Budget Session 2024: ಇಂದಿನಿಂದ ಬಜೆಟ್‌ ಅಧಿವೇಶನ; ಕೇಂದ್ರಕ್ಕೆ ಸೆಡ್ಡು ಹೊಡೆಯಲು ಪ್ರತಿಪಕ್ಷಗಳು ಸಜ್ಜು - Vistara News

ದೇಶ

Budget Session 2024: ಇಂದಿನಿಂದ ಬಜೆಟ್‌ ಅಧಿವೇಶನ; ಕೇಂದ್ರಕ್ಕೆ ಸೆಡ್ಡು ಹೊಡೆಯಲು ಪ್ರತಿಪಕ್ಷಗಳು ಸಜ್ಜು

Budget Session 2024: ಜುಲೈ 22ರಿಂದ ಆರಂಭವಾಗುವ ಬಜೆಟ್‌ ಅಧಿವೇಶನವು ಆಗಸ್ಟ್‌ 12ರವರೆಗೆ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ. ಅಧಿವೇಶನದಲ್ಲಿ 16 ಕಲಾಪಗಳು ನಡೆಯಲಿವೆ. ಮತ್ತೊಂದೆಡೆ, ಸಾಲು ಸಾಲು ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಇಂಡಿಯಾ ಒಕ್ಕೂಟವು ಸಜ್ಜಾಗಿದೆ.

VISTARANEWS.COM


on

Budget Session 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನವು (Budget Session 2024) ಇಂದಿನಿಂದ (ಜುಲೈ 22) ಆರಂಭವಾಗಲಿದ್ದು, ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಮಂಡಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಸಜ್ಜಾಗಿದ್ದಾರೆ. ಇನ್ನು, ಪ್ರತಿಪಕ್ಷಗಳೂ ಅಷ್ಟೇ, ದೇಶದ ಪ್ರಮುಖ ವಿಷಯಗಳನ್ನು ಇಟ್ಟುಕೊಂಡು ಸಂಸತ್ತಿನಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗಿವೆ. ಹಾಗಾಗಿ, ಬಜೆಟ್‌ ಅಧಿವೇಶನವು ತೀವ್ರ ಕುತೂಹಲ ಕೆರಳಿಸಿದೆ.

ಇಂದಿನಿಂದ ಆರಂಭವಾಗುವ ಬಜೆಟ್‌ ಅಧಿವೇಶನವು ಆಗಸ್ಟ್‌ 12ರವರೆಗೆ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ. ಅಧಿವೇಶನದಲ್ಲಿ 16 ಕಲಾಪಗಳು ನಡೆಯಲಿವೆ. ಸೋಮವಾರವೇ ಆರ್ಥಿಕ ಸಮೀಕ್ಷೆ ಪ್ರಕಟಿಸಲಾಗುತ್ತದೆ. ಅಧಿವೇಶನದ ವೇಳೆ ಕೇಂದ್ರ ಸರ್ಕಾರವು ವಿಪತ್ತು ನಿರ್ವಹಣಾ (ತಿದ್ದುಪಡಿ) ವಿಧೇಯಕ, ಭಾರತೀಯ ವಾಯುಯಾನ ವಿಧೇಯಕ ಸೇರಿ ಒಟ್ಟು ಆರು ವಿಧೇಯಕಗಳನ್ನು ಮಂಡಿಸಲಿದೆ ಎಂದು ತಿಳಿದುಬಂದಿದೆ.

Union Budget 2024

ಪ್ರತಿಪಕ್ಷಗಳ ಮುಂದಿರುವ ವಿಷಯಗಳು ಯಾವವು?

ಸಾಲು ಸಾಲು ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಇಂಡಿಯಾ ಒಕ್ಕೂಟವು ಸಜ್ಜಾಗಿದೆ. ಅದರಲ್ಲೂ, ಮಣಿಪುರ ಹಿಂಸಾಚಾರ, ನೀಟ್‌ ಪ್ರಶ್ನೆಪತ್ರಿಕೆ ಪ್ರಕರಣ, ಬೆಲೆ ಏರಿಕೆ, ಯುಪಿಎಸ್‌ಸಿ ಅಕ್ರಮ ಸೇರಿ ಹಲವು ವಿಷಯಗಳನ್ನು ಪ್ರತಿಪಕ್ಷಗಳು ಚರ್ಚೆಗೆ ತರಲಿವೆ. ಸರ್ಕಾರಕ್ಕೆ ಚಾಟಿ ಬೀಸಲು ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರೂ ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.

India Bloc Meeting

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇಂದು ಪೂರ್ಣಪ್ರಮಾಣದ ಬಜೆಟ್‌ ಮಂಡಿಸುವ ಮೂಲಕ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Central Budget 2024: ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Nitish Kumar: ಬಿಹಾರಕ್ಕೆ ವಿಶೇಷ ಸ್ಥಾನಮಾನ ಕೊಡಲ್ಲ ಎಂದ ಮೋದಿ ಸರ್ಕಾರ; ನಿತೀಶ್‌ ಕುಮಾರ್‌ ಬಂಡಾಯ ನಿಶ್ಚಿತ?

Nitish Kumar: ಆರ್ಥಿಕ ಏಳಿಗೆ ಹಾಗೂ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ದಿಸೆಯಲ್ಲಿ ಬಿಹಾರ ಸೇರಿ ಹಲವು ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ ಎಂಬುದಾಗಿ ಜೆಡಿಯು ಸಂಸದರೊಬ್ಬರು ಕೇಳಿದ ಪ್ರಶ್ನೆಗೆ ಕೇಂದ್ರ ಸರ್ಕಾರವು ಖಡಾಖಂಡಿತವಾಗಿ ಇಲ್ಲ ಎಂದು ಉತ್ತರಿಸಿದೆ. ಇದು ಈಗ ಜೆಡಿಯುಗೆ ಉಂಟಾದ ಮುಖಭಂಗ ಎಂದೇ ಹೇಳಲಾಗುತ್ತಿದೆ.

VISTARANEWS.COM


on

Nitish Kumar
Koo

ನವದೆಹಲಿ: ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸರ್ಕಾರ ರಚನೆಗೆ ಪ್ರಮುಖ ಕಾರಣವಾಗಿರುವ, ಮೈತ್ರಿಕೂಟದ ಪ್ರಮುಖ ಮಿತ್ರಪಕ್ಷವಾದ ಜೆಡಿಯು ಹಾಗೂ ಅದರ ಮುಖ್ಯಸ್ಥ ನಿತೀಶ್‌ ಕುಮಾರ್‌ (Nitish Kumar) ಅವರಿಗೆ ಭಾರಿ ಹಿನ್ನಡೆಯಾಗಿದೆ. “ಬಿಹಾರಕ್ಕೆ ವಿಶೇಷ ಸ್ಥಾನಮಾನ (Bihar Special Status) ನೀಡುವ ಪ್ರಸ್ತಾವನೆಯೇ ನಮ್ಮ ಮುಂದೆ ಇಲ್ಲ” ಎಂಬುದಾಗಿ ಕೇಂದ್ರ ಹಣಕಾಸು ಸಚಿವಾಲಯವು (Finance Ministry) ಖಡಾಖಂಡಿತವಾಗಿ ಹೇಳಿದ್ದು, ಇದರಿಂದಾಗಿ ನಿತೀಶ್‌ ಕುಮಾರ್‌ ಬಂಡಾಯದ ಬಾವುಟ ಹಾರಿಸುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ.

“ಆರ್ಥಿಕ ಏಳಿಗೆ ಹಾಗೂ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ದಿಸೆಯಲ್ಲಿ ಬಿಹಾರ ಸೇರಿ ಹಲವು ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ” ಎಂಬುದಾಗಿ ಬಿಹಾರದ ಝಂಝಹರಪುರ ಕ್ಷೇತ್ರದ ಜೆಡಿಯು ಸಂಸದ ರಾಮ್‌ಪ್ರೀತ್‌ ಮಂಡಲ್‌ ಅವರು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಪ್ರಶ್ನೆ ಕೇಳಿದ್ದರು. ಇದಕ್ಕೆ, ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಪಂಕಜ್‌ ಚೌಧರಿ ಲಿಖಿತ ಪ್ರತಿಕ್ರಿಯೆ ನೀಡಿದ್ದು, “ಯಾವುದೇ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಪ್ರಸ್ತಾವನೆ ಕೇಂದ್ರದ ಮುಂದಿಲ್ಲ” ಎಂದಿದ್ದಾರೆ.

“ಯಾವುದೇ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಲು ಹಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ. ಅತಿಯಾಗಿ ಹಿಂದುಳಿದ ರಾಜ್ಯಗಳಿಗೆ, ಗುಡ್ಡಗಾಡು ಪ್ರದೇಶದ ರಾಜ್ಯಗಳು, ಆರ್ಥಿಕವಾಗಿ ಹಿನ್ನಡೆಯಲ್ಲಿರುವ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸಲಾಗುತ್ತದೆ. ಹಾಗಾಗಿ, ಬಿಹಾರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಪ್ರಸ್ತಾವನೆ ಇಲ್ಲ” ಎಂಬುದಾಗಿ ಪಂಕಜ್‌ ಚೌಧರಿ ತಿಳಿಸಿದ್ದಾರೆ. 12 ಸಂಸದರನ್ನು ಹೊಂದಿರುವ ಜೆಡಿಯು, ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಕಾರಣ ಬಿಹಾರಕ್ಕೆ ವಿಶೇಷ ಸ್ಥಾನಮಾನ ಸಿಗುತ್ತದೆ ಎಂದೇ ಹೇಳಲಾಗುತ್ತಿತ್ತು. ಆದರೀಗ, ಜೆಡಿಯುಗೆ ಮುಖಭಂಗ ಉಂಟಾಗಿದೆ.

ಮೈತ್ರಿಧರ್ಮ ನೆನಪಿಸಿದ ಜೆಡಿಯು

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಲು ಆಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ ಬೆನ್ನಲ್ಲೇ, ಕೇಂದ್ರ ಸರ್ಕಾರಕ್ಕೆ ಜೆಡಿಯು ಮೈತ್ರಿಧರ್ಮವನ್ನು ನೆನಪಿಸಿದೆ ಎಂದು ತಿಳಿದುಬಂದಿದೆ. ಮೈತ್ರಿಕೂಟದ ಪಕ್ಷಗಳು, ಆ ಪಕ್ಷಗಳು ಆಡಳಿತ ನಡೆಸುವ ರಾಜ್ಯಗಳ ಹಿತಾಸಕ್ತಿಯಿಂದ ಬಿಜೆಪಿಯು ವರ್ತಿಸಬೇಕು. ಮೈತ್ರಿಧರ್ಮವನ್ನು ಪಾಲಿಸಬೇಕು ಎಂಬುದಾಗಿ ಜೆಡಿಯು ಸಂದೇಶ ರವಾನಿಸಿದೆ ಎನ್ನಲಾಗಿದೆ. ಇನ್ನು, ನಿತೀಶ್‌ ಕುಮಾರ್‌ ಅವರು ಯಾವ ತೀರ್ಮಾನ ತೆಗೆದುಕೊಳ್ಳಲಿದ್ದಾರೆ? ಬಂಡಾಯ ಏಳಲಿದ್ದಾರಾ? ರಾಜ್ಯದಲ್ಲಿ ಪ್ರತಿಪಕ್ಷಗಳನ್ನು ಜೆಡಿಯು ಹೇಗೆ ಹೆದರಿಸುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: Special Status: ಬಿಹಾರಕ್ಕೆ ಇಲ್ಲ ವಿಶೇಷ ಸ್ಥಾನಮಾನ; ನಿತೀಶ್‌ ಕುಮಾರ್‌ ರಾಜೀನಾಮೆಗೆ ಆರ್‌ಜೆಡಿ ಆಗ್ರಹ

Continue Reading

ದೇಶ

You Tube : ಮೈಕ್ರೋಸಾಫ್ಟ್​ ಸಮಸ್ಯೆ ಬಳಿಕ ಇದೀಗ ಯೂಟ್ಯೂಬ್​​ನಲ್ಲೂ ತಾಂತ್ರಿಕ ದೋಷ!

You Tube : ಯೂಟ್ಯೂಬ್​ನಲ್ಲಿ ಕೆಲವು ಬಳಕೆದಾರರು ತಮ್ಮ ಫೀಡ್​ನಲ್ಲಿ ಸಮಸ್ಯೆಗಳ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಒಂದು ವೀಡಿಯೊ ಅಪ್ಲೋಡ್ ಮಾಡಿದ ವೀಡಿಯೊಗಳನ್ನು ಫೀಡ್​​ನಲ್ಲಿ ತೋರಿಸುತ್ತಿಲ್ಲ ಎಂದು ಹೇಳಿದರೆ, ಮತ್ತೊಂದು ವಿಡಿಯೊದಲ್ಲಿ ವಿಡಿಯೊಗಳನ್ನು ಅಪ್ಲೋಡ್ ಮಾಡಲಾಗುತ್ತಿಲ್ಲ ಎಂದು ಹೇಳಲಾಗಿದೆ.

VISTARANEWS.COM


on

YouTube
Koo

ಬೆಂಗಳೂರು: ಕೆಲವು ದಿನಗಳ ಹಿಂದೆ ವಿಶ್ವಾದ್ಯಂತ ಮಕ್ರೊಸಾಫ್ಟ್​​ ಬಳಕೆದಾರರು ಸಮಸ್ಯೆ ಎದುರಿಸಿದ್ದರು. ಅಂತೆಯೇ ಸೋಮವಾರ ಯೂಟ್ಯೂಬ್ (You Tube) ಬಳಕೆದಾರರು ಸಮಸ್ಯೆಗಳನ್ನು ಎದುರಿಸಿದ್ದಾರೆ. ಯೂಟ್ಯೂಬ್ ಅಪ್ಲಿಕೇಶನ್, ವೆಬ್​ಸೈಟ್​ನಲ್ಲಿ ಸ್ಟ್ರೀಮಿಂಗ್ ಸಮಸ್ಯೆ ಮತ್ತು ವೀಡಿಯೊ ಅಪ್ಲೋಡ್ ಮಾಡಲು ತೊಂದರೆಗಳಾಗಿವೆ. ಸೋಮವಾರ ಮಧ್ಯಾಹ್ನ 1.30 ರಿಂದ ಡೌನ್ ಡೆಟೆಕ್ಟರ್ ಅಪ್ಲಿಕೇಶನ್​​ನಲ್ಲಿ ಸಮಸ್ಯೆಗಳು ಆರಂಭಗೊಂಡಿವೆ. ಮಧ್ಯಾಹ್ನ 3.15 ಕ್ಕೆ ಸಮಸ್ಯೆ ಹೆಚ್ಚಾಗಿದೆ. ವೆಬ್​ಸೈಟ್​ ಪ್ರಕಾರ ವರದಿ ಮಾಡಿದ 43 ಪ್ರತಿಶತದಷ್ಟು ಬಳಕೆದಾರರು ಅಪ್ಲಿಕೇಶನ್​ನಲ್ಲಿ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. 33 ಪ್ರತಿಶತದಷ್ಟು ಬಳಕೆದಾರರು ವೀಡಿಯೊ ಅಪ್ಲೋಡ್ ಮಾಡಲು ತೊಂದರೆ ಎದುರಿಸುತ್ತಿದ್ದಾರೆ 23 ಪ್ರತಿಶತದಷ್ಟು ಜನರು ಯೂಟ್ಯೂಬ್ ವೆಬ್​ಸೈಟ್​ನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರಸ್ತುತ ಸಮಸ್ಯೆ ಏನು ಎಂದು ತಿಳಿದಿಲ್ಲ. ಯೂಟ್ಯೂಬ್ ಸಪೋರ್ಟ್​​ ಪುಟದಲ್ಲಿ ಅಥವಾ ಅದರ ಸಾಮಾಜಿಕ ಮಾಧ್ಯಮ ಚಾನೆಲ್​​​​​ಗಳಲ್ಲಿ ಯಾವುದೇ ವಿಷಯ ಪ್ರಕಟಿಸಿಲ್ಲ. ಸಣ್ಣ ದೋಷವಾಗಿದ್ದು, ಅದನ್ನು ಶೀಘ್ರದಲ್ಲೇ ಪರಿಹರಿಸುವುದಾಗಿ ಹೇಳಿದೆ.

ಯೂಟ್ಯೂಬ್​ನಲ್ಲಿ ಕೆಲವು ಬಳಕೆದಾರರು ತಮ್ಮ ಫೀಡ್​ನಲ್ಲಿ ಸಮಸ್ಯೆಗಳ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಒಂದು ವೀಡಿಯೊ ಅಪ್ಲೋಡ್ ಮಾಡಿದ ವೀಡಿಯೊಗಳನ್ನು ಫೀಡ್​​ನಲ್ಲಿ ತೋರಿಸುತ್ತಿಲ್ಲ ಎಂದು ಹೇಳಿದರೆ, ಮತ್ತೊಂದು ವಿಡಿಯೊದಲ್ಲಿ ವಿಡಿಯೊಗಳನ್ನು ಅಪ್ಲೋಡ್ ಮಾಡಲಾಗುತ್ತಿಲ್ಲ ಎಂದು ಹೇಳಲಾಗಿದೆ.

ಎಕ್ಸ್​​ನಲ್ಲಿ ಪೋಸ್ಟ್ ಗಳನ್ನು ನೋಡಿದರೆ ಸಮಸ್ಯೆ ವ್ಯಾಪಕವಾದಂತೆ ಕಾಣುತ್ತಿಲ್ಲ. ಇದು ಸಣ್ಣ ಪ್ರಮಾಣದ ಜನರ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ. ಯುಟ್ಯೂಬ್ ಭಾರತದಲ್ಲಿ ಹಲವಾರು ಬಳಕೆದಾರರಿಗೆ ಸ್ಥಗಿತ ಅನುಭವಿಸುತ್ತಿದೆ ಎಂದು ವರದಿಯಾಗಿದೆ. ಬೆಳಗ್ಗೆ ಈ ಬಗ್ಗೆ ಸುದ್ದಿಯಾಗಿದ್ದು ಸಂಜೆಯ ತನಕವೂ ಮುಂದುವರಿತ್ತು.

ಯೂಟ್ಯೂಬ್ ನ ಪ್ರತಿಕ್ರಿಯೆ

ಯೂಟ್ಯೂಬ್ ಡೌನ್​​ನಲ್ಲಿ ಹಲವಾರು ಪೋಸ್ಟ್​​ಗಳು ಮತ್ತು ಟ್ರೆಂಡಿಂಗ್ ಹ್ಯಾಶ್​ಟ್ಯಾಗ್​​ಗಳ ಬಳಿಕ ಕಂಪನಿಯು ಅಧಿಕೃತ ಟೀಮ್​ ಯೂಟ್ಯೂಬ್​​ನಲ್ಲಿ ಪ್ರತಿಕ್ರಿಯೆ ನೀಡಿದೆ. ಇದನ್ನು ಫ್ಲ್ಯಾಗ್ ಮಾಡಿದ್ದಕ್ಕಾಗಿ ಧನ್ಯವಾದಗಳು. ನಾವು ವಿಷಯವನ್ನು ಪರಿಶೀಲಿಸುತ್ತಿದ್ದೇವೆ. ಯಾವುದೇ ಹೆಚ್ಚುವರಿ ಮಾಹಿತಿ ಬೇಕಾದರೆ ನಿಮ್ಮನ್ನು ಸಂಪರ್ಕಿಸುತ್ತೇವೆ ಎಂದು ಬರೆಯಲಾಗಿದೆ.

ಸಂಭಾವ್ಯ ಕಾರಣವೇನು?

ಯೂಟ್ಯೂಬ್ ಸ್ಥಗಿತಕ್ಕೆ ನಿಖರ ಕಾರಣ ತಿಳಿದಿಲ್ಲವಾದರೂ ಸಾಮಾನ್ಯ ಸಮಸ್ಯೆಗಳಲ್ಲಿ ಸರ್ವರ್ ಸಮಸ್ಯೆಗಳು, ನಿರ್ವಹಣಾ ಚಟುವಟಿಕೆಗಳು ಅಥವಾ ನೆಟ್ವರ್ಕ್ ಸಮಸ್ಯೆಗಳು ಸೇರಿಕೊಂಡಿವೆ ಎನ್ನಲಾಗಿದೆ. ಸ್ಥಳೀಯ ಇಂಟರ್ನೆಟ್ ಸೇವಾ ಪೂರೈಕೆದಾರರು (ಐಎಸ್​ ಗಳು) ಕೂಡ ಯೂಟ್ಯೂಬ್​ ಸಮಸ್ಯೆಗೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಅಂಗಡಿ ಮಾಲೀಕರ ಹೆಸರು ಪ್ರದರ್ಶನಕ್ಕೆ ಸೂಚಿಸಿಲ್ಲ; ಮಧ್ಯಪ್ರದೇಶ ಸರ್ಕಾರ ಸ್ಪಷ್ಟನೆ

ಏನು ಮಾಡಬೇಕು?

ಯೂಟ್ಯೂಬ್ ಸ್ಥಗಿತದಿಂದ ಬಾಧಿತರಾದ ಬಳಕೆದಾರರು ತಮ್ಮ ಸಾಧನಗಳಲ್ಲಿ ಈ ಕೆಳಗಿನ ಪ್ರಯತ್ನಗಳನ್ನು ಮಾಡಬಹುದು

ಕ್ಯಾಶ್ ಮತ್ತು ಕುಕೀಗಳನ್ನು ಅಳಿಸಿ ಕೆಲವೊಮ್ಮೆ, ನಿಮ್ಮ ಬ್ರೌಸರ್ ನ ಕ್ಯಾಶ್ ಮತ್ತು ಕುಕೀಗಳನ್ನು ತೆರವುಗೊಳಿಸುವುದರಿಂದ ವೆಬ್ ಸೈಟ್ ನ ಲೋಡಿಂಗ್ ಸಮಸ್ಯೆಗಳನ್ನು ಪರಿಹರಿಸಬಹುದು.

ಇಂಟರ್ನೆಟ್ ಸಂಪರ್ಕ ಪರಿಶೀಲಿಸಿ: ಇಂಟರ್ನೆಟ್ ಸಂಪರ್ಕ ಸರಿಯಾಗಿ ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ.

ಪರ್ಯಾಯ ನೆಟ್ವರ್ಕ್​​ ಬಳಸಿ: ಇದು ಡಿವೈಸ್​ ಆಧಾರಿತ ಸಮಸ್ಯೆಯೇ ಅಥವಾ ಒಟ್ಟು ಸಮಸ್ಯೆಯೇ ಎಂದು ಪರಿಶೀಲಿಸಲು ಬೇರೆ ಸಾಧನದಿಂದ ಯೂಟ್ಯೂಬ್​ಗೆ ಲಾಗ್​ ಇನ್​​ ಆಗಿ.

ಯೂಟ್ಯೂಬ್ ಹೊಸ ಎಐ-ಕೇಂದ್ರಿತ ಮಾರ್ಗಸೂಚಿಗಳು ಮತ್ತು ಅಪ್​ಡೇಟ್​ಗಳನ್ನು ತಂದಿದೆ. ಇದು ಬಳಕೆದಾರರಿಗೆ ಎಐ-ರಚಿಸಿದ ವೀಡಿಯೊಗಳನ್ನು ಗುರುತಿಸಲು ಮತ್ತು ವರದಿ ಮಾಡಲು ಅನುವು ಮಾಡಿಕೊಡುತ್ತದೆ. ಈ ಅಪ್​ಡೇಟ್​ಗಳು ಎಐ ಟೂಲ್​ ಬಳಸಿ ವೀಡಿಯೊ ಮಾಡಿದ್ದರೆ ಪತ್ತೆ ಹಚ್ಚುತ್ತದೆ. ಎಚ್ಚರಿಕೆಯನ್ನು ಪಡೆಯಲು ನೆರವಾಗುತ್ತದೆ.

Continue Reading

ದೇಶ

Special Status: ಬಿಹಾರಕ್ಕೆ ಇಲ್ಲ ವಿಶೇಷ ಸ್ಥಾನಮಾನ; ನಿತೀಶ್‌ ಕುಮಾರ್‌ ರಾಜೀನಾಮೆಗೆ ಆರ್‌ಜೆಡಿ ಆಗ್ರಹ

Special Status: ಇನ್ನು ಈ ಬಗ್ಗೆ ಲೋಕಸಭೆಯಲ್ಲಿ ಲಿಖಿತ ರೂಪದಲ್ಲಿ ಸರ್ಕಾರದ ಪರವಾಗಿ ಉತ್ತರಿಸಿದ ಕೇಂದ್ರ ಸಚಿವ ಪಂಕಜ್‌ ಚೌಧರಿ, ಎಲ್ಲಾ ಅಂಶಗಳ ಸಮಗ್ರ ಪರಿಗಣನೆ ಮತ್ತು ರಾಜ್ಯದ ವಿಲಕ್ಷಣ ಪರಿಸ್ಥಿತಿಯ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

VISTARANEWS.COM


on

Special Status
Koo

ಹೊಸದಿಲ್ಲಿ: ಈ ಬಾರಿ ಹಲವು ನಿರೀಕ್ಷೆಗಳೊಂದಿಗೆ ಮತ್ತೆ ಎನ್‌ಡಿಎ ಜೊತೆ ಮೈತ್ರಿ ಮಾಡಿಕೊಂಡಿರುವ ನಿತೀಶ್‌ ಕುಮಾರ್‌(Nithish Kumar) ನೇತೃತ್ವದ ಜೆಡಿ(ಯು)(JDU)ಗೆ ಆರಂಭದಲ್ಲಿ ಶಾಕ್‌ ಎದುರಾಗಿದ್ದು, ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಇತ್ತೀಚೆಗಷ್ಟೇ ಜೆಡಿಯು ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ದಶಕದ ಬೇಡಿಕೆಯಾಗಿರುವ ಬಿಹಾರಕ್ಕೆ ವಿಶೇಷ ಸ್ಥಾನಮಾನದ(Special Status) ನಿರ್ಣಯವನ್ನು ಅಂಗೀಕಾರ ಮಾಡಲಾಗಿತ್ತು. ಆದರೆ ದಶಕದ ಬೇಡಿಕೆಗೆ ಕೇಂದ್ರದಿಂದ ಈ ಬಾರಿಯೂ ಗ್ರೀನ್‌ ಸಿಗ್ನಲ್‌ ಸಿಕ್ಕಿಲ್ಲ.

ಇನ್ನು ಈ ಬಗ್ಗೆ ಲೋಕಸಭೆಯಲ್ಲಿ ಲಿಖಿತ ರೂಪದಲ್ಲಿ ಸರ್ಕಾರದ ಪರವಾಗಿ ಉತ್ತರಿಸಿದ ಕೇಂದ್ರ ಸಚಿವ ಪಂಕಜ್‌ ಚೌಧರಿ, ಎಲ್ಲಾ ಅಂಶಗಳ ಸಮಗ್ರ ಪರಿಗಣನೆ ಮತ್ತು ರಾಜ್ಯದ ವಿಲಕ್ಷಣ ಪರಿಸ್ಥಿತಿಯ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಕ್ಕೂ ಮೊದಲು, ವಿಶೇಷ ವರ್ಗದ ಸ್ಥಾನಮಾನಕ್ಕಾಗಿ ಬಿಹಾರದ ವಿನಂತಿಯನ್ನು ಅಂತರ್-ಸಚಿವಾಲಯ ಗುಂಪು (IMG) ಪರಿಗಣಿಸಿತ್ತು, ಅದು ಮಾರ್ಚ್ 30, 2012 ರಂದು ತನ್ನ ವರದಿಯನ್ನು ಸಲ್ಲಿಸಿತು. NDC ಮಾನದಂಡಗಳನ್ನು ಪರಿಗಣಿಸಿ ಬಿಹಾರಕ್ಕೆ ಸ್ಥಾನಮಾನ ನೀಡಲಾಗುವುದಿಲ್ಲ ಎಂದಿದ್ದಾರೆ.

ಜೆಡಿಯು ಸದಸ್ಯ ರಾಮಪ್ರೀತ್ ಮಂಡಲ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಚೌಧರಿ, ಪ್ರಸ್ತುತ ಮಾನದಂಡಗಳಲ್ಲಿ ಗುಡ್ಡಗಾಡು ಮತ್ತು ಕಷ್ಟಕರವಾದ ಭೂಪ್ರದೇಶ, ಕಡಿಮೆ ಜನಸಂಖ್ಯಾ ಸಾಂದ್ರತೆ ಅಥವಾ ಬುಡಕಟ್ಟು ಜನಸಂಖ್ಯೆ ಗಮನಾರ್ಹವಾಗಿದೆ. ಮೇಲೆ ಪಟ್ಟಿ ಮಾಡಲಾದ ಎಲ್ಲಾ ಅಂಶಗಳ ಸಮಗ್ರ ಪರಿಗಣನೆ ಮತ್ತು ರಾಜ್ಯದ ವಿಚಿತ್ರ ಪರಿಸ್ಥಿತಿಯ ಆಧಾರದ ಮೇಲೆ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಆದಾಗ್ಯೂ, ಈ ಹಿಂದೆ, 14 ನೇ ಹಣಕಾಸು ಆಯೋಗದ ವರದಿಯು ಯಾವುದೇ ರಾಜ್ಯಗಳಿಗೆ ವಿಶೇಷ ವರ್ಗದ ಸ್ಥಾನಮಾನವನ್ನು ನೀಡುವ ಸಾಧ್ಯತೆಯನ್ನು ತಳ್ಳಿಹಾಕಿದೆ ಎಂದು ಸರ್ಕಾರ ವಾದಿಸಿದೆ. ವಿಶೇಷ ಸ್ಥಾನಮಾನದಲ್ಲಿ ತೆರಿಗೆ ವಿನಾಯಿತಿ ಮತ್ತು ಫಲಾನುಭವಿ ರಾಜ್ಯಗಳಿಗೆ ಹೆಚ್ಚಿನ ಕೇಂದ್ರ ಧನಸಹಾಯ ಸೇರಿವೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ (ಜುಲೈ 23) ಕೇಂದ್ರ ಬಜೆಟ್ ಮಂಡಿಸಲಿರುವ ಅಧಿವೇಶನದ ಆರಂಭಕ್ಕೆ ಒಂದು ದಿನ ಮೊದಲು, ಜೆಡಿಯು, ವೈಎಸ್‌ಆರ್‌ಸಿಪಿ ಮತ್ತು ಬಿಜೆಡಿ ಬಿಹಾರ, ಆಂಧ್ರಪ್ರದೇಶ ಮತ್ತು ಒಡಿಶಾಗೆ ವಿಶೇಷ ವರ್ಗದ ಸ್ಥಾನಮಾನಕ್ಕೆ ಒತ್ತಾಯಿಸಿದವು. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಸಭೆ ನಡೆದಿದ್ದು, ಜೆಡಿಯು(JD(U), ವೈಎಸ್‌ಆರ್‌ಪಿ(YSRCP) ಮತ್ತು ಬಿಜೆಡಿ(BJD) ಬಿಹಾರ ಆಂಧ್ರಪ್ರದೇಶ ಮತ್ತು ಒಡಿಶಾಗೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿವೆ.

ಸರ್ವಪಕ್ಷಗಳ ಸಭೆಯಲ್ಲಿ ಬಿಹಾರಕ್ಕೆ ವಿಶೇಷ ವರ್ಗದ ಸ್ಥಾನಮಾನದ ಬೇಡಿಕೆಯು ಆಡಳಿತಾರೂಢ ಎನ್‌ಡಿಎ(NDA) ಮತ್ತು ಐಎನ್‌ಡಿಐಎ(INDIA)ಯ ಮಿತ್ರಪಕ್ಷಗಳು ಬೇಡಿಕೆ ಇಟ್ಟಿವೆ. ಬಿಹಾರದ ವಿಶೇಷ ಸ್ಥಾನಮಾನದ ಬಗ್ಗೆ ಜೆಡಿಯುನ ಸಂಜಯ್‌ ಝಾ ಮತ್ತು ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ ಕೂಡ ಬ್ಯಾಟಿಂಗ್‌ ನಡೆಸಿದ್ದಾರೆ. ಅದರಿಗೆ ಆರ್‌ಜೆಡಿಗೆ ಬೆಂಬಲ ಸೂಚಿಸಿತ್ತು. ಒಂದು ವೇಳೆ ವಿಶೇಷ ಸ್ಥಾನಮಾನ ನೀಡಲು ಸಾಧ್ಯವಾಗದೇ ಇದ್ದಲ್ಲಿ ವಿಶೇಷ ಹಣಕಾಸು ನೆರವು ನೀಡಬಹುದು ಎಂದು ಝಾ ಹೇಳಿದ್ದಾರೆ.

ಇದನ್ನೂ ಓದಿ:Special Status: ಬಜೆಟ್‌ ಅಧಿವೇಶನಕ್ಕೂ ಮುನ್ನ ಸರ್ವಪಕ್ಷಗಳ ಸಭೆ; ವಿಶೇಷ ಸ್ಥಾನಮಾನಕ್ಕೆ ರಾಜ್ಯಗಳ ಬೇಡಿಕೆ

Continue Reading

ದೇಶ

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಅಂಗಡಿ ಮಾಲೀಕರ ಹೆಸರು ಪ್ರದರ್ಶನಕ್ಕೆ ಸೂಚಿಸಿಲ್ಲ; ಮಧ್ಯಪ್ರದೇಶ ಸರ್ಕಾರ ಸ್ಪಷ್ಟನೆ

Kanwar Yatra: ರಾಜ್ಯದಲ್ಲಿ ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿನ ಅಂಗಡಿ ಮಾಲೀಕರು ತಮ್ಮ ಹೆಸರುಗಳನ್ನು ಪ್ರದರ್ಶಿಸುವಂತೆ ಯಾವುದೇ ಸೂಚನೆಗಳನ್ನು ನೀಡಿಲ್ಲ ಎಂದು ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಸ್ಪಷ್ಟಪಡಿಸಿದೆ. ಕನ್ವರ್ ಯಾತ್ರೆ ಶ್ರಾವಣ ಮಾಸದಲ್ಲಿ ನಡೆಯುತ್ತದೆ. ಇಂದು ಪ್ರಾರಂಭವಾಗಿರುವ ಈ ಯಾತ್ರೆ ಆಗಸ್ಟ್ 2ರವರೆಗೆ ನಡೆಯಲಿದೆ. ಈ ಯಾತ್ರೆಯ ಮೂಲಕ ಶಿವಭಕ್ತರು ಹರಿದ್ವಾರದಿಂದ ಪುಣ್ಯ ತೀರ್ಥ ತಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಮಾರ್ಗವಾಗಿ ತೆರಳುತ್ತಾರೆ. 

VISTARANEWS.COM


on

Kanwar Yatra
Koo

ಭೋಪಾಲ್‌: ರಾಜ್ಯದಲ್ಲಿ ಕನ್ವರ್ ಯಾತ್ರೆ (Kanwar Yatra) ಸಾಗುವ ಮಾರ್ಗದಲ್ಲಿನ ಅಂಗಡಿ ಮಾಲೀಕರು ತಮ್ಮ ಹೆಸರುಗಳನ್ನು ಪ್ರದರ್ಶಿಸುವಂತೆ ಯಾವುದೇ ಸೂಚನೆಗಳನ್ನು ನೀಡಿಲ್ಲ ಎಂದು ಮಧ್ಯಪ್ರದೇಶ (Madhya Pradesh)ದ ಬಿಜೆಪಿ ಸರ್ಕಾರ ಸ್ಪಷ್ಟಪಡಿಸಿದೆ.

ಯಾತ್ರೆ ಸಾಗುವ ಮಾರ್ಗದಲ್ಲಿನ ಹೋಟೆಲ್ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕೆಂಬ ಉತ್ತರ ಪ್ರದೇಶದ ಆದೇಶ ವಿವಾದದ ಹುಟ್ಟು ಹಾಕಿದ ಬೆನ್ನಲ್ಲೇ ಮಧ್ಯಪ್ರದೇಶ ಸರ್ಕಾರ ಈ ಸ್ಪಷ್ನೆ ನೀಡಿದ್ದು, ಯಾವುದೇ ಗೊಂದಲವನ್ನು ಹರಡದಂತೆ ನಗರ ಸಂಸ್ಥೆಗಳಿಗೆ ಸೂಚಿಸಿದೆ. ಅಂಗಡಿ ಮಾಲೀಕರಿಗೆ ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಗಳನ್ನು ಬೋರ್ಡ್‌ಗಳಲ್ಲಿ ಪ್ರದರ್ಶಿಸಲು ನಿರ್ದೇಶಿಸಲಾಗಿದೆ ಎಂದು ಉಜ್ಜಯಿನಿ ಮೇಯರ್ ಹೇಳಿದ ಕೆಲವು ದಿನಗಳ ನಂತರ ನಗರಾಭಿವೃದ್ಧಿ ಮತ್ತು ವಸತಿ ಇಲಾಖೆ (UDHD) ಭಾನುವಾರ ರಾತ್ರಿ ಈ ಹೇಳಿಕೆ ಬಿಡುಗಡೆ ಮಾಡಿದೆ.

ನಗರ ಪ್ರದೇಶಗಳಲ್ಲಿನ ಕನ್ವರ್ ಯಾತ್ರಾ ಮಾರ್ಗಗಳಲ್ಲಿನ ಅಂಗಡಿ ಮಾಲೀಕರು ತಮ್ಮ ಹೆಸರಿನ ಬೋರ್ಡ್‌ ಅಳವಡಿಸುವಂತೆ ರಾಜ್ಯ ಸರ್ಕಾರ ಯಾವುದೇ ಸೂಚನೆಗಳನ್ನು ನೀಡಿಲ್ಲ ಎಂದು ಯುಡಿಎಚ್‌ಡಿ ಸ್ಟಷ್ಟಪಡಿಸಿದೆ. ಉಜ್ಜಯಿನಿ ಮೇಯರ್ ಮುಖೇಶ್ ತತ್ವಾಲ್ ಅವರು ಕಳೆದ ವಾರ, ಎರಡು ವರ್ಷಗಳ ಹಿಂದಿನ ಮೇಯರ್-ಇನ್-ಕೌನ್ಸಿಲ್‌ನ ನಿರ್ಧಾರವನ್ನು ಉಲ್ಲೇಖಿಸಿ, ಅಂಗಡಿಯ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸುವ ಪ್ರಸ್ತಾಪವನ್ನು ಅನುಮೋದಿಸಲಾಗಿದೆ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕಯನ್ನು ಖಂಡಿಸಿದ ಯುಡಿಎಚ್‌ಡಿ, ಕನ್ವರ್ ಯಾತ್ರೆಗೆ ಸಂಬಂಧಿಸಿದ ಹರಡಿಸುವ ಈ ಗೊಂದಲಗಳನ್ನು ಬಗೆಹರಿಸುವಂತೆ ನಗರ ಸಂಸ್ಥೆಗಳಿಗೆ ಸೂಚನೆ ನೀಡಿದೆ. ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಷನ್ ಕೂಡ ನಗರದ ಅಂಗಡಿ ಫಲಕಗಳಲ್ಲಿ ಹೆಸರು ಮತ್ತು ಫೋನ್ ಸಂಖ್ಯೆಗಳನ್ನು ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ತಿಳಿಸಿದೆ.

ಸುಪ್ರೀಂ ಕೋರ್ಟ್‌ನಿಂದ ತಡೆ

ಈ ಮಧ್ಯೆ ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿನ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಹೊರಡಿಸಿದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ನಾಮ ಫಲಕ ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶ ಪ್ರಶ್ನಿಸಿ ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆಯ ಎನ್‌ಜಿಒವೊಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್‌ ರಾಯ್‌ ಮತ್ತು ಎಸ್‌ವಿಎನ್‌ ಭಟ್ಟಿ ಇರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆ ನಡೆಯವವರೆಗೆ ತಡೆಯಾಜ್ಞೆ ಹೊರಡಿಸುವುದಾಗಿ ಹೇಳಿದೆ. ಪೊಲೀಸರು ನಾಮಫಲಕ ಅಳವಡಿಸಿ ಎಂದು ವ್ಯಾಪಾರಿಗಳನ್ನು ಒತ್ತಾಯಿಸಲು ಸಾಧ್ಯವಿಲ್ಲ ಎಂದಿರುವ ಕೋರ್ಟ್‌, ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

ಇಂದು ಆರಂಭ

ಕನ್ವರ್ ಯಾತ್ರೆ ಶ್ರಾವಣ ಮಾಸದಲ್ಲಿ ನಡೆಯುತ್ತದೆ. ಇಂದು ಪ್ರಾರಂಭವಾಗಿರುವ ಈ ಯಾತ್ರೆ ಆಗಸ್ಟ್ 2ರವರೆಗೆ ನಡೆಯಲಿದೆ. ಈ ಯಾತ್ರೆಯ ಮೂಲಕ ಶಿವಭಕ್ತರು ಹರಿದ್ವಾರದಿಂದ ಪುಣ್ಯ ತೀರ್ಥ ತಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಮಾರ್ಗವಾಗಿ ತೆರಳುತ್ತಾರೆ. 

ಇದನ್ನೂ ಓದಿ: Kanwar Yatra: ಕನ್ವರ್‌ ಯಾತ್ರೆ ವೇಳೆ ಅಂಗಡಿಗಳಿಗೆ ನಾಮ ಫಲಕ ಕಡ್ಡಾಯ ಆದೇಶಕ್ಕೆ ಸುಪ್ರೀಂ ತಡೆ

Continue Reading
Advertisement
karnataka Rain
ಮಳೆ1 min ago

Karnataka Rain : ಆಲದ ಮರ ಬಿದ್ದು ಆಟೋ ಜಖಂ, ಚಾಲಕ ಪಾರು; ನಾಳೆಗೂ ಗಾಳಿ-ಮಳೆ ಎಚ್ಚರ

Damage to furniture learning material by miscreants in government model school
ಉತ್ತರ ಕನ್ನಡ12 mins ago

Banavasi News: ಬನವಾಸಿಯ ಸರ್ಕಾರಿ ಮಾದರಿ ಶಾಲೆಯಲ್ಲಿ ಕಿಡಿಗೇಡಿಗಳಿಂದ ಕಲಿಕಾ ಸಾಮಗ್ರಿ ಹಾನಿ

Contact Lens Awareness
ಫ್ಯಾಷನ್13 mins ago

Contact Lens Awareness: ಶೋಕಿಗಾಗಿ ಕಾಂಟ್ಯಾಕ್ಟ್‌ ಲೆನ್ಸ್ ಧರಿಸುವವರೇ ಎಚ್ಚರ! ಈ 5 ಸಂಗತಿ ಗಮನದಲ್ಲಿರಲಿ

Viral News
ವೈರಲ್ ನ್ಯೂಸ್14 mins ago

Viral News: ಮಕ್ಕಳ ಹಸಿವು ನೀಗಿಸಲು ಸೈನಿಕರೆದುರು ಬೆತ್ತಲಾಗುತ್ತಿರುವ ಮಹಿಳೆಯರು!

Suraj Revanna Case
ಕರ್ನಾಟಕ37 mins ago

Suraj Revanna Case: ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌; 2ನೇ ಕೇಸ್‌ನಲ್ಲೂ ಜಾಮೀನು, ನಾಳೆ ರಿಲೀಸ್‌!

Gautam Gambhir
ಕ್ರೀಡೆ46 mins ago

Gautam Gambhir : ನನ್ನ ಮತ್ತು ಕೊಹ್ಲಿಯ ನಡುವೆ ಗೌರವಯುತ ಸಂಬಂಧವಿದೆ; ಗೌತಮ್ ಗಂಭೀರ್​

Nipah Virus
ಆರೋಗ್ಯ48 mins ago

Nipah Virus: ಡೇಂಜರಸ್‌ ನಿಫಾ ವೈರಸ್‌; ಇದರ ಲಕ್ಷಣಗಳೇನು? ನಮಗೆ ಅಪಾಯ ಇದೆಯೆ?

Nitish Kumar
ದೇಶ49 mins ago

Nitish Kumar: ಬಿಹಾರಕ್ಕೆ ವಿಶೇಷ ಸ್ಥಾನಮಾನ ಕೊಡಲ್ಲ ಎಂದ ಮೋದಿ ಸರ್ಕಾರ; ನಿತೀಶ್‌ ಕುಮಾರ್‌ ಬಂಡಾಯ ನಿಶ್ಚಿತ?

Shoe Theft
ಕ್ರೈಂ53 mins ago

Shoe Theft: ಬೆಂಗಳೂರಿನಲ್ಲಿ 10,000 ಶೂ, ಚಪ್ಪಲಿ ಕದ್ದ ಖತರ್‌ನಾಕ್‌ ಕಳ್ಳರ ಬಂಧನ!

Actor Darshan
ಕರ್ನಾಟಕ1 hour ago

Actor Darshan: ನಟ ದರ್ಶನ್‌ಗೆ ಇನ್ನೂ 3 ದಿನ ಜೈಲೂಟವೇ ಗತಿ; ಜು.25ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌