Gas geyser leak : ಗೀಸರ್‌ ಗ್ಯಾಸ್‌ ಸೋರಿಕೆ; ಬಾತ್‌ರೂಮ್‌ನಲ್ಲೇ ತಾಯಿ-ಮಗ ಸಾವು - Vistara News

ರಾಮನಗರ

Gas geyser leak : ಗೀಸರ್‌ ಗ್ಯಾಸ್‌ ಸೋರಿಕೆ; ಬಾತ್‌ರೂಮ್‌ನಲ್ಲೇ ತಾಯಿ-ಮಗ ಸಾವು

Gas geyser leak : ಗೀಸರ್‌ ಗ್ಯಾಸ್‌ ಸೋರಿಕೆಯಾಗಿದ್ದು, ಅದರ ಅನಿಲ ಸೇವಿಸಿದ ತಾಯಿ-ಮಗ ಇಬ್ಬರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

Gas geyser leak
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಬಾತ್‌ರೂಮ್‌ಗೆ (gas geyser leaks) ಹೋಗಿದ್ದಾಗ ಗೀಸರ್‌ನ ಗ್ಯಾಸ್‌ ಸೋರಿಕೆಯಾಗಿ ಉಸಿರುಗಟ್ಟಿ ತಾಯಿ-ಮಗ ಇಬ್ಬರು ಮೃತಪಟ್ಟಿದ್ದಾರೆ. ರಾಮನಗರದ ಮಾಗಡಿಯ ಜ್ಯೋತಿ ನಗರದಲ್ಲಿ ಘಟನೆ ನಡೆದಿದೆ. ಶೋಭಾ (40), ದಿಲೀಪ್ (17) ಮೃತ ದುರ್ದೈವಿಗಳು.

ದಿಲೀಪ್‌ ಬಿಸಿ ನೀರು ಕಾಯಿಸಲು ಗ್ಯಾಸ್ ಗೀಜರ್ ಆನ್ ಮಾಡಿದ್ದ. ಈ ವೇಳೆ ಅನಿಲ ಸೋರಿಕೆಯಾಗಿ ಆತ ಉಸಿರುಗಟ್ಟಿ ಮೃತಪಟ್ಟಿದ್ದ. ಸುಮಾರು ಸಮಯದವರೆಗೂ ಮಗ ಬಾರದೇ ಇದ್ದಾಗ, ಆತನನ್ನು ನೋಡಲು ಬಾತ್‌ರೂಮ್‌ಗೆ ಬಂದ ಶೋಭಾ, ವಿಷ ಅನಿಲ ಸೇವಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ಇತ್ತ ಅವರಿಬ್ಬರನ್ನೂ ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅದಾಗಲೇ ಅವರಿಬ್ಬರು ಮೃತಪಟ್ಟಿದ್ದರು. ನಿನ್ನೆ ಭಾನುವಾರ ಸಂಜೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆ-ಗಾಳಿಗೆ ಯುವಕನ ತಲೆ ಮೇಲೆ ಮುರಿದು ಬಿದ್ದ ವಿದ್ಯುತ್‌ ಕಂಬ

ಹೆಂಡತಿಗೆ ಹೆದರಿಸಲು ಹೋಗಿ ಜೀವ ಕಳೆದುಕೊಂಡ ಲೋಕೋ ಪೈಲಟ್‍!

ಕೆಲವರು ತಮ್ಮವರನ್ನು ಹೆದರಿಸುವ ಸಲುವಾಗಿ ಆಗಾಗ ಸಾಯುವುದಾಗಿ ತಮಾಷೆ ಮಾಡುತ್ತಿರುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿಗೆ ಈ ತಮಾಷೆಯೇ ಘೋರವಾಗಿ ಬಿಟ್ಟಿದೆ. ಬಿಹಾರದ 33 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮಕ್ಕಳನ್ನು ಬೆದರಿಸುವ ಪ್ರಯತ್ನದಲ್ಲಿ ನೇಣು ಬಿಗಿದು ಆತ್ಮಹತ್ಯೆ(Self Harming) ಮಾಡಿಕೊಳ್ಳುವಂತೆ ನಟಿಸಲು ಹೋಗಿ ದುರಂತವಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಗೋಪಾಲಪಟ್ಟಣಂನ ಕೊಟ್ಟಪಲೆಂ ಪ್ರದೇಶದಲ್ಲಿರುವ ಗಣೇಶ್ ನಗರದಲ್ಲಿ ನಡೆದಿದೆ.

ಬಿಹಾರದ 33 ವರ್ಷದ ಸಹಾಯಕ ಲೋಕೋ ಪೈಲಟ್ ಚಂದನ್ ಕುಮಾರ್ ದುರಂತವಾಗಿ ಪ್ರಾಣ ಕಳೆದುಕೊಂಡ ವ್ಯಕ್ತಿ. ಕಳೆದ ಐದು ವರ್ಷಗಳಿಂದ ಕುಟುಂಬದ ಜೊತೆ ವಾಸಿಸುತ್ತಿದ್ದ ಚಂದನ್ ಅವರು ಪತ್ನಿ ಲಾಲ್ ಮುನ್ನಿ ಕುಮಾರಿ ಮತ್ತು ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಪೊಲೀಸ್ ವರದಿ ಪ್ರಕಾರ, ಚಂದನ್ ಅವರ ಮಕ್ಕಳು ತುಂಬಾ ಗಲಾಟೆ ಮಾಡುತ್ತಿದ್ದ ಕಾರಣ ಈ ವಿಚಾರಕ್ಕೆ ಅವರ ಮತ್ತು ಅವರ ಹೆಂಡತಿಯ ನಡುವೆ ವಾಗ್ವಾದ ಉಂಟಾಯಿತು. ಆರಂಭದಲ್ಲಿ, ಮುನ್ನಿ ಕುಮಾರಿ ಮಕ್ಕಳ ಪರವಾಗಿ ನಿಂತರು. ಇದರಿಂದ ಕೋಪಗೊಂಡ ಚಂದನ್ ಆಕೆಗೆ ಪಾಠ ಕಲಿಸಲು ಮತ್ತು ಕುಟುಂಬದವರನ್ನು ಹೆದರಿಸಲು, ತನ್ನ ಕುತ್ತಿಗೆಗೆ ಸೀರೆಯನ್ನು ಕಟ್ಟಿ, ಇನ್ನೊಂದು ತುದಿಯನ್ನು ಸೀಲಿಂಗ್ ಫ್ಯಾನ್ ಹುಕ್‍ಗೆ ಕಟ್ಟಿದರು. ದುರದೃಷ್ಟವಶಾತ್, ಸೀರೆ ಆಕಸ್ಮಿಕವಾಗಿ ಬಿಗಿಯಾಗಿ ಇದು ಚಂದನ್ ಸಾವಿಗೆ ಕಾರಣವಾಯಿತು.

ತುಂಬಾ ಸಮಯವಾದರೂ ಆತನ ಮಲಗುವ ಕೋಣೆಯ ಬಾಗಿಲು ತೆರೆಯದ ಕಾರಣ ಮುನ್ನಿ ಕುಮಾರಿ, ನೆರೆಹೊರೆಯವರ ಸಹಾಯದಿಂದ ಅದನ್ನು ಬಲವಂತವಾಗಿ ತೆರೆಸಿದಳು, ಆದರೆ ಅಲ್ಲಿ ಚಂದನ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ತಕ್ಷಣ ಆತನನ್ನು ಪರೀಕ್ಷಿಸಿದಾಗ ಆತ ಈಗಾಗಲೇ ಮೃತಪಟ್ಟಿರುವುದಾಗಿ ಎಂದು ತಿಳಿದುಬಂದಿದೆ.

ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಬಂದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈ ದುರಂತ ಘಟನೆಯು ಕುಟುಂಬವನ್ನು ತೀವ್ರ ಆಘಾತ ಮತ್ತು ದುಃಖದಲ್ಲಿ ಮುಳುಗಿಸಿದೆ. ಪತ್ನಿಯೊಂದಿಗೆ ಜಗಳವಾಡಿದ ನಂತರ ಚಂದನ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಸಹಾಯಕ ಪೊಲೀಸ್ ಆಯುಕ್ತ ಅಣ್ಣೆಪು ನರಸಿಂಹ ಮೂರ್ತಿ ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ; ನಾಲ್ವರು ಗಂಭೀರ

Karnataka Rain : ಸತತವಾಗಿ ಸುರಿದ ಮಳೆಗೆ ಹಲವೆಡೆ ಗೋಡೆ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಮೈಸೂರಿನಲ್ಲಿ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿದು ನಾಲ್ವರು ಗಾಯಗೊಂಡಿದ್ದಾರೆ. ಹೆದ್ದಾರಿಗೆ ಬೃಹತ್‌ ಮರ ಬಿದ್ದಿದ್ದು, ಶಿರಸಿ-ಬನವಾಸಿ ರಸ್ತೆ ಸಂಚಾರ ಬಂದ್ ಆಗಿದೆ.

VISTARANEWS.COM


on

By

karnataka rain
Koo

ಮೈಸೂರು: ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿದು (Karnataka Rain) ಬಿದ್ದಿದೆ. ಚಿತ್ರಮಂದಿರ ಪಕ್ಕದಲ್ಲೇ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಕೆಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ತಬರೀಸ್ ಮತ್ತು ಅರ್ಮಾನ್ ಎಂಬುವವರು ಗಂಭೀರವಾಗಿ ಗಾಯಗೊಂಡವರು. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಗೋಡೆ ಕೆಳಗೆ ಬಿದ್ದ ಪರಿಣಾಮ ಬಟ್ಟೆ ಅಂಗಡಿಯ ಸ್ಟಾಲ್‌ಗಳು ನೆಲಕಚ್ಚಿವೆ. ಜೆಸಿಬಿ ಯಂತ್ರದ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಹೆದ್ದಾರಿಗೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಶಿರಸಿ-ಹೊಸನಗರ ರಾಜ್ಯ ಹೆದ್ದಾರಿಗೆ ಬೃಹತ್ ಮರವೊಂದು ಬಿದ್ದಿದೆ. ಶಿರಸಿ ತಾಲೂಕಿನ ಗುಡ್ನಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಶಿರಸಿ-ಬನವಾಸಿ ರಸ್ತೆ ಸಂಚಾರ ಬಂದ್ ಆಗಿದ್ದು, ಮರ ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅರಣ್ಯ, ಲೋಕೋಪಯೋಗಿ ಇಲಾಖೆ, ಹೆಸ್ಕಾಂ, ಪೊಲೀಸ್ ಇಲಾಖೆಯಿಂದ ತೆರವು ಕಾರ್ಯಾಚರಣೆ ನಡೆದಿದೆ.

ಭಾರಿ ಮಳೆಗೆ ಸೋರುತ್ತಿರುವ ಗ್ರಂಥಾಲಯ

ಭಾರಿ ಮಳೆಗೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಸಕಲೇಶಪುರ ಪಟ್ಟಣದ ಐಬಿ ರಸ್ತೆಯಲ್ಲಿರುವ ಸ್ಕೌಟ್ ಅಂಡ್ ಗೈಡ್ ಕಟ್ಟಡದಲ್ಲಿರುವ ಗ್ರಂಥಾಲಯ ಸೋರುತಿದ್ದು, ಪುಸ್ತಕಗಳು ನೀರುಪಾಲಾಗಿವೆ. ಗ್ರಂಥಾಲಯದ ಹೆಂಚುಗಳು ಹೊಡೆದು ಹೋಗಿದ್ದು, ಯಾವ ಕ್ಷಣದಲ್ಲಾದರೂ ಲೈಬ್ರರಿ ಬೀಳುವ ಸಾಧ್ಯತೆ ಇದೆ. ಸೋರುತ್ತಿರುವ ಮಳೆ ನೀರಿನಿಂದ ಲಕ್ಷಾಂತರ ರೂ ಮೌಲ್ಯದ ಅಮೂಲ್ಯ ಪುಸ್ತಕಗಳಿಗೆ ಹಾನಿಯಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆ-ಗಾಳಿಗೆ ಯುವಕನ ತಲೆ ಮೇಲೆ ಮುರಿದು ಬಿದ್ದ ವಿದ್ಯುತ್‌ ಕಂಬ

ಊರ ಬಾಗಿಲಿಗೆ ಬಂದು‌ನಿಂತ ಘಟಪ್ರಭಾ ನದಿ ನೀರು

ಬೆಳಗಾವಿಯಲ್ಲಿ ಅಪಾಯದ ಮಟ್ಟ ಮೀರಿ ಘಟಪ್ರಭಾ ನದಿ ಹರಿಯುತ್ತಿದ್ದು, ಊರ ಬಾಗಿಲಿಗೆ ಬಂದು‌ನಿಂತಿದೆ. ಮುಸಗುಪ್ಪಿ ಗ್ರಾಮಕ್ಕೆ ಪ್ರವಾಹದ ಆತಂಕ ಶುರುವಾಗಿದೆ. ನದಿ ಪಕ್ಕದ ಕಬ್ಬು ಸೇರಿದಂತೆ ಹಲವು ಬೆಳೆಗಳು ಸಂಪೂರ್ಣ ಜಲಾವೃತಗೊಂಡಿದೆ. ಇನ್ನೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ಕೃಷ್ಣೆಯ ಜತೆಗೆ ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದ್ದು, ಈಗಾಗಲೇ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ 7 ಸೇತುವೆಗಳು ಮುಳುಗಡೆಯಾಗಿವೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ‌ ಗ್ರಾಮದವರಿಗೂ ನದಿ ತೀರಕ್ಕೆ ಹೋಗದಂತೆ ಜಿಲ್ಲಾಡಳಿತದಿಂದ ಕಟ್ಟು ನಿಟ್ಟಿನ ಎಚ್ಚರಿಕೆವಹಿಸಿದೆ.

ಹಾವೇರಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಧರ್ಮಾ ನದಿ ಉಕ್ಕಿ ಹರಿಯುತ್ತಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಹರಿದಿರುವ ಧರ್ಮಾ ಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಹಾನಗಲ್ ತಾಲೂಕಿನ ಕಂಚಿನೆಗಳೂರು ಬಳಿ ಜಲಪಾತ ಸೃಷ್ಟಿಯಾಗಿದೆ. ವರದಾನದಿಯ ಅಬ್ಬರಕ್ಕೆ ಹಾವೇರಿಯ ಹೊಸರಿತ್ತಿಯಲ್ಲಿರುವ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮೂಲ ಸಂಸ್ಥಾನ ಮಟ ಜಲಾವೃತಗೊಂಡಿದೆ. ಮಠದ ಒಳಗೆ ನೀರು ನುಗ್ಗುವ ಆತಂಕಇದ್ದು, ನೂರಾರು ಎಕರೆ ಬೆಳೆ ಮುಳುಗಡೆಯಾಗಿದೆ.

ಕೆಆರ್‌ಎಸ್‌ ಬೋಟಿಂಗ್‌ ಪಾಯಿಂಟ್‌ಗೆ ನಿಷೇಧ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ನ ಬೋಟಿಂಗ್ ಪಾಯಿಂಟ್‌ಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಜನರು ಓಡಾಡುವ ಸ್ಥಳದಲ್ಲೂ ನೀರು ತುಂಬಿದೆ. ನೀರಿನ ಪ್ರಮಾಣ ಕಡಿಮೆ ಆಗುವವರೆಗೂ ಬೋಟಿಂಗ್ ಸ್ಥಗಿತ ಮಾಡಲಾಗಿದೆ.

ತುಮಕೂರಿನಲ್ಲಿ ಕೆಸರು ಗದ್ದೆಯಂತಾದ ರಸ್ತೆ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತುಮಕೂರಿನ ಹಿರೇಹಳ್ಳಿಯಲ್ಲಿ ರಸ್ತೆಯು ಕೆಸರು ಗದ್ದೆಯಂತಾಗಿದೆ. ಹಿರೇಹಳ್ಳಿ ಇಂಡಸ್ಟ್ರಿಯಲ್ ಏರಿಯಾಗೆ ಕೆಲಸಕ್ಕೆ ಹೋಗಲು ಪ್ರತಿನಿತ್ಯ ನೂರಾರು ವಾಹನಗಳು ಓಡಾಟ ನಡೆಸುತ್ತವೆ. ರಸ್ತೆಯಲ್ಲಿ ಎರಡು ಮೂರು ಅಡಿಗಳಷ್ಟು ಗುಂಡಿ ಬಿದ್ದರು ರಸ್ತೆ ಸರಿಪಡಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.

ಇದನ್ನೂ ಓದಿ: Forced Conversion : ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದವರಿಗೆ ಬ್ರೈನ್‌ ವಾಶ್‌; ಮತಾಂತರಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್‌

ನಿರಂತರ ಜಡಿ ಮಳೆ ಎಫೆಕ್ಟ್‌; ಅಡಿಕೆ ಕೊಯ್ಲಿಗೆ ತೊಂದರೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ರಾಜ್ಯದಲ್ಲಿ ಅತಿ ಹೆಚ್ಚು ಅಡಿಕೆ ಬೆಳೆಯುವ ತಾಲೂಕಾಗಿದೆ. 36 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಅಡಿಕೆ ಬೆಳೆ ಕೊಯ್ಲಿಗೆ ಬಂದಿದೆ. ಆದರೆ ನಿರಂತರ ಜಡಿ ಮಳೆಯಿಂದಾಗಿ ಕೊಯ್ಲಿಗೆ ತೊಂದರೆ ಆಗುತ್ತಿದೆ. ರೈತರು ಕಳೆದ ವರ್ಷ ಮಳೆಯಿಲ್ಲದೇ ಟ್ಯಾಂಕರ್ ಮೂಲಕ ನೀರು ಪೂರೈಸಿ ಅಡಿಕೆ ತೋಟ ಉಳಿಸಿಕೊಂಡಿದ್ದರು. ಈ ವರ್ಷ ಉತ್ತಮ‌ ಮಳೆಯಾಗುತ್ತಿದ್ದು, ನಿರಂತರ ಜಡಿ ಮಳೆಯಾಗುತ್ತಿರುವ ಹಿನ್ನೆಲೆ ಅಡಿಕೆ ತೋಟಗಳಲ್ಲಿ ಹೆಜ್ಜೆ ಇಡದ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ ಕೊಯ್ಲಿ ಮಾಡದಿದ್ದರೇ ಅಡಿಕೆ ಗೋಟು ಆಗುವ ಭಯವಿದೆ. ಅಡಿಕೆ ಗೋಟು ಆದರೆ ಮಾರುಕಟ್ಟೆಯಲ್ಲಿ ದರ ಕಡಿಮೆಯಾಗಲಿದೆ.

ಬಿರುಗಾಳಿಗೆ ಮುರಿದು ಬಿದ್ದ ವಿದ್ಯುತ್‌ ಕಂಬ

ಕಾಫಿನಾಡು ಚಿಕ್ಕಮಗಳೂರಲ್ಲಿ ಮಳೆ ತಗ್ಗಿದ್ದರೂ ಗಾಳಿ ವೇಗ ತಗ್ಗುತ್ತಿಲ್ಲ. ಭಾರಿ ಗಾಳಿಗೆ ಬೃಹತ್ ವಿದ್ಯುತ್ ಕಂಬ ಮುರಿದು ಬಿದ್ದಿದೆ. 66 ಕೆ.ವಿ. ವಿದ್ಯುತ್ ಟವರ್ ಅರ್ಧಕ್ಕೆ ಮುರಿದು ಬಿದ್ದಿದೆ. ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಸಮೀಪದ ಆಮೆಕಟ್ಟೆ ಬಳಿ ಘಟನೆ ನಡೆದಿದೆ. ಆಲ್ದೂರು ಹೋಬಳಿಯ ಹತ್ತಾರು ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಬಂದ್ ಆಗಿದೆ. ಇನ್ನು ಎರಡು ದಿನ ಕತ್ತಲಲ್ಲಿ ಕಳೆಯುವಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ; ಕರಾವಳಿ, ಮಲೆನಾಡಿಗೂ ಎಚ್ಚರಿಕೆ

Karnataka Weather Forecast: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುವ( rain news) ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಜಿಲ್ಲೆಗಳಿಗೂ ಅಲರ್ಟ್‌ ನೀಡಲಾಗಿದೆ. ಎಲ್ಲೆಲ್ಲಿ ಮಳೆಯ ಅಬ್ಬರ ಇರಲಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ (Karnataka Weather Forecast) ಮುಂದುವರಿಯಲಿದೆ. ಜು.22ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಪ್ರತ್ಯೇಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಾವಣಗೆರೆ, ಬೆಳಗಾವಿಯಲ್ಲಿ ಅಬ್ಬರಿಸುವ ಮಳೆ

ದಕ್ಷಿಣ ಒಳನಾಡಿನ ದಾವಣಗೆರೆ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ , ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

ಬೆಂಗಳೂರಲ್ಲಿ ಗಾಳಿ ಜತೆಗೆ ಮಳೆ

ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನೂ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಆರೆಂಜ್‌ ಅಲರ್ಟ್‌ ಘೋಷಣೆ

ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬೆಳಗಾವಿ, ಬೀದರ್, ಕಲಬುರಗಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Renaming Ramanagara: ರಾಮನಗರದಲ್ಲಿ ಬೆಂಗಳೂರಿನ ಕಸ ಸುರಿಯಲು ಹುನ್ನಾರ: ಎಚ್‌.ಡಿ. ಕುಮಾರಸ್ವಾಮಿ

Renaming Ramanagara: ಇವರ ಬ್ರ್ಯಾಂಡ್ ಬೆಂಗಳೂರು ರೀತಿ ರಾಮನಗರವನ್ನೂ ಅಭಿವೃದ್ಧಿ ಮಾಡಬೇಕಾ? ರಾಮನಗರ ಜಿಲ್ಲೆ ಅಭಿವೃದ್ಧಿಯಾಗಿ ಹತ್ತು ವರ್ಷಗಳಾಯಿತು. ಇವರು ಬಂದು ಏನು ಅಭಿವೃದ್ಧಿ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Koo

ಹಾಸನ: ರಾಮನಗರ ಹೆಸರು ಬದಲಾವಣೆ (Renaming Ramanagara) ಮಾಡಲು ಆಗುತ್ತಾ? ಅವರ ಹೆಸರು ಬದಲಾವಣೆ ಮಾಡಲು ಆಗದಿದ್ದ ಮೇಲೆ ರಾಮನಗರ ಹೆಸರು ಬದಲಾವಣೆ ಮಾಡಲು ಆಗುತ್ತದೆಯೇ? ಅದರ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. 1989ರಲ್ಲಿ ಇವರು ಸಾತನೂರಿನಲ್ಲಿ ಶಾಸಕರಾಗಿರಲಿಲ್ಲವೇ? ಹೇಗಿತ್ತು ಸಾತನೂರು? ಕನಕಪುರ ಹೇಗಿತ್ತು? ಯಾರಿಂದ ಅಭಿವೃದ್ಧಿ ಆಯಿತು ಎಂಬ ಮಾಹಿತಿ ಇಲ್ಲವೇ ಅವರಿಗೆ ಎಂದು ಡಿಸಿಎಂ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ವಿಚಾರದ ಬಗ್ಗೆ ಟೀಕಿಸಿದ ಅವರು, ಇವರ ಬ್ರ್ಯಾಂಡ್ ಬೆಂಗಳೂರು ರೀತಿ ರಾಮನಗರವನ್ನೂ ಅಭಿವೃದ್ಧಿ ಮಾಡಬೇಕಾ? ರಾಮನಗರ ಜಿಲ್ಲೆ ಅಭಿವೃದ್ಧಿಯಾಗಿ ಹತ್ತು ವರ್ಷಗಳಾಯಿತು. ಇವರು ಬಂದು ಏನು ಅಭಿವೃದ್ಧಿ ಮಾಡುತ್ತಾರೆ? ಈಗ ಬೆಂಗಳೂರಿನ ಜಾಗವನ್ನು ಯಾವನಿಗೋ 45 ಸಾವಿರ ಕೋಟಿಗೆ ಮೂವತ್ತು ವರ್ಷ ಲೀಸ್ʼಗೆ ಕೊಡಲು ಹೊರಟಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಮಾಡೋದು ಕಸ ತುಂಬಿಸಲಿಕ್ಕಾ? ರಾಮನಗರ ತೆಗೆದು ಬೆಂಗಳೂರು ದಕ್ಷಿಣ ಹೆಸರಿಡುವುದು ಬೆಂಗಳೂರಿನ ಕಸ ತಂದು ತುಂಬಿಸಲಿಕ್ಕಾ? ಕಪ್ಪುಪಟ್ಟಿಯಲ್ಲಿ ಇದ್ದವರನ್ನು ಕರೆದುಕೊಂಡು ಬಂದು ಲೀಸ್ ಕೊಡಲು ಹೊರಟಿದ್ದೀರಾ? ಸುಮ್ಮನೆ ಬಾಯಿ ಚಪಲಕ್ಕೆ ಹೇಳುತ್ತಿಲ್ಲ ನಾನು, ಸರ್ಕಾರದಲ್ಲಿ ಏನೇನು ನಡೆದಿದೆ ಎಲ್ಲಾ ಮಾಹಿತಿ ಸಂಗ್ರಹ ಮಾಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ | Lakshmi Hebbalkar: ಮಳೆಗೆ ತತ್ತರಿಸಿದ ಉಡುಪಿ; ನನ್ನ ಅವಶ್ಯಕತೆ ಇದ್ದಾಗಷ್ಟೇ ಬರ್ತೀನಿ ಎಂದ ಲಕ್ಷ್ಮೀ ಹೆಬ್ಬಾಳಕರ್

ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಇನ್ನು ನಿರ್ಧಾರ ಮಾಡಿಲ್ಲ

ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಬಗ್ಗೆ ಇನ್ನು ನಿರ್ಧಾರ ಮಾಡಿಲ್ಲ. ಯಾರೇ ಅಭ್ಯರ್ಥಿಯಾದರೂ ಅವರು
ಎನ್‌ಡಿಎ ಅಭ್ಯರ್ಥಿಯಾಗುತ್ತಾರೆ. ಎನ್‌ಡಿಎ ಅಭ್ಯರ್ಥಿ ನಿಲ್ಲುವುದಷ್ಟೇ ಅಲ್ಲ, ಗೆಲ್ಲಲೇಬೇಕು. ಗೆಲ್ಲುವುದಕ್ಕೆ ಏನೆಲ್ಲಾ ನಿರ್ಧಾರ ಮಾಡಬೇಕೋ ಅದನ್ನೆಲ್ಲಾ ಮಾಡುತ್ತೇವೆ. ಯಾರು ಅಭ್ಯರ್ಥಿ ಎಂದು ಇನ್ನೂ ಚರ್ಚೆ ಹಂತಕ್ಕೆ ಬಂದಿಲ್ಲ. ಕೇಂದ್ರದ ನಾಯಕರು, ರಾಜ್ಯದ ಬಿಜೆಪಿ ನಾಯಕರು ಎಲ್ಲಾ ಕುಳಿತು ಚರ್ಚೆ ಮಾಡುತ್ತೇವೆ. ಯೋಗೇಶ್ವರ್ ಅವರು ಗೆಲ್ಲಲು ಅವಕಾಶ ಇದ್ದರೆ ಅವರೇ ಚುನಾವಣೆಗೆ ನಿಲ್ಲುತ್ತಾರೆ. ಇಲ್ಲವೆಂದರೆ ಬೇರೆ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಸ್ಥಳೀಯ ಕಾರ್ಯಕರ್ತನಿಗೆ ಟಿಕೆಟ್ ಕೊಡಬೇಕಾ? ಎನ್ನುವ ಬಗ್ಗೆ ತೀರ್ಮಾನ ಮಾಡುತ್ತೇವೆ. ನಾನು ಮೊದಲಿನಿಂದಲೂ ಹೇಳುತ್ತಿದ್ದೇನೆ. ಹಾಸನದಲ್ಲಿ ಒಬ್ಬ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ ಎಂದು ಹೇಳಿದ್ದೆ. ಗೆಲ್ಲಿಸಲಿಲ್ಲವೇ? ನಮ್ಮ ಪಕ್ಷಕ್ಕೆ ಆ ಶಕ್ತಿ ಇದೆ, ಚನ್ನಪಟ್ಟಣದಲ್ಲೂ ಅಷ್ಟೇ ಎಂದು ಅವರು ಹೇಳಿದರು.

ಇದನ್ನೂ ಓದಿ | Vande Mataram: ಸಂಸತ್ತಿನಲ್ಲಿ ವಂದೇ ಮಾತರಂ, ಥ್ಯಾಂಕ್ಸ್‌ ಎಂದು ಹೇಳುವಂತಿಲ್ಲ; ಏಕಿಂಥ ಆದೇಶ?

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಚ್.ಕೆ.ಕುಮಾರಸ್ವಾಮಿ, ಶಾಸಕ ಸಿ.ಎನ್.‌ಬಾಲಕೃಷ್ಣ, ಸ್ವರೂಪ್‌ ಪ್ರಕಾಶ್‌, ಸಿಮೆಂಟ್‌ ಮಂಜುನಾಥ್‌, ಹೆಚ್.ಕೆ.ಸುರೇಶ್‌ ಮುಂತಾದವರು ಹಾಜರಿದ್ದರು.

Continue Reading

ಮಳೆ

Karnataka Weather : ಥಂಡಿ ಮಿಶ್ರಿತ ಗಾಳಿ-ಮಳೆಗೆ ಹೈರಣಾದ ಜನತೆ; ಜು.25ರವರಗೆ ಮಳೆ ಮುಂದುವರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಟ (Rain News) ಮುಂದುವರಿದಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಮಳೆಗೆ ಮನೆಯಿಂದ ಹೊರಬರಲು ಆಗದೆ ಒಳಗೆ ಕೂರಲು ಆಗದೆ ಚಡಪಡಿಸುವಂತಾಗಿದೆ. ಸದ್ಯ ಮುಂದಿನ ಐದು ದಿನಗಳಿಗೆ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ವಿಜಯನಗರ: ಭಾನುವಾರ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು (Karnataka Weather Forecast) ಅಬ್ಬರಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಧ್ಯಾಹ್ನದಿಂದ ಜಿಟಿಜಿಟಿ ಮಳೆಯಾಗಿತ್ತು. ಥಂಡಿ ಮಿಶ್ರಿತ ಗಾಳಿ ಜತೆಗೆ ಜಿಟಿ ಜಿಟಿ ಮಳೆಗೆ (Rain news) ಜನರು ಹೈರಾಣಾದರು. ಹಡಗಲಿ, ಹರಪನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ತಾಲೂಕುಗಳಲ್ಲಿಯೂ ಇದೇ ರೀತಿಯ ವಾತಾವರಣ ಇತ್ತು.

ಇನ್ನೂ ಜು.22ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಜತೆಗೆ ಗಾಳಿಯು ಸಾಥ್‌ ನೀಡಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಹಗುರ ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಥಂಡಿ ಗಾಳಿ ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

ಬೆಳಗಾವಿಯಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತ

ಬೆಳಗಾವಿ: ಭಾರಿ ಮಳೆಗೆ (Karnataka Rain) ಬೆಳಗಾವಿ ಜಿಲ್ಲೆಗೆ ಸಪ್ತ ನದಿಗಳ ನೆರೆ ಭೀತಿ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಐದು ದಿನದಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತಗೊಂಡಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಏಳು ಸೇತುವೆಗಳು ಹಾಗೂ ಬೆಳಗಾವಿ ವ್ಯಾಪ್ತಿಯಲ್ಲಿ ಹತ್ತು ಸಂಪರ್ಕ ಸೇತುವೆ ಮುಳುಗಡೆಯಾಗಿವೆ.

ದೂದಗಂಗಾ ನದಿಗೆ ದತ್ತವಾಡ-ಮಲ್ಲಿಕವಾಡ, ಬೋಜ್-ಕಾರದಗಾ, ಬೋಜವಾಡಿ-ಕುಣ್ಣೂರ ಹಾಗೂ ವೇದಗಂಗಾ ನದಿಗೆ ಜತ್ರಾಟ-ಭೀವಶಿ, ಅಕ್ಕೋಳ-ಸಿದ್ನಾಳ, ಕೃಷ್ಣಾ ನದಿಗೆ ಮಾಂಜರಿ-ಬಾವನಸೌದತ್ತಿ, ಹಿರಣ್ಯಕೇಶಿ ನದಿಗೆ ಯರನಾಳ-ಮದಮಕ್ಕನಾಳ ಸೇರಿ ಘಟಪ್ರಭಾ ನದಿಗೆ ಸುಣಧೋಳಿ – ಮೂಡಲಗಿ, ಅವರಾದಿ- ನಂದಗಾಂವ, ಕಮಲದಿನ್ನಿ – ಹುಣಶ್ಯಾಳ ಪಿವೈ, ವಡ್ಡರಹಟ್ಟಿ- ಉದಗಟ್ಟಿ, ಗೋಕಾಕ್-ಶಿಂಗಳಾಪುರ, ಮಲಪ್ರಭಾಗೆ ಖಾನಾಪುರ-ಹೆಮ್ಮಡಗಾ, ಸಾತ್ನಾಳಿ-ಮಾಸಾಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ಬರೋಬ್ಬರಿ 34 ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದ್ದು, ಕಿ.ಮೀ ಗಟ್ಟಲೇ ಸುತ್ತಿ ಹಾಕಿ ಓಡಾಡುವಂತಾಗಿದೆ.

ಕೊಡಗಿನಲ್ಲಿ ಕರೆಂಟ್‌ ಶಾಕ್‌ಗೆ ಎತ್ತು ಸಾವು

ಕೊಡಗು: ಗದ್ದೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎತ್ತೊಂದು ಮೃತಪಟ್ಟಿದೆ. ಮತ್ತೊಂದು ಎತ್ತು ಹಾಗೂ ರೈತನ ಕುಟುಂಬ ಹಾಗೂಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಕರೆಂಟ್‌ ಶಾಕ್‌ ಹೊಡೆದಿದೆ. ಈ ವೇಳೆ ಒಂದು ಎತ್ತು ಮೃತಪಟ್ಟರೆ, ಕುಂಬಗೌಡನ ಸದಾ ಅವರ ಪತ್ನಿ ವೀಣಾ, ಮತ್ತೊಂದು ಎತ್ತು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕಂಬದಿಂದ ವಿದ್ಯುತ್ ಲೀಕೇಜ್‌ ಆಗಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಚೆಸ್ಕಾಂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral News
Latest33 seconds ago

Viral News: ಮಕ್ಕಳ ಹಸಿವು ನೀಗಿಸಲು ಸೈನಿಕರೆದುರು ಬೆತ್ತಲಾಗುತ್ತಿರುವ ಮಹಿಳೆಯರು!

Suraj Revanna Case
ಕರ್ನಾಟಕ23 mins ago

Suraj Revanna Case: ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌; 2ನೇ ಕೇಸ್‌ನಲ್ಲೂ ಜಾಮೀನು, ನಾಳೆ ರಿಲೀಸ್‌!

Gautam Gambhir
ಕ್ರೀಡೆ33 mins ago

Gautam Gambhir : ನನ್ನ ಮತ್ತು ಕೊಹ್ಲಿಯ ನಡುವೆ ಗೌರವಯುತ ಸಂಬಂಧವಿದೆ; ಗೌತಮ್ ಗಂಭೀರ್​

Nipah Virus
ಆರೋಗ್ಯ34 mins ago

Nipah Virus: ಡೇಂಜರಸ್‌ ನಿಫಾ ವೈರಸ್‌; ಇದರ ಲಕ್ಷಣಗಳೇನು? ನಮಗೆ ಅಪಾಯ ಇದೆಯೆ?

Nitish Kumar
ದೇಶ35 mins ago

Nitish Kumar: ಬಿಹಾರಕ್ಕೆ ವಿಶೇಷ ಸ್ಥಾನಮಾನ ಕೊಡಲ್ಲ ಎಂದ ಮೋದಿ ಸರ್ಕಾರ; ನಿತೀಶ್‌ ಕುಮಾರ್‌ ಬಂಡಾಯ ನಿಶ್ಚಿತ?

Shoe Theft
ಕ್ರೈಂ40 mins ago

Shoe Theft: ಬೆಂಗಳೂರಿನಲ್ಲಿ 10,000 ಶೂ, ಚಪ್ಪಲಿ ಕದ್ದ ಖತರ್‌ನಾಕ್‌ ಕಳ್ಳರ ಬಂಧನ!

Actor Darshan
ಕರ್ನಾಟಕ47 mins ago

Actor Darshan: ನಟ ದರ್ಶನ್‌ಗೆ ಇನ್ನೂ 3 ದಿನ ಜೈಲೂಟವೇ ಗತಿ; ಜು.25ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Beautician and Basic Fashion Designing Training Programme inauguration in Yallapura
ಉತ್ತರ ಕನ್ನಡ50 mins ago

Uttara Kannada News: ನಮ್ಮಲ್ಲಿರುವ ಕೌಶಲ್ಯಗಳನ್ನು ಅರಿತುಕೊಳ್ಳಬೇಕು; ಡಾ. ಆರ್.ಡಿ. ಜನಾರ್ಧನ

Rowdy reels
ಬೆಂಗಳೂರು1 hour ago

Rowdy Reels : 500 ರೂ. ಕೊಟ್ಟರೆ ರೌಡಿಗಳ ರೀಲ್ಸ್‌ ಅಪ್ಲೋಡ್‌; ಅಪ್ರಾಪ್ತರಿಗೆ ಬಿಸಿ ಮುಟ್ಟಿಸಿದ ಸಿಸಿಬಿ ಪೊಲೀಸರು

YouTube
ದೇಶ1 hour ago

You Tube : ಮೈಕ್ರೋಸಾಫ್ಟ್​ ಸಮಸ್ಯೆ ಬಳಿಕ ಇದೀಗ ಯೂಟ್ಯೂಬ್​​ನಲ್ಲೂ ತಾಂತ್ರಿಕ ದೋಷ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌