ಆ್ಯಂಡ್‌ ಎಶ್ಟಾಬ್ಲಿಶ್‌ಮೆಂಟ್‌ ಆ್ಯಕ್ಟ್‌ಗೆ (Karnataka Shops and Commercial Establishment Act) ತಿದ್ದುಪಡಿ ತಂದು, ರಾಜ್ಯದಲ್ಲಿ ಐಟಿ, ಐಟಿ ಆಧಾರಿತ ಸೇವೆಗಳು ಹಾಗೂ ಬಿಪಿಒಗಳ ಕೆಲಸದ ಅವಧಿಯನ್ನು 12ರಿಂದ 14 ತಾಸುಗಳಿಗೆ ಹೆಚ್ಚಿಸುವ ಪ್ರಸ್ತಾಪವನ್ನು ಹೊಂದಿದೆ. ಶೀಘ್ರದಲ್ಲೇ ಅಧಿವೇಶನದಲ್ಲಿ ಈ ಕುರಿತು ವಿಧೇಯಕ ಮಂಡಿಸಿ, ಕಾಯ್ದೆಗೆ ತಿದ್ದುಪಡಿ ತರುವ ಉದ್ದೇಶವಿದೆ ಎಂದು ಮೂಲಗಳು ತಿಳಿಸಿವೆ. ಐಟಿ ಕ್ಷೇತ್ರದ ಉತ್ತೇಜನಕ್ಕಾಗಿ ರಾಜ್ಯ ಸರ್ಕಾರ ಇಂತಹ ಪ್ರಸ್ತಾಪ ಹೊಂದಿದೆ ಎಂದೇ ಹೇಳಲಾಗುತ್ತಿದೆ. ಆದರೆ, ಇದು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಸಂಘಟನೆಯಿಂದ ತೀವ್ರ ವಿರೋಧ

ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಐಟಿ, ಐಟಿ ಆಧಾರಿತ ಸೇವೆಗಳ ಉದ್ಯೋಗಿಗಳ ಒಕ್ಕೂಟವು (KITU) ವಿರೋಧ ವ್ಯಕ್ತಪಡಿಸಿದೆ. ಕೆಐಟಿಯು ಸದಸ್ಯರು ಈಗಾಗಲೇ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರನ್ನು ಭೇಟಿಯಾಗಿ, ತೀರ್ಮಾನದ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. “ರಾಜ್ಯದಲ್ಲಿ ಈಗಾಗಲೇ ದಿನಕ್ಕೆ ಐಟಿ ಉದ್ಯೋಗಿಗಳು 10 ಗಂಟೆ ಕೆಲಸ ಮಾಡುತ್ತಾರೆ. ನಿಯಮಗಳೂ ಇದೇ ರೀತಿ ಇವೆ. ಇದನ್ನು 14 ಗಂಟೆಗೆ ಏರಿಕೆ ಮಾಡಿದರೆ ಸುಮಾರು 20 ಲಕ್ಷ ಉದ್ಯೋಗಿಗಳ ಜೀವನದ ಮೇಲೆ ಪರಿಣಾಮ ಬೀರಲಿದೆ” ಎಂಬುದಾಗಿ ಸಂಘಟನೆ ಸದಸ್ಯರು ಸಚಿವರಿಗೆ ಮನವರಿಕೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲೂ ಈ ಕುರಿತು ವಿರೋಧ ವ್ಯಕ್ತವಾಗುತ್ತಿದೆ. ಐಟಿ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಈಗಾಗಲೇ ಒತ್ತಡ, ಬಿಪಿ, ಶುಗರ್‌ ಸೇರಿ ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈಗ 14 ಗಂಟೆಗೆ ನೌಕರರ ಕೆಲಸದ ಅವಧಿಯನ್ನು ಹೆಚ್ಚಿಸಿದರೆ ನೌಕರರು ಹಣಕ್ಕಿಂತ ಹೆಚ್ಚು ಕಾಯಿಲೆಗಳನ್ನು ಗಳಿಸುತ್ತಾರೆ ಎಂಬುದಾಗಿ ಜನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Working hours | ಏಷ್ಯಾದಲ್ಲಿ ವಾರದ ಕೆಲಸದ ಸರಾಸರಿ ಅವಧಿ ಸುದೀರ್ಘ : ವರದಿ

Continue Reading

ಶಿವಮೊಗ್ಗ

Shivamogga News: ಬ್ಯಾಂಕುಗಳಲ್ಲಿ ಕನ್ನಡಿಗರ ಸಂಖ್ಯೆ ಗಣನೀಯವಾಗಿ ಕ್ಷೀಣ: ಎಂ.ಎನ್. ನಾಗರಾಜ್ ಆತಂಕ

Shivamogga News: ಬ್ಯಾಂಕಿಂಗ್ ಉದ್ಯೋಗಿಗಳ ಕನ್ನಡ ಕೂಟ ಶಿವಮೊಗ್ಗ ಘಟಕದಿಂದ ಕರ್ನಾಟಕದ ಉದ್ಯೋಗಗಳು ಕನ್ನಡರಿಗೆ ಸಿಗಲಿ ಎಂಬ ಹೋರಾಟದ ಭಾಗವಾಗಿ ಬ್ಯಾಂಕಿಂಗ್ ಪರೀಕ್ಷೆ ಕುರಿತು ಶಿವಮೊಗ್ಗದಲ್ಲಿ ಕರ್ನಾಟಕದ ಅಭ್ಯರ್ಥಿಗಳಿಗೆ ಒಂದು ದಿನದ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬ್ಯಾಂಕಿಂಗ್ ಪರೀಕ್ಷೆ ತರಬೇತುದಾರ ಆರ್.ಕೆ. ಬಾಲಚಂದ್ರ ಹಾಗೂ ಇಂಗ್ಲೀಷ್ ಉಪನ್ಯಾಸಕ ಶಿವಕುಮಾರ ಮಾವಲಿ ಪಾಲ್ಗೊಂಡಿದ್ದರು.

VISTARANEWS.COM


on

One Day Information Programme on Banking Examination at Shivamogga
Koo

ಶಿವಮೊಗ್ಗ: ಬ್ಯಾಂಕುಗಳಲ್ಲಿ ಕನ್ನಡಿಗರ ಸಂಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಕರ್ನಾಟಕದ ಅಭ್ಯರ್ಥಿಗಳು ಈಗಲಾದರೂ ಜಾಗೃತರಾಗಿ ಸಂಪೂರ್ಣ ಸಿದ್ಧತೆ ನಡೆಸಿಕೊಂಡು ಪರೀಕ್ಷೆ ಎದುರಿಸಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಎನ್. ನಾಗರಾಜ್ (Shivamogga News) ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬ್ಯಾಂಕಿಂಗ್ ಪರೀಕ್ಷೆ ತರಬೇತುದಾರ ಆರ್.ಕೆ. ಬಾಲಚಂದ್ರ ಹಾಗೂ ಇಂಗ್ಲೀಷ್ ಉಪನ್ಯಾಸಕ ಶಿವಕುಮಾರ ಮಾವಲಿ ಪಾಲ್ಗೊಂಡಿದ್ದರು. ರಾಜ್ಯದ ವಿವಿಧ ಭಾಗಗಳಿಂದ 150ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿದ್ದರು.

ಬ್ಯಾಂಕಿಂಗ್ ಉದ್ಯೋಗಿಗಳ ಕನ್ನಡ ಕೂಟ ಶಿವಮೊಗ್ಗ ಘಟಕವು ಕರ್ನಾಟಕದ ಉದ್ಯೋಗಗಳು ಕನ್ನಡರಿಗೆ ಸಿಗಲಿ ಎಂಬ ಹೋರಾಟದ ಭಾಗವಾಗಿ ಬ್ಯಾಂಕಿಂಗ್ ಪರೀಕ್ಷೆ ಕುರಿತು ಕರ್ನಾಟಕದ ಅಭ್ಯರ್ಥಿಗಳಿಗೆ ನಗರದಲ್ಲಿ ಏರ್ಪಡಿಸಿದ್ದ ಒಂದು ದಿನದ ಮಾಹಿತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿ ವಿಷಯವನ್ನು ಹೇಗೆ ಓದಬೇಕು ಎನ್ನುವುದನ್ನು ಉದಾಹರಣೆ ಸಹಿತ ನಾಗರಾಜ್ ವಿವರಿಸಿದರು.

ನಂತರ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಮಮತ ಮಾತನಾಡಿ, ಹೆಣ್ಣುಮಕ್ಕಳು ಈ ಅವಕಾಶವನ್ನು ಹೆಚ್ಚು ಬಳಸಿಕೊಳ್ಳಿ. ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಯಾವುದು ಕೂಡ ಕಷ್ಟವಲ್ಲ. ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯ ಎಂದು ತಿಳಿಸಿದರು.

ಇದನ್ನೂ ಓದಿ: Lakshmi Hebbalkar: ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲು 250 ಅಂಗನವಾಡಿ ಆಯ್ಕೆ; ಜು.22ಕ್ಕೆ ಚಾಲನೆ

ಬ್ಯಾಂಕಿಂಗ್ ಉದ್ಯೋಗಿಗಳ ಕನ್ನಡ ಕೂಟದ ಅಧ್ಯಕ್ಷ ರಾಜೇಂದ್ರ ಪೈ ಮಾತನಾಡಿ. ಈ ಮಾಹಿತಿ ಕಾರ್ಯಕ್ರಮವೂ ಸೇರಿದಂತೆ ಬ್ಯಾಂಕಿಂಗ್ ಉದ್ಯೋಗಿಗಳ ಕನ್ನಡ ಕೂಟ ಈವರೆಗೂ ಒಟ್ಟು 7000 ವಿದ್ಯಾರ್ಥಿಗಳಿಗೆ ಕಾರ್ಯಕ್ರಮ ನೀಡಿದಂತೆ ಆಗುತ್ತಿದೆ. ಇದು ಕೂಟದ ಇತಿಹಾಸದಲ್ಲಿ ಪ್ರಮುಖ ಹೆಜ್ಜೆ. ಇನ್ನು ಮುಂದೆ ಬಹಳಷ್ಟು ಸಮಾಜಮುಖಿ ಕೆಲಸಗಳು ಕೂಟದಿಂದ ಆಗುವುದಿದೆ. ಇಂತಹ ಕಾರ್ಯಕ್ರಮಗಳು ಆಗಲು ಪ್ರಮುಖ ಕಾರಣ ಕರ್ನಾಟಕದ ಎಲ್ಲೆಡೆ ಇರುವ ಬ್ಯಾಂಕಿಂಗ್ ಕನ್ನಡ ಕೂಟದ ಸದಸ್ಯರು ಎಂದು ತಮ್ಮ ಕೂಟದ ಸದಸ್ಯರ ಸಹಾಯ ಸಹಕಾರವನ್ನು ಸ್ಮರಿಸಿದರು.‌ ವಿಶ್ವನಾಥ್ ವಂದಿಸಿದರು.

ಇದನ್ನೂ ಓದಿ: Karnataka Rain: ಸೊರಬ ತಾಲೂಕಿನ ವಿವಿಧೆಡೆ ಮಳೆ ಆರ್ಭಟ; ವರದಾ ನದಿ ತೀರದ ವ್ಯಾಪ್ತಿಯ ಕೃಷಿ ಭೂಮಿ ಜಲಾವೃತ

Continue Reading

ಕ್ರೀಡೆ

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ

Paris Olympics 2024 : ಈ ಒಂಬತ್ತು ಮಂದಿಗೆ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ನಿಂದ ಪ್ರತ್ಯೇಕ ನೆರವು ದೊರೆಯಲಿದೆ ಎಂದು ತಿಳಿಸಿರುವ ಡಾ.ಕೆ.ಗೋವಿಂದರಾಜು ಅವರು ಕ್ರೀಡಾಪಟುಗಳಿಗೆ ಸರ್ಕಾರದ ನೆರವು ದೊರಕಿಸಿಕೊಟ್ಟು ಪ್ರೋತ್ಸಾಹಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​​ ನಲ್ಲಿ 2024ರಲ್ಲಿ (Paris Olympics 2024) ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಿಂಪಿಕ್​ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಪ್ರೋತ್ಸಾಹದನ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಣ ಮಂಜೂರು ಮಾಡಿದ್ದಾರೆ.

ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕುಮಾರಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್ ನಲ್ಲಿ ಕುಮಾರಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಕುಮಾರಿ ಧಿನಿಧಿ ದೇಸಿಂಘು , ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್ ನಲ್ಲಿ ಕುಮಾರಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್ ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

ಇದನ್ನೂ ಓದಿ: Paris Olympic 2024 : ಒಲಿಂಪಿಕ್ ಪದಕ ಗೆದ್ದ ಭಾರತದ ಮೊದಲ ಮಹಿಳಾ ಅಥ್ಲೀಟ್​ ಕರ್ಣಂ ಮಲ್ಲೇಶ್ವರಿ ಸಾಧನೆಯ ವಿವರ ಇಲ್ಲಿದೆ

ಈ ಒಂಬತ್ತು ಮಂದಿಗೆ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ನಿಂದ ಪ್ರತ್ಯೇಕ ನೆರವು ದೊರೆಯಲಿದೆ ಎಂದು ತಿಳಿಸಿರುವ ಡಾ.ಕೆ.ಗೋವಿಂದರಾಜು ಅವರು ಕ್ರೀಡಾಪಟುಗಳಿಗೆ ಸರ್ಕಾರದ ನೆರವು ದೊರಕಿಸಿಕೊಟ್ಟು ಪ್ರೋತ್ಸಾಹಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಟ್ರ್ಯಾಕ್‌ & ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದರೆ ಅಥ್ಲೀಟ್​ಗಳಿಗೆ ಸಿಗಲಿದೆ ಭಾರೀ ಮೊತ್ತದ ನಗದು ಬಹುಮಾನ

ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ವಿಶೇಷವೆಂದರೆ ಇದೇ ಮೊದಲ ಬಾರಿಗೆ ಒಲಿಂಪಿಕ್ ಕೂಟದಲ್ಲಿ ನಗದು ಪ್ರಶಸ್ತಿ ನೀಡಲಾಗುತ್ತಿದೆ. ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡಲು ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ತೀರ್ಮಾನಿಸಿದೆ.

ಟೋಕಿಯೊ ಒಲಿಂಪಿಕ್​ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್​ ಚೋಪ್ರಾ ಅವರು ಈ ಬಾರಿ ಚೆನ್ನ ಗೆದ್ದರೆ ಅವರಿಗೆ 50,000 ಅಮೆರಿಕನ್‌ ಡಾಲರ್‌ ಬಹುಮಾನ ದೊರೆಯಲಿದೆ. ನೀರಜ್​ ಅವರು ಟ್ರ್ಯಾಕ್‌ ಮತ್ತು ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆ ಹೊಂದಿದ್ದು ಈ ಬಾರಿಯೂ ಅವರು ಚಿನ್ನದ ಪದಕ ಗೆಲ್ಲುವ ಆತ್ಮವಿಶ್ವಾಸದಲ್ಲಿದ್ದಾರೆ.

ಈ ಬಾರಿ ಚಿನ್ನ ಗೆದ್ದ ಅಥ್ಲೀಟ್​ಗಳಿಗೆ ಮಾತ್ರ ನಗುದು ಬಹುಮಾನ ದೊರಕಲಿದೆ. 2028ರಲ್ಲಿ ಲಾಸ್‌ ಏಂಜಲಿಸ್​ನಲ್ಲಿ ನಡೆಯುವ ಒಲಿಂಪಿಕ್ ಕೂಟದಲ್ಲಿ ಮೊದಲ ಮೂರು ಸ್ಥಾನ ಪಡೆಯುವ ಎಲ್ಲರಿಗೂ ನಗದು ಪ್ರಶಸ್ತಿ ನೀಡುವುದಾಗಿವಿಶ್ವ ಅಥ್ಲೆಟಿಕ್ ಸಂಸ್ಥೆ ಘೋಷಿಸಿದೆ. ಡೈಮಂಡ್ ಲೀಗ್, ಕಾಂಟಿನೆಂಟಲ್ ಕಪ್‌ಗಳಲ್ಲಿ ಪದಕ ಗೆದ್ದಾಗ ನಗದು ಬಹುಮಾನ ನೀಡಲಾಗುತ್ತಿತ್ತು. ಆದರೆ ಒಲಿಂಪಿಕ್ಸ್​ ಬಹುಮಾನದಲ್ಲಿ ಈ ಸೌಕರ್ಯ ಇರಲಿಲ್ಲ. ಇದೀಗ ಒಲಿಂಪಿಕ್ಸ್​ನಲ್ಲಿಯೂ ಈ ನಿಯಮ ಬಂದಿರುವುದು ಸಂತಸ ತಂದಿದೆ ಎಂದು ಡಬ್ಲ್ಯುಎ ಅಧ್ಯಕ್ಷ ಸೆಬಾಸ್ಟಿಯನ್ ಕೊ ಹೇಳಿದ್ದಾರೆ.

Continue Reading

ಕರ್ನಾಟಕ

Pralhad joshi: ಕಾಂಗ್ರೆಸಿಗರಿಗೆ ರಾಮನ ಹೆಸರೆಂದರೆ ಅಲರ್ಜಿ; ಪ್ರಲ್ಹಾದ್‌ ಜೋಶಿ ವಾಗ್ದಾಳಿ

Pralhad joshi: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ತನ್ನ ಹಗರಣಗಳನ್ನು ಮುಚ್ಚಿಹಾಕಿಕೊಳ್ಳಲು ಬೆದರಿಕೆ ತಂತ್ರ ಅನುಸರಿಸುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿನ ಸಚಿವರ ಒಂದೊಂದೇ ಹಗರಣಗಳು ಬಯಲಿಗೆ ಬರುತ್ತಲೇ, ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಬೆದರಿಕೆ ತಂತ್ರ ಹೆಣೆಯುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

VISTARANEWS.COM


on

Union Minister Pralhad Joshi slams the state Congress government
Koo

ಚಿತ್ರದುರ್ಗ: ಕಾಂಗ್ರೆಸ್ಸಿಗೆ ರಾಮನ ಹೆಸರೆಂದರೆ ಅಲರ್ಜಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad joshi) ವಾಗ್ದಾಳಿ ಮಾಡಿದರು.

ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಶನಿವಾರ ಆಯೋಜಿಸಿದ್ದ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ದೀಕ್ಷಾ ರಜತ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ರಾಮನಗರ ಜಿಲ್ಲೆ ಮರುನಾಮಕಾರಣ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಕಾಂಗ್ರೆಸ್‌ನವರಿಗೆ ರಾಮನ ಹೆಸರು ಕೇಳಿದರೆ ಅಲರ್ಜಿ ಆಗಲಿದೆ ಎಂದ ಅವರು, ರಾಮನ ವಿಷಯ ಬಂದಾಗ ಈ ರೀತಿಯ ಕೆಲಸಗಳಿಗೆ ಕೈ ಹಾಕುತ್ತಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.

ಕಾಂಗ್ರೆಸ್ ಸರ್ಕಾರದ ಬೆದರಿಕೆ ತಂತ್ರ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ತನ್ನ ಹಗರಣಗಳನ್ನು ಮುಚ್ಚಿಹಾಕಿಕೊಳ್ಳಲು ಬೆದರಿಕೆ ತಂತ್ರ ಅನುಸರಿಸುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿನ ಸಚಿವರ ಒಂದೊಂದೇ ಹಗರಣಗಳು ಬಯಲಿಗೆ ಬರುತ್ತಲೇ, ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಬೆದರಿಕೆ ತಂತ್ರ ಹೆಣೆಯುತ್ತಿದ್ದಾರೆ ಎಂದರು.

ಇದನ್ನೂ ಓದಿ: Chenab Bridge: ಐಫೆಲ್ ಟವರ್‌ಗಿಂತ ಎತ್ತರದ ಚೆನಾಬ್ ಸೇತುವೆ ಆಗಸ್ಟ್ 15ರಂದು ಉದ್ಘಾಟನೆಗೆ ಸಜ್ಜು!

ಹಿಂದಿನ ಸರ್ಕಾರದ ಹಗರಣಗಳ ತನಿಖೆ ಮಾಡುತ್ತೇವೆ ಎಂದು ಬೆದರಿಸುವ ಕೆಲಸ ಮಾಡಲಾಗುತ್ತಿದೆ. ಹಾಗಾದರೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ವರ್ಷವಾದರೂ ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ಈವರೆಗೆ ಏಕೆ ತನಿಖೆ ಕೈಗೊಂಡಿಲ್ಲ? ಎಂದು ಜೋಶಿ ಪ್ರಶ್ನಿಸಿದರು.

ಎಫ್‌ಐಆರ್ ಹಾಕಿಲ್ಲವೇಕೆ?

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಇದುವರೆಗೂ ನಾಗೇಂದ್ರ ಮತ್ತು ದದ್ದಲ್ ಮೇಲೆ ಎಫ್‌ಐಆರ್ ಹಾಕಿಲ್ಲವೇಕೆ? ಯಾವ ಕಾರಣಕ್ಕೆ ಬಿಟ್ಟಿದ್ದೀರಿ ಎಂಬುದನ್ನು ಮೊದಲು ಬಹಿರಂಗಪಡಿಸಿ ಎಂದು ಸಚಿವ ಪ್ರಲ್ಹಾದ್‌ ಜೋಶಿ ಸವಾಲು ಹಾಕಿದರು.

ಸಚಿವರ ಮೌಖಿಕ ಆದೇಶದ ಮೇರೆಗೆ ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಮಾಡಲಾಗಿದೆ ಎಂದು ಚಂದ್ರಶೇಖರ ಡೆತ್ ನೋಟ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಹಾಗಿದ್ದರು ಭ್ರಷ್ಟಾಚಾರಿಗಳ ರಕ್ಷಣೆಗೆ ನಿಂತಂತಿದೆ ಈ ಸರ್ಕಾರ ಎಂದು ಆರೋಪಿಸಿದ ಅವರು, ವಾಲ್ಮೀಕಿ ನಿಗಮದ ಹಣವನ್ನು ಬಳ್ಳಾರಿ ಮತ್ತು ತೆಲಂಗಾಣದ ಚುನಾವಣೆಗೆ ಖರ್ಚು ಮಾಡಲಾಗಿದೆ ಎಂದು ಪ್ರಲ್ಹಾದ್‌ ಜೋಶಿ ದೂರಿದರು.

ಇದನ್ನೂ ಓದಿ: HD Kumaraswamy: ಪರಿಹಾರ ಕಾರ್ಯದಲ್ಲಿ ರಾಜಕಾರಣ ಮಾಡಬಾರದು; ಕುಮಾರಸ್ವಾಮಿ ಸಲಹೆ

ಸಿಬಿಐಗೆ ವಹಿಸಲಿ

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರ ಪಾತ್ರ ವಹಿಸಿದ್ದಾರೆ. ಹಾಗಾಗಿ ಈ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ಸಚಿವರು ಒತ್ತಾಯಿಸಿದರು.

ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರ ಸಮಾಜಮುಖಿ ಹಾಗೂ ಸಂಘಟನಾತ್ಮಕ ಕಾರ್ಯವೈಖರಿ ಭೋವಿ ಜನಾಂಗದ ಅಭಿವೃದ್ಧಿಗೆ ಸದಾ ಪೂರಕವಾಗಿವೆ ಎಂದು ಹೇಳಿದರು.

ಭೋವಿ ಗುರುಪೀಠ ಮಾನವೀಯ ಗುಣ ಹೊಂದಿರುವಂತ, ಅಕ್ಷರವಂಚಿತ ಸಮಾಜಕ್ಕೆ ಜ್ಞಾನದ ಧಾರೆಯೆರೆಯುವ ಮಹತ್ಕಾರ್ಯ ಮಾಡುತ್ತಾ ಬಂದಿದೆ ಎಂದು ಸಚಿವರು ಬಣ್ಣಿಸಿದರು.

ಶ್ರೀ ಬಾಲಿಕೆ ಅಪ್ಪಗಳು, ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸಮಾರಂಭದ ಸಾನ್ನಿಧ್ಯ ವಹಿಸಿದ್ದರು. ವಾಲ್ಮೀಕಿ ಸ್ವಾಮೀಜಿ, ಹರಿಹರ ಪಂಚಮಸಾಲಿ ಸ್ವಾಮೀಜಿ, ಗುಳ್ಳೇದಗುಡ್ಡದ ಸ್ವಾಮೀಜಿ ಉಪಸ್ಥಿತರಿದ್ದರು.

ಇದನ್ನೂ ಓದಿ: Health Tips Kannada: ಮಳೆಗಾಲದಲ್ಲಿ ಹಾಗಲಕಾಯಿ ತಿಂದರೆ ಪ್ರಯೋಜನಗಳು ಎಷ್ಟೊಂದು!

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಸಂಸದ ಮಲ್ಲೇಶ ಬಾಬು, ಮಾಜಿ ಸಚಿವ ಅರವಿಂದ ಲಿಂಬಾವಳಿ, ಶಿವರಾಜ ತಂಗಡಗಿ, ಮಾನಪ್ಪ ವಜ್ಜಲ, ಚಂದ್ರಪ್ಪ, ಹಾಗೂ ಪ್ರಮುಖರು ಪಾಲ್ಗೊಂಡಿದ್ದರು.

Continue Reading
Advertisement
IT Employees
ಕರ್ನಾಟಕ45 mins ago

IT Employees: ಕರ್ನಾಟಕದ ಐಟಿ ಉದ್ಯೋಗಿಗಳೇ, ದಿನಕ್ಕೆ 14 ಗಂಟೆ ಕೆಲಸ ಮಾಡಲು ಸಜ್ಜಾಗಿ; ರಾಜ್ಯ ಸರ್ಕಾರದ ನಿರ್ಧಾರ ಹೀಗಿದೆ

Manolo Marquez
ಕ್ರೀಡೆ1 hour ago

Manolo Marquez : ಮೊನೊಲೊ ಮಾರ್ಕ್ವೆಜ್​ ಭಾರತ ಫುಟ್ಬಾಲ್ ತಂಡದ ನೂತನ ಕೋಚ್​

Fire Accident
ವಿದೇಶ2 hours ago

Fire Accident: ಕುವೈತ್‌ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ದುರಂತ; ಕೇರಳದ ಒಂದೇ ಕುಟುಂಬದ ನಾಲ್ವರ ಸಾವು

Samsung Launches Galaxy Watch 7 Galaxy Watch Ultra Buds 3 Series
ವಾಣಿಜ್ಯ3 hours ago

Samsung Galaxy: ಸ್ಯಾಮ್‌ಸಂಗ್‌ನಿಂದ ಗ್ಯಾಲಕ್ಸಿ ವಾಚ್7, ಗ್ಯಾಲಕ್ಸಿ ವಾಚ್ ಅಲ್ಟ್ರಾ, ಬಡ್ಸ್ 3 ಸರಣಿ ಬಿಡುಗಡೆ

Smriti Mandhana
ಕ್ರೀಡೆ3 hours ago

Smriti Mandhana : ಶ್ರೀಲಂಕಾದ ಅಂಗವಿಕಲ ಕ್ರಿಕೆಟ್​ ಅಭಿಮಾನಿಗೆ ಮೊಬೈಲ್ ಕೊಟ್ಟ ಸ್ಮೃತಿ ಮಂದಾನಾ

One Day Information Programme on Banking Examination at Shivamogga
ಶಿವಮೊಗ್ಗ3 hours ago

Shivamogga News: ಬ್ಯಾಂಕುಗಳಲ್ಲಿ ಕನ್ನಡಿಗರ ಸಂಖ್ಯೆ ಗಣನೀಯವಾಗಿ ಕ್ಷೀಣ: ಎಂ.ಎನ್. ನಾಗರಾಜ್ ಆತಂಕ

Paris Olympics 2024
ಕ್ರೀಡೆ3 hours ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ

Union Minister Pralhad Joshi slams the state Congress government
ಕರ್ನಾಟಕ3 hours ago

Pralhad joshi: ಕಾಂಗ್ರೆಸಿಗರಿಗೆ ರಾಮನ ಹೆಸರೆಂದರೆ ಅಲರ್ಜಿ; ಪ್ರಲ್ಹಾದ್‌ ಜೋಶಿ ವಾಗ್ದಾಳಿ

Talent is not the property of any caste community says CM Siddaramaiah
ಕರ್ನಾಟಕ4 hours ago

CM Siddaramaiah: ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ: ಸಿಎಂ ಸಿದ್ದರಾಮಯ್ಯ

250 Anganwadis selected to start pre primary school says Minister Lakshmi Hebbalkar
ಕರ್ನಾಟಕ4 hours ago

Lakshmi Hebbalkar: ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲು 250 ಅಂಗನವಾಡಿ ಆಯ್ಕೆ; ಜು.22ಕ್ಕೆ ಚಾಲನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ11 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ13 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌