Assembly Session: ಅವಾಚ್ಯ ಶಬ್ದ ಬಳಕೆ; ಆರ್.ಅಶೋಕ್ ವಿರುದ್ಧ ಪ್ರದೀಪ್ ಈಶ್ವರ್ ಹಕ್ಕು ಚ್ಯುತಿ ಮಂಡನೆ - Vistara News

ಕರ್ನಾಟಕ

Assembly Session: ಅವಾಚ್ಯ ಶಬ್ದ ಬಳಕೆ; ಆರ್.ಅಶೋಕ್ ವಿರುದ್ಧ ಪ್ರದೀಪ್ ಈಶ್ವರ್ ಹಕ್ಕು ಚ್ಯುತಿ ಮಂಡನೆ

Assembly Session: ಆರ್‌.ಅಶೋಕ್‌ ಅವರು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮತ್ತು ನಾನು ಮಾತನಾಡದಂತೆ ಅಡ್ಡಿಪಡಿಸಿದ್ದಾರೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಅವರು ಸೋಮವಾರ ಹಕ್ಕು ಚ್ಯುತಿ ಮಂಡನೆ ಮಾಡಿದ್ದಾರೆ

VISTARANEWS.COM

on

Assembly Session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಸದನದಲ್ಲಿ (Assembly Session) ಸೋಮವಾರ ಹಕ್ಕು ಚ್ಯುತಿ ಮಂಡನೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ವಿಪಕ್ಷ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಪ್ರದೀಪ್‌ ಈಶ್ವರ್‌ ಆಗ್ರಹಿಸಿದ್ದಾರೆ.

16ನೇ ವಿಧಾನ ಸಭೆಯ 4ನೇ ಅಧಿವೇಶನದಲ್ಲಿ ಜುಲೈ 19ರಂದು ನಾನು ಮಾತನಾಡುವ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮತ್ತು ನಾನು ಮಾತನಾಡದಂತೆ ಅಡ್ಡಿಪಡಿಸಿದ್ದಾರೆ. ಆದ್ದರಿಂದ ಅವರ ಮೇಲೆ ಹಕ್ಕುಚ್ಯುತಿ ಮಂಡಿಸಲು ಅನುಮತಿ ನೀಡಬೇಕು ಎಂದು ಪ್ರದೀಪ್‌ ಈಶ್ವರ್‌ ಮನವಿ ಮಾಡಿದ್ದರು. ಹೀಗಾಗಿ ಹಕ್ಕು ಚ್ಯುತಿ ಮಂಡನೆಗೆ ಸ್ಪೀಕರ್ ಯು.ಟಿ. ಖಾದರ್‌ ಅನುಮತಿ ನೀಡಿದರು.

ಆರ್.ಆಶೋಕ್ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡಿ ಮಾತನಾಡಿದ ಪ್ರದೀಪ್ ಈಶ್ವರ್, ಮೊದಲ ಬಾರಿ ಶಾಸಕರಾದಾಗ ಖುಷಿ ಪಡಲು ಆರ್. ಆಶೋಕ್ ಅವರ ತಂದೆ-ತಾಯಿ ಇದ್ದರು. ಆದರೆ, ನಾನು ಶಾಸಕನಾದಾಗ ಖುಷಿ ಪಡಲು ನನ್ನ ತಂದೆ-ತಾಯಿ ಇರಲಿಲ್ಲ. ನಾನು ತಂದೆ-ತಾಯಿ ಕಳೆದುಕೊಂಡು ಪೇರೆಸಂದ್ರ ಗ್ರಾಮದಲ್ಲಿ ಕೂಲಿ ಮಾಡಿದ್ದೇನೆ, ತೋಟಕ್ಕೆ ನೀರು ಹರಿಸಿದ್ದೇನೆ. ಶಾಸಕನಾದ ಬಳಿಕ ಜನರಿಗೆ ಅನುಕೂಲವಾಗಲು 10 ಉಚಿತ ಆಂಬ್ಯುಲೆನ್ಸ್ ನೀಡಿದ್ದೇನೆ. ಅನೇಕ ಮಕ್ಕಳ ವಿಧ್ಯಾಭ್ಯಾಸಕ್ಕೆ ನೆರವಾಗಿದ್ದೇನೆ. ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಆರ್. ಆಶೋಕ್ ಅಣ್ಣಾನ ಬಗ್ಗೆ ನನಗೆ ಗೌರವ ಇದೆ, ಅವರು ಮಾತುಗಳ ಬಗ್ಗೆ ನನಗೆ ಉತ್ತರ ಕೊಡಲಿ ಎಂದು ಆಗ್ರಹಿಸಿದರು.

ಇದನ್ನೂ ಓದಿ | Union Budget 2024: ಕೇಂದ್ರ ಬಜೆಟ್‌ನಲ್ಲಿ ರೈಲ್ವೇ ವಲಯದ 9 ಪ್ರಮುಖ ನಿರೀಕ್ಷೆಗಳಿವು

ಈ ವೇಳೆ ಮಾತನಾಡಿದ ಆರ್. ಆಶೋಕ್ ಅವರು, ನಾನು ಯಾವುದೇ ತಪ್ಪು ಪದ ಬಳಕೆ ಮಾಡಿಲ್ಲ. ದಾಖಲೆ ತೆಗೆದು ನೋಡಿದರೆ ಗೊತ್ತಾಗುತ್ತದೆ. ಒಂದು ವೇಳೆ ಅವರ ಪ್ರಕಾರ ತಪ್ಪು ಮಾಡಿದ್ದೇನೆಂದು ಎನಿಸಿದರೆ ಪರಿಶೀಲನೆ ಮಾಡಲಿ, ಅವರು ಬೇರೆ ಬೇರೆ ಭಾಷೆ ಬಳಸಿದ್ದಾರೆ. ಅದರ ಬಗ್ಗೆ ನಾವು ಚಕಾರ ಎತ್ತಿಲ್ಲ. ಪರಿಶೀಲನೆ ಮಾಡಿ ದಾಖಲೆಯಲ್ಲಿ ಇದ್ದರೆ ತೆಗೆದು ಹಾಕಿ, ನಮ್ಮ ಆಕ್ಷೇಪ ಇಲ್ಲ ಎಂದು ಹೇಳಿದರು.

ಇಬ್ಬರು ಸದಸ್ಯರ ಮಾತುಗಳನ್ನು ಆಲಿಸಿದ ಬಳಿಕ ಮಾತನಾಡಿದ ಸ್ಪೀಕರ್‌ ಖಾದರ್‌ ಅವರು, ಪ್ರದೀಪ್‌ ಈಶ್ವರ್‌ ಅವರು ತಮ್ಮ ವಿಚಾರಗಳನ್ನು ಹೇಳಿದ್ದಾರೆ. ಅಶೋಕ್‌ ಅವರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಈಗ ನಾನು ಕಲಾಪದ ವಿಡಿಯೊ ತರಿಸಿಕೊಂಡು ಪರಿಶೀಲನೆ ಮಾಡಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ವೇಳೆ ಸಿಮೆಂಟ್ ಮಂಜು ಮಾತನಾಡಿ, ಒಬ್ಬ ಶಾಸಕನಿಗೆ ಸಿಎಂ 25 ಕೋಟಿ ಅನುದಾನ ನೀಡಿದ್ದಾರೆ ಅಂತ ಪ್ರದೀಪ್ ಈಶ್ವರ್ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಯಾರಿಗೆ ಕೊಟ್ಟಿದ್ದಾರೆ ಉತ್ತರ ಕೊಡಲಿ ಎಂದು ಆಗ್ರಹಿಸಿದರು. ಇದಕ್ಕೆ ಸ್ಪೀಕರ್‌ ಪ್ರತಿಕ್ರಿಯಿಸಿ, ಸೋಶಿಯಲ್ ಮೀಡಿಯಾದಲ್ಲಿ ಹಾಕಿದ ವಿಚಾರ ಚರ್ಚೆ ಮಾಡಲು ಆಗಲ್ಲ ಎಂದು ಹೇಳಿದರು.

ಏನಿದು ಹಕ್ಕು ಚ್ಯುತಿ ಮಂಡನೆ?

ಜನ ಪ್ರತಿನಿಧಿಗಳ ಹಕ್ಕು ರಕ್ಷಣೆಗಾಗಿ ಸಂವಿಧಾನದಲ್ಲಿ ಹಕ್ಕುಚ್ಯುತಿ ಮಂಡನೆಗೆ ಅವಕಾಶ ನೀಡಲಾಗಿದೆ. ತಮ್ಮ ಹಕ್ಕಿಗೆ ಯಾರಾದರೂ ಚ್ಯುತಿ ತಂದಿದ್ದಾರೆ ಎಂದು ಸಂಸದರು, ರಾಜ್ಯಸಭಾ ಸದಸ್ಯರು, ವಿಧಾನಸಭೆ ಮತ್ತು ಪರಿಷತ್ತಿನ ಸದಸ್ಯರು ಯಾರ ವಿರುದ್ಧ ಬೇಕಾದರೂ ಕ್ರಮಕ್ಕೆ ಆಗ್ರಹಿಸಬಹುದು. ಇಂತಹ ಪ್ರಕರಣದಲ್ಲಿ ಸಂಸತ್ತು ಮತ್ತು ಶಾಸನ ಸಭೆಯ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಲು ಸಹ ಅವಕಾಶವಿದೆ.

ಇದನ್ನೂ ಓದಿ | Amit Malaviya: ಸರ್ಕಾರಿ ನೌಕರರೂ RSS ಸೇರಬಹುದು; 58 ವರ್ಷಗಳ ಹಿಂದೆ ಇಂದಿರಾ ಗಾಂಧಿ ಹೇರಿದ್ದ ನಿಷೇಧ ರದ್ದು!

ಹಕ್ಕುಚ್ಯುತಿ ನಿರ್ಣಯವನ್ನು ಯಾವುದೇ ವ್ಯಕ್ತಿ, ಸದನದ ಇತರೆ ಸದಸ್ಯರು ಹೊರಗಿನ ವ್ಯಕ್ತಿಗಳ, ಸರ್ಕಾರಿ ಅಧಿಕಾರಿಗಳ ವಿರುದ್ಧವೂ ಮಂಡಿಸಬಹುದು. ಹಕ್ಕು ಬಾಧ್ಯತಾ ಸಮಿತಿಯ ವರದಿಯಲ್ಲಿ ತಪ್ಪು ಸಾಬೀತಾದರೆ ಜೈಲು ಶಿಕ್ಷೆ ವಿಧಿಸುವ ಅವಕಾಶವೂ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Suraj Revanna Case: ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌; 2ನೇ ಕೇಸ್‌ನಲ್ಲೂ ಜಾಮೀನು, ನಾಳೆ ರಿಲೀಸ್‌!

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್‌ ರೇವಣ್ಣ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು. ಇದೀಗ ಎರಡೂ ಪ್ರಕರಣಗಳಲ್ಲೂ ಜಾಮೀನು ಸಿಕ್ಕಿದೆ.

VISTARANEWS.COM

on

Suraj Revanna Case
Koo

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ದಾಖಲಾಗಿದ್ದ ಎರಡನೇ ಪ್ರಕರಣದಲ್ಲೂ ಎಂಎಲ್‌ಸಿ ಸೂರಜ್‌ ರೇವಣ್ಣಗೆ (Suraj Revanna Case) ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಇದರಿಂದ ಒಂದು ತಿಂಗಳ ಜೈಲುವಾಸದ ಬಳಿಕ ಸೂರಜ್‌ ರೇವಣ್ಣಗೆ ಮುಕ್ತಿ ಲಭಿಸಿದೆ.

ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್‌ ರೇವಣ್ಣ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು. ಹೊಳೆನರಸೀಪುರ ಟೌನ್‌ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮೊದಲಿಗೆ ಸೂರಜ್‌ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು‌ ಮಂಜೂರು ಮಾಡಿತ್ತು. ಬಳಿಕ ಇದೀಗ ಎರಡನೇ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನು ನೀಡಿದೆ. ಇದರಿಂದ ನಾಳೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 3ರಂದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿತ್ತು. ಸಿಐಡಿ ಕಸ್ಟಡಿ ಮುಕ್ತಾಯಗೊಂಡ ನಂತರ 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಲಾಗಿತ್ತು. ಇದರಿಂದ ಸೂರಜ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದರು.

ಇದನ್ನೂ ಓದಿ | Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸೂರಜ್ ರೇವಣ್ಣಗೆ ಜಾಮೀನು ಮಂಜೂರು

ಜೂನ್‌ 23 ರಂದು ಬಂಧನವಾಗಿದ್ದ ಸೂರಜ್‌ ರೇವಣ್ಣ ಪರಪ್ಪನ ಅಗ್ರಹಾರ ಸೇರಿದ್ದರು. ಪ್ರಕರಣ ನಡೆದು 29 ದಿನಗಳ ನಂತರ ಈಗ ಸೂರಜ್‌ಗೆ ಎರಡೂ ಪ್ರಕರಣಗಳಲ್ಲೂ ಜಾಮೀನು ಸಿಕ್ಕಿದೆ.

ನಟ ದರ್ಶನ್‌ಗೆ ಇನ್ನೂ 3 ದಿನ ಜೈಲೂಟವೇ ಗತಿ; ಜು.25ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Actor Darshan

ಬೆಂಗಳೂರು: ಮನೆ ಊಟ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ನಗರದ 24ನೇ ಎಸಿಎಂಎಂ ಕೋರ್ಟ್, ಆದೇಶವನ್ನು ಜುಲೈ 25ಕ್ಕೆ ಕಾಯ್ದಿರಿಸಿದೆ. ಇದರಿಂದ ಇನ್ನೂ ಮೂರು ದಿನಗಳ ಕಾಲ ನಟ ದರ್ಶನ್‌ಗೆ (Actor Darshan) ಜೈಲೂಟವೇ ಗತಿಯಾಗಿದೆ.

ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂಧರ್ಬದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.

ದರ್ಶನ್ ಒಬ್ಬ ಸೆಲೆಬ್ರಿಟಿ ಅಗಿರುವುದರಿಂದ ಪ್ರಚಾರ ಸಿಗುತ್ತದೆ. ಆಗಾಗಿಯೇ ಜೈಲು ಅಧಿಕಾರಿಗಳು ಮನೆ ಊಟಕ್ಕೆ ಅವಕಾಶ ನೀಡುತ್ತಿಲ್ಲ. ಆರೋಪ ಸಾಬೀತಾಗುವವರೆಗೂ ಮುಗ್ಧನೆಂದು ಪರಿಗಣಿಸಿ ಮನೆ ಊಟ, ಹಾಸಿಗೆ ಒದಗಿಸಬೇಕೆಂದು ಮನವಿ ಮಾಡಿ ವಾದ ಮುಕ್ತಾಯಗೊಳಿಸಿದರು.

ಪ್ರತಿದಿನ ಬಿರಿಯಾನಿ ತಿನ್ನಬೇಕು ಅಂದ್ರೆ ಆಗಲ್ಲ

ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಆರಂಭಿಸಿ, ಜೈಲು ಊಟ ಜೀರ್ಣವಾಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಮೆಡಿಕಲ್ ರಿಪೋರ್ಟ್ ಕೋರ್ಟ್‌ಗೆ ಸಲ್ಲಿಸಿದ್ದೇವೆ. ನ್ಯಾಯಾಂಗ ಬಂಧನಕ್ಕೆ ಕಳುಹಿಸುವಾಗ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಅವರಿಗೆ ಆರ್ಥೋಪೆಡಿಕ್ ಸಮಸ್ಯೆ ಇದೆ. ಅದಕ್ಕೆ ಮೊದಲು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದನ್ನ ಮುಂದುವರಿಸಲು ಸೂಚನೆ ನೀಡಿದ್ದರು. ಈಗ ಡಯಟ್ ಪುಡ್ ಕೇಳಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಜೈಲು ಮ್ಯಾನ್ಯುವಲ್ ಪ್ರಕಾರ ಏನೇನು ನೀಡಬೇಕೋ ಅದನ್ನು ನೀಡುತ್ತಿದ್ದೇವೆ. ಜೈಲು ಕೈಪಿಡಿಯಲ್ಲಿ ಮನೆ ಊಟ ಎಂಬ ಪದವೇ ಇಲ್ಲ. ಹುಷಾರಿಲ್ಲದ ವೇಳೆ ಎಕ್ಟ್ರಾ ಡಯಟ್ 30 ದಿನ ನೀಡಬಹುದು. ವಾರದಲ್ಲಿ ಒಂದು ದಿನ ಮೊಟ್ಟೆ ಹಾಗೂ ಬಾಳೆ ಹಣ್ಣು ನೀಡಬಹುದು. ಜ್ವರ ಇದ್ದಾಗ ಬಿಸಿ ನೀರು ನೀಡುತ್ತಾರೆ. ಪ್ರತಿದಿನ ಬಿರಿಯಾನಿ ತಿನ್ನಬೇಕು ಅಂದ್ರೆ ನಿಯಮದಲ್ಲಿ ಅವಕಾಶ ಇಲ್ಲ ಎಂದು ತಿಳಿಸಿದರು.

ಸದ್ಯ ದರ್ಶನ್ ಮೆಡಿಕಲ್ ರಿಪೋರ್ಟ್‌ನಲ್ಲಿ ಬೆಡ್ ರೆಸ್ಟ್ ಬೇಕು ಎಂದಿದೆ. ಜೈಲು ವೈದ್ಯಾಧಿಕಾರಿಗಳು ಅಗತ್ಯವಿದ್ದರೆ ವಿಶೇಷ ಆಹಾರವನ್ನು ನೀಡಬಹುದು. ಜೈಲು ನಿಯಮ 728 ರಲ್ಲಿ ಬಟ್ಟೆ, ಹಾಸಿಗೆ ನೀಡುವ ನಿಯಮವಿದೆ. ಇದು ಕೊಲೆ ಆರೋಪಿಯನ್ನು ಹೊರತು ಪಡಿಸಿ ಬೇರೆ ಕೈದಿಗಳಿಗೆ ಅನ್ವಯವಾಗುತ್ತದೆ. ದರ್ಶನ್ ನಾನು ನಿತ್ಯ ಜಿಮ್‌ನಲ್ಲಿ ಕಸರತ್ತು ಮಾಡುತ್ತಿದ್ದೆ. ಹೀಗಾಗಿ ಜೈಲಿನಲ್ಲಿ ನೀಡುವ ಊಟದ ಜೊತೆಗೆ ಎಕ್ಟ್ರಾ ಪ್ರೋಟಿನ್ ನೀಡಬೇಕೆಂದು ಮಾನವಿ ಮಾಡಿದ್ದಾರೆ. ಪ್ರತಿ ಭಾರಿ ನಾನು ಮನೆಯಲ್ಲಿ ವ್ಯಾಯಾಮ ಮಾಡ್ತಿದ್ದೆ. ಪ್ರೋಟಿನ್ ಆಹಾರ ತಿನ್ನುತ್ತಿದ್ದೆ. ಹೀಗಾಗಿ ಮನೆ ಊಟ ಬೇಕು ಎಂದಿದ್ದಾರೆ. ದರ್ಶನ್ ಬಂಧನವಾಗೋವರೆಗೂ ವ್ಯಾಯಾಮ ಮಾಡಿಕೊಂಡಿದ್ದರು, ಈಗ ಬಂಧಿಯಾಗಿದ್ದಾರೆ. ಜೈಲಿನಲ್ಲಿದ್ದಾಗಲೂ ಎಲ್ಲಾ ಸೌಲಭ್ಯಗಳು ಬೇಕೆಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಕೆಲವು ಸಮಯದಲ್ಲಿ ಮಾತ್ರ ಮನೆಯ ಊಟ ನೀಡಲು ಅವಕಾಶ ಇದೆ. ನಿಮಗೆ ಬೆನ್ನು ನೋವು ಇದ್ದರೆ, ಜ್ವರ ಇದ್ದರೆ ಚಿಕಿತ್ಸೆ ಕೊಡಿಸಿ. ಜೈಲಿನಲ್ಲಿ ಆಸ್ಪತ್ರೆಯಲ್ಲಿ ಇದೆ ಚಿಕಿತ್ಸೆ ಕೊಡಿಸಿ. ದಿನ 5 ಸಾವಿರ ಜನ ಅದೇ ಜೈಲಿನಲ್ಲಿ ಊಟ ಮಾಡುತ್ತಾರೆ. ಅವರ ಪರಿಸ್ಥಿತಿಯೂ ನೋಡಬೇಕಲ್ಲವೇ. ಅವರ‍್ಯಾರಿಗೂ ವಾಂತಿ-ಭೇದಿ ಆಗುತ್ತಿಲ್ಲ ಎಂದು ಹೇಳಿದರು. ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಜುಲೈ 25ಕ್ಕೆ ಆದೇಶವನ್ನು ಕಾಯ್ದಿರಿಸಿದರು.

Continue Reading

ಕರ್ನಾಟಕ

Actor Darshan: ನಟ ದರ್ಶನ್‌ಗೆ ಇನ್ನೂ 3 ದಿನ ಜೈಲೂಟವೇ ಗತಿ; ಜು.25ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನವಾಗಿರುವ ದರ್ಶನ್ ಮತ್ತು ಗ್ಯಾಂಗ್‌ಗೆ ಆಗಸ್ಟ್ 1 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಉತ್ತರ ಕನ್ನಡ

Uttara Kannada News: ನಮ್ಮಲ್ಲಿರುವ ಕೌಶಲ್ಯಗಳನ್ನು ಅರಿತುಕೊಳ್ಳಬೇಕು; ಡಾ. ಆರ್.ಡಿ. ಜನಾರ್ಧನ

Uttara Kannada News: ಯಲ್ಲಾಪುರ ಪಟ್ಟಣದ ಅಡಿಕೆ ಭವನದಲ್ಲಿ ಸೋಮವಾರ ಗ್ರೀನ್ ಕೇರ್ ಸಂಸ್ಥೆ ಶಿರಸಿ ಹಾಗೂ ಕ್ರಿಯೇಟಿವ್ ಕಂಪ್ಯೂಟರ್ ಇನ್‌ಸ್ಟಿಟ್ಯೂಟ್ ಅವರ ಸಹಯೋಗದಲ್ಲಿ ಆಯೋಜಿಸಿರುವ ಉಚಿತ ಬ್ಯೂಟೀಷಿಯನ್ ಹಾಗೂ ಬೇಸಿಕ್ ಫ್ಯಾಶನ್ ಡಿಸೈನಿಂಗ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

VISTARANEWS.COM

on

Beautician and Basic Fashion Designing Training Programme inauguration in Yallapura
Koo

ಯಲ್ಲಾಪುರ: ಇಂದಿನ ಶತಮಾನ ವಿದ್ಯಾರ್ಹತೆಯ ಶತಮಾನವಾಗಿದೆ. ವಿದ್ಯೆಯ ಮೂಲಕ ನಮ್ಮನ್ನು ಅಳೆಯಲಾಗುತ್ತದೆ. ನಮ್ಮಲ್ಲಿರುವ ಪ್ರತಿಭೆಗಳನ್ನು ಕೌಶಲ್ಯವಾಗಿ ಪರಿವರ್ತಿಸಿಕೊಂಡು ಉದ್ಯೋಗ ಸೃಷ್ಟಿಸಿಕೊಳ್ಳುವ ತರಬೇತಿಗಳ ಅವಶ್ಯಕತೆ ಇಂದಿನ ವಿದ್ಯಾರ್ಥಿಗಳಿಗೆ ಇದೆ ಎಂದು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಡಿ. ಜನಾರ್ಧನ (Uttara Kannada News) ತಿಳಿಸಿದರು.

ಪಟ್ಟಣದ ಅಡಿಕೆ ಭವನದಲ್ಲಿ ಸೋಮವಾರ ಗ್ರೀನ್ ಕೇರ್ ಸಂಸ್ಥೆ ಶಿರಸಿ ಹಾಗೂ ಕ್ರಿಯೇಟಿವ್ ಕಂಪ್ಯೂಟರ್ ಇನ್‌ಸ್ಟಿಟ್ಯೂಟ್ ಅವರ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಬ್ಯೂಟೀಷಿಯನ್ ಹಾಗೂ ಬೇಸಿಕ್ ಫ್ಯಾಶನ್ ಡಿಸೈನಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮಲ್ಲಿರುವ ಕೌಶಲ್ಯಗಳನ್ನು ಅರಿತುಕೊಳ್ಳುವ ಅಗತ್ಯವಿದೆ. ನಮ್ಮಲ್ಲಿರುವ ಕಲೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಜ್ಞಾನ ನಮಗೆ ತರಬೇತಿಗಳಿಂದ ಮಾತ್ರ ದೊರೆಯುತ್ತದೆ. ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಜ್ಞಾನ, ಅದೇ ತಂತ್ರಜ್ನಾನದ ಬದಲಾವಣೆಗೆ ಪ್ರಯತ್ನಿಸುವುದು ಆವಿಷ್ಕಾರ. ಅಂತಹ ಆವಿಷ್ಕಾರಗಳನ್ನು ಮಾಡುವ ನಿಟ್ಟಿನಲ್ಲಿ ನಮ್ಮ ಯೋಚನೆಯಿರಬೇಕು ಎಂದರು.

ಇದನ್ನೂ ಓದಿ: Kannada New Movie: ಗಣೇಶ್ ಅಭಿನಯದ ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ʼದ್ವಾಪರ ದಾಟುತʼ ಹಾಡು ರಿಲೀಸ್‌!

ತರಬೇತಿಗಳ ಮೂಲಕ ಯಾವುದೇ ವಸ್ತು, ಕಲೆ ಅಥವಾ ಕೌಶಲ್ಯವನ್ನು ಸಮರ್ಪಕವಾಗಿ ಉಪಯೋಗಕ್ಕೆ ಬರುವಂತೆ ವಿದ್ಯಾರ್ಥಿಗಳು ಕಲಿಯಬೇಕು. ಪ್ರತಿನಿತ್ಯ ಹೊಸತನಗಳು ನಮ್ಮ ಸುತ್ತಮುತ್ತಲಿನ ಜಗತ್ತಿನಲ್ಲಿ ಕಾಣಸಿಗುತ್ತದೆ. ಅದಕ್ಕೆ ಹೊಂದಿಕೊಳ್ಳುವ, ಅರಿತುಕೊಳ್ಳುವ ಜ್ಞಾನವನ್ನು ನಾವೆಲ್ಲ ಪಡೆಯಬೇಕಿದೆ. ಇದೇ ರೀತಿಯ ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ನಮ್ಮ ಕಾಲೇಜಿನಲ್ಲೂ ಹಮ್ಮಿಕೊಳ್ಳುವ ಆಸಕ್ತಿ ನಮಗೆ ಇದೆ. ಆ ಮೂಲಕ ವಿದ್ಯಾರ್ಥಿಗಳು ಸ್ವಾವಲಂಬಿ ಜೀವನವನ್ನು ಕಂಡುಕೊಳ್ಳಲು ನಮ್ಮಲ್ಲಾದ ಸಹಕಾರವನ್ನು ನೀಡಬಹುದಾಗಿದೆ. ಇಂದು ಉದ್ಯೋಗ ಅರಸಿ ದೊಡ್ಡ ದೊಡ್ಡ ಊರುಗಳಿಗೆ ತೆರಳುವ ಬದಲು, ನಮ್ಮಲ್ಲಿಯೇ ಉದ್ಯೋಗ ಸೃಷ್ಟಿಗೆ ನಾವೆಲ್ಲ ಪ್ರಯತ್ನಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಗ್ರೀನ್ ಕೇರ್ ಸಂಸ್ಥೆ ನಿರ್ದೇಶಕ ಪ್ರಶಾಂತ ಮುಳೆ ಮಾತನಾಡಿ, ನಮ್ಮ ಸಂಸ್ಥೆಯಿಂದ ಸ್ವಾವಲಂಬಿ ಜೀವನ ನೀಡುವ ಉದ್ದೇಶದಿಂದ ತರಬೇತಿ ಕಾರ್ಯಕ್ರಮ ನೀಡಲಾಗುತ್ತಿದೆ. ಅದರಿಂದ ನೀವು ಜನರಿಗೆ ನಗುಮೊಗದಲ್ಲಿ ಸೇವೆ ಸಲ್ಲಿಸಿ, ಸಂತೃಪ್ತ ಜೀವನ ಕಂಡುಕೊಳ್ಳುವಂತಾಗಲಿ ಎಂದರು.

ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವಿದ್ಯಾರ್ಹತೆಯ ಜೊತೆಗೆ ಕೌಶಲ್ಯದ ಅವಶ್ಯಕತೆ ಅಧಿಕವಾಗಿದೆ. ಈ ನಿಟ್ಟಿನಲ್ಲಿ ಉದ್ಯೋಗ ಆಧಾರಿತ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್. ಭಟ್ ಆನಗೋಡ, ಪ.ಪಂ. ಸಮುದಾಯ ಸಂಘಟಣಾಧಿಕಾರಿ ಹೇಮಾವತಿ ಭಟ್ಟ, ಅಸ್ಮಿತೆ ಫೌಂಡೇಶನ್ ಸಿ. ಇ. ಓ ರಿಯಾಜ್ ಸಾಗರ್ ಮಾತನಾಡಿದರು. ಇದೇ ಸಂದರ್ಭದಲ್ಲಿ 20 ಬ್ಯೂಟಿಷಿಯನ್ ಹಾಗೂ 20 ಫ್ಯಾಶನ್ ಡಿಸೈನಿಂಗ್ ತರಬೇತಿಯ ವಿದ್ಯಾರ್ಥಿಗಳಿಗೆ ಕಿಟ್ ವಿತರಿಸಲಾಯಿತು.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ವೇದಿಕೆಯಲ್ಲಿ ಅಡಿಕೆ ವರ್ತಕರ ಸಂಘದ ಅಧ್ಯಕ್ಷ ಆರ್.ವಿ. ಹೆಗಡೆ, ಉದ್ಯಮಿ ಸದಾಶಿವ ಶಿವಯ್ಯನಮಠ, ಗಜಾನನ ಭಟ್, ಸಂಕಲ್ಪ ಟ್ರಸ್ಟ್‌ ಅಧ್ಯಕ್ಷ ಕುಮಾರ ಪಟಗಾರ ಉಪಸ್ಥಿತರಿದ್ದರು. ಸ್ವಾತಿ ಪ್ರಾರ್ಥಿಸಿದರು. ಕ್ರಿಯೇಟಿವ್ ಕಂಪ್ಯೂಟರ್ ಇನ್ಸ್ಟಿಟ್ಯೂಟ್ ಮಾಲಿಕ ಶ್ರೀನಿವಾಸ್ ಮುರ್ಡೇಶ್ವರ ಸ್ವಾಗತಿಸಿದರು. ಲೈಫ್ ಲೈನ್ ಲ್ಯಾಬ್ ಮಾಲಕಿ ಆಶಾ ಡಿಸೋಜ ನಿರೂಪಿಸಿದರು. ಗ್ರೀನ್ ಕೇರ್ ಸಂಸ್ಥೆ ಉಪಾಧ್ಯಕ್ಷೆ ರೋಹಿಣಿ ಸೈಲ್ ವಂದಿಸಿದರು.

Continue Reading

ಬೆಂಗಳೂರು

Rowdy Reels : 500 ರೂ. ಕೊಟ್ಟರೆ ರೌಡಿಗಳ ರೀಲ್ಸ್‌ ಅಪ್ಲೋಡ್‌; ಅಪ್ರಾಪ್ತರಿಗೆ ಬಿಸಿ ಮುಟ್ಟಿಸಿದ ಸಿಸಿಬಿ ಪೊಲೀಸರು

Rowdy Reels : ಸೋಶಿಯಲ್‌ ಮೀಡಿಯಾದಲ್ಲಿ ರೌಡಿಗಳ ರೀಲ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಫ್ಯಾನ್‌ ಪೇಜ್ ಅಡ್ಮಿನ್‌ಗಳು ಬಹುಪಾಲು ಅಪ್ರಾಪ್ತ ಬಾಲಕರು ಎಂದು ತಿಳಿದು ಬಂದಿದೆ. ಈಗಾಗಲೇ ರೌಡಿಗಳ ಅಕೌಂಟ್‌ ಡಿಲೀಟ್‌ ಮಾಡಲಾಗಿದೆ.

VISTARANEWS.COM

on

By

Rowdy reels
Koo

ಬೆಂಗಳೂರು: ಈ ಹಿಂದೆ ದುಷ್ಕೃತ್ಯ ಮಾಡುವವರನ್ನು ಸಮಾಜ ಅಸ್ಪೃಶ್ಯರಂತೆ ನೋಡುತ್ತಿತ್ತು. ಆದರೆ ಇತ್ತೀಚೆಗೆ ಆ್ಯಂಟಿ ಸೋಷಿಯಲ್ ಎಲಿಮೆಂಟ್ಸ್‌ಗಳಿಗೆ ಫ್ಯಾನ್ ಬೇಸ್‌ಗಳು ಹುಟ್ಟಿಕೊಂಡಿದೆ. ಸಾಮಾಜಿಕ ಜಾಲತಾಣಗಳನ್ನು ತೆರೆದರೆ ಸಾಕು ರೌಡಿಗಳು (Rowdy Reels) ಮಚ್ಚು ಹಿಡಿದ ವಿಡಿಯೊಗಳು, ಹುಡುಗರ ಗ್ಯಾಂಗ್ ಕಟ್ಟಿಕೊಂಡು ಬರುವುದು, ಯಾರದ್ದೋ ಡೈಲಾಗ್‌ ಬಳಸಿ ರೌಡಿ ಎಲಿಮೆಂಟ್‌ಗೆ ಕಂಪೇರ್ ಮಾಡಿ ರೀಲ್ಸ್ ಮಾಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇವೆಲ್ಲಾವನ್ನೂ ಗಮನಿಸಿದ್ದ ಸಿಸಿಬಿ ಪೊಲೀಸರು ಅಂತಹ ಕಿರಾತಕರಿಗೆ ಕಡಿವಾಣ ಹಾಕಿದ್ದಾರೆ.

ಸಿಸಿಬಿಯ ಆರ್ಗನೈಝ್ ಕ್ರೈಂ ವಿಂಗ್‌ನ ಕಾರ್ಯಾಚರಣೆ ಇದು. ರೌಡಿ ಎಡಿಟ್ಸ್ ಎಂದು ಹೇಳಿ ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ರೀಲ್ಸ್‌ಗಳು ಪ್ರತಿ ದಿನವೂ ಬಿಡುಗಡೆಯಾಗುತ್ತಿತ್ತು. ಪೊಲೀಸರಿಗೂ ಸಿಗದ ಈ ರೌಡಿಗಳ ಪೋಟೊಗಳು, ವಿಡಿಯೊ ರೀಲ್ಸ್‌ ಮಾಡುವವರಿಗೆ ಸಿಗುತ್ತಿತ್ತು. ಇದರಿಂದ ಸಹಜವಾಗಿಯೇ ಪೊಲೀಸರಿಗೂ ಅನುಮಾನ ಬಂದಿತ್ತು.

ಇದನ್ನೂ ಓದಿ: Accident News : ಭಾರಿ ಮಳೆಗೆ ಉರುಳಿ ಬಿದ್ದ ಮರ; ಬೈಕ್‌ನಲ್ಲಿ ತೆರಳುತ್ತಿದ್ದ ಹೆಸ್ಕಾಂ ನೌಕರರ ದುರ್ಮರಣ

ರೌಡಿಗಳಾದ ಸೈಲೆಂಟ್ ಸುನೀಲ , ವಿಲ್ಸನ್ ಗಾರ್ಡನ್ ನಾಗ , ಕಾಡುಬೀಸನಹಳ್ಳಿ ರೋಹಿತ್, ‌ಕುಣಿಗಲ್ ಗಿರಿ ಇಂತಹ ನಟೋರಿಯಸ್ ರೌಡಿಗಳ ರೀಲ್ಸ್‌ಗಳೇ ಹೆಚ್ಚಾಗಿವೆ. ಅಷ್ಟಲ್ಲದೆ ಆಯಾ ಏರಿಯಾದ ಪುಡಿ ರೌಡಿಗಳೂ ಕೂಡ ತಮ್ಮ ಹವಾ ಮೇಂಟೇನ್ ಮಾಡುವ ಸಲುವಾಗಿ ರೀಲ್ಸ್ ಮೊರೆ ಹೋಗುತ್ತಿದ್ದರು.

ಕೆಲವರು ರೌಡಿಗಳ ಶಿಷ್ಯಂದರು ಬಾಸ್‌ ಎಂದು ರೀಲ್ಸ್‌ ಮಾಡಿದರೆ, ಉಳಿದವರು ಕೆಲಸವಿಲ್ಲದ ಕೆಲ ಹುಡುಗರಿಗೆ 500 ರೂ. ಕೊಟ್ಟು ರೀಲ್ಸ್ ಮಾಡಿ ಅಪ್ಲೋಡ್ ಮಾಡುವ ಕೆಲಸಗಳನ್ನು ನೀಡುತ್ತಿದ್ದರು. ಇನ್ನು ಏರಿಯಾದಲ್ಲಿ ತಮ್ಮ ಅಸ್ತಿತ್ವದ ಬಗ್ಗೆ ಇರುವಿಕೆಯನ್ನು ತೋರಿಸಿಕೊಳ್ಳಲು ಹಾಗೂ ಫ್ಯಾನ್ ಫಾಲೋವರ್ಸ್‌ಗಳನ್ನು ಹೆಚ್ಚಿಸಲು ಈ ರೀತಿಯ ಕೆಲಸಗಳನ್ನು ರೌಡಿಗಳ ಶಿಷ್ಯಂದಿರು ಮಾಡುತ್ತಿದ್ದರು.

ಇನ್ನು ಎಲ್ಲೋ ಕೂತ ಮುಖ್ಯ ರೌಡಿಯೇ ಈ ರೀತಿಯ ಕೃತ್ಯವನ್ನು ಎಸಗಲು ಪ್ರೇರೆಪಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಬ್ಯಾನರ್‌ಗಳನ್ನು ಕಟ್ಟಿ ಏರಿಯಾದಲ್ಲಿ ಹವಾ ತೋರಿಸುತ್ತಿದ್ದರು. ಸದ್ಯ ಸೋಷಿಯಲ್ ಮೀಡಿಯಾ ಮೂಲಕ ತಮ್ಮದೇ ಆದ ಕುಖ್ಯಾತಿಯನ್ನು ಗಳಿಸುತ್ತಿದ್ದಾರೆ. ಇನ್ನು ಈ ಸಂಬಂಧ ಅಪ್ರಾಪ್ತರ ಮನೆಯವರನ್ನು ಕರೆಸಿ ವಾರ್ನಿಂಗ್ ಮಾಡಲಾಗಿದೆ. ಸುಮಾರು 60ಕ್ಕೂ ಹೆಚ್ಚು ರೌಡಿಗಳ ಪೇಜ್‌ ಅಕೌಂಟ್‌ಗಳನ್ನು ಬಂದ್ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral News
Latest50 seconds ago

Viral News: ಮಕ್ಕಳ ಹಸಿವು ನೀಗಿಸಲು ಸೈನಿಕರೆದುರು ಬೆತ್ತಲಾಗುತ್ತಿರುವ ಮಹಿಳೆಯರು!

Suraj Revanna Case
ಕರ್ನಾಟಕ24 mins ago

Suraj Revanna Case: ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌; 2ನೇ ಕೇಸ್‌ನಲ್ಲೂ ಜಾಮೀನು, ನಾಳೆ ರಿಲೀಸ್‌!

Gautam Gambhir
ಕ್ರೀಡೆ33 mins ago

Gautam Gambhir : ನನ್ನ ಮತ್ತು ಕೊಹ್ಲಿಯ ನಡುವೆ ಗೌರವಯುತ ಸಂಬಂಧವಿದೆ; ಗೌತಮ್ ಗಂಭೀರ್​

Nipah Virus
ಆರೋಗ್ಯ34 mins ago

Nipah Virus: ಡೇಂಜರಸ್‌ ನಿಫಾ ವೈರಸ್‌; ಇದರ ಲಕ್ಷಣಗಳೇನು? ನಮಗೆ ಅಪಾಯ ಇದೆಯೆ?

Nitish Kumar
ದೇಶ35 mins ago

Nitish Kumar: ಬಿಹಾರಕ್ಕೆ ವಿಶೇಷ ಸ್ಥಾನಮಾನ ಕೊಡಲ್ಲ ಎಂದ ಮೋದಿ ಸರ್ಕಾರ; ನಿತೀಶ್‌ ಕುಮಾರ್‌ ಬಂಡಾಯ ನಿಶ್ಚಿತ?

Shoe Theft
ಕ್ರೈಂ40 mins ago

Shoe Theft: ಬೆಂಗಳೂರಿನಲ್ಲಿ 10,000 ಶೂ, ಚಪ್ಪಲಿ ಕದ್ದ ಖತರ್‌ನಾಕ್‌ ಕಳ್ಳರ ಬಂಧನ!

Actor Darshan
ಕರ್ನಾಟಕ48 mins ago

Actor Darshan: ನಟ ದರ್ಶನ್‌ಗೆ ಇನ್ನೂ 3 ದಿನ ಜೈಲೂಟವೇ ಗತಿ; ಜು.25ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Beautician and Basic Fashion Designing Training Programme inauguration in Yallapura
ಉತ್ತರ ಕನ್ನಡ50 mins ago

Uttara Kannada News: ನಮ್ಮಲ್ಲಿರುವ ಕೌಶಲ್ಯಗಳನ್ನು ಅರಿತುಕೊಳ್ಳಬೇಕು; ಡಾ. ಆರ್.ಡಿ. ಜನಾರ್ಧನ

Rowdy reels
ಬೆಂಗಳೂರು1 hour ago

Rowdy Reels : 500 ರೂ. ಕೊಟ್ಟರೆ ರೌಡಿಗಳ ರೀಲ್ಸ್‌ ಅಪ್ಲೋಡ್‌; ಅಪ್ರಾಪ್ತರಿಗೆ ಬಿಸಿ ಮುಟ್ಟಿಸಿದ ಸಿಸಿಬಿ ಪೊಲೀಸರು

YouTube
ದೇಶ1 hour ago

You Tube : ಮೈಕ್ರೋಸಾಫ್ಟ್​ ಸಮಸ್ಯೆ ಬಳಿಕ ಇದೀಗ ಯೂಟ್ಯೂಬ್​​ನಲ್ಲೂ ತಾಂತ್ರಿಕ ದೋಷ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌