Road Accident: ಕಾರು-ಬಸ್‌ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು - Vistara News

ಕ್ರೈಂ

Road Accident: ಕಾರು-ಬಸ್‌ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು

Road Accident: ಕಾರು ಚಾಲಕನ ಓವರ್‌ ಸ್ಪೀಡ್‌ ಇಬ್ಬರ ಪ್ರಾಣ ಕಸಿದಿದೆ. ಎರ್ಟಿಗಾ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಊಟಿ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಗುಂಡ್ಲುಪೇಟೆ ಎಪಿಎಂಸಿ ಮಾರ್ಕೆಟ್ ಬಳಿ ಈ ಅವಘಡ ಸಂಭವಿಸಿದ್ದು, ವೇಗವಾಗಿ ಬಂದ ಎರ್ಟಿಗಾ ಕಾರು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಸದ್ಯ ಮೃತರ ಗುರುತು ಪತ್ತೆಯಾಗಿಲ್ಲ.

VISTARANEWS.COM


on

Road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ಕಾರು ಚಾಲಕನ ಓವರ್‌ ಸ್ಪೀಡ್‌ ಇಬ್ಬರ ಪ್ರಾಣ ಕಸಿದಿದೆ. ಎರ್ಟಿಗಾ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಊಟಿ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ (Road Accident).

ಗುಂಡ್ಲುಪೇಟೆ ಎಪಿಎಂಸಿ ಮಾರ್ಕೆಟ್ ಬಳಿ ಈ ಅವಘಡ ಸಂಭವಿಸಿದ್ದು, ವೇಗವಾಗಿ ಬಂದ ಎರ್ಟಿಗಾ ಕಾರು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಮೃತರ ಗುರುತು ಪತ್ತೆಯಾಗಿಲ್ಲ.

ಬೆಳಗಾವಿಯಲ್ಲಿ ಬೈಕ್‌ ಮುಖಾಮುಖಿ ಡಿಕ್ಕಿ, ಸವಾರರಿಬ್ಬರು ಸಾವು

ಬೆಳಗಾವಿ: ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ‌ಇಬ್ಬರು ಸವಾರರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಬಳಿ ಘಟನೆ ನಡೆದಿದೆ. ಬಸವರಾಜ ಪ್ರಭುನವರ್(48), ಯಲ್ಲಪ್ಪ ಕೊರವಿನಕೊಪ್ಪ( 46) ಮೃತ ದುರ್ದೈವಿಗಳು. ಮತ್ತಿಬ್ಬರು ಬೈಕ್ ಸವಾರಿಗೆ ಗಂಭೀರ ‌ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಗಲಕೋಟೆಯಲ್ಲಿ ಟ್ರಕ್ – ಬೊಲೆರೊ ಮುಖಾಮುಖಿ ಡಿಕ್ಕಿ

ಬಾಗಲಕೋಟೆ: ಟ್ರಕ್ ಹಾಗೂ ಬೊಲೆರೊ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬೊಲೆರೋ ವಾಹನದ ಮುಂಭಾಗ ನಜ್ಜು ಗುಜ್ಜಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ‌ ತಾಲೂಕಿನ ಬೆಳಗಲಿ ಪಟ್ಟಣದ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಬೊಲೆರೋ ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಗಾಯಾಳನ್ನು ಮುಧೋಳ ತಾಲ್ಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಮುಧೋಳ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ

ವಿಜಯಪುರ: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದಲ್ಲದೇ ಕುಡುಕನೊಬ್ಬ ಮಹಿಳೆಯರಿಗೆ ಗುದ್ದಿದ್ದಾನೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ನಗರದ ಟಿಪ್ಪು ನಗರದಲ್ಲಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಇಬ್ಬರು ಮಹಿಳೆಯರಿಗೆ ಗುದ್ದಿ ಮುಂದೆ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ.

ರಿಯಾಜ್ ದುಮ್ಮಾದ್ರಿ ಎಂಬಾತ ಕುಡಿದು ವಾಹನ ಚಲಾಯಿಸಿದವನು. ಕಾರು ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿನ್ನೆ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಐಶ್ವರ್ಯ ರಾಮಚಂದ್ರ ಗೊಲ್ಲರ್ (16), ಯಲ್ಲವ್ವ ಪರಶುರಾಮ ಗೊಲ್ಲರ್ (50) ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ವಿಜಯಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮೀರಜ್‌ಗೆ ಕರದೊಯ್ಯಲಾಗಿದೆ. ಸದ್ಯ ದೇವರ ಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಹಾಗೂ ಕಾರನ್ನು ದೇವರ ಹಿಪ್ಪರಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ವಿವಾರಣೆ ನಡೆಯುತ್ತಿದೆ.

ಇದನ್ನೂ ಓದಿ: Vinod Dondale: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕಲಬುರಗಿ

Kalaburagi News : ಕಾಮಗಾರಿ ವೇಳೆ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

Kalaburagi News : ಕಲಬುರಗಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಕಬ್ಬಿಣದ ರಾಡ್‌ ಕಳಚಿ ಬಿದ್ದ ಪರಿಣಾಮ ಕಾರ್ಮಿಕನೊರ್ವ ಮೇಲಿಂದ ಬಿದ್ದು ಮೃತಪಟ್ಟಿದ್ದಾರೆ.

VISTARANEWS.COM


on

By

kalaburagi News
Koo

ಕಲಬುರಗಿ: ಕಲಬುರಗಿಯಲ್ಲಿ (Kalaburagi News) ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಮಾಡುವಾಗ ಮೇಲಿಂದ ಕಬ್ಬಿಣದ ರಾಡು ಕಳಚಿ ಬಿದ್ದಿದ್ದು, ಕಾರ್ಮಿಕನೊರ್ವ ಸ್ಥಳದಲ್ಲೇ ಮೃತಪಟ್ಟಿದಾರೆ. ಜಾರ್ಖಂಡ ಮೂಲದ ರಾಜಕುಮಾರ (26) ಮೃತ ದುರ್ದೈವಿ.

ಶ್ರೀ‌ ಸಿಮೆಂಟ್‌ ಕಾರ್ಖಾನೆಯಲ್ಲಿ ಮರಣ ಮೃದಂಗ ಮುಂದುವರಿದಿದ್ದು, ಎರಡೇ ತಿಂಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಸರಿಯಾದ ಸುರಕ್ಷತಾ ಕ್ರಮ ಕೈಗೊಳ್ಳದ ಪರಿಣಾಮ ಜಾರ್ಖಂಡ ಮೂಲದ ರಾಜಕುಮಾರ ಬಲಿಯಾಗಿದ್ದಾರೆ. ಕೆಲ‌ ದಿನಗಳ ಹಿಂದಷ್ಟೆ ಬೆನಕನಹಳ್ಳಿ ನಿವಾಸಿ ಇಂದ್ರಕುಮಾರ ಎಂಬಾತ ಮೃತಪಟ್ಟಿದ್ದ. ಈಗ ಮತ್ತೋರ್ವನನ್ನು ಶ್ರೀಸಿಮೆಂಟ್ ಕಾರ್ಖಾನೆ ಬಲಿ ಪಡೆದಿದೆ.

ಸರಣಿ ಸಾವುಗಳಾಗುತ್ತಿದ್ದರೂ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗು ಸ್ಥಳೀಯ ಶಾಸಕ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿರುಗಿ ನೋಡಿಲ್ಲ. ಮುಡಾ ಹಗರಣದಲ್ಲೇ ಬ್ಯುಸಿಯಾಗಿರುವ ಸಚಿವರಿಗೆ ಕ್ಷೇತ್ರದ ಪರಿವೇ ಇಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಮೃತಪಟ್ಟವರ ಪೈಕಿ ಇಬ್ಬರು ಸೇಡಂನವರೇ ಆಗಿದ್ದರೂ, ಸಚಿವರು ಕಾರ್ಖಾನೆಗೂ ಭೇಟಿ ನೀಡಿಲ್ಲ. ಮೃತರಿಗೂ ಸಾಂತ್ವನ ಹೇಳಲು‌ ಸಹ ಮುಂದಾಗಿಲ್ಲ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಸೇಡಂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Assault Case : ಬೈಕ್ ಗುದ್ದಿದ್ದನ್ನು ಪ್ರಶ್ನಿಸಿದಕ್ಕೆ ಡ್ರ್ಯಾಗರ್‌ನಿಂದ ಅಟ್ಯಾಕ್ ಮಾಡಿದ ಪುಡಿರೌಡಿಗಳು

ಮನೆ ಕುಸಿದು ಬಿದ್ದು ನಾಲ್ವರಿಗೆ ಗಾಯ

ಶಿವಮೊಗ್ಗ: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದೆ. ಜತೆಗೆ ಅಲ್ಲಲ್ಲಿ ಅವಾಂತರವೂ ಸೃಷ್ಟಿಯಾಗಿದೆ. ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಿವಮೊಗ್ಗದ ಶಿಕಾರಿಪುರದಲ್ಲಿ ಮನೆ ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ (Karnataka Rain).

ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಮಳೆಯಿಂದಾಗಿ ಶಿವಮೂರ್ತಿ ಎಂಬುವರಿಗೆ ಸೇರಿದ ಮನೆ ಕುಸಿದು ಬಿದ್ದು ನಾಲ್ಕು ಮಂದಿಗೆಗೆ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೂರ್ತಿ, ಪತ್ನಿ ಸೇರಿ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬಿ.ವೈ.ರಾಘವೇಂದ್ರ ಆರೋಗ್ಯ ವಿಚಾರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Divya Vasantha: ನನ್ನ ಮಗಳ ಬಗ್ಗೆ ಕೆಟ್ಟದ್ದಾಗಿ ಮಾತನಾಡಿರುವುದು ದರ್ಶನ್‌ ಫ್ಯಾನ್ಸ್‌ ಎಂದು ಕಣ್ಣೀರಿಟ್ಟ ದಿವ್ಯಾ ವಸಂತ ಅಮ್ಮ!

Divya Vasantha: ಇನ್ನು ಸೋಶಿಯಲ್ ಮೀಡಿಯಾದಲ್ಲಿ ದಿವ್ಯಾ ವಸಂತಳನ್ನು ಬಹಳ ಟ್ರೋಲ್ ಮಾಡಲಾಗುತ್ತಿದೆ.ಇಂದಿರಾನಗರದ ಟ್ರೀ ಸ್ಪಾ & ಬ್ಯೂಟಿ ಮಾಲೀಕ ಸೇರಿದಂತೆ ಹಲವರನ್ನು ಬೆದರಿಸಿ ಸುಲಿಗೆ ಮಾಡಿರುವ ಗ್ಯಾಂಗ್‌ನಲ್ಲಿ ದಿವ್ಯಾ ಹೆಸರು ಕೇಳಿಬಂದಿತ್ತು. ಇದೀಗ ತಮ್ಮ ಮಗಳನ್ನು ಟ್ರೋಲ್ ಮಾಡುತ್ತಿರುವ ಬಗ್ಗೆ ವಸಂತಮ್ಮ ಬೇಸರಗೊಂಡಿದ್ದಾರೆ.

VISTARANEWS.COM


on

Divya Vasanthamother requests darshan fans not get troll her daughter
Koo

ಬೆಂಗಳೂರು: ಬೆದರಿಕೆ ಹಾಗೂ ಸುಲಿಗೆ ಯತ್ನ ಪ್ರಕರಣದಲ್ಲಿ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತ (Divya Vasantha) ಜು.11 ಅರೆಸ್ಟ್‌ ಆಗಿದ್ದಾರೆ. ಸದ್ಯ ಹೆಚ್ಚಿನ ತನಿಖೆ ಮುಂದುವರಿದಿದ್ದಾರೆ. ಇನ್ನು ಸೋಶಿಯಲ್ ಮೀಡಿಯಾದಲ್ಲಿ ದಿವ್ಯಾ ವಸಂತಳನ್ನು ಬಹಳ ಟ್ರೋಲ್ ಮಾಡಲಾಗುತ್ತಿದೆ.ಇಂದಿರಾನಗರದ ಟ್ರೀ ಸ್ಪಾ & ಬ್ಯೂಟಿ ಮಾಲೀಕ ಸೇರಿದಂತೆ ಹಲವರನ್ನು ಬೆದರಿಸಿ ಸುಲಿಗೆ ಮಾಡಿರುವ ಗ್ಯಾಂಗ್‌ನಲ್ಲಿ ದಿವ್ಯಾ ಹೆಸರು ಕೇಳಿಬಂದಿತ್ತು. ಇದೀಗ ತಮ್ಮ ಮಗಳನ್ನು ಟ್ರೋಲ್ ಮಾಡುತ್ತಿರುವ ಬಗ್ಗೆ ವಸಂತಮ್ಮ ಬೇಸರಗೊಂಡಿದ್ದಾರೆ.

ವಿಡಿಯೊದಲ್ಲಿ ವಸಂತಮ್ಮ ಮಾತನಾಡಿ ʻʻನನ್ನ ಮಗಳ ಬಗ್ಗೆ ಕೆಟ್ಟದ್ದಾಗಿ ಮಾತನಾಡಿದ್ದೀರಾ. ಮಾತನಾಡಿದವರೆಲ್ಲ ದರ್ಶನ್‌ ಫ್ಯಾನ್ಸ್‌ ಅಂತ ಚೆನ್ನಾಗಿ ಗೊತ್ತು. ಆದರೆ ಅವಳು ತಪ್ಪು ಮಾಡಿದ್ದಾಳೋ ಇಲ್ಲವೋ ಎನ್ನುವುದು ಬಂದ ಮೇಲೆ ಗೊತ್ತಾಗತ್ತೆ. ಅವಳ ಕೆಲಸ ಮಾಡಿದ್ದಾಳೆ. ನಮಗೂ ದರ್ಶನ್‌ ಇಷ್ಟ. ನಮ್ಮ ಮಕ್ಕಳಿಗೂ ಇಷ್ಟ. ಆಕೆಗೆ ಏನು ಕೆಲಸ ಕೊಟ್ಟಿದ್ದಾರೆ. ಅದು ಮಾಡಿದ್ದಾಳೆ, ಅವಳೇ ಬಂದು ಅದಕ್ಕೆ ಉತ್ತರ ಕೊಡುತ್ತಾಳೆ. ಅಲ್ಲಿಯವರೆಗೆ ಕೆಟ್ಟದಾಗಿ ಏನೂ ವೈರಲ್ ಮಾಡಬೇಡಿ. ನಿಮ್ಮ ಸಪೋರ್ಟ್‌ ಇರಬೇಕು. ಅವಳು ಏನು ತಪ್ಪು ಮಾಡಿದ್ದಾಳೋ ಇಲ್ವೋ ದೇವರು ನೋಡ್ಕೋತ್ತಾನೆ. ಟಿವಿಯಲ್ಲಿ ಕೆಲಸ ಮಾಡುತ್ತಿದ್ದಳು. ಅವರು ಏನು ಕೆಲಸ ಕೊಡುತ್ತಿದ್ದರೂ ಅದನ್ನಷ್ಟೇ ಮಾಡ್ತಾ ಇದ್ದಳು.ನಿಮ್ಮ ಮನೆ ಹೆಣ್ಣುಮಗಳೆಂದು ತಿಳ್ಕೊಳಿ.ನೀವು ಅಂದುಕೊಂಡಂತೆ ನನ್ನ ಮಗಳು ಕೆಟ್ಟವಳಲ್ಲ. ಅವಳು ದರ್ಶನ್ ಅಭಿಮಾನಿ. ಅವಳು ಕೆಟ್ಟವಳಲ್ಲ, ಇಷ್ಟು ದಿನ ದಿವ್ಯಾಳನ್ನು ಹೇಗೆ ಬೆಳೆಸಿದ್ದೀರೋ ದಿವ್ಯಾನ, ಅದೇ ಬೆಳೆಸಿ, ಬೆಂಬಲಿಸಿ ಎಂದು ಕೇಳಿಕೊಳ್ಳುತ್ತೇನೆʼʼಎಂದು ಕಣ್ಣೀರಿಟ್ಟಿದ್ದಾರೆ.

ಇದನ್ನೂ ಓದಿ: Divya Vasantha: ಗೌರ್ಮೆಂಟ್ ಸ್ಕೂಲ್‌ನಲ್ಲಿ ಓದಿ, ಸೇಲ್ಸ್ ಗರ್ಲ್‌ ಆಗಿದ್ದ ದಿವ್ಯಾ ವಸಂತ ಬಳಿ ಇದೆ ಈ ದುಬಾರಿ ಕಾರು!

ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದಿವ್ಯಾ ಅವರನ್ನು ಕೊನೆಗೂ ಬಂದನ ಮಾಡಿದ್ದಾರೆ ಪೊಲೀಸರು. ತಮಿಳುನಾಡಿನಿಂದ ಕೇರಳದಲ್ಲಿ ತಲೆ ಮರೆಸಿಕೊಂಡಿದ್ದರು ದಿವ್ಯಾ. ಕೇರಳದಿಂದ ಬಂಧಿಸಿ ಪೊಲೀಸರು ಕರೆತಂದಿದ್ದಾರೆ. ಸದ್ಯ ಇದೀಗ ಕೇಸ್‌ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಜೆ. ಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ‘ಸ್ಪಾ’ವೊಂದರ ವ್ಯವಸ್ಥಾಪಕನನ್ನು ಬೆದರಿಸಿ ಹಣ ಸುಲಿಗೆ ಯತ್ನಿಸಿದ ಪ್ರಕರಣದಲ್ಲಿ ಈ ಮುಂಚೆ ಪೊಲೀಸರು ಮೂವರನ್ನು ಬಂಧಿಸಿದ್ದರು. ರಾಜ್‌ನ್ಯೂಸ್ ಸುದ್ದಿವಾಹಿನಿ ಸಿಇಓ ಎನ್ನಲಾಗುತ್ತಿದ್ದ ವೆಂಕಟೇಶ್ ಹಾಗೂ ದಿವ್ಯಾ ವಸಂತ ಸಹೋದರ ಸಂದೇಶ್ ಬಂಧನವಾಗಿದ್ದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಮೊಬೈಲ್ ಜಪ್ತಿ ಮಾಡಿಕೊಳ್ಳಲಾಗಿತ್ತು. ವೆಂಕಟೇಶ್ ಹಾಗೂ ದಿವ್ಯಾ ಸೇರಿ ‘ಸ್ಪೈ ರೀಸರ್ಚ್ ಟೀಂ’ ಹೆಸರಿನ ವಾಟ್ಸಪ್‌ ಗ್ರೂಪ್ ಮಾಡಿಕೊಂಡು ದುಷ್ಕೃತ್ಯಗಳನ್ನು ನಡೆಸುತ್ತಿದ್ದರು ಎಂದು ವರದಿಯಾಗಿತ್ತು.

ಶ್ರೀಮಂತರು, ಮಸಾಜ್ ಪಾರ್ಲರ್‌ಗಳು ಹಾಗೂ ವೈದ್ಯರೇ ಈ ಗ್ಯಾಂಗ್‌ನ ಟಾರ್ಗೆಟ್ ಆಗಿದ್ದರು. ಹನಿಟ್ರ್ಯಾಪ್ ರೀತಿ ಹಣವುಳ್ಳವರನ್ನು ಬಲೆಗೆ ಬೀಳಿಸಿ ಸುಲಿಗೆ ಮಾಡುತ್ತಿದ್ದರು ಎಂದು ಪೊಲೀಸರ ತನಿಖೆ ವೇಳೆ ಗೊತ್ತಾಗಿತ್ತು.ಪ್ರಕರಣ ಸಂಬಂಧ ಲಗ್ಗೆರೆಯಲ್ಲಿರುವ ದಿವ್ಯಾ ವಸಂತ ಮನೆ ಮೇಲೆ ದಾಳಿ ನಡೆಸಿ ಕ್ಯಾಮೆರಾ, ಲ್ಯಾಪ್‌ಟಾಪ್ ಸೇರಿ ಕೆಲ ವಸ್ತುಗಳನ್ನು ವಶಪಡಿಸಿಕೊಂಡಿದ್ದರು ಪೊಲೀಸರು.

Continue Reading

ಬೆಂಗಳೂರು ಗ್ರಾಮಾಂತರ

Assault Case : ಬೈಕ್ ಗುದ್ದಿದ್ದನ್ನು ಪ್ರಶ್ನಿಸಿದಕ್ಕೆ ಡ್ರ್ಯಾಗರ್‌ನಿಂದ ಅಟ್ಯಾಕ್ ಮಾಡಿದ ಪುಡಿರೌಡಿಗಳು

Assault case : ಅತಿವೇಗವಾಗಿ ಬಂದಿದ್ದಲ್ಲದೇ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಇದನ್ನೂ ಪ್ರಶ್ನಿಸಿದ್ದಕ್ಕೆ ಸವಾರನಿಗೆ ಡ್ರ್ಯಾಗರ್‌ನಿಂದ ಅಟ್ಯಾಕ್‌ ಮಾಡಿದ್ದು, ಇದಕ್ಕೆ ಪ್ರತಿರೋಧ ತೋರುತ್ತಿದ್ದಂತೆ ಪೆಪ್ಪರ್ ಸ್ಪ್ರೇ ಹೊಡೆದು ಎಸ್ಕೇಪ್‌ ಆಗಿದ್ದಾರೆ.

VISTARANEWS.COM


on

By

assault Case
Koo

ಆನೇಕಲ್: ಬೆಂಗಳೂರು ಗ್ರಾಮಾಂತರದ ಆನೇಕಲ್‌ನಲ್ಲಿ ಪುಡಿ ರೌಡಿಗಳ (Assault Case) ಅಟ್ಟಹಾಸ ಹೆಚ್ಚಾಗುತ್ತಿದೆ. ಬೈಕ್ ಗುದ್ದಿದ್ದನ್ನು ಪ್ರಶ್ನಿಸಿದಕ್ಕೆ ಡ್ರ್ಯಾಗರ್‌ನಿಂದ ಡೆಡ್ಲಿ ಅಟ್ಯಾಕ್ ನಡೆಸಿದ್ದಾರೆ. ಆನೇಕಲ್ ಬಸ್ ನಿಲ್ದಾಣದ ಮುಂಭಾಗವೇ ಈ ಘಟನೆ ನಡೆದಿದೆ.

ಶನಿವಾರ ರಾತ್ರಿ ಆನೇಕಲ್ ಬಸ್ ನಿಲ್ದಾಣದ ಮುಂಭಾಗ ಆನೇಕಲ್ ಟೌನ್ ನಿವಾಸಿ ಮೋಹನ್ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಮೋಹನ್‌ ಬೈಕ್‌ನಲ್ಲಿ ಬರುವಾಗ ಅತಿ ವೇಗವಾಗಿ ಬೈಕ್‌ನಲ್ಲಿ ಬಂದ ಪುಡಿರೌಡಿಗಳು ಗುದ್ದಿದ್ದಾರೆ. ಇದನ್ನು ಪ್ರಶ್ನಿಸಿದ ಮೋಹನ್ ಮೇಲೆ ಏಕಾಏಕಿ ಅಟ್ಯಾಕ್ ಮಾಡಿದ್ದಾರೆ.

ತಮ್ಮ ಬಳಿಯಿದ್ದ ಡ್ರ್ಯಾಗರ್ ತೆಗೆದು ಮೋಹನ್‌ಗೆ ಬೀಸಿದ್ದಾರೆ. ಈ ವೇಳೆ ಅಲ್ಲಿದ್ದ ಜನರು ಪುಡಿರೌಡಿಗಳನ್ನು ಹಿಡಿದುಕೊಳ್ಳಲು ಮುಂದಾಗಿದ್ದಾರೆ. ಆಗ ಮೋಹನ್ ಸೇರಿದಂತೆ ಅಲ್ಲಿದ್ದ ಜನರ ಕಣ್ಣಿಗೆ ಪೆಪ್ಪರ್ ಸ್ಪ್ರೇ ಹೊಡೆದು, ಡ್ರ್ಯಾಗರ್‌ನಿಂದ ಸಿಕ್ಕಸಿಕ್ಕವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇದೇ ವೇಳೆ ಓರ್ವ ಪುಡಿ ರೌಡಿಯನ್ನು ಹಿಡಿದುಕೊಂಡಿದ್ದಾರೆ. ಮತ್ತೋರ್ವ ಅಲ್ಲಿಂದ ಪರಾರಿ ಆಗಿದ್ದಾನೆ. ಇದೆಲ್ಲವೂ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸದ್ಯ ಗಾಯಗೊಂಡ ಮೋಹನ್‌ಗೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆನೇಕಲ್ ಭಾಗದಲ್ಲಿ ಕ್ಷುಲ್ಲಕ ಕಾರಣಗಳಿಗೆ ಕೊಲೆ, ಕೊಲೆ ಯತ್ನ ಪ್ರಕರಣಗಳು ನಡೆಯುತ್ತಿದೆ . ಸದ್ಯ ಆನೇಕಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಮುಂದುವರಿದ ಸಾವು-ನೋವು; ಮನೆ ಗೋಡೆ ಕುಸಿದು ವ್ಯಕ್ತಿ ಸಾವು

ಗುರಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಂದೇ ಬಿಟ್ಟರು

ಬೆಂಗಳೂರು: ಗುರಾಯಿಸಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಯುವಕನನ್ನು ಕೊಲೆ ಮಾಡಿರುವ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಯ್ಸಳ ನಗರದ ಮನೋಜ್ (22) ಕೊಲೆಯಾದ ವ್ಯಕ್ತಿ. ಶನಿವಾರ ಮುಂಜಾನೆ 3 ಗಂಟೆಗೆ ಹೊಯ್ಸಳ ನಗರ ಮೂರನೇ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಪ್ರಕರಣ ಸಂಬಂಧ ಸದ್ಯ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ (Crime News).

ಘಟನೆ ವಿವರ

ಮನೋಜ್ ಮತ್ತು ಆತನ ಸ್ನೇಹಿತ ಆಂಟೋನಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ವ್ಯಕ್ತಿ ಮನೋಜ್‌ನನ್ನು ಗುರಾಯಿಸಿದ್ದಾನೆ. ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ. ಪರಿಸ್ಥಿತಿ ಕೈ ಮೀರಿ ಆರೋಪಿಗಳು ಮನೋಜ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಆರೋಪಿಗಳು ಚಾಕುವಿನಿಂದ ಮನೋಜ್ ಮತ್ತು ಆಂಟೋನಿಗೆ ಚುಚ್ಚಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮನೋಜ್‌ನನ್ನು ಕೂಡಲೇ ಸ್ನೇಹಿತರು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಮನೋಜ್ ಮೃತಪಟ್ಟಿದ್ದಾನೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದಿರುವ ರಾಮಮೂರ್ತಿನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ʼʼಹೊಯ್ಸಳ ನಗರದ 13 ಕ್ರಾಸ್‌ನಲ್ಲಿ ಮನೋಜ್ ಮತ್ತು ಸ್ನೇಹಿತರೊಂದಿಗೆ ನಡೆದುಕೊಂಡು ಬರುತ್ತಿದ್ದಾಗ ಅದೇ ಏರಿಯಾದ ಹುಡುಗರೊಂದಿಗೆ ಜಗಳ ನಡೆದಿದೆ. ಈ ವೇಳೆ ಆರೋಪಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಮನೋಜ್ ಸಾವನ್ನಪ್ಪಿದರೆ ಸ್ನೇಹಿತ ಆಂಟೋನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆʼʼ ಎಂದು ಪೊಲೀಸರು ತಿಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿತ್ರದುರ್ಗ

Theft Case : ಅಡ್ಡಗಟ್ಟಿದ ಪೊಲೀಸ್‌ ಜೀಪ್‌ ಮೇಲೆ ಕಲ್ಲು ತೂರಿ ಆಂಧ್ರದ ಡೆಡ್ಲಿ ಕಳ್ಳರ ಗ್ಯಾಂಗ್‌ ಎಸ್ಕೇಪ್‌!

Theft Case : ಚಿತ್ರದುರ್ಗದಲ್ಲಿ ಅನುಮಾನಸ್ಪಾದವಾಗಿ ಓಡಾಡುತ್ತಿದ್ದ ಬೊಲೆರೋ ವಾಹನವನ್ನು ಅಡ್ಡಗಟ್ಟಲು ಮುಂದಾದ ಪೊಲೀಸ್‌ ಜೀಪ್‌ ಮೇಲೆ ಕಳ್ಳರು ಕಲ್ಲು ತೂರಿ ಎಸ್ಕೇಪ್‌ ಆಗಿದ್ದಾರೆ.

VISTARANEWS.COM


on

By

theft case
Koo

ಚಿತ್ರದುರ್ಗ: ಪೊಲೀಸರ ಮೇಲೆ ಕಳ್ಳರು (Theft Case) ಕಲ್ಲು ತೂರಿ ಆಂಧ್ರದ ಡೆಡ್ಲಿ ಕಳ್ಳರ ಗ್ಯಾಂಗ್‌ವೊಂದು ಎಸ್ಕೇಪ್‌ ಆಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಪೊಲೀಸ್‌ ಜೀಪ್ ಮೇಲೆ ಕಲ್ಲು ತೂರಿ ಕಳ್ಳರು ಕಾಲ್ಕಿತ್ತಿದ್ದಾರೆ. ಪೊಲೀಸರು ಏರ್ ಫೈರ್ ಮಾಡಿದರೂ ಜಗ್ಗದೆ ತಪ್ಪಿಸಿಕೊಂಡಿದ್ದಾರೆ.

ಚಳ್ಳಕೆರೆ ತಾಲ್ಲೂಕಿನ ಕುದಾಪುರ ಬಳಿ ಕಳ್ಳರನ್ನು ಹಿಡಿಯಲು ಪೊಲೀಸರು ಬೊಲೆರೋ ವಾಹನವನ್ನು ಅಡ್ಡ ಹಾಕಿದ್ದರು. ಈ ವೇಳೆ ಕಳ್ಳರು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಏಕಾಏಕಿ ಕಳ್ಳರು ದಾಳಿ ಮಾಡಿದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಏರ್ ಫೈರಿಂಗ್ ಮಾಡಿದ್ದಾರೆ.

ಇನ್ನೂ ಕಳ್ಳರು ಕಲ್ಲು ತೂರಿದ್ದರಿಂದ ಪೊಲೀಸರ ಜೀಪಿನ ಗ್ಲಾಸ್ ಡ್ಯಾಮೇಜ್ ಆಗಿದೆ. ಸುಮಾರು 7 ಮಂದಿ ಗ್ಯಾಂಗ್‌ ಆಂಧ್ರಪ್ರದೇಶದ ರಿಜಿಸ್ಟ್ರೇಷನ್‌ ಹೊಂದಿದ್ದ ಬೊಲೆರೋ ವಾಹನದಲ್ಲಿ ಬಂದಿದ್ದರು. ಇದನ್ನೂ ಗಮನಿಸಿದ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು, ತಡೆದು ಪರಿಶೀಲನೆಗೆ ಮುಂದಾಗಿದ್ದಾರೆ. ಈ ವೇಳೆ ಗಾಡಿ ನಿಲ್ಲಿಸದೇ ಖತರ್ನಾಕ್‌ ಕಳ್ಳರು, ಪೊಲೀಸರಿಗೆ ಕಲ್ಲು ತೂರಿದ್ದಾರೆ.

ದರೋಡೆಕೋರರು ಎಂಬ ಅನುಮಾನದಿಂದ ಪೊಲೀಸರು ಅಲರ್ಟ್ ಆಗಿದ್ದಾರೆ. ಬೊಸೇ ದೇವರಹಟ್ಟಿ, ಕೋಟೆ ನಗರ ಒಳ ಮಾರ್ಗದಲ್ಲಿ ಕುದಾಪುರ ಕಡೆ ಬರುತ್ತಿದ್ದ ಕಳ್ಳರಿಗೆ, ಪೊಲೀಸರು ಮನಮಯ್ಯನಹಟ್ಟಿ ಕುದಾಪುರ ಒಳ ಮಾರ್ಗದಲ್ಲಿ ಎದುರಾಗಿದ್ದರು. ನಾಯಕನಹಟ್ಟಿ ಠಾಣೆ ಪಿಎಸ್‌ಐ ಶಿವಕುಮಾರ್ ತಂಡ ಬುಲೇರೋ ವಾಹನದಲ್ಲಿ ಬಂದಿದ್ದ ಕಳ್ಳರನ್ನು ಹಿಡಿಯಲು ಯತ್ನಿಸಿದ್ದಾರೆ. ಆದರೆ ಹಿರೇಹಳ್ಳಿ, ಬೇಡರೆಡ್ಡಿಹಳ್ಳಿ, ಬುಕ್ಕಂಬೂದಿ ಮಾರ್ಗದಲ್ಲಿ ಕಳ್ಳರು ಎಸ್ಕೇಪ್ ಆಗಿದ್ದಾರೆ.

ಸ್ಥಳಕ್ಕೆ ಚಿತ್ರದುರ್ಗ ಎಸ್‌ಪಿ ಧರ್ಮೇಂದರ್ ಕುಮಾರ್ ಮೀನಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ನಡೆದ ಘಟನೆ ಕುರಿತು ಸ್ಟಲಿತರುಲ್ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಪೊಲೀಸರ ಮೇಲೆ ಕಳ್ಳರ ದಾಳಿ ಸುದ್ದಿ ತಿಳಿದು ಸ್ಥಳೀಯರು ಆತಂಕಗೊಂಡಿದ್ದಾರೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಮುಂದುವರಿದ ಸಾವು-ನೋವು; ಮನೆ ಗೋಡೆ ಕುಸಿದು ವ್ಯಕ್ತಿ ಸಾವು

ಕೊಪ್ಪಳದಲ್ಲಿ ಇಸ್ಪೀಟು ಅಡ್ಡೆ ಮೇಲೆ ದಾಳಿ

ಕೊಪ್ಪಳ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದ ಬಳಿ ಇಸ್ಪೀಟು ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. 42 ಬೈಕ್, 11 ಮೊಬೈಲ್ ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಹಣವನ್ನು ವಶಕ್ಕೆ ಪಡೆದಿದ್ದಾರೆ. ಕೊಪ್ಪಳ ಎಸ್‌ಪಿ ಸೂಚನೆ ಮೇರೆಗೆ ಸಿಪಿಐ ಮಹಾಂತೇಶ ಸಜ್ಜನ್, ಶಿವರಾಜ್ ಇಂಗಳಗಿ ನೇತೃತ್ವದ ತಂಡ ದಾಳಿ ನಡೆಸಿದೆ. ಇಸ್ಪೀಟ್ ಆಡುತ್ತಿದ್ದ 8 ಜನರನ್ನು ವಶಕ್ಕೆ ಪಡೆಯಲಾಗಿದೆ. ಹೊರರಾಜ್ಯ, ಹೊರ ಜಿಲ್ಲೆಯಿಂದ ಕರೆಸಿ ಲಕ್ಷಾಂತರ ಹಣ ಜೂಜೂ ಕಟ್ಟತ್ತಿದ್ದರು. ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯನಗರದಲ್ಲಿ ಹಣ ಕದ್ದ ಕಳ್ಳರ ಬಂಧನ

ವಿಜಯನಗರದ ಹೊಸಪೇಟೆ ಗ್ರಾಮೀಣ ಪೊಲೀಸರು ಕಾರ್ಯಾಚರಣೆ ನಡೆಸಿ, ಮೂವರು ಖತರ್ನಾಕ್‌ ಕಳ್ಳರನ್ನು ಬಂಧಿಸಿದ್ದಾರೆ. ಜಾವೇದ್ ನದಾಫ್ ಎಂಬುವವರು ಭಾರತ್ ಫೈನಾನ್ಸ್ ಪ್ರೈ.ಲಿ ಕೆಲಸ ಮಾಡುತ್ತಿದ್ದರು. ವಾರಕ್ಕೊಮ್ಮೆ ವಿವಿಧ ಏರಿಯಾಗಳಲ್ಲಿ ಹಣವನ್ನು ಕಟ್ಟಿಸಿಕೊಂಡು ಬರುತ್ತಿದ್ದರು. ಹೀಗೆ ಕಳೆದ ಜೂ.12ರಂದು ಸಂಕ್ಲಾಪುರ, ಕಾರಿಗನೂರು, ಕೆಎಂಎಂಐ ಕ್ಯಾಂಪ್‌ನಲ್ಲಿ ಹಣ ಕಟ್ಟಿಸಿಕೊಂಡು ಬರುವಾಗ, ಕಾರಿಗನೂರು ಮತ್ತು ಕೆಎಂಎಂಐ ಕ್ಯಾಂಪ್ ಮಾರ್ಗ ಮಧ್ಯೆ ಮೂವರು ಚೋರರು ಅಡ್ಡಗಟ್ಟಿದ್ದರು.

ಬಳಿಕ ಫೈನಾನ್ಷಿಯರ್ ಬಳಿಯಿದ್ದ 1,65,411 ರೂಪಾಯಿ ನಗದು ಹಣವನ್ನು ಕಳ್ಳತನ ಮಾಡಿದ್ದರು. ಹಣ ಕಳೆದುಕೊಂಡಿದ್ದ ಜಾವೇದ್ ನದಾಫ್ ಅದೇ ದಿನ ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ಕಾರ್ಯಚರಣೆಗೆ ಇಳಿದಿದ್ದ ಖಾಕಿ ಟೀಂ, ಕೇವಲ ಒಂದೇ ವಾರದಲ್ಲಿ ಕಳ್ಳರನ್ನು ಪತ್ತೆ ಹಚ್ಚಿ, 83,500 ನಗದು, ಒಂದು ವಶಕ್ಕೆ ಪಡೆದಿದ್ದಾರೆ. ಮೂವರು ಕಳ್ಳರನ್ನು ಜೈಲಿಗಟ್ಟಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆಯಲ್ಲೂ ಮನೆಗಳ್ಳರು ಅರೆಸ್ಟ್‌

ಮನೆ ಕಳ್ಳತನದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2.2 ಲಕ್ಷ ಮೌಲ್ಯದ ನಗದು, ಆಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾವಣಗೆರೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು, ಹರಿಹರ ತಾಲೂಕಿನ ಶಂಷಿಪುರ ಗ್ರಾಮದ ಪ್ರದೀಪ, (23) , ಬಸವರಾಜ @ ಬಸ್ಯ(24) ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ನಗದು,15 ಗ್ರಾಂ ತೂಕದ ಒಡವೆ, 110 ಗ್ರಾಂ ಬೆಳ್ಳಿಯ ಆಭರಣಗಳು ವಶಕ್ಕೆ ಪಡೆದಿದ್ದಾರೆ. ಹರಿಹರದ ವೃತ್ತ ನಿರೀಕ್ಷಕ ಸುರೇಶ್ ಸಗರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
PM Narendra Modi
ಬೆಂಗಳೂರು1 min ago

PM Narendra Modi: ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಸಹೋದರ ಭೇಟಿ

IPL 2025
ಕ್ರೀಡೆ14 mins ago

IPL 2025: ರಾಹುಲ್​ ಆರ್​ಸಿಬಿಗೆ, ಪಂತ್​ ಸಿಎಸ್​ಕೆ ಸೇರ್ಪಡೆ ಖಚಿತ

nipah virus
ದೇಶ40 mins ago

Nipah Virus: ಕೇರಳದಲ್ಲಿ ನಿಫಾ ವೈರಸ್‌ ತಗುಲಿದ್ದ ಬಾಲಕ ಸಾವು

HD Kumaraswamy
ಹಾಸನ52 mins ago

HD Kumaraswamy: ಸಮಯ ಬಂದಾಗ ಮಿಲಿಟರಿಯನ್ನೂ ಕರೆ ತರುತ್ತೇವೆ; ಡಿಕೆಶಿಗೆ ತಿರುಗೇಟು ಕೊಟ್ಟ ಎಚ್‌ಡಿಕೆ

Police viral video
ಕರ್ನಾಟಕ53 mins ago

Police viral video: ಫುಲ್ ಟೈಟ್ ಆಗಿ ಬೈಕ್ ಎತ್ತೋಕೆ ಪೊಲೀಸಪ್ಪ ಒದ್ದಾಟ! ವಿಡಿಯೊ ನೋಡಿ

kalaburagi News
ಕಲಬುರಗಿ59 mins ago

Kalaburagi News : ಕಾಮಗಾರಿ ವೇಳೆ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

Guru Purnima 2024
ಕ್ರೀಡೆ1 hour ago

Guru Purnima 2024: ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ‘ಗುರು’ಗಳಿವರು

Divya Vasanthamother requests darshan fans not get troll her daughter
ಸಿನಿಮಾ2 hours ago

Divya Vasantha: ನನ್ನ ಮಗಳ ಬಗ್ಗೆ ಕೆಟ್ಟದ್ದಾಗಿ ಮಾತನಾಡಿರುವುದು ದರ್ಶನ್‌ ಫ್ಯಾನ್ಸ್‌ ಎಂದು ಕಣ್ಣೀರಿಟ್ಟ ದಿವ್ಯಾ ವಸಂತ ಅಮ್ಮ!

Kedarnath Landslide
ದೇಶ2 hours ago

Kedarnath Landslide: ಕೇದಾರನಾಥದಲ್ಲಿ ಭೀಕರ ಭೂಕುಸಿತ; ಮೂವರು ಯಾತ್ರಿಕರು ದುರ್ಮರಣ

HD Kumaraswamy
ಹಾಸನ2 hours ago

HD Kumaraswamy: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌ಡಿಕೆ ಭೇಟಿ; ಮಳೆಯಿಂದ ಹಾನಿಯಾದ ಪ್ರದೇಶಗಳ ಪರಿಶೀಲನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌