HD Kumaraswamy: ಸಮಯ ಬಂದಾಗ ಮಿಲಿಟರಿಯನ್ನೂ ಕರೆ ತರುತ್ತೇವೆ; ಡಿಕೆಶಿಗೆ ತಿರುಗೇಟು ಕೊಟ್ಟ ಎಚ್‌ಡಿಕೆ - Vistara News

ಹಾಸನ

HD Kumaraswamy: ಸಮಯ ಬಂದಾಗ ಮಿಲಿಟರಿಯನ್ನೂ ಕರೆ ತರುತ್ತೇವೆ; ಡಿಕೆಶಿಗೆ ತಿರುಗೇಟು ಕೊಟ್ಟ ಎಚ್‌ಡಿಕೆ

HD Kumaraswamy: ʼʼನಾನು ಅಂಕೋಲಾಕ್ಕೆ ಭೇಟಿ ನೀಡಿದ ವಿಚಾರ ಮುಂದಿಟ್ಟುಕೊಂಡು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರು, ಕುಮಾರಸ್ವಾಮಿ ಇಲ್ಲಿ ಏಕೆ ಬರ್ತಾರೆ, ಮಿಲಿಟರಿ ಕರೆದುಕೊಂಡು ಬಂದಿದ್ದಾರಾ? ಎಂದು ಪ್ರಶ್ನಿಸಿದ್ದಾರೆ. ಅವರು ಏಕೆ ಆ ರೀತಿ ಹೇಳಿಕೆ ಕೊಟ್ಟರು ಅಂತ ಯೋಚನೆ ಮಾಡಿದೆ. ಈ ರಾಜ್ಯದಲ್ಲಿ ನಡೆಯುತ್ತಿರುವ ದರೋಡೆಯನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎಂದಿದ್ದಾರೆ. ಅದಕ್ಕೊಂದು ಕಾಲ ಬರುತ್ತೆ, ಆಗ ಕರೆದುಕೊಂಡು ಬರೋಣʼʼ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದರು.

VISTARANEWS.COM


on

HD Kumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ʼʼನಾನು ಅಂಕೋಲಾಕ್ಕೆ ಭೇಟಿ ನೀಡಿದ ವಿಚಾರ ಮುಂದಿಟ್ಟುಕೊಂಡು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರು, ಕುಮಾರಸ್ವಾಮಿ ಇಲ್ಲಿ ಏಕೆ ಬರ್ತಾರೆ, ಮಿಲಿಟರಿ ಕರೆದುಕೊಂಡು ಬಂದಿದ್ದಾರಾ? ಎಂದು ಪ್ರಶ್ನಿಸಿದ್ದಾರೆ. ಅವರು ಏಕೆ ಆ ರೀತಿ ಹೇಳಿಕೆ ಕೊಟ್ಟರು ಅಂತ ಯೋಚನೆ ಮಾಡಿದೆ. ಈ ರಾಜ್ಯದಲ್ಲಿ ನಡೆಯುತ್ತಿರುವ ದರೋಡೆಯನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎಂದಿದ್ದಾರೆ. ಅದಕ್ಕೊಂದು ಕಾಲ ಬರುತ್ತೆ, ಆಗ ಕರೆದುಕೊಂಡು ಬರೋಣʼʼ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ತಿರುಗೇಟು ನೀಡಿದರು.

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಗೆ ಹಾಸಕ್ಕೆ ಆಗಮಿಸಿದ ಅವರು ಕಾಂಗ್ರೆಸ್‌ ಮತ್ತು ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದರು. ಶನಿವಾರ ಅಂಕೋಲಾಕ್ಕೆ ಎಚ್.ಡಿ ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಡಿಕೆಶಿ, ʼʼಮಿಲಿಟರಿ ಕರೆದುಕೊಂಡು ಇಳಿದಿದ್ದರೆ ಎಚ್‌ಡಿಕೆ ಫೀಲ್ಡಿಗೆ ಬಂದಿದ್ದಾರೆ ಅಂತ ಹೇಳಬಹುದು. ಸುಮ್ಮನೇ ವಿಸಿಟ್ ಮಾಡಿ ಬಂದರೆ ಏನಾದ್ರೂ ಆಗುತ್ತಾ? ಒಂದೇ ಗಂಟೆಯಲ್ಲಿ ನಮ್ಮ ಕ್ಯಾಬಿನೆಟ್ ಸಚಿವರನ್ನು ಅಲ್ಲಿಗೆ‌ ಓಡಿಸಿದ್ದೇವೆ. ಮಂಕಾಳ್ ವೈದ್ಯ, ಕೃಷ್ಣಬೈರೇಗೌಡ ಅಲ್ಲಿಗೆ ಹೋಗಿದ್ದರು. ಏನೇನು ಮಾಡಬೇಕೊ ಅದನ್ನು ಮಾಡಿದ್ದಾರೆ, ಅಧಿಕಾರಿಗಳಿಗೆ ಸೂಚನೆ‌ ಕೊಟ್ಟಿದ್ದಾರೆ. ನಮ್ಮ ಸರ್ಕಾರ ಏನು ಮಾಡಬೇಕೋ ಅದನ್ನು ಮಾಡುತ್ತದೆ. ಈಗ ರಾಜಕಾರಣ ಬೇಡ, ಜನರನ್ನು ಉಳಿಸಿಕೊಳ್ಳುವ ಕೆಲಸ ಮಾಡೋಣʼʼ ಎಂದು ತಿಳಿಸಿದ್ದರು.

ಎಚ್‌ಡಿಕೆ ಹೇಳಿದ್ದೇನು?

ʼʼಡಿಕೆಶಿ ಪಾಪ ಕನಕಪುರದವರು. ಬ್ರ್ಯಾಂಡ್‌ ಬೆಂಗಳೂರು ಮಾಡುತ್ತೇನೆ ಎಂದು ಹೇಳುತ್ತಾರೆ. ಇನ್ನು ಕುಮಾರಸ್ವಾಮಿ 39 ಸೀಟ್ ಗೆದ್ದರೂ ಮುಖ್ಯಮಂತ್ರಿ ಮಾಡಿದ್ವಿ, ದೇವೇಗೌಡರು 16 ಸೀಟ್ ಗೆದ್ದರು ಪ್ರಧಾನಮಂತ್ರಿ ಮಾಡಿದ್ವು ಎಂದು ಕಾಂಗ್ರೆಸ್‌ನವರು ಹೇಳುತ್ತಾರೆ. ಅದರ ಜತೆಗೆ ಸರ್ಕಾರವನ್ನು ತೆಗೆದವರು ಯಾರು ಎನ್ನುವುದನ್ನೂ ಹೇಳಬೇಕಲ್ವಾ?ಕಾಂಗ್ರೆಸ್‌ ಮನೆ ಬಾಗಿಲಿಗೆ ನಾನು, ದೇವೇಗೌಡರು ಬಂದಿದ್ವಾ? ಅದೂ ಅಲ್ಲದೆ ದೇವೇಗೌಡರನ್ನು ಪ್ರಧಾನಮಂತ್ರಿ ಮಾಡಿದ್ದು ಕಮ್ಯೂನಿಸ್ಟ್‌ ಹಾಗೂ ಇತರರು. ಒಬ್ಬ ಕನ್ನಡಿಗನನ್ನು ತೆಗೆದವರು ಯಾರು? ನಾನು ಏನು ತಪ್ಪು ಮಾಡಿದೆ ಅಂತ ಸರ್ಕಾರ ತೆಗೆದರು?ʼʼ ಎಂದು ಎಚ್‌ಡಿಕೆ ಕಾಂಗ್ರೆಸ್‌ ಅನ್ನು ತರಾಟೆಗೆ ತೆಗೆದುಕೊಂಡರು.

ʼʼದಲಿತರು ಅಂತ ಕರೆಯಬೇಡಿ ಎಂದು ಚರ್ಚೆ ನಡೆದಿದೆ. ಅಹಿಂದ ಅಂತಾ ಎಷ್ಟು ವರ್ಷದಿಂದ ಹೆಸರು ಇಟ್ಟುಕೊಂಡಿದ್ದೀರಾ? ಅಹಿಂದ ಹೆಸರು ಇಟ್ಟುಕೊಂಡು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಅವಮಾನ ಮಾಡುತ್ತಿದ್ದೀರ. ಅವರಿಗೆ ಮೀಸಲಿಟ್ಟಿದ್ದ ಹಣ ಉಪಯೋಗಿಸಿಕೊಂಡಿದ್ದೀರಿʼʼ ಎಂದು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.

ಸಚಿವ ಮಂಕಾಳ ವೈದ್ಯಗೆ ತಿರುಗೇಟು

ಯಾವ ಸರ್ಕಾರವೂ ಹತ್ತು ಲಕ್ಷ ರೂ. ಪರಿಹಾರ ನೀಡಲು ಸಾಧ್ಯವೇ ಇಲ್ಲ ಎಂಬ ಸಚಿವ ಮಂಕಾಳ ವೈದ್ಯ ಅವರ ಹೇಳಿಕೆಗೆ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದರು. ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಮಾತನಾಡಿದ ಅವರು, ʼʼಮಂಕಾಳ ವೈದ್ಯ ಅವರಿಗೆ ಸಮಯ ಸಿಕ್ಕಿದರೆ ಕೊಡುಗಿಗೆ ಭೇಟಿ ನೀಡಲಿ. ನನ್ನ ಕಾಲದಲ್ಲಿ ಹತ್ತು ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿದ್ದೇವೆ. ಒಂದು ಲಕ್ಷ ರೂ. ಪರಿಹಾರ ಕೊಟ್ಟಿದ್ದೇವೆ. ಪದಾರ್ಥ ಕೊಳ್ಳಲು ಐವತ್ತು ಸಾವಿರ ರೂ. ಕೊಟ್ಟಿದ್ದೇವೆ. ಗೊತ್ತಿಲ್ಲದೆ ಹೋದರೆ ಹೋಗಿ ನೋಡಿಕೊಂಡು ಬರಲಿʼʼ ಎಂದು ತಿಳಿಸಿದರು.

ʼʼನಾನು ಮತ್ತು ಬಿಜೆಪಿ ಅಶೋಕ್ ಒಟ್ಟಿಗೆ ಬಂದಿದ್ದೇವೆ. ಇಲ್ಲಿ ಜಿಲ್ಲಾಡಳಿತ ಸೂಕ್ಷ್ಮವಾಗಿ ನೋಡಲು ಸ್ವಲ್ಪ ಸಹಕಾರ ಕೊಟ್ಟಿದೆ. ನಾನು ಯಾರನ್ನು ಟೀಕೆ ಮಾಡಲು ಹೋಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಸ್ಪರ ವಿಶ್ವಾಸದಲ್ಲಿ ಕೆಲಸ ಮಾಡಬೇಕು. ಟೆರರಿಸ್ಟ್ ಚಟುವಟಿಕೆಗಳಿಗಿಂತಲೂ ಇಲ್ಲಿ ದರೋಡೆ ಚೆನ್ನಾಗಿ ನಡೆಯುತ್ತಿದೆ. ಇದನ್ನು ನಿಲ್ಲಿಸಲು ಮಿಲಿಟರಿ ಕರೆ ತರಲು ಡಿಕೆಶಿ ಹೇಳಿದ್ದಾರೆʼʼ ಎಂದರು.

ʼʼನನ್ನನ್ನು ನೋಡಿದರೆ ಡಿಫ್ರೆಷನ್‌ನಲ್ಲಿ‌ ಇರುವವನ ತರ ಕಾಣುತ್ತೇನಾ? ಕರ್ನಾಟಕಕ್ಕೆ ನಾನು ಬರುವುದನ್ನೇ ಸಹಿಸಲ್ಲ ಅಂದರೆ ನನ್ನಿಂದ ಏನು ನಿರೀಕ್ಷೆ ಮಾಡ್ತಾರೆ? ನಾನು ಬರಲೇಬಾರದು ಎನ್ನುವ ರೀತಿ ಹೇಳಿಕೆ ನೀಡುತ್ತಿದ್ದಾರೆ. ಸ್ಥಳ ಪರಿಶೀಲನೆ ಮಾಡುವುದು ಜನಪ್ರತಿನಿಧಿಯಾಗಿ ನನ್ನ ಧರ್ಮ. ಮಂಡ್ಯಗೆ ಹೋದರು ಬೇಡ ಅಂತಾರೆ, ಉತ್ತರ ಕರ್ನಾಟಕ ಹೋಗ್ತಿನಿ ಅಂದರೆ ಅಲ್ಲಿಗೂ ಬೇಡ ಅಂತಾರೆ. ಸದ್ಯ ಹಾಸನಕ್ಕೆ ಬರಬೇಡಿ ಅನ್ನಲಿಲ್ಲ. ನಾನು ಕರ್ನಾಟಕಕ್ಕೆ ಬರ್ತಿನಿ ಎಂದರೆ ಅವರಿಗೆ ಕೈಕಾಲು ನಡುಗುತ್ತೆʼʼ ಎಂದು ಎಚ್‌ಡಿಕೆ ವ್ಯಂಗ್ಯವಾಡಿದರು.

ಇದನ್ನೂ ಓದಿ: DK Shivakumar: ನಮ್ಮ ಅಧಿಕಾರಿಗಳು ಬಹಳ ಖದೀಮರಿದ್ದಾರೆ, ಡಿ ಗ್ರೇಡ್ ಕ್ಲರ್ಕ್‌ಗಳೆಲ್ಲಾ ಅಧೀಕ್ಷಕ, ಎಂಡಿಗಳಾಗಿದ್ದಾರೆ ಎಂದ ಡಿಕೆಶಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಥಂಡಿ ಮಿಶ್ರಿತ ಗಾಳಿ-ಮಳೆಗೆ ಹೈರಣಾದ ಜನತೆ; ಜು.25ರವರಗೆ ಮಳೆ ಮುಂದುವರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಟ (Rain News) ಮುಂದುವರಿದಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಮಳೆಗೆ ಮನೆಯಿಂದ ಹೊರಬರಲು ಆಗದೆ ಒಳಗೆ ಕೂರಲು ಆಗದೆ ಚಡಪಡಿಸುವಂತಾಗಿದೆ. ಸದ್ಯ ಮುಂದಿನ ಐದು ದಿನಗಳಿಗೆ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ವಿಜಯನಗರ: ಭಾನುವಾರ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು (Karnataka Weather Forecast) ಅಬ್ಬರಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಧ್ಯಾಹ್ನದಿಂದ ಜಿಟಿಜಿಟಿ ಮಳೆಯಾಗಿತ್ತು. ಥಂಡಿ ಮಿಶ್ರಿತ ಗಾಳಿ ಜತೆಗೆ ಜಿಟಿ ಜಿಟಿ ಮಳೆಗೆ (Rain news) ಜನರು ಹೈರಾಣಾದರು. ಹಡಗಲಿ, ಹರಪನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ತಾಲೂಕುಗಳಲ್ಲಿಯೂ ಇದೇ ರೀತಿಯ ವಾತಾವರಣ ಇತ್ತು.

ಇನ್ನೂ ಜು.22ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಜತೆಗೆ ಗಾಳಿಯು ಸಾಥ್‌ ನೀಡಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಹಗುರ ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಥಂಡಿ ಗಾಳಿ ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

ಬೆಳಗಾವಿ: ಭಾರಿ ಮಳೆಗೆ (Karnataka Rain) ಬೆಳಗಾವಿ ಜಿಲ್ಲೆಗೆ ಸಪ್ತ ನದಿಗಳ ನೆರೆ ಭೀತಿ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಐದು ದಿನದಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತಗೊಂಡಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಏಳು ಸೇತುವೆಗಳು ಹಾಗೂ ಬೆಳಗಾವಿ ವ್ಯಾಪ್ತಿಯಲ್ಲಿ ಹತ್ತು ಸಂಪರ್ಕ ಸೇತುವೆ ಮುಳುಗಡೆಯಾಗಿವೆ.

ದೂದಗಂಗಾ ನದಿಗೆ ದತ್ತವಾಡ-ಮಲ್ಲಿಕವಾಡ, ಬೋಜ್-ಕಾರದಗಾ, ಬೋಜವಾಡಿ-ಕುಣ್ಣೂರ ಹಾಗೂ ವೇದಗಂಗಾ ನದಿಗೆ ಜತ್ರಾಟ-ಭೀವಶಿ, ಅಕ್ಕೋಳ-ಸಿದ್ನಾಳ, ಕೃಷ್ಣಾ ನದಿಗೆ ಮಾಂಜರಿ-ಬಾವನಸೌದತ್ತಿ, ಹಿರಣ್ಯಕೇಶಿ ನದಿಗೆ ಯರನಾಳ-ಮದಮಕ್ಕನಾಳ ಸೇರಿ ಘಟಪ್ರಭಾ ನದಿಗೆ ಸುಣಧೋಳಿ – ಮೂಡಲಗಿ, ಅವರಾದಿ- ನಂದಗಾಂವ, ಕಮಲದಿನ್ನಿ – ಹುಣಶ್ಯಾಳ ಪಿವೈ, ವಡ್ಡರಹಟ್ಟಿ- ಉದಗಟ್ಟಿ, ಗೋಕಾಕ್-ಶಿಂಗಳಾಪುರ, ಮಲಪ್ರಭಾಗೆ ಖಾನಾಪುರ-ಹೆಮ್ಮಡಗಾ, ಸಾತ್ನಾಳಿ-ಮಾಸಾಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ಬರೋಬ್ಬರಿ 34 ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದ್ದು, ಕಿ.ಮೀ ಗಟ್ಟಲೇ ಸುತ್ತಿ ಹಾಕಿ ಓಡಾಡುವಂತಾಗಿದೆ.

ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಸಾವು

ಕೊಡಗು: ಗದ್ದೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎತ್ತೊಂದು ಮೃತಪಟ್ಟಿದೆ. ಮತ್ತೊಂದು ಎತ್ತು ಹಾಗೂ ರೈತನ ಕುಟುಂಬ ಹಾಗೂಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಕರೆಂಟ್‌ ಶಾಕ್‌ ಹೊಡೆದಿದೆ. ಈ ವೇಳೆ ಒಂದು ಎತ್ತು ಮೃತಪಟ್ಟರೆ, ಕುಂಬಗೌಡನ ಸದಾ ಅವರ ಪತ್ನಿ ವೀಣಾ, ಮತ್ತೊಂದು ಎತ್ತು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕಂಬದಿಂದ ವಿದ್ಯುತ್ ಲೀಕೇಜ್‌ ಆಗಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಚೆಸ್ಕಾಂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

HD Kumaraswamy: ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ? ಡಿಕೆಶಿಗೆ ತಿರುಗೇಟು ಕೊಟ್ಟ ಎಚ್‌ಡಿಕೆ

HD Kumaraswamy: ಮಳೆ, ನೆರೆ ಪರಿಹಾರ ಕಾರ್ಯಕ್ಕೆ ಸೇನೆಯನ್ನು ಕರೆದುಕೊಂಡು ಬರಬೇಕಿತ್ತು ಎಂಬ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

HD Kumaraswamy
Koo

ಸಕಲೇಶಪುರ: ಪಾಪ… ಡಿ.ಕೆ.ಶಿವಕುಮಾರ್ ಅವರು ಮಿಲಿಟರಿಯನ್ನು ಯಾಕೆ ತರಲು ಹೇಳಿದ್ದಾರೆ ಎಂದರೆ, ಈ ರಾಜ್ಯದಲ್ಲಿ ಅವ್ಯಾಹತವಾಗಿ ಲೂಟಿ, ದರೋಡೆ ನಡೆಯುತ್ತಿದೆ. ಭಯೋತ್ಪಾದಕ ಕೃತ್ಯಗಳಿಗಿಂತ ದರೋಡೆ, ಲೂಟಿ ಚೆನ್ನಾಗಿ ನಡೆಯುತ್ತಿದೆ. ಅಂತಹ ಕೃತ್ಯಗಳನ್ನು ನಿಲ್ಲಿಸಿಲು ಮಿಲಿಟರಿಯನ್ನು ಕರೆ ತರಲು ಹೇಳಿರಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ತಿರುಗೇಟು ನೀಡಿದ್ದಾರೆ.

ಮಳೆ, ನೆರೆ ಪರಿಹಾರ ಕಾರ್ಯಕ್ಕೆ ಸೇನೆಯನ್ನು ಕರೆದುಕೊಂಡು ಬರಬೇಕಿತ್ತು ಎಂಬ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಮಳೆಹಾನಿ ವೀಕ್ಷಣೆ ವೇಳೆ ಪ್ರತಿಕ್ರಿಯಿಸಿ, ಅವರು ಯಾವ ಅರ್ಥದಲ್ಲಿ ಸೇನೆಯನ್ನು ಕರೆಸಬೇಕು ಎಂದು ಹೇಳಿದ್ದಾರೋ ಗೊತ್ತಿಲ್ಲ ಎಂದು ಚುಚ್ಚಿದರು.

ನಾನು ರಾಜ್ಯದ ಸಂಸದನಾಗಿ, ಕೇಂದ್ರ ಸಚಿವನಾಗಿ ರಾಜ್ಯಕ್ಕೆ ಬರುವುದನ್ನು ಸಹಿಸಲು ಕಾಂಗ್ರೆಸ್‌ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಅದಕ್ಕಾಗಿಯೇ ರಾಜ್ಯ ಸರ್ಕಾರ ನನಗೆ ಹೆಜ್ಜೆಹೆಜ್ಜೆಗೂ ಅಡ್ಡಿಪಡಿಸುತ್ತಿದೆ. ನಾನು ಡಿಪ್ರೆಷನ್‌ನಲ್ಲಿ ಇದ್ದೀನಿ ಎಂದು ಅವರು(ಡಿಕೆಶಿ) ಹೇಳಿದ್ದಾರೆ. ನನ್ನನ್ನು ನೋಡಿದರೆ ಡಿಪ್ರೆಷನ್‌ನಲ್ಲಿ‌ ಇರುವವನ ರೀತಿ ಕಾಣುತ್ತೇನೆಯೇ ಎಂದ ಎಚ್‌ಡಿಕೆ, ಮಿಲಿಟರಿ ತರಲು ಅವರು ಏಕೆ ಹೇಳಿದರು ಎಂದು ನಾನು ಯೋಚನೆ ಮಾಡುತ್ತಿದ್ದೇನೆ ಎಂದು ಟಾಂಗ್‌ ಕೊಟ್ಟರು.

ಇದನ್ನೂ ಓದಿ | IT Employees: ಐಟಿ ನೌಕರರಿಗೆ ದಿನಕ್ಕೆ 14 ಗಂಟೆ ಕೆಲಸ; ಉದ್ಯೋಗಿಗಳ ಒಕ್ಕೂಟ ಆಕ್ರೋಶ, ಅದರ ವಾದ ಹೀಗಿದೆ

ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದ ಸಹಕಾರ ಕೇಳುವ ರಾಜ್ಯ ಸರ್ಕಾರವು ಒಬ್ಬ ಕೇಂದ್ರ ಸಚಿವ ರಾಜ್ಯಕ್ಕೆ ಬರುವುದನ್ನು ಸಹಿಸುತ್ತಿಲ್ಲ. ನಿನ್ನೆಯ ದಿನ ಉತ್ತರ ಕನ್ನಡ ಜಿಲ್ಲೆಯ ಶಿಶೂರು ಬಳಿ ಗುಡ್ಡ ಕುಸಿದ ಸ್ಥಳಕ್ಕೆ ನಾನು ಭೇಟಿ ನೀಡಿದಾಗ ಐದು ಕಿ.ಮೀ. ಹಿಂದೆಯೇ ಬ್ಯಾರಿಕೇಡ್‌ಗಳನ್ನು ಹಾಕಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಯಿತು. ಕುಮಾರಸ್ವಾಮಿ ಮಳೆಹಾನಿ ಸಮೀಕ್ಷೆ ನಡೆಸಿದ್ದನ್ನು ವರದಿ ಮಾಡಬಾರದು ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಕರ್ನಾಟಕಕ್ಕೆ ನಾನು ಬರುವುದನ್ನೇ ಸಹಿಸಲ್ಲ ಅಂದರೆ ನನ್ನಿಂದ ಏನು ನಿರೀಕ್ಷೆ ಮಾಡುತ್ತಾರೆ ಇವರು? ನಾನು ಬರಲೇಬಾರದು ಎನ್ನುವ ರೀತಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸ್ಥಳ ಪರಿಶೀಲನೆ ಮಾಡುವುದು ಜನಪ್ರತಿನಿಧಿಯಾಗಿ ನನ್ನ ಧರ್ಮ. ಮಂಡ್ಯಕ್ಕೆ ಹೋದರೂ ಬೇಡ ಎನ್ನುತ್ತಾರೆ, ಉತ್ತರ ಕನ್ನಡ ಜಿಲ್ಲೆಗೆ ಹೋದರೂ ಅಂದರೆ ಅಲ್ಲಿಗೂ ಬೇಡ ಅಂತಾರೆ. ಸದ್ಯ ಹಾಸನಕ್ಕೆ ಬರಬೇಡಿ ಅನ್ನಲಿಲ್ಲ. ನಾನು ಕರ್ನಾಟಕಕ್ಕೆ ಬರುತ್ತೇನೆ ಎಂದರೆ ಇವರಿಗೆ ಕೈಕಾಲು ನಡುಗುತ್ತದೆ ಎಂದು ಕೇಂದ್ರ ಸಚಿವರು ತಿರುಗೇಟು ಕೊಟ್ಟರು.

ಯಾವ ಸರ್ಕಾರವೂ ಹತ್ತು ಲಕ್ಷ ಪರಿಹಾರ ನೀಡಲು ಸಾಧ್ಯವೇ ಇಲ್ಲ ಎಂದು ಸಚಿವ ಮಂಕಾಳ ವೈದ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವರು, ಅವರಿಗೆ ಯಾವ ಸಂದರ್ಭದಲ್ಲಿ ಎಷ್ಟೆಷ್ಟು ಪರಿಹಾರ ನೀಡಲಾಗಿದೆ ಎಂಬ ಮಾಹಿತಿ ಇದ್ದಂತೆ ಇಲ್ಲ. ಅವರಿಗೆ ಸಮಯ ಸಿಕ್ಕಿದರೆ ಕೊಡುಗು ಜಿಲ್ಲೆಗೆ ಭೇಟಿ ನೀಡಲಿ. 2018ರಲ್ಲಿ ನಾನು ಸಿಎಂ ಆಗಿದ್ದಾಗ ಅಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾದಾಗ ಅನೇಕರು ಮನೆಮಠ ಆಸ್ತಿಗಳನ್ನು ಕಳೆದು ನಿರಾಶ್ರಿತರಾಗಿದ್ದರು. ಕೆಲವೇ ತಿಂಗಳಲ್ಲಿ ಎಲ್ಲಾ ನಿರಾಶ್ರಿತ ಕುಟುಂಬಗಳಿಗೆ ತಲಾ 10 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಮನೆಗಳನ್ನು ಕಟ್ಟಿಕೊಡಲಾಯಿತು. ಜತೆಗೆ, ಒಂದು ಲಕ್ಷ ರೂ. ಪರಿಹಾರ ಕೊಟ್ಟಿದ್ದೇವೆ, ಆಹಾರ ಪದಾರ್ಥ ಕೊಳ್ಳಲು 50 ಸಾವಿರ ರೂ. ಕೊಟ್ಟಿದ್ದೇವೆ. ಬಹುಶಃ ಸಚಿವರಿಗೆ ಇದೆಲ್ಲಾ ಗೊತ್ತಿಲ್ಲದೆ ಇರಬಹುದು. ದಯಮಾಡಿ ಅವರು ಬಿಡುವು ಮಾಡಿಕೊಂಡು ಹೋಗಿ ಕೊಡಗಿನಲ್ಲಿ ಪರಿಸ್ಥಿತಿಯನ್ನು ಅವಲೋಕನ ಮಾಡಲಿ ಎಂದು ಸಲಹೆ ಮಾಡಿದರು.

ಮಳೆಹಾನಿ ಪ್ರದೇಶಗಳಿಗೆ ನಾನು, ಅಶೋಕ್ ಒಟ್ಟಿಗೆ ಭೇಟಿ ನೀಡಿದ್ದೇವೆ. ಇಲ್ಲಿ ಜಿಲ್ಲಾಡಳಿತ ಸೂಕ್ಷ್ಮವಾಗಿ ನೋಡಲು ಸ್ವಲ್ಪ ಸಹಕಾರ ಕೊಟ್ಟಿದ್ದಾರೆ. ನಿನ್ನೆ ದಿನ ಶಿಶೂರು ಗುಡ್ಡದಲ್ಲಿ ಐದು ಕಿಲೋಮೀಟರ್ ದೂರದಲ್ಲಿ ಮಾಧ್ಯಮಗಳಿಗೆ ತಡೆಗೋಡೆ ಇಟ್ಟು ಏನು ಚಿತ್ರೀಕರಣ ಮಾಡದ ರೀತಿ ಆದೇಶ ಮಾಡಿದ್ದರು. ನಾನು ಯಾರನ್ನೂ ಟೀಕೆ ಮಾಡಲು ಹೋಗಲ್ಲ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪರಸ್ಪರ ವಿಶ್ವಾಸದಲ್ಲಿ ಕೆಲಸ ಮಾಡಬೇಕು. ಬಹುಶಃ ರಾಜ್ಯದ ಸರಕಾರದಲ್ಲಿ ಕೆಲಸ ಮಾಡುತ್ತಿರುವ ಕೆಲ ಸಚಿವರಿಗೆ ಅಂಥ ವಿವೇಕ ಇದ್ದಂತೆ ಇಲ್ಲ ಎಂದು ಅವರು ಕಟುವಾಗಿ ಟೀಕಿಸಿದರು.

ಇದನ್ನೂ ಓದಿ | Karnataka Rain : ಭಾರಿ ಮಳೆ ಎಫೆಕ್ಟ್‌; ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

ಈ ಸಂದರ್ಭದಲ್ಲಿ ಶಾಸಕರಾದ ಸಿ.ಎನ್.‌ಬಾಲಕೃಷ್ಣ, ಸ್ವರೂಪ್‌ ಪ್ರಕಾಶ್‌, ಸಿಮೆಂಟ್‌ ಮಂಜುನಾಥ್‌, ಎಚ್.ಕೆ.ಸುರೇಶ್‌ ಮುಂತಾದವರು ಹಾಜರಿದ್ದರು.

Continue Reading

ಮಳೆ

Karnataka Rain : ಭಾರಿ ಮಳೆ ಎಫೆಕ್ಟ್‌; ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

Karnataka Rain : ಭಾರಿ ಮಳೆಗೆ ಅವಾಂತರವೇ ಸೃಷ್ಟಿಯಾಗಿದ್ದು, ಬಹುತೇಕ ಕಡೆಗಳಲ್ಲಿ ಸೇತುವೆಗಳು ಮುಳುಗಡೆಯಾಗಿವೆ. ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಮೃತಪಟ್ಟಿದೆ.

VISTARANEWS.COM


on

By

karnataka rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಬೆಳಗಾವಿ ಜಿಲ್ಲೆಗೆ ಸಪ್ತ ನದಿಗಳ ನೆರೆ ಭೀತಿ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಐದು ದಿನದಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತಗೊಂಡಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಏಳು ಸೇತುವೆಗಳು ಹಾಗೂ ಬೆಳಗಾವಿ ವ್ಯಾಪ್ತಿಯಲ್ಲಿ ಹತ್ತು ಸಂಪರ್ಕ ಸೇತುವೆ ಮುಳುಗಡೆಯಾಗಿವೆ.

ದೂದಗಂಗಾ ನದಿಗೆ ದತ್ತವಾಡ-ಮಲ್ಲಿಕವಾಡ, ಬೋಜ್-ಕಾರದಗಾ, ಬೋಜವಾಡಿ-ಕುಣ್ಣೂರ ಹಾಗೂ ವೇದಗಂಗಾ ನದಿಗೆ ಜತ್ರಾಟ-ಭೀವಶಿ, ಅಕ್ಕೋಳ-ಸಿದ್ನಾಳ, ಕೃಷ್ಣಾ ನದಿಗೆ ಮಾಂಜರಿ-ಬಾವನಸೌದತ್ತಿ, ಹಿರಣ್ಯಕೇಶಿ ನದಿಗೆ ಯರನಾಳ-ಮದಮಕ್ಕನಾಳ ಸೇರಿ ಘಟಪ್ರಭಾ ನದಿಗೆ ಸುಣಧೋಳಿ – ಮೂಡಲಗಿ, ಅವರಾದಿ- ನಂದಗಾಂವ, ಕಮಲದಿನ್ನಿ – ಹುಣಶ್ಯಾಳ ಪಿವೈ, ವಡ್ಡರಹಟ್ಟಿ- ಉದಗಟ್ಟಿ, ಗೋಕಾಕ್-ಶಿಂಗಳಾಪುರ, ಮಲಪ್ರಭಾಗೆ ಖಾನಾಪುರ-ಹೆಮ್ಮಡಗಾ, ಸಾತ್ನಾಳಿ-ಮಾಸಾಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ಬರೋಬ್ಬರಿ 34 ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದ್ದು, ಕಿ.ಮೀ ಗಟ್ಟಲೇ ಸುತ್ತಿ ಹಾಕಿ ಓಡಾಡುವಂತಾಗಿದೆ.

ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಸಾವು

ಕೊಡಗು: ಗದ್ದೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎತ್ತೊಂದು ಮೃತಪಟ್ಟಿದೆ. ಮತ್ತೊಂದು ಎತ್ತು ಹಾಗೂ ರೈತನ ಕುಟುಂಬ ಹಾಗೂಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಕರೆಂಟ್‌ ಶಾಕ್‌ ಹೊಡೆದಿದೆ. ಈ ವೇಳೆ ಒಂದು ಎತ್ತು ಮೃತಪಟ್ಟರೆ, ಕುಂಬಗೌಡನ ಸದಾ ಅವರ ಪತ್ನಿ ವೀಣಾ, ಮತ್ತೊಂದು ಎತ್ತು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕಂಬದಿಂದ ವಿದ್ಯುತ್ ಲೀಕೇಜ್‌ ಆಗಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಚೆಸ್ಕಾಂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Bengaluru News : ಓವರ್‌ ನೈಟ್‌ ಪಾರ್ಟಿ; ವಿರಾಟ್‌ ಕೊಹ್ಲಿ ಮಾಲಿಕತ್ವದ ಪಬ್‌ ಸೇರಿ 10ಕ್ಕೂ ಹೆಚ್ಚು ಪಬ್‌ಗಳ ಮೇಲೆ ಎಫ್‌ಐಆರ್‌

ದ್ವೀಪದಂತೆ ಆದ ಮಂಡಕಳಲೆ ಗ್ರಾಮ

ಶಿವಮೊಗ್ಗದಲ್ಲಿ ಮಳೆಯಾರ್ಭಟಕ್ಕೆ ಮಂಡಕಳಲೆ ಗ್ರಾಮ ದ್ವೀಪದಂತೆ ಆಗಿದೆ. ಜತೆಗೆ ಎರಡು ಮನೆಗಳು ನೆಲಸಮವಾಗಿದ್ದು, ಕುಟುಂಬಸ್ಥರು ಕಂಗಲಾಗಿದ್ದಾರೆ. ಪ್ರಕಾಶ್ ಹಾಗೂ ಜಯಲಕ್ಷ್ಮಿ ಎಂಬುವವರ ಮನೆ ನೆಲಸಮವಾಗಿದೆ. ಜಿಲ್ಲಾಡಳಿತ ಮಂಡಕಳಲೆ ಗ್ರಾಮದಲ್ಲಿ ಪ್ರಾಥಮಿಕ ಶಾಲೆಯಲ್ಲಿ ನಿರಾಶ್ರಿತರಿಗೆ ಕಾಳಜಿ ಕೇಂದ್ರ ಸ್ಥಾಪನೆ ಮಾಡಿದೆ. ಇನ್ನೂ ಸಚಿವ ಮಧುಬಂಗಾರಪ್ಪ ಪ್ರತಿ ಕುಟುಂಬಕ್ಕೆ 5 ಸಾವಿರ ವೈಯಕ್ತಿಕ ಪರಿಹಾರ ನೀಡಿದ್ದು, ಮನೆ ಕಳೆದು ಕೊಂಡವರಿಗೆ 5 ಲಕ್ಷ ರೂ. ಹಣ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾನಲೆ ಗ್ರಾಮದಲ್ಲಿ ಅಪಾಯ ಮಟ್ಟ ಮೀರಿ ವರದಾ ನದಿ ಹರಿಯುತ್ತಿದ್ದು, ಕೆಲವೇ – ಕನ್ನಳ್ಳಿ ಮಾರ್ಗದ ಸೇತುವೆ ಮುಳಗಡೆಯಾಗಿದೆ. ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, ಕೆಲವೇ – ಕನ್ನಳ್ಳಿ ಮಾರ್ಗದ ಸಂಪರ್ಕಕ್ಕೆ ಅಡಚಣೆ ಉಂಟಾಗಿದೆ.

ಇತ್ತ ವರದಾ ನದಿಯಲ್ಲಿ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ಹಾನಗಲ್ ತಾಲೂಕಿನಲ್ಲಿ ಹಲವು ಸೇತುವೆ ಮುಳುಗಡೆಯಾಗಿದೆ. ಬಾಳಂಬೀಡ, ಅರೆಲಕಮಾಪುರ ಸಂಪರ್ಕ ಸೇತುವೆ ಮುಳುಗಡೆ ಆಗಿದ್ದರಿಂದ ಹತ್ತಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಬಂದ್ ಆಗಿದೆ. ನೂರಾರು ಎಕರೆ ಬೆಳೆ ನೀರುಪಾಲಾಗಿದೆ. ದೇವಸ್ಥಾನ, ವಿದ್ಯುತ್ ಕಂಬ, ವಿದ್ಯುತ್ ಟ್ರಾನ್ಸ್ ಫಾರ್ಮರ್, ರೈತರ ಪಂಪ್ ಸೆಟ್‌ಗಳು ನೀರುಪಾಲಾಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾಸನ

HD Kumaraswamy: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌ಡಿಕೆ ಭೇಟಿ; ಮಳೆಯಿಂದ ಹಾನಿಯಾದ ಪ್ರದೇಶಗಳ ಪರಿಶೀಲನೆ

HD Kumaraswamy: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಎಚ್‌.ಡಿ.ಕುಮಾರಸ್ವಾಮಿ ಅವರು ಮಳೆಯಿಂದ ಹಾನಿಯಾದ ವಿವಿಧ ಪ್ರದೇಶಗಳಿಗೆ ನೀಡಿ ನೀಡಿದರು. ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಬಳಿ ಕುಸಿದಿದ್ದ ರಾಷ್ಟ್ರೀಯ ಹೆದ್ದಾರಿಯನ್ನು ಪರಿಶೀಲಿಸಿದ ಅವರು ಜತೆಗಿದ್ದ ಜಿಲ್ಲಾಧಿಕಾರಿ, ಎಸ್‌ಪಿ ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

VISTARANEWS.COM


on

HD Kumaraswamy
Koo

ಹಾಸನ: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ಮಳೆಯಿಂದ ಹಾನಿಯಾದ ವಿವಿಧ ಪ್ರದೇಶಗಳಿಗೆ ನೀಡಿ ನೀಡಿದರು. ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಬಳಿ ಕುಸಿದಿದ್ದ ರಾಷ್ಟ್ರೀಯ ಹೆದ್ದಾರಿಯನ್ನು ಪರಿಶೀಲಿಸಿದ ಅವರು ಜತೆಗಿದ್ದ ಜಿಲ್ಲಾಧಿಕಾರಿ, ಎಸ್‌ಪಿ ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

ಕುಮಾರಸ್ವಾಮಿ ಹೇಳಿದ್ದೇನು?

ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಕುಮಾರಸ್ವಾಮಿ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ʼʼಕಳೆದ ನಾಲ್ಕೈದು ದಿನಗಳಿಂದ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಸಕಲೇಶಪುರದ ಜತೆಗೆ ಶಿರಾಡಿಘಾಟ್ ರಸ್ತೆಯಲ್ಲಿ ಭೂ ಕುಸಿತವಾಗಿದೆ. ಕಳಪೆ, ಅವೈಜ್ಞಾನಿಕ ಕಾಮಗಾರಿ ನಡೆದಿದೆ ಎನ್ನುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಈ ಬಗ್ಗೆ ಪರಿಶೀಲಿಸಲಾಗುವುದುʼʼ ಎಂದು ಅವರು ತಿಳಿಸಿದರು.

ʼʼಕಳೆದ ಲೋಕಸಭಾ ‌ಚುನಾವಣೆ ನಂತರ ಪ್ರಥಮ ಬಾರಿಗೆ ಹಾಸನ ಜಿಲ್ಲೆಯಲ್ಲಿ ಆಗಿರುವ ಅನಾಹುತ ನೋಡಲು ಬಂದಿದ್ದೇನೆ. ಚುನಾವಣೆ ಆಸುಪಾಸಿನಲ್ಲಿ ನಡೆದ ಕೆಲವು ಅಹಿತರಕರ ಘಟನೆಗಳಿಂದ‌ ಪಕ್ಷದ ಕಾರ್ಯಕರ್ತರಲ್ಲಿ, ಮುಖಂಡರಲ್ಲಿ ನಿರಾಸೆ ಮೂಡಿಸಿದೆ. ಹಾಸನ ಜಿಲ್ಲೆಯ ಜನತೆ ದೇವೇಗೌಡರಿಗೆ ಕೆಂಪುಕೋಟೆ ಮೇಲೆ ಬಾವುಟ ಹಾರಿಸುವ ಶಕ್ತಿ‌ ಕೊಟ್ಟಿದ್ದಾರೆ. ಅರವತ್ತು ವರ್ಷಗಳ ಏಳುಬೀಳುಗಳಲ್ಲಿ ಅವರ ರಾಜಕೀಯ ಬೆಳವಣಿಗೆಗೆ ಪ್ರಮುಖ ಪಾತ್ರ ವಹಿಸಿರುವುದು ಹಾಸನ ಜಿಲ್ಲೆಯ ಜನ. ನಮ್ಮ ಬದುಕು ಇರುವವರೆಗೂ ನಾವು ಇದನ್ನು ಮರೆಯುವುದಿಲ್ಲʼʼ ಎಂದು ಎಚ್‌ಡಿಕೆ ಭರವಸೆ ನೀಡಿದರು.

ʼʼನಾನು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದೇನೆ. ಎಲ್ಲ ಮಾಹಿತಿಯನ್ನು ಕೇಂದ್ರಕ್ಕೆ ನೀಡುತ್ತೇನೆ. ಬಹಳ ದಿನಗಳಿಂದ ಈ ರಸ್ತೆಯಲ್ಲಿ ಸುರಂಗ ಮಾರ್ಗ ಆಗಬೇಕು ಎನ್ನುವ ಚರ್ಚೆಗಳಿವೆ. ಇದಕ್ಕೆ ಅರಣ್ಯ ಇಲಾಖೆಯ ತೊಡಕುಗಳಿವೆ. ಎಲ್ಲವನ್ನೂ ನಾನು ಚರ್ಚೆ ಮಾಡುತ್ತೇನೆ. ಮುಂದೆ ಹಾಸನ ಜಿಲ್ಲೆಯ ಕಾರ್ಯಕರ್ತರಿಗೆ ನೈತಿಕ ಸ್ಥೈರ್ಯ ತುಂಬಲು ಬರುತ್ತೇನೆʼʼ ಎಂದು ಕುಮಾರಸ್ವಾಮಿ ತಿಳಿಸಿದರು.

ʼʼಹಾಸನದಲ್ಲಿ ಬೃಹತ್ ಸಮಾವೇಶ ಮಾಡುವಂತೆ ಆಗ್ರಹ ಕೇಳಿ ಬಂದಿದೆ. ಕಲಾಪ ಮುಗಿದ ನಂತರ ಹಾಸನದಲ್ಲಿ ಬೃಹತ್ ಸಮಾವೇಶ ಮಾಡಲು ಯೋಚಿಸಿದ್ದೇನೆ. ರೇವಣ್ಣ ಅವರ ನೇತೃತ್ವದಲ್ಲೇ ಬೃಹತ್ ಸಮಾವೇಶ ಮಾಡುತ್ತೇವೆ. ಅವರ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿವೆ. ಆದರೆ ರೇವಣ್ಣ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಯಾರು ಮರೆಯುವಂತಿಲ್ಲ. ಎಲ್ಲರಿಗಿಂತ ಒಂದು ಹೆಜ್ಜೆ ಹೆಚ್ಚೇ ಅಭಿವೃದ್ಧಿ ಮಾಡಿದ್ದಾರೆ. ಬೆಂಗಳೂರಿನ ಮದರ್ ಡೈರಿ ಮೀರಿಸುವ ರೀತಿಯಲ್ಲಿ ಹಾಸನದಲ್ಲಿ ಮೆಗಾ ಡೈರಿ ನಿರ್ಮಾಣ ಮಾಡುತ್ತಿದ್ದಾರೆ. ಇಲ್ಲಿನ ರೈತರಿಗೆ ಆರ್ಥಿಕ ಶಕ್ತಿ ತುಂಬಲು ಮೆಗಾ ಡೈರಿ ಮಾಡುತ್ತಿದ್ದಾರೆ. ರೇವಣ್ಣ ಅವರ ನೇತೃತ್ವದಲ್ಲಿ ಶಾಸಕರುಗಳನ್ನೊಳಗೊಂಡು ನಾನು ಸೇರಿ ಪಕ್ಷ ಸಂಘಟನೆ ಮಾಡುತ್ತೇವೆ. ಈ ಮೂಲಕ ಜಿಲ್ಲೆಯ ಜನರ ಋಣವನ್ನು ತೀರಿಸುತ್ತೇವೆʼʼ ಎಂದು ಹೇಳಿದರು.

ಇದನ್ನೂ ಓದಿ: HD Kumaraswamy: ಪರಿಹಾರ ಕಾರ್ಯದಲ್ಲಿ ರಾಜಕಾರಣ ಮಾಡಬಾರದು; ಕುಮಾರಸ್ವಾಮಿ ಸಲಹೆ

ʼʼನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರುವ ಸಿದ್ಧತೆ ನಡೆಯುತ್ತಿದೆ. ನನಗೂ ಸಹ ಜವಾಬ್ದಾರಿ ನೀಡಿದ್ದಾರೆ. ಎರಡು ಜವಾಬ್ದಾರಿ, ಎರಡು ಸಮಿತಿ ಜತೆಗೆ ದೇಶದ ಅಭಿವೃದ್ಧಿಗೆ ಕೆಲಸ ಮಾಡುವ ಶಕ್ತಿ ಕೊಟ್ಟಿದ್ದಾರೆ. ಆದ್ದರಿಂದ ದೇಶದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆʼʼ ಎಂದು ಎಚ್‌ಡಿಕೆ ತಿಳಿಸಿದರು.

Continue Reading
Advertisement
Vande Mataram
ದೇಶ14 mins ago

Vande Mataram: ಸಂಸತ್ತಿನಲ್ಲಿ ವಂದೇ ಮಾತರಂ, ಥ್ಯಾಂಕ್ಸ್‌ ಎಂದು ಹೇಳುವಂತಿಲ್ಲ; ಏಕಿಂಥ ಆದೇಶ?

karnataka Weather Forecast
ಮಳೆ40 mins ago

Karnataka Weather : ಥಂಡಿ ಮಿಶ್ರಿತ ಗಾಳಿ-ಮಳೆಗೆ ಹೈರಣಾದ ಜನತೆ; ಜು.25ರವರಗೆ ಮಳೆ ಮುಂದುವರಿಕೆ

Karnataka Rain
ಕರ್ನಾಟಕ1 hour ago

Karnataka Rain: ಶಿರೂರು ಗುಡ್ಡ ಕುಸಿತದ ಸ್ಥಳ ವೀಕ್ಷಿಸಿದ ಸಿಎಂ; NDRF-SDRF ತಂಡಗಳ ಕಾರ್ಯಕ್ಕೆ ಮೆಚ್ಚುಗೆ

Women's Asia Cup
ಪ್ರಮುಖ ಸುದ್ದಿ1 hour ago

Women’s Asia Cup : ಯುಎಇ ವಿರುದ್ಧ ಭಾರತದ ವನಿತೆಯರಿಗೆ ಭರ್ಜರಿ 78 ರನ್ ವಿಜಯ

karnataka rain
ಮಳೆ1 hour ago

Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

Guru Purnima 2024
ಅಂಕಣ1 hour ago

Guru Purnima 2024: ಗುರು ಎಂದರೆ ವ್ಯಕ್ತಿಯಲ್ಲ, ಅದ್ಭುತವಾದ ಶಕ್ತಿ!

Fatty liver disease
ಆರೋಗ್ಯ2 hours ago

Fatty Liver Problem: ಫ್ಯಾಟಿ ಲಿವರ್‌ ಸಮಸ್ಯೆ ಎದುರಿಸುತ್ತಿದ್ದೀರಾ? ಈ ಮೂರು ಪೇಯಗಳಿಂದ ಎಂದೆಂದಿಗೂ ದೂರವಿರಿ

Lakshmi Hebbalkar
ಉಡುಪಿ2 hours ago

Lakshmi Hebbalkar: ಮಳೆಗೆ ತತ್ತರಿಸಿದ ಉಡುಪಿ; ನನ್ನ ಅವಶ್ಯಕತೆ ಇದ್ದಾಗಷ್ಟೇ ಬರ್ತೀನಿ ಎಂದ ಲಕ್ಷ್ಮೀ ಹೆಬ್ಬಾಳಕರ್

Kanwar Yatra
ದೇಶ2 hours ago

Kanwar Yatra: ನೇಮ್‌ಪ್ಲೇಟ್‌ ಅಳವಡಿಕೆಗೆ ಆದೇಶ ಪ್ರಶ್ನಿಸಿ ಅರ್ಜಿ; ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ವಿಚಾರಣೆ

HD Kumaraswamy
ಕರ್ನಾಟಕ2 hours ago

HD Kumaraswamy: ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ? ಡಿಕೆಶಿಗೆ ತಿರುಗೇಟು ಕೊಟ್ಟ ಎಚ್‌ಡಿಕೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌