Actor Darshan: ಇವತ್ತಾದ್ರೂ ದರ್ಶನ್‌ಗೆ ಸಿಗುತ್ತಾ ಮನೆ ಊಟಕ್ಕೆ ಅನುಮತಿ? - Vistara News

ಕರ್ನಾಟಕ

Actor Darshan: ಇವತ್ತಾದ್ರೂ ದರ್ಶನ್‌ಗೆ ಸಿಗುತ್ತಾ ಮನೆ ಊಟಕ್ಕೆ ಅನುಮತಿ?

Actor Darshan: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್‌ ಮನೆ ಊಟಕ್ಕೆ ಅವಕಾಶ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಜೈಲೂಟದಿಂದಾಗಿ ಫುಡ್‌ ಪಾಯಿಸನಿಂಗ್‌ ಹಾಗೂ ಅತಿಸಾರ ಆಗುತ್ತಿದೆ. ಹೀಗಾಗಿ ಮನೆಯೂಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ದರ್ಶನ್‌ ಪರ ವಕೀಲರು ಮನವಿ ಮಾಡಿದ್ದರು.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಇಂದು (ಜುಲೈ 22) ಮತ್ತೊಂದು ಮಹತ್ವದ ದಿನ ಆಗಲಿದೆ. ಮನೆ ಊಟಕ್ಕೆ ಅವಕಾಶ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಹೀಗಾಗಿ ಇವತ್ತಾದರೂ ನಟನಿಗೆ ಮನೆ ಊಟಕ್ಕೆ ಅನುಮತಿ ಸಿಗುತ್ತಾ ಎನ್ನುವ ಪ್ರಶ್ನೆ ಮೂಡಿದೆ.

ದರ್ಶನ್‌ಗೆ ಮನೆ ಊಟದ ವಿಚಾರದ ಬಗ್ಗೆ ಇಂದು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಜೈಲೂಟದಿಂದಾಗಿ ಫುಡ್‌ ಪಾಯಿಸನಿಂಗ್‌ ಹಾಗೂ ಅತಿಸಾರ ಆಗುತ್ತಿದೆ. ಹೀಗಾಗಿ ಮನೆಯೂಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ದರ್ಶನ್‌ ಪರ ವಕೀಲರು ಮನವಿ ಮಾಡಿದ್ದರು. ಮನವಿ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.

ಇತ್ತ ಈ ವಿಚಾರಕ್ಕೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಸಲು ಎಸ್‌ಪಿಪಿಗೂ ನ್ಯಾಯಾಧೀಶರು ಸೂಚಿಸಿದ್ದರು. ದರ್ಶನ್‌ಗೆ ಮನೆ ಊಟಕ್ಕೆ ಅವಕಾಶ ನೀಡಬೇಡಿ ಅಂತಲೂ ಇಂದು ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ. ಒಟ್ಟಿನಲ್ಲಿ ದರ್ಶನ್‌ಗೆ ಮನೆ ಊಟಕ್ಕೆ ಅನುಮತಿ ಸಿಗುತ್ತಾ ಎನ್ನುವ ಪ್ರಶ್ನೆಗೆ ಇನ್ನು ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ.

ದರ್ಶನ್‌ ಮನವಿ ಏನು?

ಜೈಲಿನ ಆಹಾರ ದರ್ಶನ್‌ಗೆ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ. ಹೀಗೆಂದು ಜೈಲಿನ ವೈದ್ಯರೇ ಹೇಳಿದ್ದರು. ಅತಿಸಾರದಿಂದಾಗಿ ದರ್ಶನ್ ತೂಕ ತುಂಬಾ ಕಡಿಮೆಯಾಗಿದೆ. ಹಲವು ಕೆಜಿಗಳಷ್ಟು ತೂಕವನ್ನು ದರ್ಶನ್ ಕಳೆದುಕೊಂಡಿದ್ದಾರೆ. ದರ್ಶನ್ ಜಾಮೀನಿಗಾಗಿ ವಕೀಲರು ಬೇಕಾದ ಸಾಕ್ಷಿಗಳನ್ನು ಸಂಗ್ರಹಿಸುತ್ತಿದ್ದಾರೆ. ಹೀಗಾಗಿ ಇನ್ನು ಕೆಲವಷ್ಟು ದಿನ ದರ್ಶನ್ ಜೈಲಿನಲ್ಲೆ ಇರಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಮನೆ ಊಟಕ್ಕೆ ಅನುಮತಿ ನೀಡುವಂತೆ ಜೈಲು ಅಧಿಕಾರಿಗಳ ಬಳಿ ದರ್ಶನ್‌ ಮನವಿ ಮಾಡಿದ್ದಾರೆ.

ಆ. 1ರ ತನಕ ನ್ಯಾಯಾಂಗ ಬಂಧನದಲ್ಲಿ ದರ್ಶನ್‌ & ಗ್ಯಾಂಗ್‌

ಆಗಸ್ಟ್ 1 ರವರೆಗೆ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ವಿಶ್ವನಾಥ‌ ಸಿ. ಗೌಡರ್ ಜುಲೈ 18 ಆದೇಶ ನೀಡಿದ್ದರು.

ಯೋಗದ ಮೊರೆ ಹೋದ ದರ್ಶನ್‌

ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಹರಸಾಹಸ ಪಡುತ್ತಿರುವ ದರ್ಶನ್‌ ಇದೀಗ ಮಾನಸಿಕ ಖಿನ್ನತೆಯಿಂದ ಹೊರಬರಲು ಯೋಗದ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಜೈಲೂಟ ರುಚಿಸುತ್ತಿಲ್ಲ, ಸಹಖೈದಿಗಳ ಸಹವಾಸ ಬೇಡವಾಗಿದೆ. ಇದರ ಜತೆಗೆ ಒಂಟಿತನ ಇನ್ನಿಲ್ಲದೆ ಕಾಡುತ್ತಿದೆ. ಒಂಟಿತನದಿಂದ ಪರಾಗಲು ದರ್ಶನ್ ಪುಸ್ತಕಗಳನ್ನು ಕೇಳಿ ಪಡೆದಿದ್ದರು. ಆದರೂ ಮನಸ್ಸಿನಿಂದ ಬೇಸರ ದೂರವಾಗುತ್ತಿಲ್ಲ. ಜತೆಗೆ ರೇಣುಕಾಸ್ವಾಮಿ ಕೊಲೆ ಕೇಸ್ ಭಯ ಕೂಡ ಕಾಡುತ್ತಿದೆ. ಪೊಲೀಸರ ತನಿಖೆ ಕೂಡ ಭರ್ಜರಿಯಾಗೇ ಸಾಗುತ್ತಿದೆ. ಇವೆಲ್ಲವೂ ನಟ ದರ್ಶನ್ ಅವರನ್ನು ನಿದ್ದೆಗೆಡಿಸಿವೆ. ಹಾಗಾಗಿ ಎಲ್ಲ ಆತಂಕಗಳಿಂದ ಹೊರ ಬರಲು ಯೋಗದ ಮೊರೆ ಹೋಗಿದ್ದಾರೆ. ಈ ಹಿಂದೆ ದರ್ಶನ್ ಭೇಟಿಯಾಗಿ ವಿಜಯಲಕ್ಷ್ಮೀ ಧೈರ್ಯ ತುಂಬಿ ಬಂದಿದ್ದರು. ಜೈಲಿನಲ್ಲಿ ಅಪ್ಪನ ಸ್ಥಿತಿ ಕಂಡು ಮಗ ವಿನೀಶ್‌ ಕಣ್ಣೀರು ಹಾಕಿದ್ದ.

ಇದನ್ನೂ ಓದಿ: Actor Darshan: ಅಪ್ಪನ ಸ್ಥಿತಿ ಕಂಡು ಮಗ ವಿನೀಶ್‌ ಕಣ್ಣೀರು; ಧೈರ್ಯ ತುಂಬಿದ ವಿಜಯಲಕ್ಷ್ಮಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

Unified pension scheme: ಕೇಂದ್ರ ಸರ್ಕಾರ ಸಚಿವ ಸಂಪುಟದಲ್ಲಿ ಯುಪಿಎಸ್ ಪಿಂಚಣಿ ಯೋಜನೆ ಜಾರಿಗೆ ಶೇಕಡ 50ರಷ್ಟು ಪಿಂಚಣಿ ನೀಡಲು ತೆಗೆದುಕೊಂಡಿರುವ ತೀರ್ಮಾನ ತೃಪ್ತಿ ತಂದಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದಾರೆ. ನಮ್ಮ ಬೇಡಿಕೆ ಹಳೆ ಪಿಂಚಣಿಯ ಮರು ಸ್ಥಾಪನೆ ಮಾತ್ರ ಎಂದು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ಹೇಳಿದ್ದಾರೆ.

VISTARANEWS.COM


on

unified pension scheme
Koo


ಬೆಂಗಳೂರು: ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಹೊಸ ಯುಪಿಎಸ್ ಪಿಂಚಣಿ ಯೋಜನೆ(Unified pension scheme)ಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ(Karnataka government employees) ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ಈ ನಿರ್ಧಾರ ತೃಪ್ತಿಕರವಲ್ಲ ಎಂದು ಈ ಸಂಘಗಳು ಅಭಿಪ್ರಾಯಪಟ್ಟಿವೆ

ಕೇಂದ್ರ ಸರ್ಕಾರ ಸಚಿವ ಸಂಪುಟದಲ್ಲಿ ಯುಪಿಎಸ್ ಪಿಂಚಣಿ ಯೋಜನೆ ಜಾರಿಗೆ ಶೇಕಡ 50ರಷ್ಟು ಪಿಂಚಣಿ ನೀಡಲು ತೆಗೆದುಕೊಂಡಿರುವ ತೀರ್ಮಾನ ತೃಪ್ತಿ ತಂದಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಮತ್ತೊಮ್ಮೆ ಪುನರ್ ಪರಿಶೀಲಿಸಿ ಶೇಕಡ 100ರಷ್ಟು ಪಿಂಚಣಿ ನೀಡಲು ಆಗ್ರಹಿಸುತ್ತೇವೆ ಎಂದು ಷಡಾಕ್ಷರಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘವು ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಪೂರ್ಣವಾಗಿ ವಿರೋಧಿಸುತ್ತದೆ ಎಂದು ಈ ಸಂಘದ ಅಧ್ಯಕ್ಷ ಶಾಂತಾರಾಮ್ ಅವರು ಹೇಳಿಕೆ ನೀಡಿದ್ದಾರೆ. ನಮ್ಮ ಬೇಡಿಕೆ ಹಳೆ ಪಿಂಚಣಿಯ ಮರು ಸ್ಥಾಪನೆ ಮಾತ್ರ ಎಂದು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ಹೇಳಿದ್ದಾರೆ.

ಏನಿದು ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆ?:

ಇದು ಸರ್ಕಾರಿ ನೌಕರರಿಗೆ ಇತ್ತೀಚಿನ ಪಿಂಚಣಿ ಯೋಜನೆಯಾಗಿದೆ. ಸರ್ಕಾರಿ ನೌಕರರಿಗೆ ನಿಶ್ಚಿತ ಪಿಂಚಣಿ ಮೊತ್ತದ ಭರವಸೆ ನೀಡುವ ಯೋಜನೆ ಇದಾಗಿದೆ. UPS ಅಡಿಯಲ್ಲಿ, ನಿಗದಿತ ಪಿಂಚಣಿಯು ಕಳೆದ 12 ತಿಂಗಳುಗಳ ಅವಧಿಯಲ್ಲಿ ಪಡೆದ ಸರಾಸರಿ ಮೂಲ ವೇತನದ 50 ಪ್ರತಿಶತದಷ್ಟಿರುತ್ತದೆ.ಇದು ಖಚಿತವಾದ ಕುಟುಂಬ ಪಿಂಚಣಿಯನ್ನು ಸಹ ಹೊಂದಿರುತ್ತದೆ, ಇದು ಉದ್ಯೋಗಿಯ ಮೂಲ ವೇತನದ 60 ಪ್ರತಿಶತವಾಗಿದೆ. ನೌಕರನ ಮರಣದ ಸಂದರ್ಭದಲ್ಲಿ ಅದನ್ನು ತಕ್ಷಣವೇ ನೀಡಲಾಗುವುದು. ಕನಿಷ್ಠ 10 ವರ್ಷಗಳ ಸೇವೆಯ ನಂತರ ನಿವೃತ್ತಿಯ ಸಂದರ್ಭದಲ್ಲಿ, UPS ತಿಂಗಳಿಗೆ 10,000 ರೂ.ಗಳ ಖಚಿತವಾದ ಕನಿಷ್ಠ ಪಿಂಚಣಿಯನ್ನು ಒದಗಿಸುತ್ತದೆ.

ಯುಪಿಎಸ್‌ಗೆ ಯಾರು ಸೇರಬಹುದು?

“ಕೇಂದ್ರ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆಯಲ್ಲಿ (ಎನ್‌ಪಿಎಸ್) ಉಳಿಯಲು ಅಥವಾ ಏಕೀಕೃತ ಪಿಂಚಣಿ ಯೋಜನೆಗೆ (ಯುಪಿಎಸ್) ಸೇರಲು ನಿರ್ಧರಿಸುವ ಹಕ್ಕನ್ನು ಹೊಂದಿರುತ್ತಾರೆ” ಎಂದು ವೈಷ್ಣವ್ ಹೇಳಿದರು. ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿ ನಿಯೋಜಿತ ಟಿ ವಿ ಸೋಮನಾಥನ್ ಅವರು, “ಇದು ಈಗಾಗಲೇ ಎನ್‌ಪಿಎಸ್ ಅಡಿಯಲ್ಲಿ 2004 ರಿಂದ ನಿವೃತ್ತರಾದ ಎಲ್ಲರಿಗೂ ಅನ್ವಯಿಸುತ್ತದೆ. ಹೊಸ ಯೋಜನೆಯು ಏಪ್ರಿಲ್ 1, 2025 ರಿಂದ ಜಾರಿಗೆ ಬರಲಿದೆಯಾದರೂ, NPS ಪ್ರಾರಂಭವಾದ ಸಮಯದಿಂದ ನಿವೃತ್ತರಾದ ಪ್ರತಿಯೊಬ್ಬರೂ ಮತ್ತು ಮಾರ್ಚ್ 31, 2025 ರವರೆಗೆ ನಿವೃತ್ತರಾದವರು ಸೇರಿದಂತೆ, UPS ನ ಈ ಎಲ್ಲಾ ಐದು ಪ್ರಯೋಜನಗಳಿಗೆ ಅರ್ಹರಾಗಿರುತ್ತಾರೆ” ಎಂದಿದ್ದಾರೆ.

ಇದನ್ನೂ ಓದಿ: NPS v/s UPS: ಏಕೀಕೃತ ಪಿಂಚಣಿ ಯೋಜನೆ ಅಂದ್ರೆ ಏನು? ಇದು NPSಗಿಂತ ಹೇಗೆ ಭಿನ್ನ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

Continue Reading

ಮಳೆ

Karnataka Weather : ಬೆಂಗಳೂರು ಸೇರಿದಂತೆ ಉಡುಪಿ, ಉತ್ತರ ಕನ್ನಡದಲ್ಲಿಂದು ಭಾರಿ ಮಳೆ ಎಚ್ಚರ

Karnataka Rain : ಕರಾವಳಿಯಲ್ಲಿ ಇಂದಿನಿಂದ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿಗೂ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Karnataka Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಉತ್ತರ ಒಳನಾಡು, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Assault Case : ಹುಡ್ಗಿ ವಿಷ್ಯಕ್ಕೆ ರೂಮ್‌ನಲ್ಲಿ ಕೂಡಿ ಹಾಕಿ ಯುವಕನಿಗೆ ರಕ್ತ ಬರುವಂತೆ ಥಳಿತ; ವಿಡಿಯೊ ವೈರಲ್‌

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ. ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆ ಇವೆ.

ಕರಾವಳಿಗೂ ಮಳೆ ಅಲರ್ಟ್‌

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಆಗಸ್ಟ್‌ 27 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮೇಲಿನ ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಮುಂದಿನ 48 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Sudha Murthy: ವೈದ್ಯಕೀಯ ಸೇವೆಯಲ್ಲಿ ಬದ್ಧತೆ, ನೈತಿಕತೆ ಇಂದಿನ ಅಗತ್ಯ: ಸುಧಾಮೂರ್ತಿ

ಬೆಂಗಳೂರಿನ ನಿಮ್ಹಾನ್ಸ್ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಎನ್‌ಯು ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಸುಧಾಮೂರ್ತಿ (Sudha Murthy) ಅವರು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಖಾಸಗಿ ಆಸ್ಪತ್ರೆಯೊಂದು ಬದ್ಧತೆ ಹಾಗೂ ನೈತಿಕತೆ ಇಟ್ಟುಕೊಂಡು ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯ ಎಂದು ತಿಳಿಸಿದ್ದಾರೆ.

VISTARANEWS.COM


on

Sudha Murthy
Koo

ಬೆಂಗಳೂರು: ಸ್ಪರ್ಧಾತ್ಮಕ ಜಗತ್ತಿನಲ್ಲಿ ಖಾಸಗಿ ಆಸ್ಪತ್ರೆಯೊಂದು ಬದ್ಧತೆ ಹಾಗೂ ನೈತಿಕತೆ ಇಟ್ಟುಕೊಂಡು ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯ ಎಂದು ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ (Sudha Murthy) ತಿಳಿಸಿದರು.

ನಗರದ ನಿಮ್ಹಾನ್ಸ್ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಎನ್‌ಯು ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಆಸ್ಪತ್ರೆ ನಡೆಸುವುದು ಸುಲಭದ ಕೆಲಸವಲ್ಲ. ನಾನು ಈ ಕಷ್ಟವನ್ನು ಹತ್ತಿರದಿಂದ ಕಂಡಿದ್ದೇನೆ. ಇಂತಹ ಸ್ಪರ್ಧಾತ್ಮಕ ವ್ಯವಸ್ಥೆಯಲ್ಲಿ ಆಸ್ಪತ್ರೆ 25 ವರ್ಷಗಳನ್ನು ಪೂರ್ಣಗೊಳಿಸುವುದು ಸಾಹಸವೇ ಸರಿ. ಆ ನಿಟ್ಟಿನಲ್ಲಿ ಎನ್‌ಯು ಆಸ್ಪತ್ರೆಯ ಈ ಪಯಣ ನಿಜಕ್ಕೂ ಅಭಿನಂದನಾರ್ಹ. ಇಂದು ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ ಆಸ್ಪತ್ರೆ ನಡೆಸುವುದು ಅಸಾಧ್ಯದ ಮಾತು. ಹಾಗೆಯೇ ಕೇವಲ ಹಣ ಮಾಡುವುದಕ್ಕಷ್ಟೇ ಆಸ್ಪತ್ರೆ ನಡೆಸುವುದು ಸರಿಯಾದುದಲ್ಲ. ಆದರೆ ಬದ್ಧತೆ ಹಾಗೂ ನೈತಿಕತೆ ಇಟ್ಟುಕೊಂಡು ಸೇವೆ ನೀಡುವ ಕೆಲಸ ನಿಜಕ್ಕೂ ಸ್ವಾಗತಾರ್ಹ. ಅಂತಹ ಕೆಲಸ ಎನ್‌ಯು ಆಸ್ಪತ್ರೆ ಮಾಡುತ್ತಾ ಬರುತ್ತಿರುವುದು ಬಹು ದೊಡ್ಡ ಸಾಧನೆ ಎಂದು ತಿಳಿಸಿದರು.

ಇದನ್ನೂ ಓದಿ: MB Patil: ವಿಮಾನ‌ ನಿಲ್ದಾಣ, ಏರ್ ಸ್ಟ್ರಿಪ್ ಪ್ರಗತಿ ಪರಿಶೀಲನೆ; ತಾಂತ್ರಿಕ ಅಡಚಣೆ ನಿವಾರಣೆಗೆ ಸಚಿವ ಎಂ‌.ಬಿ. ಪಾಟೀಲ ಸೂಚನೆ

ರಜತ ಮಹೋತ್ಸವದ ಕುರಿತು ಎನ್‌ಯು ಆಸ್ಪತ್ರೆಯ ಅಧ್ಯಕ್ಷ ಡಾ. ವೆಂಕಟೇಶ್ ಕೃಷ್ಣಮೂರ್ತಿ ಮಾತನಾಡಿ, ನಮ್ಮ ವೈದ್ಯಕೀಯ ಸಿಬ್ಬಂದಿ ಹಾಗೂ ವೈದ್ಯರು ನಿಯಮಿತವಾಗಿ ಪ್ರತಿಷ್ಠಿತ ವೈದ್ಯಕೀಯ ನಿಯತಕಾಲಿಕಗಳಲ್ಲಿ ಸಂಶೋಧನೆಗಳನ್ನು ಪ್ರಕಟಿಸುತ್ತಾ ಬಂದಿದ್ದಾರೆ. ಹಾಗೆಯೇ ಈ ಮೂಲಕ ರೋಗಿಗಳಲ್ಲಿನ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿವೆ. ರೋಗಿಯು ಶೀಘ್ರ ಗುಣಮುಖಗೊಳ್ಳುತ್ತಿದ್ದಾರೆ. ಮತ್ತೆ ರೋಗಕ್ಕೆ ತುತ್ತಾಗುವುದು ಹಾಗೂ ಮರಣ ಪ್ರಮಾಣವು ಗಣನೀಯವಾಗಿ ಕಡಿಮೆಯಾಗುತ್ತಿದೆ. ಈ ಪ್ರಯತ್ನದಲ್ಲಿ ಎನ್‌ಯು ಆಸ್ಪತ್ರೆಯು ಮುಂಚೂಣಿಯಲ್ಲಿದೆ ಹಾಗೂ ಇದೇ ಆಸ್ಪತ್ರೆಯ ಯಶಸ್ಸಿಗೆ ಕಾರಣವಾಗಿದೆ. ಅಲ್ಲದೆ ಆಸ್ಪತ್ರೆಯು ಅತ್ಯಾಧುನಿಕ ಐಸಿಯು ಸೌಲಭ್ಯಗಳು, 24/7 ಡಯಾಲಿಸಿಸ್, ಸುಧಾರಿತ ಪ್ರಯೋಗಾಲಯ ಮತ್ತು ರೇಡಿಯೊ ಡಯಾಗ್ನೋಸಿಸ್ ಸೇವೆಗಳು ಮತ್ತು ಯುರೊಡೈನಾಮಿಕ್ಸ್ ಸೌಲಭ್ಯಗಳನ್ನು ಹೊಂದಿದೆ. ಇದರಿಂದ ಉತ್ತಮ ರೀತಿಯಲ್ಲಿ ಸೇವೆ ನೀಡಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಖ್ಯಾತ ಯುರಾಲಜಿಸ್ಟ್ ಮತ್ತು ಎನ್‌ಯು ಆಸ್ಪತ್ರೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಸನ್ನ ವೆಂಕಟೇಶ್ ಮಾತನಾಡಿ, ಎನ್‌ಯು ಆಸ್ಪತ್ರೆಯು 25 ವರ್ಷಗಳನ್ನು ಪೂರೈಸುತ್ತಿದ್ದು, ತನ್ನ ರಜತ ಮಹೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಿದೆ. ಕಳೆದ ಕಾಲು ಶತಮಾನದಲ್ಲಿ ಎನ್‌ಯು ಆಸ್ಪತ್ರೆ ಹಲವಾರು ಮೈಲಿಗಲ್ಲುಗಳನ್ನು ತಲುಪಿದೆ. 2018ರಲ್ಲಿ ನಾನ್ ಇನ್ವೇಸಿವ್ ರೋಗಿಗಳ ಮೇಲ್ವಿಚಾರಣಾ ವ್ಯವಸ್ಥೆಯಲ್ಲಿ ವಿಶ್ವದಲ್ಲೇ ಮುಂಚೂಣಿಯಲ್ಲಿರುವ ಯುಎಸ್ ಮೂಲದ ಮಾಸಿಮೊ ಸಹಯೋಗದೊಂದಿಗೆ ‘ಪೇಷಂಟ್ ಸೇಫ್ಟಿನೆಟ್’ ಅನ್ನು ಅಳವಡಿಸಿಕೊಂಡ ಭಾರತದ ಮೊದಲ ಆಸ್ಪತ್ರೆಯಾಗಿದೆ. ಈ ಆಸ್ಪತ್ರೆಯು ಸಿಎಂಆರ್ ವರ್ಸಿಯಸ್ ಸರ್ಜಿಕಲ್ ರೊಬೊಟಿಕ್ ಸಿಸ್ಟಮ್ ಅನ್ನು ಪರಿಚಯಿಸಿದ ಭಾರತದಲ್ಲಿ ಮೊದಲನೆಯ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಕಾರಣವಾಗಿದೆ. ಈ ವಿಧಾನಗಳ ಚಿಕಿತ್ಸೆಯ ಮೂಲಕ ರೋಗಿಗೆ ಎದುರಾಗಬಹುದಾದಂತಹ ತೊಂದರೆಗಳನ್ನು ತಪ್ಪಿಸುವಲ್ಲಿ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ತಿಳಿಸಿದರು.

2015ರಲ್ಲಿ ಎನ್‌ಯು ಆಸ್ಪತ್ರೆಯು ಬೆಂಗಳೂರಿನ ರಾಜಾಜಿನಗರದಲ್ಲಿ ಎರಡನೇ ಅತ್ಯಾಧುನಿಕ ಘಟಕವನ್ನು ಆರಂಭಿಸುವ ಮೂಲಕ ತನ್ನ ಶಾಖೆಯನ್ನು ವಿಸ್ತರಿಸಿತು. ರಿಪಬ್ಲಿಕ್ ಆಫ್ ಮಾಲ್ಡೀವ್ಸ್‌ನ ಮಾಲೆಯಲ್ಲಿರುವ ಇಂದಿರಾ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಯುರಾಲಜಿ ರೆನಲ್ ಮತ್ತು ಫಲವತ್ತತೆ ಕೇಂದ್ರವನ್ನು 2016 ರಲ್ಲಿ ತೆರೆಯುವ ಮೂಲಕ ಆಸ್ಪತ್ರೆಯ ವ್ಯಾಪ್ತಿಯು ವಿದೇಶಕ್ಕೆ ವಿಸ್ತರಿಸಿತು. 2020ರಲ್ಲಿ ಕರ್ನಾಟಕದ ಶಿವಮೊಗ್ಗ ಮತ್ತು ತಮಿಳುನಾಡಿನ ಅಂಬೂರಿನಲ್ಲಿ ಆಸ್ಪತ್ರೆಗಳ ಸ್ಥಾಪನೆಯೊಂದಿಗೆ ದಕ್ಷಿಣ ಭಾರತದಲ್ಲಿ ಶಾಖೆಗಳನ್ನು ಮತ್ತಷ್ಟು ವಿಸ್ತರಣೆ ಮಾಡಲಾಯಿತು. ಎಲ್ಲಾ ಎನ್‌ಯು ಆಸ್ಪತ್ರೆಗಳ ಘಟಕಗಳು ಎನ್‌ಎಬಿಎಚ್‌ (NABH) ಮತ್ತು ಎನ್‌ಎಬಿಎಲ್‌ (NABL) ಮಾನ್ಯತೆ ಪಡೆದಿವೆ. ಸಂಸ್ಥೆಯು ಡಿಎನ್‌ಬಿ (DNB) ನ್ಯಾಷನಲ್ ಬೋರ್ಡ್-ಮಾನ್ಯತೆ ಪಡೆದ ಸ್ನಾತಕೋತ್ತರ ಕಾರ್ಯಕ್ರಮಗಳನ್ನು ನೀಡುವ ಮೂಲಕ ಮುಂದಿನ ಪೀಳಿಗೆಯ ಯುರಾಲಜಿಸ್ಟ್ ಮತ್ತು ನೆಫ್ರಾಲಜಿಸ್ಟ್ ತಜ್ಞರಿಗೆ ತರಬೇತಿ ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ: UPS: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು

25ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಅಂಗವಾಗಿ ಕಾರ್ಯಕ್ರಮದಲ್ಲಿ ಆಸ್ಪತ್ರೆಗೆ ದೀರ್ಘ ಹಾಗೂ ವಿಶೇಷ ಸೇವೆ ಸಲ್ಲಿಸಿದ ಸಿಬ್ಬಂದಿಗಳನ್ನು ಗೌರವಿಸಲಾಯಿತು.

Continue Reading

ವಿಜಯನಗರ

Vijayanagara News: ಮೀನುಗಾರರಿಗೆ ರಾಜ್ಯ‌ ಸರ್ಕಾರದಿಂದ ನಾನಾ ಸೌಕರ್ಯ; ಸಚಿವ ಮಂಕಾಳ ವೈದ್ಯ

Vijayanagara News: ಬಳ್ಳಾರಿ ವಲಯದ ವಿಜಯನಗರ, ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯು ಹೊಸಪೇಟೆ ನಗರದ ಜಿಲ್ಲಾಡಳಿತ ಭವನದಲ್ಲಿನ ಆಡಿಟೋರಿಯಂ ಸಭಾಂಗಣದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.

VISTARANEWS.COM


on

Vijayanagara News
Koo

ಹೊಸಪೇಟೆ: ಬಳ್ಳಾರಿ ವಲಯದ ವಿಜಯನಗರ, ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ (Vijayanagara News) ನಡೆಯಿತು.

ನಗರದ ಜಿಲ್ಲಾಡಳಿತ ಭವನದಲ್ಲಿನ ಆಡಿಟೋರಿಯಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಮೀನುಗಾರಿಕೆ ಇಲಾಖೆಯು ಯಾವಾಗಲು ಮೀನುಗಾರರ ಪರವಾಗಿದೆ. 8 ರಿಂದ 10ನೇ ತರಗತಿಯಲ್ಲಿ ಓದುವ ಮೀನುಗಾರರ ಮಕ್ಕಳಿಗೆ 2000 ರೂ. ಪಿಯುಸಿಯಲ್ಲಿ ವಿದ್ಯಾರ್ಥಿನಿಯರಿಗೆ 3 ಸಾವಿರ ರೂ., ವಿದ್ಯಾರ್ಥಿಗಳಿಗೆ 2500 ರೂ., ಎಲ್‌ಎಲ್‌ಬಿ ಸೇರಿದಂತೆ ಬೇರೆ ಬೇರೆ ಕೋರ್ಸ್ ಓದುವ ವಿದ್ಯಾರ್ಥಿಗಳಿಗೆ 7500, ವಿದ್ಯಾರ್ಥಿನಿಯರಿಗೆ 8 ಸಾವಿರ ರೂ., ಎಂಬಿಬಿಎಸ್ ಓದುವವರಿಗೆ 10,000 ರೂ ಶಿಷ್ಯವೇತನ ನೀಡಲಾಗುತ್ತದೆ. ಐಎಎಸ್, ಐಪಿಎಸ್ ಓದ ಬಯಸುವ ವಿದ್ಯಾರ್ಥಿಗಳಿಗೆ ಉಚಿತ ಕೊಚಿಂಗ್‌ಗೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: MB Patil: ವಿಮಾನ‌ ನಿಲ್ದಾಣ, ಏರ್ ಸ್ಟ್ರಿಪ್ ಪ್ರಗತಿ ಪರಿಶೀಲನೆ; ತಾಂತ್ರಿಕ ಅಡಚಣೆ ನಿವಾರಣೆಗೆ ಸಚಿವ ಎಂ‌.ಬಿ. ಪಾಟೀಲ ಸೂಚನೆ

ರಾಜ್ಯ ಸರ್ಕಾರವು ಬಡವರ ಪರವಾಗಿದೆ.‌ ಪ್ರತಿಯೊಬ್ಬ ಶಾಸಕರು ಎಲ್ಲರಿಗೂ ಸ್ಪಂದಿಸುತ್ತಿದ್ದಾರೆ. ಮೀನುಗಾರರಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸೌಕರ್ಯಗಳನ್ನು ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ತಲುಪಿಸುವ ವ್ಯವಸ್ಥೆ ಮಾಡುತ್ತಿದ್ದೇವೆ. ಈ ನಿಟ್ಟಿನಲ್ಲಿ ಮೀನುಗಾರಿಕೆ ಉತ್ಪಾದನೆ ಹೆಚ್ಚಾಗಬೇಕು ಎಂದು ಸಚಿವರು ಸಲಹೆ ಮಾಡಿದರು.

ರಾಜ್ಯದಲ್ಲಿ ಈ ಬಾರಿ ಮೀನುಗಾರರಿಗೆ 10 ಸಾವಿರ ವಸತಿ ಮಂಜೂರು ಮಾಡಲಾಗಿದೆ.‌ ಇದರಿಂದಾಗಿ ಸೂಕ್ತವಾದ ದಾಖಲಾತಿ ಒದಗಿಸುವ ಅರ್ಹ ಬಡ ಮೀನುಗಾರರಿಗೆ ವಸತಿ ವ್ಯವಸ್ಥೆಯಾಗಲಿದೆ ಎಂದು ತಿಳಿಸಿದರು.

ಕಚೇರಿ ಸ್ಥಾಪನೆಗೆ ಒತ್ತು

ವಿಜಯನಗರ ಜಿಲ್ಲೆ ಹೇರಳವಾಗಿ ನೀರಿನ ಮೂಲ ಮತ್ತು ಸೌಕರ್ಯ ಇರುವ ಜಿಲ್ಲೆಯಾಗಿದೆ. ಬೃಹತ್ ತುಂಗಭದ್ರಾ ಡ್ಯಾಂ ಇದೆ. ಇಲ್ಲಿ ಮೀನುಗಾರರ ಸಂಖ್ಯೆ ಹೆಚ್ಚಿದೆ. ಸ್ವಂತ ಕಚೇರಿ ಇದ್ದಲ್ಲಿ ಕಚೇರಿ ಕಾರ್ಯಗಳಿಗೆ ಅನುಕೂಲವಾಗಲಿದೆ. ಜಿಲ್ಲಾಡಳಿತ ಜಾಗ ನೀಡಿದಲ್ಲಿ ಕೂಡಲೇ ಹೊಸ ಕಚೇರಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: Areca Nut Price: ದರ ಏರಿಳಿಕೆ; ಅಡಿಕೆ ಮಾರುಕಟ್ಟೆಯಲ್ಲೂ ಶುರುವಾಗಿದೆ ಷೇರುಪೇಟೆಯಂತೆ ಗೂಳಿ ಕಾಳಗ, ಕರಡಿ ಕುಣಿತ!

ಸಭೆಯಲ್ಲಿ ಶಾಸಕ ಎಚ್.ಆರ್. ಗವಿಯಪ್ಪ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌, ಮೀನುಗಾರಿಕೆ ಇಲಾಖೆಯ ನಿರ್ದೇಶಕ ದಿನೇಶ ಕಳ್ಳೇರ, ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಷಡಕ್ಷರಿ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಬಳ್ಳಾರಿಯ ಶಿವಣ್ಣ, ಸಿಂಧನೂರಿನ ಮಲ್ಲೇಶಿ, ರಾಯಚೂರಿನ ಬಸವನಗೌಡ, ಕೊಪ್ಪಳದ ಶ್ರೀನಿವಾಸ ಕುಲಕರ್ಣಿ, ಹಗರಿಬೊಮ್ಮನಹಳ್ಳಿಯ ರಿಯಾಜ್ ಅಹಮದ್, ಮುನಿರಾಬಾದ್‌ನ ಕಣ್ಣಿ ಭಾಗ್ಯ ಸೇರಿದಂತೆ ಇಲಾಖೆಯ ವಿವಿಧ ಜಿಲ್ಲೆಗಳ ಹಿರಿಯ ಸಹಾಯಕ ನಿರ್ದೇಶಕರು, ಸಹಾಯಕ ನಿರ್ದೇಶಕರು ಪಾಲ್ಗೊಂಡಿದ್ದರು.

Continue Reading
Advertisement
unified pension scheme
ಪ್ರಮುಖ ಸುದ್ದಿ11 mins ago

Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

Sunita Williams
ದೇಶ41 mins ago

Sunita Williams: ಮುಂದಿನ ವರ್ಷ ಫೆಬ್ರುವರಿಯಲ್ಲಿ ಭೂಮಿಗೆ ಮರಳಲಿದ್ದಾರೆ ಸುನೀತಾ ವಿಲಿಯಮ್ಸ್;‌ ನಾಸಾ ಘೋಷಣೆ

karnataka weather forecast
ಮಳೆ41 mins ago

Karnataka Weather : ಬೆಂಗಳೂರು ಸೇರಿದಂತೆ ಉಡುಪಿ, ಉತ್ತರ ಕನ್ನಡದಲ್ಲಿಂದು ಭಾರಿ ಮಳೆ ಎಚ್ಚರ

Dina Bhavishya
ಭವಿಷ್ಯ1 hour ago

Dina Bhavishya : ಈ ರಾಶಿಯವರ ಬಹು ದಿನಗಳ ಕನಸು ನನಸು; ಕುಟುಂಬದ ಆಪ್ತರಿಂದ ಶುಭ ಸುದ್ದಿ

Rahul Gandhi
ದೇಶ7 hours ago

Rahul Gandhi: ಮಿಸ್‌ ಇಂಡಿಯಾ ಪಟ್ಟಿಯಲ್ಲಿ ದಲಿತ, ಬುಡಕಟ್ಟು, ಒಬಿಸಿ ಮಹಿಳೆಯರು ಇಲ್ಲವೇ ಇಲ್ಲ-ರಾಹುಲ್‌ ಗಾಂಧಿ ಹೊಸ ಆರೋಪ

Sudha Murthy
ಬೆಂಗಳೂರು7 hours ago

Sudha Murthy: ವೈದ್ಯಕೀಯ ಸೇವೆಯಲ್ಲಿ ಬದ್ಧತೆ, ನೈತಿಕತೆ ಇಂದಿನ ಅಗತ್ಯ: ಸುಧಾಮೂರ್ತಿ

Unified Pension scheme
ಪ್ರಮುಖ ಸುದ್ದಿ8 hours ago

Unified Pension scheme: ಏಕೀಕೃತ ಪಿಂಚಣಿ ಯೋಜನೆ ಸರ್ಕಾರಿ ನೌಕರರಿಗೆ ಕೇಂದ್ರ ನೀಡುತ್ತಿರುವ ಆರ್ಥಿಕ ಭದ್ರತೆ- ಪ್ರಧಾನಿ ನರೇಂದ್ರ ಮೋದಿ

Amit Shah
ದೇಶ8 hours ago

Amit Shah: 2026ರ ವೇಳೆಗೆ ನಕ್ಸಲಿಸಂ ಸಂಪೂರ್ಣ ನಿರ್ಣಾಮ; ಬಿಗ್‌ ಟಾರ್ಗೆಟ್‌ ಫಿಕ್ಸ್‌ ಮಾಡಿದ ಕೇಂದ್ರ

Vijayanagara News
ವಿಜಯನಗರ8 hours ago

Vijayanagara News: ಮೀನುಗಾರರಿಗೆ ರಾಜ್ಯ‌ ಸರ್ಕಾರದಿಂದ ನಾನಾ ಸೌಕರ್ಯ; ಸಚಿವ ಮಂಕಾಳ ವೈದ್ಯ

NPS v/s UPS
ದೇಶ9 hours ago

NPS v/s UPS: ಏಕೀಕೃತ ಪಿಂಚಣಿ ಯೋಜನೆ ಅಂದ್ರೆ ಏನು? ಇದು NPSಗಿಂತ ಹೇಗೆ ಭಿನ್ನ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ15 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌