Women's Asia Cup : ಯುಎಇ ವಿರುದ್ಧ ಭಾರತದ ವನಿತೆಯರಿಗೆ ಭರ್ಜರಿ 78 ರನ್ ವಿಜಯ - Vistara News

ಪ್ರಮುಖ ಸುದ್ದಿ

Women’s Asia Cup : ಯುಎಇ ವಿರುದ್ಧ ಭಾರತದ ವನಿತೆಯರಿಗೆ ಭರ್ಜರಿ 78 ರನ್ ವಿಜಯ

Women’s Asia Cup : ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ ನಿಗದಿತ 20 ಓವರ್​​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 201 ರನ್ ಬಾರಿಸಿತು. ಇದು ಭಾರತ ಮಹಿಳೆಯರ ಕ್ರಿಕೆಟ್ ತಂಡದ ಇದುವರೆಗಿನ ಗರಿಷ್ಠ ಸ್ಕೋರ್ ಆಗಿದೆ. ಪ್ರತಿಯಾಗಿ ಬ್ಯಾಟ್ ಮಾಡಿದ ಯುಎಇ ವನಿತೆಯರು ತಮ್ಮ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 123 ರನ್​ ಬಾರಿಸಿ ಹೀನಾಯವಾಗಿ ಸೋಲೊಪ್ಪಿಕೊಂಡರು.

VISTARANEWS.COM


on

Women's Asia Cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡಂಬುಲ್ಲಾ: ಭಾರತದ ಮಹಿಳೆಯರ ಕ್ರಿಕೆಟ್ ತಂಡ ಏಷ್ಯಾ ಕಪ್​ನಲ್ಲಿ (Women’s Asia Cup) ತನ್ನ ಎರಡನೇ ಗೆಲುವು ಸಾಧಿಸಿದೆ. ಈ ಮೂಲಕ ಸೆಮೀಸ್​ ಪ್ರವೇಶವನ್ನು ಸುಲಭಗೊಳಿಸಿದೆ. ಯುಎಇ (UAE Women’s Cricket Team) ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಅಮೋಘ 78 ರನ್​ ಗೆಲುವು ಸಾಧಿಸಿ ಗುಂಪು ಹಂತದಲ್ಲಿ ಒಟ್ಟು 4 ಅಂಕಗಳನ್ನು ಗಳಿಸಿದೆ. ಭಾರತ ತಂಡದ ಆಟಗಾರರು ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಪಾರಮ್ಯ ಸಾಧಿಸಿ ತನ್ನ ಅಜೇಯ ಓಟ ಮುಂದುವರಿಸಿದೆ. ಇತ್ತೀಚಿನ ದಿನಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಭಾರತ ತಂಡ ಮತ್ತೊಂದು ಸ್ಮರಣೀಯ ವಿಜಯವನ್ನು ತನ್ನದಾಗಿಸಿಕೊಂಡಿತು.

ಇಲ್ಲಿನ ರಣಗಿರಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆಯಿತು. ಅಂತೆಯೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ ನಿಗದಿತ 20 ಓವರ್​​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 201 ರನ್ ಬಾರಿಸಿತು. ಇದು ಭಾರತ ಮಹಿಳೆಯರ ಕ್ರಿಕೆಟ್ ತಂಡದ ಇದುವರೆಗಿನ ಗರಿಷ್ಠ ಸ್ಕೋರ್ ಆಗಿದೆ. ಪ್ರತಿಯಾಗಿ ಬ್ಯಾಟ್ ಮಾಡಿದ ಯುಎಇ ವನಿತೆಯರು ತಮ್ಮ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 123 ರನ್​ ಬಾರಿಸಿ ಹೀನಾಯವಾಗಿ ಸೋಲೊಪ್ಪಿಕೊಂಡರು.

ಮೊದಲು ಬ್ಯಾಟ್ ಮಾಡಿದ ಭಾರತ ತಂಡ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು. ಶಫಾಲಿ ವರ್ಮಾ 18 ಎಸೆತಕ್ಕೆ 37 ರನ್ ಬಾರಿಸಿದರೆ ಸ್ಮೃತಿ ಮಂಧಾನಾ 9 ಎಸೆತಕ್ಕೆ 13 ರನ್ ಗಳಿಸಿದರು. ಆದರೆ, ಸ್ಮೃತಿ ಬೇಗ ನಿರ್ಗಮಿಸಿದರು. ಈ ವೇಳೆ ಭಾರತದ ಸ್ಕೋರ್​ 23. ಆದರೆ, ನಂತರ ಬಂದ ದಯಾಳನ್ ಹೇಮಲತಾ 4 ಎಸೆತಗಳನ್ನು ಎದುರಿಸಿ 2 ರನ್ ಬಾರಿಸುವ ಮೂಲಕ ನಿರಾಸೆ ಮೂಡಿಸಿದರು. 52 ರನ್​ಗೆ 2 ವಿಕೆಟ್​ ಕಳೆದುಕೊಂಡ ಹೊರತಾಗಿಯೂ ಭಾರತದ ರನ್​ ಗಳಿಕೆ ವೇಗ ಕಡಿಮೆ ಆಗಲಿಲ್ಲ. ನಾಯಕಿ ಹರ್ಮನ್​ಪ್ರೀತ್ ಕೌರ್​ (66 ರನ್​) ಅರ್ಧ ಶತಕ ಬಾರಿಸಿದರು. ತಾವೆದುರಿಸಿದ 47 ಎಸೆತಗಳಲ್ಲಿ 7 ಫೋರ್ ಹಾಗೂ 1 ಸಿಕ್ಸರ್ ಬಾರಿಸಿದರು. ಹೀಗಾಗಿ ನಾಲ್ಕನೇ ವಿಕೆಟ್ ಪತನಗೊಳ್ಳುವಾಗ ಭಾರತ 104 ರನ್ ಬಾರಿಸಿತು.

ಜೆಮಿಮಾ ರೋಡ್ರಿಗಸ್​ 14 ರನ್​ಗೆ ಸೀಮಿತಗೊಂಡರೆ ಕೊನೆಯಲ್ಲಿ ವಿಕೆಟ್​ ಕೀಪರ್​ ರಿಚಾ ಘೋಷ್​ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೇವಲ 29 ಎಸೆತಗಳನ್ನು ಎದುರಿಸಿದ ಅವರು 12 ಫೋರ್ ಹಾಗೂ 1 ಸಿಕ್ಸರ್ ಮೂಲಕ 64 ರನ್ ಬಾರಿಸಿದರು. ಇವರ ಬ್ಯಾಟಿಂಗ್​ ವೇಗಕ್ಕೆ ಯುಎಇ ಬೌಲರ್​ಗಳು ಸಂಪುರ್ಣವಾಗಿ ಮಂಕಾದರು. ಅಲ್ಲದೆ ಭಾರತ ತಂಡಕ್ಕೆ ದಾಖಲೆಯ 200 ರನ್​ಗಳ ಗುರಿ ದಾಟಲು ನೆರವಾದರು.

ಬೌಲರ್​ಗಳ ಪಾರಮ್ಯ

ದೊಡ್ಡ ಮೊತ್ತವನ್ನು ಬೆನ್ನಟ್ಟಲು ಮುಂದಾದ ಯುಎಇ ತಂಡವೂ ವೇಗದ ಆಟಕ್ಕೆ ಮೊರೆ ಹೋಗುವ ಪ್ರಯತ್ನ ಮಾಡಿತು. ಆದರೆ, ಭಾರತೀಯ ಬೌಲರ್​ಗಳು ಅದಕ್ಕೆ ಸೊಪ್ಪು ಹಾಕಲಿಲ್ಲ. ಆರಂಭಿಕ ಬ್ಯಾಟರ್​ ಇಶ್ ಒಜಾ 3 ರನ್ ಬಾರಿಸಿದ ಹೊರತಾಗಿಯೂ ತೀರ್ಥ ಸತೀಶ್​ (4), ರಿನಿತಾ ರಜಿತ್​ (7 ರನ್​), ಸಮೈರಾ (5 ರನ್​) ಬೇಗನೆ ವಿಕೆಟ್ ಒಪ್ಪಿಸಿದರು. 36ಕ್ಕೆ 3 ವಿಕೆಟ್​ ನಷ್ಟ ಮಾಡಿಕೊಂಡರ ಯುಎಇ ಸಂಕಷ್ಟಕ್ಕೆ ಒಳಗಾಯಿತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಕವಿಶಾ ಎಗೋಡ್ಗೆ 32 ಎಸೆತಕ್ಕೆ 40 ರನ್ ಬಾರಿಸಿ ಮಿಂಚಿದರು. ಆದರೆ, ಉಳಿದವರಿಂದ ಹೆಚ್ಚಿನ ನೆರವು ಸಿಗದ ಕಾರಣ ಅವರಿಗೆ ಪಂದ್ಯ ಗೆಲ್ಲಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ನಲ್ಲಿ ಅತಿ ಹೆಚ್ಚು ಪದಕಗಳನ್ನು ಪಡೆದ ಅಥ್ಲೀಟ್​ ಯಾರು? ಇಲ್ಲಿದೆ ಈ ಶ್ರೇಷ್ಠ ಕ್ರೀಡಾಪಟುವಿನ ವಿವರ

ಎ ಗುಂಪಿನಲ್ಲಿರುವ ಭಾರತ ತಂಡ ತನ್ನ ಮುಂದಿನ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದೆ. ಈಗಾಗಲೇ ಎರಡು ಪಂದ್ಯ ಗೆದ್ದಿರುವ ಕಾರಣ ಭಾರತ ಬಹುತೇಕ ಸೆಮಿಫೈನಲ್ ತಲುಪಿದೆ. ಭಾರತ ಹಾಲಿ ಚಾಂಪಿಯನ್ ತಂಡವಾಗಿದ್ದು ಕಪ್ ಉಳಿಸಲು ಯತ್ನಿಸಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ವಿದ್ಯುತ್ ಬಿಲ್‌ನಲ್ಲಿರುವ ಹೆಚ್ಚುವರಿ ಭದ್ರತಾ ಠೇವಣಿ ಕುರಿತು ಗೊಂದಲ; ಗ್ರಾಹಕರ ಪ್ರಶ್ನೆಗಳಿಗೆ ಇಲ್ಲಿದೆ ಬೆಸ್ಕಾಂ ಉತ್ತರ

ಪ್ರಸ್ತುತ ಗೃಹಜ್ಯೋತಿ ಯೋಜನೆ ಜಾರಿಯಲ್ಲಿರುವುದರಿಂದ, ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರಿಗೆ ಅವರ ಖಾತೆಯಲ್ಲೇ ಭದ್ರತಾ ಠೇವಣಿಯ ಬಡ್ಡಿ ಹಣ ಜಮಾ ಆಗಿರುತ್ತದೆ. ಗ್ರಾಹಕರು ಶೂನ್ಯ ಬಿಲ್‌ನಿಂದ ಹೊರಬಂದಾಗ, ಅವರ ಖಾತೆಯಲ್ಲಿ ಜಮೆಯಾಗಿರುವ ಬಡ್ಡಿಯ ಹಣವನ್ನು ವಿದ್ಯುತ್ ಶುಲ್ಕದೊಂದಿಗೆ ಹೊಂದಿಸಲಾಗುತ್ತದೆ ಎಂದು ಬೆಸ್ಕಾಂ ಹೆಚ್ಚುವರಿ ಭದ್ರತಾ ಠೇವಣಿ ಕುರಿತು ಮಾಹಿತಿ ನೀಡಿದೆ.

VISTARANEWS.COM


on

Bescom
Koo

ಬೆಂಗಳೂರು: ಜೂನ್‌ ತಿಂಗಳ ವಿದ್ಯುತ್‌ ಬಿಲ್‌ನಲ್ಲಿ ಹೆಚ್ಚುವರಿ ಭದ್ರತಾ ಠೇವಣಿಯ (ASD – Additional Security Deposit) ಮೊತ್ತ ಏರಿಕೆಯಾಗಿರುವುದಕ್ಕೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇದೇ ಆಕ್ರೋಶ ವ್ಯಕ್ತವಾಗಿದೆ. ಉಚಿತವಾಗಿ ವಿದ್ಯುತ್‌ ಕೊಡುವ ಬೆಸ್ಕಾಂ ಸೇರಿ ರಾಜ್ಯದ ಹಲವು ವಿದ್ಯುತ್‌ ಸರಬರಾಜು ನಿಗಮಗಳು ಸುಲಿಗೆ ಮಾಡುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ, ಹೆಚ್ಚುವರಿ ಭದ್ರತಾ ಠೇವಣಿ ನಿಗದಿ ಕುರಿತು ಬೆಸ್ಕಾಂ ಸ್ಪಷ್ಟನೆ ನೀಡಿದೆ. ಆ ಮೂಲಕ ಗ್ರಾಹಕರ ಪ್ರಶ್ನೆ, ಗೊಂದಲಗಳಿಗೆ ಪರಿಹಾರ ನೀಡುವ ಪ್ರಯತ್ನ ಮಾಡಿದೆ. ಬೆಸ್ಕಾಂ ಪ್ರಕಟಣೆಯ ಅಂಶಗಳು ಇಲ್ಲಿವೆ.

  • ನೂತನ ಗ್ರಾಹಕರ ವಿದ್ಯುತ್ ಬೇಡಿಕೆಯನ್ನು ಆಧರಿಸಿ, ಹೆಚ್ಚುವರಿ ಭದ್ರತಾ ಠೇವಣಿ ‌(ASD – Additional Security Deposit) ಯನ್ನು ನಿರ್ಧರಿಸಲಾಗುತ್ತದೆ ಹಾಗೂ ಮುಂದಿನ ಹಣಕಾಸು ವರ್ಷದ ಆರಂಭದಲ್ಲಿ, ಗ್ರಾಹಕರ ಹಿಂದಿನ ವಾರ್ಷಿಕ ಸರಾಸರಿ ಬಳಕೆಯನ್ನು ಆಧರಿಸಿ, ಗ್ರಾಹಕರು ಹೆಚ್ಚುವರಿ ಭದ್ರತಾ ಠೇವಣಿಯನ್ನು ಪಾವತಿಸಬೇಕೇ ಅಥವಾ ಅವರ ಬೇಡಿಕೆ ಕಡಿಮೆ ಇದ್ದಲ್ಲಿ ಗ್ರಾಹಕರಿಗೆ ಮರುಪಾವತಿಸಬೇಕೇ ಎನ್ನುವುದನ್ನು ಬೆಸ್ಕಾಂ ನಿರ್ಧರಿಸುತ್ತದೆ.
  • ಗ್ರಾಹಕರ ಹೆಚ್ಚುವರಿ ಭದ್ರತಾ ಠೇವಣಿಗೆ, ನೂತನ ಹಣಕಾಸು ವರ್ಷದ‌ ಮೊದಲ ತ್ರೈಮಾಸಿಕದ ಅಂತ್ಯದಲ್ಲಿ ಠೇವಣಿಯ ಮೇಲಿನ ಬಡ್ಡಿ (IOD – Interest On Deposit) ಯನ್ನು ಗ್ರಾಹಕರ ಖಾತೆಗೆ ಪಾವತಿಸಲಾಗುತ್ತದೆ.
  • ಪ್ರಸ್ತುತ ಗೃಹಜ್ಯೋತಿ ಯೋಜನೆ ಜಾರಿಯಲ್ಲಿರುವುದರಿಂದ, ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರಿಗೆ ಅವರ ಖಾತೆಯಲ್ಲೇ ಭದ್ರತಾ ಠೇವಣಿಯ ಬಡ್ಡಿ ಹಣ ಜಮಾ ಆಗಿರುತ್ತದೆ. ಗ್ರಾಹಕರು ಶೂನ್ಯ ಬಿಲ್‌ನಿಂದ ಹೊರಬಂದಾಗ, ಅವರ ಖಾತೆಯಲ್ಲಿ ಜಮೆಯಾಗಿರುವ ಬಡ್ಡಿಯ ಹಣವನ್ನು ವಿದ್ಯುತ್ ಶುಲ್ಕದೊಂದಿಗೆ ಹೊಂದಿಸಲಾಗುತ್ತದೆ.
Escom Online Services
  • ಹೆಚ್ಚುವರಿ ಭದ್ರತಾ ಠೇವಣಿಯು ಯಾವುದೇ ರೀತಿಯ ತೆರಿಗೆ ಅಥವಾ ಗ್ರಾಹಕರಿಂದ ಹೆಚ್ಚುವರಿಯಾಗಿ ವಸೂಲಿ ಮಾಡುವ ಮೊತ್ತವಲ್ಲ. ಬದಲಾಗಿ, ಗ್ರಾಹಕರ ವಿದ್ಯುತ್ ಬಳಕೆಗೆ ಅನುಗುಣವಾಗಿ, ಅವರ ವಾರ್ಷಿಕ ಸರಾಸರಿ ಬಳಕೆಯನ್ನು ಆಧರಿಸಿ, ನಿರ್ಧರಿಸಲಾಗುವ ಭದ್ರತಾ ಠೇವಣಿ. ವರ್ಷಾಂತ್ಯದಲ್ಲಿ ಆ ಠೇವಣಿ ಹಣಕ್ಕೆ ಗ್ರಾಹಕರಿಗೇ ಬಡ್ಡಿಯ ಲಾಭಾಂಶ ‌(IOD) ನೀಡಲಾಗುತ್ತದೆ.
  • ಜೂನ್ ತಿಂಗಳಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಹೆಚ್ಚು ವಿದ್ಯುತ್ ಬಿಲ್ ಬರುವ ಯಾವುದೇ ಕಾರಣಗಳು ಇಲ್ಲವಾಗಿದ್ದು, ವಿದ್ಯುತ್ ಬಿಲ್‌ ಗೃಹಜ್ಯೋತಿಯಡಿ ಶೂನ್ಯವಾಗಿದ್ದೂ, ನಿಮ್ಮ ವಿದ್ಯುತ್ ಬಿಲ್‌ನಲ್ಲಿ ಋಣಾತ್ಮಕ (-) ಮೊತ್ತ ನಮೂದಾಗಿದ್ದರೆ, ಅದು ಜೂನ್ ತಿಂಗಳ ಅಂತ್ಯದಲ್ಲಿ ನಿಮ್ಮ ಹೆಚ್ಚುವರಿ ಭದ್ರತಾ ಠೇವಣಿಗೆ ಬೆಸ್ಕಾಂ ನೀಡುವ ಬಡ್ಡಿದರವಾಗಿದೆ. ಅದನ್ನು ಮುಂದೆ ಶೂನ್ಯ ಬಿಲ್‌ನಿಂದ ಹೊರಬಂದಾಗ, ವಿದ್ಯುತ್ ಶುಲ್ಕಕ್ಕೆ ಸರಿಹೊಂದಿಸಲಾಗುವುದು. ಈ ಋಣಾತ್ಮಕ (-) ಮೊತ್ತವನ್ನು ಗ್ರಾಹಕರು ಪಾವತಿಸಬೇಕಿರುವುದಿಲ್ಲ (ಶೂನ್ಯ ಬಿಲ್ ಇದ್ದರೆ, ಬಿಲ್‌ನ‌ ಕೆಳಭಾಗದಲ್ಲಿ, ಠೇವಣಿ ಮೇಲಿನ ಬಡ್ಡಿ IOD ಎಂದು ಋಣಾತ್ಮಕ ಮೊತ್ತವನ್ನು ನಮೂದಿಸಲಾಗಿರುತ್ತದೆ.)
  • ಕೆ.ಇ.ಆರ್.ಸಿ ಆದೇಶಗಳನ್ವಯ, ಗ್ರಾಹಕರ ಹೆಚ್ಚುವರಿ ಭದ್ರತಾ ಠೇವಣಿಯನ್ನು ಅವರ ವಾರ್ಷಿಕ ವಿದ್ಯುತ್ ಬಳಕೆಯ ಸರಾಸರಿಯನ್ನು ಆಧರಿಸಿ ನಿರ್ಧರಿಸಬೇಕಿದ್ದು, ಬೇಡಿಕೆಗಿಂತ ಸರಾಸರಿ ಕಡಿಮೆಯಿದ್ದಲ್ಲಿ, ಗ್ರಾಹಕರಿಗೆ ಭದ್ರತಾ ಠೇವಣಿ ಹಣವನ್ನು ಮರುಪಾವತಿಸಲಾಗುತ್ತದೆ ಅಥವಾ ಸರಾಸರಿಯು ಬೇಡಿಕೆಗಿಂತ ಹೆಚ್ಚಿದ್ದಲ್ಲಿ, ಅದರನ್ವಯ ಬೇಡಿಕೆಯ ಭದ್ರತಾ ಠೇವಣಿಯನ್ನು ಗ್ರಾಹಕರಿಗೆ ವಿಧಿಸಲಾಗುತ್ತದೆ.
  • ಇನ್ನು, ಹೆಚ್ಚುವರಿ ಭದ್ರತಾ ಠೇವಣಿಯನ್ನು ನಿರ್ಧರಿಸಿ, ಗ್ರಾಹಕರಿಗೆ ನೋಟಿಸ್ ನೀಡುವ ಜವಾಬ್ದಾರಿ ಆಯಾ ಉಪವಿಭಾಗಗಳಿಗೆ ಸಂಬಂಧಿಸಿದ್ದು, ಉಪವಿಭಾಗದಿಂದ ಸಹಾಯಕ ಅಭಿಯಂತರರು ನೋಟಿಸ್ ಹೊರಡಿಸುತ್ತಾರೆಯೇ ವಿನಃ, ಬೆಸ್ಕಾಂನ ನಿಗಮ ಕಚೇರಿಯ ಅಧಿಕೃತ ಜ್ಞಾಪನ ಪತ್ರದ ಮೂಲಕ ಈ ರೀತಿಯ ನೋಟಿಸ್ ನೀಡಲಾಗುವುದಿಲ್ಲ.
  • ನೂತನವಾಗಿ ನಿರ್ಧರಿಸಲಾಗುವ ಭದ್ರತಾ ಠೇವಣಿಯನ್ನು ಆನ್‌ಲೈನ್ ಮೂಲಕವೂ ಪಾವತಿಸಬಹುದಾಗಿದ್ದು, ಬೆಸ್ಕಾಂ ಮಿತ್ರ ಮೊಬೈಲ್ ಆ್ಯಪ್ ಅಥವಾ ಬೆಸ್ಕಾಂನ ಅಧಿಕೃತ ವೆಬ್‌ಸೈಟ್ ಮೂಲಕ ಪಾವತಿಸಬಹುದಾಗಿದೆ
  • ಬೆಸ್ಕಾಂಗೆ ಸರ್ಕಾರದ ಸಬ್ಸಿಡಿಗಳು ಕೇವಲ ಕೃಷಿ‌ ಪಂಪ್‌ಸೆಟ್ ಹಾಗೂ ಗೃಹ ಜ್ಯೋತಿ ಯೋಜನೆಯಿಂದ ಮಾತ್ರ ಅನ್ವಯವಾಗುತ್ತಿದ್ದು, ಇತರೆ ಅನುದಾನವನ್ನು ಗ್ರಾಹಕರಿಗೆ ವಿದ್ಯುತ್ ಪೂರೈಕೆಯ ಮೊತ್ತದ ಮೂಲಕವೇ ಬೆಸ್ಕಾಂ ಪಡೆಯಬೇಕಿರುತ್ತದೆ.
  • ಹೆಚ್ಚುವರಿ ಭದ್ರತಾ ಠೇವಣಿ (ASD) ಕುರಿತಾದ ಯಾವುದೇ ಗೊಂದಲಗಳಿದ್ದಲ್ಲಿ, ಬೆಸ್ಕಾಂನ 24×7 ಸಹಾಯವಾಣಿ 1912 ಕ್ಕೆ ಕರೆಮಾಡಿ ಪರಿಹರಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: BESCOM Order : ವಿದ್ಯುತ್‌ ಕಂಬಗಳ ಮೇಲೆ ಅನಧಿಕೃತ ಕೇಬಲ್‌ ತೆರವಿಗೆ ಗಡುವು; ಬಿಸಿ ಮುಟ್ಟಿಸಲು ಸಜ್ಜಾದ ಬೆಸ್ಕಾಂ

Continue Reading

ಕರ್ನಾಟಕ

Sameer Nigam: ಕನ್ನಡಿಗರ ಕ್ಷಮೆಯಾಚಿಸಿದ PhonePe ಸಿಇಒ ಸಮೀರ್‌ ನಿಗಮ್‌; ಬಾಯ್ಕಾಟ್‌ ಪೆಟ್ಟಿಗೆ ಥಂಡಾ

Sameer Nigam: ಫೊನ್‌ ಪೇ ಅಪ್ಲಿಕೇಶನ್‌ ವಿರುದ್ಧ ಕರ್ನಾಟಕದಲ್ಲಿ ಅಭಿಯಾನ ಆರಂಭವಾದ ಬೆನ್ನಲ್ಲೇ ಸಿಇಒ ಸಮೀರ್‌ ನಿಗಮ್‌ ಎಚ್ಚೆತ್ತುಕೊಂಡಿದ್ದಾರೆ. ನಾನು ಸಮಸ್ತ ಕನ್ನಡಿಗರ ಕ್ಷಮೆಯಾಚಿಸುತ್ತೇನೆ ಎಂಬುದಾಗಿ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ಕನ್ನಡಿಗರ ಮೇಲೆ ವಿಶೇಷ ಪ್ರೀತಿ ಇದೆ ಎಂದೂ ಹೇಳಿದ್ದಾರೆ.

VISTARANEWS.COM


on

Sameer Nigam
Koo

ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಫೋನ್ ಪೇ ಸಿಇಒ ಸಮೀರ್ ನಿಗಮ್ (Sameer Nigam) ಕೊನೆಗೂ ಕ್ಷಮೆಯಾಚಿಸಿದ್ದಾರೆ. ಮೀಸಲಾತಿ ತೀರ್ಮಾನವನ್ನು ವಿರೋಧಿಸಿದ ಕಾರಣ ಕರ್ನಾಟಕದಾದ್ಯಂತ ಬಾಯ್ಕಾಟ್‌ ಫೋನ್‌ ಪೇ (Boycott PhonePe) ಎಂಬ ಅಭಿಯಾನ ಆರಂಭವಾದ ಬೆನ್ನಲ್ಲೇ, ಸಮೀರ್‌ ನಿಗಮ್‌ ಅವರು ಎಕ್ಸ್‌ ಸಾಮಾಜಿಕ ಜಾಲತಾಣದ ಪೋಸ್ಟ್‌ ಮೂಲಕ ಕನ್ನಡಿಗರ ಕ್ಷಮೆಯಾಚಿಸಿದ್ದಾರೆ.

ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸಮೀರ್‌ ನಿಗಮ್‌ ಅವರು ಪೋಸ್ಟ್‌ ಮಾಡಿದ್ದಾರೆ. “ಕಳೆದ ವಾರ ನಾನು ಉದ್ಯೋಗ ಮೀಸಲಾತಿ ವಿಧೇಯಕದ ಕುರಿತು ನೀಡಿದ ಹೇಳಿಕೆ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಕುರಿತು ಮಾಧ್ಯಮಗಳ ಲೇಖನಗಳನ್ನು ಓದಿದೆ. ನನ್ನ ಬಗ್ಗೆ ವೈಯಕ್ತಿಕವಾಗಿ ಟೀಕಿಸಿದ್ದನ್ನು ಗಮನಿಸಿದೆ. ಆದರೆ, ನಾನೊಂದು ವಿಷಯವನ್ನು ಹೇಳಲು ಇಷ್ಟಪಡುತ್ತೇನೆ. ನನಗೆ ಕರ್ನಾಟಕ ಹಾಗೂ ಕರ್ನಾಟಕದ ಜನರನ್ನು ಅವಮಾನಿಸುವುದು ಎಂದಿಗೂ ನನ್ನ ಉದ್ದೇಶ ಆಗಿಲ್ಲ. ಇಷ್ಟಾದರೂ, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ, ಅದಕ್ಕೆ ನಾನು ಕ್ಷಮೆ ಕೇಳುತ್ತೇನೆ” ಎಂದಿದ್ದಾರೆ.

ಕನ್ನಡದ ಮೇಲೆ ನನಗೆ ಗೌರವ ಎಂದ ಸಮೀರ್‌

“ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳ ಮೇಲೆ ನನಗೆ ಹೆಚ್ಚು ಗೌರವ ಇದೆ. ಭಾಷಾ ವೈವಿಧ್ಯತೆಯು ಭಾರತದ ಶ್ರೀಮಂತ ಪರಂಪರೆಯಾಗಿದೆ. ದೇಶದ ಪ್ರತಿಯೊಬ್ಬರೂ ಸ್ಥಳೀಯ ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಪಾಲಿಸಬೇಕು ಎಂಬುದು ನನ್ನ ಅಭಿಪ್ರಾಯವಾಗಿದೆ. ಬೆಂಗಳೂರಿನಲ್ಲಿ ಸ್ಥಾಪನೆಯಾದ ದೇಶದ ಸ್ಟಾರ್ಟಪ್‌ಗಳು, ಗೂಗಲ್‌, ಆಪಲ್‌, ಅಮೆಜಾನ್‌, ಮೈಕ್ರೋಸಾಫ್ಟ್‌ನಂತಹ ಕಂಪನಿಗಳು ಲಕ್ಷ ಡಾಲರ್‌ ಸಂಸ್ಥೆಗಳಾಗಿ ಹೊರಹೊಮ್ಮಿವೆ. ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿಸುವುದು ನನ್ನ ಗುರಿಯಾಗಿದೆ. ಇದಕ್ಕೆ ಎಲ್ಲರ ಸಹಕಾರವಿರಲಿ” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ.

ಫೋನ್‌ ಪೇ ಹುಟ್ಟಿದ್ದೇ ಬೆಂಗಳೂರಿನಲ್ಲಿ; ಸಿಇಒ

“ಬೆಂಗಳೂರು ದೇಶದ ಅದ್ಭುತ ನಗರವಾಗಿದ್ದು, ಜಾಗತಿಕ ದರ್ಜೆಯ ತಂತ್ರಜ್ಞಾನ ಹಾಗೂ ಅದ್ಭುತ ವೈವಿಧ್ಯತೆಯನ್ನು ಹೊಂದಿದೆ. ಅಷ್ಟೇ ಏಕೆ, ಫೋನ್‌ ಪೇ ಹುಟ್ಟಿದ್ದೇ ಬೆಂಗಳೂರಿನಲ್ಲಿ. ಫೋನ್‌ ಪೇಅನ್ನು ಕಳೆದ ಒಂದು ದಶಕದಲ್ಲಿ ಸುಮಾರು 55 ಕೋಟಿ ಭಾರತೀಯರು ಬಳಸಲು ಬೆಂಗಳೂರು ಕೂಡ ಕಾರಣವಾಗಿದೆ. ಬೆಂಗಳೂರನ್ನು ದೇಶದ ಸಿಲಿಕಾನ್‌ ವ್ಯಾಲಿ ಎಂದೇ ಕರೆಯುತ್ತಾರೆ. ಇಲ್ಲಿನ ಇನೋವೇಷನ್‌ ಸಂಸ್ಕೃತಿಯು ಅದ್ಭುತವಾಗಿದ್ದು, ಜಗತ್ತನ್ನೇ ಆಕರ್ಷಿಸುತ್ತಿದೆ. ಕರ್ನಾಟಕ ಸರ್ಕಾರ ಹಾಗೂ ಕನ್ನಡಿಗರ ಸಹಕಾರದಿಂದಲೇ ಬೆಂಗಳೂರು ಜಾಗತಿಕ ತಂತ್ರಜ್ಞಾನದ ಸೂಪರ್‌ ಪವರ್‌ ಎನಿಸಿದೆ” ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಕರ್ನಾಟಕದ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕುರಿತು ರಾಜ್ಯ ಸರ್ಕಾರ ವಿಧೇಯಕ ರಚಿಸುವ ಪ್ರಸ್ತಾಪ ಮುಂದಿಟ್ಟುಕೊಂಡಿದ್ದನ್ನು ಸಮೀರ್‌ ನಿಗಮ್‌ ವಿರೋಧಿಸಿದ್ದರು. ಹಾಗಾಗಿ, ಕರ್ನಾಟಕದಲ್ಲಿ ಕನ್ನಡಿಗರು ಫೋನ್‌ ಪೇ ವಿರುದ್ಧ ಅಭಿಯಾನ ಆರಂಭಿಸಿದ್ದರು. ಸಾವಿರಾರು ಜನ ಫೋನ್‌ಪೇ ಅಪ್ಲಿಕೇಶನ್‌ಅನ್ನು ಅನ್‌ ಇನ್‌ಸ್ಟಾಲ್‌ ಮಾಡಿಕೊಂಡು, ಆ ಫೋಟೊಗಳನ್ನು ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ರಾಜ್ಯದ ಕನ್ನಡ ಸಂಘಟನೆಗಳು ಕೂಡ ಫೋನ್‌ ಪೇ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು. ಇದರಿಂದಾಗಿ ಬೆಚ್ಚಿಬಿದ್ದ ಫೋನ್‌ ಪೇ ಸಿಇಒ ಈಗ ಕ್ಷಮೆಯಾಚಿಸಿದ್ದಾರೆ.

ಇದನ್ನೂ ಓದಿ: PhonePe : ಇ-ಕಾಮರ್ಸ್‌ಗೆ ಫೋನ್‌ಪೇ ಪ್ರವೇಶ, ಹೈಪರ್‌ಲೋಕಲ್‌ ಆ್ಯಪ್‌ ಪಿನ್‌ಕೋಡ್‌ ಬಿಡುಗಡೆ

Continue Reading

ಕರ್ನಾಟಕ

Ankola landslide: ಉತ್ತರ ಕನ್ನಡದ ರಾ. ಹೆದ್ದಾರಿ; ಕಾಮಗಾರಿ ಮುಗಿಸದೆ ಟೋಲ್ ಸಂಗ್ರಹ ಏಕೆ? ಗುತ್ತಿಗೆದಾರ ಕಂಪನಿಗೆ ಸಿಎಂ ತರಾಟೆ

Ankola landslide: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ನಡೆದ ಸ್ಥಳವನ್ನು ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ಪರಿಶೀಲಿಸಿದರು. ಈ ವೇಳೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ.

VISTARANEWS.COM


on

Ankola landslide
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೇ ಟೋಲ್ ಏಕೆ ಸಂಗ್ರಹಿಸುತ್ತಿದ್ದೀರಿ, ಇದು ಸರಿಯಿಲ್ಲ. 2016ಕ್ಕೆ ಮುಕ್ತಾಯಗೊಳಿಸಬೇಕಿದ್ದರೂ ಇದುವರೆಗೆ ಕಾಮಗಾರಿ (Ankola landslide) ಏಕೆ ಮುಕ್ತಾಯವಾಗಿಲ್ಲ ಎಂದು ಗುತ್ತಿಗೆದಾರರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ತರಾಟೆ ತೆಗೆದುಕೊಂಡಿದ್ದಾರೆ.

ಕಾರವಾರದ ಜಿ.ಪಂ. ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಲ್ಲಿ ರಸ್ತೆ ಮಾಡಲು ನಮ್ಮ ಜಾಗ ನೀಡಿದ್ದೀವಿ, ನೀರು ನೀಡಿದ್ದೀವಿ. ನೀವು ಹೇಳಿದ ಹಾಗೆ ಕೇಳುವುದಕ್ಕೆ ನಾವಿಲ್ಲ, ರಸ್ತೆ ಕಾಮಗಾರಿ ಆರಂಭಿಸುವ ಮುನ್ನ ಇಲ್ಲಿ ಸಂಭವಿಸಬಹುದಾದ ಗುಡ್ಡ ಕುಸಿತದಂತಹ ಅನಾಹುತಗಳ ಬಗ್ಗೆ ವೈಜ್ಞಾನಿಕ ವರದಿ ಪಡೆದಿದ್ದೀರಾ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತಂತೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು, ರಾಜ್ಯ ಸರ್ಕಾರದಿಂದ ಕೇಂದ್ರ ಹೆದ್ದಾರಿ ಸಚಿವರಿಗೆ ತೀಕ್ಷ್ಣ ಪತ್ರ ಬರೆಯುವುದಾಗಿ ಹೇಳಿದರು.

ಪ್ರಸ್ತುತ ಜಿಯಾಜಿಕಲ್ ಸರ್ವೆ ಆಫ್ ಇಂಡಿಯಾ ಸಿದ್ಧಪಡಿಸಿರುವ ಜಿಲ್ಲೆಯ ಗುಡ್ಡ ಕುಸಿತ ಪ್ರದೇಶಗಳ ಕುರಿತ ವರದಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಪರಿಶೀಲಿಸಿ, ಹೆದ್ದಾರಿಯಾದ್ಯಂತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ವಿದ್ಯುತ್ ಕಂಬಗಳನ್ನು ಮತ್ತು ವಿದ್ಯುತ್ ಸಂಪರ್ಕ ಸಮಸ್ಯೆಯನ್ನು ಹೆಸ್ಕಾಂ ವತಿಯಿಂದ ತಕ್ಷಣ ಸರಿಪಡಿಸಬೇಕು. ಹೆಸ್ಕಾಂ ಅಧಿಕಾರಿಗಳು ಅಲರ್ಟ್ ಆಗಿದ್ದು, ತಕ್ಷಣ ಸ್ಪಂದಿಸಬೇಕು. ವಿದ್ಯುತ್ ಜನರೇಟ್ ಮಾಡುವ ಜಿಲ್ಲೆಯಾಗಿದ್ದು, ವಿಸ್ತೀರ್ಣ ಕೂಡಾ ದೊಡ್ಡದಾಗಿದ್ದು ಇಲ್ಲಿಗೆ ಹೆಚ್ಚಿನ ಸಿಬ್ಬಂದಿ ನೀಡಲಾಗುವುದು.

ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಕೂಡ ಮಳೆಯಾಗುವ ಸಾಧ್ಯತೆಗಳಿದ್ದು, ಈ ರೀತಿಯಾಗಿ ಗುಡ್ಡ ಕುಸಿತ ಸೇರಿದಂತೆ ಯಾವುದೇ ರೀತಿಯ ಅಪಾಯವಾಗದಂತೆ ಜಿಲ್ಲಾಡಳಿತದಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿರುವ ಅಪಾಯಕಾರಿ ಪ್ರದೇಶಗಳಲ್ಲಿನ ಗ್ರಾಮಗಳನ್ನು ಗುರುತಿಸಿ, ಇಲ್ಲಿ ಗ್ರಾಮಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಿಕೊಂಡು ಅಲ್ಲಿನ ಪರಿಸ್ಥಿತಿಯ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದರು.

ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಆಗಿರುವ ಹಾನಿಯ ಕುರಿತಂತೆ ಶೀಘ್ರದಲ್ಲಿ ವರದಿ ಸಿದ್ದಪಡಿಸಿ, ಶೀಘ್ರದಲ್ಲಿ ಪರಿಹಾರ ಒಗದಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಮಳೆಯಿಂದಾಗಿ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದವರು ಪುನಃ ತಮ್ಮ ಮನೆಗಳಿಗೆ ತೆರಳುವಾಗ ನೀಡುವ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡುವಂತೆ ಕೋರಿದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ಮನವಿಗೆ, ಆಯ್ತು, ಈ ಬಗ್ಗೆ ನೋಡೋಣ ಎಂದು ಸಿಎಂ ಹೇಳಿದರು.

ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ನೆಲೆ ಕಲ್ಪಿಸುವ ಮೂಲಕ ಪರಿಹಾರ ಒದಗಿಸುವ ಬಗ್ಗೆ ಶಾಸಕ ಸತೀಶ್ ಸೈಲ್ ಅವರು ಕೋರಿದರು. ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳೋಣ ಎಂದು ಸಿಎಂ ಹೇಳಿದರು.

ಜಿಲ್ಲೆಯ ಎಲ್ಲಾ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಜನರಿಗೆ ಅಧಿಕಾರಿಗಳ ಮೇಲೆ ವಿಶ್ವಾಸ ಮೂಡುವಂತೆ ಕೆಲಸ ನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಶಾಸಕರಾದ ಭೀಮಣ್ಣ ನಾಯ್ಕ, ಶಿವರಾಮ ಹೆಬ್ಬಾರ್, ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಕಾರ್ಯದರ್ಶಿ ಅತೀಕ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ , ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ, ಜಿ.ಪಂ. ಸಿಇಒ ಈಶ್ವರ ಕುಮಾರ್ ಕಾಂದು, ಎಸ್ಪಿ ನಾರಾಯಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

NDRF-SDRF ತಂಡಗಳ ಕಾರ್ಯಕ್ಕೆ ಮೆಚ್ಚುಗೆ

ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ಸ್ಥಳದಲ್ಲಿ (Karnataka Rain) ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ NDRF, SDRF ತಂಡಗಳ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.

ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲ್ಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು, ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ಮಾಡಬೇಕು ಎಂದ ಸಿಎಂ, ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಸೂಚಿಸಿದರು.

ಜೀವ, ಬೆಳೆ ಹಾನಿಯ ವರದಿ ಕೂಡಲೇ ಸಲ್ಲಿಸುವಂತೆ ಸಿಎಂ ಸೂಚನೆ

ಮಳೆ ಅನಾಹುತರಿಂದ ಉಂಟಾದ ಜೀವ ಹಾನಿ, ಕೃಷಿ ಮತ್ತು ತೋಟಗಾರಿಕೆ ನಷ್ಟಕ್ಕೆ (Karnataka Rain) ಎನ್‌ಡಿಆರ್‌ಎಫ್‌ ಪ್ರಕಾರ ಪರಿಹಾರ ಒಗದಿಸುವ ಕುರಿತಂತೆ ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (Karnataka Rain) ಸೂಚನೆ ನೀಡಿದರು.

ಶಿರೂರು ಗುಡ್ಡ ಕುಸಿತದ ಸ್ಥಳ ಪರಿಶೀಲನೆ ಬಳಿಕ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆಗಳನ್ನು ನೀಡಿದರು.‌

ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಮಳೆ ಅನಾಹುತ ಮತ್ತು‌ ಪ್ರವಾಹದಿಂದ ಆದ ಜೀವಹಾನಿಗೆ ನೀಡಲಾಗಿರುವ ಪರಿಹಾರದ ಕುರಿತು ಮಾಹಿತಿ ಪಡೆದ ಸಿಎಂ ಉಳಿದವರಿಗೆ ತುರ್ತಾಗಿ ಕೊಡಬೇಕು. ಕೋಸ್ಟಲ್ ಲೈನ್‌ನಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಅಗತ್ಯ ಇರುವ ಕಡೆ ವೈರ್‌ಗಳ ದುರಸ್ತಿ ಮತ್ತು ಬದಲಾವಣೆಗೆ ಸೂಚಿಸಿದರು.

ಇದನ್ನೂ ಓದಿ | Karnataka Weather : ಥಂಡಿ ಮಿಶ್ರಿತ ಗಾಳಿ-ಮಳೆಗೆ ಹೈರಣಾದ ಜನತೆ; ಜು.25ರವರಗೆ ಮಳೆ ಮುಂದುವರಿಕೆ

ಕಂದಾಯ ಸಚಿವ ಕೃಷ್ಣ ಬೈರೇಗೌಡ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ,ಶಾಸಕರಾದ ಸತೀಶ್ ಸೈಲ್, ಶಿವರಾಮ ಹೆಬ್ಬಾರ್, ಭೀಮಣ್ಣ ನಾಯ್ಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅತೀಕ್, ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ, ಜಿ.ಪಂ. ಸಿಇಒ ಈಶ್ವರ ಕುಮಾರ್ ಕಾಂದು, ಎಸ್ಪಿ ನಾರಾಯಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ದೇಶ

Mamata Banerjee: ‘ನಾನು ಕಾಫಿರ್‌ ಅಲ್ಲ’ ಎಂದ ಮಮತಾ ಬ್ಯಾನರ್ಜಿಗೆ ಬಿಜೆಪಿ ತಿರುಗೇಟು; ಏನಿದು ವಿವಾದ?

Mamata Banerjee: ಕಾಫಿರ್‌ ಎಂದರೆ ಮುಸ್ಲಿಮೇತರ ಅಥವಾ ಇಸ್ಲಾಂನಲ್ಲಿ ನಂಬಿಕೆ ಇರದವರು ಎಂಬ ಅರ್ಥವಿದೆ. ಹಾಗಾಗಿ, ಮಮತಾ ಬ್ಯಾನರ್ಜಿ ಅವರು ನಾನು ಕಾಫಿರ್‌ ಅಲ್ಲ, ಹೇಡಿ ಅಲ್ಲ ಎಂಬುದಾಗಿ ಹೇಳಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿಯ ಹಲವು ನಾಯಕರು ಮಮತಾ ಬ್ಯಾನರ್ಜಿ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ.

VISTARANEWS.COM


on

Mamata Banerjee
Koo

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ನೀಡಿದ ಒಂದು ಹೇಳಿಕೆ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಇದು ಬಿಜೆಪಿ ಆಕ್ರೋಶಕ್ಕೂ ಗುರಿಯಾಗಿದೆ. “ನಾನು ಕಾಫಿರ್‌ ಅಲ್ಲ” ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದು, ಇದಕ್ಕೆ ಬಿಜೆಪಿ ನಾಯಕ ಅಮಿತ್‌ ಮಾಳವಿಯ (Amit Malviya) ಅವರು ತಿರುಗೇಟು ನೀಡಿದ್ದು, “ಸಾಮಾಜಿಕ ಸಾಮರಸ್ಯವನ್ನು ಮಮತಾ ಬ್ಯಾನರ್ಜಿ ಅವರು ಹಾಳು ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಫಿರ್‌ ಎಂದರೆ ಮುಸ್ಲಿಮೇತರ ಅಥವಾ ಇಸ್ಲಾಂನಲ್ಲಿ ನಂಬಿಕೆ ಇರದವರು ಎಂಬ ಅರ್ಥವಿದೆ. ಸಮಾವೇಶವೊಂದರಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ಯಾರು ಹೆದರುತ್ತಾರೋ, ಅವರು ಸಾಯುತ್ತಾರೆ. ನಾನು ಕಾಫಿರ್‌ ಅಲ್ಲ. ನಾನು ದೇಶದ್ರೋಹಿ ಅಲ್ಲ” ಎಂಬುದಾಗಿ ಅವರು ಹೇಳಿದ್ದರು. ಅಷ್ಟೇ ಅಲ್ಲ, “ನಾನು ಪಶ್ಚಿಮ ಬಂಗಾಳದ ಸಂಬಂಧವು ಭಾರತದ ಜತೆ ಉತ್ತಮವಾಗಿರಲಿ ಎಂದೇ ಬಯಸುತ್ತೇನೆ. ಅಖಿಲೇಶ್‌ ಯಾದವ್‌ ಅವರು ಇಲ್ಲಿಗೆ ಬಂದರು, ಅವರಿಗೆ ನಾನು ಧನ್ಯವಾದ ತಿಳಿಸುತ್ತೇನೆ” ಎಂದಿದ್ದಾರೆ. ಹಾಗಾಗಿ, “ಪಶ್ಚಿಮ ಬಂಗಾಳವು ಭಾರತದ ಭಾಗವಲ್ಲವೇ? ಅದೊಂದು ಪ್ರತ್ಯೇಕ ದೇಶವೇ” ಎಂಬುದಾಗಿ ಬಿಜೆಪಿಯ ಶೆಹಜಾದ್‌ ಪೂನಾವಾಲಾ ಅವರು ಪ್ರಶ್ನಿಸಿದ್ದಾರೆ.

ಅಮಿತ್‌ ಮಾಳವೀಯ ವಾದ ಹೀಗಿದೆ…

“ನಾನು ಕಾಫಿರ್‌ ಅಲ್ಲ ಎಂಬುದಾಗಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ. ಆ ಮೂಲಕ ಅವರು ಕಾಫಿರರು ಹೇಡಿಗಳು ಎಂಬಂತೆ ಮಮತಾ ಬ್ಯಾನರ್ಜಿ ಬಿಂಬಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅವರು ಕೋಲ್ಕೊತಾ ಮೇಯರ್‌ ಪಕ್ಕದಲ್ಲಿ ಕೂತು, ಎಲ್ಲರೂ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಬೇಕು ಎಂಬುದಾಗಿ ಕರೆ ನೀಡಿದ್ದರು. ಅಷ್ಟೇ ಅಲ್ಲ, ಅವರು ಬಹಿರಂಗವಾಗಿಯೇ ಮುಸ್ಲಿಮೇತರರ ವಿರುದ್ಧ ಮಾತನಾಡುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್‌ ಪಕ್ಷವು ದೇಶದ ಸಾಮಾಜಿಕ ಸಾಮರಸ್ಯವನ್ನೇ ಹಾಳು ಮಾಡುತ್ತಿದೆ” ಎಂದು ಅಮಿತ್‌ ಮಾಳವೀಯ ಹೇಳಿದ್ದಾರೆ.

“ಪಶ್ಚಿಮ ಬಂಗಾಳವು ಭಾರತದ ಅವಿಭಾಜ್ಯ ಅಂಗವಾಗಿದೆ. ಇದನ್ನು ಮಮತಾ ಬ್ಯಾನರ್ಜಿ ಅವರು ಅರ್ಥ ಮಾಡಿಕೊಳ್ಳಬೇಕು. ಲಕ್ಷಾಂತರ ಹಿಂದು ಬೆಂಗಾಲಿಗಳು ತಾಯ್ನಾಡಿಗಾಗಿ ಹೋರಾಟ ಮಾಡಿದ್ದಾರೆ. ಹಾಗಾಗಿ, ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳವನ್ನು, ಆ ರಾಜ್ಯದ ಜನರನ್ನು ಕಡೆಗಣಿಸಿ ಮಾತನಾಡಬಾರದು. ಒಬ್ಬ ಮುಖ್ಯಮಂತ್ರಿಯಾಗಿ ಈ ರೀತಿಯ ದೇಶದ್ರೋಹದ ಮಾತುಗಳನ್ನು ಆಡಬಾರದು. ಇಂತಹ ರಾಜಕೀಯ ಮೇಲಾಟಗಳ ಮೂಲಕ ಅವರು ಗದ್ದುಗೆ ಏರುತ್ತೇನೆ ಎಂಬ ಕನಸು ಕಾಣುತ್ತಿದ್ದಾರೆ. ಆದರೆ ಅದು ಕೈಗೂಡುವುದಿಲ್ಲ” ಎಂದು ಅಮಿತ್‌ ಮಾಳವೀಯ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: Viral Video: ಪ.ಬಂಗಾಳದಲ್ಲಿ ಮತ್ತೊಬ್ಬ ಮಹಿಳೆ ಮೇಲೆ ಬರ್ಬರ ಹಲ್ಲೆ; ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ‌ ಮೇಲೆ ಕಿಡಿಕಾರಿದ ಜನ

Continue Reading
Advertisement
Bescom
ಕರ್ನಾಟಕ34 mins ago

ವಿದ್ಯುತ್ ಬಿಲ್‌ನಲ್ಲಿರುವ ಹೆಚ್ಚುವರಿ ಭದ್ರತಾ ಠೇವಣಿ ಕುರಿತು ಗೊಂದಲ; ಗ್ರಾಹಕರ ಪ್ರಶ್ನೆಗಳಿಗೆ ಇಲ್ಲಿದೆ ಬೆಸ್ಕಾಂ ಉತ್ತರ

Sairaj Bahutule :
ಕ್ರೀಡೆ45 mins ago

Sairaj Bahutule : ಭಾರತ ತಂಡದ ಮಧ್ಯಂತರ ಬೌಲಿಂಗ್​ ಕೋಚ್ ಆಗಿ ಸಾಯಿರಾಜ್ ಬಹುತುಲೆ ನೇಮಕ?

Harmanpreet Kaur
ಕ್ರೀಡೆ1 hour ago

Harmanpreet Kaur : ಟಿ20 ಐ ರನ್​ ಗಳಿಕೆಯಲ್ಲಿ ಸ್ಮೃತಿ ಮಂಧಾನಾ ಹಿಂದಿಕ್ಕಿದ ಹರ್ಮನ್​ಪ್ರೀತ್ ಕೌರ್​

Sameer Nigam
ಕರ್ನಾಟಕ1 hour ago

Sameer Nigam: ಕನ್ನಡಿಗರ ಕ್ಷಮೆಯಾಚಿಸಿದ PhonePe ಸಿಇಒ ಸಮೀರ್‌ ನಿಗಮ್‌; ಬಾಯ್ಕಾಟ್‌ ಪೆಟ್ಟಿಗೆ ಥಂಡಾ

Ankola landslide
ಕರ್ನಾಟಕ2 hours ago

Ankola landslide: ಉತ್ತರ ಕನ್ನಡದ ರಾ. ಹೆದ್ದಾರಿ; ಕಾಮಗಾರಿ ಮುಗಿಸದೆ ಟೋಲ್ ಸಂಗ್ರಹ ಏಕೆ? ಗುತ್ತಿಗೆದಾರ ಕಂಪನಿಗೆ ಸಿಎಂ ತರಾಟೆ

Mamata Banerjee
ದೇಶ2 hours ago

Mamata Banerjee: ‘ನಾನು ಕಾಫಿರ್‌ ಅಲ್ಲ’ ಎಂದ ಮಮತಾ ಬ್ಯಾನರ್ಜಿಗೆ ಬಿಜೆಪಿ ತಿರುಗೇಟು; ಏನಿದು ವಿವಾದ?

Joe Root
ಪ್ರಮುಖ ಸುದ್ದಿ2 hours ago

Joe Root : ವೆಸ್ಟ್​ ಇಂಡೀಸ್ ವಿರುದ್ಧ ಶತಕ ಬಾರಿಸಿ ಸ್ಟೀವ್​ ವಾ ದಾಖಲೆ ಸರಿಗಟ್ಟಿದ ಜೋ ರೂಟ್​

ಕರ್ನಾಟಕ2 hours ago

Karnataka Rain: ಮಳೆ ಅನಾಹುತ; ಜೀವ, ಬೆಳೆ ಹಾನಿಯ ವರದಿ ಕೂಡಲೇ ಸಲ್ಲಿಸುವಂತೆ ಸಿಎಂ ಸೂಚನೆ

Paris Olympics 2024 :
ಕ್ರೀಡೆ3 hours ago

Paris Olympics 2024 : ಒಲಿಂಪಿಕ್ಸ್​ ಸ್ಪರ್ಧೆಗೆ ಹೊರಟಿರುವ ಅಥ್ಲೀಟ್​ಗೆ 8.5 ಕೋಟಿ ರೂ. ಪ್ರೋತ್ಸಾಹಧನ ನೀಡಿದ ಬಿಸಿಸಿಐ

ಕರ್ನಾಟಕ3 hours ago

Renaming Ramanagara: ರಾಮನಗರದಲ್ಲಿ ಬೆಂಗಳೂರಿನ ಕಸ ಸುರಿಯಲು ಹುನ್ನಾರ: ಎಚ್‌.ಡಿ. ಕುಮಾರಸ್ವಾಮಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌